Tag: arrest

  • ಕೋಡ್ ವರ್ಡ್ ಮೂಲಕ ಗಾಂಜಾ ಮಾರುತ್ತಿದ್ದ ಮೂವರು ಅರೆಸ್ಟ್

    ಕೋಡ್ ವರ್ಡ್ ಮೂಲಕ ಗಾಂಜಾ ಮಾರುತ್ತಿದ್ದ ಮೂವರು ಅರೆಸ್ಟ್

    ಬೆಂಗಳೂರು: ಕೋಡ್ ವರ್ಡ್‍ಗಳ ಮೂಲಕ ಗಾಂಜಾ ಮಾರಾಟ ಮಾಡುತ್ತಿದ್ದ 3 ಆರೋಪಿಗಳನ್ನು ರಾಜಧಾನಿಯ ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

    ಅಜಯ್, ರಾಜು, ರವಿ ಬಂಧಿತ ಆರೋಪಿಗಳು. ಪೊಲೀಸರು ಬಂಧಿತರಿಂದ 40 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದರು. ಪೊಲೀಸರ ಕಣ್ಣು ತಪ್ಪಿಸಲು ಗಾಂಜಾ ದಂಧೆಕೋರರು ಮಾಸ್ಟರ್ ಪ್ಲಾನ್ ಮಾಡಿ ಕೋಡ್ ವರ್ಡ್‍ಗಳ ಮೂಲಕ ಗಾಂಜಾ ಮಾರಾಟ ಮಾಡುತ್ತಿದ್ದರು. ಇದನ್ನೂ ಓದಿ: ಮೆಣಸಿನಕಾಯಿ ಬಜ್ಜಿಯಂತೆ ಹಲ್ಲಿಯನ್ನು ಸಲೀಸಾಗಿ ತಿಂದ ಭೂಪ

    ಮೂರ್ನಾಲ್ಕು ಕಡೆ ವಾಹನ ಬದಲಿಸಿ ಬೆಂಗಳೂರಿಗೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದರು. ಒಡಿಶಾದಿಂದ ವಿಶಾಖಪಟ್ಟಣಕ್ಕೆ ಒಂದು ವಾಹನ, ಅಲ್ಲಿಂದ ಬೆಂಗಳೂರಿಗೆ ಮತ್ತೊಂದು ವಾಹನದಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಇದನ್ನೂ ಓದಿ: ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

    ಸದ್ಯ ಮಾರತ್ತಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿಗಾಗಿ ಬಲೆ ಬೀಸಿದ್ದಾರೆ.

  • ಬೀದಿ ನಾಯಿ ಮೇಲೆ ಕಾರು ಹತ್ತಿಸಿದ್ದ ಆದಿಕೇಶವುಲು ಮೊಮ್ಮಗ ಅರೆಸ್ಟ್‌

    ಬೀದಿ ನಾಯಿ ಮೇಲೆ ಕಾರು ಹತ್ತಿಸಿದ್ದ ಆದಿಕೇಶವುಲು ಮೊಮ್ಮಗ ಅರೆಸ್ಟ್‌

    ಬೆಂಗಳೂರು: ಬೀದಿಯಲ್ಲಿ ಮಲಗಿದ್ದ ನಾಯಿಗಳ ಮೇಲೆ ಉದ್ದೇಶಪೂರ್ವಕವಾಗಿಯೇ ಕಾರು ಹತ್ತಿಸಿ ವಿಕೃತಿ ಮೆರೆದಿದ್ದ, ಉದ್ಯಮಿ, ಮಾಜಿ ಸಂಸದ ದಿ. ಆದಿಕೇಶವುಲು ನಾಯ್ಡು ಮೊಮ್ಮಗ ಆದಿಯನ್ನು ಪೊಲೀಸರು ಬಂಧಿಸಿದ್ದಾರೆ.

    ನಟಿ ರಮ್ಯಾ ಈ ಪ್ರಕರಣ ಕುರಿತಾಗಿ ತನಿಖೆ ಕೈಗೊಳ್ಳಿ ಎಂದು ಟ್ವೀಟ್ ಮಾಡಿ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಬೆನ್ನಲ್ಲೆ ನಾಯಿ ಮೇಲೆ ಕಾರು ಹರಿಸಿ ಕೌರ್ಯ ಮೆರೆದಿದ್ದ ಆದಿಯನ್ನು ಸಿದ್ದಾಪುರ ಠಾಣೆಯ ಪೊಲೀಸರು ಬಂಧನ ಮಾಡಿದ್ದಾರೆ. ಇದನ್ನೂ ಓದಿ: ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಆದಿಕೇಶವುಲು ಮೊಮ್ಮಗ

    ನಡೆದಿದ್ದೇನು?: ಉದ್ಯಮಿ, ಮಾಜಿ ಸಂಸದ ದಿ. ಆದಿಕೇಶವುಲು ನಾಯ್ಡು ಮೊಮ್ಮಗ ಆದಿ, ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ. ಈ ಘಟನೆ ಜಯನಗರದಲ್ಲಿ ನಡೆದಿದೆ. ಆದಿ ಕಾರನ್ನು ಬೇಕೆಂದೇ ರಿವರ್ಸ್ ತೆಗೆದುಕೊಂಡು ನಾಯಿ ಮೇಲೆ ಹತ್ತಿಸಿದ್ದಾನೆ. ಕಾರು ಹತ್ತಿದ ರಭಸಕ್ಕೆ ನಾಯಿ ವಿಲ-ವಿಲ ಒದ್ದಾಡಿದೆ. ಜಯನಗರ 1ನೇ ಬ್ಲಾಕ್ 10ನೇ ಬಿ ಮೈನ್‌ನಲ್ಲಿ  ಈ ಘಟನೆ ನಡೆದಿದ್ದು, ಘಟನೆಯ ವೀಡಿಯೋ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ:   ಬೀದಿ ನಾಯಿ ಮೇಲೆ ಕಾರು ಹತ್ತಿಸಿದ FIR ಏನಾಯ್ತು: ಸಿಎಂ, ತೇಜಸ್ವಿ ಸೂರ್ಯಗೆ ರಮ್ಯಾ ಪ್ರಶ್ನೆ

    ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಫ್‍ಐಆರ್ ಹಾಕಲಾಗಿತ್ತು. ಪೊಲೀಸರು ಆರೋಪಿಯನ್ನು ಹುಡುಕಿಕೊಂಡು ಹೋದಾಗ ಆತ ಕಾರಿನೊಂದಿಗೆ ಪರಾರಿಯಾಗಿರುವ ವಿಚಾರ ತಿಳಿದು ಬಂದಿದೆ. ಪೊಲೀಸರು ವಿಚಾರಣೆಗೆ ಬರುವಂತೆ ಸಿದ್ದಾಪುರ ಪೊಲೀಸರು ಆದಿಗೆ ನೋಟಿಸ್ ಕೊಟ್ಟಿದ್ದಾರೆ. ಈ ಘಟನೆಯ ಬಳಿಕ ಆರೋಪಿಗೆ ಕೊರೊನಾ ಬಂದಿದೆ. ಕುಟುಂಬಸ್ಥರು ಆದಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಕಾಪಿಯನ್ನು ಠಾಣೆಗೆ ಕಳುಹಿಸಿದ್ದಾರೆ. ಕೋವಿಡ್‍ನಿಂದ ಗುಣಮುಖವಾದ ನಂತ್ರ ವಿಚಾರಣೆಗೆ ಹಾಜರಾಗುವಂತೆ ಮತ್ತೆ ನೋಟಿಸ್ ಕಳುಹಿಸಲಾಗಿತ್ತು. ಆದರೆ ಇದೀಗ ಈ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

  • ನಕಲಿ ಐಎಎಸ್ ಅಧಿಕಾರಿ ಸರೆಂಡರ್

    ಚೆನ್ನೈ: ತಾನೊಬ್ಬ ಐಎಎಸ್ ಅಧಿಕಾರಿ ಎಂದು ಹೇಳಿಕೊಂಡು ನಕಲಿ ಬಿಸಿನೆಸ್ ಕಾರ್ಡ್ ನೀಡಿದ್ದ ಆರೋಪಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ವಿರುಗಂಬಾಕ್ಕಂ ನಿವಾಸಿ ಸುಬಾಷ್(27) ತಾನೊಬ್ಬ ಸರ್ಕಾರಿ ಜಂಟಿ ಕಾರ್ಯದರ್ಶಿಯಾಗಿದ್ದು, ಗೃಹ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕೆಲಸ ಮಾಡಿಕೊಂಡಿದ್ದೇನೆ ಎಂದು ಪೊಲೀಸರಿಗೆ ತಿಳಿಸಿದ್ದ.

    ಜನವರಿ 1 ರಂದು ಸುಬಾಷ್ ತನ್ನನ್ನು ನಾಲ್ವರು ದ್ವಿಚಕ್ರ ವಾಹನಗಳಲ್ಲಿ ಹಿಂಬಾಲಿಸುತ್ತಿದ್ದಾರೆ ಎಂಬುದಾಗಿ ಪೊಲೀಸರಿಗೆ ಫೋನ್ ಕರೆಯಲ್ಲಿ ದೂರು ನೀಡಿದ್ದ. ತಾನೊಬ್ಬ ಐಎಎಸ್ ಅಧಿಕಾರಿ, ನನಗೆ ರಕ್ಷಣೆ ಬೇಕು ಎಂಬುದಾಗಿ ಹೇಳಿಕೊಂಡಿದ್ದ ಸುಬಾಷ್‌ನ ಮಾತು ನಂಬಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಹಿಂಬಾಲಿಸುತ್ತಿದ್ದ ನಾಲ್ವರನ್ನು ಬಂಧಿಸಿದ್ದರು. ಇದನ್ನೂ ಓದಿ: ಅಕ್ರಮ ಆಸ್ತಿ ಖರೀದಿಸಿಲ್ಲ – 3 ಕೋಟಿ ಮಾನನಷ್ಟ ಕೇಸ್‌ ಹಾಕ್ತೀನಿ ಎಂದ ಚನ್ನಣ್ಣನವರ್‌

    ನಂತರ ಪೊಲೀಸರು ಸುಬಾಷ್ ಹೇಳಿದ ಇಲಾಖೆಗೆ ಭೇಟಿ ನೀಡಿ ಸಂಪರ್ಕಿಸಲು ಮುಂದಾದಾಗ ಅಂತಹ ಯಾವುದೇ ಅಧಿಕಾರಿ ಗೃಹ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯೊಂದಿಗೆ ಕೆಲಸ ಮಾಡುತ್ತಿಲ್ಲ ಎಂಬುದು ತಿಳಿದು ಬಂದಿದೆ. ಇದನ್ನೂ ಓದಿ: ಪರಪ್ಪನ ಅಗ್ರಹಾರಕ್ಕೆ ಕಳುಹಿಸಿ – ಕ್ರಿಮಿನಾಶಕ ಸೇವಿಸಿದ ಕೈದಿಗಳು

    ಬಳಿಕ ಪೊಲೀಸರು ಸುಬಾಷ್‌ನ ಹುಡುಕಾಟದಲ್ಲಿದ್ದು, ಶನಿವಾರ ಆರೋಪಿ ತಾನಾಗಿಯೇ ಪೊಲೀಸರಿಗೆ ಶರಣಾಗಿದ್ದಾನೆ.

  • ಪತ್ನಿಯನ್ನು ಕೊಲೆ ಮಾಡಿ, ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತಿ ಅರೆಸ್ಟ್!

    ಪತ್ನಿಯನ್ನು ಕೊಲೆ ಮಾಡಿ, ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತಿ ಅರೆಸ್ಟ್!

    ಚೆನ್ನೈ: ಪತ್ನಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತಿಯನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.

    ಜೀವಿತಾ(24) ಮೃತ ಮಹಿಳೆ. ಈಕೆಯ ಪತಿ ಹರಿ ಬಂಧಿತ ಆರೋಪಿ. ಇವರಿಬ್ಬರು ತೊಂಡಿಯಾರ್ ಪೇಟೆಯಲ್ಲಿ ವಾಸಿಸುತ್ತಿದ್ದರು. ಹರಿ ತನ್ನ ಪತ್ನಿ ಸ್ನಾನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಗರ ಪೊಲೀಸ್ ಮಾಹಿತಿ ನೀಡಿದ್ದನು. ಆದರೆ ತನಿಖೆ ನಂತರ ಆರೋಪಿ ಪತಿ ಪೊಲೀಸರ ಬಲೆಗೆ ಬಿದಿದ್ದಾನೆ.

    ಈ ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಿಳೆಯ ಶವವನ್ನು ಹೊರತೆಗೆದು ಹೆಚ್ಚಿನ ವೈದ್ಯಕೀಯ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಜೀವಿತಾಳ ಪೋಷಕರು ಮೈ ಮೇಲೆ ಆದ ಗಾಯಗಳ ಗುರುತನ್ನು ಅನುಮಾನ ವ್ಯಕ್ತಪಡಿಸಿದ್ದರು. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿದ ಪೊಲೀಸರು ಹರಿಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವೃದ್ಧ

    ಈ ಬಗ್ಗೆ ಪ್ರಶ್ನಿಸಿದಾಗ ಆರೋಪಿಯು ಮೊದಲಿಗೆ ತಾನು ನಿರಪರಾಧಿ ಎಂದು ಪೊಲೀಸರ ಮುಂದೆ ಕಥೆ ಕಟ್ಟಿದ್ದಾನೆ. ತನಗೆ ಈ ಬಗ್ಗೆ ಏನು ತಿಳಿದಿಲ್ಲ ಎಂದು ಪೊಲೀಸರ ಗಮನವನ್ನು ಬೇರೆಡೆ ತಿರುಗಿಸಲು ಯತ್ನಿಸಿದ್ದಾನೆ. ನಂತರದಲ್ಲಿ ಅವಳನ್ನು ಕೊಂದು ನೇಣು ಬಿಗಿದಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹರಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪೆಗಾಸಸ್‌ಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ಗೆ ಮನವಿ

  • ಬಾಲಕಿ ಮೇಲೆ ಅತ್ಯಾಚಾರ ಎಸಗಿ ಮನೆಯ ಹೊರಗೆ ಎಸೆದ – ಆರೋಪಿ ಅರೆಸ್ಟ್

    ಬಾಲಕಿ ಮೇಲೆ ಅತ್ಯಾಚಾರ ಎಸಗಿ ಮನೆಯ ಹೊರಗೆ ಎಸೆದ – ಆರೋಪಿ ಅರೆಸ್ಟ್

    ಜೈಪುರ: 9ನೇ ತರಗತಿ ವಿದ್ಯಾರ್ಥಿನಿಯನ್ನು ಶಾಲೆಯಿಂದ ಅಪಹರಿಸಿ, ಅತ್ಯಾಚಾರವೆಸಗಿ ಆಕೆಯ ಮನೆಯ ಹೊರಗೆ ಎಸೆದಿರುವ ಘಟನೆ ರಾಜಸ್ಥಾನದ ಡುಂಗರ್‍ಪುರ ಜಿಲ್ಲೆಯ ಬಿಚಿವಾರಾ ಗ್ರಾಮದಲ್ಲಿ ನಡೆದಿದೆ.

    ಜನವರಿ 24 ರಂದು ಈ ಘಟನೆ ಸಂಭವಿಸಿದ್ದು, ಆರೋಪಿ ಅಮ್ಜಾರಾ ನಿವಾಸಿಯಾಗಿದ್ದಾನೆ. ಬಾಲಕಿ ತನ್ನ ಸಹೋದರನೊಂದಿಗೆ ಶಾಲೆಗೆ ಹೋಗಿದ್ದಳು. ಊಟದ ವಿರಾಮದ ವೇಳೆ ಆಕೆ ಶಾಲೆಯಿಂದ ಹೊರ ಬಂದಾಗ ಅದೇ ಶಾಲೆಯಲ್ಲಿ ಓದುತ್ತಿದ್ದ 12ನೇ ತರಗತಿ ವಿದ್ಯಾರ್ಥಿಯೊಬ್ಬ ಬಾಲಕಿಯನ್ನು ಬಲವಂತವಾಗಿ ತನ್ನ ಮೋಟಾರ್ ಬೈಕ್‍ನಲ್ಲಿ ಹತ್ತಿಸಿಕೊಂಡು ಅರಣ್ಯ ವ್ಯಾಪ್ತಿ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಇದನ್ನೂ ಓದಿ:  ಸಿದ್ದರಾಮಯ್ಯಗೆ ಮೂಲ ಕಾಂಗ್ರೆಸ್ಸಿಗರ ಟಕ್ಕರ್‌

    POLICE JEEP

    ಹಲವಾರು ಗಂಟೆಗಳ ಕಾಲ ಅತ್ಯಾಚಾರವೆಸಗಿ ಸಂಜೆ ಅಸ್ವಸ್ಥಗೊಂಡ ಬಾಲಕಿಯನ್ನು ಆಕೆಯ ಮನೆಯ ಹೊರಗೆ ಎಸೆದು ಗಾಯಗೊಳಿಸಿದ್ದಾನೆ. ನಂತರ ತೀವ್ರ ರಕ್ತಸ್ರಾವವಾಗಿದ್ದ ಬಾಲಕಿಯನ್ನು ಆಕೆಯ ಮನೆಯವರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆ ಕುಟುಂಬಸ್ಥರ ಬಳಿ ಬಾಲಕಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಬಳಿಕ ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

    ಆರೋಪಿ ವಿರುದ್ಧ ದೂರು ಸ್ವೀಕರಿಸಿದ ಬಿಚ್ಚಿವಾರ ಪೊಲೀಸರು ಐಪಿಸಿ ಮತ್ತು ಪೋಕ್ಸೊ ಕಾಯ್ದೆ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಬಿಚ್ಚಿವಾಡ ಎಎಸ್‍ಐ ಕೈಲಾಶ್‍ಚಂದ್ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ ಬಾಲಕಿಯ ಹೇಳಿಕೆ ಪಡೆದುಕೊಂಡಿದ್ದಾರೆ. ಕೂಡಲೇ ಪೊಲೀಸರು ಅದೇ ಶಾಲೆಯಲ್ಲಿ ಓದುತ್ತಿದ್ದ ಆರೋಪಿ ಮತ್ತು ಆತನ ಸ್ನೇಹಿತನನ್ನು ಬಂಧಿಸಿದ್ದಾರೆ. ಸದ್ಯ ಈ ಪ್ರಕರಣ ಕುರಿತಂತೆ ತನಿಖೆಯನ್ನು ಡಿಎಸ್‍ಪಿ ರಾಕೇಶ್ ಕುಮಾರ್ ಶರ್ಮಾ ಅವರು ಕೈಗೆತ್ತಿಕೊಂಡಿದ್ದಾರೆ. ಇದನ್ನೂ ಓದಿ: ಕೂದಲು ರಫ್ತಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

  • ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್

    ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್

    ನೆಲಮಂಗಲ: ಕಾಲೇಜು ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

    ರಿಯಾಜ್ ಮತ್ತು ಸಯ್ಯದ್ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ 3 ಕೆಜಿ ಗಾಂಜಾ ವಶ ಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

    ತಮ್ಮೇನಹಳ್ಳಿ ಬಳಿ ಆಚಾರ್ಯ ಕಾಲೇಜು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ದೊರೆತಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದೆ. ಇದನ್ನೂ ಓದಿ: ಪೊಲೀಸರು ಪ್ರಾಮಾಣಿಕರಾಗಿಲ್ಲದಿದ್ದರೆ, ನಾಗರೀಕರು ನೆಮ್ಮದಿಯಾಗಿ ಇರಲು ಸಾಧ್ಯವಿಲ್ಲ: ಆರಗ ಜ್ಞಾನೇಂದ್ರ

  • ಮಹಿಳೆಗೆ ಗುಂಡಿಕ್ಕಿ ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯ ಅರೆಸ್ಟ್

    ಮಹಿಳೆಗೆ ಗುಂಡಿಕ್ಕಿ ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯ ಅರೆಸ್ಟ್

    ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದ ಮಹಿಳೆಯ ಶೂಟೌಟ್ ಪ್ರಕರಣವನ್ನು ಸಂಕೇಶ್ವರ ಪೊಲೀಸರು ಭೇದಿಸಿದ್ದು, ಶೂಟೌಟ್ ನಡೆಸಿ ಮಹಿಳೆಯನ್ನು ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ.

    ಸಂಕೇಶ್ವರ ವಾರ್ಡ್ ನಂಬರ್ 14ರ ಬಿಜೆಪಿ ಪುರಸಭೆ ಸದಸ್ಯ ಉಮೇಶ್ ಕಾಂಬಳೆ ಎಂಬಾತನನ್ನು ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಳೆದ ಜ.16ರಂದು ನಾಡ ಪಿಸ್ತೂಲ್‍ನಿಂದ ಶೈಲಾ ನಿರಂಜನ್ ಸುಭೇದಾರ್(56) ಮಹಿಳೆಯ ಎದೆಗೆ ಹಾಗೂ ಕೈಗೆ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.

    POLICE JEEP

    ಪ್ರಕರಣದ ಬೆನ್ನತ್ತಿದ್ದ ಸಂಕೇಶ್ವರ ಪಿಎಸ್‍ಐ ಗಣಪತಿ ಕೊಂಗನೊಳ್ಳಿ ಹಾಗೂ ಸಿಪಿಐ ರಮೇಶ್ ಛಾಯಾಗೋಳ, ಹವಾಲ್ದಾರ್ ಭೀಮಪ್ಪ ನಾಗನೂರೆ, ಬಸವರಾಜ ಕಪರಟ್ಟಿ ಅವರ ತಂಡ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಜನರಿಗೆ ತೊಂದ್ರೆ ಕೊಡೋದ್ರಿಂದ ಸರ್ಕಾರಕ್ಕೆ ಲಾಭವೂ, ಇಲ್ಲ ನಷ್ಟವೂ ಇಲ್ಲ: ಸುಧಾಕರ್

    ಲೇವಾದೇವಿ ವ್ಯವಹಾರ ಮಾಡುತ್ತಿದ್ದ ಮಹಿಳೆಯಿಂದ 25 ಲಕ್ಷ ರೂ. ಹಣವನ್ನು ಉಮೇಶ ಕಾಂಬಳೆ ಪಡೆದಿದ್ದ. ಬಡ್ಡಿ ಸಮೇತ ಹಣ ಹಿಂದಿರಿಗಿಸಲು ಮಹಿಳೆ ಪೀಡಿಸುತ್ತಿದ್ದ ಕಾರಣ ಮಹಾರಾಷ್ಟ್ರದ ಸಾಂಗ್ಲಿಯಿಂದ ಪಿಸ್ತೂಲ್‍ನ್ನು ತಂದು ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಜ.31ರ ವರೆಗೆ ಟಫ್ ರೂಲ್ಸ್ ಜಾರಿ

    ಇನ್ನೂ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರಿಂದ ಶೋಧ ಕಾರ್ಯ ಮುಂದುವರಿದಿದೆ. ಸಂಕೇಶ್ವರ ಪೊಲೀಸರ ಕಾರ್ಯಾಚರಣೆಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

  • ನಟೋರಿಯಸ್ ಮೋಸ್ಟ್ ವಾಂಟೆಡ್ ರೌಡಿ ಶೀಟರ್ ಅರೆಸ್ಟ್

    ನಟೋರಿಯಸ್ ಮೋಸ್ಟ್ ವಾಂಟೆಡ್ ರೌಡಿ ಶೀಟರ್ ಅರೆಸ್ಟ್

    ಬೆಂಗಳೂರು: ಹಲವು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ನಟೋರಿಯಸ್ ಮೋಸ್ಟ್ ವಾಂಟೆಡ್ ರೌಡಿಶೀಟರ್‌ನೊಬ್ಬ ನನ್ನು ಪೊಲೀಸರು ಬಂಧಿಸಿದ್ದಾರೆ.

    ಮೊಹಮ್ಮದ್ ತಬ್ರೇಜ್ ಪಾಷ ಅಲಿಯಾಸ್ ಛೋಟಾ ಟೈಗರ್ ಬಂಧಿತ ಆರೋಪಿ. ಮೊಹಮ್ಮದ್ ಬೆಂಗಳೂರಿನ ಫೈನಾನ್ಷಿಯರಗಳನ್ನೆ ಟಾರ್ಗೆಟ್ ಮಾಡುತ್ತಿದ್ದನು. ಹುಡುಗರನ್ನ ಕಳುಹಿಸಿ ಮೊದಲು ಹಣಕ್ಕೆ ಬೇಡಿಕೆಯಿಡುತ್ತಿದ್ದನು. ನಂತರ ಹಣ ಕೊಡದೇ ಇದ್ದವರ ಕಚೇರಿಗೆ ನುಗ್ಗಿ ಲಾಂಗು ಮಚ್ಚು ತೋರಿಸಿ ಹೆದರಿಸಿ ದರೋಡೆ ಮಾಡುತ್ತಿದ್ದನು. ಇದನ್ನೂ ಓದಿ:  ಬಿಜೆಪಿಯ ದ್ವೇಷದ ರಾಜಕಾರಣ ಭಾರತಕ್ಕೆ ಹಾನಿಕಾರಕ: ರಾಹುಲ್ ಗಾಂಧಿ

    ಆರೋಪಿಯು ಬೆಂಗಳೂರಿನಲ್ಲಿ 20 ಕ್ಕೂ ಹೆಚ್ಚು ಪ್ರಕರಣಗಳಿಗೆ ಬೇಕಾಗಿದ್ದು, ಪೊಲೀಸರಿಗೆ ಸಿಗದೇ ಹಲವು ವರ್ಷಗಳಿಂದ ತಲೆ ಮರೆಸಿಕೊಂಡಿದ್ದನು. ಸದ್ಯ ಪೊಲೀಸರು ಆರೋಪಿಯನ್ನ ಬಂಧಿಸಿ ಜೈಲಿಗೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ.

  • 3 ಲಕ್ಷ ರೂ. ಗೆ ಹೆತ್ತ ಮಗುವನ್ನೇ ಮಾರಿದ ದಂಪತಿ ಅರೆಸ್ಟ್

    3 ಲಕ್ಷ ರೂ. ಗೆ ಹೆತ್ತ ಮಗುವನ್ನೇ ಮಾರಿದ ದಂಪತಿ ಅರೆಸ್ಟ್

    ಚೆನ್ನೈ: 10 ತಿಂಗಳ ಮಗುವನ್ನು ಆಂಧ್ರಪ್ರದೇಶದ ದಂಪತಿಗೆ 3 ಲಕ್ಷ ರೂ. ಗೆ ಮಾರಾಟ ಮಾಡಿರುವ ಪ್ರಕರಣ ಸಂಬಂಧ ತಾಯಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

    ಕನ್ನಗಿ ನಗರದ ವಿಜಯಲಕ್ಷ್ಮಿ (30) ಮತ್ತು ಆಕೆಯ ಪತಿ ಚಿಂದೂರೈ (35) ಬಡತನದ ಕಾರಣದಿಂದ ತಮ್ಮ ಹತ್ತು ತಿಂಗಳ ಹಸುಳೆ ಮುತ್ತುರಾಜ್ ನನ್ನು ಮಾರಾಟ ಮಾಡಿದ್ದಾರೆ. ದಂಪತಿ ತಮ್ಮ ಮಗುವನ್ನು ಮಹಿಳಾ ಬ್ರೋಕರ್ ಒಬ್ಬರ ಮೂಲಕ ಆಂಧ್ರ ಪ್ರದೇಶದ ದಂಪತಿಗೆ 85,000 ರೂ. ಗೆ ನೀಡಲು ಒಪ್ಪಿಕೊಂಡಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5T ಸೂತ್ರ: ಪ್ರಧಾನಿ ಮೆಚ್ಚುಗೆ

    ನಂತರ ದಂಪತಿ ಬ್ರೋಕರ್‌ಗೆ ಹೆಚ್ಚುವರಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಆದರೆ ಮೊದಲಿಗೆ ಬ್ರೋಕರ್, ದಂಪತಿಯ ಬೇಡಿಕೆಗೆ ಒಪ್ಪಿರಲಿಲ್ಲ. ನಂತರ ಅವಳು ಅವರ ಬೇಡಿಕೆಗೆ ಒಪ್ಪಿಕೊಂಡಿದ್ದು, ರೆಡ್ ಹಿಲ್ಸ್‌ನ ನವನೀತಮ್ ಮತ್ತು ಪಾಂಡುರಂಗನ್ ಎಂಬ ದಂಪತಿಗೆ 3 ಲಕ್ಷ ರೂ. ಗೆ ಮಗುವನ್ನು ಮಾರಾಟ ಮಾಡಿದ್ದಾಳೆ. ಇದನ್ನೂ ಓದಿ: ಕೊರೊನಾ ಸೋಂಕು ಏರಿಕೆ ಮಧ್ಯೆ ಸಿಹಿ ಸುದ್ದಿ – ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ

    ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿ ಲಲಿತಾ ಅವರಿಗೆ ಶಿಶು ಮಾರಾಟದ ಬಗ್ಗೆ ತಿಳಿದಿದ್ದು, ಲಲಿತಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಸಚಿವರ ಪುತ್ರನಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪಿ ಅಂದರ್

    ಸಚಿವರ ಪುತ್ರನಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಆರೋಪಿ ಅಂದರ್

    ಬೆಂಗಳೂರು: ಸಚಿವ ಎಸ್.ಟಿ ಸೋಮಶೇಖರ್ ಪುತ್ರ ನಿಶಾಂತ್ ಅವರಿಗೆ ನಕಲಿ ಅಶ್ಲೀಲ ವೀಡಿಯೋ ಬಿಡುಗಡೆಗೊಳಿಸುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಎಸ್.ಟಿ. ಸೋಮಶೇಖರ್ ಪುತ್ರ ನಿಶಾಂತ್ ಅವರಿಗೆ ಮಹಿಳೆಯೊಂದಿಗಿರುವ ವೀಡಿಯೋವನ್ನು ಸೋಶಿಯಲ್ ಮೀಡಿಯದಲ್ಲಿ ಹರಿಬಿಡುವುದಾಗಿ ಬೆದರಿಕೆಯೊಡ್ಡಿದ್ದ ಪ್ರಕರಣದಲ್ಲಿ ಖ್ಯಾತ ಜ್ಯೋತಿಷಿಯ ಪುತ್ರ ರಾಹುಲ್ ಭಟ್ (22) ನನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೆ ಕೋರ್ಟ್ ಮುಂದೆ ಹಾಜರುಪಡಿಸಿ, ಇದೀಗ ಹೆಚ್ಚಿನ ತನಿಖೆಗಾಗಿ 5 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.

    ಈ ಪ್ರಕರಣ ಹಿಂದೆ ಕಾಂಗ್ರೆಸ್ ಶಾಸಕರ ಪುತ್ರಿಯ ಹೆಸರು ಪ್ರಸ್ತಾಪವಾಗುತ್ತಿದ್ದು, ಇನ್ನೂ ನಾಲ್ಕು ಮಂದಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಶಾಸಕರ ಪುತ್ರಿ ವಿದ್ಯಾಭ್ಯಾಸಕ್ಕಾಗಿ ಲಂಡನ್‍ಗೆ ಹೋಗಿದ್ದು, ಯುಕೆ ಮೂಲದ ಇಂಟರ್ನೆಟ್ ನಂಬರ್ ಬಳಸಿ ವೀಡಿಯೋ ಕಳುಹಿಸಲಾಗಿದೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಮತ್ತು ಈ ಪ್ರಕರಣ ಸಂಬಂಧ ಮತ್ತು ಆರ್‍ಟಿ ನಗರದಲ್ಲಿ ನೆಲೆಸಿರುವ ಮತ್ತೋರ್ವ ಅಸ್ಟ್ರಾಲಜಿಸ್ಟ್ ಪುತ್ರನನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಆರೋಪಿಗಳಿಗೂ ನಿಶಾಂತ್‍ಗೂ ಈ ಹಿಂದೆಯೇ ಪರಿಚಯವಿದ್ದು, ಸಾಕಷ್ಟು ವರ್ಷಗಳಿಂದ ರಾಹುಲ್ ಭಟ್, ಶಾಸಕರ ಪುತ್ರಿ ಮತ್ತು ನಿಶಾಂತ್ ಜೊತೆಯಲ್ಲಿಯೇ ಇದ್ದರು. ಶಾಸಕರ ಮಗಳಿಗೂ ನಿಶಾಂತ್ ಇಬ್ಬರು ಆಪ್ತ ಸ್ನೇಹಿತರಾಗಿದ್ದು, ಈ ಮಧ್ಯೆ ನಿಶಾಂತ್ ಬೇರೊಬ್ಬರ ಜೊತೆ ಓಡಾಟ ಶುರು ಮಾಡಿದ್ದರು. ಇದನ್ನು ಸಹಿಸಲಾಗದೇ ಎಸ್.ಟಿ ಸೋಮಶೇಖರ್ ಅವರ ಮಾಜಿ ಗನ್ ಮ್ಯಾನ್ ಬಳಸಿಕೊಂಡು ಈ ಕೃತ್ಯವೆಸಲಾಗಿದೆ ಎನ್ನಲಾಗುತ್ತಿದೆ.

    ಸದ್ಯ ಈ ಪ್ರಕರಣ ಸಂಬಂಧ ಶಾಸಕರ ಪುತ್ರಿಯ ವಿಚಾರಣೆ ನಡೆಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದು, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.