ಬಾಲಿವುಡ್ ಖ್ಯಾತ ನಟ ಸಾಹಿಲ್ ಖಾನ್ (Sahil Khan) ಬಂಧನವಾಗಿದೆ. ಮಹಾದೇವ್ ಬೆಟ್ಟಿಂಗ್ ಆಪ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಈ ನಟನನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿಸಿ, ತೀವ್ರ ವಿಚಾರಣೆಗೂ ಒಳಪಡಿಸಿದ್ದಾರೆ. ಈ ಹಿಂದೆ ಮಹಾದೇವ್ ಬೆಟ್ಟಿಂಗ್ (Mahadev Betting) ಆಪ್ ಅ ವ್ಯವಹಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಸಮನ್ಸ್ (Summons) ಜಾರಿ ಮಾಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ತಿಳಿಸಿದ್ದರು.
ಬೆಟ್ಟಿಂಗ್ ಆಪ್ ನಲ್ಲಿ 15 ಸಾವಿರ ಕೋಟಿಗೂ ಅಧಿಕ ಅವ್ಯವಹಾರ ನಡೆದಿದೆ ಎಂದು ಹೇಳಲಾಗಿದ್ದು, ಆಪ್ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಆಗಿದೆ ಎಂದು ಹೇಳಲಾಗುತ್ತಿದೆ. ಈ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ಭೋಪಾಲ್, ಮುಂಬೈ, ಕೋಲ್ಕತ್ತಾ ನಗರಗಳಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ಸಮಯದಲ್ಲಿ ಹವಾಲಾ ನಡೆದಿರುವುದು ಪತ್ತೆ ಆಗಿದೆ ಎನ್ನಲಾಗಿತ್ತು.
ರವಿ ಉಪ್ಪಾಲ್ ಮತ್ತು ಸೌರಭ್ ಚಂದ್ರಕಾರ್ ಎನ್ನುವವರು ಈ ಆಪ್ ಅನ್ನು ದುಬೈನಿಂದ ನಡೆಸುತ್ತಿದ್ದರು. ಬೇನಾಮಿ ಖಾತೆಗಳಿಂದ ಅಕ್ರ ಹಣ ವರ್ಗಾವಣೆ ಆಗುತ್ತಿದೆ ಎಂದು ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸರು ಶೋಧ ನಡೆಸಿದ್ದರು. ಈ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನ ಇನ್ನೂ ಅನೇಕ ಸಿಲೆಬ್ರಿಟಿಗಳು ನೋಟಿಸ್ ಜಾರಿ ಆಗಿದೆ.
ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ನಡೆದ ಗುಂಡಿನ ದಾಳಿಯನ್ನು ಮುಂಬೈ ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಈಗಾಗಲೇ ಗುಂಡಿನ ದಾಳಿ ಮಾಡಿದವರನ್ನು ಅರೆಸ್ಟ್ ಮಾಡಲಾಗಿದೆ. ನಂತರ ಗನ್ ಅನ್ನು ನದಿಯಲ್ಲಿ ಬೀಸಾಕಿದ್ದನ್ನು ಪತ್ತೆ ಹಚ್ಚಿ, ಗನ್ ಗಳನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದೀಗ ಗನ್ ಸಪ್ಲೈ ಮಾಡಿದವರನ್ನೂ ಪೊಲೀಸರು ಬಂಧಿಸಿದ್ದಾರೆ.
ಗುಂಡಿನ ದಾಳಿ ನಡೆಸಿದ ಆರೋಪಿಗಳಿಗೆ ಗನ್ ಸರಬರಾಜು ಮಾಡಿದ್ದು ಸುಭಾಷ್ ಚಂದರ್ ಮತ್ತು ಅನುಜ್ ಥಾಪಸ್ ಎಂದು ಗೊತ್ತಾಗಿದ್ದು, ಈ ಇಬ್ಬರನ್ನೂ ಪಂಜಾಬ್ (Punjab) ನಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 15ರಂದು ಆರೋಪಿಗಳಿಗೆ ಇವರು ಪಿಸ್ತೂಲ್ ಮತ್ತು ಕಾಟ್ರಿಜ್ ಗಳನ್ನು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ನಡುವೆ ಮುಂಬೈ ಪೊಲೀಸರಿಂದ ಮತ್ತೊಂದು ಆತಂಕಕಾರಿ ವಿಷಯ ಬಹಿರಂಗವಾಗಿದೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಹೆಸರಿನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಮನೆಯಿಂದ ಕ್ಯಾಬ್ ಬುಕ್ ಮಾಡಿದ್ದಕ್ಕಾಗಿ ಯುವಕನನ್ನು ಬಂಧಿಸಲಾಗಿದೆ. ಆರೋಪಿ ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನ 20 ವಯಸ್ಸಿನ ರೋಹಿತ್ ತ್ಯಾಗಿ. ಆರೋಪಿಯು, ನಟ ಸಲ್ಮಾನ್ ಖಾನ್ ಮನೆ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಿಂದ ಬಾಂದ್ರಾ ಪೊಲೀಸ್ ಠಾಣೆಗೆ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕ್ಯಾಬ್ ಡ್ರೈವರ್ ಸಲ್ಮಾನ್ ಖಾನ್ ಅವರ ಮನೆಯಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ಬಂದು ಬುಕ್ಕಿಂಗ್ ಬಗ್ಗೆ ಅಲ್ಲಿನ ವಾಚ್‌ಮನ್ ಬಳಿ ಕೇಳಿದ್ದಾರೆ. ಮೊದಲು ದಿಗ್ಭ್ರಮೆಗೊಂಡ ವಾಚ್‌ಮನ್, ತಕ್ಷಣ ಬುಕಿಂಗ್ ಬಗ್ಗೆ ಹತ್ತಿರದ ಬಾಂದ್ರಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.
ಅದರಂತೆ ಮುಂಬೈನ ಬಾಂದ್ರಾ ಪೊಲೀಸರು, ಕ್ಯಾಬ್ ಚಾಲಕನನ್ನು ವಿಚಾರಣೆಗೆ ಒಳಪಡಿಸಿದರು. ಆನ್‌ಲೈನ್‌ನಲ್ಲಿ ಕ್ಯಾಬ್ ಬುಕ್ ಮಾಡಿದ ವ್ಯಕ್ತಿಯ ಮಾಹಿತಿಯನ್ನು ಟ್ರ್ಯಾಕ್ ಮಾಡಿದ್ದಾರೆ. ಕ್ಯಾಬ್ ಬುಕ್ ಮಾಡಿದ ವ್ಯಕ್ತಿ ಘಾಜಿಯಾಬಾದ್‌ನ 20 ವರ್ಷದ ವಿದ್ಯಾರ್ಥಿಯಾಗಿದ್ದು, ರೋಹಿತ್ ತ್ಯಾಗಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿರುವುದು ಚೇಷ್ಟೆಗಾಗಿ ಎಂದು ತನಿಖೆಯ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಬಂಧಿಸಿದರು. ನಂತರ ಅವರನ್ನು ಮುಂಬೈಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ಮಗುವನ್ನು ಅಕ್ರಮವಾಗಿ ಮನೆಯಲ್ಲಿ ಇಟ್ಟುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಸೋನು ಶ್ರೀನಿವಾಸ್ ಗೌಡ ಅವರ ವಿಚಾರಣೆಯನ್ನು (Interrogation) ಪೊಲೀಸರು ಮುಂದುವರೆಸಿದ್ದಾರೆ. ಸ್ಥಳ ಮಹಜರಗಾಗಿ ಅವರನ್ನು ಇಂದು ರಾಯಚೂರಿಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬೆಂಗಳೂರಿನಲ್ಲಿರುವ ಸೋನು ಮನೆ ಮತ್ತು ರಾಯಚೂರಿನ ಹಳ್ಳಿಯೊಂದರಲ್ಲಿರುವ ಆ ಬಾಲಕಿ ಮನೆಗೆ ಸೋನುವನ್ನು ಕರೆದುಕೊಂಡು ಹೋಗಲು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ನಿನ್ನೆಯಷ್ಟೇ ಸೋನು ಶ್ರೀನಿವಾಸ್ ಗೌಡರನ್ನು (Sonu Srinivas Gowda) 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ ಬೆಂಗಳೂರಿನ ಸಿಜೆಎಂ ಕೋರ್ಟ್. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಗೌಡ ಫಸ್ಟ್ ರಿಯಾಕ್ಷನ್ ಕೂಡ ಕೊಟ್ಟಿದ್ದಾರೆ.
ಪೊಲೀಸ್ ವಾಹನದಲ್ಲಿ ತೆರಳುವುದಕ್ಕೂ ಮುನ್ನ ಮಾಧ್ಯಮಗಳ ಎದುರು ಸೋನು ಶ್ರೀನಿವಾಸ್ ಗೌಡ ಹೇಳಿಕೆ ನೀಡಿದ್ದಾರೆ. ಲೀಗಲ್ ಆಗಿ ತನಿಖೆ ನಡೆಯುತ್ತಿದೆ. ಏನೂ ತೊಂದರೆ ಇಲ್ಲ. ಒಂದು ಹುಡುಗಿಯನ್ನು ರಕ್ಷಣೆ ಮಾಡೋಕೆ ಅಂತ ನಾನು ಕರೆದುಕೊಂಡು ಬಂದಿದ್ದು. ಅವಳು ಈಗಲೂ ಆರಾಮಾಗಿ, ಸುರಕ್ಷಿತವಾಗಿ ಇದ್ದಾಳೆ ಎಂದು ಸೋನು ಗೌಡ ಹೇಳಿದ್ದಾರೆ. ಕೇಸ್‌ಗೆ ಸಂಬಂಧಪಟ್ಟಂತೆ ಅವರನ್ನು ರಾಯಚೂರಿಗೆ ಕರೆದುಕೊಂಡು ಹೋಗಿ ಪೊಲೀಸರು ತನಿಖೆ ಮಾಡಲಿದ್ದಾರೆ. ಮಾರ್ಚ್ 25ರಂದು ಅವರನ್ನು ಕೋರ್ಟ್‌ಗೆ ಹಾಜರುಪಡಿಸಬೇಕಿದೆ. ನಿಯಮ ಪಾಲಿಸದೇ ಮಗು ದತ್ತು ಪಡೆದ ಆರೋಪದಲ್ಲಿ ಅವರು ಈಗ ಕಾನೂನು ಸಂಕಷ್ಟ ಎದುರಿಸಬೇಕಾಗಿದೆ.
ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಹಿನ್ನೆಲೆಯಲ್ಲಿ ಸೋನು ಅನ್ನು ಇಂದು ಬೆಳಗಿನ ಜಾವ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು. ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಜಂಟಿ ಕಾರ್ಯಚರಣೆ ವೇಳೆ ಬಂಧನವಾಗಿತ್ತು.
ಈ ಹಿಂದೆಯಷ್ಟೇ ಸೋನು ಶ್ರೀನಿವಾಸ್ ಗೌಡ ಸಾಮಾಜಿಕ ಜಾಲತಾಣದಲ್ಲಿ ಮಗು ದತ್ತು ಪಡೆದಿರುವ ಬಗ್ಗೆ ಟ್ರೋಲ್ ಆಗಿದ್ದರು. ಸ್ವತಃ ಸೋನು ಗೌಡ ಅವರೇ ಆ ಮಗುವನ್ನು ಇಟ್ಟುಕೊಂಡು ವಿಡಿಯೋ ಕೂಡ ಮಾಡಿದ್ದರು. ಈ ಮಗುವಿನ ಪರಿಚಯವನ್ನು ಸೋನು ಸೋಷಿಯಲ್ ಮೀಡಿಯಾದಲ್ಲಿ ಮಾಡಿದ್ದರು.
ದತ್ತು ಪಡೆಯುವ ಯಾವುದೇ ನಿಯಮವನ್ನು ದತ್ತು ಪಾಲಿಸದೇ ಇರುವ ಕಾರಣಕ್ಕಾಗಿ ಮಕ್ಕಳ ಹಕ್ಕು ಕಸಿದಿರುವ ಆರೋಪ ಸೋನು ಮೇಲಿದೆ. ಉತ್ತರ ಕರ್ನಾಟಕದ 8 ವರ್ಷದ ಮಗು ಅದಾಗಿದ್ದು, ಸಿಂಪತಿ ಗಿಟ್ಟಿಸಿಕೊಂಡು ಸೆಲೆಬ್ರಿಟಿ ಆಗಲು ಸೋನು ಮುಂದಾಗಿದ್ದರು ಎನ್ನುವ ಆರೋಪ ಕೂಡ ಇದೆ. ಮಗುವನ್ನ ದತ್ತು ಪಡೆದ ಮೇಲೆ ಸುಳ್ಳು ಪ್ರಚಾರ ಗಿಟ್ಟಿಸಿಕೊಳ್ಳಲು ಸೋನು ತಂತ್ರ ರೂಪಿಸಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ಮಕ್ಕಳ ರಕ್ಷಣಾಧಿಕಾರಿಗಳಿಂದ ದೂರು ಬಂದ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸರಿಂದ ಸೋನು ಶ್ರೀನಿವಾಸ್ ಗೌಡ ಬಂಧನವಾಗಿತ್ತು.
ಅಕ್ರಮವಾಗಿ ಮಗುವನ್ನು ಮನೆಯಲ್ಲಿಟ್ಟುಕೊಂಡಿರುವ ಆರೋಪದ ಮೇಲೆ ಬಂಧನವಾಗಿರುವ (Arrest) ರೀಲ್ಸ್ ರಾಣಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಪೊಲೀಸ್ ಠಾಣೆಯಲ್ಲಿ ಗೋಳಾಡುತ್ತಿದ್ದಾರೆ. ಮಗುವನ್ನು ಕರೆದುಕೊಂಡು ಬಂದಿರುವ ವಿಷಯದಲ್ಲಿ ನನ್ನಿಂದ ಯಾವುದೇ ತಪ್ಪು ಆಗಿಲ್ಲವೆಂದು ಹೇಳಿಕೊಂಡಿದ್ದಾರೆ.
ಮಗುವನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡಿರುವ ವಿಚಾರವಾಗಿ ನಿನ್ನೆ ರಾತ್ರಿ ದೂರು ದಾಖಲಿಸಿಕೊಂಡಿದ್ದ ಬ್ಯಾಡರಹಳ್ಳಿ ಪೊಲೀಸರು ಇಂದು ಬಂಧನ ಮಾಡಿದ್ದಾರೆ. ಪೊಲೀಸರು ಹಾಗೂ CWC ಅಧಿಕಾರಿಗಳಿಂದ ಸೋನು ವಿಚಾರಣೆ ನಡೆಯುತ್ತಿದ್ದು, ಮಗುವನ್ನು ದತ್ತು ಪಡೆದಿರುವುದರ ಬಗ್ಗೆ ಮಾಹಿತಿ ಕೇಳಿದ್ದಾರೆ.
ನಾನು ಮಗು ಕರೆದುಕೊಂಡು ಬಂದು 15 ದಿನ ಆಗಿದೆ. ಹಾಗೆ ಕರೆದುಕೊಂಡು ಬಂದಿರುವುದು ತಪ್ಪಾಗಿರುತ್ತೆ ಅಂತ ನನಗೆ ಗೊತ್ತಿಲ್ಲ. ಗೊತ್ತಿದ್ದರೆ, ನಾನು ಪ್ರೊಸಿಜರ್ ಮೂಲಕವೇ ದತ್ತು ಮಾಡಿಸಿಕೊಳ್ಳುತ್ತಿದ್ದೆ. ನಾನು ತಪ್ಪು ಮಾಡದಿದ್ರೂ ನನ್ನನ್ನ ಕರೆದುಕೊಂಡು ಬಂದಿದ್ದಾರೆ ಎಂದು ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.
ಸೋನು ಗೌಡ ಮಾಡಿರುವ ತಪ್ಪಿನ ಅರಿವನ್ನು ಅಧಿಕಾರಿಗಳು ಮಾಡಿಸುತ್ತಿದ್ದು, ನಿಮಗೆ ಮಾಹಿತಿ ಕೊರತೆ ಇದೆ. ಪೊಲೀಸರು ತಪ್ಪು ಮಾಡದವರನ್ನ ಕರೆದುಕೊಂಡು ಬರೋದಿಲ್ಲ ಎಂದ ಅಧಿಕಾರಿಗಳು ತಿಳುವಳಿಕೆ ಹೇಳುತ್ತಿದ್ದಾರೆ. ಸದ್ಯ ಸೋನು ವಿಚಾರಣೆ ನಡೆಯುತ್ತಿದ್ದು, ಮುಂದೆ ಇದನ್ನು ಯಾವ ಹಂತಕ್ಕೆ ಅಧಿಕಾರಿಗಳು ತೆಗೆದುಕೊಂಡು ಹೋಗುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.
ಜೀವನ್ ಚಿಕ್ಕಮ್ಮ ಸುನಂದಾ ಕೂಡ ಅದೇ ಕಾಲೇಜಿನಲ್ಲಿ ಕೆಲಸ ಮಾಡ್ತಿದ್ದರು. ಇತ್ತ ತಲೆಯ ಮೇಲೆ ಟೊಮೆಟೋ ಸಾಸ್ ಚೆಲ್ಲಿಕೊಂಡು ಜೀವನ್ ತನ್ನ ಚಿಕ್ಕಮ್ಮನಿಗೆ ಫೋಟೋಗಳನ್ನು ಕಳಿಸಿದ್ದಾನೆ. ಮಗನ ಮಾತು ಕೇಳಿದ ಕೂಡಲೇ ಗಾಬರಿಗೊಂಡಿರುವ ಸುನಂದಾ ಅವರು ಬೊಮ್ಮನಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಜೀವನ್ ಹಣಕ್ಕಾಗಿ ಗೆಳೆಯರೊಂದಿಗೆ ಸೇರಿ ಕಿಡ್ನಾಪ್ ನಾಟಕವಾಡಿರೋದು ಬೆಳಕಿಗೆ ಬಂದಿದೆ.
ಗೋಲ್ಡ್ 369 ಎಂಬ ಆನ್‌ಲೈನ್ ಆಪ್ ನಲ್ಲಿ ಜೂಜಾಡಿ ಜೀವನ್ ಹಣ ಕಳೆದುಕೊಂಡಿದ್ದಾನೆ. ಮತ್ತೆ ಜೂಜಾಡಲು ಹಣವಿಲ್ಲದಿದ್ದಾಗ ಗೆಳೆಯರೊಂದಿಗೆ ಸೇರಿ ಕಿಡ್ನಾಪ್ ಆಗಿದ್ದೇನೆಂದು ನಾಟಕವಾಡಿದ್ದ. ಅಲ್ಲದೇ ಕಿಡ್ನಾಪ್ ಕಥೆ ಕಟ್ಟುವ ಮೂಲಕ 20 ಸಾವಿರ ಹಣವನ್ನ ಅಕೌಂಟ್ ಗೆ ಹಾಕಿಸಿಕೊಂಡಿದ್ದನು.
ಸದ್ಯ ಬೊಮ್ಮನಹಳ್ಳಿ ಪೊಲೀಸರಿಂದ ಆರೋಪಿ ಜೀವನ್, ವಿನಯ್, ಪೂರ್ಣೇಶ್, ಪ್ರೀತಮ್ ಹಾಗೂ ರಾಜುವನ್ನು ಪೊಲೀಸರು ಬಂಧನ ಮಾಡಿದ್ದಾರೆ.
ಆನೇಕಲ್ ನ ಬಿಂಗಿಪುರ ಮನೆಯೊಂದರಲ್ಲಿ ವಾಸವಾಗಿ ಆನ್‌ಲೈನ್ ಜೂಜಾಡ್ತಿದ್ದ ವೇಳೆ ಬಂಧಿಸಲಾಗಿದೆ.
ಮಾದಕವಸ್ತುಗಳ (Drugs) ಕಳ್ಳ ಸಾಗಾಣಿಕೆ ಸಂಬಂಧಿಸಿದಂತೆ ತಮಿಳಿನ ಖ್ಯಾತ ನಿರ್ಮಾಪಕ (Producer) ಹಾಗೂ ರಾಜಕಾರಣಿ ಜಾಫರ್ ಸಾದಿಖ್‌ನನ್ನು ಬಂಧಿಸಲು (Arrest) ತಂಡವನ್ನೇ ರಚನೆ ಮಾಡಿತ್ತು ಎನ್‌ಸಿಬಿ. ಸತತ ಹುಡುಕಾಟದ ನಂತರ ಕೊನೆಗೂ ಜಾಫರ್ ಎನ್‌ಸಿಬಿ ಬೀಸಿದ ಬಲೆಗೆ ಬಿದ್ದಿದ್ದಾನೆ. ಎರಡು ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮಾದಕವಸ್ತು ಕಳ್ಳಸಾಗಣೆಯ ಆರೋಪ ಈತನ ಮೇಲಿದೆ.
ಜಾಫರ್ ಸಾದಿಖ್ (Zafar Sadikh) ಬಂಧನದ ನಂತರ ಈತನೊಬ್ಬ ಅಂತಾರಾಷ್ಟ್ರೀಯ ಡ್ರಗ್ ಮಾಫಿಯಾದ ಮಾಸ್ಟರ್ ಮೈಂಡ್ ಆಗಿದ್ದಾನೆ ಎಂದು ಎನ್.ಸಿ.ಬಿ ಆರೋಪ ಮಾಡಿದೆ. ಬಂಧಿತ ಜಾಫರ್ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾನೆ. ಜೊತೆಗೆ ಡಿಎಂಕೆ ಪಕ್ಷದ ಸದಸ್ಯನಾಗಿಯೂ ಗುರುತಿಸಿಕೊಂಡಿದ್ದ. ಈತನ ಮೇಲೆ ಡ್ರಗ್ಸ್ ಆರೋಪ ಕೇಳಿ ಬರುತ್ತಿದ್ದಂತೆಯೇ ಪಕ್ಷ ಈತನನ್ನು ಉಚ್ಚಾಟನೆ ಮಾಡಿತ್ತು.
ಎನ್.ಸಿ.ಬಿ ಆರೋಪಿಸಿದಂತೆ ಈತ ಅಪಾಯಕಾರಿ ಡ್ರಗ್ಸ್‌ಗಳನ್ನು ಬೇರೆ ಬೇರೆ ದೇಶಗಳಿಗೆ ಕಳುಹಿಸುತ್ತಿದ್ದನಂತೆ. ನಿಷೇಧಿತ ಸ್ಯೂಡೋಫೆಡ್ರಿನ್ ರೀತಿಯ ಅಪಾಯಕಾರಿ ಡ್ರಗ್ಸ್ ಅನ್ನು ಆಸ್ಟ್ರೇಲಿಯಾಗೆ ಕಳುಹಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಡ್ರೈ ಪ್ರೂಟ್ಸ್ ಪ್ಯಾಕೆಟ್, ಒಣಗಿದ ತೆಂಗಿನ ಕಾಯಿ ಹೀಗೆ ಹಲವು ವಸ್ತುಗಳ ಮೂಲಕ ಡ್ರಗ್ಸ್ ಸಾಗಾಣಿಕೆ ಮಾಡುತ್ತಿದ್ದ ಎನ್ನುವುದು ಅಧಿಕಾರಿಗಳ ಆರೋಪ.
ಕೆಲ ದಿನಗಳ ಹಿಂದೆಯಷ್ಟೇ ಚೆನ್ನೈನ ಡಂಪ್ ಯಾರ್ಡ್ ನಲ್ಲಿ ಶೇಖರಿಸಿಟ್ಟಿದ್ದ ಮಾದಕ ವಸ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದರು. ಈ ವಸ್ತುಗಳಿಗೂ ಜಾಫರ್‌ಗೂ ಸಂಬಂಧವಿದೆ ಎನ್ನುವ ಕಾರಣಕ್ಕಾಗಿ ಹುಡುಕಾಟ ನಡೆಸಿದ್ದರು. ಎರಡು ವಾರಗಳ ಹುಡುಕಾಟದ ನಂತರ ಜಾಫರ್‌ನನ್ನು ಬಂಧಿಸಲಾಗಿದೆ.
ಘಟನೆ ವಿವರ: ಸಿದ್ದಗಂಗಾ ಮಠ ಜಾತ್ರೆಗೆ ಬಂದಿದ್ದ ಬಾಲಕಿ ಬೆಟ್ಟದ ಬಳಿ ಕುಳಿತಿದ್ದಳು. ಈ ವೇಳೆ ಬಾಲಕಿ ಬಳಿ ಬಂದ ಕಾಮುಕರು ಆಕೆಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಬಂಡೆ ಪಾಳ್ಯದ ಮನೆಯೊಂದರಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಇದಕ್ಕೂ ಮುನ್ನ ಮೊಬೈಲ್‍ನಲ್ಲಿ ಬಾಯ್ ವೀಡಿಯೋವೊಂದನ್ನು ತೋರಿಸಿ ಬಿಡುಗಡೆಗೊಳಿಸುವುದಾಗಿ ಬೆದರಿಸಿ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇತ್ತ ಅತ್ಯಾಚಾರದ ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಎಚ್ಚೆತ್ತು, ಆರೋಪಿಗಳ ವಿರುದ್ಧ ಪೋಕಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ. ಬಳಿಕ ಮೂವರನ್ನು ಬಂಧಿಸಿದ್ದಾರೆ. ಈ ಬಗ್ಗೆ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ಪೊಲೀಸರಿಂದ ತನಿಖೆ ಮುಂದುವರಿದಿದೆ.
ಬೆಂಗಳೂರು: ಮೂವರನ್ನು ಪೊಲೀಸರು ಯಾಕೆ ಬಂಧನ ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಪೊಲೀಸರು ಇಂದು ಮೂವರನ್ನು ಬಂಧನ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮದವರು ಪ್ರಿಯಾಂಕ್ ಖರ್ಗೆಯವರನ್ನು ಕೇಳಿದಾಗ, ಇವಾಗಲೂ FSL ರಿಪೋರ್ಟ್ ನಲ್ಲಿ ಏನು ಬಂದಿದೆಯೋ ಗೊತ್ತಿಲ್ಲ. ಗೃಹ ಸಚಿವರು ಬಂದ ಮೇಲೆ ಗೊತ್ತಾಗುತ್ತೆ. ವಿಚಾರಣೆ ಆಗಲಿ ಯಾಕೆ ಆತಂಕ ಎಂದಿದ್ದಾರೆ.
ಮಾಧ್ಯಮಗಳ ಮೇಲೆ ಎಫ್ ಐಆರ್ ಹಾಕಲಿ ಅಂತ ಯಾರು ಹೇಳಿದ್ದಾರೆ. ಎಫ್ ಎಸ್ ಎಲ್ ರಿಪೋರ್ಟ್ ನಲ್ಲೂ ಕೂಗಿದ್ದಾರೆ ಅಂತ ಇದೆಯಾ..?, ಖಾಸಗಿ ರಿಪೋರ್ಟ್ ನ ಅಧಿಕೃತ ಅಂತ ನಾನು ಬಹಿರಂಗ ಪಡಿಸಿದ್ನಾ?. ಸರ್ಕಾರದ ಎಫ್ ಎಸ್ ಎಲ್ ವರದಿಯನ್ನು ನಾನು ನೋಡಿಲ್ಲ. ನಾಳೆ ಸರ್ಕಾರದ ಎಫ್ ಎಸ್ ಎಲ್ ರಿಪೋರ್ಟ್ ಬರಲಿ ಎಂದು ತಿಳಿಸಿದ್ದಾರೆ.
ಮೂರು ಜನರನ್ನು ಯಾಕೆ ಆರೆಸ್ಟ್ ಮಾಡಿದ್ದಾರೆ ಗೊತ್ತಿಲ್ಲ. ಎಫ್ ಎಸ್ ಎಲ್ ಬಂದಿದೆಯಾ ವಾಯ್ಸ್ ಮ್ಯಾಚ್ ಆಗಿದೆಯಾ ಗೊತ್ತಿಲ್ಲ. ಸರ್ಕಾರದ ವರದಿಯೇ ಅಂತಿಮ. ಇವಾಗ್ಲೆ ಕಂಕ್ಲೂಶನ್ ಗೆ ಬರೋದು ಬೇಡ. ಅವರನ್ನ ಕರೆದುಕೊಂಡು ಹೋಗಿದ್ದಾರೆ. ಸಂಪೂರ್ಣ ಮಾಹಿತಿ ಇಲ್ಲದೆ ನಾನು ಮಾತನಾಡಲ್ಲ. ಹಕ್ಕು ಚ್ಯುತಿ ಮಂಡನೆ ಬಗ್ಗೆ ಮಾತನಾಡಿದ್ದು ನನಗೆ ಗೊತ್ತಿಲ್ಲ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ಖಾಸಗಿ ಫೋರೆನ್ಸಿಕ್ ವರದಿ ತರಿಸಿ ಬಹಿರಂಗಪಡಿಸಿದ ಬಿಜೆಪಿ ನಡೆ ದೇಶದ್ರೋಹದ ಕೆಲಸ: ಪ್ರಿಯಾಂಕ್ ಖರ್ಗೆ
ಡಿಸಿಪಿ ಸ್ಪಷ್ಟನೆ: ವಿಧಾನಸೌಧದಲ್ಲಿ ನಡೆದ ರಾಜ್ಯಸಭಾ ಚುನಾವಣೆಯ ಫಲಿತಾಂಶದ ಸಂದರ್ಭದಲ್ಲಿ’ಪಾಕಿಸ್ತಾನ ಜಿಂದಾಬಾದ್’ ಎಂಬ ಘೋಷಣೆ ಕೂಗಿದ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಈSಐ ವರದಿ, ಸಾಂದರ್ಭಿಕ ಸಾಕ್ಷ್ಯಾಧಾರಗಳು, ಸಾಕ್ಷಿಗಳ ಹೇಳಿಕೆ ಮತ್ತು ಲಭ್ಯ ಸಾಕ್ಷಾಧಾರಗಳ ಮೇರೆಗೆ ಮೂವರನ್ನು ಬಂಧಿಸಿದ್ದು, ಇವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗಿರುತ್ತದೆ ಎಂದು ಈ ಸಂಬಂಧ ಸೆಂಟ್ರಲ್ ಡಿಸಿಪಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಅಂದುಕೊಂಡಂತೆ ಆಗಿದ್ದರೆ, ಕೋರ್ಟ್ ಆದೇಶದಂತೆ ನಟಿ ಜಯಪ್ರದಾ ಅವರನ್ನು ಜನವರಿ 10ರೊಳಗೆ ಬಂಧಿಸಿ ಕೋರ್ಟಿಗೆ ಹಾಜರು ಪಡಿಸಬೇಕಿತ್ತು. ಆದರೆ, ಪೊಲೀಸರ ಕೈಗೆ ಸಿಗದಂತೆ ಜಯಪ್ರದಾ ತಪ್ಪಿಸಿಕೊಳ್ಳುತ್ತಿದ್ದಾರಂತೆ. ಹಾಗಾಗಿ ಮಧ್ಯ ಪ್ರದೇಶದ ಹೈಕೋರ್ಟ್ ಪೊಲೀಸರಿಗೆ ಎಚ್ಚರಿಕೆ ನೀಡಿದೆ. ಫೆಬ್ರವರಿ 27ರಂದು ಬಂಧಿಸಿ ಕೋರ್ಟಿಗೆ ಹಾಜರು ಪಡಿಸುವಂತೆ ಸೂಚಿಸಿದೆ.
ಏನಿದು ಪ್ರಕರಣ?
ಥಿಯೇಟರ್ ಕಾಂಪ್ಲೆಕ್ಸ್ ನ ನೌಕರರ ರಾಜ್ಯ ವಿಮೆ (ಇಎಸ್.ಐ) ನಿಧಿಯ ಪಾಲನ್ನು ಪಾವತಿಸದೇ ಇರುವುದಕ್ಕಾಗಿ ನ್ಯಾಯಾಲಯವು ನಟಿ ಜಯಪ್ರಯಾ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ (Punishment)ವಿಧಿಸಿತ್ತು. ಈ ಶಿಕ್ಷೆಯನ್ನು ರದ್ದುಗೊಳಿಸುವಂತೆ ನಟಿ ಜಯಪ್ರದಾ ಅವರು ಹೈಕೋರ್ಟ್ (High Court) ಗೆ ಮೊರೆ ಹೋಗಿದ್ದರು. ಮಾನ್ಯ ನ್ಯಾಯಾಲಯವು ಶಿಕ್ಷೆಯನ್ನು ರದ್ದುಗೊಳಿಸಲು ನಿರಾಕರಿಸಿದೆ. ಸಹಜವಾಗಿಯೇ ನಟಿಗೆ ಶಾಕ್ ಆಗಿದೆ.
ಕನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ನಟಿಸಿರುವ ಬಾಲಿವುಡ್ ನಟಿ ಜಯಪ್ರದಾ (Jayaprada) ಅವರಿಗೆ ಚೆನ್ನೈನ (Chennai) ಎಗ್ಮೋರ್ ನ್ಯಾಯಾಲಯವು ಆರು ತಿಂಗಳ ಕಾಲ ಜೈಲು ಶಿಕ್ಷೆ ಪ್ರಕಟಿಸಿತ್ತು. ನಟಿಯ ವಿರುದ್ಧ ಸರಕಾರದ ಲೇಬರ್ ಇನ್ಶುರೆನ್ಸ್ ಕಾರ್ಪೋರೇಷನ್ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು. ಈ ಪ್ರಕರಣದಲ್ಲಿ ಜಯಪ್ರದಾಗೆ ಸೋಲಾಗಿತ್ತು.
ಭಾರತೀಯ ಸಿನಿಮಾ ರಂಗದಲ್ಲಿ ಖ್ಯಾತ ನಟಿಯಾಗಿ ಗುರುತಿಸಿಕೊಂಡಿರುವ ಜಯಪ್ರದಾ, ಸಿನಿಮಾ ಪ್ರದರ್ಶಕಿಯೂ ಹೌದು. ಚೆನ್ನೈನಲ್ಲೇ ಇವರ ಹೆಸರಿನಲ್ಲಿ ಎರಡು ಚಿತ್ರಮಂದಿರಗಳಿವೆ. ಈ ಎರಡು ಚಿತ್ರ ಮಂದಿರಗಳಲ್ಲಿ ಅನೇಕ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಕಾರ್ಮಿಕರ ಇ.ಎಸ್.ಐ ಹಣವನ್ನು ಕಡಿತ ಮಾಡಿಕೊಂಡು ಕಾರ್ಮಿಕ ಇಲಾಖೆಗೆ ಅದನ್ನು ಪಾವತಿಸಿಲ್ಲ ಎನ್ನುವ ಕಾರಣಕ್ಕಾಗಿ ದೂರು ನೀಡಲಾಗಿತ್ತು.
ಈಗಾಗಲೇ ಅವರು ಮಾಲೀಕರಾಗಿರುವ ಆ ಎರಡೂ ಚಿತ್ರಮಂದಿರಗಳ ಮೇಲೆ ಕೇಸ್ ದಾಖಲಾಗಿದೆ. ಆಸ್ತಿ ತೆರಿಗೆಯನ್ನು ಕಟ್ಟದೇ ಇರುವ ಕಾರಣಕ್ಕಾಗಿ ಜಪ್ತಿ ಕೂಡ ಮಾಡಲಾಗಿದೆ. ಆದರೂ ಇ.ಎಸ್.ಐ ಕಟ್ ಮಾಡಿಯೂ ಕಾರ್ಮಿಕ ಇಲಾಖೆಗೆ ಅವರು ಪಾವತಿ ಮಾಡಿರಲಿಲ್ಲ ಎನ್ನುವುದು ಅಧಿಕಾರಿಗಳ ಆರೋಪವಾಗಿತ್ತು. ಹಾಗಾಗಿ ಶಿಕ್ಷೆ ನೀಡಲಾಗಿತ್ತು. ಕೆಳ ಹಂತದ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಎನ್‍ಎಸ್‍ಯುಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆಯಲ್ಲಿ ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಕಾರ್ಯಕರ್ತರು ನಳಿನ್ ಕುಮಾರ್ ಕಟೀಲ್ (Nalin Kumar Kateel) ಮನೆಗೆ ನುಗ್ಗಲು ಯತ್ನಿಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ ನಳಿನ್ ಕುಮಾರ್ ಕಟೀಲ್ ವಿರುದ್ಧ ಘೋಷಣೆ ಕೂಗಿದ ಎನ್‍ಎಸ್‍ಯುಐ ಕಾರ್ಯಕರ್ತರು ಕಟೀಲ್ ಮನೆ ಮುಂದೆ ಭಾರೀ ಹೈಡ್ರಾಮಾ ಮಾಡಿದರು.