Tag: arrest

  • ಮದ್ವೆಯಾಗಿದ್ರೂ ಅನೈತಿಕ ಸಂಬಂಧ ಮುಂದುವರಿಸಲು ಹಠ – ಒರ್ವನ ಮೇಲಿನ ಸೇಡಿಗೆ ಜೋಡಿ ಕೊಲೆ

    ಮದ್ವೆಯಾಗಿದ್ರೂ ಅನೈತಿಕ ಸಂಬಂಧ ಮುಂದುವರಿಸಲು ಹಠ – ಒರ್ವನ ಮೇಲಿನ ಸೇಡಿಗೆ ಜೋಡಿ ಕೊಲೆ

    – ಮಹಿಳೆಯರ ಜೋಡಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು

    ಬೆಳಗಾವಿ: ವಾರದ ಹಿಂದೆ ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ನಡೆದಿದ್ದ ಮಹಿಳೆಯರ ಜೋಡಿ ಕೊಲೆ ಪ್ರಕರಣದ ಹಂತಕರನ್ನು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಕಣ್ಣಿಗೆ ಖಾರದ ಪುಡಿ ಎರಚಿ, 5 ತಿಂಗ್ಳ ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ಕೊಲೆ

    ಮಚ್ಛೆಯ ಲಕ್ಷ್ಮಿ ನಗರದಲ್ಲಿ ವಾಯು ವಿಹಾರ ಮಾಡುತ್ತಿದ್ದ ರೋಹಿನಿ ಹುಲಮನಿ (21) ಹಾಗೂ ರಾಜಶ್ರೀ ಬನ್ನಾರ (21) ಅವರ ಬರ್ಬರ ಹತ್ಯೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ಜೋಡಿ ಕೊಲೆ ಹಿಂದೆ ಮತ್ತೋರ್ವ ಮಹಿಳೆಯ ಸಂಚು ಹಾಗೂ ಅನೈತಿಕ ಸಂಬಂಧವೇ ಪ್ರಮುಖ ಕಾರಣ ಎಂಬುವುದು ತನಿಖೆಯಿಂದ ದೃಢಪಟ್ಟಿದೆ.

    ಬಂಧಿತರನ್ನು ಕಾಳ್ಯಾನಟ್ಟಿ ಗ್ರಾಮದ ಕಲ್ಪನಾ ಮಲ್ಲೇಶ್ (35), ಸುರತೆ ಗ್ರಾಮದ ಮಹೇಶ್ ಮೊನಪ್ಪ ನಾಯಿಕ (20), ಬೆಳಗುಂದಿ ಗ್ರಾಮದ ರಾಹುಲ್ ಮಾರುತಿ ಪಾಟೀಲ (19) ಗಣೇಪುರದ ರೋಹಿತ್ ವಡ್ಡರ (21) ಹಾಗೂ ಕಾಳ್ಯಾನಟ್ಟಿಯ ಶಾನೂರ ಬನ್ನಾರ (18) ಎಂದು ಗುರುತಿಸಲಾಗಿದೆ.

    ಕೊಲೆ ಪ್ರಕರಣದ ಮೊದಲನೇ ಆರೋಪಿ ಕಲ್ಪನಾ ಹಾಗೂ ಮೃತ ರೋಹಿನಿ ಪತಿ ಗಂಗಪ್ಪ ಹುಲಮನಿ ಮದುವೆಗೂ ಮುನ್ನ ಮಧ್ಯೆ ಅನೈತಿಕ ಸಂಬಂಧ ಇತ್ತು. ಬಳಿಕ ಕಲ್ಪನಾಳಿಂದ ದೂರವಾಗಿದ್ದ ಗಂಗಪ್ಪ ರೋಹಿನಿ ಜೊತೆಗೆ ವಿವಾಹವಾಗಿದ್ದನು. ಅಲ್ಲದೇ ರೋಹಿನಿ ಐದು ತಿಂಗಳ ಗರ್ಭಿಣಿ ಕೂಡ ಆಗಿದ್ದಳು. ಮದುವೆ ಮುಂಚೆ ಗಂಗಪ್ಪನಿಗೆ ಆರ್ಥಿಕ ಸಹಾಯ ಮಾಡುತ್ತಿದ್ದ ಕಲ್ಪನಾ ಅನೈತಿಕ ಸಂಬಂಧ ಬೆಳೆಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

    ರೋಹಿಣಿ ವಿವಾಹದ ಬಳಿಕ ಗಂಗಪ್ಪ ಊರು ಬಿಟ್ಟು ಮಚ್ಚೆ ಗ್ರಾಮಕ್ಕೆ ಬಂದು ನೆಲೆಸಿದ್ದನು. ಇದರಿಂದ ಗಂಗಪ್ಪ ದೂರವಾಗಿದ್ದನ್ನು ಆರೋಪಿ ಕಲ್ಪನಾಗೆ ಸಹಿಸಿಕೊಳ್ಳಲು ಆಗಿಲ್ಲ. ಈ ಹಿಂದೆ ನೀಡಲಾಗಿದ್ದ ಹಣ ಮರಳಿಸುವಂತೆ ಗಂಗಪ್ಪನಿಗೆ ಆರೋಪಿ ಕಲ್ಪನಾ ಸತಾಯಿಸುತ್ತಿದ್ದಳು. ಅಲ್ಲದೇ ಗಂಗಪ್ಪನ ಜೊತೆಯೇ ಸಂಬಂಧ ಮುಂದುವರಿಸಲು ಹಠಕ್ಕೆ ಬಿದ್ದ ಕಲ್ಪನಾ, ರೋಹಿನಿ ಕೊಲೆಗೆ ಸಂಚು ರೂಪಿಸಿದ್ದಾಳೆ. ಸಹೋದರಿ ಪುತ್ರ ಮಹೇಶ್ ಕೂಡ ಇದಕ್ಕೆ ಸಾಥ್ ನೀಡಿದ್ದಾನೆ. ಈ ವಿಷಯವನ್ನು ಮಹೇಶ್ ಸಂಬಂಧಿಕರ ಬಳಿ ಹೇಳಿ ಕೊಲೆಗೆ ಸಂಚು ರೂಪಿಸಿದ್ದಳು.

    ಅದರಂತೆಯೇ ಸೆಪ್ಟೆಂಬರ್ 26 ಸಂಜೆ ಸುಮಾರು 4 ಗಂಟೆಗೆ ಗರ್ಭಿಣಿ ರೋಹಿನಿ ಸ್ನೇಹಿತೆ ಜ್ಯೋತಿ ಜೊತೆಗೆ ಮಚ್ಛೆಯ ಲಕ್ಷ್ಮಿನಗರದಲ್ಲಿ ವಾಯುವಿಹಾರ ಮಾಡುತ್ತಿದ್ದಳು. ಆಗ ಬೈಕ್ ಮೇಲೆ ಬಂದ ನಾಲ್ವರು ಮೊದಲು ಇಬ್ಬರ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಮೊದಲು ರೋಹಿನಿಯನ್ನು ಹತ್ಯೆ ಮಾಡಿದ್ದಾರೆ. ಆದರೆ ಸಾಕ್ಷ್ಯ ನಾಶಪಡಿಸಲು ರಾಜಶ್ರೀ ಬನ್ನಾರಳನ್ನು ಹತ್ಯೆಗೈದಿದ್ದಾರೆ. ಈ ಪ್ರಕರಣ ದಾಖಲಿಸಿಕೊಂಡ ಬೆಳಗಾವಿ ಗ್ರಾಮೀಣ ಪೊಲೀಸರು ಒಂದೇ ವಾರದಲ್ಲಿ ಆರೋಪಿಗಳನ್ನ ಹಿಡಿದು ಜೈಲಿಗಟ್ಟಿದ್ದಾರೆ. ಆದರೆ ಗಂಗಪ್ಪ ಹಾಗೂ ಕಲ್ಪನಾ ಮಧ್ಯೆ ವಿವಾಹ ಪೂರ್ವ ಇದ್ದ ದೈಹಿಕ ಸಂಬಂಧ ಜೋಡಿ ಕೊಲೆಗೆ ಕಾರಣವಾಗಿದೆ ಎಂದು ಬೆಳಗಾವಿ ಡಿಸಿಪಿ ಘಟನೆಯ ವಿವರವನ್ನು ತಿಳಿಸಿದರು.

  • ಸೋದರಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಕಿರಾತಕ

    ಸೋದರಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಕಿರಾತಕ

    – ಗರ್ಭಿಣಿ ಆಗುತ್ತಿದ್ದಂತೆ ಹುಡುಗಿ ಆತ್ಮಹತ್ಯೆ

    ಶಿವಮೊಗ್ಗ: ತನ್ನ ದೊಡ್ಡಮ್ಮನ ಮಗನೊಂದಿಗೆ ನಿರಂತರ ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾದ 16 ವರ್ಷದ ಹುಡುಗಿಯೊಬ್ಬಳು ಡೆತ್‍ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ತೀರ್ಥಹಳ್ಳಿ ಮೂಲದ ಆರೋಪಿ ಮೃತ ಹುಡುಗಿಗೆ ದೊಡ್ಡಮ್ಮನ ಮಗನಾಗಿದ್ದು, ಸಂಬಂಧದಲ್ಲಿ ಸಹೋದರನಾಗಬೇಕು. ಆದರೆ ಹುಡುಗಿಗೆ ತಾನೇ ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದನು.

    ಇತ್ತೀಚೆಗೆ ಆಕೆ ಐದು ತಿಂಗಳ ಗರ್ಭಿಣಿ ಎಂಬುದು ತಿಳಿಯುತ್ತಿದ್ದಂತೆ ನಾಪತ್ತೆಯಾಗಿದ್ದನು. ಇದರಿಂದ ಮನನೊಂದ ಹುಡುಗಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಸಾಯುವ ಮುನ್ನ, ನನ್ನ ಸಾವಿಗೆ ರಾಘವೇಂದ್ರನೇ ಕಾರಣ ಎಂದು ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಘಟನೆ ನಂತರ ಸ್ಥಳಕ್ಕೆ ಭೇಟಿ ನೀಡಿದ್ದ ರಿಪ್ಪನ್ ಪೇಟೆ ಪೊಲೀಸರು ಡೆತ್‍ನೋಟ್ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಘಟನೆ ಕುರಿತಂತೆ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪತ್ನಿಯ ದೂರನ್ನು ಸ್ವೀಕರಿಸಿದಕ್ಕೆ ಪೊಲೀಸರಿಗೆ ಅವಾಜ್ ಹಾಕಿದ್ದ ಭೂಪ ಅರೆಸ್ಟ್

    ಪತ್ನಿಯ ದೂರನ್ನು ಸ್ವೀಕರಿಸಿದಕ್ಕೆ ಪೊಲೀಸರಿಗೆ ಅವಾಜ್ ಹಾಕಿದ್ದ ಭೂಪ ಅರೆಸ್ಟ್

    ರಾಯಚೂರು: ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದರ್ಪ ಮೆರೆದು ಪೊಲೀಸರಿಗೆ ಅವಾಜ್ ಹಾಕಿದ್ದ ಭೂಪನ ವಿರುದ್ಧ ಕೊನೆಗೂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

    ಮಲ್ಲೇಶ್ ಪೂಜಾರಿ ಬಂಧಿತ ಆರೋಪಿ. ತನ್ನ ವಿರುದ್ಧ ಪತ್ನಿ ನೀಡಿದ ದೂರು ಸ್ವೀಕರಿಸಿದ್ದಕ್ಕೆ ಪೊಲೀಸರಿಗೆ ಅವಾಜ್ ಹಾಕಿ ಬೆದರಿಸಿದ್ದ. ಅವಾಚ್ಯ ಶಬ್ದ ಬಳಸಿ, ಟೇಬಲ್ ಗುದ್ದಿ ಪೊಲೀಸರ ವಿರುದ್ಧ ಹಾರಾಡಿದ್ದ ಮಲ್ಲೇಶ್‍ನನ್ನ ಪೊಲೀಸರು ಹಾಗೇ ಬಿಟ್ಟು ಕಳುಹಿಸಿದ್ದರು. ಆದರೆ ಮಲ್ಲೇಶ್ ಸಿಬ್ಬಂದಿಗೆ ಬೈದು ಬೆದರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಪೊಲೀಸರು ಮಲ್ಲೇಶ್ ವಿರುದ್ಧ ಯಾವುದೇ ಕ್ರಮಕೈಗೊಳ್ಳದ ಹಿನ್ನೆಲೆ ಪೊಲೀಸರ ಪರಸ್ಥಿತಿಯೇ ಹೀಗಾದರೆ ಸಾಮಾನ್ಯ ಜನರ ಗತಿ ಏನು ಎಂದು ಜನರು ಪಶ್ನಿಸಿದ್ದರು. ಕೊನೆಗೆ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಮಲ್ಲೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಹೆಡ್ ಕಾನ್ಸಟೇಬಲ್ ಕೃಷ್ಣಾ ಅವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಪತ್ರಕರ್ತನ ಸೋಗಿನಲ್ಲಿ ಪೊಲೀಸರಿಗೆ ಅವಾಜ್ ಹಾಕಿ ಬೆದರಿಸಿದ್ದ ಆರೋಪಿ ಮಲ್ಲೇಶ್ ಈಗ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾನೆ.

  • ನಗರಸಭೆ ಸದಸ್ಯನ ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

    ನಗರಸಭೆ ಸದಸ್ಯನ ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

    – ಪ್ರಕರಣದ ಆರು ಮಂದಿ ಅರೆಸ್ಟ್

    ರಾಯಚೂರು: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ಇಬ್ಬರು ಕೊಲೆ ಆರೋಪಿಗಳ ಮೇಲೆ ರಾಯಚೂರು ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ. ಇದನ್ನೂ ಓದಿ: ರಾಯಚೂರಿನ ನಡುರಸ್ತೆಯಲ್ಲಿ ನಗರಸಭೆ ಸದಸ್ಯನ ಭೀಕರ ಕೊಲೆ

    ಸೋಮವಾರ ರಾತ್ರಿ 9 ಗಂಟೆಗೆ ರಾಯಚೂರಿನ ಜಾಕೀರ್ ಹುಸೇನ್ ವೃತ್ತದಲ್ಲಿ ನಗರಸಭೆ ಜೆಡಿಎಸ್ ಸದಸ್ಯ ಮಕ್ಬೂಲ್ ಕೊಲೆ ಮಾಡಲಾಗಿತ್ತು. ಇದೀಗ ಪ್ರಕರಣದ ಆರು ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಜ್ಜು ಅಲಿಯಾಸ್ ಅಜಮುದ್ದೀನ್, ರಿಯಾಜ್, ಮೊಹಮದ್ ಯಾಸಿನ್, ಅಪಸರ್, ಕಾಶಿನಾಥ್ ಮತ್ತು ನಗರಸಭೆ ಮಾಜಿ ಸದಸ್ಯ ಗೋರಾ ಮಾಸುಂ ಎಂದು ಗುರುತಿಸಲಾಗಿದೆ.

    ಕೊಲೆಗೆ ಬಳಸಿದ ಮಾರಕಾಸ್ತ್ರಗಳನ್ನ ವಶಪಡಿಸಿಕೊಳ್ಳುವ ವೇಳೆ ಅಜ್ಜು ಅಲಿಯಾಸ್ ಅಜಮುದ್ದೀನ್ ಮತ್ತು ರಿಯಾಜ್ ಅದೇ ಆಯುಧಗಳಿಂದ ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದಾರೆ. ಈ ವೇಳೆ ಆರೋಪಿಗಳ ಕಾಲಿಗೆ ಗುಂಡು ಹಾರಿಸಲಾಗಿದೆ. ಈ ಘಟನೆಯಲ್ಲಿ ಪೊಲೀಸ್ ಪೇದೆಗಳಾದ ಯಲ್ಲಪ್ಪ, ಚಂದ್ರಕಾಂತ್‍ಗೆ ಗಾಯಗಳಾಗಿದ್ದು, ಗಾಯಾಳುಗಳನ್ನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕೊಲೆ, ಕೊಲೆ ಬೆದರಿಕೆ ಸೇರಿ 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್ ನಗರಸಭೆ ಮಾಜಿ ಸದಸ್ಯ ಗೋರಾ ಮಾಸುಂ ಪ್ರಮುಖ ಆರೋಪಿಯಾಗಿದ್ದಾನೆ. ರಿಯಾಜ್ ಹಾಗೂ ಅಜ್ಜು ಸಹ ರೌಡಿಶೀಟರ್‌ಗಳಾಗಿದ್ದು, ಹಲವಾರು ಪ್ರಕರಣಗಳನ್ನ ಎದುರಿಸುತ್ತಿದ್ದಾರೆ. ಮೊಹಮದ್ ಯಾಸಿನ್, ಅಪಸರ್ ಹಾಗೂ ಕಾಶಿನಾಥ್ ಸೇರಿ ಒಟ್ಟು ಆರು ಜನ ಆರೋಪಿಗಳು ಸೆರೆ ಸಿಕ್ಕಿದ್ದಾರೆ.

    ಏಳು ತಿಂಗಳ ಹಿಂದೆ ನಗರಸಭೆ ಸದಸ್ಯ ಮಕ್ಬೂಲ್ ಸಹೋದರನ ಕೊಲೆಯಾಗಿತ್ತು. ಆ ಪ್ರಕರಣದಲ್ಲಿ ಗೋರಾ ಮಾಸುಂ ಬಂಧನವಾಗಿರಲಿಲ್ಲ. ಹೀಗಾಗಿ ಗೋರಾ ಮಾಸುಂ ಪ್ರಮುಖ ಆರೋಪಿ ಅವನನ್ನ ಬಂಧಿಸುವಂತೆ ಮಕ್ಬೂಲ್ ಓಡಾಡುತ್ತಿದ್ದ. ಇದೇ ದ್ವೇಷಕ್ಕೆ ಈ ಆರು ಜನ ಮಕ್ಬೂಲ್‍ನನ್ನ ಕೊಲೆ ಮಾಡಿದ್ದಾರೆ. ಅಲ್ಲದೇ ಹಳೆ ವೈಷಮ್ಯ ಸಹ ಕೊಲೆ ಕಾರಣವಾಗಿದೆ ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕಮ್ ತಿಳಿಸಿದ್ದಾರೆ.

  • ಗ್ಯಾಂಗ್‍ರೇಪ್ ಮಾಡಿ, ನಾಲಿಗೆ ಕತ್ತರಿಸಿ ಚಿತ್ರಹಿಂಸೆ – ಚಿಕಿತ್ಸೆ ಫಲಿಸದೆ 20ರ ಯುವತಿ ಸಾವು

    ಗ್ಯಾಂಗ್‍ರೇಪ್ ಮಾಡಿ, ನಾಲಿಗೆ ಕತ್ತರಿಸಿ ಚಿತ್ರಹಿಂಸೆ – ಚಿಕಿತ್ಸೆ ಫಲಿಸದೆ 20ರ ಯುವತಿ ಸಾವು

    – ತಾಯಿ ಜೊತೆ ಹೊಲದಲ್ಲಿದ್ದಾಗ ಎಳೆದೊಯ್ದ ಕಾಮುಕರು

    ನವದೆಹಲಿ: ಎರಡು ವಾರಗಳ ಹಿಂದೆ ನಾಲ್ವರು ಕಾಮುಕರು 20 ವರ್ಷದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ ಚಿತ್ರಹಿಂಸೆ ನೀಡಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಂತ್ರಸ್ತೆ ದೆಹಲಿಯಲ್ಲಿ ಸಾವನ್ನಪ್ಪಿದ್ದಾಳೆ.

    ಉತ್ತರ ಪ್ರದೇಶದ ಹತ್ರಾಸ್ ಗ್ರಾಮದ ನಿವಾಸಿ 20 ವರ್ಷದ ಯುವತಿ ಮೃತಪಟ್ಟಿದ್ದಾಳೆ. ಆರೋಪಿಗಳು ಸಂತ್ರಸ್ತೆಯ ನಾಲಿಗೆಯನ್ನು ಕತ್ತರಿಸಿ ಭಯಾನಕವಾಗಿ ಹಲ್ಲೆ ಮಾಡಿದ್ದರು. ಹೀಗಾಗಿ ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದ್ದು, ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಸೋಮವಾರ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾದೆ ಸಾವನ್ನಪ್ಪಿದ್ದಾಳೆ.

    ಈಗಾಗಲೇ ನಾಲ್ವರು ಆರೋಪಿಗಳು ಜೈಲಿನಲ್ಲಿದ್ದಾರೆ. ಯುವತಿ ಮೇಲಿನ ದೌರ್ಜನ್ಯದ ಬಗ್ಗೆ ತಿಳಿದು ಗ್ರಾಮಸ್ಥರು ಪ್ರತಿಭಟನೆ ಮಾಡುವ ಮೂಲಕ ಖಂಡನೆ ವ್ಯಕ್ತಪಡಿಸಿದ್ದರು. ಅಲ್ಲದೇ ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಹಾಯ ಮಾಡಲಿಲ್ಲ. ಆದರೆ ಸಾರ್ವಜನಿಕರ ಆಕ್ರೋಶದ ನಂತರ ಪೊಲೀಸರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಎಂದು ಮೃತ ಯುವತಿಯ ಕುಟುಂಬದವರು ಆರೋಪಿಸಿದ್ದಾರೆ.

    ಏನಿದು ಪ್ರಕರಣ?
    ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಹಳ್ಳಿಯಲ್ಲಿ ಯುವತಿಯ ಮೇಲೆ ಹಲ್ಲೆ ಮಾಡಲಾಗಿತ್ತು. ತನ್ನ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಸಂತ್ರಸ್ತೆಯನ್ನು ಆಕೆಯ ದುಪ್ಪಟ್ಟಾದಿಂದ ಹೊಲಕ್ಕೆ ಎಳೆದುಕೊಂಡು ಹೋಗಲಾಗಿತ್ತು. ಅಲ್ಲದೇ ಆಕೆಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು. ನಂತರ ಸಂತ್ರಸ್ತೆಯ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದರು.

    ನನ್ನ ತಾಯಿ, ಸಹೋದರಿ ಮತ್ತು ಹಿರಿಯ ಸಹೋದರ ಹುಲ್ಲು ತರಲು ಹೊಲಕ್ಕೆ ಹೋಗಿದ್ದರು. ಅಂತೆಯೇ ಸಹೋದರ ಹುಲ್ಲು ತೆಗೆದುಕೊಂಡು ಮನೆಗೆ ಹೋಗಿದ್ದರು. ಆದರೆ ನನ್ನ ತಾಯಿ ಮತ್ತು ಸಹೋದರಿ ಹುಲ್ಲನ್ನು ಕಟ್ ಮಾಡುತ್ತಿದ್ದು, ಇಬ್ಬರು ಸ್ವಲ್ಪ ದೂರದಲ್ಲಿದ್ದರು. ಆದರೆ ಹಿಂದಿನಿಂದ ನಾಲ್ಕೈದು ಮಂದಿ ಬಂದು ನನ್ನ ಸಹೋದರಿಯ ದುಪ್ಪಟ್ಟಾವನ್ನು ಅವಳ ಕುತ್ತಿಗೆಗೆ ಸುತ್ತಿ ಬಜ್ರಾ ಮೈದಾನದೊಳಗೆ ಎಳೆದುಕೊಂಡು ಹೋಗಿದ್ದರು ಎಂದು ಸಂತ್ರಸ್ತೆಯ ಮತ್ತೊಬ್ಬ ಸಹೋದರ ತಿಳಿಸಿದ್ದಾರೆ.

    ಹೊಲದಲ್ಲಿದ್ದ ತಂಗಿ ಕಾಣದಿದ್ದಾಗ ತಾಯಿ ಹುಡುಕಲು ಶುರು ಮಾಡಿದ್ದರು. ಕೊನೆಗೆ ನನ್ನ ತಂಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅಲ್ಲದೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು. ನಾವು ಪೊಲೀಸರು ದೂರು ನೀಡಿದರೂ ಆರಂಭದಲ್ಲಿ ನಮಗೆ ಸಹಾಯ ಮಾಡಲಿಲ್ಲ. ಜೊತೆಗೆ ಶೀಘ್ರವಾಗಿ ಕ್ರಮ ಕೈಗೊಂಡಿಲ್ಲ. ನಾಲ್ಕೈದು ದಿನಗಳ ನಂತರ ಈ ಕುರಿತು ಪ್ರತಿಕ್ರಿಯೆ ನೀಡಿದ್ದರು ಎಂದು ಸಹೋದರ ಆರೋಪಿಸಿದ್ದಾರೆ.

    ಉತ್ತರ ಪ್ರದೇಶ ಪೊಲೀಸರು ಕುಟುಂಬದ ಆರೋಪವನ್ನು ನಿರಾಕರಿಸಿದ್ದಾರೆ. “ಇದು ತುಂಬಾ ದುರದೃಷ್ಟಕರ ಘಟನೆಯಾಗಿದೆ. ಆದರೆ ಕುಟುಂಬಕ್ಕೆ ಸಾಧ್ಯವಾದಷ್ಟು ಸಹಾಯ ಮಾಡಿದ್ದೇವೆ. ಅಲ್ಲದೇ ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದು, ಜೈಲಿಗೆ ಕಳುಹಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿ ವಿಕ್ರಾಂತ್ ವೀರ್ ಹೇಳಿದ್ದಾರೆ.

  • ಮದ್ಯದಲ್ಲಿ ಕೀಟನಾಶಕ ಬೆರೆಸಿದ ಪತ್ನಿ – ಗಂಡನ ಜೊತೆ ಸ್ನೇಹಿತನೂ ಸಾವು

    ಮದ್ಯದಲ್ಲಿ ಕೀಟನಾಶಕ ಬೆರೆಸಿದ ಪತ್ನಿ – ಗಂಡನ ಜೊತೆ ಸ್ನೇಹಿತನೂ ಸಾವು

    – ಪ್ರೀತಿಸಿ ಮದ್ವೆಯಾಗಿದ್ದ ಪತಿಯನ್ನೇ ಕೊಂದ್ಳು
    – ಮರುದಿನ ಕುಡಿಯಲೆಂದು ಎಣ್ಣೆ ತಂದಿದ್ದ

    ಹೈದರಾಬಾದ್: ಮಹಿಳೆಯೊಬ್ಬಳು ಪತಿಯ ಕಿರುಕುಳವನ್ನು ಸಹಿಸಲಾಗದೆ ಅವನು ತಂದಿದ್ದ ಮದ್ಯದಲ್ಲಿ ಕೀಟನಾಶಕವನ್ನು ಬೆರೆಸಿದ್ದಾಳೆ. ಆದರೆ ಪತಿಯ ಜೊತೆ ಆತನ ಗೆಳೆಯನೂ ಮದ್ಯ ಕುಡಿದು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಭೀಮವರಂ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಬಾಲರಾಜು ಮತ್ತು ಆತನ ಸ್ನೇಹಿತ ವೆಂಕಟರತ್ನಂ ನಾಯ್ಡು ಎಂದು ಗುರುತಿಸಲಾಗಿದೆ. ಬಾಲರಾಜು ಪತ್ನಿ ಮಲ್ಯಮ್ಮ ಮದ್ಯದಲ್ಲಿ ಕೀಟನಾಶಕ ಬೆರೆಸಿ ಪತಿಯನ್ನು ಕೊಲೆ ಮಾಡಿದ್ದಾಳೆ. ಸದ್ಯಕ್ಕೆ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ಮೃತ ಜೆ.ಬಾಲರಾಜು ಹತ್ತು ವರ್ಷಗಳ ಹಿಂದೆ ಮಲ್ಯಮ್ಮಳನ್ನು ಪ್ರೀತಿಸಿ ಮದುವೆಯಾಗಿದ್ದನು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಮದುವೆಯಾದ ಕೆಲ ವರ್ಷಗಳ ಕಾಲ ಮೃತ ಬಾಲರಾಜು ಪತ್ನಿಯನ್ನು ಚೆನ್ನಾಗಿ ನೋಡಿಕೊಂಡಿದ್ದನು. ಆದರೆ ಆಗಾಗ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಕುಡಿತದ ದಾಸನಾಗಿದ್ದ ಮೃತ ಬಾಲರಾಜು ತನ್ನ ಹೆಂಡತಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆ ಕೊಡಲು ಪ್ರಾರಂಭಿಸಿದ್ದನು.

    ಇತ್ತೀಚಿಗೆ ಬಾಲರಾಜು ಹೆಚ್ಚಾಗಿ ಮಲ್ಯಮ್ಮಳನ್ನು ಹಿಂಸಿಸುತ್ತಿದ್ದನು. ಕೊನೆಗೆ ಪತಿಯ ಕಿರುಕುಳವನ್ನು ಸಹಿಸಲಾಗದೆ ಮಲ್ಯಮ್ಮ ತನ್ನ ಗಂಡನನ್ನು ಕೊಲ್ಲಲು ನಿರ್ಧರಿಸಿದ್ದಳು. ಅದರಂತೆಯೇ ಸೆ.23 ರಂದು ಬಾಲರಾಜು ಅತಿಯಾಗಿ ಕುಡಿದು ಮನೆಗೆ ಬಂದಿದ್ದನು. ಜೊತೆಗೆ ಮರುದಿನ ಕುಡಿಯಲು ಮದ್ಯದ ಬಾಟಲ್ ತೆಗೆದುಕೊಂಡು ಮನೆಗೆ ಬಂದಿದ್ದನು. ಆರೋಪಿ ಮಲ್ಯಮ್ಮ ಪ್ಲಾನ್ ಮಾಡಿ ಅದೇ ಮದ್ಯಕ್ಕೆ ಕೀಟನಾಶಕ ಬೆರೆಸಿದ್ದಳು.

    ಮರುದಿನ ಬಾಲರಾಜು ಮನೆಯಲ್ಲಿಯೇ ಕುಳಿತಿಕೊಂಡು ಮದ್ಯಪಾನ ಮಾಡುತ್ತಿದ್ದನು. ಈ ವೇಳೆ ಆತನ ಗೆಳೆಯ ವೆಂಕಟರತ್ನಂ ನಾಯ್ಡು ಮನೆಗೆ ಬಂದಿದ್ದನು. ಆಗ ಕೀಟನಾಶಕ ಬೆರೆಸಿರುವುದು ಗೊತ್ತಿಲ್ಲದೆ ಇಬ್ಬರು ಮದ್ಯವನ್ನು ಕುಡಿದಿದ್ದಾರೆ. ಮದ್ಯಪಾನ ಮಾಡಿದ ನಂತರ ಇಬ್ಬರೂ ಅಸ್ವಸ್ಥರಾಗಿದ್ದಾರೆ. ನಂತರ ಆಕೆಯೇ ಇಬ್ಬರನ್ನು ಆಸ್ಪತ್ರೆಗೆ ಸೇರಿಸಿದ್ದಾಳೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ.

    ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆಗ ಮದ್ಯ ಕುಡಿದು ಮೃತಪಟ್ಟಿದ್ದಾರೆ ಎಂದು ಆರೋಪಿ ಮಲ್ಯಮ್ಮ ಪೊಲೀಸರ ಮುಂದೆ ಸುಳ್ಳು ಹೇಳಿದ್ದಳು. ಆದರೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಕೀಟನಾಶಕದಿಂದ ಸಾವನ್ನಪ್ಪಿರುವುದು ಬಹಿರಂಗವಾಗಿದೆ. ಕೂಡಲೇ ಆಕೆಯನ್ನು ಪೊಲೀಸರು ಬಂಧಿಸಿ ವಿಚಾರಣೆ ಮಾಡಿದ್ದಾರೆ. ಆಗ ಪತಿ ತುಂಬಾ ಹಿಂಸೆ ನೀಡುತ್ತಿದ್ದನು. ಜೊತೆಗೆ ನನ್ನ ಮಕ್ಕಳ ಭವಿಷ್ಯಕ್ಕಾಗಿ ಆತನನ್ನು ಕೊಲೆ ಮಾಡಿದೆ ಎಂದು ತಪ್ಪೊಪ್ಪಿಕೊಂಡಿದ್ದಾಳೆ.

  • ನಾಲ್ಕನೇ ಬಾರಿ ಮದುವೆಯಾಗಲು ಮಗನನ್ನೇ ಕೊಂದ 23ರ ವಿಧವೆ

    ನಾಲ್ಕನೇ ಬಾರಿ ಮದುವೆಯಾಗಲು ಮಗನನ್ನೇ ಕೊಂದ 23ರ ವಿಧವೆ

    – ವಿವಾಹವಾದ ವರ್ಷದ ನಂತ್ರ ಪತಿಯಿಂದ ದೂರ
    – 2ನೇ ಪತಿ ಸಾವು, ಅಪಘಾತದಲ್ಲಿ 3ನೇ ಗಂಡ ನಿಧನ

    ಪಾಟ್ನಾ: 23 ವರ್ಷದ ವಿಧವೆ ನಾಲ್ಕನೇ ಬಾರಿಗೆ ಮದುವೆಯಾಗಲು ಬಯಸಿದ್ದರಿಂದ ತನ್ನ 4 ವರ್ಷದ ಮಗನನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿರುವ ಘಟನೆ ಪಾಟ್ನಾದ ಹಸನ್‍ಪುರ್ ಖಂಡಾ ಪ್ರದೇಶದಲ್ಲಿ ನಡೆದಿದೆ.

    ಸಜನ್ ಕುಮಾರ್ ಮೃತ ಬಾಲಕ. ಈತನಿಗೆ ಮಾತನಾಡಲು ಮತ್ತು ಸರಿಯಾಗಿ ಕಿವಿ ಕೇಳಿಸುತ್ತಿರಲಿಲ್ಲ. ಆರೋಪಿಯನ್ನು ಧರ್ಮಶೀಲಾ ದೇವಿ ಎಂದು ಗುರುತಿಸಲಾಗಿದೆ. ಈ ಘಟನೆ ಶುಕ್ರವಾರ ಶಹಜಹಾನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಇದೀಗ ಆರೋಪಿ ವಿಧವೆಯನ್ನು ಜೈಲಿಗೆ ಕಳುಹಿಸಲಾಗಿದೆ.

    ಮೃತ ಕುಮಾರ್, ದೇವಿ ಮತ್ತು ಆಕೆಯ ಮೊದಲ ಪತಿ ಅರುಣ್ ಚೌಧರಿ ಮಗ. ಅರುಣ್ ನಳಂದದ ಭದೌಲ್ ನಿವಾಸಿಯಾಗಿದ್ದು, ಮದುವೆಯಾದ ಒಂದು ವರ್ಷದ ನಂತರ ಆರೋಪಿ ದೇವಿ ಪತಿ ಅರುಣ್‍ನನ್ನು ಬಿಟ್ಟು ತನ್ನ ಮಗನ ಕರೆದುಕೊಂಡು ಹೋಗಿದ್ದಳು. ಮತ್ತೆ ಆರೋಪಿ ಎರಡನೇ ಮದುವೆಯಾದಳು. ಆದರೆ 2ನೇ ಪತಿ ಮೃತಪಟ್ಟರು. ಹೀಗಾಗಿ ಆರೋಪಿ ಪಾಟ್ನಾದ ಮುಸ್ತಾಫಾಪುರ ನಿವಾಸಿ ಮಹೇಶ್ ಚೌಧರಿ ಜೊತೆ ಮೂರನೇ ಬಾರಿಗೆ ವಿವಾಹವಾದಳು.

    ಎರಡು ತಿಂಗಳ ಹಿಂದೆ ಮಹೇಶ್ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು. ಹೀಗಾಗಿ ಆರೋಪಿ ದೇವಿ ಮತ್ತೆ ಮದುವೆಯಾಗಲು ಬಯಸಿದ್ದಳು. ಆದರೆ ಇದಕ್ಕೆ ಆಕೆಯ ಮಗ ಅಡ್ಡಿಯಾಗಿದ್ದನು. ಹೀಗಾಗಿ ಮಗನನ್ನೇ ಕೊಲೆ ಮಾಡಲು ಪ್ಲಾನ್ ಮಾಡಿದ್ದಳು. ಅದರಂತೆಯೇ ಪೋಷಕರೊಂದಿಗೆ ವಾಸಿಸುತ್ತಿದ್ದ ಆರೋಪಿ ದೇವಿ ಶುಕ್ರವಾರ ತನ್ನ ಮಗನನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಗ್ರಾಮದ ಕೆಲ ಅಪ್ರಾಪ್ತ ಬಾಲಕರು ಕುಮಾರ್ ಮೃತದೇಹವನ್ನು ನೀರಿನಲ್ಲಿ ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.

    ನಾನು ಇನ್ನೊಬ್ಬ ವ್ಯಕ್ತಿಯನ್ನು ಮದುವೆಯಾಗಲು ಬಯಸಿದ್ದೆ. ಆದ್ದರಿಂದ ನನ್ನ ಮಗುವನ್ನು ಕೊಲೆ ಮಾಡಿದ್ದೇನೆ ಎಂದು ವಿಚಾರಣೆ ವೇಳೆ ಆರೋಪಿ ದೇವಿ ತಪ್ಪೊಪ್ಪಿಕೊಂಡಿದ್ದಾಳೆ. ಪೊಲೀಸರು ಆಕೆಯ ಮೊದಲ ಪತಿ ಅರಣ್‍ನನ್ನು ಪತ್ತೆ ಮಾಡಿ ಆತನ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ನಂತರ ಮಹಿಳೆಯ ವಿರುದ್ಧ ಎಫ್‍ಐಆರ್ ದಾಖಲಿಸಿ ಜೈಲಿಗೆ ಕಳುಹಿಸಿದ್ದಾರೆ.

  • ಬೆಳ್ಳಂಬೆಳಗ್ಗೆ ರೈಲು, ವಿಮಾನ ನಿಲ್ದಾಣಕ್ಕೆ ಕರವೇ ಮುತ್ತಿಗೆ – ಕಾರ್ಯಕರ್ತರ ಬಂಧನ

    ಬೆಳ್ಳಂಬೆಳಗ್ಗೆ ರೈಲು, ವಿಮಾನ ನಿಲ್ದಾಣಕ್ಕೆ ಕರವೇ ಮುತ್ತಿಗೆ – ಕಾರ್ಯಕರ್ತರ ಬಂಧನ

    ಬೆಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ರೈತರು ಆಕ್ರೋಶ ಶುರು ಮಾಡಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆಗೆ ಯತ್ನಿಸಿದ್ದಾರೆ. ಪರಿಣಾಮ 50ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

    ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕರವೇ ಮಹಿಳಾ ಕಾರ್ಯಕರ್ತೆಯರು ಏರ್‌ಪೋರ್ಟಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಪೊಲೀಸರು 30ಕ್ಕೂ ಹೆಚ್ಚು ಮಹಿಳಾ ಪ್ರತಿಭಟನಕಾರರನ್ನ ಬಂಧಿಸಿದ್ದಾರೆ. ಇತ್ತ ಮೆಜೆಸ್ಟಿಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕರವೇ ಕಾರ್ಯಕರ್ತರು ರೈಲ್ವೆ ಸ್ಟೇಷನ್ ಮುತ್ತಿಗೆಗೆ ಯತ್ನಿಸಿದ್ದಾರೆ. ಆಗ ಫ್ಲಾಟ್ ಫಾರಂಗೆ ಬಿಡದೆ ಎಲ್ಲಾ ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಅಲ್ಲದೇ ಕೋಡಿಹಳ್ಳಿ ಚಂದ್ರಶೇಖರ್, ಟಿ.ಎ.ನಾರಾಯಣಗೌಡ ಸೇರಿದಂತೆ ರೈಲ್ವೆ ನಿಲ್ದಾಣದಲ್ಲಿ ಕರವೇ ಕಾರ್ಯಕರ್ತರ ಪೊಲೀಸರು ಬಂಧಿಸಿದ್ದಾರೆ.

    ಅರೆಸ್ಟ್ ಆಗಿದ್ದ ಕರವೇ ಕಾರ್ಯಕರ್ತರು ಬಸ್ಸಿನಿಂದ ಕೆಳಗಿಳಿದು ಆನಂದ್ ರಾವ್ ಫ್ಲೈ ಓವರ್ ಮೇಲೆ ರಸ್ತೆ ತಡೆದು ಪ್ರತಿಭಟನೆಗೆ ಮುಂದಾಗಿದ್ದರು. ಆಗ ಮತ್ತೆ ಕಾರ್ಯಕರ್ತರನ್ನು ಬಸ್ಸಿಗೆ ತುಂಬಿ ಪೊಲೀಸರು ಕಳುಹಿಸಿದ್ದಾರೆ. ಬೆಂಗಳೂರಿನ ಅಷ್ಟದಿಕ್ಕೂಗಳಲ್ಲೂ ಸಾಲು ಸಾಲು ಪ್ರತಿಭಟನೆ ಮಾಡುತ್ತಿದ್ದು, ಹಲವೆಡೆ ರೈತರ ಮೆರವಣಿಗೆ, ಬೈಕ್ ರ‍್ಯಾಲಿ, ರಸ್ತೆ ತಡೆ ಮಾಡುವ ಸಾಧ್ಯತೆ ಇದೆ.

    ಬೆಂಗಳೂರಲ್ಲಿ ಎಲ್ಲೆಲ್ಲಿ ಬಂದ್ ಬಿಸಿ
    * ಟೌನ್ ಹಾಲ್ – ಐಕ್ಯ ಸಮಿತಿ ಹಾಗೂ ರೈತ ಹೋರಾಟಗಾರರ ಪ್ರತಿಭಟನೆ (ಟೌನ್‍ಹಾಲ್‍ನಿಂದ ಫ್ರೀಡಂ ಪಾರ್ಕ್ ವರೆಗೆ ರ‍್ಯಾಲಿ)
    * ಮೈಸೂರು ಬ್ಯಾಂಕ್ ಸರ್ಕಲ್ – ಬಡಗಲಪುರ ನಾಗೇಂದ್ರ ಮುಂದಾಳತ್ವದ ರೈತ ಸಂಘಟನೆ (ಕೆಜಿ ರೋಡ್, ಗಾಂಧಿನಗರ, ಮೆಜೆಸ್ಟಿಕ್ ಸುತ್ತಮುತ್ತ ಮೆರವಣಿಗೆ)
    * ಮೌರ್ಯ ಸರ್ಕಲ್ – ಕೋಡಿಹಳ್ಳಿ ಚಂದ್ರಶೇಖರ್ ಸಾರಥ್ಯದ ರಾಜ್ಯ ರೈತ ಸಂಘ ಹಸಿರು ಸೇನೆ


    * ಮೆಜೆಸ್ಟಿಕ್‍ನಲ್ಲಿ ಬಸ್ ತಡೆ – ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಚಳವಳಿ ಸಂಘಟನೆ

    * ಮೆಜೆಸ್ಟಿಕ್‍ನಲ್ಲಿ ರೈಲು ತಡೆ – ನಾರಾಯಣಗೌಡ ನೇತೃತ್ವದ ಕರವೇ
    * ಸುಮನಹಳ್ಳಿ ಸರ್ಕಲ್ – ಗಿರೀಶ್ ಗೌಡ ನೇತೃತ್ವದ ರಾಜ್ಯ ರೈತ ಸಂಘಟನೆ
    * ಡಾ. ರಾಜಕುಮಾರ್ ಸಮಾಧಿ (ಲಗ್ಗರೆ ಜಂಕ್ಷನ್) – ಜಯರಾಜ್ ನಾಯ್ಡು ನಾಯಕತ್ವದ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ
    * ಕೆಪಿಸಿಸಿ ಕಚೇರಿ – ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ( ಮನೋಹರ್)

  • ಗ್ರಾಹಕರ ಸೋಗಿನಲ್ಲಿ ಪೊಲೀಸರ ಕಾರ್ಯಾಚರಣೆ- ಗಾಂಜಾ ಮಾರುತ್ತಿದ್ದ ನಾಲ್ವರ ಬಂಧನ

    ಗ್ರಾಹಕರ ಸೋಗಿನಲ್ಲಿ ಪೊಲೀಸರ ಕಾರ್ಯಾಚರಣೆ- ಗಾಂಜಾ ಮಾರುತ್ತಿದ್ದ ನಾಲ್ವರ ಬಂಧನ

    ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಾಂಜಾ, ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳ ವಿರುದ್ಧ ಪೊಲೀಸರ ದಿಟ್ಟ ಕ್ರಮ ಮುಂದುವರಿದಿದ್ದು, ಮಾರುವೇಷದಲ್ಲಿ ಕಾರ್ಯಾಚರಣೆ ನಡೆಸಿ ಹುಬ್ಬಳಿಯ ಬೆಂಡಿಕೇರಿ ಪೊಲೀಸರು ಗಾಂಜಾ ಮಾರುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಮಾದಕ ದ್ರವ್ಯ ವಿರುದ್ಧ ಪೊಲೀಸರ ಕಾರ್ಯಾಚರಣೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ದಂಧೆಕೋರರು ಮತ್ತಷ್ಟು ಎಚ್ಚರಿಕೆಯಿಂದ ತಮ್ಮ ಕೃತ್ಯವನ್ನು ಮುಂದುವರಿಸಿದ್ದು, ಪರಿಣಾಮ ಪೊಲೀಸರು ಮಾರುವೇಷದಲ್ಲಿ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದ್ದಾರೆ.

    ಹಲವು ದಿನಗಳಿಂದ ಪೊಲೀಸ ಕಣ್ಣು ತಪ್ಪಿಸಿ ಗಾಂಜಾ ಮಾರಾಟ ಮಾಡುತ್ತಿದ್ದವರ ಬೆನ್ನು ಬಿದ್ದಿರುವ ಪೊಲೀಸರು ಕಳೆದ ಎರಡು ದಿನಗಳಿಂದಲೂ ಮಾರುವೇಷದಲ್ಲಿ ಕಾರ್ಯಾಚರಣೆ ನಡೆಸಿದ್ದರು. ಕೊನೆಗೂ ಗ್ರಾಹಕರ ಸೋಗಿನಲ್ಲಿದ್ದ ಪೊಲೀಸರ ಬಲೆಗೆ ನಾಲ್ವರು ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.

    ಬೆಂಡಿಗೇರಿ ಠಾಣೆಯ ವ್ಯಾಪ್ತಿಯಲ್ಲೇ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳಿಂದ 1 ಕೆಜಿಗೂ ಹೆಚ್ಚು ಗಾಂಜಾವನ್ನು ವಶಕ್ಕೆ ಪಡೆಯಲಾಗಿದ್ದು. ನಾಲ್ವರು ಬಂಧಿತರು, ಹುಬ್ಬಳ್ಳಿಯ ವೀರಾಪುರ ಓಣಿ, ಗಣೇಶಪೇಟೆ ಹಾಗೂ ಸೆಟ್ಲಮೆಂಟಿನ ನಿವಾಸಿಗಳೆಂದು ತಿಳಿದು ಬಂದಿದೆ. ಬೆಂಡಿಗೇರಿ ಪೊಲೀಸರ ಈ ಕಾರ್ಯಾಚರಣೆ ಮತ್ತಷ್ಟು ದಂಧೆಕೋರರಿಗೆ ನಡುಕ ಹುಟ್ಟಿಸಿದೆ.

  • ದರೋಡೆಕೋರರ ಬಂಧನ – 90 ಲಕ್ಷ ಮೌಲ್ಯದ 1.757 ಕೆಜಿ ಚಿನ್ನ, 3.5 ಲಕ್ಷ ಹಣ ವಶ

    ದರೋಡೆಕೋರರ ಬಂಧನ – 90 ಲಕ್ಷ ಮೌಲ್ಯದ 1.757 ಕೆಜಿ ಚಿನ್ನ, 3.5 ಲಕ್ಷ ಹಣ ವಶ

    ಬೆಂಗಳೂರು: ಉತ್ತರ ವಿಭಾಗದ ಪೊಲೀಸರು ಕಾರ್ಯಾಚರಣೆ ಮೂಲಕ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ದರೋಡೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಮಾಡಿದ್ದ ಮೂರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಗೋಪುರಾಮ್ ಗೋಪಾಲ್, ಜಿತೇಂದ್ರ ಮಾಲಿ ಮತ್ತು ವೀರ್‍ರಾಮ್ ಮಾಂಗಿಲಾಲ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 90 ಲಕ್ಷ ಮೌಲ್ಯದ 1.757 ಕೆಜಿ ಚಿನ್ನ ಮತ್ತು 3.5 ಲಕ್ಷ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಆರೋಪಿಗಳು ಚಿನ್ನ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದು ದರೋಡೆ ಮಾಡಿದ್ದರು. ನಕಲಿ ಗನ್ ತೋರಿಸಿ 3.455 ಕೆಜಿ ಚಿನ್ನ, 715 ಗ್ರಾಂ ಬೆಳ್ಳಿ ಮತ್ತು 3.96 ನಗದು ದೋಚಿ ಎಸ್ಕೇಪ್ ಆಗಿದ್ದರು. ಸಿಸಿಟಿವಿ ವಿಡಿಯೋ ಆಧರಿಸಿ ಜಾಲಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳು ಆನ್‍ಲೈನ್ ಫುಡ್ ಡಿಲವೆರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿ ಗೋಪುರಾಮ್ ಈ ಹಿಂದೆ 2016ರಲ್ಲಿ ಜ್ಯುವೆಲ್ಲರಿ ಶಾಪ್ ರಾಬರಿಯಲ್ಲಿ ಬಂಧಿತನಾಗಿದ್ದನು ಎಂದು ತಿಳಿದುಬಂದಿದೆ.