Tag: arrest

  • ಕಾರಿನಲ್ಲಿ ಕುಳಿತಿದ್ದ ನಟಿಗೆ ಸನ್ನೆ ಮಾಡಿದ ಟ್ಯಾಕ್ಸಿ ಡ್ರೈವರ್ ಅರೆಸ್ಟ್

    ಕಾರಿನಲ್ಲಿ ಕುಳಿತಿದ್ದ ನಟಿಗೆ ಸನ್ನೆ ಮಾಡಿದ ಟ್ಯಾಕ್ಸಿ ಡ್ರೈವರ್ ಅರೆಸ್ಟ್

    – ನಟಿಯ ಕಾರನ್ನ ಹಿಂದಿಕ್ಕಿ ಮತ್ತೆ ಅಸಭ್ಯ ವರ್ತನೆ

    ಕೋಲ್ಕತ್ತಾ: ಬಂಗಾಲಿ ನಟಿ, ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ ಜೊತೆ ಅಸಭ್ಯವಾಗಿ ವರ್ತಿಸುವ ಮೂಲಕ ಕಿರುಕುಳ ನೀಡಿದ್ದ ಟ್ಯಾಕ್ಸಿ ಚಾಲಕನನ್ನು ಕೋಲ್ಕತಾ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಲಕ್ಷ್ಮಣ್ ಯಾದವ್ (32) ಎಂದು ಗುರುತಿಸಲಾಗಿದೆ. ಸಂಸದೆ ಮಿಮಿ ಚಕ್ರವರ್ತಿ ಜಿಮ್‍ನಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಟ್ಯಾಕ್ಸಿ ಡ್ರೈವರ್ ನನ್ನ ವಾಹನವನ್ನು ಹಿಂದಿಕ್ಕಿಲು ಪ್ರಯತ್ನಿಸುತ್ತಿದ್ದನು. ಅಲ್ಲದೇ ನನ್ನ ಜೊತೆ ಅಸಭ್ಯವಾಗಿ ಮಾತನಾಡಿದ್ದ ಎಂದು ನಟಿ ಆರೋಪಿಸಿದ್ದಾರೆ.

    ಮೊದಲಿಗೆ ಮಿಮಿ ಚಕ್ರವರ್ತಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಆದರೆ ಟ್ಯಾಕ್ಸಿ ಡ್ರೈವರ್ ಮತ್ತೆ ಮತ್ತೆ ನಟಿಯ ಕಾರನ್ನು ಹಿಂದಿಕ್ಕಿ ಅಶ್ಲೀಲವಾಗಿ ಸನ್ನೆ ಮಾಡಿ ಕಿರುಕುಳ ನೀಡಿದ್ದನು. ಅಲ್ಲದೇ ನಟಿಯ ವಾಹನವನ್ನೇ ಹಿಂಬಾಲಿಸಿದ್ದನು. ಹೀಗಾಗಿ ನಟಿ ಆತನ ವಿರುದ್ಧ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    “ಸಿಗ್ನಲ್ ಬಳಿ ನನ್ನ ಕಾರಿನ ಪಕ್ಕದಲ್ಲಿ ಒಂದು ಟ್ಯಾಕ್ಸಿ ನಿಂತಿತ್ತು. ನಾನು ನನ್ನ ಕಾರಿನಲ್ಲಿ ಕುಳಿತಿದ್ದೆ. ಆದರೆ ಟ್ಯಾಕ್ಸಿ ಚಾಲಕ ನನ್ನ ಕಡೆಗೆ ಅಶ್ಲೀಲವಾಗಿ ಸನ್ನೆ ಮಾಡುತ್ತಿದ್ದನು. ಮೊದಲಿಗೆ ನಾನು ಅದನ್ನು ನಿರ್ಲಕ್ಷಿಸಿದೆ. ಆದರೆ ಚಾಲಕ ನನ್ನ ಕಾರನ್ನು ಹಿಂದಿಕ್ಕಿ ಮತ್ತೆ ಅದೇ ರೀತಿ ಸನ್ನೆ ಮಾಡಿದನು. ಒಂದು ವೇಳೆ ನಾನು ಈಗ ಇದನ್ನು ನಿರ್ಲಕ್ಷಿಸಿದರೆ, ಮುಂದಿನ ದಿನಗಳಲ್ಲಿ ಮಹಿಳೆ ಆತನ ಟ್ಯಾಕ್ಸಿಯಲ್ಲಿ ಪ್ರಯಾಣಿಸಿದರೆ ಕಿರುಕುಳ ಎದುರಿಸಬೇಕಾಗುತ್ತದೆ ಎಂದು ನಾನು ಭಾವಿಸಿದೆ. ಅಲ್ಲದೇ ರಾತ್ರಿ ವೇಳೆ ಪ್ರಯಾಣಿಕರು ಆತನ ಟ್ಯಾಕ್ಸಿಯಲ್ಲಿ ಸುರಕ್ಷಿತವಾಗಿರುವುದಿಲ್ಲ” ಎಂದು ನಟಿ ಆಡಿಯೋ ಹೇಳಿಕೆ ಮೂಲಕ ಪೊಲೀಸರಿಗೆ ತಿಳಿಸಿದ್ದಾರೆ.

    ಮಿಮಿ ಚಕ್ರವರ್ತಿ ಗರಿಯಾಹತ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದನು. ಪೊಲೀಸರು ಕೂಡಲೇ ಟ್ಯಾಕ್ಸಿ ಚಾಲಕನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಲಕ್ಷ್ಮಣ್ ಯಾದವ್ ಎಂದು ಗುರುತಿಸಲಾಗಿದ್ದು, ಪೂರ್ವ ಮೆಟ್ರೋಪಾಲಿಟನ್ ಬೈಪಾಸ್ ಬಳಿಯ ಆನಂದಪುರ ಪ್ರದೇಶದಲ್ಲಿ ವಾಸಿಸುತ್ತಿದ್ದಾನೆ ಎಂದು ತಿಳಿದುಬಂದಿದೆ.

    ಬಂಧಿತ ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಇತರ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಂಗಾಲಿ ಚಿತ್ರರಂಗದಲ್ಲಿ ಪ್ರಸಿದ್ಧರಾಗಿರುವ ಮಿಮಿ ಚಕ್ರವರ್ತಿ 2019ರ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ವಿಜಯಿಯಾಗಿದ್ದಾರೆ.

  • ಮದ್ಯ ಸೇವಿಸಿ ಯುವತಿಗೂ ಕುಡಿಸಿದ್ರು – ಅಪ್ರಾಪ್ತ ಸೇರಿ ಮೂವರಿಂದ ಗ್ಯಾಂಗ್‍ರೇಪ್

    ಮದ್ಯ ಸೇವಿಸಿ ಯುವತಿಗೂ ಕುಡಿಸಿದ್ರು – ಅಪ್ರಾಪ್ತ ಸೇರಿ ಮೂವರಿಂದ ಗ್ಯಾಂಗ್‍ರೇಪ್

    – 19ರ ಹುಡುಗಿಯ ಮುಂದೆಯೇ ಎಣ್ಣೆ ಪಾರ್ಟಿ
    – ಕುಡಿದ ನಂತ್ರ ಯುವತಿಯ ಮೇಲೆರಗಿದ ಕಾಮುಕರು

    ಹೈದರಾಬಾದ್: 19 ವರ್ಷದ ಯುವತಿಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅಪ್ರಾಪ್ತ ಹುಡುಗ ಸೇರಿದಂತೆ ಮೂವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ತೆಲಂಗಾಣದ ರಂಗ ರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ರಾಚಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಆದಿಬಟ್ಲಾ ಗ್ರಾಮದಲ್ಲಿ ಕಳೆದ ವಾರ ಈ ಘಟನೆ ನಡೆದಿದೆ. ಈಗಾಗಲೇ ಸಂತ್ರಸ್ತೆ ನೀಡಿದ ದೂರಿನ ಅನ್ವಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ಸೆಪ್ಟೆಂಬರ್ 7 ರಂದು ಸಂತ್ರಸ್ತೆ ತನ್ನ ಸ್ನೇಹಿತರನ್ನು ಭೇಟಿಯಾಗಲು ಹೋಗಿದ್ದಳು. ಸ್ನೇಹಿತರನ್ನು ಭೇಟಿಯಾದ ನಂತರ ವಾಪಸ್ ಮನೆಗೆ ಹಿಂದಿರುಗುತ್ತಿದ್ದಳು. ಬಾಲಾಪುರದಲ್ಲಿ ಸಂತ್ರಸ್ತೆ ಆಟೋ ಹತ್ತಿದ್ದಾಳೆ. ಈ ವೇಳೆ ಇಬ್ಬರು ಆರೋಪಿಗಳು ಸಹ ಅದೇ ಆಟೋವನ್ನು ಹತ್ತಿದ್ದು, ಆಕೆಯ ಜೊತೆ ಅಸಭ್ಯವಾಗಿ ವರ್ತಿಸಲು ಪ್ರಾರಂಭಿಸಿದರು. ಕೊನೆಗೆ ಬಲವಂತವಾಗಿ ಆಕೆಯನ್ನು ಆಟೋದಿಂದ ಕೆಳಗಿಸಿ ಬೈಕಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದರು.

    ಸಂತ್ರಸ್ತೆಯನ್ನು ಅಲ್ಲಿಗೆ ಕರೆದುಕೊಂಡು ಹೋದ ಸ್ವಲ್ಪ ಸಮಯದ ನಂತರ ಅಪ್ರಾಪ್ತ ಹುಡುಗ ಬಂದಿದ್ದಾನೆ. ನಂತರ ಮೂವರು ಕುಳಿತುಕೊಂಡು ಮದ್ಯ ಸೇವಿಸಿದ್ದಾರೆ. ನಂತರ ಸಂತ್ರಸ್ತೆಗೂ ಒತ್ತಾಯ ಮಾಡಿ ಮದ್ಯ ಕುಡಿಸಿದ್ದಾರೆ. ಬಳಿಕ ಸಂತ್ರಸ್ತೆಯ ಮೇಲೆ ಮೂವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಂತ್ರಸ್ತೆ ತಾಯಿಯೊಂದಿಗೆ ರಾಚಕೊಂಡ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಕೂಡಲೇ ಪೊಲೀಸರು ಈ ಕುರಿತು ಕ್ರಮಗೊಂಡು ಆರೋಪಿಗಳ ಬಂಧನಕ್ಕಾಗಿ ಒಂದು ತಂಡವನ್ನು ರಚಿಸಿದ್ದರು. ನಂತರ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಾಪರಾಧಿ ಮೀರ್‌‌‌‌ಪೇಟೆ ಮೂಲದವನಾಗಿದ್ದು, ಉಳಿದ ಇಬ್ಬರು ಬಾಲಾಪುರದವರಾಗಿದ್ದು, ಕಾರ್ಮಿಕರಾಗಿ ಕೆಲಸ ಮಾಡುತ್ತಾರೆ. ಆರೋಪಿಗಳ ವಿರುದ್ಧ ಅಪಹರಣ ಮತ್ತು ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

  • ಹುಟ್ಟುಹಬ್ಬಕ್ಕೆ ವಿಶ್ ಮಾಡೋ ನೆಪದಲ್ಲಿ ಗೆಳೆಯನನ್ನೇ ಕೊಂದಿದ್ದ ಸ್ನೇಹಿತ ಅರೆಸ್ಟ್

    ಹುಟ್ಟುಹಬ್ಬಕ್ಕೆ ವಿಶ್ ಮಾಡೋ ನೆಪದಲ್ಲಿ ಗೆಳೆಯನನ್ನೇ ಕೊಂದಿದ್ದ ಸ್ನೇಹಿತ ಅರೆಸ್ಟ್

    ತುಮಕೂರು: ನಗರದ ಕೋತಿತೋಪಿನಲ್ಲಿ ಹುಟ್ಟುಹಬ್ಬದ ದಿನದಂದೇ ಸ್ನೇಹಿತನನ್ನು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ಕೊಲೆ – ವಿಶ್ ಮಾಡೋ ನೆಪದಲ್ಲಿ ಚಾಕುವಿನಿಂದ ಇರಿದ್ರು

    ಅನುಕುಮಾರ್ ಮೃತ ಯುವಕ. ರಾಜಾ ಹಾಗೂ ಪ್ರತಾಪ್ ಬಂಧಿತ ಆರೋಪಿಗಳು. ಗುರುವಾರ ರಾತ್ರಿ ಸ್ನೇಹಿತ ಅನುಕುಮಾರ್ ಹುಟ್ಟುಹಬ್ಬದ ಪಾರ್ಟಿ ಇತ್ತು. ಎಲ್ಲಾ ಸ್ನೇಹಿತರು ಸೇರಿ ಆಚರಣೆ ಮಾಡುತ್ತಿದ್ದರು. ಈ ವೇಳೆ ಸ್ನೇಹಿತ ರಾಜಾ ವಿಶ್ ಮಾಡಲು ಬಂದು ಕೊಲೆ ಮಾಡಿ ಪರಾರಿಯಾಗಿದ್ದನು.

    ಏನಿದು ಪ್ರಕರಣ?
    ಕಳೆದ ವರ್ಷ ಮಾರಮ್ಮನ ಜಾತ್ರೆ ವೇಳೆಯಲ್ಲಿ ಆರೋಪಿ ರಾಜಾ ಮತ್ತು ಮೃತ ಅನುಕುಮಾರ್ ಜಗಳ ಮಾಡಿಕೊಂಡು ದೂರವಾಗಿದ್ದರು. ಆದರೂ ಗುರುವಾರ (ಸೆ.10) ರಂದು ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸುವ ನೆಪದಲ್ಲಿ ಇನ್ನೊಬ್ಬ ಸ್ನೇಹಿತ ಪ್ರತಾಪನ ಜೊತೆ ರಾಜಾ ಬಂದಿದ್ದನು.

    ಬರ್ತ್ ಡೇ ಪಾರ್ಟಿಯಲ್ಲಿ ಎಲ್ಲರೂ ಕುಡಿದ ಮತ್ತಿನಲ್ಲಿ ಇದ್ದಾಗ ಅನುಕುಮಾರ್ ಜೊತೆ ರಾಜಾ ಜಗಳ ತೆಗೆದಿದ್ದಾನೆ. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೆ ಏರಿದಾಗ ಅನುಕುಮಾರ್ ಎದೆಗೆ ಚಾಕುವಿನಿಂದ ಇರಿದು ರಾಜಾ ಮತ್ತು ಪ್ರತಾಪ್ ಪರಾರಿಯಾಗಿದ್ದರು.

    ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

  • ಸ್ನೇಹಿತನ ಪತ್ನಿಗೆ ಮತ್ತು ಬರೋ ಔಷಧಿ ನೀಡಿ ರೇಪ್ – ಗೆಳೆಯನ ಮಗಳನ್ನೂ ಬಿಡದ ಕಾಮುಕ

    ಸ್ನೇಹಿತನ ಪತ್ನಿಗೆ ಮತ್ತು ಬರೋ ಔಷಧಿ ನೀಡಿ ರೇಪ್ – ಗೆಳೆಯನ ಮಗಳನ್ನೂ ಬಿಡದ ಕಾಮುಕ

    – ಅತ್ಯಾಚಾರದ ವಿಡಿಯೋ ರೆಕಾರ್ಡ್ ಮಾಡ್ಕೊಂಡು ಬ್ಲ್ಯಾಕ್‍ಮೇಲ್

    ಚಂಡೀಗಢ: ವ್ಯಕ್ತಿಯೊಬ್ಬ ತನ್ನ ಸ್ನೇಹಿತನ ಪತ್ನಿ ಮತ್ತು ಮಗಳಿಗೆ ಮತ್ತು ಬರುವ ಔಷಧಿ ನೀಡಿ ಅನೇಕ ತಿಂಗಳುಗಳ ಕಾಲ ಅತ್ಯಾಚಾರ ಎಸಗಿರುವ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ.

    ಸದ್ಯಕ್ಕೆ ಮಹಿಳೆ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ನಿದ್ದೆ ಬರುವ ಔಷಧಿ ಕೊಟ್ಟು ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬ್ಲ್ಯಾಕ್‍ಮೇಲ್ ಮೂಲಕ ಅನೇಕ ತಿಂಗಳು ಕಾಲ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ನನ್ನ ಮಗಳ ಮೇಲೂ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

    ಏನಿದು ಪ್ರಕರಣ?
    ಆರೋಪಿಯನ್ನು ಆಶು ಎಂದು ಗುರುತಿಸಲಾಗಿದೆ. ಈತ ಸಂತ್ರಸ್ತೆಯ ಪತಿಯ ಸ್ನೇಹಿತನಾಗಿದ್ದರಿಂದ ಆಗಾಗ ಮನೆಗೆ ಭೇಟಿ ನೀಡುತ್ತಿದ್ದ. ಮಾರ್ಚ್ 19 ರಂದು ಸಂತ್ರಸ್ತೆ ಅನಾರೋಗ್ಯದಿಂದ ಮಲಗಿದ್ದು, ಆಗ ಆರೋಪಿ ಆಕೆಗೆ ಕುಡಿಯಲು ಜ್ಯೂಸ್ ನೀಡಿದ್ದನು. ಔಷಧಿ ನೀಡುವ ನೆಪದಲ್ಲಿ ಆಶು ಮತ್ತು ಬರುವ ಔಷಧಿ ಮಿಕ್ಸ್ ಮಾಡಿದ್ದನು. ಜ್ಯೂಸ್ ಕುಡಿದ ನಂತರ ಸಂತ್ರಸ್ತೆ ಪ್ರಜ್ಞೆ ತಪ್ಪಿದ್ದು, ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿ ಅತ್ಯಾಚಾರದ ಕೃತ್ಯವನ್ನು ಮೊಬೈಲಿನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ಆ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‍ಮೇಲ್ ಮಾಡಲು ಪ್ರಾರಂಭಿಸಿದ್ದನು. ಕೆಲವು ದಿನಗಳ ನಂತರ ನನ್ನ ಪತಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಈ ಸಮಯದಲ್ಲಿ ಮಗಳು ನಮ್ಮ ತಾಯಿಯ ಜೊತೆ ವಾಸಿಸುತ್ತಿದ್ದನು. ಒಂದು ವಾರದ ನಂತರ ಆರೋಪಿ ನನ್ನ ಪತಿಯ ಆರೋಗ್ಯ ವಿಚಾರಿಸುವ ನೆಪದಲ್ಲಿ ಮನೆಗೆ ಭೇಟಿ ನೀಡಿದ್ದನು ಎಂದು ಸಂತ್ರಸ್ತೆ ಹೇಳಿದ್ದಾರೆ.

    ಈ ವೇಳೆ ಮಗಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಜೂನ್ 28 ರಂದು ಸಂತ್ರಸ್ತೆಯ ಪತಿ ಮೃತಪಟ್ಟಿದ್ದಾರೆ. ಆಗ ಸಂತ್ರಸ್ತೆ ಭಯದಿಂದ ತನ್ನ ತವರ ಮನೆಗೆ ಹೋಗಿ ವಾಸಿಸುತ್ತಿದ್ದರು. ಆದರೆ ಆರೋಪಿ ಪದೇ ಪದೇ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‍ಮೇಲ್ ಮಾಡುತ್ತಿದ್ದನು. ಹೀಗಾಗಿ ಸಂತ್ರಸ್ತೆ ಕೊನೆಗೆ ಪೊಲೀಸರನ್ನ ಸಂಪರ್ಕಿಸಿ ದೂರು ದಾಖಲಿಸಿದ್ದಾರೆ.

    ಎಸ್‍ಎಚ್‍ಒ ಸೆಕ್ಟರ್ 10 ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಈಗಾಗಲೇ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಅವನಿಗೆ ಕ್ರಿಮಿನಲ್ ಹಿನ್ನೆಲೆ ಇದೆ. ಐಪಿಸಿ ಸೆಕ್ಷನ್ ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ಆತನ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಸಂಜಯ್ ಕುಮಾರ್ ತಿಳಿಸಿದ್ದಾರೆ.

  • ಡ್ರಗ್ಸ್ ಪ್ರಕರಣದ 5ನೇ ಆರೋಪಿ, ಚಿನ್ನ ವ್ಯಾಪಾರಿಯ ಪುತ್ರ ಬಂಧನ

    ಡ್ರಗ್ಸ್ ಪ್ರಕರಣದ 5ನೇ ಆರೋಪಿ, ಚಿನ್ನ ವ್ಯಾಪಾರಿಯ ಪುತ್ರ ಬಂಧನ

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದ ಐದನೇ ಆರೋಪಿ ವೈಭವ್ ಜೈನ್‍ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಸಂಬರಗಿಗೆ ಸಿಸಿಬಿ ನೋಟಿಸ್ – ಟೆನ್ಶನ್ ಜಾಸ್ತಿಯಾಗಿ ರಾತ್ರಿ ನಿದ್ದೆ ಮಾಡದ ಸಂಜನಾ

    ಈಗ ಬೆಂಗಳೂರಿನ ವೈಯ್ಯಾಲಿಕಾವಲ್‍ನ ನಿವಾಸದಲ್ಲಿ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತನಗೆ ಕೊರೊನಾ ಬಂದಿದೆ ಹೋಮ್ ಐಸೋಲೇಷನ್‍ನಲ್ಲಿ ಇದ್ದೇನೆ ಎಂದು ಈ ಮೊದಲು ತಿಳಿಸಿದ್ದ. ಹೀಗಾಗಿ ಈತನ ಬಂಧನ ತಡವಾಗಿ ನಡೆದಿದೆ.  ಇದನ್ನೂ ಓದಿ: ನಟಿ ಸಂಜನಾ ಸೇರಿ ಉಳಿದ ಆರೋಪಿಗಳೂ 3 ದಿನ ಸಿಸಿಬಿ ಕಸ್ಟಡಿಗೆ

    ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದಲ್ಲಿ ಆರೋಪಿ ವೈಭವ್ ಜೈನ್ ಬಗ್ಗೆ ಆರೋಪಿ ರವಿಶಂಕರ್ ಮಾಹಿತಿ ನೀಡಿದ್ದನು. ವೈಭವ್ ಜೈನ್ ಪ್ರಕರಣದ ಐದನೇ ಆರೋಪಿಯಾಗಿದ್ದಾನೆ. ಪ್ರತಿಷ್ಠಿತ ಚಿನ್ನದ ವ್ಯಾಪಾರಿಯ ಪುತ್ರನಾಗಿರುವ ಈತ ಕೂಡ ಚಿನ್ನದ ವ್ಯವಹಾರ ನಡೆಸುತ್ತಿದ್ದಾನೆ.

    ವೈಭವ್ ಪಾರ್ಟಿಗೆ ಬಂದವರಿಗೆ ಡ್ರಗ್ಸ್ ಸಪ್ಲೆ ಮಾಡುತ್ತಿದ್ದನಂತೆ. ಆದರೆ ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣ ಸದ್ದು ಮಾಡುತ್ತಿದ್ದಂತೆ ವೈಭವ್ ಕೊರೊನಾ ಪಾಸಿಟಿವ್ ಎಂದು ಹೇಳಿಕೊಂಡು ಹೋಮ್ ಐಸೋಲೇಷನ್‍ನಲ್ಲಿದ್ದನು.

    2018ರಲ್ಲಿ ರವಿಶಂಕರ್ ಹಾಗೂ ರಾಗಿಣಿ ಪ್ರತಿಷ್ಠಿತ ಹೋಟೆಲ್‍ನಲ್ಲಿ ಪಾರ್ಟಿಗೆ ಹೋಗಿದ್ದರು. ಅಲ್ಲಿ ರವಿಶಂಕರ್‌ಗೆ ವೈಭವ್ ಜೈನ್‍ಗೆ ಪರಿಚಯವಾಗಿದ್ದ. ಸ್ನೇಹ-ಸಲುಗೆ ಜಾಸ್ತಿ ಆಗುತ್ತಿದ್ದಂತೆ ವೈಭವ್ ಜೈನ್ ವ್ಯವಹಾರ ರವಿಶಂಕರ್‌ಗೆ ಗೊತ್ತಾಗಿದೆ. ವೈಭವ್ ಜೈನ್ ಸ್ನೇಹಿತರಾದ ಅರುಣ್, ವಿನಯ್, ಪ್ರಶಾಂತ್ ರಾಂಕಾ ಮೂಲಕ ದಂಧೆ ಮಾಡುತ್ತಿದ್ದನು. ಪ್ರತಿಷ್ಠಿತ ಹೋಟೆಲ್‍ಗಳಲ್ಲಿ ಪಾರ್ಟಿ ಆಯೋಜಿಸಿ ಡ್ರಗ್ಸ್ ದಂಧೆ ಮಾಡುತ್ತಿದ್ದನು ಎಂಬ ಮಾಹಿತಿ ತಿಳಿದುಬಂದಿದೆ.

    ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನವಾಗಿರುವ ನಟಿ ಸಂಜನಾ, ರಾಗಿಣಿ, ರವಿಶಂಕರ್, ಲೂಮ್ ಪೆಪ್ಪರ್, ಪ್ರಶಾಂತ್ ರಂಕಾ, ರಾಹುಲ್ ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನ್ಯಾಯಾಲಯ ನೀಡಿದೆ. ಸೋಮವಾರದವರೆಗೂ ನಟಿ ರಾಗಿಣಿ, ಸಂಜನಾ ಸೇರಿದಂತೆ 6 ಮಂದಿ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲೇ ಉಳಿಯಲ್ಲಿದ್ದಾರೆ.

  • ದುಡ್ಡಿನ ಆಮಿಷ ಒಡ್ಡಿ ರೈತರ ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆ

    ದುಡ್ಡಿನ ಆಮಿಷ ಒಡ್ಡಿ ರೈತರ ಜಮೀನಿನಲ್ಲಿ ಅಕ್ರಮ ಗಾಂಜಾ ಬೆಳೆ

    – 5 ಎಕ್ರೆಯಲ್ಲಿ ಬೆಳೆದಿದ್ದ 70 ಕೆಜಿ ಗಾಂಜಾ ವಶ

    ಹಾಸನ: ಜಿಲ್ಲೆಯ ಅಬಕಾರಿ ಡಿಸಿ ಗೋಪಾಕೃಷ್ಣಗೌಡ ನೇತೃತ್ವದ ತಂಡ ದಾಳಿ ಮಾಡಿ ಹಾಸನದಲ್ಲಿ ಸುಮಾರು ಐದು ಎಕರೆ ಜಮೀನಿನಲ್ಲಿ ಬೆಳೆಗಳ ಮಧ್ಯೆ ಯಾರಿಗೂ ತಿಳಿಯದಂತೆ ಬೆಳೆಯಲಾಗಿದ್ದ ಸುಮಾರು 15 ಲಕ್ಷ ಮೌಲ್ಯದ 70 ಕೆಜಿ ಅಕ್ರಮ ಗಾಂಜಾ ಬೆಳೆಯನ್ನು ವಶಪಡಿಸಿಕೊಂಡಿದ್ದಾರೆ.

    ಅರಕಲಗೂಡು ತಾಲೂಕಿನ ಹೊಡೆನೂರು ಗ್ರಾಮದ ಮೂವರು ರೈತರ ಜಮೀನಿನ ಮೇಲೆ ದಾಳಿ ನಡೆಸಿ ಅಕ್ರಮ ಗಾಂಜಾ ಬೆಳೆದಿರೋದನ್ನು ಬಯಲು ಅಧಿಕಾರಿಗಳು ಮಾಡಿದ್ದಾರೆ. ಶುಂಠಿ ಬೆಳೆಯಲು ಕರ್ನಾಟಕಕ್ಕೆ ಬಂದ ಕೆಲವು ಕೇರಳ ಮೂಲದ ಮಂದಿಯೇ ರೈತರಿಗೆ ಗಾಂಜಾ ಬೀಜ ನೀಡಿ ಅವರ ಜಮೀನಿನಲ್ಲಿ ಗಾಂಜಾ ಬೆಳೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

    ಅಷ್ಟೇ ಅಲ್ಲದೆ ತಾವೇ ಬೀಜ ನೀಡಿ ಬೆಳೆಸಿದ ಗಾಂಜವನ್ನು ಕೇರಳ ಮೂಲದವರೇ ಕೊಂಡು ಹಲವೆಡೆಗೆ ಕಳ್ಳಸಾಗಾಣೆ ಮಾಡುತ್ತಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸೋಮೇಶ್, ದೇವರಾಜ್, ಹಾಗೂ ಪ್ರಕಾಶ್‍ನನ್ನು ಬಂಧಿಸಲಾಗಿದೆ. ಇವರು ತಮ್ಮ ಜಮೀನಿನಲ್ಲಿ ಶುಂಠಿ, ಕೋಸು ಹಾಗೂ ಜೋಳದ ಬೆಳೆಗಳ ಮಧ್ಯೆ ಅಲ್ಲಲ್ಲಿ ಗಾಂಜಾ ಗಿಡವನ್ನು ಹುಲುಸಾಗಿ ಬೆಳೆಸಿದ್ದರು.

    ಇದೇ ರೀತಿ ಕೆಲವು ದಿನಗಳ ಹಿಂದೆ ಆಲೂರು ತಾಲೂಕಿನಲ್ಲೂ ಕೂಡ ವ್ಯಕ್ತಿಯೊಬ್ಬ ಜಮೀನಿನಲ್ಲಿ ಗಾಂಜಾ ಬೆಳೆದು ಪೊಲೀಸರ ಅತಿಥಿಯಾಗಿದ್ದ. ಇತ್ತೀಚಿನ ಕೆಲ ಪ್ರಕರಣ ಗಮನಿಸಿದರೆ ರೈತರಿಗೆ ಕೆಲವರು ಹಣದಾಸೆ ತೋರಿಸಿ, ಅವರ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುವಂತೆ ಮಾಡುತ್ತಿರುವ ಅಂಶ ಬೆಳಕಿಗೆ ಬರುತ್ತಿದೆ. ಅಂತಹವರ ಬಗ್ಗೆ ರೈತರು ಎಚ್ಚರಿಕೆಯಿಂದ ಇರುವುದು ಒಳಿತು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

  • ಶ್ರೀಗಂಧದ ಮರ ಕಡಿದು ಕಳ್ಳ ಸಾಗಾಣೆ- ಮೂವರ ಬಂಧನ

    ಶ್ರೀಗಂಧದ ಮರ ಕಡಿದು ಕಳ್ಳ ಸಾಗಾಣೆ- ಮೂವರ ಬಂಧನ

    ಬಳ್ಳಾರಿ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಪ್ರಾದೇಶಿಕ ಅರಣ್ಯ ವಲಯದ ವ್ಯಾಪ್ತಿಗೆ ಒಳಪಡುವ ತುಂಬಿನಕೇರಿ ಕಾಯ್ದಿಟ ಅರಣ್ಯ ಪ್ರದೇಶದ ತುಂಬಿನಕೇರಿ ಸರ್ವೆ ನಂಬರ್ 176ರಲ್ಲಿ ಅಕ್ರಮವಾಗಿ ಅರಣ್ಯ ಪ್ರವೇಶಿಸಿ ಎರಡು ಶ್ರೀಗಂಧದ ಮರಗಳನ್ನ ಕಡಿದು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಮೂವರನ್ನ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

    ಅಂದಾಜು 10 ಕೆ.ಜಿ ತೂಕದ 30 ಶ್ರೀಗಂಧ ತುಂಡುಗಳನ್ನ ಹಾಗೂ ಮರ ಕತ್ತರಿಸಲು ಬಳಸಲಾದ ಕೊಡಲಿ, ಬಾಯಿಗುದ್ದಲಿ, ಕಂದೀಲು ಹಾಗೂ 2 ಮೊಬೈಲ್ ಗಳನ್ನ ಅರಣ್ಯ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ನೆರೆಯ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪಿನ ನಿವಾಸಿಯಾಗಿರುವ ಶಬ್ಬೀರ್ ಅಹಮ್ಮದ್, ಅಮಾ ನುಲ್ಲಾ, ನೂರ್ ಜಹಾನ್ ಎಂಬವರನ್ನು ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳ ತಂಡವು ಬಳ್ಳಾರಿಯ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿದ್ದರಾಮಪ್ಪ ಎಂ. ಚಳಕಾಪುರೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಡಿ. ಮೋಹನ್ ಇವರ ಮಾರ್ಗದರ್ಶನದಲ್ಲಿ ಹಡಗಲಿ ವಲಯ ಅರಣ್ಯ ಅಧಿಕಾರಿ ಕಿರಣ್ ಕುಮಾರ್ ಕಲ್ಲಮ್ಮನವರ, ಉಪ ವಲಯ ಅರಣ್ಯ ಅಧಿಕಾರಿ ಡಿ.ವೈ ಸಾಗರ, ಅರಣ್ಯ ರಕ್ಷಕ ದುಷ್ಯಂತಗೌಡ, ಅರಣ್ಯ ವೀಕ್ಷಕ ಚಂದ್ರನಾಯ್ಕ, ಸಂತೋಷ್ ಹಾವನೂರು ಈ ದಾಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

  • ತಡರಾತ್ರಿ ಆಶ್ರಮಕ್ಕೆ ನುಗ್ಗಿದ ನಾಲ್ವರಿಂದ ಸಾಧ್ವಿ ಮೇಲೆ ಗ್ಯಾಂಗ್‍ರೇಪ್

    ತಡರಾತ್ರಿ ಆಶ್ರಮಕ್ಕೆ ನುಗ್ಗಿದ ನಾಲ್ವರಿಂದ ಸಾಧ್ವಿ ಮೇಲೆ ಗ್ಯಾಂಗ್‍ರೇಪ್

    – ಸಾಧುಗಳನ್ನ ರೂಮಿನಲ್ಲಿ ಲಾಕ್ ಮಾಡಿ ಸಾಮೂಹಿಕ ಅತ್ಯಾಚಾರ
    – ತಡೆಯಲು ಬಂದ ಸಾಧುಗೆ ಥಳಿತ

    ರಾಂಚಿ: ಸಾಧ್ವಿ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಜಾರ್ಖಂಡ್‍ನ ಗೊಡ್ಡಾ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಆಶ್ರಮವೊಂದರಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಪೊಲೀಸರು ಮಂಗಳವಾರ ನಾಲ್ವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಿದ್ದಾರೆ.

    ಜಿಲ್ಲೆಯ ಆಶ್ರಮಕ್ಕೆ ಸೋಮವಾರ ತಡರಾತ್ರಿ ನಾಲ್ವರು ಆರೋಪಿಗಳು ಏಕಾಏಕಿ ಬಲವಂತವಾಗಿ ನುಗ್ಗಿದ್ದಾರೆ. ನಂತರ ಆಶ್ರಮದಲ್ಲಿದ್ದ ಸಾಧುಗಳನ್ನು ಒಂದು ರೂಮಿನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದಾರೆ. ಈ ವೇಳೆ ಆಶ್ರಮದಲ್ಲಿದ್ದ 38 ವರ್ಷದ ಸಾಧ್ವಿ ಮೇಲೆ ನಾಲ್ವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ವೇಳೆ ಸಾಧ್ವಿ ಮೇಲಿನ ಅತ್ಯಾಚಾರವನ್ನು ಸಾಧುವೊಬ್ಬರು ತಡೆಯಲು ಬಂದಾಗ ಅವರನ್ನು ಆರೋಪಿಗಳು ಥಳಿಸಿದ್ದಾರೆ. ಸಂತ್ರಸ್ತೆ ಮಂಗಳವಾರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಸಂತ್ರಸ್ತೆ ನೀಡಿದ ದೂರಿನ ಅನ್ವಯ ಪೊಲೀಸರು ಎಫ್‍ಐಆರ್ ದಾಖಲಿಸಿದ್ದು, ಘಟನೆ ನಡೆದ ಸ್ಥಳಕ್ಕೆ ಹೋಗಿ ತನಿಖೆ ನಡೆಸಿದ್ದಾರೆ.

    ಸದ್ಯಕ್ಕೆ ನಾಲ್ವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಿದ್ದು, ನಾಲ್ಕನೇ ಆರೋಪಿ ಪರಾರಿಯಾಗಿದ್ದಾನೆ. ಇದೀಗ ಆತನಿಗೆ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.

  • ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ಆರೋಪಿ ಅಂದರ್

    ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ಆರೋಪಿ ಅಂದರ್

    ಹಾಸನ: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಹಾಸನ ನಗರದ ಪೆನ್ಷನ್ ಮೊಹಲ್ಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಸುತೀಶ್ (24) ಎಂದು ಗುರುತಿಸಲಾಗಿದ್ದು, ಆರೋಪಿಯಿಂದ 180 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಿಂದ 150 ರೂ.ಗೆ ಒಂದು ಪಾಕೆಟ್‍ನಂತೆ ಗಾಂಜಾ ತರಿಸಿಕೊಳ್ಳುತ್ತಿದ್ದ ಈತ 200 ರೂ.ಗೆ ಹಾಸನದಲ್ಲಿ ಮಾರುತ್ತಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ.

    ಹಾಸನ ನಗರದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದೆ ಎಂದು ಆರೋಪಿ ಸತೀಶ್ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾನೆ. ಈ ಸಂಬಂಧ ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ದೂರು ದಾಖಲಾಗಿದೆ.

  • ಕೆಜಿಎಫ್‍ನಲ್ಲಿ 1 ಕೋಟಿ ಮೌಲ್ಯದ ಗಾಂಜಾ ವಶ

    ಕೆಜಿಎಫ್‍ನಲ್ಲಿ 1 ಕೋಟಿ ಮೌಲ್ಯದ ಗಾಂಜಾ ವಶ

    – ರೌಡಿ ತಂಗಂ ಅಣ್ಣ ಜೋಸೆಫ್ ಬಂಧನ

    ಕೋಲಾರ: ಕೆಜಿಎಫ್‍ನ ರಾಬರ್ಟ್ ಸನ್ ಪೇಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು ಒಂದು ಕೋಟಿ ಮೌಲ್ಯದ 185 ಕೆಜಿಯಷ್ಟು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

    ಈ ವೇಳೆ ಓರ್ವನನ್ನು ಬಂಧಿಸಿದ್ದು, ಆರೋಪಿಯನ್ನು ರೌಡಿ ಶೀಟರ್ ತಂಗಂ ಅಣ್ಣ ಜೋಸೆಫ್ ಎಂದು ಗುರುತಿಸಲಾಗಿದೆ. ಈತ ಸುಮಾರು ನಾಲ್ಕು ರಾಜ್ಯಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಕೆಜಿಎಫ್ ಎಸ್‍ಪಿ ಇಲಕ್ಕಿಯಾ ಕರುಣಾಗರನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಓರ್ವ ಆರೋಪಿ ಸೇರಿ ಸುಮಾರು 8 ಮೂಟೆ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

    ಸದ್ಯ ಸ್ಥಳದಲ್ಲಿ ಬೀಡು ಬಿಟ್ಟಿರುವ ಡಿವೈಎಸ್‍ಪಿ ಉಮೇಶ್ ಮತ್ತು ಪೊಲೀಸರು ಗಾಂಜಾ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಾರಿಕುಪ್ಪಂ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಗಿರಿ ಲೈನ್‍ನ ಮನೆಯಲ್ಲಿ ಗಾಂಜಾ ಪತ್ತೆಯಾಗಿದ್ದು, ಎರಡು ಕೆಜಿ ತೂಕದ ಸುಮಾರು 80 ಪ್ಯಾಕೇಟ್‍ಗಳು ಪತ್ತೆಯಾಗಿವೆ. ಈ ಸಂಬಂಧ ಐಜಿ ಸೀಮಂತ್ ಕುಮಾರ್ ಸಿಂಗ್ ಕೆಜಿಎಫ್‍ಗೆ ಇಂದು ಭೇಟಿ ನೀಡಲಿದ್ದಾರೆ.