Tag: Article 370

  • ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

    ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ (79) (Satyapal Malik) ಅವರಿಂದು ನಿಧನರಾಗಿದ್ದಾರೆ.

    ರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಲಿಕ್‌ ದೆಹಲಿಯ (Delhi) ಆರ್‌ಎಂಎಲ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಟ್ರಂಪ್ ಸುಂಕ ಬೆದರಿಕೆ ನಡ್ವೆ ಅಮೆರಿಕಕ್ಕೆ ತಿವಿದ ಇಂಡಿಯನ್ ಆರ್ಮಿ – ಪಾಕ್‌ಗೆ ಶಸ್ತ್ರಾಸ್ತ್ರ ಪೂರೈಕೆ ಬಗ್ಗೆ 1971ರ ಪೇಪರ್ ಕಟಿಂಗ್‌ ಪೋಸ್ಟ್

    ಜೆ&ಕೆ ಮಾತ್ರವಲ್ಲದೇ ಬಿಹಾರದ ರಾಜ್ಯಪಾಲರಾಗಿಯೂ (Governor) ಸೇವೆ ಸಲ್ಲಿಸಿದ್ದ ಮಲಿಕ್‌ ಅವರು, ಕೃಷಿ ಚಳುವಳಿ ಮತ್ತು ಭ್ರಷ್ಟಾಚಾರದ ಬಗ್ಗೆ ಅವರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹೇಳುತ್ತಿದ್ದರು. ಆದ್ರೆ ಅವರಿಗೆ ಮೂತ್ರಪಿಂಡದ ಸಮಸ್ಯೆ ಇತ್ತು. ಹೀಗಾಗಿ ದೆಹಲಿಯ ಆರ್‌ಎಂಎಲ್‌ ಆಸ್ಪತ್ರೆಗೆ (RML Hospital) ದಾಖಲಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ವೀಸಾ ಅವಧಿ ಮೀರಿ ವಾಸ್ತವ್ಯ; ಭಾರತ ಸೇರಿ ವಿದೇಶಿ ಪ್ರಜೆಗಳಿಗೆ ಅಮೆರಿಕ ಗಡೀಪಾರು ಎಚ್ಚರಿಕೆ

    ಸತ್ಯಪಾಲ್‌ ಮಲಿಕ್‌ ಯಾರು?
    ಉತ್ತರ ಪ್ರದೇಶದ (UttarPradesh) ಬಾಗ್‌ಪತ್‌ನವರಾದ ಮಲಿಕ್‌ ಮೊದಲ ಬಾರಿಗೆ ಚೌಧರಿ ಚರಣ್ ಸಿಂಗ್ ಅವರ ಭಾರತೀಯ ಕ್ರಾಂತಿ ದಳದಿಂದ ವಿಧಾನಸಭೆಗೆ ಆಯ್ಕೆಯಾದರು. 1970 ರಲ್ಲಿ ಶಾಸಕರಾಗಿ ರಾಜಕೀಯ ವೃತ್ತಿಜೀವನ ಆರಂಭಿಸಿದರು. ರಾಜಕಾರಣಿಯಾಗಿ ಸುಮಾರು 50 ವರ್ಷ ಜೀವನ ಪೂರೈಸಿದರು. ಈ ಅವಧಿಯಲ್ಲಿ ಮಲಿಕ್‌ ಹಲವು ಪಕ್ಷಗಳನ್ನ ಬದಲಾಯಿಸಿದರು. ಇದನ್ನೂ ಓದಿ: ʻಆಪರೇಷನ್ ಸಿಂಧೂರʼ ಯಶಸ್ಸಿಗೆ ಸನ್ಮಾನ – ʻಜೈ ಶ್ರೀರಾಮ್‌, ಹರಹರ ಮಹದೇವ್ʼ ಘೋಷಣೆ ನಡ್ವೆ ಮೋದಿಗೆ ಗೌರವ

    1980 ರಲ್ಲಿ, ಚರಣ್ ಸಿಂಗ್ ನೇತೃತ್ವದ ಲೋಕ ದಳದಿಂದ ರಾಜ್ಯಸಭೆಗೆ ಆಯ್ಕೆಯಾದರು. 1984 ರಲ್ಲಿ, ಅವರು ಕಾಂಗ್ರೆಸ್ ಸೇರಿದರು. 1986 ರಲ್ಲಿ ಕಾಂಗ್ರೆಸ್‌ನಿಂದ ರಾಜ್ಯಸಭೆಗೆ ಆಯ್ಕೆಯಾದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿಯ ನಂತರ ಅವರ 1 ವರ್ಷದ ರಾಜ್ಯಪಾಲರ ಅಧಿಕಾರಾವಧಿ ಮುಕ್ತಾಯವಾಯಿತು. ಇದನ್ನೂ ಓದಿ: ಕೆಂಪು ಕೋಟೆಗೆ ಪ್ರವೇಶಿಸಲು ಯತ್ನ – ಐವರು ಬಾಂಗ್ಲಾ ಪ್ರಜೆಗಳು ಅರೆಸ್ಟ್‌

  • ಆರ್ಟಿಕಲ್‌-370 ರದ್ದತಿ ಬಳಿಕ ಕಾಶ್ಮೀರ ಸಮೃದ್ಧಿ ಕಂಡಿದೆ – ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್

    ಆರ್ಟಿಕಲ್‌-370 ರದ್ದತಿ ಬಳಿಕ ಕಾಶ್ಮೀರ ಸಮೃದ್ಧಿ ಕಂಡಿದೆ – ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್

    – ಇಂಡೋನೇಷ್ಯಾದಲ್ಲಿ ಪಾಕ್‌ ಮುಖವಾಡ ಬಯಲುಮಾಡಿದ ಭಾರತ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ (Article 370) ರದ್ದತಿಯನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಸಲ್ಮಾನ್‌ ಖುರ್ಷಿದ್‌ (Salman Khurshid) ಸ್ವಾಗತಿಸಿದ್ದಾರೆ.

    ಪಾಕಿಸ್ತಾನ (Pakistan) ಪ್ರಚೋದಿತ ಭಯೋತ್ಪಾದನೆ ಬಗ್ಗೆ ವಾಸ್ತವಾಂಶ ತಿಳಿಸಲು ಭಾರತವು ಜೆಡಿ (U) ಸಂಸದ ಸಂಜಯ್ ಝಾ ನೇತೃತ್ವದ ಸರ್ವಪಕ್ಷ ನಿಯೋಗವನ್ನು ಇಂಡೋನೇಷ್ಯಾಗೆ (Indonesia) ಕಳುಹಿಸಿದೆ. ಇದರ ಭಾಗವಾಗಿರುವ ಖುರ್ಷಿದ್‌ ಮಾತನಾಡುವಾಗ ಆರ್ಟಿಕಲ್‌ 370 ರದ್ದತಿಯನ್ನ ಶ್ಲಾಘಿಸಿದ್ದಾರೆ.

    2019ರ ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ಮೋದಿ ಸರ್ಕಾರ ರದ್ದುಗೊಳಿಸಿದ ನಂತರ ಕಾಶ್ಮೀರ ಸಮೃದ್ಧಿಯನ್ನು ಕಂಡಿದೆ ಅಂತ ಹೇಳಿದ್ದಾರೆ. ಅಲ್ಲದೇ 370ನೇ ವಿಧಿ ರದ್ದತಿಯಿಂದ ಜಮ್ಮು ಮತ್ತು ಕಾಶ್ಮೀರ ಭಾರತದ ಉಳಿದ ಭಾಗಗಳಿಂದ ಪ್ರತ್ಯೇಕವಾದ ಪ್ರದೇಶ ಎಂಬ ಗ್ರಹಿಕೆಯನ್ನೂ ಕೊನೆಗೊಳಿಸಿದೆ ಅಂತ ಮೋದಿ ಸರ್ಕಾರದ ಸಾಧನೆಯನ್ನ ಗುಣಗಾನ ಮಾಡಿದ್ದಾರೆ. ಇದನ್ನೂ ಓದಿ: ಭಾರತದ ಬ್ರಹ್ಮೋಸ್‌ ನಮ್ಮ ಪ್ಲ್ಯಾನ್‌ಗಳನ್ನೆಲ್ಲಾ ತಲೆಕೆಳಗೆ ಮಾಡಿತು – ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ

    ಕಾಶ್ಮೀರವು ದೀರ್ಘಕಾಲದ ವರೆಗೆ ಒಂದು ಪ್ರಮುಖ ಸಮಸ್ಯೆ ಎದುರಿಸುತ್ತಿತ್ತು. ಸಂವಿಧಾನದ 370ನೇ ವಿಧಿಯಿಂದಾಗಿ ಅದು ದೇಶದ ಉಳಿದ ಭಾಗಗಳಿಂದ ಪ್ರತ್ಯೇಕವಾಗಿದೆ ಎಂಬ ಭಾವನೆ ಸೃಷ್ಟಿಸಿತ್ತು. ಆದ್ರೆ 2019ರಲ್ಲಿ ಈ ವಿಧಿಯನ್ನ ರದ್ದುಪಡಿಸಲಾಯಿತು. ಈ ಮೂಲಕ ಪ್ರತ್ಯೇಕ ಎನ್ನುವ ಗ್ರಹಿಕೆಯನ್ನು ದೂರಮಾಡಲಾಗಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿ; ಭಾರತದ ನಿಲುವು ಸ್ಪಷ್ಟಪಡಿಸಿದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

    370ನೇ ವಿಧಿ ರದ್ದತಿ ಬಳಿಕ ಅಲ್ಲಿ ಚುನಾವಣೆಯೂ ನಡೆಯಿತು. ಈಗ ಜನರಿಂದ ಆಯ್ಕೆಯಾದ ಸರ್ಕಾರ ಇದೆ. ಇದನ್ನು ಸಹಿಸದ ಕಿಡಿಗೇಡಿಗಳು ಸಮೃದ್ಧಿಯನ್ನು ಹಾಳುಮಾಡಲು ಬಯಸುತ್ತಿದ್ದಾರೆ ಅಂತ ಪಾಕ್‌ ವಿರುದ್ಧ ಕಿಡಿ ಕಾರಿದ್ದಾರೆ.  ಇದನ್ನೂ ಓದಿ: ಭಯೋತ್ಪಾದನೆ ತೊಡೆದು ಹಾಕಲು ನಾವು ಸಿದ್ಧ: ಪಾಕ್‌ ವಿರುದ್ಧ ಅಮೆರಿಕದಲ್ಲಿ ಗುಡುಗಿದ ಶಶಿ ತರೂರ್‌

  • ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಜ್ಞಾನೋದಯ – ಕ್ಷಮೆಯಾಚಿಸಿದ ಬಂಡಿಸಿದ್ದೇಗೌಡ

    ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಜ್ಞಾನೋದಯ – ಕ್ಷಮೆಯಾಚಿಸಿದ ಬಂಡಿಸಿದ್ದೇಗೌಡ

    ಮಂಡ್ಯ: ಕಾಶ್ಮೀರದಲ್ಲಿನ (Jammu Kashmir) ನರಮೇಧಕ್ಕೆ ಆರ್ಟಿಕಲ್ 370 ತೆಗೆದಿದ್ದೇ ಕಾರಣ ಎಂದು ಹೇಳಿಕೆ ನೀಡಿದ್ದ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesh Bandisidde gowda) ಇದೀಗ ಕ್ಷಮೆಯಾಚಿಸಿದ್ದಾರೆ. ಪಹಲ್ಗಾಮ್ ಉಗ್ರರ ದಾಳಿಯ (Pahalgam Terrorist Attack) ಬಳಿಕ ನೀಡಿದ್ದ ವಿವಾದಾತ್ಮಕ ಹೇಳಿಕೆಯಿಂದಾಗಿ ರಮೇಶ್ ಬಂಡಿಸಿದ್ದೇಗೌಡ ಜನರಿಂದ ಛೀಮಾರಿಗೊಳಗಾಗಿದ್ದರು.

    ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೆಆರ್‌ಎಸ್‌ನಲ್ಲಿ (KRS) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಹಾಗೆ ಮಾತನಾಡಬಾರದಿತ್ತು, ನನ್ನ ಮಾತಿನಿಂದ ಎಲ್ಲರಿಗೂ ನೋವಾಗಿದೆ. ಹೀಗಾಗಿ ನನ್ನ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.ಇದನ್ನೂ ಓದಿ: ಆರ್ಟಿಕಲ್ 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ: ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ 

    ದೇಶದಲ್ಲಿ ಆಯಾ ಸರ್ಕಾರಗಳು ಭದ್ರತೆಯನ್ನು ಹೆಚ್ಚಿಸಬೇಕು. ಸದ್ಯ ಕಾಶ್ಮೀರದಲ್ಲಿ ನರಮೇಧ ಮಾಡಿರುವವರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬೇಕು. ಈ ಘಟನೆಯಲ್ಲಿ ಸಾವನ್ನಪ್ಪಿರುವವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದರು.

    ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಉಗ್ರರ ದಾಳಿಯ ಕುರಿತು ಏ.23 ರಂದು ಮಾತನಾಡಿದ್ದ ಅವರು, ಆರ್ಟಿಕಲ್ 370 ತೆಗೆದಿರುವುದೇ ಪಹಲ್ಗಾಮ್ ಘಟನೆ ಕಾರಣ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆರ್ಟಿಕಲ್ 370 ತೆಗೆಯೋದಕ್ಕೂ ಮೊದಲು ಯೋಚನೆ ಮಾಡಬೇಕಿತ್ತು. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಅತಿಯಾದ ಆತ್ಮವಿಶ್ವಾಸದಿಂದ ಈ ಘಟನೆ ನಡೆದಿದೆ ಎನ್ನುವ ಮೂಲಕ ಘಟನೆಗೆ ಪರೋಕ್ಷವಾಗಿ ಬಿಜೆಪಿ ಕಾರಣ ಎಂದಿದ್ದರು.

    ಆರ್ಟಿಕಲ್ 370 ತೆಗೆಯುವ ಮುನ್ನ ಕಾಶ್ಮೀರದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿತ್ತು. ಅವರ ದುಡುಕಿನ ನಿರ್ಧಾರದಿಂದ ಈ ಘಟನೆ ನಡೆದಿದೆ. ಜನರ ಭಾವನೆ ಅರ್ಥ ಮಾಡಿಕೊಂಡು ಆರ್ಟಿಕಲ್ 370 ತೆಗೆಯಬೇಕಿತ್ತು ಎಂದು ಕಿಡಿಕಾರಿದ್ದರು.ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ: ಅಮಾಯಕರ ಹತ್ಯೆಯಿಂದ ಆಘಾತವಾಗಿದೆ ಎಂದ ಆಮೀರ್ ಖಾನ್

  • ಸ್ವತಃ ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿಬಂದರೂ 370ನೇ ವಿಧಿ ಮರುಸ್ಥಾಪನೆ ಸಾಧ್ಯವಿಲ್ಲ: ಅಮಿತ್‌ ಶಾ

    ಸ್ವತಃ ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿಬಂದರೂ 370ನೇ ವಿಧಿ ಮರುಸ್ಥಾಪನೆ ಸಾಧ್ಯವಿಲ್ಲ: ಅಮಿತ್‌ ಶಾ

    ಮುಂಬೈ: ಸ್ವತಃ ಇಂದಿರಾ ಗಾಂಧಿ (Indira Gandhi) ಅವರೇ ಸ್ವರ್ಗದಿಂದ ಹಿಂತಿರುಗಿ ಬಂದರೂ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ಗುಡುಗಿದರು.

    ಮಹಾರಾಷ್ಟ್ರದ ಚುನಾವಣಾ (Maharashtra Elections) ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿ ಸರ್ಕಾರವು 370ನೇ ವಿಧಿಯನ್ನು (Article 370) ಮರುಸ್ಥಾಪಿಸಲು ನಿರ್ಣಯ ಮಂಡಿಸಿದೆ. ನಾನು ಈಗಲೂ ಹೇಳುತ್ತೇನೆ ಸ್ವತಃ ಇಂದಿರಾ ಗಾಂಧಿ ಅವರೇ ಸ್ವರ್ಗದಿಂದ ಹಿಂತಿರುಗಿ ಬಂದರೂ 370ನೇ ವಿಧಿ ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಮೈಕೆಲ್ ಕುನ್ಹಾ 7,223 ಕೋಟಿ ಅವ್ಯವಹಾರದ ಸತ್ಯಶೋಧನೆ ನಡೆಸಿದ್ದಾರೆ: ಹೆಚ್‌.ಕೆ ಪಾಟೀಲ್

    ಇದೇ ವೇಳೆ ಶ್ರೀನಗರದ ಲಾಲ್ ಚೌಕ್‌ಗೆ ಭೇಟಿ ನೀಡಿದಾಗ ನನಗೆ ಭಯವಾಗಿತ್ತು ಎಂಬ ಮಾಜಿ ಕೇಂದ್ರ ಸಚಿವ ಸುಶೀಲ್‌ಕುಮಾರ್ ಶಿಂಧೆ ಹೇಳಿಕೆಗೆ ಪ್ರತಿಕ್ರಿಯಿಸಿ, ಮನಮೋಹನ್ ಆಡಳಿತದ 10 ವರ್ಷಗಳ ಅವಧಿಯಲ್ಲಿ, ಭಯೋತ್ಪಾದಕರು ಪಾಕಿಸ್ತಾನದಿಂದ ಮುಕ್ತವಾಗಿ ಬಂದು ಇಲ್ಲಿ ಬಾಂಬ್ ಸ್ಫೋಟ ಮಾಡುತ್ತಿದ್ದರು, ಬಾಂಬ್‌ ಸ್ಫೋಟಕ್ಕೂ ಪ್ರಚೋದನೆ ನೀಡುತ್ತಿದ್ದರು. ಶಿಂಧೇ ಜೀ, ಈಗ ನಿಮ್ಮ ಮೊಮ್ಮಕ್ಕಳೊಂದಿಗೆ ಈಗ ಕಾಶ್ಮೀರಕ್ಕೆ ಬೇಕಾದ್ರೂ ಹೋಗಿ, ನಿಮಗೆ ಏನೂ ಆಗುವುದಿಲ್ಲ ಎಂದು ಹೇಳಿದರು.

    ಇತ್ತೀಚೆಗೆ ಮುಂಬೈನಲ್ಲಿ ನಡೆದ ರ‍್ಯಾಲಿಯಲ್ಲೂ ಇದೇ ರೀತಿಯ ಹೇಳಿಕೆಗಳನ್ನು ಸಚಿವರು ನೀಡಿದ್ದರು. ರಾಹುಲ್ ಗಾಂಧಿಯವರ 4ನೇ ತಲೆಮಾರಿನವರು ಬಂದರೂ ಸಹ ಕಾಶ್ಮೀರದಲ್ಲಿ 370ನೇ ವಿಧಿ ಮರುಸ್ಥಾಪನೆ ಸಾಧ್ಯವಿಲ್ಲ ಎಂದು ಗುಡುಗಿದ್ದರು. ಇದನ್ನೂ ಓದಿ:  ರಾಜ್ಯದ ಜನತೆಗೆ ಮುಜರಾಯಿ ಇಲಾಖೆ ಗುಡ್‌ನ್ಯೂಸ್ – ವೈಷ್ಣೋದೇವಿಗೆ ತೆರಳುವ ಭಕ್ತರಿಗೆ 5,000 ಸಹಾಯಧನ

  • ಈ ಮೋದಿ ಇರೋವರೆಗೂ 370ನೇ ವಿಧಿ ಮರುಸ್ಥಾಪಿಸಲು ಸಾಧ್ಯವಿಲ್ಲ: ಗುಡುಗಿದ ಪ್ರಧಾನಿ

    ಈ ಮೋದಿ ಇರೋವರೆಗೂ 370ನೇ ವಿಧಿ ಮರುಸ್ಥಾಪಿಸಲು ಸಾಧ್ಯವಿಲ್ಲ: ಗುಡುಗಿದ ಪ್ರಧಾನಿ

    ಮುಂಬೈ (ನಾಸಿಕ್‌): ಈ ಮೋದಿ ಇದೋವರೆಗೂ ಈ ದೇಶದಲ್ಲಿ ಕಾಂಗ್ರೆಸ್‌ ಯಾವುದೇ ಪಿತೂರಿ ಮಾಡಲು ಸಾಧ್ಯವಿಲ್ಲ. ಅಂಬೇಡ್ಕರ್‌ ಸಂವಿಧಾನ ಮಾತ್ರ ಈ ದೇಶದಲ್ಲಿ ನಡೆಯುತ್ತದೆ. ಯಾವುದೇ ಶಕ್ತಿಯು 370ನೇ ವಿಧಿಯನ್ನು ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.

    ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆ ನಾಸಿಕ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರುಸ್ಥಾಪಿಸುವ ರಾಜ್ಯ ಸರ್ಕಾರದ ನಿರ್ಣಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷದ ಪಿತೂರಿಗಳ ಬಗ್ಗೆ ಜನರು ಎಚ್ಚರಿಕೆಯಿಂದಿರಬೇಕು. ಇಲ್ಲದಿದ್ದರೆ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: Articles 370 Row | ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಮೂರನೇ ದಿನ ಮಾರಾಮಾರಿ

    ಕಾಂಗ್ರೆಸ್‌ ಪಕ್ಷವು ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದೆ. ವಿಧಾನಸಭೆಯಲ್ಲಿ 370ನೇ ವಿಧಿಯನ್ನು ಮರುಸ್ಥಾಪಿಸುವ ನಿರ್ಣಯವನ್ನು ಈಗಾಗಲೇ ಅಂಗೀಕರಿಸಲಾಗಿದೆ. ಮಹರಾಷ್ಟ್ರದ ಜನತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ನಡೆಸುತ್ತಿರುವ ಪಿತೂರಿಗಳನ್ನು ಅರ್ಥಮಾಡಿಕೊಳ್ಳಬೇಕು. 370ನೇ ವಿಧಿಯ ಮೇಲಿನ ನಿರ್ಣಯವನ್ನು ಈ ದೇಶ ಒಪ್ಪಿಕೊಳ್ಳುವುದಿಲ್ಲ. ಮೋದಿ ಇದುವವರೆಗೂ ಕಾಶ್ಮೀರದಲ್ಲಿ ಕಾಂಗ್ರೆಸ್‌ ಯಾವುದೇ ಪಿತೂರಿ ಮಾಡಲು ಸಾಧ್ಯವಾಗುವುದಿಲ್ಲ. ಅಂಬೇಡ್ಕರ್‌ ಅವರ ಸಂವಿಧಾನ ಮಾತ್ರ ಈ ದೇಶದಲ್ಲಿ ನಡೆಯುತ್ತದೆ. ಯಾವುದೇ ಶಕ್ತಿಯು 370ನೇ ವಿಧಿ ಮರಳಿ ತರಲು ಸಾಧ್ಯವಿಲ್ಲ ಎಂದು ಗುಡುಗಿದರು.

    ರಾಹುಲ್‌ ಗಾಂಧಿಗೆ ಮೋದಿ ಸವಾಲ್‌:
    ವೀರ ಸಾವರ್ಕರ್‌ರನ್ನ ಹಾಡಿ ಹೊಗಳಿದರು. ಇದೇ ವೇಳೆ ಸಾವರ್ಕರ್‌, ಬಾಳಾಸಾಹೇಬ್‌ ಠಾಕ್ರೆ ಅವರನ್ನ ಹೊಗಳುವಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ಸವಾಲ್‌ ಹಾಕಿದ್ದಾರೆ. ಇದನ್ನೂ ಓದಿ: ಕರ್ನಾಟಕವನ್ನ ಲೂಟಿ ಹೊಡೀತಿದ್ದಾರೆ.. ರಕ್ಷಣೆ ಮಾಡಿ – ನಿರ್ಮಲಾ ಸೀತಾರಾಮನ್ ಎದುರು ಹೈಡ್ರಾಮಾ

    ಕಾಂಗ್ರೆಸ್‌ನವರು ಮೊದಲಿನಿಂದಲೂ ಸಾವರ್ಕರ್‌ ಅವರನ್ನ ನಿಂದಿಸುತ್ತಿದ್ದಾರೆ. ಆದ್ರೆ ಎಂವಿಎ ಈ ಚುನಾವಣೆಯಲ್ಲಿ ಗೆಲ್ಲಬೇಕಾದ್ರೆ ಸಾವರ್ಕರ್‌ ನಿಂದಿಸೋದನ್ನ ನಿಲ್ಲಿಸುವಂತೆ ಕಾಂಗ್ರೆಸ್‌ನ ʻಯುವರಾಜʼನಿಗೆ ಹೇಳಿದೆ. ಆದ್ರೆ ಕಾಂಗ್ರೆಸ್‌ ಎಂದಿಗೂ ಸಾವರ್ಕರ್‌ ಹಾಗೂ ಶಿವಸೇನೆ ಸಂಸ್ಥಾಪಕರನ್ನು ಹೊಗಳುವುದಿಲ್ಲ. ಅವರಿಗೆ ನೈತಿಕತೆಯಿದ್ದರೆ ಸಾವರ್ಕರ್‌ ಅವರ ತ್ಯಾಗ ಸಮರ್ಪಣೆಯನ್ನು ಪ್ರಸಂಶಿಸುವಂತೆ ಸವಾಲು ಹಾಕುತ್ತೇನೆ ಎಂದಿದ್ದಾರೆ.

    ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸಾವರ್ಕರ್ ಅವರು ಕ್ರಾಂತಿಕಾರಿಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಫೂರ್ತಿ ತುಂಬಿದವರು. ಆದ್ರೆ ಕಾಂಗ್ರೆಸ್‌ ಅವರ ತ್ಯಾಗವನ್ನ ಕಡೆಗಣಿಸುತ್ತಿದೆ. ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಅವರ ಪಾತ್ರವನ್ನು ಟೀಕಿಸುತ್ತಿದೆ. ತಮ್ಮ ಹೆಸರು ಗಾಂಧಿ, ಸಾವರ್ಕರ್ ಅಲ್ಲ. ಹಾಗಾಗಿ ಯಾರ ಬಳಿಯೂ ʻಯುವರಾಜʼ ಕ್ಷಮೆ ಕೇಳುವುದಿಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಇದನ್ನೂ ಓದಿ: ಜಮಾತ್-ಎ-ಇಸ್ಲಾಮಿ ಬೆಂಬಲದೊಂದಿಗೆ ಪ್ರಿಯಾಂಕಾ ವಯನಾಡಿನಲ್ಲಿ ಸ್ಪರ್ಧೆ – ಪಿಣರಾಯಿ ವಿಜಯನ್‌

    ಜಾತಿಗಳ ನಡುವೆ ಸಂಘರ್ಷ ತಂದಿದ್ದು ಕಾಂಗ್ರೆಸ್:
    ಮುಂದುವರಿದು, ಮಹಾಯುತಿ ಒಕ್ಕೂಟದ ಸರ್ಕಾರ ರಾಜ್ಯದಲ್ಲಿ ಉತ್ತಮ ಆಡಳಿತವನ್ನು ನೀಡಲಿದೆ. ಮಹಾ ವಿಕಾಸ್ ಆಘಾಡಿಯ ಡ್ರೈವರ್ ಯಾರು ಎನ್ನುವುದು ಆ ಒಕ್ಕೂಟದ ನಾಯಕರಿಗೇ ಸ್ಪಷ್ಟತೆಯಿಲ್ಲ. ಹೀಗಿದ್ದಾಗ, ಅವರಿಗೆ ಅಧಿಕಾರ ಕೊಟ್ಟರೆ ಸುಭದ್ರ ಸರ್ಕಾರವನ್ನು ನೀಡಬಲ್ಲರೇ? ಜಾತಿಜಾತಿಗಳ ನಡುವೆ ಸಂಘರ್ಷವನ್ನು ಕಾಂಗ್ರೆಸ್ ತಂದಿತು. ಇದರಿಂದ ದೇಶ ಇಬ್ಬಾಗವಾಯಿತು. ಈಗ ಪರಿಶಿಷ್ಟ ಜಾತಿ, ಪಂಗಡ ಮತ್ತುಇತರ ಹಿಂದುಳಿದ ವರ್ಗಗಳ ನಡುವೆ ತಂದಿಡುವ ಕೆಲಸವನ್ನು ಮಾಡುತ್ತಿದ್ದಾರೆ. ಇದು, ಸಾಮಾನ್ಯವಾಗಿ ಕಾಂಗ್ರೆಸ್ ಅನುಸರಿಸುತ್ತಿರುವ ನೀತಿ ಎಂದು ಕಿಡಿ ಕಾರಿದ್ದಾರೆ.

    288 ಕ್ಷೇತ್ರಗಳ ವಿಧಾನಸಭೆಗೆ ನವೆಂಬರ್ 20ರಂದು ಚುನಾವಣೆ ನಡೆಯಲಿದ್ದು, ನ.23ಕ್ಕೆ ಫಲಿತಾಂಶ ಹೊರಬೀಳಲಿದೆ.

  • ವಿಶೇಷ ಸ್ಥಾನಮಾನ ರದ್ದು ಬಳಿಕ ಜಮ್ಮು-ಕಾಶ್ಮೀರದಲ್ಲಿ ‘ಇಂಡಿಯಾ’ ಒಕ್ಕೂಟ ಮುನ್ನಡೆ

    ವಿಶೇಷ ಸ್ಥಾನಮಾನ ರದ್ದು ಬಳಿಕ ಜಮ್ಮು-ಕಾಶ್ಮೀರದಲ್ಲಿ ‘ಇಂಡಿಯಾ’ ಒಕ್ಕೂಟ ಮುನ್ನಡೆ

    ಶ್ರೀನಗರ: ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ನಡೆದ ಮೊದಲ ಲೋಕಸಭೆ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿದೆ.

    ಐಎನ್‌ಡಿಐಎ ಒಕ್ಕೂಟ (INDIA Bloc) ಜಮ್ಮು ಮತ್ತು ಕಾಶ್ಮೀರದಲ್ಲಿ 5 ರ ಪೈಕಿ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಎನ್‌ಡಿಎಗೆ (NDA) 1 ಸ್ಥಾನ ಸಿಕ್ಕಿದೆ ಎಂದು ಟ್ರೆಂಡ್‌ಗಳು ಹೇಳುತ್ತಿವೆ. ಇದನ್ನೂ ಓದಿ: ಲೋಕಸಭಾ ಚುನಾವಣಾ ಫಲಿತಾಂಶ ನೋಡಲು ಪ್ರಜ್ವಲ್ ರೇವಣ್ಣಗೆ ಅವಕಾಶ

    ಕಾಶ್ಮೀರದ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪೈಕಿ ಒಮರ್ ಅಬ್ದುಲ್ಲಾ ಮುನ್ನಡೆಯಲ್ಲಿದ್ದಾರೆ. ಆದರೆ ಮೆಹಬೂಬಾ ಮುಫ್ತಿ ಅವರು 60,000 ಮತಗಳ ಹಿನ್ನಡೆ ಅನುಭವಿಸಿದ್ದಾರೆ.

    ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಲ್ಲಿ ನ್ಯಾಶನಲ್ ಕಾನ್ಫರೆನ್ಸ್ (NC) ಒಮರ್ ಅಬ್ದುಲ್ಲಾ ಅವರು ತಮ್ಮ ಪ್ರತಿಸ್ಪರ್ಧಿ ಜೆ & ಕೆ ಪೀಪಲ್ಸ್ ಕಾನ್ಫರೆನ್ಸ್ (JKPC) ನ ಸಜಾದ್ ಗನಿ ಲೋನ್ ಅವರಿಗಿಂತ ಮುಂದಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯನ್ನು ಶೀಘ್ರದಲ್ಲಿಯೇ ನಡೆಸುವುದಾಗಿ ಚುನಾವಣಾ ಆಯೋಗ ಸೋಮವಾರ ಹೇಳಿತ್ತು. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮತದಾನದ ಪ್ರಮಾಣದಿಂದ ಚುನಾವಣಾ ಆಯೋಗವು ಉತ್ಸುಕವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಹೇಳಿದ್ದಾರೆ. ಇದು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಭಾಗವಹಿಸಲು ಜನರ ಉತ್ಸುಕತೆ ತೋರಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: NDA vs I.N.D.I.A ನೆಕ್‌ ಟು ನೆಕ್‌ ಫೈಟ್‌ – ಎನ್‌ಡಿಎ 295 ಕ್ಷೇತ್ರಗಳಲ್ಲಿ ಮುನ್ನಡೆ

  • ಆರ್ಟಿಕಲ್ 370 ರದ್ದು; ಸರ್ಕಾರದ ಪರ ಸುಪ್ರೀಂ ಆದೇಶ

    ಆರ್ಟಿಕಲ್ 370 ರದ್ದು; ಸರ್ಕಾರದ ಪರ ಸುಪ್ರೀಂ ಆದೇಶ

    – ಕೇಂದ್ರದ ಆದೇಶ ಮರುಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿನ ಆರ್ಟಿಕಲ್ 370 (Article 370) ರದ್ದು ಮಾಡಿದ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಈ ಮೂಲಕ ಕೇಂದ್ರ ಸರ್ಕಾರದ (Union Government of India) ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.

    ಸುಪ್ರೀಂ ಕೋರ್ಟ್‌ನ (Supreme Court) ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು ತನ್ನ ಚೇಂಬರ್‌ನಲ್ಲಿ ವಿಚಾರಣೆ ನಡೆಸಿದ ಬಳಿಕ ಅರ್ಜಿಯನ್ನು ವಜಾಗೊಳಿಸಿದೆ.

    ಮರುಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ದಾಖಲೆಯಲ್ಲಿ ಯಾವುದೇ ದೋಷ ಕಂಡುಬರದ ಹಿನ್ನೆಲೆ ಸುಪ್ರೀಂ ಕೋರ್ಟ್ ನಿಯಮಗಳು 2013ರ ಆದೇಶ XLVII ನಿಯಮ 1ರ ಅಡಿಯಲ್ಲಿ ಪರಿಶೀಲನೆಗೆ ಅಗತ್ಯವಿಲ್ಲ ಎಂದು ಹೇಳಿ, ಅರ್ಜಿಗಳನ್ನು ವಜಾಗೊಳಿಸಿದೆ. ಇದನ್ನೂ ಓದಿ: ಡಿವೈಎಸ್‌ಪಿ ಬ್ಯಾಂಕ್ ಖಾತೆಗೆ ಕನ್ನ – 15 ಲಕ್ಷಕ್ಕೂ ಅಧಿಕ ಹಣ ಎಗರಿಸಿದ ಸೈಬರ್ ಕಳ್ಳರು!

    ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅಂತಿಮವಾಗಿ ಈ ಪ್ರದೇಶಕ್ಕೆ ರಾಜ್ಯತ್ವವನ್ನು ಪುನಃ ಸ್ಥಾಪಿಸಲಾಗುವುದು ಎಂದು ನೀಡಿದ ಭರವಸೆಯನ್ನು ದಾಖಲಿಸಿದ ಸುಪ್ರೀಂ ಕೋರ್ಟ್ ಕಳೆದ ಡಿಸೆಂಬರ್ ನಲ್ಲಿ ಆರ್ಟಿಕಲ್ 370 ಅನ್ನು ರದ್ದು ಮಾಡುವ ಸರ್ಕಾರದ ನಿರ್ಧಾರ ಸರಿಯಾಗಿದೆ ಎಂದು ಆದೇಶ ನೀಡಿತ್ತು.

    ಈ ಆದೇಶವನ್ನು ಪ್ರಶ್ನಿಸಿ ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಇದನ್ನೂ ಓದಿ: ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್‌ ಬಾಯ್‌ – ಮುಂದಾಗಿದ್ದೇನು ಗೊತ್ತೇ?

  • ಪಿಒಕೆ ಭಾರತದ ಭಾಗ, ಮರಳಿ ಪಡೆದೇ ಪಡೆಯುತ್ತೇವೆ – ಬಂಗಾಳದಲ್ಲಿ ಅಮಿತ್ ಶಾ ಗುಡುಗು

    ಪಿಒಕೆ ಭಾರತದ ಭಾಗ, ಮರಳಿ ಪಡೆದೇ ಪಡೆಯುತ್ತೇವೆ – ಬಂಗಾಳದಲ್ಲಿ ಅಮಿತ್ ಶಾ ಗುಡುಗು

    ಕೊಲ್ಕತ್ತಾ: 2019ರಲ್ಲಿ ಆರ್ಟಿಕಲ್ 370 (Article 370) ರದ್ದುಗೊಳಿಸಿದ ನಂತರ ಒಂದು ಕಾಲದಲ್ಲಿ ತೊಂದರೆಗೆ ಒಳಗಾಗಿದ್ದ ಕಾಶ್ಮೀರದಲ್ಲಿ ಈಗ ಶಾಂತಿ ಮರಳಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (POK) ಆಜಾದಿ ಘೋಷಣೆಗಳೊಂದಿಗೆ ಪ್ರತಿಭಟನೆಗಳು ಪ್ರತಿಧ್ವನಿಸುತ್ತಿವೆ. ಪಿಒಕೆ ಭಾರತದ ಭಾಗವಾಗಿದ್ದು ಅದನ್ನು ಮರಳಿ ಪಡೆಯುತ್ತೇವೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.

    ಪಶ್ಚಿಮ ಬಂಗಾಳದ ಸೆರಾಂಪೋರ್‌ನಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಿಒಕೆ ಸ್ವಾಧೀನಪಡಿಸಿಕೊಳ್ಳುವ ಬೇಡಿಕೆಯನ್ನು ಬೆಂಬಲಿಸದ ಕಾಂಗ್ರೆಸ್ ನಾಯಕರನ್ನು (Congress Leaders) ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಘರ್ಜಿಸುವ ಹುಲಿ ಸಂರಕ್ಷಣೆಗೆ ಬೇಕಿದೆ ಬಲ; ಸಹ್ಯಾದ್ರಿ-ಕೊಂಕಣ ಕಾರಿಡಾರ್‌ ಪ್ಲ್ಯಾನ್‌ ಹೇಗಿದೆ ನೋಡಿ..

    ಮಣಿಶಂಕರ್ ಅಯ್ಯರ್ ಅವರಂತಹ ಕಾಂಗ್ರೆಸ್ ನಾಯಕರು ಅವರ ಬಳಿ ಅಣುಬಾಂಬ್ ಇರುವುದರಿಂದ ನಾವು ಇದನ್ನು ಮಾಡಬಾರದು ಎಂದು ಹೇಳುತ್ತಾರೆ. ಆದ್ರೆ ನಾನು ಹೇಳುತ್ತೇನೆ ಈ ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಭಾಗವಾಗಿದೆ ನಾವು ಅದನ್ನು ತೆಗೆದುಕೊಳ್ಳುತ್ತೇವೆ ಎಂದು ಗುಡುಗಿದ್ದಾರೆ.

    ಪ್ರಸ್ತುತ ಲೋಕಸಭೆ ಚುನಾವಣೆಯು (Lok Sabha Elections) ಭಾರತದ ಮೈತ್ರಿಕೂಟದ ಭ್ರಷ್ಟ ನಾಯಕರು ಮತ್ತು ಪ್ರಾಮಾಣಿಕ ರಾಜಕಾರಣಿ ನರೇಂದ್ರ ಮೋದಿ ಅವರ ನಡುವಿನ ಆಯ್ಕೆಯಾಗಿದೆ. ಅವರು ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿದ್ದರೂ ಸಹ ತಮ್ಮ ವಿರುದ್ಧ ಒಂದು ಪೈಸೆಯ ಭ್ರಷ್ಟಚಾರದ ಆರೋಪವನ್ನು ಹೊಂದಿಲ್ಲ. ಆದ್ದರಿಂದ ಬಂಗಾಳವು (West Bengal) ನುಸುಳುಕೋರರು ಬೇಕೇ ಅಥವಾ ನಿರಾಶ್ರಿತರಿಗೆ ಸಿಎಎ ಬೇಕೇ? ಎಂಬುದನ್ನು ನಿರ್ಧರಿಸಬೇಕು. ಬಂಗಾಳವು ಜಿಹಾದ್‌ಗೆ ಮತ ಹಾಕಬೇಕೇ ಅಥವಾ ವಿಕಾಸ್‌ಗೆ ಮತ ಹಾಕಬೇಕೆ? ಎಂದು ನಿರ್ಧರಿಸಬೇಕು ಎಂದು ಕರೆ ನೀಡಿದ್ದಾರೆ.

    ಇದೇ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಿಎಎಯನ್ನು ವಿರೋಧಿಸಿದ್ದಕ್ಕಾಗಿ ಮತ್ತು ಅವರ ಮತ ಬ್ಯಾಂಕ್ ಅನ್ನು ಸಮಾಧಾನಪಡಿಸಲು ಒಳನುಸುಳುಕೋರರನ್ನು ಬೆಂಬಲಿಸಲು ರ‍್ಯಾಲಿಗಳನ್ನು ನಡೆಸುತ್ತಿದ್ದಾರೆ ಎಂದು ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕೇಸ್‌ ದಾಖಲಾಗುವ ಮೊದಲೇ A2 ಆರೋಪಿಯನ್ನು ಬಂಧಿಸಿದ್ದು ಅನುಮಾನಾಸ್ಪದ – ರೇವಣ್ಣ ಜಾಮೀನು ಆದೇಶದಲ್ಲಿ ಏನಿದೆ?

  • ಒಟಿಟಿಯಲ್ಲೂ ‘ಆರ್ಟಿಕಲ್ 370’ ಚಿತ್ರಕ್ಕೆ ಸಖತ್ ರೆಸ್ಪಾನ್ಸ್: ಖುಷಿ ಹಂಚಿಕೊಂಡ ಯಾಮಿನಿ

    ಒಟಿಟಿಯಲ್ಲೂ ‘ಆರ್ಟಿಕಲ್ 370’ ಚಿತ್ರಕ್ಕೆ ಸಖತ್ ರೆಸ್ಪಾನ್ಸ್: ಖುಷಿ ಹಂಚಿಕೊಂಡ ಯಾಮಿನಿ

    ಬಾಕ್ಸ್ ಆಫೀಸಿನಲ್ಲಿ ಸಖತ್ ಕಮಾಯಿ ಮಾಡಿರುವ ಬಾಲಿವುಡ್ ನ ಆರ್ಟಿಕಲ್ 370 ಚಿತ್ರವು ಏಪ್ರಿಲ್ 19ರಿಂದ ಒಟಿಟಿಯಲ್ಲೂ (Ott) ಸ್ಟ್ರೀಮಿಂಗ್ ಆಗುತ್ತಿದೆ. ಚುನಾವಣೆಯನ್ನು ಮುಂದಿಟ್ಟುಕೊಂಡು ಈ ಚಿತ್ರವನ್ನು ಆತುರಾತುರವಾಗಿ ತರುತ್ತಿದ್ದಾರೆ ಎನ್ನುವ ಆರೋಪದ ನಡುವೆಯೂ ಚಿತ್ರಕ್ಕೆ ಒಟಿಟಿಯಲ್ಲೂ ಸಖತ್ ರೆಸ್ಪಾನ್ಸ್ ಬಂದಿದೆ. ಹಾಗಾಗಿ ನಟಿ ಯಾಮಿನಿ ಸಂಭ್ರಮವನ್ನು ವ್ಯಕ್ತ ಪಡಿಸಿದ್ದಾರೆ.

    ಈ ಸಿನಿಮಾವನ್ನು ಮೆಚ್ಚಿಕೊಳ್ಳದವರೇ ಇಲ್ಲ. ಈ ಹಿಂದೆ ರಕ್ಷಣಾ ಸಚಿವ ರಾಜನಾಥ್ ಸಿಂಗ್(Rajnath Singh)  ತಮ್ಮ ಕುಟುಂಬದೊಂದಿಗೆ ದೆಹಲಿಯಲ್ಲಿ ಆರ್ಟಿಕಲ್ 370 (Article 370) ಸಿನಿಮಾ ನೋಡಿದ್ದರು. ಈ ಕುರಿತಂತೆ ಅವರು ಟ್ವೀಟ್ ಮಾಡಿದ್ದರು. ಈ ಸಿನಿಮಾ ಕುರಿತಂತೆ ಅನೇಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿದ್ದರ ಬಗ್ಗೆ ಮನಮುಟ್ಟುವಂತೆ ಸಿನಿಮಾದಲ್ಲಿ ಹೇಳಿದ್ದಾರೆ. ಇದು ನೈಜ ಘಟನೆಗಳ ಪ್ರೇರಣೆಯಿಂದ ಆಗಿರುವ ಸಿನಿಮಾ’ ಎಂದು ಬರೆದುಕೊಂಡಿದ್ದಾರೆ. ಈ ಸಿನಿಮಾ ನೋಡುವಾಗ ಭಾವುಕರಾದ ಸಂಗತಿಯನ್ನೂ ಅವರು ಬಿಚ್ಚಿಟ್ಟಿದ್ದರು.

    ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಕೂಡ ಆರ್ಟಿಕಲ್ 370 ಚಿತ್ರದ ಬಗ್ಗೆ ತಮ್ಮ ಭಾಷಣದಲ್ಲಿ ಉಲ್ಲೇಖ ಮಾಡಿದ್ದರು. ಕಾಶ್ಮೀರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ, ‘ಆರ್ಟಿಕಲ್ 370 ಸಿನಿಮಾ ಜಮ್ಮು ಕಾಶ್ಮೀರದ ವಿಶೇಷ ಅಧಿಕಾರವನ್ನು ಯಾಕೆ ತಗೆಯಲಾಯಿತು ಎನ್ನುವುದನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದು ಹೇಳಿದ್ದರು.

    ಮೋದಿಯ ಈ ಭಾಷಣವನ್ನು ಕೇಳಿರುವ ಆರ್ಟಿಕಲ್ 370 ಸಿನಿಮಾದ ನಾಯಕಿ ಯಾಮಿನಿ ಗೌತಮ್ (Yamini Gautam), ಮೋದಿ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದರು. ಈ ನೈಜ ಕಥೆಯನ್ನು ನಿಮಗೆ ಮತ್ತು ಎಲ್ಲರಿಗೂ ಒಪ್ಪುವಂತೆ ಸಿನಿಮಾ ಮಾಡಿದ್ದೇವೆ ಎನ್ನುವ ಭರವಸೆಯನ್ನು ನಾನು ಮತ್ತು ನನ್ನ ತಂಡ ನೀಡಲಿದೆ ಎಂದು ಯಾಮಿನಿ ಪ್ರತಿಕ್ರಿಯೆ ನೀಡಿದ್ದರು.

     

    ಅಂದಹಾಗೆ ಕನ್ನಡತಿ ಪ್ರಿಯಾ ಮಣಿ ಹಾಗೂ ಬಾಲಿವುಡ್ ಹೆಸರಾಂತ ನಟಿ ಯಾಮಿನಿ ಗೌತಮ್ ಕಾಂಬಿನೇಷನ್ ನ ಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಸಿನಿಮಾದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಪಾತ್ರಗಳು ಇವೆ. ಯಾಮಿ ಗೌತಮ್ ಖಡಕ್ ಎನ್.ಐ.ಎ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

  • ಬಿಜೆಪಿಯ ಚುನಾವಣಾ ಅಸ್ತ್ರವಾಗಿ ಆರ್ಟಿಕಲ್ 370

    ಬಿಜೆಪಿಯ ಚುನಾವಣಾ ಅಸ್ತ್ರವಾಗಿ ಆರ್ಟಿಕಲ್ 370

    ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 37ಂ ನೇ ವಿಧಿಯನ್ನು (Article 370) ರದ್ದುಗೊಳಿಸಿರುವ ಕೇಂದ್ರ ಸರ್ಕಾರ, ತನ್ನ ಆಡಳಿತದಲ್ಲಿ ಕಾಶ್ಮೀರಕ್ಕೆ ನಿಜವಾದ ಪ್ರಜಾಪ್ರಭುತ್ವ ಅಸ್ತಿತ್ವಕ್ಕೆ ಬಂದು, ಸ್ವಾತಂತ್ರ್ಯ ದೊರಕಿದೆ ಎಂದು ಸದಾ ಹೇಳುತ್ತಿದೆ. ಈ ಮೂಲಕ 37ಂನೇ ವಿಧಿಯನ್ನು ರದ್ದುಗೊಳಿಸಿದ್ದನ್ನು ಚುನಾವಣಾ ಅಸ್ತ್ರವಾಗಿ ಬಿಜೆಪಿ (BJP) ಬಳಸಿಕೊಳ್ಳುತ್ತಿದೆ.

    ಇತ್ತೀಚೆಗೆ ನಾಗ್ಪುರದಲ್ಲಿ ನಡೆದ ಚುನಾವಣಾ (Lok Sabha Elections 2024) ರ‍್ಯಾಲಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ್ದಕ್ಕೆ ಡಾ.ಬಿ.ಆರ್ ಅಂಬೇಡ್ಕರ್ ಅವರ ಆತ್ಮ ನನ್ನನ್ನು ಆಶೀರ್ವದಿಸುತ್ತಿರಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಅಲ್ಲದೇ ಪ್ರತಿಪಕ್ಷಗಳು ಪ್ರತ್ಯೇಕತಾವಾದಿಗಳ ಬಗ್ಗೆ ಮೃದು ಧೋರಣೆ ಹೊಂದಿದ್ದು, 370ನೇ ವಿಧಿಯನ್ನು ರದ್ದು ಮಾಡಿದಾಗ ಅದಕ್ಕೆ ವಿರೋಧಿಸಿದವು ಎಂದು ವಾಗ್ದಾಳಿ ನಡೆಸಿದ್ದರು.

    ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವುದಕ್ಕೆ ಅಂಬೇಡ್ಕರ್ ವಿರೋಧಿಸಿದ್ದರು. ವಿಶೇಷ ಸ್ಥಾನಮಾನ ನೀಡಿದರೆ ಭಾರತದ ಸಮಗ್ರತೆ ಮತ್ತು ಏಕತೆಗೆ ಧಕ್ಕೆ ಆಗುತ್ತದೆ ಎಂದು ಹೇಳಿದ್ದರು. ಆದರೆ ಜವಾಹಾರಲಾಲ್ ನೆಹರು ಅವರು ವಿಶೇಷ ಸ್ಥಾನ ಪರ ಮಾತನಾಡಿದ್ದರು.

    Amith

    ಇತ್ತೀಚೆಗೆ ಚುನಾವಣಾ ಪ್ರಚಾರದ ವೇಳೆ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಅಕಸ್ಮಾತ್ ಕಾಂಗ್ರೆಸ್ ಅಧಿಕಾರ ಹಿಡಿದರೆ, ಕೇಂದ್ರ ಸರ್ಕಾರ ರದ್ದು ಮಾಡಿರುವ ಆರ್ಟಿಕಲ್ 370ಯನ್ನು ಮತ್ತೆ ಬದಲಾಯಿಸುವ ಧೈರ್ಯ ಮಾಡಬೇಡಿ ಎಂದು ಎಚ್ಚರಿಸಿದ್ದರು.

    ಭಯೋತ್ಪಾದನೆಗೆ ಅಂತ್ಯ:
    2014ರ ನಂತರ ಭಯೋತ್ಪಾದನೆಯನ್ನು ನಿಯಂತ್ರಿಸಲಾಗಿದೆ. 2019ರ ಹೊತ್ತಿಗೆ ಭಯೋತ್ಪಾದನೆಯ ಮೂಲವಾಗಿದ್ದ ಜಮ್ಮು-ಕಾಶ್ಮೀರದ 370ನೇ ವಿಧಿಯನ್ನು ರದ್ದುಪಡಿಸುವಂಥ ಕೆಲಸವನ್ನು ಮೋದಿಜಿ ಮಾಡಿದರು. ಈ ಮೂಲಕ ಭಯೋತ್ಪಾದನೆ ಭಾರತದಲ್ಲಿ ನಾಶವಾಗಿದೆ. ಈಗ ಎಲ್ಲಿಯಾದರೂ ಪಟಾಕಿಗಳು ಸಿಡಿದರೂ ಪಾಕಿಸ್ತಾನವು ತನ್ನ ಕೈವಾಡವಿಲ್ಲ ಎಂದು ಸ್ಪಷ್ಟಪಡಿಸುತ್ತದೆ ಎಂದು ಉತ್ತರ ಪ್ರದೇಶ ಸಿಎಂ 370ನೇ ವಿಧಿಯ ರದ್ದು ಮಾಡಿದ್ದನ್ನು ಸಮರ್ಥಿಸಿದ್ದರು.

    ಪ್ರಚಾರದ ಅಸ್ತ್ರವಾಗಿ `ಆರ್ಟಿಕಲ್ 370′ ಸಿನಿಮಾ
    ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಮ್ಮ ಕುಟುಂಬದೊಂದಿಗೆ ದೆಹಲಿಯಲ್ಲಿ `ಆರ್ಟಿಕಲ್ 370′ ಸಿನಿಮಾ ನೋಡಿದ್ದರು. ಈ ಕುರಿತಂತೆ ಅವರು ಎಕ್ಸ್‌ನಲ್ಲಿ, ಇದು ನೈಜ ಘಟನೆಗಳ ಪ್ರೇರಣೆಯಿಂದ ಆಗಿರುವ ಸಿನಿಮಾ ಎಂದು ಬರೆದುಕೊಂಡಿದ್ದರು. ಈ ಸಿನಿಮಾ ನೋಡುವಾಗ ಭಾವುಕರಾದ ಸಂಗತಿಯನ್ನೂ ಅವರು ಬಿಚ್ಚಿಟ್ಟಿದ್ದರು.

    ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಕೂಡ ಆರ್ಟಿಕಲ್ 370 ಚಿತ್ರದ ಬಗ್ಗೆ ತಮ್ಮ ಭಾಷಣದಲ್ಲಿ ಉಲ್ಲೇಖ ಮಾಡಿದ್ದರು. ಕಾಶ್ಮೀರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ, ಆರ್ಟಿಕಲ್ 370 ಸಿನಿಮಾ ಜಮ್ಮು ಕಾಶ್ಮೀರದ ವಿಶೇಷ ಅಧಿಕಾರವನ್ನು ಯಾಕೆ ತೆಗೆಯಲಾಯಿತು ಎನ್ನುವುದನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದು ಹೇಳಿದ್ದರು.

    ವಿಶೇಷ ಸ್ಥಾನಮಾನ ರದ್ದು:
    1949 ರಲ್ಲಿ ಅಸ್ತಿತ್ವಕ್ಕೆ ಬಂದಿದ್ದ 370 ನೇ ವಿಧಿಯು ಕಾಶ್ಮೀರಕ್ಕೆ ಆಂತರಿಕ ಆಡಳಿತದ ವಿಷಯಗಳಲ್ಲಿ ಸ್ವಾಯತ್ತತೆ ನೀಡಿತ್ತು. ವಿದೇಶಾಂಗ ವ್ಯವಹಾರಗಳು, ಹಣಕಾಸು, ರಕ್ಷಣೆ ಮತ್ತು ಸಂವಹನಗಳನ್ನು ಹೊರತುಪಡಿಸಿ ಬೇರೆಲ್ಲಾ ವಿಚಾರಗಳಲ್ಲೂ ತನ್ನದೇ ನಿಯಂತ್ರಣ ಹೊಂದಲು 370 ನೇ ವಿಧಿ ಅವಕಾಶ ನೀಡಿತ್ತು. ಇದನ್ನು ಐತಿಹಾಸಿಕ ಪ್ರಮಾದ ಎಂದು ಪರಿಗಣಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ವಿಧಿಯನ್ನು ಆಗಸ್ಟ್ 5, 2019 ರಂದು ರದ್ದು ಪಡೆಸಿತ್ತು.

    ಕಾಶ್ಮೀರ ಏಕೆ ವಿವಾದಾತ್ಮಕವಾಗಿದೆ?
    ಈ ಪ್ರದೇಶವು ಒಂದು ಕಾಲದಲ್ಲಿ ಜಮ್ಮು ಮತ್ತು ಕಾಶ್ಮೀರ ಎಂದು ಕರೆಯಲ್ಪಡುವ ರಾಜಪ್ರಭುತ್ವದ ರಾಜ್ಯವಾಗಿತ್ತು. 1947 ರಲ್ಲಿ ಬ್ರಿಟೀಷ್ ಆಳ್ವಿಕೆಯ ಕೊನೆಯಲ್ಲಿ ಉಪಖಂಡವಾಗಿ ಇದನ್ನು ವಿಭಜಿಸಿತ್ತು. ಭಾರತ ಸ್ವಾತಂತ್ರ್ಯದ ಬಳಿಕ ಮಹಾರಾಜ ಹರಿ ಸಿಂಗ್ ಸ್ವತಂತ್ರವಾಗಿ ಉಳಿಯಲು ಮೊದಲು ಪ್ರಯತ್ನಿಸಿದರು, ಆದರೆ ಅಕ್ಟೋಬರ್ 1947 ರಲ್ಲಿ ಪಾಕಿಸ್ತಾನ ಆಕ್ರಮಣಕ್ಕೆ ಮುಂದಾದ ಬಳಿಕ ಕಾಶ್ಮೀರ ಭಾರತದ ಜೊತೆಗೆ ವಿಲೀನವಾಗಲು ಒಪ್ಪಿಕೊಂಡಿತ್ತು.

    ಭಾರತ ಮತ್ತು ಪಾಕಿಸ್ತಾನ ಎರಡೂ ಸಂಪೂರ್ಣವಾಗಿ ಈ ಪ್ರದೇಶವನ್ನು ತಮ್ಮದು ಎಂದು ಹೇಳುತ್ತವೆ. ಭಾರತದ ಆಡಳಿತದ ವಿರುದ್ಧ ಪ್ರತ್ಯೇಕತಾವಾದಿ ದಂಗೆಯಿಂದಾಗಿ 30 ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಹಿಂಸಾಚಾರಗಳು ನಡೆದಿವೆ.

    370ನೇ ವಿಧಿಯ ರದ್ದು
    ಭಾರತೀಯ ಜನತಾ ಪಕ್ಷವು 370ನೇ ವಿಧಿಯನ್ನು ದೀರ್ಘಕಾಲ ವಿರೋಧಿಸಿತ್ತು. ಅದನ್ನು ಹಿಂತೆಗೆದುಕೊಳ್ಳುವುದು ಪಕ್ಷದ 2019ರ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿತ್ತು. ಕಾಶ್ಮೀರವನ್ನು ಏಕೀಕರಿಸಲು ಮತ್ತು ಅದನ್ನು ಭಾರತದ ಉಳಿದ ಭಾಗಗಳಂತೆಯೇ ಇರಿಸಲು ಅದನ್ನು ರದ್ದುಗೊಳಿಸಬೇಕು ಎಂದು ಬಿಜೆಪಿ ನಿರಂತರ ವಾದಿಸಿತ್ತು. 2019ರ ಸಾರ್ವತ್ರಿಕ ಚುನಾವಣೆಗಳಲ್ಲಿ ಭಾರಿ ಜನಾದೇಶದೊಂದಿಗೆ ಅಧಿಕಾರಕ್ಕೆ ಮರಳಿದ ಬಿಜೆಪಿ, 370ನೇ ವಿಧಿಯನ್ನು ರದ್ದುಗೊಳಿಸಿತ್ತು.

    ಬಿಜೆಪಿಯ ನಿಲುವೇನು?
    ಕಾಶ್ಮೀರದ 370ನೇ ವಿಧಿಯಿಂದ ಈ ಭಾಗದಲ್ಲಿ ಪ್ರಜಾಪ್ರಭುತ್ವ ಎಂದಿಗೂ ಸಂಪೂರ್ಣವಾಗಿ ಜಾರಿಯಾಗಲಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಯಿತು, ಯಾವುದೇ ಅಭಿವೃದ್ಧಿ ನಡೆಯಲು ಸಾಧ್ಯವಾಗಲಿಲ್ಲ ಎಂದು ಸಂಸತ್‍ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು.

    ಕಾಂಗ್ರೆಸ್ ಹೇಳಿದ್ದೇನು?
    ಕಾಂಗ್ರೆಸ್‍ನ ಹಿರಿಯ ನಾಯಕ ಪಿ ಚಿದಂಬರಂ ಅವರು ಈ ನಿರ್ಧಾರವನ್ನು ಅಪಾಯಕಾರಿ. ಇದು ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಸಂಸತ್ತಿನಲ್ಲಿ ಎಚ್ಚರಿಸಿದ್ದರು. ಅಲ್ಲದೇ ನೀವು ಗೆಲುವು ಸಾಧಿಸಿದ್ದೀರಿ ಎಂದು ಭಾವಿಸಬಹುದು, ಆದರೆ ಇತಿಹಾಸವು ನೀವು ತಪ್ಪು ಎಂದು ಸಾಬೀತುಪಡಿಸುತ್ತದೆ ಎಂದು ವಾದಿಸಿದ್ದರು.

    ಈಗ ಏನಾಗಿದೆ?
    ಕಾಶ್ಮೀರವು ಇನ್ನು ಮುಂದೆ ಪ್ರತ್ಯೇಕ ಸವಲತ್ತನ್ನು ಹೊಂದಿರುವುದಿಲ್ಲ. ಉಳಿದ ರಾಜ್ಯಗಳಂತೆ ಭಾರತೀಯ ಸಂವಿಧಾನಕ್ಕೆ ಕಾಶ್ಮೀರ ಬದ್ಧವಾಗಿರಬೇಕು. ಎಲ್ಲಾ ಭಾರತೀಯ ಕಾನೂನುಗಳು ಕಾಶ್ಮೀರಿಗಳಿಗೆ ಅನ್ವಯವಾಗುತ್ತವೆ ಮತ್ತು ರಾಜ್ಯದ ಹೊರಗಿನ ಜನರು ಅಲ್ಲಿ ಆಸ್ತಿಯನ್ನು ಖರೀದಿಸಲು ಸಾಧ್ಯವಾಗುತ್ತದೆ. ಇದರಿಂದ ಈ ಭಾಗದ ಅಭಿವೃದ್ಧಿಯಾಗುತ್ತದೆ ಎಂದು ಕೇಂದ್ರ ಹೇಳಿತ್ತು.

    ನ್ಯಾಯಾಲಯ ಏನು ಹೇಳಿತ್ತು?
    ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿ, ಕೇಂದ್ರದ ಎಲ್ಲಾ ನಿರ್ಧಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದಿತ್ತು. ಅಲ್ಲದೇ ಕೇಂದ್ರದ ನಿರ್ಧಾರವನ್ನು ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿತ್ತು.

    ಆರ್ಟಿಕಲ್ 370 ಮತ್ತು 35ಎ ಎಂದರೇನು?
    ಆರ್ಟಿಕಲ್ 370: ಇದು ಜಮ್ಮು ಮತ್ತು ಕಾಶ್ಮೀರದ ಕೊನೆಯ ಡೋಗ್ರಾ ಮಹಾರಾಜ ಹರಿ ಸಿಂಗ್ ಅವರು ಅಕ್ಟೋಬರ್ 27, 1947 ರಂದು ಸಹಿ ಮಾಡಿದ ಭಾರತೀಯ ಸಂವಿಧಾನಕ್ಕೆ ತಾತ್ಕಾಲಿಕ ನಿಬಂಧನೆಯಾಗಿದೆ.

    ಈ ದಾಖಲೆಯು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸಾಂವಿಧಾನಿಕ ಸ್ಥಾನಮಾನವನ್ನು ಒದಗಿಸಿತ್ತು. ಈ ನಿಬಂಧನೆಯ ಮೂಲಕ ಇತರ ರಾಜ್ಯಗಳಿಗೆ ಅನ್ವಯವಾಗುವ ಕಾನೂನುಗಳು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ಅನ್ವಯಿಸುತ್ತಿರಲಿಲ್ಲ.

    2019ರ ಅಕ್ಟೋಬರ್ 31 ರವರೆಗೆ ಕಾಶ್ಮೀರಕ್ಕೆ, ಭಾರತದ ಒಂದು ರಾಜ್ಯವಾಗಿ ಪ್ರತ್ಯೇಕ ಸಂವಿಧಾನ, ರಾಜ್ಯ ಧ್ವಜ ಮತ್ತು ಆಂತರಿಕ ಆಡಳಿತಾತ್ಮಕ ಸ್ವಾಯತ್ತತೆಯನ್ನು ಹೊಂದುವ ಅಧಿಕಾರವನ್ನು 370ನೇ ವಿಧಿ ನೀಡಿತ್ತು. ಇದರ ಅಡಿಯಲ್ಲಿ ರಕ್ಷಣೆ, ವಿದೇಶಾಂಗ ವ್ಯವಹಾರ ಹಾಗೂ ಸಂವಹನ ಈ ಮೂರು ಕ್ಷೇತ್ರಗಳನ್ನು ಹೊರತು ಪಡಿಸಿ, ಬೇರೆ ಯಾವುದೇ ಕಾನೂನು ಜಾರಿಗೊಳಿಸುವ ಮುನ್ನ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕಿತ್ತು.

    ದ್ವಿಪೌರತ್ವ ರದ್ದು:
    ವಿಶೇಷ ಸ್ಥಾನಮಾನ ರದ್ದಾದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕ ಧ್ವಜ, ಸಂವಿಧಾನ ಹೊಂದಲು ಅನುಮತಿ ಇಲ್ಲ. ಇಲ್ಲಿನ ನಾಗರಿಕರು ದ್ವಿ ಪೌರತ್ವವನ್ನು ಹೊಂದಿರದೇ ಭಾರತದ ಪ್ರಜೆಗಳಾಗಿರುತ್ತಾರೆ. ಭಾರತೀಯ ಸಂವಿಧಾನದಲ್ಲಿ ಪ್ರಕಾರ ಮೂಲಭೂತ ಹಕ್ಕುಗಳನ್ನು ಹೊಂದಿರುತ್ತಾರೆ. ಮಾಹಿತಿ ಹಕ್ಕು ಕಾಯಿದೆ ಮತ್ತು ಶಿಕ್ಷಣ ಹಕ್ಕು ಕಾಯಿದೆ ಸೇರಿದಂತೆ ಸಂಸತ್ತು ಅಂಗೀಕರಿಸಿದ ಎಲ್ಲಾ ಕಾನೂನುಗಳು ಅನ್ವಯವಾಗುತ್ತವೆ. ದೇಶದ ಯಾವುದೇ ಭಾಗದ ಯಾವುದೇ ಭಾರತೀಯ ಪ್ರಜೆಯು ರಾಜ್ಯದಲ್ಲಿ ಆಸ್ತಿಯನ್ನು ಖರೀದಿಸಬಹುದು. ರಾಜ್ಯ ಸರ್ಕಾರಿ ಕೆಲಸವನ್ನು, ವಿದ್ಯಾರ್ಥಿವೇತನಗಳನ್ನು ತೆಗೆದುಕೊಳ್ಳಬಹುದು.