Tag: arts

  • ಕಲಾ ವಿಭಾಗದಲ್ಲಿ ಲಾರಿ ಡ್ರೈವರ್ ಮಗಳು ರಾಜ್ಯಕ್ಕೆ ಪ್ರಥಮ – 597 ಅಂಕ ಪಡೆದ ಸಂಜನಾಬಾಯಿ

    ಕಲಾ ವಿಭಾಗದಲ್ಲಿ ಲಾರಿ ಡ್ರೈವರ್ ಮಗಳು ರಾಜ್ಯಕ್ಕೆ ಪ್ರಥಮ – 597 ಅಂಕ ಪಡೆದ ಸಂಜನಾಬಾಯಿ

    – ಕೆ.ನಿರ್ಮಲಾ ದ್ವಿತೀಯ ಸ್ಥಾನ

    ವಿಜಯನಗರ: ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ (Second PUC Result) ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ ವಿಜಯನಗರ (Vijayanagara) ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ.

    600ಕ್ಕೆ 597 ಅಂಕ ಪಡೆಯುವ ಮೂಲಕ ಸಂಜನಾಬಾಯಿ ಕಲಾ ವಿಭಾಗದದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಸಂಜನಾ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸಂಜನಾ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದವರಾಗಿದ್ದು, ತಂದೆ ಲಾರಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಫಸ್ಟ್‌, ದಕ್ಷಿಣ ಕನ್ನಡ ಸೆಕೆಂಡ್‌

    ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಕೆ.ನಿರ್ಮಲಾ ದ್ವಿತೀಯ ಸ್ಥಾನ ಪಡೆದಿದ್ದಾರೆ. ನಿರ್ಮಲಾ ವಿಜಯನಗರ ಜಿಲ್ಲೆಯ ಇಟಗಿಯ ಪಂಚಮಸಾಲಿ ಪಿಯು ಕಾಲೇಜಿನ ವಿದ್ಯಾರ್ಥಿನಿ. ನಿರ್ಮಲಾ 600ಕ್ಕೆ 596 ಅಂಕ ಪಡೆದಿದ್ದಾರೆ.‌ ಇದನ್ನೂ ಓದಿ: ಸಿಂಗಾಪುರ ಶಾಲೆಯಲ್ಲಿ ಬೆಂಕಿ ಅವಘಡ – ಪವನ್ ಕಲ್ಯಾಣ್ ಕಿರಿಯ ಪುತ್ರನಿಗೆ ಗಂಭೀರ ಗಾಯ

  • ಎನ್.ಎಫ್.ಟಿ (NFT) ಮಾರುಕಟ್ಟೆಗೆ ಕನ್ನಡದ ಮತ್ತೊಬ್ಬ ಸೂಪರ್ ಸ್ಟಾರ್ ಎಂಟ್ರಿ

    ಎನ್.ಎಫ್.ಟಿ (NFT) ಮಾರುಕಟ್ಟೆಗೆ ಕನ್ನಡದ ಮತ್ತೊಬ್ಬ ಸೂಪರ್ ಸ್ಟಾರ್ ಎಂಟ್ರಿ

    ಕೆಜಿಎಫ್ ಸಿನಿಮಾದಲ್ಲಿ ಬಳಸಲಾದ ಬೈಕ್, ಯಶ್ ಪ್ರತಿಮೆ, ಗನ್ ಸೇರಿದಂತೆ ಹಲವು ವಸ್ತುಗಳನ್ನು ತದ್ರೂಪಿ ಮಾಡಿ, ಅವುಗಳನ್ನು ಎನ್.ಎಫ್.ಟಿ ಮೂಲಕ ಅಭಿಮಾನಿಗಳಿಗೆ ತಲುಪಿಸುವ ಕಾರ್ಯವನ್ನು ಎನ್.ಎಫ್.ಟಿ (NFT) ಮಾಡಿತ್ತು. ಇದೀಗ ಮತ್ತೊಬ್ಬ ಸ್ಯಾಂಡಲ್ ವುಡ್ ಸ್ಟಾರ್ ನಟರ ಸಿನಿಮಾಗೂ ಈ ಭಾಗ್ಯ ದೊರೆಯುತ್ತಿದೆ. ಸಿನಿಮಾ ರಿಲೀಸ್ ಗೂ ಮುನ್ನ ಇಂಥದ್ದೊಂದು ಕಾರ್ಯಕ್ಕೆ ಮುಂದಾಗಿದೆ ಎನ್.ಎಫ್.ಟಿ.

    ಬಾಲಿವುಡ್ ನಲ್ಲಿ ಈಗಾಗಲೇ ಸಾಕಷ್ಟು ಫೇಮಸ್ ಆಗಿರುವ ಈ ಮಾರುಕಟ್ಟಿಗೆ ಸೆಲೆಬ್ರಿಟಿಗಳು ಈಗಾಗಲೇ ಒಬ್ಬೊಬ್ಬರಾಗಿಯೇ NFT ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದಾರೆ. ಕಮಲ್ ಹಾಸನ್, ಅಮಿತಾಭ್ ಬಚ್ಚನ್, ಸನ್ನಿ ಲಿಯೋನ್ ಈ ಸಾಲಿನಲ್ಲಿ ಗುರುತಿಸಿಕೊಂಡಿದ್ದು, ಇದೀಗ ಸೌತ್ ಇಂಡಸ್ಟ್ರೀಯ ಸೂಪರ್ ಸ್ಟಾರ್ ಒಬ್ರು NFT ವಲಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಈ  ಮೂಲಕ ಭಾರತೀಯ ಚಿತ್ರರಂಗದ ಬಿಗೆಸ್ಟ್ ಸಿನಿಮಾವೊಂದು ಶೀರ್ಘದಲ್ಲಿಯೇ NFT ಮಾರುಕಟ್ಟೆಗೆ ಎಂಟ್ರಿ ಕೊಡಲಿದೆಯಂತೆ. ಇದನ್ನೂ ಓದಿ : Breaking- ಫಹಾದ್ ಫಾಸಿಲ್ ಗಾಗಿ ಸಿನಿಮಾ ಮಾಡಲು ಮತ್ತೆ ತಮಿಳಿಗೆ ಹೊರಟ ಪವನ್ ಕುಮಾರ್

    ಮಾರ್ವೆಲ್ಸ್ ಸಿನಿಮಾ ಬಳಿಕ ಭಾರತೀಯ ಸಿನಿಮಾಗಳು NFT ಮಾರುಕಟ್ಟೆಯಲ್ಲಿ ರಾರಾಜಿಸಲು ಸಿದ್ಧವಾಗಿವೆ. ಪ್ಯಾನ್ ಇಂಡಿಯಾ ಸಿನಿಮಾ ಕಾನ್ಸೆಪ್ಟ್ ನಡಿ ಡಿಜಿಟಲ್ ಲೋಕದಲ್ಲಿ NFT ಹೊಸ ಕ್ರಾಂತಿಗೆ ನಾಂದಿ ಹಾಡಲು ಸಜ್ಜಾಗಿದ್ದು, ಪ್ಯಾನ್ ಇಂಡಿಯಾ ಸ್ಟಾರ್ ವೊಬ್ಬರು ತಮ್ಮದೇ ಸ್ವತಃ ಮಾರುಕಟ್ಟೆಯಲ್ಲಿ ಸಿನಿಮಾ ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ NFT ವಲಯದಲ್ಲಿ ಭಾರತೀಯ ಚಿತ್ರರಂಗ ದಾಖಲೆ ಬರೆಯುವ ನಿರೀಕ್ಷೆಯಲ್ಲಿದೆ.

    Live Tv
    [brid partner=56869869 player=32851 video=960834 autoplay=true]

  • ದ್ವಿತೀಯ ಪಿಯು ಫಲಿತಾಂಶ ಪ್ರಕಟ – ಟಾಪರ್ಸ್ ಯಾರ‍್ಯಾರು ಗೊತ್ತಾ?

    ದ್ವಿತೀಯ ಪಿಯು ಫಲಿತಾಂಶ ಪ್ರಕಟ – ಟಾಪರ್ಸ್ ಯಾರ‍್ಯಾರು ಗೊತ್ತಾ?

    ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಮ್ರಾನ್ ಶೇಷರಾವ್ 600 ಅಂಕಗಳಿಗೆ 598 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

    ಸಿಮ್ರಾನ್ ಶೇಷರಾವ್ ಬೆಂಗಳೂರಿನ ಎನ್‍ಎಂಕೆಆರ್‌ವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಇವರು ವಿಜ್ಞಾನ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕರೆ ಮಾಡಿ ಶುಭ ಕೋರಿದ್ದಾರೆ. ಈ ವೇಳೆ ಎಂಜಿನಿಯರಿಂಗ್ ಓದುವ ಆಸೆ ಇದೆ ಎಂದು ತನ್ನ ಕನಸನ್ನು ವಿದ್ಯಾರ್ಥಿನಿ ಸಚಿವರಿಗೆ ತಿಳಿಸಿದರು.

    ಇನ್ನುಳಿದಂತೆ ವಾಣಿಜ್ಯ ವಿಭಾಗದಲ್ಲಿ 4 ವಿದ್ಯಾರ್ಥಿಗಳು 600 ಅಂಕಗಳಿಗೆ 596 ಅಂಕ ಗಳಿಸಿ ಟಾಪರ್ಸ್ ಆಗಿದ್ದು, ಬೆಂಗಳೂರಿನ ಜೈನ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮಾನವ ವಿನಯ್ ಕೇಜ್ರಿವಾಲ್, ಬೆಂಗಳೂರಿನ ಬಿಜಿಎಸ್ ಕಾಲೇಜಿನ ನೀಲು ಸಿಂಗ್, ಬೆಂಗಳೂರಿನ ಸೆಂಟ್ ಕ್ಲಾರಟ್ ಪಿಯು ಕಾಲೇಜಿನ ಆಕಾಶ್ ದಾಸ್ ಹಾಗೂ ಚಿಕ್ಕಬಳ್ಳಾಪುರ ಕಾಲೇಜಿನ ನೇಹಾ ಈ ಸಾಧನೆಯನ್ನು ಮಾಡಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಪಠ್ಯಪುಸ್ತಕ ಪರಿಷ್ಕರಣೆ ವಾಪಸ್ ಪಡೆಯಲ್ಲ: ಬಿಸಿ ನಾಗೇಶ್

    ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಟಾಪರ್ಸ್ ಆಗಿದ್ದಾರೆ. ಬಳ್ಳಾರಿ ಕಾಲೇಜಿನ ಶ್ವೇತಾ ಭೀಮಾ ಶಂಕರ್ ಭೈರಗೊಂಡ ಹಾಗೂ ಮಡಿವಾಳರಾ ಸಹನಾ 600 ಅಂಕಗಳಿಗೆ 594 ಅಂಕಗಳನ್ನು ಪಡೆದು ಕಲಾ ವಿಭಾಗದಲ್ಲೇ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದನ್ನೂ ಓದಿ: 2nd PUC ಫಲಿತಾಂಶ ‌ಪ್ರಕಟ- 61.88% ಮಕ್ಕಳು ಪಾಸ್‌, ವಿದ್ಯಾರ್ಥಿನಿಯರೇ ಮೇಲುಗೈ

    Live Tv

  • ಕಲಾ ವಿಭಾಗ ಟಾಪರ್ಸ್ ಲಿಸ್ಟ್ – ಬಳ್ಳಾರಿಯ ಇಂದು ಕಾಲೇಜಿನ ವಿದ್ಯಾರ್ಥಿಗಳಿಗೆ ಮೊದಲ ಮೂರು ಸ್ಥಾನ

    ಕಲಾ ವಿಭಾಗ ಟಾಪರ್ಸ್ ಲಿಸ್ಟ್ – ಬಳ್ಳಾರಿಯ ಇಂದು ಕಾಲೇಜಿನ ವಿದ್ಯಾರ್ಥಿಗಳಿಗೆ ಮೊದಲ ಮೂರು ಸ್ಥಾನ

    ಬೆಂಗಳೂರು: ದ್ವಿತೀಯ ಪಿಯುಸಿಯ ಕಲಾ ವಿಭಾಗದಲ್ಲಿ ಪ್ರತಿ ವರ್ಷದಂತೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನ ಇಂದು ಕಾಲೇಜಿನ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿದ್ದಾರೆ. ಮೊದಲ ಮೂರು ಸ್ಥಾನಗಳನ್ನು ಈ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ.

    ಕರೇಗೌಡರ ದಾಸನಗೌಡ 594 ಅಂಕ ಪಡೆಯುವ ಮೂಲಕ ಮೊದಲ ಸ್ಥಾನ ಪಡೆದರೆ, 591 ಅಂಕ ಪಡೆದ ಸ್ವಾಮಿ ಎರಡನೇ ಸ್ಥಾನ ಪಡೆದಿದ್ದಾರೆ. ರಾಜ್ಯದಲ್ಲಿ ಈ ವರ್ಷ ಕಲಾ ವಿಭಾಗದ ಪರೀಕ್ಷೆಗೆ 1,98,875 ಮಂದಿ ಹಾಜರಾಗಿದ್ದು, 82,077 ಮಂದಿ ತೇರ್ಗಡೆಯಾಗುವ ಮೂಲಕ ಶೇ.41.27 ಫಲಿತಾಂಶ ದಾಖಲಾಗಿದೆ.

    ಮೂರು ವಿಭಾಗದದಲ್ಲಿ ಹೊಸಬರು ಒಟ್ಟು 5,56,267 ಮಂದಿ ಪರೀಕ್ಷೆ ಬರೆದಿದ್ದು, 3,84,947 ಮಂದಿ ತೇರ್ಗಡೆಯಾಗಿದ್ದಾರೆ. ಶೇ.69.20 ಫಲಿತಾಂಶ ಬಂದಿದೆ.

    ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು
    1. ಕರೇಗೌಡರ ದಾಸನಗೌಡ 594 ಅಂಕ, ಇಂದು ಪಿಯು ಕಾಲೇಜು ಬಳ್ಳಾರಿ
    2. ಸ್ವಾಮಿ ಎಸ್.ಎಂ 591 ಅಂಕ, ಇಂದು ಪಿಯು ಕಾಲೇಜು, ಬಳ್ಳಾರಿ
    3. ಮಹಮ್ಮದ್ ರಫೀಕ್ ಹೆಚ್ 591 ಅಂಕ, ಇಂದು ಪಿಯು ಕಾಲೇಜು, ಬಳ್ಳಾರಿ
    4. ಗೀತಾ ದೊಗ್ಗಳ್ಳಿ 590 ಅಂಕ, ಎಸ್‍ಯುಜೆಎಂ ಪಿಯು ಕಾಲೇಜು ಹರಪ್ಪನಹಳ್ಳಿ ಬಳ್ಳಾರಿ
    4. ಶಮೀನ್ 590 ಅಂಕ, ಇಂದು ಪಿಯು ಕಾಲೇಜು ಬಳ್ಳಾರಿ


    5. ಪ್ರಿಯಾಂಕ ಎಂ 589 ಅಂಕ, ಇಂದು ಪಿಯು ಕಾಲೇಜು ಬಳ್ಳಾರಿ
    5. ಶರಣಬಸಪ್ಪಬಡಿಗೇರ್ 589 ಅಂಕ, ಇಂದು ಪಿಯು ಕಾಲೇಜು ಬಳ್ಳಾರಿ
    5. ಹಕ್ಕಿ ರೂಪ 589 ಅಂಕ, ಎಸ್‍ಎಸ್‍ಹೆಚ್ ಜೈನ್ ಪಿಯು ಕಾಲೇಜು ಹರಪ್ಪನಹಳ್ಳಿ ಬಳ್ಳಾರಿ
    5. ತೋಟದ ತೇಜಸ್ವಿನಿ 589 ಅಂಕ, ಇಂದು ಪಿಯು ಕಾಲೇಜು ಬಳ್ಳಾರಿ