ಸ್ಯಾಂಡಲ್ವುಡ್ (Sandalwood) ನಟಿ ಮಾನ್ವಿತಾ ಕಾಮತ್ (Manvita Kamath) ಮೇ 1ರಂದು ಚಿಕ್ಕಮಗಳೂರಿನ ಕಳಸದ ದೇವಸ್ಥಾನವೊಂದರಲ್ಲಿ ಅದ್ಧೂರಿಯಾಗಿ ಮದುವೆ ಜರುಗಿದೆ. ಟಗರು ನಟಿಯ ಮದುವೆ ಸುಂದರ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿದೆ.
ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಕೊಂಕಣಿ ಸಾಂಪ್ರದಾಯದಂತೆ ಮಾನ್ವಿತಾ- ಅರುಣ್ ಕುಮಾರ್ (Arun Kumar) ಮದುವೆ ಜರುಗಿದೆ. ಮಾನ್ವಿತಾರ ಕುಟುಂಬಸ್ಥರು ಮತ್ತು ಆಪ್ತರಷ್ಟೇ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ:ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ
ಮಾನ್ವಿತಾ ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ್ದಾರೆ. ವರ ಅರುಣ್ ಬಿಳಿ ಬಣ್ಣದ ಶೆರ್ವಾನಿಯಲ್ಲಿ ಕಂಗೊಳಿಸಿದ್ದಾರೆ. ಸಿಂಪಲ್ ಮೇಕಪ್‌ನಲ್ಲಿ ನಟಿ ಕಂಗೊಳಿಸಿದ್ದಾರೆ.
ಅಂದಹಾಗೆ, ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನನ್ನೇ ಮಾನ್ವಿತಾ ಮದುವೆಯಾಗುತ್ತಿದ್ದಾರೆ. ನನ್ನ ಮದುವೆ ನೋಡೋದು ಅಮ್ಮನ ಕನಸಾಗಿತ್ತು. ಅದರಂತೆಯೇ ಮದುವೆ ನೆರವೇರುತ್ತಿದೆ ಎನ್ನುತ್ತಾರೆ ಮಾನ್ವಿತಾ. ನನ್ನ ಅಮ್ಮ ನನ್ನ ಮದುವೆ ಪ್ರೊಫೈಲ್ ಅನ್ನು ನಮ್ಮ ಸಮುದಾಯದ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಂಚಿಕೊಳ್ಳುತ್ತಿದ್ದರು.
ಆಗ ಅರುಣ್ ತಾಯಿಗೆ ನಮ್ಮ ತಾಯಿ ನಿಧನದ ಬಗ್ಗೆ ತಿಳಿದಿರಲಿಲ್ಲ. ಅವರು ನಮ್ಮನ್ನು ತಲುಪಲು ತುಂಬ ಪ್ರಯತ್ನಿಸಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಕೊನೆಗೆ ಅವರು ನನ್ನ ನಂಬರ್ ಪಡೆದುಕೊಂಡು ಕರೆ ಮಾಡಿದ್ದಾರೆ. ಈಗ ಇದೆಲ್ಲವೂ ಸಾಧ್ಯವಾಗಿದೆ ಎಂದು ಖುಷಿಯಿಂದ ಹೇಳಿದ್ದರು ಮಾನ್ವಿತಾ. ಮದುವೆ ಸುದ್ದಿ ಸಂಭ್ರಮದ ನಡುವೆ ಮತ್ತೊಂದು ವಿಶೇಷ ಅಂದರೆ, ಮಾನ್ವಿತಾ ತಾಯಿ ಸುಜಾತಾ ಅವರ ಹುಟ್ಟುಹಬ್ಬ ಅಕ್ಟೋಬರ್ 14 ಅದೇ ದಿನ ಅರುಣ್ ಹುಟ್ಟುಹಬ್ಬವಂತೆ. ಇಲ್ಲಿಂದ ಪಾಸಿಟಿವ್ ಸೂಚನೆ ಸಿಕ್ಕಿದೆ. ಅಂದಹಾಗೆ, ನಿಧನಕ್ಕೂ ಮುನ್ನವೇ ಮಾನ್ವಿತಾ ಅವರ ತಾಯಿ ಸುಜಾತಾ ಅವರು ಅರುಣ್ ತಾಯಿಯೊಂದಿಗೆ ಮಾತನಾಡಿದ್ದರು.
ಸ್ಯಾಂಡಲ್ವುಡ್ ನಟಿ ಮಾನ್ವಿತಾ ಕಾಮತ್ (Manvita Kamath) ಮೇ 1ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮ್ಯೂಸಿಕ್ ಡೈರೆಕ್ಟರ್ ಅರುಣ್ ಕುಮಾರ್ (Arun Kumar) ಜೊತೆ ‘ಟಗರು’ ನಟಿ ಮದುವೆಗೆ ರೆಡಿಯಾಗಿದ್ದಾರೆ. ಹಾಗಾದ್ರೆ ಹುಡುಗ ಯಾರು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಮದುವೆಯಾಗುವ ಹುಡುಗನ ಫೋಟೋ ಕೂಡ ನಟಿ ರಿವೀಲ್ ಮಾಡಿದ್ದಾರೆ.
ಮದುವೆಗೆ ವಿಶೇಷವಾಗಿ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ಗೆ (Ashwini Puneeth Rajkumar) ನಟಿ ಮದುವೆಗೆ ಆಮಂತ್ರಣ ನೀಡಿದ್ದಾರೆ. ಈ ವೇಳೆ, ಮದುವೆಯಾಗುವ ಹುಡುಗ ಅರುಣ್ ಕುಮಾರ್ ಕೂಡ ಹಾಜರಿ ಹಾಕಿದ್ದಾರೆ. ಈ ಮೂಲಕ ನಟಿ ಹುಡುಗನ ಮುಖ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ:ವಿಜಯ್ ಅಭಿಮಾನಿಗಳಿಗೆ ಶಾಕ್ ಕೊಟ್ಟ ನಿರ್ದೇಶಕ ವೆಟ್ರಿಮಾರನ್
ಮ್ಯೂಸಿಕ್ ಪ್ರೋಡ್ಯೂಸರ್ ಅರುಣ್ ಕುಮಾರ್ ಜೊತೆ ಮಾನ್ವಿತಾ ಮದುವೆ ಕೊಂಕಣಿ ಸಾಂಪ್ರದಾಯದಂತೆ ಮೇ 1ರಂದು ಚಿಕ್ಕಮಗಳೂರಿನ ಕಳಸದಲ್ಲಿ ನಡೆಯಲಿದೆ. ಹಳದಿ ಶಾಸ್ತ್ರವು ಏಪ್ರಿಲ್ 29ರಂದು ನಡೆಯಲಿದೆ ಮತ್ತು ಸಂಗೀತ್ ಶಾಸ್ತ್ರ ಮತ್ತು ಎಂಗೇಜ್‌ಮೆಂಟ್ ಏಪ್ರಿಲ್ 30ರಂದು ನಡೆಯಲಿದೆ. ಮದುವೆಗೆ ಸ್ಯಾಂಡಲ್ವುಡ್ ನಟ, ನಟಿಯರು ಭಾಗಿಯಾಗಲಿದ್ದಾರೆ.
ಅಂದಹಾಗೆ, ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನನ್ನೇ ಮಾನ್ವಿತಾ ಮದುವೆಯಾಗುತ್ತಿದ್ದಾರೆ. ನನ್ನ ಮದುವೆ ನೋಡೋದು ಅಮ್ಮನ ಕನಸಾಗಿತ್ತು. ಅದರಂತೆಯೇ ಮದುವೆ ನೆರವೇರುತ್ತಿದೆ ಎನ್ನುತ್ತಾರೆ ಮಾನ್ವಿತಾ. ನನ್ನ ಅಮ್ಮ ನನ್ನ ಮದುವೆ ಪ್ರೊಫೈಲ್ ಅನ್ನು ನಮ್ಮ ಸಮುದಾಯದ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಂಚಿಕೊಳ್ಳುತ್ತಿದ್ದರು.
ಆಗ ಅರುಣ್ ತಾಯಿಗೆ ನಮ್ಮ ತಾಯಿ ನಿಧನದ ಬಗ್ಗೆ ತಿಳಿದಿರಲಿಲ್ಲ. ಅವರು ನಮ್ಮನ್ನು ತಲುಪಲು ತುಂಬ ಪ್ರಯತ್ನಿಸಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಕೊನೆಗೆ ಅವರು ನನ್ನ ನಂಬರ್ ಪಡೆದುಕೊಂಡು ಕರೆ ಮಾಡಿದ್ದಾರೆ. ಈಗ ಇದೆಲ್ಲವೂ ಸಾಧ್ಯವಾಗಿದೆ ಎಂದು ಖುಷಿಯಿಂದ ಹೇಳಿದ್ದರು ಮಾನ್ವಿತಾ. ಮದುವೆ ಸುದ್ದಿ ಸಂಭ್ರಮದ ನಡುವೆ ಮತ್ತೊಂದು ವಿಶೇಷ ಅಂದರೆ, ಮಾನ್ವಿತಾ ತಾಯಿ ಸುಜಾತಾ ಅವರ ಹುಟ್ಟುಹಬ್ಬ ಅಕ್ಟೋಬರ್ 14 ಅದೇ ದಿನ ಅರುಣ್ ಹುಟ್ಟುಹಬ್ಬವಂತೆ. ಇಲ್ಲಿಂದ ಪಾಸಿಟಿವ್ ಸೂಚನೆ ಸಿಕ್ಕಿದೆ. ಅಂದಹಾಗೆ, ನಿಧನಕ್ಕೂ ಮುನ್ನವೇ ಮಾನ್ವಿತಾ ಅವರ ತಾಯಿ ಸುಜಾತಾ ಅವರು ಅರುಣ್ ತಾಯಿಯೊಂದಿಗೆ ಮಾತನಾಡಿದ್ದರು.
ಸ್ಯಾಂಡಲ್ವುಡ್ ನಟಿ ಮಾನ್ವಿತಾ ಕಾಮತ್ (Manvita Kamath) ಇದೇ ಮೇ 1ರಂದು ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮೈಸೂರು ಮೂಲದ ಸಂಗೀತ ನಿರ್ದೇಶಕ ಅರುಣ್ ಕುಮಾರ್ (Arun Kumar) ಜೊತೆ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಇದೀಗ ಮದುವೆ ತಯಾರಿ ಬಗ್ಗೆ ಮತ್ತು ಆಮಂತ್ರಣ ಪತ್ರಿಕೆಯನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ರಿವೀಲ್ ಮಾಡಿದ್ದಾರೆ.
ಮದುವೆಗೆ ಕೆಲವೇ ಕೆಲವು ದಿನಗಳು ಬಾಕಿಯಿದೆ. ಚಿಕ್ಕಮಗಳೂರಿನ ಕಳಸ ಮನೆಯಲ್ಲಿ ಇಂದು (ಏ.22) ನಾಂದಿ ಪೂಜೆ ಮಾಡುವ ಮೂಲಕ ಮದುವೆಯ ತಯಾರಿ ಶುರುವಾಗಿದೆ. ತಯಾರಿ ವೇಳೆ, ನಟಿಯ ಲುಕ್ ಮತ್ತು ಮದುವೆ ಆಮಂತ್ರಣ ಪತ್ರಿಕೆ ಹೇಗಿದೆ ಎಂಬುದನ್ನು ಇನ್ಸ್ಟಾಗ್ರಾಂನಲ್ಲಿ ನಟಿ ರಿವೀಲ್ ಮಾಡಿದ್ದಾರೆ. ಮದುವೆಯ ದಿನ ಮುಹೂರ್ತದ ವೇಳೆ ಕೆಂಪು ಸೀರೆಯನ್ನು ಉಡಲಿದ್ದಾರೆ. ಅದನ್ನು ನಟಿ ತಿಳಿಸಿದ್ದಾರೆ. ಸದ್ಯ ಪತ್ರಿಕೆಯ ಲುಕ್ ಇದೀಗ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಆಪ್ತರಿಗೆ ಮದುವೆ ಆಹ್ವಾನ ನೀಡುವುದರಲ್ಲಿ ನಟಿ ಬ್ಯುಸಿಯಾಗಿದ್ದಾರೆ.
ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನನ್ನೇ ಮಾನ್ವಿತಾ ಮದುವೆಯಾಗುತ್ತಿದ್ದಾರೆ. ನನ್ನ ಮದುವೆ ನೋಡೋದು ಅಮ್ಮನ ಕನಸಾಗಿತ್ತು. ಅದರಂತೆಯೇ ಮದುವೆ ನೆರವೇರುತ್ತಿದೆ ಎನ್ನುತ್ತಾರೆ ಮಾನ್ವಿತಾ. ನನ್ನ ಅಮ್ಮ ನನ್ನ ಮದುವೆ ಪ್ರೊಫೈಲ್ ಅನ್ನು ನಮ್ಮ ಸಮುದಾಯದ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಂಚಿಕೊಳ್ಳುತ್ತಿದ್ದರು.
ಆಗ ಅರುಣ್ ತಾಯಿಗೆ ನಮ್ಮ ತಾಯಿ ನಿಧನದ ಬಗ್ಗೆ ತಿಳಿದಿರಲಿಲ್ಲ. ಅವರು ನಮ್ಮನ್ನು ತಲುಪಲು ತುಂಬ ಪ್ರಯತ್ನಿಸಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಕೊನೆಗೆ ಅವರು ನನ್ನ ನಂಬರ್ ಪಡೆದುಕೊಂಡು ಕಾಂಟಾಕ್ಟ್ ಮಾಡಿದ್ದಾರೆ. ಈಗ ಇದೆಲ್ಲವೂ ಸಾಧ್ಯವಾಗಿದೆ ಎಂದು ಖುಷಿಯಿಂದ ಹೇಳಿದ್ದಾರೆ ಮಾನ್ವಿತಾ. ಇದನ್ನೂ ಓದಿ:ಖ್ಯಾತ ಕಿರುತೆರೆ ನಟಿ ದಿವ್ಯಾಂಕಾಗೆ ಅಪಘಾತ: ಕಾಲಿಗೆ ಶಸ್ತ್ರ ಚಿಕಿತ್ಸೆ
ಮದುವೆ ಸುದ್ದಿ ಸಂಭ್ರಮದ ನಡುವೆ ಮತ್ತೊಂದು ವಿಶೇಷ ಅಂದರೆ, ಮಾನ್ವಿತಾ ತಾಯಿ ಸುಜಾತಾ ಅವರ ಹುಟ್ಟುಹಬ್ಬ ಅಕ್ಟೋಬರ್ 14 ಅದೇ ದಿನ ಅರುಣ್ ಹುಟ್ಟುಹಬ್ಬವಂತೆ. ಇಲ್ಲಿಂದ ಪಾಸಿಟಿವ್ ಸೂಚನೆ ಸಿಕ್ಕಿದೆ. ಅಂದಹಾಗೆ, ನಿಧನಕ್ಕೂ ಮುನ್ನವೇ ಮಾನ್ವಿತಾ ಅವರ ತಾಯಿ ಸುಜಾತಾ ಅವರು ಅರುಣ್ ತಾಯಿಯೊಂದಿಗೆ ಮಾತನಾಡಿದ್ದರು.
ಮಾನ್ವಿತಾ ಮತ್ತು ಅವರ ಚಿಕ್ಕಮ್ಮ ಮೈಸೂರಿನಲ್ಲಿರುವ ಅರುಣ್ ಮನೆಗೆ ಭೇಟಿ ನೀಡಿದ್ದಾರೆ. ಅಲ್ಲಿಂದ ಮದುವೆ ಮಾತುಕತೆಯಾಗಿ ಈಗ ಮದುವೆಗೆ ವೇದಿಕೆ ಸಜ್ಜಾಗಿದೆ. ಅರುಣ್ ಕುಟುಂಬದವರು ತುಂಬ ಒಳ್ಳೆಯವರು. ಅರುಣ್ ಕೂಡ ಅದ್ಭುತ ವ್ಯಕ್ತಿ. ನನ್ನ ತಾಯಿ ಹುಡುಕಿದ ಸಂಬಂಧ ಕೂಡಿ ಬಂದಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ಮಾನ್ವಿತಾ ತಿಳಿಸಿದ್ದಾರೆ. ಅಲ್ಲದೆ, ಸಂಗೀತ ಪ್ರೇಮಿಯಾಗಿರುವ ಮಾನ್ವಿತಾಗೆ ಮೈಸೂರು ಮೂಲದ ಮ್ಯೂಸಿಕ್ ಡೈರೆಕ್ಟರ್ ಆಗಿರುವ ಅರುಣ್ ಕುಮಾರ್ ಪತಿಯಾಗಿ ಸಿಗುತ್ತಿರುವುದು ಖುಷಿಯಿದೆ ಎಂದು ಮಾನ್ವಿತಾ ಮಾತನಾಡಿದ್ದಾರೆ.
ಮ್ಯೂಸಿಕ್ ಪ್ರೋಡ್ಯೂಸರ್ ಅರುಣ್ ಕುಮಾರ್ ಜೊತೆ ಮಾನ್ವಿತಾ ಮದುವೆ ಕೊಂಕಣಿ ಸಾಂಪ್ರದಾಯದಂತೆ ಮೇ 1ರಂದು ಚಿಕ್ಕಮಗಳೂರಿನ ಕಳಸದಲ್ಲಿ ನಡೆಯಲಿದೆ. ಹಳದಿ ಶಾಸ್ತ್ರವು ಏಪ್ರಿಲ್ 29ರಂದು ನಡೆಯಲಿದೆ ಮತ್ತು ಸಂಗೀತ್ ಶಾಸ್ತ್ರ ಮತ್ತು ಎಂಗೇಜ್‌ಮೆಂಟ್ ಏಪ್ರಿಲ್ 30ರಂದು ನಡೆಯಲಿದೆ. ಮದುವೆಗೆ ಸ್ಯಾಂಡಲ್ವುಡ್ ನಟ, ನಟಿಯರು ಭಾಗಿಯಾಗಲಿದ್ದಾರೆ.
ಟಗರು (Tagaru) ಪುಟ್ಟಿ ಮಾನ್ವಿತಾ ಕಾಮತ್ (Manvitha Kamath) ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಮ್ಯೂಸಿಕ್ ಪ್ರೋಡ್ಯೂಸರ್ ಅರುಣ್ ಕುಮಾರ್ (Arun Kumar) ಜೊತೆ ಮೇ 1ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅಷಕ್ಕೂ ಮಾನ್ವಿತಾ ಮದುವೆ ಆಗುತ್ತಿರುವ ವರ ಯಾರು?
ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನನ್ನೇ ಮಾನ್ವಿತಾ ಮದುವೆಯಾಗುತ್ತಿದ್ದಾರೆ. ನನ್ನ ಮದುವೆ ನೋಡೋದು ಅಮ್ಮನ ಕನಸಾಗಿತ್ತು. ಅದರಂತೆಯೇ ಮದುವೆ ನೆರವೇರುತ್ತಿದೆ ಎನ್ನುತ್ತಾರೆ ಮಾನ್ವಿತಾ. ನನ್ನ ಅಮ್ಮ ನನ್ನ ಮದುವೆ ಪ್ರೊಫೈಲ್ ಅನ್ನು ನಮ್ಮ ಸಮುದಾಯದ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಂಚಿಕೊಳ್ಳುತ್ತಿದ್ದರು. ಇದನ್ನೂ ಓದಿ:‘ಕಾಂತಾರ’ ಪ್ರೀಕ್ವೆಲ್ ಚಿತ್ರೀಕರಣಕ್ಕೆ 3 ದಿನವಷ್ಟೇ ಬಾಕಿ
ಆಗ ಅರುಣ್ ತಾಯಿಗೆ ನಮ್ಮ ತಾಯಿ ನಿಧನದ ಬಗ್ಗೆ ತಿಳಿದಿರಲಿಲ್ಲ. ಅವರು ನಮ್ಮನ್ನು ತಲುಪಲು ತುಂಬ ಪ್ರಯತ್ನಿಸಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಕೊನೆಗೆ ಅವರು ನನ್ನ ನಂಬರ್ ಪಡೆದುಕೊಂಡು ಕಾಂಟಾಕ್ಟ್ ಮಾಡಿದ್ದಾರೆ. ಈಗ ಇದೆಲ್ಲವೂ ಸಾಧ್ಯವಾಗಿದೆ ಎಂದು ಖುಷಿಯಿಂದ ಹೇಳಿದ್ದಾರೆ ಮಾನ್ವಿತಾ.
ಮದುವೆ ಸುದ್ದಿ ಸಂಭ್ರಮದ ನಡುವೆ ಮತ್ತೊಂದು ವಿಶೇಷ ಅಂದರೆ, ಮಾನ್ವಿತಾ ತಾಯಿ ಸುಜಾತಾ ಅವರ ಹುಟ್ಟುಹಬ್ಬ ಅಕ್ಟೋಬರ್ 14 ಅದೇ ದಿನ ಅರುಣ್ ಹುಟ್ಟುಹಬ್ಬವಂತೆ. ಇಲ್ಲಿಂದ ಪಾಸಿಟಿವ್ ಸೂಚನೆ ಸಿಕ್ಕಿದೆ. ಅಂದಹಾಗೆ, ನಿಧನಕ್ಕೂ ಮುನ್ನವೇ ಮಾನ್ವಿತಾ ಅವರ ತಾಯಿ ಸುಜಾತಾ ಅವರು ಅರುಣ್ ತಾಯಿಯೊಂದಿಗೆ ಮಾತನಾಡಿದ್ದರು.
ಮಾನ್ವಿತಾ ಮತ್ತು ಅವರ ಚಿಕ್ಕಮ್ಮ ಮೈಸೂರಿನಲ್ಲಿರುವ ಅರುಣ್ ಮನೆಗೆ ಭೇಟಿ ನೀಡಿದ್ದಾರೆ. ಅಲ್ಲಿಂದ ಮದುವೆ ಮಾತುಕತೆಯಾಗಿ ಈಗ ಮದುವೆಗೆ ವೇದಿಕೆ ಸಜ್ಜಾಗಿದೆ. ಅರುಣ್ ಕುಟುಂಬದವರು ತುಂಬ ಒಳ್ಳೆಯವರು. ಅರುಣ್ ಕೂಡ ಅದ್ಭುತ ವ್ಯಕ್ತಿ. ನನ್ನ ತಾಯಿ ಹುಡುಕಿದ ಸಂಬಂಧ ಕೂಡಿ ಬಂದಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ಮಾನ್ವಿತಾ ತಿಳಿಸಿದ್ದಾರೆ. ಅಲ್ಲದೆ, ಸಂಗೀತ ಪ್ರೇಮಿಯಾಗಿರುವ ಮಾನ್ವಿತಾಗೆ ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಆಗಿರುವ ಅರುಣ್ ಕುಮಾರ್ ಪತಿಯಾಗಿ ಸಿಗುತ್ತಿರುವುದು ಖುಷಿಯಿದೆ ಎಂದು ಮಾನ್ವಿತಾ ಮಾತನಾಡಿದ್ದಾರೆ.
ಮ್ಯೂಸಿಕ್ ಪ್ರೋಡ್ಯೂಸರ್ ಅರುಣ್ ಕುಮಾರ್ ಜೊತೆ ನಟಿ ಮಾನ್ವಿತಾ ಮದುವೆ ಕೊಂಕಣಿ ಸಾಂಪ್ರದಾಯದಂತೆ ಮೇ 1ರಂದು ಮಂಗಳೂರಿನಲ್ಲಿ ನಡೆಯಲಿದೆ. ಹಳದಿ ಶಾಸ್ತ್ರವು ಏಪ್ರಿಲ್ 29ರಂದು ನಡೆಯಲಿದೆ ಮತ್ತು ಸಂಗೀತ್ ಶಾಸ್ತ್ರ ಮತ್ತು ಎಂಗೇಜ್‌ಮೆಂಟ್ ಏಪ್ರಿಲ್ 30ರಂದು ನಡೆಯಲಿದೆ. ಮದುವೆಗೆ ಸ್ಯಾಂಡಲ್ವುಡ್ ನಟ, ನಟಿಯರು ಭಾಗಿಯಾಗಲಿದ್ದಾರೆ. ಈಗಾಗಲೇ ಮದುವೆಯ ತಯಾರಿ ಭರದಿಂದ ನಡೆಯುತ್ತಿದೆ.
ಕನ್ನಡದ ಮತ್ತೋರ್ವ ನಟಿ ಹೊಸ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಕೆಂಡ ಸಂಪಿಗೆ ಸಿನಿಮಾ ಮೂಲಕ ಚಿತ್ರೋದ್ಯಮಕ್ಕೆ ಕಾಲಿಟ್ಟ ಮಾನ್ವಿತಾ ಕಾಮತ್ (Manvita Kamat) ಮೇ 1ರಂದು ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ ಕುರಿತಾದ ಡಿಜಿಟೆಲ್ ಆಮಂತ್ರಣ ಪತ್ರಿಕೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಅವರು ಅಪ್ ಲೋಡ್ ಮಾಡಿದ್ದಾರೆ.
ಅರುಣ್ ಎನ್ನುವವರ ಜೊತೆ ಮಾನ್ವಿತಾ ಮದುವೆ ಆಗುತ್ತಿದ್ದು, ಮೈಸೂರು ಮೂಲದ ಅರುಣ್ ಸಿನಿಮಾ ರಂಗಕ್ಕೆ ಹತ್ತಿರದವರೇ ಎಂದು ಹೇಳಲಾಗುತ್ತಿದೆ. ಏಪ್ರಿಲ್ 30ಕ್ಕೆ ಅರಿಶಿನ ಶಾಸ್ತ್ರ ಮತ್ತು ಮೇ 1ಕ್ಕೆ ಮದುವೆ ನಡೆಯಲಿದೆ.
ಆರ್.ಜೆಯಾಗಿ ವೃತ್ತಿಯನ್ನು ಆರಂಭಿಸಿದ್ದ ಮಾನ್ವಿತಾ ಆನಂತರ ಸಿನಿಮಾ ರಂಗಕ್ಕೆ ಬಂದರು. ಸೂರಿ ನಿರ್ದೇಶನದ ಕೆಂಡ ಸಂಪಿಗೆ ಸಿನಿಮಾ ಅವರಿಗೆ ಹೆಸರು ತಂದುಕೊಟ್ಟಿತು. ಆನಂತರ ಟಗರು ಸಿನಿಮಾದ ಮೂಲಕ ಸಾಕಷ್ಟು ಜನಕ್ಕೆ ಪರಿಚಯವಾದರು. ಅಲ್ಲಿಂದ ಟಗರು ಪುಟ್ಟಿ ಎಂದೇ ಫೇಮಸ್ ಆದರು ಮಾನ್ವಿತಾ.
ಗೊಂಬೆಗಳ ಲವ್ ಸಿನಿಮಾ ಖ್ಯಾತಿಯ ಅರುಣ್ ಕುಮಾರ್ (Arun Kumar) ಮರಿ ಟೈಗರ್ ವಿನೋದ್ ಪ್ರಭಾಕರ್ (Vinod Prabhakar) ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಇವರಿಬ್ಬರ ಕಾಂಬಿನೇಷನ್ ನೆಲ್ಸನ್ ಸಿನಿಮಾದ ಟೀಸರ್ ಧೂಳ್ ಎಬ್ಬಿಸಿದೆ. ಇದೀಗ ಚಿತ್ರತಂಡದಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ನೆಲ್ಸನ್ ಗೆ ನಾಯಕಿ ಸಿಕ್ಕಿದ್ದಾಳೆ. ಮಾಸ್ ಮರಿ ಟೈಗರ್ ವಿನೋದ್ ಗೆ ಜೋಡಿಯಾಗಿ ಶ್ವೇತಾ ಡಿಸೋಜಾ ನಟಿಸಲಿದ್ದಾರೆ.
ಕರಾವಳಿಯ ಚೆಲುವೆ ಶ್ವೇತಾ ಡಿಸೋಜಾ (Shweta D’Souza) ನೆಲ್ಸನ್ ಬಳಗ ಸೇರಿಕೊಂಡಿದ್ದಾರೆ. ಹಿಂದಿ ಸಿನಿಮಾ Y ಮೂಲಕ ಸಿನಿಮಾ ಜರ್ನಿ ಆರಂಭಿಸಿದ್ದ ಈ ಸುಂದರಿ ಖಾಸಗಿ ಪುಟಗಳು ಹಾಗೂ ಹೆಜ್ಜಾರು ಚಿತ್ರದಲ್ಲಿ ನಟಿಸಿದ್ದಾರೆ. ಹೆಜ್ಜಾರು ಸಿನಿಮಾಗಾಗಿ ಕಾಯ್ತಿರುವ ಶ್ವೇತಾ, ಈಗ ನೆಲ್ಸನ್ ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
1960-90ರ ದಶಕದಲ್ಲಿ ಚಾಮರಾಜನಗರದಲ್ಲಿ ನಡೆಯುವ ನೈಜ ಘಟನೆಯಾಧಾರಿತ ಚಿತ್ರ ನೆಲ್ಸನ್. ಗ್ಯಾಂಗ್ ಸ್ಟರ್ ಕಥಾಹಂದರ ಹೊಂದಿದ್ದು, ವಿನೋದ್ ಪ್ರಭಾಕರ್ ಹಿಂದೆಂದೂ ಕಾಣದ ಅವತಾರದಲ್ಲಿ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾದಲ್ಲಿ ನಿಮಗೆ ಕಾಣಸಿಗ್ತಾರೆ.
ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅರುಣ್ ಕುಮಾರ್ ನೆಲ್ಸನ್ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಅರುಣ್ ಮೊದಲ ಕನಸಿಗೆ ದೀಪ ಫಿಲ್ಮ್ಸ್ ಬ್ಯಾನರ್ ನಲ್ಲಿ ಬಿ.ಎಮ್ ಶ್ರೀರಾಮ್ (ಕೋಲಾರ) ಹಣ ಹಾಕಿದ್ದಾರೆ. ಪ್ರಜ್ವಲ್ ಗೌಡ ಛಾಯಾಗ್ರಹಣ ಮತ್ತು ಭರತ್ ಬಿಜಿ ಸಂಗೀತ, ವಿಜಯ್ ರಾಜ್ ಸಂಕಲನ, ಹರಿ ಸಂಭಾಷಣೆ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾಗಿದೆ.
ಗೊಂಬೆಗಳ ಲವ್ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಭರವಸೆ ಮೂಡಿಸಿದ್ದ ನಟ ಅರುಣ್ ಕುಮಾರ್ (Arun Kumar) ಈಗ ನಿರ್ದೇಶನಕ್ಕಿಳಿದಿದ್ದಾರೆ. ಅವರ ಚೊಚ್ಚಲ ಹೆಜ್ಜೆಗೆ ‘ನೆಲ್ಸನ್’ (Nelson) ಎಂಬ ಶೀರ್ಷಿಕೆ ಇಡಲಾಗಿದ್ದು, ರಕ್ತದಲ್ಲಿ ನೆಂದ ದೇವರಕಾಡು ಎಂಬ ಅಡಿ ಬರಹ ಚಿತ್ರದ ಸಾರಂಶವನ್ನು ವಿವರಿಸ್ತಿದೆ. ಟೀಸರ್ ರಿಲೀಸ್ ಆಗಿದ್ದು, ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಸಖತ್ ಮಾಸ್ ಆಗಿ ಮೂಡಿಬಂದಿರುವ ನೆಲ್ಸನ್ ಟೀಸರ್ ನಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್ (Vinod Prabhakar) ಆಂಗ್ರಿ ಯಂಗ್ ಮ್ಯಾನ್ ಅವತಾರದಲ್ಲಿ ಅಬ್ಬರಿಸಿದ್ದಾರೆ. ಇಂದು ಎಂಎಂ ಲೆಗಸಿಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರು ಟೀಸರ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.
ಉಪೇಂದ್ರ ಮಾತನಾಡಿ, ಟೈಗರ್ ಹವಾ ಆಗಲೂ ಇತ್ತು ಈಗಲೂ ಇರುತ್ತೇ.. ಮುಂದೆಯೂ ಇರುತ್ತದೆ. ನಿಮ್ಮ ತಂದೆ ಸಿನಿಮಾಗೆ ಡೈಲಾಗ್ ಬರೆದಿದ್ದೆ. ಇವತ್ತು ನಿಮ್ಮ ಟೀಸರ್ ಲಾಂಚ್ ಮಾಡಲು ನಿಮ್ಮ ತಂದೆ ಆಶೀರ್ವಾದ ಮಾಡಿದ್ದಾರೆ. ಟೀಸರ್ ಬಗ್ಗೆ ಏನೂ ಹೇಳೋದು. ಎಲ್ಲವೂ ಎಕ್ಸ್ಟ್ರಾಡಿನರಿಯಾಗಿದೆ. ಮೇಕಿಂಗ್, ಗೆಟಪ್ ಸೂಪರ್. ಸಬ್ಜೆಕ್ಟ್ ಬೇರೆ ತರ ಇದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ. ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಲಿದೆ ಎಂದರು. ನಟ ವಿನೋದ್ ಪ್ರಭಾಕರ್ ಮಾತನಾಡಿ, ಉಪೇಂದ್ರ (Upendra) ಅಣ್ಣ ಟೀಸರ್ (Teaser) ನೋಡಿ ತುಂಬಾ ಖುಷಿಪಟ್ಟರು. ದರ್ಶನ್ ಸರ್ ಕೂಡ ಟೀಸರ್ ನೋಡಿದರು. ಈ ತರಹದ ಒಂದು ಸಿನಿಮಾ ಮಾಡಲು ಧೈರ್ಯ ಬೇಕು. ಶ್ರೀರಾಮ್ ಸರ್ ನಿಮಗೆ ಧನ್ಯವಾದ. ನಿಮ್ಮ ಮೇಲೆ ನಮಗೆ ಕಾನ್ಫಿಡೆನ್ಸ್ ಇದೆ. ಅರುಣ್ ಕುಮಾರ್ ಅವರು ಬಹಳಷ್ಟು ಫ್ಯಾಷನ್ ಇರುವ ವ್ಯಕ್ತಿ. ಭರತ್ ಸರ್ ವಂಡರ್ ಫುಲ್ ಮ್ಯೂಸಿಕ್. ಸಿನಿಮಾ ಬಗ್ಗೆ ಮುಂದೆ ಮಾತಾಡ್ತೀನಿ. ತೆರೆಹಿಂದೆ ಬಹಳಷ್ಟು ಜನ ಕೆಲಸ ಮಾಡಿದ್ದೀರಿ ಎಂದರು.
ನಿರ್ದೇಶಕ ಅರುಣ್ ಕುಮಾರ್ ಮಾತನಾಡಿ, ಲಾಕ್ ಡೌನ್ ಆದ್ಮೇಲೆ ಹಸಿವು, ಅಸಹಾಯಕ ಸಮಯದಲ್ಲಿ ನೆಲ್ಸನ್ ಹುಟ್ಟಿಕೊಂಡಿದ್ದು. ಬರೆಯುತ್ತಾ, ಬರೆಯುತ್ತಾ ತುಂಬಾ ಚೆನ್ನಾಗಿ ಕಥೆ ಬೆಳೆಯಿತು. ಮಲಯಾಳಂ, ತಮಿಳು ಇಂಡಸ್ಟ್ರೀಗೆ ಕಥೆ ತೆಗೆದುಕೊಂಡು. ಆದರೆ ನನಗೆ ತೃಪ್ತಿಯಾಗಲಿಲ್ಲ. ಇಲ್ಲೇ ಏನಾದರೂ ಆಗಬೇಕು ಅದಕ್ಕೆ ಬಂದೆ. ಸ್ನೇಹಿತರ ಮೂಲಕ ನಿರ್ಮಾಪಕರು ಸಿಕ್ಕಿದರು. ನಂಬಿಕೆ ಹುಟ್ಟಿಕೊಳ್ತು. ಇದುವರೆಗೆ ನನ್ನ ನಂಬಿದ್ದು ಶ್ರೀರಾಮ್ ಸರ್. ನಾನು ಟೀಂ ನನ್ನ ಬೆನ್ನೆಲುಬು ಆಗಿ ನಿಂತರು. ಸಿನಿಮಾ ಈ ಹಂತಕ್ಕೆ ಬರಲು ನನ್ನ ಟೆಕ್ನಿಕಲ್ ಟೀಂ ಬೆಂಬಲವಿದೆ. ವಿನೋದ್ ಸರ್ ಡೆಡಿಕೇಷನ್ ನೋಡಿ ಭಯ ಆಯಿತು. ವಿನೋದ್ ಸರ್ ಸಪೋರ್ಟ್ ತುಂಬಾ ದೊಡ್ಡದಿದೆ. 60 ರಿಂದ 90 ಒಳಗಡೆ ಚಾಮರಾಜನಗರದಲ್ಲಿ ನಡೆಯುವ ಕಥೆ ಇದು. ಸ್ಕ್ರೀನ್ ಪ್ಲೇ, ಕಥೆ ತುಂಬಾ ಸ್ಟ್ರಾಂಗ್ ಆಗಿದೆ ಎಂದರು.
ನಿರ್ಮಾಪಕ ಬಿ.ಎಂ.ಶ್ರೀರಾಮ್ (ಕೋಲಾರ) ಮಾತನಾಡಿ, ಉಪ್ಪಿ ಕಾರ್ಯಕ್ರಮಕ್ಕೆ ಬಂದಿದ್ದು ಬಹಳ ಖುಷಿ ಆಯ್ತು. ನಾವು ತುಂಬ ಬಡತನದಿಂದ ಮೇಲೆ ಬಂದವರು. ನಾವು ಈ ಮಟ್ಟದಲ್ಲಿ ಬೆಳೆಯಲು ಐದು ಜನರನ್ನು ಸ್ಫೂರ್ತಿಯಾಗಿ ತೆಗೆದುಕೊಂಡೆ. ಅದರಲ್ಲಿ ಉಪ್ಪಿ ಸರ್ ಕೂಡ ಒಬ್ಬರು. ತಂದೆ ತಾಯಿ ಆಶೀರ್ವಾದ ಮಾರ್ಗದರ್ಶನದಿಂದ ಈ ಮಟ್ಟಕ್ಕೆ ಇದ್ದೀವಿ. ಅರುಣ್ ಅವರನ್ನು ನನ್ನ ಸ್ನೇಹಿತರು ರೆಫರ್ ಮಾಡಿದ್ದರು. ಇದು ಚಾಮರಾಜನಗ ಆಚಾರ,ವಿಚಾರ ಅಂಶಗಳು ಇರುವುದರಿಂದ ಕಥೆ ಒಪ್ಪಿಕೊಂಡೆ. ವಿನೋದ್ ಸರ್ ಅಪ್ರೋಚ್ ಮಾಡಿದ್ವಿ. ಕಥೆ ಹೇಳಿದ್ವಿ ಒಪ್ಪಿಕೊಂಡರು. ಟೀಸರ್ ಮಾಡಿದ್ಮೇಲೆ ಅರುಣ್ ಟೀ ಮೇಲೆ ಭರವಸೆ ಹೆಚ್ಚಾಯ್ತು ಎಂದರು.
‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ನೈಜ ಘಟನೆಯ ಕಥಾಹಂದರದ ಸಿನಿಮಾ. ಚಾಮರಾಜನಗರ ಜಿಲ್ಲೆಯಲ್ಲಿ 60ರಿಂದ 90ರ ದಶಕದಲ್ಲಿ ನಡೆಯುವ ಗ್ಯಾಗ್‌ಸ್ಟರ್ ಕಥೆ. ಅಲ್ಲಿನ ಭಾಷೆ, ಸಂಸ್ಕೃತಿ, ನೆಲ, ಜಲ, ಬುಡಕಟ್ಟು ಜನಾಂಗದ ಸಂಘರ್ಷ ಸೇರಿದಂತೆ ಒಂದಷ್ಟು ಅಂಶಗಳನ್ನು ಈ ಚಿತ್ರದಲ್ಲಿ ಅರುಣ್ ಕಟ್ಟಿಕೊಡಲಿದ್ದಾರೆ. ವಿಶೇಷ ಅಂದರೆ ವಿನೋದ್ ಪ್ರಭಾಕರ್ ಹಿಂದೆಂದೂ ಕಾಣದ ಅವತಾರದಲ್ಲಿ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾದಲ್ಲಿ ನಿಮಗೆ ಕಾಣಸಿಗ್ತಾರೆ. ಬಹಳ ಇಂಪ್ರೆಸ್ ಎನಿಸುವ ಟೀಸರ್ ಝಲಕ್ ನಲ್ಲಿ ಛಾಯಾಗ್ರಹಣ ಹಾಗೂ ಸಂಗೀತವೂ ಗಮನಸೆಳೆಯುತ್ತಿದೆ.
ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಅರುಣ್ ಕುಮಾರ್ ಆ ಎಲ್ಲಾ ಕಲೆಯನ್ನು ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಚಿತ್ರಕ್ಕೆ ಧಾರೆ ಎರೆದಿದ್ದಾರೆ. ಅವರ ಮೊದಲ ಕನಸಿಗೆ ದೀಪ ಫಿಲ್ಮ್ಸ್ ಬ್ಯಾನರ್ ನಲ್ಲಿ ಬಿ.ಎಮ್ ಶ್ರೀರಾಮ್ (ಕೋಲಾರ) ಹಣ ಹಾಕಿದ್ದಾರೆ. ಪ್ರಜ್ವಲ್ ಗೌಡ ಛಾಯಾಗ್ರಹಣ ಮತ್ತು ಭರತ್ ಬಿಜಿ ಸಂಗೀತ, ವಿಜಯ್ ರಾಜ್ ಸಂಕಲನ, ಹರಿ ಸಂಭಾಷಣೆ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾಗಿದೆ. ಆಕ್ಷನ್ ಟೀಸರ್ ಧಮಾಕ ಎಬ್ಬಿಸಿರುವ ಚಿತ್ರತಂಡ ನವೆಂಬರ್ ತಿಂಗಳಿಂದ ಶೂಟಿಂಗ್ ಅಖಾಡಕ್ಕೆ ಧುಮುಕಲಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ 2 ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಾಲ್ಕು ದಿನಗಳ ಕಾಲ ರಜೆ ಇರುವ ಕಾರಣದಿಂದಾಗಿ ಬಹುತೇಕ ಕಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಅಲ್ಲದೇ, ಒಂದು ವಾರದ ಟಿಕೆಟ್ ಗಳು ಕೂಡ ಸೋಲ್ಡೌಟ್ ಆಗಿವೆ. ಈ ನಡುವೆ ಕೆಲ ಅಚ್ಚರಿಯ ಸಂಗತಿಗಳು ನಡೆದಿವೆ. ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್ : ರಿಲೀಸ್ ಹಿಂದಿನ ಪಕ್ಕಾ ಲೆಕ್ಕಾಚಾರ, ಆರ್.ಆರ್.ಆರ್ ದಾಖಲೆ ಮುರಿದ ಕೆಜಿಎಫ್ 2
ಚಿತ್ರ ತಂಡದ ಕೆಲ ಕಲಾವಿದರು ಮಧ್ಯೆ ರಾತ್ರಿಯೇ ಕೆಜಿಎಫ್ ಸಿನಿಮಾ ವೀಕ್ಷಿಸಿದ್ದಾರೆ. ಬೆಂಗಳೂರಿನ ಊರ್ವಶಿ ಥಿಯೇಟರ್ ಗೆ ಆಗಮಿಸಿದ್ದ ಶ್ರೀನಿಧಿ ಶೆಟ್ಟಿ, ಅವಿನಾಶ್, ಗರುಡ, ಮೇಘನಾ ಮತ್ತಿತರು ಅಭಿಮಾನಿಗಳ ಮಧ್ಯೆ ಕೂತು ಸಿನಿಮಾ ನೋಡಿದ್ದಾರೆ. ಅಲ್ಲದೇ, ಡಾ.ರಾಜ್ ಕುಟುಂಬದ ಕುಡಿಗಳಾದ ಯುವರಾಜ್ ಕುಮಾರ್ ಮತ್ತು ವಿನಯ್ ರಾಜ್ ಕುಮಾರ್ ಕೂಡ ಮಧ್ಯೆ ರಾತ್ರಿಯೇ ಚಿತ್ರವನ್ನು ವೀಕ್ಷಿಸಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 ಜೊತೆ ನೋಡಬಹುದು ಹೊಂಬಾಳೆ ಫಿಲ್ಮ್ಸ್ ನ ಮತ್ತೆರಡು ಸಿನಿಮಾ ಟೀಸರ್
ಅಷ್ಟೇ ಅಲ್ಲದೇ, ನಿರ್ದೇಶಕರುಗಳಾದ ಪವನ್ ಒಡೆಯರ್, ಮಹೇಶ್ ಕುಮಾರ್, ಸುನಿ, ರಿಷಭ್ ಶೆಟ್ಟಿ ಸೇರಿದಂತೆ ಸಾಕಷ್ಟು ತಂತ್ರಜ್ಞರು ಕೂಡ ರಾತ್ರಿಯೇ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಕೂಡ ಸಿನಿಮಾ ಮೆಚ್ಚಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಈ ರೀತಿಯಾಗಿ ಸೆಲೆಬ್ರಿಟಿಗಳು, ನಾನಾ ಕ್ಷೇತ್ರದ ಗಣ್ಯರು ಕೂಡ ಸಿನಿಮಾ ನೋಡಿ, ಮೆಚ್ಚಿ ಮಾತನಾಡಿದ್ದಾರೆ. ಹಾಗೆಯೇ ಯಶ್ ತಂದೆ ಅರುಣ್ ಕುಮಾರ್ ಕೂಡ ಸಿನಿಮಾ ನೋಡಲು ಹಾಸನದಲ್ಲಿರುವ ಎಸ್.ಬಿ.ಜಿ ಥಿಯೇಟರ್ ಆಗಮಿಸಿದ್ದರು. ಯಶ್ ತಂದೆ ಇದೀಗ ಹಾಸನ ಸಮೀಪದಲ್ಲಿ ತೋಟ ಮಾಡಿಕೊಂಡು ಅಲ್ಲಿಯೇ ವಾಸವಿದ್ದಾರೆ. ಹಾಗಾಗಿ ಹಾಸನಕ್ಕೆ ಬಂದು, ಅಭಿಮಾನಿಗಳ ಜತೆ ಸಿನಿಮಾ ನೋಡಿದ್ದಾರೆ.
ಸ್ಯಾಂಡಲ್ವುಡ್ ಕ್ಯೂಟ್ ಕಪಲ್‍ಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಕೂಡ ಒಬ್ಬರು. ಮದುವೆಯಾದ ಬಳಿಕ ಸಿನಿಮಾರಂಗದಿಂದ ದೂರ ಉಳಿದಿರುವ ರಾಧಿಕಾ ಪಂಡಿತ್ ಸದ್ಯ ಮಕ್ಕಳ ಪಾಲನೆ, ಪೋಷಣೆಯಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಸಂಸಾದ ಜವಾಬ್ದಾರಿಯನ್ನು ಬಹಳ ಅಚ್ಚುಕಟ್ಟಾಗಿ ನಿಭಾಯಿಸುತ್ತಿರುವ ಸೊಸೆ ರಾಧಿಕಾ ಪಂಡಿತ್ ಬಗ್ಗೆ ಯಶ್ ತಂದೆ ಅರುಣ್ ಕುಮಾರ್ ಹಾಗೂ ತಾಯಿ ಪುಷ್ಪ ಹಾಡಿ ಹೊಗಳಿದ್ದಾರೆ.
ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ನಮ್ಮ ಮನೆಗೆ ಮೊದಲಿಂದಲೂ ಬಂದು ಹೋಗುತ್ತಿದ್ದರಿಂದ ರಾಧಿಕಾ ನಮಗೆ ತುಂಬಾ ಇಷ್ಟ. ಯಶ್ ಹಾಗೂ ರಾಧಿಕಾ ಇಬ್ಬರೂ ಯಾವಾಗಲೂ ಸ್ನೇಹಿತರಂತೆ ಇರುತ್ತಾರೆ. ರಾಧಿಕಾ ಕೂಡ ಬಹಳ ಹೊಂದಿಕೊಂಡು ಹೋಗುವಂತಹ ಹುಡುಗಿ, ನಮ್ಮ ಮಗಳು ನಂದಿನಿಗಿಂತ ರಾಧಿಕಾ ಬಹಳ ಸಾಫ್ಟ್ ಸ್ವಭಾವದವರಾಗಿದ್ದಾರೆ.
ಯಶ್ ಮುದ್ದೆ, ರೊಟ್ಟಿ ತಿನ್ನುತ್ತಾನೆ. ಹಾಗಾಗಿ ರಾಧಿಕಾಗೆ ಮುದ್ದೆ ಮಾಡಲು ಬರುವುದಿಲ್ಲ ಆದರೂ ಗಂಡನಿಗೋಸ್ಕರ ಈಗ ಮಾಡಲು ಕಲಿತುಕೊಂಡಿದ್ದಾರೆ. ಯಶ್ ತಂದೆ ಹಾಗೂ ರಾಧಿಕಾ ಇಬ್ಬರೂ ಬಹಳ ಸಾಫ್ಟ್ ನೇಚರ್ ಹೊಂದಿದ್ದಾರೆ. ಹೀಗಾಗಿ ಮನೆಗೆ ಹೋದಾಗಲೆಲ್ಲಾ ರಾಧಿಕಾ ಮಾವನ ಬಗ್ಗೆ ಬಹಳ ಕಾಳಜಿ ವಹಿಸುತ್ತಾರೆ ಎಂದು ಸೊಸೆಯನ್ನು ಕೊಂಡಾಡಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳ ಎದೆಬಡಿತ ಹೆಚ್ಚಿಸಿದ ಕೆಜಿಎಫ್ 2 ‘ಸುಲ್ತಾನ್’ ಸಾಂಗ್
ಇದೇ ವೇಳೆ ಐರಾ, ಯಥರ್ವ್ ಬಗ್ಗೆ ಮಾತನಾಡಿದ ಅವರು, ಮನೆಗೆ ಹೋದಾಗ ಮೊಮ್ಮಕ್ಕಳು ನಮ್ಮ ಜೊತೆ ಮಾತನಾಡುವುದು, ಆಟ ಆಡುವುದು ಎಲ್ಲವನ್ನು ನೋಡಿದರೆ ಬಹಳ ಖುಷಿಯಾಗುತ್ತದೆ. ನಾವು ಏನಾದರೂ ತಿಂಡಿಯನ್ನು ತೆಗೆದುಕೊಂಡು ಹೋದಾಗ ತುಂಬಾ ಇಷ್ಟಪಟ್ಟು ತಿನ್ನುತ್ತಾರೆ. ಊರಿಗೆ ಬಂದಾಗ ಕೂಡ ತಾತನ ಜೊತೆ ಐರಾ ಸುತ್ತಾಡುತ್ತಾಳೆ ಎಂದಿದ್ದಾರೆ. ಇದನ್ನೂ ಓದಿ: ಎಲ್ಲೆಲ್ಲೂ ರಾಕಿಂಗ್ ಸ್ಟಾರ್ ಯಶ್ ಹವಾ- ಮಧ್ಯರಾತ್ರಿಯೇ ತೆರೆಗಪ್ಪಳಿಸಿದ KGF ಚಾಪ್ಟರ್-2
ವಿಜಯಪುರ: ಒಂದೆಡೆ ಮೊದಲ ಹಂತದ 5 ರಫೇಲ್ ಯುದ್ಧ ವಿಮಾನಗಳು ಭಾರತದಲ್ಲಿ ಲ್ಯಾಂಡ್ ಆಗುತ್ತಿರುವುದಕ್ಕೆ ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದರೆ, ಇನ್ನೊಂದೆಡೆ ವಿಜಯಪುರ ಸೈನಿಕ ಶಾಲೆಗೆ ಮತ್ತೊಂದು ಗರಿ ಬಂದಂತಾಗಿದೆ.
ಇತ್ತೀಚೆಗಷ್ಟೆ ಫ್ರಾನ್ಸ್ ನಿಂದ ಭಾರತೀಯ ಸೇನೆಗೆ ಸೇರ್ಪಡೆಯಾದ ರಫೇಲ್ ಜೆಟ್ ಗೆ ಪೈಲಟ್ ಆಗಿ ವಿಜಯಪುರ ಸೈನಿಕ ಶಾಲೆಯ ವಿದ್ಯಾರ್ಥಿ ಕಮಾಂಡರ್ ಆಯ್ಕೆಯಾಗಿದ್ದಾರೆ. ವಿವಿಧ ಸೈನಿಕ ಶಾಲೆಯ ನಾಲ್ವರು ಕಮಾಂಡರ್ ಗಳು ಪೈಲಟ್ ಆಗಿ ಆಯ್ಕೆ ಆಗಿದ್ದಾರೆ. ಇದರಲ್ಲಿ ವಿಜಯಪುರ ಸೈನಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅರುಣ್ ಕುಮಾರ್ ಸಹ ಆಯ್ಕೆಯಾಗಿದ್ದಾರೆ. ಮೂಲತಃ ಬಿಹಾರದವರಾದ ಅರುಣ್ ಕುಮಾರ್, ವಿಜಯಪುರ ಸೈನಿಕ ಶಾಲೆಯಲ್ಲಿ ಅಭ್ಯಾಸ ಮಾಡಿರುವುದು ಇದೀಗ ಸಂತಸದ ಸಂಗತಿಯಾಗಿದೆ. ಇದರಿಂದ ವಿಜಯಪುರದ ಸೈನಿಕ ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.
ಭಾರತೀಯ ವಾಯುಸೇನೆಯಲ್ಲಿ ವಿಂಗ್ ಕಮಾಂಡರ್ ಆಗಿದ್ದ ಅರುಣ್ ಕುಮಾರ್, 1995 ರಿಂದ 2001ರ ಬ್ಯಾಚ್‍ನ ವಿದ್ಯಾರ್ಥಿಯಾಗಿದ್ದು, ಜನವರಿ 2002ರಲ್ಲಿ ಎನ್‍ಡಿಎ(ನ್ಯಾಷನಲ್ ಡಿಫೆನ್ಸ್ ಆರ್ಮಿ) ಗೆ ಸೇರ್ಪಡೆಯಾಗಿ ಸೇವೆ ಸಲ್ಲಿಸಿದ್ದಾರೆ. ಅರುಣ್ ಕುಮಾರ್ ತಂದೆ ಎನ್.ಪ್ರಸಾದ್ ಸಹ ಭಾರತೀಯ ವಾಯು ಸೇನೆಯಲ್ಲಿ ವಾರಂಟ್ ಆಫೀಸರ್ ಆಗಿ ಸೇವೆ ಸಲ್ಲಿಸಿದ್ದಾರೆ. ಇದೀಗ ಅರುಣ್ ಕುಮಾರ್ ಸಾಧನೆಗೆ ಅವರ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ಹಬ್ಬದ ರೀತಿಯ ವಾತಾವರಣವೇ ನಿರ್ಮಾಣವಾಗಿದೆ.
ಈ ಕುರಿತು ಅರುಣ್ ಕುಮಾರ್ ಅವರ ಶಿಕ್ಷಕರು ಮಾತನಾಡಿದ್ದು, ವಿಜಯಪುರ ಸೈನಿಕ ಶಾಲೆಗೆ ಇದೊಂದು ಹೆಮ್ಮೆಯ ವಿಷಯ. ಇತ್ತೀಚೆಗಷ್ಟೆ ಫ್ರಾನ್ಸ್ ನಿಂದ ಭಾರತ ಸೇನೆಗೆ ಸೇರ್ಪಡೆಯಾದ ರಫೆಲ್ ಜೆಟ್ ಗೆ ವಿವಿಧ ಸೈನಿಕ ಶಾಲೆಯ ನಾಲ್ವರು ಕಮಾಂಡರ್ ಗಳು ಆಯ್ಕೆಯಾಗಿದ್ದಾರೆ. ಇದರಲ್ಲಿ ವಿಜಯಪುರದ ಸೈನಿಕ ಶಾಲೆಯಲ್ಲಿ ಕಲಿತಿದ್ದ ವಿದ್ಯಾರ್ಥಿ ಸಹ ಇರುವುದು ಸಂತಸ ತಂದಿದೆ. ಭಾರತೀಯ ವಾಯು ಸೇನೆಯಲ್ಲಿ ವಿಂಗ್ ಕಮಾಂಡರ್ ಆಗಿದ್ದ ಅರುಣ್ ಕುಮಾರ್ ಸಾಧನೆ ಮಹತ್ತರವಾದದ್ದು. ಸುಮಾರು 35 ವರ್ಷದ ಅರುಣ್ ಕುಮಾರ್ ವಿಜಯಪುರದ ಸೈನಿಕ ಶಾಲೆಯ 1995 ರಿಂದ 2001ರ ಬ್ಯಾಚ್ ವಿದ್ಯಾರ್ಥಿ. ಜನವರಿ 2002ರಲ್ಲಿ ಅವರು ಎನ್‍ಡಿಎ(ನ್ಯಾಷನಲ್ ಡಿಫೆನ್ಸ್ ಆರ್ಮಿ) ಗೆ ಸೇರ್ಪಡೆಯಾಗಿ ಸೇವೆ ಸಲ್ಲಿಸಿದ್ದಾರೆ. ಅರುಣ್ ಕುಮಾರ್ ತಂದೆ ಎನ್.ಪ್ರಸಾದ್ ಸಹ ಏರ್ ಫೋರ್ಸ್ ನಲ್ಲಿ ವಾರಂಟ್ ಆಫೀಸರ್ ಆಗಿ ಸೇವೆ ಸಲ್ಲಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ವಾಯು ಸೇನೆಗೆ ಬಲ ತುಂಬಬಲ್ಲ ಅತ್ಯಾಧುನಿಕ ಗೇಮ್ ಚೇಂಜರ್ ಯುದ್ಧ ವಿಮಾನ ರಫೇಲ್ ಭಾರತದಲ್ಲಿ ಲ್ಯಾಂಡ್ ಆಗಿದೆ. 5 ರಫೇಲ್ ವಿಮಾನಗಳು ಹರ್ಯಾಣದ ಅಂಬಾಲ ವಾಯುನೆಲೆಯಲ್ಲಿ ಮಧ್ಯಾಹ್ನ 3.10ರ ವೇಳೆಗೆ ಲ್ಯಾಂಡ್ ಆದವು. ಯುದ್ಧ ವಿಮಾನಗಳು ಆಗಮಿಸುವ ಹಿನ್ನೆಲೆ ಇವುಗಳ ಸ್ವಾಗತಕ್ಕೆ ಹರ್ಯಾಣದಲ್ಲಿರುವ ಅಂಬಾಲ ವಾಯುನೆಲೆ ಮೊದಲೇ ಸಜ್ಜುಗೊಂಡಿತ್ತು. ರಫೇಲ್ ಭಾರತದ ವಾಯುಸೀಮೆಯನ್ನು ಪ್ರವೇಶಿಸುತ್ತಿದ್ದಂತೆ ಎರಡು ಸುಖೋಯ್ ವಿಮಾನಗಳು ಸ್ವಾಗತಿಸಿ ಬೆಂಗಾವಲಾಗಿ ಅಂಬಾಲಕ್ಕೆ ಕರೆದುಕೊಂಡು ಬಂದವು.
ಕೊರೊನಾ ಇರುವುದರಿಂದ ಹಾಗೂ ಬಿಗಿ ಭದ್ರತೆ ಕೈಗೊಳ್ಳುವ ಉದ್ದೇಶದಿಂದ ಅಂಬಾಲದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಅಂಬಾಲ ವಾಯುನೆಲೆಗೆ ಹೊಂದಿಕೊಂಡಿರುವ ನಾಲ್ಕು ಹಳ್ಳಿಗಳಲ್ಲಿ ಸೆಕ್ಷನ್ 144 ಜಾರಿಗೊಂಡಿದೆ.
ಭಾರತ ಫ್ರಾನ್ಸ್ ನ ಡಸಾಲ್ಟ್ ಸಂಸ್ಥೆ ಜೊತೆ ಒಟ್ಟು 36 ರಫೇಲ್ ಯುದ್ಧ ವಿಮಾನಗಳ ಖರೀದಿಸುವ ಸಂಬಂಧ ಒಪ್ಪಂದ ನಡೆದಿತ್ತು. ಇದೀಗ ಈ ಪೈಕಿ ಮೊದಲ ಬ್ಯಾಚ್‍ನ ಐದು ವಿಮಾನಗಳು ಸೋಮವಾರ ಫ್ರಾನ್ಸ್ ನಿಂದ ಟೇಕಾಫ್ ಆಗಿ ಮಂಗಳವಾರ ಯುಎಇಯಲ್ಲಿರುವ ದಫ್ರಾ ವಾಯುನೆಲೆಯಲ್ಲಿ ಲ್ಯಾಂಡ್ ಆಗಿದ್ದವು. ಅಲ್ಲಿಂದ ಹೊರಟ ವಿಮಾನ ಈಗ ಭಾರತದಲ್ಲಿ ಲ್ಯಾಂಡ್ ಆಗಿವೆ.
2016ರಲ್ಲಿ 59 ಸಾವಿರ ಕೋಟಿ ರೂ. ವೆಚ್ಚದಲ್ಲಿ 36 ರಫೇಲ್ ವಿಮಾನಗಳನ್ನು(28 ಸಿಂಗಲ್ ಸೀಟರ್, 8 ಡಬಲ್ ಸೀಟರ್) ಖರೀದಿಸುವ ಸಂಬಂಧ ಭಾರತ ಸರ್ಕಾರ ಫ್ರಾನ್ಸ್ ನ ಡಸಾಲ್ಟ್ ಕಂಪನಿಯ ಜೊತೆ ಸಹಿ ಹಾಕಿತ್ತು. ಒಪ್ಪಂದ ಪ್ರಕಾರ 2020ರ ಜುಲೈಯಲ್ಲಿ ಮೊದಲ ಬ್ಯಾಚ್ ವಿಮಾನಗಳು ಭಾರತಕ್ಕೆ ಬರಬೇಕು ಡೆಡ್‍ಲೈನ್ ವಿಧಿಸಲಾಗಿತ್ತು. ಈ ಡೆಡ್‍ಲೈನ್‍ಗೆ ಅನುಗುಣವಾಗಿ ಮೊದಲ ಬ್ಯಾಚ್‍ನ 10 ವಿಮಾನಗಳು ಈಗ ಪೂರ್ಣ ಪ್ರಮಾಣದಲ್ಲಿ ಹಸ್ತಾಂತರವಾಗುತ್ತಿವೆ. ಈ ಪೈಕಿ 5 ವಿಮಾನಗಳು ಭಾರತಕ್ಕೆ ಬರುತ್ತಿದ್ದರೆ ಉಳಿದ 5 ವಿಮಾನಗಳು ಫ್ರಾನ್ಸ್ ನಲ್ಲಿ ತರಬೇತಿ ನೀಡಲು ಬಳಕೆಯಾಗಲಿವೆ. ಎಲ್ಲ ವಿಮಾನಗಳು 2021ರ ಡಿಸೆಂಬರ್ ಕೊನೆಯಲ್ಲಿ ಭಾರತಕ್ಕೆ ಹಸ್ತಾಂತರವಾಗಲಿವೆ. ಇದನ್ನೂ ಓದಿ: ಕನಸು ನನಸು.. ಗೇಮ್ ಚೇಂಜರ್ ರಫೇಲ್ ಭಾರತದಲ್ಲಿ ಲ್ಯಾಂಡ್