ಇಟಾನಗರ: ಅರುಣಾಚಲ ಪ್ರದೇಶಕ್ಕೆ, ಅದರಲ್ಲೂ ಬಿಜೆಪಿಗೆ (BJP) ಇಂದು ಐತಿಹಾಸಿಕ ದಿನ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಹೊಸ ದಾಖಲೆ ನಿರ್ಮಿಸಿದೆ ಎಂದು ಸಿಎಂ ಪೆಮಾ (Pema Khandu) ಖಂಡು ಹೇಳಿದ್ದಾರೆ.
ಅರುಣಾಚಲ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ಬೆನ್ನಲ್ಲೇ ಮಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಹೊಸ ದಾಖಲೆ ನಿರ್ಮಿಸಿದೆ. 2019 ರಲ್ಲಿ ನಾವು 41 ಸ್ಥಾನಗಳನ್ನು ಗೆದ್ದಿದ್ದು, ಈ ಬಾರಿ ನಾವು 46 ಸ್ಥಾನಗಳನ್ನು ಗೆದ್ದಿದ್ದೇವೆ. ಈ ಮೂಲಕ ಹೊಸ ದಾಖಲೆ ನಿರ್ಮಿಸಿದ್ದೇವೆ ಎಂದು ತಿಳಿಸಿದರು.
ಜೂನ್ 4 ರಂದು ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಈ ವೇಳೆ ಗೆಲ್ಲುವ ಎಲ್ಲಾ ಅಭ್ಯರ್ಥಿಗಳು ಇಟಾನಗರಕ್ಕೆ ಆಗಮಿಸುತ್ತಾರೆ. ದೆಹಲಿಯ ಹಿರಿಯ ನಾಯಕರು ಕೂಡ ಬರಬಹುದು. ಪಕ್ಷದ ಔಪಚಾರಿಕತೆಯ ನಂತರ ನಾವು ಹೊಸ ಸರ್ಕಾರ ರಚಿಸಲು ನಮ್ಮ ಹಕ್ಕು ಮಂಡಿಸುತ್ತೇವೆ ಎಂದರು.
#WATCH | Itanagar: After BJP sweeps Arunachal Assembly elections, state's CM Pema Khandu says, "This is a historic day for Arunachal Pradesh, especially for the BJP. The party set a new record in these Assembly elections…There is pro-incumbency in BJP. In 2019, we won 41 seats… pic.twitter.com/qLPmyPk29t
ಬಿಜೆಪಿಯು ಅರುಣಾಚಲ ಪ್ರದೇಶದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಿದೆ. ಚುನಾವಣಾ ಆಯೋಗದ ಅಂಕಿ-ಅಂಶಗಳ ಪ್ರಕಾರ, 60 ಸದಸ್ಯರ ವಿಧಾನಸಭೆಯಲ್ಲಿ 46 ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷವು ಬಹುಮತವನ್ನು ಪಡೆದುಕೊಂಡಿತು. ಏಪ್ರಿಲ್ 19 ರಂದು ಈಶಾನ್ಯ ರಾಜ್ಯದಲ್ಲಿ ಚುನಾವಣೆ ನಡೆದ 50 ಸ್ಥಾನಗಳ ಮತ ಎಣಿಕೆ ಮುಕ್ತಾಯಗೊಂಡಿದೆ. ಉಳಿದ 10 ಸ್ಥಾನಗಳನ್ನು ಬಿಜೆಪಿಯು ಅವಿರೋಧವಾಗಿ ಗೆದ್ದಿದೆ. 50 ಸ್ಥಾನಗಳ ಪೈಕಿ ಬಿಜೆಪಿ 36 ವಿಧಾನಸಭಾ ಸ್ಥಾನಗಳನ್ನು ಗೆದ್ದಿದೆ.
ಅರುಣಾಚಲ ಪ್ರದೇಶದ 50 ವಿಧಾನಸಭಾ ಸ್ಥಾನಗಳ ಮತ ಎಣಿಕೆ ಇಂದು ಭಾರೀ ಭದ್ರತೆಯಲ್ಲಿ ಆರಂಭವಾಗಿದೆ. ಆಡಳಿತಾರೂಢ ಬಿಜೆಪಿ ಈಗಾಗಲೇ 10 ವಿಧಾನಸಭಾ ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿದೆ.
ರಾಜ್ಯದಾದ್ಯಂತ ಭಾರೀ ಮಳೆಯ ನಡುವೆ 24 ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 6 ಗಂಟೆಗೆ ಮತ ಎಣಿಕೆ ಆರಂಭಗೊಂಡಿದ್ದು, ಮಧ್ಯಾಹ್ನದ ವೇಳೆಗೆ ಅಂತಿಮ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ ಎಂದು ಮುಖ್ಯ ಚುನಾವಣಾಧಿಕಾರಿ (ಸಿಇಒ) ಪವನ್ ಕುಮಾರ್ ಸೇನ್ ತಿಳಿಸಿದ್ದಾರೆ. ಇದನ್ನೂ ಓದಿ: ಅಬ್ಕಿ ಬಾರ್ ಚಾರ್ ಸೌ ಪಾರ್ – ಎನ್‌ಡಿಎ 400ರ ಗಡಿ ದಾಟುತ್ತೆ ಎಂದ ಟುಡೇಸ್ ಚಾಣಕ್ಯ
ಖೋನ್ಸಾ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ವಂಗ್ಲಾಮ್ ಸವಿನ್ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಕಮ್ರಾಂಗ್ ತೇಸಿಯಾ ಅವರನ್ನು 2,216 ಮತಗಳ ಅಂತರದಿಂದ ಸೋಲಿಸಿದ್ದಾರೆ ಎಂದು ಭಾರತ ಚುನಾವಣಾ ಆಯೋಗ ತಿಳಿಸಿದೆ. ಸವಿನ್ ಅವರು ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಈ ಬಾರಿ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಏಪ್ರಿಲ್ 19 ರಂದು ಮೊದಲ ಹಂತದ ಚುನಾವಣೆಯಲ್ಲಿ ಅರುಣಾಚಲ ಪ್ರದೇಶದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆದವು. ಈಶಾನ್ಯ ರಾಜ್ಯವು 60 ವಿಧಾನಸಭಾ ಸ್ಥಾನಗಳನ್ನು ಮತ್ತು ಎರಡು ಲೋಕಸಭಾ ಸ್ಥಾನಗಳನ್ನು ಹೊಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಅಂದಾಜು 82.71 % ರಷ್ಟು ಮತದಾರರು ಮತ ಚಲಾಯಿಸಿದ್ದರೆ, ರಾಜ್ಯದ ಎರಡು ಲೋಕಸಭಾ ಸ್ಥಾನಗಳಿಗೆ 77.51 % ರಷ್ಟು ಮತದಾನವಾಗಿದೆ.
ಇಟಾನಗರ: ಅರುಣಾಚಲ ಪ್ರದೇಶದ (Arunachal Pradesh) ಮುಖ್ಯಮಂತ್ರಿ ಪೆಮಾ ಖಂಡು (CM Pema Khandu) ಸೇರಿದಂತೆ ಐವರು ಬಿಜೆಪಿ (BJP) ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್ ಇಂದು ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Arunachal Pradesh leads in showing the mood of the nation. On the last day of the nomination filing for the Assembly election, BJP has secured 5 candidates elected unopposed led by CM @PemaKhanduBJP ji from 3-Mukto Assembly Constituency.
The Land of Dawn-lit Mountains is eagerly waiting to see their beloved PM Shri @narendramodi Ji who always puts North East as first priority. This is why the #ModiKaParivar of Arunachal Pradesh wants a historic 3rd term for our Adarniya Pradhan Mantri Ji.
ಕೇಂದ್ರ ಸಚಿವ ಕಿರಣ್ ರಿಜಿಜು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ರಾಷ್ಟ್ರದ ಚಿತ್ತವನ್ನು ತೋರಿಸುವಲ್ಲಿ ಅರುಣಾಚಲ ಪ್ರದೇಶ ಮುಂದಿದೆ. ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕೊನೆಯ ದಿನ ಸಿಎಂ ನೇತೃತ್ವದಲ್ಲಿ ಬಿಜೆಪಿ 5 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಅಗಾಧ ಅಭಿವೃದ್ಧಿಯಾಗಿದೆ ಎಂದು ಬರೆದುಕೊಂಡಿದ್ದಾರೆ.
ಬೀಜಿಂಗ್: ಅರುಣಾಚಲ ಪ್ರದೇಶ (Arunachal Pradesh) ಚೀನಾದ (China) ಭಾಗ. ಆದರೆ ಭಾರತ ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂದು ಚೀನಾ ಪ್ರತಿಪಾದಿಸಿದೆ.
ಗಡಿ ರಾಜ್ಯವಾದ ಅರುಣಾಚಲ ಪ್ರದೇಶ ಭಾರತದ ನೈಸರ್ಗಿಕ ಭಾಗ. ಆ ರಾಜ್ಯದ ಮೇಲೆ ಚೀನಾ ಹಕ್ಕು ಸಾಧಿಸುವುದು ಅಸಂಬದ್ಧ ಎಂದು ಭಾರತ (India) ಪ್ರತಿಪಾದಿಸಿತ್ತು. ಎಸ್.ಜೈಶಂಕರ್ (Jaishankar) ಹೇಳಿಕೆಗೆ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲಿನ್ ಜಿಯಾನ್ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ನೀತಿ ಆಯೋಗದ ಮಾಜಿ ಉದ್ಯೋಗಿ ಲಂಡನ್‌ನಲ್ಲಿ ಅಪಘಾತಕ್ಕೆ ಬಲಿ
ಭಾರತ ಮತ್ತು ಚೀನಾ ನಡುವಿನ ಗಡಿಯನ್ನು ಎಂದಿಗೂ ಇತ್ಯರ್ಥಪಡಿಸಲಾಗಿಲ್ಲ. ಅರುಣಾಚಲ ಪ್ರದೇಶಕ್ಕೆ ಚೀನಾದ ಅಧಿಕೃತ ಹೆಸರು ಜಂಗ್ನಾನ್. ಭಾರತವು ಕಾನೂನುಬಾಹಿರವಾಗಿ ಆಕ್ರಮಿಸಿಕೊಂಡಿದೆ. ಅದು ಮೊದಲು ಚೀನಾದ ಭಾಗವಾಗಿತ್ತು ಎಂದು ಲಿನ್ ಹೇಳಿದ್ದಾರೆ.
ಚೀನಾವು ಈ ಪ್ರದೇಶದ ಮೇಲೆ ಪರಿಣಾಮಕಾರಿ ಆಡಳಿತವನ್ನು ಹೊಂದಿದೆ. ಇದು ನಿರ್ವಿವಾದದ ಸತ್ಯ. ಅಕ್ರಮವಾಗಿ ವಶಪಡಿಸಿಕೊಂಡ ಭೂಪ್ರದೇಶವನ್ನು ಭಾರತವು 1987 ರಲ್ಲಿ ಅರುಣಾಚಲ ಪ್ರದೇಶ ಎಂದು ಕರೆಯಿತು. ನಾವು ಅವರ ಕ್ರಮಗಳ ವಿರುದ್ಧ ಬಲವಾದ ಹೇಳಿಕೆಗಳನ್ನು ನೀಡಿದ್ದೇವೆ. ಅವರ ಕ್ರಮವು ನಿಷ್ಪರಿಣಾಮಕಾರಿಯಾಗಿದೆ ಎಂದು ಲಿನ್ ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಅನಾಗರಿಕ ಭಯೋತ್ಪಾದಕ ಕೃತ್ಯ: ಉಗ್ರರ ದಾಳಿಗೆ ಪುಟಿನ್ ಆಕ್ರೋಶ
ಅರುಣಾಚಲ ಪ್ರದೇಶದ ಮೇಲಿನ ಹಕ್ಕು ಕುರಿತು ಚೀನಾ ಈ ತಿಂಗಳಲ್ಲಿ ನಾಲ್ಕನೇ ಬಾರಿ ಮಾತನಾಡಿದೆ. ಮಾ.9 ರಂದು ಅರುಣಾಚಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಬಗ್ಗೆ ಭಾರತದೊಂದಿಗೆ ರಾಜತಾಂತ್ರಿಕ ಪ್ರತಿಭಟನೆ ಸಲ್ಲಿಸಿರುವುದಾಗಿ ಬೀಜಿಂಗ್ ಹೇಳಿತ್ತು.
ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್ ಎಂದು ಚೀನಾ ಪ್ರತಿಪಾದಿಸಿದೆ. ತನ್ನ ಹಕ್ಕುಗಳನ್ನು ಸಾಧಿಸಲು ಭಾರತೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡುವುದು ಸರಿಯಲ್ಲ ಎಂದು ವಿರೋಧಿಸಿದೆ. ಅರುಣಾಚಲ ಪ್ರದೇಶವು ಚೀನಾದ ಭಾಗವಾಗಿದೆ ಎಂದು ಚೀನಾದ ರಕ್ಷಣಾ ಸಚಿವರು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ರಷ್ಯಾದಲ್ಲಿ ಭೀಕರ ಭಯೋತ್ಪಾದಕ ದಾಳಿ ಪ್ರಕರಣ – 11 ಮಂದಿ ಬಂಧನ
ನವದೆಹಲಿ: ಲೋಕಸಭಾ ಚುನಾವಣೆ (Lok sabha Election) ಹಾಗೂ ಮತ ಎಣಿಕೆ (Vote Counting) ದಿನಾಂಕ ಘೋಷಣೆಯಾದ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗ (Election Commission Of India) ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ದಿನಾಂಕದಲ್ಲಿ ಬದಲಾವಣೆ ಮಾಡಿದೆ.
ಏಪ್ರಿಲ್ 19ರಿಂದ ಮತದಾನ ಆರಂಭವಾಗಲಿದ್ದು, ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಆದರೆ ಇದೀಗ ಅರುಣಾಚಲ (Arunachal Pradesh) ಹಾಗೂ ಸಿಕ್ಕಿಂ (Sikkim) ವಿಧಾನಸಭೆ ಚುನಾವಣೆಯ (Assembly Election) ಮತ ಎಣಿಕೆಯನ್ನು ಜೂ.4ರ ಬದಲು ಜೂ.2ರಂದು ನಡೆಸುವಂತೆ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಚುನಾವಣಾ ಬಾಂಡ್‌ಗಳ ಹೊಸ ದತ್ತಾಂಶ ರಿಲೀಸ್ – ಅತಿಹೆಚ್ಚು ದೇಣಿಗೆ ಪಡೆದ ಪಕ್ಷ ಯಾವುದು?
ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆಯ ಅವಧಿ ಜೂನ್ 2ರಂದು ಮುಕ್ತಾಯಗೊಳ್ಳುವ ಹಿನ್ನೆಲೆ ಈ ಮಹತ್ತರ ಬದಲಾವಣೆ ತರಲಾಗಿದೆ. ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆಗೆ ಏಪ್ರಿಲ್ 19ರಂದು ಒಂದೇ ಹಂತದ ಮತದಾನ ನಡೆಯಲಿದೆ. ಇನ್ನು ಅರುಣಾಚಲ ಮತ್ತು ಸಿಕ್ಕಿಂ ಲೋಕಸಭಾ ಕ್ಷೇತ್ರಗಳ ಫಲಿತಾಂಶ ದಿನಾಂಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಇದನ್ನೂ ಓದಿ: ಅಬಕಾರಿ ನೀತಿ ಹಗರಣ – ಇ.ಡಿಯಿಂದ ಕೇಜ್ರಿವಾಲ್‌ಗೆ 9ನೇ ಬಾರಿ ಸಮನ್ಸ್
ಇಟಾನಗರ: ಅರುಣಾಚಲ ಪ್ರದೇಶದಲ್ಲಿ (Arunachal Pradesh) ನಿರ್ಮಾಣಗೊಂಡ ವಿಶ್ವದ ಅತೀ ಉದ್ದದ ದ್ವಿಪಥ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ರಾಷ್ಟ್ರಕ್ಕೆ ಲೋಕಾರ್ಪಣೆ ಮಾಡಿದ್ದಾರೆ.
ಇಟಾನಗರದಲ್ಲಿ (Itanagar) ನಡೆದ ʼವಿಕಾಸಿತ ಭಾರತ ವಿಕಾಸಿತ ಈಶಾನ್ಯʼ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೋದಿ ಸೆಲಾ ಸುರಂಗವನ್ನು (Sela Tunnel) ಉದ್ಘಾಟಿಸಿದರು. ಈ ಸಮಯದಲ್ಲಿ 10 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆ ಮಾಡಿದರು.
ಚೀನಾಗೆ ಠಕ್ಕರ್ ಹೇಗೆ?
ಚೀನಾ ಗಡಿ (China Border) ಭಾಗದಲ್ಲಿ ವಿಶೇಷವಾಗಿ ಈಶಾನ್ಯ ಭಾಗದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗದ ಕಾರಣ ರಾಜ್ಯಗಳು ಹಿಂದುಳಿದಿತ್ತು. ಅಷ್ಟೇ ಅಲ್ಲದೇ ಗಡಿ ಭಾಗಕ್ಕೆ ಕ್ಷೀಪ್ರವಾಗಿ ಸೈನಿಕರನ್ನು ಕಳುಹಿಸುವುದು ಸವಾಲಿನ ಕೆಲಸವಾಗಿತ್ತು.
ಅರುಣಾಚಲ ಪ್ರದೇಶದಲ್ಲಿ ಚೀನಾ ಆಗಾಗ ಕ್ಯಾತೆ ತೆಗೆಯುತ್ತಿದ್ದ ಹಿನ್ನೆಲೆಯಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಮಾಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿತ್ತು. ಈ ಯೋಜನೆಯ ಭಾಗವಾಗಿ ಈ ಸೆಲಾ ಸುರಂಗವನ್ನು ನಿರ್ಮಾಣ ಮಾಡಲಾಗಿದೆ.
ಸುರಂಗ ಮಾರ್ಗದ ವಿಶೇಷತೆ ಏನು?
ತೇಜ್‌ಪುರದಿಂದ ತವಾಂಗ್‌ಗೆ ಸಂಪರ್ಕ ಕಲ್ಪಿಸುವ ಸೆಲಾ ಸುರಂಗವು 13,000 ಅಡಿ ಎತ್ತರದಲ್ಲಿ 825 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಗಡಿ ರಸ್ತೆಗಳ ಸಂಸ್ಥೆ (BRO) ನಿರ್ಮಾಣ ಮಾಡಿದ್ದು, ಒಂದು ಸುರಂಗ 1,003 ಮೀಟರ್ ಉದ್ದವಿದ್ದರೆ ಎರಡನೇ ಸುರಂಗ 1,595 ಮೀಟರ್ ಉದ್ದದ ಟ್ವಿನ್‌ಟ್ಯೂಬ್ ಹೊಂದಿದೆ. ಇದನ್ನೂ ಓದಿ: ನಾವು ತ್ಯಾಗ ಮಾಡಿ ಬಂದವರು, ಲೋಕಸಭಾ ಟಿಕೆಟ್ ನನಗೆ ಕೊಡ್ಬೇಕು: ಬಿ.ಸಿ ಪಾಟೀಲ್
ಈ ಯೋಜನೆಯೂ 8.6 ಕಿಮೀ ಉದ್ದದ ಎರಡು ರಸ್ತೆಗಳನ್ನು ಸಹ ಒಳಗೊಂಡಿದೆ. ಎರಡೂ ಸುರಂಗಗಳ ನಡುವೆ 1,200 ಮೀಟರ್ ಉದ್ದದ ಲಿಂಕ್ ರೋಡ್ ಕೂಡ ಇದೆ. ದಿನಕ್ಕೆ 3,000 ಕಾರುಗಳು ಮತ್ತು 2,000 ಟ್ರಕ್‌ಗಳು ಸಂಚರಿಸಬಹುದು ಎಂದು ಅಂದಾಜಿಸಲಾಗಿದೆ. ಸುರಂಗ ಮಾರ್ಗದಲ್ಲಿ ಗಂಟೆಗೆ 80 ಕಿ.ಮೀ ಗರಿಷ್ಠ ವೇಗದ ಮಿತಿಯನ್ನು ಹೇರಲಾಗಿದೆ.
PM @narendramodi dedicates #SelaTunnel to the nation, constructed at a cost of about Rs 825 crore, will provide all-weather connectivity to Tawang across Sela pass on the Balipara -Chariduar- Tawang Road in Arunachal Pradesh.
ಚೀನಾ ಗಡಿಯಲ್ಲಿರುವ ತವಾಂಗ್‌ಗೆ ಎಲ್ಲಾ ಹವಾಮಾನದಲ್ಲೂ ಈ ಸಂಪರ್ಕ ಕಲ್ಪಿಸಬಹುದಾಗಿದೆ. ಇದು ಭಾರತ-ಚೀನಾ ಮಧ್ಯೆ ಇರುವ ಗಡಿ ವಾಸ್ತವ ರೇಖೆ (ಎಲ್‍ಎಸಿ) ಬಳಿಯ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆ ಸೈನಿಕರನ್ನು ಕ್ಷಿಪ್ರವಾಗಿ ಕಳುಹಿಸಲು, ಸೇನೆಯ ಭಾರೀ ಗಾತ್ರದ ವಾಹನಗಳ ಸಂಚಾರ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಸಾಗಿಸಲು ನೆರವಾಗಲಿದೆ.
ಚಳಿಗಾಲದಲ್ಲಿ ಭಾರೀ ಹಿಮಪಾತ ಸಂಭವಿಸಿದಾಗ ಅರುಣಾಚಲ ಪ್ರದೇಶದ ಹಲವು ಮಾರ್ಗಗಳಲ್ಲಿ ಸಂಚಾರ ಬಂದ್ ಆಗುತ್ತದೆ. ಹಿಮಪಾತ ಮತ್ತು ಭಾರೀ ಮಳೆಯಿಂದ ಉಂಟಾದ ಭೂಕುಸಿತದಿಂದಾಗಿ ಬಲಿಪರಾ-ಚಾರಿದ್ವಾರ-ತವಾಂಗ್ ರಸ್ತೆಯು ವರ್ಷದ ದೀರ್ಘಾವಧಿಯವರೆಗೆ ಮುಚ್ಚಲ್ಪಟ್ಟಿರುವುದರಿಂದ ಸೆಲಾ ಪಾಸ್ ಬಳಿ ಸುರಂಗ ನಿರ್ಮಾಣದ ಅಗತ್ಯವಿತ್ತು.
ತೇಜ್‌ಪುರದಿಂದ ತವಾಂಗ್‌ಗೆ 90 ಕಿ.ಮೀ ದೂರವಿದ್ದು ಈಗ ಈ ಅಂತರ 12 ಕಿ.ಮೀ ಇಳಿಕೆಯಾಗಿದೆ. ಕನಿಷ್ಠ 1 ಗಂಟೆಯ ಪ್ರಯಾಣದ ಸಮಯ ಉಳಿತಾಯವಾಗಲಿದೆ.
ಫೆಬ್ರವರಿ 2019ರಲ್ಲಿ ಪ್ರಧಾನಿ ಮೋದಿ ಅವರು ಯೋಜನೆಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೇರವೇರಿಸಿದ್ದರು. ಕೋವಿಡ್ -19 ಸೇರಿದಂತೆ ವಿವಿಧ ಕಾರಣಗಳಿಂದಾಗಿ ಸುರಂಗ ನಿರ್ಮಾಣದ ಕೆಲಸ ವಿಳಂಬವಾಗಿತ್ತು.
ಹ್ಯಾಂಗ್‌ಜೂ: ಚೀನಾದ (China) ಹ್ಯಾಂಗ್‌ಜೂನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ (Asian Games) ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ತೆರಳಬೇಕಿದ್ದ ಅರುಣಾಚಲ ಪ್ರದೇಶದ ಮೂವರು ವೂಶೂ ಕ್ರೀಡಾಪಟುಗಳಿಗೆ ಚೀನಾ ಪ್ರವೇಶ ನಿರಾಕರಿಸಿದೆ.
10 ಆಟಗಾರರನ್ನೊಳಗೊಂಡ ತಂಡದಲ್ಲಿ ಮೂವರು ಮಹಿಳಾ ಆಟಗಾರರಿಗೆ ಪ್ರವೇಶ ನಿರಾಕರಿಸಿದ್ದು, ಉಳಿವರು ಹ್ಯಾಂಗ್‌ಜೂಗೆ ತೆರಳಿದ್ದಾರೆ. ವೂಶೂ ಕ್ರೀಡಾಪಟುಗಳಾದ ನೈಮನ್ ವಾಂಗ್ಸು, ಒನಿಲು ಟೆಗಾ ಮತ್ತು ಮೆಪುಂಗ್ ಲಾಮ್ಗು ಅವರ ಪ್ರವೇಶ ನಿರಾಕರಿಸಿದೆ. ಚೀನಾ ಅರುಣಾಚಲ ಪ್ರದೇಶದ (Arunachal Pradesh) ಕ್ರೀಡಾಪಟುಗಳಿಗೆ ಪ್ರವೇಶ ನಿರಾಕರಿಸಿದ ಬೆನ್ನಲ್ಲೇ ಮಾಹಿತಿ ಮತ್ತು ಪ್ರಸಾರ ಹಾಗೂ ಕ್ರೀಡಾ ಸಚಿವ ಅನುರಾಗ್ ಠಾಕೂರ್ (Anurag Thakur) ತಮ್ಮ ನಿಗದಿತ ಚೀನಾ ಪ್ರವಾಸವನ್ನ ರದ್ದುಗೊಳಿಸಿದ್ದಾರೆ. ಇದು ಪ್ರತಿಭಟನೆಯ ಸಂಕೇತವೆಂದೂ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ನೈಮನ್ ವಾಂಗ್ಸು, ಒನಿಲು ಟೆಗಾ ಮತ್ತು ಮೆಪುಂಗ್ ಲಾಮ್ಗು ಪ್ರವೇಶ ವೀಸಾವಾಗಿ ಕಾರ್ಯನಿರ್ವಹಿಸುವ ಹ್ಯಾಂಗ್‌ಜೂ ಏಷ್ಯನ್ ಗೇಮ್ಸ್ ಆರ್ಗನೈಸಿಂಗ್ ಕಮಿಟಿಯಿಂದ ತಮ್ಮ ಮಾನ್ಯತೆ ಕಾರ್ಡ್ಗಳನ್ನು ಪಡೆದಿದ್ದರು. ಈ ಮಾನ್ಯತಾ ಪತ್ರವನ್ನ ಪ್ರವೇಶ ವೀಸಾ ಎಂದು ಪರಿಗಣಿಸಲಾಗುತ್ತದೆ. ಅಥ್ಲೀಟ್‌ಗಳು ತಮ್ಮ ಪ್ರಯಾಣ ದಾಖಲೆಯನ್ನ ಡೌನ್‌ಲೋಡ್ ಮಾಡಿಕೊಳ್ಳಬೇಕಿತ್ತು. ಏಕೆಂದರೆ ಇದು ಆಟಗಾರರು ಆಗಮಿಸುವ ವೇಳೆ ದೃಢೀಕರಿಸಲಾಗುತ್ತದೆ. ಆದ್ರೆ ಬುಧವಾರ ಏಷ್ಯನ್ ಗೇಮ್ಸ್‌ಗೆ ತೆರಳಬೇಕಿದ್ದಾಗ ಅರುಣಾಚಲ ಪ್ರದೇಶದ ಮೂವರು ಆಟಗಾರರು ತಮ್ಮ ಪ್ರಯಾಣದ ದಾಖಲೆಗಳನ್ನ ಡೌನ್‌ಲೋಡ್ ಮಾಡಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಮೂವರಿಗೆ ಪ್ರವೇಶ ನಿಷೇಧ ಮಾಡಲಾಗಿದೆ ಎಂದು ತಿಳಿದುಬಂದಿದೆ. 10 ಆಟಗಾರರನ್ನೊಳಗೊಂಡ ತಂಡದಲ್ಲಿ ಉಳಿದ ಯಾವುದೇ ಆಟಗಾರರು ಮತ್ತು ಸಿಬ್ಬಂದಿಗೆ ಈ ಸಮಸ್ಯೆ ಎದುರಾಗಿಲ್ಲ.
ಈ ನಡುವೆ 19ನೇ ಏಷ್ಯನ್ ಗೇಮ್ಸ್ಗೆ ಕೆಲವು ಭಾರತೀಯ ಕ್ರೀಡಾಪಟುಗಳಿಗೆ ಪ್ರವೇಶ ನಿರಾಕರಿಸಲಾಗಿದೆ ಎನ್ನುವ ಬಗ್ಗೆ ಹಿರಿಯ ಭಾರತ ಸರ್ಕಾರದ ಅಧಿಕಾರಿ ಅರಿಂದಮ್ ಬಾಗ್ಚಿ ಪ್ರತಿಕ್ರಿಯಿಸಿದ್ದಾರೆ.
ಚೀನಾದ ಹಾಂಗ್‌ಜೂನಲ್ಲಿ ನಡೆಯುತ್ತಿರಯುವ 19ನೇ ಏಷ್ಯನ್ ಗೇಮ್ಸ್‌ಗೆ ಅರುಣಾಚಲ ಪ್ರದೇಶದ ಕೆಲವು ಭಾರತೀಯ ಕ್ರೀಡಾಪಟುಗಳಿಗೆ ಮಾನ್ಯತೆ ಮತ್ತು ಪ್ರವೇಶ ನಿರಾಕರಿಸುವ ಮೂಲಕ ಚೀನಾದ ಅಧಿಕಾರಿಗಳು ತಾರತಮ್ಯ ಮಾಡಿದ್ದಾರೆ ಎಂದು ಭಾರತ ಸರ್ಕಾರ ತಿಳಿದುಕೊಂಡಿದೆ. ವಾಸಸ್ಥಳ, ಜನಾಂಗೀಯತೆಯ ಆಧಾರದ ಮೇಲೆ ನಾಗರಿಕರನ್ನು ಭೇದ-ಭಾವದಿಂದ ನೋಡುವುದನ್ನ ದೃಢವಾಗಿ ತಿರಸ್ಕರಿಸುತ್ತದೆ. ಈ ಕುರಿತು ನವದೆಹಲಿ ಮತ್ತು ಬೀಜಿಂಗ್‌ನಲ್ಲೂ ಪ್ರತಿಭಟನೆ ದಾಖಲಿಸಲಾಗಿದೆ. ಇದನ್ನೂ ಓದಿ: ಮುಲ್ಲಾ, ಭಯೋತ್ಪಾದಕ – ಲೋಕಸಭೆಯಲ್ಲಿ ಡ್ಯಾನಿಶ್ ಅಲಿಗೆ ಬಿಜೆಪಿ ಸಂಸದನಿಂದ ನಿಂದನೆ
ಚೀನಾ ನಮ್ಮ ಕ್ರೀಡಾಪಟುಗಳಿಗೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿದೆ. ಚೀನಾದ ಈ ನಡೆಯು ಏಷ್ಯನ್ ಗೇಮ್ಸ್ನ ಉತ್ಸಾಹ ಹಾಗೂ ನಿಯಮವನ್ನೂ ಉಲ್ಲಂಘಿಸುತ್ತದೆ ಎಂದು ಭಾರತ ಅಸಮಾಧಾನ ಹೊರಹಾಕಿದೆ. ಅಲ್ಲದೇ ಮಾಹಿತಿ ಮತ್ತು ಪ್ರಸಾರ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಚೀನಾಕ್ಕೆ ತಮ್ಮ ನಿಗದಿತ ಭೇಟಿಯನ್ನ ರದ್ದುಗೊಳಿಸಿದ್ದಾರೆ. ಜೊತೆಗೆ ನಮ್ಮ ಹಿತಾಸಕ್ತಿಯನ್ನ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳುವು ಹಕ್ಕನ್ನು ಭಾರತ ಸರ್ಕಾರ ಹೊಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತ (India) ಹಾಗೂ ಚೀನಾದ (China) ಗಡಿಪ್ರದೇಶ ಅಕ್ಸಾಯ್ ಚಿನ್ ಪ್ರದೇಶ, ಅರುಣಾಚಲ ಪ್ರದೇಶ (Arunachal Pradesh), ತೈವಾನ್ ಮತ್ತು ದಕ್ಷಿಣ ಚೀನಾ ಸಮುದ್ರದಂತಹ ವಿವಾದಿತ ಪ್ರದೇಶಗಳನ್ನು ಒಳಗೊಂಡಿರುವ `ಸ್ಟ್ಯಾಂಡರ್ಡ್ ಮ್ಯಾಪ್’ನ 2023ರ ಆವೃತ್ತಿಯನ್ನು ಚೀನಾ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದರಲ್ಲಿ ಅರುಣಾಚಲ ಪ್ರದೇಶದ ಮೇಲೆ ತನ್ನ ಪ್ರಾದೇಶಿಕ ಹಕ್ಕುಗಳನ್ನು ಸ್ಥಾಪಿಸುವ ಪ್ರಯತ್ನವನ್ನು ಚೀನಾ ಮಾಡಿದೆ. ಈ ಮೂಲಕ ಗಡಿ ತಂಟೆಯನ್ನು ಮತ್ತೆ ಮುಂದುವರೆಸಿದೆ.
ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದ ಸುಮಾರು 6 ದಶಕಗಳಷ್ಟು ಹಳೆಯದು. ಅದನ್ನು ಪರಿಹರಿಸಲು ಭಾರತ ಪ್ರಯತ್ನಿಸುತ್ತಲೇ ಇದೆ. ಆದರೆ ಚೀನಾ ಅದನ್ನು ಪರಿಹರಿಸಲು ಎಂದಿಗೂ ಪ್ರಯತ್ನಿಸಿಲ್ಲ. ನಿಯಮಗಳನ್ನು ಚೀನಾ ಉಲ್ಲಂಘಿಸುತ್ತಾ ಶಾಂತಿಗೆ ಧಕ್ಕೆ ತರುವ ಕಾರ್ಯದಲ್ಲಿ ತೊಡಗಿದೆ. ಕೆಲವೊಮ್ಮೆ ಲಡಾಖ್‌ನಲ್ಲಿ, ಕೆಲವೊಮ್ಮೆ ಅಕ್ಸಾಯ್ ಚಿನ್‌ನಲ್ಲಿ, ಕೆಲವೊಮ್ಮೆ ಟಿಬೆಟ್‌ನಲ್ಲಿ, ಕೆಲವೊಮ್ಮೆ ಡೋಕ್ಲಾಮ್ ಮತ್ತು ಸಿಕ್ಕಿಂನಲ್ಲಿ ತನ್ನ ದುಷ್ಟ ಬುದ್ಧಿಯನ್ನ ಪ್ರದರ್ಶಿಸುತ್ತದೆ. ಕೊವಿಡ್-19 ಸೋಂಕಿನ ತವರು ರಾಷ್ಟ್ರವಾಗಿರುವ ಚೀನಾ, ಆ ಕಾಲದಲ್ಲಿಯೂ ಗಡಿ ವಿವಾದದ ಮೇಲೆ ಗಮನ ಇಟ್ಟಿತ್ತು. ಇದನ್ನೂ ಓದಿ: ಚೀನಾ ವಿವಾದಿತ ಗಡಿಯಲ್ಲಿ 218 ಕೋಟಿ ರೂ. ವೆಚ್ಚದ ಏರ್‌ಫಿಲ್ಡ್ ನಿರ್ಮಾಣಕ್ಕೆ ಭಾರತ ಸಜ್ಜು
ಭಾರತ ಮತ್ತು ಚೀನಾ ನಡುವಿನ ಸುಮಾರು 3488 ಕಿ.ಮೀ ಗಡಿಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ವಾಸ್ತವಿಕ ನಿಯಂತ್ರಣ ರೇಖೆ(ಎಲ್‌ಎಸಿ) ಸ್ಪಷ್ಟವಾಗಿಲ್ಲ. ಚೀನಾ ಉದ್ದೇಶಪೂರ್ವಕವಾಗಿ ಭಾರತದೊಂದಿಗಿನ ಗಡಿ ವಿವಾದವನ್ನು ಕೊನೆಗೊಳಿಸಲು ಬಯಸುತ್ತಿಲ್ಲ ಎಂಬ ಆರೋಪ ಕೂಡ ಇದೆ. ಹಾಗಾಗಿ ಚೀನಾ ಮತ್ತು ಭಾರತ ನಡುವೆ ಇಲ್ಲಿಯವರೆಗೆ ಯಾವುದೇ ಒಪ್ಪಂದ ನಡೆದಿಲ್ಲ. ಭಾರತದ ಮೇಲೆ ಒತ್ತಡ ಹೇರಲು ಚೀನಾ ಕಾಲಕಾಲಕ್ಕೆ ಗಡಿ ವಿವಾದಗಳನ್ನು ಬಳಸುತ್ತಲೇ ಇರುತ್ತದೆ. ಭಾರತದ ಗಡಿಯಲ್ಲಿ ನುಸುಳಲು ಚೀನಾದಿಂದ ಹಲವಾರು ಪ್ರಯತ್ನಗಳು ನಡೆದಿವೆ. ಉಭಯ ದೇಶಗಳ ಸೈನಿಕರ ನಡುವೆ ಗುಂಡಿನ ಚಕಮಕಿಗಳು ಆಗಾಗ ನಡೆಯುತ್ತಿರುತ್ತದೆ. ಇವೆಲ್ಲದರ ಹೊರತಾಗಿ ಚೀನಾ ಇಡೀ ಅರುಣಾಚಲ ಪ್ರದೇಶವನ್ನು ತನ್ನದೆಂದು ಪ್ರತಿಪಾದಿಸುತ್ತಲೇ ಇದೆ. ಅಲ್ಲದೇ ಭಾರತವು ಜಮ್ಮು ಮತ್ತು ಕಾಶ್ಮೀರವನ್ನು ತನ್ನ ಅವಿಭಾಜ್ಯ ಅಂಗವೆಂದು ಪರಿಗಣಿಸುತ್ತದೆ. ಆದರೆ ಚೀನಾ ಇದನ್ನು ಭಾರತದ ಭಾಗವೆಂದು ಪರಿಗಣಿಸುವುದಿಲ್ಲ. ಬದಲಾಗಿ ಪಿಒಕೆ ಅನ್ನು ಪಾಕಿಸ್ತಾನದ ಭಾಗವೆಂದು ಪರಿಗಣಿಸುತ್ತದೆ. ಈ ವಿಚಾರದಲ್ಲೂ ಉಭಯ ರಾಷ್ಟ್ರಗಳ ನಡುವೆ ಅಸಮಧಾನ ಇದೆ.
ಗಡಿಯಲ್ಲಿ ತಕರಾರು ತೆಗೆಯಲೆಂದೇ ಕಾಮಗಾರಿ
ಚೀನಾದಿಂದ ಅಕ್ಸಾಯ್ ಚಿನ್‌ನಲ್ಲಿ ಹಲವಾರು ರಸ್ತೆಗಳನ್ನು ನಿರ್ಮಿಸುವ ಮೂಲಕ ಲಡಾಖ್ ಪ್ರದೇಶದಲ್ಲಿ ನಿರಂತರ ಕಾಮಗಾರಿಗಳು ನಡೆಸುತ್ತಿದೆ. ಚೀನಾ ಪಿಒಕೆ ಮತ್ತು ಗಿಲ್ಗಿಟ್ ಬಾಲ್ಟಿಸ್ತಾನದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳಲ್ಲಿ ಕೆಲಸ ಮಾಡುತ್ತಿದೆ. ಅಲ್ಲಿ ಅಣೆಕಟ್ಟು, ರಸ್ತೆ ನಿರ್ಮಾಣಕ್ಕೆ ಕೈ ಹಾಕಿದೆ. ಈ ಪ್ರದೇಶಗಳಲ್ಲಿ ಮೂರರಿಂದ ನಾಲ್ಕು ಸಾವಿರ ಚೀನಿಯರು ಕೆಲಸ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಉಭಯ ದೇಶಗಳ ನಡುವೆ ಉದ್ವಿಗ್ನತೆಯ ಪರಿಸ್ಥಿತಿ ಇದೆ.
ಚೀನಾದ ತಂತ್ರವೇನು?
ಬ್ರಹ್ಮಪುತ್ರ ನದಿಗೆ ಚೀನಾ ಹಲವಾರು ಅಣೆಕಟ್ಟುಗಳನ್ನು ನಿರ್ಮಿಸುತ್ತಿದೆ. ವಾಸ್ತವವಾಗಿ ಚೀನಾ ಬ್ರಹ್ಮಪುತ್ರ ನದಿಯ ನೀರನ್ನು ಕಾಲುವೆಗಳ ಮೂಲಕ ಉತ್ತರ ಚೀನಾದ ಪ್ರದೇಶಗಳಿಗೆ ಕೊಂಡೊಯ್ಯಲು ಯೋಜಿಸಿದೆ. ಕಳೆದ ಕೆಲವು ವರ್ಷಗಳಿಂದ ಹಿಂದೂ ಮಹಾಸಾಗರದ ವಿಚಾರದಲ್ಲೂ ಚೀನಾದ ಚಟುವಟಿಕೆಗಳು ಹೆಚ್ಚುತ್ತಿವೆ. ಚೀನಾ ಶ್ರೀಲಂಕಾ, ಪಾಕಿಸ್ತಾನ, ಮ್ಯಾನ್ಮಾರ್ ಮತ್ತು ಮಾಲ್ಡೀವ್ಸ್ ಜೊತೆ ಮೈತ್ರಿ ಮಾಡಿ ಅನೇಕ ಯೋಜನೆಗಳನ್ನು ಪ್ರಾರಂಭಿಸುವ ಮೂಲಕ ಭಾರತವನ್ನು ಎಲ್ಲಾ ಕಡೆಯಿಂದಲೂ ಸುತ್ತುವರಿಯುವ ಕಾರ್ಯತಂತ್ರ ಹೆಣೆಯುತ್ತಿದೆ.
ಚೀನಾ ದಕ್ಷಿಣ ಸಮುದ್ರದ ಮೇಲೆ ತನ್ನ ಅಧಿಕಾರವನ್ನು ಪ್ರತಿಪಾದಿಸಿದೆ. ಈ ರೀತಿ ಅಲ್ಲಿ ಸಿಗುವ ತೈಲಕ್ಕಾಗಿ ಕಣ್ಣು ಹಾಕಿದೆ. ಈ ವಿಚಾರವಾಗಿ ವಿಯೆಟ್ನಾಂ, ಜಪಾನ್ ಮತ್ತು ಫಿಲಿಪೈನ್ಸ್ ಯಾವಾಗಲೂ ಚೀನಾವನ್ನು ವಿರೋಧಿಸುತ್ತಿವೆ. ವಿಯೆಟ್ನಾಂನ ಎರಡು ತೈಲ ಬ್ಲಾಕ್ ಯೋಜನೆಗಳಲ್ಲಿ ಭಾಗಿಯಾಗಿರುವ ಭಾರತೀಯ ಕಂಪನಿಗಳಿಗೆ ಕೆಲವು ವರ್ಷಗಳ ಹಿಂದೆ, ಚೀನಾ ದಕ್ಷಿಣ ಚೀನಾ ಸಮುದ್ರದಿಂದ ದೂರವಿರಲು ಎಚ್ಚರಿಕೆ ನೀಡಿತ್ತು. ಚೀನಾ ಈ ಪ್ರದೇಶದಲ್ಲಿ ಯಾವಾಗಲೂ ಮಿಲಿಟರಿ ಕಸರತ್ತುಗಳನ್ನು ನಡೆಸುತ್ತಿರುತ್ತದೆ. ಇದು ಸಹ ಉಭಯ ದೇಶಗಳ ಸಂಬಂಧಕ್ಕೆ ತೊಡಕಾಗಿದೆ.
ಲಡಾಖ್ ಗಡಿಯಲ್ಲಿನ ಪ್ರದೇಶಗಳ ಮೇಲೆ ತಾನು ಹಕ್ಕು ಹೊಂದಿರುವುದಾಗಿ ಚೀನಾ ಮೊಂಡುತನ ಪ್ರದರ್ಶಿಸುತ್ತಿರುವುದಕ್ಕೆ ಕಾರಣವಿದೆ. ಪ್ರಸಿದ್ಧ ಪರ್ವತ ಶ್ರೇಣಿಗಳಿಂದ ಭಾರತವನ್ನು ಸಾಧ್ಯವಾದಷ್ಟು ದೂರವಿಡುವುದಕ್ಕೆ ಚೀನಾ ಯೋಜಿಸಿದೆ. ಈ ಹಿನ್ನೆಲೆಯಲ್ಲೇ ಕ್ಲಿನ್ ಜಿಯಾಂಗ್ ಮತ್ತು ಟಿಬೆಟ್ ನಡುವೆ ಜಿ-219 ಹೆದ್ದಾರಿ ಕಾಮಗಾರಿಗೆ ಚೀನಾ ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಲೇ ಇದೆ. ಪರ್ವತ ಶ್ರೇಣಿಗಳನ್ನು ದಾಟಬೇಕಿದ್ದಲ್ಲಿ ಭಾರತವು ಚೀನಾದಿಂದ ಅನುಮತಿಯನ್ನು ಪಡೆದುಕೊಳ್ಳಬೇಕು ಎಂದು ಹೇಳಿತ್ತು. ಎತ್ತರದ ಶಿಖರಗಳ ಮೇಲೆ ಭಾರತವು ಪ್ರಾಬಲ್ಯ ಸಾಧಿಸದಂತೆ ನೋಡಿಕೊಳ್ಳುವುದು ಚೀನಾದ ಪ್ರಮುಖ ಉದ್ದೇಶವೂ ಆಗಿದೆ.
2012ರಲ್ಲಿ ಚೀನಾದೊಂದಿಗಿನ ಭಾರತದ ಗಡಿಗೆ 60 ಸಾವಿರ ಸೈನಿಕರನ್ನು ಭಾರತ ನಿಯೋಜಿಸಿತ್ತು.. ಗಲ್ವಾನ್ ಘರ್ಷಣೆಯ ಬಳಿಕ ಭಾರತ 50 ಸಾವಿರಕ್ಕೂ ಹೆಚ್ಚು ಸೈನಿಕರನ್ನು ನಿಯೋಜಿಸಿತ್ತು. ಇದೇ ವೇಳೆಗೆ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಬಂದರುಗಳು ಮತ್ತು ನೆಲೆಗಳನ್ನು ನಿರ್ಮಿಸುವ ಮೂಲಕ ಚೀನಾ ಭಾರತಕ್ಕೆ ಅಡ್ಡಿಯಾಗುತ್ತಿದೆ ಎಂದು ಸಹ ವರದಿಯಾಗಿತ್ತು. ಕ್ಲಿನ್ ಜಿಯಾಂಗ್ ಮತ್ತು ಟಿಬೆನ್ ನಡುವಿನ ಗಡಿಯಲ್ಲಿ ಜಿ-219 ಹೆದ್ದಾರಿಯನ್ನು ಚೀನಾದ ಅನುಮತಿ ಪಡೆದುಕೊಳ್ಳದೇ ತನಗೆ ಸೇರಿದ ಪ್ರದೇಶದಲ್ಲಿ ರಸ್ತೆ ಕಾಮಗಾರಿ ನಡೆಸುತ್ತಿದೆ ಎಂದು ಸಹ ಚೀನಾ ಆರೋಪಿಸಿತ್ತು.
ಈ ಹಿಂದೆಯೂ ಮ್ಯಾಪ್‌ನಲ್ಲಿ ಗಡಿಯನ್ನು ನುಂಗಿದ್ದ ಚೀನಾ
ಈ ಹಿಂದೆ 1959ರಲ್ಲಿನ ಗಡಿ ವಿಸ್ತೀರ್ಣಕ್ಕಿಂತ ಹೆಚ್ಚು ಭೂಪ್ರದೇಶವು ತಮಗೆ ಸೇರಿದೆ ಎಂದು ಚೀನಾ ವಾದಿಸಿತ್ತು. ಭಾರತ-ಚೀನಾ ಯುದ್ಧದ ಸಂದರ್ಭದಲ್ಲೂ ಅದು ಇದೇ ರೀತಿ ವಿವಾದ ಹುಟ್ಟುಹಾಕಿತ್ತು. 1962ರ ಯುದ್ಧಕ್ಕೂ ಒಂದು ತಿಂಗಳು ಮೊದಲೇ ಲಡಾಖ್ ಪೂರ್ವದಲ್ಲಿನ ಪ್ರದೇಶವು ತನಗೆ ಸೇರಿದ್ದು ಎಂದು ಚೀನಾ ಹೇಳಿಕೊಂಡಿತ್ತು. ಚೀನಾದ ಗಡಿಪ್ರದೇಶದ ಅಳತೆಯು 1959ರಲ್ಲಿ ತೋರಿಸಿದ ವಿಸ್ತೀರ್ಣಕ್ಕಿಂತ ಹೆಚ್ಚಾಗಿತ್ತು. 1962ರ ನವೆಂಬರ್ ನಲ್ಲಿ ಭಾರತ-ಚೀನಾ ನಡುವಿನ ಯುದ್ಧ ಅಂತ್ಯವಾಗಿದ್ದು, ಆಗ ಚೀನಾ ಮತ್ತೊಂದು ರೀತಿ ಅಳತೆಯ ಗಡಿಚಿತ್ರಣವನ್ನು ಬಿಡುಗಡೆ ಮಾಡಿತ್ತು.
ಈ ವಿವಾದದ ನಡುವೆ ಗಡಿ ಭಾಗದ ಪೂರ್ವ ಲಡಾಖ್‍ನ ನ್ಯೋಮಾ ಬೆಲ್ಟ್‌ನಲ್ಲಿ 218 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಏರ್‌ಫಿಲ್ಡ್ ನಿರ್ಮಿಸಲು ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಸಜ್ಜಾಗಿದೆ. ಇದಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೆ.12 ರಂದು ಶಂಕುಸ್ಥಾಪನೆ ಮಾಡಲಿದ್ದಾರೆ. ಇದನ್ನೂ ಓದಿ: ಇಂಡಿಯಾ ಹೆಸರಿನ ಮೇಲೆ ಪಾಕಿಸ್ತಾನ ಹಕ್ಕು ಸಾಧಿಸುತ್ತಾ?
ನವದೆಹಲಿ: ಗಡಿಯಲ್ಲಿ ಆಗಾಗ ಕಿರಿಕ್ ಮಾಡುತ್ತಿರುವ ಚೀನಾ (China) ಈಗ ಮತ್ತೊಮ್ಮೆ ತನ್ನ ಕಿರಿಕ್ ಬುದ್ಧಿಯನ್ನು ಪ್ರದರ್ಶಿಸಿದೆ. ಅರುಣಾಚಲ ಪ್ರದೇಶ (Arunachal Pradesh), ಅಕ್ಸಾಯ್ ಚಿನ್ ಪ್ರದೇಶ, ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಸಮುದ್ರದಂತಹ ವಿವಾದಿತ ಪ್ರದೇಶಗಳನ್ನು ಒಳಗೊಂಡಿರುವ ‘ಸ್ಟ್ಯಾಂಡರ್ಡ್ ಮ್ಯಾಪ್’ನ 2023ರ ಆವೃತ್ತಿಯನ್ನು ಚೀನಾ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದರಲ್ಲಿ ಅರುಣಾಚಲ ಪ್ರದೇಶದ ಮೇಲೆ ತನ್ನ ಪ್ರಾದೇಶಿಕ ಹಕ್ಕುಗಳನ್ನು ಸ್ಥಾಪಿಸುವ ಪ್ರಯತ್ನ ಮಾಡಲಾಗಿದೆ.
ಚೀನಾ ಸ್ಟ್ಯಾಂಡರ್ಡ್ ಮ್ಯಾಪ್‌ನ (Standard Map) 2023ರ ಆವೃತ್ತಿಯನ್ನು ಸೋಮವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ನೈಸರ್ಗಿಕ ಸಂಪನ್ಮೂಲಗಳ ಸಚಿವಾಲಯವು ಸ್ಟ್ಯಾಂಡರ್ಡ್ ಮ್ಯಾಪ್ ಅನ್ನು ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದೆ ಎಂದು ಚೀನಾದ ಗ್ಲೋಬಲ್ ಟೈಮ್ಸ್ ಟ್ವಿಟ್ಟರ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಪುಲ್ವಾಮಾ ದಾಳಿಯೇ ವಿಶೇಷ ರಾಜ್ಯ ಸ್ಥಾನಮಾನ ರದ್ದುಪಡಿಸಲು ಪ್ರೇರೇಪಿಸಿತು: ಸುಪ್ರೀಂಗೆ ಕೇಂದ್ರ
ಗ್ಲೋಬಲ್ ಟೈಮ್ಸ್ ಪ್ರದರ್ಶಿಸಿರುವ ನಕ್ಷೆಯಲ್ಲಿ 1962ರ ಯುದ್ಧದಲ್ಲಿ ಅಕ್ಸಾಯ್ ಚಿನ್ ಆಕ್ರಮಿಸಿಕೊಂಡಿದ್ದು, ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್ ಎಂದು ಚೀನಾ ಹೇಳಿಕೊಂಡಿದೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಮತ್ತು ಅವಿಭಾಜ್ಯ ಅಂಗವಾಗಿ ಉಳಿಯುತ್ತದೆ ಎಂದು ಭಾರತ ಸರ್ಕಾರ ಒತ್ತಿ ಹೇಳಿತ್ತಿರುವಾಗಲೂ ಚೀನಾ ಈ ಪ್ರಯತ್ನಕ್ಕೆ ಕೈ ಹಾಕಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಬ್ರೇಕ್- 14 ಉಗ್ರರ ಆಸ್ತಿ ಮುಟ್ಟುಗೋಲಿಗೆ ಪೊಲೀಸರ ಕ್ರಮ
ನಕ್ಷೆಯು ತೈವಾನ್ ಅನ್ನು ಚೀನಾವು ತನ್ನ ಮುಖ್ಯ ಭೂಭಾಗದ ಭಾಗವೆಂದು ಹೇಳಿಕೊಂಡಿದೆ ಮತ್ತು ಮುಖ್ಯ ಭೂಭಾಗದೊಂದಿಗೆ ವಿಲೀನಗೊಳ್ಳುವುದು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ (Xi Jinping) ಅವರ ಗುರಿಯಾಗಿದೆ. ಆದರೆ ವಿಯೆಟ್ನಾಂ, ಫಿಲಿಪೈನ್ಸ್, ಮಲೇಷ್ಯಾ, ಬ್ರೂನೈ ಮತ್ತು ತೈವಾನ್ ದಕ್ಷಿಣ ಚೀನಾ ಸಮುದ್ರದಲ್ಲಿ ಪ್ರತಿವಾದ ಹಕ್ಕುಗಳನ್ನು ಹೊಂದಿವೆ. ಇದನ್ನೂ ಓದಿ: ಪ್ರಜ್ಞಾನ್ ರೋವರ್‌ಗೆ ಎದುರಾಯ್ತು ದೊಡ್ಡ ಕುಳಿ, ಮಾರ್ಗ ಬದಲಿಸಿದ ಇಸ್ರೋ – ಇನ್ನು 10 ದಿನ ಮಾತ್ರ ಬಾಕಿ
ಇಟಾನಗರ: ಅರುಣಾಚಲ ಪ್ರದೇಶ ಭೇಟಿಗೆ ಚೀನಾ (China) ಆಕ್ಷೇಪ ವ್ಯಕ್ತಪಡಿಸಿರುವ ಬೆನ್ನಲ್ಲೇ ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಿಳಿಸಿದರು.
ಅರುಣಾಚಲ ಪ್ರದೇಶದ (Arunachal Pradesh) ಗಡಿ ಗ್ರಾಮವಾದ ಕಿಬಿತೂದಿಂದ ವೈಬ್ರಂಟ್ ವಿಲೇಜಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ನಮ್ಮ ಒಂದು ಇಂಚು ಭೂಮಿಯನ್ನು ಯಾರೂ ಕಬಳಿಸಲು ಸಾಧ್ಯವಿಲ್ಲ. 2014ರ ಮೊದಲು, ಇಡೀ ಈಶಾನ್ಯ ಪ್ರದೇಶವು ಪ್ರಕ್ಷುಬ್ಧ ಪ್ರದೇಶವೆಂದು ಕರೆಯಲ್ಪಟ್ಟಿತು. ಆದರೆ ಕಳೆದ 9 ವರ್ಷಗಳಲ್ಲಿ, ಪ್ರಧಾನಿ ಮೋದಿಯವರ ಯೋಜನೆಯಿಂದಾಗಿ, ಈಶಾನ್ಯವನ್ನು ಈಗ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಪ್ರದೇಶವೆಂದು ಪರಿಗಣಿಸಲಾಗಿದೆ ಎಂದು ಹೇಳಿದರು.
ಐಟಿಬಿಪಿ ಯೋಧರು ಹಾಗೂ ಸೇನೆಯು ನಮ್ಮ ಗಡಿಯಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರಣದಿಂದ ಇಂದು ದೇಶದ ಜನರು ಅವರ ಮನೆಗಳಲ್ಲಿ ಶಾಂತಿಯುತವಾಗಿ ಮಲಗಲು ಸಾಧ್ಯವಾಗಿದೆ ಎಂದು ಇಂದು ನಾವು ಹೆಮ್ಮೆಯಿಂದ ಹೇಳಬಹುದಾಗಿದೆ ಎಂದು ಸೇನೆ ಹಾಗೂ ಗಡಿ ಪೊಲೀಸರನ್ನು ಶ್ಲಾಘಿಸಿದರು.
ಕಳೆದ ವಾರ ಅರುಣಾಚಲ ಪ್ರದೇಶದ ಕೆಲವು ಸ್ಥಳಗಳನ್ನು ಚೀನಾ ತನ್ನ ಭೂಪ್ರದೇಶದ ಭಾಗವೆಂದು ಹೇಳಿಕೊಳ್ಳುವ ಮೂಲಕ ಮರುನಾಮಕರಣ ಮಾಡಿದೆ. ಅಷ್ಟೇ ಅಲ್ಲದೇ ಅರುಣಾಚಲ ಪ್ರದೇಶಕ್ಕೆ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯನ್ನು ಚೀನಾ ದೃಢವಾಗಿ ವಿರೋಧಿಸುತ್ತದೆ. ಈ ಪ್ರದೇಶದಲ್ಲಿ ಅವರ ಚಟುವಟಿಕೆಗಳು ಬೀಜಿಂಗ್‍ನ ಪ್ರಾದೇಶಿಕ ಸಾರ್ವಭೌಮತ್ವವನ್ನು ಉಲ್ಲಂಘಿಸುತ್ತಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರರು ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದರು. ಇದನ್ನೂ ಓದಿ:`ನಂದಿನಿ’ ನಮ್ಮವಳು – ನಮ್ಮ ಹಾಲು ನಮ್ಮ ಬದುಕು; ನಂದಿನಿ ಉಳಿಸಿ ಎಂದ ಡಿಕೆಶಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಕ್ತಾರ ವಾಂಗ್ ವೆನ್ಬಿನ್ ಮಾತನಾಡಿ, ಜಾಂಗ್ನಾನ್ ಚೀನಾದ ಪ್ರದೇಶವಾಗಿದೆ. ಜಂಗ್ನಾನ್‍ಗೆ ಭಾರತೀಯ ಅಧಿಕಾರಿಯ ಭೇಟಿಯು ಚೀನಾದ ಪ್ರಾದೇಶಿಕ ಸಾರ್ವಭೌಮತ್ವವನ್ನು ಉಲ್ಲಂಘಿಸುತ್ತದೆ. ಗಡಿ ಪರಿಸ್ಥಿತಿಯ ಶಾಂತಿ ಮತ್ತು ನೆಮ್ಮದಿಗೆ ಅನುಕೂಲಕರವಾಗಿಲ್ಲ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ನನಗೆ ಟಿಕೆಟ್ ಸಿಗೋ ವಿಶ್ವಾಸವಿದೆ, ಯಾರಿಗೆ ಸಿಕ್ಕಿದ್ರೂ ಒಟ್ಟಾಗಿ ಕೆಲಸ ಮಾಡ್ತೀವಿ: ಸ್ವರೂಪ್