Tag: Aruru Jagadish

  • ಅನಿರುದ್ಧ ಅವರನ್ನು ತುಳಿಯುವ ಪ್ರಯತ್ನ ಮಾಡಲಾಗುತ್ತಿದೆ: ಗರಂ ಆದ ಮಹಿಳಾ ಅಭಿಮಾನಿಗಳು

    ಅನಿರುದ್ಧ ಅವರನ್ನು ತುಳಿಯುವ ಪ್ರಯತ್ನ ಮಾಡಲಾಗುತ್ತಿದೆ: ಗರಂ ಆದ ಮಹಿಳಾ ಅಭಿಮಾನಿಗಳು

    ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ ಅವರನ್ನು ಕೈ ಬಿಟ್ಟಿದ್ದನ್ನು ಅನಿರುದ್ಧ ಮಹಿಳಾ ಅಭಿಮಾನಿಗಳ ಸಂಘ ಖಂಡಿಸಿದೆ. ಮಂಗಳವಾರ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮಗೋಷ್ಠಿ ಆಯೋಜನೆ ಮಾಡಿದ್ದ ತಂಡದ ಸದಸ್ಯರು. ಬೇಕು ಅಂತಾನೇ ಅನಿರುದ್ಧ ಅವರನ್ನು ಧಾರಾವಾಹಿ ತಂಡ ಕೈ ಬಿಟ್ಟಿದೆ ಎಂದು ಆರೋಪಿಸಿದರು. ಅನಿರುದ್ಧ ಅವರ ಜನಪ್ರಿಯತೆಯನ್ನು ಸಹಿಸಿಕೊಳ್ಳುವುದಕ್ಕೆ ಆಗದೇ ಈ ರೀತಿ ಮಾಡಲಾಗುತ್ತಿದೆ ಎನ್ನುವ ಮಾತುಗಳನ್ನೂ ಆಡಿದರು.

    ಅನಿರುದ್ಧ ಮತ್ತು ಜೊತೆ ಜೊತೆಯಲಿ ನಿರ್ಮಾಪಕ ಆರೂರು ಜಗದೀಶ್ ಅವರ ಮಧ್ಯೆ ಮುಸುಕಿನ ಗುದ್ದಾಟ ಇರುವುದಂತೂ ನಿಜ. ಆರೂರು ಜಗದೀಶ್ ಅವರೇ ಮಾಧ್ಯಮಗಳ ಮುಂದೆ ಬಂದು ಹೇಳಿಕೊಂಡಂತೆ, ಹಲವಾರು ರೀತಿಯ ತೊಂದರೆಗಳನ್ನು ಅನಿರುದ್ಧ ಕೊಟ್ಟಿದ್ದಾರಂತೆ. ಆರೂರು ಜಗದೀಶ್ ಅವರ ಆರೋಪಕ್ಕೂ ಅನಿರುದ್ಧ ಉತ್ತರ ನೀಡಿದ್ದಾರೆ. ನಿರ್ಮಾಪಕರಿಗೆ ತೊಂದರೆ ಕೊಡುವಂತಹ ಯಾವುದೇ ಕೆಲಸ ಮಾಡಿಲ್ಲ. ಹಾಗಾಗಿ ಮಕ್ಕಳ ಮೇಲೆ ಆಣೆ ಪ್ರಮಾಣ ಮಾಡಿ ಎಂದು ಹೇಳಿದ್ದರು. ಇದನ್ನೂ ಓದಿ:ಬಿಗ್‌ ಬಾಸ್: ನಂದು ವಿರುದ್ಧ ಜಯಶ್ರೀ ಆರಾಧ್ಯ ಫುಲ್ ಗರಂ

    ಮಾಧ್ಯಮಗೋಷ್ಠಿ ನಂತರ ಅನಿರುದ್ಧ ಮತ್ತು ಆರೂರು ಜಗದೀಶ್ ಸುಮ್ಮನಾಗಿದ್ದರೂ, ಮಹಿಳಾ ಅಭಿಮಾನಿಗಳು ಮಾತ್ರ ಸುಮ್ಮನಾಗಿಲ್ಲ. ಮತ್ತೆ ಅನಿರುದ್ಧ ಅವರನ್ನೇ ಧಾರಾವಾಹಿಯಲ್ಲಿ ಮುಂದುವರೆಸಿ ಎಂದು ವಾಹಿನಿಗೆ ಕೇಳಿಕೊಂಡಿದ್ದಾರೆ. ಅನಿರುದ್ಧ ಅವರ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ವಾಹಿನಿಯು ಗಮನಿಸಬೇಕು ಎಂದು ಮಹಿಳಾ ಅಭಿಮಾನಿಗಳು ಮಧ್ಯಮ ಗೋಷ್ಠಿಯಲ್ಲಿ ಮನವಿ ಮಾಡಿದರು.

    Live Tv
    [brid partner=56869869 player=32851 video=960834 autoplay=true]

  • ಜೊತೆ ಜೊತೆಯಲಿ ಆರ್ಯವರ್ಧನ್ ಪಾತ್ರ ನಾನು ಮಾಡಲ್ಲ, ಆಫರ್ ಬಂದಿದ್ದು ನಿಜ: ಅನೂಪ್ ಭಂಡಾರಿ

    ಜೊತೆ ಜೊತೆಯಲಿ ಆರ್ಯವರ್ಧನ್ ಪಾತ್ರ ನಾನು ಮಾಡಲ್ಲ, ಆಫರ್ ಬಂದಿದ್ದು ನಿಜ: ಅನೂಪ್ ಭಂಡಾರಿ

    ಜೊತೆ ಜೊತೆಯಲಿ ಧಾರಾವಾಹಿಗೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಹೊಸ ಸುದ್ದಿಗಳು ಬರುತ್ತಿವೆ. ಈ ಧಾರಾವಾಹಿಯಿಂದ ಆರ್ಯವರ್ಧನ್ ಪಾತ್ರಧಾರಿ ಅನಿರುದ್ಧ ಅವರನ್ನು ಕೈ ಬಿಡುತ್ತಿದ್ದಂತೆಯೇ ಆ ಪಾತ್ರವನ್ನು ಯಾರು ಮಾಡಲಿದ್ದಾರೆ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿತ್ತು. ಸಡನ್ನಾಗಿ ಕನ್ನಡದ ಹೆಸರಾಂತ ನಿರ್ದೇಶಕ ಅನೂಪ್ ಭಂಡಾರಿ ಅವರ ಹೆಸರು ಕೇಳಿ ಬಂದಿತ್ತು. ಎಂದೂ ನಟನೆಯನ್ನೇ ಮಾಡದ ಅನೂಪ್ ಗೆ ಇಂಥದ್ದೊಂದು ಆಫರ್ ಹೋಗಿದ್ದು ನಿಜವಾ ಎನ್ನುವ ಅನುಮಾನ ಕೂಡ ಮೂಡಿತ್ತು.

    ವಿಕ್ರಾಂತ್ ರೋಣ ಸಿನಿಮಾ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಚಿತ್ರಕ್ಕೆ ತಯಾರಿ ನಡೆಸಿದಿರುವ ಅನೂಪ್, ಈ ಪಾತ್ರವನ್ನು ಒಪ್ಪಿಕೊಂಡು ಮಾಡುತ್ತಾರೆ ಎನ್ನುವ ಚರ್ಚೆ ಕೂಡ ಶುರುವಾಗಿತ್ತು. ಅನೂಪ್ ಮುಖ, ಗಡ್ಡ, ಅವರ ಲುಕ್ ಥೇಟ್ ಅನಿರುದ್ಧ ರೀತಿಯಲ್ಲೇ ಕಾಣುವುದರಿಂದ ಧಾರಾವಾಹಿ ತಂಡವು ಅನೂಪ್ ಅವರನ್ನು ಸಂಪರ್ಕಿಸಬಹುದು ಎಂದೂ ಹೇಳಲಾಗಿತ್ತು. ಈಗ ಅದೆಲ್ಲವೂ ನಿಜವಾಗಿದೆ. ಧಾರಾವಾಹಿ ತಂಡ ತಮ್ಮನ್ನು ಸಂಪರ್ಕಿಸುವ ವಿಚಾರವನ್ನು ಅನೂಪ್ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ:ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣನ ಹುಡುಕಿಕೊಂಡು ಬಂತು ಮತ್ತೊಂದು ಬಾಲಿವುಡ್ ಸಿನಿಮಾ

    ಜೊತೆ ಜೊತೆಯಲಿ ಧಾರಾವಾಹಿ ತಂಡ ನನ್ನನ್ನು ಸಂಪರ್ಕಿಸಿದ್ದು ನಿಜ. ಆದರೆ, ನಾನು ಆ ಆಫರ್ ಅನ್ನು ನಿರಾಕರಿಸಿದೆ. ಈಗಾಗಲೇ ಹೊಸ ಸಿನಿಮಾ ಮಾಡುವ ತಯಾರಿ ನಡೆಸಿದ್ದೇನೆ. ಇಂತಹ ವೇಳೆಯಲ್ಲಿ ನಾನು ಧಾರಾವಾಹಿ ಒಪ್ಪಿಕೊಂಡರೆ, ನನ್ನ ಚಿತ್ರಕ್ಕೆ ಹಿನ್ನೆಡೆ ಆಗುತ್ತದೆ. ಹಾಗಾಗಿ ನಾನು ಈ ಧಾರಾವಾಹಿಯಲ್ಲಿ ನಟಿಸುವುದಿಲ್ಲ ಎಂದು ಹೇಳಿದ್ದೇನೆ ಎನ್ನುತ್ತಾರೆ ಅನೂಪ್ ಭಂಡಾರಿ.

    Live Tv
    [brid partner=56869869 player=32851 video=960834 autoplay=true]

  • ನಟ ಅನಿರುದ್ಧ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ ‘ಜೊತೆ ಜೊತೆಯಲಿ’ ನಿರ್ಮಾಪಕ ಜಗದೀಶ್

    ನಟ ಅನಿರುದ್ಧ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ ‘ಜೊತೆ ಜೊತೆಯಲಿ’ ನಿರ್ಮಾಪಕ ಜಗದೀಶ್

    ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ ಅವರನ್ನು ಕೈ ಬಿಡಲಾಗಿದ್ದು, ಈ ಕುರಿತು ನಿರ್ಮಾಪಕರಾದ ಆರೂರು ಜಗದೀಶ್ ಮತ್ತು ಸ್ಮಿತಾ ಶೆಟ್ಟಿ ಜಂಟಿಯಾಗಿ ಅನಿರುದ್ಧ ಅವರಿಗೆ ಇ-ಮೇಲ್ ಕಳುಹಿಸಿದ್ದಾರೆ. ಅನಿರುದ್ಧ ಅವರನ್ನು ಧಾರಾವಾಹಿಯಿಂದ ಕೈ ಬಿಟ್ಟಿರುವ ಕುರಿತು ಮಾಧ್ಯಮಗಳಿಗೂ ಆರೂರು ಜಗದೀಶ್ ಖಚಿತ ಪಡಿಸಿದ್ದಾರೆ. ಜೊತೆಗೆ ಅನಿರುದ್ಧ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

    ಧಾರಾವಾಹಿ ಶುರುವಾಗಿ ಎರಡು ತಿಂಗಳ ನಂತರ ಅನಿರುದ್ಧ ಅವರು ಅಸಹಕಾರವನ್ನು ತೋರುತ್ತಾ ಬಂದಿರುವುದಾಗಿಯೂ ನಿರ್ಮಾಪಕರು ಆರೋಪಿಸಿದ್ದಾರೆ. ಅಲ್ಲದೇ, ಬೀದಿ ಬದಿಯಲ್ಲಿ ಕೂತು ತಿನ್ನುತ್ತಿದ್ದ ಅನಿರುದ್ಧ ಅವರು, ಇದೀಗ ಕ್ಯಾರಾವಾನ್ ಇಲ್ಲದೇ ಶೂಟಿಂಗ್ ಗೆ ಬರುವುದಿಲ್ಲ ಎನ್ನುವಲ್ಲಿಗೆ ಬೆಳೆದಿದ್ದಾರೆ. ಹಾಗಾಗಿ ಅವರಿಂದ ಸಾಕಷ್ಟು ಹಣವನ್ನು ಕಳೆದುಕೊಂಡಿರುವುದಾಗಿ ಜಗದೀಶ್ ಆರೋಪಗಳನ್ನು ಮಾಡಿದ್ದಾರೆ.

    ಜಗದೀಶ್ ಮಾಡುವ ಆರೋಪವೇನು?

    * ಅನಿರುದ್ಧ ಅವರು ಧಾರಾವಾಹಿ ಪಾತ್ರ ಒಪ್ಪಿಕೊಂಡಾಗ ಆರ್ಯವರ್ಧನ್ ಪಾತ್ರ ನೆಗಟಿವ್ ಆಗಿತ್ತು. ಇವರು ಜನಪ್ರಿಯತೆ ಜಾಸ್ತಿ ಆಗುತ್ತಿದ್ದಂತೆಯೇ ಆ ಪಾತ್ರವನ್ನು ಬದಲಿಸಲು ಪಟ್ಟು ಹಿಡಿದರು. ಪಾತ್ರವನ್ನು ಪಾಸಿಟಿವ್ ರೀತಿಯಲ್ಲಿ ಕಥೆ ಮಾಡಿಸಿದರು. ಕಥೆಯೇ ಬಿದ್ದು ಹೋಯಿತು.

    * ಡೈಲಾಗ್ ಸ್ಕ್ರಿಪ್ ಸಲುವಾಗಿ ಅನೇಕ ಬಾರಿ ಜಗಳ ಮಾಡಿದ್ದಾರೆ. ಸೀನ್ ಪೇಪರ್ ತಡವಾಗಿ ಬಂದರೆ ಶೂಟಿಂಗ್ ಮಾಡುವುದಿಲ್ಲ ಎಂದೇ ಎದ್ದೇ ಹೋಗುತ್ತಿದ್ದರು.

    * ಸಾಮಾನ್ಯವಾಗಿ ಧಾರಾವಾಹಿಗಳಲ್ಲಿ ಕ್ಯಾರವಾನ್ ಬಳಸುವುದಿಲ್ಲ. ಇವರಿಗಾಗಿ ಕ್ಯಾರವಾನ್ ತರಿಸಲಾಗುತ್ತಿತ್ತು. ಕ್ಯಾರವಾನ್ ಗಾಗಿ ಗಲಾಟೆ ಮಾಡಿದರು.

    * ಧಾರಾವಾಹಿ ನಡೆಯುತ್ತಿರುವುದೇ ನನ್ನಿಂದ ಎನ್ನುವಂತೆ ದುರಹಂಕಾರ ತೋರಿಸಿದರು. ಧಾರಾವಾಹಿ ಬಗ್ಗೆ ನೆಗೆಟಿವ್ ಪ್ರಚಾರ ಮಾಡುತ್ತಾ ಬಂದರು.

    * ಬೆನ್ಜ್ ಕಾರು, ಹೆಲಿಕಾಪ್ಟರ್ ಹೀಗೆ ದುಬಾರಿ ಖರ್ಚು ಮಾಡಿ ಧಾರಾವಾಹಿ ಮಾಡುತ್ತಿದ್ದರೂ, ಅವರು ಅದಕ್ಕೆ ಕ್ಯಾರೆ ಅನ್ನುತ್ತಿರಲಿಲ್ಲ. ಹಾಗಾಗಿ ಇವರಿಂದಾಗಿಯೇ ಸಾಕಷ್ಟು ಲಾಸ್ ಆಗಿದೆ.

    * ಪ್ರತಿ ಶಾಟ್ ತಗೆದಾಗಲೂ ಮಾನೆಟರ್ ಹತ್ತಿರ ಬಂದು ನೋಡುತ್ತಿದ್ದರು. ಮತ್ತೊಂದು ಸಲ ನಟಿಸ್ತೀನಿ ಅನ್ನುತ್ತಿದ್ದರು. ಹೀಗಾಗಿ ಕಾಲಹರಣವಾಗುತ್ತಿತ್ತು.

    * ಸಣ್ಣದೊಂದು ತಪ್ಪಾದರೂ, ಸೆಟ್ ನಲ್ಲಿ ಜೋರಾಗಿ ಕೂಗುತ್ತಿದ್ದರು. ಬೈಯುತ್ತಿದ್ದರು. ಇವರ ಸಲುವಾಗಿ ಅನೇಕರು ಕೆಲಸ ಬಿಟ್ಟು ಹೋದರು. ಕೆಲವರನ್ನು ನಾವೇ ಕಳುಹಿಸಿ ಕೊಡಬೇಕಾಯಿತು.

    * ಒಂಬತ್ತು ಗಂಟೆಗೆ ಫಸ್ಟ್ ಶಾಟ್ ಅಂದರೆ, ಬರುತ್ತಿರಲಿಲ್ಲ. ತಿಂಡಿ ತಿನ್ನುತ್ತಾ, ಸಹ ಕಲಾವಿದರನ್ನೂ ಕೂರಿಸಿಕೊಂಡು ಬೇಕು ಅಂತನೇ ತಡ ಮಾಡುತ್ತಿದ್ದರು.

    * ಟೀಮ್ ನಲ್ಲಿ ಅವರ ಬಗ್ಗೆ ಗಾಸಿಪ್ ಮಾಡ್ತಾರೆ ಅಂತ ಕೆಲ ದಿನಗಳ ಕಾಲ ಶೂಟಿಂಗ್ ಗೆ ಬರಲೇ ಇಲ್ಲ. ಮನೆಗೆ ಹೋಗಿ ಮನವಿ ಮಾಡಿಕೊಂಡು ಕರೆದುಕೊಂಡು ಬಂದೆವು.

    * ಸ್ಟಾರ್ ಹೋಟೆಲ್ ನಿಂದ ಊಟ ಬರಬೇಕು ಎಂದು ಗಲಾಟೆ ಮಾಡಿದರು. ಸ್ಟಾರ್ ಹೋಟೆಲ್ ನಲ್ಲಿ ಅವರ ಬಿಲ್ ಎರಡು ಲಕ್ಷ ಆಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಬ್ಯಾನ್ ನಿರ್ಧಾರ ತೆಗೆದುಕೊಳ್ಳುವಷ್ಟು ನಟ ಅನಿರುದ್ಧ ಕಿರಿಕ್ ಮಾಡಿದ್ರಾ?: ಪಿನ್ ಟು ಪಿನ್ ಮಾಹಿತಿ

    ಬ್ಯಾನ್ ನಿರ್ಧಾರ ತೆಗೆದುಕೊಳ್ಳುವಷ್ಟು ನಟ ಅನಿರುದ್ಧ ಕಿರಿಕ್ ಮಾಡಿದ್ರಾ?: ಪಿನ್ ಟು ಪಿನ್ ಮಾಹಿತಿ

    ಜೊತೆ ಜೊತೆಯಲಿ ಧಾರಾವಾಹಿಯಿಂದ ನಟ, ಡಾ.ವಿಷ್ಣುವರ್ಧನ್ ಅಳಿಯ ಅನಿರುದ್ಧ ಹೊರ ನಡೆದ ವಿಚಾರ ಕನ್ನಡ ಕಿರುತೆರೆ ಜಗತ್ತಿನಲ್ಲಿ ಭಾರೀ ಕೋಲಾಹಲವನ್ನೇ ಸೃಷ್ಟಿ ಮಾಡಿದೆ. ಹಲವು ತಿಂಗಳಿಂದ ಈ ಕಿರಿಕಿರಿ ಇತ್ತಾದರೂ, ಧಾರಾವಾಹಿಯಿಂದಲೇ ಅವರನ್ನು ತಗೆದು ಹಾಕುವಷ್ಟರ ಮಟ್ಟಿಗೆ ಅದು ಹೋಗಿರಲಿಲ್ಲ. ಕೇವಲ ಧಾರಾವಾಹಿ ಸೆಟ್ ನಲ್ಲಿ ಆಗುತ್ತಿದ್ದ ಜಗಳ ಇದೀಗ ಬೀದಿಗೆ ಬಂದಿದೆ. ಹಾಗಾಗಿ ಅನಿವಾರ್ಯವಾಗಿ ಇಂಥದ್ದೊಂದು ನಿರ್ಧಾರವನ್ನು ತಗೆದುಕೊಳ್ಳಲು ಕಿರುತೆರೆ ನಿರ್ಮಾಪಕರ ಸಂಘ ಮುಂದಾಗಿದೆ.

    ಕನ್ನಡ ಕಿರುತೆರೆ ನಿರ್ಮಾಪಕರ ಸಂಘಕ್ಕೆ ಜೊತೆ ಜೊತೆಯಲಿ ಧಾರಾವಾಹಿಯ ನಿರ್ಮಾಪಕ ಆರೂರು ಜಗದೀಶ್ ಕೊಟ್ಟ ದೂರಿನಲ್ಲಿ ಅನಿರುದ್ಧ ಮತ್ತು ಸೀರಿಯಲ್ ಟೀಮ್ ನಡುವೆ ಆಗಾಗ್ಗೆ ಗಲಾಟೆ ಆಗುತ್ತಲೇ ಇತ್ತಂತೆ. ಶೂಟಿಂಗ್ ಸೆಟ್ ಗೆ ತಡವಾಗಿ ಬರುವುದು, ಡೇಟ್ ಹೊಂದಾಣಿಕೆ ಮಾಡಿಕೊಳ್ಳದೇ ಇರುವುದು, ಬರೆದ ಡೈಲಾಗ್ ಅನ್ನು ಹೇಳಲ್ಲ ಅನ್ನುವುದು ಹೀಗೆ ನಾನಾ ರೀತಿಯಲ್ಲಿ ಅನಿರುದ್ಧ ಅವರು ಅಸಹಕಾರ ತೋರುತ್ತಿದ್ದರು ಎಂದು ಹೇಳಲಾಗಿದೆ.

    ಅನಿರುದ್ಧ ಮತ್ತು ಸೀರಿಯಲ್ ಟೀಮ್ ನಡುವಿನ ಗಲಾಟೆಯು ವಾಹಿನಿಯ ಅಂಗಳಕ್ಕೂ ತಲುಪಿರುವ ವಿಚಾರವನ್ನು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ಖಚಿತ ಪಡಿಸಿದ್ದಾರೆ. ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಅವರು, ‘ಈಗಾಗಲೇ ಈ ಗಲಾಟೆ ಇವತ್ತು, ನಿನ್ನೆಯದ್ದಲ್ಲ. ಹಲವು ತಿಂಗಳುಗಳಿಂದ ನಡೆಯುತ್ತಲೇ ಇದೆ. ವಾಹಿನಿಯ ಮುಖ್ಯಸ್ಥರು ಕೂಡ ಇಬ್ಬರನ್ನೂ ಕೂರಿಸಿಕೊಂಡು ಸಂಧಾನದ ಪ್ರಯತ್ನವನ್ನೂ ಮಾಡಿದ್ದಾರೆ. ಆದರೆ, ಅದು ಫಲ ಕೊಟ್ಟಿಲ್ಲ. ಹಾಗಾಗಿ ಅನಿವಾರ್ಯವಾಗಿ ಜಗದೀಶ್ ಅವರು ನಮ್ಮ ಸಂಘಕ್ಕೆ ದೂರು ನೀಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕೊನೆಗೂ ಶಿವಣ್ಣ, ಅನುಶ್ರೀ ಭೇಟಿಯಾಗಿ ಆಸೆ ಈಡೇರಿಸಿಕೊಂಡ ಕಾಫಿನಾಡು ಚಂದು

    ಆಗಸ್ಟ್ 18 ರಂದು ಎಂದಿನಂತೆ ಶೂಟಿಂಗ್ ಗೆ ಬಂದ ಅನಿರುದ್ಧ ಅವರು ಡೈಲಾಗ್ ವಿಚಾರವಾಗಿ ಮತ್ತೆ ಕಿರಿಕಿರಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಮಾತಿಗೆ ಮಾತು ಬೆಳೆದು, ಸೀರಿಯಲ್ ತಂಡ ಪ್ರಮುಖರೊಬ್ಬರಿಗೆ ‘ಈ ಮೂರ್ಖನ ಜೊತೆ ಕೆಲಸ ಮಾಡಲ್ಲ’ ಎಂದು ಹೇಳುತ್ತಾ ಕ್ಯಾಮೆರಾಗೆ ಕೈ ಮುಗಿದು ಅಲ್ಲಿಂದ ಮನೆಗೆ ತೆರಳಿದರು ಎನ್ನುತ್ತಾರೆ ತಂಡದ ಸದಸ್ಯರು. ಈ ಬೆಳವಣಿಗೆಯೇ ಅನಿರುದ್ಧ ಅವರನ್ನು ಸೀರಿಯಲ್ ನಿಂದ ಕೈ ಬಿಡಲು ಕಾರಣವಾಗಿದೆಯಂತೆ.

    Live Tv
    [brid partner=56869869 player=32851 video=960834 autoplay=true]

  • ಅನಿರುದ್ಧ ಬ್ಯಾನ್ : ಕಿರುತೆರೆ ನಿರ್ಮಾಪಕರ ಸಂಘದಿಂದ ಖಡಕ್ ನಿರ್ಧಾರ

    ಅನಿರುದ್ಧ ಬ್ಯಾನ್ : ಕಿರುತೆರೆ ನಿರ್ಮಾಪಕರ ಸಂಘದಿಂದ ಖಡಕ್ ನಿರ್ಧಾರ

    ಜೊತೆ ಜೊತೆಯಲಿ ಧಾರಾವಾಹಿಯಿಂದ ಕೊನೆಗೂ ಅನಿರುದ್ದ ಹೊರ ನಡೆಯುವುದು ನಿಶ್ಚಿತವಾಗಿದೆ. ಮತ್ತೆ ಆ ಧಾರಾವಾಹಿಯಲ್ಲಿ ಅವರನ್ನು ತಗೆದುಕೊಳ್ಳಬಾರದು ಹಾಗೂ ಬೇರೆ ಯಾವುದೇ ಧಾರಾವಾಹಿ, ರಿಯಾಲಿಟಿ ಶೋಗಳಲ್ಲಿ ಅನಿರುದ್ಧ ಅವರನ್ನು ಆಯ್ಕೆ ಮಾಡಿಕೊಳ್ಳಬಾರದು ಎಂದು ಕಿರುತೆರೆ ನಿರ್ಮಾಪಕರ ಸಂಘವು ನಿರ್ಧಾರ ತಗೆದುಕೊಂಡಿದೆ. ಜೊತೆ ಜೊತೆಯಲಿ ಧಾರಾವಾಹಿ ನಿರ್ಮಾಪಕ ಆರೂರು ಜಗದೀಶ್ ನೀಡಿದ ದೂರಿನ ಮೇರೆಗೆ ಇಂಥದ್ದೊಂದು ನಿರ್ಧಾರ ತಗೆದುಕೊಳ್ಳುವುದಾಗಿ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿರುವ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ , ‘ಅನಿರುದ್ಧ ಅವರ ಮೇಲೆ ನಿರ್ಮಾಪಕರು ದೂರು ನೀಡಿದ್ದರು. ಅದನ್ನು ಪರಿಶೀಲಿಸಿ ಮಹತ್ವದ ನಿರ್ಧಾರವೊಂದನ್ನು ತಗೆದುಕೊಂಡಿದ್ದೇನೆ. ಅವರನ್ನು ಬ್ಯಾನ್ ಮಾಡಿದ್ದೇವೆ ಎಂದು ಹೇಳುತ್ತಿಲ್ಲ. ಆದರೆ, ಮುಂದೆ ಯಾರೂ ಅವರನ್ನು ಧಾರಾವಾಹಿಗಾಗಲಿ, ರಿಯಾಲಿಟಿ ಶೋಗಾಗಿ ಆಯ್ಕೆ ಮಾಡಿಕೊಳ್ಳಬಾರದು ಎಂದು ನಿರ್ಧಾರ ಮಾಡಿದ್ದೇವೆ. ಈ ಕುರಿತು ವಾಹಿನಿಗೂ ತಿಳಿಸಿದ್ದೇವೆ’ ಅಂದರು. ಇದನ್ನೂ ಓದಿ: ಫಸ್ಟ್‌ ಟೈಮ್ ಮುದ್ದಾದ ಎರಡೂ ಮಕ್ಕಳ ಮುಖ ತೋರಿಸಿದ ನಟಿ ಅಮೂಲ್ಯ

    ಕೇವಲ ಅನಿರುದ್ಧ ಮಾತ್ರವಲ್ಲ, ಅನೇಕ ಕಲಾವಿದರು ಹೀಗೆಯೇ ನಿರ್ಮಾಪಕರಿಗೆ ತೊಂದರೆ ಕೊಡುತ್ತಲೇ ಇದ್ದಾರೆ. ಅವರನ್ನು ಸರಿದಾರಿಗೆ ತರಲು ಏನಾದರೂ ಒಂದು ಕಠಿಣ ಕ್ರಮವನ್ನು ತಗೆದುಕೊಳ್ಳಲೇಬೇಕು. ನಿರ್ಮಾಪಕರಿಗೆ ತೊಂದರೆ ಆದರೆ, ಅನೇಕರಿಗೆ ಅದರಿಂದ ಕೆಟ್ಟ ಪರಿಣಾಮ ಬೀರುತ್ತದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಅನಿರುದ್ಧ ಘಟನೆಯು ಇತರರಿಗೆ ಪಾಠವಾಗಬೇಕು ಎನ್ನುತ್ತಾರೆ ಭಾಸ್ಕರ್.

    ಅನಿರುದ್ಧ ವಿಚಾರವಾಗಿ ಈಗಾಗಲೇ ಜೀ ಕನ್ನಡ ವಾಹಿನಿಯೊಂದಿಗೆ ಮಾತನಾಡಿರುವುದಾಗಿ ಭಾಸ್ಕರ್ ತಿಳಿಸಿದರು. ಈಗಾಗಲೇ ಹಲವು ಬಾರಿ ವಾಹಿನಿಯು ಕೂಡ ಅನಿರುದ್ಧ ಮತ್ತು ನಿರ್ಮಾಪಕರ ನಡುವೆ ರಾಜಿ  ಸಂಧಾನ ಮಾಡಿದೆಯಂತೆ. ಆದರೂ, ಅದು ಸರಿ ಹೋಗದೇ ಇರುವ ಕಾರಣಕ್ಕಾಗಿ ಅನಿವಾರ್ಯವಾಗಿ ಇಂಥದ್ದೊಂದು ಕ್ರಮ ತಗೆದುಕೊಳ್ಳಬೇಕಾಗಿದೆ ಎನ್ನುತ್ತಾರೆ ಭಾಸ್ಕರ್.

    Live Tv
    [brid partner=56869869 player=32851 video=960834 autoplay=true]