Tag: Arvind Bellad

  • ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ – ಹೋಮ ನೆರವೇರಿಸಿ ಬಿಜೆಪಿ ಕೌಂಟರ್‌

    ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ – ಹೋಮ ನೆರವೇರಿಸಿ ಬಿಜೆಪಿ ಕೌಂಟರ್‌

    ಹುಬ್ಬಳ್ಳಿ: ಇಲ್ಲಿನ ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ (Quran) ಪಠಣ ಖಂಡಿಸಿ ಧಾರವಾಡದಲ್ಲಿ ಬಿಜೆಪಿ ಶಾಸಕ ಬೆಲ್ಲದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು.

    ಧಾರವಾಡ (Dharwad) ಡಿಸಿ ಕಚೇರಿ ಎದುರು ಹೋಮ ಮಾಡಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ರು. ಸರ್ಕಾರಿ ಕಚೇರಿ ಶುದ್ಧೀಕರಣ ಮಾಡೋದಾಗಿ ರುದ್ರಪಠಣ ಮಾಡಿ ಅರ್ಚಕರ ಮೂಲಕ ಹೋಮ ಮಾಡಿಸಿದ್ರು. ಇದನ್ನೂ ಓದಿ: ಕಟ್ಟಡ ಕಾರ್ಮಿಕರ ಶೆಡ್‌ನಲ್ಲಿ ಅಗ್ನಿ ಅವಘಡ – ಚಿಕಿತ್ಸೆ ಫಲಿಸದೇ ನಾಲ್ವರು ಸಾವು, ಮೂವರ ಸ್ಥಿತಿ ಗಂಭೀರ

    ಮುಲ್ಲಾ ಮೋಕ್ಷ ಹೋಮ ಎಂದು ಪ್ಲೆಕಾರ್ಡ್ ಹಿಡಿದು ಕಿಡಿಕಾರಿದ್ರು. ಕಾಂಗ್ರೆಸ್ ಶಾಸಕರಿಗೆ (Congress MLAs), ಸಚಿವರಿಗೆ ದೇವರು ಒಳ್ಳೆ ಬುದ್ಧಿಕೊಡಲಿ ಎಂದು ಶಾಸಕ ಅರವಿಂದ ಬೆಲ್ಲದ್ (Arvind Bellad) ಮಂಗಳಾರತಿ ನೆರವೇರಿಸಿದ್ರು. ಇದನ್ನೂ ಓದಿ: ಕಾಂತಾರ ಚಾಪ್ಟರ್‌ 1 ಸಕ್ಸಸ್‌ ಬೆನ್ನಲ್ಲೇ ಕಟೀಲು ಅಮ್ಮನ ದರ್ಶನ ಪಡೆದ ವಿಜಯ್‌ ಕಿರಗಂದೂರು

    ಬಳಿಕ ಮಾತನಾಡಿ, ಸರ್ವರನ್ನೂ ಸಮನಾಗಿ ನೋಡುವ ಸಿದ್ಧಾರೂಢ ಮಠದಲ್ಲಿ ಕುರಾನ್ ಪಠಾಣ್ ಮಾಡುವ ಕೆಲಸ ಸಂತೋಷ್ ಲಾಡ್ ಅಧ್ಯಕ್ಷತೆ ಕಾರ್ಯಕ್ರಮದಲ್ಲಿ ನಡೆದಿದೆ ಅಂತ ಕಿಡಿಕಾರಿದ್ರು. ಇದನ್ನೂ ಓದಿ: ಬಾಕ್ಸಾಫೀಸ್‌ನಲ್ಲಿ ಕಾಂತಾರ ಚಾಪ್ಟರ್‌ 1 ಮಿಂಚಿನ ಓಟ – ಸಿದ್ಧಿವಿನಾಯಕನ ದರ್ಶನ ಪಡೆದ ರಿಷಬ್‌

  • 2026ರ ಡಿಸೆಂಬರ್ ಒಳಗೆ 1,80,253 ಮನೆ ಪೂರ್ಣ – ಜಮೀರ್ ಗ್ಯಾರಂಟಿ

    2026ರ ಡಿಸೆಂಬರ್ ಒಳಗೆ 1,80,253 ಮನೆ ಪೂರ್ಣ – ಜಮೀರ್ ಗ್ಯಾರಂಟಿ

    ಬೆಂಗಳೂರು: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ (Slum Development Board) ವತಿಯಿಂದ ಪಿಎಂಎವೈ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಪ್ರಗತಿಯಲ್ಲಿರುವ 1,80,253 ಮನೆಗಳ ಕಾಮಗಾರಿಯನ್ನು 2026ರ ಡಿಸೆoಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ತಿಳಿಸಿದರು.

    ಶಾಸಕ ಸಿದ್ದು ಪಾಟೀಲ್ ಅವರ ಪ್ರಶ್ನೆಗೆ ವಿಧಾನಸಭೆಯಲ್ಲಿ ಉತ್ತರಿಸಿದ ಸಚಿವರು, ಫಲಾನುಭವಿಗಳ ವಂತಿಗೆ ಪಾವತಿ ಆಗದ ಕಾರಣ ಯೋಜನೆಗೆ ಸಮಸ್ಯೆ ಉಂಟಾಗಿತ್ತು. ಮುಖ್ಯಮಂತ್ರಿಗಳಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟು ಬಡವರ ಮನೆಗೆ ಸರ್ಕಾರವೇ ಫಲಾನುಭವಿಗಳ ವಂತಿಗೆ ಪಾವತಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. 500 ಕೋಟಿ ರೂ. ಬಿಡುಗಡೆ ನಂತರ ಮೊದಲ ಹಂತದಲ್ಲಿ 36,789 ಮನೆ ಹಂಚಿಕೆ ಮಾಡಿ 2ನೇ ಹಂತದಲ್ಲಿ 40,345 ಮನೆ ಹಂಚಿಕೆಗೆ ಸಿದ್ಧತೆ ನಡೆದಿದೆ. ಸಿಎಂ 2026ರ ಒಳಗೆ ಪೂರ್ಣ ಗೊಳಿಸಲು ಸೂಚಿಸಿದ್ದು ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಜಮೀರ್ ಮಾಹಿತಿ ನೀಡಿದರು.

    ಅರವಿಂದ್ ಬೆಲ್ಲದ್ ಅವರ ಉಪ ಪ್ರೆಶ್ನೆಗೆ ಉತ್ತರಿಸಿದ ಸಚಿವರು, ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬಡ ಕುಟುಂಬಗಳಿಗೆ 47,870 ಮನೆ ನಿರ್ಮಾಣ ಯೋಜನೆ ಸಹ ಫಲಾನುಭವಿಗಳ ವಂತಿಗೆ ಪಾವತಿ ಆಗದ ಕಾರಣ, ಆ ವಿಚಾರ ಸಹ ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದು, ಸರ್ಕಾರವೇ ವಂತಿಗೆ ಭರಿಸಲು ತಾತ್ವಿಕ ಒಪ್ಪಿಗೆ ದೊರೆತಿದ್ದು, ಸಂಪುಟಕ್ಕೆ ತಂದು ಒಪ್ಪಿಗೆ ಪಡೆಯಲಾಗುವುದು. ಆ ಮನೆಗಳನ್ನ ಆದಷ್ಟು ಬೇಗ ಪೂರ್ಣಗೊಳಿಸಿ ಹಂಚಿಕೆ ಮಾಡಲಾಗುವುದು ಎಂದು ಸಚಿವ ಜಮೀರ್ ವಿವರಿಸಿದರು.

  • ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ ನಡೆದಿದೆ: ಬೆಲ್ಲದ್‌ ಗಂಭೀರ ಆರೋಪ

    ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ ನಡೆದಿದೆ: ಬೆಲ್ಲದ್‌ ಗಂಭೀರ ಆರೋಪ

    ಹುಬ್ಬಳ್ಳಿ: ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳಿಗೆ (Jayamruthyunjaya Swamiji) ವಿಷಪ್ರಾಶನ ಪ್ರಯತ್ನ ನಡೆದಿದೆ. ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಅಂತ ಯೋಚನೆ ಮಾಡಿದ್ದಾರೆ ಎಂದು ವಿಧಾನ ಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ್ (Arvind Bellad) ಹೊಸ ಬಾಂಬ್ ಸಿಡಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ‘ಪಬ್ಲಿಕ್ ಟಿವಿ’ಗೆ ಹೇಳಿಕೆ ನೀಡುವಾಗ ಗಂಭೀರ ಆರೋಪ ಮಾಡಿರುವ ಅವರು, ಶ್ರೀಗಳ ಆರೋಗ್ಯ ಹದಗೆಟ್ಟಿದೆ. ಅವರಿಗೆ ಫುಡ್ ಪಾಯಿಸನ್ ಆಗಿದೆ ಅಂತ ಗೊತ್ತಿತ್ತು. ಇದಕ್ಕೆ ಕಾರಣ ಬೇರೆಯಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಡಾ ಕೇಸ್ | ಸಿಎಂ ಪತ್ನಿ ವಿಚಾರಣೆ ರದ್ದು – ನಿಮ್ಮನ್ಯಾಕೆ ರಾಜಕೀಯಕ್ಕೆ ಬಳಕೆ ಮಾಡ್ತಾರೆ?: ಇ.ಡಿಗೆ ಸುಪ್ರೀಂ ಛೀಮಾರಿ

    ಮಠದ ಹೊರಗಡೆ ಇಬ್ಬರು ಮುಸ್ಲಿಂ ಸಮಾಜದ ಹುಡುಗರು ಇದ್ದಾರೆ. ಆ ಇಬ್ಬರು ಮಠಕ್ಕೆ ಯಾರು ಬರ್ತಾರೆ ಯಾರು ಹೋಗತ್ತಾರೆ ಅಂತ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ವಿಡಿಯೋ ಸಹ ಮಾಡಿಕೊಳ್ಳುತ್ತಿದ್ದಾರೆ ಅಂತ ಭಕ್ತರು ನನಗೆ ಹೇಳಿದ್ದಾರೆ‌. ಅದೇ ಮುಸ್ಲಿಂ ಯುವಕರು ಅಡುಗೆ ಮನೆಗೆ ಹೋಗಿದ್ದರು. ಈ ಬಗ್ಗೆ ಸ್ಥಳೀಯ ಭಕ್ತರು ಯುವಕರನ್ನು ವಿಚಾರಣೆ ಮಾಡಿದ್ದಾರೆ. ಆ ಯುವಕರು ಅಡುಗೆ ಮನೆಗೆ ಹೋಗಿ ಬಂದ ಕೆಲವೆ ಹೊತ್ತಿನಲ್ಲಿ ಶ್ರೀಗಳ ಆರೋಗ್ಯ ಹದಗೆಟ್ಟಿದೆ ಶ್ರೀಗಳು ಈ ಬಗ್ಗೆ ನನಗೆ ಮುಂದೆ ಹೇಳಿಕೊಂಡಿದ್ದಾರೆ. ನನಗೆ ಮನಸ್ಸಿ ಸರಿಯಾಗುತ್ತಿಲ್ಲ, ನನಗೆ ವಿಷ ಪ್ರಾಶನ ಆಗಿದೆ ಅಂತ ಅನುಮಾನ ವ್ಯಕ್ತಪಡಿಸಿದ್ದಾರೆ.

    ಊಟದಲ್ಲಿ ಏನೋ ಹೆಚ್ಚು ಕಡಿಮೆ ಹಾಕಲಾಗಿದೆ. ಈ ಕೆಟ್ಟ ಕೆಲಸ ಮಾಡುತ್ತಿದ್ದಾರೆ. ಸಮಾಜ ನೋಡುತ್ತಿದೆ. ಅವರು ಮಾಡಿದ ಕೆಟ್ಟ ಕೆಲಸಕ್ಕೆ ತಕ್ಕ ಶಿಕ್ಷೆ ಸಮಾಜ ನೀಡುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗುತ್ತೆ: ಜನಾರ್ದನ ರೆಡ್ಡಿ

  • ಚಿನ್ನಸ್ವಾಮಿ ಘಟನೆ ಬಗ್ಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮಾತಾಡಲಿ: ಅರವಿಂದ್ ಬೆಲ್ಲದ್

    ಚಿನ್ನಸ್ವಾಮಿ ಘಟನೆ ಬಗ್ಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮಾತಾಡಲಿ: ಅರವಿಂದ್ ಬೆಲ್ಲದ್

    ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ (Chinnaswamy Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ರಾಹುಲ್ ಗಾಂಧಿ (Rahul Gandhi), ಸೋನಿಯಾ ಗಾಂಧಿ (Sonia Gandhi) ಮಾತನಾಡಬೇಕು ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ್ (Arvind Bellad) ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ ಕಾಲ್ತುಳಿತ ಘಟನೆಗೆ ಸಿಎಂ, ಡಿಸಿಎಂ, ಗೃಹ ಸಚಿವರೇ ಕಾರಣ. ತಕ್ಷಣ ಹೊಣೆ ಹೊತ್ತು 3 ಜನ ರಾಜೀನಾಮೆ ಕೊಡಬೇಕು. ವಿಧಾನಸೌಧ ಎದುರಿನ ವೇದಿಕೆ 25-30 ಜನರಿಗೆ ಮಾತ್ರ ಸೀಮಿತವಾಗಿತ್ತು. ಆದರೆ 350 ಜನ ಬಂದಿದ್ದರು. ಸಚಿವರ ಕುಟುಂಬದವರೇ ತುಂಬಿದ್ದರು. ಘಟನೆ ಬಳಿಕ ಕಣ್ಣೀರಿನ ರಾಜಕಾರಣ ಮಾಡಿದರು. ಘಟನೆ ತಿಳಿದಿದ್ದರೂ ಡಿಸಿಎಂ ಸ್ಟೇಡಿಯಂಗೆ ಹೋಗಿ ಕಪ್‌ಗೆ ಮುತ್ತು ಕೊಟ್ಟಿದ್ದಾರೆ. ಸಾವಿನ ಮೇಲೆ ರಾಜಕೀಯ ಮಾಡುತ್ತಿರುವುದು ಯಾರು? ನಾಚಿಕೆ ಆಗಲ್ವಾ ಇವರಿಗೆ? ನಿಮಗೆ ಮಕ್ಕಳಿಲ್ವಾ, ಮನುಷ್ಯತ್ವ ಇಲ್ವಾ? ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 11 ಅಮಾಯಕ ಜೀವಗಳ ಬಲಿ ಪಡೆದು ಈ ಸರ್ಕಾರ ಪಾಪಕ್ಕೆ ಗುರಿಯಾಗಿದೆ: ಸೋಮಣ್ಣ

    ಈಗ ವಿಷಯಾಂತರ ಮಾಡಲು ಮುಂದಿನ ಸಂಪುಟಕ್ಕೆ ಜಾತಿಗಣತಿ ವಿಷಯ ತರುತ್ತಿದ್ದಾರೆ.ರಾಜ್ಯದ ಜನ ಇವರನ್ನು ಕ್ಷಮಿಸಲ್ಲ. ಜನರ ಮುಂದೆ ನಾವು ಹೋಗಬೇಕಾದ ಅವಶ್ಯಕತೆ ಇದೆ. ಈ ಬಗ್ಗೆ ಪಕ್ಷದಲ್ಲಿ ಚರ್ಚೆ ಮಾಡುತ್ತಿದ್ದೇವೆ.ನಿಜವಾದ ತಲೆದಂಡ ಆಗಬೇಕಾಗಿದ್ದು ಪೊಲಿಸರದ್ದಲ್ಲ. ಸಿಎಂ, ಡಿಸಿಎಂ, ಗೃಹ ಸಚಿವರ ತಲೆದಂಡ ಆಗಬೇಕು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಏನೂ ಮಾತಾಡಿಲ್ಲ. ಮಲಗಿಕೊಂಡಿದ್ದಾರಾ ಅವರು? ಕಾಂಗ್ರೆಸ್ ಹೈಕಮಾಂಡ್ ಘಟನೆ ಬಗ್ಗೆ ಮಾತನಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಘಟನೆ ಸರ್ಕಾರದ ಪ್ರಾಯೋಜಿತ ಕೊಲೆ: ಅರಗ ಜ್ಞಾನೇಂದ್ರ

  • ಸದನದಲ್ಲಿ ಟೀ-ಕಾಫಿ ವ್ಯವಸ್ಥೆ; ಸ್ಪೀಕರ್ ಸಮರ್ಥನೆ – ಬಿಜೆಪಿ ಶಾಸಕ ಬೆಲ್ಲದ್ ವಿರೋಧ

    ಸದನದಲ್ಲಿ ಟೀ-ಕಾಫಿ ವ್ಯವಸ್ಥೆ; ಸ್ಪೀಕರ್ ಸಮರ್ಥನೆ – ಬಿಜೆಪಿ ಶಾಸಕ ಬೆಲ್ಲದ್ ವಿರೋಧ

    ಬೆಂಗಳೂರು: ವಿಧಾನಸಭೆ ಸಭಾಂಗಣದೊಳಗೆ ಟೀ ಕಾಫಿ ವ್ಯವಸ್ಥೆ ಮಾಡುವ ವಿಚಾರವಾಗಿ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ (Arvind Bellad) ವಿರೋಧ ವ್ಯಕ್ತಪಡಿಸಿದ್ದಾರೆ.

    ವಿಧಾನಸಭೆಯಲ್ಲಿ ಎದ್ದುನಿಂತು ಆಕ್ಷೇಪ ವ್ಯಕ್ತಪಡಿಸಿದ ಅರವಿಂದ ಬೆಲ್ಲದ್, ಅಧ್ಯಕ್ಷರೇ, ಸದನದ ಒಳಗೆ ಟೀ ಕಾಫಿ ವ್ಯವಸ್ಥೆ ಮಾಡುತ್ತೀರಿ ಎಂದು ವರದಿ ಬರುತ್ತಿದೆ, ಇದು ಬೇಡ, ಸರಿಯಲ್ಲ ಎಂದರು. ಆಗ ಸ್ಪೀಕರ್ (UT Khader) ತಿರುಗೇಟು ನೀಡಿ ಏನ್ರೀ, ಅದನ್ನ ಇಲ್ಲಿ ಚರ್ಚೆ ಮಾಡೋದಾ? ನನ್ನ ಕೊಠಡಿಗೆ ಬಂದು ಮಾತಾಡಿ. ಬೇಡ ಅಂದ್ರೆ ಬೇಡ, ಮುಗೀತು ಬಿಡಿ. ಕುಳಿತುಕೊಳ್ಳಿ ಎಂದು ಸೂಚಿಸಿದರು. ಇದನ್ನೂ ಓದಿ: ಕಮ್ಯೂನಲ್ ಕ್ರಿಮಿನಲ್‌ಗಳಿಗೆ ಸಪೋರ್ಟ್ ಮಾಡುವ ರಾಜನೀತಿ ದೇಶಕ್ಕೆ ಅಪಾಯಕಾರಿ: ಸಿ.ಟಿ.ರವಿ

    ಇನ್ನು ಇದಕ್ಕೂ ಮುನ್ನ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸ್ಪೀಕರ್, ನಾನೊಬ್ಬ ಸಭಾಧ್ಯಕ್ಷನಾಗಿ ಶಾಸಕರಿಗೆ ವ್ಯವಸ್ಥೆ ಮಾಡೋದು ನನ್ನ ಕೆಲಸ. ಶಾಸಕರನ್ನ ವೈರಿಗಳಂತೆ ನೋಡಬೇಡಿ. ಶಾಸಕರು ಎಲ್ಲಾ ವಯಸ್ಸಿನವರು ಇದ್ದಾರೆ. ದೂರದ ಹೊಟೆಲ್, ಶಾಸಕರ ಭವನಕ್ಕೆ ಹೋಗಿ ರೆಸ್ಟ್ ತೆಗೆದುಕೊಳ್ಳುವ ಬದಲು ಇಲ್ಲಿಯೇ ವ್ಯವಸ್ಥೆ ಮಾಡಿದರೆ ಅನುಕೂಲ ಎಂದು ವ್ಯವಸ್ಥೆ ಮಾಡಿದ್ದೇವೆ. ಈ ವ್ಯವಸ್ಥೆಗೆ 4 ಲಕ್ಷ ಮೌಲ್ಯ ಆಗಬಹುದು, ದೊಡ್ಡ ಮಟ್ಟದ ಹಣ ಬೇಕಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ರಾಯರ 430ನೇ ಜನ್ಮದಿನ ಸಂಭ್ರಮ – ನೂರಾರು ಕಲಾವಿದರಿಂದ ನಾದಹಾರ ಸೇವೆ

    224 ಶಾಸಕರ ಅನುಕೂಲಕ್ಕೆ 4 ಲಕ್ಷ ದೊಡ್ಡ ಮಟ್ಟದ ಖರ್ಚಲ್ಲ. ಎಲ್ಲರಿಗೂ ಲೆಕ್ಕ ಹಾಕಿದರೆ 2 ಸಾವಿರ ಬರಲ್ಲ. ಮಸಾಜ್ ಚೇರ್‌ಗೆ ಯಾವುದೇ ಖರ್ಚಿಲ್ಲ. ಬಿಜೆಪಿಯವರು ಕೂಡ ನಮ್ಮ ಸಭಾಂಗಣದಲ್ಲಿ ಹಾಕಿ ಎಂದು ಹೇಳಿದ್ರು. ಸೀಮಿತವಾಗಿ ಹಾಕಿಸಿದ್ದೇವೆ. ಟೀಕೆ ಮಾಡುವವರು ಇರುತ್ತಾರೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸನಾತನ ಧರ್ಮದ ಕುರಿತ ಹೇಳಿಕೆ – ಉದಯನಿಧಿ ಸ್ಟಾಲಿನ್ ವಿರುದ್ಧ ಕೋರ್ಟ್ ಅನುಮತಿಯಿಲ್ಲದೇ ದೂರು ದಾಖಲಿಸುವಂತಿಲ್ಲ: ಸುಪ್ರೀಂ

    ಸದನದಲ್ಲಿ ಹೆಚ್ಚಾಗಿ ಶಾಸಕರು ಪಾಲ್ಗೊಳ್ಳಲಿ ಎಂದು ವ್ಯವಸ್ಥೆ ಮಾಡಿದ್ದೇವೆ. ಈಗಾಗಲೇ ಸದನದ ಒಳಗೆ ಶಾಸಕರಿಗೆ ನೀರಿನ ವ್ಯವಸ್ಥೆ ಮಾಡಿದ್ದೇವೆ. ಟೀ- ಕಾಫಿ ವ್ಯವಸ್ಥೆ ಬಗ್ಗೆಯೂ ಚಿಂತಿಸಿದ್ದೇವೆ. ಶಾಸಕರಿಗೆ ಕ್ಲಬ್ ವ್ಯವಸ್ಥೆ ಬಗ್ಗೆ ಸಿದ್ಧತೆ ಮಾಡುತ್ತಿದ್ದೇವೆ. ಆದಷ್ಟು ಬೇಗ ಕೆಲಸ ಮಾಡುತ್ತೇವೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ನನ್ನನ್ನು ಎಲ್ಲರೂ ಸೇರಿ ಟ್ರ್ಯಾಪ್‌ ಮಾಡಿದ್ರು.. ಅದ್ಕೆ ಈ ರೀತಿ ಕೆಲಸ ಮಾಡಿದ್ದೇನೆ: ನಟಿ ರನ್ಯಾ ಅಳಲು

  • ಶ್ಯಾಮನೂರಿಗೆ ವಯಸ್ಸಾಗಿದೆ, ಮನೆಯಲ್ಲಿರೋದು ಸೂಕ್ತ: ಅರವಿಂದ್ ಬೆಲ್ಲದ್‌

    ಶ್ಯಾಮನೂರಿಗೆ ವಯಸ್ಸಾಗಿದೆ, ಮನೆಯಲ್ಲಿರೋದು ಸೂಕ್ತ: ಅರವಿಂದ್ ಬೆಲ್ಲದ್‌

    – ಮುಡಾ ಹಗರಣದ ಹಗ್ಗ ಸಿಎಂ ಕೊರಳಿಗೆ ಸುತ್ತಲು ಬಹಳ ದಿನ ಉಳಿದಿಲ್ಲ

    ಧಾರವಾಡ: ಬಸವಣ್ಣ ಇರುವ ಅನುಭವ ಮಂಟಪ ಇವತ್ತು ಅನುಭವ ಮಂಟಪ ಆಗಿ ಉಳಿದಿಲ್ಲ. ಅಲ್ಲಿ ಪೀರ್ ಭಾಷಾ ಅವರ ಒಂದು ಪೀರ್ ನಡೆಯುತ್ತಿದೆ. ಈ ಸರ್ಕಾರ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರಕ್ಕೆ ಒಂದೇ ಒಂದು ರೂ. ಹಣ ಬಿಡುಗಡೆ ಮಾಡಿಲ್ಲ ಅದಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶ್ಯಾಮನೂರು ಚಕಾರ ಎತ್ತಿಲ್ಲ ಎಂದು ಅರವಿಂದ್ ಬೆಲ್ಲದ್‌ (Arvind Bellad) ಕಿಡಿಕಾರಿದ್ದಾರೆ.

    ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ಯಾಮನೂರು (Shamanur Shivashankarappa) ಅವರು ಯತ್ನಾಳ್ (Basangouda Patil Yatnal) ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ಯತ್ನಾಳ್‌ ಬಗ್ಗೆ ಶ್ಯಾಮನೂರು ಅವರ ಬಾಯಲ್ಲಿ ಆ ರೀತಿಯ ಪದ ಬರಬಾರದು. ಅದು ಅವರಿಗೆ ಶೋಭೆ ತರುವಂತದ್ದಲ್ಲ. ಒಣ ಬಾವಿಯಲ್ಲಿ ದೂಡಬೇಕು ಎಂದರೆ ಏನು? ಯತ್ನಾಳ್‌ ಅವರು ಹೇಳಿದ್ದು ಸರಿ ಇದೆ. ಶ್ಯಾಮನೂರು ಅವರು ಬಸವ ಕಲ್ಯಾಣದಲ್ಲಿ ಏನು ಮಾಡಿದ್ದಾರೆ? ಅವರಿಗೆ ವಯಸ್ಸಾಗಿದೆ. ಅವರು ಮನೆಯಲ್ಲಿ ಕುಳಿತುಕೊಳ್ಳೋದು ಒಳ್ಳೆಯದು. ಈ ರೀತಿ ಬಾಯಿಗೆ ಬಂದಂತೆ ಮಾತನಾಡೋದು ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಯತ್ನಾಳ್‌ ಹಾಗೂ ವಿಜಯೇಂದ್ರ ತಂಡದ ಮಧ್ಯೆ ಹೈಕಮಾಂಡ್ ಮಧ್ಯೆ ಪ್ರವೇಶಿಸಿರುವ ವಿಚಾರವಾಗಿ, ಪಕ್ಷದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಾಗಿದೆ. ಪಕ್ಷದಲ್ಲಿ ಇದ್ದ ಗೊಂದಲ ಹೈಕಮಾಂಡ್‌ ಮಧ್ಯಸ್ಥಿಕೆಯಿಂದ ಶಾಂತವಾಗಿದೆ. ಲಕ್ಷಾಂತರ ಕಾರ್ಯಕರ್ತರಿಗೆ ಸಂತೋಷವಾಗಿದೆ. ಪಕ್ಷ ಎಂದ ಮೇಲೆ ಸ್ವಲ್ಪ ಭಿನ್ನಾಭಿಪ್ರಾಯ ಇರೋದು ಸಹಜ. ಈ ಭಿನ್ನಾಭಿಪ್ರಾಯ ಇತ್ಯರ್ಥ ಆಗುವ ಹಾದಿಯಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ, ಬೆಳಗಾವಿ ಅಧಿವೇಶನದ ವೇಳೆ ಹೋರಾಟದ ಬೃಹತ್ ಸಭೆ ಇಟ್ಟುಕೊಂಡಿದ್ದೇವೆ. ಬಿಜೆಪಿ ಸರ್ಕಾರ ಇದ್ದಾಗ ಮೀಸಲಾತಿ ಕೊಡಲಾಗಿತ್ತು. ಈ ಸರ್ಕಾರ ಅದಕ್ಕೆ ಅಡೆತಡೆ ಹಾಕುವಂತಹ ಕೆಲಸ ಮಾಡುತ್ತಿದೆ. ಅದಕ್ಕೆ ನಾವು ಹೋರಾಟ ಮಾಡುತ್ತಿದ್ದೇವೆ ಎಂದಿದ್ದಾರೆ.

    ಮುಡಾ ಕೇಸ್‌ ವಿಚಾರವಾಗಿ, ಇಡಿ ಎಂಟ್ರಿ ಕೊಟ್ಟು ಬಹಳ ದಿನಗಳಾಗಿವೆ. ಸಿಎಂ ಅವರು ಈ ಹಗರಣದಲ್ಲಿದ್ದಾರೆ. ಸುಮಾರು 5 ಸಾವಿರ ಕೋಟಿ ಅಕ್ರಮದಲ್ಲಿ ಸಿಎಂ ಕುಟುಂಬ ಭಾಗಿಯಾಗಿದೆ. ಹಂತ ಹಂತವಾಗಿ ತನಿಖೆ ನಡೆಯುತ್ತಿದೆ. ಈ ಹಗ್ಗ ಸಿಎಂ ಅವರ ಕೊರಳಿಗೆ ಸುತ್ತಿಕೊಳ್ಳಲು ಬಹಳ ದಿನ ಉಳಿದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

  • ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಬೇಕು: ಅರವಿಂದ ಬೆಲ್ಲದ್‌

    ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಬೇಕು: ಅರವಿಂದ ಬೆಲ್ಲದ್‌

    ಬೆಳಗಾವಿ: ಎಸ್‌ಡಿಎ ರುದ್ರಣ್ಣ ಯಡವಣ್ಣವರ್ ಆತ್ಮಹತ್ಯೆ (Rudranna Yadavannavar) ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ನೀಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್‌ (Arvind Bellad) ಆಗ್ರಹಿಸಿದ್ದಾರೆ.

    ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತನ್ನ ಪಿಎಗಳನ್ನು ಬಳಸಿ ಮಾಡುತ್ತಿರುವ ಅನ್ಯಾಯ ನೋಡಲಾಗದೇ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಗ್ರಾಮೀಣದಲ್ಲಿ ಜನ ಹೆಚ್ಚಿನ ಲೀಡ್‌ ನೀಡಿದ್ದರು. ಹೆಬ್ಬಾಳ್ಕರ್ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ. ಅಮಾಯಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ ಯಾವುದೇ ಬಂಧನ ಆಗಿಲ್ಲ. ತಹಶೀಲ್ದಾರ್‌ ಕಚೇರಿ ಸಿಸಿಟಿವಿಯನ್ನು ವಶಕ್ಕೆ ಪಡೆದುಕೊಂಡಿಲ್ಲ‌. ಸಾಕ್ಷಿ ನಾಶದ ಅನುಮಾನ ವ್ಯಕ್ತವಾಗಿದೆ ಎಂದು ದೂರಿದರು. ಇದನ್ನೂ ಓದಿ: ಸರ್‌ ಎಂ.ವಿಶ್ವೇಶ್ವರಯ್ಯ ಓದಿದ್ದ ಸರ್ಕಾರಿ ಶಾಲೆಯೂ ವಕ್ಫ್‌ ಹೆಸರಿಗೆ

     

    ಸಾಕ್ಷಿ ನಾಶ ಮಾಡುವ ಬಗ್ಗೆ ಜನರಿಗೆ ಸಂಶಯವಿದೆ. ಪೊಲೀಸ್ ಇಲಾಖೆ ತನ್ನ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ. ಸಿಎಂ‌ ಹಾಗೂ ಸಚಿವರ ಒತ್ತಡಕ್ಕೆ ಪೊಲೀಸ್ ಅಧಿಕಾರಿಗಳು ಮಣಿದಿದ್ದಾರೆ‌. ಪಿಎ ಮಾಡಿರುವ ಕೆಲಸಕ್ಕೆ ಸಚಿವರೇ ಹೊಣೆ ಹೊರಬೇಕು.ಪೊಲೀಸ್‌ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಸಿಬಿಐಗೆ ಪ್ರಕರಣದ ತನಿಖೆ ವಹಿಸಬೇಕು ಎಂದು ಬೆಲ್ಲದ್‌ ಆಗ್ರಹಿಸಿದರು.

    ರಾಜ್ಯ ಸರ್ಕಾರದ 16 ತಿಂಗಳಲ್ಲಿ ದಿನಕ್ಕೆ ಒಂದೊಂದು ಹಗರಣ ಹೊರಗೆ ಬರುತ್ತಿವೆ. ಭ್ರಷ್ಟಾಚಾರ ಅಂದರೆ ಕಾಂಗ್ರೆಸ್ ಎನ್ನುವಂತೆ ರಾಜ್ಯದಲ್ಲಿ ಆಗಿದೆ. ಯಾವುದೇ ಹಗರಣ ಬಂದರೂ ಅದರಲ್ಲಿ ಹೆಬ್ಬಾಳ್ಕರ್ ಹೆಸರು ಕೇಳಿ ಬರುತ್ತಿದೆ. ವಾಲ್ಮೀಕಿ ಹಗರಣ ಬಗ್ಗೆ ಸತೀಶ್ ಜಾರಕಿಹೊಳಿ ಚಕಾರ ಎತ್ತಿಲ್ಲ. ಮುಡಾ, ವಕ್ಫ್ ಇಲಾಖೆಯಲ್ಲಿ ಹಗರಣ ಮಾಡಿದ್ದಾರೆ. ಪ್ರವಾಸೋದ್ಯಮ, ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದರು.

     

  • ಸಿಎಂ ಸಿದ್ದರಾಮಯ್ಯಗೆ ಕ್ಷಮೆ ಕೋರಿದ ಅರವಿಂದ್ ಬೆಲ್ಲದ್

    ಸಿಎಂ ಸಿದ್ದರಾಮಯ್ಯಗೆ ಕ್ಷಮೆ ಕೋರಿದ ಅರವಿಂದ್ ಬೆಲ್ಲದ್

    ಬೆಂಗಳೂರು: ಕೆಲವು ದಿನಗಳ ಹಿಂದೆ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ (Arvind Bellad), ಈಗ ಸಿದ್ದರಾಮಯ್ಯರಿಗೆ (CM Siddaramaiah) ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ.

    ಕೆಲವು ದಿನಗಳ ಹಿಂದೆ ಸುದ್ದಿಗೋಷ್ಠಿಯಲ್ಲಿ ಸಿಎಂ ಅವರಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ವಿಚಾರವಾಗಿ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ ಕ್ಷಮೆ ಕೇಳಿದ್ದಾರೆ.ಇದನ್ನೂ ಓದಿ: ಬಾಲಿವುಡ್ ಸಿನಿಮಾ ಶೂಟಿಂಗ್‌ಗಾಗಿ ಹಂಪಿಗೆ ಬರಲಿದ್ದಾರೆ ರಶ್ಮಿಕಾ ಮಂದಣ್ಣ

    ಧಾರವಾಡದಲ್ಲಿ ಮಾತನಾಡಿದ್ದ ಅವರು, ‘ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ’ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರಿಗೆ ಅರವಿಂದ್ ಬೆಲ್ಲದ್ ಅವರು ಪತ್ರ ಬರೆದು ಕ್ಷಮೆ ಕೇಳಿದ್ದಾರೆ.

    ತಾವು ಬಳಸಿದ ಪದ ನನಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಕ್ಕೆ, ಈ ಹಿನ್ನಲೆಯಲ್ಲಿ ನಾನು ಕ್ಷಮೆ ಕೇಳುತ್ತೇನೆ ಎಂದು ಕ್ಷಮಾಪಣೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.ಇದನ್ನೂ ಓದಿ: 9.99 ಲಕ್ಷಕ್ಕೆ ಟಾಟಾ ಕರ್ವ್ ಬಿಡುಗಡೆ

    ಜಿಂದಾಲ್‌ಗೆ (Jindal) ಭೂಮಿ ಕೊಟ್ಟಿದ್ದಾರೆ. ಮಾರುಕಟ್ಟೆ ಮೌಲ್ಯದ ಒಂದು ಭಾಗಕ್ಕೆ ಬೆಲೆಬಾಳುವ ಸರ್ಕಾರಿ ಭೂಮಿಯನ್ನು ಮಾರಾಟ ಮಾಡಿದ್ದಾರೆ. ಈ ಮೂಲಕ ಇನ್ನೊಂದು ಹಗರಣವನ್ನು ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ಬೆಲ್ಲದ್ ಹರಿಹಾಯ್ದಿದ್ದರು.

    ಸರ್ಕಾರವು ಕಡಿಮೆ ಬೆಲೆಗೆ ಮಾರಾಟ ಮಾಡುವ ಮೂಲಕ ಆಂತರಿಕ ಒಪ್ಪಂದವನ್ನು ಮಾಡಿಕೊಂಡು ಭೂಮಿಯನ್ನು ಲೂಟಿ ಮಾಡುತ್ತಿದೆ ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

  • ಗೋ ರಕ್ಷಣೆಗೆ ಹೋದವರ ಮೇಲೆ ಹಲ್ಲೆ ಆರೋಪ; ಹಿಂದೂ – ಮುಸ್ಲಿಂ ಯುವಕರ ನಡುವೆ ಗಲಾಟೆ – ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ!

    ಗೋ ರಕ್ಷಣೆಗೆ ಹೋದವರ ಮೇಲೆ ಹಲ್ಲೆ ಆರೋಪ; ಹಿಂದೂ – ಮುಸ್ಲಿಂ ಯುವಕರ ನಡುವೆ ಗಲಾಟೆ – ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ!

    – ಧಾರವಾಡ ಉಪನಗರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ

    ಧಾರವಾಡ: ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾಗಿದ್ದ ಬಜರಂಗದಳದ ಕಾರ್ಯಕರ್ತ ಸೋಮಶೇಖರ್ ಎಂಬುವವರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಹೇಳಿಬಂದಿದೆ. ಈ ಬೆನ್ನಲ್ಲೇ ಹಿಂದೂ-ಮುಸ್ಲಿಮ್‌ ಯುವಕರ ನಡುವೆ ಗಲಾಟೆಯೂ ನಡೆದಿದ್ದು ಕೆವಲರಿಗೆ ಗಾಯಗಳಾಗಿರುವ ಘಟನೆ ಧಾರವಾಡ ನಗರದ ಎಪಿಎಂಸಿ ಬಳಿ ನಡೆದಿದೆ.

    ಹಲ್ಲೆಯನ್ನು ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸೋಮಶೇಖರ್ ಅವರ ಮೇಲೆ ಹಲ್ಲೆ ಮಾಡಿದ ಅನ್ಯಕೋಮಿನ ಜನರನ್ನು ಬಂಧಿಸುವಂತೆ ಆಗ್ರಹಿಸಿ ಬಜರಂಗದಳ ಕಾರ್ಯಕರ್ತರು ಉಪನಗರ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರಸಂಗವೂ ನಡೆಯಿತು.

    ಇನ್ನು ಪ್ರತಿಭಟನೆಗೆ ಆಗಮಿಸಿದ ಧಾರವಾಡ ಶಾಸಕ ಅರವಿಂದ ಬೆಲ್ಲದ್, ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದವರನ್ನು ನಾಳೆವರೆಗೆ ಬಂಧಿಸದೇ ಇದ್ದರೆ, ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸದ್ಯ ಪ್ರತಿಭಟನೆ ಹಿಂದಕ್ಕೆ ಪಡೆದಿದ್ದೇವೆ, ನಾಳೆ ಬೆಳಗಿನವರೆಗೂ ನಾವು ಕಾದು ನೋಡುತ್ತೇವೆ, ಆ ಬಳಿಕ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಬೆಲ್ಲದ್ ತಿಳಿಸಿದರು.

    ನಂತರ ಮಾತನಾಡಿದ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್, ಜಾನುವಾರುಗಳ ಸಾಗಾಟಕ್ಕೆ ಸಂಬಂಧಿಸಿದಂತೆ ಎರಡು ಕೋಮಿನವರ ಮಧ್ಯೆ ಗಲಾಟೆಯಾಗಿದೆ. ಇಬ್ಬರು ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದೆ, ಈ ಸಂಬಂಧ ಅವರು ದೂರು ದಾಖಲಿಸಿದ್ದಾರೆ. ಆ ಪ್ರಕಾರ ಎಫ್‌ಐಆರ್ ದಾಖಲಿಸಿಕೊಳ್ಳುತ್ತೇವೆ. ದೂರಿನಲ್ಲಿ ಇಬ್ಬರ ಹೆಸರಿನ ಜೊತೆಗೆ ಇನ್ನಷ್ಟು ಜನ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಾದ ಏರಿಯಾದಲ್ಲಿ ಸಿಸಿಟಿವಿ ಕ್ಯಾಮೆರಾಗಳಿವೆ, ಅದನ್ನೆಲ್ಲ ಪರಿಶೀಲಿಸಿ ನಾವು ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

  • ಇಂದು ಬಿಜೆಪಿ ಶಾಸಕಾಂಗ ಸಭೆ – ಕುತೂಹಲ ಮೂಡಿಸಿದ ಯತ್ನಾಳ್‌, ಬೆಲ್ಲದ್‌ ನಡೆ

    ಇಂದು ಬಿಜೆಪಿ ಶಾಸಕಾಂಗ ಸಭೆ – ಕುತೂಹಲ ಮೂಡಿಸಿದ ಯತ್ನಾಳ್‌, ಬೆಲ್ಲದ್‌ ನಡೆ

    ಬೆಂಗಳೂರು: ಇಂದು ಸಂಜೆ ಶಾಸಕಾಂಗ ಸಭೆಯ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಮತ್ತು ಅರವಿಂದ ಬೆಲ್ಲದ್‌ (Arvind Bellad) ನಡೆ ಕುತೂಹಲ ಮೂಡಿಸಿದೆ.

    ಇಂದು ಬೆಳಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಆರ್‌ಟಿ ನಗರದ ಮನೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್‌ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.  ಇದನ್ನೂ ಓದಿ: 68 ಸಾವಿರ ದಂಡ ಪಾವತಿಸಿದ್ದೇನೆ – ಲುಲು ಮಾಲ್‌ಗೆ ಕರೆಂಟ್‌ ಶಾಕ್‌ ಕೊಟ್ಟ ಕುಮಾರಸ್ವಾಮಿ

     

    ಪ್ರತಿಪಕ್ಷದ ನಾಯಕನ ಸ್ಥಾನವನ್ನು ಉತ್ತರ ಕರ್ನಾಟಕ (North Karnatka) ಭಾಗದವರಿಗೆ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಜೆಪಿ (BJP) ಮತ ಬ್ಯಾಂಕ್ ಇರುವ ಉತ್ತರ ಕರ್ನಾಟಕದವರಿಗೆ ಆದ್ಯತೆ ನೀಡದಿದ್ದರೆ ಲೋಕಸಭೆ ಚುನಾವಣೆಯಲ್ಲಿ (Loka Sabha Election) ಸಮಸ್ಯೆಯಾಗುವ ಬಗ್ಗೆ ಬೊಮ್ಮಾಯಿ ಜತೆ ಇಬ್ಬರು ನಾಯಕರು ಚರ್ಚಿಸಿದ್ದಾರೆ.

    ಶಾಸಕಾಂಗ ಪಕ್ಷದ ಸಭೆಗೂ ಮುನ್ನ ದೆಹಲಿಯಿಂದ ಆಗಮಿಸಿದ ಕೇಂದ್ರದ ವೀಕ್ಷಕರು ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಮತ್ತು ದುಷ್ಯಂತ್ ಗೌತಮ್ ಕುಮಾರ್ ಬೆಳಗ್ಗೆ ಧವಳಗಿರಿ ನಿವಾಸದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದರು.