Tag: Arvind Kaushik

  • ಅಭಿಮಾನಿಗಳಿಗೆ ದಿವ್ಯಾ –ಅರವಿಂದ್ ಕೊಟ್ಟ ಭರ್ಜರಿ ಗಿಫ್ಟ್

    ಅಭಿಮಾನಿಗಳಿಗೆ ದಿವ್ಯಾ –ಅರವಿಂದ್ ಕೊಟ್ಟ ಭರ್ಜರಿ ಗಿಫ್ಟ್

    ಬಿಗ್‌ಬಾಸ್ ಜೋಡಿ ದಿವ್ಯಾ ಉರಡುಗ (Divya Uraduga) ಹಾಗೂ ಬೈಕ್ ರೇಸರ್ ಅರವಿಂದ್ ಕೆ.ಪಿ (Arvind K.P). ಈಗ ಬೆಳ್ಳಿತೆರೆಯ ಮೇಲೂ ಯುವ ಪ್ರೇಮಿಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹುಲಿರಾಯ ಖ್ಯಾತಿಯ ಅರವಿಂದ್ ಕೌಶಿಕ್ (Arvind Kaushik) ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ಅರ್ಧಂಬರ್ಧ ಪ್ರೇಮಕಥೆ. ಮುಂದಿನ ತಿಂಗಳು ರಿಲೀಸ್ ಗೆ ಸಿದ್ದವಾಗಿರುವ ಈ ಚಿತ್ರದ ಹಾಡೊಂದನ್ನು ಅಭಿಮಾನಿಗಳೇ ಬಿಡುಗಡೆ ಮಾಡಿದರು. ನಿರ್ದೇಶಕರೇ ಸಾಹಿತ್ಯ  ರಚಿಸಿದ ‘ಹುಚ್ಚುಮನಸಿನ ಹುಡುಗಿ’ ಎಂಬ ಹಾಡಲ್ಲಿ ನಾಯಕ, ನಾಯಕಿಯ ಮನದ ಭಾವನೆಗಳನ್ನು ತೆರೆದಿಡಲಾಗಿದೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಈ ಹಾಡಿಗೆ ಮ್ಯೂಸಿಕ್ ಕಂಪೋಸ್ ಮಾಡಿದ್ದು, ವಾಸುಕಿ ವೈಭವ್, ಪೃಥ್ವೀ ಭಟ್ ದನಿಯಾಗಿದ್ದಾರೆ.

    ಈಗಾಗಲೇ ಅರ್ಧಂಬರ್ಧ ಪ್ರೇಮಕಥೆ  (Ardhabandha Premkathe)  ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳೆಲ್ಲ ಮುಗಿದಿದ್ದು  ಸೆನ್ಸಾರ್ ಪ್ರಕ್ರಿಯೆ ನಡೆಯುತ್ತಿದೆ. ಅರವಿಂದ್ ಕೌಶಿಕ್ ನಿರ್ದೇಶನದ ನಮ್ ಏರಿಯಾಲ್ ಒಂದಿನ ಚಿತ್ರದ ಮೂಲಕ ಪೂರ್ಣ ಪ್ರಮಾಣದ ಸಂಗೀತ ಸಂಯೋಜಕರಾಗಿದ್ದ ಅರ್ಜುನ್ ಜನ್ಯ ಮತ್ತೊಮ್ಮೆ ಅರವಿಂದ್ ಜೊತೆ ಸೇರಿ  ಚೆಂದದ ಹಾಡುಗಳನ್ನು ಕಂಪೋಸ್ ಮಾಡಿದ್ದಾರೆ.

    ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಅರವಿಂದ್ ಕೌಶಿಕ್ ನಾನು ಈ ಕಥೆ ಶುರು ಮಾಡಿದಾಗಲೇ ನಾಯಕಿ ಪಾತ್ರಕ್ಕೆ ದಿವ್ಯ ಅವರನ್ನು ಆಯ್ಕೆ ಮಾಡಿದೆ. ಅವರನ್ನು ಒಪ್ಪಿಸಿದ ಮೇಲೆ ಅರವಿಂದ್ ಹೀರೋ ಪಾತ್ರ ಮಾಡಿದರೆ ಹೇಗೆ ಅನಿಸಿತು, ದಿವ್ಯಾ ಮೂಲಕ ಅವರನ್ನು ಕೇಳಿದಾಗ ಉತ್ತರ ಹೇಳಲು 2 ದಿನ ತಗೊಂಡರು. ಅಲ್ಲದೆ ಅರ್ಜುನ್‌ಜನ್ಯ ತಮ್ಮ ಬ್ಯುಸಿ ಶೆಡ್ಯೂಲ್‌ನಲ್ಲೂ 4 ಅದ್ಭುತವಾದ  ಹಾಡುಗಳನ್ನು ಮಾಡಿಕೊಟ್ಟಿದ್ದಾರೆ. ಇವತ್ತಿನ ಕಾಲದಲ್ಲಿ ಪ್ರೀತಿ ಎನ್ನುವುದು ಒಂದು ಭಾವನೆ, ನಮ್ಮ ಕನಸುಗಳ ಜೊತೆಗೇ ಬೆಳೆಯುತ್ತೆ, ಆದರೆ ಅದೇ ಪ್ರೀತಿ ಸಂಬಂಧವಾಗಿ ಬದಲಾದಾಗ ಅದನ್ನು  ನಿಭಾಯಿಸಿಕೊಂಡು ಹೋಗೋದು ಕಷ್ಟ. ನಮ್ಮ ಸುತ್ತಲಿನ ಸಮಾಜದ ಚೌಕಟ್ಟಿನಲ್ಲಿ ಅದು ಬದುಕಬೇಕಾಗಿರುತ್ತೆ, ಇವತ್ತಿನ  ಹಾಡು ಚಿತ್ರದ ಕಥೆಯನ್ನೇ ಹೇಳುತ್ತೆ, ಇದರ ನಂತರ ಇವರಿಬ್ಬರು ಲವ್ ಮಾಡ್ತಾರಾ ಇಲ್ವಾ ಅನ್ನೋದೇ ಕುತೂಹಲ, ಚಿತ್ರವೀಗ ಬಿಡುಗಡೆಯ ಹಂತದಲ್ಲಿದ್ದು, ಈಗ ಪ್ರಚಾರ ಶುರು ಮಾಡಿದ್ದೇವೆ, ನವೆಂಬರ್‌ನಲ್ಲಿ ತೆರೆಗೆ ತರೋ ಪ್ಲಾನಿದೆ ಎಂದರು.

    ನಾಯಕ ಅರವಿಂದ್ ಮಾತನಾಡಿ  ಅಭಿನಯ ನಿಜವಾಗಿಯೂ ಕಷ್ಟದ ಕೆಲಸವೇ. ಒಂದಷ್ಟು ದಿನ ವರ್ಕ್ಷಾಪ್ ಮಾಡಿ ನಂತರ ಬಣ್ಣ ಹಚ್ಚಿದೆ. ಆರಂಭದ 2-3 ದಿನ ಸ್ವಲ್ಪ ಕಷ್ಟವಾಗಿತ್ತು, ನಿರ್ದೇಶಕ ಅರವಿಂದ್ ಹಾಗೂ ದಿವ್ಯಾ ಇಬ್ಬರೂ ನನಗೆ ತುಂಬಾ ಹೇಳಿಕೊಟ್ಟರು. ನಾನೇನೇ ಮಾಡಿದ್ರೂ ಅದಕ್ಕೆ ನಿರ್ದೇಶಕರೇ ಕಾರಣ ಎಂದು ಹೇಳಿದರು.

    ನಾಯಕಿ ದಿವ್ಯಾ ಮಾತನಾಡಿ ಈ ಹಾಡನ್ನು ಅಭಿಮಾನಿಗಳಿಗೋಸ್ಕರ ಡೆಡಿಕೇಟ್ ಮಾಡೋಣ ಎಂದು ಅವರಿಂದಲೇ ರಿಲೀಸ್ ಮಾಡಿಸಿದ್ದೇವೆ,  ನನ್ನ ಪಾತ್ರದ ಬಗ್ಗೆ ಹೇಳೋದಾದ್ರೆ ಆಕೆ ಸ್ವಲ್ಪ ಮುಂಗೋಪಿಯಾದರೂ,  ಮನಸು ಹೂವಿನಂಥದ್ದು, ಜನ ಅವಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲ್ಲ, ಆಕೆಗಿರುವ ರಿಯಲ್ ಲೈಫ್ ಪ್ರಾಬ್ಲಂಗಳಿಂದ ಹಾಗೆ ನಡೆದುಕೊಳ್ತಾಳೆ ಅಷ್ಟೇ ಎಂದು ತನ್ನ ಪಾತ್ರದ ಕುರಿತು ವಿವರಿಸಿದರು.

     

    ಬಕ್ಸಾಸ್ ಮೀಡಿಯಾ, ಆರ್‌ಎಸಿ ವಿಷುವಲ್ಸ್ ಮತ್ತು ಲೈಟ್ಹೌಸ್ ಮೀಡಿಯಾದ ಸಹಕಾರದೊಂದಿಗೆ ಈ ಚಿತ್ರವನ್ನು ನಿರ್ಮಿಸಿದೆ. ಬಕ್ಸಸ್ ಪರವಾಗಿ ದಿವ್ಯಾ ಉತ್ತಪ್ಪ,  ಲೈಟ್ ಹೌಸ್ ನ ಸಂತೋಷ್ ಉಪಸ್ಥಿತರಿದ್ದರು. ರ‍್ಯಾಪರ್ ಅಲೋಕ್, ಶ್ರೇಯಾ ಬಾಬು, ವೆಂಕಟಶಾಸ್ತ್ರಿ, ಪ್ರದೀಪ್ ರೋಷನ್, ಸೂರಜ್ ಹೂಗಾರ್, ಸುಜಿಶ್ ಶೆಟ್ಟಿ ಚಿತ್ರದ ಪ್ರಮುಖ ಪಾತ್ರಗಳಲ್ಲಿದ್ದಾರೆ. ಹಿರಿಯನಟ ದ್ವಾರಕೀಶ್ ಪುತ್ರ ಅಭಿಲಾಷ್ ವಿಶೇಷ ಪಾತ್ರದ ಮೂಲಕ 25 ವರ್ಷಗಳ ನಂತರ ನಟನೆಗೆ ಮರಳಿದ್ದಾರೆ. ಸೂರ್ಯ ಅವರ ಛಾಯಾಗ್ರಹಣ, ಶಿವರಾಜ್ ಮೇಹು ಅವರ ಸಂಕಲನ, ಸತೀಶ್ ಬ್ರಹ್ಮಾವರ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತೆರೆಯ ಮೇಲೂ ಒಂದಾದ ಪ್ರೇಮಿಗಳು: ಇದು ಅರ್ಧಂಬರ್ಧ ಪ್ರೇಮಕಥೆ

    ತೆರೆಯ ಮೇಲೂ ಒಂದಾದ ಪ್ರೇಮಿಗಳು: ಇದು ಅರ್ಧಂಬರ್ಧ ಪ್ರೇಮಕಥೆ

    ಬಿಗ್‌ಬಾಸ್ ಖ್ಯಾತಿಯ ಯುವಜೋಡಿ ಅರವಿಂದ್ ಕೆಪಿ (K.P. Arvind) ಮತ್ತು ದಿವ್ಯಾ ಉರುಡುಗ (Divya Uruduga) ಈಗ ತೆರೆಯಮೇಲೂ ಒಟ್ಟಿಗೇ ಕಾಣಿಸಿಕೊಳ್ಳುತ್ತಿದ್ದಾರೆ. ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ಅರ್ಧಂಬರ್ಧ ಪ್ರೇಮಕಥೆ (Ardhmabardha Premakathe). ಹುಲಿರಾಯ, ತುಘ್ಲಕ್, ನಮ್ ಏರಿಯಾಲ್ ಒಂದಿನ ಸಿನಿಮಾಗಳಿಂದ ಗುರುತಿಸಿಕೊಂಡ ಅರವಿಂದ್ ಕೌಶಿಕ್ (Arvind Kaushik), ರಕ್ಷಿತ್‌ಶೆಟ್ಟಿ, ರಿಶಬ್‌ಶೆಟ್ಟಿ, ರಚಿತಾರಾಮ್, ಅನೀಶ್, ಬಾಲು ನಾಗೇಂದ್ರ ಸೇರಿದಂತೆ ಅನೇಕ ಕಲಾವಿದರನ್ನು ಪರಿಚಯಿಸಿದ್ದರು. ಈಗ ಬೈಕ್ ರೇಸರ್ ಅರವಿಂದ್‌ರನ್ನು ನಾಯಕನಾಗಿ ಇಂಟ್ರಡ್ಯೂಸ್ ಮಾಡುತ್ತಿದ್ದಾರೆ.

    ಅರ್ಜುನ್ ಜನ್ಯ ಅವರು ಅರ್ಧಂಬರ್ಧ ಪ್ರೇಮಕಥೆಗೆ ಚೆಂದದ ಹಾಡುಗಳನ್ನು ಮಾಡಿಕೊಟ್ಟಿದ್ದಾರೆ. ಬಕ್ಸಸ್ ಮೀಡಿಯಾ, ಲೈಟ್‌ಹೌಸ್ ಮೀಡಿಯಾ ಮತ್ತು ಆರ್‌ಎಸಿ ವಿಷುವಲ್ಸ್ ಸೇರಿ ಅರ್ಧಂಬರ್ಧ ಪ್ರೇಮ ಕಥೆ ಚಿತ್ರವನ್ನು ನಿರ್ಮಿಸಿದ್ದಾರೆ. ಸೂರ್ಯ ಅವರ ಛಾಯಾಗ್ರಹಣ, ಸಂತೋಷ್ ರಾಧಾಕೃಷ್ಣನ್ ಅವರು ಶೀರ್ಷಿಕೆ ವಿನ್ಯಾಸದ ಜೊತೆಗೆ ಗ್ರಾಫಿಕ್ಸ್ ಕೆಲಸವನ್ನೂ ನಿಭಾಯಿಸಿದ್ದಾರೆ. ರ‍್ಯಾಪರ್ ಆಲ್‌ಓಕೆ ಅಲೋಕ್, ಶ್ರೇಯಾ, ವೆಂಕಟ್‌ಶಾಸ್ತ್ರಿ, ಪ್ರದೀಪ್‌ರೋಷನ್, ಸೂರಜ್ ಹೂಗಾರ್, ಸುಜಿತ್‌ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಶಿವರಾಜ್ ಮೇಹು ಅವರ ಸಂಕಲನ, ಸತೀಶ್ ಬ್ರಹ್ಮಾವರ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. ಒಂದು ವಿಶೇಷ ಹಾಡನ್ನು ನವೀನ್ ಸಜ್ಜು ಹಾಡಿದ್ದಾರೆ.

    ಪ್ರೀತಿ ಎನ್ನುವುದು ನಮ್ಮ ಕನಸುಗಳ ಜೊತೆಗೇ ಬೆಳೆಯುತ್ತೆ. ಆದರೆ ಅದೇ ಪ್ರೀತಿ ಸಂಬಂಧವಾಗಿ ಬದಲಾದಾಗ ಅದು ಉಳಿಯೋದು ಕಷ್ಟ. ಏಕೆಂದರೆ ಅದು ನಮ್ಮ ಸುತ್ತಲಿನ ಸಮಾಜದ ಚೌಕಟ್ಟಿನಲ್ಲಿ ಬದುಕಬೇಕಾಗಿರುತ್ತೆ, ಇಂಥ ಒಂದು ಲವ್‌ಸ್ಟೋರಿಯೇ ಅರ್ಧಂಬರ್ಧ ಪ್ರೇಮಕಥೆ. ಅಂತಾ ನಿರ್ದೇಶಕ ಅರವಿಂದ್ ಕೌಶಿಕ್ ಮಾಹಿತಿ ನೀಡಿದ್ದರು. ಈ ಸಿನಿಮಾದ ಬಗೆಗಿನ  ವಿಚಾರಗಳು ಆಗಾಗ ಕುತೂಹಲ ಮೂಡಿಸುತ್ತಲೇ ಇವೆ.

    ಸದ್ಯ ದಿವ್ಯ ಉರುಡುಗ ಬಿಟ್ಟಿರುವ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಹುಟ್ಟಿಸಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಒಬ್ಬೊಬ್ಬರು ಒಂದೊಂದು ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

     

    ಮೇಲ್ನೋಟಕ್ಕೆ ನೋಡಿದರೆ ದಿವ್ಯಾ ಮತ್ತು ಅರವಿಂದ್ ಮದುವೆಯ ವಿಚಾರವಾಗಿ ಏನಾದರೂ ಅನೌನ್ಸ್ ಮಾಡುತ್ತಾರಾ ಎನ್ನುವ ಅನುಮಾನ ಹುಟ್ಟಿಸಿದೆ. ತೆರೆಮೇಲೆ ಜೋಡಿಯಾಗಿರುವ ದಿವ್ಯಾ-ಅರವಿಂದ್ ನಿಜಜೀವನದಲ್ಲೂ ಒಂದಾಗುತ್ತಾರೆ ಎನ್ನುವ ಮಾಹಿತಿ ಇರೋದು ಬಹುಶಃ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.  ಅಂತಿಮವಾಗಿ ದಿವ್ಯಾ ಉರುಡುಗ ಯಾವ ವಿಚಾರವನ್ನು ಘೋಷಿಸುತ್ತಾರೆ ಅನ್ನೋದು ಅತಿ ಶೀಘ್ರದಲ್ಲಿ ಗೊತ್ತಾಗಲಿದೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಅರ್ಧಂಬರ್ಧ ಪ್ರೇಮಕಥೆ’ಯಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ

    ‘ಅರ್ಧಂಬರ್ಧ ಪ್ರೇಮಕಥೆ’ಯಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ

    ಬಿಗ್‌ಬಾಸ್ ಖ್ಯಾತಿಯ ಯುವಜೋಡಿ ಅರವಿಂದ್ ಕೆಪಿ (Arvind) ಮತ್ತು ದಿವ್ಯಾ ಉರುಡುಗ (Divya Uruduga) ಈಗ ತೆರೆಯಮೇಲೂ ಒಟ್ಟಿಗೇ ಕಾಣಿಸಿಕೊಳ್ಳುತ್ತಿದ್ದಾರೆ. ಅರವಿಂದ್ ಕೌಶಿಕ್ (Arvind Kaushik) ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ಅರ್ಧಂಬರ್ಧ ಪ್ರೇಮಕಥೆ. ಹುಲಿರಾಯ, ತುಘ್ಲಕ್, ನಮ್ ಏರಿಯಾಲ್ ಒಂದಿನ ಸಿನಿಮಾಗಳಿಂದ ಗುರುತಿಸಿಕೊಂಡ ಅರವಿಂದ್ ಕೌಶಿಕ್, ರಕ್ಷಿತ್‌ಶೆಟ್ಟಿ, ರಿಶಬ್‌ಶೆಟ್ಟಿ, ರಚಿತಾರಾಮ್, ಅನೀಶ್, ಬಾಲು ನಾಗೇಂದ್ರ ಸೇರಿದಂತೆ ಅನೇಕ ಕಲಾವಿದರನ್ನು ಪರಿಚಯಿಸಿದ್ದರು. ಈಗ ಬೈಕ್ ರೇಸರ್ ಅರವಿಂದ್‌ರನ್ನು ನಾಯಕನಾಗಿಇಂಟ್ರಡ್ಯೂಸ್ ಮಾಡುತ್ತಿದ್ದಾರೆ.

    ಅರ್ಜುನ್ ಜನ್ಯ ಅವರು ಅರ್ದಂಬರ್ಧ ಪ್ರೇಮಕಥೆಗೆ (Ardhamberdha Premkathe) ಚೆಂದದ ಹಾಡುಗಳನ್ನು ಮಾಡಿಕೊಟ್ಟಿದ್ದಾರೆ. ಪ್ರೀತಿ ಎನ್ನುವುದು ನಮ್ಮ ಕನಸುಗಳ ಜೊತೆಗೇ ಬೆಳೆಯುತ್ತೆ, ಆದರೆ ಅದೇ ಪ್ರೀತಿ ಸಂಬಂಧವಾಗಿ ಬದಲಾದಾಗ ಅದು ಉಳಿಯೋದು ಕಷ್ಟ. ಏಕೆಂದರೆ ಅದು ನಮ್ಮ ಸುತ್ತಲಿನ ಸಮಾಜದ ಚೌಕಟ್ಟಿನಲ್ಲಿ ಬದುಕಬೇಕಾಗಿರುತ್ತೆ, ಇಂಥ ಒಂದು ಲವ್‌ಸ್ಟೋರಿಯೇ ಅರ್ಧಂಬರ್ಧ ಪ್ರೇಮಕಥೆ. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ನಾಯಕನ ಇಂಟ್ರಡಕ್ಷನ್ ಟೀಸರ್ ದಸರಾ ಹಬ್ಬದ ಶುಭದಿನ ಬಿಡುಗಡೆ ಆಯಿತು.

    ಈ ಸಂದರ್ಭದಲ್ಲಿ ಹಿರಿಯನಟ ದ್ವಾರಕೀಶ್, ಬಿಗ್‌ಬಾಸ್ ತಂಡದ ಶುಭಾ ಪುಂಜಾ, ರಾಜೀವ್, ಅರವಿಂದ್ ಕೂಡ ಹಾಜರಿದ್ದು ಗೆಳೆಯನಿಗೆ ಶುಭ ಹಾರೈಸಿದರು. ಈ ಚಿತ್ರದಲ್ಲಿ ಹಿರಿಯ ಕಲಾವಿದ ದ್ವಾರಕೀಶ್ ಅವರ ಪುತ್ರ ಅಭಿಲಾಷ್ ದ್ವಾರಕೀಶ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, 25 ವರ್ಷಗಳ ನಂತರ ನಟನೆಗೆ ಹಿಂದಿರುಗಿದ್ದಾರೆ. ಬೈಕ್ ರೇಸರ್ ಆಗಿದ್ದ ಅರವಿಂದ್ ಅವರ ಗುರುಗಳು ಕೂಡ ಈ ಸಮಾರಂಭದಲ್ಲಿ ಹಾಜರಿದ್ದರು. ನಿರ್ದೇಶಕ ಅರವಿಂದ್ ಕೌಶಿಕ್ ಮಾತನಾಡಿ ಚಿತ್ರದಲ್ಲಿ  ಅರವಿಂದ್ ಅವರ ಬೈಕ್ ರೇಸಿಂಗ್ ಸಾಧನೆಗಳ ಬಗ್ಗೆ ಹೇಳಿಲ್ಲ, ನಾನು ಮಾಡಿಕೊಂಡ ಕಥೆಗೆ ಒಬ್ಬ ಹೊಸ ಹೀರೋ ಬೇಕಿತ್ತು. ಆತ ಜನ ಗುರುತಿಸುವಂಥ ಹೀರೋನೂ ಆಗಿರಬೇಕು ಅಂದುಕಡಾಗ ನೆನಪಿಗೆ ಬಂದದ್ದೇ ಕೆ.ಪಿ.ಅರವಿಂದ್. ಇದೊಂದು ಅಪ್ಪಟ ಪ್ರೇಮಕಥೆಯಾಗಿದ್ದು ಶೂಟಿಂಗ್ ಮುಗಿದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತದಲ್ಲಿದೆ ನವೆಂಬರ್ ವೇಳೆಗೆ ರಿಲೀಸ್ ಮಾಡೋ ಯೋಜನೆಯಿದೆ ಎಂದು ಹೇಳಿದರು.

    ನಂತರ ದ್ವಾರಕೀಶ್ ಮಾತನಾಡುತ್ತ ನಮ್ಮ ಕಾಲದಲ್ಲಿ ಈ ಥರದ ನೆಗೆಟಿವ್ ಟೈಟಲ್ ಇಡುತ್ತಲೇ ಇರಲಿಲ್ಲ, ಈಗ ಅರವಿಂದ್ ಅಂಥಾ ಸಾಹಸ ಮಾಡಿದ್ದಾರೆ. ನಾಯಕ ಸೌತ್ ಕೆನರಾದವನು, ಈಗ ಅಲ್ಲಿನವರೇ ಜಾಸ್ತಿ ಹೆಸರು ಮಾಡುತ್ತಿದ್ದಾರೆ. ಹಿಂದೆ ಪುಟ್ಟಣ್ಣ ಕಣಗಾಲರು ನೀಡಿದ ಒಂದು ಸಲಹೆ, ನಾನು ಹೊಸಬರನ್ನು ಹಾಕಿಕೊಂಡು ಸಿನಿಮಾ ಮಾಡುವಂತೆ ಮಾಡಿತು ಎಂದು ಹಿಂದಿನ ಘಟನೆಗಳನ್ನು ನೆನಪಿಸಿಕೊಂಡರು. ಇದನ್ನೂ ಓದಿ:ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಮೂರು ದಿನದ ಗಳಿಕೆ 230 ಕೋಟಿಗೂ ಅಧಿಕ

    ಬಕ್ಸಸ್ ಮೀಡಿಯಾ, ಲೈಟ್‌ಹೌಸ್ ಮೀಡಿಯಾ ಮತ್ತು ಆರ್‌ಎಸಿ ವಿಷುವಲ್ಸ್ ಸೇರಿ ಅರ್ದಂಬರ್ಧ ಪ್ರೇಮ ಕಥೆ ಚಿತ್ರವನ್ನು ನಿರ್ಮಿಸಿದ್ದಾರೆ. ಸೂರ್ಯ ಅವರ ಛಾಯಾಗ್ರಹಣ, ಸಂತೋಷ್ ರಾಧಾಕೃಷ್ಣನ್ ಅವರ ಶೀರ್ಷಿಕೆ ವಿನ್ಯಾಸದ ಜೊತೆಗೆ ಗ್ರಾಫಿಕ್ಸ್ ಕೆಲಸವನ್ನೂ ನಿಭಾಯಿಸಿದ್ದಾರೆ. ರ‍್ಯಾಪರ್ ಆಲ್‌ಓಕೆ ಅಲೋಕ್, ಶ್ರೇಯಾ, ವೆಂಕಟ್‌ಶಾಸ್ತ್ರಿ, ಪ್ರದೀಪ್‌ರೋಷನ್, ಸೂರಜ್ ಹೂಗಾರ್, ಸುಜಿತ್‌ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಶಿವರಾಜ್ ಮೇಹು ಅವರ ಸಂಕಲನ, ಸತೀಶ್ ಬ್ರಹ್ಮಾವರ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ ಅರೆಸ್ಟ್

    ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ ಅರೆಸ್ಟ್

    ನ್ನಡ ಕಿರುತೆರೆ ಮತ್ತು ಹಿರಿತೆರೆ ನಿರ್ದೇಶಕ ಅರವಿಂದ್ ಕೌಶಿಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿದ್ದಾರೆ. ಕಿರುತೆರೆ ನಿರ್ಮಾಪಕ ರೋಹಿತ್ ಎನ್ನುವವರಿಗೆ 73 ಲಕ್ಷ ರೂಪಾಯಿ ವಂಚಿಸಿದ ಕಾರಣಕ್ಕಾಗಿ ಅವರ ವಿರುದ್ಧ ವೈಯ್ಯಾಲಿ ಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿತ್ತು. ನಿನ್ನೆ ರಾತ್ರಿ ನಿರ್ದೇಶಕ ಅರವಿಂದ್ ಕೌಶಿಕ್ ಅವರನ್ನು ವೈಯ್ಯಾಲಿ ಕಾವಲ್ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ : ವಾಮನ ತೆಕ್ಕೆಗೆ ತುಳುನಾಡ ಬೆಡಗಿ ರಚನಾ ರೈ

    2020ರಲ್ಲೇ ಅರವಿಂದ್ ಕೌಶಿಕ್, ಪತ್ನಿ ಶಿಲ್ಪಾ ಸೇರಿದಂತೆ ಹಲವರು ವಿರುದ್ಧ ರೋಹಿತ್ ದೂರು ಸಲ್ಲಿಸಿದ್ದರು. ಈ ದೂರಿಗೆ ಸಂಬಂಧ ಪಟ್ಟಂತೆ ಇದೀಗ ಪೊಲೀಸ್ ನವರು ನಿರ್ದೇಶಕ ಅರವಿಂದ್ ಅವರನ್ನು ಬಂಧಿಸಿದ್ದಾರೆ. ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿದ್ದ ಕಮಲಿ ಧಾರಾವಾಹಿಗೆ ಸಂಬಂಧಿಸಿದ ವಂಚನೆ ಪ್ರಕರಣ ಇದಾಗಿದೆ. ಇದನ್ನೂ ಓದಿ : ಡಾ.ರಾಜ್ ಕುಟುಂಬದೊಂದಿಗೆ ಮತ್ತೊಂದು ಸಿನಿಮಾ ಘೋಷಣೆ ಮಾಡಿದ ಜೇಮ್ಸ್ ನಿರ್ಮಾಪಕ

    ಈ ಕುರಿತು ದೂರಿನಲ್ಲಿ ಉಲ್ಲೇಖಿಸಿರುವ ರೋಹಿತ್, 28 ಮೇ 2018 ರಿಂದ ‘ಕಮಲಿ’ ಧಾರಾವಾಹಿ ಶುರುವಾಯಿತು. ಮೊದ ಮೊದಲು ಧಾರಾವಾಹಿಯಲ್ಲಿ ನಿರ್ಮಾಪಕರು ರೋಹಿತ್ ಎಂದು ತೋರಿಸಲಾಗುತ್ತಿತ್ತು. ಆ ನಂತರ ನನ್ನ ಹೆಸರನ್ನೇ ಕಿತ್ತು ಹಾಕಲಾಯಿತು. ಅಷ್ಟರಲ್ಲಿ ನಾನು ಆ ಧಾರಾವಾಹಿಗಾಗಿ 73 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿದ್ದೆ. ನನ್ನ ಹೆಸರು ತಗೆದು ಹಾಕಿದ್ದಕ್ಕೆ ಕೇಳಿದೆ. ಅದಕ್ಕೆ ಅವರು ಸಕಾರಣ ಕೊಡಲಿಲ್ಲ. ಈವರೆಗೂ ಲಾಭಾಂಶದಲ್ಲಿ ಒಂದು ಪೈಸೆಯನ್ನೂ ನನಗೆ ಕೊಟ್ಟಿಲ್ಲ. ಹಣ ಕೇಳಿದರೆ ಕೊಡು‍ತ್ತಿಲ್ಲ. ಹೀಗಾಗಿ ನನಗೆ ವಂಚನೆ ಆಗಿದೆ ಎಂದು ದೂರಿನಲ್ಲಿ ಬರೆದಿದ್ದಾರೆ ರೋಹಿತ್. ಇದನ್ನೂ ಓದಿ: ಕೆಜಿಎಫ್-2 ಸಿನಿಮಾ ವೀಕ್ಷಿಸಿದ ಇಳಯರಾಜ, ಕಮಲ್ ಹಾಸನ್

    ಆದರೆ, ಅರವಿಂದ್ ಕೌಶಿಕ್ ಹೇಳುವುದೇ ಬೇರೆ. ಗೆಳೆಯರೊಟ್ಟಿಗೆ ಸೇರಿ ನಾನು ನಮ್ಮದೇ ಸತ್ವ ಮೀಡಿಯಾ ಸಂಸ್ಥೆಯನ್ನು ಹುಟ್ಟು ಹಾಕಿದ್ದೆವು. ಆ ಸಂಸ್ಥೆಗೆ ವಾಹಿನಿಯವರು ಧಾರಾವಾಹಿ ನಿರ್ಮಿಸಲು ಒಪ್ಪಿಗೆ ಕೊಟ್ಟಿದ್ದರು. ಬಂಡವಾಳ ಹೂಡುವವರು ಬೇಕಾಗಿದ್ದರಿಂದ ರೋಹಿತ್ ಅವರೇ ನಮ್ಮನ್ನು ಸಂಪರ್ಕಿಸಿದರು. ಫೈನಾನ್ಸ್ ಮಾಡಿದ್ದರು. ತಮ್ಮ ಹೆಸರಿನ ಮುಂದೆ ನಿರ್ಮಾಪಕರು ಎಂದು ಹಾಕುವಂತೆ ಕೇಳಿದರು. ಅದಕ್ಕೆ ವಾಹಿನಿಯವರು ಒಪ್ಪದೇ ಇರುವ ಕಾರಣಕ್ಕಾಗಿ ನಾವು ಯಾರ ಹೆಸರನ್ನೂ ಹಾಕಲಿಲ್ಲ. ರೋಹಿತ್ ಈ ಧಾರಾವಾಹಿಗೆ ತಾನೇ ನಿರ್ಮಾಪಕ ಎಂದು ಹೇಳಿಕೊಂಡು ಓಡಾಡುತ್ತಿದ್ದರು. ನನ್ನೊಂದಿಗೆ ಹಣ ಹಾಕಿದವರು ನನಗೆ ಪ್ರಶ್ನೆ ಮಾಡಿದರು. ಹಾಗಾಗಿ ಅವರ ಹೆಸರನ್ನು ತಗೆದುಹಾಕಲಾಯಿತು. ನಂತರ ಧಾರಾವಾಹಿ ನಿಂತಿತು. ತಮಗೆ ಹಣ ವಾಪಸ್ಸು ಬರುವುದಿಲ್ಲ ಎಂದು ತಮಗೆ ತಾವೇ ಅಂದುಕೊಂಡು ಹೀಗೆ ದೂರು ನೀಡಿದ್ದಾರೆ. ನಾನು ಹಣ ಕೊಡುವುದಿಲ್ಲ ಎಂದು ಯಾವತ್ತೂ ಹೇಳಿಲ್ಲ ಎಂದಿದ್ದಾರೆ ಅರವಿಂದ ಕೌಶಿಕ್.