Tag: Arvind Kejrival

  • ಅಧಿಕಾರ ವಹಿಸಿಕೊಂಡ ಬಳಿಕ ಕೇಜ್ರಿವಾಲ್ ಕುರ್ಚಿಯಲ್ಲಿ ಕೂರದ ಅತಿಶಿ

    ಅಧಿಕಾರ ವಹಿಸಿಕೊಂಡ ಬಳಿಕ ಕೇಜ್ರಿವಾಲ್ ಕುರ್ಚಿಯಲ್ಲಿ ಕೂರದ ಅತಿಶಿ

    – ಕೇಜ್ರಿವಾಲರನ್ನು ಮತ್ತೆ ಈ ಸ್ಥಾನಕ್ಕೆ ತರಲು 4 ತಿಂಗಳು ಶ್ರಮಿಸುತ್ತೇನೆ

    ನವದೆಹಲಿ: ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಅತಿಶಿ ಸಿಂಗ್ (Atishi Singh) ಇಂದು (ಸೆ.23) ಸಚಿವಾಲಯಕ್ಕೆ ತೆರಳಿ ಅಧಿಕಾರ ವಹಿಸಿಕೊಂಡರು. ಮುಖ್ಯಮಂತ್ರಿ ಸ್ಥಾನದ ಕುರ್ಚಿಯಲ್ಲಿ ಕೂರದೇ ಪಕ್ಕದಲ್ಲಿ ಮತ್ತೊಂದು ಕುರ್ಚಿ ಹಾಕಿಕೊಂಡು ಕೂತು ಕಡತಗಳಿಗೆ ಸಹಿ ಹಾಕುವ ಮೂಲಕ ಸಿಎಂ (CM) ಆಗಿ ಕೆಲಸ ಆರಂಭಿಸಿದ್ದಾರೆ.

    ಅಧಿಕಾರ ವಹಿಸಿಕೊಂಡ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಮಾಯಣ (Ramayana) ಮಹಾಕಾವ್ಯವನ್ನು ಉದಾಹರಣೆಯಾಗಿ ನೀಡಿ ಶ್ರೀರಾಮ ವನವಾಸಕ್ಕೆ ಹೋದಾಗ ಸಹೋದರ ಭರತ ರಾಮನ ಪಾದುಕೆಯನ್ನು ಸಿಂಹಾಸನದ ಮೇಲಿಟ್ಟು ಆಡಳಿತವನ್ನು ನಡೆಸಿದರು. ಅದೇ ರೀತಿ ನಾನು ಕೇಜ್ರಿವಾಲ್ ಸ್ಥಾನದಲ್ಲಿ ಕೂರುವುದಿಲ್ಲ. ಅವರನ್ನು ಮತ್ತೆ ಈ ಸ್ಥಾನಕ್ಕೆ ತರಲು ನಾಲ್ಕು ತಿಂಗಳು ಶ್ರಮಿಸುತ್ತೇನೆ ಎಂದರು.ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೂ ರಾಜ್ಯಪಾಲರು ರಿಪೋರ್ಟ್ ಕೇಳೋದು ಸರಿಯಲ್ಲ: ಸಿದ್ದರಾಮಯ್ಯ

    ಈ ಕುರ್ಚಿ ಅರವಿಂದ್ ಕೇಜ್ರಿವಾಲ್ (Arvind Kejrival) ಅವರಿಗೆ ಸೇರಿದ್ದು, ಫೆಬ್ರವರಿ ಚುನಾವಣೆಯಲ್ಲಿ ದೆಹಲಿಯ ಜನರು ಮತ್ತೊಮ್ಮೆ ಅವರನ್ನು ತಮ್ಮ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುತ್ತಾರೆ ಎಂದು ನನಗೆ ಖಾತ್ರಿಯಿದೆ. ಅಲ್ಲಿಯವರೆಗೆ ಈ ಕುರ್ಚಿ ಈ ಕಚೇರಿಯಲ್ಲಿ ಉಳಿಯುತ್ತದೆ. ಅವರು ಹಿಂದಿರುಗುವವರೆಗೆ ಕಾಯುತ್ತದೆ ಎಂದು ಹೇಳಿದರು.

    ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಮತ್ತು ಬಿಜೆಪಿಯ ಸುಷ್ಮಾ ಸ್ವರಾಜ್ ನಂತರ ಅತಿಶಿ ದೆಹಲಿಯ ಎಂಟನೇ ಮತ್ತು ಮೂರನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಅಕ್ರಮ ಅಬಕಾರಿ ನೀತಿಯಲ್ಲಿ ಬಂಧನವಾದ ಬಳಿಕ ಜಾಮೀನಿನ ಮೇಲೆ ಹೊರಬಂದ ಅರವಿಂದ್ ಕೇಜ್ರಿವಾಲ್ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

    ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ (Virendra Sachdeva) ಅವರು ಅರವಿಂದ್ ಕೇಜ್ರಿವಾಲ್‌ಗೆ ಮೀಸಲಾದ ಖಾಲಿ ಕುರ್ಚಿಯನ್ನು ಪಕ್ಕದಲ್ಲಿ ಇರಿಸಿರುವ ಅತಿಶಿಯ ಇಂಗಿತವನ್ನು ತೀವ್ರವಾಗಿ ಖಂಡಿಸಿದ್ದಾರೆ. ಸಚ್‌ದೇವ ಅವರು ಈ ಕೃತ್ಯವನ್ನು ಸಾಂವಿಧಾನಿಕ ನಿಯಮಗಳ ಉಲ್ಲಂಘನೆ ಮತ್ತು ಮುಖ್ಯಮಂತ್ರಿ ಕಚೇರಿಗೆ ಮಾಡಿದ ಅವಮಾನ ಎಂದು ಬಣ್ಣಿಸಿದ್ದಾರೆ.ಇದನ್ನೂ ಓದಿ: ಅಪಘಾತಕ್ಕೀಡಾದವರ ರಕ್ಷಣೆಗೆ “ಆಪತ್ಕಾಲಯಾನ”: 65 ನೂತನ ಅಂಬುಲೆನ್ಸ್ ಚಾಲನೆ ನೀಡಿದ ಸಿಎಂ

    ಮುಖ್ಯಮಂತ್ರಿಗಳ ಟೇಬಲ್‌ನಲ್ಲಿ ಎರಡು ಕುರ್ಚಿಗಳನ್ನು ಇಡುವುದು ಸಂವಿಧಾನ, ನಿಯಮಗಳು ಮತ್ತು ಮುಖ್ಯಮಂತ್ರಿ ಕಚೇರಿಗೆ ಅಗೌರವವಾಗಿದೆ. ಇದು ಅತಿಶಿ ಹೇಳುವಂತೆ ಇದು ಆದರ್ಶವಾದ ಕ್ರಿಯೆಯಲ್ಲ, ಆದರೆ ಇದು ಸ್ಪಷ್ಟವಾದ ಅಸ್ಪಷ್ಟತೆಯಾಗಿದೆ. ಅತಿಶಿ ಅವರು ಮುಖ್ಯಮಂತ್ರಿ ಕಚೇರಿಯ ಘನತೆಗೆ ಅಗೌರವ ತೋರಿದ್ದಾರೆ ಮತ್ತು ಈ ವರ್ತನೆಯಿಂದ ದೆಹಲಿಯ ನಾಗರಿಕರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಸಚ್‌ದೇವ ಟೀಕಿಸಿದ್ದಾರೆ.

  • ದೆಹಲಿ ಅಬಕಾರಿ ಅಕ್ರಮ: ಶುಕ್ರವಾರ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು

    ದೆಹಲಿ ಅಬಕಾರಿ ಅಕ್ರಮ: ಶುಕ್ರವಾರ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು

    ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejrival), ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ತೀರ್ಪು ಶುಕ್ರವಾರ ಪ್ರಕಟವಾಗಲಿದೆ.

    ಈ ಹಿಂದೆ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಕೇಜ್ರಿವಾಲ್ ಅವರು ಸಿಬಿಐ ಬಂಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಲಿದೆ.ಇದನ್ನೂ ಓದಿ: ಪಿಎಸ್‌ಐ ಪರೀಕ್ಷೆ ಮುಂದೂಡಿಕೆ – ಶೀಘ್ರವೇ ಪರೀಕ್ಷಾ ದಿನ ನಿಗದಿ: ಗೃಹ ಸಚಿವ

    ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು.

    ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ನೊಳಗೆ ಸಿಬಿಐನಿಂದ ಬಂಧಿಸಲಾಗಿತ್ತು.ಇದನ್ನೂ ಓದಿ: ದೂದ್ ಸಾಗರ್ ಬಳಿ ಹಳಿ ತಪ್ಪಿದ ರೈಲು – ಮಾರ್ಗ ಬದಲು

    ಕೆಲವು ವಾರಗಳ ಹಿಂದೆ ರೋಸ್ ಅವೆನ್ಯೂ ಕೋರ್ಟ್ ದೆಹಲಿ ಸಿಎಂಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಇಡಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತು. ಜಾಮೀನು ನೀಡಿ ಅವೆನ್ಯೂ ಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

  • ಕರ್ನಾಟಕ ವಿಧಾನಸಭಾ ಚುನಾವಣೆ – ಮಾ.4ಕ್ಕೆ ದಾವಣೆಗೆರೆಗೆ ದೆಹಲಿ ಸಿಎಂ

    ಕರ್ನಾಟಕ ವಿಧಾನಸಭಾ ಚುನಾವಣೆ – ಮಾ.4ಕ್ಕೆ ದಾವಣೆಗೆರೆಗೆ ದೆಹಲಿ ಸಿಎಂ

    ದಾವಣಗೆರೆ: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆಯಲ್ಲಿ ಇದೇ ಮಾರ್ಚ್‌ 4 ರಂದು ದಾವಣಗೆರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಆಗಮಿಸಲಿದ್ದಾರೆ.

    ದಾವಣಗೆರೆ (Davanagere) ನಗರದ ಹೈಸ್ಕೂಲ್ ಮೈದಾನದಲ್ಲಿ ಆಮ್‌ ಆದ್ಮಿ ಪಕ್ಷದಿಂದ (Aam Admi Party) ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಸುಮಾರು 50 ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ಈ ಸಮಾವೇಶದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಹಾಗೂ ಪಂಜಾಬ್ ಸಿಎಂ ಭಗವಂತ್ ಮಾನ್ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಯಾರನ್ನೂ ಸೋಲಿಸುವುದು ನಮ್ಮ ಅಜೆಂಡಾ ಅಲ್ಲ: ಜನಾರ್ದನ ರೆಡ್ಡಿ

    ಅಂದು ಬೆಳಗ್ಗೆ 11 ಗಂಟೆಗೆ ಸಮಾವೇಶದ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸಮಾವೇಶದಲ್ಲಿ ಪದಾಧಿಕಾರಿಗಳು, ಕಾರ್ಯಕರ್ತರಿಗೆ ಪ್ರಮಾಣ ವಚನ ಬೋಧನೆ ಮಾಡಲಾಗುತ್ತದೆ. ಹೊಸ ಬದಲಾವಣೆ ತರಲು ಎಎಪಿಗೆ ಬೆಂಬಲ ನೀಡುವಂತೆ ಜನತೆಗೆ ಕರೆ ನೀಡಲಾಗುವುದು.

    ಈ ಬಾರಿ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಖಾತೆ ತೆರೆಯಲೇಬೇಕು ಎಂಬ ದೃಢ ಸಂಕಲ್ಪವನ್ನು ಎಎಪಿ ಮಾಡಿದೆ. ಆ ದೃಷ್ಟಿಯಿಂದ ರಾಜಕೀಯ ತಂತ್ರಗಾರಿಕೆ ರೂಪಿಸಲು ಪಕ್ಷ ಮುಂದಾಗಿದೆ. ಭ್ರಷ್ಟ ಸರ್ಕಾರಗಳನ್ನು ತೆಗೆದು ಹಾಕಲು ಪೊರಕೆಯನ್ನು ಹಿಡಿದು ಸ್ವಚ್ಚಗೊಳಿಸೋಣ ಎಂದು ಎಎಪಿ ಮುಖಂಡರು ಕರೆ ನೀಡಿದ್ದಾರೆ. ಇದನ್ನೂ ಓದಿ: ಶೂರ, ವೀರರಿಗೆ ಜನ್ಮ ನೀಡಿದ ನೆಲ ಕರ್ನಾಟಕ – ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಣ್ಣನೆ

    ದೆಹಲಿಯಲ್ಲಿ ಸತತ ಎರಡು ಬಾರಿ ಆಡಳಿತದ ಚುಕ್ಕಾಣಿ ಹಿಡಿದಿರುವ ಎಎಪಿ ನಂತರ ಪಂಜಾಬ್‌ನಲ್ಲೂ ಅಧಿಕಾರ ಪಡೆದಿದೆ. ಜೊತೆಗೆ ಗೋವಾದಲ್ಲಿ 2 ಹಾಗೂ ಗುಜರಾತ್‌ನಲ್ಲಿ 5 ಎಂಎಲ್‌ಎ ಸ್ಥಾನಗಳನ್ನು ಗೆದ್ದು ಬೀಗಿದೆ. ಆ ಮೂಲಕ ರಾಷ್ಟ್ರೀಯ ಪಕ್ಷವಾಗಿ ಎಎಪಿ ಹೊರಹೊಮ್ಮಿದೆ. ಈಗ ಕರ್ನಾಟಕದಲ್ಲೂ ಖಾತೆ ತೆರೆಯಲು ಸಿದ್ಧತೆ ನಡೆಸಿದೆ.

  • ತೀವ್ರ ಜ್ವರ, ಗಂಟಲು ನೋವು – ಸಿಎಂ ಕೇಜ್ರಿವಾಲ್‍ಗೆ ಕೊರೊನಾ ಟೆಸ್ಟ್

    ತೀವ್ರ ಜ್ವರ, ಗಂಟಲು ನೋವು – ಸಿಎಂ ಕೇಜ್ರಿವಾಲ್‍ಗೆ ಕೊರೊನಾ ಟೆಸ್ಟ್

    ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಾಳೆ ಬೆಳಗ್ಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ. ಭಾನುವಾರದಿಂದ ಕೇಜ್ರಿವಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯರ ಸಲಹೆ ಹಿನ್ನೆಲೆ ನಾಳೆ ಕೊರೊನಾ ಪರೀಕ್ಷೆಗೆ ಒಳಗಾಗಲಿದ್ದಾರೆ.

    ಕೇಜ್ರಿವಾಲ್ ತೀವ್ರ ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಬಳಿಕವೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಕೊರೊನಾ ಪರೀಕ್ಷೆ ನಡೆಸಲು ತಿರ್ಮಾನಿಸಲಾಗಿದೆ.

    ಕೊರೊನಾ ಹೋರಾಟದ ಮುನ್ನಲೆಯಲ್ಲಿರುವ ಅರವಿಂದ ಕೇಜ್ರಿವಾಲ್, ಪ್ರತಿ ನಿತ್ಯ ಅಧಿಕಾರಗಳ ಸಭೆ ನಡೆಸುತ್ತಿದ್ದಾರೆ. ಜ್ವರ ಕಾಣಿಸಿಕೊಂಡ ಬೆನ್ನಲ್ಲೇ ಭಾನುವಾರ ಮಧ್ಯಾಹ್ನ ಬಳಿಕ ಇದ್ದ ಎಲ್ಲ ಸಭೆಗಳನ್ನು ರದ್ದು ಮಾಡಿ ಕ್ವಾರಂಟೈನ್ ನಲ್ಲಿದ್ದಾರೆ. ದೆಹಲಿಯಲ್ಲಿ ಈವರೆಗೂ 28,936 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 812 ಮಂದಿ ಸಾವನ್ನಪ್ಪಿದ್ದಾರೆ. 11,000 ಮಂದಿ ಗುಣ ಮುಖ ಹೊಂದಿದ್ದಾರೆ.

  • ವಾಯುಮಾಲಿನ್ಯ ನಿಯಂತ್ರಣ ವಿಫಲ – ಎನ್‍ಜಿಟಿಯಿಂದ ದೆಹಲಿ ಸರ್ಕಾರಕ್ಕೆ 25 ಕೋಟಿ ರೂ. ಫೈನ್

    ವಾಯುಮಾಲಿನ್ಯ ನಿಯಂತ್ರಣ ವಿಫಲ – ಎನ್‍ಜಿಟಿಯಿಂದ ದೆಹಲಿ ಸರ್ಕಾರಕ್ಕೆ 25 ಕೋಟಿ ರೂ. ಫೈನ್

    – ಸರ್ಕಾರದ ಖಜಾನೆಯಿಂದ ದಂಡ ಕಟ್ಟುವಂತಿಲ್ಲ

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್(ಎಎಪಿ) ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (ಎನ್‍ಜಿಟಿ) 25 ಕೋಟಿ ರೂಪಾಯಿಯನ್ನು ದಂಡ ವಿಧಿಸಿದೆ.

    ದೆಹಲಿಯಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ವಾಯು ಮಾಲಿನ್ಯವನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ವಾಯು ಮಾಲಿನ್ಯದ ಗುಣಮಟ್ಟವನ್ನು ಪರಿಶೀಲಿಸುವಲ್ಲಿಯೂ ಅಸಮರ್ಥವಾಗಿರುವ ಸರ್ಕಾರದ ವಿರುದ್ಧ ಎನ್‍ಜಿಟಿ ತೀವ್ರ ಅಸಮಾಧಾನ ಹೊರಹಾಕಿದೆ. ಅಲ್ಲದೇ ಸರ್ಕಾರಕ್ಕೆ ಬರೋಬ್ಬರಿ 25 ಕೋಟಿ ರೂಪಾಯಿಯ ದಂಡವನ್ನು ಸಹ ಹಾಕಿದೆ.

    ದಂಡದ ಹಣವನ್ನು ಸರ್ಕಾರ ಖಜಾನೆಯಿಂದ ನೀಡುವಂತಿಲ್ಲ. ಬದಲಾಗಿ ಸರ್ಕಾರಿ ಅಧಿಕಾರಿಗಳ ಸಂಬಳ ಹಾಗೂ ಮಾಲಿನ್ಯ ಮಾಡಿದ್ದವರಿಂದ ವಸೂಲಿ ಮಾಡಿ ನೀಡುವಂತೆ ಸೂಚನೆ ನೀಡಿದೆ. ಒಂದು ವೇಳೆ ದೆಹಲಿ ಸರ್ಕಾರ 25 ಕೋಟಿ ರೂಪಾಯಿಯನ್ನು ನೀಡಲು ವಿಫಲವಾದರೇ, ಪ್ರತಿ ತಿಂಗಳು 10 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಪಾವತಿಸಬೇಕೆಂದು ಎನ್‍ಜಿಟಿ ಹೇಳಿದೆ.

    ದೆಹಲಿಯ ಗುರುಗ್ರಾಮ, ನೋಯ್ಡಾ, ಪರಿದಾಬಾದ್, ಗಾಜಿಯಾಬಾದ್ ಸೇರಿದಂತೆ ಇನ್ನೂ ಹೆಚ್ಚಿನ ಪ್ರದೇಶಗಳಲ್ಲಿ ವಾಯುಮಾಲಿನ್ಯದ ಪ್ರಮಾಣ ಹೆಚ್ಚಾಗಿದೆ. ಅಲ್ಲದೇ ಜನರು ವಿಷಯುಕ್ತ ಗಾಳಿ ಸೇವನೆಯಿಂದಾಗಿ ನಾನಾ ರೀತಿಯ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಈ ಸಂಬಂಧ ದೆಹಲಿ ಸರ್ಕಾರದ ವಿರುದ್ಧ ಎನ್‍ಜಿಟಿಯಲ್ಲಿ 6ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಸೋಮವಾರ ಇದರ ವಿಚಾರಣೆ ನಡೆಸಿದ ಎನ್‍ಜಿಟಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಾಯಕತ್ವದ ಎಎಪಿ ಸರ್ಕಾರಕ್ಕೆ ಛೀಮಾರಿ ಹಾಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv