Tag: Arvind Kejriwal

  • ಕೇಜ್ರಿವಾಲ್‌ಗೆ ಕ್ಯಾನ್ಸರ್ ಗಂಭೀರ ಹಂತದಲ್ಲಿಯೇ?- ಜಾಮೀನು ವಿಸ್ತರಣೆ ಅರ್ಜಿಯ ಕುರಿತು ಅತಿಶಿ ಹೇಳಿದ್ದೇನು?

    ಕೇಜ್ರಿವಾಲ್‌ಗೆ ಕ್ಯಾನ್ಸರ್ ಗಂಭೀರ ಹಂತದಲ್ಲಿಯೇ?- ಜಾಮೀನು ವಿಸ್ತರಣೆ ಅರ್ಜಿಯ ಕುರಿತು ಅತಿಶಿ ಹೇಳಿದ್ದೇನು?

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಧ್ಯಂತರ ಜಾಮೀನನ್ನು ಇನ್ನೂ 7 ದಿನಗಳವರೆಗೆ ವಿಸ್ತರಿಸಬೇಕೆಂದು ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದ್ದಾರೆ. ತನ್ನ ಹೊಸ ಮನವಿಯಲ್ಲಿ, ಆರೋಗ್ಯ ಸಮಸ್ಯೆ ಇರುವ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ವಿಸ್ತರಿಸುವಂತೆ ಕೋರಿದ್ದಾರೆ. ಮಾರ್ಚ್‌ನಲ್ಲಿ ಬಂಧಿಸಿದಾಗಿನಿಂದ ಅವರು 7 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಎಎಪಿ ಸಚಿವೆ ಅತಿಶಿ (Atishi), ದೆಹಲಿ ಮುಖ್ಯಮಂತ್ರಿಯ ಹಠಾತ್ ತೂಕ ಇಳಿಕೆ ಹಾಗೂ ಕೀಟೋನ್ ಮಟ್ಟ (Ketone Level) ಹೆಚ್ಚಾಗಿರುವುದು ವೈದ್ಯರಿಗೆ ಕಳವಳಕಾರಿಯಾಗಿದೆ.‌ ಅವರ ಹಠಾತ್ ತೂಕ ನಷ್ಟ ಮತ್ತು ಹೆಚ್ಚಿನ ಕೀಟೋನ್ ಮಟ್ಟಗಳು ಮೂತ್ರಪಿಂಡದ ಹಾನಿ ಮತ್ತು ಕ್ಯಾನ್ಸರ್ ಸೇರಿದಂತೆ ಕೆಲವು ಗಂಭೀರ ಕಾಯಿಲೆಗಳ ಸಂಕೇತವಾಗಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಇಂದು ಜವಾಹರಲಾಲ್ ನೆಹರು 60ನೇ ಪುಣ್ಯತಿಥಿ- ಪ್ರಧಾನಿ ಮೋದಿ ಗೌರವ ನಮನ

    ಗಂಭೀರವಾದ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಪಿಇಟಿ-ಸಿಟಿ ಸ್ಕ್ಯಾನ್ ಮತ್ತು ಇತರ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸುವುದು ಅತ್ಯಗತ್ಯ. ಇವುಗಳು ಶೀಘ್ರವಾಗಿ ಪ್ರಗತಿ ಹೊಂದುತ್ತಿರುವ ರೋಗಗಳಾಗಿರುವುದರಿಂದ ಅವುಗಳನ್ನು ಮೊದಲೇ ಪತ್ತೆಹಚ್ಚುವುದು ಬಹಳ ಮುಖ್ಯ. ಅದಕ್ಕಾಗಿಯೇ ನಾವು 7 ದಿನಗಳ ವಿಸ್ತರಣೆಯನ್ನು ಕೇಳಿದ್ದೇವೆ. ವಿಸ್ತರಣೆ ಮಾಡಿದ್ದಲ್ಲಿ ಅವರು ಈ ಪರೀಕ್ಷೆಗಳನ್ನು ಮಾಡಬಹುದಾಗಿದೆ ಮತ್ತು ಔಷಧಿಗಳನ್ನು ಪ್ರಾರಂಭಿಸಬಹುದಾಗಿದೆ. ಹೀಗಾಗಿ ಅವರು ಜೂನ್ 2 ರ ಬದಲಾಗಿ ಜೂನ್ 9 ರಂದು ಒಂದು ವಾರದ ನಂತರ ಶರಣಾಗುತ್ತಾರೆ ಎಎಪಿ ಸಚಿವೆ ಹೇಳಿದರು.

    ಲೋಕಸಭಾ ಚುನಾವಣೆಗೆ (Loksabha Elections 2024) ಪ್ರಚಾರ ಮಾಡಲು ಅನುಕೂಲವಾಗುವಂತೆ ಮೇ 10 ರಂದು ಸುಪ್ರೀಂ ಕೋರ್ಟ್ ಅವರಿಗೆ 21 ದಿನಗಳ ಅವಧಿಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2 ರಂದು ಶರಣಾಗಲು ಮತ್ತು ಜೈಲಿಗೆ ಮರಳಲು ಸೂಚಿಸಿದೆ. ಈಗ ಅರವಿಂದ್ ಕೇಜ್ರಿವಾಲ್ ಇನ್ನೂ ಏಳು ದಿನಗಳ ಕಾಲ ಜಾಮೀನು ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

  • ಯೂಟ್ಯೂಬರ್ ಧ್ರುವ್ ರಾಠಿ ವಿಡಿಯೋ ಬಳಿಕ ಅತ್ಯಾಚಾರ, ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

    ಯೂಟ್ಯೂಬರ್ ಧ್ರುವ್ ರಾಠಿ ವಿಡಿಯೋ ಬಳಿಕ ಅತ್ಯಾಚಾರ, ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

    ನವದೆಹಲಿ: ಆಪ್ (AAP) ನಾಯಕರು ಮತ್ತು ಸ್ವಯಂಸೇವಕರಿಂದ ನನ್ನ ಚಾರಿತ್ರ್ಯ ಹರಣದ ಅಭಿಯಾನದ ನಂತರ ತನಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಆಪ್ ಸಂಸದೆ ಸ್ವಾತಿ ಮಲಿವಾಲ್ (Swati Maliwal‌) ಹೇಳಿದ್ದಾರೆ. ಯೂಟ್ಯೂಬರ್ ಧ್ರುವ್ ರಾಠಿ (Dhruv Rathee) ತನ್ನ ವಿರುದ್ಧ ಏಕಪಕ್ಷೀಯವಾಗಿ ವಿಡಿಯೊವನ್ನು ಪೋಸ್ಟ್ ಮಾಡಿದ ನಂತರ ಈ ಬೆದರಿಕೆ ಹೆಚ್ಚಾಗಿದೆ ಎಂದು ಅವರು ಆರೋಪಿಸಿದ್ದಾರೆ.

    ಧ್ರುವ್ ರಾಠಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದು, ಅವರು ತನ್ನ ಕರೆಗಳು ಮತ್ತು ಸಂದೇಶಗಳನ್ನು ನಿರ್ಲಕ್ಷಿಸಿದ್ದಾರೆ. ಸ್ವತಂತ್ರ ಪತ್ರಕರ್ತರು ಎಂದು ಹೇಳಿಕೊಳ್ಳುವ ಇವರು, ಇತರ ಎಎಪಿ ವಕ್ತಾರರಂತೆ ವರ್ತಿಸುವುದು ನಾಚಿಕೆಗೇಡಿನ ಸಂಗತಿಯಾಗಿದೆ. ನಾನು ಈಗ ತೀವ್ರ ನಿಂದನೆ ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದೇನೆ. ನನ್ನ ದೂರನ್ನು ಹಿಂಪಡೆಯುವಂತೆ ಹೆದರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಪ್ರಕರಣ – ಕೇಜ್ರಿವಾಲ್‌ ಆಪ್ತನಿಗೆ 4 ದಿನ ನ್ಯಾಯಾಂಗ ಬಂಧನ

    ಧ್ರುವ್ ರಾಠಿ ಅವರ 2.5 ನಿಮಿಷಗಳ ವೀಡಿಯೊದಲ್ಲಿ ನಿರ್ಲಕ್ಷಿಸಲಾಗಿದೆ ಎನ್ನಲಾದ ಹಲವಾರು ಅಂಶಗಳನ್ನು ಸ್ವಾತಿ ಮಲಿವಾಲ್ ಪಟ್ಟಿ ಮಾಡಿದ್ದಾರೆ. ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಒಪ್ಪಿಕೊಂಡ ನಂತರ ಎಎಪಿ ಏಕೆ ಯು-ಟರ್ನ್ ತೆಗೆದುಕೊಂಡಿತು? ವೈದ್ಯಕೀಯ ವರದಿಯಲ್ಲಿ ಹಲ್ಲೆಯಿಂದಾದ ಗಾಯಗಳನ್ನು ಬಹಿರಂಗಪಡಿಸುತ್ತದೆ. ನಾನು ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿದ್ದೆ. ಇದಾದ ನಂತರ ಆರೋಪಿಯ ಫೋನ್‍ನ್ನು ಫಾಮ್ರ್ಯಾಟ್ ಮಾಡಲಾಗಿದೆ. ಆರೋಪಿಯನ್ನು ಕೃತ್ಯ ನಡೆದ ಸ್ಥಳದಿಂದ (ಸಿಎಂ ಮನೆ) ಬಂಧಿಸಲಾಗಿದೆ. ಭದ್ರತೆಯಿಲ್ಲದೆ ಒಂಟಿಯಾಗಿ ಮಣಿಪುರಕ್ಕೆ ಹೋದ ಮಹಿಳೆಯನ್ನು ಬಿಜೆಪಿಯಿಂದ (BJP) ಹೇಗೆ ಕೊಂಡುಕೊಳ್ಳಲು ಸಾಧ್ಯ? ಈ ವಿಚಾರವನ್ನು ಧ್ರುವ ರಾಠಿ ವಿಡಿಯೋದಲ್ಲಿ ನಿರ್ಲಕ್ಷಿಸಲಾಗಿದೆ ಎಂದು ಸ್ವಾತಿ ಹೇಳಿಕೊಂಡಿದ್ದಾರೆ.

    ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳ ಬಗ್ಗೆ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಅವರು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಯಾವುದೇ ಸಂದರ್ಭದಲ್ಲಿ, ನನಗೆ ಏನಾದರೂ ಸಂಭವಿಸಿದರೆ, ಅದನ್ನು ಪ್ರಚೋದಿಸಿದವರು ಯಾರು ಎಂದು ನಮಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ.

    ಮೇ 13 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಭವ್ ಕುಮಾರ್ ಅವರನ್ನು ಮೇ 18 ರಂದು ಬಂಧಿಸಲಾಯಿತು. ಬಿಭವ್ ಜಾಮೀನು ಕೋರಿ ಸ್ಥಳೀಯ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕೋರ್ಟ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದು, ಉತ್ತರ ಕೇಳಿದೆ. ಇದನ್ನೂ ಓದಿ: ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸ್ವಾತಿ ಮಲಿವಾಲ್‌

  • ಪಾಕ್‌ ಪರಿಸ್ಥಿತಿ ಕೆಟ್ಟದ್ದಾಗಿದೆ, ಮೊದಲು ನಿಮ್ಮದನ್ನು ನೋಡಿಕೊಳ್ಳಿ – ಪಾಕ್‌ ಮಾಜಿ ಸಚಿವರ ಟ್ವೀಟ್‌ಗೆ ಕೇಜ್ರಿವಾಲ್‌ ತಿರುಗೇಟು

    ಪಾಕ್‌ ಪರಿಸ್ಥಿತಿ ಕೆಟ್ಟದ್ದಾಗಿದೆ, ಮೊದಲು ನಿಮ್ಮದನ್ನು ನೋಡಿಕೊಳ್ಳಿ – ಪಾಕ್‌ ಮಾಜಿ ಸಚಿವರ ಟ್ವೀಟ್‌ಗೆ ಕೇಜ್ರಿವಾಲ್‌ ತಿರುಗೇಟು

    ಇಸ್ಲಾಮಾಬಾದ್‌/ನವದೆಹಲಿ: ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರನ್ನು ಬೆಂಬಲಿಸಿ ʻʻಶಾಂತಿ ಮತ್ತು ಸಾಮರಸ್ಯವು ದ್ವೇಷ ಮತ್ತು ಉಗ್ರವಾದದ ಶಕ್ತಿಗಳನ್ನು ಸೋಲಿಸಲಿʼʼ ಎಂಬ ಪಾಕ್‌ ಮಾಜಿ ಸಚಿವರ ಟ್ವೀಟ್‌ಗೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು ತಿರುಗೇಟು ನೀಡಿದ್ದಾರೆ.

    ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ (Lok Sabha Elections) ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು ಕುಟುಂಬಸ್ಥರೊಂದಿಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದ್ದರು. ಬಳಿಕ ಕುಟುಂಬಸ್ಥರೊಂದಿಗಿನ ಫೋಟೋವನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದರೊಂದಿಗೆ ʻನಾನು ಇಂದು ನನ್ನ ತಂದೆ, ಹೆಂಡತಿ ಮತ್ತು ಮಕ್ಕಳೊಂದಿಗೆ ಮತ ಚಲಾಯಿಸಿದ್ದೇನೆ. ನನ್ನ ತಾಯಿ ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಅವರಿಗೆ ಹೋಗಲಾಗಲಿಲ್ಲ. ನಾನು ಸರ್ವಾಧಿಕಾರ, ನಿರುದ್ಯೋಗ ಮತ್ತು ಹಣದುಬ್ಬರದ ವಿರುದ್ಧ ಮತ ಹಾಕಿದ್ದೇನೆ. ನೀವೂ ಹೋಗಿ ಮತ ಹಾಕಿʼ ಎಂದೂ ಸಹ ಬರೆದುಕೊಂಡಿದ್ದರು.

    ಅರವಿಂದ್‌ ಕೇಜ್ರಿವಾಲ್‌ ಅವರ ಈ ಟ್ವೀಟ್‌ ಸಂದೇಶವನ್ನು ತನ್ನ ಖಾತೆಯಲ್ಲಿ ಹಂಚಿಕೊಂಡಿದ್ದ ಪಾಕ್‌ ಮಾಜಿ ಸಚಿವ ಫವಾದ್ ಹುಸೇನ್ (Fawad Hussain), ಶಾಂತಿ ಮತ್ತು ಸಾಮರಸ್ಯವು ದ್ವೇಷ ಮತ್ತು ಉಗ್ರವಾದದ ಶಕ್ತಿಗಳನ್ನು ಸೋಲಿಸಲಿ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: ಗುಜರಾತ್‌ನ ರಾಜ್‌ಕೋಟ್‌ ಗೇಮಿಂಗ್‌ ವಲಯದಲ್ಲಿ ಅಗ್ನಿ ದುರಂತ – 20 ಮಂದಿ ಸಾವು

    ಇದಕ್ಕೆ ಎಕ್ಸ್‌ ಮೂಲಕವೇ ಖಡಕ್‌ ಉತ್ತರ ನೀಡಿದ ಕೇಜ್ರಿವಾಲ್‌, ಚೌಧರಿ ಸಾಹಿಬ್, ನಾನು ಮತ್ತು ನನ್ನ ದೇಶದ ಜನರು ನಮ್ಮ ಸಮಸ್ಯೆಗಳನ್ನು ನಿಭಾಯಿಸಲು ಸಂಪೂರ್ಣವಾಗಿ ಸಮರ್ಥರಾಗಿದ್ದೇವೆ. ನಿಮ್ಮ ಟ್ವೀಟ್ ಅಗತ್ಯವಿಲ್ಲ. ಸದ್ಯ ಪಾಕಿಸ್ತಾನದ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ನೀವು ನಿಮ್ಮ ದೇಶವನ್ನು ನೋಡಿಕೊಳ್ಳಿ ಎಂದು ತಿರುಗೇಟು ನೀಡಿದ್ದಾರೆ. ಅಲ್ಲದೇ ಭಾರತದ ಚುನಾವಣೆಗಳು ನಮ್ಮ ಆಂತರಿಕ ವಿಚಾರ. ಇದರಲ್ಲಿ ಭಯೋತ್ಪಾದನೆಯ ಪ್ರಾಯೋಜಕರು ಹಸ್ತಕ್ಷೇಪ ಮಾಡುವುದನ್ನು ಭಾರತ ಸಹಿಸುವುದಿಲ್ಲ ಎಂದೂ ಸಹ ಹೇಳಿದ್ದಾರೆ.

    ಬಿಜೆಪಿ ಟೀಕೆ:
    ಇನ್ನೂ ಪಾಕ್‌ ಮಾಜಿ ಸಚಿವರ ಹೇಳಿಕೆಗೆ ಬಿಜೆಪಿ (BJP) ಕಳವಳ ವ್ಯಕ್ತಪಡಿಸಿದೆ. ಪಾಕಿಸ್ತಾನದ ರಾಜಕಾರಣಿಗಳು, ಭಾರತದ ರಾಜಕಾರಣಿಗಳನ್ನ ಬೆಂಬಲಿಸುತ್ತಿರುವುದು ಆತಂಕಕಾರಿ ವಿಷಯ. ಪಾಕ್‌ ಏಕೆ ಕೇಜ್ರಿವಾಲ್‌ರನ್ನ ಬೆಂಬಲಿಸುತ್ತಿದೆ? ಅವರಿಗೆ ಅಧಿಕಾರ ಸಿಗಬೇಕೆಂದು ಏಕೆ ಬಯಸುತ್ತಿದೆ? ಇದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಮಂಜಿಂದರ್ ಸಿಂಗ್ ಸಿರ್ಸಾ ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಹಿಳೆಯ ಧ್ವನಿಯಲ್ಲಿ ಮಾತನಾಡಿ 7 ವಿದ್ಯಾರ್ಥಿನಿಯರ ಅತ್ಯಾಚಾರ – ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ

  • ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸ್ವಾತಿ ಮಲಿವಾಲ್‌

    ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸ್ವಾತಿ ಮಲಿವಾಲ್‌

    ನವದೆಹಲಿ: ನನ್ನ ರಾಜ್ಯಸಭಾ (Rajya Sabha) ಸ್ಥಾನ ಯಾರಿಗಾದರೂ ಬೇಕಾಗಿದ್ದರೆ, ಪ್ರೀತಿಯಿಂದ ಕೇಳಿದ್ದರೆ ನಾನು ಬಿಟ್ಟುಕೊಡುತ್ತಿದ್ದೆ. ಈಗ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಸಂಸದೆ ಸ್ವಾತಿ ಮಲಿವಾಲ್ (Swati Maliwal) ಹೇಳಿದ್ದಾರೆ.

    ತಮ್ಮ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಯಾವುದೇ ಪದವಿಗೆ ಆಸೆ ಪಟ್ಟಿಲ್ಲ. ಅವರಿಗೆ ಬೇಕಿದ್ದರೆ ನಾನು ಜೀವವನ್ನು ಕೊಡುತ್ತಿದ್ದೆ. ಈ ಘಟನೆ ಬಳಿಕ ಭೂಮಿಯ ಮೇಲಿರುವ ಯಾವುದೇ ಶಕ್ತಿ ಬಂದರೂ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್‌ ಪೋಸ್ಟ್‌

    ಅಧಿಕಾರವು ಬಂದಾಗ ಕ್ರಮೇಣ ಅಹಂಕಾರವೂ ಬರುತ್ತದೆ. ಯಾವುದು ಸರಿ, ಯಾವುದು ತಪ್ಪು ಎಂದು ನೋಡುವುದಿಲ್ಲ. ಒಬ್ಬ ಮಹಿಳೆಯ ಮೇಲೆ‌ ಹಲ್ಲೆ ಮಾಡುವುದಲ್ಲದೇ ಚಾರಿತ್ರ್ಯಹರಣ ಮಾಡಬಹುದು ಎಂದು ಊಹಿಸಿರಲಿಲ್ಲ ಎಂದು ಮಾತನಾಡಿದ್ದಾರೆ.

    ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ನಿವಾಸದಲ್ಲಿ ಎಲ್ಲವೂ ನಡೆಯಿತು. ಅಂದು ನನ್ನ ಮೇಲೆ ಹಲ್ಲೆ ನಡೆಯುವಾಗ ಕೂಗಿಕೊಂಡೆ. ಯಾರು ನನ್ನ ಸಹಾಯಕ್ಕೆ ಬರಲಿಲ್ಲ. ಈಗ ಆರೋಪಿಯ ಸಹಾಯಕ್ಕೆ ಸಿಎಂ ಅರವಿಂದ್ ಕೇಜ್ರಿವಾಲ್ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರನ್ನು ಪಾರು ಮಾಡಲು ಎಲ್ಲ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಹಲ್ಲೆ ಪ್ರಕರಣ; ಕೊನೆಗೂ ಮೌನ ಮುರಿದ ಕೇಜ್ರಿವಾಲ್‌

  • ಇಬ್ಬರು ಸಿಎಂ ಅರೆಸ್ಟ್‌ ಆದ್ರು.. ಬುಡಕಟ್ಟು ಸಿಎಂ ಇನ್ನೂ ಜೈಲಲ್ಲೇ ಇದ್ದಾರೆ: ರಾಹುಲ್‌ ಗಾಂಧಿ

    ಇಬ್ಬರು ಸಿಎಂ ಅರೆಸ್ಟ್‌ ಆದ್ರು.. ಬುಡಕಟ್ಟು ಸಿಎಂ ಇನ್ನೂ ಜೈಲಲ್ಲೇ ಇದ್ದಾರೆ: ರಾಹುಲ್‌ ಗಾಂಧಿ

    – ಕೇಜ್ರಿವಾಲ್‌, ಹೇಮಂತ್‌ ಸೊರೆನ್‌ ಬಂಧನ ಹೋಲಿಸಿ ಕಾಂಗ್ರೆಸ್‌ ನಾಯಕ ಬೇಸರ

    ಚಂಡೀಗಢ: ಇಬ್ಬರು ಮುಖ್ಯಮಂತ್ರಿಗಳ ಬಂಧನವಾಗಿದೆ. ಆದರೆ ಬುಡಕಟ್ಟು ಸಮುದಾಯದ ಸಿಎಂ ಮಾತ್ರ ಇನ್ನೂ ಜೈಲಿನಲ್ಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅಭಿಪ್ರಾಯಪಟ್ಟಿದ್ದಾರೆ.

    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ (Hemant Soren) ಅವರ ಬಂಧನಗಳ ನಡುವೆ ಹೋಲಿಕೆ ಮಾಡಿದ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಹರಿಯಾಣದ ಪಂಚಕುಲದಲ್ಲಿ ‘ಸಂವಿಧಾನ್ ಸಮ್ಮಾನ್ ಸಮ್ಮೇಳನ’ ಉದ್ದೇಶಿಸಿ ರಾಹುಲ್‌ ಗಾಂಧಿ ಮಾತನಾಡಿದ್ದಾರೆ. ಇದನ್ನೂ ಓದಿ: ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್‌ ಪೋಸ್ಟ್‌

    ದೇಶದ ಪ್ರತಿಯೊಬ್ಬ ನಾಗರಿಕರನ್ನು ಸಮಾನವಾಗಿ ಕಾಣಬೇಕು ಎಂದು ನಮ್ಮ ಸಂವಿಧಾನದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಹಾಗಾದರೆ ನನ್ನ ಸರಳ ಪ್ರಶ್ನೆ, 90% ರಷ್ಟು ಜನರ ಭಾಗವಹಿಸುವಿಕೆ ಏನು? ಮಾಧ್ಯಮ ಅಥವಾ ಅಧಿಕಾರಶಾಹಿ ಯಾವುದೇ ಆಗಿರಲಿ. ಅಲ್ಲಿ 90% ರಷ್ಟು ಜನರು ಭಾಗವಹಿಸುವಿಕೆ ಇಲ್ಲ. ಅವರು ಅಸ್ತಿತ್ವದಲ್ಲಿಯೇ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಇಬ್ಬರು ಮುಖ್ಯಮಂತ್ರಿಗಳನ್ನು ಬಂಧಿಸಲಾಯಿತು. ಬುಡಕಟ್ಟು ಸಿಎಂ ಹೇಮಂತ್ ಸೋರೆನ್ ಇನ್ನೂ ಜೈಲಿನಲ್ಲಿದ್ದಾರೆ. ಅವರು ಮೊದಲು ಅರೆಸ್ಟ್‌ ಆದರು. ಇನ್ನೂ ಕಂಬಿಗಳ ಹಿಂದೆ ಇದ್ದಾರೆ. ರಾಷ್ಟ್ರೀಯ ಮಾಧ್ಯಮಗಳು ಅವರನ್ನು ಮರೆತಿವೆ. ಅವರ ಬಗ್ಗೆ ಮಾತನಾಡುವುದಿಲ್ಲ. ಮಾಯಾವತಿ ಭ್ರಷ್ಟ ಆದರೆ ನವೀನ್ ಪಟ್ನಾಯಕ್ ಅಲ್ಲ. ಯಾರಾದರೂ ಬುಡಕಟ್ಟು ಅಥವಾ ದಲಿತರಾಗಿದ್ದರೆ, ಅವರು ಸ್ವಯಂಚಾಲಿತವಾಗಿ ಚೌಕಟ್ಟಿಗೆ ಒಳಗಾಗುತ್ತಾರೆ ಎಂದು ತಾರತಮ್ಯ ಕುರಿತು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಗಾ ಒಬ್ಬ ಮಹಾನ್‌ ವ್ಯಕ್ತಿ, ಗಾಂಧೀಜಿ ಕನಸು ನನಸು ಮಾಡ್ತಿದ್ದಾರೆ: ಆಚಾರ್ಯ ಪ್ರಮೋದ್ ಕೃಷ್ಣಂ ಕಿಡಿ

    ಭೂ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಅವರನ್ನು ಜಾರಿ ನಿರ್ದೇಶನಾಲಯ ಈ ವರ್ಷದ ಜನವರಿಯಲ್ಲಿ ಬಂಧಿಸಿತ್ತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ನ್ಯಾಯಾಲಯದಿಂದ ಯಾವುದೇ ಮಧ್ಯಂತರ ಪರಿಹಾರ ಪಡೆಯಲು ಸಾಧ್ಯವಾಗಲಿಲ್ಲ.

    ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್‌ನಲ್ಲಿ ಇಡಿ ಬಂಧಿಸಿತ್ತು. ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1 ರ ವರೆಗೆ ಮಧ್ಯಂತರ ಜಾಮೀನು ನೀಡಿದೆ.

  • ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್‌ ಪೋಸ್ಟ್‌

    ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್‌ ಪೋಸ್ಟ್‌

    ನವದೆಹಲಿ: ನಾನು, ನನ್ನ ಪೋಷಕರು ಮತ್ತು ಹೆಂಡತಿಯೊಂದಿಗೆ ಪೊಲೀಸರಿಗಾಗಿ ಕಾಯುತ್ತಿದ್ದೇನೆ ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಹೇಳಿದ್ದಾರೆ.

    ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ (Swati Maliwal) ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ಕೇಜ್ರಿವಾಲ್‌ ಪೋಸ್ಟ್‌ ಹಾಕಿದ್ದಾರೆ. ಪೋಷಕರು, ಪತ್ನಿ ಜೊತೆ ಮನೆಯಲ್ಲಿ ಕಾಯುತ್ತಿರುವ ವೀಡಿಯೋ ಕೂಡ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಹಲ್ಲೆ ಪ್ರಕರಣ; ಕೊನೆಗೂ ಮೌನ ಮುರಿದ ಕೇಜ್ರಿವಾಲ್‌

    ನಾನು, ನನ್ನ ಪೋಷಕರು ಮತ್ತು ಹೆಂಡತಿಯೊಂದಿಗೆ ಪೊಲೀಸರಿಗಾಗಿ ಕಾಯುತ್ತಿದ್ದೇನೆ. ನಿನ್ನೆ ಪೊಲೀಸರು ಕರೆ ಮಾಡಿ ನನ್ನ ಪೋಷಕರ ವಿಚಾರಣೆಗೆ ಸಮಯ ಕೇಳಿದ್ದಾರೆ. ಆದರೆ ಅವರು ಬರುತ್ತಾರೋ ಇಲ್ಲವೋ ಎಂಬ ಬಗ್ಗೆ ಇನ್ನೂ ಮಾಹಿತಿ ನೀಡಿಲ್ಲ ಎಂದು ತಿಳಿಸಿದ್ದಾರೆ.

    ಸ್ವಾತಿ ಮಲಿವಾಲ್‌ ಅವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್‌ ಆಪ್ತ ಬಿಭವ್‌ ಕುಮಾರ್‌ (Bibhav Kumar) ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಇದನ್ನೂ ಓದಿ: ರಾಗಾ ಒಬ್ಬ ಮಹಾನ್‌ ವ್ಯಕ್ತಿ, ಗಾಂಧೀಜಿ ಕನಸು ನನಸು ಮಾಡ್ತಿದ್ದಾರೆ: ಆಚಾರ್ಯ ಪ್ರಮೋದ್ ಕೃಷ್ಣಂ ಕಿಡಿ

    ಪ್ರಕರಣ ಸಂಬಂಧ ಬುಧವಾರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದ ಕೇಜ್ರಿವಾಲ್‌ ಅವರು, ನ್ಯಾಯಯುತ ತನಿಖೆ ಆಗಬೇಕು ಎಂದು ಕೋರಿದ್ದರು.

  • ಸ್ವಾತಿ ಮಲಿವಾಲ್‌ ಹಲ್ಲೆ ಪ್ರಕರಣ; ಕೊನೆಗೂ ಮೌನ ಮುರಿದ ಕೇಜ್ರಿವಾಲ್‌

    ಸ್ವಾತಿ ಮಲಿವಾಲ್‌ ಹಲ್ಲೆ ಪ್ರಕರಣ; ಕೊನೆಗೂ ಮೌನ ಮುರಿದ ಕೇಜ್ರಿವಾಲ್‌

    ನವದೆಹಲಿ: ಎಎಪಿ ಸಂಸದೆ ಸ್ವಾತಿ ಮಲಿವಾಲ್‌ (Swati Maliwal) ಮೇಲೆ ತನ್ನ ಆಪ್ತ ಸಹಾಯಕ ಹಲ್ಲೆ ನಡೆಸಿದ ಆರೋಪ ಪ್ರಕರಣದ ಬಗ್ಗೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಕೊನೆಗೂ ಮೌನ ಮುರಿದಿದ್ದಾರೆ.

    ಪ್ರಕರಣ ಸಂಬಂಧ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್‌, ನ್ಯಾಯಯುತ ತನಿಖೆ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಕರಣದಲ್ಲಿ ಎರಡೂ ಕಡೆಯಿಂದ ದೂರುಗಳಿವೆ. ಆದರೆ ನಾನು ನ್ಯಾಯಯುತ ತನಿಖೆಯನ್ನು ನಿರೀಕ್ಷಿಸುತ್ತೇನೆ. ನ್ಯಾಯವನ್ನು ಒದಗಿಸಬೇಕು. ಪೊಲೀಸರು ಎರಡೂ ಆವೃತ್ತಿಗಳನ್ನು ನ್ಯಾಯಯುತವಾಗಿ ತನಿಖೆ ಮಾಡಬೇಕು ಮತ್ತು ನ್ಯಾಯ ಒದಗಿಸಬೇಕು ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಪೋರ್ಶೆ ಕಾರಿಗೆ ಟೆಕ್ಕಿಗಳು ಬಲಿ ಪ್ರಕರಣ – ಅಪ್ರಾಪ್ತನ ತಂದೆಗೆ 2 ದಿನ ಪೊಲೀಸ್ ಕಸ್ಟಡಿ

    ಅರವಿಂದ್‌ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ (Bibhav Kumar) ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೇ 13 ರಂದು ಸ್ವಾತಿ ಮಲಿವಾಲ್‌ ಪೊಲೀಸರಿಗೆ ದೂರು ನೀಡಿದ್ದರು. ಇದಕ್ಕೆ ಪ್ರತಿಯಾಗಿ ಸ್ವಾತಿ ಮಲಿವಾಲ್‌ ವಿರುದ್ಧ ಬಿಭವ್‌ ಕೂಡ ದೂರು ದಾಖಲಿಸಿದ್ದರು.

    ಹಲ್ಲೆ ಪ್ರಕರಣದಲ್ಲಿ ಆರೋಪಿ ಬಿಭವ್‌ ಬಂಧನಕ್ಕೊಳಗಾಗಿದ್ದಾರೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಇದನ್ನೂ ಓದಿ: ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ

  • ಮೆಟ್ರೋ ನಿಲ್ದಾಣದಲ್ಲಿ ಕೇಜ್ರಿವಾಲ್‌ಗೆ ಬೆದರಿಕೆ ಸಂದೇಶ- ಆರೋಪಿ ಅರೆಸ್ಟ್

    ಮೆಟ್ರೋ ನಿಲ್ದಾಣದಲ್ಲಿ ಕೇಜ್ರಿವಾಲ್‌ಗೆ ಬೆದರಿಕೆ ಸಂದೇಶ- ಆರೋಪಿ ಅರೆಸ್ಟ್

    ನವದೆಹಲಿ: ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಕೊಲೆ ಬೆದರಿಕೆ ಸಂದೇಶ ಬರೆದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

    ಬಂಧಿತನನ್ನು 33 ವರ್ಷದ ಆರೋಪಿ ಅಂಕಿತ್ ಗೋಯಲ್ ಎಂದು ಗುರುತಿಸಲಾಗಿದೆ. ಈತ ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಬೆದರಿಕೆ ಸಂದೇಶ ಬರೆದಿದ್ದನು. ಅಂಕಿತ್‌ ಕೃತ್ಯ ಮೆಟ್ರೋ ನಿಲ್ದಾಣದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಾಕ್ಷಿ ಆಧರಿಸಿ ದೆಹಲಿ ಪೊಲೀಸರು ಬಂಧಿಸಿದ್ದು, ಮೆಟ್ರೋ ಘಟಕವು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್‌ ಬಾಯ್‌ – ಮುಂದಾಗಿದ್ದೇನು ಗೊತ್ತೇ?

    ಮೂಲಗಳ ಪ್ರಕಾರ ಆರೋಪಿ ಬರೇಲಿ ನಿವಾಸಿಯಾಗುದ್ದು, ಉನ್ನತ ಶಿಕ್ಷಣ ಪಡೆದಿದ್ದಾನೆ. ಅಲ್ಲದೇ ಹೆಸರಾಂತ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ. ಆರೋಪಿಯು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯ ಮಾನಸಿಕ ಸ್ಥಿತಿ ಚೆನ್ನಾಗಿಲ್ಲ ಎಂದು ತೋರುತ್ತದೆ, ಆದರೆ ವೈದ್ಯಕೀಯ ಪರೀಕ್ಷೆಯ ನಂತರವೇ ಇದನ್ನು ಖಚಿತಪಡಿಸಬಹುದಾಗಿದೆ ಎನ್ನಲಾಗಿದೆ.

    ಈ ಹಿಂದೆ ಬೆದರಿಕೆ ಸಂದೇಶ ಕುರಿತು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದ ಎಎಪಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಪಿಎಂಒ, ಬಿಜೆಪಿ ಮತ್ತು ನರೇಂದ್ರ ಮೋದಿಯವರ ಆದೇಶದ ಮೇರೆಗೆ ರಾಜೀವ್ ಚೌಕ್, ಪಟೇಲ್ ನಗರ ಮೆಟ್ರೋ ನಿಲ್ದಾಣದಲ್ಲಿ ಬೆದರಿಕೆ ಸಂದೇಶ ಬರೆಯಲಾಗಿದೆ. ಹೀಗಾಗಿ ಅರವಿಂದ್ ಕೇಜ್ರಿವಾಲ್ ಅವರಿಗೆ ಏನಾದರೂ ಸಂಭವಿಸಿದರೆ ಅದಕ್ಕೆ ಬಿಜೆಪಿ ಮತ್ತು ನರೇಂದ್ರ ಮೋದಿ ನೇರ ಹೊಣೆಯಾಗುತ್ತಾರೆ ಎಂದು ಗಂಭೀರ ಆರೋಪ ಮಾಡಿತ್ತು.

  • ಅಮಿತ್‌ ಶಾ ಇನ್ನೂ ಪ್ರಧಾನಿಯಾಗಿಲ್ಲ ಆಗಲೇ ದುರಹಂಕಾರಿಯಾಗಿದ್ದಾರೆ: ಕೇಜ್ರಿವಾಲ್ ವಾಗ್ದಾಳಿ

    ಅಮಿತ್‌ ಶಾ ಇನ್ನೂ ಪ್ರಧಾನಿಯಾಗಿಲ್ಲ ಆಗಲೇ ದುರಹಂಕಾರಿಯಾಗಿದ್ದಾರೆ: ಕೇಜ್ರಿವಾಲ್ ವಾಗ್ದಾಳಿ

    ನವದೆಹಲಿ: ಗೃಹ ಸಚಿವ ಅಮಿತ್ ಶಾ (Amitshah) ಇನ್ನೂ ಪ್ರಧಾನಿಯಾಗಿಲ್ಲ, ಆಗಲೇ ಅವರು ದುರಹಂಕಾರಿಯಾಗಿದ್ದಾರೆ. ದೇಶದ ಜನರನ್ನು ನಿಂದಿಸಲು ಆರಂಭಿಸಿದ್ದಾರೆ. ಆಪ್ ಬೆಂಬಲಿಗರನ್ನು ಪಾಕಿಸ್ತಾನಿಗಳು ಎನ್ನುತ್ತಿದ್ದಾರೆ. ಈ ಮೂಲಕ ಅವರು ಜನರನ್ನು ಅವಮಾನಿಸುತ್ತಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ವಾಗ್ದಾಳಿ ನಡೆಸಿದ್ದಾರೆ.

    ಕೇಜ್ರಿವಾಲ್‌ ಅವರು ವೀಡಿಯೋ ಬಿಡುಗಡೆ ಮಾಡಿ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು. ಸೋಮವಾರ ಅಮಿತ್ ಶಾ ಚುನಾವಣಾ ಪ್ರಚಾರದಲ್ಲಿ ಜನರನ್ನು ನಿಂದಿಸಿದ್ದಾರೆ. ಆಮ್ ಆದ್ಮಿ ಪಕ್ಷದ ಬೆಂಬಲಿಗರು ಪಾಕಿಸ್ತಾನಿಗಳು ಎಂದು ಕರೆದಿದ್ದಾರೆ. ನಾನು ಅವರನ್ನು ಕೇಳಲು ಬಯಸುತ್ತೇನೆ, ದೆಹಲಿಯ ಜನರು ನಮಗೆ 62 ಸ್ಥಾನಗಳನ್ನು ನೀಡುವ ಮೂಲಕ ನಮ್ಮ ಸರ್ಕಾರವನ್ನು ರಚಿಸಿದ್ದಾರೆ. ಪಂಜಾಬ್ ನಲ್ಲಿ 117 ಸ್ಥಾನಗಳಲ್ಲಿ 92 ಸ್ಥಾನಗಳನ್ನು ನಮಗೆ ನೀಡಿದ್ದಾರೆ. ಗುಜರಾತ್, ಗೋವಾ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶದ ಜನರು ನಮಗೆ ಪ್ರೀತಿ ಮತ್ತು ವಿಶ್ವಾಸವನ್ನು ನೀಡಿದ್ದಾರೆ. ನಮ್ಮನ್ನು ಬೆಂಬಲಿಸಿದ ಜನರು ಪಾಕಿಸ್ತಾನಿಗಳಾ ಎಂದು ಪ್ರಶ್ನಿಸಿದರು.

    ಈ ದೇಶದ ಜನರೆಲ್ಲರೂ ನಿಮ್ಮನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಮಾಡಿದ್ದಾರೆಯೇ? ನೀವು ಇನ್ನೂ ಪ್ರಧಾನಿಯಾಗಿಲ್ಲ. ಈಗಲೇ ನೀವು ತುಂಬಾ ದುರಹಂಕಾರಿಯಾಗಿದ್ದೀರಿ. ಜನರನ್ನು ನಿಂದಿಸಲು ಮತ್ತು ಬೆದರಿಕೆ ಹಾಕಲು ಪ್ರಾರಂಭಿಸಿದ್ದೀರಿ. ನೀವು ಪ್ರಧಾನಿಯಾಗುತ್ತಿಲ್ಲ, ಜನರು ಬಿಜೆಪಿ ಸರ್ಕಾರವನ್ನು ರಚಿಸುತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಂಸದ ಜಯಂತ್ ಸಿನ್ಹಾಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್ ಜಾರಿ

    ಲೋಕಸಭಾ ಚುನಾವಣೆಯ ಒಂದೊಂದೇ ಹಂತ ಮುಕ್ತಾಯವಾಗುತ್ತಿರುವಂತೆ ಪ್ರಧಾನಿ ನರೇಂದ್ರ ಮೋದಿ (narendra Modi) ಅವರ ಸರ್ಕಾರ ದೇಶದಿಂದ ನಿರ್ಗಮಿಸುತ್ತಿದೆ. ಜೂನ್ 4 ರಂದು ಇಂಡಿಯಾ ಒಕ್ಕೂಟದ ಮೈತ್ರಿ ಸರ್ಕಾರ ರಚನೆಯಾಗಲಿದೆ. ಪ್ರತಿ ಹಂತದ ಮತದಾನದಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದೆ ಎಂಬುದು ಸ್ಪಷ್ಟವಾಗುತ್ತಿದೆ. ಇಂಡಿಯಾ ಬ್ಲಾಕ್ ದೇಶಕ್ಕೆ ಸ್ಥಿರ ಸರ್ಕಾರವನ್ನು ನೀಡುತ್ತದೆ. ಮೋದಿ ಸರ್ಕಾರವು ಅಧಿಕಾರದಿಂದ ಹೊರಬರಲಿದೆ ಎಂದು ಇದೇ ವೇಳೆ ಕೇಜ್ರಿವಾಲ್ ಭವಿಷ್ಯ ನುಡಿದರು. ‌

  • ‘ಆಪರೇಷನ್‌ ಜಾದುʼ ಅಡಿಯಲ್ಲಿ AAP ಮುಗಿಸಲು ಬಿಜೆಪಿ ಯತ್ನ: ಕೇಜ್ರಿವಾಲ್‌

    ‘ಆಪರೇಷನ್‌ ಜಾದುʼ ಅಡಿಯಲ್ಲಿ AAP ಮುಗಿಸಲು ಬಿಜೆಪಿ ಯತ್ನ: ಕೇಜ್ರಿವಾಲ್‌

    – ಜೈಲಿನಲ್ಲಿ 2 ಬಾರಿ ಭಗವದ್ಗೀತೆ, ಒಮ್ಮೆ ರಾಮಾಯಣ ಓದಿದೆ

    ನವದೆಹಲಿ: ‘ಆಪರೇಷನ್ ಜಾದು’ ಅಡಿಯಲ್ಲಿ ಆಮ್‌ ಆದ್ಮಿ (Aam Admi Party) ಪಕ್ಷವನ್ನು ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್ (Arvind Kejriwal) ಆರೋಪಿಸಿದ್ದಾರೆ.

    ಪಕ್ಷದ ಕಚೇರಿಯಲ್ಲಿ ಸಿಎಂ ಕೇಜ್ರಿವಾಲ್ ಮಾತನಾಡಿ, ಆಮ್ ಅದ್ಮಿ ಪಕ್ಷವನ್ನು ನಾಶ ಮಾಡಲು ಸಾಧ್ಯವಿಲ್ಲ. ದೇವರ ಕೃಪೆ ಇಲ್ಲದಿದ್ದರೆ ನಮ್ಮ ಪಕ್ಷ ಕಳೆದ ವರ್ಷದಲ್ಲಿ ನಾಶವಾಗುತ್ತಿದ್ದೆವು. ನಮ್ಮ ಉದ್ದೇಶ ಸ್ಪಷ್ಟವಾಗಿದೆ, ಜನರ ಸೇವೆ ಮಾಡುವುದೇ ನಮ್ಮ ಉದ್ದೇಶವಾಗಿದೆ. ನಾವು ದೊಡ್ಡದಾಗಿ ಬೆಳೆಯಬಾರದು ಮತ್ತು ಅವರಿಗೆ ಸವಾಲಾಗಬಾರದು ಎಂದು ಬಿಜೆಪಿ ‘ಆಪರೇಷನ್ ಜಾದು’ ಆರಂಭಿಸಿದೆ ಎಂದರು.

    ‘ಆಪರೇಷನ್ ಜಾದು’ (Opeartion Jaadhu) ಮೂಲಕ ಎಎಪಿಯ ದೊಡ್ಡ ನಾಯಕರನ್ನು ಬಂಧಿಸಲಾಗುವುದು. ಮುಂಬರುವ ದಿನಗಳಲ್ಲಿ ಇನ್ನಷ್ಟು ನಾಯಕರನ್ನು ಬಂಧಿಸಲಾಗುತ್ತಿದೆ. ಎಎಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಇಡಿ ವಕೀಲರು ಈಗಾಗಲೇ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.

    ಈ ಚುನಾವಣೆ ಮುಗಿದ ಕೂಡಲೇ ಎಎಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗುವುದು. ನಮ್ಮ ಖಾತೆಗಳನ್ನು ಸ್ಥಗಿತಗೊಳಿಸುತ್ತೇವೆ, ನಮ್ಮ ಕಚೇರಿಯನ್ನು ತೆರವುಗೊಳಿಸುತ್ತೇವೆ ಮತ್ತು ನಮ್ಮನ್ನು ಬೀದಿಗೆ ತರಲು ಬಿಜೆಪಿ ನಿರ್ಧರಿಸಿದೆ ಎಂದು ಕೇಜ್ರಿವಾಲ್‌ ತಿಳಿಸಿದರು. ಇದನ್ನೂ ಓದಿ: ಪೆನ್‌ಡ್ರೈವ್‌ ಮಾರಾಟಕ್ಕಿಟ್ಟಿದ್ದೇ ದೇವರಾಜೇಗೌಡ – ಡಿಕೆಶಿ ಜೊತೆಗೆ ಮಾತನಾಡಿಸಿ ತಪ್ಪು ಮಾಡಿದೆ: ಶಿವರಾಮೇಗೌಡ

    2015ರಲ್ಲಿ ನಾನು ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿಯವರು ಎಷ್ಟು ಆರೋಪಗಳನ್ನು ಎತ್ತಿದ್ದಾರೆ?.. ಈಗ ಅವರು ಮದ್ಯ ನೀತಿ ಹಗರಣ ನಡೆದಿದೆ ಎಂದು ಹೇಳುತ್ತಾರೆ. ಹಗರಣ ನಡೆದಿದೆಯೇ ಎಂದು ಜನರು ಕೇಳುತ್ತಿದ್ದಾರೆ. ಹಾಗಿದ್ರೆ ಹಣ ಎಲ್ಲಿದೆ? ಇತರ ಸ್ಥಳಗಳಲ್ಲಿ ದಾಳಿ ನಡೆದಾಗ ನೋಟುಗಳು ಮತ್ತು ಚಿನ್ನವನ್ನು ವಶಪಡಿಸಿಕೊಳ್ಳಲಾಗುತ್ತದೆ, ಆದರೆ ಇಲ್ಲಿ ಏನೂ ಕಂಡುಬಂದಿಲ್ಲ. ಎಲ್ಲಿದೆ ಹಣ? ಬಿಜೆಪಿಯವರು ನಕಲಿ ಪ್ರಕರಣಗಳನ್ನು ದಾಖಲಿಸಿ ನಮ್ಮ ಜನರನ್ನು ಬಂಧಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    2 ಬಾರಿ ಭಗವದ್ಗೀತೆ ಓದಿದೆ: ಜೈಲಿನಲ್ಲಿ ನಾನು ಸಮಯ ವ್ಯರ್ಥ ಮಾಡಿಲ್ಲ. ಎರಡು ಬಾರಿ ಭಗವದ್ಗೀತೆ ಹಾಗೂ ಒಮ್ಮೆ ರಾಮಾಯಣವನ್ನು ಓದಿದೆ ಎಂದು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ.