Tag: Arvind Kejriwal

  • ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದು, ಕೆನ್ನೆಗೆ ಹೊಡೆದಿದ್ದಾನೆ – ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು

    ನನ್ನ ಎದೆ, ಹೊಟ್ಟೆ, ಸೊಂಟಕ್ಕೆ ಒದ್ದು, ಕೆನ್ನೆಗೆ ಹೊಡೆದಿದ್ದಾನೆ – ಕೇಜ್ರಿವಾಲ್ ಆಪ್ತನ ವಿರುದ್ಧ ಮಲಿವಾಲ್ ದೂರು

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ ಕನಿಷ್ಠ ಏಳರಿಂದ ಎಂಟು ಬಾರಿ ನನ್ನ ಕೆನ್ನೆಗೆ ಹೊಡೆದಿದ್ದಾನೆ ಎಂದು ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ (Swati Maliwal) ಗಂಭೀರ ಆರೋಪ ಮಾಡಿದ್ದಾರೆ.

    ಹಲ್ಲೆ ನಡೆಸಿದ ಸಂಬಂಧ ಸ್ವಾತಿ ಮಲಿವಾಲ್ ದೂರು ನೀಡಿದ್ದು ಎಫ್‍ಐಆರ್ ದಾಖಲಾಗಿದೆ. ಮೇ 13 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ದೌರ್ಜನ್ಯದ ಬಗ್ಗೆ ಎಳೆ ಎಳೆಯಾಗಿ ಸ್ವಾತಿ ದೂರಿನಲ್ಲಿ ವಿವರಿಸಿದ್ದಾರೆ.

    ಮೇ 13 ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮನೆಯ ಡ್ರಾಯಿಂಗ್ ರೂಮ್‍ನಲ್ಲಿ ಈ ಘಟನೆ ನಡೆದಿದೆ. ಘಟನೆಯ ಸಮಯದಲ್ಲಿ ಕೇಜ್ರಿವಾಲ್ ನಿವಾಸದಲ್ಲಿ ಇದ್ದರು ಎಂದು ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮಾಜಿ ಮುಖ್ಯಸ್ಥೆ ಸ್ವಾತಿ ಆರೋಪಿಸಿದ್ದಾರೆ. ಎಫ್‍ಐಆರ್‍ನಲ್ಲಿ ಕೇಜ್ರಿವಾಲ್ ಹೆಸರನ್ನು ಉಲ್ಲೇಖಿಸಿಲ್ಲ.

    ಎಫ್‍ಐಆರ್ ನಲ್ಲಿ ಏನಿದೆ?: ಕೇಜ್ರಿವಾಲ್ ಅವರ ವೈಯಕ್ತಿಕ ಸಹಾಯಕ ಬಿಭವ್ ಕುಮಾರ್ (Bibhav Kumar) ನನಗೆ 7-8 ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ನಾನು ಎಷ್ಟೇ ಮನವಿ ಮಾಡಿಕೊಂಡರೂ ಪದೇ ಪದೇ ನನ್ನ ಹೊಟ್ಟೆ ಮತ್ತು ಸೊಂಟಕ್ಕೆ ಒದ್ದಿದ್ದಾನೆ. ಇದನ್ನೂ ಓದಿ: ರಾಜ್ಯಸಭೆ ಸಂಸದೆ ಸ್ವಾತಿ ಮಲಿವಾಲ್ ಮೇಲೆ ದೌರ್ಜನ್ಯ – ಕೇಜ್ರಿವಾಲ್‌ ಆಪ್ತನ ವಿರುದ್ಧ FIR

    ನಾನು ಡ್ರಾಯಿಂಗ್ ರೂಮಿನಲ್ಲಿ ಕುಳಿತಿದ್ದಾಗ ಬಿಭವ್ ಕುಮಾರ್ ಒಳಗೆ ಬಂದಿದ್ದಾನೆ. ಬಳಿಕ ಕಾರಣವಿಲ್ಲದೇ ನನ್ನ ವಿರುದ್ಧ ಕಿರುಚಾಡಲು ಹಾಗೂ ನಿಂದಿಸಲು ಪ್ರಾರಂಭಿಸಿದ್ದಾನೆ. ನೀವು ನಮ್ಮ ಮಾತನ್ನು ಯಾಕೆ ಕೇಳುವುದಿಲ್ಲ? ಕೆಟ್ಟ ಮಹಿಳೆ, ನಾವು ನಿಮಗೆ ಪಾಠ ಕಲಿಸುತ್ತೇವೆ ಎಂದೆಲ್ಲಾ ಬಾಯಿಗೆ ಬಂದಂತೆ ಬೈದಿದ್ದಾನೆ. ಇದಾದ ಬಳಿಕ ಭಯಾನಕ ದೌರ್ಜನ್ಯಗಳು ಪ್ರಾರಂಭವಾದವು.

    ಕುಮಾರ್ ಅವರು ನನಗೆ 7-8 ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ಆಗ ನಾನು ಸಂಪೂರ್ಣವಾಗಿ ಆಘಾತಕ್ಕೊಳಗಾದೆ. ಕೂಡಲೇ ಸಹಾಯಕ್ಕಾಗಿ ಅಂಗಲಾಚಿದ್ದೇನೆ. ಈ ವೇಳೆ ಅವರು ನನ್ನ ಬಟ್ಟೆಯನ್ನು ಹಿಡಿದು ಎಳೆದುಕೊಂಡು ಹೋಗಿ ನನ್ನ ತಲೆಯನ್ನು ಮೇಜಿಗೆ ಹೊಡೆದಿದ್ದಾನೆ. ಈ ವೇಳೆ ನಾನು ಕೆಳಗೆ ಬಿದ್ದೆ. ನಾನು ಸಹಾಯಕ್ಕಾಗಿ ನಿರಂತರವಾಗಿ ಕಿರುಚಾಡಿದರೂ ಯಾರೊಬ್ಬರು ನನ್ನ ರಕ್ಷಣೆಗೆ ಬರಲಿಲ್ಲ.

    ನಾನು ಪದೇ ಪದೇ ಕಿರುಚಾಡಿದ್ರೂ ಬಿಭವ್ ನನ್ನ ಮೇಲೆ ಹಲ್ಲೆ ಮಾಡುವುದನ್ನು ಬಿಡಲಿಲ್ಲ. ನನ್ನ ಎದೆ, ಹೊಟ್ಟೆ ಹಾಗೂ ಸೊಂಟಕ್ಕೆ ಪದೇ ಪದೇ ಒದ್ದಿದ್ದಾನೆ. ನನ್ನ ಬಿಟ್ಟುಬಿಡುವಂತೆ ಅಂಗಲಾಚಿದ್ರೂ ಆತ ಕರುಣೆ ತೋರಲಿಲ್ಲ, ಪಶ್ಚಾತ್ತಾಪಡಲಿಲ್ಲ, ಬದಲಾಗಿ ನನ್ನ ಮೇಲೆ ದಾಳಿ ಮುದುವರಿಸಿದ್ದಾನೆ ಎಂದು ಮಲಿವಾಲ್ ದೂರಿನಲ್ಲಿ ಆರೋಪಿಸಿದ್ದಾರೆ.

  • ರಾಜ್ಯಸಭೆ ಸಂಸದೆ ಸ್ವಾತಿ ಮಲಿವಾಲ್ ಮೇಲೆ ದೌರ್ಜನ್ಯ – ಕೇಜ್ರಿವಾಲ್‌ ಆಪ್ತನ ವಿರುದ್ಧ FIR

    ರಾಜ್ಯಸಭೆ ಸಂಸದೆ ಸ್ವಾತಿ ಮಲಿವಾಲ್ ಮೇಲೆ ದೌರ್ಜನ್ಯ – ಕೇಜ್ರಿವಾಲ್‌ ಆಪ್ತನ ವಿರುದ್ಧ FIR

    ನವದೆಹಲಿ: ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ (Swati Maliwal) ಮೇಲೆ ದೌರ್ಜನ್ಯ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಆಪ್ತ ಸಹಾಯಕ ಬಿಭವ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಪ್ರಕರಣ ಸಂಬಂಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸ್ವಾತಿ ಮಲಿವಾಲ್‌ ಹೇಳಿಕೆ ಬಳಿಕ ಐಪಿಸಿ 354, 323, 506,509 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

    ದೌರ್ಜನ್ಯ ನಡೆದ ಘಟನೆಯ ಕುರಿತು ಪೊಲೀಸರಿಗೆ ಹೇಳಿಕೆ ನೀಡಿದ್ದೇನೆ. ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಕಳೆದ ಕೆಲವು ದಿನಗಳು ನನಗೆ ತುಂಬಾ ಕಷ್ಟಕರವಾಗಿತ್ತು. ನನಗಾಗಿ ಪ್ರಾರ್ಥಿಸಿದವರಿಗೆ ನಾನು ಧನ್ಯವಾದ ಹೇಳುತ್ತೇನೆ. ಚಾರಿತ್ರ್ಯಹರಣ ಮಾಡಲು ಯತ್ನಿಸಿದವರು ಬೇರೆಯವರ ಸೂಚನೆ ಮೇರೆಗೆ ಮಾಡುತ್ತಿದ್ದಾರೆ. ಅವರನ್ನೂ ದೇವರು ನೆಮ್ಮದಿಯಿಂದ ಇಡಲಿ ಎಂದು ಬೇಡಿಕೊಂಡಿದ್ದೇನೆ. ದೇಶದಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿವೆ. ಸ್ವಾತಿ ಮಲಿವಾಲ್ ಮುಖ್ಯವಲ್ಲ, ದೇಶದ ಸಮಸ್ಯೆಗಳು ಮುಖ್ಯ. ಈ ಘಟನೆಯಲ್ಲಿ ರಾಜಕೀಯ ಮಾಡಬೇಡಿ ಎಂದು ಬಿಜೆಪಿಯವರಿಗೆ ವಿಶೇಷ ವಿನಂತಿ ಎಂದು ಮಲಿವಾಲ್‌ ಪೋಸ್ಟ್‌ ಹಾಕಿದ್ದಾರೆ.

  • ಅಮಿತ್ ಶಾ ಪ್ರಧಾನಿ ಮಾಡಲು ಮೋದಿ ಮತ ಕೇಳುತ್ತಿದ್ದಾರೆ: ಕೇಜ್ರಿವಾಲ್

    ಅಮಿತ್ ಶಾ ಪ್ರಧಾನಿ ಮಾಡಲು ಮೋದಿ ಮತ ಕೇಳುತ್ತಿದ್ದಾರೆ: ಕೇಜ್ರಿವಾಲ್

    ಲಕ್ನೋ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮಗಾಗಿ ಮತ ಕೇಳುತ್ತಿಲ್ಲ, ಅಮಿತ್ ಶಾ (Amit Shah) ಅವರನ್ನು ಪ್ರಧಾನಿ ಮಾಡಲು ಮತ ಕೇಳುತ್ತಿದ್ದಾರೆ. ಮೋದಿ ಅವರು ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಎರಡು ತಿಂಗಳೊಳಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪದಚ್ಯುತಿಗೊಳಿಸುತ್ತಾರೆ. ಇದರ ಜೊತೆಗೆ ಮೀಸಲಾತಿ ರದ್ದುಗೊಳಿಸಲಾಗುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ.

    ಲಕ್ನೋದಲ್ಲಿ ಎಸ್ಪಿ ಕಚೇರಿಯಲ್ಲಿ ಮಾಜಿ ಸಿಎಂ ಅಖಿಲೇಶ್ ಯಾದವ್ (Akhilesh Yadav) ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾದಾಗ ನಿವೃತ್ತಿ ವಯಸ್ಸನ್ನು 75 ವರ್ಷಕ್ಕೆ ನಿರ್ಣಯಿಸಿದರು. ಸುಮಿತ್ರಾ ಮಹಾಜನ್, ಮುರಳಿ ಮನೋಹರ ಜೋಶಿ, ಲಾಲ್ ಕೃಷ್ಣ ಅಡ್ವಾಣಿ ಇದಕ್ಕೆ ಉದಾಹರಣೆ. ಮುಂದಿನ ವರ್ಷ ಸೆ.17ಕ್ಕೆ ಮೋದಿಗೆ 75 ವರ್ಷ ತುಂಬಲಿದೆ ಎಂದರು. ಇದನ್ನೂ ಓದಿ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಕ್ಯಾನ್ಸರ್‌ನಿಂದ ನಿಧನ

    ಅಮಿತ್ ಶಾ ಅವರನ್ನು ಪ್ರಧಾನಿ ಮಾಡಲು ಅವರ ಹಾದಿಯಲ್ಲಿದ್ದ ಕಂಟಕಗಳನ್ನು ಮೋದಿ ಹಂತ ಹಂತವಾಗಿ ತೆಗೆದುಹಾಕಿದರು. ವಸುಂಧರಾ ರಾಜೆ, ಸುಮಿತ್ರಾ ಮಹಾಜನ್, ಶಿವರಾಜ್ ಸಿಂಗ್ ಚೌಹಾಣ್, ಡಾ.ರಮಣ್ ಸಿಂಗ್ ಅವರನ್ನು ಮೂಲೆಗುಂಪು ಮಾಡಲಾಯಿತು. ಈಗ ಯೋಗಿ ಮಾತ್ರ ಅಡ್ಡಿಯಾಗಿದ್ದಾರೆ. ಅವರನ್ನು ತೆಗೆದುಹಾಕಲಾಗುವುದು. ತಾವು ಮಾಡಿದ ನಿಯಮಗಳನ್ನು ಮೋದಿ ಅವರು ಉಲ್ಲಂಘಿಸುವುದಿಲ್ಲ. ಉಲ್ಲಂಘಿಸಿದರೆ ಜನರು ಅವರನ್ನು ಪ್ರಶ್ನಿಸಲಿದ್ದಾರೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರನ್ನು ತೆಗೆದುಹಾಕಲು ಅವರು ಈ ನಿಯಮಗಳನ್ನು ಮಾಡಿದ್ದರು ಎಂದು ಆರೋಪಿಸಿದರು. ಇದನ್ನೂ ಓದಿ: ಕೇಜ್ರಿವಾಲ್‌ಗೆ ʼವಿಶೇಷ ಸೌಲಭ್ಯʼ ನೀಡಲಾಗಿದೆ ಅಂತ ಜನ ಮಾತನಾಡ್ತಿದ್ದಾರೆ: ಜಾಮೀನು ಬಗ್ಗೆ ಅಮಿತ್‌ ಶಾ ಮಾತು

    ಬಿಜೆಪಿ 220 ಸ್ಥಾನಗಳಿಗಿಂತ ಹೆಚ್ಚು ಪಡೆಯುವುದಿಲ್ಲ. ರಾಜಸ್ಥಾನ, ಹರಿಯಾಣ, ಜಾರ್ಖಂಡ್, ದೆಹಲಿ, ಪಂಜಾಬ್ ಮತ್ತು ಬಂಗಾಳದಲ್ಲಿ ಬಿಜೆಪಿಯ ಸ್ಥಾನಗಳು ಕಡಿಮೆಯಾಗುತ್ತಿವೆ. ಬಿಜೆಪಿ ಯಾವಾಗಲೂ ಮೀಸಲಾತಿ ವಿರುದ್ಧವಾಗಿದೆ. ಅವರು ಆಡಳಿತಕ್ಕೆ ಬಂದಾಗಿನಿAದ ಪರಿಸ್ಥಿತಿ ಹದಗೆಟ್ಟಿದೆ. ನಮ್ಮ ಇಂಡಿಯಾ ಒಕ್ಕೂಟದ ಸರ್ಕಾರ ಬಂದ ಬಳಿಕ ಅದನ್ನು ಸರಿಪಡಿಸಲಾಗುವುದು. ಜೂನ್ 4 ರಂದು ಭಾರತ ಸಮ್ಮಿಶ್ರ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಗೋಧ್ರಾ ಗಲಭೆ ನಂತರ ಮುಸ್ಲಿಮರಲ್ಲಿ ನನ್ನ ವ್ಯಕ್ತಿತ್ವಕ್ಕೆ ಕಳಂಕ ತರಲಾಗಿದೆ: ಮೋದಿ ಬೇಸರ

    ಇದೇ ವೇಳೆ ಮಾತನಾಡಿದ ಮಾಜಿ ಸಿಎಂ ಅಖಿಲೇಶ್ ಯಾದವ್, ಬಿಜೆಪಿ 400 ಗಡಿ ದಾಟುವ ಘೋಷಣೆ ಮಾಡಿದೆ. 543 ರಲ್ಲಿ 400ರ ಗಡಿ ದಾಟಿದರೆ ಉಳಿಯುವುದೇ 143 ಸ್ಥಾನಗಳು, ಬಿಜೆಪಿ ಅಷ್ಟೇ ಸ್ಥಾನಗಳನ್ನು ಪಡೆಯಲಿದೆ. ಭಾರತದ 140 ಕೋಟಿ ಜನರು ಬಿಜೆಪಿಯನ್ನು 140 ಸ್ಥಾನಗಳಿಗೆ ಸೀಮಿತ ಮಾಡಲಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್‌: ಜಾರ್ಖಂಡ್‌ನ ಕಾಂಗ್ರೆಸ್‌ ಸಚಿವ ಅಲಂಗೀರ್ ಆಲಂ ಬಂಧನ!

  • ಕೇಜ್ರಿವಾಲ್‌ಗೆ ʼವಿಶೇಷ ಸೌಲಭ್ಯʼ ನೀಡಲಾಗಿದೆ ಅಂತ ಜನ ಮಾತನಾಡ್ತಿದ್ದಾರೆ: ಜಾಮೀನು ಬಗ್ಗೆ ಅಮಿತ್‌ ಶಾ ಮಾತು

    ಕೇಜ್ರಿವಾಲ್‌ಗೆ ʼವಿಶೇಷ ಸೌಲಭ್ಯʼ ನೀಡಲಾಗಿದೆ ಅಂತ ಜನ ಮಾತನಾಡ್ತಿದ್ದಾರೆ: ಜಾಮೀನು ಬಗ್ಗೆ ಅಮಿತ್‌ ಶಾ ಮಾತು

    ನವದೆಹಲಿ: ದೆಹಲಿ ಮದ್ಯ ಹಗರಣ (Delhi Liquor Scam) ಪ್ರಕರಣದಲ್ಲಿ ಸಿಎಂ ಕೇಜ್ರಿವಾಲ್‌ಗೆ (Arvind Kejriwal) ಸುಪ್ರೀಂ ಕೋರ್ಟ್‌ (Supreme Court) ಮಧ್ಯಂತರ ಜಾಮೀನು (Interim Bail) ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಗೃಹ ಸಚಿವ ಅಮಿತ್‌ ಶಾ (Amit Shah) ಬಹಿರಂಗವಾಗಿಯೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಸಿಎಂ ಕೇಜ್ರವಾಲ್ ಅವರಿಗೆ ‘ವಿಶೇಷ ಸೌಲಭ್ಯ’ ನೀಡಲಾಗಿದೆ ಎಂದು ಜನ ಮಾತನಾಡುತ್ತಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

    ಸುಪ್ರೀಂ ಕೋರ್ಟ್‌ನ ತೀರ್ಪಿನ ಬಗ್ಗೆ ನಾನು ಯಾವುದೇ ಟಿಪ್ಪಣಿ ಹೇಳುವುದಿಲ್ಲ. ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಿದ ಸುಪ್ರೀಂ ತೀರ್ಪು ಎಂದಿನ ತೀರ್ಪಿನಂತಿರಲಿಲ್ಲ. ಅದು ಕೇಜ್ರಿವಾಲ್ ಅವರಿಗೆ ನೀಡಿದ ವಿಶೇಷ ಸೌಲಭ್ಯದಂತಿದೆ ಎಂದು ಜನ ಮಾತನಾಡುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    INDIA ಒಕ್ಕೂಟಕ್ಕೆ ಅಧಿಕಾರ ಸಿಕ್ಕಿದರೆ ನಾನು ಮತ್ತೆ ಜೈಲಿಗೆ ಹೋಗುವುದಿಲ್ಲ ಎಂದು ಕೇಜ್ರಿವಾಲ್‌ ಹೇಳಿದ್ದಾರೆ. ಇದು ಹೇಗೆ ಅಂದರೆ ಚುನಾವಣೆಯಲ್ಲಿ ಗೆದ್ದರೆ ಅವರು ತಪ್ಪು ಮಾಡಿದ್ದರೂ ಸುಪ್ರೀಂ ಅವರನ್ನು ಜೈಲಿಗೆ ಕಳುಹಿಸುವುದಿಲ್ಲ ಎಂಬುದನ್ನು ಹೇಳಲು ದೆಹಲಿ ಸಿಎಂ ಹೊರಟಿದ್ದಾರೆ. ಇದು ಸ್ಪಷ್ಟವಾದ ನ್ಯಾಯಾಂಗ ನಿಂದನೆ. ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು ಕೇಜ್ರಿವಾಲ್‌ ಹೇಗೆ ಜಾಮೀನನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ಗಮನಿಸಬೇಕು ಎಂದು ಹೇಳಿದರು.

    ತಿಹಾರ್‌ ಜೈಲಿನಲ್ಲಿ ಕ್ಯಾಮೆರಾ ಅಳವಡಿಸಲಾಗಿದ್ದು ಅಲ್ಲಿನ ಎಲ್ಲಾ ದೃಶ್ಯಗಳು ಪ್ರಧಾನಿ ಕಚೇರಿಗೆ ಹೋಗುತ್ತಿತ್ತು ಎಂಬ ಕೇಜ್ರಿವಾಲ್‌ ಆರೋಪವನ್ನು ನಿರಾಕರಿಸಿದ ಅವರು ತಿಹಾರ್ ಜೈಲಿನ ಆಡಳಿತವು ದೆಹಲಿ ಸರ್ಕಾರದ ಅಡಿಯಲ್ಲಿದೆ ಮತ್ತು ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

    ಕೇಜ್ರಿವಾಲ್‌ ಅವರನ್ನು ಗಂಭೀರವಾಗಿ ಪರಿಗಣಿಸಬೇಡಿ. ಅವರ ಪಕ್ಷವು ಕೇವಲ 22 ಸ್ಥಾನಗಳಲ್ಲಿ ಹೋರಾಡುತ್ತಿದೆ ಮತ್ತು ಅವರು ಇಡೀ ದೇಶಕ್ಕೆ ವಿದ್ಯುತ್ ಬಿಲ್‌ಗಳನ್ನು ಮನ್ನಾ ಮಾಡಲಾಗುವುದು ಎಂದು ಅವರು ಭರವಸೆ ನೀಡುತ್ತಿದ್ದಾರೆ. ಕೇವಲ 22 ಸ್ಥಾನಗಳಲ್ಲಿ ಸ್ಪರ್ಧೆ ಮಾಡುವ ಆಪ್‌ ಸರ್ಕಾರ ಹೇಗೆ ರಚನೆ ಮಾಡುತ್ತದೆ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದರು.

  • ಹೇಮಂತ್‌ ಸೊರೆನ್‌ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂ

    – ಕೇಜ್ರಿವಾಲ್‌ ರೀತಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿ

    ನವದೆಹಲಿ: ಮಧ್ಯಂತರ ಜಾಮೀನು (Interim Bail) ನೀಡುವಂತೆ ಕೋರಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾದ ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೊರೇನ್‌ (Hemant Soren) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿತು.

    ಅರವಿಂದ್‌ ಕೇಜ್ರಿವಾಲ್‌ಗೆ (Arvind Kejriwal) ಚುನಾವಣಾ ಪ್ರಚಾರಕ್ಕೆ ಹೇಗೆ ಮಧ್ಯಂತರ ಜಾಮೀನು ನೀಡಲಾಗಿದೆಯೋ ಅದೇ ರೀತಿಯಾಗಿ ನನಗೂ ಜಾಮೀನು (Bail) ನೀಡಬೇಕೆಂದು ಕೋರಿ ಹೇಮಂತ್‌ ಸೊರೇನ್‌ ಅರ್ಜಿ ಸಲ್ಲಿಸಿದ್ದರು.

    ಅರವಿಂದ್‌ ಕೇಜ್ರಿವಾಲ್‌ಗೆ ಜಾಮೀನು ನೀಡಿದ್ದ ನ್ಯಾ. ಸಂಜೀವ್‌ ಖನ್ನಾ ಮತ್ತು ದೀಪಾಂಕರ್‌ ದತ್ತಾ ಅವರಿದ್ದ ದ್ವಿಸದಸ್ಯ ಪೀಠದ ಬಳಿ ತನ್ನ ಕಕ್ಷಿದಾರರಿಗೆ ಜಾಮೀನು ನೀಡಬೇಕು. ಅವರಿಗೂ ಚುನಾವಣಾ ಪ್ರಚಾರ ನಡೆಸಲು ಅನುಮತಿ ನೀಡಬೇಕು. ಹೀಗಾಗಿ ಮೇ 17 ರಂದು ತುರ್ತು ಅರ್ಜಿ ವಿಚಾರಣೆ ನಡೆಸಿ ಎಂದು ವಕೀಲ ಕಪಿಲ್‌ ಸಿಬಲ್‌ (Kapil Sibal) ಮನವಿ ಮಾಡಿದರು.

    ಈ ವೇಳೆ ಕೋರ್ಟ್‌ ಈ ಅರ್ಜಿಯ ವಿಚಾರಣೆಯನ್ನು ಮೇ 20 ರಂದು ವಿಚಾರಣೆ ನಡೆಸುವುದಾಗಿ ತಿಳಿಸಿತು. ಯಾಕೆಂದರೆ ಈ ಅರ್ಜಿಯ ವಿಚಾರಣೆಗೆ ಇಡಿ ಪ್ರತಿಕ್ರಿಯೆ ನೀಡಲು 7 ದಿನ ಸಮಯ ನೀಡಬೇಕು ಎಂದು ಪೀಠ ಹೇಳಿತು. ಇದಕ್ಕೆ ಸಿಬಲ್‌, ಚುನಾವಣೆ ಮೇ 20 ರಂದು ಮುಕ್ತಾಯವಾಗುತ್ತದೆ. ಇಲ್ಲಿಯವರೆಗೆ ನಾನು ಈ ರೀತಿಯ ಮನವಿ ಸಲ್ಲಿಸಿಲ್ಲ. ಒಂದು ವೇಳೆ ಮೇ 17 ರಂದು ಅರ್ಜಿ ವಿಚಾರಣೆ ನಡೆಸದೇ ಇದ್ದರೆ ನಮಗೆ ದೊಡ್ಡ ಅನ್ಯಾಯವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಸಂತ್ರಸ್ತೆಯ ಅಪಹರಣ ಕೇಸ್- ಹೆಚ್‌ಡಿ ರೇವಣ್ಣಗೆ ಜಾಮೀನು ಮಂಜೂರು

     
    ಮೇ 20 ರಂದು ಚುನಾವಣೆ ನಡೆಯಲಿರುವ ಕಾರಣ 48 ಗಂಟೆಯ ಮೊದಲು ಬಹಿರಂಗ ಪ್ರಚಾರ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡಿದರೆ ನಿಮ್ಮ ಕಕ್ಷಿದಾರರಿಗೆ ಹೇಗೆ ಲಾಭವಾಗುತ್ತದೆ ಎಂದು ಕೋರ್ಟ್‌ ಪ್ರಶ್ನೆ ಮಾಡಿತು.

    ಈ ವೇಳೆ ಚುನಾವಣೆಯಲ್ಲಿ ಭಾಗವಹಿಸಲು ಈ ಅರ್ಜಿ ಸಲ್ಲಿಸಿದ್ದೇವೆ. ಮೇ 20ಕ್ಕೆ ಚುನಾವಣೆ ನಡೆಯಲಿದೆ. ಒಂದು ವೇಳೆ ಅನುಮತಿ ಸಿಗದೇ ಇದ್ದರೆ ಅರ್ಜಿಯನ್ನು ವಜಾಗೊಳಿಸಿ ಎಂದು ಮನವಿ ಮಾಡಿದರು.

    ಈ ವೇಳೆ ಸೊರೆನ್‌ ಮೇಲೆ 8.8 ಎಕ್ರೆ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ಇಡಿ ಆರೋಪಿಸಿದೆ ಎಂದು ನ್ಯಾ. ಖನ್ನಾ ಹೇಳಿದ್ದಕ್ಕೆ, ಸಿಬಲ್‌ ಸೊರೆನ್‌ ವಶಪಡಿಸಿಕೊಂಡಿದ್ದಾರೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಇಡಿ ಆರೋಪಿಸಿದಂತೆ ಅಕ್ರಮ ಹಣ ವರ್ಗಾವಣೆ ಮಾಡಿಲ್ಲ ಎಂದು ವಾದಿಸಿದರು. ಅಂತಿಮವಾಗಿ ಕೋರ್ಟ್‌ ಪಿಎಂಎಲ್‌ಎ ಅಡಿಯಲ್ಲಿ ಸೊರೆನ್‌ ಬಂಧನ ಮಾಡಿದ್ದು ಸರಿ ಎಂಬುದರ ಬಗ್ಗೆ ಮೇ 17 ರಂದು ವಿಚಾರಣೆ ನಡೆಸುವುದಾಗಿ ಹೇಳಿತು. ಇದನ್ನೂ ಓದಿ: ಇಂಡಿಯಾ ಒಕ್ಕೂಟ ಗೆದ್ದರೇ ಮರುದಿನವೇ ಜೈಲಿನಿಂದ ಹೊರಬರುವೆ: ಕೇಜ್ರಿವಾಲ್

     

  • ಇಂಡಿಯಾ ಒಕ್ಕೂಟ ಗೆದ್ದರೇ ಮರುದಿನವೇ ಜೈಲಿನಿಂದ ಹೊರಬರುವೆ: ಕೇಜ್ರಿವಾಲ್

    ಇಂಡಿಯಾ ಒಕ್ಕೂಟ ಗೆದ್ದರೇ ಮರುದಿನವೇ ಜೈಲಿನಿಂದ ಹೊರಬರುವೆ: ಕೇಜ್ರಿವಾಲ್

    ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಇಂಡಿಯಾ (INDIA) ಒಕ್ಕೂಟ ಗೆಲುವು ಸಾಧಿಸಿದರೆ ಫಲಿತಾಂಶದ ಮರುದಿನವೇ ನಾನು ಜೈಲಿನಿಂದ ಹೊರಬರುತ್ತೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ.

    ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದರು. ತಿಹಾರ್‌ನಲ್ಲಿರುವ ನನ್ನ ಸೆಲ್‌ನಲ್ಲಿ ಎರಡು ಸಿಸಿಟಿವಿ ಕ್ಯಾಮೆರಾಗಳಿದ್ದವು. ಆ ವಿಡಿಯೋಗಳನ್ನು 13 ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಿದ್ದರು. ಸಿಸಿಟಿವಿ ವಿಡಿಯೋಗಳನ್ನು ಪ್ರಧಾನಮಂತ್ರಿ ಕಚೇರಿಗೆ ನೀಡಲಾಗಿದೆ. ಮೋದಿ ಅವರು ನನ್ನ ಮೇಲೆ ನಿಗಾ ಇಡುತ್ತಿದ್ದಾರೆ. ಮೋದಿಯವರಿಗೆ ನನ್ನ ಮೇಲೆ ಯಾವ ದ್ವೇಷವಿದೆ ಗೊತ್ತಿಲ್ಲ ಎಂದು ಕೇಜ್ರಿವಾಲ್ ದೂರಿದರು. ಇದನ್ನೂ ಓದಿ:  ಭದ್ರತಾ ಪಡೆಗಳಿಂದ ಎನ್‍ಕೌಂಟರ್ – ಇಬ್ಬರು ಮಹಿಳೆಯರು ಸೇರಿ ಮೂವರು ನಕ್ಸಲರ ಹತ್ಯೆ

    ಪ್ರಧಾನಿ ಮೋದಿ (Narendra Modi) ಕೇಜ್ರಿವಾಲ್ ಖಿನ್ನತೆಗೆ ಒಳಗಾಗಿದ್ದಾರಾ ಇಲ್ಲವಾ ಎಂದು ನೋಡಲು ಬಯಸಿದ್ದರು. ಕೇಜ್ರಿವಾಲ್ ಖಿನ್ನತೆಗೆ ಒಳಗಾಗಿಲ್ಲ. ನನಗೆ ಭಗವಾನ್ ಹನುಮಂತನ ಆಶೀರ್ವಾದವಿದೆ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಕೇಜ್ರಿವಾಲ್ ಈ ರೀತಿ ಒಡೆದು ಹೋಗುತ್ತಾನೆ ಎಂದು ಅವರು ಭಾವಿಸುತ್ತಾರೆ. ಆದರೆ ಅದು ಆಗುವುದಿಲ್ಲ ಎಂದರು. ಇದನ್ನೂ ಓದಿ: ಸಂತ್ರಸ್ತೆಯ ಅಪಹರಣ ಕೇಸ್- ಹೆಚ್‌ಡಿ ರೇವಣ್ಣಗೆ ಜಾಮೀನು ಮಂಜೂರು

    ಜೂನ್ 2 ರಂದು ತಿಹಾರ್ ಜೈಲಿಗೆ ಹೋಗುತ್ತೇನೆ. ನಾನು ಜೂನ್ 4 ರಂದು ಜೈಲಿನೊಳಗೆ ಚುನಾವಣಾ ಫಲಿತಾಂಶಗಳನ್ನು ನೋಡುತ್ತೇನೆ. ನಾನು ಕಷ್ಟಪಟ್ಟು ಕೆಲಸ ಮಾಡಿದರೆ, ಇಂಡಿಯಾ ಬ್ಲಾಕ್ ಗೆದ್ದರೆ ನಾನು ಮತ್ತೆ ಜೂನ್ 5 ರಂದು ಹೊರಬರುತ್ತೇನೆ. ಆದರೆ ನಾವು ಈಗ ಕಷ್ಟಪಟ್ಟು ಕೆಲಸ ಮಾಡದಿದ್ದರೆ ನಾವು ಯಾವಾಗ ಮತ್ತೆ ಭೇಟಿಯಾಗಬಹುದು ಎಂದು ನನಗೆ ತಿಳಿದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ: ಬಿ.ವೈ.ವಿಜಯೇಂದ್ರ

    ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದಿರುವ ಅರವಿಂದ್ ಕೇಜ್ರಿವಾಲ್ ಚುನಾವಣಾ ಪ್ರಚಾರಗಳನ್ನು ನಡೆಸುತ್ತಿದ್ದಾರೆ. ಜೂನ್ 1 ರಂದು ಅವರ ಜಾಮೀನು ಅವಧಿ ಅಂತ್ಯವಾಗಲಿದ್ದು, ಜೂನ್ 2 ರಂದು ಜೈಲಿಗೆ ಮರಳಬೇಕಿದೆ. ಇದನ್ನೂ ಓದಿ: ರಾಹುಲ್‌ ಜೊತೆ ಸಂವಾದಕ್ಕೆ BJYM ಉಪಾಧ್ಯಕ್ಷ ಅಭಿನವ್‌ ಪ್ರಕಾಶ್‌ ಕಳುಹಿಸುತ್ತೇವೆ : ತೇಜಸ್ವಿ ಸೂರ್ಯ ಕೌಂಟರ್‌

  • ಸಿಎಂ ನಿವಾಸದಲ್ಲೇ ಕೇಜ್ರಿವಾಲ್‌ ಆಪ್ತನಿಂದ ಹಲ್ಲೆ : ಸ್ವಾತಿ ಮಲಿವಾಲ್‌ ಆರೋಪ

    ಸಿಎಂ ನಿವಾಸದಲ್ಲೇ ಕೇಜ್ರಿವಾಲ್‌ ಆಪ್ತನಿಂದ ಹಲ್ಲೆ : ಸ್ವಾತಿ ಮಲಿವಾಲ್‌ ಆರೋಪ

    ನವದೆಹಲಿ:ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ನಿರ್ದೇಶನದ ಮೇರೆಗೆ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (AAP) ನಾಯಕಿ ಸ್ವಾತಿ ಮಲಿವಾಲ್ (Swati Maliwal) ಸೋಮವಾರ ಆರೋಪಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

    ದೆಹಲಿ (Delhi) ಸಿಎಂ ನಿವಾಸದಿಂದ ಪೊಲೀಸ್‌ ಕಂಟ್ರೋಲ್‌ ರೂಂಗೆ (PCR) ಮೊಬೈಲಿನಿಂದ ಎರಡು ಕರೆಗಳು ಬಂದಿದೆ. ಬೆಳಗ್ಗೆ 9:34 ರ ಸುಮಾರಿಗೆ ಮೊದಲ ಕರೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಮೊಬೈಲ್‌ ಸಂಖ್ಯೆ ಸ್ವಾತಿ ಮಲಿವಾಲ್‌ ಅವರಿಗೆ ಸಂಬಂಧಿಸಿದ ಸಂಖ್ಯೆಯಾಗಿದೆ ಎಂದು ವರದಿ ತಿಳಿಸಿದೆ.

    ಹಲ್ಲೆಯ ಬಗ್ಗೆ ಸಿಎಂ ನಿವಾಸ ಅಥವಾ ಆಪ್ ಆಗಲಿ ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ. ಪೊಲೀಸ್‌ ಠಾಣೆಯಲ್ಲಿರುವ ಪುಸ್ತಕದಲ್ಲಿ ದೂರು ದಾಖಲಾಗಿದೆ. ಈ ವಿಚಾರದ ಬಗ್ಗೆ ಸ್ವಾತಿ ಮಲಿವಾಲ್‌ ಇಲ್ಲಿಯವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

    ಸ್ವಾತಿ ಮಲಿವಾಲ್ ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆಯಾಗಿದ್ದು ರಾಜ್ಯಸಭಾ ಸದಸ್ಯರಾಗಿದ್ದಾರೆ. ಇದನ್ನೂ ಓದಿ: 1998: ಮತ್ತೆ ದಿಲ್ಲಿ ಗದ್ದುಗೆಯೇರಿದ ವಾಜಪೇಯಿ – ಕರ್ನಾಟಕದಲ್ಲಿ ಬಿಜೆಪಿ ಎರಡಂಕಿಗೆ ಜಿಗಿತ

    ಸ್ವಾತಿ ಮಲಿವಾಲ್ ಮಹಿಳಾ ಆಯೋಗದ ಅಧ್ಯಕ್ಷರಾಗಿದ್ದಾಗ 223 ಸಿಬ್ಬಂದಿಯನ್ನು ನೇಮಿಸಿದ್ದರು. 40 ಹುದ್ದೆಗಳು ಮಂಜೂರಾಗಿದ್ದರೂ 223 ಮಂದಿಯನ್ನು ಅನುಮತಿ ಇಲ್ಲದೆ ಅಕ್ರಮವಾಗಿ ನೇಮಕಾತಿ ಮಾಡಿದ್ದಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ 223 ಮಂದಿ ಉದ್ಯೋಗಿಗಳನ್ನು ವಜಾಗೊಳಿಸಿದ್ದರು.

  • ಕೇಜ್ರಿವಾಲ್‌ಗೆ ಹುಚ್ಚು, ಬಿಜೆಪಿಯಲ್ಲಿ ವಯಸ್ಸಿನ ಮಿತಿ ಬಗ್ಗೆ ನಿರ್ಧಾರ ಕೈಗೊಂಡಿಲ್ಲ: ಆರ್‌.ಅಶೋಕ್

    ಕೇಜ್ರಿವಾಲ್‌ಗೆ ಹುಚ್ಚು, ಬಿಜೆಪಿಯಲ್ಲಿ ವಯಸ್ಸಿನ ಮಿತಿ ಬಗ್ಗೆ ನಿರ್ಧಾರ ಕೈಗೊಂಡಿಲ್ಲ: ಆರ್‌.ಅಶೋಕ್

    – ಪ್ರಜ್ವಲ್‌ ಪ್ರಕರಣದಲ್ಲಿ ಜೆಡಿಎಸ್‌ ಹೋರಾಟಕ್ಕೆ ಬಿಜೆಪಿ ಬೆಂಬಲವಿದೆ ಎಂದ ಪ್ರತಿಪಕ್ಷ ನಾಯಕ

    ಬೆಂಗಳೂರು: ಅರವಿಂದ ಕೇಜ್ರಿವಾಲ್‌ (Arvind Kejriwal) ಬಹಳ ದಿನ ಜೈಲಿನಲ್ಲಿ ಇದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ. ವಯಸ್ಸಿನ ಆಧಾರದ ಮೇಲೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್‌ (R Ashoka) ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ (PM Candidate) ಯಾರೆಂದು ಅವರಿಗೇ ಗೊತ್ತಿಲ್ಲ. ಈಗಾಗಲೇ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ. 75 ವರ್ಷ ಕಳೆದವರಿಗೆ ಟಿಕೆಟ್‌ ನೀಡಲಾಗುತ್ತಿದೆ. ಟಿಕೆಟ್‌ ನೀಡುವುದಿಲ್ಲ ಎಂಬ ನಿರ್ಧಾರ ಪಕ್ಷದಲ್ಲಿ ಆಗಿಲ್ಲ. ಇದನ್ನು ಕಾಂಗ್ರೆಸ್‌ನವರೇ (Congress) ಸೃಷ್ಟಿ ಮಾಡಿಕೊಂಡಿದ್ದಾರೆ. ಕೇಜ್ರಿವಾಲ್‌ ಅವರು ಮರಳಿ ಜೈಲಿಗೆ ಹೋಗಬೇಕಿದೆ, ಅವರು ಮತ್ತೆ ಬಿಡುಗಡೆಯಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

    ಕೇಜ್ರಿವಾಲ್‌ ತಪ್ಪು ಮಾಡಿಲ್ಲವಾದರೆ ನ್ಯಾಯಾಲಯ (Supreme Court) ಕೂಡಲೇ ಜಾಮೀನು ನೀಡುತ್ತದೆ. ಲಾಲೂ ಪ್ರಸಾದ್‌ ಕೂಡ ಜೈಲಿಗೆ ಹೋಗಿದ್ದಾರೆ. ಜಾಮೀನು ಸಿಕ್ಕಿಲ್ಲ ಎಂದಾದರೆ ಅದಕ್ಕೆ ಸೂಕ್ತವಾದ ಪುರಾವೆ ಇದೆ ಎಂದರ್ಥ. ಅನೇಕ ವಿರೋಧ ಪಕ್ಷಗಳಿದ್ದರೂ ತಪ್ಪು ಮಾಡಿದವರು ಮಾತ್ರ ಜೈಲಿಗೆ ಹೋಗಿದ್ದಾರೆ ಎಂದು ಕುಟುಕಿದರು. ಇದನ್ನೂ ಓದಿ: ಪೆನ್‍ಡ್ರೈವ್ ಕೇಸ್: ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ಮುಗಿಸುವ ಪ್ರಯತ್ನ ಮಾಡಿದ್ದಾರೆ – ಎ.ಮಂಜು

    ವಿಧಾನಪರಿಷತ್‌ ಚುನಾವಣೆಯಲ್ಲಿ ಹೊಂದಾಣಿಕೆ ದೃಷ್ಟಿಯಿಂದ ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಕೇಂದ್ರದ ನಾಯಕರು ನಿರ್ಧಾರ ಮಾಡಿದ್ದಾರೆ. ಇದರಲ್ಲಿ ರಾಜ್ಯದ ನಾಯಕರ ಪಾತ್ರವಿಲ್ಲ ಎಂದು ಹೇಳಿದರು.

    ಇದೇ ವೇಳೆ ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಜೆಡಿಎಸ್‌ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡುತ್ತದೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಸಹ ಹೇಳಿದರು. ಇದನ್ನೂ ಓದಿ: ರಸ್ತೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ ಎ.ಮಂಜುಗೆ ಕೊಟ್ಟಿದ್ದೆ; ಬಾಂಬ್ ಸಿಡಿಸಿದ ಆರೋಪಿ ನವೀನ್‌ಗೌಡ!

    ಎಸ್.ಎಂ.ಕೃಷ್ಣ ಆರೋಗ್ಯ ವಿಚಾರಿಸಿದ ಆರ್.ಅಶೋಕ್‌
    ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ವಿಚಾರಿಸಿದ್ದಾರೆ.

    ಈ ವೇಳೆ ಮಾತನಾಡಿದ ಅವರು, ಎಸ್‌.ಎಂ.ಕೃಷ್ಣ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರಿಗೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ನಮ್ಮ ನಾಡಿನ ಮುತ್ಸದ್ಧಿಯಾಗಿದ್ದು, ದೇವರ ಆಶೀರ್ವಾದ ಇದೆ. ನಾವು ಕೂಡ ಅವರ ಆರೋಗ್ಯಕ್ಕೆ ಪ್ರಾರ್ಥಿಸುತ್ತೇವೆ ಎಂದು ತಿಳಿಸಿದ್ದಾರೆ.

  • ‘ಲೋಕ’ ಚುನಾವಣೆಯಲ್ಲಿ ಎಎಪಿ ಗೆದ್ದರೆ ವಿದ್ಯುತ್‌, ಆರೋಗ್ಯ ಸೇವೆ ಉಚಿತ – 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್‌

    ‘ಲೋಕ’ ಚುನಾವಣೆಯಲ್ಲಿ ಎಎಪಿ ಗೆದ್ದರೆ ವಿದ್ಯುತ್‌, ಆರೋಗ್ಯ ಸೇವೆ ಉಚಿತ – 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್‌

    ನವದೆಹಲಿ: 2024 ರ ಲೋಕಸಭಾ (Lok Sabha Elections 2024) ಚುನಾವಣೆಯಲ್ಲಿ ಎಎಪಿ (AAP) ಗೆದ್ದರೆ 10 ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಭರವಸೆ ನೀಡಿದ್ದಾರೆ.

    ಉಚಿತ ವಿದ್ಯುತ್‌ (Free Electricity), ಉಚಿತ ಆರೋಗ್ಯ ಸೇವೆ ಸೇರಿದಂತೆ 10 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ಬಿಜೆಪಿ ಯಾವಾಗಲೂ ತನ್ನ ಭರವಸೆಗಳಲ್ಲಿ ವಿಫಲವಾಗಿದೆ. ನನ್ನ ಭರವಸೆಗಳು ದಾಖಲೆಯನ್ನು ಸಾಬೀತುಪಡಿಸಿವೆ. ‘ಕೇಜ್ರಿವಾಲ್ ಕಿ ಗ್ಯಾರಂಟಿ’ ಅಥವಾ ‘ಮೋದಿ ಗ್ಯಾರಂಟಿ’ ಯಾವುದು ಬೇಕು ಎಂದು ಜನತೆಗೆ ಕೇಜ್ರಿವಾಲ್‌ ಕೇಳಿದ್ದಾರೆ. ಇದನ್ನೂ ಓದಿ: ಮೋದಿಗೆ 75 ವರ್ಷವಾದ್ರೂ ಪ್ರಧಾನಿ ಆಗಿಯೇ ಆಗ್ತಾರೆ- ಕೇಜ್ರಿವಾಲ್‌ಗೆ ಅಮಿತ್ ಶಾ ಟಕ್ಕರ್

    ಉಚಿತ ವಿದ್ಯುತ್‌ ನೀಡುವುದು ಕೇಜ್ರಿವಾಲ್‌ ಅವರ ಚುನಾವಣೆಯ ಪ್ರಮುಖ ಭರವಸೆಯಾಗಿದೆ. ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಗಳಿಗೆ ಈ ಸೌಲಭ್ಯ ಒದಗಿಸಲಾಗುವುದು. ದೆಹಲಿಯ ನಿರಂತರ ವಿದ್ಯುತ್ ಪೂರೈಕೆಯ ಮಾದರಿಯನ್ನು ರಾಷ್ಟ್ರವ್ಯಾಪಿ ಪುನರಾವರ್ತಿಸಬೇಕಿದೆ ಎಂದು ತಿಳಿಸಿದ್ದಾರೆ.

    10 ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ, ನಾವು ದೇಶದಲ್ಲಿ 24 ಗಂಟೆಗಳ ವಿದ್ಯುತ್ ಅನ್ನು ಒದಗಿಸುತ್ತೇವೆ. ದೇಶದಲ್ಲಿ 3 ಲಕ್ಷ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವಿದ್ದರೂ ಬಳಕೆ 2 ಲಕ್ಷ ಮೆಗಾವ್ಯಾಟ್ ಮಾತ್ರ. ನಮ್ಮ ದೇಶವು ಬೇಡಿಕೆಗಿಂತ ಹೆಚ್ಚು ವಿದ್ಯುತ್ ಉತ್ಪಾದಿಸಬಲ್ಲದು. ನಾವು ಅದನ್ನು ದೆಹಲಿ ಮತ್ತು ಪಂಜಾಬ್‌ನಲ್ಲಿ ಮಾಡಿದ್ದೇವೆ. ನಾವು ಅದನ್ನು ದೇಶದಲ್ಲೂ ಮಾಡುತ್ತೇವೆ. ಎಲ್ಲಾ ಬಡವರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ. ಇದಕ್ಕೆ 1.25 ಲಕ್ಷ ಕೋಟಿ ವೆಚ್ಚವಾಗಲಿದೆ. ನಾವು ಅದನ್ನು ವ್ಯವಸ್ಥೆಗೊಳಿಸಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೂ ಮೋದಿ ಪ್ರಧಾನಿಯಾಗಲ್ಲ: ಅರವಿಂದ್ ಕೇಜ್ರಿವಾಲ್ ಭವಿಷ್ಯ

    ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಬೇಕು. ಇದಕ್ಕಾಗಿ 5 ಲಕ್ಷ ಕೋಟಿ ರೂ. ಬೇಕಾಗುತ್ತದೆ. ಒಟ್ಟು ವೆಚ್ಚವನ್ನು ಸರಿದೂಗಿಸಲು ರಾಜ್ಯ ಸರ್ಕಾರಗಳು ಮತ್ತು ಕೇಂದ್ರವು ತಲಾ 2.5 ಲಕ್ಷ ಕೋಟಿ ರೂ. ನೀಡಬೇಕು ಎಂದು ಪ್ರತಿಪಾದಿಸಿದ್ದಾರೆ.

    ಇಂದು ನಮ್ಮ ಸರ್ಕಾರಿ ಶಾಲೆಗಳ ಸ್ಥಿತಿ ಚೆನ್ನಾಗಿಲ್ಲ. ಎಲ್ಲರಿಗೂ ಒಳ್ಳೆಯ ಮತ್ತು ಅತ್ಯುತ್ತಮವಾದ ಉಚಿತ ಶಿಕ್ಷಣದ ವ್ಯವಸ್ಥೆ ಮಾಡುತ್ತೇವೆ. ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಸಿಗುವಂತೆ ದೆಹಲಿ ಮತ್ತು ಪಂಜಾಬ್‌ನಲ್ಲಿ ನಾವು ಮಾಡಿದ್ದೇವೆ. ಇದಕ್ಕಾಗಿ ರಾಜ್ಯ ಸರ್ಕಾರ 2.5 ಲಕ್ಷ ಕೋಟಿ ಹಾಗೂ ಕೇಂದ್ರ ಸರ್ಕಾರ 2.5 ಕೋಟಿ ರೂ. ನೀಡಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜೈಲಿನಿಂದ ಹೊರ ಬರುತ್ತಿದ್ದಂತೆ ಟೆಂಪಲ್ ರನ್ – ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇಜ್ರಿವಾಲ್!

  • ಮೋದಿಗೆ 75 ವರ್ಷವಾದ್ರೂ ಪ್ರಧಾನಿ ಆಗಿಯೇ ಆಗ್ತಾರೆ- ಕೇಜ್ರಿವಾಲ್‌ಗೆ ಅಮಿತ್ ಶಾ ಟಕ್ಕರ್

    ಮೋದಿಗೆ 75 ವರ್ಷವಾದ್ರೂ ಪ್ರಧಾನಿ ಆಗಿಯೇ ಆಗ್ತಾರೆ- ಕೇಜ್ರಿವಾಲ್‌ಗೆ ಅಮಿತ್ ಶಾ ಟಕ್ಕರ್

    ನವದೆಹಲಿ:‌ ನರೇಂದ್ರ ಮೋದಿ (Narendra Modi) ಅವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದು, ಮೂರನೇ ಅವಧಿಯನ್ನು ಕೂಡ ಪೂರ್ಣಗೊಳಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಹೇಳಿದ್ದಾರೆ.

    ಹೈದರಾಬಾದ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ ಬಿಜೆಪಿ ಅಧಿಕಾರಕ್ಕೆ ಬಂದರೂ ನರೇಂದ್ರ ಮೋದಿ ಪ್ರಧಾನಿಯಾಗಲ್ಲ ಎಂಬ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮೋದಿಜಿ 75 ನೇ ವರ್ಷಕ್ಕೆ ಕಾಲಿಡುತ್ತಿರುವ ಬಗ್ಗೆ ಸಂತೋಷಪಡುವ ಅಗತ್ಯವಿಲ್ಲ ಎಂದು ಅರವಿಂದ್ ಕೇಜ್ರಿವಾಲ್ ಮತ್ತು ಭಾರತ ಮೈತ್ರಿಕೂಟಕ್ಕೆ ಹೇಳಲು ಬಯಸುತ್ತೇನೆ. ಮೋದಿಜಿ ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ಬಿಜೆಪಿಯ ಸಂವಿಧಾನದಲ್ಲಿ ಬರೆದಿಲ್ಲ. ಅವರು ಮತ್ತೆ ಪ್ರಧಾನಿ ಆಗಿಯೇ ಆಗುತ್ತಾರೆ ಎಂದು ತಿಳಿಸಿದ್ದಾರೆ.

    ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನನ್ನು ಕ್ಲೀನ್ ಚಿಟ್ ಎಂದು ಪರಿಗಣಿಸಬಾರದು. ಮಧ್ಯಂತರ ಜಾಮೀನು ಜೂನ್ 1 ರವರೆಗೆ ಮಾತ್ರ ನೀಡಲಾಗಿದ್ದು, ಜೂನ್ 2 ರಂದು ಅವರು ಶರಣಾಗಬೇಕು. ಅರವಿಂದ್ ಕೇಜ್ರಿವಾಲ್ ಇದನ್ನು ಕ್ಲೀನ್ ಚಿಟ್ ಎಂದು ಪರಿಗಣಿಸಿದರೆ, ಕಾನೂನಿನ ಬಗ್ಗೆ ಅವರ ತಿಳುವಳಿಕೆ ದುರ್ಬಲವಾಗಿದೆ ಎಂದರ್ಥ ಅಂತಾ ಅಮಿತ್‌ ಶಾ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೂ ಮೋದಿ ಪ್ರಧಾನಿಯಾಗಲ್ಲ: ಅರವಿಂದ್ ಕೇಜ್ರಿವಾಲ್ ಭವಿಷ್ಯ

    ನಿನ್ನಯಷ್ಟೇ ಮಧ್ಯಂತರ ಜಾಮೀನಿನ ಮೇಲೆ ತಿಹಾರ್‌ ಜೈಲಿನಿಂದ ಹೊರಬಂದಿರುವ ಕೇಜ್ರಿವಾಲ್‌ ಇಂದು ಸುದ್ದಿಗೋಷ್ಠಿ ನಡೆಸಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ತುಂಬುತ್ತಿದೆ. 75 ವರ್ಷದ ಬಳಿಕ ರಾಜಕೀಯ ನಿವೃತ್ತಿ ಪಡೆಯಬೇಕು ಎಂದು ಅವರೇ ನಿರ್ಣಯ ಮಾಡಿದ್ದಾರೆ. ಇದೇ ಕಾರಣ ನೀಡಿ ಎಲ್‌.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಶಿ ಸೇರಿದಂತೆ ಹಿರಿಯ ನಾಯಕರನ್ನು ತೆರೆ ಮರೆಗೆ ಸರಿಸಿದ್ದಾರೆ. ಈಗ 75 ವರ್ಷ ತುಂಬುತ್ತಿರುವ ಅವರು ಮುಂದಿನ ಪ್ರಧಾನಿ ಅಭ್ಯರ್ಥಿ ಯಾರು ಎಂದು ಘೋಷಿಸಬೇಕು ಎಂದಿದ್ದರು.