Tag: Arvind Kejriwal

  • ಬಿಜೆಪಿ ಅಧಿಕಾರಕ್ಕೆ ಬಂದರೂ ಮೋದಿ ಪ್ರಧಾನಿಯಾಗಲ್ಲ: ಅರವಿಂದ್ ಕೇಜ್ರಿವಾಲ್ ಭವಿಷ್ಯ

    ಬಿಜೆಪಿ ಅಧಿಕಾರಕ್ಕೆ ಬಂದರೂ ಮೋದಿ ಪ್ರಧಾನಿಯಾಗಲ್ಲ: ಅರವಿಂದ್ ಕೇಜ್ರಿವಾಲ್ ಭವಿಷ್ಯ

    ನವದೆಹಲಿ: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆದ್ದರೂ ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗುವುದಿಲ್ಲ. 75 ವರ್ಷಕ್ಕೆ ರಾಜಕೀಯ ನಿವೃತ್ತಿ ಎಂದು ಅವರೇ ನಿರ್ಣಯ ಮಾಡಿರುವ ಹಿನ್ನೆಲೆ ತಮ್ಮ ಬಳಿಕ ಪ್ರಧಾನಿ ಅಭ್ಯರ್ಥಿ ಯಾರು ಎನ್ನುವುದು ಘೋಷಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಸವಾಲು ಹಾಕಿದ್ದಾರೆ.

    ಶುಕ್ರವಾರ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಜೈಲಿನಿಂದ ಹೊರ ಬಂದು ಶನಿವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ 75 ವರ್ಷ ತುಂಬುತ್ತಿದೆ. 75 ವರ್ಷದ ಬಳಿಕ ರಾಜಕೀಯ ನಿವೃತ್ತಿ ಪಡೆಯಬೇಕು ಎಂದು ಅವರೇ ನಿರ್ಣಯ ಮಾಡಿದ್ದಾರೆ. ಇದೇ ಕಾರಣ ನೀಡಿ ಎಲ್‌.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಶಿ ಸೇರಿದಂತೆ ಹಿರಿಯ ನಾಯಕರನ್ನು ತೆರೆ ಮರೆಗೆ ಸರಿಸಿದ್ದಾರೆ. ಈಗ 75 ವರ್ಷ ತುಂಬುತ್ತಿರುವ ಅವರು ಮುಂದಿನ ಪ್ರಧಾನಿ ಅಭ್ಯರ್ಥಿ ಯಾರು ಎಂದು ಘೋಷಿಸಬೇಕು ಎಂದರು. ಇದನ್ನೂ ಓದಿ: ಜೈಲಿನಿಂದ ಹೊರ ಬರುತ್ತಿದ್ದಂತೆ ಟೆಂಪಲ್ ರನ್ – ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇಜ್ರಿವಾಲ್!

    ನರೇಂದ್ರ ಮೋದಿ ಅವರು ಒಂದು ದೇಶ ಒಂದು ನಾಯಕ ಎನ್ನುವ ಅಜೆಂಡಾ ಜಾರಿ ಮಾಡುವ ಹುನ್ನಾರ ನಡೆಯುತ್ತಿದೆ. ಪಕ್ಷದಲ್ಲಿ ಇವರ ಮುಂದಿನ ಟಾರ್ಗೆಟ್ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್. ಫಲಿತಾಂಶ ಬಂದ ಎರಡು ತಿಂಗಳ ಬಳಿಕ ಅವರನ್ನು ತೆರೆ ಮರೆಗೆ ಸರಿಸಲಾಗುವುದು ಎಂದು ಭವಿಷ್ಯ ನುಡಿದರು. ಮೋದಿ ಗೃಹ ಸಚಿವ ಅಮಿತ್ ಶಾರನ್ನು ಮುಂದಿನ ಪ್ರಧಾನಿ ಮಾಡುವ ಚಿಂತನೆಯಲ್ಲಿದ್ದಾರೆ. ಆದರೆ ಮೋದಿ ಗ್ಯಾರಂಟಿ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ನೀವೂ ಪ್ರಧಾನಿಯಾಗದಿದ್ದರೆ ನಿಮ್ಮ ಗ್ಯಾರಂಟಿ ಯಾರು ನಿಭಾಯಿಸುತ್ತಾರೆ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

    ಆಮ್ ಅದ್ಮಿ ಎನ್ನುವುದು ಚಿಕ್ಕ ಪಕ್ಷ. ನಮ್ಮ ಪಕ್ಷವನ್ನು ಮುಗಿಸಲು ಪ್ರಧಾನಿ ಮೋದಿ ಯಾವ ಅವಕಾಶವನ್ನೂ ಬಿಟ್ಟಿಲ್ಲ. ನಮ್ಮ ಎಲ್ಲ ಪ್ರಮುಖ ನಾಯಕರನ್ನು ಜೈಲಿಗೆ ಕಳುಹಿಸುವ ಪ್ರಯತ್ನ ಮಾಡಿದರು. ಆಪ್ ರೀತಿಯಲ್ಲಿ ದೊಡ್ಡ ಪಕ್ಷದ ನಾಯಕರು ಜೈಲಿಗೆ ಹೋಗಿದ್ದರೆ, ಪಕ್ಷ ಮುಗಿದು ನಾಶವಾಗುತ್ತಿತ್ತು. ಅವರು ಆಪ್ ಪಕ್ಷ ನಾಶವಾಗುತ್ತೆ ಅಂದುಕೊಂಡರು. ಆದರೆ ಅದು ಸಾಧ್ಯವಾಗಲಿಲ್ಲ. ಕಾರಣ ಆಪ್ ಎನ್ನುವುದು ಒಂದು ಚಿಂತನೆ ಎಂದರು. ಇದನ್ನೂ ಓದಿ: ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕಿದೆ: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಕೇಜ್ರಿವಾಲ್‌ ಪ್ರತಿಕ್ರಿಯೆ

    ಭವಿಷ್ಯದಲ್ಲಿ ಆಪ್ ಬಿಜೆಪಿಗೆ ಸವಾಲೊಡ್ಡಲಿದೆ ಎನ್ನುವುದು ಅವರಿಗೆ ಗೊತ್ತಿದೆ. ಅದಕ್ಕಾಗಿ ಈಗಲೇ ನಮ್ಮನ್ನು ಮುಗಿಸುವ ಪ್ರಯತ್ನ ಮಾಡಲಾಗುತ್ತಿದೆ. ನಮ್ಮನ್ನು ಮುಗಿಸುವ ಪ್ರಯತ್ನ ಮಾಡಿದರೆ, ದೇಶದ ಜನರು ಒಪ್ಪುವುದಿಲ್ಲ. ಕಳೆದ 75 ವರ್ಷದಲ್ಲಿ ಎಂದು ಯಾವ ಪ್ರಧಾನಿಯೂ ಪಕ್ಷವೊಂದನ್ನು ಇಷ್ಟು ಟಾರ್ಗೆಟ್ ಮಾಡಿರಲಿಲ್ಲ ಎಂದು ತಿಳಿಸಿದರು.

    ಭ್ರಷ್ಟಾಚಾರ ಮಾಡಿದ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡು ಬಳಿಕ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತೇನೆ ಎನ್ನುತ್ತಾರೆ. ಭ್ರಷ್ಟಾಚಾರ ವಿರುದ್ಧ ಹೋರಾಡುವುದು ಹೇಗೆ ಎಂದು ಕೇಜ್ರಿವಾಲ್ ನೋಡಿ‌ ಕಲಿಯಬೇಕು ನೀವೂ. ನಮ್ಮ ಮಂತ್ರಿಯೊಬ್ಬರ ವಿರುದ್ಧ ಲಂಚ ಪಡೆದ ಆರೋಪ ಬಂತು. ಅದು ಸಾರ್ವಜನಿಕ ವಲಯದಲ್ಲಿ ಯಾರಿಗೂ ಗೊತ್ತಿರಲಿಲ್ಲ. ಅದಾಗ್ಯೂ ನಾವು ಅದನ್ನು ಸಿಬಿಐ ತನಿಖೆಗೆ ನೀಡಿದೆವು. ನೀವೂ ದೇಶದ ಕಳ್ಳರನ್ನು ಪಕ್ಷಕ್ಕೆ ಸೇರಿಸಿಕೊಂಡು ನನ್ನ ಜೈಲಿಗೆ ಕಳಿಹಿಸಿದ್ದೀರಿ. ಈ ದೇಶದ ಜನರನ್ನು ದಡ್ಡರು ಅಂದುಕೊಳ್ಳಬೇಡಿ, ಎಲ್ಲರಿಗೆ ಎಲ್ಲವೂ ಗೊತ್ತಿದೆ. ಇದನ್ನೂ ಓದಿ: ದೇವರ ಆಶೀರ್ವಾದ ನನ್ನ ಜೊತೆಗಿದೆ- ಜೈಲಿನಿಂದ ಹೊರ ಬಂದ ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್

    ನನ್ನ ಬಂಧಿಸುವ ಮೂಲಕ ಸಂದೇಶ ರವಾನಿಸುವ ಪ್ರಯತ್ನ ಮಾಡಿದ್ದರು. ಬಂಧನದ ಬಳಿಕವೂ ರಾಜೀನಾಮೆ ನೀಡಿಲ್ಲ ಎಂದು ಆರೋಪಿಸಿದರು. ನಾನು ಉದ್ದೇಶಪೂರ್ವಕವಾಗಿ ರಾಜೀನಾಮೆ ನೀಡಲಿಲ್ಲ. ನನಗೆ ಅಧಿಕಾರದ ಆಸೆ ಇಲ್ಲ. ನಾನು ಆದಾಯ ತೆರಿಗೆ ಇಲಾಖೆಯಲ್ಲಿ ಕಮಿಷನರ್‌ ಆಗಿದ್ದೆ. ಅದನ್ನು ಬಿಟ್ಟು ಬಂದಿದ್ದೇನೆ. ಅಧಿಕಾರದ ಆಸೆ ಇದ್ದಿದ್ದರೆ, ಅದನ್ನು ಬಿಡುತ್ತಿರಲಿಲ್ಲ. ದೆಹಲಿಯ ಜನರು ನನಗೆ ಮೊದಲು ಅಧಿಕಾರ ನೀಡಿದರು. ಬಹುಮತದ ಕಾರಣ ನಾನು ಅದಕ್ಕೂ ರಾಜೀನಾಮೆ‌ ನೀಡಿದ್ದೆ. ಇಂದು ಭಾರಿ ಬಹುಮತ ಪಡೆದು ದೆಹಲಿಯಲ್ಲಿ ಗೆದ್ದಿದ್ದೇವೆ. ನಮ್ಮನ್ನು ಮುಂದಿನ 20 ವರ್ಷ ಸೋಲಿಸಲು ಸಾಧ್ಯವಿಲ್ಲ ಎಂದು ಗೊತ್ತಿದೆ. ಸುಳ್ಳು ಕೇಸ್‌ನಲ್ಲಿ ಜೈಲಿಗೆ ಕಳಿಹಿಸಿದರೆ ರಾಜೀನಾಮೆ ನೀಡಬಹುದು ಅಂದುಕೊಂಡರು. ಅದಕ್ಕೆ ನಾನು ರಾಜೀನಾಮೆ ನೀಡಲಿಲ್ಲ. ಜೈಲಿನಿಂದ ಸರ್ಕಾರ ನಡೆಸಿದೆ. ನಾನು ರಾಜೀನಾಮೆ ನೀಡಿದ್ದರೆ ಎಲ್ಲ ರಾಜ್ಯಗಳಲ್ಲಿ ಬಿಜೆಪಿ ಇದನ್ನೆ ಮಾಡುತ್ತಿತ್ತು ಎಂದು ಆರೋಪಿಸಿದರು.

    140 ಕೋಟಿ ಜನರಿಗೆ ಬಳಿ ಭಿಕ್ಷೆ ಬೇಡಲು ಬಂದಿದ್ದೇನೆ. ನನ್ನ ಭಾರತವನ್ನು ಉಳಿಸಿ ಎಂದು ಕೇಳಿಕೊಳ್ಳಲು ಬಂದಿದ್ದೇನೆ. ನಾನು ಸುಪ್ರೀಂ ಕೋರ್ಟ್‌ಗೆ ಧನ್ಯವಾದಗಳು ಹೇಳಲು ಬಯಸುತ್ತೇನೆ. 21 ದಿನ ಸಮಯ ನೀಡಿದೆ. ದಿನಕ್ಕೆ 24 ಗಂಟೆ ಇದೆ. ನಾನು ದಿನದ 21 ಗಂಟೆ ಕೆಲಸ ಮಾಡಲಿದ್ದೇನೆ. ಪೂರ್ಣ ಪ್ರಮಾಣದಲ್ಲಿ ನಾನು ಹೋರಾಡುತ್ತೇನೆ. ಇಂಡಿಯಾ ಒಕ್ಕೂಟದ ಸರ್ಕಾರ ಅಧಿಕಾರಕ್ಕೆ ಬರಲಿದೆ. ದೆಹಲಿಗೆ ಪೂರ್ಣ ರಾಜ್ಯದ ಸ್ವಾತಂತ್ರ್ಯ ಸಿಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

  • ಜೈಲಿನಿಂದ ಹೊರ ಬರುತ್ತಿದ್ದಂತೆ ಟೆಂಪಲ್ ರನ್ – ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇಜ್ರಿವಾಲ್!

    ಜೈಲಿನಿಂದ ಹೊರ ಬರುತ್ತಿದ್ದಂತೆ ಟೆಂಪಲ್ ರನ್ – ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇಜ್ರಿವಾಲ್!

    ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) 50 ದಿನಗಳ ಬಳಿಕ ಬಿಡುಗಡೆಯಾಗಿದ್ದಾರೆ. ವಿವಿಧೆಡೆ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮುನ್ನವೇ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದು ಶುಕ್ರವಾರ ಸಂಜೆಯಷ್ಟೇ ದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದ್ದ ಕೇಜ್ರಿವಾಲ್ ಇಂದು (ಮೇ 11) ಬೆಳಗ್ಗೆ 11 ಗಂಟೆ ವೇಳೆಗೆ ಹನುಮಾನ್ ಮಂದಿರಕ್ಕೆ (Hanuman Temple) ಭೇಟಿ ನೀಡಿದ್ದಾರೆ. ಪತ್ನಿಯೊಂದಿಗೆ ದೆಹಲಿಯ ಕನೌಟ್ ಪ್ಲೇಸ್‌ (Delhi’s Connaught Place) ನಗರದಲ್ಲಿರುವ ಹನುಮಾನ್ ಮಂದಿರಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ ಹಾಗೂ ಎಎಪಿ ಕಾರ್ಯಕರ್ತರೂ ಪಾಲ್ಗೊಂಡಿದ್ದಾರೆ. ಪೂಜೆ ವೇಳೆ ಮಂದಿರದ ಸುತ್ತ ಬಿಗಿ ಭದ್ರತೆ ನಿಯೋಜಿಸಲಾಗಿತ್ತು.

    ಸಂಜೆ ರೋಡ್ ಶೋ:
    ಮಧ್ಯಂತರ ಜಾಮೀನು ಪಡೆದ ಮರುದಿನದಿಂದಲೇ ಚುನಾವಣಾ ಕಾರ್ಯಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಕೇಜ್ರಿವಾಲ್ ದೇವಸ್ಥಾನದ ಪೂಜಾ ಕಾರ್ಯಗಳು ಮುಗಿಯುತ್ತಿದ್ದಂತೆ ಆಪ್ ಕಾರ್ಯಕರ್ತರೊಂದಿಗೆ ಅಲ್ಲಿಯೇ ಸಭೆ ನಡೆಸಿದ್ದಾರೆ. ಮೇ 11 ರಂದು ಸಂಜೆ 5 ಗಂಟೆ ವೇಳೆಗೆ, ದಕ್ಷಿಣ ದೆಹಲಿಯಲ್ಲಿ ಆಪ್ ನಿಂದ ಆಯೋಜನೆಗೊಂಡ ರೋಡ್ ಶೋನಲ್ಲಿಯೂ (AAP Road Show) ಕೇಜ್ರಿವಾಲ್ ಭಾಗವಹಿಸಲಿದ್ದಾರೆ.

    ಜೂ.1 ರ ವರೆಗೆ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಮೇ 25 ರಂದು ದೆಹಲಿಯ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಎಎಪಿ ಮತ್ತು ಇಂಡಿಯಾ ಬ್ಲಾಕ್ ಪರ ಕೇಜ್ರಿವಾಲ್ ಪ್ರಚಾರ ಮಾಡಲಿದ್ದಾರೆ.

    ಕೇಂದ್ರದ ವಿರುದ್ಧ ವಾಗ್ದಾಳಿ:
    ಇನ್ನೂ ಜೈಲಿನಿಂದ ಹೊರಬರುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಜ್ರಿವಾಲ್, ನಿಮ್ಮೆಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ನೀವು ನನಗೆ ನಿಮ್ಮ ಆಶೀರ್ವಾದವನ್ನು ನೀಡಿದ್ದೀರಿ. ನಾನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಅವರಿಂದಲೇ ನಾನು ನಿಮ್ಮ ಮುಂದೆ ಇದ್ದೇನೆ. ನಾವು ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕಾಗಿದೆ ಎಂದು ಕರೆ ನೀಡಿದ್ದಾರೆ.

  • ಮೋದಿಗೆ ಮತ್ತೊಂದು ಯುದ್ಧದಲ್ಲಿ ಸೋಲು: ಕೇಜ್ರಿವಾಲ್‌ ಜೈಲಿಂದ ಹೊರಬಂದಿದ್ದಕ್ಕೆ ಪಾಕ್‌ ನಾಯಕ ಸಂತಸ

    ಮೋದಿಗೆ ಮತ್ತೊಂದು ಯುದ್ಧದಲ್ಲಿ ಸೋಲು: ಕೇಜ್ರಿವಾಲ್‌ ಜೈಲಿಂದ ಹೊರಬಂದಿದ್ದಕ್ಕೆ ಪಾಕ್‌ ನಾಯಕ ಸಂತಸ

    ಇಸ್ಲಾಮಾಬಾದ್: ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಜೈಲಿನಿಂದ ಬಿಡುಗಡೆಯಾದ ಬಗ್ಗೆ ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ (Fawad Chaudhry) ಸಂತಸ ವ್ಯಕ್ತಪಡಿಸಿದ್ದಾರೆ. ಮೋದಿ ಅವರು ಮತ್ತೊಂದು ಯುದ್ಧದಲ್ಲಿ ಸೋತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

    ಕೇಜ್ರಿವಾಲ್‌ ಬಿಡುಗಡೆ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಚೌದರಿ, ಮೋದಿ (Narendra Modi) ಜಿ ಅವರಿಗೆ ಮತ್ತೊಂದು ಯುದ್ಧದಲ್ಲಿ ಸೋಲಾಗಿದೆ. ಕೇಜ್ರಿವಾಲ್‌ ಬಿಡುಗಡೆಯು ಭಾರತದ ಜನತೆಗೆ ಒಳ್ಳೆಯ ಸಂದೇಶ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕಿದೆ: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಕೇಜ್ರಿವಾಲ್‌ ಪ್ರತಿಕ್ರಿಯೆ

    ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ 2024 ರ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯವು ಕೇಜ್ರಿವಾಲ್‌ ಅವರನ್ನು ಬಂಧಿಸಿತ್ತು. 50 ದಿನಗಳ ನಂತರ ಕೇಜ್ರಿವಾಲ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

    ಹಲವು ಷರತ್ತುಗಳನ್ನು ವಿಧಿಸಿ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ. ಜೂ.2 ರಂದು ಮತ್ತೆ ಪೊಲೀಸರ ಮುಂದೆ ಶರಣಾಗುವಂತೆ ದೆಹಲಿ ಸಿಎಂಗೆ ಸುಪ್ರೀಂ ಸೂಚನೆ ನೀಡಿದೆ. ಇದನ್ನೂ ಓದಿ: ದೇವರ ಆಶೀರ್ವಾದ ನನ್ನ ಜೊತೆಗಿದೆ- ಜೈಲಿನಿಂದ ಹೊರ ಬಂದ ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್

    ಇದಕ್ಕೂ ಮುನ್ನ, ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಂಪತ್ತಿನ ಮರುಹಂಚಿಕೆ ಸಮೀಕ್ಷೆಯನ್ನು ನಡೆಸುವುದಾಗಿ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿದ್ದನ್ನು ಚೌಧರಿ ಶ್ಲಾಘಿಸಿದ್ದರು. ರಾಹುಲ್ ಗಾಂಧಿಯನ್ನು ಮುತ್ತಜ್ಜ ಮತ್ತು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರೊಂದಿಗೆ ಹೋಲಿಸಿ, ‘ಇಬ್ಬರೂ ಸಮಾಜವಾದಿಗಳು’ ಎಂದು ಚೌಧರಿ ಬಣ್ಣಿಸಿದ್ದರು.

  • ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕಿದೆ: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಕೇಜ್ರಿವಾಲ್‌ ಪ್ರತಿಕ್ರಿಯೆ

    ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕಿದೆ: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಕೇಜ್ರಿವಾಲ್‌ ಪ್ರತಿಕ್ರಿಯೆ

    ನವದೆಹಲಿ: ಮದ್ಯ ನೀತಿ ಹಗರಣದಲ್ಲಿ ಬಂಧನಕೊಳ್ಳಗಾಗಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) 50 ದಿನಗಳ ಬಳಿಕ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರಬರುತ್ತಿದ್ದಂತೆ ಕೇಂದ್ರದ ವಿರುದ್ಧ ಗುಡುಗಿದ್ದಾರೆ. ಸರ್ವಾಧಿಕಾರದ ವಿರುದ್ಧ ಹೋರಾಡಬೇಕಿದೆ ಎಂದು ಹೇಳಿದ್ದಾರೆ.

    ನಿಮ್ಮೆಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ನೀವು ನನಗೆ ನಿಮ್ಮ ಆಶೀರ್ವಾದವನ್ನು ನೀಡಿದ್ದೀರಿ. ನಾನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಅವರಿಂದಲೇ ನಾನು ನಿಮ್ಮ ಮುಂದೆ ಇದ್ದೇನೆ. ನಾವು ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕಾಗಿದೆ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ದೇವರ ಆಶೀರ್ವಾದ ನನ್ನ ಜೊತೆಗಿದೆ- ಜೈಲಿನಿಂದ ಹೊರ ಬಂದ ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್

    ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನಿನ ಮೇಲೆ ಶುಕ್ರವಾರ ಸಂಜೆ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಗೊಂಡರು. ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದ ಮೇಲೆ ಜೈಲಿನಲ್ಲಿದ್ದ 50 ದಿನಗಳ ನಂತರ ಹೊರಬಂದಿದ್ದಾರೆ.

    ಜೂ.1 ರ ವರೆಗೆ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಮೇ 25 ರಂದು ದೆಹಲಿಯ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಎಎಪಿ ಮತ್ತು ಇಂಡಿಯಾ ಬ್ಲಾಕ್‌ ಪರ ಕೇಜ್ರಿವಾಲ್‌ ಪ್ರಚಾರ ಮಾಡಲಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು- ಸುಪ್ರೀಂ ವಿಧಿಸಿದ ಷರತ್ತುಗಳೇನು..?

  • ದೇವರ ಆಶೀರ್ವಾದ ನನ್ನ ಜೊತೆಗಿದೆ- ಜೈಲಿನಿಂದ ಹೊರ ಬಂದ ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್

    ದೇವರ ಆಶೀರ್ವಾದ ನನ್ನ ಜೊತೆಗಿದೆ- ಜೈಲಿನಿಂದ ಹೊರ ಬಂದ ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್

    – ಪತಿಯನ್ನು ಬರಮಾಡಿಕೊಂಡ ಪತ್ನಿ

    ನವದೆಹಲಿ: ಮಧ್ಯಂತರ ಜಾಮೀನಿನ ಮೇಲೆ ತಿಹಾರ್‌ ಜೈಲಿನಿಂದ ಹೊರ ಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಮಾಧ್ಯಮಗಳಿಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.

    ಎಲ್ಲ ಬೆಂಬಲಿಗರಿಗೆ ಧನ್ಯವಾದಗಳು. ದೇವರ ಆಶೀರ್ವಾದ ನನ್ನ ಜೊತೆಗಿದೆ. ನಿರಕುಂಶ ಪ್ರಭುತ್ವದ ವಿರುದ್ಧ ನಾವು ಹೋರಾಡಬೇಕು ಎಂದರು. ನಾಳೆ ಬೆಳಗ್ಗೆ 11 ಗಂಟೆಗೆ ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಕೇಜ್ರಿವಾಲ್‌, ಮಧ್ಯಾಹ್ನ ಒಂದು ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.‌ ಇದನ್ನೂ ಓದಿ: ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು- ಸುಪ್ರೀಂ ವಿಧಿಸಿದ ಷರತ್ತುಗಳೇನು..?

    ಸುನಿತಾ ಕೇಜ್ರಿವಾಲ್‌ ಸ್ವಾಗತ: ಪತಿ ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಪತ್ನಿ ಸುನಿತಾ ಕೇಜ್ರಿವಾಲ್‌ ಅವರು ಸ್ವಾಗತಿಸಿದರು. ಇದೇ ವೇಳೆ ಆಮ್ ಆದ್ಮಿ ಪಕ್ಷದ (AAP) ಬೆಂಬಲಿಗರು, ಕಾರ್ಯಕರ್ತರು ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ತಿಹಾರ್ ಜೈಲಿನ ಹೊರಗೆ ಹಾಜರಿದ್ದರು.

    ಕಳೆದ 50 ದಿನಗಳಿಂದ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿದ್ದರು. ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಜೂನ್ 1 ರವರೆಗೆ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದ ನಂತರ ಅರವಿಂದ್ ಕೇಜ್ರಿವಾಲ್ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

  • ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು- ಸುಪ್ರೀಂ ವಿಧಿಸಿದ ಷರತ್ತುಗಳೇನು..?

    ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು- ಸುಪ್ರೀಂ ವಿಧಿಸಿದ ಷರತ್ತುಗಳೇನು..?

    – ಜೂನ್‌ 2ಕ್ಕೆ ಶರಣಾಗುವಂತೆ ಸೂಚನೆ

    ನವದೆಹಲಿ: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ (Supreme Court) ಕೆಲವೊಂದು ಷರತ್ತುಗಳನ್ನು ವಿಧಿಸಿ ಮಧ್ಯಂತ ಜಾಮೀನು ನೀಡಿದೆ.

    ಹೌದು. ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಜೂನ್ 1 ರವರೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ನಂತರ ಅರವಿಂದ್ ಕೇಜ್ರಿವಾಲ್ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಜೈಲಿನಿಂದ ಹೊರ ಬಂದ ಬಳಿಕ ವಿಧಿಸಿದ ಕಠಿಣ ಷರತ್ತುಗಳ ಪಟ್ಟಿ ಇಲ್ಲಿದೆ.

    * ದೆಹಲಿ ಮುಖ್ಯಮಂತ್ರಿಯು 50,000 ರೂ. ಮೌಲ್ಯದ ಬೇಲ್‌ ಬಾಂಡ್‌ಗಳನ್ನು ಒದಗಿಸಬೇಕು.
    * ಮುಖ್ಯಮಂತ್ರಿ ಕಚೇರಿ ಮತ್ತು ದೆಹಲಿ ಸಚಿವಾಲಯಕ್ಕೆ ಭೇಟಿ ನೀಡುವಂತಿಲ್ಲ.
    * ಯಾವುದೇ ಸರ್ಕಾರಿ ಕಡತಗಳಿಗೆ ಸಹಿ ಹಾಕಬಾರದು.
    * ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಬಹಿರಂಗ ಹೇಳಿಕೆಗಳನ್ನು ನೀಡಬಾರದು.
    * ಪ್ರಕರಣ ಸಂಬಂಧ ಸಾಕ್ಷ್ಯಗಳ ಜೊತೆ ಮಾತುಕತೆ ನಡೆಸಬಾರದು.

    ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ವರೆಗೂ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿ ಸದಸ್ಯ ಪೀಠ ಚುನಾವಣಾ ಪ್ರಚಾರಕ್ಕಾಗಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

    ಚುನಾವಣಾ ಫಲಿತಾಂಶ ಜೂನ್ 4 ರಂದು ಪ್ರಕಟಗೊಳ್ಳಲಿದೆ ಅಲ್ಲಿವರೆಗೂ ಜಾಮೀನು ವಿಸ್ತರಿಸಬೇಕು ಎಂದು ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ಮನವಿ ಮಾಡಿದರು. ಇದಕ್ಕೆ ನಿರಾಕರಿಸಿದ ಕೋರ್ಟ್, ಕಡೆಯ ಹಂತದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಜೂನ್ 31 ರ ಪ್ರಚಾರಕ್ಕೆ ಕಡೆಯ ದಿನವಾಗಿದ್ದು ಈ ಹಿನ್ನೆಲೆ ಜೂನ್ 1 ವರೆಗೂ ಜಾಮೀನು ಮಂಜೂರು ಮಾಡಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿತು. ಅಲ್ಲದೇ ಜೂನ್‌ 2 ರಂದು ಬಂದು ಶರಣಾಗುವಂತೆ ಕೋರ್ಟ್‌ ಸೂಚಿಸಿದೆ.

  • ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು

    ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ (Supreme Court) ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

    ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಚುನಾವಣಾ ಪ್ರಚಾರಕ್ಕಾಗಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ- ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

    ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಯಾವುದೇ ನಿರ್ಣಯಗಳನ್ನು ಕೈಗೊಳ್ಳುವಂತಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿ ಮಾತನಾಡುವಂತಿಲ್ಲ ಎಂದು ಷರತ್ತು ವಿಧಿಸಿರುವ ಕೋರ್ಟ್ ಕೇವಲ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಬಹುದು ಎಂದು ಹೇಳಿದೆ.

    ಚುನಾವಣಾ ಫಲಿತಾಂಶ ಜೂನ್ 4 ರಂದು ಪ್ರಕಟಗೊಳ್ಳಲಿದೆ. ಅಲ್ಲಿವರೆಗೂ ಜಾಮೀನು ವಿಸ್ತರಿಸಬೇಕು ಎಂದು ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ಮನವಿ ಮಾಡಿದರು. ಇದಕ್ಕೆ ನಿರಾಕರಿಸಿದ ಕೋರ್ಟ್ ಕಡೆಯ ಹಂತದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಜೂನ್ 31 ರ ಪ್ರಚಾರಕ್ಕೆ ಕಡೆಯ ದಿನವಾಗಿದ್ದು, ಈ ಹಿನ್ನೆಲೆ ಜೂನ್ 1 ರ ವರೆಗೂ ಜಾಮೀನು ಮಂಜೂರು ಮಾಡಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿತು. ಇದನ್ನೂ ಓದಿ: ಪಾಕ್‌ ಸಹ ಅಣುಬಾಂಬ್‌ ಹೊಂದಿದೆ, ಕೆರಳಿಸಿದ್ರೆ ಭಾರತದ ಮೇಲೆ ಎಸೆಯುತ್ತಾರೆ: ಕಾಂಗ್ರೆಸ್‌ ಮಾಜಿ ಸಚಿವ ಪ್ರಚೋದನಕಾರಿ ಹೇಳಿಕೆ!

    ಕೇಜ್ರಿವಾಲ್ ಜಾಮೀನಿಗೆ ಆಕ್ಷೇಪ ವ್ಯಕ್ತಪಡಿಸಿದ ಇಡಿ
    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿತ್ತು. ಅಫಿಡೆವಿಟ್‌ನಲ್ಲಿ ಚುನಾವಣಾ ಪ್ರಚಾರದ ಹಕ್ಕು ‘ಮೂಲಭೂತ ಹಕ್ಕಲ್ಲ’ ಎಂದು ಹೇಳಿತ್ತು.

    ಈವರೆಗೂ ಯಾವುದೇ ರಾಜಕೀಯ ನಾಯಕನು ಚುನಾವಣಾ ಸ್ಪರ್ಧಿಸುವ ಅಭ್ಯರ್ಥಿಯಲ್ಲದಿದ್ದರೇ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಪಡೆದಿಲ್ಲ. ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲು ಮತ್ತು ನ್ಯಾಯಾಂಗ ಬಂಧನದಲ್ಲಿಡಲು ಸಾಧ್ಯವಿಲ್ಲ. ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ – 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ

    ಕಳೆದ ಮೂರು ವರ್ಷಗಳಲ್ಲಿ ಸುಮಾರು 123 ಚುನಾವಣೆಗಳು ನಡೆದಿವೆ. ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲಾಗುವುದಿಲ್ಲ ಮತ್ತು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗುವುದಿಲ್ಲ. ಏಕೆಂದರೆ ವರ್ಷಪೂರ್ತಿ ಚುನಾವಣೆಗಳು ನಡೆಯುತ್ತವೆ ಎಂದು ಇಡಿ ತನ್ನ ಅಫಿಡೆವಿಟ್‌ನಲ್ಲಿ ಹೇಳಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ವಿಶೇಷ ರಿಯಾಯಿತಿ ಕಾನೂನು ಮತ್ತು ಸಮಾನತೆಗೆ ಅಸಹ್ಯಕರವಾಗಿದೆ ಎಂದು ಹೇಳಿತ್ತು.

  • ಚುನಾವಣಾ ಪ್ರಚಾರದ ಹಕ್ಕು ಮೂಲಭೂತವಲ್ಲ- ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

    ಚುನಾವಣಾ ಪ್ರಚಾರದ ಹಕ್ಕು ಮೂಲಭೂತವಲ್ಲ- ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ. ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ” ಎಂದು ತನಿಖಾ ಸಂಸ್ಥೆ ಹೇಳಿದೆ.

    ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮಧ್ಯಂತರ ಜಾಮೀನಿಗೆ ಸಂಬಂಧಿಸಿದಂತೆ ಶುಕ್ರವಾರ ಸುಪ್ರೀಂಕೋರ್ಟ್ (Supreme Court) ಮಧ್ಯಂತರ ಆದೇಶ ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಅದಕ್ಕೂ ಮುನ್ನ ಇಡಿ ಉಪ ನಿರ್ದೇಶಕಿ ಭಾನು ಪ್ರಿಯಾ ಅವರು ಅಫಿಡವಿಟ್ ಸಲ್ಲಿಸಿದ್ದಾರೆ.

    ಚುನಾವಣೆಗಾಗಿ ಪ್ರಚಾರ ಮಾಡುವ ಹಕ್ಕು ಮೂಲಭೂತ, ಸಾಂವಿಧಾನಿಕ ಅಥವಾ ಕಾನೂನುಬದ್ಧ ಹಕ್ಕಲ್ಲ. ಈವರೆಗೂ ಯಾವುದೇ ರಾಜಕೀಯ ನಾಯಕನು ಚುನಾವಣಾ ಸ್ಪರ್ಧಿಸುವ ಅಭ್ಯರ್ಥಿಯಲ್ಲದಿದ್ದರೇ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಪಡೆದಿಲ್ಲ. ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲು ಮತ್ತು ನ್ಯಾಯಾಂಗ ಬಂಧನದಲ್ಲಿಡಲು ಸಾಧ್ಯವಿಲ್ಲ. ಇದನ್ನೂ ಓದಿ: ಶುಕ್ರವಾರ ಕೇಜ್ರಿವಾಲ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ

    ಕಳೆದ ಮೂರು ವರ್ಷಗಳಲ್ಲಿ ಸುಮಾರು 123 ಚುನಾವಣೆಗಳು ನಡೆದಿವೆ ಮತ್ತು ಚುನಾವಣಾ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡಿದರೆ ಯಾವುದೇ ರಾಜಕಾರಣಿಯನ್ನು ಬಂಧಿಸಲಾಗುವುದಿಲ್ಲ ಮತ್ತು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗುವುದಿಲ್ಲ. ಏಕೆಂದರೆ ವರ್ಷಪೂರ್ತಿ ಚುನಾವಣೆಗಳು ನಡೆಯುತ್ತವೆ ಎಂದು ಇಡಿ ತನ್ನ ಅಫಿಡವಿಟ್ ನಲ್ಲಿ ಹೇಳಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ವಿಶೇಷ ರಿಯಾಯಿತಿ ಕಾನೂನು ಮತ್ತು ಸಮಾನತೆಗೆ ಅಸಹ್ಯಕರವಾಗಿದೆ ಎಂದು ಅದು ಸೇರಿಸಿದೆ.

  • ಶುಕ್ರವಾರ ಕೇಜ್ರಿವಾಲ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ

    ಶುಕ್ರವಾರ ಕೇಜ್ರಿವಾಲ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ

    ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ (Arvind Kejriwal) ವಿರುದ್ಧ ಜಾರಿ ನಿರ್ದೇಶನಾಲಯ ಶುಕ್ರವಾರ ಮೊದಲ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಿದೆ. ಇದಕ್ಕೂ ಮುನ್ನ ಇಡಿ ಕೇಜ್ರಿವಾಲ್ ಇಡೀ ಪ್ರಕರಣದ ಕಿಂಗ್ ಪಿನ್ ಎಂದು ಆರೋಪಿಸಿತ್ತು.

    ಸುಪ್ರೀಂಕೋರ್ಟ್ ನಲ್ಲಿ (Supreme Court) ಮಧ್ಯಂತರ ಜಾಮೀನಿಗೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಯುತ್ತಿದ್ದು ಈ ಸಂಬಂಧ ಮಧ್ಯಂತರ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ. ಜಾಮೀನು ನೀಡಲು ಆಕ್ಷೇಪ ವ್ಯಕ್ತಪಡಿಸಿರುವ ಇಡಿ ಅಧಿಕಾರಿಗಳು ಪ್ರಕರಣದಲ್ಲಿ ಕೇಜ್ರಿವಾಲ್ ಪಾತ್ರಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಫೈಲ್ ಮಾಡಲಿದೆ. ಇದನ್ನೂ ಓದಿ: ದೇಶದಲ್ಲಿ ಆಡಳಿತ ನಡೆಸಿದವರ ಕುಟುಂಬದಿಂದ ಇಂಥ ಕೃತ್ಯ ಆಯ್ತಲ್ಲಾ ಎಂಬ ನೋವಿದೆ: ಶಿವಲಿಂಗೇಗೌಡ

    ಕಳೆದ ವಿಚಾರಣೆಯಲ್ಲಿ ಲೋಕಸಭಾ ಚುನಾವಣೆ (Loksabha Elections 2024) ಹಿನ್ನೆಲೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಸಕರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿತ್ತು. ಕೇಜ್ರಿವಾಲ್ ಅವರು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದರೆ ಅವರ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸಲು ಬಯಸುವುದಿಲ್ಲ ಎಂದು ಪೀಠವು ಹೇಳಿತು, ಏಕೆಂದರೆ ಇದು ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಹೇಳಿತ್ತು.

    ಈ ಹಂತದಲ್ಲಿ ಚಾರ್ಜ್ ಶೀಟ್ ಸಲ್ಲಿಸುವ ಮೂಲಕ ಕೇಜ್ರಿವಾಲ್ ಪ್ರಕರಣದಲ್ಲಿ ಹೇಗೆ ಸಂಬಂಧ ಹೊಂದಿದ್ದಾರೆ? ಅವರಿಗೆ ಜಾಮೀನು ನೀಡಿದರೆ ತನಿಖೆಯ ಮೇಲೆ ಆಗಬಹುದಾದ ಪರಿಣಾಯಗಳ ಬಗ್ಗೆ ಕೋರ್ಟ್ ಗಮನ ಸೆಳೆಯುವ ಪ್ರಯತ್ನ ಮಾಡಲಿದೆ ಎಂದು ಮೂಲಗಳು ಹೇಳಿವೆ.

  • ಡೆಲ್ಲಿ, ರಾಜಸ್ಥಾನ ಪಂದ್ಯದ ವೇಳೆ ಆಪ್ ಕಾರ್ಯಕರ್ತರಿಂದ ಪ್ರತಿಭಟನೆ – ಹಲವರು ವಶಕ್ಕೆ

    ಡೆಲ್ಲಿ, ರಾಜಸ್ಥಾನ ಪಂದ್ಯದ ವೇಳೆ ಆಪ್ ಕಾರ್ಯಕರ್ತರಿಂದ ಪ್ರತಿಭಟನೆ – ಹಲವರು ವಶಕ್ಕೆ

    ನವದೆಹಲಿ: ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಾಜಸ್ಥಾನ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ (IPL 2024) ಪಂದ್ಯದ ವೇಳೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಬಂಧನ ವಿರೋಧಿಸಿ ಪ್ರತಿಭಟಿಸಿದ ಹಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

    ಪಂದ್ಯದ ವೇಳೆ ಆಪ್ (AAP) ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ ಎಂದು ತಿಳಿದು ಬಂದಿದೆ. ಸಾರ್ವಜನಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲಾ ಪ್ರೇಕ್ಷಕರು ಆಟವನ್ನು ಆನಂದಿಸಲು ನಾವು ಪ್ರೋತ್ಸಾಹಿಸುತ್ತೇವೆ. ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ. ಇಂತಹ ಘಟನೆಗಳಿಗೆ ಕ್ರೀಡಾಂಗಣದಲ್ಲಿ ಅವಕಾಶ ನೀಡುವುದಿಲ್ಲ ಎಂದು ಪೊಲಿಸರು ತಿಳಿಸಿದ್ದಾರೆ.

    ಅಭಿಮಾನಿಗಳು ಕಂಬಿಯ ಹಿಂದೆ ಕೇಜ್ರಿವಾಲ್ ಅವರ ಫೋಟೋ ಇರುವ ಹಳದಿ ಟೀ ಶರ್ಟ್ ಧರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.