Tag: Arvind Kejriwal

  • ಒಂದು ವೇಳೆ ಜಾಮೀನು ನೀಡಿದ್ರೆ ಅಧಿಕೃತ ಕರ್ತವ್ಯ ನಿರ್ವಹಿಸುವಂತಿಲ್ಲ: ಸುಪ್ರೀಂ

    ಒಂದು ವೇಳೆ ಜಾಮೀನು ನೀಡಿದ್ರೆ ಅಧಿಕೃತ ಕರ್ತವ್ಯ ನಿರ್ವಹಿಸುವಂತಿಲ್ಲ: ಸುಪ್ರೀಂ

    • ಮೇ 20ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

    ನವದೆಹಲಿ: ಒಂದು ವೇಳೆ ಮಧ್ಯಂತರ ಜಾಮೀನು (Interim Bail) ನೀಡಿದರೆ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ (Supreme Court) ಹೇಳಿದೆ.

    ಈ ಮೂಲಕ ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ (Judicial Custody) ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.

    ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ, ಲೋಕಸಭಾ ಚುನಾವಣೆ (Lok Sabha Election) ಹಿನ್ನಲೆ ನಾವು ನಿಮ್ಮ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸುತ್ತಿದ್ದೇವೆ. ಚುನಾವಣೆ ಇಲ್ಲದಿದ್ದರೆ  ನಾವು ಪರಿಗಣಿಸುತ್ತಿರಲಿಲ್ಲ ಎಂದು ಹೇಳಿತು. ಇದನ್ನೂ ಓದಿ: ಬಿಜೆಪಿ ಸೇರ್ಪಡೆಯಾದ ಕಾಂಗ್ರೆಸ್ ವಕ್ತಾರೆ ರಾಧಿಕಾ ಖೇರಾ

    ಜಾರಿ ನಿರ್ದೇಶನಾಲಯದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮಧ್ಯಂತರ ಜಾಮೀನು ಅರ್ಜಿ ನೀಡುವುದನ್ನು ತೀವ್ರವಾಗಿ ವಿರೋಧಿಸಿದರು. ದಯವಿಟ್ಟು ರಾಜಕೀಯ ನಾಯಕನನ್ನು ಪ್ರತ್ಯೇಕ ವರ್ಗ ಎಂದು ಗುರುತಿಸಬೇಡಿ ಮತ್ತು ಅವರನ್ನು ಸಾಮಾನ್ಯರಿಂದ ಬೇರ್ಪಡಿಸಬೇಡಿ. 1.5 ವರ್ಷಗಳಲ್ಲಿ ಇಡಿ ಏನನ್ನೂ ಮಾಡಿಲ್ಲ. ಚುನಾವಣೆಯ ಸಮಯದಲ್ಲಿ ಅವರನ್ನು ಬಂಧಿಸಿದೆ ಎನ್ನುವ ಅಭಿಪ್ರಾಯ ಇದೆ. ಇದು ಸರಿಯಾದ ಅಭಿಪ್ರಾಯವಲ್ಲ ಎಂದು ಅವರು ಹೇಳಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ನಿಷ್ಪ್ರಯೋಜಕ- SP ನಾಯಕ ವಿವಾದಾತ್ಮಕ ಹೇಳಿಕೆ

    ಚುನಾವಣೆಗಳನ್ನು ಉಲ್ಲೇಖಿಸಿ ಕೇಜ್ರಿವಾಲ್ ಜಾಮೀನು ನೀಡಿವುದು ಕೆಟ್ಟ ಸಂಪ್ರದಾಯ. ಒಂದು ವೇಳೆ ನೀಡಿದರೆ ಇತರರು ಇದೇ ರೀತಿಯ ವಿನಾಯಿತಿಗಳನ್ನು ಬಯಸುತ್ತಾರೆ. ಆದಾಗ್ಯೂ ರಾಜಕಾರಣಿಗಳಿಗೆ ಯಾವುದೇ ವಿಶೇಷ ವಿನಾಯಿತಿಯನ್ನು ರಚಿಸುತ್ತಿಲ್ಲ. ಆದರೆ ಸಾರ್ವತ್ರಿಕ ಚುನಾವಣೆಗಳು ಬಾಕಿಯಿದೆ ಎಂಬ ಅಂಶವನ್ನು ಗಣನೆಗೆ ತೆಗೆದುಕೊಂಡು ಆದೇಶವನ್ನು ನೀಡುತ್ತಿದೆ ಎಂದು ನ್ಯಾಯಾಲಯ ಹೇಳಿತು‌.

    ಈ ನಡುವೆ ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ಪ್ರಶ್ನಿಸಿದ ಪೀಠ, ಚುನಾವಣೆಗಳ ಹಿನ್ನೆಲೆಯಲ್ಲಿ ನಾವು ಮಧ್ಯಂತರ ಜಾಮೀನು ನೀಡುತ್ತೇವೆ ಎಂದಿಟ್ಟುಕೊಳ್ಳಿ. ನಂತರ ನೀವು ಕಚೇರಿಗೆ ಹಾಜರಾದರೆ ಘರ್ಷಣೆಗೆ ದಾರಿ ಮಾಡಿಕೊಡುತ್ತದೆ. ಸರ್ಕಾರದ ಕೆಲಸದಲ್ಲಿ ಹಸ್ತಕ್ಷೇಪ ಮಾಡಲು ನಾವು ಬಯಸುವುದಿಲ್ಲ. ಮಧ್ಯಂತಜಾಮೀನು ನೀಡಬೇಕೇ ಬೇಡವೇ ಎನ್ನುವುದು ಪರಿಶೀಲಿಸಲಿದ್ದೇವೆ. ಮೇ 9 ಅಥವಾ ಮುಂದಿನ ವಾರ ಮತ್ತೆ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ತಿಳಿಸಿ ವಿಚಾರಣೆಯನ್ನು ಮುಂದೂಡಿತು.

    ನ್ಯಾಯಾಂಗ ಬಂಧನ ವಿಸ್ತರಣೆ:  ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯ ಅರವಿಂದ್‌ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮೇ 20ರವರೆಗೆ ವಿಸ್ತರಿಸಿ ಆದೇಶಿಸಿದೆ.

  • ಕೇಜ್ರಿವಾಲ್ ವಿರುದ್ಧ ಎನ್‍ಐಎ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸು

    ಕೇಜ್ರಿವಾಲ್ ವಿರುದ್ಧ ಎನ್‍ಐಎ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸು

    ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ (VK Saxena) ಅವರು ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ವಿರುದ್ಧ ಎನ್‍ಐಎ (NIA) ತನಿಖೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

    ಕೇಜ್ರಿವಾಲ್ ವಿರುದ್ಧ ನಿಷೇಧಿತ ಭಯೋತ್ಪಾದಕ ಸಂಘಟನೆ `ಸಿಖ್ಸ್ ಫಾರ್ ಜಸ್ಟೀಸ್’ನಿಂದ ದೇಣಿಗೆ ಪಡೆದ ಆರೋಪದ ಮೇಲೆ ಎನ್‍ಐಎ ತನಿಖೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ರಾಜಭವನ ಮೂಲಗಳು ತಿಳಿಸಿವೆ.

    ಈ ಸಂಬಂಧ ಸಕ್ಸೆನಾ ಅವರು ಕೇಂದ್ರ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಕೇಜ್ರಿವಾಲ್ ನೇತೃತ್ವದ ಎಎಪಿಯು ದೇವೇಂದ್ರ ಪಾಲ್ ಭುಲ್ಲರ್ ಬಿಡುಗಡೆಗೆ ಅನುಕೂಲವಾಗುವಂತೆ ಉಗ್ರ ಖಲಿಸ್ತಾನಿ ಗುಂಪುಗಳಿಂದ ದೇಣಿಗೆ ಪಡೆದಿರುವ ಬಗ್ಗೆ ತಮಗೆ ದೂರು ಬಂದಿದೆ. ದೂರುದಾರರು ಕಳುಹಿಸಿರುವ ಸಾಕ್ಷ್ಯಗಳನ್ನು ವಿಧಿವಿಜ್ಞಾನ ಪರೀಕ್ಷೆ ಒಳಪಡಿಸುವುದು ಹಾಗೂ ಈ ಪ್ರಕರಣದ ತನಿಖೆ ಎನ್‍ಐಎಗೆ ವಹಿಸುವ ಅಗತ್ಯವಿದೆ ಎಂದು ಸಕ್ಸೆನಾ ಹೇಳಿದ್ದಾರೆ.

    ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಮುಂದಾಗಿರುವ ಹೊತ್ತಲ್ಲೇ ಸಕ್ಸೆನಾ ಅವರ ಈ ಶಿಫಾರಸು ಕೇಜ್ರಿವಾಲ್ ಅವರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ.

    ಎನ್‍ಐಎ ತನಿಖೆ ಶಿಫಾರಸು ಬಿಜೆಪಿಯ (BJP )ಮತ್ತೊಂದು ಪಿತೂರಿ ಎಂದು ಆಪ್ (AAP) ಆರೋಪಿಸಿದೆ. ಕೇಜ್ರಿವಾಲ್ ಪ್ರಸ್ತುತ ನೂತನ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

  • ಚುನಾವಣೆ ಕಾರಣಕ್ಕೆ ಮೇ 7 ರಂದು ಕೇಜ್ರಿವಾಲ್‌ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ: ಸುಪ್ರೀಂ

    ಚುನಾವಣೆ ಕಾರಣಕ್ಕೆ ಮೇ 7 ರಂದು ಕೇಜ್ರಿವಾಲ್‌ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ: ಸುಪ್ರೀಂ

    ನವದೆಹಲಿ: 2024 ರ ಸಾರ್ವತ್ರಿಕ ಚುನಾವಣೆಗಳ ಕಾರಣ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮಧ್ಯಂತರ ಜಾಮೀನಿಗೆ ಸಂಬಂಧಿಸಿದಂತೆ ವಾದಗಳನ್ನು ಮೇ 7 ರಂದು ಆಲಿಸಬಹುದು ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ.

    ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ವಿಚಾರಣೆ ನಡೆಸಿತು. ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧನದ ವಿರುದ್ಧ ಕೇಜ್ರಿವಾಲ್ ಅವರು ಮನವಿ ಸಲ್ಲಿಸಿದ್ದಾರೆ. ಮಧ್ಯಂತರ ಜಾಮೀನಿನ ಪ್ರಶ್ನೆಯ ಕುರಿತು ವಾದಗಳನ್ನು ಮೇ 7 ರಂದು ಆಲಿಸಬಹುದು ಎಂದು ಪೀಠವು ಹೇಳಿದೆ. ಇದನ್ನೂ ಓದಿ: ಕೇಜ್ರಿವಾಲ್‌, ಕೆ.ಕವಿತಾಗೆ ಜೈಲೇ ಗತಿ – ನ್ಯಾಯಾಂಗ ಬಂಧನ ಮತ್ತೆ 14 ದಿನ ವಿಸ್ತರಣೆ

    ಪ್ರಕರಣದ ವಿಚಾರಣೆಯನ್ನು ಮಂಗಳವಾರ ಬೆಳಗ್ಗೆಗೆ ಪೋಸ್ಟ್ ಮಾಡುತ್ತೇವೆ. ಚುನಾವಣೆಯ ಕಾರಣದಿಂದ ನಾವು ಮಧ್ಯಂತರ ಜಾಮೀನಿನ ಪ್ರಶ್ನೆಯನ್ನು ಪರಿಗಣಿಸಬಹುದು. ತಾನು ಅಂತಿಮವಾಗಿ ಏನನ್ನೂ ನಿರ್ಧರಿಸಿಲ್ಲ. ವಿಚಾರಣೆಯು ಶೀಘ್ರದಲ್ಲೇ ಮುಕ್ತಾಯಗೊಳ್ಳುವ ಸಾಧ್ಯತೆಯಿಲ್ಲದಿದ್ದರೆ ಅಂತಹ ಮಧ್ಯಂತರ ಪರಿಹಾರವನ್ನು ಪರಿಗಣಿಸಬಹುದು ಎಂದು ವಕೀಲರಿಗೆ ತಿಳಿಸುವುದಾಗಿ ಪೀಠವು ಸ್ಪಷ್ಟಪಡಿಸಿತು.

    ಜಾಮೀನು ನೀಡುವುದು ಅಥವಾ ಇಲ್ಲವೇ ಎಂಬುದರ ಕುರಿತು ಏನನ್ನೂ ಹೇಳುತ್ತಿಲ್ಲ. ನಾವು ನೀಡಬಹುದು ಅಥವಾ ನೀಡದೇ ಇರಬಹುದು. ನಾವು ನಿಮಗೆ ಮುಕ್ತವಾಗಿರಬೇಕು. ಏಕೆಂದರೆ ಎರಡೂ ಕಡೆಯವರು ಆಶ್ಚರ್ಯಪಡಬೇಕಾಗಿಲ್ಲ ಎಂದು ಪೀಠವು ಎಎಸ್‌ಜಿ ರಾಜು ಮತ್ತು ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿಗೆ ಪೀಠ ತಿಳಿಸಿದೆ. ಇದನ್ನೂ ಓದಿ: ಜೈಲಿನಲ್ಲಿ ಕೇಜ್ರಿವಾಲ್‌ರನ್ನ ನಿಧಾನಗತಿಯಲ್ಲಿ ಸಾವಿನತ್ತ ತಳ್ಳಲಾಗ್ತಿದೆ: ಆಪ್ ಆರೋಪ

    ವಿಚಾರಣೆಯ ವೇಳೆ ಪೀಠವು ದೆಹಲಿಯಲ್ಲಿ ಚುನಾವಣಾ ದಿನಾಂಕಗಳ ಬಗ್ಗೆಯೂ ಕೇಳಿತು. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಕೇಜ್ರಿವಾಲ್ ಅವರು ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದರು.

  • ಚುನಾವಣೆ ಮುಂಚಿತವಾಗಿ ಕೇಜ್ರಿವಾಲ್ ಬಂಧನ ಮಾಡಿದ್ಯಾಕೆ – ಇಡಿಗೆ ಸುಪ್ರೀಂ ಪ್ರಶ್ನೆ

    ಚುನಾವಣೆ ಮುಂಚಿತವಾಗಿ ಕೇಜ್ರಿವಾಲ್ ಬಂಧನ ಮಾಡಿದ್ಯಾಕೆ – ಇಡಿಗೆ ಸುಪ್ರೀಂ ಪ್ರಶ್ನೆ

    ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ (Delhi liquor Policy)  ತಮ್ಮ ಬಂಧನದ ಅವಧಿಯನ್ನು ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ಮುಂದಿನ ವಿಚಾರಣೆ ವೇಳೆಗೆ ಐದು ಮೂಲಭೂತ ಪ್ರಶ್ನೆಗಳಿಗೆ ಉತ್ತರಿಸಲು ತಯಾರಾಗಿ ಬರುವಂತೆ ಇಡಿ ಪರ ವಕೀಲರಿಗೆ ಸೂಚನೆ ನೀಡಿದೆ.

    ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ, ಪ್ರಕರಣದಲ್ಲಿ ಕೇಜ್ರಿವಾಲ್ ಹೇಗೆ ಸಂಬಂಧ ಹೊಂದಿದ್ದಾರೆ? ಮನೀಶ್ ಸಿಸೋಡಿಯಾ ಪ್ರಕರಣದಲ್ಲಿ ಎರಡು ಭಾಗಗಳಿವೆ. ಆ ಪೈಕಿ ಒಂದು ಅವರ ಪರವಾಗಿ ಮತ್ತೊಂದು ಅವರ ವಿರುದ್ಧವಾಗಿದೆ. ಇದರ ಯಾವ ಭಾಗದಲ್ಲಿ ಕೇಜ್ರಿವಾಲ್ ಇದ್ದಾರೆ ಇದಕ್ಕೆ ಉತ್ತರಿಸಬೇಕು ಎಂದು ಪೀಠ ಸೂಚಿಸಿದೆ. ಇದನ್ನೂ ಓದಿ: ವಿದೇಶದ ಮತದಾರರಿಗೆ ಭಟ್ಕಳ ಜಮಾತ್‍ಗಳಿಂದ ಗಾಳ- ವಿಮಾನ ಟಿಕೆಟ್ ಆಫರ್

    ಜಾಮೀನಿಗೆ ಅರ್ಜಿ ಸಲ್ಲಿಸುವ ಬದಲು ಕೇಜ್ರಿವಾಲ್ ಬಂಧನ ಮತ್ತು ರಿಮಾಂಡ್ ವಿರುದ್ಧ ಬರುತ್ತಿರುವ ಕಾರಣ ಪಿಎಂಎಲ್‍ಎ ಕಾಯ್ದೆಯ ಸೆಕ್ಷನ್ 19 ಅನ್ನು ಹೇಗೆ ಅರ್ಥೈಸಬೇಕು? ವಿಶೇಷವಾಗಿ ಸೆಕ್ಷನ್ 8ರ ತೀರ್ಪು ಪ್ರಕ್ರಿಯೆಗೆ 365 ದಿನಗಳ ಗರಿಷ್ಠ ಸಮಯದ ಮಿತಿಯನ್ನು ಸೂಚಿಸುತ್ತದೆ. ಸ್ವಾತಂತ್ರ್ಯವು ಅತ್ಯಂತ ಮಹತ್ವದ್ದಾಗಿದೆ. ನಾವು ಅದನ್ನು ನಿರಾಕರಿಸಲು ಸಾಧ್ಯವಿಲ್ಲ ಈ ಬಗ್ಗೆ ನಿಲುವೇನು? ಎಲ್ಲಕ್ಕಿಂತ ಮುಖ್ಯವಾಗಿ ಚುನಾವಣೆ ಮುಂಚಿತವಾಗಿ ಅವರನ್ನು ಬಂಧಿಸಿದ್ದೇಕೆ ಎಂದು ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಪ್ರಶ್ನಿಸಿದೆ.

    ಇಡಿ ಪ್ರಶ್ನೆಗಳಿಗೂ ಮುನ್ನ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಕೇಜ್ರಿವಾಲ್ ಪರ ಎರಡು ಗಂಟೆಗೂ ಅಧಿಕ ಕಾಲ ಸುಧೀರ್ಘವಾಗಿ ವಾದ ಮಂಡಿಸಿದರು. ವಾದ ಆಲಿಸಿದ ಬಳಿಕ ನ್ಯಾಯಾಲಯ ಶುಕ್ರವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. ಇದನ್ನೂ ಓದಿ: ತುರ್ತು ಪರಿಸ್ಥಿತಿಗೆ ಕಾಂಗ್ರೆಸ್ ಪತನ; ಮೊದಲ ಕಾಂಗ್ರೆಸ್ಸೇತರ ಸರ್ಕಾರ ತಂದ ಚುನಾವಣೆಯಲ್ಲಿ ಏನಾಯ್ತು?

  • ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ, ಇನ್ಸುಲಿನ್ ಡೋಸ್ ಮುಂದುವರಿಸಲು ಏಮ್ಸ್ ಮೆಡಿಕಲ್ ಬೋರ್ಡ್ ಸಲಹೆ

    ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ, ಇನ್ಸುಲಿನ್ ಡೋಸ್ ಮುಂದುವರಿಸಲು ಏಮ್ಸ್ ಮೆಡಿಕಲ್ ಬೋರ್ಡ್ ಸಲಹೆ

    ನವದೆಹಲಿ: ಹೊಸ ಅಬಕಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟು ತಿಹಾರ್ ಜೈಲಿನಲ್ಲಿರುವ (Tihar Jail) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಆರೋಗ್ಯ (Health) ಉತ್ತಮವಾಗಿದ್ದು, ಈಗಾಗಲೇ ನೀಡಿರುವ ಔಷಧಿಗಳನ್ನೇ ಮುಂದುವರಿಸುವಂತೆ ಏಮ್ಸ್‌ನ (AIIMS) ತಜ್ಞ ವೈದ್ಯರ ತಂಡ ತಿಳಿಸಿದೆ.

    ದೆಹಲಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ರಚಿಸಲಾದ ಐದು ಸದಸ್ಯರ ವೈದ್ಯಕೀಯ ಮಂಡಳಿಯು ವಿಡಿಯೋ ಕಾನ್ಫರೆನ್ಸ್ (Video Conference) ಮೂಲಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ತಪಾಸಣೆ ನಡೆಸಿದೆ. ತಿಹಾರ್ ಜೈಲಿನ ಇಬ್ಬರು ವೈದ್ಯರು ಕೂಡ ಭಾಗವಹಿಸಿದ್ದು, ಸುಮಾರು ಅರ್ಧ ಗಂಟೆ ಕಾಲ ನಡೆಯಿತು. ತಪಾಸಣೆ ಬಳಿಕ ಕೇಜ್ರಿವಾಲ್ ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ. ಅವರು ಈಗಾಗಲೇ ತೆಗೆದುಕೊಳ್ಳುತ್ತಿರುವ ಔಷಧಿಗಳನ್ನು ಮುಂದುವರಿಸಲಿ. ಜೈಲಿನಲ್ಲಿ ಎರಡು ಯೂನಿಟ್ ಇನ್ಸುಲಿನ್ ಡೋಸ್ (Insulin Dose) ಅನ್ನು ಮುಂದುವರಿಸುವಂತೆ ಏಮ್ಸ್ ವೈದ್ಯರು ಸಲಹೆ ನೀಡಿದರು ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ಹೆಲಿಕಾಪ್ಟರ್‌ ಒಳಗೆ ಆಯತಪ್ಪಿ ಬಿದ್ದ ದೀದಿ- ಸಣ್ಣಪುಟ್ಟ ಗಾಯ

    ಈ ವಾರದ ಆರಂಭದಲ್ಲಿ ಅವರ ಸಕ್ಕರೆ ಮಟ್ಟವು (Sugar Level) 320ಕ್ಕೆ ಏರಿದ ನಂತರ ಎಎಪಿ ಮುಖ್ಯಸ್ಥರಿಗೆ ತಿಹಾರ್ ಜೈಲಿನಲ್ಲಿ ಮೊದಲ ಇನ್ಸುಲಿನ್ ಡೋಸೇಜ್ ನೀಡಲಾಯಿತು. ಇದಕ್ಕೂ ಮುನ್ನ ಸಕ್ಕರೆ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ತಜ್ಞ ವೈದ್ಯರೊಂದಿಗೆ ನಿತ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಸಲಹೆ ಪಡೆಯಲು ಕೋರಿ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಜಾ ಮಾಡಿದ್ದ ಕೋರ್ಟ್ ಏಮ್ಸ್ ವೈದ್ಯರ ಸಹಕಾರ ಕೋರಿತ್ತು. ನ್ಯಾಯಾಲಯವು ಮನೆಯಲ್ಲಿ ಬೇಯಿಸಿದ ಆಹಾರವನ್ನು ಸಹ ಅನುಮತಿಸದೆ ಕೇಜ್ರಿವಾಲ್ ಅವರು ವೈದ್ಯರು ನೀಡಿದ ಆಹಾರದ ಚಾರ್ಟ್ ಅನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದೆ. ಮಧುಮೇಹಕ್ಕೆ ಇನ್ಸುಲಿನ್ ಮತ್ತು ಇತರ ಔಷಧಿಗಳನ್ನು ನಿರಾಕರಿಸುವ ಮೂಲಕ ದೆಹಲಿ ಸಿಎಂ ಅವರನ್ನು ಜೈಲಿನಲ್ಲಿ ಕೊಲ್ಲಲು ಸಂಚು ರೂಪಿಸಲಾಗಿದೆ ಎಂದು ಎಎಪಿ ಆರೋಪಿಸಿತ್ತು. ಇದನ್ನೂ ಓದಿ: ಆಪ್ ಶಾಸಕ ಅಮಾನತುಲ್ಲಾ ಖಾನ್‌ಗೆ ಜಾಮೀನು

  • ಚುನಾವಣಾ ಅಖಾಡಕ್ಕೆ ಸುನೀತಾ ಕೇಜ್ರಿವಾಲ್ – ನಾಳೆ ದೆಹಲಿಯಲ್ಲಿ ರೋಡ್ ಶೋ

    ಚುನಾವಣಾ ಅಖಾಡಕ್ಕೆ ಸುನೀತಾ ಕೇಜ್ರಿವಾಲ್ – ನಾಳೆ ದೆಹಲಿಯಲ್ಲಿ ರೋಡ್ ಶೋ

    ನವದೆಹಲಿ: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Delhi CM Arvind Kejriwal) ಅವರ ಪತ್ನಿ ಸುನಿತಾ ಕೇಜ್ರಿವಾಲ್‌ (Sunitha Kejriwal) ಅವರನ್ನು ಲೋಕಸಭೆ ಚುನಾವಣಾ (Lok Sabha Election) ಪ್ರಚಾರ ಅಖಾಡಕ್ಕೆ ಇಳಿಸಲು ಆಪ್ (AAP) ನಿರ್ಧರಿಸಿದೆ.

    ದೆಹಲಿ ಮದ್ಯ ಹಗರಣ (Delhi Liquor Scam) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ನ್ಯಾಯಾಂಗ ಬಂಧನಲ್ಲಿದ್ದಾರೆ. ಈ ಹಿನ್ನಲೆ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಆಪ್‌ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ನಾಳೆಯಿಂದ ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಸುನೀತಾ ಕೇಜ್ರಿವಾಲ್ ಪ್ರಚಾರ ಆರಂಭಿಸುವ ಸಾಧ್ಯತೆ ಇದೆ. ಸುನೀತಾ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿರುವುದು ಇದೇ ಮೊದಲು. ಇದಕ್ಕೂ ಮುನ್ನ ಅವರು ರಾಜಕೀಯವಾಗಿ ಗುರುತಿಸಿಕೊಂಡಿರಲಿಲ್ಲ. ಇದನ್ನೂ ಓದಿ: ಕಾರು ಅಪಫಾತ – ಶಾಸಕ ಎ.ಆರ್ ಕೃಷ್ಣಮೂರ್ತಿ ಅಪಾಯದಿಂದ ಪಾರು

    ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಸುನೀತಾ ಕೇಜ್ರಿವಾಲ್ ಅವರು ವೀಡಿಯೊ ಸಂದೇಶಗಳು ಮತ್ತು ಪತ್ರಿಕಾಗೋಷ್ಠಿಗಳ ಮೂಲಕ ಮುನ್ನಲೆಗೆ ಬಂದಿದ್ದಾರೆ. ಕೇಜ್ರಿವಾಲ್ ಬಂಧನ ಖಂಡಿಸಿ ದೆಹಲಿಯಲ್ಲಿ ವಿಪಕ್ಷಗಳು ನಡೆಸಿದ ಸಮಾವೇಶದಲ್ಲಿ ಭಾಗಿಯಾಗಿ ಭಾಷಣ ಮಾಡಿದ್ದರು. ಇತ್ತಿಚೇಗೆ ಛತ್ತಿಸ್‌ಘಡದಲ್ಲಿ ನಡೆದ INDIA ಒಕ್ಕೂಟದ ಸಭೆಯಲ್ಲಿ ಅವರು ಪಕ್ಷವನ್ನು ಪ್ರತಿನಿಧಿಸಿದ್ದರು.  ಇದನ್ನೂ ಓದಿ: ಡೇಟಾ ಟ್ರಾಫಿಕ್‌- ಚೀನಾ ಕಂಪನಿ ಹಿಂದಿಕ್ಕಿದ ರಿಲಯನ್ಸ್‌

    ಈ‌ ನಡುವೆ ನ್ಯಾಯಾಂಗ ಬಂಧನದಲ್ಲಿರುವ ಅರವಿಂದ್ ಕೇಜ್ರಿವಾಲ್ ತಮ್ಮ ಬಂಧನವನ್ನ ಪ್ರಶ್ನಿಸಿ ಸುಪ್ರೀಂಕೋರ್ಟ್ (Supreme Court) ಮೆಟ್ಟಿಲೇರಿದ್ದು ಇಡಿ (ED) ಈಗ ಅಫಿಡವಿಟ್ ಸಲ್ಲಿಸಿದೆ. 9 ಬಾರಿ ಸಮನ್ಸ್ ನೀಡಿದ್ದರೂ ಅರವಿಂದ್ ಕೇಜ್ರಿವಾಲ್ ವಿಚಾರಣೆಗೆ ಸಹಕರಿಸಲಿಲ್ಲ, ವಿಚಾರಣೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದರು ಈ ಕಾರಣಕ್ಕೆ ಅವರನ್ನು ಬಂಧಿಸುವ ಅನಿವಾರ್ಯತೆ ಸೃಷ್ಟಿಯಾಯಿತು ಎಂದು ಹೇಳಿದೆ.

    ಅಕ್ರಮ ಹಣ ವರ್ಗಾವಣೆಯ ಅಪರಾಧದಲ್ಲಿ ತಪ್ಪಿತಸ್ಥನೆಂದು ಸಾಬೀತು ಪಡಿಸಲು ಇಡಿ ಬಳಿ ಸಾಕ್ಷ್ಯಗಳಿದೆ. ಕೇಜ್ರಿವಾಲ್ ಅವರನ್ನು ಪ್ರಾಮಾಣಿಕವಾಗಿ ಬಂಧಿಸಲಾಗಿದೆಯೇ ಹೊರತು ಯಾವುದೇ ದುರುದ್ದೇಶ ಅಥವಾ ಬಾಹ್ಯ ಕಾರಣಗಳಿಗಾಗಿ ಅಲ್ಲ ಎಂದ ಇಡಿ ದುರುದ್ದೇಶಪೂರ್ವಕವಾಗಿ ಬಂಧಿಸಿದೆ ಎನ್ನುವ ಆರೋಪ ನಿರಾಕರಿಸಿದೆ. ಈ ಅಂಶಗಳ ಮೇಲೆ ಕೋರ್ಟ್ ಶೀಘ್ರದಲ್ಲಿ ವಿಚಾರಣೆ ನಡೆಸಲಿದೆ.

     

  • ಕೇಜ್ರಿವಾಲ್‌, ಕೆ.ಕವಿತಾಗೆ ಜೈಲೇ ಗತಿ – ನ್ಯಾಯಾಂಗ ಬಂಧನ ಮತ್ತೆ 14 ದಿನ ವಿಸ್ತರಣೆ

    ಕೇಜ್ರಿವಾಲ್‌, ಕೆ.ಕವಿತಾಗೆ ಜೈಲೇ ಗತಿ – ನ್ಯಾಯಾಂಗ ಬಂಧನ ಮತ್ತೆ 14 ದಿನ ವಿಸ್ತರಣೆ

    ನವದೆಹಲಿ: ಲೋಕಸಭಾ ಚುನಾವಣೆ ಹೊತ್ತಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಹಾಗೂ ಬಿಆರ್‌ಎಸ್‌ ನಾಯಕಿ ಕೆ.ಕವಿತಾ (K.Kavitha) ಅವರಿಗೆ ಜೈಲೇ ಗತಿಯಾಗಿದೆ. ಇಬ್ಬರ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನಗಳ ವರೆಗೆ ವಿಸ್ತರಣೆಯಾಗಿದೆ.

    ಹೊಸ ಮದ್ಯ ನೀತಿ ಹಗರಣದಲ್ಲಿ ಕಳೆದ ತಿಂಗಳು ಬಂಧಿಸಲಾದ ವಿಪಕ್ಷಗಳ ನಾಯಕರಿಗೆ 14 ದಿನಗಳ ನ್ಯಾಯಾಂಗ ಬಂಧನ ಮತ್ತೆ ವಿಸ್ತರಿಸಲಾಗಿದೆ. ದೆಹಲಿಯ ತಿಹಾರ್ ಜೈಲಿನಲ್ಲಿರುವ ಕೇಜ್ರಿವಾಲ್‌ ಮತ್ತು ಕವಿತಾರನ್ನು ಮುಂದಿನ ಮೇ 7 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇದನ್ನೂ ಓದಿ: ಯಾವ ರೀತಿ ಜಾಹೀರಾತು ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆ ಕೇಳಿ: ಪತಂಜಲಿಗೆ ಸುಪ್ರೀಂ ಸೂಚನೆ

    ದೆಹಲಿ ಸಿಎಂ ಅವರ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಅಕ್ರಮ ಹಣ ವರ್ಗಾವಣೆಯಲ್ಲಿ ಮಾ.21 ಇಡಿ ತಮ್ಮನ್ನು ಬಂಧಿಸಿದ್ದನ್ನು ಪ್ರಶ್ನಿಸಿ ಕೇಜ್ರಿವಾಲ್‌ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಏ.15 ರಂದು ಅರ್ಜಿ ವಿಚಾರಣೆ ನಡೆಸಿತ್ತು. ಆದರೆ ಕೇಜ್ರಿವಾಲ್‌ಗೆ ತಕ್ಷಣ ಜೈಲಿನಿಂದ ಮುಕ್ತಿ ನೀಡಲು ನಿರಾಕರಿಸಿತು.

    ಆದರೆ ಕೇಜ್ರಿವಾಲ್‌ ಅವರು ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ಮೊದಲು ಪ್ರತಿಸ್ಪರ್ಧಿ ಮತ್ತು ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟದ ಸದಸ್ಯನ ವಿರುದ್ಧ ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ಚುನಾವಣೆಗೂ ಮುನ್ನವೇ ಖಾತೆ ತೆರೆದ ಬಿಜೆಪಿ – ʻಮ್ಯಾಚ್‌ ಫಿಕ್ಸಿಂಗ್‌ʼ ಎಂದ ಕಾಂಗ್ರೆಸ್‌

    ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ಪುತ್ರಿ ಕವಿತಾ ಅವರ ಜಾಮೀನು ಅರ್ಜಿ ವಿಚಾರಣೆಯು ಮೇ 2 ರಂದು ರೋಸ್‌ ಅವೆನ್ಯೂ ನ್ಯಾಯಾಲಯದಲ್ಲಿ ನಡೆಯಲಿದೆ. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವಾಜಾ ಅವರು ತಮ್ಮ ಆದೇಶವನ್ನು ಕಾಯ್ದಿರಿಸಿದ್ದಾರೆ. ಇಡಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವಾಗಲೇ ಕವಿತಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿತ್ತು.

  • ಜೈಲಿನಲ್ಲಿ ಕೇಜ್ರಿವಾಲ್‌ರನ್ನ ನಿಧಾನಗತಿಯಲ್ಲಿ ಸಾವಿನತ್ತ ತಳ್ಳಲಾಗ್ತಿದೆ: ಆಪ್ ಆರೋಪ

    ಜೈಲಿನಲ್ಲಿ ಕೇಜ್ರಿವಾಲ್‌ರನ್ನ ನಿಧಾನಗತಿಯಲ್ಲಿ ಸಾವಿನತ್ತ ತಳ್ಳಲಾಗ್ತಿದೆ: ಆಪ್ ಆರೋಪ

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಲ್ಲಿ (Tihar Jail) ನಿಧಾನಗತಿಯಲ್ಲಿ ಸಾವಿನತ್ತ ತಳ್ಳಲಾಗುತ್ತಿದೆ ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಆರೋಪಿಸಿದ್ದಾರೆ. ಜೈಲಿನೊಳಗೆ ಇನ್ಸುಲಿನ್ ಮತ್ತು ಕೇಜ್ರಿವಾಲ್ ಅವರ ವೈದ್ಯರ ಸಮಾಲೋಚನೆಗೆ ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿದ ಮರುದಿನವೇ ಈ ಆರೋಪ ಮಾಡಲಾಗಿದೆ.

    ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಟೈಪ್ -2 ಮಧುಮೇಹದಿಂದ ಬಳಲುತ್ತಿರುವ ಅರವಿಂದ್ ಕೇಜ್ರಿವಾಲ್‌ (Arvind Kejriwal) ಅವರಿಗೆ ಜೈಲು ಆಡಳಿತವು ಇನ್ಸುಲಿನ್ ನೀಡಲು ನಿರಾಕರಿಸುತ್ತಿದೆ. ಈ ಮೂಲಕ ಕೇಜ್ರಿವಾಲ್ ಅವರ ನಿಧಾನಗತಿಯ ಸಾವಿಗೆ ಪಿತೂರಿ ನಡೆಯುತ್ತಿದೆ ಎಂದು ನಾನು ಸಂಪೂರ್ಣ ಜವಾಬ್ದಾರಿಯಿಂದ ಹೇಳಲು ಬಯಸುತ್ತೇನೆ ಎಂದರು.

    ಈ ಮೊದಲು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ವಾದ ಮಂಡಿಸಿದ್ದ ಇಡಿ (ED) ಪರ ವಕೀಲರು, ಜಾಮೀನು ಪಡೆಯುವ ಉದ್ದೇಶದಿಂದ ಕೇಜ್ರಿವಾಲ್ ಅವರು ಮಾವು, ಸಿಹಿ ತಿನಿಸು ಸೇವಿಸಿ ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿತ್ತು. ಇದಕ್ಕೆ ಉತ್ತರಿಸಿದ ಕೇಜ್ರಿವಾಲ್ ಪರ ವಕೀಲರು, ಕ್ಷುಲ್ಲಕ ಆರೋಪ ಮಾಡಲಾಗುತ್ತಿದೆ. ಜಾಮೀನಿಗಾಗಿ ದೆಹಲಿ ಸಿಎಂ ಪಾರ್ಶ್ವವಾಯು ಅಪಾಯಕ್ಕೆ ಒಳಗಾಗಲು ಬಯಸುವುದಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ಮನೆಯಿಂದ ಕಳುಹಿಸಿದ 48 ಊಟಗಳಲ್ಲಿ ಕೇವಲ ಮೂರು ಬಾರಿ ಮಾತ್ರ ಮಾವಿನ ಹಣ್ಣಿತ್ತು – ಇಡಿ ಆರೋಪಕ್ಕೆ ಕೇಜ್ರಿವಾಲ್‌ ತಿರುಗೇಟು

  • ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು: ಆಪ್ ಸಚಿವೆ ಅತಿಶಿ ಗಂಭೀರ ಆರೋಪ

    ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು: ಆಪ್ ಸಚಿವೆ ಅತಿಶಿ ಗಂಭೀರ ಆರೋಪ

    ನವದೆಹಲಿ: ಬಂಧನದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಜೈಲಿನಲ್ಲಿ ಬಿಜೆಪಿ (BJP) ಹತ್ಯೆಯ ಸಂಚು ರೂಪಿಸಿದೆ ಎಂದು ಆಪ್‍ನ (AAP) ಸಚಿವೆ ಅತಿಶಿ (Atishi) ಗಂಭೀರ ಆರೋಪ ಮಾಡಿದ್ದಾರೆ.

    ನ್ಯಾಯಾಲಯದ ಮುಂದೆ ಇಡಿ ಅಧಿಕಾರಿಗಳು ಕೇಜ್ರಿವಾಲ್ ಉದ್ದೇಶಪೂರ್ವಕವಾಗಿ ಸಕ್ಕರೆ ಪ್ರಮಾಣವನ್ನು (Sugar Level) ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ ಬಳಿಕ ಅತಿಶಿ ಈ ಆರೋಪ ಮಾಡಿದ್ದಾರೆ. ಕೇಜ್ರಿವಾಲ್ ಟೈಪ್ 2 ಡಯಾಬಿಟಿಸ್ ರೋಗಿಯಾಗಿದ್ದಾರೆ. ಪದೇ ಪದೇ ಮನವಿ ಮಾಡಿದರೂ ಅವರಿಗೆ ಇನ್ಸುಲಿನ್ ನೀಡುತ್ತಿಲ್ಲ. ವೈದ್ಯರೊಂದಿಗೆ ವಿಡಿಯೋ ಸಮಾಲೋಚನೆಗೆ ಮಾಡಲಾದ ವಿನಂತಿಯನ್ನು ತಿರಸ್ಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮಾವಿನಹಣ್ಣು, ಸಿಹಿತಿಂಡಿ ಸೇವಿಸಿ ಕೇಜ್ರಿವಾಲ್ ಸಕ್ಕರೆ ಪ್ರಮಾಣ ಹೆಚ್ಚಿಸಿಕೊಳ್ತಿದ್ದಾರೆ- ಇಡಿ ಆರೋಪ

    ಚುನಾವಣೆಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಲು ಬಿಜೆಪಿಗೆ ಸಾಧ್ಯವಾಗಿಲ್ಲ. ಇದೇ ಕಾರಣಕ್ಕೆ ಅವರನ್ನು ಜೈಲಿನಲ್ಲಿಟ್ಟು ಕೊಲ್ಲಲು ಯೋಜನೆ ರೂಪಿಸಲಾಗುತ್ತಿದೆ. ಕೇಜ್ರಿವಾಲ್ ಅವರು ತೀವ್ರ ಮಧುಮೇಹದಿಂದ ಬಳಲುತ್ತಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ. ಅವರು ಕಳೆದ 30 ವರ್ಷಗಳಿಂದ ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಅವರು ಪ್ರತಿದಿನ 54 ಯೂನಿಟ್ ಇನ್ಸುಲಿನ್ ತೆಗೆದುಕೊಳ್ಳುತ್ತಾರೆ ಎಂದರು.

    ಯಾವುದೇ ವೈದ್ಯರಲ್ಲಿ ಕೇಳಿ, ಅಂತಹ ತೀವ್ರ ಮಧುಮೇಹ ಇರುವವರು ಮಾತ್ರ ಇಷ್ಟು ಇನ್ಸುಲಿನ್ ತೆಗೆದುಕೊಳ್ಳುತ್ತಾರೆ. ಅದಕ್ಕಾಗಿಯೇ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಅವರಿಗೆ ಮನೆಯಲ್ಲಿ ಬೇಯಿಸಿದ ಆಹಾರ ಮತ್ತು ವೈದ್ಯರು ಹೇಳಿದ ಆಹಾರವನ್ನು ತಿನ್ನಲು ಸೂಚಿಸಿದೆ ಎಂದರು.

    ಇಂದು ಭಾರತೀಯ ಜನತಾ ಪಕ್ಷವು ತನ್ನ ಅಂಗಸಂಸ್ಥೆ ಇಡಿ ಮೂಲಕ ಕೇಜ್ರಿವಾಲ್ ಆರೋಗ್ಯವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ. ಇಂದು ಇಡಿ ಪದೇ ಪದೇ ಸುಳ್ಳು ಹೇಳುತ್ತಿದೆ ಎಂದು ಇಡಿಯ ವಾದಗಳಿಗೆ ಅವರು ತಿರುಗೇಟು ನೀಡಿದರು. ಇದನ್ನೂ ಓದಿ: ಅಣಕು ಮತ ಎಣಿಕೆ ವೇಳೆ ಬಿಜೆಪಿಗೆ ಹೆಚ್ಚುವರಿ ಮತ – ವರದಿ ಸುಳ್ಳೆಂದ ಚುನಾವಣಾ ಆಯೋಗ

  • ಮಾವಿನಹಣ್ಣು, ಸಿಹಿತಿಂಡಿ ಸೇವಿಸಿ ಕೇಜ್ರಿವಾಲ್ ಸಕ್ಕರೆ ಪ್ರಮಾಣ ಹೆಚ್ಚಿಸಿಕೊಳ್ತಿದ್ದಾರೆ- ಇಡಿ ಆರೋಪ

    ಮಾವಿನಹಣ್ಣು, ಸಿಹಿತಿಂಡಿ ಸೇವಿಸಿ ಕೇಜ್ರಿವಾಲ್ ಸಕ್ಕರೆ ಪ್ರಮಾಣ ಹೆಚ್ಚಿಸಿಕೊಳ್ತಿದ್ದಾರೆ- ಇಡಿ ಆರೋಪ

    ನವದೆಹಲಿ: ಮಾವಿನಹಣ್ಣು, ಸಿಹಿತಿಂಡಿ ಮತ್ತು ಚಹಾ ಸೇವಿಸುವ ಮೂಲಕ ಜೈಲಿನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂದು ಇಡಿ ಆರೋಪಿಸಿದೆ. ಸಕ್ಕರೆ ಪ್ರಮಾಣ (Sugar Level) ಹೆಚ್ಚುತ್ತಿದ್ದು ಆರೋಗ್ಯ ಕಾರಣಗಳಿಗೆ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಇಡಿ ಕೇಜ್ರಿವಾಲ್ (Arvind Kejriwal) ವಿರುದ್ಧ ಆರೋಪಿಸಿದೆ.

    ಕೇಜ್ರಿವಾಲ್ ಜಾಮೀನು ಪಡೆಯಲೆಂದೇ ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಮಧುಮೇಹವಿದೆ ಎಂದು ಹೇಳಿಕೊಂಡ ಕಾರಣ ಅವರಿಗೆ ಮನೆಯಲ್ಲಿ ತಯಾರಿಸಿದ ಆಹಾರವನ್ನು ಅನುಮತಿಸಲಾಗಿದೆ. ಆದರೆ ಅವರು ಮಾವಿನಹಣ್ಣು, ಸಿಹಿತಿಂಡಿಗಳು ಮತ್ತು ಸಕ್ಕರೆಯನ್ನು ಸೇವಿಸುತ್ತಿದ್ದಾರೆ ಎಂದು ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ಜಾರಿ ನಿರ್ದೇಶನಾಲಯ (ED) ವಕೀಲ ಜೊಹೆಬ್ ಹೊಸೈನ್ ಆರೋಪಿಸಿದರು.

    ಕೇಜ್ರಿವಾಲ್ ಪರ ವಾದ ಮಂಡಿಸಿದ ವಕೀಲ ವಿವೇಕ್ ಜೈನ್, ಇಡಿ ಆರೋಪಗಳಿಗೆ ಆಕ್ಷೇಪ ವ್ಯಕ್ತಪಡಿಸಿದರು‌. ತನಿಖಾ ಸಂಸ್ಥೆ ಈ ಆರೋಪಗಳನ್ನು ಕೇವಲ ಮಾಧ್ಯಮಗಳಿಗಾಗಿ ಮಾಡುತ್ತಿದೆ ಎಂದರು. ಪ್ರಸ್ತುತ ಅರ್ಜಿಯನ್ನು ಹಿಂಪಡೆಯುತ್ತಿದ್ದು, ಉತ್ತಮವಾದ ಅರ್ಜಿಯನ್ನು ಸಲ್ಲಿಸುವುದಾಗಿ ಜೈನ್ ಹೇಳಿದರು. ಇದನ್ನೂಓದಿ: ಅಣಕು ಮತದಾನದಲ್ಲಿ ಬಿಜೆಪಿಗೆ ಅಧಿಕ ಮತ – ಇವಿಎಂ ಪರಿಶೀಲನೆಗೆ ಸುಪ್ರೀಂ ಸೂಚನೆ

    ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕಣದ ತನಿಖೆ ಭಾಗವಾಗಿ ಕೇಜ್ರಿವಾಲ್ ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ. ಈ ಮೊದಲು ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾ ಆಗಿತ್ತು. ಬಂಧನ ಕಾನೂನು ಬದ್ಧವಾಗಿದೆ ಇದನ್ನು ರಾಜಕೀಯ ಆಯಾಮದಲ್ಲಿ ನೋಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು ಮಧ್ಯಂತರ ಜಾಮೀನು ನೀಡಲು ನೀರಾಕರಿಸಿದ್ದು ವಿಚಾರಣೆ ಬಾಕಿ ಇದೆ.