ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಖಂಡಿಸಿ ನ್ಯಾಯಲಯಗಳಲ್ಲಿ ಪ್ರತಿಭಟನೆಗೆ ಕರೆ ನೀಡಿರುವ ಆಪ್ (AAP) ಕಾನೂನು ಘಟಕಕ್ಕೆ ದೆಹಲಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನ್ಯಾಯಲಯ ಆವರಣದಲ್ಲಿ ಪ್ರತಿಭಟನೆ ನಡೆಸುವುದು ಗಂಡಾಂತರ ಆಹ್ವಾನ ಮಾಡಿದಂತೆ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.
ಕೇಜ್ರಿವಾಲ್ ಬಂಧನ ಖಂಡಿಸಿ ರಾಷ್ಟ್ರ ರಾಜಧಾನಿಯ ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ಬುಧವಾರ ಪ್ರತಿಭಟನೆಗೆ ಎಎಪಿ ಕಾನೂನು ಘಟಕ ಕರೆ ನೀಡಿದ ಹಿನ್ನೆಲೆ ಈ ವಿಚಾರವನ್ನು ಹೈಕೋರ್ಟ್‌ನಲ್ಲಿ ಪ್ರಸ್ತಾಪಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಧೀಶರು ನಾಳೆ ಈ ಬಗ್ಗೆ ವಿಸ್ತೃತ ವಿಚಾರಣೆ ನಡೆಸುವುದಾಗಿ ಹೇಳಿದರು. ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ 7 ದಿನಗಳ ಕಾಲ ಇ.ಡಿ ಕಸ್ಟಡಿಗೆ
ಪ್ರತಿಭಟನೆ ಬಗ್ಗೆ ಚಿಂತಿಸಬೇಡಿ, ನ್ಯಾಯಾಲಯವನ್ನು ಯಾರು ತಡೆಹಿಡಿಯಲಾಗುವುದಿಲ್ಲ ಅಥವಾ ನಿಲ್ಲಿಸಲಾಗುವುದಿಲ್ಲ. ನ್ಯಾಯಾಲಯವನ್ನು ಸಂಪರ್ಕಿಸುವ ಜನರ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಆ ರೀತಿ ಯಾರಾದರೂ ಅದನ್ನು ಮಾಡಿದರೆ ಅವರು ಗಂಡಾಂತರ ಆಹ್ವಾನ ಮಾಡಿದಂತೆ. ಅಗತ್ಯವಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ನ್ಯಾಯಾಲಯ ಹೇಳಿತು.
ಹೊಸ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇ.ಡಿ ಬಂಧಿಸಿತ್ತು. ಮಾ.28 ರ ವರೆಗೆ ಕೇಜ್ರಿವಾಲ್ ಅವರನ್ನು ಇ.ಡಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ಹೊರಡಿಸಿದೆ. ಇದನ್ನೂ ಓದಿ: ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾಗೆ 14 ದಿನ ಜೈಲು
ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ (Delhi Liquor Scam) ಬಂಧನಕ್ಕೆ ಒಳಗಾಗಿರುವ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಖಲಿಸ್ತಾನಿ (Khalistani) ಗುಂಪುಗಳಿಂದ 16 ಮಿಲಿಯನ್ ಡಾಲರ್ (ಅಂದಾಜು 133.54 ಕೋಟಿ ರೂ.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ.
ಭಾರತಕ್ಕೆ ಬೇಕಾಗಿರುವ ಖಾಲಿಸ್ತಾನಿ ಉಗ್ರ ಗುರ್ಪತ್‌ವಂತ್ ಸಿಂಗ್ ಪನ್ನುನ್ (Gurpatwant Pannun) ಮಾತನಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ವಿಡಿಯೋದಲ್ಲಿ ಆತ ಆಪ್ ಪಕ್ಷಕ್ಕೆ 2014 ಮತ್ತು 2022 ರ ನಡುವೆ ಹಣ ಸಂದಾಯವಾಗಿದೆ ಎಂದು ಹೇಳಿದ್ದಾನೆ.
BIG claim by US based Khalistani Terrorist Gurpatwant Singh Pannun says Aam Aadmi Party took $16 million between 2014-2022 from Khalistans.
Pannun Claims Delhi CM Kejriwal had a meeting with Pro Khalistan groups in Gurdwara Richmond Hills, NY in 2014 where Kejriwal promised to… pic.twitter.com/xzzo2MxsQS
1993ರ ದೆಹಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಖಲಿಸ್ತಾನಿ ಉಗ್ರ ದೇವೇಂದರ್ ಪಾಲ್ ಸಿಂಗ್ ಭುಲ್ಲಾರ್‌ನನ್ನು ಬಿಡುಗಡೆ ಮಾಡಿಸುತ್ತೇನೆ ಎಂದು ನಂಬಿಸಿ ನಮ್ಮಿಂದ ಕೇಜ್ರಿವಾಲ್ ಹಣ ಪಡೆದಿದ್ದಾರೆ ಎಂದು ಪನ್ನು ಆರೋಪಿಸಿದ್ಧಾನೆ. 1993ರ ದೆಹಲಿ ಬಾಂಬ್ ಸ್ಫೋಟದಲ್ಲಿ 9 ಮಂದಿ ಮೃತಪಟ್ಟು 31 ಮಂದಿ ಗಾಯಗೊಂಡಿದ್ದರು. ಇದನ್ನೂ ಓದಿ: ತೆಲಂಗಾಣದಲ್ಲಿ ಫೋನ್ ಕದ್ದಾಲಿಕೆ ಕೇಸ್ – ಇಂಟಲಿಜೆನ್ಸ್ ಬ್ಯೂರೋ ಮಾಜಿ ಮುಖ್ಯಸ್ಥ ಆರೋಪಿ ನಂ.1
2014ರಲ್ಲಿ ನ್ಯೂಯಾರ್ಕ್‌ನಲ್ಲಿರುವ ಗುರುದ್ವಾರದಲ್ಲಿ ಕೇಜ್ರಿವಾಲ್ ಅವರನ್ನು ನಾನು ಭೇಟಿಯಾಗಿ ಮಾತುಕತೆ ನಡೆಸಿದ್ದೆ. ಈ ವೇಳೆ ದೇವೇಂದರ್ ಪಾಲ್ ಸಿಂಗ್ ಭುಲ್ಲಾರ್ ಬಿಡುಗಡೆಗೊಳಿಸಿವ ವಾಗ್ದಾನ ನೀಡಿದ್ದರು ಎಂದು ಆರೋಪಿಸಿದ್ದಾನೆ.
ಆಪ್ ಖಲಿಸ್ತಾನಿ ಗುಂಪುಗಳಿಂದ ಹಣವನ್ನು ಪಡೆಯುತ್ತಿದೆ ಎಂದು ಪನ್ನುನ್ ಆರೋಪಿಸಿದ್ದು ಇದೇ ಮೊದಲಲ್ಲ. ಜನವರಿಯಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಅಮೆರಿಕ ಮತ್ತು ಕೆನಡಾದಲ್ಲಿನ ಖಲಿಸ್ತಾನ್ ಬೆಂಬಲಿಗರಿಂದ 6 ಮಿಲಿಯನ್ ಡಾಲರ್ ಪಡೆದಿದ್ದಾರೆ ಎಂದು ಹೇಳಿದ್ದ. ಇದನ್ನೂ ಓದಿ: ಯುವಕರು ಏನಾದ್ರೂ ಮೋದಿ ಮೋದಿ ಅಂದ್ರೆ ಕಪಾಳಕ್ಕೆ ಹೊಡಿಯಬೇಕು: ಶಿವರಾಜ್ ತಂಗಡಗಿ
ಪನ್ನುನ್ ಭಾರತದಲ್ಲಿ ನಿಷೇಧಿಸಲ್ಪಟ್ಟಿರುವ ಅಮೆರಿಕ ಮೂಲದ ಸಿಖ್ ಫಾರಿ ಜಸ್ಟಿಸ್‌ನ (ಎಸ್‌ಎಫ್‌ಜೆ) ಮುಖ್ಯಸ್ಥನಾಗಿದ್ದಾನೆ. ಮಾತ್ರವಲ್ಲದೇ ಭಾರತೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿರುವ ಮೋಸ್ಟ್ ವಾಂಟೆಡ್ ವ್ಯಕ್ತಿಯಾಗಿದ್ದಾನೆ.
– ಜೈಲಿನಲ್ಲಿದ್ದರೂ ದೆಹಲಿ ಜನರದ್ದೇ ಚಿಂತೆ – ಸಚಿವೆ ಅತಿಶಿ ಭಾವುಕ
ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ (Delhi Liquor Policy Case) ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಇಡಿ ಕಸ್ಟಡಿಯಲ್ಲಿದ್ದುಕೊಂಡೇ ಮೊದಲ ಸರ್ಕಾರಿ ಆದೇಶ ಹೊರಡಿಸಿದ್ದಾರೆ ಎಂದು ಎಎಪಿ ಪಕ್ಷದ ಮೂಲಗಳು ತಿಳಿಸಿವೆ.
ಈ ಮೂಲಕ ಅರವಿಂದ್ ಕೇಜ್ರಿವಾಲ್ ಇ.ಡಿ ಬಂಧನದಲ್ಲಿದ್ದುಕೊಂಡೇ ಆಡಳಿತ ನಡೆಸುತ್ತಿದ್ದಾರೆ ಅನ್ನೋದು ಸ್ಪಷ್ಟವಾಗಿದೆ. ಇದು ರಾಷ್ಟ್ರ ರಾಜಧಾನಿಯ ನೀರು ಸರಬರಾಜಿಗೆ ಸಂಬಂಧಿಸಿದ ಆದೇಶವಾಗಿದೆ. ಜಲ ಸಂಪನ್ಮೂಲ ಸಚಿವೆಯೂ ಆಗಿರುವ ಅತಿಶಿ ಅವರಿಗೆ ಟಿಪ್ಪಣಿ ಮೂಲಕ ತಿಳಿಸಿದ್ದಾರೆ. ಅತಿಶಿ (Atishi) ಅವರಿಂದು ಆದೇಶವನ್ನು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ನನ್ನ ಕಣ್ಣಲ್ಲಿ ನೀರು ತರಿಸಿದೆ:
ಇಡಿ ಬಂಧನದಲ್ಲಿರುವ ಸಿಎಂ ಜೈಲಿನಲ್ಲಿದ್ದುಕೊಂಡೇ ಸರ್ಕಾರಿ ಆದೇಶ ಹೊರಡಿಸುವ ಬಗ್ಗೆ ಸಚಿವೆ ಅತಿಶಿ ಮಾಹಿತಿ ನೀಡಿದ್ದಾರೆ. ಇದು ನನ್ನ ಕಣ್ಣಲ್ಲಿ ನೀರು ತರಿಸಿದೆ. ಬಂಧನಕ್ಕೊಳಗಾದ ವ್ಯಕ್ತಿ ಈ ಕಷ್ಟದ ಸಮಯದಲ್ಲೂ ತಮ್ಮ ಕುರಿತು ಆಲೋಚಿಸದೇ, ದೆಹಲಿ ಜನರು ಮತ್ತು ಅವರ ಸಮಸ್ಯೆಗಳ ಬಗ್ಗೆ ಮಾತ್ರ ಯೋಚಿಸುತ್ತಿದ್ದಾರೆ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ – ಕಾಂಗ್ರೆಸ್‌ನ ನಾಲ್ಕನೇ ಪಟ್ಟಿ ರಿಲೀಸ್
ದೆಹಲಿಯ ಕೆಲವು ಭಾಗಗಳಲ್ಲಿ ಜನರು ನೀರು ಮತ್ತು ಒಳಚರಂಡಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದರಿಂದ ನಾನು ಚಿಂತಿತನಾಗಿದ್ದೇನೆ. ನಾನು ಜೈಲಿನಲ್ಲಿದ್ದೇನೆ ಎಂಬ ಕಾರಣಕ್ಕೆ ಜನರಿಗೆ ತೊಂದರೆ ಆಗಬಾರದು. ನೀರಿನ ಕೊರತೆ ಇರುವ ಸ್ಥಳಗಳಲ್ಲಿ ಟ್ಯಾಂಕರ್ ವ್ಯವಸ್ಥೆ ಮಾಡಿ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಅಗತ್ಯವಿದ್ದರೆ ರಾಜ್ಯಪಾಲರಾದ ವಿ.ಕೆ ಸಕ್ಷೇನಾ ಅವರ ಸಹಾಯ ಪಡೆಯುವಂತೆ ತಮ್ಮ ನಿರ್ದೇಶನದಲ್ಲಿ ತಿಳಿಸಿರುವುದಾಗಿ ಅತಿಶಿ ಹೇಳಿದ್ದಾರೆ.
ದೆಹಲಿ ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಮಾರ್ಚ್ 22 ರಂದು ನ್ಯಾಯಾಲಯವು ಕೇಜ್ರಿವಾಲ್ ಅವರಿಗೆ ಮಾ.28ರ ವರೆಗೆ ಇ.ಡಿ ವಶಕ್ಕೆ ನೀಡಿದೆ.
ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಶನಿವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಹೋಳಿ ರಜೆಯ ಕಾರಣ ನ್ಯಾಯಾಲಯವು 27ಕ್ಕೂ ಈ ಅರ್ಜಿ ವಿಚಾರಣೆ ನಡೆಸುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ನಾಲ್ವರು ಭಯೋತ್ಪಾದಕರ ಬಂಧನ – ಅಪಾರ ಶಸ್ತ್ರಾಸ್ತ್ರ ವಶ
ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಚಾರದ ಕಿಂಗ್ ಪಿನ್ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಎಂದು ಜಾರಿ ನಿರ್ದೇಶನಾಲಯ (ED) ಆರೋಪಿಸಿದ ಬೆನ್ನಲ್ಲೇ ಜಾರಿ ನಿರ್ದೇಶನಾಲಯಕ್ಕೆ ಆಪ್ ನಾಯಕರು ತಿರುಗೇಟು ನೀಡಿದ್ದಾರೆ. ಚುನಾವಣಾ ಬಾಂಡ್ (Electoral Bonds) ಮೂಲಕ ಬಿಜೆಪಿಗೆ ಹಣ ನೀಡಿದ ವ್ಯಕ್ತಿಯಿಂದ ಪಡೆದ ಮಾಹಿತಿ ಮೇರೆಗೆ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವೆ ಅತಿಶಿ (Atishi), ಅಬಕಾರಿ ನೀತಿ ಹಗರಣದಲ್ಲಿ, ಕೇಂದ್ರೀಯ ತನಿಖಾ ದಳ (CBI) ಮತ್ತು ಜಾರಿ ನಿರ್ದೇಶನಾಲಯ ತನಿಖೆಗಳು ಕಳೆದ ಎರಡು ವರ್ಷಗಳಿಂದ ನಡೆಯುತ್ತಿದೆ. ಈ 2 ವರ್ಷಗಳ ತನಿಖೆಯಲ್ಲಿ ಒಂದು ಪ್ರಶ್ನೆ ಮತ್ತೆ-ಮತ್ತೆ ಉದ್ಭವಿಸುತ್ತಿದೆ. ಹಣದ ಜಾಡು ಎಲ್ಲಿದೆ? ಹಣ ಎಲ್ಲಿಗೆ ಹೋಯಿತು? ಆಪ್ ಪಕ್ಷದ ಯಾವುದೇ ನಾಯಕ, ಮಂತ್ರಿ ಅಥವಾ ಕಾರ್ಯಕರ್ತರಿಂದ ಅಪರಾಧದ ಆದಾಯವನ್ನು ವಸೂಲಿ ಮಾಡಲಾಗಿಲ್ಲ, ಹಾಗಿದ್ದಾಗ ಹಣ ಎಲ್ಲಿ ಹೋಯಿತು? ಎಂದು ಪ್ರಶ್ನೆ ಮಾಡಿದ್ದಾರೆ.
ಶರತ್ ಚಂದ್ರ ರೆಡ್ಡಿ ಎಂಬ ವ್ಯಕ್ತಿಯ ಹೇಳಿಕೆ ಆಧರಿಸಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಶರತ್ ಚಂದ್ರ ರೆಡ್ಡಿ ಅರಬಿಂದೋ ಫಾರ್ಮಾದ ಮಾಲೀಕರು ಮತ್ತು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ಹಣ ಪಾವತಿಸಿದವರು ಎಂದು ಅತಿಶಿ ಆರೋಪಿಸಿದ್ದಾರೆ. ಇದನ್ನೂ ಓದಿ: ಪ್ರಶ್ನೆಗಾಗಿ ಹಣ ಪಡೆದ ಆರೋಪ – ಮಹುವಾ ಮೊಯಿತ್ರಾ ಮನೆಯಲ್ಲಿ ಸಿಬಿಐ ಶೋಧ
ನವೆಂಬರ್ 9, 2022 ರಂದು ರೆಡ್ಡಿ ಅವರನ್ನು ವಿಚಾರಣೆಗಾಗಿ ಕರೆಸಲಾಗಿತ್ತು. ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲಿಲ್ಲ ಅಥವಾ ಮಾತನಾಡಲಿಲ್ಲ ಮತ್ತು ಆಪ್‌ನೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದರು. ಹೇಳಿಕೆ ಬೆನ್ನಲೆ ಅವರನ್ನು ಇಡಿ ಬಂಧಿಸಿ ಹಲವು ತಿಂಗಳು ಜೈಲಿನಲ್ಲಿದ್ದ ನಂತರ ಹೇಳಿಕೆ ಬದಲಿಸಿದ ಅವರು, ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ ಅಬಕಾರಿ ನೀತಿ ವಿಚಾರವಾಗಿ ಮಾತನಾಡಿದ್ದೇನೆ ಎಂದು ಹೇಳಿದರು. ಅವರು ಹೇಳಿದ ತಕ್ಷಣ ಜಾಮೀನು ಸಿಕ್ಕಿದೆ ಎಂದು ದೂರಿದ್ದಾರೆ.
ಸಚಿವ ಸೌರಭ್ ಭಾರದ್ವಾಜ್ ಮಾತನಾಡಿ, ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಚರ್ಚೆ ಪ್ರಾರಂಭವಾದಾಗಿನಿಂದ, ಬಿಜೆಪಿ, ಎಸ್‌ಬಿಐ, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವು ವಿವರಗಳನ್ನು ಬಹಿರಂಗಪಡಿಸದಿರಲು ಪ್ರಯತ್ನಿಸುತ್ತಿದೆ. ಆದರೀಗ ಈಗ ಅದನ್ನ ಬಹಿರಂಗಪಡಿಸಲಾಗಿದೆ, ಇದು ವಿವಿಧ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 2047ಕ್ಕೆ ಎಕ್ಸ್‌ಪ್ರೆಸ್‌ವೇಗಳ ಅಭಿವೃದ್ಧಿಗೆ ಸರ್ಕಾರ ಮಾಸ್ಟರ್‌ಪ್ಲಾನ್
ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಏಳು ದಿನಗಳ ಕಾಲ (ಮಾರ್ಚ್ 28 ವರೆಗೆ) ಜಾರಿ ನಿರ್ದೇಶನಾಲಯದ (ED) ವಶಕ್ಕೆ ನೀಡಲಾಗಿದೆ.
ತಮ್ಮ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಅರವಿಂದ್ ಕೇಜ್ರಿವಾಲ್ ಹಿಂಪಡೆದಿದ್ದರು. ಅದಾದ ಬಳಿಕ ದೆಹಲಿಯ ರೂಸ್ ಅವೆನ್ಯೂ ಕೋರ್ಟ್, ಇ.ಡಿ ವಶಕ್ಕೆ ವಹಿಸಿ ಆದೇಶ ಹೊರಡಿಸಿದೆ.
ಕೇಜ್ರಿವಾಲ್ ಅವರನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೇಂದ್ರೀಯ ಸಂಸ್ಥೆ ಕೋರಿತ್ತು. ತನ್ನ ತನಿಖೆಯನ್ನು ಪೂರ್ಣಗೊಳಿಸಲು ಮತ್ತು ಆಮ್ ಆದ್ಮಿ ಪಕ್ಷದ ನಾಯಕನನ್ನು ಪ್ರಕರಣದಲ್ಲಿ ಬಂಧಿತ ಆರೋಪಿಗಳೊಂದಿಗೆ ವಿಚಾರಣೆಗೆ ಸಮಯ ಬೇಕಾಗುತ್ತದೆ ಎಂದು ಹೇಳಿತ್ತು.
ಶುಕ್ರವಾರದ ವಿಚಾರಣೆಯಲ್ಲಿ, ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಕರಣದ ಕಿಂಗ್‌ಪಿನ್ ಎಂದು ಇ.ಡಿ ಕರೆದಿದೆ. ಆಪಾದಿತ ಹಗರಣದ ಒಟ್ಟು ಆದಾಯವು 600 ಕೋಟಿ ಮೀರಿದೆ. ಇದರಲ್ಲಿ ‘ಸೌತ್ ಗ್ರೂಪ್’ ಪಾವತಿಸಿದ 100 ಕೋಟಿಯೂ ಸೇರಿದೆ ಎಂದು ಇ.ಡಿ ತಿಳಿಸಿದೆ.
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ (Delhi Excise Policy Case) ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ( Delhi CM Arvind Kejriwal) ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದೆ. ಈ ಬೆನ್ನಲ್ಲೇ ಕೇಜ್ರಿವಾಲ್ ಪತ್ನಿ ಸುನೀತಾ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಅಧಿಕಾರದ ದುರಹಂಕಾರದಿಂದ ಮೋದಿಯವರು ಮೂರು ಬಾರಿ ಚುನಾಯಿತ ಮುಖ್ಯಮಂತ್ರಿಯನ್ನು ಬಂಧಿಸಿ ಎಲ್ಲರನ್ನೂ ತುಳಿಯಲು ಪ್ರಯತ್ನಿಸುತ್ತಿದ್ದಾರೆ. ಇದು ದೆಹಲಿ ಜನತೆಗೆ ಮಾಡಿದ ದ್ರೋಹ. ನಿಮ್ಮ ಮುಖ್ಯಮಂತ್ರಿ ಸದಾ ನಿಮ್ಮ ಬೆಂಬಲಕ್ಕೆ ನಿಂತಿದ್ದಾರೆ. ಅವರು ಜೈಲಿನ ಒಳಗಿರಲಿ, ಹೊರಗಿರಲಿ ಅವರ ಜೀವನ ದೇಶಕ್ಕೆ ಮುಡಿಪಾಗಿದೆ. ಅವರು ಜನರಿಗಾಗಿ, ಜನರಿಗೋಸ್ಕರ ಇದ್ದಾರೆ ಎಂಬುದು ಸಾರ್ವಜನಿಕರಿಗೆ ಗೊತ್ತಿದೆ. ಜೈ ಹಿಂದ್ ಎಂದು ಬರೆದುಕೊಂಡಿದ್ದಾರೆ.
आपके 3 बार चुने हुए मुख्यमंत्री को मोदीजी ने सत्ता के अहंकार में गिरफ़्तार करवाया।सबको crush करने में लगे हैं। यह दिल्ली के लोगो के साथ धोखा है।आपके मुख्यमंत्री हमेशा आपके साथ खड़े रहें हैं।अंदर रहें या बाहर, उनका जीवन देश को समर्पित है।जनता जनार्दन है सब जानती है।जय हिन्द🙏
ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಹಾಜರಾಗುವಂತೆ ಜಾರಿಗೊಳಿಸಿದ್ದ 9 ಸಮನ್ಸ್‌ಗೆ ಕೇಜ್ರಿವಾಲ್ ಗೈರಾಗಿದ್ದರು. ಹೈಕೋರ್ಟ್‌ನಲ್ಲೂ (High Court) ಇಡಿ ವಿಚಾರಣೆಯನ್ನು ಮುಂದೂಡವಂತೆ ಕೇಜ್ರಿವಾಲ್ ಪರ ವಕೀಲರು ಮನವಿ ಮಾಡಿದ್ದರು. ಆದರೆ ಹೈಕೋರ್ಟ್ ವಾದವನ್ನು ಪುರಸ್ಕರಿಸದೇ ಕೇಜ್ರಿವಾಲ್‌ಗೆ ರಕ್ಷಣೆ ನೀಡಲು ನಿರಾಕರಿಸಿತು. ಈ ಬೆನ್ನಲ್ಲೇ ಗುರುವಾರ ರಾತ್ರಿ ಇಡಿ ಕೇಜ್ರಿವಾಲ್ ನಿವಾಸಕ್ಕೆ ತೆರಳಿ ಬಂಧಿಸಿದೆ. ಇದನ್ನೂ ಓದಿ: ಏನಿದು ದೆಹಲಿ ಮದ್ಯ ಹಗರಣ? ಕೇಜ್ರಿವಾಲ್ ಮೇಲಿರುವ ಆರೋಪ ಏನು? ಬಂಧನವಾದ ಪ್ರಮುಖರು ಯಾರು?
9 ಸಮನ್ಸ್‌ಗೆ ಗೈರು: 2023ರ ನವೆಂಬರ್ 23ಕ್ಕೆ ಮೊದಲ ಬಾರಿ ಕೇಜ್ರಿವಾಲ್‌ಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಡಿ.23 ರಂದು ಮತ್ತೆ ಸಮನ್ಸ್ ಜಾರಿ ಮಾಡಲಾಗಿತ್ತು. ಈ ಸಮನ್ಸ್‌ಗೆ ಗೈರಾದ ನಂತರ 2024ರಲ್ಲಿ ಜ.3, ಜ.18, ಫೆ.2, ಫೆ.19, ಫೆ.26, ಮಾರ್ಚ್ 4 ರಂದು ಸಮನ್ಸ್ ಜಾರಿ ಮಾಡಲಾಗಿತ್ತು. ಈ ಎಲ್ಲಾ ಸಮನ್ಸ್‌ಗಳಿಗೆ ಗೈರಾದ ಹಿನ್ನೆಲೆಯಲ್ಲಿ ಮಾರ್ಚ್ 21 ರಂದು ಸಮನ್ಸ್ ಜಾರಿ ಮಾಡಿ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿದೆ.
ಬಂಧನಗೊಂಡವರು ಯಾರು?: ಈ ಪ್ರಕಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ಮನೀಶ್ ಸಿಸೋಡಿಯಾ (ಆಪ್ ಡಿಸಿಎಂ), ಸತ್ಯೇಂದ್ರ ಜೈನ್(ಆಪ್ ಸಚಿವ), ಸಂಜಯ್ ಸಿಂಗ್(ಆಪ್ ಸಂಸದ), ಕೆ.ಕವಿತಾ(ಬಿಆರ್‌ಎಸ್ ಶಾಸಕಿ).
ನವದೆಹಲಿ: ಜೈಲಿನ ಒಳಗಿರಲಿ ಅಥವಾ ಹೊರಗಿರಲಿ, ನನ್ನ ಜೀವನವು ದೇಶಕ್ಕಾಗಿ ಸಮರ್ಪಿತವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ.
ಮದ್ಯ ಹರಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿಯನ್ನು ಇಂದು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ (Rouse Avenue Court) ಹಾಜರುಪಡಿಸುವ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಈ ರೀತಿಯಾಗಿ ಪ್ರತಿಕ್ರಿಯಿಸಿದರು. ಜೈಲಿನಲ್ಲಿದ್ದರೂ ಹೊರಗಿದ್ದರೂ ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವುದಾಗಿ ತಿಳಿಸಿದ್ದಾರೆ.
#WATCH | Enforcement Directorate produces Delhi CM Arvind Kejriwal before Rouse Avenue court following his arrest yesterday pic.twitter.com/HgpU6vIlm7
ಇತ್ತ ಕೇಜ್ರಿವಾಲ್ ಬಂಧನ ಪ್ರತಿಭಟನೆಗೆ ಕಾರಣವಾಯಿತು. ಪ್ರತಿಭಟನೆಯ ವೇಳೆ ದೆಹಲಿ ಸಚಿವ ಸೌರಭ್ ಭಾರದ್ವಾಜ್ ಅವರು ಕೇಜ್ರಿವಾಲ್ ಅವರ ಕುಟುಂಬವನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೇಜ್ರಿವಾಲ್ ಅವರ ತಾಯಿ ಆರೋಗ್ಯವಾಗಿಲ್ಲ ಮತ್ತು ಇತ್ತೀಚೆಗಷ್ಟೇ ಅವರು ಆಸ್ಪತ್ರೆಯಿಂದ ವಾಪಸ್ಸಾಗಿದ್ದಾರೆ. ಕುಟುಂಬದ ಸದಸ್ಯರಿಗೆ ಯಾರನ್ನೂ ಭೇಟಿಯಾಗಲು ಅವಕಾಶವಿಲ್ಲ ಎಂದು ಕಿಡಿಕಾರಿದ್ದಾರೆ.
Enforcement Directorate seeks 10 day custody of Delhi CM Arvind Kejriwal in liquor policy case https://t.co/DwSzsPSuEZ
ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ. ಪಕ್ಷದ ಕಾರ್ಯಕರ್ತರಿಗೆ ಪ್ರತಿಭಟನೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ. ಇದು ಸಂಪೂರ್ಣ ಸರ್ವಾಧಿಕಾರ. ಲೋಕಸಭಾ ಚುನಾವಣೆ ಗೆಲ್ಲಲು ಹೀಗೆ ಮಾಡಲಾಗುತ್ತಿದೆ. ಜನರು ಎಲ್ಲೇ ಇದ್ದರೂ ಪ್ರತಿಭಟನೆ ಮಾಡುತ್ತಾರೆ, ಇದು ನಿಲ್ಲುವುದಿಲ್ಲ. ಕ್ರಾಂತಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶದ ಮಾತುಗಳನ್ನಾಡಿದ್ದಾರೆ.
ನವದೆಹಲಿ: ಮದ್ಯದ ವಿರುದ್ಧ ಧ್ವನಿ ಎತ್ತಿದ್ದ ಕೇಜ್ರಿವಾಲ್ (Arvind Kejriwal) ಹಣಕ್ಕಾಗಿ ನೂತನ ಲಿಕ್ಕರ್ ಪಾಲಿಸಿ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷವು (AAP) ಮದ್ಯ ನೀತಿಯನ್ನು ಮಾಡಬಾರದಿತ್ತು. ಮದ್ಯದ ವಿರುದ್ಧ ಧ್ವನಿ ಎತ್ತಿದ್ದ ವ್ಯಕ್ತಿ ಇಂದು ಮದ್ಯ ನೀತಿಯನ್ನು ಸಿದ್ಧಪಡಿಸಿದ್ದು ನನಗೆ ಬೇಸರ ತಂದಿದೆ. ಈಗ ಏನಾಗುತ್ತದೆಯೋ ಅದು ಕಾನೂನಿನ ಪ್ರಕಾರ ನಡೆಯಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ (Anna Hazare) ಹೇಳಿದ್ದಾರೆ.
ಈ ಹಿಂದೆಯೂ ಅಣ್ಣಾ ಹಜಾರೆ, ಮದ್ಯ ನೀತಿಯ ವಿರುದ್ಧ ಮಾತನಾಡಿದ್ದರು. 2022 ರಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದು ನೀತಿಯ ಬಗ್ಗೆ ತಮ್ಮ ಬೇಸರ ವ್ಯಕ್ತಪಡಿಸಿದ್ದರು. ಪತ್ರದಲ್ಲಿ ನೀವು ಮುಖ್ಯಮಂತ್ರಿಯಾದ ನಂತರ ನಾನು ಇದೇ ಮೊದಲ ಬಾರಿಗೆ ನಿಮಗೆ ಪತ್ರ ಬರೆಯುತ್ತಿದ್ದೇನೆ. ಏಕೆಂದರೆ ನಿಮ್ಮ ಸರ್ಕಾರದ ಮದ್ಯ ನೀತಿಯ ಇತ್ತೀಚಿನ ಸುದ್ದಿ ವರದಿಗಳಿಂದ ನನಗೆ ನೋವಾಗಿದೆ. ಮದ್ಯದಂತೆಯೇ ಅಧಿಕಾರವೂ ಅಮಲೇರಿಸುತ್ತದೆ. ನಿಮಗೆ ಅಧಿಕಾರದ ಅಮಲು ಇದೆ ಎಂದು ತೋರುತ್ತದೆ ಎಂದು ಟೀಕಿಸಿದ್ದರು. ಇದನ್ನೂ ಓದಿ: ದೆಹಲಿ ಮದ್ಯ ಹಗರಣದಲ್ಲಿ ಕೇಜ್ರಿವಾಲ್ ಕಿಂಗ್‌ಪಿನ್: ಇಡಿ
ಬಂಧನದ ಹೊರತಾಗಿಯೂ ಅರವಿಂದ್ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಎಎಪಿ ಹೇಳಿದೆ.
ಈ ವೇಳೆ ಇಡಿ ಪರ ವಕೀಲರು, ಕೇಜ್ರಿವಾಲ್ ಕೆಲವು ವ್ಯಕ್ತಿಗಳಿಗೆ ಕಿಕ್-ಬ್ಯಾಕ್ ಸ್ವೀಕರಿಸಲು ಸೂಚಿಸಿದರು. ಈ ಹಣವನ್ನು ಆಪ್ ಗೋವಾ ಚುನಾವಣೆಯಲ್ಲಿ ಬಳಸಲಾಗಿತ್ತು. ಮದ್ಯದ ನೀತಿಯ ರಚನೆಯಲ್ಲಿ ಅವರು ನೇರವಾಗಿ ಭಾಗಿಯಾಗಿದ್ದು ಅವರೇ ಕಿಂಗ್ ಪಿನ್ ಆಗಿದ್ದು, ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದರು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕೇಜ್ರಿವಾಲ್ ಅಕ್ರಮದ ಬಗ್ಗೆ ಸಾಕ್ಷ್ಯಗಳೊಂದಿಗೆ ಕಾಂಗ್ರೆಸ್ ದೂರು ನೀಡಿತ್ತು: ಬಿಜೆಪಿ ತಿರುಗೇಟು
ಇಡಿ ಹೇಳಿದ್ದೇನು?
ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನೂ ಬಂಧಿಸಲಾಗಿದ್ದು ಅವರಿಗೂ ಜಾಮೀನು ನೀಡಿಲ್ಲ. ಸಹ ಆರೋಪಿ ಕೆ ಕವಿತಾ ಅವರ ಹೇಳಿಕೆಯನ್ನೂ ತೆಗೆದುಕೊಳ್ಳಲಾಗಿದೆ. ಎಎಪಿ ಮಾಜಿ ಸಂವಹನ ಉಸ್ತುವಾರಿ ವಿಜಯ್ ನಾಯರ್ ಅರವಿಂದ್ ಕೇಜ್ರಿವಾಲ್ ಅವರ ಪರವಾಗಿ ಕೆಲಸ ಮಾಡುತ್ತಿದ್ದರು.
ವಿಜಯ್ ನಾಯರ್ ಅವರು ಕೇಜ್ರಿವಾಲ್ ಅವರೊಂದಿಗೆ ಅತ್ಯಂತ ನಿಕಟವಾಗಿ ಕೆಲಸ ಮಾಡುತ್ತಿದ್ದು ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕೇಜ್ರಿವಾಲ್ ಪಂಜಾಬ್ ಚುನಾವಣೆಗೆ ‘ಸೌತ್ ಗ್ರೂಪ್’ನಿಂದ ಕಿಕ್‌ಬ್ಯಾಕ್ ನೀಡುವಂತೆ ಒತ್ತಾಯಿಸಿದರು. ಈ ಹೇಳಿಕೆಯನ್ನು ಸಾಬೀತುಪಡಿಸಲು ನಮ್ಮ ಬಳಿ ಸಾಕ್ಷ್ಯಗಳಿವೆ. ನಗದು ವರ್ಗಾವಣೆ ಎರಡು ಬಾರಿ ನಡೆದಿದೆ. ಕೇಜ್ರಿವಾಲ್ ಅವರು ಕವಿತಾ ಅವರನ್ನು ಭೇಟಿಯಾಗಿ ದೆಹಲಿ ಅಬಕಾರಿ ನೀತಿಯಲ್ಲಿ ಒಟ್ಟಾಗಿ ಕೆಲಸ ಮಾಡಬೇಕೆಂದು ಹೇಳಿದ್ದರು.
ದೆಹಲಿ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿತ್ತು. ಆದರೆ ಅದು ನೆಪಮಾತ್ರದ ಸಮಿತಿಯಾಗಿತ್ತು. ಲಂಚವನ್ನು ಸ್ವೀಕರಿಸಲು ಮತ್ತು ಲಂಚ ನೀಡಿದ ವ್ಯಕ್ತಿಗಳಿಗೆ ಮರುಪಾವತಿ ಮಾಡಲು ಸಾಧ್ಯವಾಗುವಂತೆ ನೀತಿಯನ್ನು ಮಾಡಲಾಗಿದೆ.
ಈ ಪ್ರಕರಣದ ಅವಧಿ ವೇಳೆ ಡಿಸಿಎಂ ಆಗಿದ್ದ ಮನೀಶ್ ಸಿಸೋಡಿಯಾ ಜೊತೆಗೆ ಕೇಜ್ರಿವಾಲ್ ನೇರ ಸಂಪರ್ಕದಲ್ಲಿದ್ದರು. ಆಪ್ ಸಂವಹನ ವಿಭಾಗದ ವಿಜಯ್ ನಾಯರ್ ಕೇಜ್ರಿವಾಲ್ ಬಳಿಯ ಮನೆಯಲ್ಲಿ ತಂಗಿದ್ದರು. ದೆಹಲಿ ಸರ್ಕಾರದ ಸಚಿವರಾದ ಕೈಲಾಶ್ ಗಹ್ಲೋಟ್ ಅವರಿಗೆ ನೀಡಲಾದ ಮನೆಯಲ್ಲಿ ಅವರು ತಂಗಿದ್ದರು. ವಿಜಯ್ ನಾಯರ್ ಸೌತ್ ಗ್ರೂಪ್ ಮತ್ತು ಆಪ್ ನಡುವೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದರು.
ಅರವಿಂದ್ ಕೇಜ್ರಿವಾಲ್ ಪರವಾಗಿ ಸೌತ್ ಗ್ರೂಪ್‌ನಿಂದ ನಾಯರ್ ಕಿಕ್‌ಬ್ಯಾಕ್‌ಗಳನ್ನು ಕೇಳಿದ್ದರು. ಇದು ಹೇಳಿಕೆಗಳಿಂದ ದೃಢೀಕರಿಸಲ್ಪಟ್ಟಿದೆ. ಕಿಕ್ ಬ್ಯಾಕ್ ನೀಡಿದ ಹಿನ್ನಲೆ ದೆಹಲಿಯಲ್ಲಿ ಸೌತ್ ಗ್ರೂಪ್ ನಿಯಂತ್ರಣ ಸಾಧಿಸಿತ್ತು. ಎಲ್ಲ ಮದ್ಯ ವ್ಯಾಪಾರಿಗಳಿಂದ ಕಿಕ್ ಬ್ಯಾಕ್ ಪಡೆಯಲಾಗಿದೆ. ಒಟ್ಟು 600 ಕೋಟಿ ರೂ.ಗೂ ಅಧಿಕ ಲಾಭ ಮಾಡಲಾಗಿದೆ.
ಹವಾಲಾ ಮೂಲಕ ಗೋವಾ ಚುನಾವಣೆ ವೇಳೆ 45 ಕೋಟಿ ರೂ ನೀಡಲಾಗಿತ್ತು. ಇದು ಹೇಳಿಕೆಯಿಂದ ಮಾತ್ರವಲ್ಲ, ಸಿಡಿಆರ್‌ಗಳಿಂದಲೂ ದೃಢೀಕರಣವಾಗಿದೆ. ಹಣದ ಮೂಲವನ್ನು ಪರಿಶೀಲಿಸಿದ್ದು ನಾಲ್ಕು ಮೂಲಗಳಿಂದ ಹಣ ಗೋವಾಕ್ಕೆ ಬಂದಿದೆ.
ಅಬಕಾರಿ ನೀತಿ ಹರಣದಲ್ಲಿ (Delhi Excise Policy Case) ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ( Delhi CM Arvind Kejriwal) ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದೆ. ಇಡಿ ವಿಚಾರಣೆಗೆ ಹಾಜರಾಗುವಂತೆ ಜಾರಿಗೊಳಿಸಿದ್ದ 9 ಸಮನ್ಸ್‌ಗೆ ಕೇಜ್ರಿವಾಲ್ ಗೈರಾಗಿದ್ದರು. ಹೈಕೋರ್ಟ್‌ನಲ್ಲೂ (High Court) ಇಡಿ ವಿಚಾರಣೆಯನ್ನು ಮುಂದೂಡವಂತೆ ಕೇಜ್ರಿವಾಲ್ ಪರ ವಕೀಲರು ಮನವಿ ಮಾಡಿದ್ದರು. ಆದರೆ ಹೈಕೋರ್ಟ್ ವಾದವನ್ನು ಪುರಸ್ಕರಿಸದೇ ಕೇಜ್ರಿವಾಲ್‌ಗೆ ರಕ್ಷಣೆ ನೀಡಲು ನಿರಾಕರಿಸಿತು. ಈ ಬೆನ್ನಲ್ಲೇ ರಾತ್ರಿ ಇಡಿ ಕೇಜ್ರಿವಾಲ್ ನಿವಾಸಕ್ಕೆ ತೆರಳಿ ಬಂಧಿಸಿದೆ.
ಏನಿದು ಹಗರಣ?
ಕೋವಿಡ್ 2ನೇ ಅಲೆ ಉತ್ತುಂಗದಲ್ಲಿದ್ದಾಗ ಮನೀಶ್ ಸಿಸೋಡಿಯಾ 2021ರ ಏಪ್ರಿಲ್‌ನಲ್ಲಿ ಕ್ಯಾಬಿನೆಟ್ ಅನುಮೋದನೆ ಇಲ್ಲದೇ ಮದ್ಯದಂಗಡಿ ಟೆಂಡರ್‌ಗೆ ಅರ್ಜಿ ಸಲ್ಲಿಸಿದವರ 144.36 ಕೋಟಿ ಪರವಾನಗಿ ಶುಲ್ಕವನ್ನು ಮನ್ನಾ ಮಾಡಲು ಆದೇಶ ಹೊರಡಿಸುತ್ತಾರೆ. ಈ ಮಹತ್ವದ ನಿರ್ಧಾರದ ಬಳಿಕ ಮೇ ತಿಂಗಳಿನಲ್ಲಿ ಕೇಜ್ರಿವಾಲ್ ನೇತೃತ್ವದ ಕ್ಯಾಬಿನೆಟ್ ಸಭೆ ಕರೆದು ಅಬಕಾರಿ ನೀತಿಯಲ್ಲಿ ಬದಲಾವಣೆ ಮಾಡುತ್ತದೆ. ಮದ್ಯವನ್ನು ಮನೆಗ ಹೋಮ್ ಡೆಲಿವರಿ ಮಾಡಬಹುದು ಅಷ್ಟೇ ಅಲ್ಲದೇ ಮದ್ಯದ ಅಂಗಡಿಗಳನ್ನು ಬೆಳಗಿನ ಜಾವ 3 ಗಂಟೆಯವರೆಗೆ ತೆರೆಯಬಹುದು. ಪರವಾನಗಿದಾರರು ಅನಿಯಮಿತ ರಿಯಾಯಿತಿಗಳನ್ನು ನೀಡಲು ನೀತಿ ಅನುಮತಿ ಕಲ್ಪಿಸಿತ್ತು.
ಲೆಫ್ಟಿನೆಂಟ್ ಗವರ್ನರ್ ಅವರು ಕ್ಯಾಬಿನೆಟ್ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಳಿಕ ದೆಹಲಿ ಸರ್ಕಾರ ತನ್ನ ನಿರ್ಧಾರವನ್ನು ಹಿಂದಕ್ಕೆ ಪಡೆಯುತ್ತದೆ. ಆದರೆ ಸಿಸೋಡಿಯಾ ಕೈಗೊಂಡ ನಿರ್ಧಾರ ಮುಂದುವರಿಯುತ್ತದೆ. ಸರ್ಕಾರದ ನಿರ್ಧಾರ ಬಗ್ಗೆ ದೆಹಲಿ ಮುಖ್ಯ ಕಾರ್ಯದರ್ಶಿ ಅವರು ಲೆಫ್ಟಿನೆಂಟ್ ಗವರ್ನರ್ ಬಳಿ ದೂರು ನೀಡುತ್ತಾರೆ. ಸಿಸೋಡಿಯಾ ನಿರ್ಧಾರದಿಂದ ಸರ್ಕಾರಕ್ಕೆ ಭಾರೀ ನಷ್ಟವಾಗಿದೆ. ವಿಸ್ಕಿ ಮತ್ತು ವೈನ್ ಮಾರಾಟ ಅನುಕ್ರಮವಾಗಿ 60% ಮತ್ತು 87%ರಷ್ಟು ಭಾರೀ ಏರಿಕೆಯಾಗಿದ್ದರೂ ಆದಾಯ 80% ರಷ್ಟು ಇಳಿಕೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸುತ್ತಾರೆ.
ಕೇಜ್ರಿವಾಲ್- ಸಿಸೋಡಿಯಾ ಅವರು ಲೆಫ್ಟಿನೆಂಟ್ ಗವರ್ನರ್ ಗಮನಕ್ಕೆ ತಾರದೇ ತುರ್ತು ಕ್ಯಾಬಿನೆಟ್ ಸಭೆಯನ್ನು ಕರೆಯುತ್ತಾರೆ. ಸಿಸೋಡಿಯಾ ಅಕ್ರಮವಾಗಿ ಹೊರಡಿಸಿದ ಆದೇಶವನ್ನು ಸಕ್ರಮ ಮಾಡಲು ಕ್ಯಾಬಿನೆಟ್‌ನಲ್ಲಿ ಪ್ರಯತ್ನ ಮಾಡಲಾಗುತ್ತದೆ. ಈ ನಿರ್ಧಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಭಾರೀ ವಿರೋಧ ವ್ಯಕ್ತಪಡಿಸಿ ಪ್ರತಿಭಟಿಸುತ್ತದೆ. ವಿರೋಧ ವ್ಯಕ್ತವಾಗುತ್ತಿದ್ದಂತೆ 2022ರ ಜುಲೈನಲ್ಲಿ ಮದ್ಯ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಲೆಫ್ಟಿನೆಂಟ್ ಗವರ್ನರ್ ಅವರು ಆದೇಶ ಹೊರಡಿಸುತ್ತಾರೆ. 2022ರ ಜುಲೈನಲ್ಲಿ ಕೇಜ್ರಿವಾಲ್ ಸರ್ಕಾರ ಈ ಹಿಂದೆ ಹೊರಡಿಸಿದ್ದ ಅಬಕಾರಿ ನೀತಿಯನ್ನು ಹಿಂದಕ್ಕೆ ಪಡೆಯುತ್ತದೆ. ಇದನ್ನೂ ಓದಿ: ದೆಹಲಿ ಮದ್ಯ ಹಗರಣ – ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪುತ್ರಿ ಕವಿತಾ ಅರೆಸ್ಟ್ ಆಗಿದ್ದು ಯಾಕೆ?
ಆರೋಪ ಏನು?
ಕೊರೊನಾ ಸಮಯದಲ್ಲಿ ಕಿಕ್ ಬ್ಯಾಕ್ ಪಡೆಯಲೆಂದೇ ಮದ್ಯದಂಗಡಿ ಟೆಂಡರ್‌ಗೆ ಅರ್ಜಿ ಸಲ್ಲಿಸಿದವರ 144.36 ಕೋಟಿ ರೂ. ಪರವಾನಗಿ ಶುಲ್ಕವನ್ನು ಮನ್ನಾ ಮಾಡಲಾಗಿದೆ ಎಂಬ ಗಂಭೀರ ಭ್ರಷ್ಟಾಚಾರ ಆರೋಪ ಬಂದಿದೆ. ಕಾನೂನುಬಾಹಿರ ನಿರ್ಧಾರವನ್ನು ತೆಗೆದುಕೊಂಡ ಬಳಿಕ ಅದನ್ನು ಕಾನೂನುಬದ್ಧಗೊಳಿಸಲು ಸರ್ಕಾರ ಪ್ರಯತ್ನಿಸಿದ್ದು ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.
ವಿಮಾನ ನಿಲ್ದಾಣದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಇದ್ದರೂ ವಿಮಾನ ನಿಲ್ದಾಣದ ಅಧಿಕಾರಿಗಳಿಂದ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕಾಗುತ್ತದೆ. ಎನ್‌ಒಸಿ ಇಲ್ಲದೇ ಮಾರಾಟ ಮಾಡಿದರೆ ದಂಡವನ್ನು ಹಾಕಲಾಗುತ್ತದೆ. ಎನ್‌ಒಸಿ ಇಲ್ಲದೇ ಮದ್ಯ ಮಾರಾಟ ಮಾಡಿದವರಿಗೆ 30 ಕೋಟಿ ರೂ. ದಂಡವನ್ನು ಹಾಕಬೇಕಿತ್ತು. ಆದರೆ ಸಿಸೋಡಿಯಾ ನಿರ್ದೇಶನದ ಹಿನ್ನೆಲೆಯಲ್ಲಿ 30 ಕೋಟಿ ರೂ ದಂಡವನ್ನು ಮನ್ನಾ ಮಾಡಲಾಗಿದೆ. ಪರವಾನಗಿ ಶುಲ್ಕ ಬಾಕಿ ಉಳಿಸಿಕೊಂಡ ಪರವಾನಗಿದಾರರ ವಿರುದ್ಧದ ಕಠಿಣ ಕ್ರಮಕ್ಕೆ ತಡೆ ನೀಡಲಾಗಿದೆ. ಅಬಕಾರಿ ನೀತಿ ಉಲ್ಲಂಘಿಸಿದ ಪರವಾನಗಿದಾರರ ವಿರುದ್ಧ ಯಾವುದೇ ದಂಡ ಕ್ರಮ ಕೈಗೊಂಡಿಲ್ಲ. ಆಮದು ಮಾಡಿದ ಪ್ರತಿ ಕೇಸ್ ಬಿಯರ್ ಮೇಲಿದ್ದ ದರವನ್ನು 50 ರೂ.ಇಳಿಕೆ ಮಾಡಲಾಗಿದೆ. ಹೊಸ ಮದ್ಯ ನೀತಿಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ 2631 ಕೋಟಿ ರೂ. ನಷ್ಟವಾಗಿದೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಸಿಎಂ ಹುದ್ದೆಗೆ ಕೇಜ್ರಿವಾಲ್ ರಾಜೀನಾಮೆ ಇಲ್ಲ – ಜೈಲಿನಿಂದಲೇ ಆಡಳಿತ ನಡೆಸಲು ಸಾಧ್ಯವೇ?
ಕೇಜ್ರಿವಾಲ್ ಮೇಲಿರುವ ಆರೋಪ ಏನು?
ಕೆಲ ಆಯ್ದ ವ್ಯಕ್ತಿಗಳಿಗೆ ಲಾಭ ತರಲು ದೆಹಲಿಯಲ್ಲಿ ಮದ್ಯ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಲೈಸನ್ಸ್ ಪಡೆಯಲು ನೂರಾರು ಕೋಟಿ ರೂ. ಲಂಚ ಪಡೆಯಲಾಗಿದೆ. ಕಂಪನಿಗಳ ಜೊತೆ ನಡೆದ ಸಭೆಯಲ್ಲಿ ಕೇಜ್ರಿವಾಲ್ ಸಹ ಭಾಗಿಯಾಗಿದ್ದರು. ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆಪ್ ನಾಯಕ, ಪಕ್ಷದ ಚುನಾವಣಾ ವೆಚ್ಚಗಳನ್ನು ನೋಡುತ್ತಿದ್ದ ವಿಜಯ್ ನಾಯರ್‌ಗೆ ಕಂಪನಿಗಳು ಲೈಸೆನ್ಸ್ ಪಡೆಯಲು ಕಿಕ್‌ಬ್ಯಾಕ್ ನೀಡಲಾಗಿದೆ. ಈ ನೀತಿಯಿಂದ ಲಾಭ ಪಡೆದ ಮದ್ಯ ವ್ಯಾಪಾರಿಗಳು ಕೇಜ್ರಿವಾಲ್ ಆಪ್ತ ಮಂತ್ರಿಗಳಿಗೆ, ಆಪ್ತರಿಗೆ, ಸಹಚರರಿಗೆ ಕೋಟ್ಯಂತರ ರೂ. ಪಾವತಿ ಮಾಡಿದ್ದಾರೆ. ಆಪ್ ನಾಯಕ ವಿಜಯ್ ನಾಯರ್ ಅವರು ಕೆಲವು ಉದ್ಯಮಿಗಳು ಮತ್ತು ರಾಜಕಾರಣಿಗಳ ನಿಯಂತ್ರಣದಲ್ಲಿರುವ ‘ದಕ್ಷಿಣ ಗುಂಪಿನಿಂದ’ 100 ಕೋಟಿ ರೂಪಾಯಿಗಳನ್ನು ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪವಿದೆ.
ಇಡಿ ಎಂಟ್ರಿಯಾಗಿದ್ದು ಹೇಗೆ?
ದೆಹಲಿ ಲೆಫ್ಟಿನೆಂಟ್ ಗವರ್ನರ್ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದರು. ತನಿಖೆಗೆ ಇಳಿದು ವ್ಯಕ್ತಿಗಳನ್ನು ಬಂಧನ ಮಾಡುತ್ತಿದ್ದಂತೆ ಅಕ್ರಮ ಹಣ ವರ್ಗಾವಣೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಈ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ.
ಬಂಧನಗೊಂಡವರು ಯಾರು?
ಈ ಪ್ರಕಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ಮನೀಶ್ ಸಿಸೋಡಿಯಾ (ಆಪ್ ಡಿಸಿಎಂ), ಸತ್ಯೇಂದ್ರ ಜೈನ್(ಆಪ್ ಸಚಿವ), ಸಂಜಯ್ ಸಿಂಗ್(ಆಪ್ ಸಂಸದ), ಕೆ.ಕವಿತಾ(ಬಿಆರ್‌ಎಸ್ ಶಾಸಕಿ)
9 ಸಮನ್ಸ್‌ಗೆ ಗೈರು:
2023ರ ನವೆಂಬರ್ 23ಕ್ಕೆ ಮೊದಲ ಬಾರಿ ಕೇಜ್ರಿವಾಲ್‌ಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಡಿ.23 ರಂದು ಮತ್ತೆ ಸಮನ್ಸ್ ಜಾರಿ ಮಾಡಲಾಗಿತ್ತು. ಈ ಸಮನ್ಸ್‌ಗೆ ಗೈರಾದ ನಂತರ 2024ರಲ್ಲಿ ಜ.3, ಜ.18, ಫೆ.2, ಫೆ.19, ಫೆ.26, ಮಾರ್ಚ್ 4 ರಂದು ಸಮನ್ಸ್ ಜಾರಿ ಮಾಡಲಾಗಿತ್ತು. ಈ ಎಲ್ಲಾ ಸಮನ್ಸ್‌ಗಳಿಗೆ ಗೈರಾದ ಹಿನ್ನೆಲೆಯಲ್ಲಿ ಮಾರ್ಚ್ 21 ರಂದು ಸಮನ್ಸ್ ಜಾರಿ ಮಾಡಿ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿದೆ.