Tag: Arvind Kejriwal

  • 7 ಶಾಸಕರನ್ನ ಖರೀದಿಸಲು ಬಿಜೆಪಿಯಿಂದ ತಲಾ 25 ಕೋಟಿ ರೂ. ಆಫರ್‌ – ಕೇಜ್ರಿವಾಲ್‌ ಹೊಸ ಬಾಂಬ್‌

    7 ಶಾಸಕರನ್ನ ಖರೀದಿಸಲು ಬಿಜೆಪಿಯಿಂದ ತಲಾ 25 ಕೋಟಿ ರೂ. ಆಫರ್‌ – ಕೇಜ್ರಿವಾಲ್‌ ಹೊಸ ಬಾಂಬ್‌

    ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಆಪ್‌ ಸರ್ಕಾರವನ್ನು ಕೆಡವಲು ಸಂಚು ರೂಪಿಸಿರುವ ಬಿಜೆಪಿ 7 ಆಮ್ ಆದ್ಮಿ ಪಕ್ಷದ ಶಾಸಕರನ್ನ (AAP MLAs) ಖರೀದಿಸಲು ಪ್ರಯತ್ನಿಸುತ್ತಿದೆ. 7 ಶಾಸಕರಿಗೆ ಬಿಜೆಪಿ ತಲಾ 25 ಕೋಟಿ ರೂ. ಆಫರ್‌ ನೀಡಿದೆ ಎಂದು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಹೊಸ ಬಾಂಬ್‌ ಸಿಡಿಸಿದ್ದಾರೆ.

    ಈ ಕುರಿತು ಸೋಶಿಯಲ್‌ ಮೀಡಿಯಾ X ಖಾತೆಯಲ್ಲಿ ಸುದೀರ್ಘ‌ ಪೋಸ್ಟ್‌ ಹಂಚಿಕೊಂಡಿರುವ ಕೇಜ್ರಿವಾಲ್‌, ಬಿಜೆಪಿ (BJP) ಆಪ್‌ ಶಾಸಕರೊಂದಿಗೆ ಮಾತುಕತೆಯಲ್ಲಿ ತೊಡಗಿದೆ. ಆಪ್‌ ಸರ್ಕಾರವನ್ನು ಸಂಪೂರ್ಣವಾಗಿ ಮುಗಿಸಲು ಪ್ಲ್ಯಾನ್‌ ಮಾಡಿದೆ. ಆದ್ದರಿಂದ ದೆಹಲಿ ಮದ್ಯ ನೀತಿ ಪ್ರಕರಣಕ್ಕೆ (Delhi liquor Policy Case) ಸಂಬಂಧಿಸಿದಂತೆ ಮುಖ್ಯಮಂತ್ರಿಗಳನ್ನು ಬಂಧಿಸುವುದಾಗಿ ಬೆದರಿಕೆ ಹಾಕಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮರಾಠ ಮೀಸಲಾತಿ ಹೋರಾಟಕ್ಕೆ ಜಯ – ಬೇಡಿಕೆಗಳಿಗೆ ಮಹಾರಾಷ್ಟ್ರ ಸರ್ಕಾರ ಅಸ್ತು

    ಸರ್ಕಾರವನ್ನೇ ಮುಗಿಸೋದಕ್ಕೆ ಬಿಜೆಪಿ ಪ್ಲ್ಯಾನ್‌:
    ಇತ್ತೀಚೆಗೆ ಬಿಜೆಪಿ ನಾಯಕರು ಎಎಪಿಯ 7 ಶಾಸಕರನ್ನ ಸಂಪರ್ಕಿಸಿದ್ದಾರೆ. ಕೆಲ ದಿನಗಳ ನಂತರ ನಾವು ಕೇಜ್ರಿವಾಲ್‌ ಅವರನ್ನ ಬಂಧಿಸುತ್ತೇವೆ. ನಂತರ ಶಾಸಕರನ್ನ ಇಬ್ಭಾಗ ಮಾಡುತ್ತೇವೆ. ದೆಹಲಿಯ ಆಪ್‌ ಸರ್ಕಾರವನ್ನ ಸಂಪೂರ್ಣವಾಗಿ ಉರುಳಿಸುತ್ತೇವೆ. ಈಗಾಗಲೇ 21 ಶಾಸಕರೊಟ್ಟಿಗೆ ಮಾತುಕತೆ ನಡೆಸಿದ್ದೇವೆ. ನೀವೂ ಬಂದುಬಿಡಿ, ಪ್ರತಿಯೊಬ್ಬರಿಗೆ ತಲಾ 25 ಕೋಟಿ ರೂ. ಕೊಡುತ್ತೇವೆ. ಜೊತೆಗೆ ಬಿಜೆಪಿಯಿಂದ ಟಿಕೆಟ್‌ ನೀಡುತ್ತೇವೆ ಎಂದು ಆಮಿಷ ತೋರಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಎಂಜಿ ರೋಡ್- ಬೈಯಪ್ಪನಹಳ್ಳಿ ಮೆಟ್ರೋ ಸಂಚಾರದಲ್ಲಿ ತಾತ್ಕಾಲಿಕ ಸ್ಥಗಿತ- ಪ್ರಯಾಣಿಕರ ಪರದಾಟ

    9 ವರ್ಷಗಳಿಂದಲೂ ಷಡ್ಯಂತ್ರ ಫಲಿಸಿಲ್ಲ:
    ಇದು ಬಿಜೆಪಿಯ ನಡವಳಿಕೆಯನ್ನು ತೋರಿಸುತ್ತದೆ. ಮದ್ಯ ನೀತಿ ಹಗರಣ ತನಿಖೆಯಲ್ಲಿ ನನ್ನನ್ನು ಬಂಧಿಸಲಾಗುತ್ತಿಲ್ಲ. ಆದ್ದರಿಂದ ಆಪ್‌ ಸರ್ಕಾರವನ್ನು ಉರುಳಿಸಲು ಸಂಚು ರೂಪಿಸುತ್ತಿದ್ದಾರೆ. ಅವರ ಷಡ್ಯಂತ್ರ ಇದೇ ಮೊದಲೇನಲ್ಲ. ಕಳೆದ 9 ವರ್ಷಗಳಿಂದಲೂ ಇಂತಹ ಅನೇಕ ಷಡ್ಯಂತ್ರಗಳನ್ನು ಮಾಡುತ್ತಲೇ ಬಂದಿದ್ದಾರೆ. ಯಾವುದೂ ಸಕ್ಸಸ್‌ ಆಗಿಲ್ಲ. ಏಕೆಂದರೆ ದೇವರು ಮತ್ತು ಈ ರಾಜ್ಯದ ಜನತೆ ಸದಾ ನಮ್ಮನ್ನ ಬೆಂಬಲಿಸಿದ್ದಾರೆ. ನಮ್ಮ ಎಲ್ಲ ಶಾಸಕರೂ ಬಲವಾಗಿ ಜೊತೆಯಲ್ಲಿದ್ದು ಆಫರ್‌ ಅನ್ನು ದೃಢವಾಗಿ ತಿರಸ್ಕರಿಸಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಇಡೀ ವಿಶ್ವವೇ ತಿರುಗಿ ನೋಡುವ ಕೆಲಸ ಮಾಡಿದ್ದಾರೆ: ಮೋದಿ ಹೊಗಳಿದ ರೆಡ್ಡಿ 

  • ಅಕ್ರಮ ಹಣ ವರ್ಗಾವಣೆ ಆರೋಪ- ಇಡಿ ಮೂರನೇ ಸಮನ್ಸ್‌ಗೂ ಜಗ್ಗದ ಕೇಜ್ರಿವಾಲ್

    ಅಕ್ರಮ ಹಣ ವರ್ಗಾವಣೆ ಆರೋಪ- ಇಡಿ ಮೂರನೇ ಸಮನ್ಸ್‌ಗೂ ಜಗ್ಗದ ಕೇಜ್ರಿವಾಲ್

    ನವದೆಹಲಿ: ದೆಹಲಿಯ (Delhi) ಹೊಸ ಮದ್ಯ ನೀತಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ (Arvind Kejriwal) ಜಾರಿ ನಿರ್ದೇಶನಾಲಯ (Enforcement Directorate) ಮೂರನೇ ಬಾರಿಗೆ ಸಮನ್ಸ್ ನೀಡಿದ್ದು, ಈ ಬಾರಿಯೂ ವಿಚಾರಣೆಗೆ ಹಾಜರಾಗಲು ಅವರು ನಿರಾಕರಿಸಿದ್ದಾರೆ.

    ಇಂದು ದೆಹಲಿಯ ಇಡಿ ಕಚೇರಿಗೆ ಆಗಮಿಸಿ ಹೇಳಿಕೆ ನೀಡುವಂತೆ ಕೋರಿ ಸಮನ್ಸ್ ಜಾರಿ ಮಾಡಿತ್ತು, ಆದರೆ ವಿಚಾರಣೆಗೆ ಆಗಮಿಸಲು ಸಾಧ್ಯವಾಗುವುದಿಲ್ಲ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. ಇದೇ ವೇಳೆ ನಾನು ತನಿಖೆಗೆ ಸಹಕರಿಸಲು ಸಿದ್ಧನಿದ್ದೇನೆ. ಈ ಸಮನ್ಸ್ ಕಾನೂನುಬಾಹಿರ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಅದಾನಿ ಕೇಸ್‌ ತನಿಖೆ ನಡೆಸಲು ಸೆಬಿ ಸಮರ್ಥವಾಗಿದೆ – ಪತ್ರಿಕೆಯ ವರದಿಯನ್ನು ಅವಲಂಬಿಸಬೇಡಿ : ಸುಪ್ರೀಂ ಹೇಳಿದ್ದೇನು?

    ಬಿಜೆಪಿಯೊಂದಿಗೆ ಕೈಜೋಡಿಸುತ್ತಿರುವವರ ವಿರುದ್ಧ ತನಿಖಾ ಸಂಸ್ಥೆಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರತಿಪಕ್ಷದ ನಾಯಕರನ್ನು ಬಂಧಿಸಲು ಸರ್ಕಾರ ಬಯಸಿದೆ. ಭ್ರಷ್ಟ ನಾಯಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಮುಖ್ಯಮಂತ್ರಿಗಳನ್ನು ಬಂಧಿಸಲು ತನಿಖಾ ಸಂಸ್ಥೆ ಉದ್ದೇಶಿಸಿದೆ ಮತ್ತು ಅವರನ್ನು ಚುನಾವಣಾ ಪ್ರಚಾರದಿಂದ ತಡೆಯಲು ಬಯಸಿದೆ ಎಂದು ಆಪ್ ಆರೋಪಿಸಿದೆ.

    ಸಿಎಂ ಅರವಿಂದ್ ಕೇಜ್ರಿವಾಲ್ ನಡೆ ವಿರುದ್ಧ ಎಕ್ಸ್ ಮಾಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ, ಸಿಎಂ ಮೂರನೇ ಸಮನ್ಸ್‍ಗೂ ಹಾಜರಾಗಿಲ್ಲ. ಇದರಿಂದ ಅವರು ಏನನ್ನೋ ಮುಚ್ಚಿಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಅದಕ್ಕಾಗಿಯೇ ಅವರು ಅಪರಾಧಿಯಂತೆ ತಲೆಮರೆಸಿಕೊಂಡಿದ್ದಾರೆ. ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರಿಗೆ ನ್ಯಾಯಾಲಯ ಜಾಮೀನು ನೀಡಿಲ್ಲ. ಇದೆಲ್ಲದರ ಹೊರತಾಗಿಯೂ ಅವರು ಅದೇ ಕಾರ್ಡ್ ಪ್ಲೇ ಮಾಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

    ಜಾಖರ್ಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಹಚರರ ಮೇಲೆ ಇಡಿ ದಾಳಿ ನಡೆಸುತ್ತಿದೆ. ಚುನಾವಣೆಗೆ ಮುನ್ನ ಛತ್ತೀಸ್‍ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಕಳುಹಿಸಿದೆ. ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಈ ಏಜೆನ್ಸಿಗಳು ತಮ್ಮ ಕೆಲಸವನ್ನು ಮಾಡುತ್ತಿಲ್ಲ. ಆದರೆ ವಿರೋಧ ಪಕ್ಷದ ನಾಯಕರ ಮೇಲೆ ಒತ್ತಡ ಹೇರುತ್ತಿದೆ. ತನಿಖಾ ಸಂಸ್ಥೆಗಳು ತಮ್ಮ ಕೆಲಸವನ್ನು ಮಾಡುತ್ತಿಲ್ಲ. ವಿರೋಧ ಪಕ್ಷದ ನಾಯಕರ ಮೇಲೆ ಒತ್ತಡ ಹೇರುತ್ತಿವೆ ಎಂದು ಕಾಂಗ್ರೆಸ್ ನಾಯಕ ಉದಿತ್ ರಾಜ್ ಆರೋಪಿಸಿದ್ದಾರೆ.

    ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಕೂಡ ಕೇಜ್ರಿವಾಲ್ ಅವರನ್ನು ಬೆಂಬಲಿಸಿದ್ದಾರೆ ಮತ್ತು ಎಎಪಿ ಮುಖ್ಯಸ್ಥರು ಯಾರಿಗೂ ಹೆದರುವುದಿಲ್ಲ ಎಂದು ಹೇಳಿದ್ದಾರೆ. ಈ ಮಧ್ಯೆ ಸಿಎಂ ಕೇಜ್ರಿವಾಲ್‍ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ನ ಕುರಿತು ಕಾನೂನಿನ ಪ್ರಕಾರ ಉತ್ತರಿಸಲಾಗುವುದು ಆಪ್ ಮುಖ್ಯ ರಾಷ್ಟ್ರೀಯ ವಕ್ತಾರ ಪ್ರಿಯಾಂಕಾ ಕಕ್ಕರ್ ಹೇಳಿದ್ದಾರೆ. ಇದನ್ನೂ ಓದಿ: ತೀಸ್ರಿ ಬಾರ್ ಮೋದಿ ಸರ್ಕಾರ್ – ಚುನಾವಣೆಗೆ ಬಿಜೆಪಿಯಿಂದ ಹೊಸ ಘೋಷ ವಾಕ್ಯ

  • ಮೋದಿ ವಿರುದ್ಧ ಹೇಳಿಕೆ – ಪ್ರಿಯಾಂಕಾ ಗಾಂಧಿ, ಕೇಜ್ರಿವಾಲ್‌ಗೆ ಚುನಾವಣಾ ಆಯೋಗ ಶೋಕಾಸ್‌ ನೋಟಿಸ್‌

    ಮೋದಿ ವಿರುದ್ಧ ಹೇಳಿಕೆ – ಪ್ರಿಯಾಂಕಾ ಗಾಂಧಿ, ಕೇಜ್ರಿವಾಲ್‌ಗೆ ಚುನಾವಣಾ ಆಯೋಗ ಶೋಕಾಸ್‌ ನೋಟಿಸ್‌

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಕುರಿತು ಪರಿಶೀಲಿಸದ ಮತ್ತು ಸುಳ್ಳು ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಚುನಾವಣಾ ಆಯೋಗ ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ.

    ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪ್ರಧಾನಿ ವಿರುದ್ಧ ಅವಹೇಳನಕಾರಿ ಟೀಕೆಗಳನ್ನು ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷಕ್ಕೂ (AAP) ಇದೇ ರೀತಿಯ ನೋಟಿಸ್ ನೀಡಲಾಗಿದೆ. ಬಿಜೆಪಿ ನೀಡಿದ ದೂರ ಆಧರಿಸಿ ನೋಟಿಸ್‌ ನೀಡಲಾಗಿದೆ. ಇದನ್ನೂ ಓದಿ: ವಿಜಯೇಂದ್ರ ತಮ್ಮ ಸಾಮರ್ಥ್ಯದಿಂದ ನೇಮಕಗೊಂಡಿದ್ದಾರೆ: ಜೆ.ಪಿ.ನಡ್ಡಾ

    ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ, “ಸುಳ್ಳು” ಮತ್ತು “ಪರಿಶೀಲಿಸದ” ಹೇಳಿಕೆಗಳನ್ನು ನೀಡಿದ್ದಾರೆ ಎಂದು ಬಿಜೆಪಿ ದೂರು ನೀಡಿದೆ. ಇದನ್ನು ಆಧರಿಸಿ, ಚುನಾವಣಾ ಆಯೋಗ, ಗುರುವಾರ ರಾತ್ರಿ 8 ಗಂಟೆಯೊಳಗೆ ತಮ್ಮ ಹೇಳಿಕೆಗಳಿಗೆ ವಿವರ ನೀಡುವಂತೆ ತಿಳಿಸಿದೆ.

    ನರೇಂದ್ರ ಮೋದಿ ಸರ್ಕಾರವು ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಿದೆ ಎಂಬ ಆಧಾರರಹಿತ ಮತ್ತು ಸುಳ್ಳು ಆರೋಪಗಳನ್ನು ಪ್ರಿಯಾಂಕಾ ಗಾಂಧಿ ವಾದ್ರಾ ಮಾಡಿದ್ದಾರೆ ಎಂದು ಬಿಜೆಪಿ ತನ್ನ ದೂರಿನಲ್ಲಿ ತಿಳಿಸಿದೆ. ಇದನ್ನೂ ಓದಿ: ಮೋದಿ ಗ್ಯಾರಂಟಿಗಳ ಮುಂದೆ ಕಾಂಗ್ರೆಸ್‌ನ ಹುಸಿ ಭರವಸೆಗಳು ಕೆಲಸ ಮಾಡಲ್ಲ: ಪ್ರಧಾನಿ

    ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಮತದಾರರು 230 ವಿಧಾನಸಭಾ ಕ್ಷೇತ್ರಗಳಿಂದ ಶಾಸಕರನ್ನು ಆಯ್ಕೆ ಮಾಡಲಿದ್ದಾರೆ.

  • ಕೇಜ್ರಿವಾಲ್ ಜೈಲಿಗೆ ಹೋದರೂ ಅವರೇ ಸಿಎಂ ಆಗಿ ಮುಂದುವರಿಯಬೇಕು: ದೆಹಲಿ ಸಚಿವೆ

    ಕೇಜ್ರಿವಾಲ್ ಜೈಲಿಗೆ ಹೋದರೂ ಅವರೇ ಸಿಎಂ ಆಗಿ ಮುಂದುವರಿಯಬೇಕು: ದೆಹಲಿ ಸಚಿವೆ

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದರೆ ಜೈಲಿನಿಂದಲೇ ಕೆಲಸ ಮಾಡಲು ನ್ಯಾಯಾಲಯದ ಅನುಮತಿ ಪಡೆಯುವುದಾಗಿ ಆಮ್ ಆದ್ಮಿ ಪಕ್ಷ (AAP) ಹೇಳಿದೆ.

    ಪಕ್ಷದ ಶಾಸಕರು ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿದರೂ ಜೈಲಿನಿಂದಲೇ ಅವರು ಸರ್ಕಾರವನ್ನು ನಡೆಸಬೇಕು ಎಂದು ಹೇಳಿದ್ದಾರೆ. ನಾವು ಜನರ ಪರವಾಗಿ ಹೋಗುತ್ತಿದ್ದೇವೆ. ಆಮ್ ಆದ್ಮಿ ಪಕ್ಷ ಮತ್ತು ಅರವಿಂದ್ ಕೇಜ್ರಿವಾಲ್ ವಿರುದ್ಧ ದೌರ್ಜನ್ಯ ನಡೆಯುತ್ತಿದೆ ಎಂದು ಜನರು ಹೇಳುತ್ತಿದ್ದಾರೆ. ಇದಕ್ಕಾಗಿಯೇ ಕೇಜ್ರಿವಾಲ್ ಜೈಲಿಗೆ ಹೋದರೂ ಅವರು ಸಿಎಂ ಆಗಿಯೇ ಉಳಿಯಬೇಕು ಎಂದು ದೆಹಲಿ ಸಚಿವೆ ಅತಿಶಿ (Atishi) ಹೇಳಿದ್ದಾರೆ.

    ದೆಹಲಿಯ ಜನರು ಕೇಜ್ರಿವಾಲ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದಾರೆ. ಹೀಗಾಗಿ ಅವರು ಸಿಎಂ ಆಗಿಯೇ ಉಳಿಯಬೇಕು. ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಮತ್ತು ಕ್ಯಾಬಿನೆಟ್ ಸಭೆಯನ್ನು ಜೈಲಿನಲ್ಲಿಯೇ ನಡೆಸಲು ಅನುಮತಿ ಕೇಳುತ್ತೇವೆ ಎಂದು ಅವರು ಹೇಳಿದರು. ಇದನ್ನೂ ಓದಿ: ಮೊದಲ ಬಾರಿಗೆ ವಿವಿ ಚುನಾವಣೆಯಲ್ಲಿ ಎಬಿವಿಪಿಯಿಂದ ಮುಸ್ಲಿಂ ವಿದ್ಯಾರ್ಥಿನಿ ಕಣಕ್ಕೆ

    ದೆಹಲಿಯ ಮದ್ಯ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಅರವಿಂದ್ ಕೇಜ್ರಿವಾಲ್ ಅವರನ್ನು ನವೆಂಬರ್ 2 ರಂದು ಜಾರಿ ನಿರ್ದೇಶನಾಲಯ ವಿಚಾರಣೆಗೆ ಕರೆದಿತ್ತು. ಆದರೆ ಸಿಎಂ ಇಡಿ ಕಚೇರಿಗೆ ಹಾಜರಾಗದೇ ಸಮನ್ಸ್ ಅನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿದ್ದರು. ಇದಾದ ಬಳಿಕ ಅವರನ್ನು ಶೀಘ್ರದಲ್ಲಿಯೇ ಬಂಧಿಸುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಈ ಹಿಂದೆ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ವಿಚಾರಣೆ ನಡೆಸಿತ್ತು.

    ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಇದೇ ಪ್ರಕರಣದಲ್ಲಿ ಫೆಬ್ರವರಿಯಲ್ಲಿ ಬಂಧಿಸಲಾಗಿತ್ತು. ಬಂಧನದ ಬಳಿಕ ಅವರು ಕ್ಯಾಬಿನೆಟ್ ಹುದ್ದೆಯಿಂದ ಕೆಳಗಿಳಿದಿದ್ದರು. ಪ್ರಸ್ತುತ ಅವರು ಜೈಲಿನಲ್ಲಿದ್ದಾರೆ. ಕಳೆದ ವಾರ ಸುಪ್ರೀಂ ಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು. ಇದನ್ನೂ ಓದಿ: ಕೈಕೊಟ್ಟ EVM; ವೋಟ್ ಮಾಡಲಾಗದೇ ಮಿಜೋರಾಂ ಸಿಎಂ ವಾಪಸ್

  • ದೆಹಲಿ ಮಾಲಿನ್ಯ ನಿಯಂತ್ರಣಕ್ಕೆ ಸಮ ಬೆಸ ಯೋಜನೆ ಜಾರಿ

    ದೆಹಲಿ ಮಾಲಿನ್ಯ ನಿಯಂತ್ರಣಕ್ಕೆ ಸಮ ಬೆಸ ಯೋಜನೆ ಜಾರಿ

    – 10, 12 ತರಗತಿ ಹೊರತುಪಡಿಸಿ ಎಲ್ಲರಿಗೂ ರಜೆ

    ನವದೆಹಲಿ: ಮಾಲಿನ್ಯದ ಪ್ರಮಾಣ ಹೆಚ್ಚುತ್ತಿರುವುದರಿಂದ ದೆಹಲಿಯಲ್ಲಿ (Delhi) ನ.13 ರಿಂದ ನ.20 ರವರೆಗೆ ಸಮ-ಬೆಸ ಸಂಖ್ಯೆಯ ಕಾರು ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ (Delhi) ಪರಿಸರ ಸಚಿವ ಗೋಪಾಲ್ ರೈ (Environment Minister Gopal Rai) ಘೋಷಿಸಿದ್ದಾರೆ.

    ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ಬೆಸ-ಸಮ ಯೋಜನೆಯ ವಾಹನಗಳ ನಂಬರ್ ಪ್ಲೇಟ್‍ನ ಕೊನೆಯ ಅಂಕಿಗಳ ಆಧಾರದ ಮೇಲೆ ಈ ಯೋಜನೆ ಜಾರಿ ಮಾಡಲಾಗುತ್ತದೆ. ಇದರ ಅಡಿಯಲ್ಲಿ ಬೆಸ ಅಂಕಿಗಳಲ್ಲಿ (1,3,5,7 ಮತ್ತು 9) ಕೊನೆಗೊಳ್ಳುವ ನಂಬರ್ ಪ್ಲೇಟ್ ಹೊಂದಿರುವ ವಾಹನಗಳು ಬೆಸ ದಿನಾಂಕಗಳಲ್ಲಿ (0,2,4,6 ಮತ್ತು 8) ಸಮ ಸಂಖ್ಯೆಗಳನ್ನು ಹೊಂದಿರುವ ವಾಹನಗಳು ಸಮ ದಿನಾಂಕಗಳಲ್ಲಿ ರಸ್ತೆಗಳಲ್ಲಿ ಸಂಚರಿಸಲು ಅನುಮತಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಸ್ವಾಮೀಜಿ ನಕ್ಸಲೈಟ್ ಆಗ್ಬೇಕಿತ್ತು, ದುರ್ದೈವ ಖಾವಿ ಹಾಕಿದ್ದಾರೆ: ಯತ್ನಾಳ್ ಕಿಡಿ

    ಈ ಮೊದಲು 6 ರಿಂದ 12ನೇ ತರಗತಿಗಳಿಗೆ ಆನ್‍ಲೈನ್‍ಗೆ ತರಗತಿ ಆಯ್ಕೆಯನ್ನು ನೀಡಲಾಗಿತ್ತು. ಈಗ 10 ಮತ್ತು 12 ಹೊರತುಪಡಿಸಿ ಎಲ್ಲಾ ವರ್ಗಗಳ ಶಾಲೆಗಳು ನವೆಂಬರ್ 10 ರವರೆಗೆ ರಜೆ ನೀಡಲು ಆದೇಶಿಸಲಾಗಿದೆ. ದೆಹಲಿಯಲ್ಲಿ ಬಿಎಸ್ 3 ಪೆಟ್ರೋಲ್ ಮತ್ತು ಬಿಎಸ್ 4 ಡೀಸೆಲ್ ಕಾರುಗಳ ಮೇಲಿನ ನಿಷೇಧವು ಮುಂದುವರಿಯುತ್ತದೆ. ನಗರದಲ್ಲಿ ಯಾವುದೇ ನಿರ್ಮಾಣ ಸಂಬಂಧಿತ ಕೆಲಸಗಳು ನಡೆಯುವುದಿಲ್ಲ ಎಂದಿದ್ದಾರೆ.

    ಮಾಲಿನ್ಯ ನಿಯಂತ್ರಣಕ್ಕೆ ನಾಲ್ಕು ಹಂತಗಳಲ್ಲಿ ಕ್ರಮಗಳನ್ನು ಯೋಜಿಸಿದೆ. ನಾಲ್ಕನೇ ಹಂತವೂ ಗಾಳಿಯ ಗುಣಮಟ್ಟ ಸೂಚ್ಯಂಕ 450 ಮೀರುವ ಮುನ್ನ ಈ ನಿಯಮವನ್ನು ಅನುಷ್ಠಾನಗೊಳಿಸಬೇಕು. ಈವರೆಗೂ ಇದು ಸಮರ್ಪಕವಾಗಿ ಜಾರಿಯಾಗಿಲ್ಲ. ನಾಲ್ಕನೇ ಹಂತವೂ ಸರ್ಕಾರಿ ಮತ್ತು ಖಾಸಗಿ ಕಚೇರಿಗಳ 50% ರಷ್ಟು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಶಿಫಾರಸು ಮಾಡಲಾಗಿದೆ. ಸಾರ್ವಜನಿಕ ಯೋಜನೆಗಳಿಗೆ ಸಂಬಂಧಿಸಿದವುಗಳನ್ನು ಹೊರತುಪಡಿಸಿ ದೆಹಲಿಗೆ ಟ್ರಕ್ ಪ್ರವೇಶದ ಮೇಲೆ ಸಂಪೂರ್ಣ ನಿಷೇಧವಿದೆ ಎಂದು ಅವರು ತಿಳಿಸಿದ್ದಾರೆ.

    ಕಾಲೇಜ್‍ಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದು, ಬೆಸ-ಸಮ ನಿಯಮದಂತಹ ಹೆಚ್ಚುವರಿ ತುರ್ತು ಕ್ರಮಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಲಾಗಿದೆ. ದೆಹಲಿಯ ಗಾಳಿಯ ಗುಣಮಟ್ಟವು ಅತ್ಯಂತ ಕಳಪೆಯಿಂದ ತೀವ್ರ ಕಳಪೆ ಮಟ್ಟಕ್ಕೆ ತಿರುಗಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ ಸೋಮವಾರ ಬೆಳಗ್ಗೆ ಗಾಳಿಯ ಗುಣಪಟ್ಟದ ಸೂಚ್ಯಂಕದಲ್ಲಿ (AQI) 437ನ್ನು ದಾಖಲಿಸಿದೆ. ಇದನ್ನೂ ಓದಿ: ವಿದ್ಯುತ್ ಕಂಪನಿಗಳ 389.66 ಕೋಟಿ ರೂ. ಬಾಕಿ ಮನ್ನಾ: ಸಿಎಂ ಘೋಷಣೆ

  • ಸತತ 4ನೇ ದಿನ ವಾಯುಗುಣಮಟ್ಟ ಕುಸಿತ – ದೆಹಲಿಯಲ್ಲಿ ಹೈವೋಲ್ಟೇಜ್‌ ಸಭೆ ಕರೆದ ಸಿಎಂ

    ಸತತ 4ನೇ ದಿನ ವಾಯುಗುಣಮಟ್ಟ ಕುಸಿತ – ದೆಹಲಿಯಲ್ಲಿ ಹೈವೋಲ್ಟೇಜ್‌ ಸಭೆ ಕರೆದ ಸಿಎಂ

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಗುಣಮಟ್ಟ ಸತತ 4ನೇ ದಿನ ತೀವ್ರ ಕಳಪೆ ಮಟ್ಟಕ್ಕೆ ಕುಸಿದಿದೆ. CPCB ಮಾಹಿತಿ ಪ್ರಕಾರ ಸೋಮವಾರ ಬೆಳಗ್ಗೆ 9 ಗಂಟೆ ವೇಳೆಗೆ ವಾಯು ಗುಣಮಟ್ಟ ಸೂಚ್ಯಂಕವು (AQI) 437 ರಷ್ಟು ದಾಖಲಾಗಿದೆ. ಆರೋಗ್ಯದ ದೃಷ್ಟಿಯಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ನವೆಂಬರ್ 10ರ ವರೆಗೆ ಮುಚ್ಚುವಂತೆ ದೆಹಲಿ ಸರ್ಕಾರ ಆದೇಶಿಸಿದೆ. ಈ ನಡುವೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಇಂದೇ ಉನ್ನತ ಮಟ್ಟದ ಸಭೆ ಕರೆದ್ದಾರೆ.

    ಸಭೆಯಲ್ಲಿ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಸೇರಿದಂತೆ ಸಾರಿಗೆ, ಮುನ್ಸಿಪಲ್‌ ಕಾರ್ಪೊರೇಷನ್‌, ದೆಹಲಿ ಪೊಲೀಸ್, ದೆಹಲಿ ಟ್ರಾಫಿಕ್ ಪೋಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳುತ್ತಿದ್ದಾರೆ. ಸಭೆಯಲ್ಲಿ ನಗರದಾದ್ಯಂತ ಕೈಗೊಳ್ಳಬಹುದಾದ ಹೆಚ್ಚುವರಿ ತುರ್ತು ಕ್ರಮಗಳ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ.

    ದೆಹಲಿಯಲ್ಲಿ AQI 450 ಮಾರ್ಕ್ ಅನ್ನು ಮೀರುವ ಕನಿಷ್ಠ ಮೂರು ದಿನಗಳ ಮೊದಲು ಮಾಲಿನ್ಯ-ವಿರೋಧಿ ಯೋಜನೆಯ ಅಂತಿಮ ಹಂತವನ್ನು ಸಕ್ರಿಯಗೊಳಿಸಲಾಗುತ್ತದೆ. ಆದರೆ, ಈ ಬಾರಿ ಕ್ರಿಯಾಶೀಲ ಅನುಷ್ಠಾನ ಸಾಧ್ಯವಾಗಿಲ್ಲ. ಇದರಿಂದ ವಾಯು ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕೇದಾರನಾಥದಲ್ಲಿ ಕಾಯುತ್ತಿರುವ ಯಾತ್ರಾರ್ಥಿಗಳಿಗೆ ಚಹಾ ಹಂಚಿದ ರಾಗಾ

    ಸೋಮವಾರ ಬೆಳಗ್ಗೆ 9 ಗಂಟೆಗೆ ಬವಾನಾದಲ್ಲಿ 478, ದ್ವಾರಕಾ ಸೆಕ್ಟರ್ 8ರಲ್ಲಿ 459, ಜಹಾಂಗೀರಪುರಿಯಲ್ಲಿ 475, ಮುಂಡ್ಕಾದಲ್ಲಿ 466, ನರೇಲಾದಲ್ಲಿ 460, ನ್ಯೂ ಮೋತಿ ಬಾಗ್‌ನಲ್ಲಿ 444, ಓಖ್ಲಾ ಹಂತ-2ರಲ್ಲಿ 446 ರಷ್ಟು ವಾಯುಗುಣಮಟ್ಟ ಸೂಚ್ಯಂಕ ದಾಖಲಾಗಿದೆ. ಪಂಜಾಬಿ ಬಾಗ್‌ನಲ್ಲಿ 469, ಆರ್‌ಕೆ ಪುರಂನಲ್ಲಿ 462, ರೋಹಿಣಿಯಲ್ಲಿ 478, ಸಿರಿ ಫೋರ್ಟ್‌ನಲ್ಲಿ 430 ಮತ್ತು ವಜೀರ್‌ಪುರದಲ್ಲಿ 482 ರಷ್ಟು ದಾಖಲಾಗಿರುವುದು ಕಂಡುಬಂದಿದೆ. ಇದನ್ನೂ ಓದಿ: ನ.19ಕ್ಕೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ – ಖಲಿಸ್ತಾನಿ ಭಯೋತ್ಪಾದಕನ ಬೆದರಿಕೆ ವೀಡಿಯೋ

    ಈಗಾಗಲೇ ವಾಯು ಮಾಲಿನ್ಯಕ್ಕೆ ನಿಖರ ಕಾರಣ ಪತ್ತೆಹಚ್ಚಲು ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ 1,119 ಅಧಿಕಾರಿಗಳನ್ನೊಳಗೊಂಡ 517 ತಂಡಗಳನ್ನ ರಚಿಸಿದೆ. ಈ ತಂಡದ ಮೂಲಕ ಚಳಿಗಾಲದ ಕ್ರಿಯಾಯೋಜನೆ ಅಡಿಯಲ್ಲಿ ತೆರೆದ ಪ್ರದೇಶದಲ್ಲಿ ವಸ್ತುಗಳ ಸುಡುವಿಕೆ, ಅನಗತ್ಯ ತ್ಯಾಜ್ಯ ಮತ್ತು ಇತರೇ ಕಾರಣಗಳಿಂದ ಉಂಟಾಗುತ್ತಿರುವ ಧೂಳನ್ನು ಪರಿಶೀಲಿಸಲು ಈ ತಂಡವನ್ನು ನಿಯೋಜಿಸಿದೆ. ಈ ನಡುವೆ ಉನ್ನತ ಮಟ್ಟದ ಸಭೆಯಲ್ಲಿ ಇನ್ನಷ್ಟು ತುರ್ತು ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಮ್ಮ ಕ್ರಿಕೆಟ್‌ ತಂಡ ಮತ್ತೊಮ್ಮೆ ವಿಜಯಶಾಲಿಯಾಗಿದೆ: ಭಾರತದ ಗೆಲುವಿಗೆ ಮೋದಿ ಅಭಿನಂದನೆ

  • ರಾಜಕೀಯ ಪ್ರೇರಿತವಾಗಿ ನೀಡಿರುವ ನೋಟಿಸ್‌ ಹಿಂಪಡೆಯಿರಿ: EDಗೆ ಕೇಜ್ರಿವಾಲ್‌ ಪ್ರತಿಕ್ರಿಯೆ

    ರಾಜಕೀಯ ಪ್ರೇರಿತವಾಗಿ ನೀಡಿರುವ ನೋಟಿಸ್‌ ಹಿಂಪಡೆಯಿರಿ: EDಗೆ ಕೇಜ್ರಿವಾಲ್‌ ಪ್ರತಿಕ್ರಿಯೆ

    ನವದೆಹಲಿ: ನನಗೆ ನೀಡಿರುವ ನೋಟಿಸ್‌ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ. ಇ.ಡಿ (Enforcement Directorate) ಕೂಡಲೇ ಸಮನ್ಸ್‌ ಹಿಂಪಡೆಯಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಹೇಳಿದ್ದಾರೆ.

    ಸಮನ್ಸ್‌ ಕುರಿತು ಪ್ರತಿಕ್ರಿಯಿಸಿರುವ ಕೇಜ್ರಿವಾಲ್‌, ಬಿಜೆಪಿಯ ಒತ್ತಾಯದ ಮೇರೆಗೆ ನೋಟಿಸ್ ಕಳುಹಿಸಲಾಗಿದೆ. ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಲು ನನಗೆ ಸಾಧ್ಯವಾಗುತ್ತಿಲ್ಲ ಎಂದು ಖಚಿತಪಡಿಸಿಕೊಳ್ಳಲು ನೋಟಿಸ್ ಕಳುಹಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಐಬ್ರೋಸ್ ಮಾಡಿಸಿದ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ

    ಕೇಜ್ರಿವಾಲ್ ಅವರು ಬೆಳಿಗ್ಗೆ 11 ಗಂಟೆಗೆ ಕೇಂದ್ರ ತನಿಖಾ ಸಂಸ್ಥೆಯ ದೆಹಲಿ ಕಚೇರಿಯ ಮುಂದೆ ಹಾಜರಾಗಬೇಕಿತ್ತು. ಆದರೆ ಅವರು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಪತ್ರ ಬರೆದು ಸಮನ್ಸ್ ಅನ್ನು ಹಿಂಪಡೆಯುವಂತೆ ಕೇಳಿಕೊಂಡಿದ್ದಾರೆ.

    ಯಾರೇ ಆದರೂ ಇ.ಡಿ ಸಮನ್ಸ್‌ಗಳನ್ನು ಗರಿಷ್ಠ ಮೂರು ಬಾರಿ ತಿರಸ್ಕರಿಸಬಹುದು. ಬಳಿಕ ಇ.ಡಿ ಜಾಮೀನು ರಹಿತ ವಾರಂಟ್ ನೀಡಬಹುದು. ಇ.ಡಿ ಕಟ್ಟುನಿಟ್ಟಾದ ಅಕ್ರಮ ಹಣ ವರ್ಗಾವಣೆ ಆಕ್ಟ್ ಅಥವಾ PMLA ಅಡಿಯಲ್ಲಿ ಸಮನ್ಸ್ ನೀಡಬಹುದು. ಇದನ್ನೂ ಓದಿ: ತಲೈವಾಗೆ ದೇವಸ್ಥಾನ ಕಟ್ಟಿಸಿದ ಅಭಿಮಾನಿ ದೇವ್ರು – 250Kg ತೂಕದ ರಜನಿಕಾಂತ್‌ ವಿಗ್ರಹ ಸ್ಥಾಪನೆ

    ದೆಹಲಿ ಉಪ ಮುಖ್ಯಮಂತ್ರಿ ಆಗಿದ್ದ ಮನೀಸ್‌ ಸಿಸೋಡಿಯಾ ಅವರನ್ನು ಬಂಧಿಸಿದೆ. ಈಗ ಬಿಜೆಪಿ ಆಜ್ಞೆಯ ಮೇರೆಗೆ ನನಗೆ ನೋಟಿಸ್‌ ನೀಡಿದೆ. ಇದು ಅಕ್ರಮ ಮತ್ತು ರಾಜಕೀಯ ಪ್ರೇರಿತ. ನೋಟಿಸ್‌ ಹಿಂಪಡೆಯಬೇಕು ಎಂದು ಕೇಜ್ರಿವಾಲ್‌ ಒತ್ತಾಯಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೋದಿಗೆ ಕೇಜ್ರಿವಾಲ್‌ ಕಂಡರೆ ಭಯ, ಶ್ರೀಘ್ರವೇ ಬಂಧನ ಸಾಧ್ಯತೆ –  ಸಚಿವೆ ಅತಿಶಿ

    ಮೋದಿಗೆ ಕೇಜ್ರಿವಾಲ್‌ ಕಂಡರೆ ಭಯ, ಶ್ರೀಘ್ರವೇ ಬಂಧನ ಸಾಧ್ಯತೆ – ಸಚಿವೆ ಅತಿಶಿ

    ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ (Excise Policy Case) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ನವೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದು, ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯ (ED) ಅವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಎಎಪಿ ನಾಯಕಿ, ಸಚಿವೆ ಅತಿಶಿ ಮರ್ಲೆನಾ (Atishi Marlena) ಆತಂಕಪಟ್ಟಿದ್ದಾರೆ.

    ಅರವಿಂದ್ ಕೇಜ್ರಿವಾಲ್‌ (Arvind Kejriwal) ಅವರಿಗೆ ಸಮನ್ಸ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಉನ್ನತ ನಾಯಕರನ್ನು ಜೈಲಿಗೆ ಕಳುಹಿಸುವ ಮೂಲಕ ಆಮ್ ಆದ್ಮಿ ಪಕ್ಷವನ್ನೇ ಮುಗಿಸಲು ಪ್ರಯತ್ನಿಸುತ್ತಿದೆ. ಚುನಾವಣೆಯಲ್ಲಿ ಕೇಜ್ರಿವಾಲ್ ಅವರನ್ನ ಸೋಲಿಸಲು ಸಾಧ್ಯವಾಗದ ಕಾರಣ ಬಿಜೆಪಿ ಎಎಪಿ ವಿರುದ್ಧ ಇಂತಹ ತಂತ್ರಗಳನ್ನು ಬಳಸುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ:  ಆಪಲ್‌ನಿಂದ 150 ದೇಶಗಳ ಜನರಿಗೆ ಎಚ್ಚರಿಕೆ ಸಂದೇಶ – ಕದ್ದಾಲಿಕೆ ಆರೋಪಕ್ಕೆ ಕೇಂದ್ರ ಸ್ಪಷ್ಟನೆ

    ನವೆಂಬರ್ 2 ರಂದು ಕೇಜ್ರಿವಾಲ್ ಅವರನ್ನು ಬಂಧಿಸಲಾಗುವುದು ಎನ್ನುವ ಮಾಹಿತಿ ಬಂದಿದೆ. ಅವರನ್ನು ಬಂಧಿಸಿದರೆ ಅದು ಭ್ರಷ್ಟಾಚಾರದ ಆರೋಪ ಕಾರಣವಲ್ಲ, ಅವರು ಬಿಜೆಪಿ (BJJP) ವಿರುದ್ಧ ಮಾತನಾಡಿದ್ದಕ್ಕೆ ಪ್ರತಿಕಾರ ಎನ್ನಬಹುದು. ಈಗಾಗಲೇ ಎಎಪಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎರಡು ಬಾರಿ ಬಿಜೆಪಿಯನ್ನ ಸೋಲಿಸಿದೆ, ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD) ಚುನಾವಣೆಯಲ್ಲೂ ಸೋಲಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಕೇಜ್ರಿವಾಲ್‌ ಅವರನ್ನ ಕಂಡರೆ ಭಯವಿದೆ. ಹಾಗಾಗಿ ಅಬರನ್ನು ಬಂಧಿಸುವ ತಂತ್ರ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

    ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 2 ರಂದು ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿರುವ ತನ್ನ ಕಚೇರಿಯಲ್ಲಿ ವಿಚಾರಣೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್‌ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಇದನ್ನೂ ಓದಿ: ಕೇಂದ್ರದಿಂದ ಐಫೋನ್‌ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮದ್ಯ ನೀತಿ ಪ್ರಕರಣ – ನ.2ಕ್ಕೆ ಕಚೇರಿಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಇಡಿ ಸಮನ್ಸ್

    ಮದ್ಯ ನೀತಿ ಪ್ರಕರಣ – ನ.2ಕ್ಕೆ ಕಚೇರಿಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಇಡಿ ಸಮನ್ಸ್

    ನವದೆಹಲಿ: ಪ್ರಸ್ತುತ ರದ್ದಾಗಿರುವ ದೆಹಲಿಯ ಅಬಕಾರಿ ನೀತಿಗೆ (Delhi Excise Policy Case) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಆಮ್ ಆದ್ಮಿ ಪಕ್ಷದ (AAP) ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸಮನ್ಸ್ ನೀಡಿದೆ.

    ಈ ವರ್ಷದ ಫೆಬ್ರವರಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಅಕ್ಟೋಬರ್ 4 ರಂದು ಆಪ್ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ದೆಹಲಿಯ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಇದೀಗ ಅದೇ ಪ್ರಕರಣದಲ್ಲಿ ದೆಹಲಿ ಸಿಎಂಗೆ ಇಡಿ ಸಮನ್ಸ್ ನೀಡಿದೆ. ನವೆಂಬರ್ 2 ರಂದು (ಗುರುವಾರ) ತನ್ನ ಕಚೇರಿಯಲ್ಲಿ ಹಾಜರಾಗುವಂತೆ ಕೇಜ್ರಿವಾಲ್‌ಗೆ ಇಡಿ ತಿಳಿಸಿದೆ.

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಕೆಲವೇ ಗಂಟೆಗಳ ಬಳಿಕ ಅರವಿಂದ್ ಕೇಜ್ರಿವಾಲ್ ಅವರಿಗೆ ಇಡಿ ಸಮನ್ಸ್ ನೀಡಿದೆ. ಈ ಪ್ರಕರಣದಲ್ಲಿ 338 ಕೋಟಿ ರೂ. ಹಣ ವರ್ಗಾವಣೆ ಆಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ವಿಶ್ವಕಪ್‌ನಲ್ಲಿ ಪಾಕ್‌ ಕಳಪೆ ಪ್ರದರ್ಶನ – ಮೊದಲನೇಯ ದೊಡ್ಡ ವಿಕೆಟ್‌ ಪತನ

    ದೆಹಲಿ ಸರ್ಕಾರ 2021ರ ನವೆಂಬರ್ 17ರಂದು ಈ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರ ಆರೋಪದ ಮೇಲೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಯಿತು. ಈ ಅಬಕಾರಿ ನೀತಿ ಆರ್ಥಿಕ ಲಾಭವನ್ನು ಪಡೆಯುವ ಸಲುವಾಗಿ ಮದ್ಯದ ಪರವಾನಗಿಯನ್ನು ಅನರ್ಹರಿಗೂ ನೀಡುವಲ್ಲಿ ಸರ್ಕಾರ ಒಲವು ತೋರಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ ದೆಹಲಿ ಸರ್ಕಾರ ಮತ್ತು ಸಿಸೋಡಿಯಾ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಇದನ್ನೂ ಓದಿ: ಕ್ರೀಡಾ ಉತ್ಸವದಲ್ಲಿ ಟ್ರ್ಯಾಕ್ಟರ್ ಅಡಿಗೆ ಸಿಲುಕಿ ವ್ಯಕ್ತಿ ಸಾವು – ಟ್ರ್ಯಾಕ್ಟರ್ ಸ್ಟಂಟ್ ಬ್ಯಾನ್ ಮಾಡಿದ ಪಂಜಾಬ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೆಹಲಿ ವಾಯುಮಾಲಿನ್ಯಕ್ಕೆ ಮೂಲ ಗೊತ್ತಿಲ್ಲ – ಆಪ್ ಸಚಿವೆ ವಿವಾದಾತ್ಮಕ ಹೇಳಿಕೆ

    ದೆಹಲಿ ವಾಯುಮಾಲಿನ್ಯಕ್ಕೆ ಮೂಲ ಗೊತ್ತಿಲ್ಲ – ಆಪ್ ಸಚಿವೆ ವಿವಾದಾತ್ಮಕ ಹೇಳಿಕೆ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ವಾಯು ಮಾಲಿನ್ಯಕ್ಕೆ (Air Pollution) ಕಾರಣವಾಗುವ ವಿವಿಧ ಮೂಲಗಳನ್ನು ತಿಳಿಸುವ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ. ಮಾಲಿನ್ಯಕ್ಕೆ ಕಾರಣವಾಗುವ ಮೂಲಗಳು ನಿರ್ದಿಷ್ಟ ಪ್ರಮಾಣ ತಿಳಿಯದೇ ಮಾಲಿನ್ಯವನ್ನು ಕಡಿಮೆ ಮಾಡುವ ನೀತಿಯನ್ನು ರಚಿಸಲು ಸಾಧ್ಯವಿಲ್ಲ ಎಂದು ಸಚಿವೆ ಅತಿಶಿ (Minister Atishi) ಹೇಳಿದ್ದಾರೆ.

    ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 3 ವರ್ಷಗಳ ಹಿಂದೆ ಇಂಡಿಯನ್ ಕೌನ್ಸಿಲ್ ಫಾರ್ ಅಗ್ರಿಕಲ್ಚರಲ್ ರಿಸರ್ಚ್ (ICAR) ಬಿಡುಗಡೆ ಮಾಡಿದ ದತ್ತಾಂಶವನ್ನು ಉಲ್ಲೇಖಿಸಿದ್ದ ಅತಿಶಿ ದೆಹಲಿ ಮಾಲಿನ್ಯವು ಹರಿಯಾಣ ಮತ್ತು ಪಂಜಾಬ್‌ನಲ್ಲಿ (Punjab) ಹುಲ್ಲು ಸುಡುವಿಕೆಯೊಂದಿಗೆ ನೇರವಾಗಿ ಸಂಬಂಧ ಹೊಂದಿದೆ ಎಂದರು. ಇದನ್ನೂ ಓದಿ: ನಾನೊಬ್ಬ ಕ್ರಿಶ್ಚಿಯನ್ ಧರ್ಮಸ್ಥಳದಲ್ಲಿ ಆಣೆ ಮಾಡಿದ್ರೆ ಯಾರು ನಂಬುತ್ತಾರೆ?: ಕೆ.ಜೆ ಜಾರ್ಜ್

    ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳ ವಿರುದ್ಧ ಸ್ವಯಂಪ್ರೇರಿತ ನಿರ್ಲಕ್ಷ್ಯದ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವಂತೆ ಅವರು ವಾಯು ಗುಣಮಟ್ಟ ಆಯೋಗಕ್ಕೆ ಮನವಿ ಮಾಡಿದರು. 2 ರಾಜ್ಯಗಳಲ್ಲಿ ಹುಲ್ಲು ಸುಡುವುದರಿಂದ ದೆಹಲಿಯಲ್ಲಿ ಅಸಹನೀಯ ವಾಯುಮಾಲಿನ್ಯ ಉಂಟಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಮಮಂದಿರ ಲೋಕಾರ್ಪಣೆಗೆ ಮೋದಿಗೆ ಮಾತ್ರ ಯಾಕೆ ಆಹ್ವಾನ – ಸಲ್ಮಾನ್ ಖುರ್ಷಿದ್ ಪ್ರಶ್ನೆ

    ಅಂದು ಕಾಂಗ್ರೆಸ್‌ನಿಂದ ಅಮರಿಂದರ್ ಸಿಂಗ್ ಪಂಜಾಬ್ ಮುಖ್ಯಮಂತ್ರಿಯಾಗಿದ್ದರು ಮತ್ತು ಬಿಜೆಪಿಯಿಂದ ಮನೋಹರ್ ಲಾಲ್ ಖಟ್ಟರ್ ಹರಿಯಾಣದ ಸಿಎಂ ಆಗಿದ್ದರು. ಈಗ ಪಂಜಾಬ್‌ನಲ್ಲಿ ಆಪ್‌ ಸರ್ಕಾರ ರಚನೆ ಮಾಡಿದ್ದು, ಭಗವಂತ್ ಮಾನ್ (Bhagwant Man Singh) ಮುಖ್ಯಮಂತ್ರಿಯಾಗಿದ್ದಾರೆ. ಈ ಹಿನ್ನಲೆ ಮಾಲಿನ್ಯದ ಹೊರೆಯನ್ನು ಪಂಜಾಬ್ ಮೇಲೆ‌ ಹೊರಿಸಲು ಆಪ್‌ ಹಿಂದೇಟು ಹಾಕುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಸಿಯಾಚಿನ್‌ನಲ್ಲಿ ಹುತಾತ್ಮನಾದ ಅಗ್ನಿವೀರನ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸಿಎಂ

    ಕಳೆದ ವರ್ಷ ಅಕ್ಟೋಬರ್‌ನಲ್ಲಿ ದೆಹಲಿ ಸಚಿವ ಸಂಪುಟ ರಾಷ್ಟ್ರ ರಾಜಧಾನಿಯಲ್ಲಿ ನೈಜ-ಸಮಯದ ವಾಯುಮಾಲಿನ್ಯ ಮೂಲ ಅಧ್ಯಯನವನ್ನು ನಡೆಸಲು ಐಐಟಿ-ಕಾನ್ಪುರ್ ಜೊತೆಗೆ ಎಂಒಯುಗೆ ಸಹಿ ಹಾಕಿತು. ಯೋಜನೆಗೆ ಅಂದಾಜು ವೆಚ್ಚ 12 ಕೋಟಿ ರೂ.ಗಿಂತ ಹೆಚ್ಚಿದ್ದು, ದೆಹಲಿ ಸರ್ಕಾರವು ಐಐಟಿ-ಕಾನ್ಪುರಕ್ಕೆ ಅಗತ್ಯ ಉಪಕರಣಗಳನ್ನು ಖರೀದಿಸಲು ಮತ್ತು ಡೇಟಾ ಸಂಗ್ರಹಣೆಗಾಗಿ ಕೇಂದ್ರೀಕೃತ ಸೂಪರ್‌ಸೈಟ್ ಅನ್ನು ಸ್ಥಾಪಿಸಲು 10 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ ಎಂದು ಪರಿಸರ ಸಚಿವ ಗೋಪಾಲ್ ರೈ ಹೇಳಿದ್ದರು. ಇದೀಗ ಸಚಿವೆ ಅತಿಶಿ ಅವರು ದೆಹಲಿಯ ಮಾಲಿನ್ಯಕ್ಕೆ ಯಾವ ಮೂಲಗಳು ಕಾರಣ ಎಂಬುದನ್ನು ತೋರಿಸಲು ಡೇಟಾ ಇಲ್ಲ ಎಂದು ಹೇಳುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]