Tag: Arvind Kejriwal

  • ನಿಮ್ಮ ಮುಖ್ಯಮಂತ್ರಿಯನ್ನು ನೀವೇ ಆರಿಸಿ – ಗುಜರಾತ್‍ನಲ್ಲಿ ಕೇಜ್ರಿವಾಲ್ ಅಭಿಯಾನ

    ನಿಮ್ಮ ಮುಖ್ಯಮಂತ್ರಿಯನ್ನು ನೀವೇ ಆರಿಸಿ – ಗುಜರಾತ್‍ನಲ್ಲಿ ಕೇಜ್ರಿವಾಲ್ ಅಭಿಯಾನ

    ಗಾಂಧೀನಗರ: ಗುಜರಾತ್‍ನಲ್ಲಿ (Gujrat) ಬಿಜೆಪಿಯನ್ನು (BJP) ಸೋಲಿಸುವ ಸಲುವಾಗಿ ಆಮ್ ಆದ್ಮಿ ಪಕ್ಷದ (Aam Aadmi Party) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು, ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕ್ರೌಡ್ ಸೋರ್ಸಿಂಗ್ ಅಭಿಯಾನವನ್ನು (Crowdsourcing Campaign) ಪ್ರಾರಂಭಿಸಿದ್ದಾರೆ.

    ನಿಮ್ಮ ಮುಖ್ಯಮಂತ್ರಿಯನ್ನು ನೀವೇ ಆರಿಸಿ ಎಂಬ ಅಭಿಯಾನಕ್ಕೆ ಭಾನುವಾರ ಅರವಿಂದ್ ಕೇಜ್ರಿವಾಲ್ ಅವರು ಚಾಲನೆ ನೀಡಿದರು. ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜನರು ಬದಲಾವಣೆ ಬಯಸುತ್ತಿದ್ದಾರೆ. ಹಣದುಬ್ಬರ, ನಿರುದ್ಯೋಗ ಸಮಸ್ಯೆಗಳಿಂದ ಪರಿಹಾರಕ್ಕಾಗಿ ಹಂಬಲಿಸುತ್ತಿದ್ದಾರೆ. ಜನರು ಒಂದು ವರ್ಷದ ಹಿಂದೆ ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಿದ್ದ ವಿಜಯ್ ರೂಪಾನಿ ಅವರನ್ನು ಬದಲಾಯಿಸಿದರು. ನಂತರ ಅವರ ಬದಲಿಗೆ ಭೂಪೇಂದ್ರ ಪಟೇಲ್ (Bhupendra Patel) ಅವರನ್ನು ಏಕೆ ನೇಮಿಸಿದರು? ಇದರರ್ಥ ವಿಜಯ್ ರೂಪಾನಿ ಅವರಲ್ಲಿ ಏನಾದರೂ ತಪ್ಪಾಗಿದೆ ಅಂತ ಅರ್ಥವಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪುನೀತ್ ರಾಜಕುಮಾರ್ ಸ್ಯಾಟ್ ಲೈಟ್ ವರ್ಕ್ ಸ್ಟೇಷನ್ ಉದ್ಘಾಟಿಸಿದ ಸಿಎಂ

    2016, 2021ರಲ್ಲಿ ಸಿಎಂ ಆಗಿ ಯಾರನ್ನು ಮಾಡಬೇಕೆಂದು ಬಿಜೆಪಿ ಜನರನ್ನು ಕೇಳಲಿಲ್ಲ. ವಿಜಯ್ ರೂಪಾನಿಯನ್ನು (Vijay Rupani ) ಸಿಎಂ ಮಾಡಿದಾಗಲೂ ಜನ ಕೇಳಲಿಲ್ಲ. ಅವರನ್ನು ದೆಹಲಿಯಿಂದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಈಗ ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿ ಯಾರಾಗಬೇಕೆಂದು ಜನ ನಿರ್ಧರಿಸುತ್ತಾರೆ. ಆಮ್ ಆದ್ಮಿ ಪಕ್ಷ ಬಿಜೆಪಿಯಂತೆ ಮಾಡುವುದಿಲ್ಲ. ನೀವು ಯಾರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲು ಬಯಸುತ್ತೀರಾ ಎಂದು ಸಾರ್ವಜನಿಕರನ್ನು ಕೇಳಿ ತೀರ್ಮಾನ ಮಾಡುತ್ತೇವೆ. ಪಂಜಾಬ್‍ನಲ್ಲಿ ಯಾರನ್ನು ಮುಖ್ಯಮಂತ್ರಿಯಾಗಬೇಕು ಎಂದು ನಾವು ಜನರನ್ನು ಕೇಳಿದ್ದೇವು, ಅದರ ಪ್ರಕಾರ ಜನರ ಅಪೇಕ್ಷೆಯಂತೆ ಭಗವಂತ್ ಮಾನ್ (Bhagwant Mann) ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದೇವೆ ಎಂದಿದ್ದಾರೆ.

    Bhagwant Mann

    ಗುಜರಾತ್‍ನಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ ರಚಿಸಲಿದೆ. ಇಂತಹ ಪರಿಸ್ಥಿತಿಯಲ್ಲಿ ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರೇ ಆಗಿರಲಿ ಅವರೇ ಗುಜರಾತ್‍ನ ಮುಂದಿನ ಮುಖ್ಯಮಂತ್ರಿಯಾಗಿರುತ್ತಾರೆ. ಹಾಗಾಗಿ ಈಗ ನಿಮ್ಮ ಮುಖ್ಯಮಂತ್ರಿ ಯಾರಾಗಬೇಕು ಅಂತ ಹೇಳಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬುಡಕಟ್ಟು ಜನಾಂಗದವರ ಸಾಂಪ್ರದಾಯಿಕ ನೃತ್ಯಕ್ಕೆ ಹೆಜ್ಜೆ ಹಾಕಿದ ರಾಹುಲ್ ಗಾಂಧಿ

    “ಸಾರ್ವಜನಿಕರು ತಮ್ಮ ಅಭಿಪ್ರಾಯವನ್ನು ತಿಳಿಸಲು 6357000360 ಸಂಖ್ಯೆ ನೀಡುತ್ತಿದ್ದೇವೆ. ಈ ಸಂಖ್ಯೆಗೆ ನೀವು SMS ಅಥವಾ WhatsApp ಸಂದೇಶ ಕಳುಹಿಸಬಹುದು ಅಥವಾ ವಾಯ್ಸ್ ಮೇಸೆಜ್ ಅನ್ನು ಸಹ ಕಳುಹಿಸಬಹುದು. ಇಲ್ಲವಾದಲ್ಲಿ ನೀವು aapnocm@gmail.com ಗೆ ಇಮೇಲ್ ಕೂಡ ಮಾಡಬಹುದು. ಈ ನಾಲ್ಕು ಮಾರ್ಗಗಳ ಮೂಲಕ ಸಾರ್ವಜನಿಕರು ತಮ್ಮ ಆಯ್ಕೆಯ ಬಗ್ಗೆ ನಮಗೆ ತಿಳಿಸಬಹುದು ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕರೆನ್ಸಿ ನೋಟುಗಳಲ್ಲಿರಲಿ ಗಣೇಶ, ಲಕ್ಷ್ಮೀ ಚಿತ್ರ – ಮೋದಿಗೆ ಕೇಜ್ರಿವಾಲ್ ಪತ್ರ

    ಕರೆನ್ಸಿ ನೋಟುಗಳಲ್ಲಿರಲಿ ಗಣೇಶ, ಲಕ್ಷ್ಮೀ ಚಿತ್ರ – ಮೋದಿಗೆ ಕೇಜ್ರಿವಾಲ್ ಪತ್ರ

    ನವದೆಹಲಿ: ದೇಶದ ಆರ್ಥಿಕ ಪ್ರಗತಿಗಾಗಿ ನೋಟುಗಳ ಮೇಲೆ ಗಣೇಶ ಮತ್ತು ಲಕ್ಷ್ಮೀ ದೇವಿಯ ಚಿತ್ರಗಳನ್ನು ಮುದ್ರಿಸುವಂತೆ ದೆಹಲಿ ಮುಖ್ಯಮಂತ್ರಿ (Delhi ChiefMinister) ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರ ಬರೆದಿದ್ದಾರೆ.

    ಒಂದು ಕಡೆ ಮಹಾತ್ಮ ಗಾಂಧಿ ಮತ್ತು ಇನ್ನೊಂದು ಬದಿಯಲ್ಲಿ ಗಣೇಶ (Lord Ganesha) ಮತ್ತು ಲಕ್ಷ್ಮಿದೇವಿಯ (God Lakshmi) ಚಿತ್ರ ಮುದ್ರಿಸಬೇಕು ಎಂಬುದು 13 ಕೋಟಿ ದೇಶವಾಸಿಗಳ ಬಯಕೆಯಾಗಿದೆ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ನೋಟುಗಳ ಮೇಲೆ ಲಕ್ಷ್ಮಿ, ಗಣೇಶನ ಫೋಟೋವನ್ನು ಮುದ್ರಿಸಿ – ಮೋದಿಗೆ ಕೇಜ್ರಿವಾಲ್ ಮನವಿ

    ಸ್ವಾತಂತ್ರ‍್ಯ ಬಂದ 75 ವರ್ಷಗಳ ನಂತರವೂ ಭಾರತದ ಆರ್ಥಿಕತೆಯು ಅತ್ಯಂತ ಕೆಟ್ಟ ಸ್ಥಿತಿಯಲ್ಲಿದೆ. ಮುಂದುವರಿಯುತ್ತಿರುವ ದೇಶಗಳ ಪಟ್ಟಿಯಲ್ಲೇ ಉಳಿದಿದೆ, ನಮ್ಮ ದೇಶದಲ್ಲಿ ಇನ್ನೂ ಅನೇಕ ಜನರು ಬಡವರಿದ್ದಾರೆ ಇದಕ್ಕೆ ಕಾರಣ ಏನು? ನಾವು ಕಷ್ಟಪಟ್ಟು ಕೆಲಸ ಮಾಡಬೇಕಾದಾಗ, ನಮ್ಮ ಕೆಲಸವನ್ನು ಫಲಿಸಲು ದೇವರ ಆಶೀರ್ವಾದವೂ ಬೇಕು, ಸರಿಯಾದ ನೀತಿ, ಕಠಿಣ ಪರಿಶ್ರಮ ಮತ್ತು ದೇವರ ಆಶೀರ್ವಾದದ ಸಂಗಮವು ನಮ್ಮ ದೇಶವನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯುತ್ತದೆ. ಇದನ್ನೂ ಓದಿ: ಬಂಡೆಮಠದ ಸ್ವಾಮೀಜಿಗೆ ಮಹಿಳೆಯಿಂದ ಬರುತ್ತಿತ್ತು ದೂರವಾಣಿ ಕರೆ- ಡೆತ್‍ನೋಟ್‍ನಲ್ಲಿ ರಹಸ್ಯ ಬಯಲು

    ಆದ್ದರಿಂದ ಕರೆನ್ಸಿ (Indian Currency) ನೋಟುಗಳ ಒಂದು ಬದಿಯಲ್ಲಿ ಮಹಾತ್ಮ ಗಾಂಧಿಯವರ ಚಿತ್ರ ಮತ್ತು ಇನ್ನೊಂದು ಬದಿಯಲ್ಲಿ ಗಣೇಶ ಮತ್ತು ಲಕ್ಷ್ಮೀ ದೇವಿಯ ಫೋಟೋಗಳು ಇರಬೇಕು, ಈ ವಿಷಯದ ಬಗ್ಗೆ ಅಪಾರ ಬೆಂಬಲ ಸ್ವೀಕರಿಸಲಾಗಿದೆ. ಜನರಲ್ಲಿ ಭಾರೀ ಉತ್ಸಾಹವಿದೆ ಮತ್ತು ಎಲ್ಲರೂ ಇದನ್ನು ತಕ್ಷಣವೇ ಜಾರಿಗೆ ತರಬೇಕೆಂದು ಬಯಸುತ್ತಾರೆ ಎಂದು ಕೇಜ್ರಿವಾಲ್ ಪ್ರತಿಪಾದಿಸಿದ್ದಾರೆ.

    ಕೇಜ್ರಿವಾಲ್ ಅವರ ಬೇಡಿಕೆಯನ್ನು ಬಿಜೆಪಿ (BJP) ತೀಕ್ಷ್ಣ ವಿರೋಧಿಸಿದೆ. ಇದು ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಡುತ್ತಿರುವ ಕೆಲಸವಾಗಿದೆ `ಕೊಳಕು ಹಿಂದೂ ವಿರೋಧಿ ಮುಖ’ವನ್ನು ಮರೆಮಾಚುವ ಕೇಜ್ರಿವಾಲ್ ಮಾಡುತ್ತಿರುವ ವಿಫಲ ಪ್ರಯತ್ನ ಎಂದು ಬಿಜೆಪಿ ಟೀಕಿಸಿದೆ.

    Live Tv
    [brid partner=56869869 player=32851 video=960834 autoplay=true]

  • 200ರೂ. ನೋಟಿನ ಮೇಲೆ ಛತ್ರಪತಿ ಶಿವಾಜಿ- ವಿವಾದ ಹುಟ್ಟುಹಾಕಿದ ಬಿಜೆಪಿ ನಾಯಕ

    200ರೂ. ನೋಟಿನ ಮೇಲೆ ಛತ್ರಪತಿ ಶಿವಾಜಿ- ವಿವಾದ ಹುಟ್ಟುಹಾಕಿದ ಬಿಜೆಪಿ ನಾಯಕ

    ನವದೆಹಲಿ: ಭಾರತೀಯ ಕರೆನ್ಸಿಯ (Indian Currency) ನೋಟುಗಳ ಲಕ್ಷ್ಮೀದೇವಿ ಹಾಗೂ ಗಣೇಶನ ಚಿನ್ಹೆಗಳನ್ನು ಮುದ್ರಿಸಬೇಕು ಎನ್ನುವ ದೆಹಲಿ ಮುಖ್ಯಮಂತ್ರಿ (Delhi Chief Minister) ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಸಲಹೆಗೆ ಬಿಜೆಪಿ (BJP) ನಾಯಕರೊಬ್ಬರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

    200 ರೂ. ಮುಖಬೆಲೆಯ ನೋಟಿನ ಮೇಲೆ ಛತ್ರಪತಿ ಶಿವಾಜಿ ಚಿತ್ರವನ್ನು (Chhatrapati Shivaji Photo) ಫೋಟೋಶಾಪ್ (PhotoShop) ಮಾಡಿ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಬಿಜೆಪಿ (BJP) ನಾಯಕ ನಿತೇಶ್ ರಾಣೆ ಹಂಚಿಕೊಂಡು ವಿವಾದ ಹುಟ್ಟುಹಾಕಿದ್ದಾರೆ. ಇದನ್ನೂ ಓದಿ: ನೋಟುಗಳ ಮೇಲೆ ಲಕ್ಷ್ಮಿ, ಗಣೇಶನ ಫೋಟೋವನ್ನು ಮುದ್ರಿಸಿ – ಮೋದಿಗೆ ಕೇಜ್ರಿವಾಲ್ ಮನವಿ

    ಕಂಕಾವ್ಲಿಯ ಶಾಸಕ ರಾಣೆ ಅವರು ಫೋಟೋವನ್ನು ಟ್ವೀಟ್ ಮಾಡಿ, `ಯೇ ಪರ್ಫೆಕ್ಟ್ ಹೈ (ಇದು ಸರಿಯಾಗಿದೆ)’ ಎಂದು ಶೀರ್ಷಿಕೆ ನೀಡಿದ್ದಾರೆ. ಇದನ್ನೂ ಓದಿ: ಅಪ್ಪು ಗಂಧದಗುಡಿ ರಿಲೀಸ್‍ಗೆ ಕೌಂಟ್‍ಡೌನ್- ಮೊದಲ ಬಾರಿಗೆ ಅಶ್ವಿನಿ ವಿಶೇಷ ಸಂದರ್ಶನ

    ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮುಖ್ಯ ಎದುರಾಳಿಯಾಗಿ ಹೊರಹೊಮ್ಮಿರುವ ಕೇಜ್ರಿವಾಲ್, ಭಾರತೀಯ ಕರೆನ್ಸಿಯ (Indian Currency) ಮೇಲೆ ಲಕ್ಷ್ಮೀದೇವಿ ಮತ್ತು ಗಣೇಶನ ಚಿತ್ರಗಳನ್ನು ಮುದ್ರಿಸುವಂತೆ ಸೂಚಿಸಿದ್ದಾರೆ. ಇದು ಆರ್ಥಿಕತೆ ಹೆಚ್ಚಿಸುವ ಒಂದು ಮಾರ್ಗವಾಗಿದೆ. ಜೊತೆಗೆ ಡಾಲರ್ ಎದುರು ರೂಪಾಯಿಯ ಮೌಲ್ಯ ಕುಸಿತವಾಗುವುದನ್ನು ತಡೆಯುತ್ತದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

    ಈ ಸಲಹೆಯು ಬಿಜೆಪಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿದ್ದು, ತೀವ್ರ ವಾಗ್ದಾಳಿಗೆ ಮುಂದಾಗಿದ್ದಾರೆ. ಕೇಜ್ರಿವಾಲ್ ತಮ್ಮ ಸರ್ಕಾರದ ದೋಷಗಳು ಹಾಗೂ ಎಎಪಿ ವಿರೋಧಿ ಮನಸ್ಥಿತಿಯನ್ನು ಬೇರೆಡೆಗೆ ಸೆಳೆಯಲು ರಾಜಕೀಯ ನಾಟಕವಾಡುತ್ತಿದೆ ಎಂದು ಕಿಡಿಕಾರಿದೆ.

    Live Tv
    [brid partner=56869869 player=32851 video=960834 autoplay=true]

  • ನೋಟುಗಳ ಮೇಲೆ ಲಕ್ಷ್ಮಿ, ಗಣೇಶನ ಫೋಟೋವನ್ನು ಮುದ್ರಿಸಿ – ಮೋದಿಗೆ ಕೇಜ್ರಿವಾಲ್ ಮನವಿ

    ನೋಟುಗಳ ಮೇಲೆ ಲಕ್ಷ್ಮಿ, ಗಣೇಶನ ಫೋಟೋವನ್ನು ಮುದ್ರಿಸಿ – ಮೋದಿಗೆ ಕೇಜ್ರಿವಾಲ್ ಮನವಿ

    ನವದೆಹಲಿ: ಹೊಸ ನೋಟುಗಳ ಮೇಲೆ ಇನ್ಮುಂದೆ ಲಕ್ಷ್ಮಿ ದೇವಿ ಮತ್ತು ಗಣೇಶನ ಫೋಟೋಗಳನ್ನು ಮುದ್ರಿಸುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಒತ್ತಾಯಿಸಿದ್ದಾರೆ.

    ಹೊಸ ಕರೆನ್ಸಿ ನೋಟುಗಳ ಒಂದು ಬದಿಯಲ್ಲಿ ಮಹಾತ್ಮಾ ಗಾಂಧಿಯವರ (Mahatma Gandhi) ಫೋಟೋ ಮತ್ತು ಇನ್ನೊಂದು ಬದಿಯಲ್ಲಿ ಲಕ್ಷ್ಮಿ ದೇವಿ (Lakshmi)  ಮತ್ತು ಗಣೇಶನ (Ganesh) ಫೋಟೋಗಳನ್ನು ಮುದ್ರಿಸಬಹುದು. ಕರೆನ್ಸಿ ನೋಟುಗಳ ಮೇಲೆ ಎರಡು ದೇವರ ಫೋಟೋಗಳಿರುವುದು ದೇಶದ ಏಳಿಗೆಗೆ ಸಹಾಯವಾಗುತ್ತದೆ ಎಂದು ಅವರು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಬಂಡೆಮಠದ ಸ್ವಾಮೀಜಿಗೆ ಮಹಿಳೆಯಿಂದ ಬರುತ್ತಿತ್ತು ದೂರವಾಣಿ ಕರೆ- ಡೆತ್‍ನೋಟ್‍ನಲ್ಲಿ ರಹಸ್ಯ ಬಯಲು

    ಪ್ರಯತ್ನಗಳನ್ನು ಮಾಡಿದರೂ, ಕೆಲವೊಮ್ಮೆ ದೇವರು ಮತ್ತು ದೇವತೆಗಳು ನಮ್ಮನ್ನು ಆಶೀರ್ವದಿಸದಿದ್ದರೆ ನಮ್ಮ ಪ್ರಯತ್ನಗಳು ಫಲ ನೀಡುವುದಿಲ್ಲ. ಹೀಗಾಗಿ ನಮ್ಮ ಕರೆನ್ಸಿ ನೋಟುಗಳಲ್ಲಿ ಗಣೇಶ ಮತ್ತು ಲಕ್ಷ್ಮಿ ದೇವಿಯ ಫೋಟೋಗಳನ್ನು ಸೇರಿಸುವಂತೆ ನಾನು ಪ್ರಧಾನಿ ಮೋದಿಗೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಧಿಕಾರ ಚುಕ್ಕಾಣಿಗೂ ಮುನ್ನ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ಖರ್ಗೆ

    Live Tv
    [brid partner=56869869 player=32851 video=960834 autoplay=true]

  • ನಿಷೇಧದ ನಡುವೆಯೂ ಪಟಾಕಿ ಸದ್ದು- ಅತಿಯಾದ ವಾಯುಮಾಲಿನ್ಯದಿಂದ ಉಸಿರಾಟಕ್ಕೂ ತೊಂದರೆ

    ನಿಷೇಧದ ನಡುವೆಯೂ ಪಟಾಕಿ ಸದ್ದು- ಅತಿಯಾದ ವಾಯುಮಾಲಿನ್ಯದಿಂದ ಉಸಿರಾಟಕ್ಕೂ ತೊಂದರೆ

    ನವದೆಹಲಿ: ದೀಪಾವಳಿಯಂದು ನಿಷೇಧ ಹೊರತಾಗಿಯೂ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ (Diwali Cracker) ಸಿಡಿಸಲಾಗಿದೆ. ಇದರಿಂದ ವಾಯು ಗುಣಮಟ್ಟ ತೀವ್ರ ಕುಸಿತವಾಗಿದ್ದು, ಜನರಿಗೆ ಉಸಿರಾಟದ ಸಮಸ್ಯೆಗಳು ಎದುರಾಗುತ್ತಿವೆ.

    ದೆಹಲಿಯ (Delhi) ವಾಯು ಗುಣಮಟ್ಟ ಸೂಚ್ಯಂಕವು (AQI) ಇಂದು ಬೆಳಗ್ಗೆ 6 ಗಂಟೆಗೆ 323 ರಷ್ಟಿತ್ತು ಎಂದು ಸಿಸ್ಟಮ್ ಆಫ್ ಏರ್ ಕ್ವಾಲಿಟಿ ಮತ್ತು ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆ (SAFAR) ತೋರಿಸಿದೆ. ನೆರೆಯ ಗುರುಗ್ರಾಮ್, ನೋಯ್ಡಾ ಮತ್ತು ಫರಿದಾಬಾದ್‌ನಲ್ಲಿಯೂ ಗಾಳಿಯ ಗುಣಮಟ್ಟವು ಅತ್ಯಂತ ಕಳಪೆ ಮಟ್ಟಕ್ಕೆ ತಲುಪಿದೆ. ದೀಪಾವಳಿಯಿಂದಾಗಿ ಅನುಮತಿಸಿದ್ದ ಡೆಸಿಬಲ್ ಮಿತಿಗಳನ್ನು ಮೀರಿ ಪಟಾಕಿ ಸಿಡಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರ ಉಸಿರಾಟಕ್ಕೂ ತೊಂದರೆಯಾಗುತ್ತಿದೆ.

    ಆದಾಗ್ಯೂ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ವಾಯುಗುಣಮಟ್ಟ ಕಳಪೆಯಾಗಿರುವುದು ಕಡಿಮೆ. ಈ ಬಾರಿ ದೀಪಾವಳಿಯಲ್ಲಿ (Dewali) ಕಳೆದ 24 ಗಂಟೆಯಲ್ಲಿ ಎಕ್ಯೂಐ 312 ಮಾತ್ರ ಇದೆ. 2021ರಲ್ಲಿ 382 ಎಕ್ಯೂಐ, 2020ರಲ್ಲಿ 414 ಎಕ್ಯೂಐ, 2019ರಲ್ಲಿ 337 ಎಕ್ಯೂಐ ಇತ್ತು. ಆದರೆ ಈ ಬಾರಿ 312 ಎಕ್ಯೂಐ ಇದೆ ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಹೇಳಿದೆ. ಇದನ್ನೂ ಓದಿ: ಪಟಾಕಿ ಸಿಡಿತದಿಂದ ಹೈದರಾಬಾದ್‍ನಲ್ಲಿ 24 ಮಂದಿ ಕಣ್ಣಿಗೆ ಗಾಯ

    ಸಾಮಾನ್ಯವಾಗಿ ವಾಯುಗುಣಮಟ್ಟ ಸೂಚ್ಯಂಕ 50ರ ನಡುವೆ ಇದ್ದರೆ ಉತ್ತಮ, 51 ರಿಂದ 100 ತೃಪ್ತಿದಾಯಕ, 101 ರಿಂದ 200 ಮಧ್ಯಮ, 201 ರಿಂದ 300 ಕಳಪೆ, 301 ರಿಂದ 400 ಅತ್ಯಂತ ಕಳಪೆ, 401 ರಿಂದ 500 ತೀವ್ರ ಕಳಪೆ ಎಂದು ಅಂದಾಜಿಸಲಾಗುತ್ತದೆ. ಇದನ್ನೂ ಓದಿ: ಪಾಕ್ ಮಾಜಿ ಪ್ರಧಾನಿ ಇಮ್ರಾನ್‌ಖಾನ್ ಚುನಾವಣೆಗೆ ಕೋರ್ಟ್ ಗ್ರೀನ್ ಸಿಗ್ನಲ್

    ವಾಯು ಮಾಲಿನ್ಯದಿಂದಾಗಿ ದೆಹಲಿ ಸರ್ಕಾರ ಪಟಾಕಿ ನಿಷೇಧಿಸಿದೆ. ಆದೇಶ ಉಲ್ಲಂಘನೆ ಮಾಡಿದವರಿಗೆ ದಂಡ ಹಾಗೂ 6 ತಿಂಗಳ ಶಿಕ್ಷೆ ವಿಧಿಸಲು ಮುಂದಾಗಿದೆ. ಆದರೆ ಸುಪ್ರೀಂ ಕೋರ್ಟ್ ಪಟಾಕಿ ನಿಷೇಧವನ್ನು ತೆಗೆದುಹಾಕಿತ್ತು.

    Live Tv
    [brid partner=56869869 player=32851 video=960834 autoplay=true]

  • ಶ್ರೀಸಾಮಾನ್ಯನನ್ನು ಅವಮಾನಿಸಬೇಡಿ – ಮೋದಿ ವಿರುದ್ಧ ಕೇಜ್ರಿವಾಲ್ ಕಿಡಿ

    ಶ್ರೀಸಾಮಾನ್ಯನನ್ನು ಅವಮಾನಿಸಬೇಡಿ – ಮೋದಿ ವಿರುದ್ಧ ಕೇಜ್ರಿವಾಲ್ ಕಿಡಿ

    ನವದೆಹಲಿ: ಹಣದುಬ್ಬರದಿಂದ ಆತಂಕಕ್ಕೊಳಗಾಗಿರುವ ಜನರಿಗೆ ಉಚಿತ ಶಿಕ್ಷಣ ಮತ್ತು ಚಿಕಿತ್ಸೆಯನ್ನು ಏಕೆ ನೀಡಬಾರದು? ಅಲ್ಲದೇ ಇಂತಹ ವಿಚಾರಗಳನ್ನು ಇಟ್ಟುಕೊಂಡು ಉಚಿತ ರೇವಡಿ (Revdi) ಎಂದು ಕರೆಯುವ ಮೂಲಕ ಶ್ರೀಸಾಮಾನ್ಯನಿಗೆ ಅವಮಾನ ಮಾಡಬಾರದು ಎಂದು ದೆಹಲಿ ಮುಖ್ಯಮಂತ್ರಿ (Delhi Chief Minister) ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಹೇಳಿದ್ದಾರೆ.

    ಶನಿವಾರ ಮಧ್ಯಪ್ರದೇಶದ (Madhya Pradesh) ಸತ್ನಾ (Satna) ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (Prime Minister Awas Yojana) (ಪಿಎಂಎವೈ)ಯ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು, ರಾಜಕೀಯ ಸಂಸ್ಕೃತಿಯನ್ನು “ರೇವಡಿ” ಎಂದು ಕರೆಯುವ ಮೂಲಕ ಟೀಕಿಸಿದ್ದರು. ಇದನ್ನೂ ಓದಿ: ರಾಹುಲ್ ಗಾಂಧಿ ಎಂದರೆ ಯಾರು, ಏನು ಎನ್ನುವುದನ್ನು ಭಾರತ್ ಜೋಡೋ ತೋರಿಸಿಕೊಟ್ಟಿದೆ: ಸಿದ್ದರಾಮಯ್ಯ

    ಈ ವೀಡಿಯೋವನ್ನು ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೋ ಜೊತೆಗೆ, ಬೆಲೆ ಏರಿಕೆಯಿಂದ ಜನ ಕಂಗಾಲಾಗಿದ್ದಾರೆ. ಅವರಿಗೆ ಉಚಿತ ಶಿಕ್ಷಣ, ಚಿಕಿತ್ಸೆ, ಔಷಧ ಮತ್ತು ವಿದ್ಯುತ್ ಏಕೆ ಸಿಗಬಾರದು? ರಾಜಕಾರಣಿಗಳಿಗೆ ಹಲವು ಸೌಲಭ್ಯಗಳು ಉಚಿತವಾಗಿ ಸಿಗುತ್ತದೆ. ಎಷ್ಟೋ ಶ್ರೀಮಂತರ ಸಾಲವನ್ನು ಬ್ಯಾಂಕ್‍ಗಳು ಮನ್ನಾ ಮಾಡಿವೆ. ಭಾರತದ ಬೆಳವಣಿಗೆಗೆ ಉಚಿತ ಶಿಕ್ಷಣ ಮತ್ತು ಆರೋಗ್ಯ ಸೇವೆ ಮಹತ್ವದ್ದಾಗಿದೆ. ಈ ಕಲ್ಯಾಣ ಯೋಜನೆಗಳನ್ನು “ಉಚಿತ ಕೊಡುಗೆ” ಅಥವಾ ”ರೇವಡಿ” ಎಂದು ಮತ್ತೆ, ಮತ್ತೆ ಕರೆಯುವ ಮೂಲಕ ಸಾಮಾನ್ಯ ಜನರನ್ನು ಅವಮಾನಿಸಬೇಡಿ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

    ಈ ಹಿಂದೆ ನರೇಂದ್ರ ಮೋದಿ ಅವರು, ಮತ ಗಳಿಸಲು ಉಚಿತ ಕೊಡುಗೆ ಭರವಸೆಗಳ ಸಂಸ್ಕೃತಿ ಈ ದಿನಗಳಲ್ಲಿ ಸಾಮಾನ್ಯ. ಜನರು, ಅದರಲ್ಲೂ ಯುವಜನರು ಇದಕ್ಕೆ ಬಲಿಯಾಗಬಾರದು. ಈ ಬಗ್ಗೆ ಎಚ್ಚರಿಕೆ ವಹಿಸುವುದು ಅಗತ್ಯ. ಇಂತಹ ರೇವಡಿ (ಉತ್ತರಪ್ರದೇಶ ಸೇರಿ ಉತ್ತರ ಭಾರತದ ಹಬ್ಬಗಳಲ್ಲಿ ನೀಡುವ ಜನಪ್ರಿಯ ಸಿಹಿ ತಿನಿಸಿಗೆ ರೇವಡಿ ಎನ್ನುವ ಹೆಸರಿದೆ) ಉಚಿತ ಕೊಡುಗೆಗಳು ಎಂದಿಗೂ ತಡೆರಹಿತ ಹೆದ್ದಾರಿಗಳು, ರಕ್ಷಣಾ ಕಾರಿಡಾರ್‌ಗಳು ಅಥವಾ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾರವು ಎಂದು ಎಎಪಿ (Aam Aadmi Party) ವಿರುದ್ಧ ಮೋದಿ ಅವರು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಕಾಳಿಂಗ ಸರ್ಪಗೆ ಕಿಸ್ ಕೊಟ್ಟ ಭೂಪ – ವ್ಯಕ್ತಿ ಧೈರ್ಯಕ್ಕೆ ಶಹಬ್ಬಾಸ್‌ ಅಂದ ನೆಟ್ಟಿಗರು

    Live Tv
    [brid partner=56869869 player=32851 video=960834 autoplay=true]

  • ದೆಹಲಿಯಲ್ಲಿ ಪಟಾಕಿ ಮಾರಾಟಕ್ಕೆ ಅನುಮತಿ ನೀಡಿ – ಕೇಜ್ರಿವಾಲ್‍ಗೆ ಸ್ಟಾಲಿನ್ ಪತ್ರ

    ದೆಹಲಿಯಲ್ಲಿ ಪಟಾಕಿ ಮಾರಾಟಕ್ಕೆ ಅನುಮತಿ ನೀಡಿ – ಕೇಜ್ರಿವಾಲ್‍ಗೆ ಸ್ಟಾಲಿನ್ ಪತ್ರ

    ನವದೆಹಲಿ: ಈ ಬಾರಿಯ ದೀಪಾವಳಿ ಹಬ್ಬಕ್ಕೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಪಟಾಕಿ (Firecracker) ಮಾರಾಟ ಮಾಡಲು ಅನುಮತಿ ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (MK Stalin) ಅವರು ಪತ್ರ ಬರೆದಿದ್ದಾರೆ.

    ತಮಿಳುನಾಡಿನ ಶಿವಕಾಶಿಗೆ (Sivakasi) ಶೇ.70ರಷ್ಟು ವಾರ್ಷಿಕ ಆದಾಯ ದೀಪಾವಳಿ (Diwali) ಹಬ್ಬದ ಸಂದರ್ಭದಲ್ಲಿ ಮಾರಾಟವಾಗುವ ಪಟಾಕಿಯಿಂದ ಬರುತ್ತದೆ ಎಂದು ಸಿಎಂ ಸ್ಟಾಲಿನ್ ಹೇಳಿದ್ದಾರೆ. ತಮಿಳುನಾಡಿನ ವಿರುದುನಗರ ಜಿಲ್ಲೆಯಲ್ಲಿರುವ ಶಿವಕಾಶಿ ನಗರವು ಭಾರತದಲ್ಲಿರುವ ಪಟಾಕಿ ತಯಾರಕರ ಕೇಂದ್ರವಾಗಿದೆ ಮತ್ತು 6.5 ಲಕ್ಷ ಕುಟುಂಬಗಳು ನೇರವಾಗಿ ಮತ್ತು ಪರೋಕ್ಷವಾಗಿ ಈ ಉದ್ಯೋಗವನ್ನೇ ತಮ್ಮ ಜೀವನೋಪಾಯವಾಗಿ ಅವಲಂಬಿಸಿದೆ. ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಶುರುವಾಯ್ತು ಭೂಕಂಪನದ ಗುಮ್ಮ – ಬೆಚ್ಚಿಬಿದ್ದ ಜನತೆ

    ಈ ನಡುವೆ ದೆಹಲಿ ಸರ್ಕಾರವು ಸೆಪ್ಟೆಂಬರ್ 7 ರಿಂದಲೇ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ. ಪಟಾಕಿ ಮೇಲಿನ ಈ ನಿಷೇಧವು 2023ರ ಜನವರಿ 1ರವರೆಗೂ ಇರಲಿದೆ. ಇದನ್ನೂ ಓದಿ: ಬಿಜೆಪಿಯವರಿಗೆ ನನ್ನ ಕಂಡರೆ ಭಯ; ಶತ್ರುಗಳಿದ್ದಷ್ಟು ನಾವು ಹೆಚ್ಚು ಬಲಶಾಲಿಗಳಾಗ್ತೀವಿ – ಸಿದ್ದು

    ಈ ಎಲ್ಲದರ ಮಧ್ಯೆ ವಿಶೇಷವೆಂದರೆ ಅಕ್ಟೋಬರ್ 10 ರಂದು ಸುಪ್ರೀಂ ಕೋರ್ಟ್ ದೆಹಲಿಯಲ್ಲಿ ಪಟಾಕಿ ನಿಷೇಧವನ್ನು ಕೈಬಿಡಲು ನಿರಾಕರಿಸಿತು. ನಾವು ದೆಹಲಿಯಲ್ಲಿ ಪಟಾಕಿಗಳ ಮೇಲಿನ ನಿಷೇಧವನ್ನು ತೆಗೆದುಹಾಕುವುದಿಲ್ಲ. ನಮ್ಮ ಆದೇಶ ಅತ್ಯಂತ ಸ್ಪಷ್ಟವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಪೂರ್ಣ ಬಹಿಷ್ಕಾರಕ್ಕೆ BJP ಎಂಪಿಯಿಂದ ಕರೆ – ಮುಸ್ಲಿಮರ ವಿರುದ್ಧ ಯುದ್ಧ ಸಾರಲಾಗಿದೆ ಎಂದ ಓವೈಸಿ

    ಪೂರ್ಣ ಬಹಿಷ್ಕಾರಕ್ಕೆ BJP ಎಂಪಿಯಿಂದ ಕರೆ – ಮುಸ್ಲಿಮರ ವಿರುದ್ಧ ಯುದ್ಧ ಸಾರಲಾಗಿದೆ ಎಂದ ಓವೈಸಿ

    ನವದೆಹಲಿ: ಬಿಜೆಪಿ (MP) ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ (Parvesh Sahib Singh Verma) ಮುಸ್ಲಿಮರನ್ನು ಗುರಿಯಾಗಿಸಿ ದ್ವೇಷ ಭಾಷಣ ಮಾಡಿದ್ದು, ಸಮುದಾಯದ ಹೆಸರು ಉಲ್ಲೇಖಿಸದೇ `ಪೂರ್ಣ ಬಹಿಷ್ಕಾರ’ಕ್ಕೆ ಕರೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

    ಸಾರ್ವಜನಿಕ ಕಾರ್ಯಮವೊಂದರಲ್ಲಿ ಮಾತನಾಡಿದ ವರ್ಮಾ, ಅವರು ಕೈಗಾಡಿಗಳನ್ನು ತೆರೆಯುತ್ತಾರೆ, ಅಂತಹವರಿಂದ ನೀವು ತರಕಾರಿ ಖರೀದಿಸುವ ಅಗತ್ಯವಿಲ್ಲ. ಮೀನು (Fish), ಮಾಂಸದ (Meat Shops) ಅಂಗಡಿಗಳನ್ನು ತೆರೆಯುತ್ತಾರೆ. ಪರವಾನಗಿ ಹೊಂದಿಲ್ಲದಿದ್ದರೆ ಪುರಸಭೆ ಅವುಗಳನ್ನ ಬಂದ್ ಮಾಡಿಸಬೇಕು. ನೀವು ಅಂತಹವರನ್ನು ಸರಿಪಡಿಸಬೇಕು ಅಂದುಕೊಂಡಿದ್ದರೆ ಅದು ಪೂರ್ಣ ಬಹಿಷ್ಕಾರದಿಂದ ಮಾತ್ರ ಸಾಧ್ಯ. ಪ್ರತಿಯೊಬ್ಬರೂ ನಾವು ಅವರನ್ನು ಬಹಿಷ್ಕರಿಸುತ್ತೇವೆ, ಅವರ ಬಳಿ ನಾವು ಏನನ್ನೂ ಖರೀದಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು ಎಂದು ಮುಸ್ಲಿಂ ಸಮುದಾಯದ (Muslim Community) ಹೆಸರು ಉಲ್ಲೇಖಿಸದೇ ವಾಗ್ದಾಳಿ ನಡೆಸಿದ್ದಾರೆ.

    ಈ ನಡುವೆ ಕೆಲ ಬಿಜೆಪಿ ಶಾಸಕರು ನಮ್ಮ ಸುಂದರ ದೆಹಲಿ ಹಂದಿಗಳ ನಗರವಾಗಿ ಮಾರ್ಪಟ್ಟಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ವರ್ಮಾ, ಯಾವುದೇ ಧರ್ಮದ ಸಮುದಾಯವನ್ನು ಉಲ್ಲೇಖಿಸಿಲ್ಲ ಎಂಬುದಾಗಿ ಹೇಳಿದ್ದಾರೆ. ‌ಇದನ್ನೂ ಓದಿ: ಫಿಲ್ಮ್ ಫೇರ್: ಆ್ಯಕ್ಟ್ 1978 ಚಿತ್ರಕ್ಕೆ ನಾಲ್ಕು ಪ್ರಶಸ್ತಿ, ಅತ್ಯುತ್ತಮ ನಟ ಧನಂಜಯ್, ನಟಿ ಯಜ್ಞಾ

    ಈ ವೀಡಿಯೋವನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿರುವ ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi), ಬಿಜೆಪಿ ಮುಸ್ಲಿಮರ ವಿರುದ್ಧ ಯುದ್ಧ ಸಾರಿದೆ. ಆಡಳಿತ ಪಕ್ಷದ ಸಂಸದರೊಬ್ಬರು ರಾಜಧಾನಿಯಲ್ಲಿ ರಾಜಾರೋಷವಾಗಿ ಹೀಗೆ ಮಾತನಾಡಿದ್ದಾರೆ. ಆದರೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ (AmitShah) ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಮೌನ ವಹಿಸಿದ್ದಾರೆ. ಹೀಗಾದರೆ ಸಂವಿಧಾನದ ಮೌಲ್ಯ ಏನಿದೆ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮುಲಾಯಂ ಸಿಂಗ್‌ ಯಾದವ್ ನಿಧನ – ಸಿಎಂ ಬೊಮ್ಮಾಯಿ ಸಂತಾಪ

    ಈ ಬೆನ್ನಲ್ಲೇ ವರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ವಕ್ತಾರ ದೆಹಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ. ಆದರೆ ಇನ್ನೂ ಯಾವುದೇ ದೂರುಗಳು ಬಂದಿಲ್ಲ. ಆದಾಗ್ಯೂ ಕಾರ್ಯಕ್ರಮದಲ್ಲಿ ಮಾಡಿದ ಭಾಷಣಗಳಿಗೆ ಸಂಬಂಧಿಸಿದ ದೃಶ್ಯಗಳನ್ನು ಪರಿಶೀಲಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾನು ನಿಷ್ಠಾವಂತ ಭಕ್ತ, ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಕೇಜ್ರಿವಾಲ್

    ನಾನು ನಿಷ್ಠಾವಂತ ಭಕ್ತ, ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಕೇಜ್ರಿವಾಲ್

    ಗಾಂಧಿನಗರ: ಹಿಂದೂ ಪೌರಾಣಿಕಗಳನ್ನು ಸರಿಯಾಗಿ ತಿಳಿದುಕೊಂಡರೆ ಸರಿಯಾಗಿ ತಿಳಿಯುತ್ತದೆ. ಬಿಜೆಪಿಯವರು (BJP) ದೇವರನ್ನು ಅವಮಾನಿಸುತ್ತಿದ್ದಾರೆ. ನಾನು ಮಾತ್ರ ನಿಷ್ಠಾವಂತ ಭಕ್ತ “ಜೈ ಶ್ರೀ ರಾಮ್”, (Jai Shri Ram) “ಜೈ ಶ್ರೀಕೃಷ್ಣ” ಎಂದು ಘೋಷಣೆಗಳನ್ನು ಕೂಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal)  ರಾಮ ಜಪ ಮಾಡಿದ್ದಾರೆ.

    bjP

    ಗುಜರಾತ್‍ನ ವಡೋದರಾದಲ್ಲಿ ಆಮ್ ಆದ್ಮಿ ಪಕ್ಷದ (AAP) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಮತ್ತು ನಮ್ಮ ಪಕ್ಷದ ಮುಖಂಡರ ಬಗ್ಗೆ ಬಿಜೆಪಿಯವರು ಸುಳ್ಳು ಸುದ್ದಿಗಳನ್ನು ಹರಿದಾಡುತ್ತಿದ್ದಾರೆ. ನಾನು ಹೆದರುವುದಿಲ್ಲ. ನನ್ನನ್ನು ದ್ವೇಷ ಭಾವನೆಯಿಂದ ನೋಡುತ್ತಿದ್ದಾರೆ. ದ್ವೇಷದಲ್ಲಿ ಅವರು ಕುರುಡರಾಗಿದ್ದಾರೆ. ಬಿಜೆಪಿಗರು ದೇವರನ್ನು ಸಹ ಅವಮಾನಿಸುತ್ತಿದ್ದಾರೆ. ನಾನು ಮಾತ್ರ ನಿಷ್ಠಾವಂತ ಭಕ್ತ ಜೈ ಶ್ರೀ ರಾಮ್, ಜೈ ಶ್ರೀ ಕೃಷ್ಣ ಎಂದು ಕೂಗಿದ್ದಾರೆ. ಇದನ್ನೂ ಓದಿ: ನಿಮ್ಮ ಅಪ್ಪು ಸಿನಿಮಾ ಗಂಧದ ಗುಡಿ ನೋಡಿ ಪ್ರೋತ್ಸಾಹಿಸಿ: ಅಶ್ವಿನಿ ಪುನೀತ್ ರಾಜ್‍ಕುಮಾರ್ ಮನವಿ

    ಬಿಜೆಪಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸುತ್ತಿದೆ. ಆದರೆ ಅವರು ಹಿಂದೂ ವಿರೋಧಿಗಳಾಗುತ್ತಿದ್ದಾರೆ. ಮುಂದಿನ ವರ್ಷ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಸಿದ್ಧವಾಗಲಿದೆ. ಎಲ್ಲರೂ ದೇವಸ್ಥಾನಕ್ಕೆ ಭೇಟಿ ನೀಡಲು ಬಯಸುತ್ತೀರಿ. ರಾಮ ಮಂದಿರ ಪ್ರವಾಸಿಗರಿಗೆ ಮುಕ್ತವಾದ ಬಳಿಕ ಪ್ರವಾಸ, ವಾಸ್ತವ್ಯ, ಊಟ ಮತ್ತು ವಸತಿ ತುಂಬಾ ದುಬಾರಿಯಾಗಲಿದೆ. ನೀವು ನಿಮ್ಮ ಇಡೀ ಕುಟುಂಬವನ್ನು ಕರೆದುಕೊಂಡು ಹೋದರೆ ಖರ್ಚು ವೆಚ್ಚ ಹೆಚ್ಚಾಗಲಿದೆ. ಗುಜರಾತ್‍ನಲ್ಲಿ ನಾವು ಸರ್ಕಾರ ರಚಿಸಿದರೆ, ನಾವು ನಿಮ್ಮನ್ನು ಉಚಿತವಾಗಿ ಅಯೋಧ್ಯೆ ದರ್ಶನಕ್ಕೆ ಕರೆದೊಯ್ಯುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ. ಇದನ್ನೂ ಓದಿ: ಕಾಂಡೋಮ್‍ಗಳನ್ನು ಹೆಚ್ಚಾಗಿ ಬಳಸ್ತಿರೋದು ನಾವು – ಭಾಗವತ್‍ಗೆ ಓವೈಸಿ ತಿರುಗೇಟು

    ಈ ಮೊದಲು ಕೇಜ್ರಿವಾಲ್ ರ್‍ಯಾಲಿಗೂ ಮುನ್ನ ಎಎಪಿ ಕಾರ್ಯಕರ್ತರು ಎಎಪಿ ವಿರೋಧಿ ಪೋಸ್ಟರ್‌ಗಳನ್ನು ತೆಗೆದುಹಾಕಿದ್ದರು. ಪಕ್ಷದ ಮುಖ್ಯಸ್ಥರು ರ್ಯಾಲಿ ಸ್ಥಳಕ್ಕೆ ತೆರಳುವ ಮಾರ್ಗದಲ್ಲಿ ಹಾಕಲಾಗಿದ್ದ ಎಎಪಿ ವಿರೋಧಿ ಪೋಸ್ಟರ್‌ಗಳನ್ನು ಮತ್ತು ಬ್ಯಾನರ್‌ಗಳನ್ನು ಕಾರ್ಯಕರ್ತರು ತೆಗೆದು ಹಾಕಿದರು. ಕೆಲದಿನಗಳ ಹಿಂದೆ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೆಹಲಿ ಸಚಿವ ರಾಜೇಂದ್ರ ಪಾಲ್ ಗೌತಮ್ ಹಿಂದೂ ದೇವತೆಗಳನ್ನು ನಿಂದಿಸಿದ್ದಾರೆ ಎಂದು ಹೇಳಲಾದ ವೀಡಿಯೋ ಒಂದು ವೈರಲ್ ಆಗಿತ್ತು. ಘಟನೆಯ ಬಳಿಕ ಬಿಜೆಪಿ, ಕೇಜ್ರಿವಾಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಮದ್ಯ ನೀತಿ ಪ್ರಕರಣ – ಬೆಳ್ಳಂಬೆಳಗ್ಗೆ 35 ಕಡೆ ಇಡಿ ದಾಳಿ

    ಮದ್ಯ ನೀತಿ ಪ್ರಕರಣ – ಬೆಳ್ಳಂಬೆಳಗ್ಗೆ 35 ಕಡೆ ಇಡಿ ದಾಳಿ

    ನವದೆಹಲಿ: ಜಾರಿ ನಿರ್ದೇಶನಾಲಯವು (Enforcement Directorate) ಇಂದು ದೆಹಲಿ (New Delhi), ಪಂಜಾಬ್ (Punjab) ಮತ್ತು ಹೈದರಾಬಾದ್‌ನ (Hyderabad) 35 ಸ್ಥಳಗಳಲ್ಲಿ ದಾಳಿ ನಡೆಸಿದೆ. ದೆಹಲಿ ಸರ್ಕಾರ ಹಿಂಪಡೆದ ಹೊಸ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಬಗ್ಗೆ ತನಿಖೆಯನ್ನು ತೀವ್ರಗೊಳಿಸಿದೆ.

    ಈ ರಾಜ್ಯಗಳಲ್ಲಿ ಮದ್ಯದ ಕಂಪನಿಗಳು, ವಿತರಕರು ಮತ್ತು ಪೂರೈಕೆ ಜಾಲಗಳಿಗೆ ಸಂಬಂಧಿಸಿದ ಆವರಣದಲ್ಲಿ ಶೋಧ ನಡೆಸಲಾಗುತ್ತಿದೆ. ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಕೇಂದ್ರದ ದಾಳಿಯನ್ನು ಕೊಳಕು ರಾಜಕೀಯ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸೀಟಿಗಾಗಿ ರೈಲಿನಲ್ಲಿ ಜುಟ್ಟು ಹಿಡಿದು ಮಹಿಳೆಯರ ಫೈಟ್ – ಜಗಳ ಬಿಡಿಸಲು ಬಂದ ಪೇದೆಗೆ ಕಪಾಳಮೋಕ್ಷ

    500 ಕ್ಕೂ ಹೆಚ್ಚು ದಾಳಿಗಳು ನಡೆದಿವೆ. 3 ತಿಂಗಳಿನಿಂದ 300 ಕ್ಕೂ ಹೆಚ್ಚು ಸಿಬಿಐ, ಇಡಿ ಅಧಿಕಾರಿಗಳು 24 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾರೆ. ಮನೀಶ್‌ ಸಿಸೋಡಿಯಾ ನಿವಾಸ, ಕಚೇರಿಗಳ ಮೇಲೂ ದಾಳಿ ನಡೆದವು. ಆದರೆ ಏನು ಸಿಗಲಿಲ್ಲ. ಅವರ ಹೊಲಸು ರಾಜಕಾರಣಕ್ಕಾಗಿ ಎಷ್ಟೋ ಅಧಿಕಾರಿಗಳ ಸಮಯ ವ್ಯರ್ಥವಾಗುತ್ತಿದೆ. ಅಂತಹ ದೇಶ ಹೇಗೆ ಪ್ರಗತಿ ಹೊಂದುತ್ತದೆ ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

    ಖರೀದಿದಾರರನ್ನು ಆಕರ್ಷಿಸಲು ಚಿಲ್ಲರೆ ವ್ಯಾಪಾರಿಗಳಿಗೆ ದೊಡ್ಡ ರಿಯಾಯಿತಿಗಳನ್ನು ನೀಡಲು ಅವಕಾಶ ಮಾಡಿಕೊಟ್ಟ ಹೊಸ ಅಬಕಾರಿ ನೀತಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ. ಇದನ್ನೂ ಓದಿ: ಮಸೀದಿ ಗುಮ್ಮಟದ ಮೇಲಿದ್ದ 100 ವರ್ಷದಷ್ಟು ಹಳೆಯ ಚಿನ್ನದ ಭಾಗ ಕಳ್ಳತನ

    ಈ ಪ್ರಕರಣದಲ್ಲಿ ಹಲವೆಡೆ ದಾಳಿ ನಡೆಸಿದ ತನಿಖಾ ಸಂಸ್ಥೆ ಕಳೆದ ವಾರ ಮದ್ಯದ ಉದ್ಯಮಿ ಸಮೀರ್ ಮಹೇಂದ್ರು ಅವರನ್ನು ಬಂಧಿಸಿತ್ತು. ಎಎಪಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕ ವಿಜಯ್ ನಾಯರ್ ಅವರನ್ನು ಸಿಬಿಐ ಬಂಧಿಸಿದೆ.

    Live Tv
    [brid partner=56869869 player=32851 video=960834 autoplay=true]