ಅವರ ಪ್ರೀತಿ, ಮಮತೆ ಮತ್ತು ಆಶೀರ್ವಾದ ನಮ್ಮ ಹೃದಯದಲ್ಲಿ ಸದಾ ಹಸಿರಾಗಿರುತ್ತದೆ. ಜೀವನದಲ್ಲಿ ಅವರು ಕಲಿಸಿದ ಸರಳತೆ ಮತ್ತು ನೀತಿ ಪಾಠಗಳು ನನಗೆ ಸನ್ಮಾರ್ಗದಲ್ಲಿ ನಡೆಯಲು ಸದಾ ಪ್ರೇರಣೆ ನೀಡುತ್ತಿರುತ್ತವೆ.
ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಕೋರುತ್ತೇನೆ.
2/2
ತಾಯಿಯ ಪ್ರೀತಿ, ಮಮತೆ ಮತ್ತು ಆಶೀರ್ವಾದ ನಮ್ಮ ಹೃದಯದಲ್ಲಿ ಸದಾ ಹಸಿರಾಗಿರುತ್ತದೆ. ಜೀವನದಲ್ಲಿ ಅವರು ಕಲಿಸಿದ ಸರಳತೆ ಮತ್ತು ನೀತಿ ಪಾಠಗಳು ನನಗೆ ಸನ್ಮಾರ್ಗದಲ್ಲಿ ನಡೆಯಲು ಸದಾ ಪ್ರೇರಣೆ ನೀಡುತ್ತಿರುತ್ತವೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಕೋರುತ್ತೇನೆ ಎಂದು ಲಿಂಬಾವಳಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭೆಯ ಮಹಾದೇವಪುರದಲ್ಲಿ 1,00,250 ಮತಗಳ್ಳತನ ಆಗಿದೆ ಎಂಬ ರಾಹುಲ್ ಗಾಂಧಿ ಆರೋಪಕ್ಕೆ, ಮಹಾದೇವಪುರ ಕ್ಷೇತ್ರದ ಮಾಜಿ ಶಾಸಕ ಅರವಿಂದ ಲಿಂಬಾವಳಿ (Arvind Limbavali) ತಿರುಗೇಟು ಕೊಟ್ಟಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾದೇವಪುರದಲ್ಲಿ ಯಾವುದೇ ಅಕ್ರಮ ಆಗಿಲ್ಲ. ಸಕ್ರಮ ಚುನಾವಣೆ ನಡೆದಿದೆ. ರಾಹುಲ್ ಗಾಂಧಿ ಆರೋಪಗಳು ನಿರಾಧಾರ, ಸತ್ಯಕ್ಕೆ ದೂರ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಅಲ್ಲದೇ, ರಾಹುಲ್ ಗಾಂಧಿ ಮಾಡಿರುವ ಐದು ಹಂತದ ಮತಗಳ್ಳತನ ಹಾಗೂ ಏಳು ಉದಾಹರಣೆಗಳಿಗೂ ಲಿಂಬಾವಳಿ ದಾಖಲೆ ಸಹಿತ ಉತ್ತರ ಕೊಟ್ಟಿದ್ದಾರೆ. ಇದನ್ನೂ ಓದಿ: ಮೋದಿ ಮತಗಳ್ಳತನ ಮಾಡಿ ಪ್ರಧಾನಿಯಾಗಿದ್ದಾರೆ: ರಾಹುಲ್ ಗಾಂಧಿ ವಾಗ್ದಾಳಿ
ಆರೋಪ 1: ಡುಪ್ಲಿಕೇಟ್ ಮತದಾರರ ಸಂಖ್ಯೆ 11,965
ಉತ್ತರ – ಗುರುಕಿರೀತ್ ಸಿಂಗ್ ದಾಂಗ್ ಹೆಸರು ಸೇರ್ಪಡೆಗೆ 4 ಬಾರಿ ಅರ್ಜಿ ಸಲ್ಲಿಸಿದಾಗ ತಿರಸ್ಕರಿಸಲ್ಪಟ್ಟಿತ್ತು. ಆದರೆ, ಮತದಾರರ ಪಟ್ಟಿಯಲ್ಲಿ ಬೇರೆ ಬೇರೆ ಕಡೆ ಕಾಣಿಸಿಕೊಂಡಿದೆ. 3 ಕಡೆ ಹೆಸರು ರದ್ದತಿಗೆ ಅವರು ಕೋರಿದ್ದಾರೆ.
ಲಕ್ನೋದ ಆದಿತ್ಯ ಶ್ರೀವಾಸ್ತವ್ ಹೆಸರು ಲಕ್ನೋದಲ್ಲಿ ಸೇರ್ಪಡೆಯಾಗಿತ್ತು. ಬಳಿಕ ಕೆಲಸದಲ್ಲಿದ್ದ ಮುಂಬೈನಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆ, ಬಳಿಕ ಬೆಂಗಳೂರಿನಲ್ಲಿ ಹೆಸರು ಸೇರಿಸಿ ಮತ ಚಲಾಯಿಸಿದ್ದಾರೆ. ಇವರು ಕೂಡ ಫಾರ್ಮ್ 7 ಮೂಲಕ ಬದಲಾವಣೆಗೆ ಅರ್ಜಿ ಕೊಟ್ಟವರು.
ವಾರಣಾಸಿಯ ವಿನೋದ್ ಸಿಂಗ್ ಬೆಂಗಳೂರಿನ ಮಾರಥಹಳ್ಳಿಯಲ್ಲಿದ್ರು. ಈಗ ಮನೆ ಖರೀದಿಸಿದ್ದಾರೆ. 513 ಬೂತ್‌ಗೆ ಮನೆ ಬದಲಾಯಿಸಿ ವೋಟ್ ಹಾಕಿದ್ದಾರೆ. ವೋಟರ್ ಲಿಸ್ಟ್ ನಿಯಮದ ಪ್ರಕಾರ ಬದಲಾಯಿಸಿಕೊಂಡಿದ್ದಾರೆ. ಇವರು ವಾರಣಾಸಿಯಲ್ಲಿ ಮತ ಹಾಕಿಲ್ಲ, ಹಾಕಿದ್ರೆ ಪ್ರೂವ್ ಮಾಡಿ
ಆರೋಪ 2: ಒಂದೇ ವಿಳಾಸದ 10,452 ಬಲ್ಕ್ ಮತದಾರರು
ಉತ್ತರ – ನಕಲಿ ವಿಳಾಸದ ಚೆಕ್ ಮಾಡಿದ್ದು, 13 ಜನ ಸಿಕ್ಕಿದ್ದಾರೆ. ಇವರು ವಿಳಾಸ ಕೊಟ್ಟರೂ ಆಯೋಗದವರು ಸೇರಿಸಿಲ್ಲ. ಒಂದೇ ಮನೆ ನಂಬರ್ 35 ಅಂತ ಇದೆ. ಇಲ್ಲಿ 80 ವೋಟರ್ಸ್ ಇದ್ದಾರೆ ಅಂದಿದ್ದಾರೆ. ಬಲ್ಕ್ ವೋಟರ್ಸ್ ಬಿಟಿಎಂ ಲೇಔಟ್‌ನಲ್ಲೂ ಇದ್ದಾರೆ. ಬಲ್ಕ್ ಮತದಾರರ ಕುರಿತ ಆರೋಪ ಸರಿಯಲ್ಲ.
ಆರೋಪ 3: 40,009 ನಕಲಿ ವಿಳಾಸಗಳು ಮತ್ತು ಅಸಿಂಧು ಮತಗಳು
ಉತ್ತರ – ನಮ್ಮ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಮನೆ ವಿಳಾಸದ ಜಾಗದಲ್ಲಿ ಜೀರೋ ಇದೆ ಅಂತ ಅಂದಿದ್ದಾರೆ. ಸಿಎಂ ಅವರ ವರುಣಾ ಕ್ಷೇತ್ರದಲ್ಲಿ ಮನೆ ವಿಳಾಸದ ಜಾಗದಲ್ಲಿ ಜೀರೋ ಜೀರೋ ಅಂತ ಇದೆ. ವರುಣಾದ ವಾರ್ಡ್ ನಂಬರ್ 8 ರಲ್ಲಿ ವಿಳಾಸ ಜಾಗದಲ್ಲಿ ಜೀರೋ ಅಂತ ಇದೆ. ನಮ್ಮಲ್ಲಿ ಇದು ತಪ್ಪಾಗಿದ್ರೆ, ಸಿದ್ದರಾಮಯ್ಯ ಕ್ಷೇತ್ರದ್ದೂ ತಪ್ಪೇ ಅಲ್ಲವಾ? ಸಂಡೂರು, ಮಾನ್ವಿ, ಮಸ್ಕಿ ಕ್ಷೇತ್ರಗಳಲ್ಲೂ ಮನೆ ವಿಳಾಸದ ಜಾಗದಲ್ಲಿ ಜೀರೋ ಜೀರೋ ಅಂತ ಇದೆ. ಇದು ಒಂದು ಎರರ್, ಸರಿಪಡಿಸುವ ಹೊಣೆ ಆಯೋಗದ್ದು. ಇದನ್ನೂ ಓದಿ: ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ – ರಾಹುಲ್ ವಿರುದ್ಧ ಹೆಚ್‌ಡಿಕೆ ಕಿಡಿ
ಆರೋಪ 4: ಫಾರ್ಮ್ 6ರ (ಹೊಸ ಮತದಾರ) ದುರ್ಬಳಕೆ-33692
ಉತ್ತರ – ಶಕುನ್ ರಾಣಿಯಯವರು 2 ಕಡೆ ಮತ ಹಾಕಿದ್ದಾರೆ ಎಂದು ರಾಹುಲ್ ಆರೋಪಿಸಿದ್ದು, ಅದನ್ನೂ ತಪಾಸಣೆ ಮಾಡಿದ್ದೇವೆ. ಅವರು ಒಂದೇ ಕಡೆ ಮತ ಹಾಕಿದ್ದಾರೆ.
ಆರೋಪ 5: ನಕಲಿ ಫೋಟೋಗಳು 4,132
ಉತ್ತರ – ಅಪ್‌ಲೋಡ್ ಮಾಡುವಾಗ ಫೋಟೋಗಳು ಹಾಗೆ ಬಂದಿವೆ. ಮಂಡೂರಿನ ಬೂತ್ ನಂಬರ್ 5 ರಲ್ಲಿ ಈ ಮತದಾರರು ಇದ್ದಾರೆ. ಫೋಟೋ ಸರಿಯಿಲ್ಲ ಅಂದ್ರೆ ವೋಟರ್ ಕಾರ್ಡ್ ಒಂದೇ ನೋಡಲ್ಲ, ಬೇರೆ ಗುರುತು ಚೀಟಿ ನೋಡಿಯೇ ವೋಟ್ ಹಾಕೋಕೆ ಅವಕಾಶ ಕೊಡೋದು ಎಂದು ಅರವಿಂದ್ ಲಿಂಬಾವಳಿ ಉತ್ತರಿಸಿದ್ದಾರೆ. ಆ ಮೂಲಕ ರಾಹುಲ್ ಗಾಂಧಿ ಎಲ್ಲಾ ಆರೋಪಗಳನ್ನು ಅಲ್ಲಗಳೆದಿದ್ದಾರೆ.
ಬೀದರ್: ನಾವು ಯಾರಿಗೂ ಎಚ್ಚರಿಕೆ ಕೊಡದೆ, ಜನಜಾಗೃತಿ ಮಾಡುವ ಕೆಲಸ ಮಾತ್ರ ಮಾಡಲಿದ್ದೇವೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ (Arvind Limbavali) ಹೇಳಿದ್ದಾರೆ.
ಗಡಿ ಜಿಲ್ಲೆಯಲ್ಲಿ ಬಿಜೆಪಿ ರೆಬಲ್ಸ್ ಟೀಂ ಇಂದಿನಿಂದ (ನ.25) ವಕ್ಫ್ (Waqf Board) ವಿರುದ್ಧ ಹೋರಾಟ ಆರಂಭಿಸಿದೆ. ವಕ್ಫ್ ಹಠಾವೋ ಭಾರತ್ ದೇಶ್ ಬಚಾವೋ’ ಘೋಷವಾಕ್ಯದಡಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹಾಗೂ ತಂಡ ಹೋರಾಟ ನಡೆಸಿದೆ. ಈ ವೇಳೆ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದರು.ಇದನ್ನೂ ಓದಿ: ಭೋವಿ ನಿಗಮ ಹಗರಣದ ತನಿಖೆ ಎದುರಿಸಿದ್ದ ಮಹಿಳೆ ಆತ್ಮಹತ್ಯೆ ಕೇಸ್ – ಸಿಸಿಬಿಗೆ ವರ್ಗಾವಣೆ
ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ವಕ್ಫ್ ವಿರುದ್ಧ ಬಿಜೆಪಿ ಹೋರಾಟವನ್ನು ಕೈಗೆತ್ತಿಕೊಂಡಿದೆ. ಯತ್ನಾಳ್ ಅವರು ಸ್ಥಳೀಯವಾಗಿ ಹೋರಾಟ ಮಾಡಿದ್ದಾರೆ. ನಿಮಗೆ ವಕ್ಫ್ ಸಮಸ್ಯೆ ಇದ್ರೆ ದಯವಿಟ್ಟು ತಿಳಿಸಿ. ಜನರು ಕೂಡಲೇ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಯಾರಿಗೂ ಎಚ್ಚರಿಕೆ ಕೊಡದೇ ಜನರ ಸಮಸ್ಯೆ ಆಲಿಸಲು ಮುಂದಾಗಿದ್ದೇವೆ. ಜನರ ಸಮಸ್ಯೆ ಆಲಿಸಲು ಜಾಗೃತಿ ಮೂಡಿಸಲು ಸ್ಥಳೀಯವಾಗಿ ಎಲ್ಲರೂ ಒಟ್ಟಾಗಿ ಬನ್ನಿ ಎಂದು ಕರೆ ನೀಡಿದ್ದೇವೆ. ರಾಜ್ಯಾಧ್ಯಕ್ಷರ ಭಾವನೆಯನ್ನ ನಾವು ಗೌರವಿಸುತ್ತೇವೆ ಎಂದರು.
ಇಂದು ಧರ್ಮಾಪುರ ಹಾಗೂ ಚಟ್ನಹಳ್ಳಿಗೆ ಭೇಟಿ ಕೊಡ್ತಿದ್ದೇವೆ. ವಾರ್ ರೂಮ್ ಬಂದ ತಕ್ಷಣ ಜನಜಾಗೃತಿ ಮಾಡುತ್ತಿದ್ದೇವೆ. ಎಲ್ಲರೂ ಭಾಗವಹಿಸಲು ಬೀದರ್‌ನಿಂದ ನರಸಿಂಹ ಝಾರನಾ ದೇವಸ್ಥಾನಕ್ಕೆ ಭೇಟಿ ನೀಡಿ ಆರಂಭ ಮಾಡ್ತಿದ್ದೇವೆ. ಯತ್ನಾಳ್, ರಮೇಶ್ ಜಾರಕಿಹೊಳಿ, ಜಿ.ಎಂ ಸಿದ್ದೇಶ್ವರ್, ಬಿ.ಪಿ ಹರೀಶ್, ಜೆಡಿಎಸ್ ನಾಯಕ ಎನ್.ಆರ್ ಸಂತೋಷ್ ಇದ್ದಾರೆ. ಈಶ್ವರ್ ಸಿಂಗ್ ಠಾಕೂರ್ ಅವರು ಸ್ಥಳೀಯವಾಗಿ ನಾಯಕತ್ವ ವಹಿಸಿದ್ದಾರೆ ಎಂದು ಹೇಳಿದರು.
ಈಗಾಗಲೇ ಯತ್ನಾಳ್ ಅವರು ಬಿಜಾಪುರ ಜಿಲ್ಲೆಯಲ್ಲಿ ಅವರ ಗಮನಕ್ಕೆ ಬಂದ ತಕ್ಷಣ ಹೋರಾಟ ಮಾಡಿದ್ದರು. ಹೋರಾಟದ ಭಾಗವಾಗಿ ದೊಡ್ಡ ಸಭೆಯಾಯ್ತು. ಹಗಲು, ರಾತ್ರಿ ಹೋರಾಟ ಮಾಡಿದ್ದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿಯಾಗಿದ್ದರು. ವಕ್ಫ್ ಜಂಟಿ ಸಮಿತಿಯ ಅಧ್ಯಕ್ಷರೂ ಕೂಡ ಬಂದು ಮನವಿ ತೆಗೆದುಕೊಂಡು ಹೋದರು. ನಮಗೆ ಮಾಹಿತಿ ಸಂಗ್ರಹಿಸಿ ಕಳಿಸುವಂತೆ ಸೂಚನೆ ನೀಡಿದರು. ಕೇವಲ ಮಾಹಿತಿ ಮಾತ್ರವಲ್ಲ, ಜನಜಾಗೃತಿ ಕೂಡ ಮಾಡುತ್ತಿದ್ದೇವೆ ಎಂದು ತಿಳಿಸಿದರು.ಇದನ್ನೂ ಓದಿ: ಡಿಚ್ಚಿ ಹೊಡಿತಿನಿ ಅಂತ ಬಂದಿದ್ಯಲ್ಲ, ಡೆಪಾಸಿಟ್ ಬಂತಾ?: ಅಶೋಕ್‍ಗೆ ಡಿಕೆಶಿ ತಿರುಗೇಟು
ರಾಮನಗರ: ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೋರ್ವ ತಲೆಗೆ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಮಾಜಿ ಸಚಿವ ಅರವಿಂದ ಲಿಂಬಾವಳಿಗೆ (Arvind Limbavali) ಬಿಗ್ ರಿಲೀಫ್ ಸಿಕ್ಕಿದೆ.
ಕಳೆದ ಜನವರಿ 2ರಂದು ಬೆಂಗಳೂರಿನ ಉದ್ಯಮಿ ಪ್ರದೀಪ್ ಕಗ್ಗಲೀಪುರ ಸಮೀಪ ಕಾರಿನಲ್ಲಿಯೇ ಡೆತ್‌ನೋಟ್ ಬರೆದಿಟ್ಟು ಶೂಟೌಟ್ ಮೂಲಕ ಆತ್ಮಹತ್ಯೆಗೆ ಶರಣಾಗಿದ್ದರು. ಅದರಲ್ಲಿ ಮಾಜಿ ಶಾಸಕ ಅರವಿಂದ ಲಿಂಬಾವಳಿ ಆತ್ಮಹತ್ಯೆಗೆ ಕಾರಣವೆಂದು ಹೆಸರು ಬರೆದಿಟ್ಟಿದ್ದರು.
ಪ್ರದೀಪ್ ಪತ್ನಿ ನೀಡಿದ ದೂರಿನ ಅನ್ವಯ 6 ಮಂದಿ ವಿರುದ್ಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿತ್ತು. ಡೆತ್ ನೋಟ್ ಆರೋಪಕ್ಕೆ ಸರಿಯಾದ ಸಾಕ್ಷ್ಯಗಳು ಸಿಗದ ಹಿನ್ನಲೆಯಲ್ಲಿ ತನಿಖೆ ಮುಕ್ತಾಯಗೊಳಿಸಲಾಗಿದೆ. ತನಿಖೆ ವೇಳೆ ಕೌಟುಂಬಿಕ ಕಲಹ ಹಾಗೂ ಹಣಕಾಸಿನ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.
ರಾಮನಗರ: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ (businessman) ಪ್ರದೀಪ್ ಆತ್ಮಹತ್ಯೆ (Suicide) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಅರವಿಂದ ಲಿಂಬಾವಳಿ (Arvind Limbavali) ಸೇರಿದಂತೆ ಒಟ್ಟು 6 ಜನರ ವಿರುದ್ಧ ಪೊಲೀಸರು ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದಾರೆ.
ಉದ್ಯಮಿ ಪ್ರದೀಪ್ ಡೆತ್ ನೋಟ್‌ನಲ್ಲಿ (Death Note) ಲಿಂಬಾವಳಿ ಸೇರಿದಂತೆ 6 ಜನರ ಹೆಸರು ಬರೆದಿಟ್ಟು ಬೆಂಗಳೂರಿನ ದಕ್ಷಿಣ ತಾಲೂಕು ನೆಟ್ಟಗೆರೆ ಬಳಿ ತಮ್ಮ ಕಾರಿನಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ ನೋಟ್‌ನಲ್ಲಿ ಅರವಿಂದ ಲಿಂಬಾವಳಿ, ಗೋಪಿ, ರಘುವ ಭಟ್, ಸೋಮಯ್ಯ, ರಮೇಶ್ ರೆಡ್ಡಿ ಹಾಗೂ ಜಯರಾಮ್ ಎಂದು ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಯೇನು?: ಹೊಸ ವರ್ಷಾಚರಣೆ ಸಲುವಾಗಿ ಕುಟುಂಬ ಸಮೇತ ರಾಮನಗರದ ಕಗ್ಗಲೀಪುರ ಸಮೀಪವಿರುವ ನೆಟ್ಟಗೆರೆ ಬಳಿ ಇರುವ ರೆಸಾರ್ಟ್‌ಗೆ ಬಂದಿದ್ದ ಪ್ರದೀಪ್ ರಾತ್ರಿ ಪಾರ್ಟಿ ಮಾಡಿ, ಬೆಳಗ್ಗೆ ಶಿರಾಗೆ ಹೋಗಬೇಕು ಎಂದು ಹೇಳಿ ರೆಸಾರ್ಟ್‌ನಿಂದ ಭಾನುವಾರ ಬೆಳಗ್ಗೆ ಒಬ್ಬರೇ ಬೆಂಗಳೂರಿನಲ್ಲಿನ ತಮ್ಮ ನಿವಾಸಕ್ಕೆ ಹೋಗಿ ಡೆತ್ ನೋಟ್ ಬರೆದಿದ್ದಾರೆ. ಬಳಿಕ ರೆಸಾರ್ಟ್‌ಗೆ ವಾಪಸ್ ಬರುವಾಗ ಕಾರಿನಲ್ಲೆ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ ನೋಟ್‌ನಲ್ಲಿ ಕಾರಣ ಉಲ್ಲೇಖಿಸಿರುವ ಪ್ರದೀಪ್, ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಬಳಿ ರೆಸಾರ್ಟ್ ತೆರೆಯಲು 5 ಮಂದಿ ನನ್ನ ಬಳಿ ಮಾತನಾಡಿ, ಒಂದೂವರೆ ಕೋಟಿ ರೂ. ಹಣ ಪಡೆದುಕೊಂಡಿದ್ದರು. ನನ್ನನ್ನು ಪಾಲುದಾರನನ್ನಾಗಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ಮನೆ ಮಾರಿದ್ದೆ. ಸಾಕಷ್ಟು ಸಾಲ ಮಾಡಿಕೊಂಡಿದ್ದೆ. ಆದರೆ, ಪಾಲುದಾರಿಕೆ ಹೆಸರಿನಲ್ಲಿ ನನಗೆ ಮೋಸ ಮಾಡಿದ್ದಾರೆ. ಒಟ್ಟು ಎರಡೂವರೆ ಕೋಟಿ ಹಣ ನನಗೆ ಬರಬೇಕು. ಇದನ್ನೂ ಓದಿ: ಸಂಸದ ರಾಘವೇಂದ್ರರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ದರ್ಮರಣ
ಈ ನಡುವೆ ರಾಜಕಾರಣಿಯೊಬ್ಬರು ರಾಜಿ ಮಾಡುವ ಪ್ರಯತ್ನ ಮಾಡಿದ್ದರು. ಆದರೂ ನನಗೆ ಪೂರ್ಣ ಹಣ ನೀಡದೇ ಮೋಸ ಮಾಡಲಾಗಿದೆ. ಈ ಬಗ್ಗೆ ಕೇಳಿದರೆ ಆ ರಾಜಕಾರಣಿಯವರು ಸಹ ನನಗೆ ಸಹಾಯ ಮಾಡಿಲ್ಲ. ಹೀಗಾಗಿ ನನ್ನ ಸಾವಿಗೆ ಈ 6 ಮಂದಿ ಕಾರಣ, ಎಲ್ಲರಿಗೂ ಶಿಕ್ಷೆ ಆಗಬೇಕು ಎಂದು ಪ್ರದೀಪ್ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಏನ್ ಕೊಟ್ಟಿದ್ದೀವಿ ಅಂತಾ ತಿಂಗಳಿಗೊಮ್ಮೆ ಬರುವುದಾಗಿ ಹೇಳಿದ್ದಾರೆ. ಇಲ್ಲೇನು ಗೊಂಬೆ ಕುಣಿಸಲು ಬರ್ತಾರಾ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಮಂಡ್ಯದ ನಾಗಮಂಗಲ ತಾಲೂಕಿನ ದೊಡ್ಡಚಿಕ್ಕನಹಳ್ಳಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏನ್ ಮಾಡೋದಕ್ಕೆ ಮೋದಿ ತಿಂಗಳಿಗೊಮ್ಮೆ ಬರ್ತಾರೆ? ಏನ್ ಕೊಟ್ಟಿದ್ದೀವಿ ಎಂದು ಬರ್ತಾರೆ? ಇಲ್ಲೇನು ಗೊಂಬೆ ಕುಣಿಸಲು ಬರ್ತಾರಾ? ಮೊದಲು ಜನರ ಸಮಸ್ಯೆ ಬಗೆಹರಿಸಿ. ಕಳೆದ ಮೂರು ವರ್ಷಗಳಲ್ಲಿ 35 ರಿಂದ 40 ಸಾವಿರ ಕೋಟಿ ರೈತರ ಬೆಳೆ ನಾಶವಾಗಿದೆ. ಇದ್ಯಾವುದಕ್ಕೂ ಧ್ವನಿ ಎತ್ತದೆ ಇಲ್ಲಿ ಬಂದು ಏನ್ ಮಾಡ್ತಾರೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: CPI(M) ಪಕ್ಷ ವಿರೋಧ ಹಿನ್ನೆಲೆ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ನಿರಾಕರಿಸಿದ ಕೆ.ಕೆ ಶೈಲಜಾ
ಬೆಂಗಳೂರು – ಮೈಸೂರು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ಇರೋದ್ರಿಂದ ಬದಲಿ ಮಾರ್ಗ ಸೂಚಿಸಲಾಗಿದೆ. ಪ್ರತಾಪ್ ಸಿಂಹ ಯಾಕೆ ಇಷ್ಟೊಂದು ವಹಿಸಿಕೊಳ್ತಿದ್ದಾರೆ ಎಂದು ಗೊತ್ತಿಲ್ಲ ಎಂದು ಕುಟುಕಿದ್ದಾರೆ.
ಮುರುಘಾ ಶ್ರೀಗಳ ವಿಚಾರವಾಗಿ ಮಾತನಾಡಿ, ಶ್ರೀಗಳ ವಿಚಾರದಲ್ಲಿ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ಕಾನೂನು ವ್ಯಾಪ್ತಿಯಲ್ಲಿ ಘಟನೆಯ ಸತ್ಯಾಂಶ ಹೊರತೆಗೆಯಬೇಕು. ಅದನ್ನು ಬಿಟ್ಟು ಸಾರ್ವಜನಿಕವಾಗಿ ಚರ್ಚೆ ಮಾಡುವುದು ಅನವಶ್ಯಕ. ಜನರಲ್ಲಿ ಅಪನಂಬಿಕೆ ಬಾರದಂತೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ರಾಜಕೀಯಕ್ಕೆ ಸೇರಿ ಅಂದವರಿಗೆ ಕಾಫಿನಾಡು ಚಂದು ಹೇಳಿದ್ದೇನು ಗೊತ್ತಾ?
ಅರವಿಂದ ಲಿಂಬಾವಳಿ ಮಹಿಳೆ ಜೊತೆ ಅನುಚಿತ ವರ್ತನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ಲಿಂಬಾವಳಿ ಹೆಣ್ಣುಮಕ್ಕಳಿಗೆ ದೌರ್ಜನ್ಯ ಮಾಡಲ್ಲ. ಅವರು ದೌರ್ಜನ್ಯ ಮಾಡುವುದೇ ಬೇರೆಯವರಿಗೆ. ಈ ಹಿಂದೆ ಅವರು ಕೋರ್ಟ್ ನಲ್ಲಿ ಸ್ಟೇ ತಂದಿದ್ರು. ಆ ಕ್ಯಾಸೆಟ್ ನೋಡಿದ್ರೆ ಅವರು ಯಾರ ಮೇಲೆ ದೌರ್ಜನ್ಯ ಮಾಡುತ್ತಾರೆ ಎಂದು ಗೊತ್ತಾಗುತ್ತದೆ. ಅವರು ಹೆಣ್ಣುಮಕ್ಕಳ ಮೇಲೆ ರೇಪ್ ಮಾಡಲು ಹೋಗಿಲ್ಲ ಅಂತಾ ಹೇಳಿದ್ದಾರೆ. ಅವರ ನಡವಳಿಕೆಗಳು ಬೇರೆ ರೀತಿ ಇದೆ. ಜನಪ್ರತಿನಿಧಿಗಳಿಗೆ ಅಹವಾಲನ್ನು ಕೊಡಲು ಬಂದಾಗ ತೆಗೆದುಕೊಳ್ಳಬೇಕು. ಅಗೌರವವಾಗಿ ನಡೆದುಕೊಳ್ಳಬಾರದು. ಈ ವರ್ತನೆ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೇವೇಗೌಡರ ಆರೋಗ್ಯ ವಿಚಾರವಾಗಿ ಮಾತನಾಡಿದ ಅವರು, ದೇವರ ದಯೆಯಿಂದ ದೇವೇಗೌಡರ ಆರೋಗ್ಯ ಮತ್ತೆ ಚೇತರಿಸುತ್ತಿದೆ. ಗಣೇಶ ಹಬ್ಬದಂದು ಅವರೇ ಹೇಳಿದ್ದಾರೆ. ಜನತೆಯ ಮುಂದೆ ಬಂತು ಆಶೀರ್ವಾದ ತೆಗೆದುಕೊಳ್ಳುತ್ತಾರೆ. ಪಕ್ಷ ಸಂಘಟನೆ ಮಾಡುವ ಕೆಲಸವನ್ನೂ ಮಾಡ್ತಾರೆ ಎಂದು ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]
ಹಾಸನ: ಇಂದು ಯಾವುದೇ ಸರ್ಕಾರಿ ಇಲಾಖೆಯ ಕಚೇರಿಗಳಿಗೆ ಹೋದರೂ ಲಂಚವಿಲ್ಲದೇ ಕೆಲಸ ನಡೆಯೋದಿಲ್ಲ. ಹೀಗಿದ್ದೂ ಪ್ರಧಾನಿ ನರೇಂದ್ರ ಮೋದಿ ಅವರೇ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಅರಸೀಕೆರೆ ತಾಲ್ಲೂಕಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರೇ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ. ಕೆಂಪಣ್ಣ ಅವರು ಪತ್ರ ಬರೆದು ಒಂದು ವರ್ಷ ಆಯ್ತು. ಇವತ್ತಿನವರೆಗೂ ಪ್ರಧಾನಿ ಕ್ರಮ ತೆಗೆದುಕೊಂಡಿಲ್ಲ. ಈ ಹಿಂದೆಯೂ ನಾ ಕಾವೂಂಗ್, ನಾ ಕಾನೇದೊಂಗಾ ಅಂತ ಪ್ರಧಾನಮಂತ್ರಿ ಹೇಳಿದ್ರು. ಅವರ ಹೇಳಿಕೆಯಂತೆ ಏನೂ ಕ್ರಮ ತೆಗೆದುಕೊಂಡಿಲ್ಲ. ಕರ್ನಾಟಕದಲ್ಲಿ ಭ್ರಷ್ಟಾಚಾರ ಅವ್ಯಾಹತವಾಗಿ ನಡೆಯುತ್ತಿದೆ. ತಹಸೀಲ್ದಾರ್ ಕಚೇರಿ, ಪೊಲೀಸ್ ಠಾಣೆ, ಪಿಡಬ್ಲ್ಯೂಡಿ ಇಲಾಖೆ, ನೀರಾವರಿ ಇಲಾಖೆ ಯಾವ ಸರ್ಕಾರಿ ಕಚೇರಿಗಳಿಗೆ ಹೋದರೂ ಭ್ರಷ್ಟಾಚಾರವಿಲ್ಲದೇ ಏನೂ ಕೆಲಸ ನಡೆಯುವುದಿಲ್ಲ ಎಂದು ಆರೋಪಿಸಿದ್ದಾರೆ.
ಭ್ರಷ್ಟಾಚಾರ ಮಾಡಿರೋರು ಲಂಚ ಕೊಟ್ಟಿದ್ದಕ್ಕೆಲ್ಲಾ ರಶೀದಿ ಕೊಡ್ತಾರಾ? ತನಿಖೆ ಮಾಡಿಸಿದರೆ ಗೊತ್ತಾಗುತ್ತದೆ. ಕೆಂಪಣ್ಣ ನ್ಯಾಯಾಂಗ ತನಿಖೆ ಮಾಡಿದರೆ ದಾಖಲೆ ಕೊಡ್ತೀವಿ ಅಂದಿದ್ದಾರೆ. ನಮ್ಮ ಆರೋಪ ಸಾಬೀತಾಗದೇ ಇದ್ದರೆ ನಮಗೆ ಏನು ಬೇಕಾದರೂ ಶಿಕ್ಷೆ ಕೊಡಿ ಎಂದು ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು. ನೀವು ಪ್ರಾಮಾಣಿಕರಾಗಿದ್ದರೆ ತನಿಖೆ ಮಾಡಿಸೋಕೆ ಭಯ ಯಾಕೆ ಎಂದು ಪ್ರಶ್ನಿಸಿದ್ದಾರೆ.
ಕೆಂಪಣ್ಣ ಕಾಂಗ್ರೆಸ್ಸೋ, ಬಿಜೆಪಿಯೊ ನಂಗೆ ಗೊತ್ತಿಲ್ಲ. ಪ್ರಧಾನಿಗೆ ಪತ್ರ ಬರೆದ ಒಂದು ವರ್ಷದ ನಂತರ ಅವರು ನನ್ನನ್ನು ಭೇಟಿಯಾಗಿದ್ದಾರೆ. ಸಂಘದ 25 ಪದಾಧಿಕಾರಿಗಳು ಪಕ್ಷಾತೀತವಾಗಿ ಬಂದು ನನ್ನ ಭೇಟಿಯಾಗಿದ್ದಾರೆ. ಅವರ ಭೇಟಿ ಬಳಿಕ ಈ ವಿಚಾರವನ್ನು ಸದನದಲ್ಲಿ ಪ್ರಸ್ತಾಪ ಮಾಡೋಕೆ ಹೇಳಿದ್ದರು ಅಷ್ಟೇ ಹೊರತಾಗಿ ಬೇರೇನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯಿಂದ ಜನೋತ್ಸವ ಕಾರ್ಯಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದು ಜನೋತ್ಸವ ಅಲ್ಲ, ಭ್ರಷ್ಟ ಪ್ಲಸ್ ಉತ್ಸವ ಭ್ರಷ್ಟೋತ್ಸವ. ರೂಪ್ಸಾದವರು ಲಂಚ ತೆಗೆದುಕೊಳ್ಳುತ್ತಾರೆ ಎಂದು ಆರೋಪಿಸಿದ್ದಾರೆ. ಕೆಂಪಣ್ಣ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದು ಸೆಲೆಕ್ಷನ್ ಕಮಿಟಿ ಅಧ್ಯಕ್ಷ ಎಡಿಜಿಪಿ ಜೈಲಿಗೆ ಹೋಗಿದ್ದಾರೆ. ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಕೆಲವರು ಅರೆಸ್ಟ್ ಆಗಿದ್ದಾರೆ. ಬೆಂಕಿಯಿಲ್ಲದೆ ಹೊಗೆ ಬರುತ್ತಾ? `ದಿಸ್ ಗವರ್ನಮೆಂಟ್ ಈಸ್ ಎ ಮೋಸ್ಟ್ ಕರಪ್ಟ್ ಗೌರ್ನಮೆಂಟ್’. ಈಗ ವರ್ಗಾವಣೆಗೂ ದುಡ್ಡು ತೆಗೆದುಕೊಳ್ಳೋಕೆ ಶುರು ಮಾಡಿದ್ದಾರೆ ಎಂದು ಸಾಲು-ಸಾಲು ಹಗರಣಗಳನ್ನು ಉದಾಹರಣೆ ನೀಡಿದ್ದಾರೆ.
ಅರವಿಂದ ಲಿಂಬಾವಳಿ ಜನಪ್ರತಿನಿಧಿಯಾಗಲು ನಾಲಾಯಕ್:
ಅಹವಾಲು ಹೇಳಲು ಬಂದ ಮಹಿಳೆ ಜೊತೆ ದುರ್ವರ್ತನೆ ತೋರಿದ ಅರವಿಂದ ಲಿಂಬಾವಳಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದು, ಲಿಂಬಾವಳಿ ಜನಪ್ರತಿನಿಧಿಯಾಗಲು ನಾಲಾಯಕ್. ಆಯಮ್ಮ ಏನು ಹೇಳ್ತಾರೆ ಕೇಳಬೇಕಿತ್ತು. ಅವರು ರಾಜಕಾಲುವೆ ಒತ್ತುವರಿ ಮಾಡಿದ್ದರೆ ಕ್ರಮ ತಗೊಳ್ಳಿ. ನೀವೊಬ್ಬ ಜನಪ್ರತಿನಿಧಿಯಾಗಿ ಸಮಸ್ಯೆ ಕೇಳೋದು ನಿಮ್ಮ ಕರ್ತವ್ಯ ಅಲ್ಲವೇ? ಯಾರೇ ಆಗಲಿ ಕಷ್ಟ-ಸುಖ ಹೇಳಿಕೊಳ್ಳಲು ಬಂದಾಗ ಕೆಟ್ಟದಾಗಿ ಬೈಯ್ದು ಬಿಡೋದಾ? ನಾವೇನು ಆಯಮ್ಮನಿಗೆ ರೇಪ್ ಮಾಡಿದಿವಾ ಅಂದರೆ ಏನರ್ಥ ಹೇಳಿ ನೋಡೋಣ ಎಂದು ಪ್ರಶ್ನಿಸಿದ್ದಾರೆ.
ಆಯಮ್ಮ ಸುಳ್ಳು ಹೇಳುತ್ತಿದ್ದಾರೆ, ಅಕ್ರಮವಾಗಿ ರಾಜಕಾಲುವೆ ಒತ್ತುವರಿ ಮಾಡಿದ್ದಾರೆ ಅಂತಲೇ ಅಂದುಕೊಳ್ಳೋಣ. ಅವರು ಹೇಳೋದನ್ನು ಕೇಳೋಕೆ ಏನು ಕಷ್ಟ. ತಾಳ್ಮೆಯಿಂದ ಅವರ ಕಷ್ಟ-ಸುಖ ಕೇಳಬೇಕು ಅಲ್ಲವಾ? ಅದು ಬಿಟ್ಟು ಮೈ ಮೇಲೆ ಬಿದ್ದರೆ ಹೇಗೆ? ಅವರು ಎಂಎಲ್‌ಎ ಆಗಲು ಲಾಯಕ್ಕಾ, ನಾಲಾಯಕ್ಕ ನೀವೆ ಹೇಳಿ ವಾಗ್ದಾಳಿ ನಡೆಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಬಿಜೆಪಿಯ ಸ್ತ್ರೀಪರ ಕಾಳಜಿಯ ವೀರಾಧಿವೀರರೇ, ಸಿಡಿ ಶೂರರೇ, ಕೋರ್ಟಿನಿಂದ ತಡೆಯಾಜ್ಞೆ ತಂದ ಧೀರರೇ. ನಿಮ್ಮ ಪಕ್ಷದ ಅರವಿಂದ್ ಲಿಂಬಾವಳಿಯ ಮಹಿಳೆ ಮೇಲಿನ ದೌರ್ಜನ್ಯಕ್ಕೆ ರೊಚ್ಚಿಗೇಳುವುದು ಯಾವಾಗ ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದೆ.
ಟ್ವೀಟ್‍ನಲ್ಲಿ ಏನಿದೆ?
ಬಿಜೆಪಿಯ ಸ್ತ್ರೀಪರ ಕಾಳಜಿಯ ವೀರಾಧಿವೀರರೇ, ಸಿಡಿ ಶೂರರೇ, ಕೋರ್ಟಿನಿಂದ ತಡೆಯಾಜ್ಞೆ ತಂದ ಧೀರರೇ. ನಿಮ್ಮ ಪಕ್ಷದ ಅರವಿಂದ್ ಲಿಂಬಾವಳಿಯ ಮಹಿಳೆ ಮೇಲಿನ ದೌರ್ಜನ್ಯಕ್ಕೆ ರೊಚ್ಚಿಗೇಳುವುದು ಯಾವಾಗ? ಸ್ತ್ರೀ ಕುಲದ ಗೌರವವನ್ನು ಎತ್ತಿ ಹಿಡಿಯುವುದು ಯಾವಾಗ? ನಳಿನ್ ಕುಮಾರ್ ಕಟೀಲ್ ಅವರೇ, ಲಿಂಬಾವಳಿಯವರನ್ನು ಉಚ್ಛಾಟಿಸುವುದು ಯಾವಾಗ?. ಇದನ್ನೂ ಓದಿ: ಕೇಳುವಷ್ಟು ಶಾಂತಿ, ಸಹನೆ ಇಲ್ಲವೆಂದ್ರೆ ಕ್ಷೇತ್ರದ ಶಾಸಕರಾಗಿ ಇರುವುದಕ್ಕೆ ಯೋಗ್ಯರಲ್ಲ: ಡಿಕೆಶಿ
ಮಹಿಳೆಗೆ ನಿಂದಿಸಿದ್ದರು ಮಾಧುಸ್ವಾಮಿ. ಮಹಿಳೆಗೆ ಹಲ್ಲೆ ಮಾಡಿದ್ದರು ಸಿದ್ದು ಸವದಿ. ಉದ್ಯೋಗ ಕೇಳಿದಾಕೆಯನ್ನು ಮಂಚ ಹತ್ತಿಸಿದ್ದರು ರಮೇಶ್ ಜಾರಕಿಹೊಳಿ. ಅತ್ಯಾಚಾರ ಸಂತ್ರಸ್ತೆಯದ್ದೇ ತಪ್ಪು ಎಂದಿದ್ದರು ಆರಗ ಜ್ಞಾನೇಂದ್ರ. ಮಹಿಳೆಯ ಮೇಲೆ ದರ್ಪ ಮೆರೆದರು ಅರವಿಂದ್ ಲಿಂಬಾವಳಿ. ಇದೇನಾ ಬಿಜೆಪಿಯ ಸ್ತ್ರೀಗೌರವದ ಸಂಸ್ಕೃತಿ? ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಶಾಸಕ ಅರವಿಂದ್ ಲಿಂಬಾವಳಿಯ ವರ್ತನೆಯು ಬಿಜೆಪಿಯ ಜನವಿರೋಧಿ ಧೋರಣೆ, ದುರಹಂಕಾರ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿ. ಜನತೆಯ ಮೇಲೆ ದರ್ಪ ತೋರಿದ ಮಾತ್ರಕ್ಕೆ ನಿಮ್ಮ ಅಯೋಗ್ಯತನ ಮರೆಯಾಗುವುದಿಲ್ಲ. ಇದನ್ನೂ ಓದಿ: ಕ್ಷಮೆ ಕೇಳೋಕೆ ಸಿದ್ಧ, ಒತ್ತುವರಿ ತೆರವು ಮಾಡಿಸಿ- ಕಾಂಗ್ರೆಸ್‍ಗೆ ಲಿಂಬಾವಳಿ ಟಾಂಗ್
ಬೊಮ್ಮಾಯಿ ಅವರೇ, ನಿಮ್ಮ ಶಾಸಕರ ಈ ವರ್ತನೆ ನಿಮಗೆ ಸಹ್ಯವೇ? ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ “ನಾನೇನು ರೇಪ್ ಮಾಡಿದ್ನಾ” ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ಅವರ ಮಾತುಗಳು ಇಡೀ ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ. ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ. ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ? ತನ್ನದೇ ಮತಕ್ಷೇತ್ರದ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದರೂ ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಕ್ರಮ ಜರುಗಿಸದೆ ನಾಲಿಗೆ ಉದ್ಧವಾಗಲು ಬಿಟ್ಟ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಂಡಿಯೂರಿ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು. ಇದನ್ನೂ ಓದಿ: ಮನವಿ ಸಲ್ಲಿಸಲು ಬಂದ ಮಹಿಳೆಗೆ ಗದರಿದ ಅರವಿಂದ ಲಿಂಬಾವಳಿ
ಬಿಜೆಪಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವ ಇದ್ದರೆ ಲಿಂಬಾವಳಿಯನ್ನು ವಜಾಗೊಳಿಸಿ ನಿರೂಪಿಸಲಿ. ಬಿಜೆಪಿ ರೇಪ್ ಆರೋಪಿ ರಮೇಶ್ ಜಾರಕಿಹೊಳಿಯನ್ನೇ ಸಮರ್ಥಿಸಿಕೊಂಡಿದೆ. ಮೈಸೂರಿನ ರೇಪ್ ಸಂತ್ರಸ್ತೆಯನ್ನು ದೂಷಿಸಿದೆ. ಗುಜರಾತ್‍ನಲ್ಲಿ ರೇಪಿಸ್ಟನನ್ನು ಸನ್ಮಾನಿಸಿದೆ. ಕಾಶ್ಮೀರದಲ್ಲಿ ರೇಪ್ ಆರೋಪಿಗಳ ಮೆರವಣಿಗೆಯನ್ನೇ ಮಾಡಿದೆ. ಇಂತಹ ಮಹಿಳಾವಿರೋಧಿ ಬಿಜೆಪಿಗೆ ಲಿಂಬಾವಳಿ ಮಾತು ಪ್ರಿಯವಾಗಬಹುದು, ಆದರೆ ರಾಜ್ಯದ ಮಹಿಳೆಯರಿಗೆ ಅದು ಅಸಹ್ಯವಾಗಿದೆ. ‘ಬೇಟಿ ಬಚಾವ್’ ಆಗಬೇಕಿರುವುದು ಬಿಜೆಪಿಯ ಗೂಂಡಾಗಳಿಂದ! ಮನುಶಾಸ್ತ್ರವನ್ನು ನಂಬುವ ಬಿಜೆಪಿಗೆ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದು ಪರಂಪರೆಯಿಂದ ಬಂದ ಗುಣ. ಮಹಿಳೆಯನ್ನು ನಿಂದಿಸಿ, ದೌರ್ಜನ್ಯವೆಸಗಿದ ಅರವಿಂದ್ ಲಿಂಬಾವಳಿ ವಿರುದ್ಧ ಯಾವ ಕ್ರಮ ಕೈಗೊಳ್ಳುವಿರಿ ಬೊಮ್ಮಾಯಿ ಅವರೇ? ಅಥವಾ ಈ ದೌರ್ಜನ್ಯಕ್ಕೆ ನಿಮ್ಮ ಬೆಂಬಲವೂ ಇದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಒಬ್ಬ ಜನಪ್ರತಿನಿಧಿಯಾಗಿ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡ ರೀತಿ ಅಕ್ಷಮ್ಯ ಎಂದು ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದೆ.
ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಶಾಸಕ ಅರವಿಂದ್ ಲಿಂಬಾವಳಿಯ ವರ್ತನೆಯು ಬಿಜೆಪಿಯ ಜನವಿರೋಧಿ ಧೋರಣೆ, ದುರಹಂಕಾರ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿ.
ಮಹಿಳೆಯ ಮೇಲೆ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ದರ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಶಾಸಕ ಲಿಂಬಾವಳಿಯ ವರ್ತನೆ ಬಿಜೆಪಿಯ ಜನವಿರೋಧಿ ಧೋರಣೆ. ಇದು ದುರಹಂಕಾರ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿ. ದರ್ಪ ತೋರಿದ ಮಾತ್ರಕ್ಕೆ ನಿಮ್ಮ ಅಯೋಗ್ಯತೆ ಮರೆಯಾಗುವುದಿಲ್ಲ.
ಬೊಮ್ಮಾಯಿ ಅವರೇ, ನಿಮ್ಮ ಶಾಸಕರ ಈ ವರ್ತನೆ ನಿಮಗೆ ಸಹ್ಯವೇ ಎಂದು ವಾಗ್ದಾಳಿ ನಡೆಸಿದ್ದಾರೆ.
ಸ್ತ್ರೀ ಉದ್ಧಾರಕರಂತೆ ಕೇವಲ ಬೂಟಾಟಿಕೆಯ ಮಾತಾಡುವ ಬಿಜೆಪಿಗರೇ, ನಿಮ್ಮ ಪಕ್ಷದ ಅರವಿಂದ ಲಿಂಬಾವಳಿಯವರು ಒಬ್ಬ ಜನಪ್ರತಿನಿಧಿಯಾಗಿ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡ ರೀತಿ ಅಕ್ಷಮ್ಯ. ಇಂಥ ಮಹಿಳಾ ವಿರೋಧಿ ನಡೆಯ ವಿರುದ್ಧ ಮಾತಾಡುವ ಧೈರ್ಯ ತೋರುತ್ತೀರಾ? ಅರವಿಂದ ಲಿಂಬಾವಳಿಯವರು ಆ ಹೆಣ್ಣಿನ ಕ್ಷಮೆ ಕೇಳುತ್ತಾರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮನವಿ ಸಲ್ಲಿಸಲು ಬಂದ ಮಹಿಳೆಗೆ ಗದರಿದ ಅರವಿಂದ ಲಿಂಬಾವಳಿ
ಮನವಿ ಸಲ್ಲಿಸಲು ಬಂದ ಮಹಿಳೆಗೆ ಶಾಸಕ ಅರವಿಂದ ಲಿಂಬಾವಳಿ ಗದರಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಮಳೆ ಅನಾಹುತ ಪ್ರದೇಶವಾದ ವರ್ತೂರು ಕೆರೆ ಕೋಡಿ ವೀಕ್ಷಿಸಲು ಅಧಿಕಾರಿಗಳ ಜೊತೆ ಅರವಿಂದ ಲಿಂಬಾವಳಿ ಬಂದಿದ್ದರು. ಈ ವೇಳೆ ಸಮಸ್ಯೆ ಹೇಳಲು ಬಂದ ಮಹಿಳೆಗೆ, ನಿನಗೆ ಮಾನ ಮರ್ಯಾದೆ ಇದ್ಯಾ? ನಿನಗೆ ನಾಚಿಕೆ ಆಗಲ್ವಾ ಎಂದು ಏರು ದನಿಯಲ್ಲಿ ಅವಾಜ್ ಹಾಕಿದ್ದಾರೆ. ನಂತರ ಮಹಿಳೆಯನ್ನು ಸ್ಟೇಷನ್‍ಗೆ ಕರೆದುಕೊಂಡು ಹೋಗಿ ಕೂರಿಸಿ ಎಂದು ಕಿಡಿಕಾರಿದ್ದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಮನವಿ ಸಲ್ಲಿಸಲು ಬಂದ ಮಹಿಳೆಗೆ ಶಾಸಕ ಅರವಿಂದ ಲಿಂಬಾವಳಿ ಗದರಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮಳೆ ಅನಾಹುತ ಪ್ರದೇಶವಾದ ವರ್ತೂರು ಕೆರೆ ಕೋಡಿ ವೀಕ್ಷಿಸಲು ಅಧಿಕಾರಿಗಳ ಜೊತೆ ಅರವಿಂದ ಲಿಂಬಾವಳಿ ಬಂದಿದ್ದರು. ಈ ವೇಳೆ ಸಮಸ್ಯೆ ಹೇಳಲು ಬಂದ ಮಹಿಳೆಗೆ, ನಿನಗೆ ಮಾನ ಮರ್ಯಾದೆ ಇದ್ಯಾ? ನಿನಗೆ ನಾಚಿಕೆ ಆಗಲ್ವಾ ಎಂದು ಏರು ದನಿಯಲ್ಲಿ ಅವಾಜ್ ಹಾಕಿದ್ದಾರೆ. ನಂತರ ಮಹಿಳೆಯನ್ನು ಸ್ಟೇಷನ್‍ಗೆ ಕರೆದುಕೊಂಡು ಹೋಗಿ ಕೂರಿಸಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ 5 ಶಾಸಕರನ್ನು ಕಳೆದುಕೊಂಡ ನಿತೀಶ್ ಕುಮಾರ್ – ಜೆಡಿಯು ಎಂಎಲ್‌ಎಗಳು ಬಿಜೆಪಿಯೊಂದಿಗೆ ವಿಲೀನ
ನಡೆದಿದ್ದೇನು? ಮಹಿಳೆ : ಸರ್ ಒಂದು ನಿಮಿಷ ಸರ್… ಶಾಸಕ ಅರವಿಂದ ಲಿಂಬಾವಳಿ: ಹೇ.. ಕೊಡಮ್ಮ ಇಲ್ಲಿ…. ಹೇಯ್…. ಕೊಡೆ ಇಲ್ಲಿ… ಮಹಿಳೆ: ಸರ್ ಇದು ಡಾಕ್ಯುಮೆಂಟ್… ಸ್ವಲ್ಪ ಇರಿ ಸರ್. ಕೇಳಿಸ್ಕೊಳಿ.. ಶಾಸಕ ಅರವಿಂದ ಲಿಂಬಾವಳಿ: ಹೇ.. ಇವಳನ್ನು ಪೊಲೀಸ್ ಕರೆಸಿ ಕಳಿಸು.. ಮಹಿಳೆ: ಇರಿ ಸರ್. ಸ್ವಲ್ಪ ಇರಿ ಸರ್.. ಶಾಸಕ ಅರವಿಂದ ಲಿಂಬಾವಳಿ: ಹೇಯ್… ಏನ್ ಕೇಳಿಸ್ಕೊಳೋದು.. ಮುಚ್ಚುಬಾಯಿ… ಮಹಿಳೆ: ಸರ್ ಏನ್ ಸರ್.. ಸ್ವಲ್ಪ ಮರ್ಯಾದೆ ಕೊಡಿ… ಮಹಿಳೆ ಅಂತಾ… ಶಾಸಕ ಅರವಿಂದ ಲಿಂಬಾವಳಿ: ಏನ್ ಮರ್ಯಾದೆ ನಿಂಗೆ.. ಒತ್ತುವರಿ ಮಾಡಿದ್ದಲ್ಲದೇ, ಮರ್ಯಾದೆ ಬೇರೆ ಕೊಡಬೇಕಾ ನಿಂಗೆ.. ಮಹಿಳೆ: ಸ್ವಲ್ಪ ಡಾಂಕ್ಯುಮೆಂಟ್ ಪರಿಶೀಲಿಸಿ ನೋಡಿ ಸರ್.. ಆಮೇಲೆ ತೀರ್ಮಾನ ಮಾಡಿ.. ನಾನೆಲ್ಲಿ ಒತ್ತುವರಿ ಮಾಡಿದ್ದೀನಿ… ಶಾಸಕ ಅರವಿಂದ ಲಿಂಬಾವಳಿ: ಮರ್ಯಾದೆ ಅಲ್ಲ.. ನಂಗೆ ಬೇರೆ ಭಾಷೆ ಬರುತ್ತದೆ… ಬೇರೆ ಭಾಷೆ ಬಳಸಬೇಕಾಗುತ್ತದೆ… ಮಹಿಳೆ: ಸರ್ ಹಾಗೆಲ್ಲಾ ಮಾತನಾಡಬೇಡಿ… ಶಾಸಕ ಅರವಿಂದ ಲಿಂಬಾವಳಿ: ಬೇರೆ ಭಾಷೆ ಬರುತ್ತದೆ ನನಗೆ… ಮಹಿಳೆ: ಏನ್ ಮಾತನಾಡುತ್ತಿದ್ದೀರಾ ನೀವು… ಬಿಡಲ್ಲ ನಾನು… ಶಾಸಕ ಅರವಿಂದ ಲಿಂಬಾವಳಿ: ನಾನು ಬಿಡಲ್ಲ ನಿನ್ನ.. ನಡಿ ಪೊಲೀಸ್ ಸ್ಟೇಷನ್‍ಗೆ… ಕತ್ತು ಹಿಡಿದು ಒಳಗೆ ಹಾಕಿಸುತ್ತೇನೆ.. ಮಹಿಳೆ: ಸರ್ ನಾನು ನ್ಯಾಯ ಕೇಳುತ್ತಿದ್ದೇನೆ… ಶಾಸಕ ಅರವಿಂದ ಲಿಂಬಾವಳಿ: ಒತ್ತುವರಿ ಮಾಡಿ ನ್ಯಾಯ ಕೇಳ್ತಿಯಾ? ನಾಚಿಕೆ ಆಗಲ್ವಾ ನಿನಗೆ
ಇದೀಗ ಶಾಸಕ ಅರವಿಂದ ಲಿಂಬಾವಳಿಯಿಂದ ನಿಂದನೆಗೆ ಒಳಗಾಗಿದ್ದ ಮಹಿಳೆಯ ಮೇಲೆ ಬಿಬಿಎಂಪಿ ಎಂಜಿನಿಯರ್ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಒತ್ತುವರಿ ವಿಚಾರಕ್ಕೆ ಕ್ರಮ ಕೈಗೊಳ್ಳಲು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಮಹಿಳೆ ವಿರುದ್ಧ ಆರೋಪಿಸಲಾಗಿದೆ. ಇದನ್ನೂ ಓದಿ: 2 ದಿನಗಳಿಂದ ದೇವರ ದರ್ಶನ ಇಲ್ಲ – ಮುರುಘಾ ಶ್ರೀಗಳ ಬಗ್ಗೆ ಮಠದ ಮಕ್ಕಳ ಮಾತು
ಮತ್ತೊಂದೆಡೆ ಶಾಸಕ ಅರವಿಂದ ಲಿಂಬಾವಳಿ ವರ್ತನೆಯನ್ನು ಮಹಾದೇವಪುರ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ ಅಧ್ಯಕ್ಷ ಅಶೋಕ್ ಮೃತ್ಯುಂಜಯ ಖಂಡಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ತಪ್ಪು ಮಾಡಿದ್ರೆ ಶಿಕ್ಷಿಸಲು ಕಾನೂನು ಇದೆ. ಇದೇನು ನಿಮ್ಮ ಮಾತುಗಳು? ನಿಮ್ಮ ಸ್ಥಾನಕ್ಕೆ ಶೋಭೆ ತರುವುದೆ? ಅಧಿಕಾರ ಶಾಶ್ವತ ಅಲ್ಲ, ಅದೇತಕೆ ಇಷ್ಟು ದರ್ಪ?’ ಬಯ್ಯೋದಕ್ಕೆ ನೀವ್ಯಾರು ಅಂತಾ ತರಾಟೆಗೆ ತೆಗೆದುಕೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]