Tag: Arya

  • ‘ಸೈಂಧವ್’ ಬಳಗ ಮತ್ತೊಬ್ಬ ಸ್ಟಾರ್ : ತಮಿಳು ನಟ ಆರ್ಯ ಫಸ್ಟ್ ಲುಕ್ ರಿಲೀಸ್

    ‘ಸೈಂಧವ್’ ಬಳಗ ಮತ್ತೊಬ್ಬ ಸ್ಟಾರ್ : ತಮಿಳು ನಟ ಆರ್ಯ ಫಸ್ಟ್ ಲುಕ್ ರಿಲೀಸ್

    ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ (Victory Venkatesh) ನಟನೆಯ 75ನೇ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’ (Saindhav) ಭಾರೀ ನಿರೀಕ್ಷೆ ಹೆಚ್ಚಿಸಿದೆ. ಶೈಲೇಶ್ ಕೋಲನು ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಇತ್ತೀಚೆಗೆಷ್ಟೇ ಮುಕ್ತಾಯಗೊಂಡಿತ್ತು. 18 ದಿನದ ಕಾಲ ನಡೆದ ಕ್ಲೈಮ್ಯಾಕ್ಸ್ ಶೂಟಿಂಗ್ ನಲ್ಲಿ 8 ಪ್ರಮುಖ ಸ್ಟಾರ್ ಭಾಗಿಯಾಗಿದ್ದು, ದಕ್ಷಿಣ ಚಿತ್ರರಂಗದ ಖ್ಯಾತ ಸ್ಟಂಟ್ ಮಾಸ್ಟರ್ಸ್ ರಾಮ ಲಕ್ಷ್ಮಣ ಸಾಹಸ ನಿರ್ದೇಶನ ಮಾಡಿದ್ದಾರೆ.

    ಸ್ವಾತಂತ್ರ್ಯ ದಿನದ ಅಂಗವಾಗಿ 8 ಸ್ಟಾರ್ಸ್ ಒಳಗೊಂಡ ಸಣ್ಣ ವಿಡಿಯೋ ಝಲಕ್ ನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಇದೀಗ ಸೈಂಧವ್ ಚಿತ್ರತಂಡದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಮತ್ತೊಬ್ಬ ಸ್ಟಾರ್ ನಟ ವಿಕ್ಟರಿ ವೆಂಕಟೇಶ್ ಸಿನಿಮಾ ಬಳಗ ಸೇರಿಕೊಂಡಿದ್ದಾರೆ. ತಮಿಳುನಟ ಆರ್ಯ (Arya) ಸೈಂಧವ್ ಭಾಗವಾಗಿದ್ದಾರೆ. ಅವ್ರ ಫಸ್ಟ್ ಲುಕ್ (First Look) ಅನಾವರಣಗೊಂಡಿದ್ದು, ಉದ್ದವಾದ ಕೂದಲು ಬಿಟ್ಟು ಸ್ಟೈಲೀಶ್ ಲುಕ್ ನಲ್ಲಿ ಮಿಂಚಿರುವ ಆರ್ಯ ಕೈಯಲ್ಲಿ ಗನ್ ಹಿಡಿದು ಹೆಜ್ಜೆ ಹಾಕ್ತಿರುವ ಪೋಸ್ಟರ್ ನೋಡುಗರನ್ನು ಇಂಪ್ರೆಸ್ ಮಾಡುತ್ತಿದೆ. ಇದನ್ನೂ ಓದಿ:ಬಿಗ್ ಬಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್- ದೊಡ್ಮನೆ ಆಟಕ್ಕೆ ಮುಹೂರ್ತ ಫಿಕ್ಸ್

    ನಿಹಾರಿಕಾ ಎಂಟರ್ ಟೈನ್ಮೆಂಟ್ ನಡಿ ವೆಂಕಟ್ ಬೋಯನಪಲ್ಲಿ ನಿರ್ಮಿಸುತ್ತಿರುವ ಸೈಂಧವ್ ಸಿನಿಮಾದಲ್ಲಿ ಶ್ರದ್ದಾ ಮನೋಜ್ಞಾ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಡಾ ರೇಣು ಪಾತ್ರದಲ್ಲಿ ರುಹಾನಿ ಶರ್ಮಾ ಮತ್ತು ಜಾಸ್ಮಿನ್ ಪಾತ್ರದಲ್ಲಿ ಆಂಡ್ರಿಯಾ ಜೆರೆಮಿಯಾ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಈ ಚಿತ್ರದ ಮೂಲಕ ಸೌತ್ ಸಿನಿರಂಗ ಪ್ರವೇಶಿಸಿದ್ದಾರೆ.

    ತಾಂತ್ರಿಕವಾಗಿಯೂ ಶ್ರೀಮಂತಿಕೆಯಿಂದ ಕೂಡಿರುವ ಸೈಂಧವ್ ಸಿನಿಮಾಗೆ ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಎಸ್ ಮಣಿಕಂದನ್ ಛಾಯಾಗ್ರಹಣ, ಗ್ಯಾರಿ ಬಿಎಚ್ ಸಂಕಲನ ಮತ್ತು ಅವಿನಾಶ್ ಕೊಲ್ಲ ನಿರ್ಮಾಣ ವಿನ್ಯಾಸ ಮಾಡಿದ್ದು, ಕಿಶೋರ್ ತಲ್ಲೂರ್ ಸಹ ನಿರ್ಮಾಪಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಸೈಂಧವ್ ಸಿನಿಮಾವನ್ನು ಡಿಸೆಂಬರ್ 22 ರಂದು ಕ್ರಿಸ್ಮಸ್ ವಿಶ್ವಾದ್ಯಂತ ಚಿತ್ರ ಬಿಡುಗಡೆಯಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೊದಲ ಬಾರಿಗೆ ಮಗಳ ಮುಖ ಪರಿಚಯಿಸಿದ `ಯುವರತ್ನ’ ನಟಿ

    ಮೊದಲ ಬಾರಿಗೆ ಮಗಳ ಮುಖ ಪರಿಚಯಿಸಿದ `ಯುವರತ್ನ’ ನಟಿ

    ಮಿಳು ಚಿತ್ರರಂಗದ(Tamil Films) ಸ್ಟಾರ್ ಜೋಡಿ ನಟ ಆರ್ಯ (Arya)ಮತ್ತು ಸಯೇಶಾ (Sayyesha) ಸಿನಿಮಾ ಜೊತೆ ವೈವಾಹಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಪತಿಯ ಹುಟ್ಟುಹಬ್ಬದಂದು ಮುದ್ದು ಮಗಳನ್ನು ನಟಿ ಸಯೇಶಾ ಪರಿಚಯಿಸಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

    ಆರ್ಯ ಮತ್ತು ಸಯೇಶಾ ಕಾಲಿವುಡ್‌ನ ಬೆಸ್ಟ್ ಜೋಡಿಯಾಗಿದ್ದಾರೆ. ಬೆಳ್ಳಿಪರದೆಯಲ್ಲೂ ಜೊತೆಯಾಗಿ ಮಿಂಚಿದ್ದಾರೆ. ಸಾಕಷ್ಟು ವರ್ಷಗಳ ಡೇಟಿಂಗ್ ನಂತರ ಪ್ರೀತಿಸಿ, 2019ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇನ್ನೂ ಮುದ್ದು ಮಗಳ ಆಗಮನವಾಗಿ ಒಂದೂವರೆ ವರ್ಷದ ನಂತರ ಈಗ ಮಗಳ ಫೋಟೋವನ್ನು ಯುವರತ್ನ (Yuvaratna) ನಟಿ ಸಯೇಶಾ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ: ವಸ್ತ್ರಾಲಂಕಾರ ಕಲಾವಿದ ಗಂಡಸಿ ನಾಗರಾಜ್ ನಿಧನ

    ಸಯೇಶಾ ಕಳೆದ ವರ್ಷ 2021ರ ಜುಲೈನಲ್ಲಿ ಹೆಣ್ಣು ಮಗುವಿಗೆ ತಾಯಿಯಾಗಿದ್ದರು. ಆದರೆ ಎಲ್ಲಿಯೂ ಕೂಡ ಮಗಳ ಮುಖ ಪರಿಚಯ ಮಾಡಿಸಿರಲಿಲ್ಲ. ಇದೀಗ ಪತಿ ಆರ್ಯ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಮಗಳ ಫೋಟೋ ರಿವೀಲ್ ಮಾಡಿದ್ದಾರೆ.

     

    View this post on Instagram

     

    A post shared by Sayyeshaa (@sayyeshaa)

    ಮುದ್ದು ಮಗಳಿಗೆ ಅರಿಯಾನಾ(Ariyana) ಎಂದು ಹೆಸರಿಟ್ಟಿದ್ದಾರೆ. ಇದೀಗ ಈ ಕುರಿತ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.

    Live Tv
    [brid partner=56869869 player=32851 video=960834 autoplay=true]

  • ‘ಡವ್ ಮಾಸ್ಟರ್’ ಸಿನಿಮಾದ ಟ್ರೇಲರ್ ರಿಲೀಸ್ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

    ‘ಡವ್ ಮಾಸ್ಟರ್’ ಸಿನಿಮಾದ ಟ್ರೇಲರ್ ರಿಲೀಸ್ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

    ವಿಭಿನ್ನ ಕಥಾಹಂದರ ಹೊಂದಿರುವ “ಡವ್ ಮಾಸ್ಟರ್” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಮಾಜಿ‌ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು. ಹಾಡುಗಳನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಎಸ್ ಎ ಚಿನ್ನೇಗೌಡ, ಕೆ.ವಿ.ಚಂದ್ರಶೇಖರ್, ಹಾಲಿ ಅಧ್ಯಕ್ಷರಾದ ಭಾ.ಮ.ಹರೀಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಿರ್ಮಾಪಕರಾದ ಸಿದ್ದರಾಜು, ಭಾ.ಮ.ಗಿರೀಶ್ ಸೇರಿದಂತೆ ಹಲವು ಗಣ್ಯರು ಬಿಡುಗಡೆಗೊಳಿಸಿದರು.

    “ಡವ್ ಮಾಸ್ಟರ್” ಚಿತ್ರ ನಾಯಿ ಹಾಗೂ ಮನುಷ್ಯನ ಸಂಬಂಧದ ನಡುವಿನ ಕಥಾಹಂದರ ಹೊಂದಿರುವ ಚಿತ್ರ ಎಂದು ತಿಳಿದು ಸಂತೋಷವಾಯಿತು. ಪ್ರಾಣಿಗಳಲ್ಲೇ ಹೆಚ್ಚು ನಿಯತ್ತಿನ ಪ್ರಾಣಿ ನಾಯಿ ಎನ್ನುತ್ತೇವೆ. “ರಾಕಿ” ಎಂಬ ಹೆಸರಿನ ನಾಯಿ ಈ ಚಿತ್ರದಲ್ಲಿ ಅಭಿನಯಿಸಿದೆ. ತಬಲನಾಣಿ ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಆತ್ಮೀಯರಾದ ಚಾಂದ್ ಪಾಷ ಅವರ ಮಗ ರೋಷನ್ ಈ ಚಿತ್ರ ನಿರ್ಮಾಣ ಮಾಡಿರುವ ವಿಷಯ ತಿಳಿದು ಖುಷಿಯಾಯಿತು. ಇಡೀ ತಂಡಕ್ಕೆ ಒಳ್ಳೆಯದಾಗಲಿ. ಎಲ್ಲರೂ ಈ ಚಿತ್ರ ನೋಡುವ ಮೂಲಕ ಪ್ರೋತ್ಸಾಹಿಸಿ ಎಂದರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.

    ನಿರ್ದೇಶಕ ಆರ್ಯ ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆವು. ನಾನು ಇಪ್ಪತ್ತೈದು ವರ್ಷಗಳಿಂದ ಚಿತ್ರರಂಗದಲ್ಲಿ ವಿತರಕನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಈಗ ಚಿತ್ರ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ನನ್ನ ಮಗ ರೋಷನ್ ನೋಡಿಕೊಳ್ಳುತ್ತಿದ್ದಾನೆ. ಈ ಸಮಾರಂಭಕ್ಕೆ ಆಗಮಿಸಿರುವ ಸಿದ್ದರಾಮಯ್ಯ ಅವರು ಸೇರಿದಂತೆ ಎಲ್ಲಾ ಗಣ್ಯರಿಗೆ ನನ್ನ ಧನ್ಯವಾದ ಎಂದರು ಚಾಂದ್ ಪಾಷಾ. ಇದನ್ನೂ ಓದಿ:ಬಳ್ಳಾರಿಗೆ ಬರಲಿದ್ದಾರೆ ವಿಜಯ್ ಮತ್ತು ರಶ್ಮಿಕಾ ಮಂದಣ್ಣ

    ನನ್ನ ಕಥೆ ಇಷ್ಟಪಟ್ಟು ನಿರ್ಮಾಣ ಮಾಡಿದ ನಿರ್ಮಾಪಕರಿಗೆ ಹಾಗೂ ನನ್ನ ಇಡೀ ತಂಡಕ್ಕೆ ಧನ್ಯವಾದ. ಸಿದ್ದರಾಮಯ್ಯ ಅವರಿಂದ ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಸಬೇಕೆಂಬುದು ನನ್ನ ಆಸೆಯಾಗಿತ್ತು. ಅದು ಈಡೇರಿದೆ. ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ಆರ್ಯ. ನನ್ನ ಅಭಿನಯದ ಚಿತ್ರವೊಂದಕ್ಕೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಆರ್ಯ ಈ ಚಿತ್ರದ ಕಥೆ ಹೇಳಿದಾಗ ಇಷ್ಟವಾಯಿತು. ನಾಯಿ ಹಾಗೂ ನನ್ನ ನಡುವಿನ ಬಾಂಧವ್ಯದ ಸನ್ನಿವೇಶಗಳನ್ನು ನಿರ್ದೇಶಕರು ಮನಮುಟ್ಟುವಂತೆ ತೋರಿಸಿದ್ದಾರೆ. ರಾಕಿ(ನಾಯಿ) ನನಗಿಂತ ಚೆನ್ನಾಗಿ ನಟಿಸಿದೆ ಅಂತ ಹೇಳಬಹುದು ಎಂದು ತಬಲನಾಣಿ  ತಿಳಿಸಿದರು.

    ನಿರ್ಮಾಪಕ ಸಿ.ರೋಷನ್, ಸಂಗೀತ ನಿರ್ದೇಶಕ ಶಕೀಲ್ ಅಹ್ಮದ್, ಛಾಯಾಗ್ರಾಹಕ ಕಿರಣ್ ಕುಮಾರ್, ನಟಿ ಪಂಕಜ ಹಾಗೂ ಹಾಡು ಬರೆದಿರುವ ಸೌಮ್ಯ ಅವರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ತಬಲ ನಾಣಿ, ಶಕೀಲ, ಕುರಿ ಪ್ರತಾಪ್, ಮಿತ್ರ, ನವೀನ್ ಪಡೀಲ್, ಪಂಕಜ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ರಾಕಿ(ನಾಯಿ) ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ಮಕ್ಕಳ ಸೈನ್ಯದೊಂದಿಗೆ ರಾಧಿಕಾ ಪಂಡಿತ್: ಗೋವಾದಲ್ಲಿ ಯಶ್ ಮಕ್ಕಳು

    ಮಕ್ಕಳ ಸೈನ್ಯದೊಂದಿಗೆ ರಾಧಿಕಾ ಪಂಡಿತ್: ಗೋವಾದಲ್ಲಿ ಯಶ್ ಮಕ್ಕಳು

    ರಾಧಿಕಾ ಪಂಡಿತ್ ನೇತೃತ್ವದಲ್ಲಿ ಮಕ್ಕಳ ದರ್ಬಾರ್ ನಡೆದಿದೆ. ತಮ್ಮ ಮಕ್ಕಳಾದ ಆರ್ಯಾ ಮತ್ತು ಯಥರ್ವ ಜೊತೆ ಇತರ ಮಕ್ಕಳೊಂದಿಗೆ ರಾಧಿಕಾ ಸಮಯ ಕಳೆದಿದ್ದಾರೆ. ಆ ಫೋಟೋಗಳನ್ನು ಅವರು ಇನ್ಸ್ಟಾದಲ್ಲಿ ಶೇರ್ ಮಾಡಿ, ಮಕ್ಕಳ ದರ್ಬಾರ್, ಮಕ್ಕಳ ಪಾರ್ಟಿ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ, ಮಕ್ಕಳ ಜೊತೆ ಆಟವಾಡುತ್ತಿರುವ ಇತರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಮಕ್ಕಳ ಜೊತೆ ಅವರು ಗೋವಾದಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದು, ಆ ಸಮಯದ ಕ್ಷಣವನ್ನು ಅವರು ಫೋಟೋಗಳಲ್ಲಿ ಸೆರೆ ಹಿಡಿಯುತ್ತಿದ್ದಾರೆ.  ಆ ಸಂಭ್ರಮವನ್ನು ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಲೇ ಇರುತ್ತಾರೆ. ಈ ಬಾರಿ ಬೀಚ್ ದಂಡೆಯಲ್ಲಿ ಆಟ ಆಡುತ್ತಿರುವುದನ್ನು ಮತ್ತು ಜೋಕಾಲಿಯಲ್ಲಿ ಜೀಕುತ್ತಿರುವುದನ್ನು ಅವರು ಪೋಸ್ಟ್ ಮಾಡಿದ್ದಾರೆ. ಮಕ್ಕಳ ಪಾರ್ಟಿ ಹೇಗಿತ್ತು ಎನ್ನುವುದನ್ನು ಅವರು ಫೋಟೋಗಳ ಮೂಲಕವೇ ವಿವರಿಸುತ್ತಾ ಹೋಗಿದ್ದಾರೆ. ಇದನ್ನೂ ಓದಿ : ಮುಂದಿನ ಚಿತ್ರಕ್ಕಾಗಿ ತೂಕ ಇಳಿಸ್ಕೊತಿರೋ ಯಶ್- ಗಡ್ಡಕ್ಕೂ ಬೀಳಲಿದೆಯಾ ಕತ್ತರಿ?

    ಮೊನ್ನೆಯಷ್ಟೇ ಪತಿ ಯಶ್ ಅವರ ಜೊತೆ ಮಕ್ಕಳನ್ನೂ ಕರೆದುಕೊಂಡು ಹೋಗಿ ಕನಕಪುರ ಸಮೀಪದ ಮಿನಿ ಪಕ್ಷಿಗಳ ಧಾಮದಲ್ಲಿ ಕೆಲ ಕ್ಷಣಗಳನ್ನು ರಾಧಿಕಾ ಕಳೆದಿದ್ದರು. ಗಿಣಿಗಳ ಜೊತೆ ಆಟವಾಡುವ ಫೋಟೋಗಳನ್ನು ಅವರು ಶೇರ್ ಮಾಡಿದ್ದರು. ಇದೀಗ ಗೋವಾದಲ್ಲಿ ಮಕ್ಕಳೊಂದಿಗೆ ಕಳೆದ ಕ್ಷಣಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಂಡಿದ್ದಾರೆ. ಮಕ್ಕಳ ಪಾಲಕರು ಸಮಯವನ್ನು ಹೇಗೆ ಕೊಡಬೇಕು ಎಂದು ವಿವರಿಸಿದ್ದಾರೆ.

    Live Tv

  • ವಿಮಾನದಲ್ಲೂ ಯಶ್-ರಾಧಿಕಾ ಪಂಡಿತ್ ಅವರ ಮಕ್ಕಳ ಆಟ

    ವಿಮಾನದಲ್ಲೂ ಯಶ್-ರಾಧಿಕಾ ಪಂಡಿತ್ ಅವರ ಮಕ್ಕಳ ಆಟ

    ಟ ಯಶ್ ಮತ್ತು ರಾಧಿಕಾ ಪಂಡಿತ್ ಮಕ್ಕಳೊಂದಿಗೆ ವಿಮಾನ ಯಾನ ಮಾಡಿದ್ದಾರೆ. ವಿಮಾನದಲ್ಲೇ ಇಬ್ಬರೂ ಮಕ್ಕಳು ಒಂದೊಂದು ಪುಸ್ತಕ ಹಿಡಿದುಕೊಂಡು, ಅದರೊಂದಿಗೆ ಆಟವಾಡುತ್ತಿರುವ ಸನ್ನಿವೇಶವನ್ನು ಸೆರೆ ಹಿಡಿದು, ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ರಾಧಿಕಾ ಪಂಡಿತ್. ಇದನ್ನೂ ಓದಿ : ನಟ ಚೇತನ್ ಬಂಧನ ಹಿಂದಿನ ರೋಚಕ ಸ್ಟೋರಿ : ಜೈಲಿನಲ್ಲಿ ಚೇತನ್ 4ನೇ ದಿನ

    ಸಾಮಾಜಿಕ ಜಾಲತಾಣದಲ್ಲಿ ಆ ಫೋಟೋ ಹಂಚಿಕೊಂಡಿದ್ದು ಮಾತ್ರವಲ್ಲ, ‘ಇನ್ ಫ್ಲೈಟ್ ಎಂಟರ್ ಟೇನ್ಮೆಂಟ್’ ಎಂದೂ ಅದಕ್ಕೆ ಅಡಿಬರಹ ಕೊಟ್ಟಿದ್ದಾರೆ. ಆ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ಮಧ್ಯಮ ವರ್ಗದ ಕುಟುಂಬದಿಂದ ಬಂದ ಕಲಾವಿದನ ಮಕ್ಕಳು  ಇದೀಗ ಫ್ಲೈಟ್ ನಲ್ಲಿ ಮನರಂಜನೆ ಕೊಡುವಷ್ಟು ಬೆಳೆದಿದ್ದು ಹೆಮ್ಮೆ ಎಂದು ಕೆಲವರು ಈ ಫೋಟೋಗೆ ಕಾಮೆಂಟ್ ಕೂಡ ಮಾಡಿದ್ದಾರೆ. ಇದನ್ನೂ ಓದಿ : ದುನಿಯಾ ವಿಜಯ್ ನಿರ್ದೇಶನದ ಎರಡನೇ ಸಿನಿಮಾ ಅನೌನ್ಸ್

    ಮುಂಬೈ ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಳ್ಳಲು ಯಶ್ ದಂಪತಿ ಮುಂಬೈಗೆ ವಿಮಾನದಲ್ಲಿ ಪ್ರಯಾಣಿಸಿದ್ದರು. ಈ ಸಂದರ್ಭದಲ್ಲಿ ಸೆರೆ ಹಿಡಿದಿರುವ ಫೋಟೋ ಇದಾಗಿದ್ದು, ಮಕ್ಕಳ ಮನರಂಜನೆಯ ಕ್ಷಣಗಳನ್ನು ರಾಧಿಕಾ ಸೆರೆ ಹಿಡಿದು, ಅಭಿಮಾನಿಗಳಿಗಾಗಿ ಆ ಫೋಟೋ ಹಂಚಿಕೊಂಡಿದ್ದಾರೆ.

  • ನಾನು ಜ್ಯೂನಿಯರ್ ಪುನೀತ್ ರಾಜ್ ಕುಮಾರ್ ಅಲ್ಲ : ಮಾರಕಾಸ್ತ್ರ ಹೀರೋ ಹೇಳಿಕೆ

    ನಾನು ಜ್ಯೂನಿಯರ್ ಪುನೀತ್ ರಾಜ್ ಕುಮಾರ್ ಅಲ್ಲ : ಮಾರಕಾಸ್ತ್ರ ಹೀರೋ ಹೇಳಿಕೆ

    ಪುನೀತ್ ರಾಜ್ ಕುಮಾರ್ ನಿಧನಾ ನಂತರ ಅವರ ಹೆಸರಿನಲ್ಲಿ ಏನೆಲ್ಲ ಕೆಲಸಗಳು ನಡೆಯುತ್ತಿವೆ. ಸಿನಿಮಾಗಳ ಟ್ರೇಲರ್, ಟೀಸರ್, ಚಿತ್ರಗಳ ಬಿಡುಗಡೆಯಲ್ಲೂ ಪುನೀತ್ ಹೆಸರು ಮತ್ತು ಫೋಟೋ ಬಳಕೆ ಆಗುತ್ತಿದೆ. ಆದರೆ, ‘ಮಾರಕಾಸ್ತ್ರ’ ಸಿನಿಮಾದ ನಾಯಕ  ಆನಂದ್ ಆರ್ಯ ಮಾತ್ರ ಇದಕ್ಕೆ ತದ್ವಿರುದ್ಧ. ಯಾವುದೇ ಕಾರಣಕ್ಕೂ ಪುನೀತ್ ಅವರ ಹೆಸರನ್ನು ಬಳಕೆ ಮಾಡಲು ಅವರು ಇಷ್ಟಪಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ : ವಿವಾದ ಇಲ್ಲದೇ ಸಿನಿಮಾ ರಿಲೀಸ್ ಮಾಡಲ್ಲವಾ ಸಂಜಯ್ ಲೀಲಾ ಬನ್ಸಾಲಿ? : ಗಂಗೂಬಾಯಿ ಮೇಲೆ ಮತ್ತೊಂದು ಕೇಸ್

    “ನಾನು ಥೇಟ್ ಪುನೀತ್ ರಾಜ್ ಕುಮಾರ್ ರೀತಿಯಲ್ಲೇ ಕಾಣುತ್ತೇನೆ, ಹಾಗೆಯೇ ಹಾವಭಾವ ಕೂಡ ಇದೆ. ಅವರಂತೆಯೇ ಡೈಲಾಗ್ ಹೇಳುತ್ತೇನೆ ಎಂದು ಅನೇಕರು ಹೇಳಿದ್ದಾರೆ. ಆದರೆ, ನನಗೆ ಹಾಗೆ ಅನಿಸುವುದಿಲ್ಲ. ಪುನೀತ್ ಅವರನ್ನು ಆದರ್ಶವಾಗಿ ತಗೆದುಕೊಳ್ಳುತ್ತೇನೆಯೇ ವಿನಃ ಅವರ ಹೆಸರನ್ನು ಎಲ್ಲಿಯೂ ದುರ್ಬಳಕೆ ಮಾಡಿಕೊಳ್ಳಲಾರೆ” ಎಂದಿದ್ದಾರೆ.  ಇದನ್ನೂ ಓದಿ : ರಾಷ್ಟ್ರ ಪ್ರಶಸ್ತಿ ವಿಜೇತೆ ಮಲಯಾಳಂ ನಟಿ ಲಲಿತಾ ಇನ್ನಿಲ್ಲ

    ಇತ್ತೀಚೆಗಷ್ಟೇ ಆನಂದ್ ಆರ್ಯ ನಟನೆಯ ‘ಮಾರಕಾಸ್ತ್ರ’ ಸಿನಿಮಾದ ಮುಹೂರ್ತ ಸಮಾರಂಭ ನಡೆಯಿತು. ಅಲ್ಲಿಯೂ ಅನೇಕರು ನೀವು ಪುನೀತ್ ಅವರ ಹಾಗೆಯೇ ಕಾಣುತ್ತೀರಿ ಎಂದಾಗ, ನಕ್ಕು ಸುಮ್ಮನಾದರು ಆನಂದ್ ಆರ್ಯ. ಇದು ಇವರ ನಟನೆಯ ಎರಡನೇ ಸಿನಿಮಾ. ಗುರುಮೂರ್ತಿ ಸುನಾಮಿ ನಿರ್ದೇಶನದಲ್ಲಿ ಮಾರಕಾಸ್ತ್ರ ಸಿನಿಮಾ ಮೂಡಿ ಬರುತ್ತಿದ್ದು, ಮಾರ್ಚ್ ನಿಂದ ಶೂಟಿಂಗ್ ಶುರುವಾಗಲಿದೆ. ಇದನ್ನೂ ಓದಿ : ನಟ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ

    ದೇಶಪ್ರೇಮ ಮತ್ತು ಲೇಖನಿಗೆ ಅದೆಷ್ಟು ಶಕ್ತಿ ಇದೆ ಎಂದು ತೋರಿಸುವ ಪ್ರಯತ್ನವನ್ನು ಈ ಸಿನಿಮಾದಲ್ಲಿ ಮಾಡಲಿದ್ದಾರಂತೆ ನಿರ್ದೇಶಕರು. ಮಾಧುರ್ಯ ನಾಯಕಿಯಾಗಿ ನಟಿಸುತ್ತಿದ್ದರೆ, ನಟರಾಜ್ ಚಿತ್ರದ ನಿರ್ಮಾಪಕರು.

  • ಮಗಳ ಹೆಸರು ರಿವೀಲ್ ಮಾಡಿದ ಯುವರತ್ನ ನಟಿ ಸಯೇಷಾ

    ಮಗಳ ಹೆಸರು ರಿವೀಲ್ ಮಾಡಿದ ಯುವರತ್ನ ನಟಿ ಸಯೇಷಾ

    ಹೈದರಾಬಾದ್: ಯುವರತ್ನ ನಟಿ ಸಯೇಷಾ, ಆರ್ಯ ದಂಪತಿ ಇತ್ತೀಚೆಗೆ ಮಗುವನ್ನು ಬರಮಾಡಿಕೊಂಡಿದ್ದರು. ದಂಪತಿ ಮಗುವಿಗೆ ವಿಭಿನ್ನವಾಗಿರುವ ಹೆಸರು ಇಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    ಸಯೇಷಾ ಮತ್ತು ಆರ್ಯಾ ದಂಪತಿಗೆ ಮುದ್ದಾದ ಹೆಣ್ಣು ಮಗು ಜನಿಸಿ ಎರಡು ತಿಂಗಳಾಗಿದೆ. ಈಗ ಮಗುವಿಗೆ ಅರಿಯಾನಾ ಎಂದು ನಾಮಕರಣ ಮಾಡಲಾಗಿದೆ. ಈ ಬಗ್ಗೆ ಕುಟುಂಬದ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಹೆಸರು ಕೇಳಿದ ಅಭಿಮಾನಿಗಳು ಸಾಕಷ್ಟು ಖುಷಿಯಾಗಿದ್ದಾರೆ. ಅರಿಯಾನಾ ಅಂದರೆ ಅತ್ಯಂತ ಪವಿತ್ರವಾದುದು ಎನ್ನುವ ಅರ್ಥವಿದೆ. ಮಗಳ ಹೆಸರನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡು ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದ ಆರು ನಗರಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ: ಬೊಮ್ಮಾಯಿ

     

    View this post on Instagram

     

    A post shared by Shaheen (@shhaheen)

    ನನ್ನ ಮೊಮ್ಮಗಳಿಗೆ ಎರಡು ತಿಂಗಳು. ನೀವು ಅವಳ ಹೆಸರನ್ನು ತಿಳಿದಿರಬೇಕು. ಅರಿಯಾನಾ, ಇದರ ಅರ್ಥ ಶುದ್ಧ. ನಾವು ಅದನ್ನು ಇಷ್ಟಪಟ್ಟಿದ್ದೇವೆ. ಆಕೆಯ ತಂದೆ ಆರ್ಯ ಹೆಸರಿಗೆ ಹತ್ತಿರವಾಗಿರುವುದರಿಂದ ಉತ್ತಮವಾಗಿದೆ. ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದದಿಂದ ಅವಳು ಮುದ್ದಾಗಿದ್ದಾಳೆ. ಸ್ವಲ್ಪ ಸಮಯದಲ್ಲಿ ನಾವು ಅವಳ ಚಿತ್ರಗಳೊಂದಿಗೆ ಅವಳನ್ನು ನಿಮಗೆ ಪರಿಚಯಿಸುತ್ತೇವೆ. ದಯವಿಟ್ಟು ನಿಮ್ಮ ಆಶೀರ್ವಾದದಿಂದ ಅವಳನ್ನು ಆಶೀರ್ವದಿಸುವುದನ್ನು ಮುಂದುವರಿಸಿ ಎಂದು ಸಯೇಷಾ ಅವರ ತಾಯಿ ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡು ಮೊಮ್ಮಗಳ ಹೆಸರನ್ನು ರಿವೀಲ್ ಮಾಡಿ, ಸಂತೋಷವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಾನು 35 ಅಂಕದ ಕೆಟಗೆರಿಯವರು ಅದಕ್ಕೆ ಕೈಗಾರಿಕಾ ಸಚಿವನಾದೆ: ಮುರುಗೇಶ್ ನಿರಾಣಿ

    arya daughter

    2019ರಲ್ಲಿ ಆರ್ಯ ಜೊತೆ ಸಯೇಷಾ ಮದುವೆ ನಡೆಯಿತು. ಇಬ್ಬರೂ ಕೂಡ ಅವರವರ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಸಯೇಷಾ ಗರ್ಭಿಣಿ ಆಗಿರುವ ವಿಷಯವನ್ನು ಬಹಿರಂಗಪಡಿಸಿರಲಿಲ್ಲ. ಹೆಣ್ಣು ಮಗು ಜನಿಸಿರುವ ಸುದ್ದಿಯನ್ನು ಕಾಲಿವುಡ್ ನಟ, ಆರ್ಯ ಅವರ ಸ್ನೇಹಿತ ವಿಶಾಲ್ ಬ್ರೇಕ್ ಮಾಡಿದ್ದರು. ಇದನ್ನೂ ಓದಿ: 60 ತಿಂಗಳಲ್ಲಿ 59 ತಿಂಗಳು ಅಭಿವೃದ್ಧಿ, ಒಂದು ತಿಂಗಳ ಮಾತ್ರ ರಾಜಕಾರಣ ಮಾಡೋಣ: ಬೊಮ್ಮಾಯಿ

    ನಾನು ಅಂಕಲ್ ಆಗಿದ್ದೇನೆ ಎಂಬ ಈ ಖುಷಿ ಹಂಚಿಕೊಳ್ಳಲು ಬಹಳ ಖುಷಿ ಆಗುತ್ತಿದೆ. ನನ್ನ ಸಹೋದರ ಜಮ್ಮಿ ಮತ್ತು ಸಯೇಷಾ ಅವರಿಗೆ ಹೆಣ್ಣು ಮಗು ಜನಿಸಿದೆ. ಚಿತ್ರೀಕರಣದ ನಡುವೆ ಈ ಭಾವುಕ ಕ್ಷಣವನ್ನು ನಿಯಂತ್ರಿಸಲು ಆಗುತ್ತಿಲ್ಲ. ಅವರಿಗೆ ಸದಾ ಒಳ್ಳೆಯದಾಗಲಿ. ತಾಯಿ-ಮಗಳಿಗೆ ದೇವರ ಕೃಪೆ ಇರಲಿ. ಅಪ್ಪನಾಗಿ ಹೊಸ ಜವಾಬ್ದಾರಿ ನಿಭಾಯಿಸುತ್ತಿರುವ ಆರ್ಯಾಗೆ ಆಲ್ ದಿ ಬೆಸ್ಟ್ ಎಂದು ವಿಶಾಲ್ ಟ್ವೀಟ್ ಮಾಡಿದ್ದರು.

  • ಹೆಣ್ಣು ಮಗುವಿಗೆ ಜನ್ಮ ನೀಡಿದ ‘ಯುವರತ್ನ’ ನಟಿ ಸಯ್ಯೇಶಾ

    ಹೆಣ್ಣು ಮಗುವಿಗೆ ಜನ್ಮ ನೀಡಿದ ‘ಯುವರತ್ನ’ ನಟಿ ಸಯ್ಯೇಶಾ

    ಚೆನ್ನೈ: ತಮಿಳು ನಟ ಆರ್ಯ ಹಾಗೂ ‘ಯುವರತ್ನ’ ನಾಯಕಿ ಸಯ್ಯೇಶಾ ದಂಪತಿಗೆ ಹೆಣ್ಣು ಮಗು ಜನಿಸಿದೆ.

    ಹೌದು. ಸಯ್ಯೇಶಾ ಅವರು ನಿನ್ನೆ ಹೆಣ್ಣು ಮಗುವಿಗೆ ಜನ್ಮವಿತ್ತಿದ್ದು, ಈ ಕುರಿತು ನಟ ವಿಶಾಲ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ತಾಯಿ- ಮಗು ಆರೋಗ್ಯವಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ವಿಶಾಲ್ ಟ್ವೀಟ್ ಮಾಡುತ್ತಿದ್ದಂತೆಯೇ ಆರ್ಯ ಹಾಗೂ ಸಯ್ಯೇಶಾ ಅಭಿಮಾನಿಗಳಿಂದ ಶುಭಹಾರೈಕೆಯ ಸುರಿಮಳೆಯೇ ಬರತೊಡಗಿದೆ.

    2019ರ ಮಾರ್ಚ್ ನಲ್ಲಿ ಆರ್ಯ ಹಾಗೂ ಸಯ್ಯೇಶಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಹೈದರಾಬಾದ್‍ನ ತಾಜ್ ಫುಕ್ನಮ್ ಪ್ಯಾಲೇಸ್ ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆ ಸಮಾರಂಭ ನಡೆದಿತ್ತು. ಇವರ ಮದುವೆಯಲ್ಲಿ ಬಾಲಿವುಡ್ ಮತ್ತು ಕಾಲಿವುಡ್‍ನ ಖ್ಯಾತ ನಟ ನಟಿಯರು ಪಾಲ್ಗೊಂಡು ನವ ಜೋಡಿಗಳಿಗೆ ಶುಭಾಶಯ ತಿಳಿಸಿದ್ದರು.

    ಇದಕ್ಕೂ ಮುನ್ನ ಆರ್ಯ ಅವರು ಪ್ರೇಮಿಗಳ ದಿನಾಚರಣೆಯ ದಿನವೇ ತಮ್ಮ ಮದುವೆಯಾಗುವ ಹುಡುಗಿ ಹಾಗೂ ವಿವಾಹದ ಬಗ್ಗೆ ತಿಳಿಸಿದ್ದರು. 2018 ರ ‘ಘಜಿನಿಕಾಂತ್’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಸಯ್ಯೇಶಾ ಅವರು ಆರ್ಯರನ್ನು ಭೇಟಿಯಾಗಿದ್ದು, ಅಂದಿನಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಎರಡೂ ಕುಟುಂಬಗಳ ಒಪ್ಪಿಗೆ ಸೂಚಿಸಿದ್ದರು.

    ಸಯ್ಯೇಶಾ ಅವರು ನಟ-ನಿರ್ಮಾಪಕ ಸುಮೇತ್ ಸೈಗಲ್ ಮತ್ತು ನಟಿ ಶಹೀನ್ ಬಾನು ಅವರ ಮಗಳಾಗಿದ್ದು, ಶಹೀನ್ ಅವರು ‘ಮಹಾ-ಸಂಗ್ರಮ್’ ಮತ್ತು ‘ಆಯಿ ಮಿಲಾನ್ ಕಿ ರಾತ್’ ನಂತಹ ಸಿನಿಮಾದಲ್ಲಿ ಹೆಸರುವಾಸಿಯಾಗಿದ್ದಾರೆ. ಸಯ್ಯೇಶಾ ಅವರು ನಟ ಪುನೀತ್ ರಾಜ್ ಕುಮಾರ್ ನಟನೆಯ ‘ಯುವರತ್ನ’ ಸಿನಿಮಾದ ಮೂಲಕ ಸ್ಯಾಂಡಲ್‍ವುಡ್‍ನಲ್ಲಿಯೂ ನಟಿಸಿದ್ದಾರೆ. ಇದನ್ನೂ ಓದಿ: ಕೆಜಿಎಫ್ 2 ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಪಡೆಯಲಿರುವ ವಿಶೇಷ ಅಭಿಮಾನಿ

  • ನಮ್ಮಪ್ಪ ತಿನ್ನೋ ಮುಂಚೆ ಮೋದಕ ಎಲ್ಲಾ ನಾನೇ ತಿಂದ್ ಬಿಡೋಣ: ಐರಾ

    ನಮ್ಮಪ್ಪ ತಿನ್ನೋ ಮುಂಚೆ ಮೋದಕ ಎಲ್ಲಾ ನಾನೇ ತಿಂದ್ ಬಿಡೋಣ: ಐರಾ

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಟ್ವಿಟ್ಟರಿನಲ್ಲಿ ಪತ್ನಿ, ನಟಿ ರಾಧಿಕಾ ಪಂಡಿತ್ ಹಾಗೂ ಮಗಳು ಐರಾ ಫೋಟೋ ಹಾಕುವ ಮೂಲಕ ವಿಭಿನ್ನವಾಗಿ ಗಣೇಶ ಹಬ್ಬದ ಶುಭಾಶಯ ತಿಳಿಸಿದ್ದಾರೆ.

    ಯಶ್ ತಮ್ಮ ಮಗಳು ಐರಾಗೆ ಮುತ್ತು ನೀಡುತ್ತಿರುವ ಫೋಟೋವನ್ನು ಟ್ವಿಟ್ಟರಿನಲ್ಲಿ ಹಾಕಿ, “ನಮ್ಮಪ್ಪ ತಿನ್ನೋ ಮುಂಚೆ ಮೋದಕ ಎಲ್ಲಾ ನಾನೇ ತಿಂದ್ ಬಿಡೋಣ ಎಂದು ಯೋಚ್ನೆ ಮಾಡ್ತಾ ಇದ್ದೀನಿ?”. ನಿಮ್ಮ ಈ ಪುಟ್ಟ ಗೌರಿಯಿಂದ ಎಲ್ಲರಿಗೂ ಗಣೇಶ ಹಬ್ಬದ ಶುಭಾಶಯಗಳು” ಎಂದು ಟ್ವೀಟ್ ಮಾಡಿಕೊಂಡಿದ್ದಾರೆ.

    ಇತ್ತ ನಟಿ ರಾಧಿಕಾ ಪಂಡಿತ್ ಐರಾಳನ್ನು ತೊಡೆ ಮೇಲೆ ಕೂರಿಸಿಕೊಂಡಿರುವ ಫೋಟೋ ಹಾಗೂ ಐರಾಳ ಸಿಂಗಲ್ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ಎಲ್ಲರಿಗೂ ಗಣೇಶ ಹಬ್ಬದ ಶುಭಾಶಯಗಳು. ನಮ್ಮನೆಯ ಪುಟ್ಟ ಗೌರಿ ಕಡೆಯಿಂದ” ಎಂದು ಬರೆದುಕೊಂಡಿದ್ದಾರೆ.

     

    View this post on Instagram

     

    Yellarigu Ganesha Habbada Shubhashayagalu.. nam mane putta Gowri kade inda ???? @thenameisyash #radhikapandit #nimmaRP

    A post shared by Radhika Pandit (@iamradhikapandit) on

    ಈ ಹಿಂದೆ ಅಂದರೆ ವರಮಹಾಲಕ್ಷ್ಮಿ ಹಬ್ಬದಂದು ಯಶ್, ರಾಧಿಕಾ ಮಗಳ ಜೊತೆಗಿರುವ ಫೋಟೋ ಹಾಕಿ, “ನಮ್ಮ ಮನೆಯ ಪುಟ್ಟ ಲಕ್ಷ್ಮಿ ಕಡೆಯಿಂದ ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು. ಉತ್ತರ ಕರ್ನಾಟಕದ ನೆರೆ ಸಂತ್ರಸ್ತರು ಸಹಜ ಸ್ಥಿತಿಯತ್ತ ಬರಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡೋಣ” ಎಂದು ಹಬ್ಬಕ್ಕೆ ಶುಭ ಕೋರಿದ್ದರು.

    ಬಳಿಕ ಕೃಷ್ಣ ಜನ್ಮಾಷ್ಟಮಿ ಹಬ್ಬದಂದು ಕೂಡ ಯಶ್ ಹಾಗೂ ರಾಧಿಕಾ ತಮ್ಮ ಮಗಳು ಐರಾಗೆ ಕೃಷ್ಣನ ಉಡುಪು ಹಾಕಿರುವ ಫೋಟೋವನ್ನು ಹಂಚಿಕೊಂಡಿದ್ದರು. ಅಲ್ಲದೆ ಆ ಫೋಟೋ ಹಾಕಿ ಕೃಷ್ಣ ಜನ್ಮಾಷ್ಟಮಿಯ ಶುಭಾಶಯ ತಿಳಿಸಿದ್ದರು.

    ಯಶ್ ಸೇರಿದಂತೆ ಸ್ಯಾಂಡಲ್‍ವುಡ್ ನಟರಾದ ದರ್ಶನ್, ಉಪೇಂದ್ರ, ಪುನೀತ್ ರಾಜ್‍ಕುಮಾರ್ ಎಲ್ಲರೂ ಟ್ವಿಟ್ಟರಿನಲ್ಲಿ ಟ್ವೀಟ್ ಮಾಡುವ ಮೂಲಕ ತಮ್ಮ ಅಭಿಮಾನಿಗಳಿಗೆ ಗೌರಿ-ಗಣೇಶ ಹಬ್ಬದ ಶುಭಾಶಯ ತಿಳಿಸಿದ್ದಾರೆ.

  • ಮುದ್ದು ಕೃಷ್ಣ ಆದ ಐರಾ

    ಮುದ್ದು ಕೃಷ್ಣ ಆದ ಐರಾ

    ಬೆಂಗಳೂರು: ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರು ತಮ್ಮ ಮುದ್ದು ಮಗಳು ‘ಐರಾ’ಗೆ ಕೃಷ್ಣನ ಉಡುಪು ಹಾಕಿ ಫೋಟೋ ಕ್ಲಿಕ್ಕಿಸಿದ್ದಾರೆ.

    ನಟಿ ರಾಧಿಕಾ ಪಂಡಿತ್ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಕೃಷ್ಣ ಉಡುಪು ಧರಿಸಿರುವ ಐರಾಳ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಆ ಪೋಸ್ಟ್ ಗೆ, “ನಮ್ಮ ಪುಟ್ಟ ಕೃಷ್ಣ. ಜನ್ಮಾಷ್ಟಮಿಯ ಶುಭಾಶಯಗಳು” ಎಂದು ಬರೆದುಕೊಂಡಿದ್ದಾರೆ.

    ಇನ್‍ಸ್ಟಾಗ್ರಾಂನಲ್ಲಿ ರಾಧಿಕಾ ಅವರು ಒಟ್ಟು ಮೂರು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಐರಾ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದಾಳೆ. ಐರಾಳ ಈ ಫೋಟೋ ನೋಡಿ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

     

    View this post on Instagram

     

    Our Lil Krishna ???? Happy Janmashtami!! #radhikapandit #nimmaRP PC: Sooraj Nitte

    A post shared by Radhika Pandit (@iamradhikapandit) on

    ಸ್ಯಾಂಡಲ್‍ವುಡ್ ಕೃಷ್ಣ ಎಂದೇ ಖ್ಯಾತರಾಗಿರುವ ಅಜಯ್ ರಾವ್ ಅವರು ತಮ್ಮ ಮಗಳು ಚರಿಷ್ಮಾಳಿಗೆ ಕೃಷ್ಣನ ಉಡುಪು ಹಾಕಿದ್ದಾರೆ. ಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ನಟ ಅಜಯ್ ರಾವ್ ಹಾಗೂ ಅವರ ಪತ್ನಿ ಸ್ವಪ್ನ ಅವರು ತಮ್ಮ ಮಗಳು ಚರಿಷ್ಮಾಳಿಗೆ ಕೃಷ್ಣನ ಉಡುಪು ತೋಡಿಸಿ ಫೋಟೋ ಕ್ಲಿಕ್ಕಿಸಿದ್ದಾರೆ.

    ಅಜಯ್ ಹಾಗೂ ಸ್ವಪ್ನ ಅವರು ತಮ್ಮ ಚರಿಷ್ಮಾ ಕೃಷ್ಣನ ಉಡುಪಿನಲ್ಲಿ ಬೆಣ್ಣೆ ತಿನ್ನುತ್ತಿರುವ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಬಳಿಕ ತಮ್ಮ ಮಗಳ ಜೊತೆ ಅಜಯ್ ಅವರು ಕೂಡ ಕೃಷ್ಣನಂತೆ ಪೇಟ ಧರಿಸಿ ಕೊಳಲು ಹಿಡಿದುಕೊಂಡಿದ್ದಾರೆ.

     

    View this post on Instagram

     

    ಎಲ್ಲರಿಗೂ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಷಯಗಳು????

    A post shared by Krishna Ajai Rao (@krishna_ajai_rao) on