Tag: AS Patil Nadahalli

  • ರಾಜ್ಯ ಸಿಎಂ ಕುಮಾರಸ್ವಾಮಿಯವರ ಅಪ್ಪನ ಮನೆ ಆಸ್ತಿಯಲ್ಲ: ನಡಹಳ್ಳಿ

    ರಾಜ್ಯ ಸಿಎಂ ಕುಮಾರಸ್ವಾಮಿಯವರ ಅಪ್ಪನ ಮನೆ ಆಸ್ತಿಯಲ್ಲ: ನಡಹಳ್ಳಿ

    ವಿಜಯಪುರ: ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಪ್ಪನ ಮನೆಯ ಆಸ್ತಿಯಲ್ಲ, ಇದು ಕನ್ನಡಿಗರ ಆಸ್ತಿ ಎಂದು ಮುದ್ದೇಬಿಹಾಳ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ವಾಗ್ದಾಳಿ ನಡೆಸಿದ್ದಾರೆ.

    ತಾಳಿಕೋಟೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕರು, ಬೆಂಗಳೂರಿನಿಂದ ಬರುವ ಆದಾಯದಲ್ಲಿ ಶೇಕಡಾ 60ರಷ್ಟು ಉತ್ತರ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗೆ ಬಳಸಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳುತ್ತಾರೆ. ಹಾಗಾದರೆ ಬೆಂಗಳೂರು ಅವರ ಆಸ್ತಿಯೇ, ಕನ್ನಡಿಗರಿಗೆ ಸೇರಿಲ್ಲವೇ ಎಂದು ಪ್ರಶ್ನಿಸಿ, ಉತ್ತರ ಕರ್ನಾಟಕದ ಸುಮಾರು 12 ಲಕ್ಷ ಜನರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.

    ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾಜಿ ಸಿಎಂ ಧರ್ಮಸಿಂಗ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯಲು ನಾನೇ ಕಾರಣವೆಂದು ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ. ಅವರಷ್ಟೇ ಅಲ್ಲದೆ ಉತ್ತರ ಕರ್ನಾಟಕದ ಅನೇಕ ನಾಯಕರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸುವಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಕುಟುಂಬದವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಆರೋಪಿಸಿದರು.

    ಅಭಿವೃದ್ಧಿಯಾಗಬೇಕೆಂದು ಜನತೆ ಕೇಳಿದ್ದು ಕುಮಾರಸ್ವಾಮಿಯನ್ನಲ್ಲ, ನಾಡಿನ ಮುಖ್ಯಮಂತ್ರಿಯನ್ನು. ಆದರೆ ಇದಕ್ಕೆ ಸೂಕ್ತ ಉತ್ತರ ನೀಡದೆ, ಉತ್ತರ ಕರ್ನಾಟಕದ ಜನತೆ ನಮಗೆ ಮತ ಹಾಕಿಲ್ಲವೆಂದು ಅವರು ಹೇಳಿದ್ದು ಸರಿಯಲ್ಲ. ಹೀಗೆ ಮಾತನಾಡುವ ಮೂಲಕ ಪ್ರತ್ಯೇಕತೆ ಬೇಡಿಕೆಗೆ ಕುಮ್ಮಕ್ಕು ನೀಡುತ್ತಿದ್ದು, ತಮ್ಮ ಮನಸ್ಸಿನಲ್ಲಿರುವ ಕರ್ನಾಟಕ ಇಬ್ಭಾಗವಾಗಬೇಕೆಂಬ ಆಸೆಯನ್ನು ಹೊರಹಾಕಿದ್ದಾರೆ ಎಂದು ಆರೋಪಿಸಿದರು.

  • ಕಾಂಗ್ರೆಸ್‍ನಿಂದ ಉಚ್ಛಾಟಿತರಾಗಿ, ಜೆಡಿಎಸ್‍ನಲ್ಲಿ ಗುರುತಿಸಿಕೊಂಡಿದ್ದ ಶಾಸಕ ನಡಹಳ್ಳಿ ಕಮಲ ಹಿಡಿಯಲು ಪ್ಲ್ಯಾನ್!

    ಕಾಂಗ್ರೆಸ್‍ನಿಂದ ಉಚ್ಛಾಟಿತರಾಗಿ, ಜೆಡಿಎಸ್‍ನಲ್ಲಿ ಗುರುತಿಸಿಕೊಂಡಿದ್ದ ಶಾಸಕ ನಡಹಳ್ಳಿ ಕಮಲ ಹಿಡಿಯಲು ಪ್ಲ್ಯಾನ್!

    ವಿಜಯಪುರ: ಕಾಂಗ್ರೆಸ್ ಉಚ್ಛಾಟಿತರಾಗಿ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಜಿಲ್ಲೆಯಾದ್ಯಂತ ಕೇಳಿ ಬರುತ್ತಿವೆ ಶಾಸಕ ನಡಹಳ್ಳಿ ಅವರು ಬಿಜೆಪಿ ಸೇರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಅಂತಾ ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ವಿಠ್ಠಲ್ ಕಟಕದೊಂಡ ಹೇಳಿದ್ದಾರೆ.

    ಬಿಜೆಪಿ ಜಿಲ್ಲಾಧ್ಯಕ್ಷ ವಿಠ್ಠಲ್ ಕಟಕದೊಂಡ

    ನೇರವಾಗಿ ನನಗೆ ಹೇಳದಿದ್ದರೂ, ನಮ್ಮ ಪಕ್ಷದ ಹಿರಿಯ ಮುಖಂಡರೊಂದಿಗೆ ನಡಹಳ್ಳಿ ಅವರು ಚರ್ಚಿಸಿರುವ ಮಾಹಿತಿ ನನಗೆ ಬಂದಿದೆ. ಇದೇ ರೀತಿಯಾಗಿ ಇನ್ನೂ ಹಲವು ಕಾಂಗ್ರೆಸ್ ಶಾಸಕರು ಮತ್ತು ಮುಖಂಡರು ಬಿಜೆಪಿ ಸೇರಲಿದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್ ಗೆ ಭವಿಷ್ಯವಿಲ್ಲ ಎಂದು ಅರಿತು ಬಿಜೆಪಿಗೆ ಸೇರಲು ನಡಹಳ್ಳಿ ಬಯಸಿದ್ದಾರೆಂದು ಅಂತಾ ವಿಠ್ಠಲ್ ಕಟಕದೊಂಡ ತಿಳಿಸಿದ್ದಾರೆ.

    ಬಿಜೆಪಿ ಸೇರ್ಪಡೆಯ ಬಗ್ಗೆ ಯಾವುದೇ ಗುಟ್ಟು ಬಿಟ್ಟು ಕೊಡದ ಶಾಸಕ ನಡಹಳ್ಳಿ ಅವರು ಮುಂದೆ ಏನಾಗುತ್ತೆ ಎಂಬುದನ್ನು ಕಾದು ನೋಡಿ ಅಂತಾ ಹೇಳಿದ್ದಾರೆ. ನಡಹಳ್ಳಿ ಅವರು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದಿಂದ ಚುನಾವಣೆಗೆ ಸ್ಫರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದ್ದು, ಇದೇ ತಿಂಗಳು 23ರಂದು ನಡಹಳ್ಳಿ ಬಿಜೆಪಿ ಸೇರ್ಪಡೆಯ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ತಿಳಿದು ಬಂದಿದೆ.

  • ಎಂ.ಬಿ.ಪಾಟೀಲ್, ವಿನಯ್ ಕುಲಕರ್ಣಿ ಖಾದಿ ಬಿಟ್ಟು ಖಾವಿ ತೊಡಲಿ: ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ

    ಎಂ.ಬಿ.ಪಾಟೀಲ್, ವಿನಯ್ ಕುಲಕರ್ಣಿ ಖಾದಿ ಬಿಟ್ಟು ಖಾವಿ ತೊಡಲಿ: ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ

    -ಜಯಮೃತ್ಯುಂಜಯ ಸ್ವಾಮೀಜಿ ಬಹಿರಂಗ ಕ್ಷಮೆಯಾಚಿಸಬೇಕು

    ರಾಯಚೂರು: ಸಚಿವರಾದ ಎಂ.ಬಿ.ಪಾಟೀಲ್, ವಿನಯ ಕುಲಕರ್ಣಿ ಖಾದಿ ಬಿಟ್ಟು ಖಾವಿ ತೊಟ್ಟು ಲಿಂಗಾಯತ ಧರ್ಮ ಸ್ಥಾಪಿಸಲು ಮುಂದಾಗಲಿ ಅಂತ ಕಾಂಗ್ರೆಸ್ ಉಚ್ಚಾಟಿತ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ರಾಯಚೂರಿನಲ್ಲಿ ಹೇಳಿದ್ದಾರೆ.

    ರಾಯಚೂರಿನಿಂದ ಬೆಳಗಾವಿವರೆಗೆ ಜೆಡಿಎಸ್ ವತಿಯಿಂದ ಹೈದ್ರಾಬಾದ್ ಕರ್ನಾಟಕ ಸಮಗ್ರ ಅಭಿವೃದ್ದಿಗಾಗಿ ಸ್ವಾಭಿಮಾನಿ ಕನ್ನಡಿಗರ ಬೃಹತ್ ಜಾಥ ಹಮ್ಮಿಕೊಂಡಿರುವ ನಡಹಳ್ಳಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. ಜಯಮೃತ್ಯುಂಜಯ ಸ್ವಾಮೀಜಿ ವೀರಶೈವರ ಬಗೆಗೆ ಕೀಳು ಮಟ್ಟದಲ್ಲಿ ಮಾತನಾಡಿದ್ದು, ಹೇಳಿಕೆಯನ್ನ ಖಂಡಿಸುವುದಾಗಿ ಹೇಳಿದ ನಡಹಳ್ಳಿ, ಸ್ವಾಮೀಜಿಗಳು ಬಹಿರಂಗ ಕ್ಷಮೆಯಾಚಿಸಬೇಕು ಅಂತ ಆಗ್ರಹಿಸಿದ್ದಾರೆ.

    70 ವರ್ಷದ ಆಡಳಿತದಲ್ಲಿ ನೆನಪಾಗದ ಲಿಂಗಾಯತ ಧರ್ಮ ಈಗ ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ ಗೆ ನೆನಪಾಗಿದೆ. ಚುನಾವಣೆ ಹಿನ್ನೆಲೆ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ತಾಕತ್ತಿದ್ದರೆ ಕ್ಯಾಬಿನೆಟ್‍ನಲ್ಲಿ ನಿರ್ಧಾರ ತೆಗೆದುಕೊಳ್ಳಲಿ ಅಂತ ಸವಾಲೆಸೆದರು. ಇನ್ನೂ ಬೆಳಗಾವಿ ಅಧಿವೇಶನ 30 ದಿನ ಕಾಲ ನಡೆಯಬೇಕು ಟೂರಿಂಗ್ ಟಾಕೀಸ್ ಆಗಬಾರದು. ಈ ಅಧಿವೇಶನದಲ್ಲಿ ಕೇವಲ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತಾಗಿ ಚರ್ಚೆ ನಡೆಯಬೇಕು ಅಂತ ಎಸ್.ಪಾಟೀಲ್ ನಡಹಳ್ಳಿ ಆಗ್ರಹಿಸಿದ್ದಾರೆ.