Tag: Asaduddin Owaisi

  • ಭಾರತ vs ಪಾಕ್ | 26 ಜೀವಗಳಿಗಿಂತ ಹಣಕ್ಕೆ ಅಷ್ಟೊಂದು ಮಹತ್ವವೇ? – ಅಸಾದುದ್ದೀನ್ ಓವೈಸಿ ಕಿಡಿ

    ಭಾರತ vs ಪಾಕ್ | 26 ಜೀವಗಳಿಗಿಂತ ಹಣಕ್ಕೆ ಅಷ್ಟೊಂದು ಮಹತ್ವವೇ? – ಅಸಾದುದ್ದೀನ್ ಓವೈಸಿ ಕಿಡಿ

    ನವದೆಹಲಿ: ಭಾರತ ಮತ್ತು ಪಾಕ್  (India vs Pak) ನಡುವೆ ಇಂದು ನಡೆಯಲಿರುವ ಏಷ್ಯಾ ಕಪ್ (Asia Cup‌) ಕ್ರಿಕೆಟ್ ಪಂದ್ಯಕ್ಕೆ ಅವಕಾಶ ನೀಡಿದ್ದಕ್ಕೆ AIMIM ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಕೇಂದ್ರ ಸರ್ಕಾರ ಭಾರತಕ್ಕೆ ಪಾಕಿಸ್ತಾನದೊಂದಿಗೆ ಏಷ್ಯಾ ಕಪ್ ಕ್ರಿಕೆಟ್ ಪಂದ್ಯ ಆಡಲು ಅವಕಾಶ ನೀಡಿದೆ. 26 ಜನರ ಜೀವಗಳಿಗಿಂತ ಆರ್ಥಿಕ ಲಾಭವೇ ಮುಖ್ಯವೇ? ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಉಗ್ರರು ಪಹಲ್ಗಾಮ್‌ನಲ್ಲಿ ನಮ್ಮ 26 ನಾಗರಿಕರರನ್ನು ಗುಂಡು ಹಾರಿಸಿ ಕೊಂದಿದ್ದರು. ಇದಕ್ಕಾಗಿ ಪಾಕಿಸ್ತಾನದ ವಿರುದ್ಧ ಕ್ರಿಕೆಟ್ ಪಂದ್ಯ ಆಡಲು ನಿರಾಕರಿಸುವ ಅಧಿಕಾರ ನಿಮಗೆ ಇಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್‌ ಕದನಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ – ಗಿಲ್‌ಗೆ ಗಾಯ

    ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ 26 ನಾಗರಿಕರ ಜೀವಕ್ಕಿಂತ ಈ ಪಂದ್ಯದ ಮೂಲಕ ಗಳಿಸುವ ಹಣ ಹೆಚ್ಚು ಮೌಲ್ಯಯುತವೇ? ಬಿಸಿಸಿಐ ಒಂದು ಕ್ರಿಕೆಟ್ ಪಂದ್ಯದಿಂದ ಎಷ್ಟು ಹಣ ಪಡೆಯುತ್ತದೆ? 2000 – 3000 ಕೋಟಿ ರೂ.? ನಮ್ಮ 26 ನಾಗರಿಕರ ಜೀವಕ್ಕಿಂತ ಇದು ಮುಖ್ಯವೇ? ನಾವು ಆ 26 ನಾಗರಿಕರ ಪರ ಅಂದು ನಿಂತಿದ್ದೆವು, ಇಂದು ನಾವು ಅವರೊಂದಿಗೆ ನಿಲ್ಲುತ್ತೇವೆ. ನಾಳೆಯೂ ಅವರೊಂದಿಗೆ ನಿಲ್ಲುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಇಂದು ನಿಗದಿಯಾಗಿರುವ ಕ್ರಿಕೆಟ್ ಪಂದ್ಯವನ್ನು ಬಹಿಷ್ಕರಿಸುವಂತೆ ಅನೇಕ ವಿರೋಧ ಪಕ್ಷದ ನಾಯಕರು ಕರೆ ನೀಡಿದ್ದಾರೆ. ಕಾಂಗ್ರೆಸ್ ನಾಯಕ ಅಭಿಷೇಕ್ ದತ್ ಭಾರತ ಆಟದಲ್ಲಿ ಭಾಗವಹಿಸುವುದನ್ನು ಟೀಕಿಸಿದ್ದಾರೆ. ಪಂದ್ಯವನ್ನು ರದ್ದುಗೊಳಿಸಬೇಕು. ಈ ಪಂದ್ಯದಲ್ಲಿ ಆಡುವ ನಿರ್ಧಾರವು ʻಭಯೋತ್ಪಾದನೆಯೊಂದಿಗೆ ಮಾತುಕತೆ ಇಲ್ಲʼ ಎಂಬ ಸರ್ಕಾರದ ನಿಲುವಿಗೆ ವಿರುದ್ಧವಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಬಿಜೆಪಿ ಹೇಳೋದೇನು?
    ಭಾರತ vs ಪಾಕಿಸ್ತಾನ ಕ್ರಿಕೆಟ್ ಪಂದ್ಯವನ್ನು ವಿರೋಧಿಸುವುದು ನ್ಯಾಯಸಮ್ಮತವಲ್ಲ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಕಾಂಗ್ರೆಸ್ ಆಳ್ವಿಕೆಯಲ್ಲೂ ಪಂದ್ಯಗಳನ್ನು ಆಡಲಾಗುತ್ತಿತ್ತು. ನಾವು ಪಾಕಿಸ್ತಾನದ ವಿರುದ್ಧ ಹೋರಾಡಬೇಕು. ನಮ್ಮ ನೆಲದಲ್ಲಿ ನಾವು ಅವರೊಂದಿಗೆ ಹೋರಾಡಿ ಸೋಲಿಸಿದ್ದೇವೆ. ಪಾಕಿಸ್ತಾನದ ನೆಲದಲ್ಲಿಯೂ ಅವರನ್ನು ಸೋಲಿಸಿದ್ದೇವೆ. ವಿದೇಶಿ ನೆಲದಲ್ಲಿಯೂ ಅವರನ್ನು ಸೋಲಿಸುತ್ತೇವೆ. ನಾವು ಪಂದ್ಯದಿಂದ ಹಿಂದೆ ಸರಿಯಬಾರದು ಎಂದು ಬಿಜೆಪಿ ನಾಯಕ ದಿಲೀಪ್ ಘೋಷ್ ಹೇಳಿದ್ದಾರೆ.

    ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಪಂದ್ಯ ಮತ್ತು ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಎರಡೂ ವಿಚಾರ ಬೇರೆ ಬೇರೆ ಎಂದಿದ್ದಾರೆ. ಇದನ್ನೂ ಓದಿ: ಭಾರತ, ಪಾಕ್ ಕ್ರಿಕೆಟ್ ಕದನ | ಉಗ್ರ ಪೋಷಕ ಪಾಕಿಸ್ತಾನದ ಜೊತೆ ಕ್ರಿಕೆಟ್ ಬೇಕಾ? – ಜನರ ಆಕ್ರೋಶ

  • ವಕ್ಫ್ ತಿದ್ದುಪಡಿ ಮಸೂದೆ ಮೂಲಕ ಸರ್ಕಾರ ಮುಸ್ಲಿಮರ ಆಸ್ತಿ ಕಬಳಿಕೆ ಮಾಡುವ ಹುನ್ನಾರ: ಓವೈಸಿ ಆಕ್ರೋಶ

    ವಕ್ಫ್ ತಿದ್ದುಪಡಿ ಮಸೂದೆ ಮೂಲಕ ಸರ್ಕಾರ ಮುಸ್ಲಿಮರ ಆಸ್ತಿ ಕಬಳಿಕೆ ಮಾಡುವ ಹುನ್ನಾರ: ಓವೈಸಿ ಆಕ್ರೋಶ

    ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ (Waqf Amendment Bill) ಮೂಲಕ ಸರ್ಕಾರ ಮುಸ್ಲಿಮರ ಆಸ್ತಿ ಕಬಳಿಕೆ ಮಾಡುವ ಹುನ್ನಾರ ಮಾಡಿದೆ, ತಿದ್ದುಪಡಿ ಕಾಯ್ದೆಯಲ್ಲಿ ಮುಸ್ಲಿಮರಿಂದ ಸ್ಮಶಾನಗಳು, ಮಸೀದಿಗಳು ಮತ್ತು ದರ್ಗಾಗಳನ್ನು ಕಸಿದುಕೊಳ್ಳುವ ನಿಬಂಧನೆಗಳನ್ನು ಹೊಂದಿದೆ ಎಂದು ಎಐಎಮ್‌ಐಎಮ್ (AIMIM) ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಆರೋಪಿಸಿದ್ದಾರೆ.

    ಮಸೂದೆ ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಈ ಮಸೂದೆ ವಕ್ಫ್ ಆಸ್ತಿಯನ್ನು ಉಳಿಸುವುದಕ್ಕಾಗಿ ಅಲ್ಲ, ಅತಿಕ್ರಮಣಕಾರರನ್ನು ತೆಗೆದುಹಾಕುವುದಕ್ಕಾಗಿ ಅಲ್ಲ, ಈ ಮಸೂದೆ ವಕ್ಫ್ ಆಸ್ತಿಯನ್ನು ಕೊನೆಗೊಳಿಸುವುದಕ್ಕಾಗಿ. ಮುಸ್ಲಿಮರಿಂದ ಸ್ಮಶಾನಗಳು, ಖಾಂಕಾ, ದರ್ಗಾಗಳನ್ನು ಕಸಿದುಕೊಳ್ಳುವುದಕ್ಕಾಗಿ. ಅವರ ಉದ್ದೇಶಗಳು ಕೆಟ್ಟವು ಮತ್ತು ಅವರು ದೇಶದಲ್ಲಿ ದೂರವನ್ನು ಹೆಚ್ಚಿಸಲು ಬಯಸುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ‘ಅಪ್ಪು’ ಸಿನಿಮಾ ನೋಡೋಕೆ ನನಗೆ ಧೈರ್ಯ ಇಲ್ಲ: ಶಿವಣ್ಣ

    ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ಕಾಯ್ದೆಯನ್ನು ಬೆಂಬಲಿಸಿದರೆ ಸಾರ್ವಜನಿಕರು ಅವರನ್ನು ಜೀವನಪರ್ಯಂತ ನೆನಪಿಸಿಕೊಳ್ಳುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ನ್ಯಾಯಬೆಲೆ ಅಂಗಡಿಗಳಲ್ಲಿ ನೋ ಸ್ಟಾಕ್ ಬೋರ್ಡ್; ಸರಬರಾಜು ಸಮಸ್ಯೆ ಆಗಿದೆ, ಅಕ್ಕಿ ಕೊರತೆ ಇಲ್ಲ: ಮುನಿಯಪ್ಪ

    ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತದಲ್ಲಿ ಸರ್ಕಾರ ವಕ್ಫ್ ಮಸೂದೆಯನ್ನು ಪರಿಚಯಿಸುವ ನಿರೀಕ್ಷೆಯಿದೆ. ಬಿಜೆಪಿ ಸಂಸದೆ ಜಗದಾಂಬಿಕಾ ಪಾಲ್ ನೇತೃತ್ವದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ತಿದ್ದುಪಡಿ ಮಾಡಲು ರಚಿಸಲಾದ ಜಂಟಿ ಸಂಸದೀಯ ಸಮಿತಿಯಲ್ಲಿ ಓವೈಸಿ ಸದಸ್ಯರೂ ಆಗಿದ್ದರು. ಈ ಮಸೂದೆಯನ್ನು ವಾಪಸ್ ಪಡೆಯಲು ವ್ಯಾಪಕ ಒತ್ತಡ ಕೇಳಿ ಬರುತ್ತಿದೆ. ಇದನ್ನೂ ಓದಿ: ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರೋ ಬೋಧಕ ಹುದ್ದೆ ಹಂತ ಹಂತವಾಗಿ ಭರ್ತಿ: ಡಾ.ಸುಧಾಕರ್

  • ಹೆಚ್ಚು ಮಕ್ಕಳಾದರೆ ಹಣ ಕೊಡ್ತೀರಾ? – ಅಸಾದುದ್ದೀನ್ ಒವೈಸಿ ಪ್ರಶ್ನೆ

    ಹೆಚ್ಚು ಮಕ್ಕಳಾದರೆ ಹಣ ಕೊಡ್ತೀರಾ? – ಅಸಾದುದ್ದೀನ್ ಒವೈಸಿ ಪ್ರಶ್ನೆ

    ನವದೆಹಲಿ: ಹೆಚ್ಚು ಮಕ್ಕಳಾದರೆ ಹಣ ಕೊಡುತ್ತೀರಾ ಎಂದು ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi) ರಾಷ್ಟ್ರೀಯ ಸ್ವಯಂಸೇವ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಅವರಿಗೆ ಪ್ರಶ್ನೆ ಮಾಡಿದ್ದಾರೆ.

    ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೆಚ್ಚು ಮಕ್ಕಳಿಗೆ ಜನ್ಮ ನೀಡಿದ ಜನರಿಗೆ ಅವರು ಏನು ನೀಡುತ್ತಾರೆ? ಅವರು ಹೆಚ್ಚು ಮಕ್ಕಳಿಗೆ ಜನ್ಮ ನೀಡಿದವರ ಬ್ಯಾಂಕ್ ಖಾತೆಗೆ ಅವರು 1,500 ರೂ. ನೀಡುತ್ತೀರಾ ಎಂದು ಕೇಳಿದ್ದಾರೆ.


    ಮೋಹನ್ ಭಾಗವತ್ ಅವರು ತಮ್ಮ ಆಪ್ತರನ್ನು ಸಿಎಂ ಮಾಡಲು ಪ್ರಯತ್ನಿಸುತ್ತಿದ್ದಾರೆ, ಇದಕ್ಕಾಗಿ ಅವರು ಯೋಜನೆಯೊಂದನ್ನು ಪರಿಚಯಿಸಬಹುದು ಎಂದು ಹೇಳಿದರು. ಇದನ್ನೂ ಓದಿ: ಸಮುದಾಯ ಉಳಿಯಬೇಕಾದ್ರೆ ಕನಿಷ್ಠ 3 ಮಕ್ಕಳನ್ನಾದರೂ ಪಡೆಯಬೇಕು: RSS ಮುಖ್ಯಸ್ಥ ಮೋಹನ್‌ ಭಾಗವತ್‌

    ಜನಸಂಖ್ಯೆ ಫಲವತ್ತತೆ ದರ 2.1ಕ್ಕಿಂತ ಕಡಿಮೆಯಾದರೆ ಸಮಾಜ ನಾಶವಾಗುತ್ತದೆ. ಹೀಗಾಗಿ ಪ್ರತಿ ದಂಪತಿ ಮೂವರು ಮಕ್ಕಳನ್ನು ಹೆರಬೇಕು ಎಂದಿದ್ದ ಮೋಹನ್ ಭಾಗವತ್ ಕರೆ ನೀಡಿದ್ದರು.

    ಜನಸಂಖ್ಯಾ ಅಧ್ಯಯನಗಳ ಪ್ರಕಾರ, ಒಂದು ಸಮುದಾಯದ ಜನಸಂಖ್ಯೆಯು 2.1 ರ ಫಲವಂತಿಕೆ ದರಕ್ಕಿಂತ ಕಡಿಮೆಯಾದಾಗ, ಆ ಸಮಾಜವು ಅಳಿವಿನಂಚಿಗೆ ಸೇರುತ್ತದೆ. ಆ ಸಮುದಾಯ ತಂತಾನೆ ಕಣ್ಮರೆಯಾಗುತ್ತದೆ. ಇದರಿಂದ ಅನೇಕ ಭಾಷೆಗಳು ಮತ್ತು ಸಮಾಜಗಳು ಅಸ್ತಿತ್ವ ಕಳೆದುಕೊಂಡಿವೆ. ಆದ್ದರಿಂದ, ನಮ್ಮ ಜನಸಂಖ್ಯೆಯು 2.1 ಕ್ಕಿಂತ ಕಡಿಮೆಯಾಗಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

     

  • ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳು- ನಾನು ಯಾವುದಕ್ಕೂ ಹೆದರಲ್ಲ ಎಂದ ಓವೈಸಿ

    ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳು- ನಾನು ಯಾವುದಕ್ಕೂ ಹೆದರಲ್ಲ ಎಂದ ಓವೈಸಿ

    ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿರುವ ತಮ್ಮ ನಿವಾಸದ ಮೇಲೆ ಕಿಡಿಗೇಡಿಗಳು ಮಸಿ ಎರಚಿದ್ದಾರೆ ಎಂದು ಲೋಕಸಭೆ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಹೇಳಿದ್ದಾರೆ.

    ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಗುರುವಾರ ಕೆಲವು ಕೆಲ ದುಷ್ಕರ್ಮಿಗಳು ನನ್ನ ಮನೆ ಮೇಲೆ ಮಸಿ ಎರಚಿದ್ದಾರೆ. ದೆಹಲಿಯಲ್ಲಿರುವ ನನ್ನ ಮನೆಯನ್ನು ಆಗಾಗ ಟಾರ್ಗೆಟ್‌ ಮಾಡಲಾಗುತ್ತಿದೆ. ಈ ಬಗ್ಗೆ ದೆಹಲಿ ಪೊಲೀಸ್‌ ಅಧಿಕಾರಿಗಳನ್ನು ಕೇಳಿದರೆ ಅವರು ಅಸಹಾಯಕತೆ ವ್ಯಕ್ತಪಡಿಸುತ್ತಾರೆ ಎಂದರು.

     

     

    ಎಕ್ಸ್ ಪೋಸ್ಟ್‌ಗೆ ಗೃಹ ಸಚಿವ ಅಮಿತ್ ಶಾ (Amitshah) ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Om Birla) ಅವರನ್ನು ಓವೈಸಿ ಟ್ಯಾಗ್ ಮಾಡಿದ್ದಾರೆ. ಗೃಹ ಸಚಿವರ ಮೇಲ್ವಿಚಾರಣೆಯಲ್ಲಿ ಇದೆಲ್ಲ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ. ಓಂ ಬಿರ್ಲಾ ಅವರನ್ನು ಟ್ಯಾಗ್ ಮಾಡಿ, ಸಂಸದರ ಸುರಕ್ಷತೆಯ ಭರವಸೆ ಇದೆಯೇ ಅಥವಾ ಇಲ್ಲವೇ ಎಂಬುದನ್ನು ದಯವಿಟ್ಟು ನಮಗೆ ತಿಳಿಸಿ ಎಂದಿದ್ದಾರೆ. ಇದನ್ನೂ ಓದಿ: ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿಗೆ ಗಾಯ

    ನಾನು ಹೆದರಲ್ಲ: ನನ್ನ ಮನೆಯನ್ನು ಗುರಿಯಾಗಿಸುವ ಸಣ್ಣ-ಪುಟ್ಟ ಗೂಂಡಾಗಳಿಗೆ ನಾನು ಹೆದರುವುದಿಲ್ಲ ಎಂದು ಹೇಳಿದ ಓವೈಸಿ, ಸಾವರ್ಕರ್ ಮಾದರಿಯ ಈ ಹೇಡಿತನದ ಕೃತ್ಯವನ್ನು ನಿಲ್ಲಿಸಿ. ಮಸಿ ಎರಚಿದ ನಂತರ ಅಥವಾ ಕಲ್ಲು ತೂರಾಟ ಮಾಡಿದ ನಂತರ ಓಡಿಹೋಗಬೇಡಿ. ನನ್ನನ್ನು ಎದುರಿಸಲು ಧೈರ್ಯ ಮಾಡಿ. ನಾನು ಯಾವುದಕ್ಕೂ ಹೆದರಲ್ಲ ಎಂದು ಸಂಸದರು ಹೇಳಿದ್ದಾರೆ.

    ಕೆಲ ದಿನಗಳ ಹಿಂದೆ ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ್ದು ರಾಜಕೀಯ ಕೋಲಾಹಲ ಸೃಷ್ಟಿಸಿತ್ತು. ಹಲವು ಬಿಜೆಪಿ ನಾಯಕರು ಓವೈಸಿ ವಿರುದ್ಧ ಕಿಡಿಕಾರಿದ್ದರು.

    ದೆಹಲಿಯ ಅಶೋಕ ರಸ್ತೆಯ ಬಳಿ ಇರುವ ಓವೈಸಿ ಮನೆ ಮೇಲೆ ಈ ಹಿಂದೆಯೂ ಹಲವು ಬಾರಿ ದಾಳಿ ನಡೆದಿದೆ. ಕಳೆದ ವರ್ಷವೂ ಆಗಸ್ಟ್ ತಿಂಗಳಿನಲ್ಲಿ ಅವರ ನಿವಾಸದ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದರು. 2022 ರಲ್ಲಿ ಉತ್ತರ ಪ್ರದೇಶದಲ್ಲಿ ಅವರ ಬೆಂಗಾವಲು ಪಡೆ ಮೇಲೆ ಗುಂಡು ಹಾರಿಸಲಾಗಿತ್ತು.

  • ಲೋಕಸಭೆಯಲ್ಲಿ ಜೈ ಪ್ಯಾಲೆಸ್ತೀನ್ ಎಂದು ಘೋಷಣೆ ಕೂಗಿದ ಓವೈಸಿ

    ಲೋಕಸಭೆಯಲ್ಲಿ ಜೈ ಪ್ಯಾಲೆಸ್ತೀನ್ ಎಂದು ಘೋಷಣೆ ಕೂಗಿದ ಓವೈಸಿ

    ನವದೆಹಲಿ: ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ‘ಜೈ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿ ಹೊಸ ವಿವಾದ ಸೃಷ್ಟಿಸಿದ್ದಾರೆ.

    ಪ್ರಮಾಣ ವಚನದ ಕೊನೆಯಲ್ಲಿ “ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್ “ಎಂದು ಹೇಳಿದ್ದು ಈಗ ಬಹಳ ಚರ್ಚೆಗೆ ಗ್ರಾಸವಾಗಿದೆ.

    ಓವೈಸಿ ಹೇಳಿಕೆಗೆ ಕೂಡಲೇ ಆಡಳಿತ ಪಕ್ಷದ ಸದಸ್ಯರು ವಿರೋಧ ವ್ಯಕ್ತಪಡಿಸಿ  ಆ ಪದವನ್ನು ಕಡತದಿಂದ ತೆಗೆದು ಹಾಕುವಂತೆ ಆಗ್ರಹಿಸಿದರು. ಈ ಮನವಿಯನ್ನು ಪುರಸ್ಕರಿಸಿದ ಸ್ಪೀಕರ್‌  ಓವೈಸಿ ಹೇಳಿದ ಪದಗಳನ್ನು  ಕಡತದಿಂದ ತೆಗೆದು ಹಾಕುವಂತೆ ನಿರ್ದೇಶಿಸಿದರು.

  • ಬುರ್ಖಾಧಾರಿ ಮಹಿಳಾ ಮತದಾರರ ವಿಶೇಷ ತಪಾಸಣೆಗೆ ಒತ್ತಾಯ – ಬಿಜೆಪಿ ಮನವಿಗೆ ಓವೈಸಿ ಕೆಂಡಾಮಂಡಲ

    ಬುರ್ಖಾಧಾರಿ ಮಹಿಳಾ ಮತದಾರರ ವಿಶೇಷ ತಪಾಸಣೆಗೆ ಒತ್ತಾಯ – ಬಿಜೆಪಿ ಮನವಿಗೆ ಓವೈಸಿ ಕೆಂಡಾಮಂಡಲ

    ಹೈದರಾಬಾದ್‌: ಬಿಜೆಪಿಯು ಮುಸ್ಲಿಂ ಮಹಿಳೆಯರನ್ನ ಗುರಿಯಾಗಿಸಿಕೊಂಡು ಮತದಾನ ಪ್ರಕ್ರಿಯೆಯಲ್ಲಿ ಅಡೆತಡೆ ಸೃಷ್ಟಿಸುತ್ತಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi) ಕಿಡಿ ಕಾರಿದ್ದಾರೆ.

    ಬುಧವಾರ ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ಮುಸ್ಲಿಂ ಮಹಿಳೆಯರನ್ನ (Muslim Womens) ಗುರಿಯಾಗಿಸಿಕೊಂಡು ಮತದಾನ ಪ್ರಕ್ರಿಯೆಯಲ್ಲಿ ಅಡೆತಡೆ ಸೃಷ್ಟಿಸುತ್ತಿದೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಾಂಬೋಡಿಯಾದಲ್ಲಿ ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ

    ಬುರ್ಖಾ (Burqas) ಧರಿಸಿರುವ ಮಹಿಳೆಯರನ್ನು ವಿಶೇಷ ತಪಾಸಣೆಗೆ ಒಳಪಡಿಸಬೇಕು ಎಂದು ಬಿಜೆಪಿಯ ದೆಹಲಿ ಘಟಕ ಚುನಾವಣಾ ಆಯೋಗಕ್ಕೆ ತಿಳಿಸಿದೆ. ಇತ್ತೀಚೆಗೆ ತೆಲಂಗಾಣದ ಅಭ್ಯರ್ಥಿ ಕೂಡ ಮತದಾನದ ವೇಳೆ ಮುಸ್ಲಿಂ ಮಹಿಳೆರನ್ನ ಸಾರ್ವಜನಿಕವಾಗಿ ನಿಂದಿಸಿ ಕಿರುಕುಳ ನೀಡಿದ್ದರು. ಅಷ್ಟೇ ಅಲ್ಲ ಪ್ರತಿ ಚುನಾವಣೆಯಲ್ಲೂ ಬಿಜೆಪಿ ಮುಸ್ಲಿಂ ಮಹಿಳೆರಿಗೆ ಕಿರುಕುಳ ನೀಡಲು ಒಂದೊಂದೇ ದಾರಿಯನ್ನು ಕಂಡುಕೊಳ್ಳುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಚುನಾವಣಾ ಆಯೋಗ ಪರಿಶೀಲನೆಯ ನಂತರವೇ ಮತದಾನಕ್ಕೆ ಅವಕಾಶ ಮಾಡಿಕೊಡಲಿದೆ. ಪರಿಶೀಲನೆ ಮಾಡದೇ ಮತದಾನ ಯಾರೂ ಮಾಡುವುದಿಲ್ಲ. ಅದಕ್ಕಾಗಿಯೇ ಚುನಾವಣಾ ಆಯೋಗ ಸ್ಪಷ್ಟ ನಿಬಂಧನೆಗಳನ್ನು ಹೊಂದಿದೆ. ಆದ್ರೆ, ಬಿಜೆಪಿ ವಿಶೇಷ ಬೇಡಿಕೆಯೊಂದಿಗೆ‌ ಮುಸ್ಲಿಂ ಮಹಿಳೆಯರಿಗೆ ಕಿರುಕುಳ ನೀಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ರಾಹುಲ್‌ ಗಾಂಧಿಗೆ ಕಸದ ಬುಟ್ಟಿಯ ಬಗ್ಗೆ ಸಾಕಷ್ಟು ಅನುಭವವಿದೆ: ಆಚಾರ್ಯ ಪ್ರಮೋದ್‌ ಕೃಷ್ಣಂ ಮತ್ತೆ ವಾಗ್ದಾಳಿ

    ಮೇ 25ರಂದು 6ನೇ ಹಂತದ ಮತದಾನ:
    ಮೇ 25ರಂದು 6ನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಒಟ್ಟು 6 ರಾಜ್ಯ ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬುಧವಾರ ಮತದಾನ ನಡೆಯುವ ಮೇಳೆ ಬುರ್ಖಾ ಧರಿಸಿ ಬರುವ ಮಹಿಳಾ ಮತದಾರರನ್ನ ವಿಶೇಷ ತಪಾಸಣೆಗೆ ಒಳಪಡಿಸಬೇಕು ಎಂದು ದೆಹಲಿ ಬಿಜೆಪಿ ನಿಯೋಗವು ಮುಖ್ಯ ಚುನಾವಣಾ ಅಧಿಕಾರಿ (ಸಿಇಒ)ಗಳಿಗೆ ಒತ್ತಾಯಿಸಿತ್ತು.

    ಇತ್ತೀಚೆಗೆ ಹೈದ್ರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮತಗಟ್ಟೆಯಲ್ಲಿ ಮುಸ್ಲಿಂ ಮಹಿಳೆಯರ ಮತದಾರರ ಗುರುತಿನ ಚೀಟಿಗಳನ್ನು ಖುದ್ದು ಪರಿಶೀಲಿಸಿದ್ದರು. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಿದ ಬಳಿಕ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: 2047 ರವರೆಗೆ 24×7 ಕೆಲಸ ಮಾಡಬೇಕೆಂದು ದೇವರು ನನಗೆ ಆದೇಶಿಸಿದ್ದಾನೆ ಎಂದು ನಂಬಿದ್ದೇನೆ: ಮೋದಿ 

  • ಸೋಮವಾರ 4ನೇ ಹಂತದ ಚುನಾವಣೆ – ಯಾವ ರಾಜ್ಯ, ಎಷ್ಟು ಕ್ಷೇತ್ರಗಳಲ್ಲಿ ಮತದಾನ? ಕಣದಲ್ಲಿರೋ ಪ್ರಮುಖರು ಯಾರು?

    ಸೋಮವಾರ 4ನೇ ಹಂತದ ಚುನಾವಣೆ – ಯಾವ ರಾಜ್ಯ, ಎಷ್ಟು ಕ್ಷೇತ್ರಗಳಲ್ಲಿ ಮತದಾನ? ಕಣದಲ್ಲಿರೋ ಪ್ರಮುಖರು ಯಾರು?

    ನವದೆಹಲಿ: ಸೋಮವಾರ (ಮೇ 12) 4ನೇ ಹಂತದ ಲೋಕಸಭೆ ಚುನಾವಣೆ (Lok Sabha Elections 2024) ನಡೆಯಲಿದ್ದು, ಸುಗಮ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಸಂಪೂರ್ಣ ಸಜ್ಜಾಗಿದೆ.

    9 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ 96 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇದನ್ನೂ ಓದಿ: ಕೇಜ್ರಿವಾಲ್‌ಗೆ ಹುಚ್ಚು, ಬಿಜೆಪಿಯಲ್ಲಿ ವಯಸ್ಸಿನ ಮಿತಿ ಬಗ್ಗೆ ನಿರ್ಧಾರ ಕೈಗೊಂಡಿಲ್ಲ: ಆರ್‌.ಅಶೋಕ್

    ಆಂಧ್ರ ಪ್ರದೇಶದ 25, ತೆಲಂಗಾಣದ 17, ಉತ್ತರಪ್ರದೇಶದ 13, ಮಹಾರಾಷ್ಟ್ರದ 11, ಬಂಗಾಳದ 8, ಬಿಹಾರದ 5, ಒಡಿಶಾ, ಜಾರ್ಖಂಡ್‌ನ ತಲಾ 4 ಹಾಗೂ ಜಮ್ಮು ಮತ್ತು ಕಾಶ್ಮೀರದ 1 ಸ್ಥಾನಕ್ಕೆ ಮತದಾನ ನಡೆಯಲಿದ್ದು, 1717 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆ ಮಾಡಿಕೊಳ್ತಿದ್ದಾರೆ. ಇದನ್ನೂ ಓದಿ: ಭಾರತವನ್ನು ಅಭಿವೃದ್ಧಿಪಡಿಸಬೇಕಾದರೆ, ಪೂರ್ವ ಭಾರತವನ್ನು ಅಭಿವೃದ್ಧಿಪಡಿಸಬೇಕು – ಮೋದಿ

    ಕೇಂದ್ರ ಸಚಿವರಾದ ನಿತ್ಯಾನಂದ ರೈ, ಅಜಯ್ ಮಿಶ್ರಾ, ಮಾಜಿ ಸಿಎಂ ಅಖಿಲೇಶ್ ಯಾದವ್, ಅಧೀರ್ ರಂಜನ್ ಚೌಧರಿ, ಮಹುವಾ ಮೊಯಿತ್ರಾ, ಮಾಜಿ ಕ್ರಿಕೆಟಿಗ ಯುಸೂಫ್ ಪಠಾಣ್, ನಟ ಶತ್ರುಜ್ಞ ಸಿನ್ಹಾ, ಹೈದ್ರಾಬಾದ್‌ನಲ್ಲಿ ಅಸಾದುದ್ದೀನ್ ಓವೈಸಿ (Asaduddin Owaisi), ಮಾಧವಿಲತಾ ಸೇರಿ ಹಲವು ಪ್ರಮುಖರು ಕಣದಲ್ಲಿದ್ದಾರೆ.

    ಇದೇ ವೇಳೆ, ಆಂಧ್ರಪ್ರದೇಶ ವಿಧಾನಸಭೆಗೂ ಸೋಮವಾರವೇ ಚುನಾವಣೆ ನಡೆಯಲಿದೆ. ಸಿಎಂ ಜಗನ್ ನೇತೃತ್ವದ ವೈಎಸ್‌ಆರ್ ಪಾರ್ಟಿ ಏಕಾಂಗಿಯಾಗಿ ಸ್ಪರ್ಧೆ ಮಾಡಿದೆ. ಜಗನ್ ವಿರುದ್ಧ ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ಮತ್ತು ಬಿಜೆಪಿ ಜಂಟಿ ಹೋರಾಟ ನಡೆಸುತ್ತಿದೆ. ಕಾಂಗ್ರೆಸ್ ಕೂಡ ಕಣದಲ್ಲಿ ಕಾಣಿಸಿಕೊಂಡಿದೆ.

  • ಕಾಂಡೋಮ್‌ಗಳನ್ನು ಮುಸ್ಲಿಮರೇ ಹೆಚ್ಚಾಗಿ ಬಳಸುತ್ತಾರೆ: ಓವೈಸಿ

    ಕಾಂಡೋಮ್‌ಗಳನ್ನು ಮುಸ್ಲಿಮರೇ ಹೆಚ್ಚಾಗಿ ಬಳಸುತ್ತಾರೆ: ಓವೈಸಿ

    ಹೈದರಾಬಾದ್:‌ ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ ಎಂದು ಆಲ್ ಇಂಡಿಯಾಮಜ್ಲಿ ಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಹೇಳಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದ ಓವೈಸಿ, ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ. ಎಷ್ಟು ದಿನ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುತ್ತೀರಿ. ನಮ್ಮ ಧರ್ಮ ಬೇರೆ ಆಗಿರಬಹುದು ಆದರೆ, ನಾವು ಕೂಡ ಈ ದೇಶದ ನಿವಾಸಿಗಳು ಎಂದಿದ್ದಾರೆ.

    ಯಾಕೆ ದ್ವೇಷದ ಗೋಡೆ ಕಟ್ಟುತ್ತಿದ್ದೀರಿ?. ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೊಂದುತ್ತಾರೆ ಎಂಬ ಭಯವನ್ನು ಏಕೆ ಹರಡಲು ಪ್ರಯತ್ನಿಸುತ್ತಿದ್ದೀರಿ? ಮೋದಿ ಸರ್ಕಾರದ ಅಂಕಿ ಅಂಶಗಳ ಪ್ರಕಾರ, ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆ ದರ ಕುಸಿದಿದೆ ಎಂದಿದೆ. ಯಾಕೆಂದರೆ ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚಾಗಿ ಬಳಸುತ್ತಾರೆ. ಇದನ್ನು ಹೇಳಲು ನನಗೆ ಮುಜುಗರವಿಲ್ಲ ಎಂದು ಕಿಡಿಕಾರಿದರು.

    ಕಳೆದ ವಾರ ರಾಜಸ್ಥಾನದ ಬನ್ಸ್ವಾರಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ, ಹಿಂದೂಗಳ ಮಂಗಳ ಸೂತ್ರ ಮುಸ್ಲಿಮರ ಪಾಲಾಗಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ, ಹಿಂದೂ ಮಹಿಳೆಯ ಮಂಗಳಸೂತ್ರ ಸಹ ಉಳಿಯೋದಿಲ್ಲ ಅಂತಾ ಮೋದಿ ಹೇಳಿಕೆ ಕೊಟ್ಟಿದ್ದರು. ಇದನ್ನೂ ಓದಿ: ದೇಶವಾಸಿಗಳೇ ಎಚ್ಚರ, ಕಾಂಗ್ರೆಸ್‌ ನಿಮ್ಮ ಆಸ್ತಿ, ಚಿನ್ನದ ಮೇಲೆ ಕಣ್ಣಿಟ್ಟಿದೆ: ಮೋದಿ

  • ಓವೈಸಿ ವಿರುದ್ಧ ಸ್ಪರ್ಧಿಸ್ತಿರೋ ಬಿಜೆಪಿ ಅಭ್ಯರ್ಥಿಗೆ Y+ ಭದ್ರತೆ

    ಓವೈಸಿ ವಿರುದ್ಧ ಸ್ಪರ್ಧಿಸ್ತಿರೋ ಬಿಜೆಪಿ ಅಭ್ಯರ್ಥಿಗೆ Y+ ಭದ್ರತೆ

    ಹೈದರಾಬಾದ್:‌ ಇಲ್ಲಿನ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ (Madhavi Latha) ಅವರಿಗೆ ವೈ+ ಭದ್ರತೆ ಒದಗಿಸಲಾಗಿದೆ. ಅವರು ಅಸಾದುದ್ದೀನ್ ಓವೈಸಿ (Asaduddin Owaisi) ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

    ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಬೆದರಿಕೆ ವರದಿಯ ಆಧಾರದ ಮೇಲೆ ಗೃಹ ಸಚಿವಾಲಯವು ಮಾಧವಿ ಲತಾ ಅವರಿಗೆ ಈ ಭದ್ರತೆಯನ್ನು ನೀಡುತ್ತಿದೆ. ಮಾಹಿತಿ ಪ್ರಕಾರ, Y+ ಕೆಟಗರಿಯ ಭದ್ರತೆಗಾಗಿ 11 ಕಮಾಂಡೋಗಳನ್ನು ನಿಯೋಜಿಸಲಾಗಿದೆ. ಇನ್ನು ವಿಐಪಿಯ ಮನೆಯ ಸುತ್ತಲೂ ಐದು ಸ್ಟಾಟಿಕ್ ಪೊಲೀಸ್ ಸಿಬ್ಬಂದಿ ಅವರ ಭದ್ರತೆಗಾಗಿ ಹಾಜರಿರುತ್ತಾರೆ. ಜೊತೆಗೆ 6 ಮಂದಿ ಪಿಎಸ್‌ಒಗಳು ಆಯಾ ವಿಐಪಿಗಳಿಗೆ ಮೂರು ಪಾಳಿಯಲ್ಲಿ ಭದ್ರತೆಯನ್ನು ಒದಗಿಸುತ್ತಾರೆ.

    ಮಾಧವಿ ಲತಾ ಯಾರು?: ಕೋಟಿ ಮಹಿಳಾ ಕಾಲೇಜಿನಲ್ಲಿ ರಾಜ್ಯಶಾಸ್ತ್ರದಲ್ಲಿ ಎಂಎ ಮಾಡಿದ್ದಾರೆ. ಮಾಧವಿಯವರು ಹಿಂದುತ್ವದ ಪರವಾಗಿ ಧ್ವನಿ ಎತ್ತುತ್ತಾರೆ. ವಿರಿಂಚಿ ಆಸ್ಪತ್ರೆಯ ಅಧ್ಯಕ್ಷೆಯಾಗಿರುವ ಮಾಧವಿ ಲತಾ, ಭರತನಾಟ್ಯ ನೃತ್ಯಗಾರ್ತಿಯೂ ಹೌದು. ಅವರು ಹೈದರಾಬಾದ್‌ನಲ್ಲಿ ಸಾಮಾಜಿಕ ಕಾರ್ಯಗಳಿಗೆ ಹೆಸರುವಾಸಿಯಾಗಿದ್ದಾರೆ. ಜೊತೆಗೆ ಲೋಪಾಮುದ್ರಾ ಚಾರಿಟೇಬಲ್ ಟ್ರಸ್ಟ್ ಮತ್ತು ಲತಾಮಾ ಫೌಂಡೇಶನ್ ಮುಖ್ಯಸ್ಥರಾಗಿದ್ದು, ಈ ಟ್ರಸ್ಟ್‌ಗಳು ಮತ್ತು ಸಂಸ್ಥೆಗಳು ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿವೆ.

    ಬಿಜೆಪಿಯಿಂದ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿ ಕಣಕ್ಕೆ: ಇದೇ ಮೊದಲ ಬಾರಿಗೆ ಹೈದರಾಬಾದ್‌ನ ಮಹಿಳಾ ಅಭ್ಯರ್ಥಿಯ ಮೇಲೆ ಬಿಜೆಪಿ ತನ್ನ ಪಣತೊಟ್ಟಿದೆ. ಈ ಹಿಂದೆ ಪಕ್ಷವು ಭಾಗವತ್ ರಾವ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಮಾಡಿತ್ತು. ಆದರೆ ಭಾಗವತ್ ಅವರು ಓವೈಸಿಯಿಂದ ಸುಮಾರು 3 ಲಕ್ಷ ಮತಗಳಿಂದ ಸೋಲನ್ನು ಎದುರಿಸಬೇಕಾಯಿತು. ಈ ಬಾರಿ ಬಿಜೆಪಿ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಸ್ಪರ್ಧೆಯನ್ನು ಕಠಿಣಗೊಳಿಸಲು ಪ್ರಯತ್ನಿಸಿದೆ.

  • ವಂಚನೆಯಿಂದ ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಹೈದರಾಬಾದ್‌ ಯುವಕ – ಯುದ್ಧದಲ್ಲಿ ದುರಂತ ಸಾವು

    ವಂಚನೆಯಿಂದ ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಹೈದರಾಬಾದ್‌ ಯುವಕ – ಯುದ್ಧದಲ್ಲಿ ದುರಂತ ಸಾವು

    ಮಾಸ್ಕೋ: ವಂಚನೆಯ ಜಾಲಕ್ಕೆ ಸಿಕ್ಕಿ ರಷ್ಯಾದ ವ್ಯಾಗ್ನರ್‌ ಪಡೆಯಲ್ಲಿ (Wagner Army) ಸಿಲುಕಿದ್ದ ಭಾರತದ ಹೈದರಾಬಾದಿನ ಯುವಕ ಉಕ್ರೇನ್‌ನಲ್ಲಿ ದುರಂತ ಸಾವಿಗೀಡಾಗಿದ್ದಾನೆ ಎಂದು ರಷ್ಯಾದಲ್ಲಿನ ಭಾರತೀಯ ರಾಯಭಾರ ಕಚೇರಿ (Indian Embassy) ಅಧಿಕಾರಿಗಳು ದೃಢಪಡಿಸಿದ್ದಾರೆ.

    ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ (Ukraine War) ಹೈದರಾಬಾದ್‌ ಮೂಲದ ಯುವಕ ಸಾವನ್ನಪ್ಪಿದ್ದಾನೆ‌ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಇದನ್ನೂ ಓದಿ: ಕ್ಷಿಪಣಿ ದಾಳಿಗೆ ಕೇರಳ ಮೂಲದ ವ್ಯಕ್ತಿ ಸಾವು – ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಎಚ್ಚರಿಕೆ ಸಂದೇಶ

    ಯುವಕನನ್ನು ಮೊಹಮ್ಮದ್‌ ಅಸ್ಫಾನ್‌ (Mohammed Afsan )ಎಂದು ಗುರುತಿಸಲಾಗಿದೆ. ಯುವಕನ ಕುಟುಂಬಸ್ಥರು ಪಾರ್ಥೀವ ಶರೀರವನ್ನು ರಷ್ಯಾದಿಂದ ತರಿಸಿಕೊಡುವಂತೆ ಹೈದರಾಬಾದ್‌ ಸಂಸದ ಅಸಾದುದ್ದೀನ್ ಓವೈಸಿ ಅವರಿಗೆ ಮನವಿ ಮಾಡಿದ್ದಾರೆ. ಈ ವೇಳೆ ಪಾರ್ಥೀವ ಶರೀರವನ್ನು ಭಾರತಕ್ಕೆ ಕಳುಹಿಸಿಕೊಡಲು ಅಧಿಕಾರಿಗಳು ತಯಾರಿ ನಡೆಸುತ್ತಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ. ಇದನ್ನೂ ಓದಿ: ಕೆಂಪು ಸಮುದ್ರದ ಅಡಿಯಲ್ಲಿದ್ದ 3 ಡೇಟಾ ಕೇಬಲ್‌ಗಳಿಗೆ ಕತ್ತರಿ – ವಿಶ್ವಾದ್ಯಂತ ಇಂಟರ್‌ನೆಟ್‌ ಸೇವೆಯಲ್ಲಿ ವ್ಯತ್ಯಯ

    ಕುಟುಂಬದೊಂದಿಗೆ ಸಂಪರ್ಕ ಸಾಧಿಸುತ್ತಿರುವ ರಷ್ಯಾದ ಅಧಿಕಾರಿಗಳು, ಭಾರತೀಯ ಪ್ರಜೆ ಮೊಹಮ್ಮದ್ ಅಸ್ಫಾನ್ ಅವರ ದುರಂತ ಸಾವಿನ ಬಗ್ಗೆ ನಾವು ತಿಳಿದುಕೊಂಡಿದ್ದೇವೆ. ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ಕಳುಹಿಸಲು ಸಕಲ ತಯಾರಿ ನಡೆಸುತ್ತಿದ್ದೇವೆ. ಅಸ್ಫಾನ್‌ ಅವರನ್ನು ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ರಷ್ಯಾ ಸೇನೆಯ (Russia Army) ಸಹಾಯಕರನ್ನಾಗಿ ನೇಮಿಸಿಕೊಳ್ಳಲಾಗಿತ್ತು. ಇನ್ನುಳಿದ ಭಾರತೀಯ ಪ್ರಜೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಅಸ್ಫಾನ್‌ ಡೇಂಜರ್‌ ಸೇನೆಯಲ್ಲಿ ಸಿಲುಕಿದ್ದು ಹೇಗೆ?
    ಉದ್ಯೋಗ ವಂಚನೆಯ ಜಾಲಕ್ಕೆ ಸಿಲುಕಿದ್ದ ಹೈದರಾಬಾದಿನ ಮೂಲದ ಯುವಕ ರಷ್ಯಾದ ವ್ಯಾಗ್ನರ್‌ ಪಡೆಯಲ್ಲಿ ಸಿಲುಕಿದ್ದರು. ತೆಲಂಗಾಣ, ಗುಜರಾತ್, ಕರ್ನಾಟಕ (ಕಲಬುರಗಿ ಜಿಲ್ಲೆಯ ಮೂವರು), ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳ 20ಕ್ಕೂ ಹೆಚ್ಚು ಯುವಕರು ಸೇನೆಯಲ್ಲಿ ಸಿಲುಕಿದ್ದಾರೆ. ಅವರನ್ನು ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ಹೋರಾಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ವೀಡಿಯೋವೊಂದರಲ್ಲಿ ಹೇಳಿಕೊಂಡಿದ್ದರು. ಈ ವೀಡಿಯೋ ಬೆಳಕಿಗೆ ಬರ್ತಿದ್ದಂತೆ ಓವೈಸಿ (Asaduddin Owaisi) ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಯುವಕರನ್ನು ರಕ್ಷಿಸುವಂತೆ ಒತ್ತಾಯಿಸಿದ್ದರು. ಇದನ್ನೂ ಓದಿ: ಗಗನಯಾನ ಸಾಹಸಿಗರಿಗೆ ಪೌಷ್ಠಿಕ ಆಹಾರ; ಇದು ಎಲ್ಲಿಂದ – ಹೇಗೆ ತಯಾರಾಗುತ್ತೆ ಗೊತ್ತಾ?