Tag: asaduddin owisi

  • ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್ ನಾಯಕರೇ ಕಾರಣ: ಓವೈಸಿ

    ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್ ನಾಯಕರೇ ಕಾರಣ: ಓವೈಸಿ

    ಲಕ್ನೋ: ದೇಶ ವಿಭಜನೆ ಮುಸ್ಲಿಮರಿಂದ ಅಲ್ಲ, ಬದಲಿಗೆ ಮೊಹಮ್ಮದ್ ಜಿನ್ನಾ ಅವರಿಂದ ಆಗಿದೆ. ದೇಶ ವಿಭಜನೆಗೆ ಅಲ್ಲಿನ ಕಾಂಗ್ರೆಸ್ ಹಾಗೂ ಆ ಸಮಯದಲ್ಲಿದ್ದ ನಾಯಕರೇ ಕಾರಣರಾಗಿದ್ದಾರೆ ಎಂದು ಎಂಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

    ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಸುಹೇಲ್‍ದೇವ್ ಹೇಳಿಕೆಗೆ ಮೊರದಬಾದ್‍ನಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯಲ್ಲಿ ಮಾತನಾಡುತ್ತಾ ಓವೈಸಿ ಟೀಕೆ ವ್ಯಕ್ತಪಡಿಸಿದ್ದಾರೆ. ಇತಿಹಾಸವನ್ನು ಓದದ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಭಾರತೀಯ ಜನತಾ ಪಕ್ಷ ಮತ್ತು ಸಮಾಜವಾದಿ ಪಕ್ಷದವರಿಗೆ ನಾನು ಸವಾಲು ಹಾಕುತ್ತೇನೆ.

    ಮುಸ್ಲಿಮರಿಂದ ಅಲ್ಲ ಜಿನ್ನಾ ಅವರಿಂದಾಗಿ ದೇಶ ವಿಭಜನೆ ಆಗಿದೆ. ಆ ಸಮಯದಲ್ಲಿ ಕೇವಲ ಮುಸ್ಲಿಮರು ಹಾಗೂ ನವಾಬರು ಮಾತ್ರವೇ ಜಿನ್ನಾ ಅವರಿಗೆ ಮತವನ್ನು ನೀಡಬಹುದಿತ್ತು. ಆ ಸಮಯದಲ್ಲಿ ಗೆದ್ದ ಕಾಂಗ್ರೆಸ್ ನಾಯಕರೇ ವಿಭಜನೆಗೆ ಕಾರಣರಾಗಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪೇಂಟಿಂಗ್‌ ಕೆಲಸಕ್ಕೆ ಬಂದು ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ- ಖತರ್ನಾಕ್‌ ಕಳ್ಳ ಅಂದರ್‌!

    ಸುಹೇಲ್‍ದೇವ್ ಹೇಳಿದ್ದೇನು..?
    ಬುಧವಾರ ವಾರಣಾಸಿಯಲ್ಲಿ ಮಾತನಾಡಿದ್ದ ಸುಹೇಲ್‍ದೇವ್, ಜಿನ್ನಾ ಅವರನ್ನು ಮೊದಲ ಪ್ರಧಾನಿಯನ್ನಾಗಿ ಮಾಡಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ಓವೈಸಿ ಮೊರದಾಬಾದ್‍ನಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

  • ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿ ಅಂತ ಕರೆದ್ರೆ ಜೈಲು ಶಿಕ್ಷೆ ವಿಧಿಸಿ: ಓವೈಸಿ

    ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿ ಅಂತ ಕರೆದ್ರೆ ಜೈಲು ಶಿಕ್ಷೆ ವಿಧಿಸಿ: ಓವೈಸಿ

    ಹೈದರಾಬಾದ್: ಭಾರತೀಯ ಮುಸ್ಲಿಮರನ್ನು ಯಾರಾದ್ರು ಪಾಕಿಸ್ತಾನಿ ಅಂತ ಕರೆದ್ರೆ ಅವರನ್ನು ಜೈಲು ಶಿಕ್ಷೆಗೆ ಒಳಪಡಿಸಿ ಅಂತ ಅಖಿಲ ಭಾರತ ಮಜ್ಲಿಸ್ ಇ ಇಥೆಹಾದುಲ್ ಮುಸಲ್ಮಿನ್(ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

    ಮಂಗಳವಾರ ಲೋಕಸಭೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣದ ಮೇಲೆ ವಂದನಾ ನಿರ್ಣಯ ಮಂಡಿಸುವ ವೇಳೆ ಮಾತನಾಡಿದ ಓವೈಸಿ, ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿ ಅಂತ ಕರೆಯುವವರನ್ನು ಶಿಕ್ಷೆಗೆ ಒಳಪಡಿಸಬೇಕು. ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ನೀಡಬೇಕು ಅಂತ ಹೇಳಿದ್ರು.

    ಅಂತಹ ಹೇಳಿಕೆ ನೀಡುವವರನ್ನು ಕೂಡಲೇ ಜೈಲಿಗಟ್ಟುವ ಕಾನೂನು ತರಬೇಕು. ಆದ್ರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇಂತಹ ಕಾನೂನು ತರುವುದಿಲ್ಲ. ಭಾರತದಲ್ಲಿರುವ ಮುಸ್ಲಿಮರು ಮೊಹಮ್ಮದ್ ಅಲಿ ಜಿನ್ನಾರವರ ಎರಡು ರಾಷ್ಟ್ರಗಳ ನೀತಿಯನ್ನು ತಿರಸ್ಕರಿಸಿದ್ದರು ಎಂದು ಹೇಳಿದ್ರು.

    ಇದೇ ವೇಳೆ ತ್ರಿವಳಿ ತಲಾಖ್ ಕುರಿತಂತೆ ಮಾತನಾಡಿದ ಅವರು, ಸರ್ಕಾರದ ನಿರ್ಧಾರ ಮಹಿಳಾ ವಿರೋಧಿಯಾಗಿದೆ ಎಂದರು. ಕೇಂದ್ರ ಸರ್ಕಾರ ಪ್ರಸ್ತಾಪ ಮಾಡಿರುವ ಮಸೂದೆಯಿಂದ ತ್ವರಿತ ತ್ರಿವಳಿ ತಲಾಖ್ ಕಾನೂನು ಬಾಹಿರವಾಗುತ್ತದೆ. ಪತಿಗೆ 3 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸುತ್ತದೆ. ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿತ್ತಾದರೂ, ರಾಜ್ಯಸಭೆಯಲ್ಲಿ ವಿರೋಧಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

    ಫೆ 9 ಮತ್ತು 10ರಂದು ಹೈದರಾಬಾದ್ ನಲ್ಲಿರೋ ಓವೈಸಿ ಆಸ್ಪತ್ರೆಯಲ್ಲಿ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಬೋರ್ಡ್(ಎಐಎಂಪಿಎಲ್‍ಬಿ) ವತಿಯಿಂದ ಸಮಗ್ರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಗಣ್ಯರು ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದು, ಮುಸ್ಲಿಂ ವೈಯಕ್ತಿಕ ಕಾನೂನು ಕಾಪಾಡಲು ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ವರದಿಯಾಗಿದೆ.