Tag: Asha Parekh

  • ಕೇಸರಿ ಉಡುಪು ಧರಿಸಿದ್ದಕ್ಕೆ ಬ್ಯಾನ್‌ ಮಾಡಿ ಅನ್ನೋದು ಸರಿಯಲ್ಲ – ಪಠಾಣ್‌ ಪರ ನಿಂತ ದಾದಾ ಸಾಹೇಬ್‌ ಫಾಲ್ಕೆ ಪುರಸ್ಕೃತ ನಟಿ

    ಕೇಸರಿ ಉಡುಪು ಧರಿಸಿದ್ದಕ್ಕೆ ಬ್ಯಾನ್‌ ಮಾಡಿ ಅನ್ನೋದು ಸರಿಯಲ್ಲ – ಪಠಾಣ್‌ ಪರ ನಿಂತ ದಾದಾ ಸಾಹೇಬ್‌ ಫಾಲ್ಕೆ ಪುರಸ್ಕೃತ ನಟಿ

    ಬಾದಷಾ ಶಾರುಖ್ ನಟನೆಯ `ಪಠಾಣ್’ (Pathan) ಮುಂದಿನ ಜನವರಿಗೆ ತೆರೆಯ ಮೇಲೆ ಅಬ್ಬರಿಸಲು ಸಜ್ಜಾಗಿದೆ. ರಿಲೀಸ್‌ಗೂ ಮುನ್ನವೇ ಸಾಕಷ್ಟು ವಿವಾದಗಳನ್ನ ಹುಟ್ಟು ಹಾಕಿದೆ. ಇನ್ನೂ ದೀಪಿಕಾ (Deepika Padukone) ಕೇಸರಿ ಬಿಕಿನಿ ವಿವಾದ, ಸಿನಿಮಾ ಬ್ಯಾನ್ (Ban) ವಿಷ್ಯವಾಗಿ ದಾದಾ ಫಾಲ್ಕೆ ಪುರಸ್ಕೃತ ನಟಿ ಆಶಾ ಪರೇಖ್ ಮಾತನಾಡಿದ್ದಾರೆ.

    ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ದೀಪಿಕಾ ಕೇಸರಿ ಬಿಕಿನಿ ವಿವಾದ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. `ಪಠಾಣ್’ (Pathan) ಚಿತ್ರದ ಹಾಡಿನಲ್ಲಿ ನಟಿ ದೀಪಿಕಾ ಸಖತ್ ಹಾಟ್ ಆಗಿ ಮೈಚಳಿ ಬಿಟ್ಟು ಶಾರುಖ್‌ ಜೊತೆ ಸೊಂಟ ಬಳುಕಿಸಿದ್ದಾರೆ. ʻಬೇಷರಂ ರಂಗ್ʼ ಹಾಡಿನಲ್ಲಿ ದೀಪಿಕಾ ಧರಿಸಿರುವ ಕೇಸರಿ ಬಣ್ಣದ ಬಟ್ಟೆ ಕುರಿತಾಗಿ ಈ ಚಿತ್ರವನ್ನೇ ನಿಷೇಧಿಸಬೇಕು ಎಂಬ ಕೆಲ ಮಾತುಗಳು ಸಹ ಕೇಳಿ ಬಂದಿದ್ದವು. ಸದ್ಯ ಇದೇ ವಿಚಾರವಾಗಿ ಹಿರಿಯ ನಟಿ ಆಶಾ ಪರೇಖ್ (Asha Parekh) ಮಾತನಾಡಿದ್ದಾರೆ. ಪಠಾಣ್‌ ಪರ ಹಿರಿಯ ನಟಿ ಆಶಾ ಪರೇಖ್ ಪ್ರತಿಕ್ರಿಯೆ ನೀಡಿದ್ದಾರೆ.

    ನಟಿ ಆಶಾ ಪರೇಖ್ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ `ಬೇಷರಂ ರಂಗ್’ ಹಾಡಿನ ಕುರಿತಾಗಿ ಕೇಳಲಾಗಿದೆ. ಈ ಬಗ್ಗೆ ಆಶಾ ಪರೇಖ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಚಿತ್ರದ ಮೂಲ ಉದ್ದೇಶ ಮನರಂಜನೆ ನೀಡುವುದಾಗಿದೆ. ದೀಪಿಕಾ ಕೇಸರಿ ಬಣ್ಣದ ಬಟ್ಟೆ ಧರಿಸಿರುವುದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಕೇಸರಿ ಉಡುಪು ಧರಿಸಿದ್ದಕ್ಕೆ ಬ್ಯಾನ್‌ ಮಾಡಿ ಅನ್ನೋದು ಸರಿಯಲ್ಲ. ದೀಪಿಕಾ ಬಿಕಿನಿ ಧರಿಸಿರೋದು ಅವರ ಸಮಸ್ಯೆಯಲ್ಲ. ಕೇಸರಿ ಬಣ್ಣ ಇರೋದು ಹಲವರ ಸಮಸ್ಯೆ. ನಮ್ಮ ಯೋಚನೆ ಸಂಕುಚಿತ ಸ್ವಭಾವದಿಂದ ಇದೆ. ನಾವು ಯೋಚಿಸುವ ರೀತಿ ಬದಲಾಗಬೇಕಿದೆ. ಈ ಮೂಲಕ ಬಾಲಿವುಡ್‌ನ ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ನಟಿ ಆಶಾ ಮಾತನಾಡಿದ್ದಾರೆ. ಕೆಲ ಚಿತ್ರಗಳು ಹೇಳಿಕೊಳ್ಳುವಂತಹ ದಾಖಲೆ ಮಾಡುತ್ತಿಲ್ಲ. ಹಾಗಾಗಿ ಹಿಂದಿ ಚಿತ್ರರಂಗ ಸೋಲುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಕನ್ನಡಿ ವಿಚಾರಕ್ಕೆ ರೂಪೇಶ್ ಶೆಟ್ಟಿ ಕಾಲೆಳೆದ ಕಿಚ್ಚ ಸುದೀಪ್

    ಸದ್ಯ ಚಿತ್ರರಂಗದಲ್ಲಿ ಪರಿಸ್ಥಿತಿ ಈಗಾಗಲೇ ತುಂಬಾ ಕೆಟ್ಟಿದೆ. ಸಿನಿಮಾ ನಿಷೇಧ ಮಾಡಿದ್ದರೆ ಉದ್ಯಮವೇ ಕೊನೆಗೊಳ್ಳುತ್ತದೆ. ಮುಂದೆ ಜನರು ಸಿನಿಮಾ ನೋಡಲು ಥಿಯೇಟರ್‌ಗೆ ಹೋಗುವುದಿಲ್ಲ. ಸಿನಿಮಾಗಳು ವಿಫಲವಾಗುತ್ತಲೇ ಇದ್ದರೆ, ಇನ್ನೊಂದು ಚಿತ್ರ ಹೇಗೆ ನಿರ್ಮಾಣವಾಗುತ್ತದೆ ಎಂದು ಹಿರಿಯ ನಟಿ ಆಶಾ ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಖ್ಯಾತ ನಟಿ ಆಶಾ ಪರೇಖ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    ಖ್ಯಾತ ನಟಿ ಆಶಾ ಪರೇಖ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    ದೆಹಲಿಯ ವಿಗ್ಯಾನ್ ಭವನದಲ್ಲಿ ಇಂದು ನಡೆಯುತ್ತಿರುವ 68ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಾಲಿವುಡ್ ನ ಖ್ಯಾತ ನಟಿ ಆಶಾ ಪರೇಖ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ (Dada Saheb Phalke) ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಂದ ಆಶಾ ಪ್ರಶಸ್ತಿ ಸ್ವೀಕರಿಸಿ ಸಂಭ್ರಮವನ್ನು ಹಂಚಿಕೊಂಡರು. ಕೇಂದ್ರ ಸಚಿವ ಅನುರಾಗ್ ಠಾಕೂರ್ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಭಾರತೀಯ ಸಿನಿಮಾ ರಂಗದ ಹೆಸರಾಂತ ನಟಿ, ಒಂದು ಕಾಲದಲ್ಲಿ ಬಾಲಿವುಡ್ ಕ್ವೀನ್ ಎಂದೇ ಖ್ಯಾತರಾಗಿದ್ದ ಆಶಾ ಪರೇಖ್ (Asha Parekh) ಭಾರತೀಯ ಸಿನಿಮಾ ರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ, ಕೇಂದ್ರ ಸರ್ಕಾರವು ಈ ಅತ್ಯುನ್ನತ ಗೌರವವನ್ನು ‘ದಾದಾ ಸಾಹೇಬ್ ಫಾಲ್ಕೆ’ ಹೆಸರಿನಲ್ಲಿ ಕೊಡಲಾಗಿದೆ. ಕಳೆದ ಬಾರಿ ಈ ಗೌರವವು ರಜನಿಕಾಂತ್ ಅವರಿಗೆ ಸಂದಿತ್ತು. ಈ ಬಾರಿ ಆಶಾ ಅವರಿಗೆ ದೊರೆತಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆ ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಹೇಳಿಕೆಯನ್ನು ಎಎನ್ಐ ಸಂಸ್ಥೆಯು ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ವೇದಿಕೆಯಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ:ಐಶ್ವರ್ಯ ಪಿಸ್ಸೆಗೆ ಐ ಲವ್‌ ಯೂ ಎಂದ ಸೈಕ್‌ ನವಾಜ್

    1952ರಲ್ಲಿ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟ ಆಶಾ ಪರೇಖ್, ಬಹುತೇಕ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ದಿಲ್ ದೇಕೆ ದೇಖೋ ಇವರು ನಾಯಕಿಯಾಗಿ ನಟಿಸಿದ್ದ ಮೊದಲ ಸಿನಿಮಾ. ಆಂದೋಲನ್ ಸಿನಿಮಾದಲ್ಲಿ ಕೊನೆಯ ಬಾರಿಗೆ ನಟಿಸಿ, ಅಲ್ಲಿಂದ ಸಿನಿಮಾ ರಂಗದಿಂದಲೇ ದೂರವಾದವರು. 79ರ ವಯಸ್ಸಿನ ಈ ನಟಿ ಇವತ್ತಿಗೂ ಸಿನಿಮಾ ರಂಗದ ಬಗ್ಗೆ ಅಷ್ಟೇ ಪ್ರೀತಿ, ಒಲವು ಇಟ್ಟುಕೊಂಡಿದ್ದಾರೆ.

    ಭಾರತದ ಅತ್ಯುನ್ನತ ಸಿನಿಮಾ ಪ್ರಶಸ್ತಿಯಾಗಿರುವ ಈ ಗೌರವವು ಕನ್ನಡದ ಡಾ.ರಾಜ್ ಕುಮಾರ್ (Raj Kumar) ಅವರಿಗೂ ದೊರೆತಿದೆ. ಅಲ್ಲದೇ, ವಿನೋದ್ ಖನ್ನಾ, ಲತಾ ಮಂಗೇಶ್ಕರ್, ಅಮಿತಾಭ್ ಬಚ್ಚನ್ ಸೇರಿದಂತೆ ಹಲವು ದಿಗ್ಗಜರು ಈ ಗೌರವವಕ್ಕೆ ಪಾತ್ರರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಖ್ಯಾತ ನಟಿ ಆಶಾ ಪರೇಖ್ ಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

    ಖ್ಯಾತ ನಟಿ ಆಶಾ ಪರೇಖ್ ಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

    ಭಾರತೀಯ ಸಿನಿಮಾ ರಂಗದ ಹೆಸರಾಂತ ನಟಿ, ಒಂದು ಕಾಲದಲ್ಲಿ ಬಾಲಿವುಡ್ ಕ್ವೀನ್ ಎಂದೇ ಖ್ಯಾತರಾಗಿದ್ದ ಆಶಾ ಪರೇಖ್ ಅವರಿಗೆ 52ನೇ ದಾದಾ ಸಾಹೇಬ್ ಫಾಲ್ಕೆ (Dada Saheb Phalke) ಪ್ರಶಸ್ತಿ ಘೋಷಣೆಯಾಗಿದೆ. ಭಾರತೀಯ ಸಿನಿಮಾ ರಂಗಕ್ಕೆ ನೀಡಿದ ಅದ್ಭುತ ಕೊಡುಗೆಗಾಗಿ ಆಶಾ ಅವರನ್ನು ಈ ಪ್ರಶಸ್ತಿ ಹುಡುಕಿಕೊಂಡು ಬಂದಿದೆ.

    ಭಾರತೀಯ ಸಿನಿಮಾ ರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ, ಕೇಂದ್ರ ಸರ್ಕಾರವು ಈ ಅತ್ಯುನ್ನತ ಗೌರವವನ್ನು ‘ದಾದಾ ಸಾಹೇಬ್ ಫಾಲ್ಕೆ’ ಹೆಸರಿನಲ್ಲಿ ಕೊಡಲಾಗುತ್ತದೆ. ಕಳೆದ ಬಾರಿ ಈ ಗೌರವವು ರಜನಿಕಾಂತ್ (Rajinikanth) ಅವರಿಗೆ ಸಂದಿತ್ತು. ಈ ಬಾರಿ ಆಶಾ ಅವರಿಗೆ ದೊರೆತಿದೆ. ಈ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಹೇಳಿಕೆಯನ್ನು ಎಎನ್ಐ ಸಂಸ್ಥೆಯು ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ವೇದಿಕೆಯಲ್ಲಿ ಹಂಚಿಕೊಂಡಿದೆ. ಇದನ್ನೂ ಓದಿ: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಆಸ್ಪತ್ರೆ ದಾಖಲು: ಅಭಿಮಾನಿಗಳಿಗೆ ಹೆಚ್ಚಿದೆ ಆತಂಕ

    1952ರಲ್ಲಿ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟ ಆಶಾ ಪರೇಖ್ (Asha Parekh), ಬಹುತೇಕ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ದಿಲ್ ದೇಕೆ ದೇಖೋ ಇವರು ನಾಯಕಿಯಾಗಿ ನಟಿಸಿದ್ದ ಮೊದಲ ಸಿನಿಮಾ. ಆಂದೋಲನ್ ಸಿನಿಮಾದಲ್ಲಿ ಕೊನೆಯ ಬಾರಿಗೆ ನಟಿಸಿ, ಅಲ್ಲಿಂದ ಸಿನಿಮಾ ರಂಗದಿಂದಲೇ ದೂರವಾದವರು. 79ರ ವಯಸ್ಸಿನ ಈ ನಟಿ ಇವತ್ತಿಗೂ ಸಿನಿಮಾ ರಂಗದ ಬಗ್ಗೆ ಅಷ್ಟೇ ಪ್ರೀತಿ, ಒಲವು ಇಟ್ಟುಕೊಂಡಿದ್ದಾರೆ.

    ಭಾರತದ ಅತ್ಯುನ್ನತ ಸಿನಿಮಾ ಪ್ರಶಸ್ತಿಯಾಗಿರುವ ಈ ಗೌರವವು ಕನ್ನಡದ ಡಾ.ರಾಜ್ ಕುಮಾರ್ (Raj Kumar) ಅವರಿಗೂ ದೊರೆತಿದೆ. ಅಲ್ಲದೇ, ವಿನೋದ್ ಖನ್ನಾ, ಲತಾ ಮಂಗೇಶ್ಕರ್, ಅಮಿತಾಭ್ ಬಚ್ಚನ್ ಸೇರಿದಂತೆ ಹಲವು ದಿಗ್ಗಜರು ಈ ಗೌರವವಕ್ಕೆ ಪಾತ್ರರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]