Tag: Ashada

  • ಚಾಮುಂಡಿ ಬೆಟ್ಟಕ್ಕೆ ಬಂದು ದೇವಿ ದರ್ಶನ ಪಡೆದ ಸಿಎಂ ಪತ್ನಿ, ಸೊಸೆ

    ಚಾಮುಂಡಿ ಬೆಟ್ಟಕ್ಕೆ ಬಂದು ದೇವಿ ದರ್ಶನ ಪಡೆದ ಸಿಎಂ ಪತ್ನಿ, ಸೊಸೆ

    ಮೈಸೂರು: ನಾಲ್ಕನೇ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ (Chamundi Hills) ಸಿಎಂ ಪತ್ನಿ ಹಾಗೂ ಸೊಸೆ ಭೇಟಿ ನೀಡಿದ್ದಾರೆ.

    ಇಂದು ನಾಲ್ಕನೇ ಆಷಾಢ ಶುಕ್ರವಾರ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ (Parvathi Siddaramaiah) ಹಾಗೂ ಸೊಸೆ ಸ್ಮಿತಾ ರಾಕೇಶ್ ಅವರು ಒಟ್ಟಿಗೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ದೇವಸ್ಥಾನದ ಹಿಂಬಾಗಿಲಿನಿಂದ ಪ್ರವೇಶ ಪಡೆದು ತಾಯಿ ಚಾಮುಂಡಿಯ ದರ್ಶನ ಪಡೆದಿದ್ದಾರೆ. ಬಳಿಕ ಅದೇ ದಾರಿಯಲ್ಲಿ ನಿರ್ಗಮಿಸಿದ್ದಾರೆ. ಸಿಎಂ ಪತ್ನಿ ಹಾಗೂ ಸೊಸೆಗೆ ಪೊಲೀಸರು ಎಸ್ಕಾರ್ಟ್ ಮೂಲಕ ದೇವಸ್ಥಾನಕ್ಕೆ ಕರೆದುಕೊಂಡು ಬಂದರು.ಇದನ್ನೂ ಓದಿ:  ಮಗ ಯಾವುದೇ ತಪ್ಪು ಮಾಡಿಲ್ಲ, ನನ್ನನ್ನು ರಾಜಕೀಯವಾಗಿ ಮುಗಿಸಲು ನಮ್ಮ ಮೇಲೆ ಆರೋಪ: ಪ್ರಭು ಚೌಹಾಣ್‌

    ಇಂದು ಆಷಾಢ ಮಾಸದ ನಾಲ್ಕನೇ ಶುಕ್ರವಾರದ ಹಿನ್ನೆಲೆ ನಾಡದೇವಿ ಚಾಮುಂಡಿಗೆ ಸಿಂಹವಾಹಿನಿ ಅಲಂಕಾರ ಮಾಡಲಾಗಿದೆ. ಉತ್ಸವ ಮೂರ್ತಿಗೆ ವಿವಿಧ ಬಗೆಯ ಹೂ ಹಾಗೂ ನವಿಲಿನಗರಿ ಹಾರದ ಅಲಂಕಾರ ಮಾಡಲಾಗಿದೆ. ದೇವಾಲಯದ ಆವರಣಕ್ಕೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿದೆ. ಮುಂಜಾನೆ 4:30ರಿಂದ ತಾಯಿಗೆ ವಿಶೇಷ ಪೂಜೆ ನೆರವೇರುತ್ತಿದೆ.

    ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ಭಕ್ತರು ತಾಯಿಯ ದರ್ಶನ ಪಡೆಯುತ್ತಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿಷೇಧಿಸಲಾಗಿದೆ.ಇದನ್ನೂ ಓದಿ: ಕಂಡಕ್ಟರ್ ಯಡವಟ್ಟು, ಹೋಟೆಲ್‍ಗೆ ನುಗ್ಗಿದ ಬಿಎಂಟಿಸಿ ಬಸ್ – ಐವರಿಗೆ ಗಾಯ

  • ಕರಾವಳಿಯಲ್ಲಿ ನಡೆಯುತ್ತೆ ಪ್ರೇತಾತ್ಮಗಳ ವಿವಾಹ- ಮೃತಪಟ್ಟವರ ಆಸೆ ಈಡೇರಿಸೋ ವಿಶಿಷ್ಠ ಆಚರಣೆ

    ಕರಾವಳಿಯಲ್ಲಿ ನಡೆಯುತ್ತೆ ಪ್ರೇತಾತ್ಮಗಳ ವಿವಾಹ- ಮೃತಪಟ್ಟವರ ಆಸೆ ಈಡೇರಿಸೋ ವಿಶಿಷ್ಠ ಆಚರಣೆ

    ಮಂಗಳೂರು: ಅದೊಂದು ತುಳುನಾಡಿನಲ್ಲಿ ನಡೆಯೋ ವಿಭಿನ್ನ ಮದುವೆ. ಮದುವೆಯಾದ ಜೋಡಿ ಸುಖವಾಗಿರಲಿ ಎಂದು ಹಾರೈಸಿ ಹಿರಿಯರ ಆಶೀರ್ವಾದ ಕೂಡ ನವಜೋಡಿಗಳಿಗೆ ಸಿಕ್ಕಿತ್ತು. ವಿಶೇಷ ಅಂದ್ರೆ ಆ ನವಜೋಡಿಗಳು ಮದುವೆಯ ಸಮಾರಂಭದಲ್ಲಿದ್ದ ಯಾರ ಕಣ್ಣಿಗೂ ಕಾಣಿಸದೇ ಹಸಮಣೆ ಏರಿ ಎಲ್ಲಾ ಶಾಸ್ತ್ರ ಮುಗಿಸಿದ್ರು.

    ಹೌದು. ದಕ್ಷಿಣ ಕನ್ನಡ (Dakshina Kannada) ಹಾಗೂ ಉಡುಪಿ (Udupi) ಜಿಲ್ಲೆಗಳಲ್ಲಿ ವರ್ಷಕ್ಕೊಂದು ಬಾರಿ ಇಂತಹ ಮದುವೆಗಳು ನಡೆಯುತ್ತವೆ. ತುಳು ಮಾಸ ಆಟಿ (ಆಷಾಢ) ಅಂದ್ರೆ ಯಾವುದೇ ಶುಭಕಾರ್ಯಗಳು ಕರಾವಳಿ ಭಾಗದಲ್ಲಿ ನಡೆಯೋದಿಲ್ಲ. ಆದರೆ ಈ ಸಮಯದಲ್ಲಿ ಕುಟುಂಬದಲ್ಲಿ ಯಾರಾದ್ರೂ ಮದುವೆಯಾಗದೇ ಅಕಾಲಿಕವಾಗಿ ಮೃತಪಟ್ಟಿದ್ದರೆ ಅಂತವರ ಮದುವೆ ಮಾಡೋ ಸಂಪ್ರದಾಯ ಇದೆ. ಇಲ್ಲೂ ನಡೆದಿರೋದು ಅಂತಹದೇ ಒಂದು ಮದುವೆಯ ಸಂಪ್ರದಾಯ. ಬಂಟ್ವಾಳ ತಾಲೂಕಿನ ವಗ್ಗ ಎಂಬಲ್ಲಿಯ ವಧುವಿನ ಕುಟುಂಬ ಹಾಗೂ ಉಳ್ಳಾಲ (Ullala) ತಾಲೂಕಿನ ಕೋಣಾಜೆ (Konaje) ಸಮೀಪದ ಬೊಳ್ಮ ಎಂಬಲ್ಲಿಯ ವರನ ಕುಟುಂಬದ ನಡುವೆ ಮದುವೆ ಸಂಬಂಧ ಏರ್ಪಟ್ಟಿದೆ.

    ಬಂಟ್ವಾಳ ತಾಲೂಕಿನ ವಗ್ಗದ ಮಾಂಗಜೆ ಎಂಬಲ್ಲಿಯ ಸಂಜೀವ ಪೂಜಾರಿಯವರ ಮಗಳು ವಿಶಾಲಾಕ್ಷಿ 2 ವರ್ಷದ ಮಗುವಾಗಿದ್ದಾಗ ಅಂದ್ರೆ ಸರಿ ಸುಮಾರು 35 ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಇತ್ತ ಉಳ್ಳಾಲದ ಕೊಣಾಜೆ ಸಮೀಪದ ಬೊಳ್ಮ ಗ್ರಾಮದ ಲಕ್ಷ್ಮಣ ಪೂಜಾರಿಯವರ ಪುತ್ರ ಧರಣೇಶ್ ಕಳೆದ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಟೊಮೆಟೋ ಬಳಿಕ ಬಾಳೆಹಣ್ಣಿಗೆ ಬಂಗಾರದ ಬೆಲೆ- 1 ಕೆಜಿ ಏಲಕ್ಕಿ ಬಾಳೆ 80 ರೂ.ಗೆ ಮಾರಾಟ

    ಹೃದಯದ ತೊಂದರೆ ಇದ್ದ ಕಾರಣ ಧರಣೇಶ್ ಅವರಿಗೆ ಮದುವೆ ಮಾಡುವ ಬಗ್ಗೆ ಮನೆಯವರು ಯೋಚನೆ ಮಾಡಿರಲಿಲ್ಲ. ಆದರೆ ಧರಣೇಶ್‍ಗೆ ಮದುವೆ ಆಗಬೇಕು ಅನ್ನೋ ಆಸೆ ಇತ್ತಾದ್ರೂ ಹೃದಯದ ಕಾಯಿಲೆಯಿಂದ ಗುಣಮುಖವಾಗದೆ ಮೃತಪಟ್ಟಿದ್ದರು. ವಧುವಿನ ಕಡೆಯವರಿಗೆ ಜ್ಯೋತಿಷ್ಯದಲ್ಲಿ ಕಂಡು ಬಂದಂತೆ ವಿಶಾಲಕ್ಷಿಗೆ ಮದುವೆ ಮಾಡಬೇಕಾಗಿತ್ತು. ಈ ವೇಳೆ ವರಾನ್ವೇಶಣೆ ನಡೆಸಿದಾಗ ಧರಣೇಶನ ಸಂಬಂಧ ಸಿಕ್ಕಿ ಎಲ್ಲಾ ಮಾತುಕತೆ ನಡೆಸಿ ಸಂಪ್ರದಾಯದಂತೆ ಮದುವೆ ಕಾರ್ಯ ಮಾಡಲಾಗಿದೆ.

    ತುಳುನಾಡಿನಲ್ಲಿ ಆಷಾಡ ಮಾಸದಲ್ಲಿ ನಡೆಯೋ ಈ ಪ್ರೇತಗಳ ಮದುವೆ ವಿಚಿತ್ರ ಅನಿಸಿದ್ರೂ, ಬಹಳಷ್ಟು ವರ್ಷದಿಂದ ಇದು ನಡೆದುಕೊಂಡು ಬಂದಿದೆ. ಮೃತರ ಆತ್ಮಕ್ಕೆ ಸದ್ಗತಿ ಸಿಕ್ಕಿಲ್ಲದೆ ಇದ್ರೆ ಕುಟುಂಬದ ಸದಸ್ಯರಿಗೆ ಒಂದಲ್ಲಾ ಒಂದು ಸಮಸ್ಯೆ ಕಾಡುತ್ತೆ. ಮದುವೆಯಾಗಲು ಹೊರಟ ಯುವಕ ಯುವತಿಯರಿಗೂ ನಾನಾ ತೊಂದರೆ ಎದುರಾಗುತ್ತದೆ. ಈ ರೀತಿ ಕುಟುಂಬದಲ್ಲಿ ಕಾಣಿಸುವ ಸಮಸ್ಯೆಗಳಿಗೆ ಜ್ಯೋತಿಷ್ಯದಲ್ಲಿ ಕಂಡು ಬರುವ ಪರಿಹಾರವಾಗಿ ಈ ರೀತಿಯ ಮದುವೆಗಳು ನಡೆಯುತ್ತದೆ. ಈ ಪ್ರೇತಾತ್ಮಗಳ ಮದುವೆ ತುಳು ಸಂಪ್ರದಾಯದ ಕಟ್ಟುಪಾಡುಗಳಂತೆ ನಡೆಯೋದೆ ಒಂದು ವಿಶೇಷ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಷಾಢದಲ್ಲಿ ದೀಪಾರತಿ ಹರಕೆ ಹೊತ್ತರೆ ಕಂಕಣ, ಮಕ್ಕಳ ಭಾಗ್ಯ ಸಿಗೋ ನಂಬಿಕೆ

    ಆಷಾಢದಲ್ಲಿ ದೀಪಾರತಿ ಹರಕೆ ಹೊತ್ತರೆ ಕಂಕಣ, ಮಕ್ಕಳ ಭಾಗ್ಯ ಸಿಗೋ ನಂಬಿಕೆ

    ಚಾಮರಾಜನಗರ: ಆಷಾಢ (Ashada) ಮಾಸದಲ್ಲಿ ಶುಭ ಕಾರ್ಯಗಳು ನಿಷಿದ್ಧ. ಆದರೆ ದೇವತೆಗಳಿಗೆ ಈ ಮಾಸದಲ್ಲಿ ಹೆಚ್ಚು ಶಕ್ತಿ ಇರುತ್ತದೆ ಎಂಬ ನಂಬಿಕೆಯಿದೆ. ಅದರಲ್ಲೂ ಆಷಾಢ ಶುಕ್ರವಾರಗಳಂದು ದೇವತೆಗಳಿಗೆ ನಿಂಬೆ (Lemon) ಹಣ್ಣಿನಿಂದ ದೀಪ ತಯಾರಿಸಿ ನಿಂಬೆ ಹಣ್ಣಿನ ದೀಪದಾರತಿ ಮಾಡಿದ್ರೆ ಎಲ್ಲಾ ಕಷ್ಟಗಳು ಮಂಜಿನಂತೆ ಮಾಯವಾಗುತ್ತದೆ ಎಂದು ಇತಿಹಾಸ ಹೇಳುತ್ತದೆ.

    ಆಷಾಢ ಶುಕ್ರವಾರ ಬಂತೆಂದೆರೆ ಶಕ್ತಿಯುತವಾದ ದೇವತೆಗಳಿಗೆ ವಿಶೇಷ ಪೂಜೆ ಪುನಸ್ಕಾರಗಳು ನಡೆಯುತ್ತವೆ. ಪ್ರತಿ ವರ್ಷ ಆಷಾಢ ಮಾಸದ ಪ್ರತಿ ಶುಕ್ರವಾರ ಮಹಿಳೆಯರು ನಿಂಬೆ ಹಣ್ಣಿನಿಂದ ದೀಪ ತಯಾರಿಸಿ ದೇವತೆಗಳಿಗೆ ಆರತಿ ಮಾಡುವುದು ಸಾಮಾನ್ಯ. ಈ ಹಿನ್ನೆಲೆಯಲ್ಲಿ ಚಾಮರಾಜನಗರದ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿರುವ ಚಾಮುಂಡೇಶ್ವರಿ ದೇವಾಲಯಕ್ಕೆ ಮಹಿಳೆಯರು (Women) ನಿಂಬೆಹಣ್ಣಿನ ಆರತಿ ಸಲ್ಲಿಸಿ ಪೂಜೆ ಮಾಡಿದ್ರು. ದೇವತೆಗಳಿಗೆ ಪ್ರಿಯವಾದ ನಿಂಬೆ ಹಣ್ಣಿನ ದೀಪದಿಂದ ಪೂಜೆ ಸಲ್ಲಿಸಿದರೆ ಸಕಲ ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂಬ ನಂಬಿಕೆ ಇದೆ. ವಿವಾಹಿತೆಯರು ತಮ್ಮ ಮುತ್ತೈದೆ ಭಾಗ್ಯ ದೀರ್ಘಕಾಲ ಉಳಿಯಲಿ ಎಂದು ನಿಂಬೆ ಹಣ್ಣಿನ ಆರತಿ ಮಾಡಿದರೆ, ಯುವತಿಯರು ಆದಷ್ಟು ಬೇಗ ಕಂಕಣಭಾಗ್ಯ ಕೂಡಿ ಬರಲಿ ಎಂದು ಭಕ್ತಿಯಿಂದ ಪೂಜೆ ಸಲ್ಲಿಸುತ್ತಾರೆ. ಇದನ್ನೂ ಓದಿ: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸುಧಾಕರ್ ಮಾನನಷ್ಟ ಮೊಕದ್ದಮೆ

    ಈಶ್ವರ ಅಭಿಷೇಕ ಪ್ರಿಯನಾದರೆ, ವಿಷ್ಣು ಅಲಂಕಾರ ಪ್ರಿಯ. ಆದೇ ರೀತಿ ಚಾಮುಂಡೇಶ್ವರಿ ದೇವಿ ಸ್ತೋತ್ರ ಪ್ರಿಯಳಾಗಿದ್ದಾಳೆ. ಆಷಾಢ ಮಾಸದಲ್ಲಿ ದೇವಿಯನ್ನು ಸ್ಮರಿಸಿ ಸ್ತೋತ್ರ ಹೇಳಿದರೆ ದೇವಿ ನಮ್ಮೆಲ್ಲಾ ಕಷ್ಟಗಳನ್ನು ದೂರ ಮಾಡುತ್ತಾಳೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿಗೆ ಮಹಿಳೆಯರು ಆಗಮಿಸಿ ಇಷ್ಟಾರ್ಥ ಈಡೇರಲಿ ಎಂದು ನಿಂಬೆಹಣ್ಣಿನ ಆರತಿ ಮಾಡುತ್ತಾರೆ. ಇನ್ನೂ ಕೆಲವರು ಸೇಬು, ನಿಂಬೆ, ಕಿತ್ತಲೆ ಸೇರಿದಂತೆ ವಿವಿಧ ಬಗೆಯ ಹಣ್ಣಿನ ಹಾರ ತಯಾರಿಸಿ ದೇವರಿಗೆ ಅರ್ಪಿಸುತ್ತಾರೆ. ನಿಂಬೆಹಣ್ಣಿಗೆ ಆಕರ್ಷಣಾ ಶಕ್ತಿ ಹೆಚ್ಚು. ಹೀಗಾಗಿ ನಿಂಬೆಹಣ್ಣನ್ನು ದೇವತಾ ಪಾದಕ್ಕೆ ಹಿಂಡಿ ಅದರ ಸಿಪ್ಪೆಯಿಂದ ದೀಪ ತಯಾರಿಸಿ ಅದರಿಂದ ಆರತಿ ಮಾಡಿದರೆ ಸಕಲ ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂಬ ನಂಬಿಕೆ ಇದೆ.

    ಒಟ್ಟಾರೆ ಆಷಾಢ ಶುಕ್ರವಾರವಾದ ಇಂದು ಚಾಮುಂಡೇಶ್ವರಿ ದೇವಾಲಯದಲ್ಲಿ (Chamundeshwri Temple) ಭಕ್ತರ ದಂಡೆ ನೆರೆದಿತ್ತು. ದೇವಾಲಯದ ಅಂಗಳದ ತುಂಬಾ ಮಹಿಳೆಯರು ನಿಂಬೆ ಹಣ್ಣಿನಿಂದ ದೀಪ ತಯಾರಿಸಿ ದೇವಿಗೆ ಆರತಿ ಬೆಳಗುತ್ತಿದ್ದ ದೃಶ್ಯ ಕಣ್ಮನ ಸೆಳೆಯಿತು. ಒಟ್ಟಾರೆ ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಹರಸಿ ಕಾಪಾಡಲಿ ಎಂಬುದು ಎಲ್ಲರ ಆಶಯ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮಕ್ಕೆ ಕ್ಷಣಗಣನೆ

    ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮಕ್ಕೆ ಕ್ಷಣಗಣನೆ

    – ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ನೋ ಎಂಟ್ರಿ
    – ಭಕ್ತರಿಗೆ ಉಚಿತ ಪ್ರಯಾಣಕ್ಕೆ 50 ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ

    ಮೈಸೂರು: ಚಾಮುಂಡಿ ಬೆಟ್ಟದಲ್ಲಿ (Chamundi Hills) ಮೊದಲ ಆಷಾಢ ಶುಕ್ರವಾರದ (Ashada Friday) ಸಂಭ್ರಮಕ್ಕೆ ಕೌಂಟ್‌ಡೌನ್‌ ಶುರುವಾಗಿದೆ. ಬೆಟ್ಟಕ್ಕೆ ಪ್ರತಿ ಆಷಾಢ ಶುಕ್ರವಾರದಂದು ಖಾಸಗಿ ವಾಹನಗಳಿಗೆ ನಿರ್ಬಂಧ ವಿಧಿಸಲಾಗುತ್ತದೆ. ಅಂತೆಯೇ ಈ ಬಾರಿಯೂ ಖಾಸಗಿ ಬಸ್‌ಗಳಿಗೆ ನಿರ್ಬಂಧ ವಿಧಿಸಿದ್ದು, ಸರ್ಕಾರಿ ಬಸ್‌ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಆಷಾಢ ಪೂಜಾ ಕೈಂಕರ್ಯಗಳಿಗೆ ಸಿದ್ಧತೆ ಜೋರಾಗಿದೆ.

    ಆಷಾಢ ಶುಕ್ರವಾರ ಬಂದ್ರೆ ಸಾಕು ಅರಮನೆ ನಗರಿ ಮೈಸೂರು (Mysuru) ಹಾಗೂ ಚಾಮುಂಡಿ ಭಕ್ತರಿಗೆ ಸಂಭ್ರಮವೋ ಸಂಭ್ರಮ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ನಾಳೆ ನಾಡದೇವತೆ, ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ನಾಳೆ ಮುಂಜಾನೆ 3 ಗಂಟೆ 30 ನಿಮಿಷಕ್ಕೆ ಅಭಿಷೇಕದೊಂದಿಗೆ ಆರಂಭವಾಗುವ ವಿವಿಧ ರೀತಿಯ ಪೂಜಾ ಕೈಂಕರ್ಯ ಎರಡು ಗಂಟೆಗಳ ಕಾಲ ನಿರಂತರವಾಗಿ ನಡೆಯಲಿವೆ. ನಾಳೆ ದೇವಿಗೆ ಲಕ್ಷ್ಮೀ ಅಲಂಕಾರ ಮಾಡಿ ಬಳಿಕ‌ 5 ಗಂಟೆ 30 ನಿಮಿಷಕ್ಕೆ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ. ಇದನ್ನೂ ಓದಿ: ಮೈಸೂರಿನ ಶ್ರೀಗಂಧದ ಪೆಟ್ಟಿಗೆಯಲ್ಲಿ ಬೈಡನ್‌ಗೆ ಉಡುಗೊರೆ – ಮೋದಿ ಕೊಟ್ಟ ಗಿಫ್ಟ್ ಬಾಕ್ಸ್‌ನಲ್ಲಿ ಏನಿದೆ?

    ಆಷಾಢ ಶುಕ್ರವಾರದ ಪೂಜೆಗೆ ಚಾಮುಂಡಿಬೆಟ್ಟದಲ್ಲಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಕಿರಿದಾದ ಬೆಟ್ಟದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಬಾರದೆಂದು ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. ಬೆಟ್ಟಕ್ಕೆ ಹೋಗಲು ಭಕ್ತರಿಗೆ ಜಿಲ್ಲಾಡಳಿತ 50 ಕೆಎಸ್ಆರ್‌ಟಿಸಿ ಬಸ್ಸಿನ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ನಗರದ ಲಲಿತಮಹಲ್ ಹೆಲಿಪ್ಯಾಡ್‌ ಸಮೀಪದಿಂದ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಲಲಿತಾ ಮಹಲ್ ಪ್ಯಾಲೆಸ್‌ ಹೆಲಿಪ್ಯಾಡ್‌ನಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ 300 ಮತ್ತು 50 ರೂಪಾಯಿ ಟಿಕೆಟ್ ಇರಲಿದೆ.

    ಪ್ರಸಾದ ಕೌಂಟರ್‌ಗಳಲ್ಲಿ ಫುಡ್ ಸೇಫ್ಟಿ ಆಫೀಸರ್‌ಗಳ ತಂಡ ಇರಲಿದೆ. ದೊಡ್ಡ ಮಟ್ಟದಲ್ಲಿ ಪ್ರಸಾದ ವಿತರಣೆ ಮಾಡುವವರು ಫುಡ್ ಸೇಫ್ಟಿ ಆಫೀಸರ್ ಬಳಿ ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯವಾಗಿದೆ. ಇದನ್ನೂ ಓದಿ: 13 ಬಾರಿ ಬಜೆಟ್ ಕೊಟ್ಟ ಕೂಡಲೇ ಗದ್ದೆಯಲ್ಲಿ ಭತ್ತ ಬೆಳೆದು ಅಕ್ಕಿ ಕೊಡೋಕೆ ಆಗಲ್ಲ: ಸಿದ್ದುಗೆ ಡಿವಿಎಸ್ ಟಾಂಗ್

    ಆಷಾಢ ಶುಕ್ರವಾರದಂದು ಶಕ್ತಿ ದೇವತೆಯನ್ನು ಪೂಜಿಸಿದವರಿಗೆ ವಿಘ್ನಗಳು ನಿರವಾರಣೆಯಾಗಿ, ಇಷ್ಠಾರ್ಥ ಸಿದ್ಧಿಸುತ್ತದೆ ಅನ್ನೋ ನಂಬಿಕೆಯಿದೆ. ಈ ನಿಟ್ಟಿನಲ್ಲಿ ಮೈಸೂರು ಮಾತ್ರವಲ್ಲದೆ ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯದ ಲಕ್ಷಾಂತರ ಭಕ್ತರು ಸಹ ಆಗಮಿಸುತ್ತಿದ್ದಾರೆ. ಒಟ್ಟಾರೆ ಸಾಂಸ್ಕತಿಕ ನಗರಿ ಮೈಸೂರಿನಲ್ಲಿ ಆಷಾಢ ಮಾಸದ‌ ಪೂಜೆಗೆ ಸಿದ್ಧತೆ ಜೋರಾಗಿ ನಡೆದಿದೆ.

  • ಭೀಮನ ಅಮಾವಾಸ್ಯೆಯ ವಿಶೇಷತೆ ಏನು?

    ಭೀಮನ ಅಮಾವಾಸ್ಯೆಯ ವಿಶೇಷತೆ ಏನು?

    ಭೀಮನ ಅಮಾವಾಸ್ಯೆಯು ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ಭಾಗಗಳಲ್ಲಿ ಆಚರಿಸಲಾಗುವ ಹಬ್ಬವಾಗಿದೆ. ಇದನ್ನು ಹಿಂದೂ ಕ್ಯಾಲೆಂಡರ್‍ನ ಆಷಾಢ ಮಾಸದ ಕೊನೆ ಅಮಾವಾಸ್ಯೆವೆಂದು ಆಚರಿಸಲಾಗುತ್ತದೆ.

    ಭಾರತೀಯ ಸಂಪ್ರದಾಯದಂತೆ ಹಿಂದೂಗಳು ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಆದರೆ ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ನವದಂಪತಿಗಳು ಸಡಗರದಿಂದ ಆಚರಿಸುತ್ತಾರೆ. ಈ ವ್ರತಕ್ಕೆ ‘ಪತಿ ಸಂಜೀವಿನಿ ವ್ರತ’ ಎಂದೂ ಕರೆಯುವುದುಂಟು. ಪತಿಗೆ ದೀರ್ಘಾಯುಷ್ಯವನ್ನು ಕರುಣಿಸುವಂತೆ, ತಮ್ಮನ್ನು ದೀರ್ಘ ಸುಮಂಗಲಿಯಾಗಿ ಹರಸುವಂತೆ ಕೋರಿ ಶಿವನನ್ನು ಪೂಜಿಸುವ ಹಬ್ಬವೇ ಭೀಮನ ಅಮಾವಾಸ್ಯೆ.

    ಈ ದಿನ ಮದುವೆಯಾದ ಹೆಂಗಸರು ಮಾತ್ರವಲ್ಲ, ಮದುವೆಯಾಗದ ಹೆಣ್ಣುಮಕ್ಕಳು ಕೂಡ ಆಚರಿಸಬಹುದು. ಮದುವೆಯಾಗದ ಹೆಣ್ಣುಮಕ್ಕಳು ಒಳ್ಳೆ ಗಂಡ ಸಿಗಲಿ ಎಂದು ಹಾಗೂ ಮದುವೆಯಾದ ಹೆಣ್ಣು ತನ್ನ ಗಂಡನ ಆಯುಷ್ಯ ಹೆಚ್ಚಲಿ ಎಂದು ದೇವರನ್ನು ಪ್ರಾರ್ಥಿಸಿ ಈ ವ್ರತ ಕೈಗೊಳ್ಳುತ್ತಾರೆ.

    ಪೂಜಾ ವಿಧಾನ
    ಗೃಹಿಣಿಯರು ಕೈಗೆ ಕಂಕಣ ಕಟ್ಟಿಕೊಂಡು ಜ್ಯೋರ್ತಿಭೀಮೇಶ್ವರನ್ನು ಧ್ಯಾನಿಸಿ, ವ್ರತ ಕೈಗೊಳ್ಳಬೇಕು. ರಾಹುಕಾಲ ಹೊರತುಪಡಿಸಿ ಬೆಳಗ್ಗೆ ಅಥವಾ ಸಂಜೆ ಯಾವುದೇ ಶುಭ ಮುಹೂರ್ತದಲ್ಲಿ ವ್ರತ ಕೈಗೊಳ್ಳಬಹುದು.

    ಒಂದು ತಟ್ಟೆಯಲ್ಲಿ ಅಕ್ಕಿ ಹಾಕಿ, ಅದರ ಮೇಲೆ ಎರಡು ದೀಪದ ಕಂಭ ನೆಟ್ಟು, ದೀಪದ ಎಣ್ಣೆ ಹಾಕಿ ಹಚ್ಚಬೇಕು. ಈ ದೀಪಸ್ತಂಭದಲ್ಲಿ ಶಿವ ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಸಲ್ಲಿಸುತ್ತಾರೆ. ಪೂಜಾ ಸಾಮಗ್ರಿಗಳ ಜೊತೆಗೆ 9 ಗಂಟಿನ ಗೌರಿ ದಾರ ಇಟ್ಟು ಪೂಜೆ ಮಾಡಿ ಆ ಬಳಿಕ ಕೈಗೆ ಕಟ್ಟಿಕೊಳ್ಳಬೇಕು. ಮೊದಲು ಗಣಪತಿ ಪೂಜೆ ಮಾಡಿ ನಂತರ ಭೀಮೇಶ್ವರನ ಪೂಜೆ ಮಾಡುತ್ತಾರೆ. ನೈವೇದ್ಯಕ್ಕೆ 9 ಕರಿಗಡುಬು ಅರ್ಪಿಸಲಾಗುತ್ತದೆ. ಆ ಬಳಿಕ ಗಂಡನ ಪಾದಪೂಜೆಯನ್ನು ನೆರವೇರಿಸಬೇಕು.

    ಆಚರಣೆ ವಿಧಾನ ಭಿನ್ನ
    ವ್ರತಾಚರಣೆ ಪ್ರಾಂತ್ಯದಿಂದ ಪ್ರಾಂತ್ಯಕ್ಕೆ ಭಿನ್ನತೆಯಿಂದ ಕೂಡಿದೆ. ಉದ್ದೇಶ ಒಂದೇ ಆದರೂ, ಆಚರಣೆಯಲ್ಲಿ ವಿವಿಧತೆಯನ್ನು ಕಾಣಬಹುದು. ದಕ್ಷಿಣ ಕನ್ನಡದಲ್ಲಿ ಇದನ್ನು ‘ಆಟಿ ಅಮಾವಾಸ್ಯೆ’ ಎಂದು ಕರೆಯುತ್ತಾರೆ. ಈ ದಿನದಂದು ಆ ಭಾಗದ ಸಂಸ್ಕೃತಿ, ಆಚಾರ, ವಿಚಾರಗಳನ್ನು ಬಿಂಬಿಸುವ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಇದಕ್ಕೆ ‘ಕೊಡೆ ಅಮಾವಾಸ್ಯೆ’ ಎಂದು ಕರೆಯುತ್ತಾರೆ. ಈ ದಿನದಂದು ಮಗಳೊಂದಿಗೆ ಮನೆಗೆ ಬಂದು ಅಳಿಯನಿಗೆ ಮಾವ ಕೊಡೆ ನೀಡಿ ಸತ್ಕರಿಸುತ್ತಾರೆ.

    ಪೌರಾಣಿಕ ಹಿನ್ನೆಲೆ
    ಪುರಾಣಗಳ ಪ್ರಕಾರ ಶಿವನು ಪಾರ್ವತಿಯನ್ನು ಪತ್ನಿಯನ್ನಾಗಿ ಸ್ವೀಕರಿಸಿದ್ದು, ಭೀಮನ ಅಮಾವಾಸ್ಯೆ ದಿನ. ಪಾರ್ವತಿ ಸಮೃದ್ಧಿ, ಸಂತಾನ, ಪತಿವ್ರತೆ, ಶಕ್ತಿಯ ಸಂಕೇತ. ಹೀಗಾಗಿ ಈ ದಿನದಂದು ಹೆಂಗಳೆಯರು ವ್ರತ ಕೈಗೊಂಡು ಶಿವ ಮತ್ತು ಪಾರ್ವತಿಯನ್ನು ಆರಾಧಿಸಿದರೆ ಅವರಿಗೆ ಉತ್ತಮನಾದ ಗಂಡ ಸಿಗುತ್ತಾನೆ. ಅದೇ ರೀತಿ ವಿವಾಹಿತ ಹೆಂಗಸರು ಗಂಡನಿಗೆ ದೀರ್ಘಾಯುಷ್ಯ, ಯಶಸ್ಸು ಹಾಗೂ ಸಂತೋಷವನ್ನು ಬಯಸಿ ಪೂಜೆ ಸಲ್ಲಿಸುತ್ತಾರೆ.

    Live Tv
    [brid partner=56869869 player=32851 video=960834 autoplay=true]

  • ಫಾರ್ಮ್ ಹೌಸ್‍ನಲ್ಲೇ ಚಾಮುಂಡಿ ತಾಯಿಗೆ ದರ್ಶನ್ ವಿಶೇಷ ಪೂಜೆ

    ಫಾರ್ಮ್ ಹೌಸ್‍ನಲ್ಲೇ ಚಾಮುಂಡಿ ತಾಯಿಗೆ ದರ್ಶನ್ ವಿಶೇಷ ಪೂಜೆ

    ಮೈಸೂರು: ಇಂದು ಕೊನೆಯ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಭಕ್ತರೆಲ್ಲರೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಹೋಗಿ ತಾಯಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ಆದರೆ ನಟ ದರ್ಶನ್ ಅವರು ತಮ್ಮ ಫಾರ್ಮ್ ಹೌಸ್‍ನಲ್ಲಿಯೇ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ನಟ ದರ್ಶನ್ ಅವರು ಪ್ರತಿವರ್ಷ ಆಷಾಢದ ಮೊದಲ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಹೋಗಿ ತಾಯಿ ದರ್ಶನ ಮಾಡಿಕೊಂಡು ವಿಶೇಷ ಪೂಜೆ ಸಲ್ಲಿಸುತ್ತಾರೆ. ಇಂದು ಆಷಾಢದ ಕೊನೆಗೆ ಶುಕ್ರವಾರವಾಗಿದ್ದು, ಮೈಸೂರಿನಲ್ಲಿರುವ ಫಾರ್ಮ್ ಹೌಸ್‍ನಲ್ಲಿದ್ದ ಚಾಮುಂಡಿ ವಿಗ್ರಹಕ್ಕೆ ಪೂಜೆ ಸಲ್ಲಿಸಿದ್ದಾರೆ.

    ತಾಯಿ ಚಾಮುಂಡಿ ತಾಯಿಯ ವಿಗ್ರಹಕ್ಕೆ ಹೊಸ ಸೀರೆ ತೊಡಿಸಿ, ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ದರ್ಶನ್ ಅವರು ತಾಯಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದ್ದಾರೆ. ನಟ ದರ್ಶನ್ ಜೊತೆ ಅವರ ಸ್ನೇಹಿತರು ಮತ್ತು ಫಾರ್ಮ್ ಹೌಸ್‍ನ ಸಿಬ್ಬಂದಿ ಪೂಜೆಯಲ್ಲಿ ಭಾಗಿಯಾಗಿದ್ದರು. ದರ್ಶನ್ ತಾಯಿಗೆ ಪೂಜೆ ಸಲ್ಲಿಸುತ್ತಿರುವ ಫೋಟೋಗಳನ್ನು ಕ್ಲಿಕ್ಕಿಸಿಕೊಂಡು ಅವರ ಅಭಿಮಾನಿಗಳ ಬಳಗ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ.

    ಮೈಸೂರಿನಲ್ಲಿ ಇಂದು ಮುಂಜಾನೆ 5.15 ರಿಂದಲೇ ಭಕ್ತರಿಗೆ ಚಾಮುಂಡಿ ತಾಯಿ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಬಂದು ತಾಯಿಯ ದರ್ಶನ ಮಾಡುತ್ತಿದ್ದಾರೆ. ರಾತ್ರಿ 10.30ರ ವರೆಗೂ ದೇವಿಯ ದರ್ಶನಕ್ಕೆ ಆಗಮಿಸಬಹುದು ಎಂದು ದೇವಾಲಯದ ಅರ್ಚಕರು ಮಾಹಿತಿ ನೀಡಿದ್ದಾರೆ.

  • ಅದ್ಧೂರಿಯಾಗಿ ನಡೆದ ಆಷಾಢದಲ್ಲಿ ನವದಂಪತಿ ಸೇರುವ ಜಾತ್ರಾ ಮಹೋತ್ಸವ

    ಅದ್ಧೂರಿಯಾಗಿ ನಡೆದ ಆಷಾಢದಲ್ಲಿ ನವದಂಪತಿ ಸೇರುವ ಜಾತ್ರಾ ಮಹೋತ್ಸವ

    ರಾಮನಗರ: ಆಷಾಢ ಮಾಸದಲ್ಲಿ ನೂತನ ದಂಪತಿಗಳನ್ನು ಬೇರೆ ಮಾಡಿ, ಹೆಣ್ಣನ್ನು ತವರು ಮನೆಗೆ ಕಳಿಸುವುದು ವಾಡಿಕೆ. ಯಾಕೆಂದರೆ ಆಷಾಢ ಮಾಸದಲ್ಲಿ ಅತ್ತೆ-ಸೊಸೆ ಒಂದೇ ಬಾಗಿಲಿನಲ್ಲಿ ಓಡಾಡಿದರೆ ಕೇಡಾಗುತ್ತೆ ಎನ್ನಲಾಗುತ್ತದೆ.

    ಆದರೆ ದಂಪತಿಗಳನ್ನು ಆಷಾಢದಲ್ಲಿ ಒಂದೆಡೆ ಸೇರಿಸುವಂತಹ ಜಾತ್ರಾ ಮಹೋತ್ಸವ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರ ಹೊಸಹಳ್ಳಿಯಲ್ಲಿ ನಡೆಯುತ್ತದೆ. ನೂತನ ದಂಪತಿಗಳನ್ನು ಒಂದೆಡೆ ಸೇರಿಸುವ ಸಂಜೀವರಾಯಸ್ವಾಮಿಯ ಜಾತ್ರಾ ಮಹೋತ್ಸವ ಇಂದು ಅದ್ಧೂರಿಯಾಗಿ ನಡೆಯಿತು.

    ದೇವರ ಹೊಸಹಳ್ಳಿಯ ಪುರಾತನವಾದ ಸಂಜೀವರಾಯ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಹೊಸ ದಂಪತಿಗಳು ಇಲ್ಲಿಗೆ ಬಂದು ದೇವರಲ್ಲಿ ಇಷ್ಟಾರ್ಥವನ್ನು ನೆನೆದು ಪೂಜೆ ಸಲ್ಲಿಸುತ್ತಾರೆ. ಅಲ್ಲದೇ ನೂತನ ದಂಪತಿಗಳು ಈ ದೇವರ ಸನ್ನಿಧಿಯಲ್ಲಿ ಸಂತಾನ ಬಯಸಿ ಪೂಜೆ ಸಲ್ಲಿಸಿದರೆ ಇಷ್ಟಾರ್ಥ ನೆರವೇರುತ್ತೆ ಎಂಬ ಪ್ರತೀತಿ ಸಹ ಇದೆ. ಬೇರೆಯಾಗಿರುವ ದಂಪತಿಗಳಿಗೆ ಈ ಜಾತ್ರೆ ವೇದಿಕೆಯಾಗಿದ್ದು ರಾಮನಗರ ಜಿಲ್ಲೆ ಅಲ್ಲದೇ ಸುತ್ತಮುತ್ತಲ ಜಿಲ್ಲೆಯ ನೂತನ ದಂಪತಿಗಳು ಸಹ ಇಂದು ನಡೆದ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.

    ಆಷಾಢದ ವಿರುದ್ಧವಾಗಿ ನಡೆಯುವ ಜಾತ್ರೆಗಳಲ್ಲಿ ಸಂಜೀವರಾಯ ಸ್ವಾಮಿಯ ಜಾತ್ರೆಯೂ ಕೂಡಾ ಒಂದಾಗಿದ್ದು, ಬ್ರಹ್ಮರಥೋತ್ಸವದಲ್ಲಿ ನೂತನ ದಂಪತಿಗಳು ಇಷ್ಟಾರ್ಥವನ್ನು ನೆನೆದು ರಥವನ್ನು ಎಳೆದು ಜಾತ್ರೆಯಲ್ಲೆಲ್ಲ ದಂಪತಿಗಳು ಕೈ ಕೈ ಹಿಡಿದು ಓಡಾಡಿದ್ದು ವಿಶೇಷವಾಗಿತ್ತು.

  • ಆಷಾಢ ಬಳಿಕ ಸಂಪುಟ ವಿಸ್ತರಣೆ ಹಿನ್ನೆಲೆ- ಕಾಂಗ್ರೆಸ್‍ನಲ್ಲಿ ತೀವ್ರಗೊಂಡ ಲಾಬಿ

    ಆಷಾಢ ಬಳಿಕ ಸಂಪುಟ ವಿಸ್ತರಣೆ ಹಿನ್ನೆಲೆ- ಕಾಂಗ್ರೆಸ್‍ನಲ್ಲಿ ತೀವ್ರಗೊಂಡ ಲಾಬಿ

    ಬೆಂಗಳೂರು: ಆಷಾಢ ಮುಗಿಯೋದು ಹತ್ತಿರವಾಗುತ್ತಿದ್ದಂತೆಯೇ ಕಾಂಗ್ರೆಸ್ ಶಾಸಕರು ಫುಲ್ ಆಕ್ಟಿವ್ ಆಗಿದ್ದಾರೆ. ಸಚಿವ ಸ್ಥಾನ ಆಕಾಂಕ್ಷಿಗಳು ಹೈಕಮಾಂಡ್ ಭೇಟಿ ಮಾಡಲು ದೆಹಲಿ ಕಡೆ ಪ್ರಯಾಣ ಬೆಳೆಸಿದ್ದಾರೆ.

    ಸಚಿವ ರಮೇಶ್ ಜಾರಕಿಹೋಳಿ ನೇತೃತ್ವದಲ್ಲಿ ಎಂಟು ಜನ ಶಾಸಕರು ಹೈಕಮಾಂಡ್ ಭೇಟಿಗೆ ದೆಹಲಿ ತೆರಳಿದ್ದಾರೆ. ಆಷಾಢ ಬಳಿಕ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ನೇಮಕ ಮಾಡಲಾಗುತ್ತೆ ಅಂಥ ಹೈಕಮಾಂಡ್ ಹೇಳಿತ್ತು. ಹೀಗಾಗಿ ಆಷಾಢ ಮುಗಿಯೊಕೆ ಇನ್ನು ಒಂದು ವಾರ ಬಾಕಿ ಇರುವಾಗಲೇ ಶಾಸಕರು ಕಸರತ್ತು ಆರಂಭಿಸಿದ್ದಾರೆ.

    ಸಚಿವ ರಮೇಶ್ ಜಾರಕೀಹೊಳಿ, ಎಂಬಿ ಪಾಟೀಲ್, ಪ್ರತಾಪ್ ಗೌಡ ಪಾಟೀಲ್, ಬಿ.ನಾಗೇಂದ್ರ, ನಾರಯಣ್ ರಾವ್ ರಹೀಂ ಖಾನ್ ಸೇರಿದಂತೆ ಒಟ್ಟು ಎಂಟು ಜನ ಶಾಸಕರು ಇಂದು ರಾಜ್ಯ ಚುನಾವಣಾ ಉಸ್ತುವಾರಿ ಕೆ.ವೇಣುಗೋಪಾಲ್ ಭೇಟಿಯಾಗಲಿದ್ದಾರೆ. ಜೊತೆಗೆ ಹೈಕಮಾಂಡ್ ಭೇಟಿಗೂ ಪ್ರಯತ್ನಿಸಲಿದ್ದು, ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಹಾಗೂ ಪ್ರಮುಖ ನಿಗಮ ಮಂಡಳಿ ನೀಡುವಂತೆ ಒತ್ತಾಯಿಸಲಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಆಷಾಢ ಮಾಸ ನಿಮಗೆ ಮಾತ್ರ, ನಮಗೆ ಏನು ಇಲ್ಲ: ಸಿದ್ದರಾಮಯ್ಯ ಪಟ್ಟಿಗೆ ದೇವೇಗೌಡರು ಗ್ರೀನ್ ಸಿಗ್ನಲ್ ಕೊಡ್ತಾರಾ?

    ಆಷಾಢ ಮಾಸ ನಿಮಗೆ ಮಾತ್ರ, ನಮಗೆ ಏನು ಇಲ್ಲ: ಸಿದ್ದರಾಮಯ್ಯ ಪಟ್ಟಿಗೆ ದೇವೇಗೌಡರು ಗ್ರೀನ್ ಸಿಗ್ನಲ್ ಕೊಡ್ತಾರಾ?

    ಬೆಂಗಳೂರು: ಆಷಾಢ ಮಾಸ ನಿಮಗೆ ಮಾತ್ರ, ನಮಗೆ ಏನು ಇಲ್ಲ. ಈಗಲೇ ನಿಗಮ ಮಂಡಳಿ ನೇಮಕಾತಿ ಆಗಬೇಕು ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಪಟ್ಟು ಹಿಡಿದಿದ್ದಾರೆ.

    ಶಾಸಕರಿಗೆ ಸಬೂಬು ಹೇಳಲು ನಮ್ಮಿಂದ ಆಗುತ್ತಿಲ್ಲ. ಹೀಗಾಗಿ ಈ ಮೊದಲೇ ನಿರ್ಧರಿಸಿದಂತೆ ನಿಗಮ ಮಂಡಳಿಯ ಒಟ್ಟು 30 ಸ್ಥಾನಗಳಲ್ಲಿ ಕಾಂಗ್ರೆಸ್ಸಿಗೆ 20 ಹಾಗೂ ಜೆಡಿಎಸ್‍ಗೆ 10 ಸ್ಥಾನ ಹಂಚಿಕೆಯಾಗಬೇಕು. ನೇಮಕ ಪ್ರಕ್ರಿಯೆ ಈಗಲೇ ಆಗಬೇಕು ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಒತ್ತಾಯಿಸಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ನಿಗಮ ಮಂಡಳಿ ನೇಮಕದಿಂದ ಮುನಿಸಿಕೊಂಡಿರುವ ಕಾಂಗ್ರೆಸ್ ಶಾಸಕರನ್ನು ಸಮಾಧಾನ ಪಡಿಸಲು ಸಿದ್ದರಾಮಯ್ಯ ಅವರು ನಿರ್ಧರಿಸಿದ್ದಾರೆ. ಹೀಗಾಗಿ ಆಷಾಢದಲ್ಲಿಯೇ ಕಾಂಗ್ರೆಸ್ ಶಾಸಕರಿಗೆ ಬಂಪರ್ ಗಿಫ್ಟ್ ಸಿಗುವ ಸಾಧ್ಯತೆ ಇದೆ.

    ಆಷಾಢ ಮುಗಿಯುವವರೆಗೆ ಯಾವುದೇ ನೇಮಕಾತಿ ಬೇಡ ಎಂದು ದೇವೇಗೌಡ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಹೇಳಿದ್ದರು. ಆದರೆ ಈಗ ಸಿದ್ದರಾಮಯ್ಯ ಅವರು ಪಟ್ಟು ಹಿಡಿದಿದ್ದರಿಂದ ಸಮ್ಮಿಶ್ರ ಸರ್ಕಾರಕ್ಕೆ ಮತ್ತೊಂದು ಸವಾಲು ಎದುರಾಗಿದೆ.