Tag: ashada masa

  • ಆಷಾಢ ಮಾಸದ ಕೊನೆ ಶುಕ್ರವಾರ – ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ

    ಆಷಾಢ ಮಾಸದ ಕೊನೆ ಶುಕ್ರವಾರ – ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ

    ಮೈಸೂರು: ಆಷಾಢ ಮಾಸದ (Ashada Masa) ಕೊನೆಯ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ (Chamundi Hill) ಸಡಗರ-ಸಂಭ್ರಮ ಮನೆ ಮಾಡಿದೆ. ಕೊನೆಯ ಆಷಾಢ ಶುಕ್ರವಾರವಾದ ಕಾರಣ ನಾಡ ಅದಿದೇವತೆ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ.

    ನಾಡ ಅದಿದೇವತೆಗೆ ವಿಶೇಷ ಅಲಂಕಾರ ಮಾಡಲಾಗಿದೆ. ದೇವಾಲಯದ ಆವರಣವನ್ನೂ ವಿಶೇಷ ಹೂಗಳಿಂದ ಅಲಂಕಾರ ಮಾಡಲಾಗಿದೆ. ಮುಂಜಾನೆ 3 ಗಂಟೆಯಿಂದಲೇ ರಾಜ್ಯದ ನಾನಾ ಕಡೆಗಳಿಂದ ಆಗಮಿಸುತ್ತಿರುವ ಭಕ್ತರು ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಚಂದ್ರಯಾನ-3 ಗಗನನೌಕೆ ಉಡಾವಣೆಗೆ ಕೌಂಟ್‌ಡೌನ್‌

    ಆಷಾಢ ಮಾಸದ ಕೊನೆ ಶುಕ್ರವಾರವಾದ ಇಂದು ಬೆಳಗ್ಗೆ 5:30 ರಿಂದ ಭಕ್ತರಿಗೆ ಚಾಮುಂಡಿ ತಾಯಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಚಾಮುಂಡಿ ತಾಯಿಗೆ ಮುಂಜಾನೆಯೇ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ನಂತರ ಮಹಾಮಂಗಳಾರತಿ ಮಾಡಲಾಗಿದೆ.

    ಬೆಳಗ್ಗೆ‌ 5:30 ರಿಂದ ರಾತ್ರಿ 11 ಗಂಟೆಯವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷ ದರ್ಶನಕ್ಕೆ 300 ರೂ. ಹಾಗೂ 50 ರೂ. ಟಿಕೆಟ್ ದರವಿದೆ. ಮೆಟ್ಟುಲುಗಳ ಮೂಲಕ ಚಾಮುಂಡಿ ತಾಯಿ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದಾರೆ. ಇದನ್ನೂ ಓದಿ: KMDC ಸಾಲ ವಸೂಲಾತಿ 50% ಪ್ರಗತಿ ತೋರಿಸಲು ಸಚಿವ ಜಮೀರ್ ಟಾರ್ಗೆಟ್!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಷಾಢ ಮಾಸದಲ್ಲಿ ಚಾಮುಂಡೇಶ್ವರಿಗೆ ನಿಂಬೆ ಹಣ್ಣಿನ ಪೂಜೆ? – ಏನಿದರ ವಿಶೇಷತೆ?

    ಆಷಾಢ ಮಾಸದಲ್ಲಿ ಚಾಮುಂಡೇಶ್ವರಿಗೆ ನಿಂಬೆ ಹಣ್ಣಿನ ಪೂಜೆ? – ಏನಿದರ ವಿಶೇಷತೆ?

    ಚಾಮರಾಜನಗರ: ಆಷಾಢ ಮಾಸದಲ್ಲಿ ಶುಭಕಾರ್ಯಗಳು ನಿಷಿದ್ಧ. ಆದರೆ ದೇವತೆಗಳಿಗೆ ಈ ಮಾಸದಲ್ಲಿ ಹೆಚ್ಚು ಶಕ್ತಿ ಇರುತ್ತದೆ ಎಂಬ ನಂಬಿಕೆಯಿದೆ. ಅದರಲ್ಲೂ ಆಷಾಢ ಶುಕ್ರವಾರಗಳಂದು ದೇವತೆಗಳಿಗೆ ನಿಂಬೆ ಹಣ್ಣಿನಿಂದ ದೀಪ ತಯಾರಿಸಿ ನಿಂಬೆ ಹಣ್ಣಿನ ದೀಪದಾರತಿ ಮಾಡಿದ್ರೆ ಎಲ್ಲ ಕಷ್ಟಗಳು ಮಂಜಿನಂತೆ ಮಾಯವಾಗುತ್ತದೆ ಎಂದು ಇತಿಹಾಸ ಹೇಳುತ್ತದೆ.

    ಮಹತ್ವವೇನು?
    ಆಷಾಢ ಶುಕ್ರವಾರ ಬಂತೆಂದೆರೆ ಶಕ್ತಿಯುತವಾದ ಹೆಣ್ಣು ದೇವತೆಗಳಿಗೆ ವಿಶೇಷ ಪೂಜೆ ಪುನಸ್ಕಾರಗಳು ನಡೆಯುತ್ತವೆ. ಪ್ರತಿ ವರ್ಷ ಆಷಾಡ ಮಾಸದ ಪ್ರತಿ ಶುಕ್ರವಾರ ಮಹಿಳೆಯರು ನಿಂಬೆ ಹಣ್ಣಿನಿಂದ ದೀಪ ತಯಾರಿಸಿ ಹೆಣ್ಣು ದೇವತೆಗಳಿಗೆ ಆರತಿ ಮಾಡುವುದು ಸಾಮಾನ್ಯ. ಈ ಹಿನ್ನೆಲೆಯಲ್ಲಿ ಚಾಮರಾಜನಗರದ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿರುವ ಚಾಮುಂಡೇಶ್ವರಿ ದೇವಾಲಯಕ್ಕೆ ಮಹಿಳೆಯರು ನಿಂಬೆಹಣ್ಣಿನ ಆರತಿ ಸಲ್ಲಿಸಿ ಪೂಜೆ ಮಾಡಿದ್ರು. ಇದನ್ನೂ ಓದಿ: 16 ವರ್ಷದ ಬಾಲಕಿ ಮೇಲೆ ಚಾಕು ಇರಿದು ಹಲ್ಲೆ – ಪೊಲೀಸರಿಗೆ ಮಹಿಳಾ ಆಯೋಗದಿಂದ ನೋಟಿಸ್ 

    ಹೆಣ್ಣು ದೇವತೆಗಳಿಗೆ ಪ್ರಿಯವಾದ ನಿಂಬೆ ಹಣ್ಣಿನ ದೀಪದಿಂದ ಪೂಜೆ ಸಲ್ಲಿಸಿದರೆ ಸಕಲ ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂಬ ನಂಬಿಕೆ ಇದೆ. ವಿವಾಹಿತ ಮಹಿಳೆಯರು ತಮ್ಮ ಮುತ್ತೈದೆ ಭಾಗ್ಯ ದೀರ್ಘಕಾಲ ಉಳಿಯಲಿ ಎಂದು ನಿಂಬೆ ಹಣ್ಣಿನ ಆರತಿ ಮಾಡಿದರೆ, ಯುವತಿಯರು ಆದಷ್ಟು ಬೇಗ ಕಂಕಣಭಾಗ್ಯ ಕೂಡಿ ಬರಲಿ ಎಂದು ಭಕ್ತಿಯಿಂದ ಪೂಜೆ ಸಲ್ಲಿಸುತ್ತಾರೆ.

    ಈಶ್ವರ ಅಭಿಷೇಕ ಪ್ರಿಯನಾದರೆ, ವಿಷ್ಣು ಅಲಂಕಾರ ಪ್ರಿಯ. ಆದೇ ರೀತಿ ಚಾಮುಂಡೇಶ್ವರಿ ದೇವಿ ಸ್ತೋತ್ರ ಪ್ರಿಯಳಾಗಿದ್ದಾಳೆ. ಆಷಾಡ ಮಾಸದಲ್ಲಿ ದೇವಿಯನ್ನು ಸ್ಮರಿಸಿ ಸ್ತೋತ್ರ ಹೇಳಿದರೆ ದೇವಿ ನಮ್ಮೆಲ್ಲಾ ಕಷ್ಟಗಳನ್ನು ದೂರ ಮಾಡುತ್ತಾಳೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿಗೆ ಮಹಿಳೆಯರು ಆಗಮಿಸಿ ಇಷ್ಟಾರ್ಥ ಈಡೇರಲಿ ಎಂದು ನಿಂಬೆಹಣ್ಣಿನ ಆರತಿ ಮಾಡುತ್ತಾರೆ.

    ಇನ್ನೂ ಕೆಲವರು ಸೇಬು, ನಿಂಬೆ, ಕಿತ್ತಲೆ ಸೇರಿದಂತೆ ವಿವಿಧ ಬಗೆಯ ಹಣ್ಣಿನ ಹಾರ ತಯಾರಿಸಿ ದೇವರಿಗೆ ಆರ್ಪಿಸುತ್ತಾರೆ. ನಿಂಬೆಹಣ್ಣಿಗೆ ಆಕರ್ಷಣಾ ಶಕ್ತಿ ಹೆಚ್ಚು. ಹೀಗಾಗಿ ನಿಂಬೆಹಣ್ಣನ್ನು ದೇವತ ಪಾದಕ್ಕೆ ಹಿಂಡಿ ಅದರ ಸಿಪ್ಪೆಯಿಂದ ದೀಪ ತಯಾರಿಸಿ ಅದರಿಂದ ಆರತಿ ಮಾಡಿದರೆ ಸಕಲ ಇಷ್ಟಾರ್ಥಗಳು ಸಿದ್ದಿಸುತ್ತವೆ ಎಂಬ ನಂಬಿಕೆ ಇದೆ ಎಂದು ಅರ್ಚಕ ನಾಗರಾಜು ದೀಕ್ಷೀತ್ ವಿವರಿಸಿದ್ದಾರೆ. ಇದನ್ನೂ ಓದಿ:  ವಿದ್ಯಾಕಾಶಿ ಜನರಿಗೆ ದೇವಸ್ಥಾನ ಕಟ್ಟಿಸೋದಾಗಿ ಹೇಳಿ ಹಣ ಪಡೆದಿದ್ದ ಚಂದ್ರಶೇಖರ್ ಗುರೂಜಿ ಹಂತಕ 

    ಒಟ್ಟಾರೆ ಆಷಾಢ ಶುಕ್ರವಾರವಾದ ಇಂದು ಚಾಮುಂಡೇಶ್ವರಿ ದೇವಾಲಯದಲ್ಲಿ ಭಕ್ತರ ದಂಡೆ ನೆರೆದಿತ್ತು. ದೇವಾಲಯದ ಅಂಗಳದ ತುಂಬಾ ಮಹಿಳೆಯರು ನಿಂಬೆ ಹಣ್ಣಿನಿಂದ ದೀಪ ತಯಾರಿಸಿ ದೇವಿಗೆ ಆರತಿ ಬೆಳಗುತ್ತಿದ್ದ ದೃಶ್ಯ ಕಣ್ಮನ ಸೆಳೆಯಿತು.

    Live Tv
    [brid partner=56869869 player=32851 video=960834 autoplay=true]

  • ಇಂದು ಆಷಾಢ ಮಾಸದ ಮೊದಲ ಶುಕ್ರವಾರ – ಚಾಮುಂಡಿ ಬೆಟ್ಟದಲ್ಲಿ ಹಬ್ಬದ ಸಂಭ್ರಮ

    ಇಂದು ಆಷಾಢ ಮಾಸದ ಮೊದಲ ಶುಕ್ರವಾರ – ಚಾಮುಂಡಿ ಬೆಟ್ಟದಲ್ಲಿ ಹಬ್ಬದ ಸಂಭ್ರಮ

    ಮೈಸೂರು: ಇಂದು ಆಷಾಢ ಮಾಸ ಮೊದಲ ಶುಕ್ರವಾರ. ಆಷಾಢ ಮಾಸದ ನಾಲ್ಕು ಶುಕ್ರವಾರಗಳಲ್ಲೂ ಚಾಮುಂಡಿ ತಾಯಿಯ ದರ್ಶನ ಮಾಡಿದರೆ ಒಳ್ಳೆಯದಾಗುತ್ತೆ ಎಂಬ ಭಾವನೆ. ಹೀಗಾಗಿ ಆಷಾಢದ ಎಲ್ಲಾ ಶುಕ್ರವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಚಾಮುಂಡಿ ಬೆಟ್ಟಕ್ಕೆ ಬರ್ತಾರೆ. ಭಕ್ತರ ಅನುಕೂಲಕ್ಕಾಗಿ ಚಾಮುಂಡಿ ಬೆಟ್ಟದಲ್ಲಿ ಸಕಲ ವ್ಯವಸ್ಥೆಗಳು ಆಗಿವೆ.

    ತಿರುಪತಿ ಮಾದರಿಯಲ್ಲಿ ಭಕ್ತರಿಗೆ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಯಿ ಚಾಮುಂಡಿ ದರ್ಶನಕ್ಕೆ ಬರುವ ಭಕ್ತರಿಗೆ ನ್ಯೂ ರೂಲ್ಸ್ ಮಾಡಲಾಗಿದೆ. ಎರಡು ಡೋಸ್ ಕೊರೋನಾ ಲಸಿಕೆ ಕಡ್ಡಾಯ ಹಾಕಿಸಿರಬೇಕು. ಇಲ್ಲದಿದ್ದರೆ 72 ಗಂಟೆ ಮುಂಚಿತವಾದ ಕೋವಿಡ್ ನೆಗೆಟಿವ್ ರೀಪೋರ್ಟ್ ಇರಬೇಕು. ಹಾಗಿದ್ರೆ ಮಾತ್ರ ಚಾಮುಂಡಿ ಬೆಟ್ಟ ಪ್ರವೇಶಕ್ಕೆ ಅವಕಾಶ ಇರಲಿದೆ. ಮುಂಜಾನೆ 5.30ರಿಂದ ರಾತ್ರಿ 9.30ರವರೆಗೆ ದರ್ಶನಕ್ಕೆ ಅವಕಾಶವಿದೆ. ಇದನ್ನೂ ಓದಿ: ಶಿಂಧೆ ಸಿಎಂ ಎಂದು ಘೋಷಣೆಯಾಗುತ್ತಿದ್ದಂತೆ ಟೇಬಲ್ ಹತ್ತಿ ಡ್ಯಾನ್ಸ್ ಮಾಡಿದ ಬಂಡಾಯ ಶಾಸಕರು

    ಭಕ್ತರಿಗೆ ಮೂರು ಸಾಲಿನಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತ್ಯೇಕ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಮಳೆ-ಬಿಸಿಲು ರಕ್ಷಣೆಗೆ ಟೆಂಟ್ ನಿರ್ಮಿಸಲಾಗಿದೆ. ದೇವಸ್ಥಾನದ ಮುಂಭಾಗ ಬೆಳಗ್ಗೆ 6.30 ರಿಂದ ರಾತ್ರಿ 8.30 ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಆವರಣದಲ್ಲಿ ದಾನಿಗಳು ಭಕ್ತರಿಗೆ ಬಾಳೆಲೆ ಊಟಕ್ಕೆ ವ್ಯವಸ್ಥೆ ಮಾಡಿದ್ದಾರೆ. ಪ್ರಸಾದ ರೂಪದಲ್ಲಿ ಹಾರ್ಲಿಕ್ಸ್, ಮೈಸೂರು ಪಾಕ್ ವಿತರಣೆ ಮಾಡಲು ಶ್ರೀಚಾಮುಂಡೇಶ್ವರಿ ಸೇವಾ ಸಮಿತಿ ಮುಂದಾಗಿದೆ.

    30 ಮಂದಿ ಬಾಣಸಿಗರು 30 ಸಾವಿರ ಮೈಸೂರು ಪಾಕ್ ತಯಾರಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಇದೆ. ಭಕ್ತರು ಲಲಿತ್ ಮಹಲ್ ಬಳಿಯ ಮೈದಾನದಲ್ಲಿ ತಮ್ಮ ವಾಹನ ನಿಲ್ಲಿಸಿ, ಉಚಿತವಾಗಿ ಬಸ್‍ನಲ್ಲಿ ಬೆಟ್ಟಕ್ಕೆ ಹೋಗುವ ವ್ಯವಸ್ಥೆ ಇದೆ.

    Live Tv