Tag: ashika ranganatha

  • ಶೂಟಿಂಗ್‌ ಮುಗಿಸಿದ ದುಷ್ಯಂತ್‌, ಆಶಿಕಾ ನಟನೆಯ ‘ಗತವೈಭವ’ ಸಿನಿಮಾ

    ಶೂಟಿಂಗ್‌ ಮುಗಿಸಿದ ದುಷ್ಯಂತ್‌, ಆಶಿಕಾ ನಟನೆಯ ‘ಗತವೈಭವ’ ಸಿನಿಮಾ

    ಸ್ಯಾಂಡಲ್‌ವುಡ್ ಬೆಳ್ಳಿಪರದೆಯಲ್ಲಿ ʻಗತವೈಭವʼ (Gathavaibhava) ಕಥೆಯನ್ನು ಹರವಿಡೋದಿಕ್ಕೆ ಟ್ಯಾಲೆಂಡ್ ಡೈರೆಕ್ಟರ್ ಸಿಂಪಲ್ ಸುನಿ ರೆಡಿಯಾಗಿದ್ದಾರೆ. ಸುನಿ ಭತ್ತಳಿಕೆಯಿಂದ ಬರುತ್ತಿರುವ ಬಹುನಿರೀಕ್ಷಿತ ಚಿತ್ರ ‘ಗತವೈಭವ’ ಚಿತ್ರೀಕರಣ ಮುಕ್ತಾಯಗೊಂಡಿದೆ. ಪೋರ್ಚುಗಲ್‌ನಲ್ಲಿ ಹಾಗೂ ಮುಂತಾದೆಡೆ ಯಶಸ್ವಿಯಾಗಿ 100 ಕಾಲ್‌ಶೀಟ್‌ಗಳಲ್ಲಿ ಶೂಟಿಂಗ್ ಮುಗಿಸಲಾಗಿದೆ. ದುಷ್ಯಂತ್ ಹಾಗೂ ಆಶಿಕಾ ರಂಗನಾಥ್ ಚಿತ್ರೀಕರಣ ಅನುಭವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಇದೇ ವರ್ಷದ ಮೊದಲಾರ್ಧದಲ್ಲಿ ‘ಗತವೈಭವ’ ಸಿನಿಮಾವನ್ನು ತೆರೆಗೆ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.

    ಸಿಂಪಲ್ ಸುನಿ ಎಲ್ಲಾ ಪ್ರಕಾರದ ಸಿನಿಮಾಗೂ ಕೈ ಹಾಕಿದ್ದಾರೆ. ಕಾಮಿಡಿ, ಸಿರೀಯಸ್, ಫ್ಯಾಂಟಸಿ, ಹಾರರ್ ಹೀಗೆ ಭಿನ್ನ-ವಿಭಿನ್ನ ಕಥೆಯನ್ನು ಹೊತ್ತುತಂದಿದ್ದಾರೆ. ಲವ್‌ಸ್ಟೋರಿಯನ್ನು ಸೈಂಟಿಫಿಕ್ ಥ್ರಿಲ್ಲರ್ ಮಾದರಿಯ ಗತವೈಭವ ಚಿತ್ರದ ಮೂಲಕ ಯುವ ಪ್ರತಿಭೆ ದುಷ್ಯಂತ್ ನಾಯಕನಾಗಿ ಚಿತ್ರರಂಗಕ್ಕೆ ಮೊದಲ ಹೆಜ್ಜೆ ಇಡುತ್ತಿದ್ದಾರೆ. ನಾಯಕಿಯಾಗಿ ಆಶಿಕಾ ರಂಗನಾಥ್ ನಟಿಸಿದ್ದಾರೆ. ಸಿಂಪಲ್ ಸುನಿ ಈ ಸಿನಿಮಾಗೆ ಕೇವಲ ನಿರ್ದೇಶಕ ಅಷ್ಟೇ ಅಲ್ಲ. ಅವರು ನಿರ್ಮಾಪಕ ಕೂಡ ಹೌದು.’ಗತವೈಭವ’ ಸಿನಿಮಾಕ್ಕೆ ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದು, ಸುನಿ ಸಿನಿಮಾಸ್ ಸಂಸ್ಥೆಯಡಿ ದೀಪಿಕ್ ರವರ ಮಾತಾ ಮೂವಿ ಮೇಕರ್ಸ್ ಹಾಗೂ ಸುನಿ ಚಿತ್ರ ನಿರ್ಮಾಣ ಮಾಡ್ತಿದ್ದಾರೆ. ವಿಲಿಯಂ ಡೇವಿಡ್ ಕ್ಯಾಮೆರಾ ವರ್ಕ್, ಜೂಡಾ ಸ್ಯಾಂಡಿ ಸಂಗೀತ ಈ ಚಿತ್ರಕ್ಕಿದೆ.

    ಶೂಟಿಂಗ್ ಎಲ್ಲೆಲ್ಲಿ ನಡೆದಿದೆ?
    ಗತವೈಭವ ಚಿತ್ರದ ಸಂಪೂರ್ಣ ಚಿತ್ರೀಕರಣ ಪೂರ್ಣಗೊಂಡಿದೆ. ಕೂರ್ಗ್, ಮಂಗಳೂರು, ಪೋರ್ಚುಗಲ್‌ನಲ್ಲಿ ಸಿನಿಮಾದ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಬರೋಬ್ಬರಿ 100 ಕಾಲ್‌ಶೀಟ್‌ಗಳಲ್ಲಿ ಶೂಟಿಂಗ್ ಮುಕ್ತಾಯಗೊಂಡಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಈ ವರ್ಷಾಂತ್ಯಕ್ಕೆ ‘ಗತವೈಭವ’ ಸಿನಿಮಾವನ್ನು ಚಿತ್ರತಂಡ ತೆರೆಗೆ ತರುವ ಆಲೋಚನೆ ಹಾಕಿಕೊಂಡಿದೆ.

  • ಥೈಲ್ಯಾಂಡ್ ಟ್ರಿಪ್‌ನಲ್ಲಿ ಪಟಾಕಿ ಪೋರಿ ಆಶಿಕಾ ರಂಗನಾಥ್

    ಥೈಲ್ಯಾಂಡ್ ಟ್ರಿಪ್‌ನಲ್ಲಿ ಪಟಾಕಿ ಪೋರಿ ಆಶಿಕಾ ರಂಗನಾಥ್

    ಸ್ಯಾಂಡಲ್‌ವುಡ್ ಬ್ಯೂಟಿ ಆಶಿಕಾ ರಂಗನಾಥ್ ಕನ್ನಡದ ಬ್ಯುಸಿಯೇಷ್ಟ್ ನಟಿಯರಲ್ಲಿ ಒಬ್ಬರು. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರೋ ಚೆಲುವೆ ಶೂಟಿಂಗ್‌ಗೆ ಬ್ರೇಕ್ ಹಾಕಿ, ಥೈಲ್ಯಾಂಡ್ ಟ್ರಿಪ್‌ನಲ್ಲಿ ಆಶಿಕಾ ಮಿಂಚ್ತಿದ್ದಾರೆ. ಥೈಲ್ಯಾಂಡ್‌ನ ಸುಂದರ ಪ್ರದೇಶಗಳಿಗೆ ಭೇಟಿ ಕೊಡತ್ತಾ ಟ್ರಿಪ್‌ನ ಎಂಜಾಯ್ ಮಾಡ್ತಿದ್ದಾರೆ. ಸದ್ಯ ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

    2016ರಲ್ಲಿ `ಕ್ರೇಜ್ ಬಾಯ್’ ಚಿತ್ರಕ್ಕೆ ಕ್ರೇಜಿ ನಾಯಕಿಯಾಗಿ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ ನಂತರ ಮುಗುಳುನಗೆ, ರ‍್ಯಾಂಬೋ 2, ಮದಗಜ ಹೀಗೆ ಸಾಕಷ್ಟು ಚಿತ್ರಗಳಲ್ಲಿ ಸ್ಟಾರ್ ನಟರಿಗೆ ನಾಯಕಿಯಾಗಿ ನಟಿಸಿದ್ದಾರೆ. `ಕೋಟಿಗೊಬ್ಬ 3′ ಚಿತ್ರದಲ್ಲಿ ಕಿಚ್ಚನ ಜೊತೆ ಪಟಾಕಿ ಪೋರಿಯಾಗಿ ಕಾಣಿಸಿಕೊಂಡರು. ಈಗ ಚಿತ್ರೀಕರಣಕ್ಕೆ ಬ್ರೇಕ್ ಹಾಕಿ, ಥೈಲ್ಯಾಂಡ್‌ನ ಸುಂದರ ಪ್ರದೇಶದಲ್ಲಿ ಟ್ರಿಪ್ ಮಾಡುತ್ತಾ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಶಿವರಾಜ್ ಕುಮಾರ್ ಗಾಗಿ ಚಿತ್ರ ಮಾಡಲಿದೆ ಹೊಂಬಾಳೆ ಫಿಲ್ಮ್ಸ್: ನಿರ್ದೇಶಕರು ಯಾರು?

     

    View this post on Instagram

     

    A post shared by Ashika Ranganath (@ashika_rangnath)

    ಥೈಲ್ಯಾಂಡ್‌ನ ಸಮುದ್ರದ ಮಧ್ಯೆಯಲ್ಲಿ ಬೋಟ್‌ನಲ್ಲಿ ಕುಳಿತಿರುವ ಆಶಿಕಾ ಹಾಟ್ ಅವತಾರದ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚುವಂತೆ ಮಾಡಿದ್ದಾರೆ. ಪಟಾಕಿ ಪೋರಿಯ ಬೋಲ್ಡ್ ಅವತಾರ ನೋಡಿ ಫ್ಯಾನ್ಸ್ ಬೋಲ್ಡ್ ಆಗಿದ್ದಾರೆ.