Tag: ashok naik

  • ಸಾರ್ವಜನಿಕರಿಗೆ ಬುದ್ಧಿ ಹೇಳಬೇಕಾದ ಶಾಸಕರಿಂದ್ಲೇ ಎಡವಟ್ಟು

    ಸಾರ್ವಜನಿಕರಿಗೆ ಬುದ್ಧಿ ಹೇಳಬೇಕಾದ ಶಾಸಕರಿಂದ್ಲೇ ಎಡವಟ್ಟು

    ಶಿವಮೊಗ್ಗ: ಜಿಲ್ಲೆಯ ಗ್ರಾಮಾಂತರ ಶಾಸಕ ಅಶೊಕ್ ನಾಯ್ಕ್ ಸಾಮಾಜಿಕ ಅಂತರ ಮರೆತಿದ್ದಲ್ಲದೇ ಮಾಸ್ಕ್ ಧರಿಸಿದೇ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

    ಹೌದು. ಕೊರೊನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸರಕಾರ ಸೂಚನೆ ನೀಡುತ್ತಲೇ ಇದೆ. ಆದರೆ ಶಿವಮೊಗ್ಗ ಗ್ರಾಮಾಂತರ ಶಾಸಕರು ಮಾತ್ರ ಇದಕ್ಕೂ ನಮಗೂ ಸಂಬಂಧ ಇಲ್ಲವೇನೋ ಎಂಬಂತಿದ್ದಾರೆ.

    ಶಿವಮೊಗ್ಗ ತಾಲೊಕಿನ ಹಾರನಹಳ್ಳಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಕೊನಗನಹಳ್ಳಿ ಗ್ರಾಮದಲ್ಲಿ ಇಂದು ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್ 25 ಲಕ್ಷ ಮೊತ್ತದ ಸಿಸಿ ರಸ್ತೆಗೆ ಚಾಲನೆ ನೀಡಿದರು. ಈ ವೇಳೆ ನೂರಾರು ಮಂದಿ ಸ್ಥಳೀಯರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಶಾಸಕರ ಬೆಂಬಲಿಗರು ಭಾಗವಹಿಸಿದ್ದರು.

    ಸಾರ್ವಜನಿಕರಿಗೆ ಬುದ್ಧಿ ಹೇಳಬೇಕಾದ ಶಾಸಕರೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದೆ.