Tag: Ashoka Chakra

  • ರಾಷ್ಟ್ರ ಲಾಂಛನಕ್ಕೆ ಅಗೌರವ – ಕೊಳಚೆ ಪ್ರದೇಶದಲ್ಲಿ ಅನಾಥವಾಗಿ ಬಿದ್ದಿರುವ ಅಶೋಕ ಚಕ್ರ

    ರಾಷ್ಟ್ರ ಲಾಂಛನಕ್ಕೆ ಅಗೌರವ – ಕೊಳಚೆ ಪ್ರದೇಶದಲ್ಲಿ ಅನಾಥವಾಗಿ ಬಿದ್ದಿರುವ ಅಶೋಕ ಚಕ್ರ

    ಯಾದಗಿರಿ: 1950ರಲ್ಲಿ ಅಶೋಕ ಚಕ್ರವನ್ನು (Ashoka Chakra) ರಾಷ್ಟ್ರ ಲಾಂಛನವನ್ನಾಗಿ ಮಾಡಲಾಗಿದೆ. ರಾಷ್ಟ್ರ ಲಾಂಛನಕ್ಕೆ ಗೌರವ ಕೊಡಬೇಕಿರುವುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಕರ್ತವ್ಯವೂ ಕೂಡಾ. ಆದರೆ ಯಾದಗಿರಿ (Yadagiri) ಜಿಲ್ಲೆಯ ವಡಗೇರಾದಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ರಾಷ್ಟ್ರ ಲಾಂಛನ ಅನಾಥವಾಗಿ ಬೀದಿಯಲ್ಲಿ ನಿಲ್ಲಿಸಲಾಗಿದೆ. ಕೊಳಚೆ ಪ್ರದೇಶದಲ್ಲಿ ಅನಾಥವಾಗಿ ಬಿದ್ದಿರುವ ರಾಷ್ಟ್ರ ಲಾಂಛನವನ್ನು ತಂದಿಡಲಾಗಿದೆ.

    1996ರಲ್ಲಿ ಗ್ರಾಮದಲ್ಲಿ 50-60 ಸಾವಿರ ರೂ. ಖರ್ಚು ಮಾಡಿ ವಡಗೇರಾದ ಮುಖ್ಯದ್ವಾರಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ರಾಷ್ಟ್ರ ಲಾಂಛನವನ್ನು ಅಳವಡಿಸಲಾಗಿತ್ತು. ಆದರೆ ಕಳೆದ 4-5 ವರ್ಷಗಳ ಹಿಂದೆ ರಸ್ತೆ ಅಗಲೀಕರಣದ ವೇಳೆ ರಾಷ್ಟ್ರ ಲಾಂಛನ ತೆಗೆದು ಆಂಜನೇಯ ದೇವಸ್ಥಾನದ ಪಕ್ಕದಲ್ಲಿ ಕೊಳಚೆ ಪ್ರದೇಶದಲ್ಲಿ ಇರಿಸಲಾಗಿದೆ. ಇದನ್ನೂ ಓದಿ: ಸ್ವಪಕ್ಷೀಯರ ವಿರುದ್ಧ ರೇಣುಕಾಚಾರ್ಯ ಗರಂ- ಕಾಂಗ್ರೆಸ್ ಜೊತೆ ಸಭೆ ಮಾಡಿದ್ರಾ?

    ಅಂದಿನಿಂದ ಇಂದಿನವರೆಗೂ ರಾಷ್ಟ್ರ ಲಾಂಛನ ಅನಾಥವಾಗಿ ಬಿದ್ದಿರೋದು ಅಧಿಕಾರಿಗಳ ಅವಿವೇಕತನವನ್ನು ಎತ್ತಿ ತೋರಿಸುತ್ತಿದೆ. ಕೂಡಲೇ ರಾಷ್ಟ್ರ ಲಾಂಛನವನ್ನ ಸೂಕ್ತ ಸ್ಥಳದಲ್ಲಿರಿಸಿ, ಗೌರವ ಸೂಚಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕಾಲಿಗೆ ಪೆಟ್ಟಾಗಿದ್ರೂ ಜೈಲಿನ ಗೋಡೆ ಹಾರಿ ಅತ್ಯಾಚಾರಿ ಪರಾರಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ವಚ್ಛ ಭಾರತ್ ಶೌಚಾಲಯದ ಟೈಲ್ಸ್ ಮೇಲೆ ಮಹಾತ್ಮ ಗಾಂಧಿ, ಅಶೋಕ ಚಕ್ರ

    ಸ್ವಚ್ಛ ಭಾರತ್ ಶೌಚಾಲಯದ ಟೈಲ್ಸ್ ಮೇಲೆ ಮಹಾತ್ಮ ಗಾಂಧಿ, ಅಶೋಕ ಚಕ್ರ

    ನವದೆಹಲಿ: ಗಾಂಧಿ ಜಯಂತಿಯಂದು ಆರಂಭಗೊಂಡಿದ್ದ ಸ್ವಚ್ಛಭಾರತ ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಶೌಚಾಲಯದಲ್ಲಿ ಗಾಂಧೀಜಿ ಮತ್ತು ಅಶೋಕ ಚಕ್ರದ ಚಿತ್ರಗಳುಳ್ಳ ಟೈಲ್ಸ್ ಗಳನ್ನು ಬಳಸಿ ಅವಮಾನ ಮಾಡಲಾಗಿದೆ.

    ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ಸ್ವಚ್ಛ ಭಾರತ ಯೋಜನೆಯ ಅಭಿಯಾನದ ಅಡಿ ನಿರ್ಮಿಸಲಾದ ಶೌಚಾಲಯದ ಬಗ್ಗೆ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದು, ಪೂಜ್ಯ ಗಾಂಧೀಜಿ ಅವರ ಭಾವಚಿತ್ರವುಳ್ಳ ಟೈಲ್ಸ್ ಗಳನ್ನು ಬಳಸಿ ಶೌಚಾಲಯ ನಿರ್ಮಿಸಿರುವುದು ತಪ್ಪು. ಈ ರೀತಿ ಮಾಡಿ ರಾಷ್ಟ್ರಪಿತ ಹಾಗೂ ಆಶೋಕ ಚಕ್ರಕ್ಕೆ ಅವಮಾನ ಮಾಡಲಾಗಿದೆ ಎಂದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಸಿಡಿದೆದ್ದಿದ್ದಾರೆ.

    ಸದ್ಯ ಈ ಶೌಚಾಲಯದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲದೆ ಈ ಬಗ್ಗೆ ಎಲ್ಲೆಡೆ ಬಾರೀ ವಿರೋಧ ವ್ಯಕ್ತವಾಗುತ್ತಿದೆ.

    ದಿಬಾಯ್ ತಹಸೀಲ್‍ನ ಇಚ್ಚವರಿ ಗ್ರಾಮದಲ್ಲಿ `ಸ್ವಚ್ಛ ಭಾರತ’ ಅಭಿಯಾನದಡಿ ಸುಮಾರು 508 ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇವುಗಳಲ್ಲಿ 13 ಶೌಚಾಲಯಗಳಲ್ಲಿ ಗಾಂಧೀಜಿ ಹಾಗೂ ಅಶೋಕ ಚಕ್ರ ಚಿತ್ರವಿರುವ ಟೈಲ್ಸ್ ಗಳನ್ನು ನಿರ್ಮಾಣಕ್ಕೆ ಬಳಸಲಾಗಿದೆ. ಈಗಾಗಲೇ ಇದಕ್ಕೆ ಕಾರಣರಾದ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಗ್ರಾಮದ ಸರಪಂಚ್ ವಿರುದ್ಧವೂ ಕ್ರಮಕೈಗೊಂಡಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಅಧಿಕಾರಿ ಅಮರ್ಜಿತ್ ಸಿಂಗ್ ಹೇಳಿದ್ದಾರೆ.

    ವಾರದ ಹಿಂದೆಯೇ ಶೌಚಾಲಯಗಳನ್ನು ನಿರ್ಮಿಸಲು ಈ ಟೈಲ್ಸ್ ಗಳನ್ನು ಬಳಸಲಾಗಿದೆ. ಹಾಗೆಯೇ ಇದನ್ನು ಸ್ಥಳೀಯ ಮಾರುಕಟ್ಟೆಯಿಂದ ಖರೀದಿಸಲಾಗಿತ್ತು. ಆದರೆ ಈ ಬಗ್ಗೆ ನಮಗೆ ತಿಳಿಯುತ್ತಿದ್ದಂತೆ ನಾವು ಕ್ರಮ ಕೈಗೊಂಡಿದ್ದೇವೆ ಎಂದು ಜಿಲ್ಲಾಡಳಿತ ತಿಳಿಸಿದೆ.

    ಏಪ್ರಿಲ್‍ನಲ್ಲಿ ಜಟ್ವಾಡ ಗ್ರಾಮದಲ್ಲಿ ಸ್ವಚ್ಛ ಭಾರತ ಅಭಿಯಾನದಡಿ ನಿರ್ಮಿಸಲಾಗಿದ್ದ ಶೌಚಾಲಯಗಳಲ್ಲಿ ನೀರಿನ ವ್ಯವಸ್ಥೆ ಇಲ್ಲದೆ ಜನರು ಪರದಾಡುವಂತಾಗಿತ್ತು. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಜನರು ಮತ್ತೆ ಶೌಚಕ್ಕಾಗಿ ಬಯಲುಗಳಿಗೆ ಹೋಗಲು ಶುರುಮಾಡಿದ್ದಾರೆ.

    ಈ ಪ್ರದೇಶಗಳಲ್ಲಿ ವಾಸಿಸುವವರು ದಿನ ಕೂಲಿ ಕಾರ್ಮಿಕರು. ಹೀಗಾಗಿ ಪ್ರತಿನಿತ್ಯ ಈ ಶೌಚಾಲಯಗಳಿಗೆ ಹಣ ನೀಡಿ ಹೋಗಲು ನಮಗೆ ಸಾಧ್ಯವಿಲ್ಲ, ಅದಕ್ಕೆ ಬಯಲುಗಳಿಗೆ ಹೋಗುತ್ತೇವೆ ಎಂದು ಜನರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

  • ಹಿಂದೆ ಉಗ್ರನಾಗಿದ್ದ ಹುತಾತ್ಮ ಸೇನಾನಿ ವಾನಿಗೆ ಅಶೋಕ ಚಕ್ರ

    ಹಿಂದೆ ಉಗ್ರನಾಗಿದ್ದ ಹುತಾತ್ಮ ಸೇನಾನಿ ವಾನಿಗೆ ಅಶೋಕ ಚಕ್ರ

    ನವದೆಹಲಿ: ಭಯೋತ್ಪಾದಕನಾಗಿದ್ದ ಆತ ಮನಪರಿವರ್ತನೆಗೊಂಡು ಸೇನೆ ಸೇರಿ ಹುತಾತ್ಮನಾಗಿ ಋಣ ತೀರಿಸಿದ್ದ ಲ್ಯಾನ್ಸ್ ನಾಯಕ್ ನಜೀರ್ ಅಹ್ಮದ್ ವಾಸಿ ಅವರಿಗೆ ಭಾರತ ಸರ್ಕಾರ ಮರಣೋತ್ತರ ಅಶೋಕ ಚಕ್ರ ಪ್ರಶಸ್ತಿ ಘೋಷಿಸಿದೆ.

    ಮೊದಲು ಉಗ್ರನಾಗಿದ್ದ ದಕ್ಷಿಣ ಕಾಶ್ಮೀರದ ಲ್ಯಾನ್ಸ್ ನಾಯಕ್ ನಝೀರ್ ಅಹ್ಮದ್ ವಾನಿ ಮನಃ ಪರಿವರ್ತನೆ ಬಳಿಕ 2004ರಲ್ಲಿ ಸೇನೆ ಸೇರಿದ್ದರು. ಇವರ ಕರ್ತವ್ಯ ನಿಷ್ಠೆಗೆ 2007ರಲ್ಲಿ ಶೌರ್ಯ ಪ್ರಶಸ್ತಿಯನ್ನೂ ಪಡೆದಿದ್ದರು. ಆದರೆ ಕಳೆದ ವರ್ಷ ನವೆಂಬರ್ ನಲ್ಲಿ ಶೋಫಿಯಾನ್ ಜಿಲ್ಲೆಯಲ್ಲಿ ಉಗ್ರರ ಜೊತೆ ಹೋರಾಡುತ್ತಾ ತನ್ನ ಪ್ರಾಣವನ್ನು ದೇಶಕ್ಕೆ ಅರ್ಪಿಸಿದ್ದರು.

    ಗಣರಾಜ್ಯೋತ್ಸವದಂದು ಲ್ಯಾನ್ಸ್ ನಾಯಕ್ ನಝೀರ್ ಅಹಮದ್ ವಾನಿ ಕುಟುಂಬದವರು ಅಶೋಕ ಚಕ್ರ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈ ಪ್ರಶಸ್ತಿ ಸೇನೆಯ ಶಾಂತಿ ಕಾಲದಲ್ಲಿ ನೀಡುವ ಅತ್ಯುನ್ನತ ಸೇನಾ ಪ್ರಶಸ್ತಿಯಾಗಿದೆ. 38 ವರ್ಷದ ವಾನಿ ಅವರು ಜಮ್ಮು ಕಾಶ್ಮೀರದ ಕುಲ್ಗಾಂನ ಅಶ್‍ಮುಜಿ ಪ್ರದೇಶದವರು. ವಾನಿ ಹುತಾತ್ಮರಾಗುವ ಮುನ್ನ ಅವರ ಅಸಾಧಾರಣ ಹೋರಾಟಕ್ಕೆ ಸೇನಾ ಮೆಡಲ್ ಕೂಡ ನೀಡಿ ಗೌರವಿಸಲಾಗಿತ್ತು. ಅಲ್ಲದೇ ಅಶೋಕ ಚಕ್ರ ಪ್ರಶಸ್ತಿ ಪಡೆದ ಮೊದಲ ಜಮ್ಮು ಕಾಶ್ಮೀರಿಗರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv