Tag: Ashwaththa Narayana

  • ಕನ್ನಡ ಸಂಘಟನೆಗಳು ಬಂದ್ ಕರೆಯನ್ನು ಕೈಬಿಡಬೇಕು: ಅಶ್ವತ್ಥ ನಾರಾಯಣ

    ಕನ್ನಡ ಸಂಘಟನೆಗಳು ಬಂದ್ ಕರೆಯನ್ನು ಕೈಬಿಡಬೇಕು: ಅಶ್ವತ್ಥ ನಾರಾಯಣ

    ಬೆಂಗಳೂರು: ಜನ ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಜನತೆಗೆ ಬಂದ್ ಮೂಲಕ ತೊಂದರೆ ಕೊಡುವುದು ಬೇಡ. ಕನ್ನಡ ಸಂಘಟನೆಗಳು ಬಂದ್ ಕರೆಯನ್ನು ಕೈಬಿಡಬೇಕು. ಸರ್ಕಾರ ನಿಮ್ಮ ಜೊತೆಗಿದೆ. ಹೀಗಿರುವಾಗ ಬಂದ್ ಕೈಬಿಟ್ಟು ಸಹಕರಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮನವಿ ಮಾಡಿದರು.

    ನೆಲ, ಜಲ ವಿಷಯದಲ್ಲಿ ರಾಜಿ ಮಾಡಿಕೊಳ್ಳಲ್ಲ. ಹಿತ ಕಾಯಲು ಬದ್ಧರಾಗಿದ್ದೇವೆ. ಗಡಿ ತಂಟೆಗೆ ಬರುವವರು, ಧ್ವಜ ಸುಡುವವರು, ಶಾಂತಿ ಕದಡುವ ನಾಡದ್ರೋಹಿಗಳ ಮೇಲೆ ಗೂಂಡಾ ಕಾಯ್ದೆಯಡಿ, ನಾಡದ್ರೋಹದ ಕೇಸ್ ಹಾಕುತ್ತೇವೆ. ಮುಲಾಜು ಕೂಡ ತೋರಿಸಲ್ಲ ಎಂದರು. ಇದನ್ನೂ ಓದಿ: ಲುಧಿಯಾನ ಕೋರ್ಟ್ ಸ್ಫೋಟ – ಡ್ರಗ್ ಕೇಸ್‌ನಲ್ಲಿ ವಜಾಗೊಂಡಿದ್ದ ಪೊಲೀಸ್ ಅಧಿಕಾರಿಯೇ ಬಾಂಬರ್

    ಎಂಇಎಸ್ ವಿಚಾರದಲ್ಲಿ ಸದನದಲ್ಲಿಯೇ ಸಿಎಂ ಸ್ಪಷ್ಟವಾಗಿ ಸಂದೇಶ ಕೊಟ್ಟಿದ್ದಾರೆ. ನಾಡಿನ ವಿಚಾರದಲ್ಲಿ ನಮ್ಮ ಭಾಷೆ, ನೆಲ, ಜಲ ಎಲ್ಲ ವಿಚಾರದಲ್ಲಿ ಕಾಂಪ್ರಮೈಸ್ ಆಗುವ ಪ್ರಶ್ನೆಯೇ ಇಲ್ಲ. ಯಾರೇ ಕಿಡಿಗೇಡಿಗಳು ಸಣ್ಣ ಕೃತ್ಯ ಮಾಡಿದರೂ ಅವರನ್ನು ಬಗ್ಗು ಬಡಿಯುತ್ತೇವೆ. ನಾಡಿನ ಹಿತರಕ್ಷಣೆ ಮಾಡುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ಕನ್ನಡಪರ ಸಂಘಟನೆ ಬಂದ್ ಉಚಿತವೂ ಅಲ್ಲ, ಸೂಕ್ತವೂ ಅಲ್ಲ ಎಂದ ಹೇಳಿದರು

    ಸರ್ಕಾರಕ್ಕೆ ಸಲಹೆ ಸೂಚನೆ ಕೊಡಲಿ, ಅವುಗಳನ್ನು ಪರಿಗಣಿಸುತ್ತೇವೆ. ಬಂದ್ ನಿಂದ ಜನ ಸಮಸ್ಯೆಗೆ ಸಿಲುಕುತ್ತಾರೆ. ಹೀಗಾಗಿ ಬಂದ್ ಬೇಕಿಲ್ಲ. ಸರ್ಕಾರ ಕನ್ನಡ ಸಂಘಟನೆಗಳ ಸಲಹೆಗಳಿಗೆ ಕಣ್ಣು ಕಿವಿಯಾಗಿದೆ. ಹೀಗಾಗಿ ಬಂದ್ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬಟ್ಟೆ ಮಾಸ್ಕ್ ಬೇಡ.. ಎನ್95, ಕೆ95 ಮಾಸ್ಕ್‌ಗಳನ್ನೇ ಬಳಸಿ – ತಜ್ಞರ ಸಲಹೆ 

    ಸಿಎಂ ಜೊತೆ ಬಂದು ಮಾತನಾಡಿ, ನಿಮ್ಮ ಸಲಹೆಗಳಿಗೆ ಗೌರವಿಸುತ್ತೇವೆ. ಬಂದ್‍ಗೆ ಕರೆ ಕೊಟ್ಟಿದ್ದನ್ನು ಹಿಂಪಡೆಯಿರಿ. ಸರ್ಕಾರ ಕನ್ನಡ ಪರ ಸಂಘಟನೆ ಜೊತೆಗೆ ಮಾತುಕತೆಗೆ ಸಿದ್ಧವಿದೆ. ಈಗಾಗಲೇ ಬೆಳಗಾವಿ ಕೃತ್ಯದಲ್ಲಿ ಬಂಧಿಸಿದ ವ್ಯಕ್ತಿಗಳ ವಿಚಾರಣೆ ನಡೆಯುತ್ತಿದೆ. ಯಾವುದೇ ಸಂಘಟನೆ ಸಮಾಜಕ್ಕೆ ಕಂಟಕ ಆದರೂ ಅದಕ್ಕೆ ಅವಕಾಶ ಇಲ್ಲ ಎಂದರು.

  • ಪೂರ್ಣ ಪ್ರಮಾಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲು ಉನ್ನತ ಶಿಕ್ಷಣ ಸಚಿವರಿಗೆ ABVP ಮನವಿ

    ಪೂರ್ಣ ಪ್ರಮಾಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲು ಉನ್ನತ ಶಿಕ್ಷಣ ಸಚಿವರಿಗೆ ABVP ಮನವಿ

    ಬೆಂಗಳೂರು: ಕೇಂದ್ರ ಸರ್ಕಾರ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಯಾವ ಬದಲಾವಣೆಯನ್ನೂ ಮಾಡದೇ ಯಥಾವತ್ತಾಗಿ ಜಾರಿ ಮಾಡಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್(ಎಬಿವಿಪಿ) ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

    ಈ ಬಗ್ಗೆ ಸಂಘಟನೆಯ ಪದಾಧಿಕಾರಿಗಳು ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವತ್ಥನಾರಾಯಣ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರಲ್ಲದೆ, ಶಿಕ್ಷಣ ನೀತಿಯ ಬಗ್ಗೆ ಕೆಲವರು ಹಬ್ಬಿಸುತ್ತಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಕೂಡಲೇ ಇಡೀ ನೀತಿಯ ವಿವರಗಳನ್ನು ರಾಜ್ಯದ ಜನತೆಯ ಮುಂದಿಡಬೇಕು ಎಂದು ಕೋರಿದರು. ಇದಕ್ಕೆ ಸಚಿವರು ಸಮ್ಮತಿಸಿದರು.

    ಎಬಿವಿಪಿ ಮಾಡಿರುವ ಎಲ್ಲ ಮನವಿಗಳನ್ನು ಪರಿಶೀಲಿಸಿ ಶೀಘ್ರವೇ ಕ್ರಮ ವಹಿಸಲಾಗುವುದು ಎಂದ ಡಾ.ಅಶ್ವತ್ಥನಾರಾಯಣ ಅವರು ತಮ್ಮನ್ನು ಭೇಟಿ ಮಾಡಿದ ಎಬಿವಿಪಿ ವಲಯ ಸಂಘಟನಾ ಕಾರ್ಯದರ್ಶಿ ಸ್ವಾಮಿ ಮರಳಾಪುರ, ರಾಷ್ಟ್ರೀಯ ಕಾರ್ಯದರ್ಶಿ ಹರ್ಷ, ರಾಜ್ಯ ಘಟಕದ ಅಧ್ಯಕ್ಷ ಡಾ.ಸತೀಶ, ರಾಜ್ಯ ಕಾರ್ಯದರ್ಶಿ ಪ್ರತೀಕ್ ಮಾಳಿ ಅವರಿಗೆ ಭರವಸೆ ನೀಡಿದರು. ಇದನ್ನೂ ಓದಿ: ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ದುರಂತ – ಹೈಟೆನ್ಷನ್ ವೈರ್ ತಗುಲಿ ಫೈಟರ್ ಸಾವು

    ಇದಲ್ಲದೆ ಕೋವಿಡ್‍ನಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳ ಶುಲ್ಕ ಮನ್ನಾ ಮಾಡಬೇಕು. ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿರುವ ಖಾಲಿ ಬೋಧಕ ಹುದ್ದೆಗಳನ್ನು ಭರ್ತಿ ಮಾಡಬೇಕು. ಸರ್ಕಾರಿ ಕಾಲೇಜುಗಳಲ್ಲಿಯೂ ಪದವಿ ಪ್ರವೇಶ ಪ್ರಕ್ರಿಯೆ ಆರಂಭ ಮಾಡಬೇಕು. ಕಾಲೇಜು ಗ್ರಂಥಾಲಯಗಳಿಗೆ ನೀಡುತ್ತಿರುವ ಅನುದಾನವನ್ನು ಬಿಡುಗಡೆ ಮಾಡಬೇಕು. ಪ್ರತಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕ್ರೀಡಾ ಮತ್ತು ಶಾರೀರಕ ತರಬೇತಿಗಾಗಿ ಪ್ರತಿ 50 ವಿದ್ಯಾರ್ಥಿಗಳಿಗೆ ಒಬ್ಬರಂತೆ ತರಬೇತಿದಾರರನ್ನು ನೇಮಕ ಮಾಡಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸಲಾಯಿತು.  ಇದನ್ನೂ ಓದಿ: ಜಮೀರ್ ಮನೆ ಬಗ್ಗೆ ನಾನಂತೂ ದೂರು ಕೊಟ್ಟಿಲ್ಲ: ಹೆಚ್‍ಡಿಕೆ

    ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಡಾ.ಅಶ್ವತ್ಥನಾರಾಯಣ ಅವರು, ಈಗಾಗಲೇ ಈ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನ ಆಸ್ತಿಯೆಲ್ಲ ಬಡವರ ಬಳಿಯೇ ಇದೆ: ಜಮೀರ್

  • ಮಲ್ಲೇಶ್ವರಂ ಕ್ಷೇತ್ರದಲ್ಲಿ ಮೊದಲ ಡೋಸ್ ಲಸಿಕೆ ಪಡೆಯದವರು ಪಟ್ಟಿ ಸಲ್ಲಿಸಿ: ಅಶ್ವತ್ಥ ನಾರಾಯಣ

    ಮಲ್ಲೇಶ್ವರಂ ಕ್ಷೇತ್ರದಲ್ಲಿ ಮೊದಲ ಡೋಸ್ ಲಸಿಕೆ ಪಡೆಯದವರು ಪಟ್ಟಿ ಸಲ್ಲಿಸಿ: ಅಶ್ವತ್ಥ ನಾರಾಯಣ

    ಬೆಂಗಳೂರು: ಮಲ್ಲೇಶ್ವರಂ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆಯ ಮೊದಲನೇ ಡೋಸ್ ಇನ್ನೂ ಯಾರಿಗೆ ಆಗಿಲ್ಲವೋ ಅಂಥವರ ಹೆಸರುಗಳ ಪಟ್ಟಿಯನ್ನು ತಮ್ಮ ಕಚೇರಿಗೆ ಸಲ್ಲಿಸುವಂತೆ ಕ್ಷೇತ್ರದ ಶಾಸಕರೂ ಆದ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕೋವಿಡ್ ಕಾರ್ಯಪಡೆ ಮುಖ್ಯಸ್ಥರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಮನವಿ ಮಾಡಿದ್ದಾರೆ.

    ಈ ಕುರಿತು ಕ್ಷೇತ್ರ ವ್ಯಾಪ್ತಿಯ ಸಂಘ ಸಂಸ್ಥೆಗಳಿಗೆ ಅವರು ಪತ್ರ ಬರೆದಿದ್ದಾರೆ. ಕೋವಿಡ್ ಲಸಿಕೆಯ ಒಂದನೇ ಡೋಸ್ ಹಾಕಿಸಿಕೊಳ್ಳಬೇಕಾಗಿರುವವರ 18 ವರ್ಷವಾದವರ ಪಟ್ಟಿಯನ್ನು ತಮ್ಮ ಕ್ಷೇತ್ರ ಕಚೇರಿಗೆ ಸಲ್ಲಿಸಲು ಅಥವಾ +91 80 23563944 ಸಂಖ್ಯೆಯನ್ನು ಬೆಳಿಗ್ಗೆ 9ರಿಂದ- ಸಂಜೆ 5ರೊಳಗೆ ಸಂಪರ್ಕಿಸಿ ಮಾಹಿತಿ ಕೊಡಲು ಕೋರಿದ್ದಾರೆ.

    ಮೇ ತಿಂಗಳಿಂದ ಇಲ್ಲಿಯವರೆಗೆ ಕ್ಷೇತ್ರದ ಎಲ್ಲಾ ವಾರ್ಡ್ ಗಳಲ್ಲಿ 81 ಲಸಿಕಾ ಶಿಬಿರಗಳನ್ನು ನಡೆಸಲಾಗಿದ್ದು, 18ರಿಂದ 45 ವಯೋಮಾನದೊಳಗಿನ 40,043 ನಾಗರಿಕರು ಪ್ರಯೋಜನ ಪಡೆದಿದ್ದಾರೆ. 45 ವರ್ಷವಾದವರನ್ನು ಸರ್ಕಾರಿ ಲಸಿಕಾ ಕೇಂದ್ರಗಳಿಗೆ ತೆರಳಲು ಉತ್ತೇಜಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

    ಮಲ್ಲೇಶ್ವರಂ ಕ್ಷೇತ್ರವು 18 ವರ್ಷ ಮೇಲ್ಪಟ್ಟವರಿಗೆ ಶೇ 100ರಷ್ಟು ಲಸಿಕೆ ಪೂರೈಸಿದ ಮೊದಲ ಕ್ಷೇತ್ರವಾಗಬೇಕೆಂಬ ಗುರಿಯೊಂದಿಗೆ ಕೆಲಸ ಮಾಡಲಾಗುತ್ತಿದೆ, ಲಸಿಕಾ ವ್ಯಾಪ್ತಿಗೆ ಎಲ್ಲರನ್ನೂ ಒಳಪಡಿಸಲು ಅಗತ್ಯ ಸಹಕಾರ ನೀಡಬೇಕು. ಈ ಸಂಬಂಧ ಯಾವುದೇ ಮಾಹಿತಿಯನ್ನು ashwathcn@gmail.com ಗೆ ಇ-ಮೇಲ್ ಕೂಡ ಮಾಡಬಹುದು ಎಂದು ತಿಳಿಸಿದ್ದಾರೆ.

  • ಶ್ಯಾಮಪ್ರಸಾದ್ ಮುಖರ್ಜಿ ಸ್ಮರಣಾರ್ಥ ಬಿಜೆಪಿಯಿಂದ 11 ಲಕ್ಷ ಸಸಿ ನಡುವ ಕಾರ್ಯಕ್ರಮ

    ಶ್ಯಾಮಪ್ರಸಾದ್ ಮುಖರ್ಜಿ ಸ್ಮರಣಾರ್ಥ ಬಿಜೆಪಿಯಿಂದ 11 ಲಕ್ಷ ಸಸಿ ನಡುವ ಕಾರ್ಯಕ್ರಮ

    – ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪರಿಸರ ಶಿಕ್ಷಣ

    ಬೆಂಗಳೂರು: ಜನಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಡಾ.ಶ್ಯಾಮಪ್ರಸಾದ್ ಮುಖರ್ಜಿ ಸ್ಮರಣಾರ್ಥ ರಾಜ್ಯದಲ್ಲಿ 11 ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಬಿಜೆಪಿ ಹಾಕಿಕೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

    ಬೆಂಗಳೂರಿನ ಬಿಜೆಪಿ ನಗರ ಕಚೇರಿಯಲ್ಲಿ ಮಂಗಳವಾರ ಡಾ.ಶ್ಯಾಮಪ್ರಸಾದ್ ಮುಖರ್ಜಿ ಜಯಂತಿ ಪ್ರಯುಕ್ತ ಸಸಿಗಳ ಬೀಜದ ಉಂಡೆ ತಯಾರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಪಕ್ಷದ ಯುವಮೋರ್ಚಾ ಕಾರ್ಯಕರ್ತರು ಬೀಜದ ಉಂಡೆಗಳನ್ನು ತಯಾರು ಮಾಡುತ್ತಿದ್ದು, ರಾಜ್ಯದೆಲ್ಲೆಡೆ ಬಹಳ ಉತ್ಸಾಹದಿಂದ ಈ ಕಾರ್ಯ ನಡೆಯುತ್ತಿದೆ ಎಂದರು.

    ಎಲ್ಲೆಲ್ಲಿ ಸಸಿಗಳನ್ನು ನೆಡಬೇಕು ಎಂಬುದನ್ನು ಗುರುತಿಸಲಾಗುವುದು. ಗಿಡವನ್ನು ನೆಟ್ಟ ನಂತರ ಸ್ಥಳೀಯ ಮಟ್ಟದಲ್ಲೇ ಅದನ್ನು ಆರೈಕೆ ಮಾಡುವ ಕೆಲಸವನ್ನೂ ಮಾಡಲಾಗುವುದು ಎಂದು ಡಿಸಿಎಂ ಹೇಳಿದರು.

    ಶಿಕ್ಷಣ ನೀತಿಯಲ್ಲಿ ಪರಿಸರ ವಿಷಯವನ್ನು ಈ ವರ್ಷದಿಂದಲೇ ಜಾರಿಗೆ ಬರುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪರಿಸರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಎಲ್ಲ ಶೈಕ್ಷಣಿಕ ಹಂತಗಳಲ್ಲೂ ಪರಿಸರವನ್ನು ವಿಶೇಷ ಒತ್ತು ನೀಡಿ ಬೋಧಿಸಲಾಗಿದೆ ಎಂದು ಇದೇ ವೇಳೆ ಉಪ ಮುಖ್ಯಮಂತ್ರಿಗಳು ತಿಳಿಸಿದರು.

    ಭಾರತವು ಕೈಗಾರಿಕೆ ಇನ್ನಿತರೆ ಕ್ಷೇತ್ರಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಅದಕ್ಕೆ ಪೂರಕವಾಗಿ ಹಸಿರನ್ನು ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಜಾಗತಿಕ ಹವಾಮಾನದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಕ್ಕೆ ನಾಯಕತ್ವ ವಹಿಸಿ ಕೆಲಸ ಮಾಡುತ್ತಿದ್ದಾರೆ. ಕಳೆದ 7 ವರ್ಷಗಳಲ್ಲಿ ದೇಶಾದ್ಯಂತ ಅರಣ್ಯದ ಪ್ರಮಾಣ ಶೇ.24ಕ್ಕೆ ವಿಸ್ತರಿಸಲಾಗಿದೆ. ಜತೆಗೆ, ವನ್ಯಜೀವಿಗಳನ್ನು ರಕ್ಷಿಸಿ ಅವುಗಳ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಈ ನಿಟ್ಟಿನಲ್ಲಿ ಪಕ್ಷವೂ ಕಾರ್ಯೋನ್ಮುಖವಾಗಿದೆ ಎಂದರು.

    ರಾಜ್ಯದಲ್ಲಿ ಮಾಲಿನ್ಯ ನಿಯಂತ್ರಕ್ಕೆ ಹೆಚ್ಚು ಹೆಚ್ಚಾಗಿ ಅಸಂಪ್ರದಾಯಿಕ ಇಂಧನ ಮೂಲಗಳನ್ನು ಬಳಕೆ ಮಾಡವುದು, ಸೌರಶಕ್ತಿ ಉತ್ಪಾದನೆಗೆ ಒತ್ತು ಹಾಗೂ ಎಲೆಕ್ಟ್ರಿಕ್ ವಾಹನಗಳ ಬಳಕೆ ಭಾರೀ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

    ಯುವಮೋರ್ಚಾ ಅಧ್ಯಕ್ಷ ಡಾ.ಸಂದೀಪ್, ಪಕ್ಷದ ಕೇಂದ್ರ ವಿಭಾಗದ ಅಧ್ಯಕ್ಷ ಮಂಜುನಾಥ್, ಬೆಂಗಳೂರು ಉತ್ತರ ಅಧ್ಯಕ್ಷ ನಾರಾಯಣ ಗೌಡ, ವಿಭಾಗೀಯ ಸಂಘಟನಾ ಕಾರ್ಯದರ್ಶಿ ದಶರಥ್, ಪ್ರಶಾಂತ್, ಅಭಿಲಾಶ್ ರೆಡ್ಡಿ, ಪುನೀತ್, ಗಂಗಾಧರ್, ಅನಿಲ್ ಶೆಟ್ಟಿ ಸೇರಿ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

  • 1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳ ವಿತರಣೆಗೆ ನಾಳೆ ಸಿಎಂ ಚಾಲನೆ

    1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳ ವಿತರಣೆಗೆ ನಾಳೆ ಸಿಎಂ ಚಾಲನೆ

    – ರಾಜ್ಯ ಉನ್ನತ ಶಿಕ್ಷಣದಲ್ಲಿ ಕ್ರಾಂತಿಕಾರಿ ಉಪಕ್ರಮ

    ಬೆಂಗಳೂರು : ಉನ್ನತ ಶಿಕ್ಷಣ ಕಲಿಕೆಯಲ್ಲಿ ಇಡೀ ದೇಶದಲ್ಲೇ ಮೊದಲು ಎನ್ನುವ ಹೆಗ್ಗಳಿಕೆಗೆ ಹೊಂದಿರುವ ‘ಕಲಿಕಾ ನಿರ್ವಹಣಾ ವ್ಯವಸ್ಥೆ’ (Learning Management System) ಬೋಧನೆ-ಕಲಿಕೆಗೆ ಅನುಕೂಲವಾಗುವಂತೆ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ವಿತರಣೆ ಮಾಡುವ ಮಹತ್ವದ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಬೆಳಗ್ಗೆ 11 ಗಂಟೆಗೆ ಚಾಲನೆ ನೀಡಲಿದ್ದಾರೆ.

    ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಡಿಜಿಟಲ್ ಅಂತರವೂ ಅಳಿಸಿಹಾಕುವ ಧ್ಯೇಯದೊಂದಿಗೆ ಸರಕಾರ ಇಷ್ಟು ಬೃಹತ್ ಪ್ರಮಾಣದ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿಎ.ನ್.ಅಶ್ವತ್ಥನಾರಾಯಣ ತಿಳಿಸಿದರು.

    ಈ ಕಾರ್ಯಕ್ರಮಕ್ಕಾಗಿ ಉನ್ನತ ಶಿಕ್ಷಣ ಇಲಾಖೆಯ ಜತೆಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ಕೈಜೋಡಿಸಿವೆ ಎಂದು ಅವರು ಹೇಳಿದರು.

    ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಸಾಂಕೇತಿಕವಾಗಿ ಟ್ಯಾಬ್ಲೆಟ್ ಪಿಸಿಗಳನ್ನು ವಿತರಣೆ ಮಾಡುವರು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಶಾಸಕರು ಆಯಾ ಜಿಲ್ಲೆಗಳಲ್ಲಿ ವಿತರಣೆ ಮಾಡುವರು. ವರ್ಚುಯಲ್ ವೇದಿಕೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಎಲ್ಲ ಸಚಿವರು ಜಿಲ್ಲೆಗಳಿಂದ ಭಾಗಿಯಾಗುವರು ಹಾಗೂ ಕೆಲ ವಿದ್ಯಾರ್ಥಿಗಳು ಕೂಡ ಅಭಿಪ್ರಾಯ ಹಂಚಿಕೊಳ್ಳುವರು ಎಂದು ಡಿಸಿಎಂ ಮಾಹಿತಿ ನೀಡಿದರು.

    ಈ ಕಾರ್ಯಕ್ರಮ ಉನ್ನತ ಶಿಕ್ಷಣ ಇಲಾಖೆಯ ‘ವಿಜಯೀಭವ’, ಜ್ಞಾನನಿಧಿ ಯುಟ್ಯೂಬ್ ಚಾನೆಲ್‍ಗಳಲ್ಲಿ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಫೇಸ್‍ಬುಕ್ & ಟ್ವಿಟ್ಟರ್ ಖಾತೆಗಳಲ್ಲಿ ನೇರ ಪ್ರಸಾರ ಆಗಲಿದೆ. ವೀಕ್ಷಣೆಗೆ ಈ ಲಿಂಕ್ ಕ್ಲಿಕ್ ಮಾಡಿ..
    https://youtube.com/c/VijayiBhava
    https://youtube.com/c/JnanaNidhiDCE
    https://www.facebook.com/Department-of-Collegiate-Education-100568944804207/
    https://twitter.com/collegiate_of?s=09

    ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 87 ಸರ್ಕಾರಿ ಪಾಲಿಟೆಕ್ನಿಕ್ ಹಾಗೂ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ನೀಡಲಾಗುವುದು. ಈ ಯೋಜನೆಗಾಗಿ ರಾಜ್ಯ ಸರಕಾರ 163 ಕೋಟಿ ರೂ. ವೆಚ್ಚ ಮಾಡಿದೆ. ಇದರ ಜತೆಯಲ್ಲೇ ಸರ್ಕಾರಿ ಕಾಲೇಜುಗಳಲ್ಲಿ 2,500 ಸ್ಮಾರ್ಟ್ ಕ್ಲಾಸ್ ರೂಂಗಳಿಗೆ ಚಾಲನೆ ನೀಡಲಾಗುತ್ತಿದ್ದು, ನಾಳೆಯ ಕಾರ್ಯಕ್ರಮದ ನಿಮಿತ್ತ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸ್ಮಾರ್ಟ್ ಕ್ಲಾಸ್ ರೂಂನ ಒಂದರ ಪ್ರಾತ್ಯಕ್ಷಿಕೆಯೂ ಇರುತ್ತದೆ.

    ಯಾವುದೇ ವಿದ್ಯಾರ್ಥಿ ಸಾಮಾಜಿಕ, ಆರ್ಥಿಕ ಅಥವಾ ಇನ್ನಾವುದೇ ಕಾರಣದಿಂದ ಕೋವಿಡ್ ಕಾಲದಲ್ಲಿ ಕಲಿಕೆಯಿಂದ ವಂಚಿತರಾಗಬಾರದು ಎನ್ನುವುದೇ ಟ್ಯಾಬ್ಲೆಟ್ ಪಿಸಿ ಯೋಜನೆಯ ಮುಖ್ಯ ಉದ್ದೇಶ. ಕೋವಿಡ್ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳು ಎಲ್ಲೇ ಇದ್ದರೂ ಈ ಟ್ಯಾಬ್ಲೆಟ್ ಪಿಸಿಗಳ ಮೂಲಕ ಎಲ್‍ಎಂಎಸ್ ವ್ಯವಸ್ಥೆಯಲ್ಲಿ ಕಲಿಕೆ ಮುಂದುವರಿಸಬಹುದು.

    ಈಗಾಗಲೇ ಕಲಿಕಾ ನಿರ್ವಹಣಾ ವ್ಯವಸ್ಥೆ ಅನುಷ್ಠಾನಕ್ಕೆ ಬಂದಿದೆ. ಅದರಂತೆ ವಿದ್ಯಾರ್ಥಿಗಳು ಸುಲಭ ವ್ಯಾಸಂಗಕ್ಕೆ ಈ ಟ್ಯಾಬ್ಲೆಟ್ ಗಳು ಸಹಾಯಕ. ವಿದ್ಯಾರ್ಥಿಗಳ ಜ್ಞಾನಾರ್ಜನೆ ಮಟ್ಟವನ್ನೂ ಹೆಚ್ಚಿಸಲು ಇವು ಪೂರಕ. ಇಂದಿನ ಜಾಗತಿಕ ಮಟ್ಟದ ಆಧುನಿಕ ಕಲಿಕಾ ಮಟ್ಟಕ್ಕೆ ತಕ್ಕಂತೆ ಕಲಿಕೆಯನ್ನು ನಿರಂತರವಾಗಿ ಮುಂದುವರಿಸುವುದು ಹಾಗೂ ಆನ್‍ಲೈನ್ ಮೂಲಕವೇ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಗಳು ನೆರವಾಗುತ್ತವೆ.

    ಈ ಟ್ಯಾಬ್ಲೆಟ್‍ಗಳು ಉತ್ತಮವಾಗಿವೆ ಹಾಗೂ ಕಲಿಕೆಗೆ ಬೇಕಾದ ಎಲ್ಲ ಫೀಚರುಗಳನ್ನು ಒಳಗೊಂಡಿವೆ. ವೈಫೈ, ಸಿಮ್ ಬಳಕೆಯಿಂದ ಇವುಗಳಿಗೆ ಇಂಟರ್ ನೆಟ್ ಸಂಪರ್ಕ ಕಲ್ಪಿಸಬಹುದು. ವೈಫೈ ಲಭ್ಯತೆ ಇಲ್ಲದ ಕಡೆಗಳಲ್ಲಿ ಸಿಮ್ ಬಳಕೆಯ ಮೂಲಕವೇ ಆನ್‍ಲೈನ್ ತರಗತಿಯಲ್ಲಿ ಪಾಲ್ಗೊಳ್ಳಬಹುದು.

    ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಹುತೇಕ ಎಲ್ಲ ವಿದ್ಯಾರ್ಥಿಗಳು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದವರಾಗಿದ್ದು ಅವರ ಕಲಿಕೆಗೆ ಹೆಗಲು ಕೊಡಬೇಕಾದ ಹೊಣೆಗಾರಿಕೆ ಸರಕಾರದ್ದು. ಇಂಥ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಗಳನ್ನು ನೀಡುವ ಮೂಲಕ ಗ್ರಾಮೀಣ ಕರ್ನಾಟಕದಲ್ಲಿ ಸರಕಾರಿ-ಖಾಸಗಿ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ನಡುವಿನ ಡಿಜಿಟಲ್ ತಾರತಮ್ಯವನ್ನು ಸಂಪೂರ್ಣವಾಗಿ ಅಳಿಸಿ ಹಾಕಿದಂತಾಗಿದೆ.

  • ಒಲಿಂಪಿಕ್ಸ್ ಗೆ ತೆರಳುವ ಕ್ರೀಡಾಪಟುಗಳು ಸೇರಿ ವಿದೇಶಕ್ಕೆ ಹೋಗುವವರಿಗೆ ಜೂ.22ರಿಂದ ಲಸಿಕೆ: ಡಿಸಿಎಂ

    ಒಲಿಂಪಿಕ್ಸ್ ಗೆ ತೆರಳುವ ಕ್ರೀಡಾಪಟುಗಳು ಸೇರಿ ವಿದೇಶಕ್ಕೆ ಹೋಗುವವರಿಗೆ ಜೂ.22ರಿಂದ ಲಸಿಕೆ: ಡಿಸಿಎಂ

    ಬೆಂಗಳೂರು: ವ್ಯಾಸಂಗ ಅಥವಾ ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜು ಆವರಣದಲ್ಲಿ ಇದೇ 22ರಿಂದ ಕೋವಿಡ್ ಲಸಿಕೆ ಹಾಕಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

    ಟೋಕಿಯೋದಲ್ಲಿ ನಡೆಯುವ ಒಲಿಂಪಿಕ್ ಕ್ರೀಡಾಕೂಟಕ್ಕೆ ತೆರಳುವ ಕ್ರೀಡಾಪಟುಗಳು ಸೇರಿ ವಿದೇಶಕ್ಕೆ ವ್ಯಾಸಂಗ- ಉದ್ಯೋಗಕ್ಕೆ ತೆರಳುವ ಎಲ್ಲರೂ ಇಲ್ಲಿ ಬಂದು ಲಸಿಕೆ ಪಡೆಯಬಹುದು. ಮಂಗಳವಾರ ಬೆಳಗ್ಗೆ 10.30ಗಂಟೆಯಿಂದ ಲಸಿಕೆ ನೀಡಲಾಗುವುದು. ಈ ಮೊದಲೇ ಸೆಂಟ್ರಲ್ ಕಾಲೇಜ್‍ನಲ್ಲಿ ವಿದೇಶಕ್ಕೆ ತೆರಳುವ 1,500ಕ್ಕೂ ಹೆಚ್ಚು ವಿದ್ಯಾರ್ಥಿ/ ಉದ್ಯೋಗಿಗಳಿಗೆ ಮೊದಲ ಡೋಸ್ ಕೊಡಲಾಗಿದೆ ಎಂದು ಡಿಸಿಎಂ ಹೇಳಿದರು.

    ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರಗಳ ಬಗ್ಗೆ ಡಿಸಿಎಂ ನೀಡಿದ ವಿವರ ಹೀಗಿದೆ:
    * ಇದಕ್ಕಾಗಿ ಪಾಲಿಕೆಯ 8 ವಲಯಗಳ ಆಯುಕ್ತರನ್ನು ‘ಸಮರ್ಥ ಅಧಿಕಾರಿ’ (competent authority) ಗಳನ್ನಾಗಿ ನೇಮಿಸಲಾಗಿದ್ದು, ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಪೂರ್ವ ವಲಯದ ಆರೋಗ್ಯಾಧಿಕಾರಿಯನ್ನು ‘ಸಮರ್ಥ ಅಧಿಕಾರಿ’ ಎಂದು ಗುರುತಿಸಲಾಗಿದೆ.

    * ಈ ವರ್ಗದ ಜನರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 28 ದಿನಗಳಲ್ಲೇ ಎರಡನೇ ಡೋಸ್ ನೀಡಲಾಗುವುದು.

    * ಲಸಿಕೆ ಕೇಂದ್ರಕ್ಕೆ ಬರುವ ಅರ್ಹ ಲಸಿಕಾಂಕ್ಷಿಗಳ ಸ್ವಯಂ ಘೋಷಣಾ ಪತ್ರ ಸೇರಿ ಇತರೆ ದಾಖಲೆಗಳನ್ನು ಪರಿಶೀಲಿಸಬೇಕು. ಲಸಿಕೆ ಪಡೆದ ದೃಢೀಕರಣ ಪತ್ರವನ್ನು ತಕ್ಷಣ ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಿಸಬೇಕು.

    * ಈಗಾಗಲೇ ಮೊದಲ ಡೋಸ್ ಪಡೆದಿರುವವರು ತಮ್ಮ ಪಾಸ್‍ಪೋರ್ಟ್ ಸಂಖ್ಯೆಯನ್ನು ದಾಖಲು ಮಾಡಿರದಿದ್ದರೆ ಎರಡನೇ ಡೋಸ್ ಪಡೆಯಲು ಬರುವಾಗ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕು.

  • ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ: ಅಶ್ವತ್ಥ ನಾರಾಯಣ

    ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ: ಅಶ್ವತ್ಥ ನಾರಾಯಣ

    ಬೆಂಗಳೂರು: ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಮೊಟಕುಗೊಳಿಸುವ ಯಾವುದೇ ಚಿಂತನೆ ಅಥವಾ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

    ಗುರುವಾರ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸ್ಥಳೀಯ ಹಾಗೂ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚು ಮನ್ನಣೆ ನೀಡಿ ಆ ಭಾಷೆಗಳಲ್ಲೇ ವೃತ್ತಿಪರ ಶಿಕ್ಷಣ ಸೇರಿ ಎಲ್ಲ ವಿಭಾಗದ ಉನ್ನತ ಶಿಕ್ಷಣವನ್ನು ಬೋಧಿಸಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ. ಈ ಅಂಶಕ್ಕೆ ಶಿಕ್ಷಣ ನೀತಿಯಲ್ಲಿ ಹೆಚ್ಚು ಒತ್ತು ನೀಡಲಾಗಿದೆ ಎಂದಿದ್ದಾರೆ.

    ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ, ಪದವಿ ಶಿಕ್ಷಣ ಸಂರಚನೆ ಹೀಗಿರುತ್ತದೆ. ಮೂರು ವರ್ಷ ವ್ಯಾಸಂಗ ಮಾಡಿದರೆ ಪದವಿ ಮುಗಿಯುತ್ತದೆ. ನಾಲ್ಕು ವರ್ಷ ಓದಿದರೆ ಅದನ್ನು ‘ಡಿಗ್ರಿ ಆನರ್ಸ್’ ಎಂದು ಪರಿಗಣಿಸಲಾಗುತ್ತದೆ, ಮತ್ತೂ ಐದು ವರ್ಷ ವ್ಯಾಸಂಗ ಮಾಡಿದರೆ ಸ್ನಾತಕೋತ್ತರ ಪದವಿಯೇ ಪೂರ್ಣಗೊಳಿಸಿದಂತೆ ಆಗುತ್ತದೆ. ಇದು ಪೂರ್ವ ವ್ಯವಸ್ಥೆಯ ಸುಧಾರಣಾ ಕ್ರಮವಷ್ಟೇ ಎಂದು ಡಿಸಿಎಂ ವಿವರಿಸಿದ್ದಾರೆ.

    ಈ ವಿಷಯ ಇನ್ನು ಕರಡು ತಯಾರಿಕೆ ಹಂತದಲ್ಲಿದೆ. ಈಗಲೇ ಅದರ ಬಗ್ಗೆ ಆತಂಕಪಡುವ ಅಗತ್ಯ ಇಲ್ಲ. ಮುಖ್ಯವಾಗಿ ಪದವಿ ಶಿಕ್ಷಣದಲ್ಲಿ ಎರಡು ವರ್ಷ ಕನ್ನಡ ಬೋಧನೆ ಆಗುತ್ತಿರುವ ಹಾಲಿ ವ್ಯವಸ್ಥೆಯಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ. ಮಾತೃಭಾಷೆ ಕಲಿಕೆಯನ್ನು ಒಂದು ವರ್ಷಕ್ಕೆ ಸೀಮಿತಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿಲ್ಲ ಎಂದು ಡಾ.ಅಶ್ವತ್ಥನಾರಾಯಣ ಸ್ಪಷ್ಟವಾಗಿ ಪುನುರುಚ್ಛರಿಸಿದ್ದಾರೆ. ಇದನ್ನೂ ಓದಿ: ಡಿಸಿಎಂ ಅಶ್ವತ್ಥನಾರಾಯಣ ಅವರಿಗೆ ಐಟಿಸಿಎ ಫೆಲೋಶಿಪ್

    ಶಿಕ್ಷಣದಲ್ಲಿ ಗುಣಮಟ್ಟ ಹಾಗೂ ಜಾಗತಿಕ ದೃಷ್ಟಿ ಇಟ್ಟುಕೊಂಡು ಅತ್ಯಂತ ಪುರಾತನ ಭಾಷೆಯಾದ ಕನ್ನಡದ ಭೋಧನೆ ಮತ್ತು ಕಲಿಕೆಯನ್ನು ಮತ್ತಷ್ಟು ವಿಸ್ತೃತಗೊಳಿಸುವ ಉದ್ದೇಶ ಸರಕಾರಕ್ಕೆ ಇದೆಯೇ ವಿನಾ, ಅದಕ್ಕೆ ಧಕ್ಕೆ ಉಂಟು ಮಾಡುವ ಯಾವುದೇ ಚಿಂತನೆ ಹೊಂದಿಲ್ಲ. ಈ ಬಗ್ಗೆ ಯಾವುದೇ ತಪ್ಪು ಅಭಿಪ್ರಾಯ ಉಂಟಾಗುವುದು ಬೇಡ ಎಂದು ಡಿಸಿಎಂ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಡಾ.ಅಶ್ವತ್ಥನಾರಾಯಣ್ ಫೌಂಡೇಶನ್‍ನಿಂದ ಮಲ್ಲೇಶ್ವರ ಕ್ಷೇತ್ರದಲ್ಲಿ 25,000 ಲಸಿಕೆ -ಡಿಸಿಎಂ

    ಈ ವರ್ಷದಿಂದಲೇ ಶಿಕ್ಷಣ ನೀತಿ ಜಾರಿ ಆಗುತ್ತದೆ. ಅಂದರೆ, ಮೊದಲ ವರ್ಷವನ್ನು ಶೂನ್ಯವರ್ಷ ಎಂದು ಪರಿಗಣಿಸಲಾಗಿದೆ. ಆಡಳಿತಾತ್ಮಕ-ಕಾನೂನಾತ್ಮಕ ಸಿದ್ಧತೆಗಳನ್ನು ಪ್ರಸಕ್ತ ವರ್ಷದಲ್ಲಿ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಅದರ ರೂಪುರೇಶೆಯಷ್ಟೇ ಸದ್ಯಕ್ಕೆ ಸಿದ್ಧವಾಗುತ್ತಿದೆ. ಕನ್ನಡ ಕಲಿಕೆಯನ್ನು ಮೊಟಕುಗೊಳಿಸಲಾಗುತ್ತದೆ ಎಂದು ಈಗಲೇ ಆತಂಕಪಡುವುದು ಬೇಡ. ಸೂಕ್ತ ಮಾಹಿತಿ ಪಡೆದುಕೊಂಡು ಗೊಂದಲ ಬಗೆಹರಿಸಿಕೊಳ್ಳಬಹುದು ಎಂದು ಡಿಸಿಎಂ ಮನವಿ ಮಾಡಿದರು. ಇದನ್ನೂ ಓದಿ: ವಿದೇಶದಲ್ಲಿ ಉದ್ಯೋಗ, ವ್ಯಾಸಂಗ ಮಾಡುವವರಿಗೆ ವ್ಯಾಕ್ಸಿನ್: ಅಶ್ವತ್ಥನಾರಾಯಣ್

  • ನಗರದ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ 100 ಬೆಡ್ ಆಸ್ಪತ್ರೆ: 4 ಅಸೆಂಬ್ಲಿ ಕ್ಷೇತ್ರಕ್ಕೊಂದು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ

    ನಗರದ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ 100 ಬೆಡ್ ಆಸ್ಪತ್ರೆ: 4 ಅಸೆಂಬ್ಲಿ ಕ್ಷೇತ್ರಕ್ಕೊಂದು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ

    – 15 ದಿನದಲ್ಲಿ ಕ್ರಿಯಾ ಯೋಜನೆ ಸಲ್ಲಿಸುವಂತೆ ಬಿಬಿಎಂಪಿಗೆ ಸೂಚಿಸಿದ ಡಿಸಿಎಂ
    – ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ/ಎಲ್ಲೆಡೆ ತಾಂತ್ರಿಕ ಸುಧಾರಣೆ

    ಬೆಂಗಳೂರು: ನಗರದ ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ 100 ಬೆಡ್‍ಗಳ ಸುಸಜ್ಜಿತ ಆಸ್ಪತ್ರೆ ಹಾಗೂ 4 ವಿಧಾನಸಭೆ ಕ್ಷೇತ್ರಕ್ಕೊಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವ ಯೋಜನೆಯ ‘ಕ್ರಿಯಾ ಯೋಜನೆ’ಯನ್ನು 15 ದಿನದೊಳಗೆ ಸಿದ್ಧಪಡಿಸಿ ಸಲ್ಲಿಸುವಂತೆ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿನೆ ನೀಡಿದರು.

    ಈ ಸಂಬಂಧ ಬೆಂಗಳೂರಿನಲ್ಲಿ ಬುಧವಾರ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹಾಗೂ ಇತರೆ ಅಧಿಕಾರಿಗಳ ಜತೆ ಮಾತಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

    ಎಲ್ಲೆಲ್ಲಿ ಆಸ್ಪತ್ರೆಗಳನ್ನು ನಿರ್ಮಿಸಬಹುದು, ಯಾವ ಯಾವ ಕ್ಷೇತ್ರಕ್ಕೆ ಅಗತ್ಯವಿದೆ? ಎಲ್ಲೆಲ್ಲಿ ಸ್ಥಳ ಲಭ್ಯವಿದೆ? ಎಲ್ಲೆಲ್ಲಿ ಭೂಮಿಯನ್ನು ಹೊಸದಾಗಿ ಪಡೆದುಕೊಳ್ಳಬೇಕಿದೆ? ಒಟ್ಟಾರೆ ಎಷ್ಟು ವೆಚ್ಚ ಆಗಲಿದೆ? ಆಡಳಿತ ಮತ್ತು ಕಾನೂನಾತ್ಮಕವಾಗಿ ಸರ್ಕಾರ ಯಾವೆಲ್ಲ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸಮಗ್ರ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವಂತೆ ಮುಖ್ಯ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದರು ಡಿಸಿಎಂ.

    ಕೋವಿಡ್ ಕಾರ್ಯಪಡೆ ಸಭೆಯಲ್ಲಿ ಈ ಯೋಜನೆಗೆ ಒಪ್ಪಿಗೆ ನೀಡಲಾಗಿದ್ದು, ಆದಷ್ಟು ಬೇಗ ಯೋಜನೆಯನ್ನು ಕಾರ್ಯಗತ ಮಾಡಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

    ಇನ್ನಷ್ಟು ಸುಧಾರಣಾ ಕ್ರಮ:
    ಈಗ ಎಲ್ಲವೂ ಅನ್‍ಲಾಕ್ ಆಗುತ್ತಿದೆ. ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ. 1.50 ಕೋಟಿ ಜನಸಂಖ್ಯೆ ಇರುವ ನಗರ ಬೆಂಗಳೂರು. ಅಲ್ಲದೆ, 50 ಲಕ್ಷ ಜನರು ನಿತ್ಯ ಸಂಚರಿಸುತ್ತಾರೆ. ಈ ಹಿನ್ನೆಲೆಯಲ್ಲಿ ನಗರದ ಆರೋಗ್ಯ ಮೂಲಭೂತ ಸೌಲಭ್ಯಗಳನ್ನು ಸುಧಾರಿಸುವ ಸಂಬಂಧ ಸರಕಾರ ಕ್ರಮ ವಹಿಸಿದೆ ಎಂದರು ಡಿಸಿಎಂ.

    ಪ್ರತೀ ವಾರ್ಡ್ ನಲ್ಲೂ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ ಮಾಡಲಾಗುವುದು. ಈಗಾಗಲೇ ಕೆಲವೆಡೆ ಸಣ್ಣ ಪ್ರಮಾಣದ ಆರೋಗ್ಯ ಕೇಂದ್ರಗಳಿದ್ದು, ಅವುಗಳನ್ನು ಮೇಲ್ದರ್ಜೆಗೇರಿಸಲಾಗುವುದು ಹಾಗೂ ಕಿರಿದಾದ ಜಾಗದಲ್ಲಿರುವ ಕೇಂದ್ರಗಳನ್ನು ವಿಶಾಲ ಜಾಗಕ್ಕೆ ಶಿಫ್ಟ್ ಮಾಡಲಾಗುವುದು. ಸೂಕ್ತ ಮೂಲಸೌಕರ್ಯ, ಸಿಬ್ಬಂದಿ ನೇಮಕ ಮಾಡುವುದರ ಜತೆಗೆ, ಎಲ್ಲೆಡೆ ಜನೌಷಧಿ ಕೇಂದ್ರಗಳನ್ನು ತೆರೆಯಲಾಗುವುದು ಎಂದರು ಉಪ ಮುಖ್ಯಮಂತ್ರಿ.

    ತಾಂತ್ರಿಕವಾಗಿಯೂ ಆರೋಗ್ಯ ಕೇಂದ್ರಗಳಲ್ಲಿ ಸುಧಾರಣೆಗಳನ್ನು ಮಾಡಲಾಗುವುದು. ಎಲೆಕ್ಟ್ರಾನಿಕ್ ಮೆಡಿಕಲ್ ದಾಖಲೆಗಳಿರಬೇಕು. ಎಲ್ಲ ಮಾಹಿತಿ ಜತೆಗೆ ಡ್ಯಾಶ್‍ಬೋರ್ಡ್ ಕಡ್ಡಾಯವಾಗಿ ಇರಬೇಕು. ಡಯಾಗ್ನಾಸ್ಟಿಕ್ ಕೇಂದ್ರಗಳ ನೆಟ್‍ವರ್ಕ್ ಆಗಿ ವರದಿಗಳೆಲ್ಲ ಕ್ಲೌಡ್‍ನಲ್ಲಿ ಲಭ್ಯ ಇರಬೇಕು. ಹೀಗೆ ಸಮಗ್ರ ಮಾಹಿತಿ ಇದ್ದರೆ ಮುಂದಿನ ಕೋವಿಡ್ ಸ್ಥಿತಿ ಎದುರಿಸುವುದು ಸುಲಭ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

    ಟ್ರಾಯಾಜಿಂಗ್ ಹೆಚ್ಚಳ:
    ಅನ್‍ಲಾಕ್ ಆಗುತ್ತಿದ್ದಂತೆಲ್ಲ ಹೊರಗಿನಿಂದ ಹೆಚ್ಚು ಜನ ಬೆಂಗಳೂರಿಗೆ ವಾಪಸ್ ಬರುತ್ತಿದ್ದಾರೆ. ಇವರೆಲ್ಲರನ್ನೂ ಪರೀಕ್ಷೆ ಮಾಡುವಂತೆ ಸೂಚಿಸಲಾಗಿದೆ. ದಿನಕ್ಕೆ ಕೊನೆಪಕ್ಷ 75,000 ರಾಪಿಡ್, ಆರ್ ಟಿಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಗುವುದು. ಪೂಲಿಂಗ್ ಟೆಸ್ಟ್ ಕೂಡ ಮಾಡುವ ಬಗ್ಗೆಯೂ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಹಾಗೆಯೇ, ಈಗಾಗಲೇ ನೇಮಕ ಮಾಡಿಕೊಂಡಿರುವ ಸಿಬ್ಬಂದಿಯಲ್ಲಿ ಒಬ್ಬರನ್ನೂ ಕೆಲಸದಿಂದ ತೆಗೆಯಬಾರದು ಎಂದು ಬಿಬಿಎಂಪಿಗೆ ಸೂಚಿಸಲಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

    ಪರೀಕ್ಷೆಗಳ ಬಗ್ಗೆ ಮೈಮರೆಯುವಂತಿಲ್ಲ. ಮತ್ತೆ ಸೋಂಕು ಯಾವಾಗ ಬೇಕಾದರೂ ಹೆಚ್ಚಾಗಬಹುದು. ಎಲ್ಲ ಮುನ್ನಚ್ಚರಿಕೆ ವಹಿಸಬೇಕೆಂದು ಬಿಬಿಎಂಪಿಗೆ ತಿಳಿಸಲಾಗಿದೆ ಎಂದರು ಅವರು.

    ಮಾರ್ಗಸೂಚಿ ಮೇಲೆ ನಿಗಾ
    ಸಾರ್ವಜನಿಕ ಸ್ಥಳಗಳಲ್ಲಿ, ಅಂಗಡಿ, ಮುಂಗಟ್ಟು, ಮಾಲ್ ಹಾಗೂ ಕಚೇರಿಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ. ಅದರ ಮೇಲೆ ನಿಗಾ ಇಡಲಾಗುವುದು. ಒಂದು ವೇಳೆ ಎಲ್ಲೇ ಆದರೂ ಎಸ್‍ಒಪಿ ಪಾಲನೆ ಆಗದಿದ್ದರೆ ಒಂದು ಫೊಟೋ ತೆಗೆದು ಬಿಬಿಎಂಪಿಗೆ ವಾಟ್ಸಾಪ್ ಮಾಡಿದರೆ, ಅದರ ಆಧಾರದ ಮೇಲೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಇದು ಖಾಸಗಿ ಸಂಸ್ಥೆಗಳ ಕಚೇರಿಗಳಿಗೂ ಅನ್ವಯ ಆಗುತ್ತದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

    ತಿಂಗಳೊಳಗೆ 80% ಜನರಿಗೆ ಲಸಿಕೆ
    ಬೆಂಗಳೂರಿನಲ್ಲಿ ಈಗಾಗಲೇ 45 ವರ್ಷ ಮೇಲ್ಪಟ್ಟ 65% ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ಕೆಲ ಕ್ಷೇತ್ರಗಳಲ್ಲಿ 95%ರಷ್ಟು ಜನರಿಗೆ ಲಸಿಕೆ ನೀಡಲಾಗಿದೆ. ಕಡಿಮೆ ಇರುವ ಕಡೆ ಹೆಚ್ಚೆಚ್ಚು ಲಸಿಕೀಕರಣ ಮಾಡುವಂತೆ ಸೂಚಿಸಲಾಗಿದೆ. ಈ ತಿಂಗಳೊಳಗೆ ಈ ವಯಸ್ಸಿನ 80% ಜನರಿಗೆ ಲಸಿಕೆ ಕೊಡುವ ಕೆಲಸ ಮುಗಿಯಬೇಕು ಎಂದು ತಿಳಿಸಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

    ಉಪ ಮುಖ್ಯಮಂತ್ರಿಯವರ ಕಾರ್ಯದರ್ಶಿ ಪಿ.ಪ್ರದೀಪ, ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ರಾಜೇಂದ್ರ ಚೋಳನ್ ಮತ್ತಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

  • 7ನೇ ಅಂತಾರಾಷ್ಟ್ರೀಯ ಯೋಗ ದಿನದಂದು 1 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಂದ ಯೋಗ

    7ನೇ ಅಂತಾರಾಷ್ಟ್ರೀಯ ಯೋಗ ದಿನದಂದು 1 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಂದ ಯೋಗ

    – ಡಿಸಿಎಂ ನೇತೃತ್ವದಲ್ಲಿ ಪೂರ್ವಭಾವಿ ಸಭೆ

    ಬೆಂಗಳೂರು: ಇದೇ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವರ್ಚುವಲ್ ವೇದಿಕೆ ಮೂಲಕ ಯೋಗಾಭ್ಯಾಸ ನಡೆಸಲಿದ್ದಾರೆಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

    ಬೆಂಗಳೂರಿನಲ್ಲಿ ಮಂಗಳವಾರ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಕೋವಿಡ್ ಕಾರಣದಿಂದ ಈ ವರ್ಷದ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ರಾಜ್ಯದಲ್ಲಿ ಅತ್ಯಂತ ಸರಳವಾಗಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಕೇವಲ 100 ಜನರು ಮಾತ್ರ ಭಾಗಿಯಾಗಲಿದ್ದಾರೆ. ಅಂದು ಬೆಳಗ್ಗೆ 7ರಿಂದ 8 ಗಂಟೆವರೆಗೆ ಕಾರ್ಯಕ್ರಮ ನಡೆಯುತ್ತದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

    ಈ ವರ್ಷದ ಯೋಗ ದಿನಾಚರಣೆ ಕ್ರೀಡಾ ಮತ್ತು ಯುವಜನ ಸಬಲೀಕರಣ, ನಿಮ್ಹಾನ್ಸ್, ಪರಿವರ್ತನಾ ಯೋಗಾ ಪ್ರತಿಷ್ಠಾನ ಹಾಗೂ ಆರ್ಟ್ ಆಫ್ ಲಿವಿಂಗ್ ಸಹಯೋಗದಲ್ಲಿ ನಡೆಯಲಿದೆ. ಸೋಂಕಿನ ಕಾಯಿಲೆ ಇರುವ ಕಾರಣಕ್ಕೆ ಈ ಕಾರ್ಯಕ್ರಮಕ್ಕೆ ‘ಕೋವಿಡ್-19, ಯುವಜನರು, ಯೋಗ, ಧ್ಯಾನ’ ಎಂಬ ಶೀರ್ಷಿಕೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

    ಸಚಿವ ನಾರಾಯಣಗೌಡ ಅವರು ವರ್ಚುವಲ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಶಾಸಕ ಗೋವಿಂದರಾಜು, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಯುವಜನ ಸೇವೆ ಇಲಾಖೆ ಆಯುಕ್ತ ಗೋಪಾಲಕೃಷ್ಣ ಸಭೆಯಲ್ಲಿ ಹಾಜರಿದ್ದರು.

  • ಡಾ.ಅಶ್ವತ್ಥನಾರಾಯಣ್ ಫೌಂಡೇಶನ್‍ನಿಂದ ಮಲ್ಲೇಶ್ವರ ಕ್ಷೇತ್ರದಲ್ಲಿ 25,000 ಲಸಿಕೆ -ಡಿಸಿಎಂ

    ಡಾ.ಅಶ್ವತ್ಥನಾರಾಯಣ್ ಫೌಂಡೇಶನ್‍ನಿಂದ ಮಲ್ಲೇಶ್ವರ ಕ್ಷೇತ್ರದಲ್ಲಿ 25,000 ಲಸಿಕೆ -ಡಿಸಿಎಂ

    ಬೆಂಗಳೂರು: ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಡಾ.ಅಶ್ವತ್ಥನಾರಾಯಣ್ ಫೌಂಡೇಶನ್ ವತಿಯಿಂದ ಇದುವರೆಗೂ 15,000 ಲಸಿಕೆ ನೀಡಲಾಗಿದ್ದು, ಇನ್ನು ಕೆಲ ದಿನದಲ್ಲೇ 10,000 ಲಸಿಕೆ ಕೊಡಲಾಗುವುದು ಎಂದು ಕ್ಷೇತ್ರದ ಶಾಸಕರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

    ಮಲ್ಲೇಶ್ವರ ಕ್ಷೇತ್ರದಲ್ಲಿ ನಡೆಯುತ್ತಿರುವ ಲಸಿಕೆ ಅಭಿಯಾನದ ನಿಮಿತ್ತ ಸೋಮವಾರದಂದು ಶ್ರೀರಾಮಪುರದ ಬಿಬಿಎಂಪಿ ಶಾಲೆಯ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿರು.

    ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಪ್ರತಿಯೊಬ್ಬರಿಗೂ ಲಸಿಕೆ ಸಿಗುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಪ್ರತಿ ಸ್ಲಮ್‍ನಲ್ಲಿಯೂ ಜನರ ಮನೆಗಳ ಸಮೀಪವೇ ಲಸಿಕೆ ನೀಡುವ ಕೆಲಸ ಆಗುತ್ತಿದೆ. ಬೀದಿಬದಿ ವ್ಯಾಪಾರಿಗೂ, ಸ್ಲಂ ನಿವಾಸಿಗಳು, ಸೆಕ್ಯುರಿಟಿ ಗಾರ್ಡ್, ಆಟೋ ಚಾಲಕರು ಸೇರಿದಂತೆ ಬಿಪಿಎಲ್ ಕಾರ್ಡ್ ಉಳ್ಳ ಎಲ್ಲರನ್ನು ಹುಡುಕಿ- ಹುಡುಕಿ ಲಸಿಕೆ ನೀಡಲಾಗುತ್ತಿದೆ. ನಮ್ಮ ಪಕ್ಷದ ಕಾರ್ಯಕರ್ತರು ಹಗಲಿರುಳೂ ಕೆಲಸ ಮಾಡುತ್ತಿದ್ದಾರೆ ಎಂದರು.

    ಈಗಾಗಲೇ ಸರ್ಕಾರದಿಂದ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಇನ್ನು 18 ವರ್ಷ ಮೇಲ್ಪಟ್ಟವರಿಗೆ ಶೀಘ್ರವೇ ಲಸಿಕೆ ಅಭಿಯಾನ ಪ್ರಾರಂಭ ಮಾಡಲಾಗುವುದು ಎಂದ ಅವರು, ಜತೆಗೆ, ನಮ್ಮ ಬಿಬಿಎಂಪಿ ವತಿಯಿಂದ ಆದ್ಯತಾ ವಲಯದ ಜನರಿಗೆ ವ್ಯಾಕ್ಸಿನ್ ನೀಡಲಾಗುತ್ತಿದೆ. ಮಲ್ಲೇಶ್ವರ ಮಾತ್ರವಲ್ಲದೆ, ಇಡೀ ನಗರದಲ್ಲಿ ಈ ಕೆಲಸ ವೇಗವಾಗಿ ನಡೆಯುತ್ತಿದೆ. ಸದ್ಯದ ಅಂಕಿ-ಅಂಶದ ಪ್ರಕಾರ ಬೆಂಗಳೂರಿಲ್ಲಿ 30- 35% ರಷ್ಟು ಜನರಿಗೆ ಲಸಿಕೆ ನೀಡಲಾಗಿದೆ ಎಂದರು ಡಿಸಿಎಂ.

    18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದಕ್ಕೆ ಮೊದಲು ಲಸಿಕೆ ಅಭಿಯಾನಕ್ಕಾಗಿಯೇ ರಾಜ್ಯ ಸರಕಾರ ಪ್ರತ್ಯೇಕ ಆಪ್ ಸಿದ್ಧತೆ ಮಾಡುತ್ತಿದೆ. ಹೊಸ ಹಾಗೂ ಸುಧಾರಿತ ತಂತ್ರಜ್ಞಾನ ಬಳಸಿಕೊಂಡು ಈ ಆಪ್ ಸಿದ್ಧಪಡಿಸಲಾಗುತ್ತಿದೆ. ಅದು ಶೀಘ್ರವೇ ಬಳಕೆ ಲಭ್ಯವಾಗಲಿದೆ ಎಂದು ಡಿಸಿಎಂ ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

    18 ವರ್ಷ ಮೇಲ್ಪಟ್ಟವರಿಕೆ ವ್ಯಾಕ್ಸಿನೇಷನ್ ಶುರುವಾದ ಮೇಲೆ ಲಸಿಕೆಗೆ ಸಹಜವಾಗಿಯೇ ಬೇಡಿಕೆ ಹೆಚ್ಚಾಗಲಿದೆ. ಅದಕ್ಕೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದ ಡಿಸಿಎಂ, ಆಪ್ ಬಂದ ಮೇಲೆ ಆಯಾ ಪ್ರದೇಶದವರು ಆಯಾ ಪ್ರದೇಶದಲ್ಲೇ ಲಸಿಕೆ ಪಡೆಯಬೇಕು. ಅದಕ್ಕೆ ಬೇಕಾದ ಎಲ್ಲ ಪ್ರೊಗ್ರಾಮಿಂಗ್ ಆಪ್‍ನಲ್ಲಿ ಮಾಡಲಾಗಿದೆ ಎಂದರು ಡಿಸಿಎಂ.

    ಉಪ ಮುಖ್ಯಮಂತ್ರಿಗಳು ಸೋಮವಾರ ವ್ಯಾಕ್ಸಿನೇಷನ್ ನಡೆದ ಶ್ರೀರಾಂಪುರ ಬಿಬಿಎಂಪಿ ಶಾಲೆ ಸೇರಿದಂತೆ ಸುಬ್ರಹ್ಮಣ್ಯ ನಗರದ ಬಾಲಾಜಿ ಸಮುದಾಯ ಭವನ ಹಾಗೂ ಮಲ್ಲೇಶ್ವರದ 7ನೇ ಮುಖ್ಯ ರಸ್ತೆಯಲ್ಲಿರುವ ದೇಶಪಾಂಡೆ ಭವನದ ಲಸಿಕೆ ಶಿಬಿರಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.