Tag: Ashwaththanarayana

  • ಮಲ್ಲೇಶ್ವರಂ 18ನೇ ಅಡ್ಡರಸ್ತೆ ಮೈದಾನದಲ್ಲಿ ವಾಕಿಂಗ್ ಪಥ ನಿರ್ಮಾಣ ಇಲ್ಲ: ಅಶ್ವತ್ಥನಾರಾಯಣ

    ಮಲ್ಲೇಶ್ವರಂ 18ನೇ ಅಡ್ಡರಸ್ತೆ ಮೈದಾನದಲ್ಲಿ ವಾಕಿಂಗ್ ಪಥ ನಿರ್ಮಾಣ ಇಲ್ಲ: ಅಶ್ವತ್ಥನಾರಾಯಣ

    ಬೆಂಗಳೂರು: ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿರುವ ಸರ್ಕಾರಿ ಬಾಲಕರ ಕಾಲೇಜು ಮೈದಾನದಲ್ಲಿ ವಾಕಿಂಗ್ ಪಥ ನಿರ್ಮಿಸುವುದಿಲ್ಲ. ಕಟ್ಟಡವೂ ಕಟ್ಟುವ ಉದ್ದೇಶವಿಲ್ಲ. ಬದಲಿಗೆ, ಈ ಸ್ಥಳವನ್ನು ಮತ್ತಷ್ಟು ಜನಸ್ನೇಹಿಯಾಗಿ ಅಭಿವೃದ್ಧಿಪಡಿಸಿ, ಕೇವಲ ಕ್ರೀಡಾ ಚಟುವಟಿಕೆಗಳಿಗೆ ಮಾತ್ರ ಮೀಸಲಿಡಲಾಗುವುದು ಎಂದು ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟವಾಗಿ ಹೇಳಿದರು.

    ಈ ಸಂಬಂಧವಾಗಿ ಬುಧವಾರ ಬೆಳಗ್ಗೆ ಮೈದಾನಕ್ಕೆ ಭೇಟಿ ನೀಡಿ, ಅಲ್ಲಿದ್ದ ಕ್ರೀಡಾಪಟುಗಳು ಹಾಗೂ ವಾಯುವಿಹಾರಿಗಳ ಜೊತೆ ಮಾತನಾಡಿ, `ನಾನು ಶಾಸಕ ಆಗುವುದಕ್ಕೂ ಮೊದಲು ಈ ಮೈದಾನದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗದ ಪ್ರದರ್ಶನವು ವರ್ಷದಲ್ಲಿ ಐದಾರು ತಿಂಗಳ ಕಾಲ ನಡೆಯುತ್ತಿತ್ತು. ಜೊತೆಗೆ, ಹಲವರು ಇದನ್ನು ವಾಹನ ಚಾಲನಾ ತರಬೇತಿಗೆ ಅನಧಿಕೃತವಾಗಿ ಬಳಸಿಕೊಳ್ಳುತ್ತಿದ್ದರು. ಈಗ ಇದಕ್ಕೆಲ್ಲ ಕಡಿವಾಣ ಹಾಕಿ ಕೇವಲ ಕ್ರೀಡೆಗೆ ಬಳಸುವ ಹಾಗೆ ಮಾಡಲಾಗಿದೆ ಎಂದು ವಿವರಿಸಿದರು.  ಇದನ್ನೂ ಓದಿ: ಮಿಠಾಯಿ ತಿಂದು 4 ಮಕ್ಕಳು ಸಾವು – ಪರಿಹಾರದ ಭರವಸೆ ನೀಡಿದ ಯೋಗಿ

    `ಮೈದಾನದ ನೆಲವು ಒಂದು ಅಂಚಿನಿಂದ ಇನ್ನೊಂದು ಅಂಚಿಗೆ ನಾಲ್ಕೈದು ಅಡಿಗಳಷ್ಟು ಏರುಪೇರಿನಿಂದ ಕೂಡಿದೆ. ಇದರಿಂದಾಗಿ, ಮಳೆ ಬಂದಾಗಲೆಲ್ಲ ಮೈದಾನದ ಮಧ್ಯ ಭಾಗದಲ್ಲಿ ನೀರು ನಿಂತುಕೊಂಡು ತೊಂದರೆಯಾಗುತ್ತಿದೆ. ಹೀಗಾಗಿ, ನೆಲವನ್ನು ಸಮಗೊಳಿಸಿ, ಇಲ್ಲಿ ನಿಲ್ಲುವ ನೀರು ಸ್ಯಾಂಕಿ ಕೆರೆ ಕಡೆಗೆ ಸರಾಗವಾಗಿ ಹರಿದು ಹೋಗುವಂತೆ ಮಾಡಲಾಗುವುದು. ಒಟ್ಟಿನಲ್ಲಿ, 1 ಕೋಟಿ ರೂ. ವೆಚ್ಚದಲ್ಲಿ ಮೈದಾನವನ್ನು ಬಳಕೆದಾರ ಸ್ನೇಹಿಯನ್ನಾಗಿ ವೈಜ್ಞಾನಿಕವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ನುಡಿದರು.

    ಮೈದಾನದ ಮೂಲೆಯಲ್ಲಿದ್ದ ಶೌಚಾಲಯವನ್ನು ಇದುವರೆಗೆ ಸರಿಯಾಗಿ ನಿರ್ವಹಿಸುತ್ತಿರಲಿಲ್ಲ. ಇದರ ಬದಲಿಗೆ, ಇಲ್ಲಿ ಬರುವವರಿಗೆ ನೈರ್ಮಲ್ಯದಿಂದ ಕೂಡಿರುವಂತಹ ನೂತನ ಶೌಚಾಲಯವನ್ನು ನಿರ್ಮಿಸಲಾಗುವುದು ಎಂದ ಅವರು, ಇದೇ ಸಂದರ್ಭದಲ್ಲಿ ಈ ಕಾಮಗಾರಿಗೆ ಚಾಲನೆ ನೀಡಿದರು. ಅಲ್ಲದೆ, ಬೀದಿದೀಪದ ವ್ಯವಸ್ಥೆಯನ್ನೂ ಮಾಡಲಾಗುವುದು. ಈ ಕಾಮಗಾರಿಗಳೆಲ್ಲವೂ ಕೆಲವೇ ತಿಂಗಳುಗಳಲ್ಲಿ ಮುಗಿಯಲಿವೆ ಎಂದು ಭರವಸೆ ನೀಡಿದರು.

    ಮೈದಾನದಲ್ಲಿ ಹಿಂದೆಲ್ಲ ರಾಜಕೀಯ ಕಾರ್ಯಕ್ರಮಗಳು ನಡೆಯುತ್ತಿದ್ದವು. ಇದರ ಜೊತೆಗೆ ಬೇರೆಬೇರೆ ಸಮಾರಂಭಗಳು ಕೂಡ ಜರುಗುತ್ತಿದ್ದವು. ಈಗ ಇವೆಲ್ಲಕ್ಕೂ ಕಡಿವಾಣ ಹಾಕಲಾಗಿದೆ. ಇದಲ್ಲದೆ, ಪೆÇಲೀಸ್ ಠಾಣೆಯ ಎದುರಿರುವ ಮಲ್ಲೇಶ್ವರಂ ಕ್ರೀಡಾಂಗಣದಲ್ಲೂ ಈಗ ಸುರಕ್ಷತೆಗೆ ಹೆಚ್ಚಿನ ಆದ್ಯತೆ ಕೊಡಲಾಗಿದೆ. ಸಾರ್ವಜನಿಕರ ಅಭಿಪ್ರಾಯವನ್ನು ಗೌರವಿಸುವುದಕ್ಕೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ನುಡಿದರು. ಇದನ್ನೂ ಓದಿ: ಮುಳ್ಳು ಹಂದಿ ಚಿತ್ರದಂತೆ ಕಾಣುವ ವೈದ್ಯರ ಸಹಿ ವೈರಲ್

    ಇದಾದ ಬಳಿಕ ಅವರು, ಸಂಪಿಗೆ ರಸ್ತೆಯಲ್ಲಿ ಟೆಂಡರ್ ಶ್ಯೂರ್ ಯೋಜನೆಯಡಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿ, ಕೆಲಸದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಕಟ್ಟುನಿಟ್ಟು ಸೂಚನೆಗಳನ್ನು ನೀಡಿದರು.

  • ಸಂಪುಟದಲ್ಲಿ ಮುನಿರತ್ನಗೆ ಅವಕಾಶ ಸಿಗುತ್ತೆ: ಡಾ.ಸಿ.ಎನ್.ಅಶ್ವತ್ಥನಾರಾಯಣ

    ಸಂಪುಟದಲ್ಲಿ ಮುನಿರತ್ನಗೆ ಅವಕಾಶ ಸಿಗುತ್ತೆ: ಡಾ.ಸಿ.ಎನ್.ಅಶ್ವತ್ಥನಾರಾಯಣ

    – ಲಗ್ಗೆರೆಯಲ್ಲಿ ಒಂದು ಲಕ್ಷ ಫುಡ್ ಕಿಟ್ ವಿತರಣೆಗೆ ಚಾಲನೆ

    ಬೆಂಗಳೂರು: ಕೋವಿಡ್ ಸಂಕಷ್ಟದಲ್ಲಿರುವ ಜನರಿಗೆ ಶಾಸಕ ಮುನಿರತ್ನ ಆಯೋಜಿಸಿದ್ದ ಒಂದು ಲಕ್ಷ ಆಹಾರ ಕಿಟ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಭಾನುವಾರ ಲಗ್ಗೆರೆಯಲ್ಲಿ ಚಾಲನೆ ನೀಡಿದರು. ಈ ವೇಳೆ ಸಂಪುಟದಲ್ಲಿ ಮುನಿರತ್ನಗೆ ಅವಕಾಶ ಸಿಗುತ್ತೆ ಎಂದು ಹೇಳಿದರು.

    ಅಕ್ಕಿ, ಬೇಳೆ, ಅಡುಗೆ ಎಣ್ಣೆ ಸೇರಿದಂತೆ ವಿವಿಧ ಆಹಾರ ಪದಾರ್ಥಗಳಿದ್ದ ಕಿಟ್‍ಗಳನ್ನು ಹಂಚುವುದಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುನಿರತ್ನ ಕೆಲಸ ಶ್ಲಾಘನೀಯ. ಒಂದು ಲಕ್ಷ ರೇಷನ್ ಕಿಟ್ ವಿತರಣೆ ಅಂದರೆ ಸಣ್ಣ ಸಂಗತಿ ಅಲ್ಲ. ಯಾರೇ ಬಂದರೂ ರೇಷನ್ ಕೊಡಲಾಗುತ್ತಿದೆ. ಇದು ಖಂಡಿತಾ ಒಳ್ಳೆಯ ಕೆಲಸ ಎಂದರು.

    ನಗರದಲ್ಲಿ ಯಾರೂ ಹಸಿವಿಂದ ಇರಬಾರದು. ಎಲ್ಲರಿಗೂ ಆಹಾರ ಸಿಗಬೇಕು. ಈ ನಿಟ್ಟಿನಲ್ಲಿ ಮುನಿರತ್ನ ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಎಲ್ಲರೂ ದೈಹಿಕ ಅಂತರ ಪಾಲಿಸುತ್ತಾ ಬಂದು ಕಿಟ್‍ಗಳನ್ನು ಸ್ವೀಕರಿಸುತ್ತಿದ್ದಾರೆಂದು ಡಿಸಿಎಂ ಹೇಳಿದರು.

    ಮುನಿರತ್ನಗೆ ಅವಕಾಶ ಸಿಗುತ್ತೆ:
    ಉಪ ಚುನಾವಣೆಯಲ್ಲಿ ಉತ್ತಮ ಗೆಲುವು ಸಾಧಿಸಿದ ಶಾಸಕ ಮುನಿರತ್ನ ಅವರಿಗೆ ಸಂಪುಟ ಸೇರುವ ಅವಕಾಶ ಸಿಗುತ್ತದೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟ ಭರವಸೆ ನೀಡಿದ್ದಾರೆ. ಅವರು ತಪ್ಪದೆ ಮಾತು ಉಳಿಸಿಕೊಳ್ಳುತ್ತಾರೆ, ಈ ಬಗ್ಗೆ ಸಂಶಯ ಬೇಡ ಎಂದು ಇದೇ ವೇಳೆ ಉಪ ಮುಖ್ಯಮಂತ್ರಿಗಳು ಹೇಳಿದರು.

  • ಎಂಜಿನಿಯರಿಂಗ್ ಸಂಶೋಧನೆ – ಅಭಿವೃದ್ಧಿ ನೀತಿ ಅಮೆರಿಕ ಕಂಪನಿಗಳ ಹೂಡಿಕೆಗೆ ಪೂರಕ

    ಎಂಜಿನಿಯರಿಂಗ್ ಸಂಶೋಧನೆ – ಅಭಿವೃದ್ಧಿ ನೀತಿ ಅಮೆರಿಕ ಕಂಪನಿಗಳ ಹೂಡಿಕೆಗೆ ಪೂರಕ

    ಬೆಂಗಳೂರು: ದೇಶದಲ್ಲಿ ಮೊಟ್ಟಮೊದಲಿಗೆ ಕರ್ನಾಟಕವು ಸಂಶೋಧನೆ ಮತ್ತು ಅಭಿವೃದ್ಧಿಗೆ ಶಕ್ತಿ ತುಂಬುವ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ (ಇಆರ್&ಟಿ ಪಾಲಿಸಿ)ಯನ್ನು ಪ್ರಕಟಿಸಿದ್ದು, ಇದರಿಂದ ಅಮೆರಿಕ ಕಂಪನಿಗಳ ಹೂಡಿಕೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

    ಕೇರಳದಲ್ಲಿನ ಚುನಾವಣಾ ಪ್ರಚಾರದ ನಡುವೆಯೇ ಭಾರತ-ಅಮೆರಿಕ ಕಾರ್ಯತಂತ್ರದ ಸಹಭಾಗಿತ್ವ ವೇದಿಕೆ ಹಮ್ಮಿಕೊಂಡಿದ್ದ ವರ್ಚುವಲ್ ಸಭೆಯಲ್ಲಿ ತಿರುವನಂತಪುರದಿಂದಲೇ ಪಾಲ್ಗೊಂಡು ಮಾತನಾಡಿದ ಅವರು, “ಈ ನೀತಿಯು ಕೈಗಾರಿಕಾಭಿವೃದ್ಧಿಗೆ ಹೆಚ್ಚು ಪೂರಕವಾಗಲಿದೆ ಹಾಗೂ ಅತ್ಯುತ್ತಮ ಮಾನವ ಸಂಪನ್ಮೂಲ ಸೃಷ್ಟಿಗೂ ಇದು ಸಹಾಯಕವಾಗುತ್ತದೆ” ಎಂದರು.

    ಉತ್ಕೃಷ್ಟ ಮಾನವ ಸಂಪನ್ಮೂಲ:
    ಕೈಗಾರಿಕೆ ಮತ್ತು ಹೂಡಿಕೆಗೆ ಪೂರಕವಾದ ರಾಜ್ಯ ಕರ್ನಾಟಕ. ಹೊಸ ಉದ್ಯಮಗಳನ್ನು ಸ್ಥಾಪಿಸಲು ಸೂಕ್ತವಾದ ತಾಣ. ಈ ನಿಟ್ಟಿನಲ್ಲಿ ನಮ್ಮ ಸರಕಾರ ಎಲ್ಲ ರೀತಿಯ ಸಹಕಾರ ನೀಡುತ್ತಿದೆ ಎಂದರು. (ರಾಜ್ಯದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ ಐಐಎಸ್‍ಸಿ), ಭಾರತೀಯ ತಾಂತ್ರಿಕ ಸಂಸ್ಥೆ (ಐಐಟಿ) ಹಾಗೂ ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಯಂತಹ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಿವೆ. ಹೀಗಾಗಿ ಉತ್ಕೃಷ್ಟ ಮಾನವ ಸಂಪನ್ಮೂಲಕ್ಕೂ ರಾಜ್ಯದಲ್ಲಿ ಕೊರತೆ ಇಲ್ಲ ಎಂದು ಡಿಸಿಎಂ ನುಡಿದರು.

    ಆವಿಷ್ಕಾರದಲ್ಲೂ ಕರ್ನಾಟಕ ನಂಬರ್ 1 ಸ್ಥಾನದಲ್ಲಿಯೇ ಇದೆ. ನೀತಿ ಆಯೋಗದ ಆವಿಷ್ಕಾರ ಸೂಚ್ಯಂಕದಲ್ಲಿ ರಾಜ್ಯವು 2019, 2020 ಕ್ರಮವಾಗಿ ಮೊದಲ ಸ್ಥಾನದಲ್ಲೇ ಇದೆ. ಅದೇ ರೀತಿ ಎಲೆಕ್ಟ್ರಾನಿಕ್ಸ್ ವ್ಯವಸ್ಥೆ ವಿನ್ಯಾಸ ಮತ್ತು ನಿರ್ವಹಣೆ (ಇಎಸ್‍ಡಿಎಮ್), ಅನಿಮೇಷನ್, ವಿಷ್ಯುಯೆಲ್ ಎಫೆಕ್ಟ್ಸ್, ಗೇಮ್ಸ್ ಮತ್ತು ಕಾಮಿಕ್ಸ್ (ಎವಿಜಿಸಿ) ಕ್ಷೇತ್ರದಲ್ಲೂ ರಾಜ್ಯ ದಾಪುಗಾಲಿಡುತ್ತಿದೆ ಎಂಬ ಅಂಶವನ್ನು ಡಿಸಿಎಂ ಒತ್ತಿ ಹೇಳಿದರು.

    ಕರ್ನಾಟಕ ಹೂಡಿಕೆಗೆ ಸೂಕ್ತ ತಾಣ:
    ಕೋವಿಡ್ ನಂತರದ ದಿನಗಳಲ್ಲಿ ಕೈಗಾರಿಕೆ, ಹೂಡಿಕೆ, ಆವಿಷ್ಕಾರ ಮುಂತಾದ ಕ್ಷೇತ್ರಗಳಲ್ಲಿ ಪುಟಿದೆದ್ದಿರುವ ಭಾರತವು, ಇಡೀ ಜಗತ್ತಿನಲ್ಲಿಯೇ ಸಹಜಸ್ಥಿತಿಗೆ ಮರಳಿದ ಮೊದಲ ದೇಶವಾಗಿದೆ. ಹಾಗೆಯೇ ಕರ್ನಾಟಕವು ಹೂಡಿಕೆಗೆ ಅತ್ಯಂತ ಸೂಕ್ತ ತಾಣ. ಕೋವಿಡ್ಡೋತ್ತರ ಕಾಲದಲ್ಲಿ ಭಾರತ ಮತ್ತು ಅಮೆರಿಕಕ್ಕೆ ವಿಪುಲ ಅವಕಾಶಗಳಿದ್ದು, ಅವೆಲ್ಲವನ್ನೂ ಸದುಪಯೋಗ ಮಾಡಿಕೊಳ್ಳೋಣ ಎಂದರು.

    ಅನೇಕ ಕ್ಷೇತ್ರಗಳಲ್ಲಿ ಭಾರತ-ಅಮೆರಿಕ ದೇಶಗಳು ಜಾಗತಿಕ ಶಕ್ತಿಗಳಾಗಿ ಹೊರಹೊಮ್ಮಿವೆ. ರಕ್ಷಣೆ, ವಿಜ್ಞಾನ-ತಂತ್ರಜ್ಞಾನ, ವೈದ್ಯಕೀಯ, ಮಾನವ ಸಂಪನ್ಮೂಲ, ಬಾಹ್ಯಾಕಾಶ ಮುಂತಾದ ಕ್ಷೇತ್ರಗಳಲ್ಲಿ ಎರಡೂ ದೇಶಗಳು ಬಹಳ ನಿಕಟವಾಗಿ ಕೆಲಸ ಮಾಡುತ್ತಿವೆ. ಈ ಕಾರಣಕ್ಕೆ 2019ನೇ ಸಾಲಿನಲ್ಲಿ ಎರಡೂ ದೇಶಗಳ ನಡುವೆ ಸರಕು ಮತ್ತು ಸೇವೆಗಳಲ್ಲಿ ಒಟ್ಟಾರೆ ದ್ವಿಪಕ್ಷೀಯ ವ್ಯಾಪಾರವು 149 ಬಿಲಿಯನ್ ಮೀರಿದೆ ಎಂದು ತಿಳಿಸಿದರು.

    ಇದಕ್ಕೆ ಪೂರಕವಾಗಿ ಹೇಳುವುದಾದರೆ, ಭಾರತ-ಅಮೆರಿಕ ಪಾಲುದಾರಿಕೆಯಲ್ಲಿ ಕರ್ನಾಟಕದ ಪಾತ್ರ ಮಹತ್ವದ್ದಾಗಿದೆ. ತಂತ್ರಜ್ಞಾನ ಮತ್ತು ಡಿಜಿಟಲ್ ವ್ಯವಸ್ಥೆಯ ಬೆಳವಣಿಗೆಗೆ ರಾಜ್ಯವು ಅನನ್ಯ ಕೊಡುಗೆ ನೀಡಿದೆ. 220 ಬಿಲಿಯನ್‍ನಷ್ಟು ಒಟ್ಟು ದೇಶಯ ಉತ್ಪನ್ನ (ಜಿಎಸ್‍ಡಿಪಿ) ಹೊಂದಿರುವ ಕರ್ನಾಟಕವು ದೇಶದ ಅತ್ಯಂತ ಶ್ರೀಮಂತ ರಾಜ್ಯಗಳಲ್ಲಿ ಒಂದು. ಮಾಹಿತಿ-ಜೈವಿಕ ತಂತ್ರಜ್ಞಾನ, ಆರೋಗ್ಯ, ಆವಿಷ್ಕಾರ, ಎಲೆಕ್ಟ್ರಾನಿಕ್ಸ್, ಯಂತ್ರೋಪಕರಣ, ಏರೋಸ್ಪೇಸ್ ಮುಂತಾದ ಕ್ಷೇತ್ರಗಳಲ್ಲಿಯೂ ರಾಜ್ಯವು ಮುಂಚೂಣಿಯಲ್ಲಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

    ಈ ವರ್ಚುಯಲ್ ಸಭೆಯಲ್ಲಿ ಭಾರತದಲ್ಲಿರುವ ಸ್ಯಾನ್‍ಪ್ರಾನ್ಸಿಸ್ಕೋ ರಾಜ್ಯದ ಕಾನ್ಸುಲ್ ಜನರಲ್ ಡಾ.ಟಿ.ವಿ.ನಾಗೇಂದ್ರ ಪ್ರಸಾದ್, ಉಪ ಕಾನ್ಸುಲ್ ಜನರಲ್ ರಾಜೇಶ್ ನಾಯಕ್, ಅಮೆರಿಕ-ಭಾರತ ಕಾರ್ಯತಂತ್ರ ವೇದಿಕೆಯ ಅಧ್ಯಕ್ಷ ಜಾನ್ ಚಾಂಬರ್ಸ್, ಇದೇ ವೇದಿಕೆಯ ವೆಸ್ಟ್ ಕೋಸ್ಟ್ ವಿಭಾಗದ ಮುಖ್ಯಸ್ಥರಾದ ದೀಪ್ತಿ ದೇಸಾಯಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ ಪಾಲ್ಗೊಂಡಿದ್ದರು.

  • ಟಿಪ್ಪು ಮತಾಂಧ, ಅಮಾಯಕರನ್ನ ಕೊಂದ ಕ್ರೂರಿ: ಅಶ್ವತ್ಥನಾರಾಯಣ

    ಟಿಪ್ಪು ಮತಾಂಧ, ಅಮಾಯಕರನ್ನ ಕೊಂದ ಕ್ರೂರಿ: ಅಶ್ವತ್ಥನಾರಾಯಣ

    ಚಿಕ್ಕಬಳ್ಳಾಪುರ: ಟಿಪ್ಪು ಸುಲ್ತಾನ ಓರ್ವ ಮತಾಂಧ ಹಾಗೂ ಅಮಾಯಕರನ್ನು ಕೊಂದ ಕ್ರೂರಿ ಹೀಗಾಗಿ ಟಿಪ್ಪು ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ. ಟಿಪ್ಪು ಜಯಂತಿ ಆಚರಣೆ ಮಾಡಬಾರದು ಅನ್ನೋದು ಬಿಜೆಪಿ ನಿಲುವು ಎಂದು ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ದಾರೆ.

    ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿ ನಂತರ ಮಾತನಾಡಿದ ಡಿಸಿಎಂ, 200 ವರ್ಷಗಳ ಹಿಂದೆ ನರಕಚರ್ತುದಶಿಯಂದು ಮೇಲುಕೋಟೆಯಲ್ಲಿ 800 ಕ್ಕೂ ಹೆಚ್ಚು ಮಂದಿ ಅಮಾಯಕರನ್ನು ಟಿಪ್ಪು ಸುಲ್ತಾನ್ ಕೊಂದು ನರಹೋಮ ಮಾಡಿದ್ದ. ಇಂತಹ ಮತಾಂಧ ಹಾಗೂ ಅಮಾಯಕರನ್ನು ಕೊಂದ ಟಿಪ್ಪು ಸುಲ್ತಾನನ ಜಯಂತಿ ಆಚರಣೆ ಮಾಡಬಾರದು ಅನ್ನೋದು ನಮ್ಮ ನಿಲುವು ಎಂದರು.

    ಇಂದಿಗೂ ಮೇಲುಕೋಟೆಯ ಜನರ ಮೇಲೆ ಟಿಪ್ಪು ಸುಲ್ತಾನ್ ನಡೆಸಿದ ಕ್ರೌರ್ಯದ ಗಾಯ ಮಾಸಿಲ್ಲ. ಅಲ್ಲಿನ ಜನ ಇಂದು ಸಹ ದೀಪಾವಳಿ ಹಬ್ಬ ಆಚರಣೆ ಮಾಡುತ್ತಿಲ್ಲ. ಇಡೀ ದೇಶವೇ ದೀಪಾವಳಿ ಹಬ್ಬ ಆಚರಣೆ ಮಾಡಿದ್ರೇ ಮೇಲುಕೋಟೆ ಕತ್ತಲಲ್ಲಿರುತ್ತೆ. ಹೀಗಾಗಿ ಮೇಲುಕೋಟೆ ಜನರಿಗೆ ಸಮಾಧಾನ ಹಾಗೂ ಅವರಿಗಾದ ಅನ್ಯಾಯವನ್ನು ಎತ್ತಹಿಡಿಯಬೇಕಿದೆ ಎಂದು ತಿಳಿಸಿದರು.

    ನಾನು ಎಲ್ಲಿ ಹೋದರೂ ಪಕ್ಷದ ಕಾರ್ಯಕರ್ತರ ಜೊತೆ ಸಭೆ ನಡೆಸುತ್ತೇನೆ ಅದೇ ರೀತಿ ಇಲ್ಲಿಯೂ ಸಭೆ ನಡೆಸಿದ್ದೇನೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಇನ್ನೂ ಅಂತಿಮವಾಗಿಲ್ಲ. ಪ್ರಕ್ರಿಯೆಗಳೂ ನಡೆದಿಲ್ಲ. ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಅಥವಾ ಯಾರಿಗೆ ಟಿಕೆಟ್ ನೀಡಬೇಕು ಅನ್ನೋದನ್ನು ಪಕ್ಷ ಹಾಗೂ ರಾಜ್ಯಾಧ್ಯಕ್ಷರು ತೀರ್ಮಾನ ಮಾಡ್ತಾರೆ ಎಂದರು.