Tag: Ashwini Puneet Rajkumar

  • `ಯುವರತ್ನ’ನಿಗೆ `ಸಹಕಾರ ರತ್ನ’ ಪ್ರಶಸ್ತಿ

    `ಯುವರತ್ನ’ನಿಗೆ `ಸಹಕಾರ ರತ್ನ’ ಪ್ರಶಸ್ತಿ

    ಬೆಂಗಳೂರು: ನೆನ್ನೆಯಷ್ಟೇ ಮೈಸೂರು ವಿಶ್ವವಿದ್ಯಾನಿಲಯವು ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ (ಮರಣೋತ್ತರ) ನೀಡಿ ಗೌರವಿಸಲಾಗಿತ್ತು. ಈ ಬೆನ್ನಲ್ಲೇ ಇಂದು ಸಹಕಾರ ಇಲಾಖೆ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರಾದ ಜಿ.ಟಿ.ದೇವೇಗೌಡ ಅವರು ಪನೀತ್ ರಾಜ್‍ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಡಾ.ಪುನೀತ್ ರಾಜ್‍ಕುಮಾರ್ ಅವರಿಗೆ `ಸಹಕಾರ ರತ್ನ’ (ಮರಣೋತ್ತರ) ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

    ಪ್ರಶಸ್ತಿಯು 15 ಗ್ರಾಂ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದ್ದು, ಬೆಂಗಳೂರಿನ ಸದಾಶಿವನಗರದಲ್ಲಿನ ಪುನೀತ್ ಅವರ ನಿವಾಸದಲ್ಲಿ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.  ಇದನ್ನೂ ಓದಿ: ರಾಜಕೀಯ ದಾಳವಾದ ಪುನೀತ್ ನಟನೆಯ ‘ಜೇಮ್ಸ್’ ಚಿತ್ರ

    ಈಚೆಗಷ್ಟೇ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಕೊಟ್ಟ ಬೆನ್ನಲ್ಲೇ, ಸರಕಾರದ ಮತ್ತೊಂದು ಪ್ರಶಸ್ತಿ ಘೋಷಣೆಯಾಗಿತ್ತು. ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಕೊಡಮಾಡುವ ಸಹಕಾರ ರತ್ನ ಪ್ರಶಸ್ತಿಯನ್ನು ಪುನೀತ್ ಅವರಿಗೆ ಘೋಷಿಸಲಾಗಿತ್ತು. ನಂದಿನಿ ಹಾಲು ಉತ್ಪನ್ನಗಳಿಗೆ ಉಚಿತವಾಗಿ ಜಾಹೀರಾತು ನೀಡಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ಘೋಷಿಸಲಾಗಿತ್ತು.

    ಮಾರ್ಚ್ 20ರಂದು ಕಂಗೇರಿ ಉಪನಗರದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 60 ಮಂದಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದರು. ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರ ಪ್ರಶಸ್ತಿ ಘೋಷಿಸಿದ್ದರಿಂದ ಇಂದು ಅವರ ನಿವಾಸದಲ್ಲೇ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ಇಡೀ ಥಿಯೇಟರ್ ನಲ್ಲಿ ಒಬ್ಬರೇ ಕೂತು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಿಸಿದ ಡೈಮಂಡ್ ರವಿ

  • ಅಪ್ಪು ಸಮಾಧಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‍ಕುಮಾರ್

    ಅಪ್ಪು ಸಮಾಧಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‍ಕುಮಾರ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಡಾ.ಪುನೀತ್ ರಾಜ್‍ಕುಮಾರ್ ಸಮಾಧಿಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಭೇಟಿ ನೀಡಿ ದರ್ಶನ ಪಡೆದರು.

    ಇಂದು ಪುನೀತ್ ರಾಜ್‍ಕುಮಾರ್ 47ನೇ ಹುಟ್ಟುಹಬ್ಬದ ಹಿನ್ನೆಲೆ ನಗರದ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಭೇಟಿ ನೀಡಿ ಪ್ರದಕ್ಷಿಣೆ ಹಾಕಿ ನಮನ ಸಲ್ಲಿಸಿದರು. ಇದೇ ವೇಳೆ ವರನಟ ಡಾ. ರಾಜ್‍ಕುಮಾರ್ ಹಾಗೂ ಪಾರ್ವತಮ್ಮ ರಾಜ್‍ಕುಮಾರ್ ಅವರ ಸಮಾಧಿಯ ದರ್ಶನವನ್ನು ಸಹ ಪಡೆದರು. ಇದನ್ನೂ ಓದಿ: ರಾಜ್ಯದ 400 ಥಿಯೇಟರ್‌ಗಳಲ್ಲಿ ಜೇಮ್ಸ್ ರಿಲೀಸ್

    ಅಪ್ಪು ಜನುಮ ದಿನದ ಪ್ರಯುಕ್ತ ಇಂದು ಪುನೀತ್ ಅಭಿನಯದ ಬಹುನಿರೀಕ್ಷಿತ ಜೇಮ್ಸ್ ಸಿನಿಮಾ ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಕಂಡು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಲು ಮುಂಜಾನೆಯಿಂದಲೇ ಚಿತ್ರಮಂದಿರದತ್ತ ಜನ ಸಾಗರವೇ ಹರಿದುಬರುತ್ತಿದೆ. ಒಟ್ಟಾರೆ ಅಪ್ಪು ಹುಟ್ಟುಹಬ್ಬವನ್ನು ಕರುನಾಡಿನ ಜನತೆ ಹಬ್ಬದಂತೆ ಆಚರಿಸುತ್ತಿದ್ದಾರೆ. ಇದನ್ನೂ ಓದಿ:  ಡಾ.ಪುನೀತ್ ರಾಜ್‍ಕುಮಾರ್ 47ನೇ ಜನ್ಮದಿನ – ಸಮಾಧಿ ಬಳಿ ಕೇಕ್ ಕತ್ತರಿಸಿದ ದೊಡ್ಮನೆ ಕುಟುಂಬ

  • ಅಪ್ಪು ಅಡ್ವಾನ್ಸ್ ಪಡೆದಿದ್ದ ಹಣ ನಿರ್ಮಾಪಕರಿಗೆ ವಾಪಸ್

    ಅಪ್ಪು ಅಡ್ವಾನ್ಸ್ ಪಡೆದಿದ್ದ ಹಣ ನಿರ್ಮಾಪಕರಿಗೆ ವಾಪಸ್

    ಬೆಂಗಳೂರು: ಇತ್ತೀಚೆಗಷ್ಟೇ ನಿಧನರಾದ ನಟ ಪುನೀತ್ ರಾಜಕುಮಾರ್ ಸಿನಿಮಾಗಳಲ್ಲಿ ಅಭಿನಯಿಸಲು ಪಡೆದಿದ್ದ ಅಡ್ವಾನ್ಸ್ ಹಣವನ್ನು ಅಪ್ಪು ಧರ್ಮಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ನಿರ್ಮಾಪಕರಿಗೆ ಮರುಕಳಿಸಿದ್ದಾರೆ.

    ಮುಂದಿನ ವರ್ಷಕ್ಕೆ ಅಪ್ಪು ಭರ್ತಿ 5 ಚಿತ್ರ ಮಾಡಲು ಡೇಟ್ಸ್ ಕೊಟ್ಟಿದ್ದರು. ಆದರೆ ಅಪ್ಪು ಅಕಾಲಿಕ ನಿಧನದಿಂದಾಗಿ ಆ ಸಿನಿಮಾಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಅಶ್ವಿನಿಯವರೇ ಖುದ್ದು ನಿರ್ಮಾಪಕರಿಗೆ ಕರೆ ಮಾಡಿ ಅವರಿಂದ ಪಡೆದ ಅಷ್ಟೂ ಹಣವನ್ನು ಖಾತೆಗೆ ಹಾಕುತ್ತಿದ್ದಾರೆ.

    ನಿರ್ಮಾಪಕ ಉಮಾಪತಿ ಅಪ್ಪು ಡೇಟ್ಸ್ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 25ರಂದು ಉಮಾಪತಿ ಅಡ್ವಾನ್ಸ್ ಕೊಟ್ಟಿದ್ದರು. ಉಮಾಪತಿ ಪ್ರೊಡಕ್ಷನ್‌ನಲ್ಲಿ ಸಿನಿಮಾ ಮಾಡಲು ಅಪ್ಪು ಓಕೆ ಎಂದಿದ್ದರು. ಆದರೆ ಅಪ್ಪು ಅವರ ನಿಧನದ ಹಿನ್ನೆಲೆಯಲ್ಲಿ ಅಶ್ವಿನಿ ಅವರು ಹಣ ನೀಡಲು ಮುಂದಾಗಿದ್ದಾರೆ. ಇದನ್ನೂ ಓದಿ: ರಾಯನ್ ರಾಜ್ ಸರ್ಜಾ ಕ್ರಿಸ್‍ಮಸ್ ಸಂಭ್ರಮ ಹೇಗಿತ್ತು ಗೊತ್ತಾ?

    ಈ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ಉಮಾಪತಿಯವರಿಗೆ ಹಣ ವಾಪಸ್ ಕಳಿಸುವುದಾಗಿ ಕರೆ ಬರುತ್ತಿತ್ತು. ಆದರೆ ನಿರ್ದೇಶಕ ಉಮಾಪತಿ ಅವರು ಚಿಕ್ಕ ಹಣ ಬೇಡ ಎಂದಿದ್ದರು. ಆದರೂ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಉಮಾಪತಿ ಅಕೌಂಟ್‌ಗೆ ಆರ್‌ಟಿಜಿಎಸ್ ಮಾಡಿ ದೊಡ್ತನವನ್ನು ಮರೆದಿದ್ದಾರೆ. ಇಂದು ಪಿಆರ್‌ಕೆ ಸಿಬ್ಬಂದಿಯ ಮೂಲಕ ಹಣವನ್ನು ಹಾಕಿ ಫೋನ್ ಮೂಲಕ ಉಮಾಪತಿ ಜೊತೆ ಅಶ್ವಿನಿ ಪುನೀತ್‌ರಾಜ್‌ಕುಮಾರ್ ಮಾತನಾಡಿದ್ದಾರೆ. ಇದನ್ನೂ ಓದಿ: ಸಿನಿಮಾರಂಗದಲ್ಲಿ ಉತ್ತಮ ನಟನಾಗಿ ಯಶಸ್ವಿಯಾಗುವ ಪ್ಲಾನ್ ಇದೆ: ನಿಖಿಲ್ ಕುಮಾರಸ್ವಾಮಿ

    ಕಳೆದ ಒಂದು ವಾರದಿಂದ ಸುಮಾರು ಮೂರ್ನಾಲ್ಕು ನಿರ್ಮಾಪಕರಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅಡ್ವಾನ್ಸ್ ಹಣವನ್ನು ಮರುಳಿಸುತ್ತಿದ್ದಾರೆ.

  • ಓಟದ ಮೂಲಕ ಅಪ್ಪು ಸಮಾಧಿಗೆ ಹೊರಟ ಮಹಿಳೆಯ ಆರೋಗ್ಯ ವಿಚಾರಿಸಿದ್ರು ರಾಘಣ್ಣ

    ಓಟದ ಮೂಲಕ ಅಪ್ಪು ಸಮಾಧಿಗೆ ಹೊರಟ ಮಹಿಳೆಯ ಆರೋಗ್ಯ ವಿಚಾರಿಸಿದ್ರು ರಾಘಣ್ಣ

    – ಆರೋಗ್ಯದ ಕಡೆ ಗಮನಹರಿಸುವಂತೆ ಸೂಚನೆ
    – ಬೆಂಗ್ಳೂರಿಗೆ ಬಂದ ತಕ್ಷಣ ಮಾಹಿತಿ ನೀಡಿ

    ಧಾರವಾಡ: ಅಪ್ಪು ಸಮಾಧಿ ನೋಡಲು ಓಟದ ಮೂಲಕ ಹೊರಟಿರುವ ಧಾರವಾಡದ ಮೂರು ಮಕ್ಕಳ ತಾಯಿಗೆ ನಟ ರಾಘವೇಂದ್ರ ರಾಜ್‍ಕುಮಾರ ಫೋನ್ ಮಾಡಿ ಮಾತನಾಡಿದ್ದಾರೆ.

    ಧಾರವಾಡ ಜಿಲ್ಲೆಯ ಮನಗುಂಡಿ ಗ್ರಾಮದ ದ್ರಾಕ್ಷಾಯಿಣಿ ಪಾಟೀಲ್ ಕಳೆದ ನವೆಂಬರ್ 29 ರಂದು ತನ್ನ ಗ್ರಾಮದಿಂದ ಬೆಂಗಳೂರಿಗೆ ಓಟದ ಮೂಲಕ ಅಪ್ಪು ಸಮಾಧಿಗೆ ಹೊರಟಿದ್ದಾರೆ. ಈಗಾಗಲೇ ಈ ಮಹಿಳೆ ಚಿತ್ರದುರ್ಗಕ್ಕೆ ತಲುಪಿದ್ದು, ಈ ಕುರಿತು ಮಾಹಿತಿ ತಿಳಿದ ರಾಘವೇಂದ್ರ ರಾಜ್‍ಕುಮಾರ್ ಅವರು ದ್ರಾಕ್ಷಾಯಿಣಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ 418 ಸ್ಥಾನಗಳಿಸುತ್ತೆ: ಚಂದ್ರಕಾಂತ್ ಪಾಟೀಲ್

    ಅಲ್ಲದೇ ಬೆಂಗಳೂರಿಗೆ ಬಂದು ಅಪ್ಪು ಸಮಾಧಿಗೆ ತಲುಪಿದ ನಂತರ ಸ್ವತಃ ನಾನೇ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರನ್ನು ಭೇಟಿ ಮಾಡಿಸುವ ಭರವಸೆ ಕೊಟ್ಟಿದ್ದಾರೆ. ಆರಾಮಾಗಿ ಬೆಂಗಳೂರಿಗೆ ಬಂದು ತಲುಪಲು ಹೇಳಿರುವ ರಾಘವೇಂದ್ರ ಅವರು, ಆರೋಗ್ಯದ ಕಡೆ ಗಮನ ಇರಲಿ, ಬೆಂಗಳೂರಿಗೆ ಬಂದ ತಕ್ಷಣ ಮಾಹಿತಿ ನೀಡಲು ತಿಳಿಸಿದ್ದಾರೆ.

    ದ್ರಾಕ್ಷಾಯಿಣಿ ಅವರು ಈಗಾಗಲೇ ರಸ್ತೆಯಲ್ಲಿ ನೇತ್ರದಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸುತ್ತ ಬೆಂಗಳೂರು ಕಡೆ ಹೊರಟಿದ್ದಾರೆ. ಇನ್ನು ದಾರಿಯಲ್ಲಿ ದ್ರಾಕ್ಷಾಯಿಣಿ ಅವರಿಗೆ ಹಲವು ಸಂಘಟನೆ ಸನ್ಮಾನ ಮಾಡಿ ಪ್ರೋತ್ಸಾಹವನ್ನು ನೀಡಿದ್ದಾರೆ. ಇದನ್ನೂ ಓದಿ: ಅಪ್ಪು ಸಮಾಧಿ ನೋಡಲು ಓಡುತ್ತ ಹೊರಟ ಮೂರು ಮಕ್ಕಳ ತಾಯಿ