Tag: ashwini vaishnav

  • ರೈಲ್ವೆ ಸಚಿವರು ದಣಿವರಿಯದಂತೆ ಕೆಲಸ ಮಾಡುತ್ತಿದ್ದು, ರಾಜೀನಾಮೆಗೆ ಆಗ್ರಹ ಸರಿಯಲ್ಲ: ಹೆಚ್‌ಡಿಡಿ

    ರೈಲ್ವೆ ಸಚಿವರು ದಣಿವರಿಯದಂತೆ ಕೆಲಸ ಮಾಡುತ್ತಿದ್ದು, ರಾಜೀನಾಮೆಗೆ ಆಗ್ರಹ ಸರಿಯಲ್ಲ: ಹೆಚ್‌ಡಿಡಿ

    ಬೆಂಗಳೂರು: ಒಡಿಶಾ ತ್ರಿವಳಿ ರೈಲು ದುರಂತ (Odisha Train Tragedy) ಸಂಭವಿಸಿದ ಬಳಿಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಅವರು ದಣಿವರಿಯದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (H.D.Deve Gowda) ಹೇಳಿದ್ದಾರೆ.

    ಮಂಗಳವಾರ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ರೈಲು ದುರಂತದಿಂದ ಸಂಭವಿಸಿದ ಬಳಿಕ ಅಲ್ಲಿನ ಪರಿಸ್ಥತಿಯನ್ನು ಸಹಜಸ್ಥಿತಿಗೆ ತರಲು ಅಶ್ವಿನಿ ವೈಷ್ಣವ್ ಅವರು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಅವರು ನಿರಂತರವಾಗಿ ಕೆಲಸ ಮಾಡುತ್ತಿದ್ದು, ಈ ಹಂತದಲ್ಲಿ ರಾಜೀನಾಮೆ ನೀಡುವಂತೆ ಆಗ್ರಹಿಸುವುದು ಸರಿಯಲ್ಲ ಎಂದರು. ಇದನ್ನೂ ಓದಿ: ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ ಅಲ್ಲ: ಎಂಬಿಪಿ ವಿರುದ್ಧ ಯತ್ನಾಳ್ ಕಿಡಿ

    2024ರ ಚುನಾವಣೆಗೆ ವಿರೋಧ ಪಕ್ಷಗಳು ಒಗ್ಗೂಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾವು ಯಾವುದೇ ಚರ್ಚೆಯನ್ನು ಮಾಡಿಲ್ಲ. ಮೊದಲನೆಯದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಬಲಪಡಿಸಲು ನಾವು ಬಯಸುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಜಾರ್ಖಂಡ್‍ನಲ್ಲಿ ತಪ್ಪಿತ್ತು ರೈಲು ದುರಂತ!

    ಜೂನ್ 2ರಂದು ಒಡಿಶಾದ ಬಾಲಸೋರ್‌ನಲ್ಲಿ (Balasore) ತ್ರಿವಳಿ ರೈಲುಗಳು ಏಕಕಾಲಕ್ಕೆ ಡಿಕ್ಕಿಯಾದ ಪರಿಣಾಮ ಭಾರೀ ಪ್ರಮಾಣದ ನಷ್ಟವುಂಟಾಗಿದೆ. ಈ ಘಟನೆಯಲ್ಲಿ 278 ಮಂದಿ ಸಾವನ್ನಪ್ಪಿದ್ದು, 1,100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರೈಲು ದುರಂತದ ತನಿಖೆಯನ್ನು ಸಿಬಿಐಗೆ (CBI) ಒಪ್ಪಿಸಿದ್ದು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಎರಡು ದಿನಗಳ ಕಾಲ ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮತ್ತು ಪುನಃಸ್ಥಾಪನೆ ಕಾರ್ಯವನ್ನು ಮೇಲ್ವಿಚಾರಣೆ ಮಾಡಿದ್ದಾರೆ. ಇದನ್ನೂ ಓದಿ: ಕೇವಲ ಎರಡೂವರೆ ನಿಮಿಷದಲ್ಲಿ ಬ್ರೈನ್ ಆಪರೇಷನ್- ನಾರಾಯಣ ಹೆಲ್ತ್ ಸಿಟಿ ವೈದ್ಯರಿಂದ ಮಹತ್ತರ ಸಾಧನೆ

  • ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬ, ಗಾಯಾಳುಗಳಿಗೆ ಪರಿಹಾರ ಘೋಷಣೆ

    ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬ, ಗಾಯಾಳುಗಳಿಗೆ ಪರಿಹಾರ ಘೋಷಣೆ

    – ಪರಿಹಾರ ಘೋಷಿಸಿದ ಪಿಎಂಎನ್‌ಆರ್‌ಎಫ್, ರೈಲ್ವೇ ಇಲಾಖೆ ಹಾಗೂ ತಮಿಳುನಾಡು ಸರ್ಕಾರ

    ನವದೆಹಲಿ: ಒಡಿಶಾದಲ್ಲಿ (Odisha) ನಡೆದ ಭೀಕರ ರೈಲು ಅಪಘಾತದಿಂದಾಗಿ (Train Accident) 261 ಮಂದಿ ಸಾವನ್ನಪ್ಪಿದ್ದು, 900 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆ ಪಿಎಂಎನ್‌ಆರ್‌ಎಫ್, ತಮಿಳುನಾಡು ಸರ್ಕಾರ ಹಾಗೂ ರೈಲ್ವೇ ಇಲಾಖೆ ಘಟನೆಗೆ ಸಂತಾಪ ಸೂಚಿಸಿ ಮೃತರಿಗೆ ಹಾಗೂ ಗಾಯಾಳುಗಳಿಗೆ ಪರಿಹಾರ (Compensation) ಘೋಷಿಸಿದೆ.

    ಶುಕ್ರವಾರ ಒಡಿಶಾದಲ್ಲಿ ನಡೆದ ರೈಲು ದುರಂತಕ್ಕೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಪರಿಹಾರ ಘೋಷಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ಘೋಷಿಸಿದೆ. ಇದನ್ನೂ ಓದಿ: ರೈಲು ದುರಂತ – ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ

    ಅದೇ ರೀತಿ ರೈಲ್ವೇ ಸಚಿವಾಲಯವು (Ministry of Railways) ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ., ಗಂಭೀರ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಅಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಿದೆ. ಈ ಕುರಿತು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav), ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಮೃತರ ಕುಟುಂಬಕ್ಕೆ ಸಂತಾಪವನ್ನು ಸೂಚಿಸಿದ್ದಾರೆ. ಶನಿವಾರ ಮುಂಜಾನೆ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ ಅವರು, ಅಪಘಾತದ ಬಗ್ಗೆ ವಿವರವಾದ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: Odisha Train Accident; 48 ರೈಲು ಸಂಚಾರ ರದ್ದು, 39 ರೈಲುಗಳ ಮಾರ್ಗ ಬದಲಾವಣೆ

    ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ (Naveen Patnaik) ಬಾಲಸೋರ್ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ ರೈಲು ಅಪಘಾತದಲ್ಲಿ ಗಾಯಗೊಂಡ ಜನರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದು, ಒಡಿಶಾದಲ್ಲಿ ಇಂದು (ಶನಿವಾರ) ಶೋಕಾಚರಣೆಯನ್ನು ಘೋಷಿಸಿದ್ದಾರೆ. ಅಂತೆಯೇ ತಮಿಳುನಾಡು (Tamil Nadu) ಸರ್ಕಾರ ಅಪಘಾತಕ್ಕೀಡಾದ ತಮಿಳುನಾಡಿನ ಜನರಿಗೆ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (M.K.Stalin) ಅವರು ದುರ್ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿ, ತಮಿಳುನಾಡು ಮೂಲದ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 1 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತ; ಸಂಚಾರ ರದ್ದಾಗಿ ಬೆಂಗ್ಳೂರಲ್ಲೇ ನಿಂತ ಬೆಂಗಳೂರು-ಗುವಾಹಟಿ ರೈಲು

    ದುರಂತಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi), ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೇರಿದಂತೆ ಅನೇಕ ಗಣ್ಯರು ವಿಷಾದ ವ್ಯಕ್ತಪಡಿಸಿದ್ದಾರೆ. ಅನೇಕ ಗಣ್ಯರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ದೊಡ್ಡಮಟ್ಟದ ಸದ್ದು ಕೇಳಿಬಂತು; ದುರಂತದ ಘನಘೋರ ದೃಶ್ಯ ಬಿಚ್ಚಿಟ್ಟ ಕನ್ನಡಿಗ

  • ಬಿಟಿಎಸ್ ರಜತೋತ್ಸವ – ಕೇಂದ್ರ ಐಟಿ ಸಚಿವ ವೈಷ್ಣವ್‍ಗೆ ಆಹ್ವಾನ

    ಬಿಟಿಎಸ್ ರಜತೋತ್ಸವ – ಕೇಂದ್ರ ಐಟಿ ಸಚಿವ ವೈಷ್ಣವ್‍ಗೆ ಆಹ್ವಾನ

    ನವದೆಹಲಿ: ನವೆಂಬರ್ 16ರಿಂದ ಆರಂಭವಾಗಲಿರುವ ಪ್ರತಿಷ್ಠಿತ ಬೆಂಗಳೂರು ತಂತ್ರಜ್ಞಾನ ಸಮಾವೇಶದ (ಬಿಟಿಎಸ್) ರಜತೋತ್ಸವ (BTS Rajathotsava) ವರ್ಷದ ಸಮಾವೇಶವನ್ನು ಉದ್ಘಾಟಿಸುವಂತೆ ಕೋರಿ ಕೇಂದ್ರ ಐಟಿ-ಬಿಟಿ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಅವರಿಗೆ ರಾಜ್ಯದ ಐಟಿ-ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ (C.N. Ashwath Narayan) ಅವರು ಆಹ್ವಾನಿಸಿದ್ದಾರೆ.

    ಮಂಗಳವಾರ ದೆಹಲಿಗೆ (New Delhi) ಬಂದಿಳಿದ ಅವರು, ಕೇಂದ್ರ ಸಚಿವರನ್ನು ಭೇಟಿ ಮಾಡಿ, ರಾಜ್ಯ ಸರ್ಕಾರದ ಪರವಾಗಿ ಈ ಆಮಂತ್ರಣ ನೀಡಿದರು. ಈ ಸಂದರ್ಭದಲ್ಲಿ ಬಿಟಿಎಸ್‍ನ ವೈಶಿಷ್ಟ್ಯಗಳನ್ನು ವಿವರಿಸಿದರು. ಇದೇ ವೇಳೆ ರಾಜ್ಯ ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ, ನಿರ್ದೇಶಕಿ ಮೀನಾ ನಾಗರಾಜ್ ಉಪಸ್ಥಿತರಿದ್ದರು. ಇದನ್ನೂ ಓದಿ: ಅಯೋಧ್ಯೆಯಿಂದ ಶ್ರೀಲಂಕಾಗೆ ಶ್ರೀರಾಮ ನಡೆದದ್ದಕ್ಕಿಂತ ಹೆಚ್ಚು ರಾಹುಲ್‌ ಗಾಂಧಿ ಪಾದಯಾತ್ರೆ ಮಾಡ್ತಿದ್ದಾರೆ – ಕಾಂಗ್ರೆಸ್‌ ನಾಯಕ

    ಅರುಣ್ ಸಿಂಗ್‍ಗೂ ಆಹ್ವಾನ
    ನ.11ರಂದು ಪ್ರಧಾನಿ ನರೇಂದ್ರ ಮೋದಿ (Narendra Modi)  ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ನೆರವೇರಿಸಲಿರುವ ನಾಡಪ್ರಭು ಕೆಂಪೇಗೌಡರ (Kempegowda) 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ ಸಮಾರಂಭ ಮತ್ತು ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೆ (ಬಿಟಿಎಸ್) ಬರುವಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh) ಅವರಿಗೂ ಅಶ್ವತ್ಥ ನಾರಾಯಣ ಆಹ್ವಾನ ನೀಡಿದ್ದಾರೆ.

    ಕೆಂಪೇಗೌಡರ ಪ್ರತಿಮೆ ಅನಾವರಣದ ಅಂಗವಾಗಿ ಮೋದಿ ಅಧ್ಯಕ್ಷತೆಯಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ. ಇದರಲ್ಲಿ ಭಾಗವಹಿಸುವಂತೆ ಸಚಿವರು ಸಿಂಗ್ ಅವರಿಗೆ ತಿಳಿಸಿದರು. ಇದನ್ನೂ ಓದಿ: ನನ್ನನ್ನು ಪ್ಯಾಕೇಜ್ ಸ್ಟಾರ್ ಅನ್ನೋರಿಗೆ ಚಪ್ಪಲೀಲಿ ಹೊಡೀತೀನಿ: ಪವನ್ ಕಲ್ಯಾಣ್ ಆನ್ ಫೈಯರ್

    ಯುದ್ಧ ಸ್ಮಾರಕಕ್ಕೆ ಭೇಟಿ
    ನಂತ ಅಶ್ವತ್ಥನಾರಾಯಣ ಅವರು ರಾಷ್ಟ್ರ ರಾಜಧಾನಿಯಲ್ಲಿ ಇರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದರು. ಸ್ಮಾರಕವನ್ನು ಸಾಮಾನ್ಯ ಪ್ರವಾಸಿಗರಂತೆ ಸುತ್ತು ಹಾಕಿದ ಅವರು, ಅಲ್ಲಿಯ ಸ್ಮಾರಕಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಅಲ್ಲಿಯ ವಿವರಗಳನ್ನು ಕುತೂಹಲದಿಂದ ವೀಕ್ಷಿಸಿದರು.

    Live Tv
    [brid partner=56869869 player=32851 video=960834 autoplay=true]

  • ಜೂನ್‌ ಆರಂಭದಲ್ಲಿ 5ಜಿ ಸ್ಪೆಕ್ಟ್ರಂ ಹರಾಜು: ಅಶ್ವಿನಿ ವೈಷ್ಣವ್‌

    ಜೂನ್‌ ಆರಂಭದಲ್ಲಿ 5ಜಿ ಸ್ಪೆಕ್ಟ್ರಂ ಹರಾಜು: ಅಶ್ವಿನಿ ವೈಷ್ಣವ್‌

    ನವದೆಹಲಿ: ಜೂನ್ ಆರಂಭದಲ್ಲಿ ಸರ್ಕಾರವು 5ಜಿ ಸ್ಪೆಕ್ಟ್ರಂ (ತರಂಗಾಂತರ) ಹರಾಜನ್ನು ನಡೆಸುವ ಸಾಧ್ಯತೆಯಿದೆ ಎಂದು ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಹೇಳಿದ್ದಾರೆ.

    ಟೆಲಿಕಾಂ ಇಲಾಖೆ ನಿರೀಕ್ಷಿತ ಟೈಮ್‌ಲೈನ್‌ಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಸ್ಪೆಕ್ಟ್ರಂ ಬೆಲೆಯ ಬಗ್ಗೆ ಉದ್ಯಮದ ಕಳವಳಗಳನ್ನು ಪರಿಹರಿಸಲು ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: ಕೆಲವರ ಹಿತಾಸಕ್ತಿಗೆ ಸ್ಪೆಕ್ಟ್ರಂ ಹರಾಜು ಪ್ರಕ್ರಿಯೆ ವಿಳಂಬ – ಕೇಂದ್ರಕ್ಕೆ ಜಿಯೋ ಪತ್ರ

    ಭಾರತೀಯ ದೂರ ಸಂರ್ಪಕ ಪ್ರಾಧಿಕಾರ(ಟ್ರಾಯ್‌) ಮೆಗಾ ಹರಾಜು ಯೋಜನೆಯನ್ನು ರೂಪಿಸಿದ್ದು, ಎಲ್ಲ ಬ್ಯಾಂಡ್‌ಗಳ ಸ್ಪೆಕ್ಟ್ರಂಗಳ ಮೂಲ ಬೆಲೆ 7.5 ಲಕ್ಷ ಕೋಟಿ ರೂ. ನಿಗದಿ ಪಡಿಸಿದೆ. ಇದು 30 ವರ್ಷ ಅವಧಿಗೆ ಇರಲಿದೆ ಎಂದು ತಿಳಿಸಿದರು.

    ಜಾಗತಿಕ ಮಾನದಂಡಗಳಿಗಿಂತ ಸ್ಪೆಕ್ಟ್ರಂ ಬೆಲೆ ದುಬಾರಿಯಾಗಿದೆ ಎಂದು ಟೆಲಿಕಾಂ ಕಂಪನಿಗಳು ಹೇಳಿದ ಹಿನ್ನೆಲೆಯಲ್ಲಿ ಟ್ರಾಯ್‌ ಸ್ಪೆಕ್ಟ್ರಂ ಬೆಲೆಯನ್ನು ಕಳೆದ ಬೆಲೆಗೆ ಹೋಲಿಸಿದರೆ ಶೇ.39 ರಷ್ಟು ಕಡಿಮೆ ಮಾಡಿದೆ.

  • ಅರಳಗುಪ್ಪೆ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಬಿಸಿ ನಾಗೇಶ್ ಕೇಂದ್ರ ಸಚಿವರಿಗೆ ಮನವಿ

    ಅರಳಗುಪ್ಪೆ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಬಿಸಿ ನಾಗೇಶ್ ಕೇಂದ್ರ ಸಚಿವರಿಗೆ ಮನವಿ

    ತುಮಕೂರು: ಯಶವಂತಪುರ-ಚಿಕ್ಕಮಗಳೂರು ನಡುವೆ ಸಂಚರಿಸುವ 07369/07370 ಸಂಖ್ಯೆಯ ಪ್ಯಾಸೆಂಜರ್ ರೈಲನ್ನು ಪ್ರಯಾಣಿಕರ ಅನುಕೂಲಕ್ಕಾಗಿ ತಿಪಟೂರು ತಾಲೂಕಿನ ಅರಳಗುಪ್ಪೆ ನಿಲ್ದಾಣದಲ್ಲಿ ನಿಲುಗಡೆ ಮಾಡುವಂತೆ ಕೋರಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿಸಿ ನಾಗೇಶ್ ಮನವಿ ಸಲ್ಲಿಸಿದ್ದರು.

    ದೆಹಲಿ ಪ್ರವಾಸದ ವೇಳೆ ರೈಲ್ವೆ ಸಚಿವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ, ಮನವಿ ಸಲ್ಲಿಸಿ, ಅರಳಗುಪ್ಪೆ ನಿಲ್ದಾಣದಲ್ಲಿ ರೈಲು ನಿಲುಗಡೆಯ ಅಗತ್ಯತೆಯನ್ನು ಕೇಂದ್ರ ಸಚಿವರಿಗೆ ನಾಗೇಶ್ ಮನವರಿಕೆ ಮಾಡಿದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರೇ ನನಗೆ ಬೆಂಬಲ ನೀಡಲಿಲ್ಲ: ಗೆದ್ದ ಬಿಜೆಪಿ ಅಭ್ಯರ್ಥಿ ಬೇಸರ

     

    ಸುಮಾರು 3 ಸಾವಿರ ಜನಸಂಖ್ಯೆ ಇರುವ ಅರಳಗುಪ್ಪೆ ಗ್ರಾಮದ ಸುತ್ತಲಿನ 30ರಿಂದ 35 ಗ್ರಾಮಗಳ ಜನರು ಈ ರೈಲು ನಿಲ್ದಾಣವನ್ನು ಬಳಸುತ್ತಾರೆ. ಅರಳಗುಪ್ಪೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಚೇರಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬ್ಯಾಂಕ್‌ಗಳು ಇವೆ ಎಂದರು.

    ಐತಿಹಾಸಿಕ ಪ್ರವಾಸಿ ತಾಣವಾಗಿರುವ ಅರಳಗುಪ್ಪೆ ಗ್ರಾಮದಲ್ಲಿ ಪುರಾತನ ಕಾಲದ ಶ್ರೀ ಚನ್ನಕೇಶವ ದೇವಾಲಯ ಮತ್ತು ಶ್ರೀ ಕಲ್ಲೇಶ್ವರ ದೇವಾಲಯಗಳಿವೆ. ಪುರಾತತ್ವ ಇಲಾಖೆಯಿಂದ ಈ ಐತಿಹಾಸಿಕ ದೇವಾಲಯಗಳು ಗುರುತಿಸಲ್ಪಟ್ಟಿವೆ. ಈ ಭಾಗದ ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯ ರಾಜಧಾನಿ ಸಂಪರ್ಕಿಸುವ ಪ್ಯಾಸೆಂಜರ್ ರೈಲನ್ನು ಅರಳಗುಪ್ಪೆ ನಿಲ್ದಾಣದಲ್ಲಿ ನಿಲುಗಡೆ ಮಾಡುವಂತೆ ಸಚಿವ ನಾಗೇಶ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: 2023ರ ಚುನಾವಣೆಯಲ್ಲಿ ಭಾಜಪ ಕಮಲ ಅರಳಲಿದೆ: ಬಸವರಾಜ ಬೊಮ್ಮಾಯಿ

    ಈ ವೇಳೆ ರೈಲು ನಿಲುಗಡೆ ಮಾಡಲು ಚರ್ಚೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುತ್ತೇನೆ ಎಂದು ಅಶ್ವಿನಿ ವೈಷ್ಣವ್, ಸಚಿವ ಬಿಸಿ ನಾಗೇಶ್ ಅವರಿಗೆ ಭರವಸೆ ನೀಡಿದರು.

  • ಹಿಮದಿಂದ ಆವೃತವಾದ ಫೋಟೋ ಶೇರ್ ಮಾಡಿ ‘ಭೂಮಿಯ ಮೇಲಿನ ಸ್ವರ್ಗ’ ಎಂದ ರೈಲ್ವೇ ಸಚಿವ

    ಹಿಮದಿಂದ ಆವೃತವಾದ ಫೋಟೋ ಶೇರ್ ಮಾಡಿ ‘ಭೂಮಿಯ ಮೇಲಿನ ಸ್ವರ್ಗ’ ಎಂದ ರೈಲ್ವೇ ಸಚಿವ

    ಶ್ರೀನಗರ: ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹಿಮದಿಂದ ಆವೃತವಾದ ಶ್ರೀನಗರ ನಿಲ್ದಾಣದ ಫೋಟೋವನ್ನು ಶೇರ್ ಮಾಡಿ, ‘ಭೂಮಿಯ ಮೇಲಿನ ಸ್ವರ್ಗ’ ಎಂದು ಬರೆದುಕೊಂಡಿದ್ದಾರೆ.

    ಅಶ್ವಿನಿ ವೈಷ್ಣವ್ ಅವರು ಭಾನುವಾರ ಶ್ರೀನಗರ ರೈಲು ನಿಲ್ದಾಣ ಹಿಮದಿಂದ ಆವೃತವಾಗಿರುವ ಫೋಟೋವನ್ನು ಟ್ವಟ್ಟರ್ ನಲ್ಲಿ ಹಂಚಿಕೊಂಡಿದ್ದು, ಭೂಮಿಯ ಮೇಲೆ ಸ್ವರ್ಗವಿದ್ದರೆ, ಅದು ಇದು ಎಂದು ಫುಲ್ ಖುಷ್ ಆಗಿ ಬರೆದಿದ್ದಾರೆ. ಇದನ್ನೂ ಓದಿ: ಹಿರಿಯ ಸಾಹಿತಿ, ರಾಷ್ಟ್ರಪ್ರಶಸ್ತಿ ವಿಜೇತ ಎನ್.ಎಸ್.ದೇವಿಪ್ರಸಾದ್ ನಿಧನ

    ಜಮ್ಮು ಮತ್ತು ಕಾಶ್ಮೀರದ ವಾರಾಂತ್ಯದಲ್ಲಿ ಭಾರೀ ಹಿಮಾದಿಂದ ಕೂಡಿತ್ತು, ಆಗ ಅದನ್ನು ನೋಡುವುದೇ ಚಂದ. ಈ ಅನುಭವವನ್ನು ನೇರವಾಗಿ ನೋಡಿದರೆ ಮಾತ್ರ ಗೊತ್ತಾಗುತ್ತೆ. ಇನ್ನೂ ಇಲ್ಲಿನ ಜನರು ಸೋಶಿಯಲ್ ಮೀಡಿಯಾದಲ್ಲಿ ಪ್ರಕೃತಿಯ ಸೊಬಗಿನ ಫೋಟೋವನ್ನು ಶೇರ್ ಮಾಡುತ್ತಿದ್ದಾರೆ. ಆ ಫೋಟೋಗಳನ್ನು ನೋಡಿದ ನೆಟ್ಟಿಗರು ಅವರಿರುವಲ್ಲಿಯೇ ‘ವಿ ಮಿಸ್’ ಎಂದು ಕಮೆಂಟ್ ಮಾಡುತ್ತಿದ್ದಾರೆ.

    ಕೊರೊನಾ ಕಾರಣದಿಂದ ಈ ವರ್ಷ ಜಮ್ಮು-ಕಾಶ್ಮಿರಾದಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಇನ್ನೂ ಭಾರತದಲ್ಲಿ ದಿನೇ ದಿನೇ ಕೊರೊನಾ ಸಂಖ್ಯೆ ಏರಿಕೆಯಾಗುತ್ತಿದ್ದು, ಜನರು ತಮ್ಮ ಹುಷಾರಿನಲ್ಲಿ ಇರಬೇಕು. ಇದನ್ನೂ ಓದಿ: ಮೇಕೆದಾಟು ಯೋಜನೆ ಸ್ಥಗಿತಗೊಂಡ್ರೆ ಕಾಂಗ್ರೆಸ್ ಪಕ್ಷದವರೇ ನೇರ ಹೊಣೆ: ಭೈರತಿ ಬಸವರಾಜ್

  • ಯಶವಂತಪುರ-ಹುಬ್ಬಳ್ಳಿ ಜೋಡಿ ರೈಲು ಮಾರ್ಗವನ್ನು ಹಂತ ಹಂತವಾಗಿ ಕಾರ್ಯಗತಗೊಳಿಸ್ತೇವೆ: ಅಶ್ವಿನಿ ವೈಷ್ಣವ್

    ಯಶವಂತಪುರ-ಹುಬ್ಬಳ್ಳಿ ಜೋಡಿ ರೈಲು ಮಾರ್ಗವನ್ನು ಹಂತ ಹಂತವಾಗಿ ಕಾರ್ಯಗತಗೊಳಿಸ್ತೇವೆ: ಅಶ್ವಿನಿ ವೈಷ್ಣವ್

    ಬೆಂಗಳೂರು: ಯಶವಂತಪುರ-ಹುಬ್ಬಳ್ಳಿ ಜೋಡಿ ರೈಲು ಮಾರ್ಗ ಯೋಜನೆಯನ್ನು ಹಂತ-ಹಂತವಾಗಿ ಕಾರ್ಯಗತಗೊಳಿಸಲಾಗುತ್ತದೆ. ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

    ರಾಜ್ಯಸಭಾ ಸದಸ್ಯರಾದ ಕೆ. ನಾರಾಯಣ ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಯಶವಂತಪುರ-ಹುಬ್ಬಳ್ಳಿ ನಡುವಿನ ಜೋಡಿ ಮಾರ್ಗ ಯೋಜನೆಯ ಪೈಕಿ ಚಿಕ್ಕಜಾಜೂರು-ಅರಸೀಕೆರೆ, ತುಮಕೂರು-ಯಶವಂತರಪುರ ನಡುವೆ ಜೋಡಿ ಮಾರ್ಗ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಲಿಂಗಕಾಮಿ ಜೋಡಿ

    train

    ಕರ್ನಾಟಕದ ವಿವಿಧ ರೈಲು ಮಾರ್ಗಗಳ ಕಾಮಗಾರಿ ಪ್ರಗತಿಯ ಕುರಿತು ಸಚಿವರು ರಾಜ್ಯಸಭೆಗೆ ಮಾಹಿತಿಯನ್ನು ನೀಡಿದ್ದು, ಯಶವಂತಪುರ-ಚಿಕ್ಕಬಾಣಾವರ-ತುಮಕೂರು ನಡುವಿನ ಮಾರ್ಗದ ವಿದ್ಯುದೀಕರಣ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

    ಮೆಮು ರೈಲು ಪ್ರಸ್ತಾವನೆ ಇಲ್ಲ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬೆಂಗಳೂರಿನ ಯಶವಂತಪುರ-ತುಮಕೂರು ನಡುವೆ ಮೆಮು ರೈಲು ಓಡಿಸುವ ಯಾವುದೇ ಪ್ರಸ್ತಾಪ ಇಲ್ಲ ಎಂದು ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದ್ದಾರೆ.  ಇದನ್ನೂ ಓದಿ: MESಗೆ ಪಾಠ ಕಲಿಸಲು ಕಾರ್ಮಿಕ ಸಂಘಟನೆ ಪ್ಲ್ಯಾನ್- ಇಂದಿನಿಂದ್ಲೇ ಮಹಾರಾಷ್ಟ್ರ ವಸ್ತುಗಳು ಬ್ಯಾನ್

    Ashwini Vaishnav

    ಬೆಂಗಳೂರು ಮತ್ತು ತುಮಕೂರು ನಡುವೆ ಪ್ರತಿನಿತ್ಯ ಸಾವಿರಾರು ಜನರು ಸಂಚಾರ ನಡೆಸುತ್ತಾರೆ. ಉಭಯ ನಗರಗಳ ನಡುವೆ ಮೆಮು ರೈಲು ಓಡಿಸಿದರೆ ಸಹಾಯಕವಾಗಲಿದೆ ಎಂಬ ಪ್ರಸ್ತಾವನೆ ಇತ್ತು. ತುಮಕೂರು ರೈಲು ಪ್ರಯಾಣಿಕರ ವೇದಿಕೆ ಸಹ ಮೆಮು ರೈಲು ಓಡಿಸುವಂತೆ ಮನವಿ ಮಾಡಿತ್ತು. ಇದನ್ನೂ ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಟಾಲಿವುಡ್ ನಟಿ – ಕಾಜಲ್ ಫೋಟೋ ಹೇಳ್ತೀರೋದೇನು?

    ಭಾರತೀಯ ರೈಲ್ವೆ ಚಿಕ್ಕಬಣಾವರ-ಹುಬ್ಬಳ್ಳಿ ನಡುವಿನ ಮಾರ್ಗದ ವಿದ್ಯುದೀಕರಣ ಕಾಮಗಾರಿ ಭಾಗವಾಗಿ ಬೆಂಗಳೂರು-ತುಮಕೂರು ನಡುವಿನ 69.47 ಕಿ. ಮೀ. ರೈಲು ಮಾರ್ಗವನ್ನು ವಿದ್ಯುದೀಕರಣ ಮಾಡಿದೆ. ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡು, ಸಿಆರ್‍ಎಸ್ ಪರಿಶೀಲನೆ ಮುಗಿದ ಬಳಿಕ ಯಶವಂತಪುರ-ತುಮಕೂರು ನಡುವೆ ಮೆಮು ರೈಲು ಓಡಿಸುವ ಪ್ರಸ್ತಾವನೆ ಇದೆ ಎಂದು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಹೇಳಿದ್ದರು. ಆದರೆ ಈಗ ಸಚಿವರು ಮೆಮು ರೈಲು ಓಡಿಸುವ ಪ್ರಸ್ತಾಪವಿಲ್ಲ ಎಂದು ಹೇಳಿದ್ದಾರೆ.

  • ಬೈಯಪ್ಪನಹಳ್ಳಿ ನೂತನ ರೈಲ್ವೆ ಟರ್ಮಿನಲ್‍ಗೆ ಕೆಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ, ಪರಿಶೀಲನೆ

    ಬೈಯಪ್ಪನಹಳ್ಳಿ ನೂತನ ರೈಲ್ವೆ ಟರ್ಮಿನಲ್‍ಗೆ ಕೆಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ, ಪರಿಶೀಲನೆ

    ಆನೇಕಲ್: ದೇಶದಲ್ಲೆ ಮೊಟ್ಟಮೊದಲ ಹವಾನಿಯಂತ್ರಿತ ರೈಲ್ವೆ ನಿಲ್ದಾಣ ಎಂಬ ಹೆಗ್ಗಳಿಕೆ ಪಡೆದಿರುವ ವಿಮಾನ ನಿಲ್ದಾಣ ಮಾದರಿಯಲ್ಲಿ ನಿರ್ಮಿಸಲಾದ ಮತ್ತು ಉದ್ಘಾಟನೆಗೆ ಸಿದ್ಧವಾಗಿರುವ ಬೈಯಪ್ಪನಹಳ್ಳಿ ನೂತನ ರೈಲ್ವೆ ನಿಲ್ದಾಣದ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಗೆ ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ರೈಲ್ವೆ ಯಾರ್ಡ್ ನ ಕಾರ್ಯಕಾರಿ ಅಂಶಗಳು, ಸೌಲಭ್ಯಗಳು ಮತ್ತು ನಿಲ್ದಾಣದಲ್ಲಿ ಒದಗಿಸಲಾದ ನವೀನ ವೈಶಿಷ್ಟ್ಯಗಳನ್ನು ಪರಿಶೀಲಿಸಿದರು. ಪರಿಶೀಲನೆಗೂ ಮುನ್ನ ಸಚಿವರಿಗೆ ರೈಲ್ವೆ ಪೊಲೀಸರಿಂದ ಗೌರವ ಗೌರವ ವಂದನೆ ಅರ್ಪಿಸಲಾಯಿತು.

    ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ನೇತೃತ್ವದ ಎಸ್‍ಡಬ್ಲ್ಯೂಆರ್‍ನ ಹಿರಿಯ ಅಧಿಕಾರಿಗಳೊಂದಿಗೆ ಅವರು ಈ ಟರ್ಮಿನಲ್ ನಿಂದ ಪಾರ್ಸೆಲ್ ಸಾಗಿಸುವ ಸಾಮರ್ಥ್ಯದ ಕುರಿತು ಚರ್ಚಿಸಿದರು. ನಿಲ್ದಾಣ ನಿರ್ಮಾಣವನ್ನು ನೋಡಿ ತುಂಬಾನೆ ಸಂತೋಷ ವ್ಯಕ್ತಪಡಿಸಿದ ಸಚಿವರು ಟರ್ಮಿನಲ್ ನ ಇಂಚಿಂಚೂ ಮಾಹಿತಿಯನ್ನ ಅಧಿಕಾರಿಗಳಿಂದ ಪಡೆದರು. ನಂತರ ಮಾತನಾಡಿದ ಸಚಿವರು, ಈ ಪ್ರದೇಶದಲ್ಲಿ ತಯಾರಿಸಿದ ಬಿಳಿ ಸರಕುಗಳು, ಕೈಗಾರಿಕಾ ಉಪಕರಣಗಳು, ಜವಳಿ ಮತ್ತು ಇತರ ಉತ್ಪನ್ನಗಳನ್ನು ಸಾಗಿಸಲು ಪಾರ್ಸೆಲ್ ವಿಶೇಷ ರೈಲುಗಳ ಓಡಾಟದಿಂದ ಆದಾಯವನ್ನು ಗಳಿಸಲು ಪ್ರಸ್ತಾಪಗಳನ್ನು ರೂಪಿಸಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಟೋಕಿಯೋ ಪ್ಯಾರಾಲಂಪಿಕ್ಸ್ ಭಾರತೀಯ ಕ್ರೀಡಾ ಇತಿಹಾಸದಲ್ಲಿ ವಿಶೇಷ: ಮೋದಿ

    ಈ ವಿಮಾನ ನಿಲ್ದಾಣ ರೀತಿಯಲ್ಲಿ ರೂಪಿಸಿದ ಮತ್ತು ಕಾರ್ಯಗತಗೊಳಿಸಿದ ಎಂಜಿನಿಯರ್‍ಗಳ ತಂಡವನ್ನು ವೈಷ್ಣವ್ ಶ್ಲಾಘಿಸಿದರು. ಸರ್ ಎಂವಿ ಟರ್ಮಿನಲ್‍ನಲ್ಲಿ ಪ್ರಯಾಣಿಕರ ಸೌಕರ್ಯ ಮತ್ತು ಸೌಕರ್ಯವನ್ನು ಹೆಚ್ಚಿಸಲು ಒದಗಿಸಲಾದ ಸೌಲಭ್ಯಗಳು ಮತ್ತು ಸೌಕರ್ಯಗಳು ಭವಿಷ್ಯದಲ್ಲಿ ದೇಶದಾದ್ಯಂತ ನಿರ್ಮಾಣಗೊಳ್ಳುವ ನಿಲ್ದಾಣಗಳಿಗೆ ಮಾನದಂಡವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಅವರು ನಿರ್ಧರಿಸಿದ್ದ ಗುರಿಯನ್ನು ತಲುಪಿದ್ದಾರೆ- ಸುಹಾಸ್ ಸಾಧನೆಗೆ ಪತ್ನಿಯ ಮೆಚ್ಚುಗೆ

    ಇಡೀ ದೇಶಕ್ಕೆ ಮಾದರಿಯಾದ ನಿಲ್ದಾಣ:
    ಈ ನಿಲ್ದಾಣವು 7 ಪ್ಲಾಟ್‍ಫಾರ್ಮ್‍ಗಳನ್ನು ಹೊಂದಿದ್ದು, ದಿನಕ್ಕೆ 1 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುವ ಸಾಮಥ್ರ್ಯವನ್ನು ಹೊಂದುವಂತೆ ವಿನ್ಯಾಸಗೊಳಿಸಲಾಗಿದೆ. ಎಸ್ಕಲೇಟರ್‍ಗಳು ಮತ್ತು ಲಿಫ್ಟ್‍ಗಳನ್ನು ಹೊರತುಪಡಿಸಿ ಸಬ್‍ವೇಗೆ ಪ್ರವೇಶಿಸಲು ಬ್ರೈಲ್ ಚಿಹ್ನೆಗಳು, ಅಂಡರ್ ಪಾಸ್ ಗಳ ವೈಶಿಷ್ಟ್ಯಗಳನ್ನು ಹೊಂದಿದೆ. ಇದು ದಿವ್ಯಾಂಗ(ಅಂಗವಿಕಲರ) ಸ್ನೇಹಿ ನಿಲ್ದಾಣವಾಗಿದೆ. ನಿಲ್ದಾಣದಲ್ಲಿ ಪರಿಸರ ಸ್ನೇಹಿ ನೀರಿನ ಮರುಬಳಕೆ ಘಟಕವೂ ಇದೆ. ಬಿಬಿಎಂಪಿಯೊಂದಿಗೆ ಸಮಾಲೋಚಿಸಿ ಟರ್ಮಿನಲ್‍ಗೆ ಪ್ರವೇಶಕ್ಕೆ ಕಿರಿದಾದ ರಸ್ತೆಗಳ ಪ್ರವೇಶದ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸಿ ಶೀಘ್ರದಲ್ಲೇ ನಿಲ್ದಾಣ ಉದ್ಘಾಟನೆ ಆಗಲಿದೆ ಎಂದು ಸಚಿವರು ಹೇಳಿದರು.

    ಇದೇ ಸಂದರ್ಭದಲ್ಲಿ ರೈಲ್ವೆ ನಿಲ್ದಾಣ ಪರಿಶೀಲನೆಗೆ ಸಚಿವ ಜೊತೆಗೆ ಸಂಸದ ಪಿ.ಸಿ.ಮೋಹನ್, ಜನರಲ್ ಮ್ಯಾನೇಜರ್ ಎಸ್ ಡಬ್ಲ್ಯುಆರ್ ಸಂಜೀವ್ ಕಿಶೋರ್, ಪ್ರಿನ್ಸಿಪಾಲ್ ಚೀಫ್ ಆಪರೇಷನ್ ಮ್ಯಾನೇಜರ್ ಹರಿ ಶಂಕರ್ ವರ್ಮಾ, ಡಿ ಆರ್ ಎಂ ಬೆಂಗಳೂರು ಶ್ಯಾಮ್ ಸಿಂಗ್, ಮುಖ್ಯ ಆಡಳಿತಾಧಿಕಾರಿ, ನಿರ್ಮಾಣ ದೇಶ್ ರತನ್ ಗುಪ್ತಾ, ಮತ್ತು ರೈಲ್ವೇಸ್ ನ ಹಿರಿಯ ಅಧಿಕಾರಿಗಳು ಭಾಸ್ಕರ್ ರಾವ್, ಮುಖ್ಯ ಆಯುಕ್ತ ಬಿಬಿಎಂಪಿ ಗೌರವ್ ಗುಪ್ತಾ ಭಾಗವಹಿಸಿದ್ದರು.