Tag: asi

  • ASI ಮನೆಯಲ್ಲಿ ದರೋಡೆ- ಮೂವರು ಆರೋಪಿಗಳ ಅರೆಸ್ಟ್

    ASI ಮನೆಯಲ್ಲಿ ದರೋಡೆ- ಮೂವರು ಆರೋಪಿಗಳ ಅರೆಸ್ಟ್

    ಚಿಕ್ಕಬಳ್ಳಾಪುರ: ತಾಲೂಕಿನ ಪೇರೇಸಂದ್ರ ಗ್ರಾಮದ ಎಎಸ್‌ಐ (ASI) ನಾರಾಯಣಸ್ವಾಮಿ ಮನೆಯಲ್ಲಿ ದರೋಡೆ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ (Chikkaballapur) ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ (Arrest) ಯಶಸ್ವಿಯಾಗಿದ್ದಾರೆ.

    ಉತ್ತರ ಪ್ರದೇಶದ ಅರೀಫ್(35) ಹಾಗೂ ಜಮಷೀದ್ ಖಾನ್(27) ಸೇರಿದಂತೆ ಆಂಧ್ರಪ್ರದೇಶದ ಪಟಾಣ್ ಯಾರಿಸ್ ಖಾನ್(30) ಬಂಧಿತರು. ನ. 8ರಂದು ಬಾಗೇಪಲ್ಲಿ ಎಎಸ್‌ಐ ನಾರಾಯಣಸ್ವಾಮಿ ಮನೆ ಮೇಲೆ ದಾಳಿ ಮಾಡಿ ಮನೆಯಲ್ಲಿದ್ದ ಮಹಿಳೆಯರಿಗೆ ಚಾಕು ತೋರಿಸಿ ಬೆದರಿಸಿ, ಮನೆಯಲ್ಲಿದ್ದ ನಗನಾಣ್ಯ ಲೂಟಿ ಮಾಡಿದ್ದರು. ಅಡ್ಡ ಬಂದಿದ್ದ ಮನೆ ಮಾಲೀಕ ನಾರಾಯಣಸ್ವಾಮಿ ಮೇಲೆ ಹಲ್ಲೆ ನಡೆಸಿದ್ದರು. ಜೊತೆಗ ನಾರಾಯಣಸ್ವಾಮಿ ಪುತ್ರ ಶರತ್ ಕಾಲಿಗೆ ಗುಂಡೇಟು ಹಾರಿಸಿದ್ದರು.

    ಈ ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಸದ್ಯ ಮೂವರನ್ನ ಬಂಧಿಸಿದ್ದು, ಬಂಧಿತರಿಂದ ಮೂರು ನಾಡ ಪಿಸ್ತೂಲ್‌ಗಳು, ಖಾಲಿ ಮ್ಯಾಗ್ಜಿನ್ ಹೊಂದಿರುವ ಒಂದು ಪಿಸ್ತೂಲ್, 3 ಲಕ್ಷದ 41000 ನಗದು, ಕೃತ್ಯಕ್ಕೆ ಬಳಿಸಿದ ಕಾರು, 71 ಗ್ರಾಂ ತೂಕದ ಮಾಂಗಲ್ಯ ಸರ, 21 ಬೆಳ್ಳಿಯ ಪೂಜಾ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಬಸ್ ನಿಲ್ದಾಣ ತೆರವು ಮಾಡಲ್ಲ, ಗುಂಬಜ್ ಮಾತ್ರ ತೆರವು ಮಾಡ್ತೇನೆ: ಪ್ರತಾಪ್ ಸಿಂಹ

    POLICE JEEP

    ಪ್ರಮುಖ ಆರೋಪಿಗಳು ಉತ್ತರ ಪ್ರದೇಶಕ್ಕೆ ಎಸ್ಕೇಪ್ ಆಗಿದ್ದು, ಪೊಲೀಸರು ಉತ್ತರ ಪ್ರದೇಶದಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಇನ್ನೂ ಘಟನೆಯಲ್ಲಿ ಗಾಯಾಗೊಂಡಿದ್ದ ಎಎಸ್‌ಐ ನಾರಾಯಣಸ್ವಾಮಿ ಹಾಗೂ ಆತನ ಪುತ್ರ ಶರತ್ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಶ್ವಾರೋಹಣ ಸ್ಪರ್ಧೆಗೆ ಅಭ್ಯಾಸ ನಡೆಸುತ್ತಿದ್ದ ಬಿಎಸ್‌ಎಫ್ ಯೋಧನಿಗೆ ಕುದುರೆ ತುಳಿದು ಸಾವು

    Live Tv
    [brid partner=56869869 player=32851 video=960834 autoplay=true]

  • ಎಎಸ್‍ಐಗಳಿಂದ ಕಿರಿಯ ಸಹೋದ್ಯೋಗಿಗಳ ಮೇಲೆ ನಡೆಯುತ್ತಿದ್ಯಾ ದಬ್ಬಾಳಿಕೆ?

    ಎಎಸ್‍ಐಗಳಿಂದ ಕಿರಿಯ ಸಹೋದ್ಯೋಗಿಗಳ ಮೇಲೆ ನಡೆಯುತ್ತಿದ್ಯಾ ದಬ್ಬಾಳಿಕೆ?

    ಬೆಂಗಳೂರು: ನಗರದ ಸಂಚಾರಿ ಪೊಲೀಸರ (Traffic Police) ನಡುವೆ ಎಲ್ಲವೂ ಸರಿ ಇಲ್ಲ ಎನ್ನುವುದನ್ನು ಸಂಚಾರಿ ಪೊಲೀಸರ ಗ್ರೂಪ್‍ನಲ್ಲಿ ಚರ್ಚೆ ಆಗಿರುವ ಮೇಸೆಜ್‍ಗಳಿಂದ ರಿವೀಲ್ ಆಗಿದೆ. ಹಿರಿಯ ಅಧಿಕಾರಿಗಳ ದಬ್ಬಾಳಿಕೆ ಬಗ್ಗೆ ಕಿರಿಯ ಅಧಿಕಾರಿಗಳು ಅಸಮಾಧಾನ ಹೊರ ಹಾಕಿದ್ದಾರೆ.

    ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣಾ (Cubban Park Police Station) ಸಂಚಾರಿ ಪೊಲೀಸರ ವಾಟ್ಸಾಪ್ ಗ್ರೂಪ್‍ನಲ್ಲಿ (Whatsapp Group) ಎಎಸ್‍ಐಗಳ ದಬ್ಬಾಳಿಕೆ ಬಗ್ಗೆ ಕಿರಿಯ ಸಹೋದ್ಯೋಗಿಗಳು ಅಸಮಾಧಾನ ಹೊರಹಾಕಿದ್ದಾರೆ. ಎಷ್ಟರ ಮಟ್ಟಿಗೆ ಅಂದರೆ ಎಎಸ್‍ಐಗಳಿಗೆ ಲಂಗು ಲಗಾಮು ಇಲ್ಲ. ಎಸ್‍ಐಗಳು ಠಾಣೆಗಳನ್ನು ತಾವೇ ಬರೆಸಿಕೊಂಡವಂತೆ ನಡೆದುಕೊಳುತ್ತಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಸ್ವಾರ್ಥಕ್ಕೆ ಸುಳ್ಳು ಹೇಳುವ ಕೆಲಸ ಮಾಡುತ್ತಿದ್ದೇವೆ: ಬೊಮ್ಮಾಯಿ

    ನಾವುಗಳು ಸ್ವಲ್ಪ ತಡವಾಗಿ ಠಾಣೆಗೆ ಬಂದರೆ ಡೈರಿ ಬರೆಸಿಕೊಳ್ಳುತ್ತಾರೆ. ಅವರು ಮಾತ್ರ ಬೇಕಾಬಿಟ್ಟಿಯಾಗಿ ಬರುತ್ತಾರೆ. ಕೆಲಸದ ಸಮಯದಲ್ಲಿ ನಾವು ಒಂದು ಕೇಸ್ ಹಾಕುವುದಕ್ಕೆ ಹೋದರೆ ಸೈಡಿಗೆ ಕಳಿಸಿಕೊಡುತ್ತಾರೆ. ಎಎಸ್‍ಐಗಳು ಸತ್ಯ ಹರಿಶ್ಚಂದ್ರರ ತುಂಡುಗಳ ರೀತಿಯಲ್ಲಿ ನಡೆದುಕೊಳ್ಳುತ್ತಾರೆ. ಇದು ಇಲ್ಲಿಗೆ ನಿಲ್ಲಬೇಕೆಂದು ಕಿರಿಯ ಸಹೋದ್ಯೋಗಿಗಳು ವಾಟ್ಸಾಪ್ ಗ್ರೂಪ್‍ನಲ್ಲಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: 8 ವರ್ಷದ ಸುದೀರ್ಘ ಪಯಣ ಕೊನೆಗೊಳಿಸಿದ ಮಂಗಳಯಾನ

    Live Tv
    [brid partner=56869869 player=32851 video=960834 autoplay=true]

  • ಬೆಳಗಾವಿಯಲ್ಲಿ ಭೀಕರ ಸರಣಿ ರಸ್ತೆ ಅಪಘಾತ- ASI ಪತ್ನಿ, ಪುತ್ರಿ ಸೇರಿ ನಾಲ್ವರ ದುರ್ಮರಣ

    ಬೆಳಗಾವಿಯಲ್ಲಿ ಭೀಕರ ಸರಣಿ ರಸ್ತೆ ಅಪಘಾತ- ASI ಪತ್ನಿ, ಪುತ್ರಿ ಸೇರಿ ನಾಲ್ವರ ದುರ್ಮರಣ

    ಬೆಳಗಾವಿ: ಭೀಕರ ಸರಣಿ ರಸ್ತೆ ಅಪಘಾತದಲ್ಲಿ (Road Accident) ಕುಡಚಿ ಪೊಲೀಸ್ ಠಾಣೆಯ (Police Station) ಎಎಸ್‌ಐ (ASI) ವೈ.ಎಂ.ಹಲಕಿಯವರ ಪತ್ನಿ, ಪುತ್ರಿ ಹಾಗೂ ಚಾಲಕ, ಅಜ್ಜಿ ಸೇರಿ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುದಿಗೊಪ್ಪ ಕ್ರಾಸ್ ಬಳಿ ನಡೆದಿದೆ.

    CRIME 2

    ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ ಬಳಿ ಸ್ವಿಫ್ಟ್ ಡಿಸೈರ್ ಕಾರು, ಬೈಕ್ ಹಾಗೂ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಸಾವನ್ನಪಿದ್ದಾರೆ. ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆಯಿಂದ ಕ್ರಮ: ಸುಧಾಕರ್

    crime

    ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಯರಗಟ್ಟಿಯತ್ತ ತೆರಳುತ್ತಿದ್ದ ಎಎಸ್‌ಐ ಕುಟುಂಬದಲ್ಲಿ (ASI Family) ಮೂವರು ಮೃತರಾಗಿದ್ದಾರೆ. ಬೈಕ್ ನಲ್ಲಿ ಹೋಗುತ್ತಿದ್ದ ಓರ್ವ ಅಜ್ಜಿ ಸಾವನ್ನಪ್ಪಿದ್ದಾರೆ. ಇನ್ನು ಲಾರಿ ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಡಿಸೈರ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳಗಾವಿ ಎಸ್‌ಪಿ ಡಾ.ಸಂಜೀವ್ ಪಾಟೀಲ್, ಮುರಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ಪೊಲೀಸ್ ಠಾಣೆಯಲ್ಲೇ ಮಹಿಳೆಯೊಂದಿಗೆ ಚಕ್ಕಂದ – ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ASI

    ಪೊಲೀಸ್ ಠಾಣೆಯಲ್ಲೇ ಮಹಿಳೆಯೊಂದಿಗೆ ಚಕ್ಕಂದ – ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ASI

    ಹೈದರಾಬಾದ್: ಕಂಠಪೂರ್ತಿ ಕುಡಿದು ಮಹಿಳೆಯೊಂದಿಗೆ ಪೊಲೀಸ್ ಠಾಣೆಯಲ್ಲಿ ಚಕ್ಕಂದ ಆಡಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಹಿರಿಯ ಅಸಿಸ್ಟೆಂಟ್ ಸಬ್‌ಇನ್ಸ್‌ಪೆಕ್ಟರ್ (ಎಎಸ್‍ಐ) ಅನ್ನು ಅಮಾನತುಗೊಳಿಸಲಾಗಿದೆ.

    ಹೌದು, ಪೊಲೀಸ್ ಠಾಣೆಯನ್ನೇ ತಮ್ಮ ಬೆಡ್ ರೂಮ್ ಮಾಡಿಕೊಂಡಿದ್ದ ಎಎಸ್‍ಐ ಅಪ್ಪಾರಾವ್ ಮಹಿಳೆಯರೊಂದಿಗೆ ರಾಸಲೀಲೆಯಲ್ಲಿ ತೊಡಗಿದ್ದ ವೇಳೆ ದಿಢೀರ್ ಹಿರಿಯ ಅಧಿಕಾರಿಗಳು ಠಾಣೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿ ಅಪ್ಪಾರಾವ್ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದನ್ನು ಕಂಡು ಶಾಕ್ ಆಗಿದ್ದಾರೆ. ನಂತರ ಕೋಪಗೊಂಡಿದ್ದ ಅಧಿಕಾರಿಗಳು ಮಹಿಳೆಗೆ ಛೀಮಾರಿ ಹಾಕಿ ಪೊಲೀಸ್ ಠಾಣೆಯಿಂದ ಹೊರ ಕಳುಹಿಸಿದ್ದಾರೆ. ಇದೇ ಸಮಯದಲ್ಲಿ ಹಿರಿಯ ಅಧಿಕಾರಿಗಳ ಕಾಲಿಗೆ ಬಿದ್ದು ಎಎಸ್‍ಐ ಕ್ಷಮಾಪಣೆ ಕೇಳಿದ್ದಾರೆ. ಇದನ್ನೂ ಓದಿ: ಗೌತಮ್ ಅದಾನಿ ಈಗ ವಿಶ್ವದ 3ನೇ ಶ್ರೀಮಂತ – ಏಷ್ಯಾಗೆ ಇದು ಫಸ್ಟ್ ಟೈಂ

    ರವಿಕಾಮಥಮ್ ಪೊಲೀಸ್ ಠಾಣೆಯ ಎಎಸ್‍ಐ ಅಪ್ಪಾರಾವ್ ಅವರನ್ನು ಅದೇ ಜಿಲ್ಲೆಯ ಕೊಥಕೊಟ ಪೊಲೀಸ್ ಠಾಣೆಯ ಸಿಬ್ಬಂದಿ ಕೊರತೆಯಿಂದ ಕೆಲ ದಿನಗಳ ಕಾಲ ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು. ಅದರಲ್ಲೂ ಮುಖ್ಯವಾಗಿ ನೈಟ್ ಡ್ಯೂಟಿ ಮಾಡಲು ಸೂಚಿಸಲಾಗಿತ್ತು. ಇದನ್ನೇ ಬಂಡವಾಳವಾಗಿ ಮಾಡಿಕೊಂಡ ಅಪ್ಪಾರಾವ್ ಕಂಠಪೂರ್ತಿ ಕುಡಿದು ಮಹಿಳೆಯನ್ನು ರಾತ್ರಿ 10.30ರ ಸುಮಾರಿಗೆ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ ಆಕೆಯನ್ನು ತಕ್ಷಣವೇ ಬಿಟ್ಟು ಬರುವಂತೆ ತಿಳಿಸಿದ್ದ ಪೇದೆಗೆ ನಾನು ಎಎಸ್‍ಐ ನೀನು ಹೇಳಿದ್ದನ್ನು ಮಾಡುವುದು ನನ್ನ ಕೆಲಸವಲ್ಲ ಎಂದು ಅವಾಜ್ ಹಾಕಿದ್ದಾರೆ.

    ಬಳಿಕ ಈ ಬಗ್ಗೆ ಪೊಲೀಸ್ ಪೇದೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ನೇರವಾಗಿ ಪೊಲೀಸ್ ಠಾಣೆಗೆ ಆಗಮಿಸಿದ ಅಧಿಕಾರಿಗಳಿಗೆ ಅಪ್ಪಾರಾವ್ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ತಕ್ಷಣವೇ ಅಪ್ಪಾರಾವ್ ಅವರನ್ನು ಕೆಲಸದಿಂದ ಅಮಾನತುಗೊಳಿಸಿದ್ದಾರೆ. ಸದ್ಯ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: KSRTC ಬಸ್ ನಿಲ್ದಾಣ ಜಲಾವೃತ- 20ಕ್ಕೂ ಹೆಚ್ಚು ಬಸ್‍ಗಳು ಮುಳುಗಡೆ

    Live Tv
    [brid partner=56869869 player=32851 video=960834 autoplay=true]

  • ಆ.5 ರಿಂದ 15 ರವರೆಗೆ ASI ಪ್ರವಾಸಿ ತಾಣಗಳ ಪ್ರವೇಶ ಉಚಿತ

    ಆ.5 ರಿಂದ 15 ರವರೆಗೆ ASI ಪ್ರವಾಸಿ ತಾಣಗಳ ಪ್ರವೇಶ ಉಚಿತ

    ನವದೆಹಲಿ: ಆಗಸ್ಟ್‌ 5 ರಿಂದ ಆಗಸ್ಟ್‌ 15ರವರೆಗೆ ಪುರಾತತ್ವ ಇಲಾಖೆಯ ವ್ಯಾಪ್ತಿಯ ಅಡಿಯಲ್ಲಿ ಬರುವ ಎಲ್ಲ ಪ್ರವಾಸಿ ಸ್ಥಳಗಳನ್ನು ಉಚಿತವಾಗಿ ಭೇಟಿ ನೀಡಬಹುದು.

    ʼಅಜಾದಿ ಕಾ ಅಮೃತ್‌ ಮಹೋತ್ಸವʼದ ಅಂಗವಾಗಿ ಪುರಾತತ್ವ ಇಲಾಖೆ ಈ ನಿರ್ಧಾರವನ್ನು ಕೈಗೊಂಡಿದೆ.

    ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಟ್ವೀಟ್‌ ಮಾಡಿ, ಪುರಾತತ್ವ ಇಲಾಖೆಯ ಅಡಿ ಬರುವ ಎಲ್ಲಾ ಸ್ಮಾರಕಗಳಿಗೆ ಆಗಸ್ಟ್ 5 ರಿಂದ 15 ರವರೆಗೆ ಪ್ರವೇಶ ಉಚಿತ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಧ್ವಜ ನೀತಿ ಸಂಹಿತೆ ಉಲ್ಲಂಘನೆ – ಶೂ ಹಾಕಿಕೊಂಡು ರಾಷ್ಟ್ರಧ್ವಜ ಉತ್ಪಾದನಾ ಕೇಂದ್ರಕ್ಕೆ ಕಾಲಿಟ್ಟ ಖಾಕಿ

    ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ತ್ವ ಶಾಸ್ತ್ರದ ಸ್ಥಳಗಳು ಮತ್ತು ಅವಶೇಷಗಳ 1959 ರ ನಿಯಮ 6 ರ ಅಡಿಯಲ್ಲಿ ನೀಡಲಾಗಿರುವ ಅಧಿಕಾರವನ್ನು ಬಳಸಿಕೊಂಡು ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಮಹಾನಿರ್ದೇಶಕರು ಸಂರಕ್ಷಿತ ಸ್ಮಾರಕಗಳು / ಪುರಾತತ್ವ ಸ್ಥಳಗಳಲ್ಲಿ ಯಾವುದೇ ಶುಲ್ಕವನ್ನು ವಿಧಿಸಬಾರದು ಎಂದು ಆದೇಶ ಪ್ರಕಟಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ದಾಖಲೆಯ ಮೂರು ಸಾವಿರಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ದಾಖಲೆಯ ಮೂರು ಸಾವಿರಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು: ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ದಾಖಲೆಯ ಮೂರು ಸಾವಿರಕ್ಕೂ ಅಧಿಕ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿದೆ.

    ಐದು ವರ್ಷ ಒಂದೇ ಠಾಣೆಯಲ್ಲಿದ್ದವರಿಗೆ ಇಲಾಖೆ ವರ್ಗಾವಣೆ ಮಾಡಿದೆ. ಒಂದೇ ದಿನ ಮೂರು ಸಾವಿರಕ್ಕೂ ಅಧಿಕ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದ್ದು, ಪಿಎಸ್‍ಐ ನಿಂದ ಹಿಡಿದು ಕಾನ್ಸ್‌ಟೇಬಲ್ ವರೆಗೂ ವರ್ಗಾವಣೆ ಮಾಡಿ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಆಟವಾಡುತ್ತಾ ಭಾರತದ ಗಡಿ ಪ್ರವೇಶಿಸಿದ ಪಾಕ್‍ನ 3 ವರ್ಷದ ಮಗು

    1,749 ಕಾನ್ಸ್‌ಟೇಬಲ್, 1,292 ಹೆಡ್ ಕಾನ್ಸ್‌ಟೇಬಲ್, 43 ಎಎಸ್‍ಐ ಹಾಗೂ 163 ಪಿಎಸ್‍ಐಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಮಟ್ಟದ ವರ್ಗಾವಣೆ ಇಲಾಖೆಯಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ನಡೆದಿದೆ.

    Live Tv

  • ಪುರಸಭೆಗೆ ಆಗಮಿಸಿ ಅಧಿಕಾರಿಗೆ ಚಾಕು ತೋರಿಸಿ ಬೆದರಿಕೆ ಹಾಕ್ದ!

    ಪುರಸಭೆಗೆ ಆಗಮಿಸಿ ಅಧಿಕಾರಿಗೆ ಚಾಕು ತೋರಿಸಿ ಬೆದರಿಕೆ ಹಾಕ್ದ!

    ಚಿಕ್ಕಬಳ್ಳಾಪುರ: ಮದ್ಯ ಕುಡಿದ ಅಮಲಿನಲ್ಲಿ ಜಿಲ್ಲೆಯ ಬಾಗೇಪಲ್ಲಿ ಪುರಸಭೆ ಕಚೇರಿಗೆ ಆಗಮಿಸಿ, ಪುರಸಭೆ ಮುಖ್ಯಾಧಿಕಾರಿ ಮಧುಕರ್ ಅವರಿಗೆ ಖಾತೆ ಮಾಡಿಕೊಡುವಂತೆ ಚಾಕು ತೋರಿಸಿ ಪ್ರಾಣಬೆದರಿಕೆ ಹಾಕಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

    ಖಾತೆ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಪುರಸಭೆ ಮುಖ್ಯಾಧಿಕಾರಿ ಜೊತೆ ಗೋವಿಂದ್ ವಾಗ್ವಾದ ನಡೆಸಿದ್ದನು. ಈ ವೇಳೆ ಆತ ಚಾಕು ತೋರಿಸಿ ಪ್ರಾಣ ಬೆದರಿಕೆ ಹಾಕುತ್ತಿದ್ದಾನೆ ಅಂತ ಪುರಸಭೆ ಮುಖ್ಯಾಧಿಕಾರಿ ಪೊಲೀಸರಿಗೆ ಕರೆ ಮಾಡಿ ಮೌಖಿಕ ದೂರು ನೀಡಿದ್ದಾರೆ. ಇದನ್ನೂ ಓದಿ: ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್ 

    ಈ ವೇಳೆ ಘಟನಾ ಸ್ಥಳಕ್ಕೆ ಬಂದ ಎಎಸ್‍ಐ ಅಮರೇಶ್ ಬಾಬು, ಎಷ್ಟೇ ಹೇಳಿದರೂ ಕಚೇರಿಯಿಂದ ಹೊರ ಹೋಗದೇ ಏರು ಧ್ವನಿಯಲ್ಲಿ ಮಾತನಾಡುತ್ತಿದ್ದ ಗೋವಿಂದ್‍ಗೆ ಹಿಗ್ಗಾ ಮುಗ್ಗ ಥಳಿಸಿ ಕಪಾಳ ಮೋಕ್ಷ ಮಾಡಿ ಎಎಸ್‍ಐ ಕಚೇರಿಯಿಂದ ಹೊರದಬ್ಬಿದ್ದಾರೆ. ಇದನ್ನೂ ಓದಿ: ವಿದ್ಯಾಭ್ಯಾಸ ಕೊಡಿಸಲು ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಯುಪಿಎಸ್‍ಸಿಯಲ್ಲಿ ಟಾಪರ್

    ಈ ಸಂಬಂಧ ಪುರಸಭೆ ಮುಖ್ಯಾಧಿಕಾರಿ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು. ದೂರಿನ ಮೇರೆಗೆ ಗೋವಿಂದನನ್ನು ಪೊಲೀಸರು ಬಂಧಿಸಿದ್ದಾರೆ.

  • ಅಜ್ಮೀರ್ ದರ್ಗಾ ದೇವಾಲಯವಾಗಿತ್ತು – ಸಮೀಕ್ಷೆಗೆ ಹಿಂದೂ ಸಂಘಟನೆ ಆಗ್ರಹ

    ಅಜ್ಮೀರ್ ದರ್ಗಾ ದೇವಾಲಯವಾಗಿತ್ತು – ಸಮೀಕ್ಷೆಗೆ ಹಿಂದೂ ಸಂಘಟನೆ ಆಗ್ರಹ

    ಜೈಪುರ: ರಾಜಸ್ಥಾನದ ಅಜ್ಮೀರ್‌ನಲ್ಲಿರುವ ಸೂಫಿ ಸಂತ ಮೊಯಿನುದ್ದೀನ್ ಚಿಸ್ತಿ ಅವರ ಸಮಾಧಿ ಒಂದು ಕಾಲದಲ್ಲಿ ದೇವಾಲಯವಾಗಿತ್ತು ಎಂದು ಹಿಂದೂ ಸಂಘಟನೆ ವಾದಿಸುತ್ತಿದ್ದು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ)ಗೆ ಸಮೀಕ್ಷೆ ನಡೆಸುವಂತೆ ಒತ್ತಾಯಿಸುತ್ತಿದೆ.

    ಕಾಶಿಯ ಜ್ಞಾನವಾಪಿ ಮಸೀದಿ, ಮಥುರಾದ ಶಾಹೀ ಈದ್ಗಾ ಮಸೀದಿಯ ಬಳಿಕ ಇದೀಗ ರಾಜಸ್ಥಾನದ ಅಜ್ಮೀರ್ ದರ್ಗಾ ಬಗ್ಗೆ ವಿವಾದ ಎದ್ದಿದೆ. ಹಿಂದೂ ಸಂಘಟನೆ ಮಹಾರಾಣಾ ಪ್ರತಾಪ್ ಸೇನೆಯ ರಾಜವರ್ಧನ್ ಸಿಂಗ್ ಪರ್ಮಾರ್ ಅವರು ದರ್ಗಾದ ಗೋಡೆಗಳು ಹಾಗೂ ಕಿಟಕಿಗಳ ಮೇಲೆ ಹಿಂದೂ ಚಿಹ್ನೆಗಳು ಇವೆ ಎಂದು ವಾದಿಸಿದ್ದಾರೆ. ಇದನ್ನೂ ಓದಿ: ದಾಳಿ ವೇಳೆ ಸಿಬಿಐ ನನ್ನ ವೈಯಕ್ತಿಕ ದಾಖಲೆಗಳನ್ನು ವಶಪಡಿಸಿಕೊಂಡಿದೆ – ಕಾರ್ತಿ ಚಿದಂಬರಂ ಆರೋಪ

    ಈ ಬಗ್ಗೆ ಪ್ರತಿಕ್ರಿಸಿದ ಅಂಜುಮನ್ ಸೈಯದ್ ಝಡ್ಗಾನ್‌ನ ಅಧ್ಯಕ್ಷ ಮೊಯಿನ್ ಚಿಸ್ತಿ, ದರ್ಗಾದಲ್ಲಿ ಯಾವುದೇ ಹಿಂದೂ ಅಥವಾ ಸ್ವಸ್ತಿಕ್ ಚಿನ್ಹೆಗಳು ಇಲ್ಲ ಎಂಬುದನ್ನು ನಾನು ಜವಾಬ್ದಾರಿಯುತವಾಗಿ ಹೇಳುತ್ತಿದ್ದೇನೆ. ಈ ದರ್ಗಾ ಸುಮಾರು 850 ವರ್ಷಗಳಿಂದ ಇದೆ. ಪ್ರತಿ ವರ್ಷ ಲಕ್ಷಾಂತರ ಹಿಂದೂ ಹಾಗೂ ಮುಸ್ಲಿಮರು ಇಲ್ಲಿಗೆ ಭೇಟಿ ನೀಡುತ್ತಾರೆ. ಇಲ್ಲಿಯವರೆಗೆ ಅಂತಹ ಯಾವುದೇ ಪ್ರಶ್ನೆ ಉದ್ಭವಿಸಿರಲಿಲ್ಲ. ಹಿಂದೂ ಸಂಘಟನೆಯವರು ನಿರಾಧಾರ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಮ್ರಿನ್ ಭಟ್‌ ಹತ್ಯೆಗೈದಿದ್ದ ಇಬ್ಬರು ಸೇರಿ ನಾಲ್ವರು ಲಷ್ಕರ್ ಉಗ್ರರ ಹತ್ಯೆ

    ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅವರ ಸಮಾಧಿ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿರುವುದು ಎಂದರೆ, ಇಲ್ಲಿ ಅವರ ಧರ್ಮವನ್ನು ಲೆಕ್ಕಿಸದೇ ಪ್ರಾರ್ಥನೆ ಸಲ್ಲಿಸುವ ಕೋಟ್ಯಂತರ ಜನರ ಭಾವನೆಯನ್ನು ನೋಯಿಸುತ್ತಿರುವುದು ಎಂದರ್ಥ. ಇಂತಹ ವಿವಾದಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಇತ್ತ ಅಜ್ಮೀರ್ ದರ್ಗಾ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಕಾರ್ಯದರ್ಶಿ ವಾಹಿದ್ ಹುಸೇನ್ ಚಿಸ್ತಿ, ಇದು ಕೋಮು ಸೌಹಾರ್ದತೆಯನ್ನು ಕದಡುವ ಪ್ರಯತ್ನವಾಗಿದೆ ಎಂದು ಹೇಳಿದರು.

  • ಜ್ಞಾನವಾಪಿ ಕೇಸ್ – ಮೇ 28, 29ಕ್ಕೆ 5 ಸಾವಿರ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಸಭೆ

    ಜ್ಞಾನವಾಪಿ ಕೇಸ್ – ಮೇ 28, 29ಕ್ಕೆ 5 ಸಾವಿರ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಸಭೆ

    ಲಕ್ನೋ: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 26 ರಿಂದ ಮಸೀದಿ ಪರ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಜಾಮಿಯತ್ ಉಲಮಾ-ಇ-ಹಿಂದ್ ಮುಸ್ಲಿಂ ಸಂಘಟನೆಯು ಮೇ 28, 29ರಂದು ಬೃಹತ್ ಸಮಾವೇಶಕ್ಕೆ ಕರೆ ನೀಡಿದೆ.

    ಉತ್ತರಪ್ರದೇಶದ ದೇವಬಂದ್‌ನಲ್ಲಿ ಬೃಹತ್ ಸಭೆ ನಡೆಯಲಿದ್ದು, ಸುಮಾರು 5 ಸಾವಿರ ಮುಸ್ಲಿಂ ಸಂಘಟನೆಗಳು ಭಾಗವಹಿಸಲಿವೆ. ಈ ಸಭೆಯಲ್ಲಿ ಜ್ಞಾನವಾಪಿ, ಮಥುರಾ ಹಾಗೂ ಕುತುಬ್ ಮಿನಾರ್‌ನಂತಹ ಸ್ಮಾರಕಗಳ ಸುತ್ತಮುತ್ತಲಿನ ಸಮಸ್ಯೆಗಳನ್ನು ಚರ್ಚಿಸಲು ಉದ್ದೇಶಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಕುತುಬ್‌ ಮಿನಾರ್‌ ಬಳಿ ಹಿಂದೂ ಮೂರ್ತಿಗಳ ಪುನರ್‌ಸ್ಥಾಪನೆಗೆ ಮನವಿ – ತೀರ್ಪು ಕಾಯ್ದಿರಿಸಿದ ಕೋರ್ಟ್‌

    Gyanvapi mosque, 

    ಜಮಿಯತ್-ಉಲೇಮಾ-ಇ-ಹಿಂದ್ ಸಂಘಟನೆ ಮುಖ್ಯಸ್ಥ ಮೌಲಾನಾ ಮಹಮೂದ್ ಅಸಾದ್ ಮದನಿ ಅವರು ಈ ಹಿಂದೆ ಜ್ಞಾನವಾಪಿ ಪ್ರಕರಣದಲ್ಲಿ ಮಧ್ಯಪ್ರವೇಶಿಸದಂತೆ ಸಂಘಟನೆಗಳನ್ನು ಒತ್ತಾಯಿಸಿದ್ದರು. ಆದರೆ ಈಗ ಮಂದಿರ ಮಸೀದಿಗಳ ಚರ್ಚೆಯ ವಿರುದ್ಧ ಹಲವು ನಿರ್ಣಯಗಳನ್ನು ಅಂಗೀಕರಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಇದನ್ನೂ ಓದಿ: ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

    ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕ ಧರಂವೀರ್ ಶರ್ಮಾ ಅವರು ಕುತುಬ್ ಮಿನಾರ್ ಅನ್ನು ಕುತುಬ್ ಉದ್‌ದಿನ್ ಐಬಕ್ ನಿರ್ಮಿಸಿದ್ದಲ್ಲ. ರಾಜಾ ವಿಕ್ರಮಾದಿತ್ಯ ನಿರ್ಮಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಆ ನಂತರವೇ ವಿವಾದ ಭುಗಿಲೆದ್ದಿದೆ ಎಂದು ಸಂಘಟನೆಗಳು ಆರೋಪಿಸಿವೆ.

    Qutub Minar

    ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ವಕ್ತಾರ ವಿನೋದ್ ಬನ್ಸಾಲ್ ಸಹ, ಕುತುಬ್ ಮಿನಾರ್ ವಾಸ್ತವವಾಗಿ `ವಿಷ್ಣು ಸ್ತಂಭ’ ಮತ್ತು 27 ಹಿಂದೂ-ಜೈನ ದೇವಾಲಯಗಳನ್ನು ಕೆಡವಿ, ಅದರಿಂದ ಪಡೆದ ವಸ್ತುಗಳಿಂದ ಈ ಸ್ತಂಭವನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದರು.

  • ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ

    ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ

    ನವದೆಹಲಿ: ಕುತುಬ್ ಮಿನಾರ್ ಬಳಿ ದೇವಸ್ಥಾನದ ಉತ್ಖನನ ನಡೆಸಲು ಒತ್ತಡ ಕೇಳಿ ಬಂದ ಬೆನ್ನಲೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಾಕೇತ್ ಕೋರ್ಟ್‍ಗೆ ತನ್ನ ವರದಿಯನ್ನು ಸಲ್ಲಿಕೆ ಮಾಡಿದ್ದು ತೀವ್ರ ವಿರೋಧವನ್ನು ವ್ಯಕ್ತಪಡಿಸಿದೆ.

    ಕುತುಬ್ ಮಿನಾರ್ 1914 ರಿಂದ ಸಂರಕ್ಷಿತ ಸ್ಮಾರಕವಾಗಿದೆ. ಅದರ ರಚನೆಯನ್ನು ಈಗ ಬದಲಾಯಿಸಲಾಗುವುದಿಲ್ಲ “ಸಂರಕ್ಷಿತ” ಸ್ಥಾನಮಾನವನ್ನು ನೀಡುವ ಸಮಯದಲ್ಲಿ ಅಂತಹ ಆಚರಣೆಯು ಪ್ರಚಲಿತದಲ್ಲಿರಲಿಲ್ಲ. ಈಗ ಸ್ಮಾರಕದಲ್ಲಿ ಆರಾಧನೆಯ ಪುನರುಜ್ಜೀವನವನ್ನು ಅನುಮತಿಸಲಾಗುವುದಿಲ್ಲ ಎಂದು ವರದಿಯಲ್ಲಿ ಎಎಸ್‍ಐ ಉಲ್ಲೇಖಿಸಿದೆ.

    ಕೇಂದ್ರ ಸಂಸ್ಕøತಿ ಸಚಿವಾಲಯವು ತನ್ನ ಉತ್ಖನನ ವರದಿಯನ್ನು ಸಲ್ಲಿಸುವಂತೆ ಎಎಸ್‍ಐಗೆ ಈ ಹಿಂದೆ ತಿಳಿಸಿತ್ತು. ಅಲ್ಲದೇ ಮಸೀದಿಯಿಂದ 15 ಮೀಟರ್ ದೂರದಲ್ಲಿ ಮಿನಾರ್‍ನ ದಕ್ಷಿಣದಲ್ಲಿ ಉತ್ಖನನವನ್ನು ಪ್ರಾರಂಭಿಸಬಹುದು ಎಂದು ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರು ಮೇ 21 ರಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡರು.  ಇದನ್ನೂ ಓದಿ: 5ರೂ. ಡಾಕ್ಟರ್ ಎಂದೇ ಫೇಮಸ್ ಆಗಿದ್ದ ಶಂಕರೇಗೌಡಗೆ ಹೃದಯಾಘಾತ

    ಸಂಸ್ಕೃತಿ ಸಚಿವಾಲಯದ ಸೂಚನೆ ಮೇರೆಗೆ ವರದಿ ನೀಡಿರುವ ಎಎಸ್‍ಐ ಹಿಂದೂ ಅರ್ಜಿದಾರರ ಮನವಿಯನ್ನು ಕಾನೂನಾತ್ಮಕವಾಗಿ ನಿರ್ವಹಿಸಲಾಗುವುದಿಲ್ಲ ಎಂದು ಹೇಳಿದೆ. ಕುತುಬ್ ಮಿನಾರ್ ಸಂಕೀರ್ಣವನ್ನು ನಿರ್ಮಿಸಲು ಹಳೆಯ ದೇವಾಲಯಗಳನ್ನು ನಾಶಪಡಿಸುವುದು ಐತಿಹಾಸಿಕ ಸಂಗತಿಯಾಗಿದೆ. ಕುತುಬ್ ಮಿನಾರ್ ಸಂಕೀರ್ಣವು ಜೀವಂತ ಸ್ಮಾರಕವಾಗಿದೆ. ಇದನ್ನು 1914 ರಿಂದ ರಕ್ಷಿಸಲಾಗಿದೆ. ಸಂಕೀರ್ಣದ ಮೇಲೆ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ ಎಂದು ಖಡಕ್ ಆಗಿ ಉತ್ತರಿಸಿದೆ.

    ಸ್ಮಾರಕವನ್ನು ರಕ್ಷಣೆಯಲ್ಲಿ ಇರಿಸುವ ಸಮಯದಲ್ಲಿ ಯಾವುದೇ ಪೂಜೆಯ ಆಚರಣೆ ಇಲ್ಲವಾದ್ದರಿಂದ ನಾವು ಸಂರಕ್ಷಿತ ಪ್ರದೇಶದ ಸ್ವರೂಪವನ್ನು ಬದಲಾಯಿಸಲು ಸಾಧ್ಯವಿಲ್ಲ. ನಾವು ಈಗ ಪೂಜೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯಕ್ಕೆ ಎಎಸ್‍ಐ ತಿಳಿಸಿದೆ.  ಇದನ್ನೂ ಓದಿ: ಪರಿಷತ್‌ ಚುನಾವಣೆ – ಶರವಣಗೆ ಜೆಡಿಎಸ್‌ ಟಿಕೆಟ್‌

    ಈ ತಿಂಗಳ ಆರಂಭದಲ್ಲಿ, ಮಹಾಕಾಲ್ ಮಾನವ್ ಸೇವಾ ಮತ್ತು ಇತರ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಗುರುತಿಸಲ್ಪಟ್ಟ ಕುತುಬ್ ಮಿನಾರ್‍ನಲ್ಲಿ ಭಾರೀ  ಪೊಲೀಸ್ ನಿಯೋಜನೆಯ ಮಧ್ಯೆ, ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ್ದರು. ಐಕಾನಿಕ್ ಸ್ಮಾರಕ ಕುತುಬ್ ಮಿನಾರ್ ‘ವಿಷ್ಣು ಸ್ತಂಭ’ ಎಂದು ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿದರು.