Tag: Assam

  • ಪ್ರಿಯಾಂಕ್‌ ಖರ್ಗೆ ಫಸ್ಟ್‌ ಕ್ಲಾಸ್‌ ಈಡಿಯಟ್‌: ಅಸ್ಸಾಂ ಸಿಎಂ

    ಪ್ರಿಯಾಂಕ್‌ ಖರ್ಗೆ ಫಸ್ಟ್‌ ಕ್ಲಾಸ್‌ ಈಡಿಯಟ್‌: ಅಸ್ಸಾಂ ಸಿಎಂ

    – ಹಿಮಾಂತ ಶರ್ಮಾ ಶರ್ಮಾ ತನ್ನ ಹೇಳಿಕೆ ತಿರುಚಿದ್ದಾರೆ: ಪ್ರಿಯಾಂಕ್‌ ತಿರುಗೇಟು

    ಬೆಂಗಳೂರು/ಗುವಾಹಟಿ: ಆರ್‌ಎಸ್‌ಎಸ್‌, ಗೂಗಲ್‌ ವಿಚಾರದಲ್ಲಿ ಸುದ್ದಿಯಾಗಿದ್ದ ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಈಗ ಅಸ್ಸಾಂ ವಿಚಾರದಲ್ಲೂ ದೊಡ್ಡ ಸುದ್ದಿಯಾಗಿದ್ದಾರೆ. ಅಸ್ಸಾಂ (Assam) ಸಿಎಂ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಪ್ರಿಯಾಂಕ್‌ ಖರ್ಗೆಯಲ್ಲಿ ಈಡಿಯಟ್‌ ಎಂದು ಕರೆದರೆ ಪ್ರಿಯಾಂಕ್‌ ತನ್ನ ಹೇಳಿಕೆಯನ್ನು ತಿರುಚಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

    ಏನಿದು ಇಬ್ಬರ ಮಧ್ಯೆ ಕಿತ್ತಾಟ?
    ಸೆಮಿಕಂಡಕ್ಟರ್ (Semiconductor) ಫ್ಯಾಕ್ಟರಿ ಕಂಪನಿಗಳು ತಮ್ಮ ಘಟಕವನ್ನು ತೆರೆಯಲು ಗುಜರಾತ್‌ ಮತ್ತು ಅಸ್ಸಾಂ ರಾಜ್ಯಗಳನ್ನು ಆಯ್ಕೆ ಮಾಡಿದ್ದವು. ಈ ವಿಚಾರವಾಗಿ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿ, ಸೆಮಿಕಂಡಕ್ಟರ್ ಉದ್ದಿಮೆಗಳು ಸಹಜವಾಗಿಯೇ ಬೆಂಗಳೂರಿನತ್ತ ಆಕರ್ಷಿತವಾಗಿರುತ್ತದೆ. ಆದರೆ ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಸ್ಥಾಪನೆಯಾಗಬೇಕಿದ್ದ ಹೂಡಿಕೆಗಳನ್ನು ಬಿಜೆಪಿ ಆಡಳಿತ ಇರುವ ರಾಜ್ಯಗಳಿಗೆ ತಿರುಗಿಸುತ್ತದೆ. ನಿಜವಾಗಿಯೂ ಗುಜರಾತ್ ಮತ್ತು ಅಸ್ಸಾಂನಲ್ಲಿ ಆ ಕೈಗಾರಿಕೆಗೆ ಅಗತ್ಯವಿರುವ ನೈಪುಣ್ಯ ಮತ್ತು ಮೂಲಸೌಕರ್ಯಗಳು ಇದ್ಯಾ ಎಂದು ಪ್ರಶ್ನಿಸಿದ್ದರು.

    ಅಸ್ಸಾಂ ಉದ್ದೇಶಿಸಿ ಹೇಳಿಕೆ ನೀಡಿದ್ದು ಬಿಜೆಪಿಯನ್ನು ಕೆರಳಿಸಿದೆ. ಇದು ಅಸ್ಸಾಂ ಯುವಜನರಿಗೆ ಮಾಡಿರುವ ಅನ್ಯಾಯ? ಅಸ್ಸಾಂ ಕಾಂಗ್ರೆಸ್‌ ಈ ಹೇಳಿಕೆಯನ್ನು ಖಂಡಿಸಬೇಕು ಎಂದು ಆಗ್ರಹಿಸಿದೆ.  ಇದನ್ನೂ ಓದಿ:  5 ವರ್ಷವೂ ನಾನೇ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಮಾತು ಮೊದಲ ಬಾರಿಗೆ ಬದಲಾಯ್ತು!

    ಹಿಮಂತ ಶರ್ಮಾ ಹೇಳಿದ್ದೇನು?
    ಪ್ರಿಯಾಂಕ್ ಖರ್ಗೆ ಒಬ್ಬ ಫಸ್ಟ್‌ ಕ್ಲಾಸ್‌ ಈಡಿಯಟ್‌. ಅವರು ಅಸ್ಸಾಮಿ ಯುವಕರನ್ನು ಅವಮಾನಿಸಿದ್ದಾರೆ. ಪ್ರಿಯಾಂಕ್‌ ಹೇಳಿಕೆಯನ್ನು ಅಸ್ಸಾಂ ಕಾಂಗ್ರೆಸ್‌ ಖಂಡಿಸಿಲ್ಲ. ಬಹುಶಃ, ಅಸ್ಸಾಂನಲ್ಲಿ ವಿದ್ಯಾವಂತ ಯುವಕರಿಲ್ಲ ಎಂದು ಅವರು ಹೇಳಿರುವುದರಿಂದ ನಾವು ಅವರ ವಿರುದ್ಧ ಪ್ರಕರಣ ದಾಖಲಿಸಬಹುದು. ಇದು ಇಡೀ ಅಸ್ಸಾಮಿ ಯುವಕರಿಗೆ ಮಾಡಿದ ಅವಮಾನ ಎಂದಿದ್ದಾರೆ.

    ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?
    ಎಂದಿನಂತೆ ಬಿಜೆಪಿ ಮತ್ತು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನನ್ನ ಮಾತುಗಳನ್ನು ತಿರುಚುತ್ತಿದ್ದಾರೆ. ನನ್ನ ಹೇಳಿಕೆ ಸ್ಪಷ್ಟ ಮತ್ತು ನಿರ್ದಿಷ್ಟವಾಗಿದೆ. ಗುಜರಾತ್ ಮತ್ತು ಅಸ್ಸಾಂನಲ್ಲಿ ಸೆಮಿಕಂಡಕ್ಟರ್ ಕಂಪನಿಗಳನ್ನು ಸ್ಥಾಪಿಸಲು ಹೇಗೆ ಒತ್ತಡ ಹೇರಲಾಗುತ್ತಿದೆ ಎಂಬುದರ ಬಗ್ಗೆ ನಾನು ಮಾತನಾಡಿದ್ದೆ.  ಇದನ್ನೂ ಓದಿ:  ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ

    ನೀತಿ ಆಯೋಗದ ಇತ್ತೀಚಿನ ವರದಿಯ ಪ್ರಕಾರ, ಸುಮಾರು ಒಂದು ದಶಕದ ಬಿಜೆಪಿ ಆಳ್ವಿಕೆಯ ನಂತರ, ಅಸ್ಸಾಂ ಇಂದು ಆರೋಗ್ಯ, ಶಿಕ್ಷಣ ಮತ್ತು ಆರ್ಥಿಕ ಬೆಳವಣಿಗೆಯಂತಹ ನಿರ್ಣಾಯಕ ಅಭಿವೃದ್ಧಿ ಸೂಚಕಗಳಲ್ಲಿ ಕೊನೆಯ ಐದು ರಾಜ್ಯಗಳಲ್ಲಿ ಒಂದಾಗಿದೆ.

    ನನ್ನ ಹೇಳಿಕೆಗಳನ್ನು ರಾಜಕೀಯವಾಗಿ ತಿರುಗಿಸುವ ಮೂಲಕ ತಮ್ಮ ವೈಫಲ್ಯಗಳನ್ನು ಬಿಳಿಚಿಕೊಳ್ಳಲು ಪ್ರಯತ್ನಿಸುವ ಬದಲು, ಮುಖ್ಯಮಂತ್ರಿ ತಮ್ಮ ರಾಜ್ಯದ ಯುವಜನರಿಗೆ ಏನು ಮಾಡಿದ್ದಾರೆ ಎಂದು ತಮ್ಮನ್ನು ತಾವು ಕೇಳಿಕೊಳ್ಳಬೇಕು. ಅವರು ಬೇರೆಡೆ ಕೆಲಸ ಹುಡುಕಲು ಅಸ್ಸಾಂ ಅನ್ನು ಏಕೆ ಬಿಡುತ್ತಿದ್ದಾರೆ?

  • ಗಾಯಕ ಜುಬೀನ್ ಗಾರ್ಗ್ ಸಾವು ಕೇಸ್ – ಮ್ಯಾನೇಜರ್, ಸಿಂಗಾಪುರದ ಕಾರ್ಯಕ್ರಮ ಆಯೋಜಕ ಅರೆಸ್ಟ್

    ಗಾಯಕ ಜುಬೀನ್ ಗಾರ್ಗ್ ಸಾವು ಕೇಸ್ – ಮ್ಯಾನೇಜರ್, ಸಿಂಗಾಪುರದ ಕಾರ್ಯಕ್ರಮ ಆಯೋಜಕ ಅರೆಸ್ಟ್

    ದಿಸ್ಪುರ್: ಪ್ರಸಿದ್ಧ ಅಸ್ಸಾಮಿ ಗಾಯಕ ಜುಬೀನ್ ಗಾರ್ಗ್ (Zubeen Garg) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾರ್ಗ್ ಮ್ಯಾನೇಜರ್ ಹಾಗೂ ಸಿಂಗಾಪುರದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಈ ಪ್ರಕರಣ ಸಂಬಂಧ ರಚಿಸಲಾದ ಎಸ್‌ಐಟಿಯು ಮಂಗಳವಾರ (ಸೆ.30) ದೆಹಲಿ ವಿಮಾನ ನಿಲ್ದಾಣದಲ್ಲಿ ಕಾರ್ಯಕ್ರಮ ಆಯೋಜಕ ಶ್ಯಾಮಕಾನು ಮಹಾಂತನನ್ನು ಹಾಗೂ ರಾಜಸ್ಥಾನದಲ್ಲಿ ಮ್ಯಾನೇಜರ್ ಸಿದ್ಧಾರ್ಥ ಶರ್ಮಾ ಅವರನ್ನು ಬಂಧಿಸಿದೆ.ಇದನ್ನೂ ಓದಿ: ಗಾಯಕ ಜುಬೀನ್ ಗಾರ್ಗ್ ಸಾವಿನ ತನಿಖೆಗೆ ಸಿಂಗಾಪುರ ಸರ್ಕಾರದ ಸಹಕಾರ: ಅಸ್ಸಾಂ ಸಿಎಂ

    ಜುಬೀನ್ ಸಾವನ್ನಪ್ಪುವ ಮುನ್ನ ಬಂಧಿತ ಆರೋಪಿಗಳಿಬ್ಬರು ಅವರ ಜೊತೆಗಿದ್ದರು ಎಂಬ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಈ ಸಂಬಂಧ ಇಬ್ಬರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸದ್ಯ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಅಲ್ಲದೇ ಈ ಇಬ್ಬರ ಹೊರತಾಗಿಯೂ 60ಕ್ಕೂ ಹೆಚ್ಚು ಎಫ್‌ಐಆರ್‌ಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    ಈ ಕುರಿತು ಗಾಯಕ ಜುಬೀನ್ ಗಾರ್ಗ್ ಅವರ ಪತ್ನಿ ಗರಿಮಾ ಗಾರ್ಗ್ ಮಾತನಾಡಿ, ನಾನು ಕಾನೂನು ಪ್ರಕ್ರಿಯೆಯಲ್ಲಿ ವಿಶ್ವಾಸ ಹೊಂದಿದ್ದೇನೆ. ಸಾವಿನ ಬಗ್ಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ಇದೆ ಎಂದು ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಈಶಾನ್ಯ ಉತ್ಸವದಲ್ಲಿ ಪಾಲ್ಗೊಳ್ಳಲು ಜುಬೀನ್ ಗಾರ್ಗ್ ಅವರು ಸಿಂಗಾಪುರಕ್ಕೆ ತೆರಳಿದ್ದರು. ಈ ವೇಳೆ ಸಮುದ್ರದಲ್ಲಿ ಸ್ಕೂಬಾ ಡೈವಿಂಗ್ ಸಂದರ್ಭದಲ್ಲಿ ಅವಘಡಕ್ಕೆ ಸಿಲುಕಿ ಗಂಭೀರ ಸ್ಥಿತಿಯಲ್ಲಿದ್ದ ಗರ್ಗ್ ಅವರನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದರು. ಅದಾದ ಬಳಿಕ ಗಾಯಕನ ಸಾವಿನ ತನಿಖೆಗಾಗಿ ಅಸ್ಸಾಂ ಸರ್ಕಾರ ವಿಶೇಷ ಡಿಜಿಪಿ ಎಂಪಿ ಗುಪ್ತಾ ನೇತೃತ್ವದಲ್ಲಿ 10 ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಸಿಂಗಾಪುರ ಸರ್ಕಾರವು ತನಿಖೆಗೆ ಒಪ್ಪಿಗೆ ಸೂಚಿಸಿದ್ದು, ಸದ್ಯ ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಮತ್ತು ಅವರ ಸಹಾಯ ಪಡೆಯಲು ಇಬ್ಬರು ಅಸ್ಸಾಂ ಪೊಲೀಸ್ ಅಧಿಕಾರಿಗಳನ್ನು ಸಿಂಗಾಪುರಕ್ಕೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.ಇದನ್ನೂ ಓದಿ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ

  • ಗಾಯಕ ಜುಬೀನ್ ಗಾರ್ಗ್ ಸಾವಿನ ತನಿಖೆಗೆ ಸಿಂಗಾಪುರ ಸರ್ಕಾರದ ಸಹಕಾರ: ಅಸ್ಸಾಂ ಸಿಎಂ

    ಗಾಯಕ ಜುಬೀನ್ ಗಾರ್ಗ್ ಸಾವಿನ ತನಿಖೆಗೆ ಸಿಂಗಾಪುರ ಸರ್ಕಾರದ ಸಹಕಾರ: ಅಸ್ಸಾಂ ಸಿಎಂ

    ಗುವಾಹಟಿ: ಗಾಯಕ ಜುಬೀನ್ ಗಾರ್ಗ್ (Zubeen Garg) ಸಾವಿನ ತನಿಖೆಗೆ ಸಹಕಾರ ಕೋರಿ ಕೇಂದ್ರವು ಸಿಂಗಾಪುರದೊಂದಿಗೆ (Singapore) ಪರಸ್ಪರ ಕಾನೂನು ಸಹಾಯ ಒಪ್ಪಂದವನ್ನು ಔಪಚಾರಿಕವಾಗಿ ಜಾರಿಗೆ ತಂದಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ  ಪೋಸ್ಟ್ ಮಾಡಿರುವ ಅವರು, ನಮ್ಮ ಪ್ರೀತಿಯ ಜುಬೀನ್ ಅವರ ನಿಧನದ ಕುರಿತು ಅಸ್ಸಾಂ ಪೊಲೀಸರು ದಾಖಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಗೃಹ ಸಚಿವಾಲಯವು ಈಗ ಪರಸ್ಪರ ಕಾನೂನು ಸಹಾಯ ಒಪ್ಪಂದವನ್ನು ಔಪಚಾರಿಕವಾಗಿ ಅನ್ವಯಿಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರವಾಹ ಪೀಡಿತ ಕಲ್ಯಾಣ ಕರ್ನಾಟಕದಲ್ಲಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

    ಪರಸ್ಪರ ಕಾನೂನು ಸಹಾಯ ಒಪ್ಪಂದ ಜಾರಿಗೆ ಬಂದ ನಂತರ, ಸಿಂಗಾಪುರದ ಅಧಿಕಾರಿಗಳಿಂದ ಪ್ರಕರಣದ ವಿವರಗಳನ್ನು ಪಡೆಯುವುದು, ಆರೋಪಿಗಳನ್ನು ಮರಳಿ ಕರೆತರುವಲ್ಲಿ ಸಹಾಯ ಮತ್ತು ನ್ಯಾಯವನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಸಂಪೂರ್ಣ ಸಹಕಾರವನ್ನು ಖಚಿತಪಡಿಸುತ್ತದೆ ಎಂದು ಶರ್ಮಾ ಸೋಮವಾರ ನುಡಿದಿದ್ದರು. ಇದನ್ನೂ ಓದಿ: ಯುದ್ಧೋಪಾದಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪ್ರವಾಹಕ್ಕೆ ಸರ್ಕಾರ ಸ್ಪಂದಿಸಬೇಕು: ಸಿ.ಟಿ ರವಿ

    ಸೆಪ್ಟೆಂಬರ್ 19ರಂದು ಸಿಂಗಾಪುರದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಗಾಯಕನ ಸಾವಿನ ತನಿಖೆಗಾಗಿ ಅಸ್ಸಾಂ ಸರ್ಕಾರ ವಿಶೇಷ ಡಿಜಿಪಿ ಎಂಪಿ ಗುಪ್ತಾ ನೇತೃತ್ವದಲ್ಲಿ 10 ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಮತ್ತು ಅವರ ಸಹಾಯ ಪಡೆಯಲು ಇಬ್ಬರು ಅಸ್ಸಾಂ ಪೊಲೀಸ್ ಅಧಿಕಾರಿಗಳನ್ನು ಈಗಾಗಲೇ ಸಿಂಗಾಪುರಕ್ಕೆ ಕಳುಹಿಸಲಾಗಿದೆ ಎಂದು ಶರ್ಮಾ ಹೇಳಿದರು. ಇದನ್ನೂ ಓದಿ: ಮಲ್ಟಿಪ್ಲೆಕ್ಸ್‌ಗಳು ಟಿಕೆಟ್ ಮಾರಾಟದ ಲೆಕ್ಕ ಇಡಬೇಕು: ಹೈಕೋರ್ಟ್ ಸೂಚನೆ

  • ಅಸ್ಸಾಂ ನಾಗರಿಕ ಸೇವಾ ಅಧಿಕಾರಿ ಮನೆ ಮೇಲೆ ದಾಳಿ: 2 ಕೋಟಿ ನಗದು, ಆಭರಣ ಜಪ್ತಿ

    ಅಸ್ಸಾಂ ನಾಗರಿಕ ಸೇವಾ ಅಧಿಕಾರಿ ಮನೆ ಮೇಲೆ ದಾಳಿ: 2 ಕೋಟಿ ನಗದು, ಆಭರಣ ಜಪ್ತಿ

    ದಿಸ್ಪುರ್: ಆದಾಯಕ್ಕೂ ಮೀರಿದ ಆಸ್ತಿ ಸೇರಿದಂತೆ ಇನ್ನಿತರ ಆರೋಪಗಳ ಮೇಲೆ ಅಸ್ಸಾಂ ನಾಗರಿಕ ಸೇವಾ ಅಧಿಕಾರಿ (Assam Civil Service) ಮನೆ ಮೇಲೆ ವಿಜಿಲೆನ್ಸ್ ಸೆಲ್‌ನ ಅಧಿಕಾರಿಗಳು (CM’s Special Vigilance) ದಾಳಿ ನಡೆಸಿದ್ದು, 2 ಕೋಟಿ ರೂ. ನಗದು ಹಾಗೂ ಆಭರಣವನ್ನು ವಶಪಡಿಸಿಕೊಂಡಿದ್ದಾರೆ.

    ಗೋಲಾಘಾಟ್ (Golaghat) ನಿವಾಸಿ ನೂಪುರ್ ಬೋರಾ 2019ರಲ್ಲಿ ಅಸ್ಸಾಂ ನಾಗರಿಕ ಸೇವೆಗೆ ಸೇರಿಕೊಂಡಿದ್ದರು. ಬಳಿಕ ಅವರನ್ನು ಕಾಮರೂಪ ಜಿಲ್ಲೆಯ ಗೊರೊಯಿಮರಿಯಲ್ಲಿ ಸರ್ಕಲ್ ಆಫೀಸರ್ ಆಗಿ ನೇಮಿಸಲಾಗಿತ್ತು. ಸದ್ಯ ಅವರನ್ನು ವಿಜಿಲೆನ್ಸ್ ಸೆಲ್‌ನ ಅಧಿಕಾರಿಗಳು ಬಂಧಿಸಿದ್ದಾರೆ.ಇದನ್ನೂ ಓದಿ: 15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಸೋಮವಾರ (ಸೆ.15) ವಿಜಿಲೆನ್ಸ್ ಸೆಲ್‌ನ ಅಧಿಕಾರಿಗಳು ನೂಪುರ್ ಬೋರಾ ಅವರ ಗುವಾಹಟಿ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 92 ಲಕ್ಷ ರೂ. ನಗದು ಹಾಗೂ 1 ಕೋಟಿ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಬಾರ್ಪೇಟಾದಲ್ಲಿರುವ (Barpeta) ಅವರ ಬಾಡಿಗೆ ಮನೆಯ ಮೇಲೆಯೂ ದಾಳಿ ನಡೆಸಿದ್ದು, 10 ಲಕ್ಷ ರೂ. ನಗದನ್ನು ಕೂಡ ಜಪ್ತಿ ಮಾಡಿಕೊಂಡಿದ್ದಾರೆ.

    ಈ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಮಾತನಾಡಿ, ವಿವಾದಾತ್ಮಕ ಭೂ-ಸಂಬಂಧಿತ ವಿಚಾರಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕಳೆದ ಆರು ತಿಂಗಳಿನಿಂದ ನೂಪುರ್ ಬೋರಾ ಅವರನ್ನು ಕಣ್ಗಾವಲಿನಲ್ಲಿರಿಸಲಾಗಿತ್ತು. ಈ ಮೊದಲು ಇವರನ್ನು ಬಾರ್ಪೇಟಾ ಕಂದಾಯ ವಲಯ ಅಧಿಕಾರಿಯಾಗಿ ನೇಮಿಸಿದಾಗ ಹಣದಾಸೆಗಾಗಿ ಹಿಂದೂ ಭೂಮಿಯನ್ನು ಅನುಮಾನಾಸ್ಪದ ವ್ಯಕ್ತಿಗಳಿಗೆ ವರ್ಗಾಯಿಸಿದ್ದರು. ಹೀಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

    ಇನ್ನೂ ನೂಪುರ್ ಬೋರಾ ಜೊತೆ ಶಾಮೀಲಾಗಿ ಬಾರ್ಪೇಟಾದ ಹಲವು ಕಡೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವ ಆರೋಪದ ಮೇಲೆ ಕಂದಾಯ ವಲಯ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಲತ್ ಮಂಡಲ್ ಸೂರಜಿತ್ ದೇಕಾ ಅವರ ನಿವಾಸದ ಮೇಲೆಯೂ ವಿಜಿಲೆನ್ಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ; ಮನೆಗಳು, ಐಟಿ ಪಾರ್ಕ್‌ ಜಲಾವೃತ – ಇಬ್ಬರು ಕಣ್ಮರೆ

  • ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ – ಉತ್ತರ ಬಂಗಾಳ, ಭೂತಾನ್‌ನಲ್ಲೂ ಕಂಪನ

    ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ – ಉತ್ತರ ಬಂಗಾಳ, ಭೂತಾನ್‌ನಲ್ಲೂ ಕಂಪನ

    ದಿಸ್ಪುರ: ಅಸ್ಸಾಂನ (Assam) ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ (Earthquake) ಸಂಭವಿಸಿದ್ದು, ಉತ್ತರ ಬಂಗಾಳ ಮತ್ತು ನೆರೆಯ ಭೂತಾನ್‌ನಲ್ಲೂ ಕಂಪನದ ಅನುಭವವಾಗಿದೆ.

    ಭೂಕಂಪದ ಕೇಂದ್ರವು 5 ಕಿಲೋಮೀಟರ್ ಆಳದಲ್ಲಿದ್ದು, ಉದಲ್ಗುರಿ ಪಟ್ಟಣದಲ್ಲಿತ್ತು ಎಂದು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಇದನ್ನೂ ಓದಿ: ಪಾಕ್‌ ವಿರುದ್ಧ ಟೀಂ ಇಂಡಿಯಾ ಗೆಲುವಿಗೆ ವಿಶ್ವ ಹಿಂದೂ ರಕ್ಷಾ ಪರಿಷತ್‌ನಿಂದ ಹೋಮ-ಹವನ

    ಗುವಾಹಟಿಯಲ್ಲಿ ಭಯಭೀತರಾದ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿಹೋದರು. ಇಲ್ಲಿಯವರೆಗೆ ಯಾವುದೇ ಗಾಯ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ವರದಿಗಳಾಗಿಲ್ಲ. ಈಶಾನ್ಯವು ಹೆಚ್ಚಿನ ಭೂಕಂಪನ ವಲಯದಲ್ಲಿ ಬರುವುದರಿಂದ ಈ ಪ್ರದೇಶದಲ್ಲಿ ಭೂಕಂಪಗಳು ಆಗಾಗ್ಗೆ ಸಂಭವಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಯಾವುದೇ ದೊಡ್ಡ ಹಾನಿ ಅಥವಾ ಜೀವಹಾನಿ ವರದಿಯಾಗಿಲ್ಲ. ಪರಿಸ್ಥಿತಿಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಹಿಮಂತ ಶರ್ಮಾ ತಿಳಿಸಿದ್ದಾರೆ. ಕೇಂದ್ರ ಬಂದರು ಸಚಿವರೂ ಆಗಿರುವ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್, ಜನರು ಜಾಗರೂಕರಾಗಿರಲು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ತಮಾಷೆಗಾಗಿ ಹಾಸ್ಟೆಲ್‌ನಲ್ಲಿ ಸ್ನೇಹಿತರಿಂದ ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಗಮ್ – 7 ಮಕ್ಕಳಿಗೆ ಮುಂದುವರಿದ ಚಿಕಿತ್ಸೆ

    ಸೆಪ್ಟೆಂಬರ್ 2 ರಂದು ಅಸ್ಸಾಂನ ಸೋನಿತ್‌ಪುರದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅದಾದ ಕೆಲವು ದಿನಗಳ ನಂತರ ಈ ಭೂಕಂಪ ಸಂಭವಿಸಿದೆ.

  • 140 ಕೋಟಿ ಭಾರತೀಯರು ನನ್ನ ಏಕೈಕ ರಿಮೋಟ್‌ ಕಂಟ್ರೋಲ್‌ – ನರೇಂದ್ರ ಮೋದಿ

    140 ಕೋಟಿ ಭಾರತೀಯರು ನನ್ನ ಏಕೈಕ ರಿಮೋಟ್‌ ಕಂಟ್ರೋಲ್‌ – ನರೇಂದ್ರ ಮೋದಿ

    – 6,300 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ
    – ಹೆಣಗಾಡುತ್ತಿದ್ದ ಅಸ್ಸಾಂ ಈಗ ಅಭಿವೃದ್ಧಿಯ ಎಂಜಿನ್‌; ಮೋದಿ ಬಣ್ಣನೆ

    ದಿಸ್ಪುರ್‌: ಇದು ನನ್ನ ರಿಮೋಟ್ ಕಂಟ್ರೋಲ್, ನನ್ನ ಬಳಿ ಬೇರೆ ಯಾವ್ದೇ ರಿಮೋಟ್ ಕಂಟ್ರೋಲ್ ಇಲ್ಲ. 140 ಕೋಟಿ ದೇಶವಾಸಿಗಳು (Indians) ನನ್ನ ಏಕೈಕ ರಿಮೋಟ್‌ ಕಂಟ್ರೋಲ್‌ ಅಂತ ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು.

    ಅಸ್ಸಾಂನಲ್ಲಿ (Assam) ವಿವಿಧ ಅಭಿವೃದ್ಧಿ ಯೋಜನೆಗಳಿಗೆ (Developmental Projects) ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಬಳಿಕ ವೇದಿಕೆಯಲ್ಲಿ ಮಾತನಾಡಿದ ಮೋದಿ, 140 ಕೋಟಿ ಭಾರತೀಯರು ನನ್ನ ಏಕೈಕ ರಿಮೋಟ್‌ ಕಂಟ್ರೋಲ್‌ ಎನ್ನುತ್ತಲೇ ಅಸ್ಸಾಂ ಅಭಿವೃದ್ಧಿಯನ್ನ ಕೊಂಡಾಡಿದರು.

    ವೇಗವಾಗಿ ಬೆಳೆಯುತ್ತಿರುವ ರಾಜ್ಯ
    ಪ್ರಸ್ತುತ ವಿಶ್ವದಲ್ಲಿ ಭಾರತ ವೇಗವಾಗಿ ಬೆಳೆಯುತ್ತಿರುವ ದೇಶವಾಗಿದೆ, ಅಸ್ಸಾಂ ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. ಒಂದು ಕಾಲದಲ್ಲಿ ಹೆಣಗಾಡುತ್ತಿದ್ದ ಅಸ್ಸಾಂ ಈಗ ಗಮನಾರ್ಹ ಬೆಳವಣಿಗೆ ಸಾಧಿಸುತ್ತಿದೆ. 13% ಬೆಳವಣಿಗೆಯ ದರ ಹೊಂದಿದೆ. ಇದು ಅಸ್ಸಾಂ ಜನರ ಕಠಿಣ ಶ್ರಮ ಹಾಗೂ ಬಿಜೆಪಿ ಡಬಲ್ ‌ಎಂಜಿನ್ ‌ಸರ್ಕಾರದ ಫಲಿತಾಂಶವೂ ಆಗಿದೆ ಎಂದು ನುಡಿದರು.

    ಮುಂದುವರಿದು. ದಶಕಗಳ ಕಾಲ ಅಸ್ಸಾಂ ಆಳಿದ ಕಾಂಗ್ರೆಸ್ ಪಕ್ಷವು ಬ್ರಹ್ಮಪುತ್ರ ನದಿಗೆ ಕೇವಲ 3 ಸೇತುವೆಗಳನ್ನು ನಿರ್ಮಿಸಿತು, ಆದ್ರೆ ನಾವು ಕಳೆದ 10 ವರ್ಷಗಳಲ್ಲಿ 6 ಸೇತುವೆಗಳನ್ನು ನಿರ್ಮಿಸಿದ್ದೇವೆ ಎಂದು ಹೇಳಿದರು. ಭಾಷಣದ ವೇಲೆ ಆಪರೇಷನ್‌ ಸಿಂಧೂರದ ಯಶಸ್ಸನ್ನು ಮೋದಿ ಸ್ಮರಿಸಿದರು.

    6,300 ಕೋಟಿ ಯೋಜನೆಗಳಿಗೆ ಶಂಕು
    ಸೆ.15ರ ವರೆಗೆ ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದು ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ 6,300 ಕೋಟಿ ಮೌಲ್ಯದ ಆರೋಗ್ಯ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ದರ್ರಾಂಗ್ ವೈದ್ಯಕೀಯ ಕಾಲೇಜು, ಜಿಎನ್‌ಎಂ ಶಾಲೆ, ಬಿಎಸ್‌ಸಿ ನರ್ಸಿಂಗ್ ಕಾಲೇಜು ಹಾಗೂ 1,200 ಕೋಟಿ ಅಂದಾಜು ವೆಚ್ಚದ 2.9 ಕಿಮೀ ಉದ್ದದ ನರೇಂಗಿ-ಕುರುವಾ ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ರು. ಇದೇ ವೇಳೆ ಅಸ್ಸಾಂನ ಕಾಮರೂಪ ಮತ್ತು ದರ್ರಾಂಗ್ ಜಿಲ್ಲೆ ಹಾಗೂ ಮೇಘಾಲಯದ ರಿ ಭೋಯ್ ಸಂಪರ್ಕಿಸುವ 4,530 ಕೋಟಿ ರೂ. ವೆಚ್ಚದ 118.5 ಕಿಮೀ ಉದ್ದದ ಗುವಾಹಟಿ ರಿಂಗ್ ರಸ್ತೆ ಯೋಜನೆಗೂ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಗೋಲಾಘಾಟ್ ಜಿಲ್ಲೆಯ ನುಮಾಲಿಗಢ ಸಂಸ್ಕರಣಾಗಾರದಲ್ಲಿ 5000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬಿದಿರು ಆಧಾರಿತ ಎಥೆನಾಲ್ ಸ್ಥಾವರ ಮತ್ತು 7,230 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಪೆಟ್ರೋ ಫ್ಲೂಯಿಡೈಸ್ಡ್ ಕ್ಯಾಟಲಿಟಿಕ್ ಕ್ರ್ಯಾಕರ್ ಘಟಕವನ್ನು ಉದ್ಘಾಟಿಸಲಿದ್ದಾರೆ. ಒಟ್ಟು ಸುಮಾರು 18,000 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.

  • ಕಾಜಿರಂಗ ಹುಲ್ಲುಗಾವಲು ಪಕ್ಷಿ ಗಣತಿ –  ಮೋದಿ ಉಲ್ಲೇಖಿಸಿದ ಸಮೀಕ್ಷೆಯ ವಿಶೇಷತೆ ಏನು?

    ಕಾಜಿರಂಗ ಹುಲ್ಲುಗಾವಲು ಪಕ್ಷಿ ಗಣತಿ –  ಮೋದಿ ಉಲ್ಲೇಖಿಸಿದ ಸಮೀಕ್ಷೆಯ ವಿಶೇಷತೆ ಏನು?

    ತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ʻಮನ್ ಕಿ ಬಾತ್‌ʼನಲ್ಲಿ ಅಸ್ಸಾಂನ (Assam) ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ (Kaziranga) ನಡೆಸಲಾದ ಮೊದಲ ʻಹುಲ್ಲುಗಾವಲು ಪಕ್ಷಿ ಗಣತಿʼಯನ್ನು (Grassland Bird Census) ಉಲ್ಲೇಖಿಸಿ ಮಾತಾಡಿದ್ದರು. ಈ ಗಣತಿಯಲ್ಲಿ ಬಳಕೆ ಮಾಡಲಾದ ವಿಧಾನ ಹಾಗೂ ಹುಲ್ಲುಗಾವಲು ಪಕ್ಷಿಗಳ ಸಂರಕ್ಷಣೆಯ ದೃಷ್ಟಿಯಿಂದ ಇದು ವಿಶೇಷವಾಗಿದೆ. ಹುಲ್ಲುಗಾವಲು ಪಕ್ಷಿ ಗಣತಿ ಎಂದರೇನು? ಈ ಗಣತಿಗೆ ಬಳಸಿದ ವಿಧಾನ ಯಾವುದು? ಈ ಗಣತಿಯ ಪ್ರಾಮುಖ್ಯತೆ ಏನು ಎಂಬ ಬಗ್ಗೆ ಇಲ್ಲಿ ವಿವರಿಸಲಾಗಿದೆ.  

    ಕಾಜಿರಂಗ ಪಕ್ಷಿ ಗಣತಿ ಉದ್ದೇಶವೇನು?
    ಮಾರ್ಚ್ 18 ಮತ್ತು ಮೇ 25ರ ನಡುವೆ, ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲ್ಲುಗಾವಲು ಪಕ್ಷಿಗಳ ಗಣತಿ ನಡೆದಿತ್ತು. ಈ ಸಮೀಕ್ಷೆಯನ್ನು ಅರಣ್ಯ ಅಧಿಕಾರಿಗಳು, ವಿಜ್ಞಾನಿಗಳು ಮತ್ತು ಪರಿಸರ ಪ್ರಿಯರು ಕೈಗೊಂಡಿದ್ದರು. ಕಾಜಿರಂಗದಲ್ಲಿ ಯಾವ ಹುಲ್ಲುಗಾವಲು ಪಕ್ಷಿ ಪ್ರಭೇದಗಳು ವಾಸಿಸುತ್ತವೆ ಎಂಬುದನ್ನು ಅಧ್ಯಯನ ಮಾಡುವುದು ಈ ಗಣತಿಯ ಮುಖ್ಯ ಉದ್ದೇಶವಾಗಿತ್ತು. 

    ವಿಸ್ತಾರವಾದ ಹುಲ್ಲುಗಾವಲಾಗಿರುವ ಕಾಜಿರಂಗ ಉದ್ಯಾನವನದಲ್ಲಿ ಅಪರೂಪದ ಪಕ್ಷಿ ಪ್ರಬೇದಗಳಿವೆ. ಇವು ಬಹುತೇಕ ಸಣ್ಣ ಹಕ್ಕಿಗಳಾಗಿದ್ದು, ನಾಚಿಕೆ ಸ್ವಭಾವದ್ದಾಗಿರುವುದರಿಂದ ಅವುಗಳನ್ನು ಸುಲಭವಾಗಿ ಗುರುತಿಸುವುದು ಕಷ್ಟ. ಯಾರಾದರೂ ಕಾಣಿಸಿದರೆ ಅವು ಅಡಗಿಕೊಳ್ಳುತ್ತವೆ. ಇದರಿಂದ ಈ ಗಣತಿ ಒಂದು ಸವಾಲಾಗಿತ್ತು. ಇದರಿಂದಾಗಿಯೇ ನೂತನವಾದ ಅಕೌಸ್ಟಿಕ್ ಮಾನಿಟರಿಂಗ್ ತಂತ್ರಜ್ಞಾನ ಬಳಸಿ ಪಕ್ಷಿಗಳ ಗಣತಿ ಮಾಡಲಾಗಿದೆ. 

    ಮಾ.18ರಿಂದ ಮೇ25ರ ಅವಧಿಯಲ್ಲೇ ಗಣತಿ ಏಕೆ?
    ಮಾರ್ಚ್ 18 ಮತ್ತು ಮೇ 25ರ ಈ ಅವಧಿಯಲ್ಲೇ ಯಾಕೆ ಗಣತಿ ಮಾಡಲಾಯಿತು ಎಂದರೆ, ಈ ಸಮಯದಲ್ಲಿ ಹುಲ್ಲುಗಾವಲು ಪಕ್ಷಿಗಳ ಸಂತಾನೋತ್ಪತ್ತಿಯ ಸಮಯವಾಗಿದೆ. ಈ ಸಮಯದಲ್ಲಿ ಪಕ್ಷಿಗಳು ಒಂದೇ ಕಡೆ ಬಹಳಷ್ಟು ಕಾಲ ಇರುತ್ತವೆ. ಅಲ್ಲದೇ ಗೂಡುಗಳನ್ನು ರಚಿಸಿಕೊಂಡು ಅಲ್ಲಿಯೇ ಕಾಲಕಳೆಯುತ್ತವೆ. ಇದರಿಂದ ಅಧ್ಯಯನ ಬಹಳ ಸುಲಭವಾಗಿದೆ. 

    ಈ ಸಮಯದಲ್ಲಿ ಅವು ತುಂಬಾ ಕೂಗುತ್ತಿರುತ್ತವೆ. ತಮ್ಮ ಸಂಗಾತಿಗಳನ್ನು ಕರೆಯುತ್ತವೆ. ಅಲ್ಲದೇ ಗಂಡು ಪಕ್ಷಿಗಳು ಗೂಡುಗಳ ಕಾವಲು ಕಾಯುತ್ತವೆ. ಈ ಸಮಯದ ಲಾಭ ಪಡೆದು ಹುಲ್ಲುಗಾವಲುಗಳ ಬಳಿಯ ಎತ್ತರದ ಮರಗಳಲ್ಲಿ ಅಕೌಸ್ಟಿಕ್ ರೆಕಾರ್ಡರ್‌ಗಳನ್ನು ಇರಿಸಿ ಧ್ವನಿಗಳನ್ನು ರೆಕಾರ್ಡ್‌ ಮಾಡಿ ಅಧ್ಯಯನ ಮಾಡಲಾಗಿದೆ. 

    ಏನಿದು ಅಕೌಸ್ಟಿಕ್ ಮಾನಿಟರಿಂಗ್ ತಂತ್ರಜ್ಞಾನ?
    ಅಕೌಸ್ಟಿಕ್ ರೆಕಾರ್ಡರ್‌ ಎಂದರೆ ಪಕ್ಷಿಗಳ ಧ್ವನಿಯನ್ನು ರೆಕಾರ್ಡ್‌ ಮಾಡುವ ಸಾಧನವಾಗಿದೆ. ಇನ್ನೂ ಅಳಿವಿನಂಚಿನಲ್ಲಿರುವ ಹುಲ್ಲುಗಾವಲು ಪಕ್ಷಿ ಬ್ಲ್ಯಾಕ್-ಬ್ರೆಸ್ಟೆಡ್ ಪ್ಯಾರಟ್‌ಬಿಲ್‌ ಬಗ್ಗೆ ಅಧ್ಯಯನ ಮಾಡುತ್ತಿರುವ ಡಾಕ್ಟರೇಟ್ ವಿದ್ಯಾರ್ಥಿ ಚಿರಂಜೀಬ್ ಬೋರಾ ಈ ಗಣತಿಯಲ್ಲಿ ಭಾಗಿಯಾಗಿದ್ದರು. ಅವರು ತಮ್ಮ ಸಂಶೋಧನೆಗೆ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ INSPIRE ಫೆಲೋಶಿಪ್ ಪಡೆದು ಅಕೌಸ್ಟಿಕ್ ಮಾನಿಟರಿಂಗ್ ಪರಿಕರಗಳನ್ನು ಕೊಂಡುಕೊಂಡಿದ್ದರು. ಆ ಪರಿಕರಗಳನ್ನು ಈ ಸಮೀಕ್ಷೆಗೆ ಬಳಕೆ ಮಾಡಿಕೊಳ್ಳಲಾಗಿದೆ. 

    ಆರು ರೆಕಾರ್ಡರ್‌ಗಳನ್ನು ಕಾಜಿರಂಗ ಉದ್ಯಾನವನದ 29 ಸ್ಥಳಗಳಲ್ಲಿ ಇರಿಸಿ ಪಕ್ಷಿಗಳ ಧ್ವನಿ ರೆಕಾರ್ಡ್‌ ಮಾಡಲಾಗಿದೆ. ಈ ರೆಕಾರ್ಡರ್‌ಗಳಲ್ಲಿ ದಾಖಲಾದ ಪಕ್ಷಿಗಳ ಕೂಗನ್ನು ವಿಭಜಿಸಿ ಪಕ್ಷಿಗಳನ್ನು ಗುರುತಿಸಲು ವಿಭಿನ್ನ ಸಾಧನಗಳನ್ನು ಬಳಸಿ ಗುರುತಿಸಲಾಗಿದೆ. ಸತತ ಮೂರು ದಿನಗಳ ಕಾಲ ರೆಕಾರ್ಡಿಂಗ್ ಮಾಡಿದ ನಂತರ ಪಕ್ಷಿಗಳ ಧ್ವನಿಯನ್ನು ವಿಶ್ಲೇಷಿಸಲಾಗಿದೆ. ಧ್ವನಿಯನ್ನು ಗುರುತಿಸಲು ಸಾಧ್ಯವಾಗದಿದ್ದಾಗ ನೂತನ ಸಾಫ್ಟ್‌ವೇರ್ ಬಳಸಿ ಗುರುತಿಸಲಾಗಿದೆ. ಹಕ್ಕಿಯ ಕೂಗಿನ ಆಧಾರದ ಮೇಲೆ ಅವುಗಳ ಜಾತಿಗಳನ್ನು ಗುರುತಿಸಲು ಬರ್ಡ್‌ನೆಟ್ ಎಂಬ ಉಪಕರಣವನ್ನು ಬಳಸಲಾಗಿದೆ. 

    ಗಣತಿಯ ಮಹತ್ವವೇನು?
    ಹುಲ್ಲುಗಾವಲು ಪಕ್ಷಿಗಳನ್ನು ಪರಿಸರ ವ್ಯವಸ್ಥೆಯ ʻಉತ್ತಮ ಆರೋಗ್ಯದ ಸೂಚಕʼ ಎಂದು ಕರೆಯಾಗುತ್ತದೆ.  ಈ ಪಕ್ಷಿಗಳ ಇರುವಿಕೆ ಅಲ್ಲಿನ ಪರಿಸರ ಆರೋಗ್ಯಕರವಾಗಿದೆ ಎಂದು ಸೂಚಿಸುತ್ತದೆ. ಅವುಗಳ ಅವನತಿ, ಮನುಷ್ಯನಿಗೂ ಸಹ ಕಂಟಕವಾಗುವ ಪರಿಸರ ನಿರ್ಮಾಣವಾಗುತ್ತಿರುವುದರ ಸಂಕೇತವಾಗಿದೆ. ಇದೇ ಕಾರಣದಿಂದಾಗಿ ಹುಲ್ಲುಗಾವಲು ಪಕ್ಷಿಗಳ ಗಣತಿ ಹಾಗೂ ಅವುಗಳ ಸಂರಕ್ಷಣೆ ಅಗತ್ಯವಾಗಿದೆ. ಇದೇ ರೀತಿಯಾಗಿ ಜೇನು ನೊಣಗಳ ಬಗ್ಗೆಯೂ ವಿಶ್ಲೇಷಿಸಲಾಗುತ್ತದೆ. ಜೇನು ಉತ್ತಮ ಪರಿಸರ ವ್ಯವಸ್ಥೆಯ ಸೂಚಕವಾಗಿದೆ. ಕೃಷಿ ಕೆಲಸದಲ್ಲಿ ಪರಾಗ ಸ್ಪರ್ಶ ಕೆಲಸ ಜೇನಿನಿಂದ ಆಗುತ್ತದೆ. ಇದೇ ರೀತಿ ಪ್ರಕೃತಿಯ ಪ್ರತಿ ಜೀವಿಯೂ ಒಂದಲ್ಲ ಒಂದು ರೀತಿ ಪ್ರಕೃತಿಗೆ, ಮನುಷ್ಯನಿಗೂ ನೆರವಾಗುತ್ತಿರುತ್ತವೆ.

    ಸ್ಥಳೀಯ 10 ಪ್ರಭೇದಗಳಿಗೆ ಆದ್ಯತೆ
    ಕಾಜಿರಂಗ ಪಕ್ಷಿ ಗಣತಿಯಲ್ಲಿ ಸ್ಥಳೀಯವಾಗಿರುವ 10 ಪ್ರಭೇದಗಳಿಗೆ ಆದ್ಯತೆ ನೀಡಲಾಗಿದೆ. ಇದರಲ್ಲಿ ಬಂಗಾಳ ಫ್ಲೋರಿಕನ್, ಸ್ವಾಂಪ್ ಫ್ರಾಂಕೋಲಿನ್, ಫಿನ್ಸ್ ವೀವರ್, ಸ್ವಾಂಪ್ ಗ್ರಾಸ್ ಬ್ಯಾಬ್ಲರ್, ಜೆರ್ಡಾನ್ಸ್ ಬ್ಯಾಬ್ಲರ್, ಸ್ಲೆಂಡರ್-ಬಿಲ್ಡ್ ಬ್ಯಾಬ್ಲರ್, ಬ್ಲ್ಯಾಕ್-ಬ್ರೆಸ್ಟೆಡ್ ಪ್ಯಾರಟ್‌ಬಿಲ್, ಮಾರ್ಷ್ ಬ್ಯಾಬ್ಲರ್, ಬ್ರಿಸ್ಟಲ್ಡ್ ಗ್ರಾಸ್‌ಬರ್ಡ್ ಮತ್ತು ಇಂಡಿಯನ್ ಗ್ರಾಸ್‌ಬರ್ಡ್ ಒಳಗೊಂಡಿವೆ.

    70% ಹುಲ್ಲುಗಾವಲು ಪ್ರದೇಶ ನಾಶ!
    ಕಳೆದ ನಾಲ್ಕು ದಶಕಗಳಲ್ಲಿ ಅಸ್ಸಾಂ ತನ್ನ 70% ನಷ್ಟು ಹುಲ್ಲುಗಾವಲು ಭಾಗವನ್ನು ಕಳೆದುಕೊಂಡಿದೆ. ಅತಿಯಾಗಿ ಜಾನುವಾರು ಮೇಯಿಸುವುದು ಮತ್ತು ಕೃಷಿಗಾಗಿ ಹುಲ್ಲುಗಾವಲುಗಳನ್ನು ತೆರವುಗೊಳಿಸುವುದು ಮುಂತಾದ ಕಾರಣದಿಂದ ಹುಲ್ಲುಗಾವಲುಗಳು ಕ್ರಮೇಣ ನಶಿಸುತ್ತಿದೆ. ಇದರಿಂದ ಕೆಲವು ಸ್ಥಳೀಯ ಪಕ್ಷಿ ಪ್ರಬೇಧಗಳು ಅವನತಿಯ ಹಂತದಲ್ಲಿವೆ. ಬಂಗಾಳ ಫ್ಲೋರಿಕನ್‌ನಂತಹ ಕೆಲವು ಪ್ರಭೇದಗಳು ಭಾರೀ ಅಪಾಯದ ಅಂಚಿನಲ್ಲಿವೆ. ಈ ಬಗ್ಗೆ ಹೆಚ್ಚಿನ ಅಧ್ಯಯನದ ಅವಶ್ಯಕತೆ ಇದೆ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ. 

  • ಇತ್ತ `ಡಿ’ ಫ್ಯಾನ್ಸ್ ಜಟಾಪಟಿ – ಅತ್ತ ಕಾಮಾಕ್ಯದಲ್ಲಿ ದರ್ಶನ್

    ಇತ್ತ `ಡಿ’ ಫ್ಯಾನ್ಸ್ ಜಟಾಪಟಿ – ಅತ್ತ ಕಾಮಾಕ್ಯದಲ್ಲಿ ದರ್ಶನ್

    ಟ ದರ್ಶನ್ (Darshan) ಪ್ರಸಿದ್ಧ ಕಾಮಾಕ್ಯ ದೇವಿಯ ಶಕ್ತಿಪೀಠಕ್ಕೆ ತೆರಳಿದ್ದಾರೆ. ಅಸ್ಸಾಂನ ಗುವಾಹಟಿಯಲ್ಲಿರುವ ಸುಪ್ರಸಿದ್ಧ ಕಾಮಾಕ್ಯ ದೇವಿ ದೇವಸ್ಥಾನಕ್ಕೆ (Kamakhya Devi temple) ದರ್ಶನ್, ಪತ್ನಿ ವಿಜಯಲಕ್ಷ್ಮಿ ಜೊತೆ ತೆರಳಿದ್ದಾರೆ. ದೇವಿಗೆ ಹರಕೆ ತೀರಿಸಿದ್ದಾರೆ.

    ಸಂಕಷ್ಟದಲ್ಲಿರುವ ದರ್ಶನ್ ದೇವಿಯ ಮೊರೆ ಹೋಗಿದ್ದಾರೆ. ಶೀಘ್ರದಲ್ಲೇ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಕುರಿತು ಆದೇಶ ಪ್ರಕಟವಾಗಲಿದ್ದು ದರ್ಶನ್‌ಗೆ ಇದು ಸಂದಿಗ್ಧ ಸ್ಥಿತಿ. ದರ್ಶನ್ ಜೈಲಲ್ಲಿದ್ದಾಗ ವಿಜಯಲಕ್ಷ್ಮಿ ಕಾಮಾಕ್ಯ ದೇವಿ ದೇವಸ್ಥಾನಕ್ಕೆ ತೆರಳಿ ಪೂಜೆ ಮಾಡಿಸಿಕೊಂಡು ಬಂದಿದ್ದರು. ಇದೀಗ ಪತಿಯೊಂದಿಗೆ ತೆರಳಿ ಶಕ್ತಿದೇವಿಗೆ ಮತ್ತೆ ಮೊರೆಹೋಗಿದ್ದಾರೆ. ಅಭಿಮಾನಿಗಳ ಜೊತೆ ಫೋಟೋ ತೆಗೆಸಿಕೊಳ್ಳುವ ವೀಡಿಯೋ ರಿವೀಲ್ ಆಗಿದೆ. ಇದನ್ನೂ ಓದಿ: ಶಿರೂರು ಭೂಕುಸಿತ ದುರಂತ; ಮಲೆಯಾಳಂನಲ್ಲಿ ಸಿನಿಮಾ ಸಟ್ಟೇರಲು ಸಿದ್ಧತೆ

    ಇತ್ತ ದರ್ಶನ್ ಫ್ಯಾನ್ಸ್ ವಿರುದ್ಧ ನಟಿ ರಮ್ಯಾ ನಟ ಪ್ರಥಮ್ ಸೇರಿ ಹಲವರು ಪೊಲೀಸರಿಗೆ ದೂರು ನೀಡಿದ್ದಾರೆ. ದರ್ಶನ್ ಅವರಿಗೆ ಬುದ್ಧಿ ಹೇಳಬೇಕು ಎಂದು ಆಗ್ರಹಿಸುತ್ತಿದ್ದಾರೆ. ಆದರೆ ದರ್ಶನ್ ಇದೀಗ ಕಾಮಾಕ್ಯ ದೇವಿ ದೇವಸ್ಥಾನದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇದನ್ನೂ ಓದಿ: 11 ದಿನದಲ್ಲಿ 250 ಕೋಟಿ ರೂ. ದಾಟಿದ `ಸೈಯಾರಾ’ ಕಲೆಕ್ಷನ್

    ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ನಿಂದ ಆದೇಶ ಹೊರಬೀಳಲಿದ್ದು ದರ್ಶನ್‌ಗೆ ಭಾರಿ ಆತಂಕ ಇರುವಂತೆ ಕಾಣುತ್ತಿದೆ. ಈ ಹೊತ್ತಲ್ಲಿ ಕಾಮಾಕ್ಯದೇವಿಯ ದರ್ಶನ ಪಡೆದಿದ್ದಾರೆ ನಟ ದರ್ಶನ್. ಮರಳಿ ಬಂದ ಬಳಿಕ ಅಭಿಮಾನಿಗಳಿಗೆ ಬುದ್ಧಿ ಹೇಳ್ತಾರಾ? ಅಥವಾ ಸುಮ್ಮನಾಗ್ತಾರಾ ಅನ್ನೋ ಪ್ರಶ್ನೆ ಎದುರಾಗಿದೆ.

  • ಕುಟುಂಬ ಸಮೇತ ಅಸ್ಸಾಂನ ಕಾಮಾಕ್ಯ ದೇವಿಯ ಹರಕೆ ತೀರಿಸಿದ ದರ್ಶನ್

    ಕುಟುಂಬ ಸಮೇತ ಅಸ್ಸಾಂನ ಕಾಮಾಕ್ಯ ದೇವಿಯ ಹರಕೆ ತೀರಿಸಿದ ದರ್ಶನ್

    ಸ್ಸಾಂನ ಗುವಾಹಟಿಯಲ್ಲಿರುವ ಪ್ರಸಿದ್ಧ ಕಾಮಾಕ್ಯ ದೇವಿ ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ.

    ರಾಜ್ಯದಲ್ಲಿ ಡಿ-ಫ್ಯಾನ್ಸ್, ರಮ್ಯಾ ಮತ್ತು ಒಳ್ಳೆ ಹುಡ್ಗ ಪ್ರಥಮ್ ವಿಷಯಗಳ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ನಟ ದರ್ಶನ್ ಕಾಮಾಕ್ಯ ದೇವಿ ಮೊರೆ ಹೋಗಿದ್ದಾರೆ.ಇದನ್ನೂ ಓದಿ: ಡಿ-ಬಾಸ್ ಫ್ಯಾನ್ಸ್‌ನಿಂದ ಅಶ್ಲೀಲ ಮೆಸೇಜ್ – ನಟಿ ರಮ್ಯಾ ಬೆಂಬಲಕ್ಕೆ ನಿಂತ ದೊಡ್ಮನೆ ಕುಟುಂಬ

    ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿದ್ದ ನಟ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷಿö್ಮ ಇದೇ ಕಾಮಾಕ್ಯ ದೇವಿ ದೇವಸ್ಥಾನಕ್ಕೆ ತೆರಳಿ ಹರಕೆ ಹೊತ್ತಿದ್ದರು. ಜೊತೆಗೆ ಕೆಲವೇ ದಿನಗಳಲ್ಲಿ ಸುಪ್ರೀಂ ತೀರ್ಪು ಬರುವ ಸಾಧ್ಯತೆಯಿದ್ದು, ದರ್ಶನ್ ಆತಂಕದಲ್ಲಿದ್ದಾರೆ. ಹೀಗಾಗಿ ಹರಕೆ ತೀರಿಸಲು ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ತೆರಳಿದ್ದಾರೆ.

    ಕಳೆದ ವಾರ ಸುಪ್ರೀಂ ಕೋರ್ಟ್ನಲ್ಲಿ, ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ವಾದ-ಪ್ರತಿವಾದಗಳು ನಡೆದಿದ್ದು, ಒಂದು ವಾರದಲ್ಲಿ ತೀರ್ಪು ನೀಡುವುದಾಗಿ ಕೋರ್ಟ್ ತಿಳಿಸಿತ್ತು. ಇನ್ನೂ ನಟಿ ರಮ್ಯಾ ದರ್ಶನ್ ಅಭಿಮಾನಿಗಳ ವಿರುದ್ಧ ಕಾನೂನು ಸಮರಕ್ಕಿಳಿದಿದ್ದು, ಒಳ್ಳೆ ಹುಡ್ಗ ಪ್ರಥಮ್ ಧರಣಿ ಕೂರುವುದಾಗಿ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಮಿರಾಯ್ ಸಿನಿಮಾದ ಮೊದಲ ಹಾಡಿಗೆ ಭರ್ಜರಿ ರೆಸ್ಪಾನ್ಸ್: ಹನುಮಾನ್ ಹುಡುಗನ ಚಿತ್ರ

  • ನಕಲಿ ಬಿಲ್ ಪಾವತಿಗಾಗಿ ಹಿರಿಯ ಅಧಿಕಾರಿಗಳ ಕಿರುಕುಳ – ಮಹಿಳಾ ಎಂಜಿನಿಯರ್ ಸೂಸೈಡ್

    ನಕಲಿ ಬಿಲ್ ಪಾವತಿಗಾಗಿ ಹಿರಿಯ ಅಧಿಕಾರಿಗಳ ಕಿರುಕುಳ – ಮಹಿಳಾ ಎಂಜಿನಿಯರ್ ಸೂಸೈಡ್

    -ಡೆತ್‌ನೋಟ್‌ನಲ್ಲಿ ಇಬ್ಬರು ಅಧಿಕಾರಿಗಳ ಹೆಸರು ಬರೆದಿಟ್ಟು ಆತ್ಮಹತ್ಯೆ

    ದಿಸ್ಪುರ್: ನಕಲಿ ಬಿಲ್ ಪಾವತಿಗಾಗಿ ಸಹೋದ್ಯೋಗಿಗಳು ನೀಡುತ್ತಿದ್ದ ಕಿರುಕುಳ ಸಹಿಸಲಾಗದೇ ಮಹಿಳಾ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸ್ಸಾಂನಲ್ಲಿ (Assam) ನಡೆದಿದೆ.

    ಲೋಕೋಪಯೋಗಿ ಇಲಾಖೆಯಲ್ಲಿ (PWD) ಸಹಾಯಕ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಜ್ಯೋತಿಷಾ ದಾಸ್(30) ಮೃತರು.ಇದನ್ನೂ ಓದಿ: ಯುಕೆ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ – ಭಾರತಕ್ಕೆ ಏನು ಲಾಭ?

    ಮೃತ ಜ್ಯೋತಿಷಾ ಅಸ್ಸಾಂನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಮಂಗಳವಾರ ಮಧ್ಯಾಹ್ನ ಆಕೆಯ ಮನೆಯಲ್ಲಿ ಮೃತದೇಹ ಪತ್ತೆಯಾಗಿದೆ. ಜೊತೆಗೆ ಡೆತ್‌ನೋಟ್‌ವೊಂದು ಸಿಕ್ಕಿದ್ದು, ಅದರಲ್ಲಿ ತಾನು ಕೆಲಸ ಮಾಡುತ್ತಿದ್ದ ಇಲಾಖೆಯ ಇಬ್ಬರು ಹಿರಿಯ ಅಧಿಕಾರಿಗಳ ಹೆಸರುಗಳನ್ನು ಉಲ್ಲೇಖಿಸಿ, ಇವರು ನಕಲಿ ಬಿಲ್ ಪಾವತಿಗಾಗಿ ನನಗೆ ಕಿರುಕುಳ ನೀಡುತ್ತಿದ್ದರು ಎಂದು ತಿಳಿಸಿದ್ದಾರೆ.

    ನಕಲಿ ಬಿಲ್ ಪಾವತಿಗಾಗಿ ಆ ಇಬ್ಬರು ಅಧಿಕಾರಿಗಳು ನನಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ಹೀಗಾಗಿ ನಾನು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೆ ಎಂದು ಆರೋಪಿಸಿದ್ದಾರೆ. ಜೊತೆಗೆ ಇದೆಲ್ಲದರ ಒತ್ತಡದಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಈ ಬಗ್ಗೆ ಹೇಳಿಕೊಳ್ಳಲು ನನಗೆ ಯಾರೂ ಇಲ್ಲ, ಸಾಕಾಗಿದೆ. ಎಲ್ಲಾದರೂ ಹೋಗಬೇಕು ಎಂದರೆ ಅದು ಬೇಡವಾಗಿದೆ. ಅಪ್ಪ, ಅಮ್ಮ ನನ್ನ ಬಗ್ಗೆ ತುಂಬಾ ಚಿಂತಿಸುತ್ತಾರೆ ಎಂದು ಉಲ್ಲೇಖಿಸಿದ್ದಾರೆ.

    ಈ ಕುರಿತು ಯುವತಿಯ ಕುಟುಂಬಸ್ಥರು ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ಸದ್ಯ ಪೊಲೀಸರು ಡೆತ್‌ನೋಟ್ ಆಧಾರದ ಮೇಲೆ ಇತ್ತೀಚೆಗೆ ಬಡ್ತಿ ಪಡೆದ ಸೂಪರಿಂಟೆಂಡೆಂಟ್ ಎಂಜಿನಿಯರ್, ಈ ಹಿಂದೆ ಬೊಂಗೈಗಾಂವ್‌ನಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದ ದಿನೇಶ್ ಮೇಧಿ ಶರ್ಮಾ ಹಾಗೂ ಬೊಂಗೈಗಾಂವ್‌ನಲ್ಲಿ ಲೋಕೋಪಯೋಗಿ ಇಲಾಖೆಯ ಉಪವಿಭಾಗಾಧಿಕಾರಿಯಾಗಿರುವ ಅಮೀನುಲ್ ಇಸ್ಲಾಂ ಇಬ್ಬರನ್ನು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಸದ್ಯ ಅಸ್ಸಾಂ ಮುಖ್ಯಮಂತ್ರಿ (Assam CM) ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು ಪ್ರಕರಣ ಸಂಬಂಧ ವಿವರವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ.ಇದನ್ನೂ ಓದಿ: ಕನ್ನಡ ಮಾತಾಡಿ ಎಂದಿದ್ದಕ್ಕೆ ರೂಲ್ಸ್ ಇದೆಯಾ ಎಂದು ದರ್ಪ ಮೆರೆದ ಬ್ಯಾಂಕ್ ಸಿಬ್ಬಂದಿ