Tag: Assam Assembly

  • ರಾಯರ ಆರಾಧನೆಗೆ ಗುರುವಾರ ಬ್ರೇಕ್ ಕೊಡಿ ಅಂದ್ರೆ ಹೇಗಿರುತ್ತೆ? – ಜೋಶಿ

    ರಾಯರ ಆರಾಧನೆಗೆ ಗುರುವಾರ ಬ್ರೇಕ್ ಕೊಡಿ ಅಂದ್ರೆ ಹೇಗಿರುತ್ತೆ? – ಜೋಶಿ

    – ಅಸ್ಸಾಂ ವಿಧಾನಸಭೆಗೆ ಶುಕ್ರವಾರ 2 ಗಂಟೆ ನಮಾಜ್‌ಗೆ ಬ್ರೇಕ್ ರದ್ದುಪಡಿಸುವ ನಿರ್ಣಯ ಸ್ವಾಗತಾರ್ಹ

    ಹುಬ್ಬಳ್ಳಿ: ವಿಧಾನಸಭೆ, ಲೋಕಸಭೆ, ರಾಜ್ಯಸಭೆಗಳು ನಮಾಜ್ ಮಾಡಲು ಇವೆಯೇ? ನಾನು ಶ್ರೀ ರಾಘವೇಂದ್ರ ಸ್ವಾಮಿ ಆರಾಧಕ. ನಾನು ಅಂದು ಗುರು ರಾಯರನ್ನು ಆರಾಧಿಸಬೇಕು. 2 ತಾಸು ಸದನ ಮುಂದೂಡಿ ಅಥವಾ ಅಂದು ರಜೆ ಘೋಷಿಸಿ ಎಂದರೆ ಆಗುತ್ತದೆಯೇ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಪ್ರಶ್ನಿಸಿದ್ದಾರೆ.

    ಶುಕ್ರವಾರವೂ ವಿಧಾನಸಭೆ ಕಲಾಪಕ್ಕೆ ಬ್ರೇಕ್ ನೀಡದೇ ಮುಂದುವರಿಸುವ ಬಗ್ಗೆ ಕೈಗೊಂಡ ಅಸ್ಸಾಂ ವಿಧಾನಸಭೆ (Assam Legislative Assembly) ನಿರ್ಣಯದ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಸ್ಸಾಂ ವಿಧಾನಸಭೆಯಲ್ಲಿ ಶುಕ್ರವಾರ, ಮುಸ್ಲಿಂ ಶಾಸಕರಿಗೆ ನೀಡುತ್ತಿದ್ದ 2 ಗಂಟೆ ನಮಾಜ್ (Namaz) ಬ್ರೇಕ್ ರದ್ದುಗೊಳಿಸಲು ಕೈಗೊಂಡ ನಿರ್ಣಯ ಸರಿಯಾಗಿದೆ. ಸಂಸತ್ ಮತ್ತು ವಿಧಾನಸಭೆ ನಮಾಜ್ ಮಾಡುವ ಸ್ಥಳವೇ? ಇದು ತುಷ್ಟೀಕರಣದ ಪರಮಾವಧಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಜೈಲಿನಲ್ಲಿ ಬೀಡಿ, ಸಿಗರೇಟಿಗಾಗಿ ಕೈದಿಗಳ ಪ್ರತಿಭಟನೆ

    ರಾಯರ ಆರಾಧನೆಗೆ ಗುರುವಾರ ಬ್ರೇಕ್ ಕೊಡಿ ಎಂದರೆ ಹೇಗಿರುತ್ತದೆ? ನಾನು ಶ್ರೀ ರಾಘವೇಂದ್ರ ಸ್ವಾಮಿ ಆರಾಧಕ. ನನ್ನಂತೆ ಎಲ್ಲಾ ಸದಸ್ಯರು ಅವರವರ ದೈವರಾಧನೆಗೆ ಸದನಕ್ಕೆ 2 ಗಂಟೆ ವಿರಾಮ ನೀಡಿ, ಸೋಮವಾರ ರಜೆ ಕೊಡಿ, ಗುರುವಾರ ರಜೆ ಕೊಡಿ ಎನ್ನಬಹುದೇ? ಅದೆಲ್ಲ ನಡೆಯುವಂಥದ್ದೇ? ಭಾನುವಾರ ಸದನಕ್ಕೆ ಬ್ರೇಕ್ ಇದ್ದೇ ಇರುತ್ತದೆ. ನಮ್ಮ ನಮ್ಮ ವೈಯಕ್ತಿಕ ಅನುಕೂಲಕ್ಕೆ ಸೋಮವಾರ ಕೊಡಿ ಎಂದರೆ ಅದು ಎಷ್ಟರ ಮಟ್ಟಿಗೆ ಸಮಂಜಸವಾಗಿರುತ್ತದೆ ಎಂದು ಹರಿಹಾಯ್ದರು. ಇದನ್ನೂ ಓದಿ: Shivamogga | ಪ್ರೀತಿಸಲು ಹುಡುಗಿ ಸಿಗಲಿಲ್ಲ ಅಂತ ತುಂಗಾ ನದಿಗೆ ಹಾರಿ ಯುವಕ ಆತ್ಮಹತ್ಯೆ!

    ಅಸ್ಸಾಂ ವಿಧಾನಸಭೆ ಮುಸ್ಲಿಂ ಶಾಸಕರಿಗೆ ಶುಕ್ರವಾರ 2 ಗಂಟೆ ಕಲಾಪಕ್ಕಿದ್ದ ವಿರಾಮವನ್ನು ರದ್ದುಪಡಿಸಲು ಕೈಗೊಂಡ ನಿರ್ಣಯ ಸ್ವಾಗತಾರ್ಹ. ಆದರೆ, ವಿಪಕ್ಷಗಳು ಇದನ್ನು ವಿರೋಧಿಸುವುದು ತುಷ್ಟೀಕರಣದ ಪರಮಾವಧಿ ಆಗಿದೆ ಮತ್ತು ಅವರ ಬೇಕೂಫಿತನವನ್ನು ಪ್ರದರ್ಶಿಸುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಟಿಕೆಟ್ ಸಿಗಲಿ, ಸಿಗದೇ ಇರಲಿ ಪಕ್ಷದ ಜೊತೆ ಇರ್ತೇನೆ, ಜೆಡಿಎಸ್‌ಗೆ ಟಿಕೆಟ್ ಕೊಟ್ರೂ ಕೆಲಸ ಮಾಡ್ತೇನೆ: ಸಿಪಿವೈ

  • ಅಸ್ಸಾಂ ವಿಧಾನಸಭೆಯ ಶುಕ್ರವಾರದ 2 ಗಂಟೆ ಅವಧಿಯ ನಮಾಜ್ ಬ್ರೇಕ್‌ಗೆ ತಡೆಯೊಡ್ಡಿದ ಸಿಎಂ ಶರ್ಮಾ

    ಅಸ್ಸಾಂ ವಿಧಾನಸಭೆಯ ಶುಕ್ರವಾರದ 2 ಗಂಟೆ ಅವಧಿಯ ನಮಾಜ್ ಬ್ರೇಕ್‌ಗೆ ತಡೆಯೊಡ್ಡಿದ ಸಿಎಂ ಶರ್ಮಾ

    – ಮುಸ್ಲಿಂ ಶಾಸಕರಿಗೆ ನಮಾಜ್‌ ವಿರಾಮಕ್ಕಿಲ್ಲ ಅವಕಾಶ

    ಗುವಾಹಟಿ: ಶುಕ್ರವಾರದಂದು ಮುಸ್ಲಿಂ ಶಾಸಕರಿಗೆ (Muslim MLAs) ಎರಡು ಗಂಟೆಗಳ ನಮಾಜ್ ವಿರಾಮ ನೀಡುವ ದಶಕಗಳ ಹಿಂದಿನ ನಿಯಮವನ್ನು ರದ್ದುಗೊಳಿಸಲು ಅಸ್ಸಾಂ ವಿಧಾನಸಭೆ (Assam) ನಿರ್ಧರಿಸಿದೆ.

    ಸದನದ ಕಲಾಪವನ್ನು ಇತರ ದಿನಗಳಂತೆ ಶುಕ್ರವಾರವೂ ಮುಂದುವರಿಸಲು ವಿಧಾನಸಭೆ ನಿಯಮಗಳ ಸಮಿತಿ ಇಂದು ನಿರ್ಣಯವನ್ನು ಅಂಗೀಕರಿಸಿದೆ. ಇಂದಿನವರೆಗೂ, ಮುಸ್ಲಿಂ ಶಾಸಕರು ನಮಾಜ್ ಪ್ರಾರ್ಥನೆಗೆ ಹಾಜರಾಗುವುದಕ್ಕಾಗಿ ಅಸ್ಸಾಂ ವಿಧಾನಸಭೆಯನ್ನು ಶುಕ್ರವಾರದಂದು ಎರಡು ಗಂಟೆಗಳ ಕಾಲ ಮುಂದೂಡಲಾಗುತ್ತಿತ್ತು. ಇದನ್ನೂ ಓದಿ: ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ – ಕ್ಷಮೆಯಾಚಿಸಿದ ಪ್ರಧಾನಿ ಮೋದಿ

    ಅಸ್ಸಾಂ ಶಾಸಕಾಂಗ ಸಭೆ ರಚನೆಯಾದಾಗಿನಿಂದ, ಮುಸ್ಲಿಂ ಸದಸ್ಯರಿಗೆ ನಮಾಜ್ ಮಾಡಲು ಅನುಕೂಲವಾಗುವಂತೆ ಶುಕ್ರವಾರದ ವಿಧಾನಸಭೆಯ ಅಧಿವೇಶನವನ್ನು ಬೆಳಗ್ಗೆ 11 ಗಂಟೆಗೆ ಮುಂದೂಡಲಾಗುತ್ತಿತ್ತು. ಮುಸ್ಲಿಂ ಸದಸ್ಯರು ಬಂದ ನಂತರ ಮಧ್ಯಾಹ್ನದ ಭೋಜನದ ಬಳಿಕ ಕಲಾಪವನ್ನು ಪುನರಾರಂಭಿಸುತ್ತಿತ್ತು.

    ಸ್ಪೀಕರ್ ಬಿಸ್ವಜಿತ್ ಡೈಮರಿ‌, ಸಂವಿಧಾನದ ಜಾತ್ಯತೀತ ಸ್ವರೂಪದ ದೃಷ್ಟಿಯಿಂದ ಅಸ್ಸಾಂ ವಿಧಾನಸಭೆಯು ಯಾವುದೇ ದಿನದಂತೆ ಶುಕ್ರವಾರದಂದು ಯಾವುದೇ ಮುಂದೂಡಿಕೆ ಇಲ್ಲದೆ ತನ್ನ ಕಲಾಪಗಳನ್ನು ನಡೆಸಬೇಕು ಎಂದು ಪ್ರಸ್ತಾಪಿಸಿದರು. ಇದನ್ನೂ ಓದಿ: ಚುನಾವಣೆಗೆ ರಾಹುಲ್ ಗಾಂಧಿಗೆ ಎಷ್ಟು ಹಣ ನೀಡಲಾಗಿದೆ? – ಲೆಕ್ಕ ನೀಡಿದ ಕಾಂಗ್ರೆಸ್‌

    ಈ ನಿಯಮವನ್ನು ಅಸ್ಸಾಂ ಸಿಎಂ ಹಿಮಂತ್‌ ಬಿಸ್ವಾ ಶರ್ಮಾ (Himanta Biswa Sarma) ಸ್ವಾಗತಿಸಿದ್ದಾರೆ. ಆದರೆ ಪ್ರತಿಪಕ್ಷಗಳು ಈ ಕ್ರಮವನ್ನು ಟೀಕಿಸಿವೆ. ಇದು ‘ಮುಸ್ಲಿಂ ಭಾವನೆಗಳನ್ನು ನೋಯಿಸುತ್ತದೆ’ ಎಂದು ಪ್ರತಿಪಾದಿಸಿವೆ.

  • ʻಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆʼ ರದ್ದು – ಸಂಪುಟ ನಿರ್ಧಾರಕ್ಕೆ ಕಾಂಗ್ರೆಸ್‌ ಆಕ್ಷೇಪ; ಸಭಾತ್ಯಾಗ

    ʻಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆʼ ರದ್ದು – ಸಂಪುಟ ನಿರ್ಧಾರಕ್ಕೆ ಕಾಂಗ್ರೆಸ್‌ ಆಕ್ಷೇಪ; ಸಭಾತ್ಯಾಗ

    – ಬಾಲ್ಯ ವಿವಾಹ ತಡೆಯೋ ನಿಟ್ಟಿನಲ್ಲಿ ಕಾಯ್ದೆ ರದ್ದು ಎಂದು ಅಸ್ಸಾಂ ಸಿಎಂ ಸ್ಪಷ್ಟನೆ
    – ನಾನು ಬದುಕಿರುವವರೆಗೂ ಬಾಲ್ಯ ವಿವಾಹಕ್ಕೆ ಅವಕಾಶ ಇಲ್ಲ – ಹಿಮಂತ ಬಿಸ್ವಾ ಶರ್ಮಾ

    ದಿಸ್ಪುರ: ಉತ್ತರಾಖಂಡ (Uttarakhand) ಸರ್ಕಾರ ಏಕರೂಪ ನಾಗರಿಕ ಸಂಹಿತೆ (Uniform Civil Code) ಜಾರಿಗೊಳಿಸಿದ ಬೆನ್ನಲ್ಲೇ ಅಸ್ಸಾಂ (Assam) ಕ್ಯಾಬಿನೆಟ್ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ 1935’ ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಈ ವಿಚಾರವಾಗಿ ಸದನದಲ್ಲಿಂದು ಚರ್ಚೆ ನಡೆಯಿತು. ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ಪ್ರತಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಎಐಯುಡಿಎಫ್ ತೀವ್ರವಾಗಿ ಖಂಡಿಸಿ, ಸಭಾತ್ಯಾಗ ಮಾಡಿದವು.

    ಸೋಮವಾರ ಅಸ್ಸಾಂ ವಿಧಾನಸಭೆಯಲ್ಲಿ ವಿರೋಧ ಪಕ್ಷಗಳ ವ್ಯಾಪಕ ಟೀಕೆಯ ನಂತರ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಕಾಯ್ದೆ ರದ್ದುಪಡಿಸಿದ್ದಕ್ಕೆ ಸ್ಪಷ್ಟನೆ ನೀಡಿದರು. ಬಾಲ್ಯವಿವಾಹ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ‌ʻಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆʼಯನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ನಾನು ಬದುಕಿರುವವರೆಗೂ ಅಸ್ಸಾಂನಲ್ಲಿ ಬಾಲ್ಯ ವಿವಾಹಕ್ಕೆ ಅವಕಾಶ ನೀಡುವುದಿಲ್ಲ ಎಂದು ದಿಟ್ಟ ಉತ್ತರ ನೀಡಿದರು. ಇದನ್ನೂ ಓದಿ: ಹಿಂದೂಗಳಿಗೆ ಮತ್ತೆ ಜಯ- ಜ್ಞಾನವಾಪಿಯಲ್ಲಿ ಪೂಜೆಗೆ ತಡೆ ನೀಡಲು ಹೈಕೋರ್ಟ್‌ ನಕಾರ

    ಈ ನಡುವೆಯೂ ಸರ್ಕಾರದ ನಿರ್ಧಾರ ಖಂಡಿಸಿದ ಕಾಂಗ್ರೆಸ್‌, ಮೂಲ ಮಸೂದೆಯನ್ನು ಸಂಪೂರ್ಣವಾಗಿ ರದ್ದುಗೊಳಿಸದೇ ತಿದ್ದುಪಡಿಗಳನ್ನು ಮಾಡಬಹುದಿತ್ತು ಎಂದು ಆಗ್ರಹಿಸಿತು. ನಂತರ ಸರ್ಕಾರದ ನಿರ್ಧಾರ ವಿರೋಧಿಸಿ ಸಭಾತ್ಯಾಗ ಮಾಡಿತು. ಎಐಯುಡಿಎಫ್ ಶಾಸಕರೂ ಸಹ ಅಸ್ಸಾಂ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸದನದ ಬಾವಿಗಿಳಿದು ಧರಣಿ ನಡೆಸಿದರು. ಇದ್ಯಾವುದನ್ನೂ ಪರಿಗಣಿಸದೇ ಸ್ಪಿಕರ್‌ ಸದನದ ಪಟ್ಟಿಮಾಡಿದ ವ್ಯವಹಾರವನ್ನು ಮುಂದುವರಿಸಿದ್ದರಿಂದ ಎಐಯುಡಿಎಫ್‌ ಶಾಸಕರೂ ಸಭಾತ್ಯಾಗ ಮಾಡಿದರು. ವಿರೋಧ ಪಕ್ಷದ ಸಿಪಿಐ(ಎಂ) ಶಾಸಕ ಮತ್ತು ಏಕೈಕ ಪಕ್ಷೇತರ ಶಾಸಕರು ಸದನದಲ್ಲಿ ಇದ್ದರು. ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲೂ ಕಾಂಗ್ರೆಸ್‌ಗೆ ಶಾಕ್- ಇಬ್ಬರು ಶಾಸಕರು ಬಿಜೆಪಿ ಸೇರ್ಪಡೆ

    ಕಳೆದ ಶುಕ್ರವಾರ ಅಸ್ಸಾಂ ಸಂಪುಟ ಅಸ್ಸಾಂ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ – 1935’ ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳಿಗೆ ಸಂಬಂಧಿಸಿದ ಎಲ್ಲಾ ವಿಷಯಗಳು ಈಗ ವಿಶೇಷ ವಿವಾಹ ಕಾಯ್ದೆಯ ಅಡಿಯಲ್ಲಿಯೇ ಬರುತ್ತವೆ. ಇದು ಯುಸಿಸಿ ಸಾಧಿಸುವತ್ತ ಒಂದು ಹೆಜ್ಜೆ ಎಂದು ಸಂಪುಟ ಸಚಿವರು ಬಣ್ಣಿಸಿದ್ದರು. ಇದನ್ನೂ ಓದಿ: ಯುಪಿಯಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ; ಅಖಿಲೇಶ್‌ ಯಾದವ್‌ ಜೊತೆ ರಾಹುಲ್‌ ಗಾಂಧಿ ಸೆಲ್ಫಿ