Tag: assassination

  • ಸಿಧು ಮೂಸೆ ವಾಲಾ ಹತ್ಯೆ: ತನಿಖೆ ವೇಳೆ ಶಾಕಿಂಗ್ ವಿಚಾರ ಬಯಲು

    ಸಿಧು ಮೂಸೆ ವಾಲಾ ಹತ್ಯೆ: ತನಿಖೆ ವೇಳೆ ಶಾಕಿಂಗ್ ವಿಚಾರ ಬಯಲು

    ಚಂಡೀಗಢ: ಪಂಜಾಬಿನ ಖ್ಯಾತ ಗಾಯಕ ಮತ್ತು ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ಶಾಕಿಂಗ್ ವಿಚಾರ ಬಯಲಿಗೆ ಬಂದಿದೆ.

    ಮೂಸೆ ವಾಲಾ ಅವರನ್ನು ಎಕೆ 47 ಬಳಸಿ ಹತ್ಯೆ ಮಾಡಲಾಗಿತ್ತು ಎಂದು ಅಂದಾಜಿಸಲಾಗಿತ್ತು. ಆದರೆ ಪೊಲೀಸರು ತನಿಖೆ ಮಾಡುವ ವೇಳೆ ಖಾಲಿ ಗುಂಡು ಸಿಕ್ಕಿದೆ. ಇದನ್ನು ಪೊಲೀಸರು ಪರಿಶೀಲನೆ ಮಾಡಿದಾಗ ಅದು ರಷ್ಯಾದ ಎಎನ್-94 ರೈಫಲ್ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಮೂಸೆ ವಾಲಾ ಅವರನ್ನು ಹಂತಕರು ಪ್ಲಾನ್ ಮಾಡಿ, ಪ್ರತ್ಯೇಕವಾದಿಗಳನ್ನು ಸಂಪರ್ಕಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರಿಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಶ್ರೀರಂಗಪಟ್ಟಣದಲ್ಲಿ ಹೈ ಅಲರ್ಟ್ – ಜಾಮೀಯಾ ಮಸೀದಿ ಸುತ್ತ 144 ನಿಷೇಧಾಜ್ಞೆ ಜಾರಿ

    ಈ ದುಷ್ಕರ್ಮಿಗಳಿಗೆ ರಷ್ಯಾದ ಎಎನ್-94 ರೈಫಲ್ ಹೇಗೆ ಸಿಕ್ಕಿತು. ಅದರಲ್ಲಿಯೂ ಪಂಜಾಬ್‍ಗೆ ರಷ್ಯಾ ರೈಫಲ್ ಹೇಗೆ ಬಂತು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಯಾಕಂದ್ರೆ ಈ ರೈಫಲ್‍ಗಳನ್ನು ರಷ್ಯಾಸೇನಾ ಪಡೆ ಮಾತ್ರ ಬಳಸುತ್ತದೆ. ಐರಿಷ್ ರಿಪಬ್ಲಿಕ್ ಆರ್ಮಿ ಎಂಬ ಪ್ರತ್ಯೇಕವಾದಿ ಪಡೆಯ ಬಳಿಯೂ ಈ ರೈಫಲ್ ಇವೆ.

    ಕೆನಡಾದಲ್ಲಿರುವ ಗೋಲ್ಡಿ ಬ್ರಾರ್ ಎನ್ನುವ ಗ್ಯಾಂಗ್‍ಸ್ಟರ್ ನೆರವಿನಿಂದ ಹಂತಕರು ಈ ರೈಫಲ್ ಸಂಪಾದಿಸಿರಬಹುದು ಎಂದು ತನಿಖಾ ಸಂಸ್ಥೆಗಳು ಭಾವಿಸುತ್ತಿವೆ. ಆದರೆ ಈ ಕುರಿತು ಖಚಿತ ಮಾಹಿತಿ ದೊರೆತಿಲ್ಲ. ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

  • 6 ವರ್ಷ ಜೈಲು ವಾಸದ ಬಳಿಕ ಬಿಡುಗಡೆಯಾದ ಇಂದ್ರಾಣಿ ಮುಖರ್ಜಿ

    6 ವರ್ಷ ಜೈಲು ವಾಸದ ಬಳಿಕ ಬಿಡುಗಡೆಯಾದ ಇಂದ್ರಾಣಿ ಮುಖರ್ಜಿ

    ನವದೆಹಲಿ: ಸುಪ್ರಿಂ ಕೋರ್ಟ್ ಬುಧವಾರ ಐಎನ್‌ಎಕ್ಸ್ ಕಂಪನಿ ಮಾಲಕಿ ಇಂದ್ರಾಣಿ ಮುಖರ್ಜಿಗೆ ಜಾಮೀನು ಮಂಜೂರು ಮಾಡಿದ್ದು, ಶುಕ್ರವಾರ ಜೈಲಿನಿಂದ ಹೊರಬಂದಿದ್ದಾರೆ.

    ಇಂದ್ರಾಣಿ ಮುಖರ್ಜಿ ತನ್ನ ಪುತ್ರಿ ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ, 2015ರಲ್ಲಿ ಜೈಲು ಸೇರಿದ್ದರು. ಇದೀಗ 6 ವರ್ಷಗಳ ಜೈಲು ವಾಸ ಅನುಭವಿಸಿ, ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದಾರೆ.

    ಜೈಲಿನಿಂದ ಹೊರಬರುತ್ತಲೇ ಮಾಧ್ಯಮದೊಂದಿಗೆ ಮಾತನಾಡಿದ ಇಂದ್ರಾಣಿ ಮುಖರ್ಜಿ, ತೆರೆದ ಆಕಾಶವನ್ನು ನೋಡುತ್ತಾ ಬಹಳ ಸಂತೋಷವಾಗುತ್ತಿದೆ. ನಾನು ಜೈಲಿನಲ್ಲಿ ಬಹಳಷ್ಟು ಕಲಿತಿದ್ದೇನೆ. ಮುಂದಿನ ಸಂದರ್ಶನದಲ್ಲಿ ಅದರ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.

    ಬುಧವಾರ ಸುಪ್ರೀಂ ಕೋರ್ಟ್ ಇಂದ್ರಾಣಿ ಮುಖರ್ಜಿಗೆ 2 ಲಕ್ಷ ರೂ. ಶ್ಯೂರಿಟಿ ಮತ್ತು ತನಿಖಾಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕೆಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: ಪಿಎಸ್‍ಐ ಅಕ್ರಮ – ದಿವ್ಯಾ ಹಾಗರಗಿ ಸೇರಿ ನಾಲ್ವರಿಗೆ ಜಾಮೀನು ನಿರಾಕರಿಸಿದ ಕೋರ್ಟ್

    ಆರೋಪ ಏನು?
    2012 ಏಪ್ರಿಲ್ 24 ರಂದು ಇಂದ್ರಾಣಿ ಮುಖರ್ಜಿ, ಕಾರು ಚಾಲಕ ಶ್ಯಾಮ್‌ವರ್ ರೈ ಮತ್ತು ಮಾಜಿ ಪತಿ ಸಂಜೀವ್ ಖನ್ನಾ ಸೇರಿ ಶೀನಾ ಬೋರಾಳನ್ನು ಹತ್ಯೆ ಮಾಡಿದ್ದರು. ಪುತ್ರಿಯ ಶವವನ್ನು ರಾಯಗಢ ಜಿಲ್ಲೆಯ ಕಾಡಿನಲ್ಲಿ ಎಸೆದು ಸುಟ್ಟು ಹಾಕಲಾಗಿದೆ ಎಂಬ ಆರೋಪ ಇಂದ್ರಾಣಿ ಮುಖರ್ಜಿ ಮೇಲಿದೆ. ಇದನ್ನೂ ಓದಿ: ಕೇಂದ್ರ ಕಾರಾಗೃಹದಲ್ಲಿ ವೀರ ಸಾವರ್ಕರ್ ಪುಸ್ತಕ ಇಡಲು ಹೈಕೋರ್ಟ್ ನ್ಯಾಯಮೂರ್ತಿ ಸೂಚನೆ

    ಈ ಸಂಬಂಧ 2015ರಲ್ಲಿ ಮುಂಬೈ ಪೊಲೀಸರು ಇಂದ್ರಾಣಿ ಮುಖರ್ಜಿಯನ್ನು ಬಂಧಿಸಿದ್ದರು. ಹೈ ಪ್ರೊಫೈಲ್ ಪ್ರಕರಣದ ಹಿನ್ನೆಲೆ ಇದರ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು.

  • ಗುಂಡಿನ ದಾಳಿ ನಡೆಸಿ ಕಾಶ್ಮೀರಿ ಪಂಡಿತನನ್ನು ಹತ್ಯೆಗೈದ ಉಗ್ರರು

    ಗುಂಡಿನ ದಾಳಿ ನಡೆಸಿ ಕಾಶ್ಮೀರಿ ಪಂಡಿತನನ್ನು ಹತ್ಯೆಗೈದ ಉಗ್ರರು

    ಶ್ರೀನಗರ: ಕಾಶ್ಮೀರಿ ಪಂಡಿತರೊಬ್ಬರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಕಂದಾಯ ಇಲಾಖೆಯ ಕಚೇರಿಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

    ಕಾಶ್ಮೀರಿ ಪಂಡಿತ್ ಸಮುದಾಯದ ರಾಹುಲ್ ಭಟ್ ಹತ್ಯೆಗೀಡಾದ ವ್ಯಕ್ತಿ. ಮೃತರು ಕಂದಾಯ ಇಲಾಖೆಯ ನೌಕರರಾಗಿದ್ದರು. ಕೇಂದ್ರ ಕಾಶ್ಮೀರದ ಚದೂರದಲ್ಲಿರುವ ತಹಸೀಲ್ದಾರ್ ಕಚೇರಿಯಲ್ಲಿಯೇ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡಿ ಸಾವನ್ನಪ್ಪಿದ್ದಾರೆ.

    ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿ, ಬುದ್ಗಾಮ್‍ನ ತಹಸೀಲ್ದಾರ್ ಕಚೇರಿ ಚದೂರದಲ್ಲಿ ಅಲ್ಪಸಂಖ್ಯಾತ ಸಮುದಾಯದ ರಾಹುಲ್ ಭಟ್ ಎಂಬ ನೌಕರನ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೇಲ್‌ನಿಂದ ಹೊರಬಂದು ಮದುವೆಯಾಗು ಎಂದ – ರೌಡಿ ಅಂತ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರೇಯಸಿಯನ್ನೇ ಕೊಂದ

    ಘಟನೆಯ ನಂತರ, ಭದ್ರತಾ ಪಡೆಗಳು ಘಟನೆ ನಡೆದ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಘಟನೆಯ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಅಶ್ವನಿ ಹಂಡಾ, ಕಣಿವೆಯಲ್ಲಿ ಕಾಶ್ಮೀರಿ ಪಂಡಿತರಿಗೆ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ತಾಜ್‌ ಮಹಲ್‌ ಹಿಂದೆ ʼತೇಜೋ ಮಹಾಲಯʼವಾಗಿತ್ತು, ಅಲ್ಲಿ ಹಿಂದೂ ವಿಗ್ರಹಗಳಿವೆ – ತನಿಖೆಗಾಗಿ ಕೋರ್ಟ್‌ಗೆ ಮನವಿ

    ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದರು

  • ಕ್ಷುಲ್ಲಕ ವಿಚಾರಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ?

    ಕ್ಷುಲ್ಲಕ ವಿಚಾರಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ?

    ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಪತಿಯೇ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ದಾಸ್ ಪೇಟೆಯಲ್ಲಿರುವ ಅನ್ನಪೂರ್ಣೇಶ್ವರಿ ಲೇಔಟ್‌ನಲ್ಲಿ ನಡೆದಿದೆ.

    ತುಮಕೂರು ಜಿಲ್ಲೆ ನಂದಿಹಳ್ಳಿ ಮೂಲದ ವನಿತಾ(25) ಮೃತ ದುರ್ದೈವಿಯಾಗಿದ್ದು, ಆಕೆಯನ್ನು ಪತಿಯೇ ಕ್ಷುಲ್ಲಕ ವಿಚಾರಕ್ಕೆ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಈ ಬಾರಿಯಾದ್ರೂ ಸಿಐಡಿ ವಿಚಾರಣೆಗೆ ಹಾಜರಾಗ್ತಾರಾ ಪ್ರಿಯಾಂಕ್ ಖರ್ಗೆ?

    ವನಿತಾ ಹಾಗೂ ರಾಮು ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದರು. ವನಿತಾಗೆ ಪತಿ ರಾಮು ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಶತ್ರುಘ್ನಾ ಸಿನ್ಹಾ ಮೇಲೆ ಲೈಂಗಿಕ ಹಗರಣ ದಂಧೆ ಆರೋಪ : ನಟಿ ವಿರುದ್ಧ ತಿರುಗಿ ಬಿದ್ದ ಸಿನ್ಹಾ ಕುಟುಂಬ

    ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ರಾಮುನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

  • ಶಿವಮೊಗ್ಗದಲ್ಲಿ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು – ಮೂವರು ಅರೆಸ್ಟ್

    ಶಿವಮೊಗ್ಗದಲ್ಲಿ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು – ಮೂವರು ಅರೆಸ್ಟ್

    ಶಿವಮೊಗ್ಗ: ನಗರದಲ್ಲಿ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸಿದ್ದ ಮೂವರು ಅನ್ಯಕೋಮಿನ ಯುವಕರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಸಲ್ಮಾನ್, ಅಬ್ಬಾಸ್, ಉಸ್ಮಾನ್ ಬಂಧಿತ ಆರೋಪಿಗಳು. ಯುವಕರು ಹಿಂದೂಪರ ಸಂಘಟಿತ ಕಾರ್ಯಕರ್ತ ಭರತ್ ಎಂಬಾತನ ಕೊಲೆಗೆ ಸಂಚು ರೂಪಿಸಿದ್ದರು. ಈ ಮೂವರ ಗುಂಪು ನಗರದ ನ್ಯೂ ಮಂಡ್ಲಿ ಬಡಾವಣೆ ಬಳಿ ಭರತ್ ಸಹೋದರನನ್ನು ಅಡ್ಡ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಭರತ್ ಎಲ್ಲಿದ್ದಾನೆ ಎಂಬುದರ ಬಗ್ಗೆ ಪ್ರಶ್ನಿಸಿದ್ದಾರೆ.

    ಈ ಕುರಿತು ಭರತ್ ಸಹೋದರ ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದಾರೆ. ಕಾರ್ಯ ಪ್ರವೃತ್ತರಾದ ಪೊಲೀಸರಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಯುವಕರ ತಂಡವು ಈ ಹಿಂದೆ ಸಹ ಹರ್ಷ್‍ನ ಹತ್ಯೆ ಪ್ರತೀಕಾರವಾಗಿ ಅನ್ಯಕೋಮಿನ ಯುವಕನ ಹತ್ಯೆಗೆ ಸಂಚು ರೂಪಿಸಿದ್ದರು. ಪೊಲೀಸರ ಕಾರ್ಯಾಚರಣೆಯಿಂದ ಎರಡು ಹತ್ಯೆಯ ಸಂಚು ವಿಫಲವಾಗಿವೆ.

  • ಕಲಬುರ್ಗಿ ಹತ್ಯೆ ಪ್ರಕರಣ – ಸಾಕ್ಷಿ ನುಡಿದ ಮಗಳು, ಪತ್ನಿ

    ಕಲಬುರ್ಗಿ ಹತ್ಯೆ ಪ್ರಕರಣ – ಸಾಕ್ಷಿ ನುಡಿದ ಮಗಳು, ಪತ್ನಿ

    ಧಾರವಾಡ: ಹಿರಿಯ ಸಾಹಿತಿ ಡಾ. ಎಂಎಂ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ 6 ಆರೋಪಿಗಳ ಪೈಕಿ ಐವರನ್ನು ಗುರುವಾರ ಧಾರವಾಡ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಸಾಕ್ಷಿ ವಿಚಾರಣೆ ನಡೆಸಲಾಯಿತು.

    2015ರ ಆಗಸ್ಟ್ 30ರಂದು ಬೆಳಗಿನ ಜಾವ ಕಲಬುರ್ಗಿ ಧಾರವಾಡದ ಕಲ್ಯಾಣನಗರದಲ್ಲಿರುವ ತಮ್ಮ ಮನೆಯಲ್ಲಿ ಕುಳಿತಿದ್ದಾಗ, ಮನೆಗೆ ಬಂದ ಹಂತಕರು ಬಾಗಿಲು ಬಡಿದಿದ್ದರು. ಈ ವೇಳೆ ಹೊರಗೆ ಬಂದು ಬಾಗಿಲು ತೆಗೆಯುತ್ತಿದ್ದಂತೆಯೇ ಕಲಬುರ್ಗಿ ತಲೆಗೆ ಗುಂಡು ಹೊಡೆದು ಆರೋಪಿಗಳು ಬೈಕ್ ಹತ್ತಿ ಪರಾರಿಯಾಗಿದ್ದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ಆರೋಪಿಗಳಾದ ಹುಬ್ಬಳ್ಳಿಯ ಅಮಿತ್ ಬದ್ದಿ, ಗಣೇಶ ಮಿಸ್ಕಿನ್, ಬೆಳಗಾವಿಯ ಪ್ರವೀಣ್ ಚತುರ್ ಹಾಗೂ ವಾಸುದೇವ್ ಸೂರ್ಯವಂಶಿ ಸೇರಿದಂತೆ ಇನ್ನೊರ್ವನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದನ್ನೂ ಓದಿ: ಜೇಮ್ಸ್ ರಿಲೀಸ್ ಬಳಿಕ ಅಪ್ಪು ನೆನೆದು ಕಣ್ಣೀರಿಟ್ಟ ಶಿವಣ್ಣ

    ಕಣ್ಣೀರು ಹಾಕುತ್ತಾ ಸಾಕ್ಷ್ಯ ನುಡಿದ ಕಲಬುರ್ಗಿ ಪುತ್ರಿ: 
    ಈ ವೇಳೆ ಪ್ರಕರಣದಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಗಿರುವ ಹಾಗೂ ಹತ್ಯೆ ನಡೆದ ದಿನ ಅಂದು ಮನೆಯಲ್ಲಿದ್ದ ಕಲಬುರ್ಗಿ ಪುತ್ರಿ ರೂಪದರ್ಶಿಗೆ ಆರೋಪಿಗಳನ್ನು ಗುರುತಿಸುವಂತೆ ಸೂಚಿಸಲಾಯಿತು. ಇದಕ್ಕೂ ಮೊದಲು ಅಂದು ನಡೆದ ಘಟನೆಯನ್ನು ನ್ಯಾಯಾಧೀಶರ ಮುಂದೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕಲಬುರ್ಗಿ ಪುತ್ರಿ ತಂದೆಯನ್ನು ನೆನೆದು ನ್ಯಾಯಾಧೀಶರ ಎದುರು ಕಣ್ಣೀರು ಹಾಕಿದರು.

    ಅಂದು ಗುಂಡು ಹೊಡೆದು ಪರಾರಿಯಾಗಿದ್ದ ಗಣೇಶ ಮಿಸ್ಕಿನ್‌ನನ್ನು ಗುರುತಿಸುವ ವೇಳೆ ರೂಪದರ್ಶಿ ಕಣ್ಣೀರು ಹಾಕಿ ಬಳಿಕ ಆಕ್ರೋಶದಿಂದ ಇವನೇ ಗುಂಡು ಹೊಡೆದಿದ್ದು ಎಂದು ಹೇಳಿದರು. ಹೊರಗಡೆ ರಸ್ತೆಯಲ್ಲಿ ಬೈಕ್ ಮೇಲೆ ನಿಂತಿದ್ದ ಮತ್ತೋರ್ವ ಆರೋಪಿ ಪ್ರವೀಣ್ ಚತುರ್‌ನನ್ನು ಕೂಡಾ ರೂಪದರ್ಶಿ ಗುರುತಿಸಿದರು.

    ಈ ವಿಚಾರದ ಕುರಿತು ಸಮಗ್ರವಾದ ವಾದ-ವಿವಾದ ನಡೆದ ಬಳಿಕ ಕಲಬುರ್ಗಿ ಪತ್ನಿ ಉಮಾದೇವಿಯ ಸಾಕ್ಷ್ಯದ ವಿಚಾರಣೆಯನ್ನೂ ನಡೆಸಲಾಯಿತು. ಈ ವೇಳೆ ಸಾಕ್ಷಿಗಳನ್ನು ಏಕಕಾಲಕ್ಕೆ ಕ್ರಾಸ್ ಮಾಡಲು ತಮಗೆ ಸಿಆರ್‌ಪಿಸಿ 231 ಸೆಕ್ಷನ್ ಅಡಿಯಲ್ಲಿ ಅನುವು ಮಾಡಿಕೊಡುವಂತೆ ಆರೋಪಿಗಳ ಪರ ವಕೀಲ ಅರ್ಜಿ ಸಲ್ಲಿಸಿದರು. ಇದನ್ನೂ ಓದಿ: ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾಗಿದೆ ಅದನ್ನು ಸರಿಪಡಿಸಿ ಪರಿಹಾರ ನೀಡಿ ಅದು ಬಿಟ್ಟು ಪ್ರಚೋದನೆ ಮಾಡಬೇಡಿ: ಖರ್ಗೆ

    ವಿಚಾರಣೆಯಲ್ಲಿ ಕಲಬುರ್ಗಿ ಕೊಲೆ ನಡೆದ ಸಮಯದಲ್ಲಿ ಅವರು ಧರಿಸಿದ್ದ ಶರ್ಟ್, ಬನಿಯನ್, ಪ್ಯಾಂಟ್, ಗುಂಡುಗಡಿಗೆ ಸೇರಿದಂತೆ ಅಂದಿನ ಕೆಲವೊಂದು ವಸ್ತುಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಬಳಿಕ ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಟ್ಟ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು, ವಿಚಾರಣೆಯನ್ನು ಏಪ್ರಿಲ್ 5ಕ್ಕೆ ಮುಂದೂಡಿದರು.

  • ಹಣದ ವ್ಯವಹಾರದಲ್ಲಿ ಅಸಮಾಧಾನ – ರೌಡಿ ಶೀಟರ್ ಹತ್ಯೆ

    ಹಣದ ವ್ಯವಹಾರದಲ್ಲಿ ಅಸಮಾಧಾನ – ರೌಡಿ ಶೀಟರ್ ಹತ್ಯೆ

    ಹುಬ್ಬಳ್ಳಿ: ಇಷ್ಟು ದಿನ ತಣ್ಣಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಮಾರಾಕಾಸ್ತ್ರಗಳು ಸದ್ದು ಮಾಡುತ್ತಿವೆ. ದುಡ್ಡಿನ ವ್ಯವಹಾರದ ಹಿನ್ನಲೆಯಲ್ಲಿ ರೌಡಿ ಶೀಟರ್‌ನನ್ನು ಮಾರಕಾಸ್ತ್ರದಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಅರವಿಂದ ನಗರದ ಪಿಎನ್‌ಟಿ ಕ್ವಾಟರ್ಸ್ ಹಿಂದಿನ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಕ್ಬರ್ ಅಲ್ಲಾಭಕ್ಷ ಮುಲ್ಲಾ ಕೊಲೆಯಾದ ವ್ಯಕ್ತಿ. ಈತ ಮೂಲತಃ ರೌಡಿ ಶೀಟರ್ ಆಗಿದ್ದ. ಸದಾನಂದ ಕುರ್ಲಿ ಎಂಬುವವನ ಜೊತೆಗೆ ಹಣಕಾಸಿನ ವಿಷಯದಲ್ಲಿ ಗುರುವಾರ ರಾತ್ರಿ ಗಲಾಟೆ ನಡೆದಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಜಗಳ ಅತಿರೇಕಕ್ಕೆ ಹೋಗಿದೆ. ಇದನ್ನೂ ಓದಿ: ಕೋವಿಡ್ ರೋಗಿಗಳಿಂದ ಪಡೆದ ಹೆಚ್ಚುವರಿ ಶುಲ್ಕ ಮರು ಪಾವತಿಗೆ ಜಿಲ್ಲಾಧಿಕಾರಿ ಆದೇಶ

    BRIBE

    ಈ ವೇಳೆ ಅಕ್ಬರ್ ಮುಲ್ಲಾ ತಾನು ತಂದಿದ್ದ ಮಚ್ಚಿನಿಂದ ಸದಾನಂದನಿಗೆ ಹಲ್ಲೆ ಮಾಡಲು ಮುಂದಾಗಿದ್ದಾನೆ. ಹಲ್ಲೆಯಿಂದ ತಪ್ಪಿಸಿಕೊಂಡ ಸದಾನಂದ ಅದೇ ಆಯುಧದಿಂದ ಅಕ್ಬರ್ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದಾಗಿ ಅಕ್ಬರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾರ್ ಪಾರ್ಕಿಂಗ್ ವಿಚಾರಕ್ಕೆ 2 ಕುಟುಂಬಗಳ ನಡುವೆ ಮಾರಾಮಾರಿ

  • ಇಬ್ಬರು ಯುಎನ್ ತಜ್ಞರ ಹತ್ಯೆ – 51 ಮಂದಿಗೆ ಮರಣದಂಡನೆ

    ಇಬ್ಬರು ಯುಎನ್ ತಜ್ಞರ ಹತ್ಯೆ – 51 ಮಂದಿಗೆ ಮರಣದಂಡನೆ

    ಕಿನ್ಶಾಸ: ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಮಿಲಿಟರಿ ನ್ಯಾಯಾಲಯ ಶನಿವಾರ ಇಬ್ಬರು ವಿಶ್ವಸಂಸ್ಥೆಯ ತಜ್ಞರ ಹತ್ಯೆಗೈದ 51 ಜನರಿಗೆ ಮರಣದಂಡನೆ ವಿಧಿಸಿದೆ.

    2017ರಲ್ಲಿ ಇಬ್ಬರು ಯುಎನ್ ತಜ್ಞರ ಹತ್ಯೆಯಾಗಿತ್ತು. ಈ ಹತ್ಯೆಗೆ ಸಂಬಂಧ ಪಟ್ಟ 50 ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ವಿಚಾರಣೆಯಲ್ಲಿ ಹಲವರು ನ್ಯಾಯಾಲಯಕ್ಕೆ ಗೈರಾಗುತ್ತಿದ್ದು. ಈಗ ಕೋರ್ಟ್ ಬರೋಬ್ಬರಿ 51 ಮಂದಿಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ.

    2017ರಲ್ಲಿ ಸರ್ಕಾರ ಹಾಗೂ ಸ್ಥಳೀಯ ಗುಂಪಿನ ನಡುವೆ ಸಂಘರ್ಷ ಏರ್ಪಟ್ಟಿತ್ತು. ಈ ಸಂದರ್ಭದಲ್ಲಿ ಅಮೆರಿಕ ಮೂಲದ ಮೈಕೆಲ್ ಶಾರ್ಪ್ ಹಾಗೂ ಚಿಲಿ ಮೂಲದ ಝೈದಾ ಕ್ಯಾಟಲಾನ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಅವರು ಸಾವನ್ನಪ್ಪಿದ 16 ದಿನಗಳ ಬಳಿಕ 2017 ಮಾರ್ಚ್ 28ರಂದು ಶವ ಪತ್ತೆಯಾಗಿತ್ತು. ಇದನ್ನೂ ಓದಿ: ಇರಾಕ್ ಏರ್‌ಸ್ಟ್ರೈಕ್ – 6 ಐಸಿಸ್‌ ಉಗ್ರರ ಹತ್ಯೆ

    2016ರಲ್ಲಿ ಸ್ಥಳೀಯ ಸಾಂಪ್ರದಾಯಿಕ ಮುಖ್ಯಸ್ಥ ಕಮುಯಿನಾ ನ್ಸಾಪು ಅವರ ಹತ್ಯೆಯ ಬಳಿಕ ಈ ಸಂಘರ್ಷ ಪ್ರಾರಂಭವಾಗಿತ್ತು. ಸಂಘರ್ಷದಲ್ಲಿ 3,400 ಜನರು ಪ್ರಾಣ ಬಿಟ್ಟಿದ್ದು, ಸಾವಿರಾರು ಜನರು ಊರು ಬಿಟ್ಟಿದ್ದರು. ಈ ವೇಳೆ ವಿಶ್ವಸಂಸ್ಥೆ ದೇಶದಲ್ಲಿ ಶಾಂತಿ ಸ್ಥಾಪಿಸಲು ಶಾಂತಿಪಾಲನ ಪಡೆಯ ಜೊತೆ ತಜ್ಞರನ್ನು ಕಳುಹಿಸಿಕೊಟ್ಟಿತ್ತು. ಇದನ್ನೂ ಓದಿ: ಅಮೆರಿಕದಲ್ಲಿ ಭಾರಿ ಹಿಮಪಾತದ ಸುಳಿವು – ನ್ಯೂಯಾರ್ಕ್ ಸೇರಿ ಹಲವೆಡೆ ತುರ್ತು ಪರಿಸ್ಥಿತಿ ಘೋಷಣೆ

    ವಿಶ್ವಸಂಸ್ಥೆಯ ವಿರುದ್ಧ ಸೇಡು ತೀರಿಸಿಕೊಳ್ಳಲು ಇಬ್ಬರು ಯುಎನ್ ತಜ್ಞರ ಹತ್ಯೆಗೈಯಲಾಗಿತ್ತು. ಶಿಕ್ಷೆ ಒಳಗಾದವರ ಪೈಕಿ 22 ಮಂದಿ ಪರಾರಿಯಾಗಿದ್ದಾರೆ.

  • ಶಂಕಿತ ಉಗ್ರರ ಗುಂಡಿಗೆ ಪೊಲೀಸ್ ಅಧಿಕಾರಿ ಸಾವು

    ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಸನಾವೋದಲ್ಲಿ ಶನಿವಾರ ನಡೆದ ಶಂಕಿತ ಉಗ್ರರ ದಾಳಿಯಲ್ಲಿ ಹೆಡ್ ಕಾನ್‍ಸ್ಟೇಬಲ್ ಅಲಿ ಮೊಹಮ್ಮದ್ ಗನಿ ಹತ್ಯೆಯಾಗಿದ್ದಾರೆ.

    ಹೆಡ್ ಕಾನ್‍ಸ್ಟೇಬಲ್ ಮೊಹಮ್ಮದ್ ಗನಿ ಅವರನ್ನು ಕುಲ್ಗಾಮ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ದಾಳಿ ವೇಳೆ ಗನಿ ಅವರಿಗೆ ಗುಂಡು ತಗುಲಿತ್ತು. ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

    ಮೂರು ವಾರಗಳ ಹಿಂದೆ ಕಾಶ್ಮೀರದ ಇದೇ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‍ನಲ್ಲಿ ಇಬ್ಬರು ಉಗ್ರರು ಹತರಾಗಿದ್ದರು. ಇದನ್ನೂ ಓದಿ: ಡ್ರಗ್ಸ್ ಪ್ರಕರಣದಲ್ಲಿ ಸುಶಾಂತ್ ಸಿಂಗ್ ನೆರೆಮನೆಯಾತನ ಬಂಧನ

    ಭದ್ರತಾ ಸಿಬ್ಬಂದಿ ಮೇಲೆ ಗ್ರೆನೇಡ್ ದಾಳಿ:
    ಇದೇ ಸಂದರ್ಭದಲ್ಲಿ ಶ್ರೀನಗರದ ಮಹಾರಾಜ್ ಬಜಾರ್ ಪ್ರದೇಶದಲ್ಲಿ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ಸದ್ಯ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೆಗಾಸಸ್ ಖರೀದಿಸಿ ಮೋದಿ ಸರ್ಕಾರ ದೇಶದ್ರೋಹ ಮಾಡಿದೆ: ರಾಹುಲ್ ಗಾಂಧಿ

    ಶನಿವಾರ ಸಂಜೆ ಸುಮಾರು 4.30ರ ವೇಳೆಗೆ ಸಿಆರ್‍ಪಿಎಫ್ ತಂಡ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಗ್ರೆನೇಡ್ ದಾಳಿ ನಡೆದಿತ್ತು. ದಾಳಿ ನಡೆದಿರುವ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ದಾಳಿಕೋರರನ್ನು ಹಿಡಿಯಲು ಪ್ರಯತ್ನಿಸುತ್ತಿದ್ದಾರೆ.

  • ಮಾಜಿ ಸೈನಿಕರನ್ನು ಹತ್ಯೆಗೈದ ತಾಲಿಬಾನಿಗಳ ವಿರುದ್ಧ ಅಫ್ಘಾನ್ ಮಹಿಳೆಯರ ಪ್ರತಿಭಟನೆ

    ಮಾಜಿ ಸೈನಿಕರನ್ನು ಹತ್ಯೆಗೈದ ತಾಲಿಬಾನಿಗಳ ವಿರುದ್ಧ ಅಫ್ಘಾನ್ ಮಹಿಳೆಯರ ಪ್ರತಿಭಟನೆ

    ಕಾಬೂಲ್: ಯುಎಸ್ ಬೆಂಬಲಿತ ಆಡಳಿತದಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ತಾಲಿಬಾನಿಗಳು ರಹಸ್ಯವಾಗಿ ಕೊಂದಿದ್ದಾರೆ ಎಂದು ಆರೋಪಿಸಿ ಮಹಿಳೆಯರ ಗುಂಪೊಂದು ಮಂಗಳವಾರ ಅಫ್ಘಾನ್ ರಾಜಧಾನಿ ಕಾಬೂಲ್ ನಲ್ಲಿ ಪ್ರತಿಭಟನೆ ನಡೆಸಿದೆ.

    ಕಾಬೂಲ್‍ನ ಮಧ್ಯಭಾಗದಲ್ಲಿರುವ ಮಸೀದಿಯೊಂದರ ಬಳಿ ಸುಮಾರು 30 ಮಹಿಳೆಯರು ಜಮಾಯಿಸಿದ್ದು, ತಾಲಿಬಾನ್ ಪಡೆಗಳ ವಿರುದ್ಧ ‘ನ್ಯಾಯಬೇಕು’ ಎಂದು ಘೋಷಣೆಗಳನ್ನು ಕೂಗುತ್ತಾ ನೂರು ಮೀಟರ್ ಮೆರವಣಿಗೆ ನಡೆಸಿದ್ದಾರೆ.

    ತಾಲಿಬಾನಿಗಳು ಯುವಕರನ್ನು ನಿಗೂಢವಾಗಿ ಹತ್ಯೆ ಮಾಡಿದ್ದಾರೆ. ಅಲ್ಲದೇ ದೇಶದ ಮಾಜಿ ಸೈನಿಕರನ್ನು ಹತ್ಯೆ ಮಾಡಿದ್ದಾರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವಿಚಾರವನ್ನು ಮಾಧ್ಯಮಗಳು ಪ್ರಕಟಿಸಬಾರದು ಎಂದು ತಾಲಿಬಾನ್ ಪ್ರಯತ್ನಿಸಿತ್ತು. ಇದಕ್ಕೆ ತಾಲಿಬಾನಿಗಳು ವರದಿಗಾರರನ್ನು ಮತ್ತು ಛಾಯಾಗ್ರಾಹಕರ ಉಪಕರಣಗಳನ್ನು ವಶಪಡಿಸಿಕೊಂಡಿದ್ದರು. ಕ್ಯಾಮರಾವನ್ನು ಹಿಂದಿರುಗಿಸುವ ಮೊದಲು ಎಲ್ಲ ಫೋಟೋಗಳನ್ನು ಡಿಲೀಟ್ ಮಾಡಿ ಅವರಿಗೆ ಕೊಟ್ಟಿದ್ದರು. ಇದನ್ನೂ ಓದಿ: ಪುರುಷ ಸಂಬಂಧಿಗಳು ಜೊತೆಯಲ್ಲಿ ಇಲ್ಲದಿದ್ರೆ ಮಹಿಳೆಯರು ದೂರ ಪ್ರಯಾಣಿಸುವಂತಿಲ್ಲ: ತಾಲಿಬಾನ್‌

    ಅಮ್ನೆಸ್ಟಿ ಇಂಟರ್‍ನ್ಯಾಶನಲ್ ಮತ್ತು ಹ್ಯೂಮನ್ ರೈಟ್ಸ್ ವಾಚ್, ತಾಲಿಬಾನ್ ಅಧಿಕಾರವನ್ನು ಸ್ವಾಧೀನಪಡಿಸಿಕೊಂಡ ನಂತರ 100 ಕ್ಕೂ ಹೆಚ್ಚು ಕಾನೂನುಬಾಹಿರ ಹತ್ಯೆಗಳು ಅಫ್ಘಾನ್ ನಲ್ಲಿ ನಡೆದಿದೆ ಎಂಬ ಆರೋಪಗಳಿವೆ ಎಂದು ವಿಶ್ವಸಂಸ್ಥೆ ವರದಿ ಮಾಡಿತ್ತು. ಈ ಹಿನ್ನೆಲೆ ಮಂಗಳವಾರ ತಾಲಿಬಾನ್ ವಿರುದ್ಧ ಪ್ರತಿಭಟನೆ ಮಾಡಲಾಗಿದೆ.

    ಪ್ರತಿಭಟನಾಕಾರರಾದ ನಯೆರಾ ಕೊಹಿಸ್ತಾನಿ, ತಾಲಿಬಾನಿಗಳು ತಮ್ಮ ದೌರ್ಜನ್ಯವನ್ನು ನಿಲ್ಲಿಸಬೇಕು. ನಮಗೆ ಸ್ವಾತಂತ್ರ್ಯ ಬೇಕು, ನಮಗೆ ನ್ಯಾಯ ಬೇಕು. ನಮಗೆ ಮಾನವ ಹಕ್ಕುಗಳು ಬೇಕು ಎಂದು ಆಗ್ರಹಿಸಿದ್ದಾರೆ.

    ಆಗಸ್ಟ್‍ನಲ್ಲಿ ತಾಲಿಬಾನ್ ಘೋಷಿಸಿದ ಸಾಮಾನ್ಯ ಕ್ಷಮಾದಾನವನ್ನು ಉಲ್ಲಂಘಿಸಿ, ಮಾಜಿ ಸೈನಿಕರು ಮತ್ತು ಸರ್ಕಾರಿ ನೌಕರರನ್ನು ತಾಲಿಬಾನಿಗಳು ಹತ್ಯೆ ಮಾಡಲಾಗಿದೆ. ಅಲ್ಲದೇ ತಾಲಿಬಾನ್ ಆಳ್ವಿಕೆಯ ಅಡಿಯಲ್ಲಿ ಮಹಿಳೆಯರಿಗೆ ಹಲವು ನಿರ್ಬಂಧಗಳಿವೆ. ಇದರಿಂದ ಅವರು ಜೀವಿಸಲು ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಂದು ಬಂದ್‌ ಬದಲಿಗೆ ಬೃಹತ್‌ ರ‍್ಯಾಲಿ – MES ನಿಷೇಧಕ್ಕೆ ಸರ್ಕಾರಕ್ಕೆ ಗಡುವು

    ವಾರಾಂತ್ಯದಲ್ಲಿ ತಾಲಿಬಾನ್ ಸರ್ಕಾರವು, ಮಹಿಳೆಯರು ಪುರುಷ ಸಂಬಂಧಿ ಬೆಂಗಾವಲು ಹೊರತು ದೂರದ ಪ್ರಯಾಣವನ್ನು ನಿಷೇಧಿಸಲಾಗಿದೆ ಎಂದು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಇದರಿಂದ ಆಕ್ರೋಶಗೊಂಡ ಮಹಿಳೆಯರು, ನಮ್ಮ ಹಕ್ಕುಗಳು ಮಾನವ ಹಕ್ಕುಗಳಾಗಿವೆ. ನಾವು ನಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದ್ದಾರೆ.