Tag: assaulted

  • ಆಸ್ತಿಗಾಗಿ ಜಗಳ- ಮಲಗಿದ್ದ ತಮ್ಮನ ಮೇಲೆ ಹಲ್ಲೆ ಮಾಡಿ ಕೊಂದ ಅಣ್ಣ

    ಆಸ್ತಿಗಾಗಿ ಜಗಳ- ಮಲಗಿದ್ದ ತಮ್ಮನ ಮೇಲೆ ಹಲ್ಲೆ ಮಾಡಿ ಕೊಂದ ಅಣ್ಣ

    ಮೈಸೂರು: ಆಸ್ತಿ ವಿಚಾರವಾಗಿ ಒಡಹುಟ್ಟಿದ ತಮ್ಮನನ್ನೇ ಅಣ್ಣ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗೋವಿಂದ ನಾಯ್ಕ(35) ಕೊಲೆಯಾದ ದುರ್ದೈವಿ. ಹತ್ಯೆ ಮಾಡಿದ ಅಣ್ಣ ರಂಗಸ್ವಾಮಿ ನಾಪತ್ತೆಯಾಗಿದ್ದಾನೆ. ನಂಜನಗೂಡು ತಾಲ್ಲೂಕಿನ ದೊಡ್ಡಕೌಲಂದೆ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಕಲಬುರಗಿ ವಿವಿ ಆವರಣದಲ್ಲಿ ರಾಮನವಮಿ ಆಚರಿಸ್ತಿದ್ದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

    ಕೊಲೆಯಾದ ಗೋವಿಂದ ನಾಯ್ಕ ಮತ್ತು ಕೊಲೆ ಆರೋಪಿ ಅಣ್ಣ ರಂಗಸ್ವಾಮಿ ನಡುವೆ ಪದೇ ಪದೆ ಜಾಗದ ವಿಚಾರಕ್ಕೆ ಘರ್ಷಣೆ ನಡೆಯುತ್ತಿತ್ತು. ಮೊನ್ನೆ ರಾತ್ರಿ ಮನೆಯ ಮುಂಭಾಗದಲ್ಲಿದ್ದ ಶೌಚಾಲಯದ ಕೊಠಡಿಯ ಬೀಗ ಒಡೆದ ಎಂದು ಆರೋಪಿ ಅಣ್ಣ ಖ್ಯಾತೆ ತೆಗೆದು ಜಗಳಕ್ಕೆ ಮುಂದಾಗಿದ್ದಾನೆ. ಗೋವಿಂದ ನಾಯ್ಕ ಮತ್ತು ಆರೋಪಿ ಅಣ್ಣನ ನಡುವೆ ಮಾತಿನ ಚಕಮಕಿ ನಡೆಯುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಜಗಳ ಬಿಡಿಸಿದ್ದರು. ಇದನ್ನೂ ಓದಿ: ಮುಸ್ಕಾನ್‍ರನ್ನು ತನಿಖೆ ನಡೆಸುವಂತೆ ಸಿಎಂಗೆ ಅನಂತ್‍ಕುಮಾರ್ ಹೆಗ್ಡೆ ಪತ್ರ

    POLICE JEEP

    ಮತ್ತೆ ರಾತ್ರಿ ಹನ್ನೊಂದು ಗಂಟೆಯ ಸಮಯದಲ್ಲಿ ಮನೆಯಲ್ಲಿ ಗೋವಿಂದನಾಯ್ಕ ಮಲಗಿರುವ ಸಂದರ್ಭದಲ್ಲಿ ಏಕಾಏಕಿ ಮಚ್ಚಿನಿಂದ ಅಣ್ಣ ರಂಗಸ್ವಾಮಿ ಹಲ್ಲೆ ಮಾಡಿದ್ದಾನೆ. ತಲೆಯ ಭಾಗಕ್ಕೆ ಮತ್ತು ಕುತ್ತಿಗೆಯ ಭಾಗಕ್ಕೆ ಮಚ್ಚಿನಿಂದ ಬರ್ಬರವಾಗಿ ಹಲ್ಲೆ ಮಾಡಿದ ಪರಿಣಾಮ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದು ಗೋವಿಂದ ನರಳಾಡುತ್ತಿದ್ದನು. ಗ್ರಾಮಸ್ಥರು ದೊಡ್ಡಕವಲಂದೆ ಪೊಲೀಸ್ ಠಾಣೆಗೆ ದೂರವಾಣಿ ಕರೆ ಮಾಡಿ ವಿಚಾರ ಮುಟ್ಟಿಸಿದ್ದಾರೆ.

    ಕೂಡಲೇ ಪಿಎಸ್‍ಐ ಮಹೇಂದ್ರ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ಗೋವಿಂದನನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಗೋವಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

  • ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆಯನ್ನು ಸಮರ್ಥಿಸಿಕೊಂಡ ಜಮೀರ್

    ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆಯನ್ನು ಸಮರ್ಥಿಸಿಕೊಂಡ ಜಮೀರ್

    ಬೆಂಗಳೂರು: ಬುಧವಾರ ಬೆಂಗಳೂರಿನ ಸಾದಿಕ್ ನಗರದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ನಡೆದ ಹಲ್ಲೆಯನ್ನು ಶಾಸಕ ಜಮೀರ್ ಅಹಮದ್ ಅವರು ಸಮರ್ಥಿಸಿಕೊಂಡಿದ್ದಾರೆ.

    ಇಂದು ಸಿಎಂ ಅವರ ಜೊತೆ ಸಭೆಯಲ್ಲಿ ಭಾಗಿಯಾಗಿದ್ದ ಜಮೀರ್ ಅಹಮದ್, ಬಳಿಕ ಹೊರಗೆ ಬಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಆಶಾ ಕಾರ್ಯಕರ್ತೆಯರಿಗೆ ಯಾರು ಅನುಮತಿ ಕೊಟ್ಟಿರುವುದು. ಸರ್ಕಾರದ ಅನುಮತಿ ಪಡೆದುಕೊಂಡು ಅವರು ಅಲ್ಲಿಗೆ ಹೋಗಿಲ್ಲ. ಅದಕ್ಕೆ ಹಲ್ಲೆ ಮಾಡಲಾಗಿದೆ ಎಂದು ಹೇಳಿದ್ದಾರೆ.

    ನಾನು ಕೂಡ ಘಟನೆ ನಡೆದ ಸ್ಥಳಕ್ಕೆ ಹೋಗಿ ಬಂದಿದ್ದೇನೆ. ಆಶಾ ಕಾರ್ಯಕರ್ತೆಯರು ಆರೋಗ್ಯ ತಪಾಸಣೆ ಮಾಡಬೇಕು ಎಂದರೆ ಸರ್ಕಾರದ ಅನುಮತಿ ಪಡೆಯಬೇಕು. ಆದರೆ ಅವರು ಅಲ್ಲಿಗೆ ಹೆಲ್ತ್ ಚೆಕಪ್ ಮಾಡಲು ಹೋಗಿರಲಿಲ್ಲ. ಮನೆ ಮನೆಗೆ ಹೋಗಿ ಎಷ್ಟು ಜನ ಇದ್ದೀರಾ ಎಂದು ಪ್ರಶ್ನೆ ಮಾಡಿದ್ದಾರೆ. ಹಾಗಾಗಿ ಇವರು ಎನ್.ಆರ್.ಸಿ ವಿಚಾರವಾಗಿ ಬಂದಿದ್ದಾರೆ ಎಂದು ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಜಮೀರ್ ಅವರು ಸಮರ್ಥನೆ ಮಾಡಿಕೊಂಡಿದ್ದಾರೆ. ಇದನ್ನು ಓದಿ: ಬೆಂಗ್ಳೂರಿನಲ್ಲಿ ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ಗ್ಯಾಂಗ್ ದಾಳಿ

    ಇಂದು ದೆಹಲಿ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದವರು ಪರೀಕ್ಷೆ ಮಾಡಿಸಿಕೊಳ್ಳಲು ಮನವಿ ಮಾಡುವಂತೆ ಕೇಳಿ ಸಿಎಂ ಸಭೆ ಕರೆದಿದ್ದರು. ಅದಕ್ಕೆ ನಾವೆಲ್ಲ ಬಂದು ಬೆಂಬಲ ನೀಡಿದ್ದೇವೆ. ಪರೀಕ್ಷೆ ಮಾಡಿಸಿಕೊಳ್ಳುವುದರಲ್ಲಿ ಯಾವುದೇ ತಪ್ಪಿಲ್ಲ. ಅದರಿಂದ ನಮಗೆ ಒಳ್ಳೆಯದು. ನಮ್ಮ ಕ್ಷೇತ್ರದಿಂದಲೂ 11 ಜನ ನಿಜಾಮುದ್ದೀನ್‍ಗೆ ಹೋಗಿ ಬಂದಿದ್ದರು. ಅವರನ್ನು ನಾನೇ ಪರೀಕ್ಷೆ ಮಾಡಿಸಿದ್ದೆ. ಅವರಿಗೆ ನೆಗೆಟಿವ್ ಬಂದಿದೆ. ಹಾಗಾಗಿ ಅಲ್ಲಿಗೇ ಹೋಗಿ ಬಂದವರು ಸ್ವತಃ ತಾವೇ ಹೋಗಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಇದೇ ವೇಳೆ ಜಮೀರ್ ಮನವಿ ಮಾಡಿದರು.

    ಸಿಎಂ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪನವ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಡಿಸಿಎಂ ಅಶ್ವಥ್ ನಾರಾಯಣ್, ಕಂದಾಯ ಸಚಿವ ಆರ್.ಅಶೋಕ್, ಸಿ.ಎಂ ಇಬ್ರಾಹಿಂ, ಜಮೀರ್ ಅಹಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕ ಹ್ಯಾರಿಸ್ ಮತ್ತು ರಿಜ್ವಾನ್ ಅರ್ಷಾದ್ ಭಾಗಿಯಾಗಿದ್ದರು. ಈ ವೇಳೆ ದೆಹಲಿಯ ನಿಜಾಮುದ್ದೀನ್ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರ ಪತ್ತೆ ಕಾರ್ಯಕ್ಕೆ ಸಹಕಾರಿಸುವಂತೆ ಸಿಎಂ ಮುಸ್ಲಿಂ ನಾಯಕರಲ್ಲಿ ಸಿಎಂ ಮನವಿ ಮಾಡಿಕೊಂಡರು.

  • ವೈದ್ಯರ ಮೇಲೆ ಹಲ್ಲೆ ಮಾಡಿದರೆ 10 ವರ್ಷ ಜೈಲು, 10 ಲಕ್ಷ ದಂಡ

    ವೈದ್ಯರ ಮೇಲೆ ಹಲ್ಲೆ ಮಾಡಿದರೆ 10 ವರ್ಷ ಜೈಲು, 10 ಲಕ್ಷ ದಂಡ

    – ಹೊಸ ಕಾನೂನು ತರಲು ಮುಂದಾದ ಕೇಂದ್ರ ಸರ್ಕಾರ

    ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಾದ ಹಲ್ಲೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಗಲಾಟೆಗಳು ನಡೆದಿತ್ತು. ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆಗಳು ಆಗುತ್ತಿರುವ ಹಿನ್ನೆಲೆಯಲ್ಲಿ ಇವುಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಕಠಿಣ ಕಾನೂನು ತರಲು ಮುಂದಾಗುತ್ತಿದೆ.

    ಕರ್ತವ್ಯ ನಿರತ ವೈದ್ಯರು ಅಥವಾ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಅಥವಾ ದಾಳಿ ನಡೆಸಿದ ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ವರೆಗೂ ದಂಡ ವಿಧಿಸುವ ಕಾಯ್ದೆ ತರಲು ಮುಂದಾಗುತ್ತಿದೆ. ವೈದ್ಯರ ಮೇಲಿನ ದಾಳಿ, ಹಲ್ಲೆ ರೀತಿಯ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

    ಈ ಸಂಬಂಧ ಸಾರ್ವಜನಿಕ ಅಭಿಪ್ರಾಯಗಳ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಆದ್ದರಿಂದ ಸೋಮವಾರದಿಂದ ಆರೋಗ್ಯ ಸಚಿವಾಲಯ ಆರೋಗ್ಯಪಾಲನೆ ಸೇವೆಗಳ ಸಿಬ್ಬಂದಿ ಮತ್ತು ಕ್ಲಿನಿಕಲ್ ಎಸ್ಟಾಬ್ಲಿಷ್‍ಮೆಂಟ್ಸ್ (ಹಿಂಸೆ ಮತ್ತು ಆಸ್ತಿ ಹಾನಿ ನಿಷೇಧ) ಕರಡು ಮಸೂದೆ -2019 ನಿಯಮಗಳನ್ನು ರೂಪಿಸಿದೆ. ಅಲ್ಲದೆ ಸಾರ್ವಜನಿಕರು 30 ದಿನಗಳ ಒಳಗೆ ತಮ್ಮ ಅಭಿಪ್ರಾಯಗಳನ್ನು us-ms-mohfw@nic.in ಗೆ ಮೇಲ್ ಮಾಡಿ ತಿಳಿಸಬಹುದಾಗಿದೆ.

    ಭಾರತೀಯ ದಂಡ ಸಂಹಿತೆ(ಐಪಿಸಿ) 320ನೇ ಕಲಂ ಇಟ್ಟುಕೊಂಡು ಈ ಕಾಯ್ದೆಯನ್ನು ರಚಿಸಲು ಸಕಾರ ಮುಂದಾಗಿದೆ. ಕರ್ತವ್ಯ ಸಲ್ಲಿಸುವ ವೇಳೆ ರೋಗಿಗಳ ಕುಟುಂಬ ಅಥವಾ ಅವರ ಕಡೆಯವರು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದರೆ ಕನಿಷ್ಠ ಮೂರು ವರ್ಷ, ಗರಿಷ್ಠ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅದರ ಜೊತೆಗೆ ಕನಿಷ್ಠ 2 ಲಕ್ಷದಿಂದ 10 ಲಕ್ಷ ರೂ. ದಂಡ ವಿಧಿಸುವ ಅಂಶ ಈ ಕರಡು ಮಸೂದೆಯಲ್ಲಿದೆ.

    ಕರಡು ಮಸೂದೆಯಲ್ಲಿರುವ ಸಂಪೂರ್ಣ ವಿವರ ಓದಲು ಕ್ಲಿಕ್ ಮಾಡಿ: www.mohfw.gov.in

  • ಹಲ್ಲೆಗೆ ಮುಂದಾದ ಆರೋಪಿಗಳಿಗೆ ಗುಂಡಿನ ರುಚಿ ತೋರಿಸಿದ ಪೊಲೀಸರು

    ಹಲ್ಲೆಗೆ ಮುಂದಾದ ಆರೋಪಿಗಳಿಗೆ ಗುಂಡಿನ ರುಚಿ ತೋರಿಸಿದ ಪೊಲೀಸರು

    ಬೆಂಗಳೂರು: ಹಲ್ಲೆಗೆ ಮುಂದಾದ ಕೊಲೆ ಆರೋಪಿಗಳಿಗೆ ಮಾದನಾಯಕನಹಳ್ಳಿ ಪೊಲೀಸರು ಕಾಲಿಗೆ ಗುಂಡು ಹೊಡೆದಿದ್ದಾರೆ.

    ನಂದಿನಿ ಲೇಔಟ್ ಪೊಲೀಸ್ ಠಾಣೆಯ ರೌಡಿಶೀಟರ್‍ ಗಳಾಗಿರುವ ಚಂದನ್ ಮತ್ತು ಶರಣ್ ಮೇಲೆ ಮಾದನಾಯಕನಹಳ್ಳಿ ಸಿಪಿಐ ಸತ್ಯನಾರಾಯಣ್ ಅವರು ಗುಂಡು ಹಾರಿಸಿದ್ದಾರೆ.

    ಆರೋಪಿಗಳು ಕಳೆದ ಜುಲೈ 23 ರಂದು ಮಂಜುನಾಥ್ ಎಂಬುವರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ನಂತರ ಅವರನ್ನು ಕೊಲೆ ಮಾಡಿದ್ದರು. ಈ ಆರೋಪಿಗಳು ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ಫಾರೆಸ್ಟ್ ಗೇಟ್ ಬಳಿ ಇದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಆರೋಪಿಗಳು ಪೇದೆ ಮನಗುಂಡಿ ಮತ್ತು ಪಿ.ಎಸ್.ಐ ಮುರಳಿ ಅವರು ಮೇಲೆ ಹಲ್ಲೆ ಮಾಡಿದ್ದಾರೆ.

    ಈ ವೇಳೆ ಸ್ಥಳದಲ್ಲಿದ್ದ ಸಿಪಿಐ ಸತ್ಯನಾರಾಯಣ್ ಆರೋಪಿಗಳ ಕಾಲಿಗೆ ಗುಂಡು ಹೊಡೆದಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡ ಆರೋಪಿಗಳು ಹಾಗೂ ಪೊಲೀಸರನ್ನು ಮಾಗಡಿ ರಸ್ತೆಯ ಅನುಪಮ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 20 ಮಂದಿ ಮಹಿಳೆಯರ ಜೊತೆ ಸೇರಿ ಅತ್ತೆಯಿಂದ ಸೊಸೆಗೆ ಲೈಂಗಿಕ ಕಿರುಕುಳ

    20 ಮಂದಿ ಮಹಿಳೆಯರ ಜೊತೆ ಸೇರಿ ಅತ್ತೆಯಿಂದ ಸೊಸೆಗೆ ಲೈಂಗಿಕ ಕಿರುಕುಳ

    ನವದೆಹಲಿ: ಅತ್ತೆಯೊಬ್ಬಳು 20 ಜನ ಮಹಿಳೆಯರ ಜೊತೆ ಸೇರಿ ಸೊಸೆಗೆ ಲೈಂಗಿಕ ಕಿರುಕುಳ ಕೊಟ್ಟ ಅಮಾನವೀಯ ಘಟನೆ ದೆಹಲಿಯಲ್ಲಿ ನಡೆದಿದೆ.

    ಡಿಸೆಂಬರ್ 10ರಂದು ಈ ಘಟನೆ ನಡೆದಿದೆ. ಘಟನೆ ಸಂಬಂಧ ಸಂತ್ರಸ್ತ ಮಹಿಳೆ ಹಾಗೂ ತಾಯಿ ಆರೋಪಿಗಳ ವಿರುದ್ಧ ಸಮೀಪದ ಪೊಲೀಸ್ ಠಾಣೆಗೆ ಡಿಸೆಂಬರ್ 14ರಂದು ದೂರು ನೀಡಿದ್ದಾರೆ. ಹೀಗಾಗಿ ಪೊಲೀಸರು ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

    ಏನಿದು ಪ್ರಕರಣ?:
    27 ವರ್ಷದ ಸಂತ್ರಸ್ತ ಮಹಿಳೆ ತನ್ನ ತಾಯಿಯ ಜೊತೆಗೆ ಡಿಸೆಂಬರ್ 10ರಂದು ತವರು ಮನೆಯಿಂದ ಗಂಡನ ಮನೆಗೆ ಬಂದಿದ್ದರು. ಈ ವೇಳೆ ಮನೆಯ ಬಾಗಿಲು ತೆರೆಯುತ್ತಿದ್ದಂತೆಯೇ ಬಾರ್ ನಲ್ಲಿ ಕೆಲಸ ಮಾಡುವ 20 ಜನ ಮಹಿಳೆಯರು ಸೇರಿದಂತೆ 30 ಜನ ಗೂಂಡಾಗಳು ಹೊರಬಂದು ಏಕಾಏಕಿ ತಾಯಿ-ಮಗಳ ಮೇಲೆ ಹಲ್ಲೆ ಮಾಡಿದ್ದಾರೆ.

    ಅತ್ತೆ ಸುನಿತಾ ಚೌಧರಿ ಹಾಗೂ ಕೆಲ ಮಹಿಳೆಯರು ನನ್ನನ್ನು ಒಳಗೆ ಎಳೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಇತ್ತ ನನ್ನ ತಾಯಿಯ ಮೇಲೂ ಹಲ್ಲೆ ಮಾಡಿ, ಕಿರುಕುಳ ಕೊಟ್ಟಿದ್ದಾರೆ. ಈ ಪ್ರಕರಣದಲ್ಲಿ ನನ್ನ ಪತಿ ತೇಜ್‍ವೀರ್ ಕೂಡ ಭಾಗಿಯಾಗಿದ್ದನು. ಆದರೆ ನಮ್ಮ ಮೇಲೆ ಹಲ್ಲೆ ಮಾಡಿ ಬಳಿಕ ಪರಾರಿಯಾಗಿದ್ದಾನೆ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಪತಿ ಜೊತೆಗೆ ಜೀವನ ನಡೆಸಲು ಅತ್ತೆ ಯಾಕೆ ಬಿಡುತ್ತಿಲ್ಲ ಎನ್ನುವುದು ನನಗೆ ಅರ್ಥವಾಗುತ್ತಿಲ್ಲ. ನನ್ನಿಂದ ಪತಿಯನ್ನು ದೂರವಿಡಲು ಪ್ರಯತ್ನಿಸುತ್ತಿದ್ದಾಳೆ. ಎಷ್ಟೇ ಕೇಳಿಕೊಂಡರೂ ನನ್ನ ಪ್ರಶ್ನೆಗೆ ಉತ್ತರ ನೀಡುತ್ತಿಲ್ಲ. ಅಷ್ಟೇ ಅಲ್ಲದೆ ನನಗೆ ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಸಂತ್ರಸ್ತ ಮಹಿಳೆ ತನ್ನ ದುಃಖ ತೋಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ವಿದ್ಯಾರ್ಥಿಗಳಿಗೆ ಥಳಿಸಿದ್ದಕ್ಕೆ ಶಿಕ್ಷಕ ಅಮಾನತು

    ವಿದ್ಯಾರ್ಥಿಗಳಿಗೆ ಥಳಿಸಿದ್ದಕ್ಕೆ ಶಿಕ್ಷಕ ಅಮಾನತು

    ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಮನಬಂದಂತೆ ಥಳಿಸಿದ ಚಿತ್ತಾಪುರದ ಮೊರಾರ್ಜಿ ಶಾಲೆಯ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ.

    ಮಂಜುನಾಥ್ ಅಮಾನತುಗೊಂಡ ಶಿಕ್ಷಕ. ಶಾಲೆಯಲ್ಲಿ ಮೂವರು ವಿದ್ಯಾರ್ಥಿಗಳು ಕುಡಿದ ಎಂಜಲು ನೀರನ್ನು ವಾಪಸ್ ಫಿಲ್ಟರ್‍ಗೆ ಹಾಕಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕೆ ಮಂಜುನಾಥ್ ಮಕ್ಕಳನ್ನು ಬಾಸುಂಡೆ ಬರುವಂತೆ ಬಾರಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಶಿಕ್ಷಕರು ಈರೀತಿ ಮಕ್ಕಳಿಗೆ ಮನಬಂದತೆ ಹೊಡೆಯುವುದು ಸರಿಯಲ್ಲ ಎಂದು ಮಂಜುನಾಥ್ ವಿರುದ್ಧ ಗಾಯಗೊಂಡ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೇಜವಾಬ್ದಾರಿ ವರ್ತನೆ ಹಿನ್ನೆಲೆಯಲ್ಲಿ ಮಂಜುನಾಥ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv