Tag: Assistant Director

  • ಅಮಿತಾಭ್ ನಟನೆಯ ‘ಶೋಲೆ’ ಸಿನಿಮಾಗೆ ಕಮಲ್ ಹಾಸನ್ ಸಹಾಯಕ ನಿರ್ದೇಶಕ

    ಅಮಿತಾಭ್ ನಟನೆಯ ‘ಶೋಲೆ’ ಸಿನಿಮಾಗೆ ಕಮಲ್ ಹಾಸನ್ ಸಹಾಯಕ ನಿರ್ದೇಶಕ

    ಭಾರತೀಯ ಸಿನಿಮಾ ರಂಗದ ಇಬ್ಬರು ದಂತಕಥೆಗಳು ಒಬ್ಬರನ್ನೊಬ್ಬರು ಹಾಡಿ ಹೊಗಳುವ ಮೂಲಕ ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇಂಥದ್ದೊಂದು ಸಂಭ್ರಮಕ್ಕೆ ಸಾಕ್ಷಿಯಾಗಿದ್ದು ಅಮೆರಿಕಾ ಸ್ಯಾನ್ ಡಿಯಾಗೋದಲ್ಲಿ ನಡೆಯುತ್ತಿರುವ ಕಾಮಿಕ್ ಉತ್ಸವ. ಈ ಉತ್ಸವದಲ್ಲಿ ಪ್ರಭಾಸ್ ಮುಖ್ಯಭೂಮಿಕೆಯ ಪ್ರಾಜೆಕ್ಟ್ ಕೆ (Project K) ಗ್ಲಿಂಪ್ಸ್ ರಿಲೀಸ್ ಆಗಿದೆ.

    ಪ್ರಾಜೆಕ್ಟ್ ಕೆ ಸಿನಿಮಾದಲ್ಲಿ ಪ್ರಭಾಸ್ ಮುಖ್ಯ ಪಾತ್ರದಲ್ಲಿ ನಟಿಸಿದ್ದರೆ, ಇನ್ನೂ ಹಲವು ಪಾತ್ರಗಳಲ್ಲಿ ಅಮಿತಾಭ್ ಬಚ್ಚನ್, ಕಮಲ್ ಹಾಸನ್ (Kamal Haasan) , ರಾಣಾ ದಗ್ಗುಬಾಟಿ, ದೀಪಿಕಾ ಪಡುಕೋಣೆ ಸೇರಿದಂತೆ ದಿಗ್ಗಜ ಕಲಾವಿದರೇ ಇದ್ದಾರೆ. ಗ್ಲಿಂಪ್ಸ್ ಬಿಡುಗಡೆಗಾಗಿ ಅಮಿತಾಭ್ (Amitabh Bachchan) ಹೊರತುಪಡಿಸಿ ಎಲ್ಲರೂ ಅಮೆರಿಕಾಗೆ ಹಾರಿದ್ದಾರೆ. ಇದನ್ನೂ ಓದಿ:ಸಿನಿಮಾಗೆ ಗುಡ್ ಬೈ, ರಾಜಕೀಯಕ್ಕೆ ಅಭಿಷೇಕ್ ಬಚ್ಚನ್ ಎಂಟ್ರಿ?

    ಗ್ಲಿಂಪ್ಸ್ ರಿಲೀಸ್ ಆದ ಸಂದರ್ಭದಲ್ಲಿ ವಿಡಿಯೋ ಮೂಲಕ ತಮ್ಮ ಮನೆಯಿಂದಲೇ ಕನೆಕ್ಟ್ ಆದ ಅಮಿತಾಭ್ ಅವರು ಕಮಲ್ ಹಾಸನ್ ಅವರನ್ನು ಹಾಡಿಹೊಗಳಿದರು. ‘ನಿಮ್ಮ ಎನರ್ಜಿಯಿಂದ ನಾವು ಬದುಕುತ್ತಿದ್ದೇವೆ’ ಎಂದು ಕಮಲ್ ಹೇಳುತ್ತಿದ್ದಂತೆಯೇ ‘ನೀವು ದೊಡ್ಡ ಕಲಾವಿದರು. ನಿಮ್ಮ ಸಿನಿಮಾಗಳು ವಾಸ್ತವತೆಗೆ ಹತ್ತಿರವಿರುತ್ತವೆ. ನೀವು ಸಿನಿಮಾಗಾಗಿ ಸಾಕಷ್ಟು ಕಷ್ಟ ಪಡುತ್ತೀರಿ’ ಎಂದು ಅಮಿತಾಭ್ ಮಾತನಾಡಿದ್ದಾರೆ.

    ಇದೇ ವೇಳೆಯ ‘ನಾನು ನಿಮ್ಮ ಶೋಲೆ (Sholay) ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ (Assistant Director) ಕೆಲಸ ಮಾಡುತ್ತಿದ್ದೆ. ಆ ಸಿನಿಮಾದ ಮೇಲೆ ನನಗೆ ಕೋಪವಿತ್ತು. ನಿಮ್ಮ ಮೇಲೂ ಕೋಪ, ನಿರ್ಮಾಪಕರ ಮೇಲೂ ಕೋಪ. ಅದನ್ನು ನಿಮ್ಮ ಮುಂದೆಯೂ ಹೇಳಿಕೊಂಡಿದ್ದೆ. ನೀವು ನನ್ನ ಸಿನಿಮಾಗಳನ್ನು ಹೊಗಳುತ್ತಿದ್ದೀರಿ. ನಾನು ನಿಮ್ಮ ಸಿನಿಮಾ ಬೈದೆ’ ಎಂದು ಆ ದಿನಗಳನ್ನು ನೆನಪಿಸಿಕೊಂಡರು ಕಮಲ್ ಹಾಸನ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮೇಲಕ್ಕೆ ಹಾರಿದ ಪಾದಚಾರಿಗಳು – ಓರ್ವ ಸಾವು, ನಿರ್ದೇಶಕ ಅರೆಸ್ಟ್

    ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮೇಲಕ್ಕೆ ಹಾರಿದ ಪಾದಚಾರಿಗಳು – ಓರ್ವ ಸಾವು, ನಿರ್ದೇಶಕ ಅರೆಸ್ಟ್

    ಬೆಂಗಳೂರು: ಕಿರುತೆರೆ ಅಸಿಸ್ಟೆಂಟ್ ಡೈರೆಕ್ಟರ್ ಒಬ್ಬ ಕಾರಿನಲ್ಲಿ ವೇಗವಾಗಿ ಬಂದು ನಾಲ್ವರು ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಕತ್ರಿಗುಪ್ಪೆ ಬಳಿ ನಡೆದಿದೆ. ಘಟನೆಯಲ್ಲಿ ಒಬ್ಬ ಪಾದಾಚಾರಿ ನಾವನ್ನಪ್ಪಿದ್ದಾನೆ.

    ಶುಕ್ರವಾರ ಶೂಟಿಂಗ್ ಮುಗಿಸಿಕೊಂಡು ಬನಶಂಕರಿ ಕಡೆಯಿಂದ ಕಾರಿನಲ್ಲಿ ವೇಗವಾಗಿ ಬಂದ ಕಿರುತೆರೆ ಅಸಿಸ್ಟೆಂಟ್ ಡೈರೆಕ್ಟರ್ ಮುಖೇಶ್, ನಾಲ್ವರು ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಪಾದಾಚಾರಿಗಳು ಮೇಲಕ್ಕೆ ಚಿಮ್ಮಿದ್ದಾರೆ. ಮಾತ್ರವಲ್ಲದೇ ಸ್ಥಳದಲ್ಲೇ ಇದ್ದ ಇನ್ನೊಂದು ಕಾರು ಹಾಗೂ ಬೈಕಿಗೂ ಡಿಕ್ಕಿಯಾಗಿದೆ. ಇದನ್ನೂ ಓದಿ: ಬಸ್‍ನಲ್ಲಿ ಕೊಡೆ ಹಿಡಿದು ಕುಳಿತ ಪ್ರಯಾಣಿಕರು

    ಇಟ್ಟಮಡು ಬಳಿ ಇಳಿಜಾರು ಇದ್ದ ಕಾರಣ ಕಾರು ವೇಗವಾಗಿ ಬಂದು ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸುರೇಶ್ ಮೃತಪಟ್ಟಿದ್ದು, ಕಾರು ಚಾಲಕ ಮುಖೇಶ್ ನಿರ್ಲಕ್ಷ್ಯ ಹಾಗೂ ವೇಗದ ಚಾಲನೆಯೇ ಕಾರಣ ಎಂದು ಪಶ್ಚಿಮ ವಿಭಾಗ ಸಂಚಾರಿ ಡಿಸಿಪಿ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ. ಇದನ್ನೂ ಓದಿ: ಶಾಸಕರೇ ಉದ್ಘಾಟಿಸಬೇಕೆಂದು ರಸ್ತೆಗೆ ಬೇಲಿ- ಸ್ಥಳೀಯರಿಂದ ತೆರವು

    ಗಾಯಾಳುಗಳಲ್ಲಿ ಮೂವರು ಕ್ಯಾಟರಿಂಗ್‌ನಲ್ಲಿ ಕೆಲಸ ಮಾಡುತ್ತಿದ್ದು, ಒಬ್ಬ ವಿದ್ಯಾರ್ಥಿ ಎಂಬುದು ತಿಳಿದುಬಂದಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಚಾಲಕ ಮುಖೇಶ್‌ನನ್ನು ಪೊಲೀಸರು ಬಂಧಿಸಿದ್ದು, ಆತನ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

  • 3.72 ಲಕ್ಷ ರೂ. ಲಂಚಕ್ಕೆ ಬೇಡಿಕೆ- ಎಸಿಬಿ ಬಲೆಗೆ ಬಿದ್ದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ

    3.72 ಲಕ್ಷ ರೂ. ಲಂಚಕ್ಕೆ ಬೇಡಿಕೆ- ಎಸಿಬಿ ಬಲೆಗೆ ಬಿದ್ದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ

    ಚಿಕ್ಕಬಳ್ಳಾಪುರ: ಒಂದಲ್ಲ ಎರಡಲ್ಲಾ ಬರೋಬ್ಬರಿ 3.72 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.

    ಬಾಗೇಪಲ್ಲಿ ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ದೂರುದಾರ ಬಾಗೇಪಲ್ಲಿ ಪಟ್ಟಣದ ಗರುಡಾದ್ರಿ ಡ್ರಿಪ್ ಇರಿಗೇಷನ್ ಎಂಟರ್‌ಪ್ರೈಸರ್ಸ್‌ ಮಾಲೀಕ ಲಕ್ಷ್ಮೀನರಸಿಂಹಯ್ಯ ಅವರ ಬಳಿ ಚಂದ್ರಶೇಖರ್ 3,72000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

    ಲಕ್ಷ್ಮೀನರಸಿಂಹಯ್ಯ ರೈತರ ಜಮೀನುಗಳಿಗೆ ಸರ್ಕಾರಿ ಸಬ್ಸಿಡಿ ಸೌಲಭ್ಯದ ಡ್ರಿಪ್ ಸಿಸ್ಟಂ ಅಳವಡಿಕೆ ಯೋಜನೆ ಅಡಿ ಹನಿ ನೀರಾವರಿ ಪದ್ಧತಿ ಅನುಷ್ಠಾನಗೊಳಿಸಿದ್ದರು. ಇದರ ಮೊತ್ತ ಸರಿ ಸುಮಾರು 16 ಲಕ್ಷ ರೂಪಾಯಿಗಳಾಗಿದ್ದು, ಆ ಹಣ ಕೃಷಿ ಇಲಾಖೆಯಿಂದ ಬಿಡುಗಡೆ ಆಗಬೇಕಿತ್ತು. ಹೀಗಾಗಿ ಹಣ ಬಿಡುಗಡೆಗೆ ಸಹಿ ಹಾಕಲು ಸಹಾಯಕ ನಿರ್ದೇಶಕ ಚಂದ್ರಶೇಖರ್ ಒಟ್ಟು ಮೊತ್ತದಲ್ಲಿ ಶೇ. 22ರಷ್ಟು ಕಮೀಷನ್ ಕೊಡಬೇಕು ಎಂದು ಹೇಳಿದ್ದ. ಅದರಂತೆ ಮೊದಲು 50,000 ರೂಪಾಯಿ ಮುಂಗಡ ಹಣ ಕೊಟ್ಟಿದ್ದ ಲಕ್ಷ್ಮೀನರಸಿಂಹಯ್ಯ ಎರಡನೇ ಕಂತಿನ 50,000 ರೂಪಾಯಿ ಹಣ ಕೊಡುವಾಗ ಎಸಿಬಿ ಅಧಿಕಾರಿಗಳು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದಾರೆ.

    ಬಾಗೇಪಲ್ಲಿ ಪಟ್ಟಣದ ನ್ಯಾಷನಲ್ ಕಾಲೇಜು ಬಳಿ ಕಾರಿನಲ್ಲಿ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಚಂದ್ರಶೇಖರ್ ಅವರನ್ನು ಎಸಿಬಿ ಅಧಿಕಾರಿಗಳು ಹಿಡಿದಿದ್ದಾರೆ. ಎಸಿಬಿ ಡಿವೈಎಸ್‍ಪಿ ವೆಂಕಟೇಶ್ ನಾಯುಡು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಎಸಿಬಿ ಇನ್ಸ್‍ಪೆಕ್ಟರ್ ಲಕ್ಷ್ಮಿದೇವಮ್ಮ ಸೇರಿ ಕೆಲ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.