Tag: Assistant Engineer

  • Bengaluru | ಲೇಡಿಸ್ ಪಿಜಿಗೆ ನುಗ್ಗಿ ಎಂಜಿನಿಯರ್ ಕುತ್ತಿಗೆಗೆ ಚಾಕು ಇಟ್ಟು ಚಿನ್ನಾಭರಣ ದರೋಡೆ

    Bengaluru | ಲೇಡಿಸ್ ಪಿಜಿಗೆ ನುಗ್ಗಿ ಎಂಜಿನಿಯರ್ ಕುತ್ತಿಗೆಗೆ ಚಾಕು ಇಟ್ಟು ಚಿನ್ನಾಭರಣ ದರೋಡೆ

    ಬೆಂಗಳೂರು: ಪಿಜಿಯಲ್ಲಿದ್ದ ಬೆಸ್ಕಾಂ ಅಸಿಸ್ಟೆಂಟ್ ಎಂಜಿನಿಯರ್ (BESCOM Assistant Engineer) ಕುತ್ತಿಗೆಗೆ ಚಾಕು ಇಟ್ಟು ಚಿನ್ನಾಭರಣ ದೋಚಿದ (Gold Theft) ಘಟನೆ ಯಲಹಂಕ (Yelahanka) ಪೊಲೀಸ್ ಠಾಣಾ ವ್ಯಾಪ್ತಿಯ ಜುಡಿಷಿಯಲ್ ಲೇಔಟ್‌ನಲ್ಲಿ ನಡೆದಿದೆ.

    ಆ.11ರಂದು ಮಧ್ಯಾಹ್ನ 3ಗಂಟೆ ಸುಮಾರಿಗೆ ಲೇಡಿಸ್ ಪಿಜಿಯಲ್ಲಿ (Ladies PG) ಘಟನೆ ನಡೆದಿದೆ. ಕಳೆದ ಹದಿನೈದು ದಿನಗಳ ಹಿಂದಷ್ಟೇ ಪಿಜಿಗೆ ಸೇರಿದ್ದ ಮಹಿಳೆ ಮಧ್ಯಾಹ್ನ ಊಟಕ್ಕೆಂದು ರೂಮಿಗೆ ಬಂದಿದ್ದಾರೆ. ಪಿಜಿಯಲ್ಲಿನ ಮೂರನೇ ಮಹಡಿಯಲ್ಲಿರೋ ತನ್ನ ರೂಮಿಗೆ ಬಂದಾಗ, ಡೋರ್ ಬಡಿದ ಶಬ್ದ ಕೇಳಿ ಪಿಜಿಯವರು ಇರಬಹುದು ಎಂದು ಡೋರ್ ಓಪನ್ ಮಾಡಿದ್ದರು. ಕೂಡಲೇ ಮಹಿಳೆಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿದ್ದ ಆರೋಪಿ ಆಕೆಯ ಅಂಗಾಂಗಗಳನ್ನ ಮುಟ್ಟಿ, ಆಕೆ ಮೈಮೇಲಿದ್ದ ಚಿನ್ನಾಭರಣಗಳನ್ನ ಬಿಚ್ಚಿಸಿಕೊಂಡು ಆಕೆಯ ಬೆಡ್ ಮೇಲಿದ್ದ ಎರಡು ಮೊಬೈಲ್‌ಗಳನ್ನು ತೆಗೆದುಕೊಂಡು ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ಆನ್‌ಲೈನ್ ಬೆಟ್ಟಿಂಗ್ – ಇಡಿ ವಿಚಾರಣೆಗೆ ಹಾಜರಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ

    ಈ ಬಗ್ಗೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್; 16 ಸ್ಪಾಟ್‌ಗಳಲ್ಲಿ ಸಿಗದ ಕುರುಹು – ದೂರುದಾರನ ಮಂಪರು ಪರೀಕ್ಷೆಗೆ ಎಸ್‌ಐಟಿ ಚಿಂತನೆ

  • ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ನಗರಸಭೆ ಸಹಾಯಕ ಎಂಜಿನಿಯರ್

    ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ನಗರಸಭೆ ಸಹಾಯಕ ಎಂಜಿನಿಯರ್

    ಗದಗ: ಸಹಾಯಕ ಎಂಜಿನಿಯರ್ (Assistant Engineer) ಓರ್ವ 1.50 ಲಕ್ಷ ರೂ. ಲಂಚ (Bribe) ಪಡೆಯುವ ವೇಳೆ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿರುವ ಘಟನೆ ಗದಗದಲ್ಲಿ (Gadag) ನಡೆದಿದೆ.

    ಗದಗ ಬೆಟಗೇರಿ (Betageri) ನಗರಸಭೆ ಸಹಾಯಕ ಎಂಜಿನಿಯರ್ ವೀರೇಂದ್ರ ಸಿಂಗ್ ಕಾಟೇವಾಲ ಲೋಕಾಯುಕ್ತದ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ವ್ಯಕ್ತಿ. ಗುತ್ತಿಗೆದಾರ ಅಬ್ದುಲ್ ಮನಿಯಾರ್ ಎಂಬವರು ರಸ್ತೆ ಕಾಮಗಾರಿ ಮಾಡಿದ್ದರು. ಅದರ 9 ಲಕ್ಷ ರೂ. ಬಿಲ್ ಪಾಸ್ ಮಾಡಲು 1.50 ಲಕ್ಷ ರೂ. ಕೊಡುವಂತೆ ಎಂಜಿನಿಯರ್ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದ್ದು, ಗುತ್ತಿಗೆದಾರರಿಂದ ಲಂಚ ಪಡೆದು ಬೈಕ್‌ನ ಸೈಡ್‌ಬ್ಯಾಗ್‌ನಲ್ಲಿ ಇಡುವ ವೇಳೆ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ. ಇದನ್ನೂ ಓದಿ:‌ ಮಂಗಳೂರಿನಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ – ಮಿಥುನ್ ರೈ ಕಾರ್ ಮೇಲೆ ಕಲ್ಲು ತೂರಾಟ

    ಲೋಕಾಯುಕ್ತ ಎಸ್ಪಿ ಸತೀಶ್, ಡಿವೈಎಸ್ಪಿ ಶಂಕರ್ ರಾಗಿ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ರವಿ ನೇತೃತ್ವದ ತಂಡ ದಾಳಿ ಮಾಡಿದೆ. ಸಿಕ್ಕಿಬಿದ್ದ ಬಳಿಕ ವೀರೇಂದ್ರ ಅಧಿಕಾರಿಗಳಿಗೆ ಹಣ ಹಸ್ತಾಂತರ ಮಾಡಿ ನಂತರ ಅಲ್ಲಿಂದ ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬರೋಬ್ಬರಿ 2 ಲಕ್ಷ ಮೌಲ್ಯದ 40 ಕೆ.ಜಿ ಕೂದಲು ದರೋಡೆ!

  • ನಿನ್ನ ಪತ್ನಿಯನ್ನು ರಾತ್ರಿ ಕಳುಹಿಸು ಎಂದ ಬಾಸ್ – ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ

    ನಿನ್ನ ಪತ್ನಿಯನ್ನು ರಾತ್ರಿ ಕಳುಹಿಸು ಎಂದ ಬಾಸ್ – ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ

    ಲಖನೌ: ಉತ್ತರ ಪ್ರದೇಶದ ವಿದ್ಯುತ್ ಇಲಾಖೆಯ ಅಧಿಕಾರಿಯೊಬ್ಬರು, ತನಗೆ ವರ್ಗಾವಣೆ ಬೇಕಿದ್ದರೆ ಪತ್ನಿಯನ್ನು ರಾತ್ರಿಗೆ ಕಳುಹಿಸು ಎಂದು ಕೇಳಿದ್ದಕ್ಕೆ ಮನನೊಂದ ಉದ್ಯೋಗಿಯೊಬ್ಬರು ಡೀಸೆಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಗೋಕುಲ್ ಪ್ರಸಾದ್ (45) ಅವರೇ ಲಖೀಂಪುರದ ಜೂನಿಯರ್ ಇಂಜಿನಿಯರ್ ಕಚೇರಿಯ ಹೊರಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕೇಂದ್ರೀಯ ವಿವಿ ವಿದ್ಯಾರ್ಥಿಗಳ ಮೇಲೆ ಹಲ್ಲೆ – ಮೂವರ ವಿರುದ್ಧ FIR

    CRIME (2)

    ಗೋಕುಲ್ ಪ್ರಸಾದ್ ಅವರು ಬೆಂಕಿ ಹಚ್ಚಿಕೊಂಡ ನಂತರ ಚಿತ್ರೀಕರಿಸಿದ ವೀಡಿಯೋದಲ್ಲಿ ಕಿರಿಯ ಇಂಜಿನಿಯರ್ ಹಾಗೂ ಅವರ ಸಹಾಯಕರು ತನಗೆ ಕಿರುಕುಳ ನೀಡುತ್ತಿದ್ದರು. ಪೊಲೀಸರನ್ನು ಸಂಪರ್ಕಿಸಿದರೂ ಯಾವುದೇ ಸಹಾಯ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ. ಮತ್ತೊಂದು ವಿಡಿಯೋದಲ್ಲಿ, ಆರೋಪಿಗಳು ಕಳೆದ ಮೂರು ವರ್ಷಗಳಿಂದಲೂ ತನ್ನ ಪತಿಗೆ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಆತನ ಪತ್ನಿ ಆರೋಪಿಸಿದ್ದಾರೆ.

    ತನ್ನ ಪತಿ ಖಿನ್ನತೆಗೆ ಒಳಗಾಗಿ ಔಷಧಿ ತೆಗೆದುಕೊಳ್ಳಲು ಪ್ರಾರಂಭಿಸಿದರು. ಆದರೂ, ಅಲಿಗಂಜ್‌ಗೆ ವರ್ಗಾಯಿಸಲಾಯಿತು. ಅವರಿಗೆ ಪ್ರಯಾಣಿಸಲು ಕಷ್ಟವಾಗುತ್ತಿದ್ದರಿಂದ ಮನೆಯ ಸಮೀಪದಲ್ಲೇ ಇರುವ ಕಚೇರಿಗೆ ವರ್ಗಾಯಿಸುವಂತೆ ಮನವಿ ಮಾಡಿದರು. ಈ ವೇಳೆ ಅಲ್ಲಿನ ಅಧಿಕಾರಿಗಳು ನಿನ್ನ ಹೆಂಡತಿಯನ್ನು ನಮ್ಮೊಂದಿಗೆ ಮಲಗುವಂತೆ ಮಾಡಿ, ಆಗ ನಾವು ವರ್ಗಾವಣೆ ಮಾಡುತ್ತೇವೆಂದು ಹೇಳಿದ್ದಾರೆ. ಇದರಿಂದ ಅವರು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವಾಗಲೂ ಯಾರೂ ತಪ್ಪಿಸಲು ಸಹಾಯ ಮಾಡಲಿಲ್ಲ ಎಂದು ದೂರಿದ್ದಾರೆ.  ಇದನ್ನೂ ಓದಿ: ಲವ್ ಜಿಹಾದ್ ಬದಲಿಗೆ `ಲವ್ ಕೇಸರಿ’ ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ ಕರೆ

    crime

    ಘಟನೆ ಸಂಬAಧ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ ಸಂಜೀವ್ ಸುಮನ್, ಗೋಕುಲ್‌ಪ್ರಸಾದ್ ವರ್ಗಾವಣೆ ಕೋರಿದಾಗ ಜೂನಿಯರ್ ಇಂಜಿನಿಯರ್ ಹಣದ ಬೇಡಿಕೆ ಮತ್ತು ಅಸಭ್ಯ ಹೇಳಿಕೆಯನ್ನೂ ನೀಡಿದ್ದಾರೆ. ಹಾಗಾಗಿ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಜೂನಿಯರ್ ಇಂಜಿನಿಯರ್ ಅನ್ನು ಅಮಾನತುಗೊಳಿಸಿ, ವಿಚಾರಣೆಗೆ ಒಳಪಡಿಸಲಾಗಿದೆ.

  • ಸಹಾಯಕ ಇಂಜಿನಿಯರ್ ಅಮಾನತಿಗೆ ಮಾಜಿ ಸಿಎಂ ಸೂಚನೆ – ಸಿದ್ದರಾಮಯ್ಯ ಎದುರಲ್ಲೇ ಕಣ್ಣೀರು ಹಾಕಿದ ಅಧಿಕಾರಿ

    ಸಹಾಯಕ ಇಂಜಿನಿಯರ್ ಅಮಾನತಿಗೆ ಮಾಜಿ ಸಿಎಂ ಸೂಚನೆ – ಸಿದ್ದರಾಮಯ್ಯ ಎದುರಲ್ಲೇ ಕಣ್ಣೀರು ಹಾಕಿದ ಅಧಿಕಾರಿ

    ಬಾಗಲಕೋಟೆ: ಕರ್ತವ್ಯ ಲೋಪ ಎಸಗಿದ್ದ ನೀರು ಸರಬರಾಜು ಇಲಾಖೆ ಸಹಾಯಕ ಇಂಜಿನಿಯನ್ ರನ್ನು ಅಮಾನತು ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಿರಿಯ ಅಧಿಕಾರಿಗೆ ಸೂಚಿಸಿದ್ದರು. ಈ ವೇಳೆ ಅಧಿಕಾರಿ ಅಮಾನತು ಮಾಡದಂತೆ ಕಣ್ಣೀರು ಹಾಕಿದ ಘಟನೆ ಜಿಲ್ಲೆಯ ಬದಾಮಿ ತಾಲೂಕಿನ ಅಧಿಕಾರಿಗಳ ಸಭೆಯಲ್ಲಿ ನಡೆಯಿತು.

    ಇಂದು ಬದಾಮಿ ಕೆಡಿಪಿ ಸಭೆಯಲ್ಲಿ ಭಾಗವಹಿಸಿ ಕ್ಷೇತ್ರದ ಅಧಿಕಾರಿಗಳ ಕಾರ್ಯದ ಬಗ್ಗೆ ಸ್ಥಳೀಯ ಶಾಸಕರಾಗಿರುವ ಸಿದ್ದರಾಮಯ್ಯ ಮಾಹಿತಿ ಪಡೆದರು. ಈ ವೇಳೆ ಬದಾಮಿ ತಾಲೂಕು ನೀರು ಸರಬರಾಜು ಇಲಾಖೆ ಸಹಾಯಕ ಇಂಜಿನಿಯರ್ ಅವರು ಇಲಾಖೆ ಕಾರ್ಯಗಳನ್ನು ಸಮರ್ಥವಾಗಿ ನಿಭಾಯಿಸದಿರುವುದು ಕಂಡು ಬಂದಿತ್ತು. ಇದಕ್ಕೆ ಗರಂ ಆದ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಯನ್ನು ಅಮಾನತ್ತು ಮಾಡಲು ಜಿಲ್ಲಾ ಪಂಚಾಯತಿ ಸಿಇಓ ವಿಕಾಸ ಸುರಳ್ಕರ್ ಗೆ ಫೋನ್ ಮೂಲಕ ಸೂಚಿಸಿದರು.

    ತಾಲೂಕಿನಲ್ಲಿ 165 ನೀರು ಶುದ್ಧೀಕರಣ ಘಟಕಗಳು ನಿರ್ಮಿಸಲಾಗಿದ್ದು, ಆದರೆ ಇವುಗಳಲ್ಲಿ 163 ಘಟಕಗಳು ಕಾರ್ಯನಿರ್ವಹಿಸುತ್ತಿರಲಿಲ್ಲ. ಈ ಕುರಿತು ಸಮರ್ಪಕ ಉತ್ತರ ನೀಡಲು ಸಹಾಯಕ ಇಂಜಿನಿಯರ್ ವೆಂಕಟೇಶ್ ನಾಯಕ್ ವಿಫಲರಾದರು. ಈ ವೇಳೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ ಅವರು, ನೀವೇ ನನ್ನ ಸ್ಥಾನದಲ್ಲಿ ಇದಿದ್ದರೆ ಏನು ಮಾಡುತ್ತಿದ್ದೀರಿ? ನಿಮ್ಮ ಕೆಲಸ ನಿಮಗೇ ತೃಪ್ತಿ ತಂದಿದ್ದೀಯಾ ಎಂದು ಪ್ರಶ್ನಿಸಿದರು.

    ಸಿದ್ದರಾಮಯ್ಯ ಅವರ ಪ್ರಶ್ನೆಗೆ ಉತ್ತರಿಸಲಾಗದೆ ತಮ್ಮ ಕರ್ತವ್ಯ ಲೋಪವನ್ನು ಒಪ್ಪಿಕೊಂಡ ಅಧಿಕಾರಿ ಮುಂದಿನ ದಿನಗಳಲ್ಲಿ ಈ ರೀತಿ ನಡೆಯದಂತೆ ನೋಡಿಕೊಳ್ಳುವುದಾಗಿ ತಿಳಿಸಿದರು. ಆದರೆ ಅಧಿಕಾರಿಗಳ ಯಾವುದೇ ಮಾತಿಗೆ ಸಮಾಧಾನಗೊಳ್ಳದ ಸಿದ್ದರಾಮಯ್ಯ ಅವರು ಅಮಾನತು ಮಾಡುವಂತೆ ಸೂಚನೆ ನೀಡಿದರು. ಈ ವೇಳೆ ಅಧಿಕಾರಿ ತಮ್ಮನ್ನು ಅಮಾನತು ಮಾಡದಂತೆ ಭಾವುಕರಾಗಿ ಕಣ್ಣೀರು ಹಾಕಿ ಮನವಿ ಮಾಡಿದರು, ಅದರು ಸಿದ್ದರಾಮಯ್ಯ ಅವರು ತಮ್ಮ ಸೂಚನೆಯನ್ನು ಹಿಂಪಡೆಯದೆ, ಯಾವುದೇ ಅಧಿಕಾರಿ ಸಹ ಮುಂದಿನ ದಿನಗಳಲ್ಲಿ ಕರ್ತವ್ಯ ಲೋಪ ಎಸಗಿದರೆ ಕಠಿಣ ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ಅಂದ ಹಾಗೇ ನೀರು ಸರಬರಾಜು ಇಲಾಖೆ ಸಹಾಯಕ ಇಂಜಿನಿಯರ್ ವೆಂಕಟೇಶ್ ನಾಯಕ್ ಅವರು ಮೂಲತಃ ಮುಧೋಳ ತಾಲೂಕಿನ ಮಂಟೂರ ಗ್ರಾಮದರಾಗಿದ್ದಾರೆ.