ನವದೆಹಲಿ: ಲಸಿಕೆಯಿಂದ ಅಪರೂಪದ ಅಡ್ಡಪರಿಣಾಮ ಉಂಟಾಗಬಹುದು ಎಂದು ಒಪ್ಪಿಕೊಂಡ ಬಳಿಕ ಕೋವಿಡ್ ಲಸಿಕೆಯನ್ನು (Covid Vaccine) ಜಾಗತಿಕವಾಗಿ ಹಿಂತೆಗೆದುಕೊಳ್ಳಲು ಅಸ್ಟ್ರಾಜೆನೆಕಾ (AstraZeneca) ಆರಂಭಿಸಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದ ನಂತರ ನವೀಕರಿಸಿದ ಲಸಿಕೆಗಳ ಹೆಚ್ಚುವರಿಯಾಗಿ ಲಭ್ಯವಿದೆ. ಇದು ಲಸಿಕೆಗೆ ಬೇಡಿಕೆಯಲ್ಲಿ ಕುಸಿತಕ್ಕೆ ಕಾರಣವಾಗಿದೆ. ಹೀಗಾಗಿ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಕಂಪನಿ ತಿಳಿಸಿದೆ.
ಕಂಪನಿಯು ತನ್ನ ಮಾರ್ಕೆಟಿಂಗ್ ಅಧಿಕಾರವನ್ನು ಸ್ವಯಂಪ್ರೇರಣೆಯಿಂದ ಹಿಂತೆಗೆದುಕೊಂಡಿರುವುದರಿಂದ ಲಸಿಕೆಯನ್ನು ಇನ್ಮುಂದೆ ಯುರೋಪಿಯನ್ ಒಕ್ಕೂಟದಲ್ಲಿ ಬಳಸಲು ಅಧಿಕೃತಗೊಳಿಸಲಾಗಿಲ್ಲ. ಹಿಂಪಡೆಯಲು ಅರ್ಜಿಯನ್ನು ಮಾರ್ಚ್ 5 ರಂದು ಸಲ್ಲಿಸಲಾಗಿತ್ತು. ಮಂಗಳವಾರದಿಂದ (ಮಾ.7) ಜಾರಿಗೆ ಬಂದಿದೆ. ಇದನ್ನೂ ಓದಿ: ಡೆಲ್ಲಿ, ರಾಜಸ್ಥಾನ ಪಂದ್ಯದ ವೇಳೆ ಆಪ್ ಕಾರ್ಯಕರ್ತರಿಂದ ಪ್ರತಿಭಟನೆ – ಹಲವರು ವಶಕ್ಕೆ
ವ್ಯಾಕ್ಸಿವ್ರಿಯಾ (Vaxzervria Vaccine) ಎಂದು ಕರೆಯಲ್ಪಡುವ ಲಸಿಕೆಯನ್ನು ಈ ಹಿಂದೆ ಅನುಮೋದಿಸಿರುವ ಇತರ ದೇಶಗಳಲ್ಲಿಯೂ ಹಿಂತೆಗೆದುಕೊಳ್ಳಲು ಕಂಪನಿ ಅರ್ಜಿ ಸಲ್ಲಿಸಲಿದೆ. ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ರಕ್ತದ ಪ್ಲೇಟ್‌ಲೆಟ್‌ಗೆ ಕಾರಣವಾಗುವ ಅಪರೂಪದ ಅಡ್ಡ ಪರಿಣಾಮದಿಂದಾಗಿ ವ್ಯಾಕ್ಸೆವ್ರಿಯಾ ಲಸಿಕೆಯು ಜಾಗತಿಕ ಪರಿಶೀಲನೆಯಲ್ಲಿದೆ. ಫೆಬ್ರವರಿಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ ನ್ಯಾಯಾಲಯದ ದಾಖಲೆಗಳಲ್ಲಿ, ಲಸಿಕೆ ಅಪರೂಪದ ಸಂದರ್ಭಗಳಲ್ಲಿ ಅಡ್ಡಪರಿಣಾಮ ಉಂಟುಮಾಡಬಹುದು ಎಂದು ಅಸ್ಟ್ರಾಜೆನೆಕಾ ಒಪ್ಪಿಕೊಂಡಿತ್ತು.
– ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡಪರಿಣಾಮ ವರದಿ ಬೆನ್ನಲ್ಲೇ ಪ್ರತಿಕ್ರಿಯೆ
ನವದೆಹಲಿ: ಯಾವುದೇ ಲಸಿಕೆಯ ಏಕಮಾತ್ರ ಆದ್ಯತೆ ಸುರಕ್ಷತೆ. ಆ ಉದ್ದೇಶದಿಂದಲೇ ಲಸಿಕೆ ಅಭಿವೃದ್ಧಿಪಡಿಸಲಾಗಿದೆ ಎಂದು ಕೋವ್ಯಾಕ್ಸಿನ್ (Covaxin) ಅಭಿವೃದ್ಧಿಪಡಿಸಿದ ಭಾರತ್ ಬಯೋಟೆಕ್ ಸ್ಪಷ್ಟಪಡಿಸಿದೆ.
ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳನ್ನು ಭಾರತದಲ್ಲಿ ಪ್ರಾಥಮಿಕವಾಗಿ ನಿರ್ವಹಿಸಲಾಯಿತು.
ಭಾರತ್ ಬಯೋಟೆಕ್, ಅದರ ಪರವಾನಗಿ ಪ್ರಕ್ರಿಯೆಯ ಭಾಗವಾಗಿ ಕೋವ್ಯಾಕ್ಸಿನ್ ಅನ್ನು 27,000 ಕ್ಕೂ ಹೆಚ್ಚು ವಿಷಯಗಳಲ್ಲಿ ಮೌಲ್ಯಮಾಪನ ಮಾಡಲಾಗಿದೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಕ್ಲಿನಿಕಲ್ ಟ್ರಯಲ್ ಮೋಡ್‌ನಲ್ಲಿ ನಿರ್ಬಂಧಿತ ಬಳಕೆಯ ಅಡಿಯಲ್ಲಿ ಇದು ಪರವಾನಗಿ ಪಡೆದಿದೆ.
ನವದೆಹಲಿ: ಕೋವಿಶೀಲ್ಡ್ (Covishield) ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ಒಪ್ಪಿಕೊಂಡಿದೆ. ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ನೀಡಿದ್ದ ಲಸಿಕೆ ಇದಾಗಿದೆ.
ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್ ಕಡಿಮೆಗೆ ಕಾರಣವಾಗುವ ಸ್ಥಿತಿಯನ್ನು ಉಂಟುಮಾಡಬಹುದು ಎಂದು ಲಸಿಕೆ ತಯಾರಕರು ನ್ಯಾಯಾಲಯದ ದಾಖಲೆಗಳಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ ಪ್ರಾಧಿಕಾರದಿಂದ 14 ಪತಂಜಲಿ ಉತ್ಪನ್ನಗಳ ಲೈಸನ್ಸ್ ರದ್ದು
ಇಡೀ ಜಗತ್ತನ್ನು ಕಾಡಿದ ಕೋವಿಡ್ ಸಾಂಕ್ರಾಮಿಕ ತಡೆಗೆ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿತು. ದೇಶದಲ್ಲಿ ವ್ಯಾಪಕವಾಗಿ ನಿರ್ವಹಿಸಲ್ಪಟ್ಟಿತು.
ಯುಕೆಯಲ್ಲಿ ಲಸಿಕೆಯು ಹಲವಾರು ಪ್ರಕರಣಗಳಲ್ಲಿ ಸಾವು ಮತ್ತು ತೀವ್ರತರವಾದ ಗಾಯಗಳಿಗೆ ಕಾರಣವಾದ ಆರೋಪದ ಮೇಲೆ ಅಸ್ಟ್ರಾಜೆನೆಕಾ ಮೊಕದ್ದಮೆ ಎದುರಿಸುತ್ತಿದೆ. ಯುಕೆ ಹೈಕೋರ್ಟ್‌ನಲ್ಲಿ 51 ಪ್ರಕರಣಗಳಲ್ಲಿ ಸಂತ್ರಸ್ತರು 100 ಮಿಲಿಯನ್ ಪೌಂಡ್‌ಗಳವರೆಗೆ ಪರಿಹಾರ ಬಯಸಿದ್ದಾರೆ. ಇದನ್ನೂ ಓದಿ: ಪ್ರವಾಸಿಗರೇ ಗಮನಿಸಿ – ಊಟಿ, ಕೊಡೈಕೆನಾಲ್‌ಗೆ ಹೋಗಬೇಕಾದ್ರೆ ಇ-ಪಾಸ್ ಕಡ್ಡಾಯ
ಲಂಡನ್: ಕೊರೊನಾ ಲಸಿಕೆಗಾಗಿ ಆಸ್ಟ್ರಾಜೆನೆಕಾ ಮತ್ತು ಆಕ್ಸ್ ಫರ್ಡ್ ಕಂಪನಿಗಳು ಜಂಟಿಯಾಗಿ ಸಂಶೋಧಿಸುತ್ತಿರುವ ಕೊರೊನಾ ಲಸಿಕೆ ಯಶಸ್ವಿಯಾಗಿದೆ.
ಈಗ ಸಕ್ಸಸ್ ಆಗಿರುವ ಆಸ್ಟ್ರಾಜೆನೆಕಾ ಲಸಿಕೆಯೂ ಯಾವುದೇ ಅಡ್ಡಪರಿಣಾಮವಿಲ್ಲದೇ ಕೆಲಸ ಮಾಡಲಿದೆ. ಜೊತೆಗೆ ಇದು ಶೇ.90ರಷ್ಟು ಪರಿಣಾಮಕಾರಿಯಾಗಿದೆ ಎಂದು ಆಸ್ಟ್ರಾಜೆನೆಕಾ ಕಂಪನಿ ಹೇಳಿಕೆ ನೀಡಿದೆ. ಈ ಲಸಿಕೆ ಈಗಾಗಲೇ ಅಂತಿಮ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ಲಸಿಕೆ ಉತ್ಪಾದನೆಗೆ ಕಂಪನಿಯು ಅನುಮತಿ ಪಡೆಯುವ ನಿರೀಕ್ಷೆ ಇದೆ.
ಲಸಿಕೆ ಹೇಗಿದೆ?
ಆಸ್ಟ್ರಾಜೆನೆಕಾ ಮತ್ತು ಆಕ್ಸಫರ್ಡ್ ಕಂಪನಿಗಳು ಜಂಟಿಯಾಗಿ ಆವಿಷ್ಕಾರ ಮಾಡಿರುವ ಈ ಲಸಿಕೆ ಶೇ.90ರಷ್ಟು ಪರಿಣಾಮಕಾರಿಯಾಗಿದೆ. 1 ಡೋಸ್‍ನಲ್ಲೇ ಆಸ್ಟ್ರಾಜೆನೆಕಾ ಲಸಿಕೆ ಶೇಕಡಾ 90ರಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ. 1 ತಿಂಗಳ ಬಳಿಕ 2 ಫುಲ್ ಡೋಸ್ ಕೊಟ್ಟಾಗ ಶೇ.62ರಷ್ಟು ಪರಿಣಾಮಕಾರಿಯಾಗಿ ಈ ಲಸಿಕೆ ಕೆಲಸ ಮಾಡಲಿದೆ ಎಂದು ಆಸ್ಟ್ರಾಜೆನೆಕಾ ಕಂಪನಿ ತಿಳಿಸಿದೆ.
2 ಫುಲ್ ಡೋಸ್‍ಗಳ ಪರಿಣಾಮಗಳನ್ನು ಒಟ್ಟಿಗೆ ವಿಶ್ಲೇಷಿಸಿದರೆ ಆಸ್ಟ್ರಾಜೆನೆಕಾ ಲಸಿಕೆ ಶೇಕಡಾ 70ರಷ್ಟು ಪರಿಣಾಮಕಾರಿಯಾಗಿದ್ದು, ಕೊರೋನಾ ಸೋಂಕು ತಡೆಯುವಿಕೆಯಲ್ಲಿ ಪರಿಣಾಮ ಬೀರಲಿದೆ. ಈ ಲಸಿಕೆಯ ಪ್ರಯೋಗಕ್ಕೆ ಒಳಗಾದವರು ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ, ಗಂಭೀರ ಕಾಯಿಲೆಗಳು ಕಾಣಿಸಿಕೊಂಡಿಲ್ಲ. ಜೊತೆಗೆ 2-8 ಡಿಗ್ರಿ ಸೆಲ್ಸಿಯಸ್‍ನಷ್ಟು ಉಷ್ಣಾಂಶದಲ್ಲಿ ಲಸಿಕೆ ಸಂಗ್ರಹ ಮತ್ತು ಸಾಗಾಟ ಮಾಡಬಹುದು. ಲಸಿಕೆ ಉತ್ಪಾದನೆ ಆದ ಬಳಿಕ 6 ತಿಂಗಳಲ್ಲಿ ನೀಡಬಹುದು. 2021ರಲ್ಲಿ 300 ಕೋಟಿಯಷ್ಟು ಲಸಿಕೆ ಉತ್ಪಾದನೆ ಗುರಿ ಹೊಂದಿದ್ದೇವೆ ಎಂದು ಆಸ್ಟ್ರಾಜೆನೆಕಾ ಮಾಹಿತಿ ನೀಡಿದೆ.
ಫೆಬ್ರವರಿ ವೇಳೆಗೆ ಕೊರೊನಾ ವಿರುದ್ಧ ಹೋರಾಡಲು ಭಾರತಕ್ಕೆ ಎರಡು ಲಸಿಕೆಗಳು ಲಭ್ಯವಿರುತ್ತವೆ ಎಂದು ಹೇಳಲಾಗಿದ್ದು, ಫೆಬ್ರವರಿ ಆರಂಭದಲ್ಲೇ ಆಸ್ಟ್ರಾಜೆನೆಕಾ ಮತ್ತು ಭಾರತ್ ಬಯೋಟೆಕ್‍ನ ಲಸಿಕೆಗಳು ಲಭ್ಯವಾಗುವ ಸಾಧ್ಯತೆ ಇದೆ.
ಎಲ್ಲರಿಗಿಂತ ಮೊದಲು ಹೇಗೆ?
ಆಕ್ಸ್‍ಫರ್ಡ್ ವಿಶ್ವವಿದ್ಯಾಲಯ ತೀವ್ರತೆರನಾದ ಶ್ವಾಸಕೋಶದ ಸಮಸ್ಯೆ ತರಬಲ್ಲ ಸಾರ್ಸ್ (ಸಿವಿಯರ್ ಅಕ್ಯೂಟ್ ರೆಸ್ಪಿರೇಟರಿ ಸಿಂಡೋಮ್) ಹಾಗೂ ಎಂಇಆರ್‍ಎಸ್ (ಮಿಡಲ್ ಈಸ್ಟ್ ರೆಸ್ಪಿರೇಟರಿ ಸಿಂಡೋಮ್) ಸೋಂಕಿಗೆ ಲಸಿಕೆಯನ್ನು ಕಂಡು ಹಿಡಿಯುವ ಪ್ರಯತ್ನ ನಡೆಸುತ್ತಿತ್ತು. ಈ ನಡುವೆ ಉಸಿರಾಟದ ಸಮಸ್ಯೆಗೆ ಕಾರಣವಾಗಬಲ್ಲ ಕೊರೊನಾ ವೈರಸ್ ಬಂದಿದೆ. ಹೀಗಾಗಿ ಕೂಡಲೇ ತಂಡ ಕೋವಿಡ್‍ಗೆ ಲಸಿಕೆ ಕಂಡು ಹಿಡಿಯಲು ಮುಂದಾಗಿತ್ತು. ಬೇರೆಯವರು ಲಸಿಕೆ ಕಂಡು ಹಿಡಿಯುವ ಪ್ರಯೋಗ ನಡೆಸುವುದಕ್ಕೆ ಮುನ್ನವೇ ಇವರು ವೈರಸ್ ಕುರಿತು ಸಾಕಷ್ಟು ಸಂಶೋಧನೆ ನಡೆಸಿರುವ ಕಾರಣ ವಿಶ್ವದಲ್ಲಿ ಈ ಲಸಿಕೆ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
– ಲಸಿಕೆ ತಯಾರಿಸುತ್ತಿರುವ ಆಸ್ಟ್ರಾಜನಿಕಾ ಜೊತೆ ಚರ್ಚೆ – ಎಲ್ಲರಿಗೂ ಉಚಿತ ಲಸಿಕೆ ನೀಡಲು ಸರ್ಕಾರ ಬದ್ಧ
ಬೆಂಗಳೂರು: 2021 ರ ಆರಂಭದಲ್ಲೇ ಕೋವಿಡ್ ಲಸಿಕೆ ದೊರೆಯುವ ನಿರೀಕ್ಷೆ ಇದ್ದು, ರಾಜ್ಯದ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಆಸ್ಟ್ರಾಜನಿಕಾ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕೊರೊನಾ ಲಸಿಕೆಯ ಸಂಶೋಧನೆ ಮತ್ತು ಪ್ರಾಯೋಗಿಕ ಪರೀಕ್ಷೆಯಲ್ಲಿ ತೊಡಗಿರುವ ಆಸ್ತ್ರಾ ಜೆನೆಕಾ ಸಂಸ್ಥೆಯ ಪ್ರತಿನಿಧಿಗಳು ಇಂದು ಲಸಿಕೆ ಅಭಿವೃದ್ಧಿಯ ಪ್ರಗತಿ, ಅದರ ಸಾಧಕ-ಬಾಧಕಗಳ ಕುರಿತು ಮಾಹಿತಿ ನೀಡಿದರು. 2021ರ ಆರಂಭದ ವೇಳೆಗೆ ಲಸಿಕೆ ಲಭ್ಯವಾಗುವ ವಿಶ್ವಾಸ ವ್ಯಕ್ತಪಡಿಸಿದರು. (1/5) pic.twitter.com/VMMFeFG31J
ಪುಣೆಯ ಸೇರಂ ಸಂಸ್ಥೆ ಜೊತೆ ಆಸ್ಟ್ರಾಜನಿಕಾ ಸಂಸ್ಥೆಯು ಒಡಂಬಡಿಕೆ ಮಾಡಿಕೊಂಡು ಲಸಿಕೆಯ ಪ್ರಾಯೋಗಿಕ ಪರೀಕ್ಷೆ ನಡೆಸುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಸಹಯೋಗದಲ್ಲಿ ಪ್ರಯೋಗ ಮಾಡಲಾಗುತ್ತಿದೆ. ಮೈಸೂರಿನ ಜೆಎಸ್ಎಸ್ ಸಂಸ್ಥೆ ಜೊತೆಗೂ ಒಪ್ಪಂದವಾಗಿದೆ. 56 ದಿನಗಳ ಹಿಂದಷ್ಟೇ ಒಂದನೇ ಹಂತದ ಪ್ರಯೋಗವನ್ನು ಯಶಸ್ವಿಯಾಗಿ ಮಾಡಲಾಗಿದೆ. ಇನ್ನು 2 ಹಾಗೂ 3 ನೇ ಹಂತದಲ್ಲಿ ದೇಶದ 1,600 ಜನರ ಮೇಲೆ ಲಸಿಕೆ ಪ್ರಯೋಗ ಮಾಡಲಾಗುತ್ತದೆ. ಇನ್ನಷ್ಟು ಹೆಚ್ಚು ಜನರನ್ನು ಲಸಿಕೆ ಪ್ರಯೋಗಕ್ಕೆ ಒಳಪಡಿಸಬೇಕು ಎಂದು ಸಂಸ್ಥೆಗೆ ಕೋರಲಾಗಿದೆ. ಜೊತೆಗೆ ರಾಜ್ಯದಲ್ಲಿ ಲಸಿಕೆ ವಿತರಣೆ ಸಿದ್ಧತೆ ಕುರಿತು ಚರ್ಚಿಸಲಾಗಿದೆ. 100 ಕೋಟಿ ಜನರಿಗೆ ಲಸಿಕೆ ನೀಡುವ ಸಾಮರ್ಥ್ಯವಿದೆ ಎಂದು ಸಂಸ್ಥೆಯವರು ತಿಳಿಸಿದ್ದಾರೆ ಎಂದು ಸಚಿವರು ವಿವರಿಸಿದರು. ಇದನ್ನೂ ಓದಿ: ಪ್ರತಿ ನಿಮಿಷಕ್ಕೆ 500, ಪ್ರತಿ ಗಂಟೆಗೆ 30 ಸಾವಿರ ಸೀಸೆ ಲಸಿಕೆ ಉತ್ಪಾದಿಸುತ್ತೇವೆ: ಸೇರಮ್ ಸಿಇಓ
ಲಸಿಕೆ ಲಭ್ಯವಾದ ನಂತರ ಪ್ರತಿಯೊಬ್ಬರಿಗೂ ತಲುಪಿಸಲು ಪೂರ್ವಸಿದ್ಧತೆಗಳು ನಡೆಯುತ್ತಿದ್ದು ಸರಬರಾಜು, ಸಂಗ್ರಹಣೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳ ಬಗ್ಗೆ ಸಲಹೆ ನೀಡಲು ತಜ್ಞರ ಸಮಿತಿ ರಚಿಸಲಾಗಿದೆ. ಪ್ರಥಮ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ನಂತರ ವಯೋವೃದ್ಧರು ಮತ್ತು ಇತರೆ ಸಹ ಅಸ್ವಸ್ಥತೆಗಳನ್ನು ಹೊಂದಿರುವವರಿಗೆ ಲಸಿಕೆ ನೀಡಲಾಗುವುದು. (2/5) pic.twitter.com/ZgXV8Yq2ot
ಕೇಂದ್ರ ಆರೋಗ್ಯ ಸಚಿವಾಲಯದ ಸಹಯೋಗದೊಂದಿಗೆ ಆರೋಗ್ಯ ತಜ್ಞರು, ತಾಂತ್ರಿಕ ಪರಿಣತರು, ಪೂರೈಕೆದಾರರನ್ನು ಒಳಗೊಂಡಂತೆ ತಾಂತ್ರಿಕ ಸಮಿತಿ ರಚಿಸಿದ್ದು, ಲಸಿಕೆಯ ಪೂರೈಕೆ, ಸಂಗ್ರಹಣೆ, ವಿತರಣೆ ಕುರಿತು ಸಮಿತಿ ಸಲಹೆ ನೀಡಲಿದೆ. ಮೊದಲ ಹಂತದಲ್ಲಿ ರಾಜ್ಯದ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಸಿದ್ಧತೆ ನಡೆಸಲಾಗುತ್ತಿದ್ದು, ಮುಂದಿನ ಹಂತದಲ್ಲಿ ವಯೋವೃದ್ಧರು, ಇತರೆ ಸಹ ಅಸ್ವಸ್ಥತೆಗಳನ್ನು ಹೊಂದಿರುವವರಿಗೆ, ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ಲಸಿಕೆ ನೀಡಲಾಗುತ್ತದೆ.
ಲಸಿಕೆ ಸಂಶೋಧನೆಯಲ್ಲಿ ತೊಡಗಿರುವ ಇತರೆ ಸಂಸ್ಥೆಗಳಾದ ಸೀರಮ್ ಇನ್‌ಸ್ಟಿಟ್ಯೂಟ್, ಭಾರತ್ ಬಯೋಟೆಕ್ ಸಂಸ್ಥೆಗಳ ಜೊತೆಗೂ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಾಗುವುದು. ಲಸಿಕೆ ಕಂಡುಹಿಡಿಯಲು ವಿಶ್ವದಾದ್ಯಂತ ಹಲವಾರು ಪ್ರಯತ್ನಗಳು ನಡೆಯುತ್ತಿದ್ದು ಲಸಿಕೆ ಎಂದು ಲಭ್ಯವಾಗುತ್ತದೆ ಎಂಬ ಪ್ರಶ್ನೆಗೆ ನಿಖರ ಉತ್ತರ ಯಾರ ಬಳಿಯೂ ಸದ್ಯಕ್ಕಿಲ್ಲ. (3/5) pic.twitter.com/5QLFP1epU1
ಲಸಿಕೆಯ ದರದ ಬಗ್ಗೆ ಈಗ ಚರ್ಚೆಯಾಗುತ್ತಿದೆ. ನಮ್ಮ ಸರ್ಕಾರ ಕೋವಿಡ್ ಪರೀಕ್ಷೆ, ಚಿಕಿತ್ಸೆ ಮೊದಲಾದ ವೆಚ್ಚಗಳನ್ನು ಭರಿಸಿದೆ. ಅದೇ ರೀತಿ ರಾಜ್ಯದ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ಬದ್ಧ ಎಂದು ತಿಳಿಸಿದರು.
ಒಂದನೇ ಹಂತದ ಪ್ರಯೋಗದಲ್ಲಿ ಲಸಿಕೆ ನೀಡಿದಾಗ 28 ದಿನಗಳಲ್ಲಿ ಆ್ಯಂಟಿಬಾಡಿ ಉತ್ಪಾದನೆ ಆಗಿದೆ. 1 ನೇ ಹಂತದಲ್ಲಿ ಕೊರೊನಾ ಸೋಂಕು ಇಲ್ಲದ ವ್ಯಕ್ತಿಗಳಿಗೆ ಲಸಿಕೆ ನೀಡಲಾಗಿದೆ. 2, 3 ನೇ ಹಂತಗಳಲ್ಲಿ ಕೊರೊನಾ ಸೋಂಕು ಬಂದಿರುವವರಿಗೂ ಲಸಿಕೆ ನೀಡಲಾಗುತ್ತದೆ. ಪ್ರಯೋಗ ಯಶಸ್ವಿಯಾಗಿ ಕೇಂದ್ರ ಸರ್ಕಾರ ಅನುಮತಿ ನೀಡಿದ ನಂತರ ಕೇಂದ್ರದೊಂದಿಗೆ ಮಾತುಕತೆ ನಡೆಸಿ, ರಾಜ್ಯದಲ್ಲಿ ಲಸಿಕೆ ವಿತರಿಸಲಾಗುವುದು ಎಂದು ತಿಳಿಸಿದರು.
ರೋಟಾ ವೈರಸ್ ಗೆ ಲಸಿಕೆ ಸಿಗಲು 29 ವರ್ಷ ಬೇಕಾಯ್ತು. ಎಬೋಲಾ ವೈರಸ್ ಗೆ ಲಸಿಕೆ ಕಂಡುಹಿಡಿಯಲು 20 ವರ್ಷ ಕಾಯಬೇಕಾಯ್ತು. ಮಂಪ್ಸ್ ವೈರಸ್ ಗೆ 4 ವರ್ಷದಲ್ಲಿ ಲಸಿಕೆ ಕಂಡುಹಿಡಿದಿದ್ದೇ ಈವರೆಗೂ ನಮಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಸಿಕ್ಕ ಲಸಿಕೆ. ಈಗ ಕೊರೊನಾ ವೈರಸ್ ಗೆ 1 ವರ್ಷದೊಳಗೆ ಲಸಿಕೆ ಕಂಡುಹಿಡಿಯುವ ಪ್ರಯತ್ನದಲ್ಲಿದ್ದೇವೆ. (4/5) pic.twitter.com/MVFiitOZvl
ನಾನು ಆರೋಗ್ಯ ಖಾತೆ ವಹಿಸಿಕೊಂಡ ಬಳಿಕ ಕಳೆದ ಹತ್ತು ದಿನಗಳಿಂದ ಈಚೆಗೆ ಕೋರಾನಾ ಸೋಂಕು ಮತ್ತು ಕೋವಿಡ್ ಸಾವಿನ ಪ್ರಮಾಣದಲ್ಲಿ ಗಣನೀಯ ಇಳಿಕೆ ಉಂಟಾಗಿದೆ. ಇದಕ್ಕೆ ಕೆಲವರು ಸಂಶಯದಿಂದಲೂ ನೋಡುತ್ತಿದ್ದಾರೆ. ಯಾವುದೇ ಅಂಕಿ- ಸಂಖ್ಯೆಯನ್ನು ನಾವು ವ್ಯತ್ಯಾಸ ಮಾಡುವ ಕೆಲಸ ಮಾಡಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯೇ ಕರ್ನಾಟಕ ಸರ್ಕಾರ ಅತ್ಯಂತ ಪಾರದರ್ಶಕವಾಗಿ ನಡೆದುಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು.
ಕೊರೊನಾ ವೈರಸ್ ವಿರುದ್ಧದ ಈ ಹೋರಾಟದಲ್ಲಿ ಲಸಿಕೆ ನಮಗೆ ಆಶಾಕಿರಣವಾಗಿದೆ. ವಿಜ್ಞಾನಿಗಳ ಪ್ರಯತ್ನ ಆದಷ್ಟು ಬೇಗ ಫಲ ನೀಡಲಿ ಎಂದು ಆಶಿಸುತ್ತಾ ಲಸಿಕೆ ಸಿಗುವವರೆಗೂ ಮಾಸ್ಕ್ ಧರಿಸಿವುದು, ಪದೇ ಪದೇ ಕೈ ತೊಳೆಯುವುದು ಮತ್ತು ಭೌತಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸೋಣ. (5/5) pic.twitter.com/RqwV0Wne43
ಲಸಿಕೆ ಇನ್ನೂ ಪ್ರಯೋಗದ ಹಂತದಲ್ಲಿದೆ. ಆದ್ದರಿಂದ ಲಸಿಕೆಯ ದರದ ಬಗ್ಗೆ ಚರ್ಚಿಸಿಲ್ಲ. ಲಾಭಕ್ಕಾಗಿ ಲಸಿಕೆ ಮಾಡುತ್ತಿಲ್ಲ ಎಂದು ಆಸ್ಟ್ರಾಜನಿಕಾ ಕಂಪನಿಯವರು ಹೇಳಿದ್ದಾರೆ. ಕೋವಿಡ್ ಅಂಕಿ ಅಂಶದಲ್ಲಿ ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯವರು ಕೂಡ ನಮ್ಮ ಸರ್ಕಾರ ನೀಡುವ ಮಾಹಿತಿ ಪಾರದರ್ಶಕತೆಯಿಂದ ಕೂಡಿದೆ ಎಂದು ಶ್ಲಾಘಿಸಿದೆ. ನವೆಂಬರ್, ಡಿಸೆಂಬರ್, ಜನವರಿಯ ಚಳಿಗಾಲದ ಅವಧಿಯಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ ಎಂದು ಸಚಿವರು ಹೇಳಿದರು.
ಸಾವು, ಸೋಂಕು ಮತ್ತು ಗುಣಮುಖರಾದವರ ಅಂಕಿ-ಅಂಶಗಳನ್ನು ಅತ್ಯಂತ ಪಾರದರ್ಶಕವಾಗಿ ನೀಡುತ್ತಿದ್ದೇವೆ. ಇಳಿಮುಖವಾಗಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಯೊಬ್ಬ ಕೊರೋನಾ ಯೋಧರ ಪ್ರಯತ್ನ ಕಾರಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಆಸ್ಟ್ರಾಜನಿಕಾ ವ್ಯವಸ್ಥಾಪಕ ನಿರ್ದೇಶಕ ಗಗನ್ ದೀಪ್ ಸಿಂಗ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಸುದರ್ಶನ್ ಸಭೆಯಲ್ಲಿದ್ದರು.