Tag: athani constituency

  • ನಾಳೆ ಸಿಎಂ ಅಥಣಿ ಕ್ಷೇತ್ರ ಪ್ರವಾಸ – ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

    ನಾಳೆ ಸಿಎಂ ಅಥಣಿ ಕ್ಷೇತ್ರ ಪ್ರವಾಸ – ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

    ಚಿಕ್ಕೋಡಿ: ಲೋಕಸಭೆ ಚುನಾವಣೆಗೂ (Lok Sabha Election) ಮುನ್ನ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರ ಗುರಿಯಾಗಿಸಿಕೊಂಡು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಹಮ್ಮಿಕೊಂಡಿದ್ದು, ಶುಕ್ರವಾರ (ಆ.11) ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕ್ಷೇತ್ರ ಅಥಣಿಗೆ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆ ಶಿವಕುಮಾರ್ (‌Shivakumar) ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

    ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪಶು ವೈದ್ಯಕೀಯ ಮಹಾವಿದ್ಯಾಲಯ (Medical University) ಕಟ್ಟಡ ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಗುದ್ದಲಿಪೂಜೆ ನೆರವೇರಿಸಲಿದ್ದಾರೆ. ಇದನ್ನೂ ಓದಿ: ನನ್ನ ಹತ್ತಿರನೂ ಪೆನ್‌ಡ್ರೈವ್ ಇದೆ, ಬಿಡುಗಡೆಗಾಗಿ ಕಾಯ್ತಿದ್ದೇನೆ: ಲಕ್ಷ್ಮಣ ಸವದಿ

    ಸಿಎಂ ಪ್ರವಾಸ – ಎಲ್ಲಿ ಏನು?
    ಶುಕ್ರವಾರ ಬೆಳಗ್ಗೆ 11.15ಕ್ಕೆ ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಂದ ಸಿಎಂ ಆಗಮಿಸಲಿದ್ದಾರೆ. ಬಳಿಕ ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ನಿಂದ ಹೆಲಿಕಾಪ್ಟರ್ ಮೂಲಕ ಅಥಣಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಅಥಣಿಯ ಕೆಎಲ್‌ಇ ಕಾಲೇಜು ಹೆಲಿಪ್ಯಾಡ್‌ಗೆ ಆಗಮಿಸಿ ಮಧ್ಯಾಹ್ನ 12.30ಕ್ಕೆ ಅಥಣಿಯಲ್ಲಿ ಜಗಜ್ಯೋತಿ ಬಸವೇಶ್ವರ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ. ಅಥಣಿಯಿಂದ ಕೊಕಟನೂರ ಗ್ರಾಮಕ್ಕೆ ತೆರಳಲಿರುವ ಸಿಎಂ ಮಧ್ಯಾಹ್ನ 12.50ಕ್ಕೆ ಕೊಕಟನೂರು ಗ್ರಾಮದಲ್ಲಿ ಅದ್ಧೂರಿ ಸಮಾರಂಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಗುದ್ದಲಿಪೂಜೆ ನೆರವೇರಿಸಲಿದ್ದಾರೆ.

    ಸಂಜೆ 4.30ಕ್ಕೆ ಕೊಕಟನೂರಿಂದ ಹೆಲಿಕಾಪ್ಟರ್ ಮೂಲಕ ಸಾಂಬ್ರಾ ಏರ್‌ಪೋರ್ಟ್‌ಗೆ ಪ್ರಯಾಣ ಮಾಡಿ ಸಂಜೆ 5.30ಕ್ಕೆ ಸಾಂಬ್ರಾ ಏರ್‌ಪೋರ್ಟ್‌ನಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಇದನ್ನೂ ಓದಿ: ಬಡ್ಡಿಗೆ ಸಾಲ ಪಡೆದು ಜರ್ಮನಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಬೆಳಗಾವಿ ಯುವತಿಗೆ ಚಿನ್ನ, ಬೆಳ್ಳಿ, ಕಂಚಿನ ಪದಕ

    ಸಿಎಂಗೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ರಾಮಲಿಂಗಾರೆಡ್ಡಿ, ಹೆಚ್‌.ಸಿ ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಕೆ.ವೆಂಕಟೇಶ್, ಎನ್.ಎಸ್ ಬೋಸರಾಜು ಸೇರಿ ಹಲವರು ಸಾಥ್ ನೀಡಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸಲು ಈಗಾಗಲೇ‌ ಲಕ್ಷ್ಮಣ ಸವದಿ ಪೂರ್ವಭಾವಿ ಸಭೆ ನಡೆಸಿದ್ದಾರೆ. ಸಮಾವೇಶದಲ್ಲಿ 20 ಸಾವಿರಕ್ಕೂ ಹೆಚ್ಚು ಜನರ ಸೇರಿಸಿ ಶಕ್ತಿ ಪ್ರದರ್ಶನಕ್ಕೆ ಲಕ್ಷ್ಮಣ ಸವದಿ ಸಿದ್ಧತೆ ನಡೆಸಿದ್ದಾರೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತವರು ಕ್ಷೇತ್ರಕ್ಕೆ ಭರ್ಜರಿ ಕೊಡುಗೆ ನೀಡಿದ ಡಿಸಿಎಂ ಸವದಿ

    ತವರು ಕ್ಷೇತ್ರಕ್ಕೆ ಭರ್ಜರಿ ಕೊಡುಗೆ ನೀಡಿದ ಡಿಸಿಎಂ ಸವದಿ

    ಚಿಕ್ಕೋಡಿ: ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಮ್ಮ ತವರು ಕ್ಷೇತ್ರ ಅಥಣಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ.

    ಸವದಿ ಅವರ ಸ್ವ ಕ್ಷೇತ್ರ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿಗೆ ಸಹಾಯಕ ಪ್ರಾದೇಶಿಕ ಆಯುಕ್ತರ ಕಚೇರಿ (ಆರ್.ಟಿ.ಒ) ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಅಥಣಿ ಹಾಗೂ ನೆರೆಯ ರಾಯಭಾಗಗಳು ಅಥಣಿ ಪ್ರಾದೇಶಿಕ ಕಚೇರಿ ವ್ಯಾಪ್ತಿಗೆ ಬರಲಿವೆ. ಕಚೇರಿ ತಕ್ಷಣ ಆರಂಭವಾಗುವ ನಿಟ್ಟಿನಲ್ಲಿ ಬಾಡಿಗೆಗೆ ಕಟ್ಟಡ ಪಡೆದುಕೊಳ್ಳಬೇಕು. ಕಚೇರಿಗೆ ಅಗತ್ಯ ಇರುವ ಹುದ್ದೆಗಳನ್ನು ಇಲಾಖೆಯ ವ್ಯಾಪ್ತಿಯಲ್ಲಿ ಗುರುತಿಸಿ ಸ್ಥಳಾಂತರಿಸಿಕೊಳ್ಳತಕ್ಕದು ಎಂದು ಸರ್ಕಾರದ ಅದೇಶದಲ್ಲಿ ತಿಳಿಸಲಾಗಿದೆ.

    ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗದ ಕೃಷಿ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಅಥಣಿ ಕೇಂದ್ರ ಸ್ಥಳವಾಗಿರುವುದರಿಂದ ವಾಹನ ಸಂಚಾರ, ಸಾಗಾಟಗಳ ವಹಿವಾಟುಗಳು ಅಧಿಕವಾಗಿರುತ್ತವೆ. ಈ ಪ್ರದೇಶದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಕಚೇರಿ ಆರಂಭಿಸಲಾಗುತ್ತಿದೆ ಎಂದು ಸಾರಿಗೆ ಇಲಾಖೆಯ ಪ್ರಕಟಣೆ ತಿಳಿಸಿದೆ.