Tag: Athani

  • ಗೋಕಾಕ್ ಅಭಿವೃದ್ಧಿ ಆಗಿಲ್ಲವೆಂದ್ರೆ ಸ್ಥಳದಲ್ಲೇ ರಾಜೀನಾಮೆ ಕೊಡುತ್ತೇನೆ: ಸವಾಲು ಹಾಕಿದ ರಮೇಶ್‌ ಜಾರಕಿಹೊಳಿ

    ಗೋಕಾಕ್ ಅಭಿವೃದ್ಧಿ ಆಗಿಲ್ಲವೆಂದ್ರೆ ಸ್ಥಳದಲ್ಲೇ ರಾಜೀನಾಮೆ ಕೊಡುತ್ತೇನೆ: ಸವಾಲು ಹಾಕಿದ ರಮೇಶ್‌ ಜಾರಕಿಹೊಳಿ

    ಚಿಕ್ಕೋಡಿ: ಗೋಕಾಕ್ ಕ್ಷೇತ್ರ ಅಭಿವೃದ್ಧಿಯಾಗಿಲ್ಲ ಎಂದರೆ ಸ್ಥಳದಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಕಾಕ್ ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿ ಆಗಿಲ್ಲ ಎಂದು ಸತೀಶ್ ಜಾರಕಿಹೊಳಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಜಾರಕಿಹೊಳಿ ಸತೀಶ್ ಜಾರಕಿಹೊಳಿಗೆ ಚಾಲೆಂಜ್ ಮಾಡುತ್ತೇನೆ. ರಸ್ತೆ ಕೆಟ್ಟಿದೆ, ರಸ್ತೆಯೇ ಇಲ್ಲ ಎಂದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲೆಸೆದರು.

    satish jarkiholi

    ಮೂಲ ಜಗಳ ಆರಂಭವಾಗಿದ್ದೇ ಅಥಣಿ ಮತಕ್ಷೇತ್ರಕ್ಕಾಗಿ. ಅಲ್ಲಿ ನೀರಾವರಿ ಯೋಜನೆ ಅನುಷ್ಠಾನ ಮಾಡದಿರುವುದಕ್ಕೆ ನಾನು ಕಾಂಗ್ರೆಸ್ ತೊರೆದಿದ್ದೆ. ಆದರೆ ಅಥಣಿ ಮತಕ್ಷೇತ್ರದ ಅಭಿವೃದ್ಧಿಯನ್ನು ಬಿಜೆಪಿ ಮಾಡುತ್ತದೆ ಎಂದು ಸ್ಪಷ್ಟ ಪಡಿಸಿದರು. ಇದನ್ನೂ ಓದಿ: ಯಾರನ್ನೂ ನಂಬಲ್ಲ, ಭದ್ರತಾ ಅಧಿಕಾರಿಯೇ ನನ್ನನ್ನು ಶೂಟ್ ಮಾಡ್ಬೋದು: ಅಬ್ದುಲ್ಲಾ ಆಝಂ ಖಾನ್

    ನಾನು ಹಾಗೂ ಮಹೇಶ್ ಕುಮಟಳ್ಳಿ ಸಚಿವರಾಗುವುದರ ಬಗ್ಗೆ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಈ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ಪಕ್ಷದ ತೀರ್ಮಾನಕ್ಕೆ ನಾವು ಬದ್ಧ ಎಂದ ಅವರು, ಲಖನ್ ಜಾರಕಿಹೊಳಿ ಸ್ವತಂತ್ರರು. ಅವರ ಹೇಳಿಕೆ ಬಗ್ಗೆ ನನಗೆ ಮಾಹಿತಿಯಿಲ್ಲ. ಲಕ್ಷ್ಮಣ ಸವದಿ ನಾವು ಒಂದೇ ಪಕ್ಷದಲ್ಲಿ ಇರುವ ಕಾರಣ ಪಕ್ಷದ ಆಂತರಿಕ ಸಭೆಯಲ್ಲಿ ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಗದರಿಸಿದ ಮಾತ್ರಕ್ಕೆ ತಂದೆಯನ್ನು ಮಗ ಕೊಲೆ ಮಾಡುವಂತಿಲ್ಲ: ಹೈಕೋರ್ಟ್

    ಬೆಳಗಾವಿ ಶಾಸಕರ ನಿಯೋಗ ಸಿಎಂ ಬಳಿ ಏನೂ ಹೇಳಿದೆ ಎನ್ನುವುದು ನನಗೆ ಗೊತ್ತಿಲ್ಲ. ಈ ಬಗ್ಗೆ ಸಿಎಂ ಹಾಗೂ ಹೈಕಮಾಂಡ್ ಕರೆದು ಕೇಳಿದಾಗ ಉತ್ತರ ಕೊಡುತ್ತೇನೆ. ಉಮೇಶ್ ಕತ್ತಿ ಅವರ ಹೇಳಿಕೆ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದ ಅವರು ಬೆಳಗಾವಿ ರಾಜಕಾರಣದಲ್ಲಿ ಭಿನ್ನಮತ ವಿಚಾರ ಬಗೆಹರಿಸಲು ಬಾಲಚಂದ್ರ ಜಾರಕಿಹೊಳಿ ಮುಂದಾಳತ್ವ ವಹಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಹಾಗೂ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಮಹೇಶ್ ಕುಮಟಳ್ಳಿ ಸೇರಿದಂತೆ ರಮೇಶ ಜಾರಕಿಹೊಳಿ ಬೆಂಬಲಿಗರು ಉಪಸ್ಥಿತರಿದ್ದರು.

  • ನಾಡೋಜ ಡಾ.ಮಹೇಶ್ ಜೋಶಿ ಕನ್ನಡದ ನಿಷ್ಠಾವಂತ ಸೇವಕ: ಅರವಿಂದರಾವ್ ದೇಶಪಾಂಡೆ

    ನಾಡೋಜ ಡಾ.ಮಹೇಶ್ ಜೋಶಿ ಕನ್ನಡದ ನಿಷ್ಠಾವಂತ ಸೇವಕ: ಅರವಿಂದರಾವ್ ದೇಶಪಾಂಡೆ

    ಚಿಕ್ಕೋಡಿ: ನಾಡೋಜ ಡಾ.ಮಹೇಶ್ ಜೋಶಿ ಅವರು ಕಸಾಪ ರಾಜ್ಯಾಧ್ಯಕ್ಷರಾಗಿರುವುದು ಹರ್ಷ ತಂದಿದೆ. ಅವರು ಕನ್ನಡದ ನಿಷ್ಠಾವಂತ ಸೇವಕ ಎಂದು ಆರ್‍ಎಸ್‍ಎಸ್ ಮುಖಂಡ ಹಾಗೂ ಶಿಕ್ಷಣ ಪ್ರೇಮಿ ಅರವಿಂದರಾವ್ ದೇಶಪಾಂಡೆ ಹೇಳಿದರು.

    ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ದಿನಾಂಕ 21ರಂದು ನಡೆದ ಕಸಾಪ ಚುನಾವಣೆಯಲ್ಲಿ ಜೋಶಿ ಅವರು 69,431 ಮತಗಳನ್ನು ಪಡೆಯುವ ಮೂಲಕ ದಾಖಲೆಯ ಗೆಲುವು ಸಾಧಿಸಿದ್ದಾರೆ. ಕಸಾಪ ನೂತನ ಸಾರಥಿಯಾಗಿ ಜೋಶಿ ಅವರು ಕನ್ನಡಾಂಬೆಯ ಸೇವೆಯನ್ನು ವಿನೂತನ ಮಾದರಿಯಲ್ಲಿ ಮಾಡುತ್ತಾರೆ ಎಂಬ ವಿಶ್ವಾಸದಿಂದ ಕನ್ನಡಿಗರು ಮತ ನೀಡಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿದ್ಧಾರೂಢ ಮಠದಲ್ಲಿ ಪೂಜೆಸಲ್ಲಿಸಲು ಹೋದ ಯುವಕ ಕೆರೆ ಪಾಲು

    ಅದೇ ರೀತಿ ಬೆಳಗಾವಿ ಜಿಲ್ಲೆಯ ಅಧ್ಯಕ್ಷರಾಗಿ ಮಂಗಲಾ ಮೆಟಗುಡ್ಡ ಅವರು ಮರು ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರು ಗಡಿಭಾಗದ ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸವನ್ನು ಮಾಡಲಿ ಎಂದು ಶುಭ ಹಾರೈಸಿದ ಅವರು ಬಹುಮತ ನೀಡಿ ಆಯ್ಕೆ ಮಾಡಿದ ಮತದಾರರಿಗೆ ಅಭಿನಂದಿಸಿದರು.

    ಅಥಣಿ ತಾಲೂಕಿನ ಕನ್ನಡ ಸಾಹಿತ್ಯ ಮತ್ತು ಸಾಂಸ್ಕøತಿಕ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್ ಕನಶೆಟ್ಟಿ ಮಾತನಾಡಿದ್ದು, ನಾಡೋಜ ಡಾ.ಮಹೇಶ್ ಜೋಶಿ ಅವರು ತಮ್ಮ ಪ್ರತಿಸ್ಪರ್ಧಿ ಶೇಖರ್‍ಗೌಡ ಮಾಲಿ ಪಾಟೀಲ್ ಅವರ ವಿರುದ್ಧ 46,236 ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಹಿಂದಿನ ಅಧ್ಯಕ್ಷರಾದ ಮನು ಬಳಿಗಾರ್ ಅವರ 38 ಸಾವಿರ ಮತಗಳ ದಾಖಲೆಯನ್ನು ಮುರಿದು ಹಾಕಿದ್ದಾರೆ ಎಂದು ತಿಳಿಸಿದರು.

    ಸಮಸ್ತ ಕನ್ನಡಿಗರಿಗೆ ಚಿರಪರಿಚಿತರಾಗಿರುವ ಜೋಶಿ ಅವರು ಚುನಾವಣೆಯ ಪೂರ್ವದಲ್ಲಿ ಅನೇಕ ಸುಧಾರಣೆಗಳು ಪ್ರಣಾಳಿಕೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ಕನ್ನಡಪರ ಕೆಲಸ ಮಾಡುವುದರ ಜೊತೆಗೆ ನಮ್ಮ ಗಡಿಭಾಗದಲ್ಲಿಯೂ ಕೂಡ ಕನ್ನಡ ಅಸ್ಮಿತೆಯನ್ನು ಕಾಪಾಡುವ ಕೆಲಸ ಮಾಡಲಿದ್ದಾರೆ ಎಂದರು. ಇದನ್ನೂ ಓದಿ: ಯಾರೂ ತಿರುಕನ ಕನಸು ಕಾಣೋದು ಬೇಡ: ಆರ್. ಅಶೋಕ್

    ಈ ವೇಳೆ ಆನಂದ್ ಟೋಣಪಿ, ಅನಿಲ್ ಶಾಸ್ತ್ರಿ, ವೆಂಕಟೇಶ್ ದೇಶಪಾಂಡೆ ಇನ್ನಿತರರು ಉಪಸ್ಥಿತರಿದ್ದರು.

    ಕನ್ನಡ ಸಾಹಿತ್ಯ ಪರಿಷತ್ತಿಗೆ 26ನೇಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಾಡೋಜ ಡಾ.ಮಹೇಶ್ ಜೋಶಿ ಹೆಸರು ಸಮಸ್ತ ಕನ್ನಡಿಗರಿಗೂ ಚಿರಪರಿಚಿತವಾಗಿದೆ. ಸಂತ ಶಿಶುನಾಳ ಶರೀಫರ ಗುರುಗಳಾದ ಗುರು ಗೋವಿಂದ ಭಟ್ಟರ ಮರಿಮೊಮ್ಮಗನಾಗಿರುವ ಜೋಶಿ ಅವರು ದೂರದರ್ಶನ ಚಂದನ ವಾಹಿನಿಯ ಮೂಲಕ ಮಧುರ ಮಧುರವೀ ಮಂಜುಳಗಾನ ಮತ್ತು ಥಟ್ಟಂತ ಹೇಳಿ ಕಾರ್ಯಕ್ರಮಗಳ ಮೂಲಕ ಮನೆಮಾತಾಗಿದ್ದರು.

  • ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುವ ನೈತಿಕ ಹಕ್ಕು ಸಿದ್ದರಾಮಯ್ಯಗಿಲ್ಲ : ಮಹಾಂತೇಶ್ ಕವಟಗಿಮಠ

    ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುವ ನೈತಿಕ ಹಕ್ಕು ಸಿದ್ದರಾಮಯ್ಯಗಿಲ್ಲ : ಮಹಾಂತೇಶ್ ಕವಟಗಿಮಠ

    ಚಿಕ್ಕೋಡಿ: ಜಾತಿ-ಜಾತಿ ಹಾಗೂ ಧರ್ಮ-ಧರ್ಮದ ನಡುವೆ ದ್ವೇಷವನ್ನು ಹುಟ್ಟುಹಾಕುವ ಕಾರ್ಯವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಚಿಕ್ಕೋಡಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ, ವಿವಿಧ ಕಾಮಗಾರಿಗಳಿಗೆ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಜೊತೆಗೂಡಿ ಉದ್ಘಾಟನೆ ನೆರವೇರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್‌ ನಡುವಳಿಕೆ ತಾಲಿಬಾನಿಗಳ ತರ ಎಂದು ಆರೋಪಿಸಿದ್ದಾರೆ. ದೇಶದಲ್ಲಿ ಹಿಂದು ಪರವಾಗಿ ಇರುವ ಪಕ್ಷ ಅಂದ್ರೆ ಭಾರತಿ ಜನತಾ ಪಕ್ಷ, ಭಾರತ ದೇಶ ಅಖಂಡವಾಗಿರುವ ಹಿಂದೂ ದೇಶ, ಇಲ್ಲಿರುವ ಎಲ್ಲಾ ರಾಷ್ಟ್ರೀಯ ಜನರು ಸೌಹಾರ್ದತೆಯಿಂದ ಬದುಕಬೇಕೆಂಬುದು ನಮ್ಮ ಪಕ್ಷದ ಉದ್ದೇಶ. ಆದರೆ ಕಾಂಗ್ರೆಸ್ ಪಕ್ಷ ಮತ ಮತಗಳ ನಡುವೆ ಮತ್ತು ಧರ್ಮ ಧರ್ಮದ ನಡುವೆ ದ್ವೇಷವನ್ನು ಹುಟ್ಟುಹಾಕುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ದಸರಾ ಉದ್ಘಾಟನೆಯನ್ನು ರಾಜಕೀಕರಣಗೊಳಿಸುವುದು ಕೆಟ್ಟ ಸಂಪ್ರದಾಯ – ಆಪ್ ವಿರೋಧ

    ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುವ ನೈತಿಕ ಹಕ್ಕು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗಿಲ್ಲ. ಸಿದ್ದರಾಮಯ್ಯ ವೀರಶೈವ ಲಿಂಗಾಯತ ಧರ್ಮವನ್ನು ಒಡೆಯಲು ಹೋಗಿ ಅಧಿಕಾರ ಕಳೆದುಕೊಂಡರು. ಭಾರತೀಯ ಜನತಾ ಪಕ್ಷ ಎಲ್ಲರನ್ನೂ ಒಗ್ಗೂಡಿಸಿ ಸೌಹಾರ್ದತೆಯಿಂದ ಹಾಗೂ ವಿಶ್ವಾಸ ಹೊಂದಿರುವ ಪಕ್ಷ ಹೀಗಾಗಿ ಜನರು ನಮಗೆ ಅಧಿಕಾರ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಸರ್ಕಾರದಲ್ಲಿ ಬಿಜೆಪಿಗೆ ನಾಯಕರಿಗೆ ಕಳಚಲಾಗದ ‘ಪ್ಯಾಂಟ್ ಭಾಗ್ಯ’ ನೀಡ್ತೇವೆ – ಕಾಂಗ್ರೆಸ್

    ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪ ಚುನಾವಣೆಯಲ್ಲಿ, ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತೆ. ಎಂದು ಅವರು ಕಾಗವಾಡ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಪರ್ವ ಶುರುವಾಗಿದೆ ಒಂದೇ ದಿನ ಒಂದೇ ಗ್ರಾಮದಲ್ಲಿ 22 ಕಾಮಗಾರಿಗಾಗಿ ಚಾಲನೆ ನೀಡಲಾಗಿದೆ. ಇದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ ಎಂಬುದಕ್ಕೆ ಸಾಕ್ಷಿ ಎಂದು ಹೇಳಿದರು.

  • ಅಥಣಿ ಪಶು ವೈದ್ಯಕೀಯ ಮಹಾವಿದ್ಯಾಲಯದ ಅಭಿವೃದ್ಧಿಗೆ ರೂ.36 ಕೋಟಿ : ಸಚಿವ ಪ್ರಭು ಚವ್ಹಾಣ್

    ಅಥಣಿ ಪಶು ವೈದ್ಯಕೀಯ ಮಹಾವಿದ್ಯಾಲಯದ ಅಭಿವೃದ್ಧಿಗೆ ರೂ.36 ಕೋಟಿ : ಸಚಿವ ಪ್ರಭು ಚವ್ಹಾಣ್

    ಬೆಂಗಳೂರು: ಅಥಣಿಯ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚುವರಿಯಾಗಿ ರೂ.36 ಕೋಟಿ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿರುವುದಕ್ಕೆ ಸಚಿವ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.

    ಅಥಣಿಯಲ್ಲಿ ಕಾರ್ಯನಿವಹಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಅಭಿವೃದ್ಧಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು ಅಲ್ಲದೇ ವಿದ್ಯಾಲಯದ ಕಾಮಗಾರಿಗಳು ಸಹ ನಿಧಾನಗತಿಯಲ್ಲಿ ಆಗಿರುವುದರಿಂದ ಇಲ್ಲಿಯವರೆಗೆ ಪ್ರವೇಶಾತಿ ಆರಂಭವಾಗಿರಲಿಲ್ಲ. ಈ ಭಾಗದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಳೆದ ಅವಧಿಯಲ್ಲಿ ಘೋಷಣೆ ಮಾಡಿದ ಪಶುವೈದ್ಯಕೀಯ ಮಹಾವಿದ್ಯಾಲಯ ನಂತರದಲ್ಲಿ ಬಂದ ಸರ್ಕಾರಗಳು ಅನುದಾನ ನೀಡದಿರುವುದರಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಈ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರರೊಂದಿಗೆ ಗಂಭೀರವಾಗಿ ಚರ್ಚೆ ಸಹ ನಡೆಸಲಾಗಿತ್ತು.

    ಮಹಾವಿದ್ಯಾಲದ ಪ್ರಥಮ ಹಾಗೂ ದ್ವಿತೀಯ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, MSVE (Minimum Standard of Veterinary Education Regulation 2016)ರ ಅನ್ವಯ ಬೇಕಾದ ಕನಿಷ್ಠ ಮೂಲಭೂತ ಸೌಕರ್ಯಗಳಾದ ಪ್ರಾಯೋಗಿಕ ಉಪಕರಣಗಳು, ಪಿಠೋಪಕರಣಗಳು ಹಾಗೂ ಇತರೇ ಸೌಕರ್ಯಗಳಿಗೆ ರೂ.137 ಕೋಟಿ ಮೊತ್ತ ಬೇಕಿದ್ದು, ಅದರಲ್ಲಿ ಈಗಾಗಲೇ ರೂ.50 ಕೋಟಿ ಬಿಡುಗಡೆ ಮಾಡಲಾಗಿದ್ದು, ಪರಿಷ್ಕೃತ ಹೆಚ್ಚುವರಿ ರೂ.82 ಕೋಟಿಯಲ್ಲಿ ರೂ.36 ಕೋಟಿ ಸದ್ಯ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

    ಅಥಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯ ಮುಂಬೈ ಕರ್ನಾಟಕ ಭಾಗದ ಅಭಿವೃದ್ಧಿಗೆ ಮತ್ತು ಈ ಭಾಗದ ನಿರುದ್ಯೋಗಿ ಯುವಕರಿಗೆ ಮತ್ತು ಮಹಿಳೆಯರಿಗೆ ಕೃಷಿಯ ಜೊತೆಗೆ ಪಶುಪಾಲನೆಯಲ್ಲಿ ಉದ್ಯೋಗಾವಕಾಶ ಕಂಡುಕೊಳ್ಳಲು ಸಹಕಾರಿಯಾಗಿದೆ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ಡಾ.ದೇವಿಶೆಟ್ಟಿ ವರದಿ, ಪರಿಶೀಲನೆ ಬಳಿಕ ಮುಂದಿನ ನಿರ್ಧಾರ: ಸುರೇಶ್ ಕುಮಾರ್

  • 58 ಲಕ್ಷ ಮೊತ್ತದಲ್ಲಿ ಉಚಿತವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಪ್ಲಾಂಟ್ ನಿರ್ಮಾಣ: ಡಿಸಿಎಂ ಸವದಿ

    58 ಲಕ್ಷ ಮೊತ್ತದಲ್ಲಿ ಉಚಿತವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಪ್ಲಾಂಟ್ ನಿರ್ಮಾಣ: ಡಿಸಿಎಂ ಸವದಿ

    ಬೆಂಗಳೂರು: ಒಂದು ನಿಮಿಷಕ್ಕೆ 250 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನೆ ಮಾಡುವಂತಹ ಪ್ಲಾಂಟ್ ಒಂದನ್ನು ಸ್ನೇಹಿತರ ಸಹಕಾರದೊಂದಿಗೆ 58 ಲಕ್ಷ ರೂಪಾಯಿಗಳ ಮೊತ್ತದಲ್ಲಿ ಉಚಿತವಾಗಿ ಅಥಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣ ಮಾಡುತ್ತಿರುವುದಾಗಿ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದರು.

    ಈ ಹಿನ್ನೆಲೆಯಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಅವಶ್ಯಕತೆ ಇರುವಂತಹ ಯಂತ್ರ ಹಾಗೂ ಸಾಮಾಗ್ರಿಗಳು ಇಂದು ಅಥಣಿಯ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

    ಬರುವ ಎರಡು ಮೂರು ದಿನಗಳಲ್ಲಿ ಆಕ್ಸಿಜನ್ ಪ್ರೊಡಕ್ಷನ್ ಪ್ರಾರಂಭವಾಗಲಿದೆ. ಇದರಿಂದಾಗಿ ಅಥಣಿಯ ಸಾರ್ವಜನಿಕ ಆಸ್ಪತ್ರೆಗೆ ಬರುವಂತಹ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಸಮಸ್ಯೆ ಇಲ್ಲದಂತೆ ಇದು ಉತ್ಪಾದನೆ ಮಾಡಲಿದೆ. ಮೂರನೇ ಅಲೆ ಬರುವ ಬಗ್ಗೆ ತಜ್ಞ ವೈದ್ಯರು ತಿಳಿಸಿರುವಂತೆ ಮೂರನೇ ಅಲೆಯನ್ನು ಕೂಡ ಸಮರ್ಥವಾಗಿ ಎದುರಿಸಲು ಅಥಣಿಯಲ್ಲಿ ಪೂರ್ವಸಿದ್ಧತೆ ಮಾಡಿಕೊಂಡಿರುವುದಾಗಿ ಮಾನ್ಯ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ತಿಳಿಸಿದರು.

  • ಒಬ್ಬ ವ್ಯಕ್ತಿ, ಎರಡು ರಿಪೋರ್ಟ್- ಒಂದರಲ್ಲಿ ಪಾಸಿಟಿವ್, ಮತ್ತೊಂದರಲ್ಲಿ ನೆಗೆಟಿವ್

    ಒಬ್ಬ ವ್ಯಕ್ತಿ, ಎರಡು ರಿಪೋರ್ಟ್- ಒಂದರಲ್ಲಿ ಪಾಸಿಟಿವ್, ಮತ್ತೊಂದರಲ್ಲಿ ನೆಗೆಟಿವ್

    – ಅಧಿಕಾರಿಗಳನ್ನ ತರಾಟೆ ತೆಗೆದುಕೊಂಡ ವ್ಯಕ್ತಿ

    ಬೆಳಗಾವಿ: ಒಬ್ಬ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಮತ್ತು ನೆಗೆಟಿವ್ ಎಂದು ಎರಡು ರಿಪೋರ್ಟ್ ನೀಡಿ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ.

    ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ವ್ಯಕ್ತಿ ಎರಡು ಕಡೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಜುಲೈ 15ರಂದು ಅಥಣಿಯಲ್ಲಿ ಗಂಟಲು ದ್ರವದ ಮಾದರಿಯನ್ನು ನೀಡಿದ್ರು. ಜುಲೈ 16ರಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿ ಅಲ್ಲಿಯೇ ದಾಖಲಾಗಿದ್ದರು. ಜುಲೈ 18ರಂದು ಬೆಳಗಾವಿ ಬಿಮ್ಸ್ ಕೊರೊನಾ ನೆಗೆಟಿವ್ ರಿಪೋರ್ಟ್ ನೀಡಿದ ಅಂದೇ ಡಿಸ್ಚಾರ್ಜ್ ಮಾಡಿತ್ತು. ಕೊರೊನಾ ನೆಗೆಟಿವ್ ವರದಿ ಪಡೆದು ವ್ಯಕ್ತಿ ಮನೆಗೆ ಹಿಂದಿರುಗಿದ್ದರು.

    ಜುಲೈ 15ರಂದು ನೀಡಿದ್ದ ಸ್ವ್ಯಾಬ್ ರಿಪೋರ್ಟ್ ಜುಲೈ 25ರಂದು ಬಂದಿದೆ. ಜುಲೈ 25ರಂದು ಕರೆ ಮಾಡಿದ ಅಧಿಕಾರಿಗಳು ಕೊರೊನಾ ಸೋಂಕು ತಗುಲಿದೆ ಎಂದು ಹೇಳಿದ್ದಾರೆ. ಇದರಿಂದ ಗಾಬರಿಗೊಂಡ ವ್ಯಕ್ತಿ ಆಸ್ಪತ್ರೆಗೆ ತೆರಳಿದ ವ್ಯಕ್ತಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇವಲ ಒಂದು ದಿನದ ಅಂತರದಲ್ಲಿ ಸ್ವ್ಯಾಬ್ ಟೆಸ್ಟ್ ಮಾಡಿಸಿಕೊಂಡಿದ್ದು, ರಿಪೋರ್ಟ್ ಭಿನ್ನವಾಗಿರಲು ಹೇಗೆ ಸಾಧ್ಯ ಎಂದು ವ್ಯಕ್ತಿ ಪ್ರಶ್ನೆ ಮಾಡಿದ್ದಾರೆ. ಅಧಿಕಾರಿಗಳು ಮಾತ್ರ ಯಾವುದೇ ಉತ್ತರ ನೀಡದೇ ಮೌನಕ್ಕೆ ಜಾರಿದ್ದಾರೆ.

  • ವಾಲಿದ ಹೈಮಾಸ್ಟ್ ಕಂಬ- ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

    ವಾಲಿದ ಹೈಮಾಸ್ಟ್ ಕಂಬ- ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

    ಚಿಕ್ಕೋಡಿ: ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಜನರು ಜೀವವನ್ನು ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಅಥಣಿ ಪಟ್ಟಣದ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿ ಇರುವ ಹೈಮಾಸ್ಟ್ ದೀಪದ ಕಂಬ ಸದ್ಯ ಬೀಳುವ ಸ್ಥಿತಿ ತಲುಪಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ.

    ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಕೇಳಿದರೆ ಪುರಸಭೆ ಅಧಿಕಾರಿಗಳನ್ನು ಕೇಳಿ ಎನ್ನುತ್ತಾರೆ. ಇತ್ತ ಪುರಸಭೆ ಅಧಿಕಾರಿಗಳನ್ನು ಕೇಳಿದರೆ ಹೆಸ್ಕಾಮ್ ಅಧಿಕಾರಿಗಳನ್ನು ಕೇಳಿ ಎನ್ನುವ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಅಧಿಕಾರಗಳ ಬೇಜವಾಬ್ದಾರಿಯಿಂದ ನಿತ್ಯವೂ ಭಯದಲ್ಲೇ ಕಾಲ ಕಳೆಯುತ್ತಿದ್ದೇವೆ ಎಂದು ಸಾರ್ವಜನಿಕರು ಅಸಮಾಧಾನ ಹೊರ ಹಾಕಿದ್ದಾರೆ.

    ಹೈಮಾಸ್ಟ್ ವಿದ್ಯುತ್ ಕಂಬದ ಸ್ಥಳಾಂತರದ ಬಗ್ಗೆ ಸದ್ಯ ಗೊಂದಲ ಇರುವುದರಿಂದ ಇಂತಹ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ವಿದ್ಯುತ್ ಕಂಬ ಇರುವ ಶಿವಯೋಗಿ ಸರ್ಕಲ್‍ನಲ್ಲಿ ನೂರಾರು ವಾಹನ ಸವಾರರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ನಿತ್ಯವೂ ಸಂಚರಿಸುತ್ತಾರೆ. ಅಪಘಾತಕ್ಕೆ ಆಹ್ವಾನ ಕೊಡುವ ಸ್ಥಿತಿಯಲ್ಲಿರುವ ವಿದ್ಯುತ್ ಕಂಬ ವಾಲಿಕೊಂಡು ಬೀಳುವ ಸ್ಥಿತಿ ತಲುಪಿದೆ. ಪುರಸಭೆ ಅಥವಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕಂಬ ಬೀಳುವ ಮುನ್ನವೇ ಎಚ್ಚೆತ್ತುಕೊಂಡು ಸರಿಪಡಿಸಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

  • ಶಾಸಕ ಕುಮಟಳ್ಳಿ ಆಡಿದ್ದ ಕಬಡ್ಡಿ ವಿಡಿಯೋ ಫುಲ್ ವೈರಲ್

    ಶಾಸಕ ಕುಮಟಳ್ಳಿ ಆಡಿದ್ದ ಕಬಡ್ಡಿ ವಿಡಿಯೋ ಫುಲ್ ವೈರಲ್

    ಚಿಕ್ಕೋಡಿ(ಬೆಳಗಾವಿ): ರಾಜ್ಯ ಸರ್ಕಾರದಲ್ಲಿ ಒಂದೆಡೆ ಸಚಿವ ಸ್ಥಾನಕ್ಕಾಗಿ ರಾಜಕೀಯ ಕಬಡ್ಡಿ ಆಟ ನಡೆಯುತ್ತಿದ್ದರೆ, ಇತ್ತ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ಫುಲ್ ಜೋಶ್‍ನಿಂದ ಕಬಡ್ಡಿ ಆಟ ಆಡಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ.

    ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶೇಗುಣಶಿ ಗ್ರಾಮದ ಜಾತ್ರೆಯಲ್ಲಿ ಕುಮಟಳ್ಳಿ ಕಬಡ್ಡಿ ಆಡಿ ಬಿದ್ದಿದ್ದರು. ಇದು ಹಳೆಯ ವಿಡಿಯೋ ಆಗಿದ್ದರು ಕೂಡ ಈಗ ಸಾಮಾಜಿಕ ಜಾಲ ತಾಣಗಳಲ್ಲಿ ಸಖತ್ತಾಗಿ ಹರಿದಾಡುತ್ತಿದೆ. ಅಲ್ಲದೆ ಸಚಿವ ಸ್ಥಾನಕ್ಕಾಗಿ ಶಾಸಕರ ಕಬಡ್ಡಿ ಆಟ ಎಂದು ಟ್ರೋಲ್ ಆಗುತ್ತಿದೆ. ರಾಜ್ಯ ರಾಜಕೀಯದಲ್ಲಿ ಸಚಿವ ಸ್ಥಾನಕ್ಕೆ ನಡೆದಿರುವ ಕಬಡ್ಡಿ ಆಟದ ಸಂದರ್ಭಕ್ಕೆ ಈಗ ಈ ವಿಡಿಯೋ ಸೂಟ್ ಆಗುತ್ತಿದೆ ಎಂದು ಕಮೆಂಟ್ ಗಳು ಬರುತ್ತಿದೆ.

    ಕಾಂಗ್ರೆಸ್ ಪಕ್ಷ ತೊರೆದು ಅನರ್ಹರಾಗಿ ಈಗ ಮತ್ತೆ ಅಥಣಿ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಮಹೇಶ್ ಕುಮಟಳ್ಳಿ ಸಚಿವ ಸ್ಥಾನ ನೀಡೇ ನೀಡುತ್ತೇವೆ ಎಂದು ಸ್ವತಃ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಈಗ ನಡೆದಿರುವ ಸಚಿವ ಸ್ಥಾನದ ಕಬಡ್ಡಿ ಆಟದಲ್ಲಿ ಮಹೇಶ್ ಕುಮಟಳ್ಳಿ ಗೆಲ್ಲುತ್ತಾರಾ ಅಥವಾ ಬೀಳುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

  • ಬೀದಿ ನಾಯಿಗೆ ಬೊಗಸೆಯಲ್ಲಿ ನೀರು ಕುಡಿಸಿದ ವ್ಯಕ್ತಿ

    ಬೀದಿ ನಾಯಿಗೆ ಬೊಗಸೆಯಲ್ಲಿ ನೀರು ಕುಡಿಸಿದ ವ್ಯಕ್ತಿ

    ಬೆಳಗಾವಿ/ಚಿಕ್ಕೋಡಿ: ವ್ಯಕ್ತಿಯೊಬ್ಬರು ಬೀದಿ ನಾಯಿಗಳಿಗೆ ತಮ್ಮ ಬೊಗಸೆಯಲ್ಲಿ ನೀರು ಕುಡಿಸಿರುವ ವಿಡಿಯೋ ಬೆಳಗಾವಿ ಭಾಗದಲ್ಲಿ ವೈರಲ್ ಆಗುತ್ತಿದೆ.

    ಸಾಮಾನ್ಯವಾಗಿ ಶ್ರೀಮಂತರು, ಸಿನಿಮಾ ನಟ ನಟಿಯರು ಲಕ್ಷಗಟ್ಟಲೇ ಹಣ ಖರ್ಚು ಮಾಡಿ ನಾಯಿಗಳನ್ನು ಸಾಕುತ್ತಾರೆ. ಸಾಕಿದ ನಾಯಿಗಳನ್ನು ಮಕ್ಕಳ ರೀತಿಯಲ್ಲಿ ನೋಡಿಕೊಳ್ಳುವುದನ್ನು ನೋಡಿರುತ್ತವೆ. ಆದರೆ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ವ್ಯಕ್ತಿ ಬೀದಿ ನಾಯಿಗಳಿಗೆ ಬೊಗಸೆಯಲ್ಲಿ ನೀರು ಕುಡಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

    ಸಾವಿರಾರು ರೂಪಾಯಿ ಖರ್ಚು ಮಾಡಿ ನಾಯಿಗಳನ್ನು ಸಾಕುವರಿಗೆ ಈ ವ್ಯಕ್ತಿ ಮಾದರಿಯಾಗಿದ್ದಾರೆ. ಅದೇ ಹಣದಿಂದ ಬೀದಿ ನಾಯಿಗಳಿಗಾಗಿ ಬಳಸಿದ್ರೆ ಪ್ರಾಣಿ ಸಂಕುಲ ಉಳಿಯುತ್ತದೆ ಎಂದು ಬರೆದುಕೊಂಡು ನೆಟ್ಟಿಗರು ವಿಡಿಯೋವನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಅಂದಹಾಗೆ ಈ ವ್ಯಕ್ತಿ ಯಾರು ಏನು ಎಂಬ ಬಗ್ಗೆ ಮಾಹಿತಿ ಲಭಿಸಿಲ್ಲವಾದರೂ ಸಹ ಇವರ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

  • ಒಂದೇ ತಾಲೂಕಿಗೆ 3 ಸಚಿವರು, ಅಥಣಿಯ ಸೌಭಾಗ್ಯ: ಡಿಸಿಎಂ ಲಕ್ಷ್ಮಣ ಸವದಿ

    ಒಂದೇ ತಾಲೂಕಿಗೆ 3 ಸಚಿವರು, ಅಥಣಿಯ ಸೌಭಾಗ್ಯ: ಡಿಸಿಎಂ ಲಕ್ಷ್ಮಣ ಸವದಿ

    ಬೆಳಗಾವಿ: ಅಥಣಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗೆ ಭಾರೀ ಅಂತರದ ಗೆಲುವು ಲಭಿಸಿದ್ದು, ಕ್ಷೇತ್ರದ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಸಿಎಂ ಬಿಎಸ್‍ವೈ ನೇತೃತ್ವದ ಸರ್ಕಾರದಲ್ಲಿ ಸ್ಥಿರ ಹಾಗೂ ಅಭಿವೃದ್ಧಿ ಪರ ಆಡಳಿತವನ್ನು ನೀಡುತ್ತೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಅವರು ಹೇಳಿದರು.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ ಅವರು, ಕ್ಷೇತ್ರದ ಗೆಲುವಿನ ಶ್ರೇಯಸ್ಸನ್ನು ಕ್ಷೇತ್ರದ ಕಾರ್ಯಕರ್ತರಿಗೆ, ಜನತೆಗೆ ನೀಡುತ್ತೇನೆ. ಬೆಳಗಾವಿಯ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಡೆದಿದೆ. ನಮ್ಮ ಪಕ್ಷ ಹೇಳಿರುವಂತೆ ಅಥಣಿಗೆ ಮೂರು ಸಚಿವ ಸ್ಥಾನ ಲಭಿಸಲಿದ್ದು, ಇದು ಅಥಣಿಯ ಸೌಭಾಗ್ಯ, ಇತಿಹಾಸದಲ್ಲಿ ಬರೆದಿಡುವ ದಿನ ಎಂದರು. ಅಲ್ಲದೇ ಶೀಘ್ರವೇ ಸಂಪುಟ ವಿಸ್ತರಣೆ ಆಗಲಿದ್ದು, ಮೂವರು ಸಚಿವರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದರು.

    ಇದೇ ವೇಳೆ ಶಾಸಕ ಮಹೇಶ್ ಕುಮಟಹಳ್ಳಿ ಮಾತನಾಡಿ, ಜನರು ಆಶೀರ್ವಾದ ಮಾಡಿದ್ದು, ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ಲಕ್ಷ್ಮಣ ಸವದಿ ಅವರು 15 ವರ್ಷಗಳ ಕಾಲ ಅಥಣಿಯಲ್ಲಿ ಶಾಸಕರಾಗಿದ್ದರು. ನಾನು ಕೂಡಾ ಇಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಸರ್ಕಾರದಲ್ಲಿ ಯಾವುದೇ ಜವಾಬ್ದಾರಿ ಕೊಟ್ಟರು ನಾನು ನಿಭಾಯಿಸುತ್ತೇನೆ. ಆದರೆ ಸಚಿವ ಸ್ಥಾನ ನೀಡುವುದು ಬಿಡುವುದು ಹೈಮಾಂಡ್ ನಿರ್ಧಾರ ಎಂದರು.

    ಬೆಳಗಾವಿಯಲ್ಲಿ ಮಾತನಾಡಿದ ಶಾಸಕ ಶ್ರೀಮಂತ ಪಾಟೀಲ ಅವರು, ನಾನು 15 ರಿಂದ 20 ಸಾವಿರ ಮತಗಳಿಂದ ಗೆಲ್ಲುತ್ತೆನೆ ಎಂಬ ನಿರೀಕ್ಷೆ ಇತ್ತು. ರಾಜು ಕಾಗೆ ಅವರು 20 ವರ್ಷದಿಂದ ಕ್ಷೇತ್ರದಲ್ಲಿ ಏನು ಮಾಡಲಿಲ್ಲ, ಅವರಿಂದ ಜನರು ಬೇಸರಗೊಂಡಿದ್ದರು. ಸದ್ಯ ಕಾಗವಾಡ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಬೇಕಾಗಿದೆ. ನನಗೆ ಯಾವ ಸಚಿವ ಸ್ಥಾನ ನೀಡುತ್ತಾರೆ ಗೊತ್ತಿಲ್ಲ. ನನಗೆ ಬೇಕಾದ ಸಚಿವ ಸ್ಥಾನ ಕೇಳುತ್ತೇನೆ. ನನ್ನ ಕ್ಷೇತ್ರದ ಜನರು ಕೃಷಿ ಸಚಿವ ಹಾಗೂ ನೀರಾವರಿ ಸಚಿವರಾಗಿ ಎಂದು ಹೇಳುತ್ತಿದ್ದಾರೆ. ಹೈಕಮಾಂಡ್ ಯಾವ ಸಚಿವ ಸ್ಥಾನ ನೀಡುತ್ತದೆ ಕಾದು ನೋಡುತ್ತೇನೆ ಎಂದರು.