Tag: Athani

  • ನನ್ನ ಹೇಳಿಕೆ ವಾಪಸ್ ಪಡೆಯುತ್ತೇನೆ: ಡಿಸಿಎಂಗೆ ಹೆದರಿದ್ರಾ ರಮೇಶ್ ಜಾರಕಿಹೊಳಿ?

    ನನ್ನ ಹೇಳಿಕೆ ವಾಪಸ್ ಪಡೆಯುತ್ತೇನೆ: ಡಿಸಿಎಂಗೆ ಹೆದರಿದ್ರಾ ರಮೇಶ್ ಜಾರಕಿಹೊಳಿ?

    ಚಿಕ್ಕೋಡಿ (ಬೆಳಗಾವಿ): ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಗ್ಗೆ ಪಬ್ಲಿಕ್ ಟಿವಿಗೆ ನೀಡಿದ್ದ ಹೇಳಿಕೆ ವಾಪಸ್ ಪಡೆಯುತ್ತೆನೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಮೂಲಕ ಮಾಜಿ ಸಚಿವರು, ಡಿಸಿಎಂಗೆ ಹೆದರಿದ್ರಾ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.

    ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದರೂರು ಗ್ರಾಮದಲ್ಲಿ ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಬೆಂಬಲಿಗರ ಸಭೆಗೆ ರಮೇಶ್ ಜಾರಕಿಹೊಳಿ ಹಾಜರಾಗಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟೆನ್ಷನ್‍ನಲ್ಲಿ ಏನನ್ನೋ ಮಾತನಾಡಿದೆ. ಪಬ್ಲಿಕ್ ಟಿವಿಗೆ ನೀಡಿದ್ದ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ. ಲಕ್ಷ್ಮಣ ಸವದಿ ಬಗ್ಗೆ ಬಾಯಿ ತಪ್ಪಿ ಏನನ್ನೋ ಹೇಳಿಬಿಟ್ಟೆ ಎಂದು ತಿಳಿಸಿದ್ದಾರೆ.

    ಸಾಮಾನ್ಯ ಪ್ರಜೆಯ ಬಗ್ಗೆ ಮಾತನಾಡಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಆದರೆ ಉನ್ನತ ಹುದ್ದೆಯಲ್ಲಿ ಇರುವವರ ಬಗ್ಗೆ ಮಾತನಾಡುವುದು ಸರಿಯಲ್ಲ. ಬಾಯಿ ತಪ್ಪಿ ಮಾತನಾಡಿಬಿಟ್ಟೆ. ಅವನ ಮಾತಿನಿಂದಲೇ ಈ ಮಟ್ಟಕ್ಕೆ ಬಂದಿದ್ದಾನೆ. ಹೀಗಾಗಿ ನನ್ನ ಹೇಳಿಕೆ ವಾಪಸ್ ಪಡೆಯುತ್ತೇನೆ ಎಂದು ಪುನರುಚ್ಚರಿಸಿದರು.

    ಈ ಹಿಂದೆ ಹೇಳಿದ್ದೇನು?:
    ದರೂರು ಗ್ರಾಮದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ, ಡಿಸಿಎಂ ಲಕ್ಷ್ಮಣ ಸವದಿ ಅಥಣಿಯ ಶಾಸಕ ಮಹೇಶ್ ಕುಮಟಳ್ಳಿ ಬಗ್ಗೆ ಮಾತನಾಡಿದ್ದು ದುರ್ದೈವ. ಲಕ್ಷ್ಮಣ ಸವದಿ ಮಾತನಾಡಿದ್ದರ ಬಗ್ಗೆ ನನಗೆ ಮಾಹಿತಿ ಇಲ್ಲ. ಒಂದು ವೇಳೆ ಮಾತನಾಡಿದ್ರೆ ಅದು ದುರ್ದೈವ. ಅಥಣಿ ಜನರು ತಿರಸ್ಕಾರ ಮಾಡಿದ್ದರೂ ಲಕ್ಷ್ಮಣ ಸವದಿ ಅವರಿಗೆ ಅಧಿಕಾರ ಸಿಕ್ಕಿದೆ. ರಾಜಕೀಯದಲ್ಲಿ ಯಾವಾಗ ಏನು ಆಗುತ್ತೆ ಎಂದು ಹೇಳಲು ಸಾಧ್ಯವಿಲ್ಲ. ನಾವೆಲ್ಲ ಸರ್ಕಾರ ಬೀಳಬೇಕೆಂದು ರಾಜೀನಾಮೆ ನೀಡಿಲ್ಲ. ಅನ್ಯಾಯ ಆಗಿದ್ದರಿಂದ ರಾಜೀನಾಮೆ ನೀಡಿದ್ದು, ಬಿಜೆಪಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದರು.

    ನಾನೋರ್ವ ಸಾಮಾನ್ಯ ಕಾರ್ಯಕರ್ತನಾಗಿದ್ದು, ಮಹೇಶ್ ಕುಮಟಳ್ಳಿ ಅವರನ್ನು ಅಥಣಿ ಜನರು ಗೆಲ್ಲಿಸಬೇಕಿದೆ. ಕಳೆದ ಏಳೆಂಟು ತಿಂಗಳನಿಂದ ಸುಪ್ರೀಂಕೋರ್ಟ್ ವಿಷಯದಲ್ಲಿ ತೊಡಗಿಕೊಂಡಿದ್ದರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಕ್ಷೇತ್ರದ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದ್ದರು.

  • ಅದು ಬೇರೆ ಕುಮಟಳ್ಳಿ, ಅನರ್ಹ ಕುಮಟಳ್ಳಿ ಅಲ್ಲ: ಲಕ್ಷ್ಮಣ ಸವದಿ

    ಅದು ಬೇರೆ ಕುಮಟಳ್ಳಿ, ಅನರ್ಹ ಕುಮಟಳ್ಳಿ ಅಲ್ಲ: ಲಕ್ಷ್ಮಣ ಸವದಿ

    – ಕುಮಟಳ್ಳಿ, ನನ್ನ ಮಧ್ಯೆ ಭಿನ್ನಾಭಿಪ್ರಾಯಕ್ಕೆ ಯತ್ನ

    ಚಿಕ್ಕೋಡಿ (ಬೆಳಗಾವಿ): ವೈರಲ್ ಆಗಿರುವ ವಿಡಿಯೋದಲ್ಲಿ ನಾನು ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಬಗ್ಗೆ ಮಾತನಾಡಿಲ್ಲ. ಅದು ಬೇರೆ ಕುಮಟಳ್ಳಿ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

    ವಿಡಿಯೋ ಮೂಲಕ ಸ್ಪಷ್ಟನೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಮಹಾ ಮಳೆಗೆ ಕೃಷ್ಣಾ ನದಿ ಪ್ರವಾಹ ಮಟ್ಟ ಮೀರಿ ಹರಿಯುತ್ತಿತ್ತು. ಈ ವೇಳೆ ಅಥಣಿ ಕ್ಷೇತ್ರದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಾಗ ಕೆಲ ಮಾಧ್ಯಮಗಳು ನಾನು ಫೋನ್‍ನಲ್ಲಿ ಮಾತನಾಡಿದ ದೃಶ್ಯವನ್ನು ಸೆರೆ ಹಿಡಿದಿದ್ದವು. ಆ ವಿಡಿಯೋವನ್ನು ಈಗ ಪ್ರಸಾರ ಮಾಡಿ ಮಹೇಶ್ ಕುಮಟಳ್ಳಿ ಅವರ ಬಗ್ಗೆ ಮಾತನಾಡಿದ್ದೇನೆ ಎಂಬಂತೆ ಬಿಂಬಿಸಲಾಗುತ್ತಿದೆ. ನಾನು ಅನರ್ಹ ಶಾಸಕರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನು ಓದಿ: ಮಹೇಶ್ ಕುಮಟಳ್ಳಿ ಬಗ್ಗೆ ಡಿಸಿಎಂ ಮಾತನಾಡಿದ್ದು ದುರ್ದೈವ: ರಮೇಶ್ ಜಾರಕಿಹೊಳಿ

    ನಾನು ಮಾತಾಡಿರುವ ವಿಡಿಯೋ ಬೇರೆ ಕುಮಟಳ್ಳಿ ಅವರಿಗೆ ಸಂಬಂಧಿಸಿದ್ದು. ಅವರು ನಮ್ಮ ಸ್ನೇಹಿತರು. ಯಾವುದೋ ವಿಚಾರಕ್ಕೆ ಫೋನ್ ಮಾಡಿದ್ದರು. ಆಗ ನಾನು ಕುಮಟಳ್ಳಿ ಬಗ್ಗೆ ಯಾಕ ತಲೆ ಕೆಡಿಸಿಕೊಳ್ಳುತ್ತಿಯಾ, ಓಡಿ ಹೋಗತಾನೆ ಬಿಡು ಎಂದು ಹೇಳಿದ್ದೆ. ಆದರೆ ಈಗ ನಾನು ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಅವರ ಬಗ್ಗೆ ಮಾತನಾಡಿದ್ದೇನೆ ಎಂಬಂತೆ ತೋರಿಸಲಾಗುತ್ತಿದೆ ಎಂದು ಮಾಧ್ಯಮಗಳ ವಿರುದ್ಧವೇ ಆರೋಪ ಮಾಡಿದ್ದಾರೆ.

    ಮಹೇಶ್ ಕುಮಟಳ್ಳಿ ಹಾಗೂ ನನ್ನ ಮಧ್ಯೆ ಭಿನ್ನಾಭಿಪ್ರಾಯ ತಂದಿಡಲು ಯಾರೋ ಸ್ಥಳೀಯ ನಾಯಕರು ಹೀಗೆ ಮಾಡಿದ್ದಾರೆ. ಉಪ ಚುನಾವಣೆಯ ಲಾಭ ಪಡೆಯಲು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಅನರ್ಹ ಶಾಸಕ ಹಾಗೂ ನನ್ನ ಮಧ್ಯೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ನಾವು ಸ್ನೇಹಿತರಾಗಿಯೇ ಇರುತ್ತೇವೆ. ಹೀಗಾಗಿ ವಿಡಿಯೋ ಬಗ್ಗೆ ಅಪಾರ್ಥ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.

    ಸವದಿ ಹೇಳಿದ್ದೇನು?
    ಕೃಷ್ಣಾ ನದಿ ಪ್ರವಾಹ ಪೀಡಿತ ಗ್ರಾಮಕ್ಕೆ ಲಕ್ಷ್ಮಣ ಸವದಿ ಭೇಟಿ ನೀಡಿದ್ದರು. ಈ ವೇಳೆ ಅಥಣಿ ಮತ ಕ್ಷೇತ್ರದ ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಕುರಿತು ಅಪನಿಂದನೆ ಮಾಡಿದ್ದಾರೆ. ಸವದಿ ತಮ್ಮ ಬೆಂಬಲಿಗನ ಜೊತೆ ಮೊಬೈಲ್ ಮಾತನಾಡುತ್ತಾ ಕುಮುಟಳ್ಳಿ ವಿರುದ್ಧ ಆಕ್ಷೇಪಾರ್ಹ ಮಾತಾಡಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಪ್ರವಾಹ ಪೀಡಿತ ಗ್ರಾಮಗಳಿಗೆ ಸಂತ್ರಸ್ತರ ಅಳಲು ಕೇಳಲು ಹೋಗುತ್ತಿದ್ದಾಗ ಮೊಬೈಲ್‍ನಲ್ಲಿ ಮಾತನಾಡುತ್ತಾ ಮುಂಜಾನೆ ಕುಮಟಳ್ಳಿ ಅಂತಹ ದರಿದ್ರ ಮಕ್ಕಳ ಹೆಸರು ನೆನಪಿಸಬೆಡಿ. ಅವನ ಸುದ್ದಿ ತಗೊಂಡ್ ನಾನೇನು ಮಾಡಲಿ. ನನ್ನ ಮೂಡ್ ಹಾಳು ಮಾಡಬೇಡಿ ಎಂದಿದ್ದರು.

    ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಿ ಬಿಜೆಪಿ ಸರ್ಕಾರದ ಆಸ್ತಿತ್ವಕ್ಕೆ ಮಹೇಶ್ ಕುಮುಟಳ್ಳಿ ಬಲ ತುಂಬಿದ್ದರು. ಆದರೆ ಇದೀಗ ಅವರ ವಿರುದ್ಧವೇ ಡಿಸಿಎಂ ಗರಂ ಆಗಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.

  • ಮಹೇಶ್ ಕುಮಟಳ್ಳಿ ಬಗ್ಗೆ ಡಿಸಿಎಂ ಮಾತನಾಡಿದ್ದು ದುರ್ದೈವ: ರಮೇಶ್ ಜಾರಕಿಹೊಳಿ

    ಮಹೇಶ್ ಕುಮಟಳ್ಳಿ ಬಗ್ಗೆ ಡಿಸಿಎಂ ಮಾತನಾಡಿದ್ದು ದುರ್ದೈವ: ರಮೇಶ್ ಜಾರಕಿಹೊಳಿ

    ಬೆಳಗಾವಿ/ಚಿಕ್ಕೋಡಿ: ಡಿಸಿಎಂ ಲಕ್ಷ್ಮಣ ಸವದಿ ಇಂದು ಅಥಣಿಯ ಶಾಸಕ ಮಹೇಶ್ ಕುಮಟಳ್ಳಿ ಬಗ್ಗೆ ಮಾತನಾಡಿದ್ದು ದುರ್ದೈವ ಎಂದು ಗೋಕಾಕ್ ಕ್ಷೇತ್ರದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಬೇಸರ ವ್ಯಕ್ತಪಡಿಸಿದ್ದಾರೆ.

    ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದರೂರು ಗ್ರಾಮದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ, ಲಕ್ಷ್ಮಣ ಸವದಿ ಮಾತನಾಡಿದ್ದರ ಬಗ್ಗೆ ನನಗೆ ಮಾಹಿತಿ ಇಲ್ಲ. ಒಂದು ವೇಳೆ ಮಾತನಾಡಿದ್ರೆ ಅದು ದುರ್ದೈವ. ಅಥಣಿ ಜನರು ತಿರಸ್ಕಾರ ಮಾಡಿದ್ದರೂ ಲಕ್ಷ್ಮಣ ಸವದಿ ಅವರಿಗೆ ಅಧಿಕಾರ ಸಿಕ್ಕಿದೆ. ರಾಜಕೀಯದಲ್ಲಿ ಯಾವಾಗ ಏನು ಆಗುತ್ತೆ ಎಂದು ಹೇಳಲು ಸಾಧ್ಯವಿಲ್ಲ. ನಾವೆಲ್ಲ ಸರ್ಕಾರ ಬೀಳಬೇಕೆಂದು ರಾಜೀನಾಮೆ ನೀಡಿಲ್ಲ. ಅನ್ಯಾಯ ಆಗಿದ್ದರಿಂದ ರಾಜೀನಾಮೆ ನೀಡಿದ್ದು, ಬಿಜೆಪಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸವದಿ ನಿಂದನೆಗೆ ಕಣ್ಣೀರಿಟ್ಟ ಅನರ್ಹ ಶಾಸಕ ಕುಮುಟಳ್ಳಿ

    ನಾನೋರ್ವ ಸಾಮಾನ್ಯ ಕಾರ್ಯಕರ್ತನಾಗಿದ್ದು, ಮಹೇಶ್ ಕುಮಟಳ್ಳಿ ಅವರನ್ನು ಅಥಣಿ ಜನರು ಗೆಲ್ಲಿಸಬೇಕಿದೆ. ಕಳೆದ ಏಳೆಂಟು ತಿಂಗಳನಿಂದ ಸುಪ್ರೀಂಕೋರ್ಟ್ ವಿಷಯದಲ್ಲಿ ತೊಡಗಿಕೊಂಡಿದ್ದರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಕ್ಷೇತ್ರದ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದರು. ಇದನ್ನೂ ಓದಿ: ದರಿದ್ರ ಕುಮಟಳ್ಳಿ ಸುದ್ದಿ ತಗೊಂಡು ನಾನೇನ್ ಮಾಡ್ಲಿ- ಲಕ್ಷ್ಮಣ ಸವದಿ ಆಕ್ಷೇಪಾರ್ಹ ಮಾತು

    ಸುಪ್ರೀಂಕೋರ್ಟ್ ಚುನಾವಣೆಯನ್ನು ಮುಂದೂಡಿದ್ದು, ಹಾಗಾಗಿ ಮುಂದಿನ ನಡೆಯ ಬಗ್ಗೆ ಚರ್ಚಿಸಲು ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗಿದೆ. ಕೋರ್ಟ್ ತೀರ್ಪು ಬರೋವರೆಗೂ ಏನು ಮಾತನಾಡಲ್ಲ. ಯಾವ ಪಕ್ಷದಲ್ಲಿಯೂ ಇಂದು ನಾವಿಲ್ಲ. ಎಲ್ಲ ಅನರ್ಹ ಶಾಸಕರು ಒಂದೆಡೆ ಸೇರಿ ಮುಂದಿನ ನಿರ್ಧಾರದ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದಕ್ಕಿಂತ ಹೆಚ್ಚಿನ ವಿಷಯಗಳನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

    ಲಕ್ಷ್ಮಣ ಸವದಿ ಹೇಳಿದ್ದೇನು?
    ಪ್ರವಾಹ ಪೀಡಿತ ಗ್ರಾಮಗಳಿಗೆ ಸಂತ್ರಸ್ತರ ಅಳಲು ಕೇಳಲು ಹೋಗುತ್ತಿದ್ದಾಗ ಮೊಬೈಲ್‍ನಲ್ಲಿ ಮಾತನಾಡುತ್ತಾ ಮುಂಜಾನೆ ಕುಮಟಳ್ಳಿ ಅಂತಹ ದರಿದ್ರ ಮಕ್ಕಳ ಹೆಸರು ನೆನಪಿಸಬೆಡಿ. ಅವನ ಸುದ್ದಿ ತಗೊಂಡ್ ನಾನೇನು ಮಾಡಲಿ. ನನ್ನ ಮೂಡ್ ಹಾಳು ಮಾಡಬೇಡಿ ಎಂದಿದ್ದಾರೆ.

  • ಮತ್ತೆ ದಿಢೀರ್ ನಾಪತ್ತೆಯಾದ ಅತೃಪ್ತ ಕೈ ಶಾಸಕ ಮಹೇಶ್ ಕುಮಟಳ್ಳಿ

    ಮತ್ತೆ ದಿಢೀರ್ ನಾಪತ್ತೆಯಾದ ಅತೃಪ್ತ ಕೈ ಶಾಸಕ ಮಹೇಶ್ ಕುಮಟಳ್ಳಿ

    ಬೆಳಗಾವಿ (ಚಿಕ್ಕೋಡಿ): ಆಪರೇಷನ್ ಕಮಲ ವಿಫಲವಾದ ಬೆನ್ನಲ್ಲೇ ಮುಂಬೈನಿಂದ ರಾತ್ರೋರಾತ್ರಿ ಕ್ಷೇತ್ರಕ್ಕೆ ಆಗಮಿಸಿದ್ದ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಮತ್ತೆ ದಿಢೀರ್ ನಾಪತ್ತೆಯಾಗಿದ್ದಾರೆ.

    ಶಾಸಕ ಮಹೇಶ್ ಕುಮಟಳ್ಳಿ ಅವರು ಕಾಂಗ್ರೆಸ್ ಶಾಸಕಾಂಗ ಸಭೆಗೂ ಹಾಜರಾಗದೇ, ಕ್ಷೇತ್ರದ ಜನರಿಗೂ ಸಿಗದೆ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು. ಬಳಿಕ ಆಪರೇಷನ್ ಕಮಲ ವಿಫಲವಾಗಿದ್ದರಿಂದ ನಾಲ್ಕು ದಿನಗಳ ಹಿಂದೆಯಷ್ಟೇ (ಜನವರಿ 25ರಂದು) ರಾತ್ರಿ ಅಥಣಿ ಪಟ್ಟಣದ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜಿನಲ್ಲಿ ಕಾಣಿಸಿಕೊಂಡಿದ್ದರು. ಆಗ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಅವರು, ನನಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಮುಂಬೈಗೆ ತೆರಳಿದ್ದೆ ಅಂತ ತಿಳಿಸಿದ್ದರು.

    ಮಹೇಶ್ ಕುಮಠಳ್ಳಿ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಶಾಸಕರು ಮುಂಬೈನಿಂದ ವಾಪಸ್ ಬಂದು, ಕೇವಲ ನಾಲ್ಕು ದಿನ ಕ್ಷೇತ್ರದಲ್ಲಿದ್ದು ಮತ್ತೆ ನಾಪತ್ತೆಯಾಗಿದ್ದಾರೆ. ಅವರ ಈ ನಡೆ ರಾಜಕೀಯ ವಲಯದಲ್ಲಿ ಹಾಗೂ ಕ್ಷೇತ್ರದ ಜನರ ಚರ್ಚೆಗೆ ಗ್ರಾಸವಾಗಿದ್ದಾರೆ.

    ಕಾಂಗ್ರೆಸ್ ಪಕ್ಷದಲ್ಲಿಯೇ ಇರುತ್ತೇನೆ. ಎಲ್ಲಿಯೂ ಹೋಗುವುದಿಲ್ಲ ಅಂತ ಹೇಳಿದ್ದ ಮಹೇಶ್ ಕುಮಠಳ್ಳಿ ಅವರು, ಕ್ಷೇತ್ರದ ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸುತ್ತಿಲ್ಲ. ಅವರು ಮತ್ತೆ ಮಹಾರಾಷ್ಟ್ರಕ್ಕೆ ತೆರಳಿದ್ದು ಕೂತುಹಲ ಕೆರಳಿಸಿದೆ ಎಂದು ಕ್ಷೇತ್ರದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬ್ಯಾಕ್ ಪೇನ್ ಇತ್ತು, ಮುಂಬೈಗೆ ಹೋಗಿದ್ದೆ- ಶಾಸಕ ಮಹೇಶ್ ಕುಮಟಳ್ಳಿ

    ಬ್ಯಾಕ್ ಪೇನ್ ಇತ್ತು, ಮುಂಬೈಗೆ ಹೋಗಿದ್ದೆ- ಶಾಸಕ ಮಹೇಶ್ ಕುಮಟಳ್ಳಿ

    – ರಾತ್ರೋರಾತ್ರಿ ಕಾಂಗ್ರೆಸ್ ಅತೃಪ್ತ ಶಾಸಕ ದಿಢೀರ್ ಪ್ರತ್ಯಕ್ಷ

    ಬೆಳಗಾವಿ (ಚಿಕ್ಕೋಡಿ): ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ ಎನ್ನಲಾಗಿದ್ದ ಕಾಂಗ್ರೆಸ್ ಶಾಸಕರು ಒಬ್ಬೊಬ್ಬರಾಗಿ ಕ್ಷೇತ್ರಕ್ಕೆ ಮರಳುತ್ತಿದ್ದಾರೆ. ಈ ಬೆನ್ನಲ್ಲೇ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಕೂಡ ಗುರುವಾರ ರಾತ್ರಿ ಕ್ಷೇತ್ರದಲ್ಲಿ ದಿಢೀರ್ ಆಗಿ ಪ್ರತ್ಯಕ್ಷರಾಗಿದ್ದಾರೆ.

    ಅಥಣಿ ಪಟ್ಟಣದ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದ ಕಾಮಗಾರಿಯನ್ನು ಶಾಸಕ ಮಹೇಶ ಕುಮಟಳ್ಳಿ ಅವರು ರಾತ್ರಿ 9 ಗಂಟೆ ಸುಮಾರು ವೀಕ್ಷಿಸಿದರು. ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆಪರೇಷನ್ ಕಮಲಕ್ಕೆ ಒಳಗಾಗಿದ್ದೇನೆ ಎನ್ನುವುದು ಕೇವಲ ಉಹಾ ಪೋಹ. ನಾನು ಕಾಂಗ್ರೆಸ್‍ನಲ್ಲಿಯೇ ಇರುತ್ತೇನೆ ಎಂದು ಸ್ಪಷ್ಟನೆ ನೀಡಿದರು.

    ಸಿಎಲ್‍ಪಿ ಸಭೆಗೆ ಗೈರು ಆಗಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶಾಸಕರು, ನನಗೆ ಬ್ಯಾಕ್ ಪೇನ್ ಕಾಣಿಸಿಕೊಂಡಿತ್ತು. ಅಷ್ಟೇ ಅಲ್ಲದೆ ಸಿಎಲ್‍ಪಿ ಸಭೆ ನಿಗಧಿಯಾಗುವ ಮುನ್ನವೇ ಮುಂಬೈಗೆ ಟಿಕೇಟ್ ಬುಕ್ ಮಾಡಿದ್ದೆ. ಚಿಕಿತ್ಸೆಗೆ ಪಡೆಯಲು ಹೋಗುವುದು ಅನಿವಾರ್ಯವಾಗಿದ್ದರಿಂದ ಪಕ್ಷದ ನಾಯಕರಿಗೆ ಪತ್ರ ಕೂಡ ಬರೆದಿದ್ದೇನೆ ಎಂದ ಅವರು, ನನ್ನ ರಾಜಕೀಯ ಜೀವನ ಆರಂಭವಾಗಿದ್ದೇ ಕಾಂಗ್ರೆಸ್‍ನಿಂದ. ಹೀಗಾಗಿ ಪಕ್ಷವನ್ನು ಬಿಟ್ಟು ಹೋಗುವ ವಿಚಾರವನ್ನು ಮಾಡಿಲ್ಲ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • KSRTC  ಬಸ್ ಕೃಷಿ ಹೊಂಡಕ್ಕೆ ಪಲ್ಟಿ- ಬಾಲಕನ ಸ್ಥಿತಿ ಗಂಭೀರ, 15ಕ್ಕೂ ಹೆಚ್ಚು ಮಂದಿಗೆ ಗಾಯ

    KSRTC  ಬಸ್ ಕೃಷಿ ಹೊಂಡಕ್ಕೆ ಪಲ್ಟಿ- ಬಾಲಕನ ಸ್ಥಿತಿ ಗಂಭೀರ, 15ಕ್ಕೂ ಹೆಚ್ಚು ಮಂದಿಗೆ ಗಾಯ

    ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಕೃಷಿ ಹೊಂಡಕ್ಕೆ ಪಲ್ಟಿಯಾದ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಬಣಜವಾಡ ಗ್ರಾಮದ ಹೊರವಲಯದಲ್ಲಿ ಇಂದು ನಡೆದಿದೆ.

    ಘಟನೆಯಲ್ಲಿ ಸುಮಾರು 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಓರ್ವ ಬಾಲಕನ ಸ್ಥಿತಿ ಗಂಭೀರವಾಗಿದೆ. ಅಥಣಿಯಿಂದ ಮಹಾರಾಷ್ಟ್ರದ ಮೀರಜ್ ಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ್ದ ಕೃಷಿ ಹೊಂಡಕ್ಕೆ ಬಿದ್ದಿದೆ.

    ಬಸ್ ಹೊಂಡಕ್ಕೆ ಪಲ್ಟಿಯಾದ ಪರಿಣಾಮ ಬಸ್ಸಿನಲ್ಲಿದ್ದ 15ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವ ಬಾಲಕನ ತಲೆಗೆ ಗಂಭೀರವಾಗಿ ಪೆಟ್ಟಾಗಿದೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಮಂದಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ.

    ಘಟನಾ ಸ್ಥಳಕ್ಕೆ ಅಥಣಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಎಚ್ಚೆತ್ತುಕೊಂಡ ಹೆಸ್ಕಾಂ ಅಧಿಕಾರಿಗಳು

    ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಎಚ್ಚೆತ್ತುಕೊಂಡ ಹೆಸ್ಕಾಂ ಅಧಿಕಾರಿಗಳು

    ಚಿಕ್ಕೋಡಿ: ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಹೆಸ್ಕಾಂ ಇಲಾಖೆ ಅಧಿಕಾರಿಗಳು, ಮನೆಗಳ ಮೇಲೆ ಅಳವಡಿಸಿದ್ದ ಹೈ ಟೆನ್ಶನ್ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿದ್ದಾರೆ.

    ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಮನೆಗಳ ಮೇಲೆ ವಿದ್ಯುತ್ ತಂತಿಗಳನ್ನು ಹಾಕಲಾಗಿತ್ತು. ಸ್ವಲ್ಪ ವಿದ್ಯುತ್ ತಾಗಿದರೆ ಪ್ರಾಣ ಹೋಗುತ್ತದೆ ಎಂದು ಹೆಸ್ಕಾಂ ಅಧಿಕಾರಿಗಳಿಗೆ ತಿಳಿದಿದ್ದರೂ ಗ್ರಾಮದ ಬಹುತೇಕ ಮನೆಗಳ ಮೇಲೆ ಹೈ ಟೆನ್ಶನ್ ವಿದ್ಯುತ್ ಕೇಬಲ್‍ಗಳನ್ನು ಹರಿ ಬಿಟ್ಟಿದ್ದು, ಜನರು ಆತಂಕದಲ್ಲಿ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.

    ಕಾಂಕ್ರೆಟ್ ಮನೆಗಳು ಆಗಿರುವುದರಿಂದ ಸ್ವಲ್ಪ ಶಾರ್ಟ್ ಸಕ್ರ್ಯೂಟ್ ಆದರೂ ಮನೆಗೆಲ್ಲ ಕರೆಂಟ್ ತಾಗಿ ಬಿಡುತ್ತದೆ ಎಂಬ ಭಯ ಜನರನ್ನು ಕಾಡುತ್ತಿತ್ತು. ಈ ಬಗ್ಗೆ ಹೆಸ್ಕಾಂ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಪ್ಲಾಸ್ಟಿಕ್ ಪೈಪ್ ಅಳವಡಿಸಿಕೊಳ್ಳಿ ಏನೂ ಆಗಲ್ಲ ಎಂದು ಹೆಸ್ಕಾಂ ಸಿಬ್ಬಂದಿ ಹೇಳಿದ್ದರು. ಹಾಗೆ ಪ್ಲಾಸ್ಟಿಕ್ ಪೈಪ್ ಹಾಕಿದ್ದರೂ ಸುಟ್ಟು ಹೋಗುತ್ತಿದ್ದವು.

    ಇಂದು ಪಬ್ಲಿಕ್ ಟಿವಿಯಲ್ಲಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ವಿಸ್ತೃತ ವರದಿ ಪ್ರಸಾರವಾಗಿತ್ತು. ತಕ್ಷಣವೇ ಎಚ್ಚೆತ್ತುಕೊಂಡ ಅಧಿಕಾರಿಗಳು ಮನೆ ಮೇಲೆ ಹಾಯ್ದು ಹೋಗಿದ್ದ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿ, ಗ್ರಾಮಸ್ಥರ ಆತಂಕವನ್ನು ದೂರ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಒಂದೇ ಗ್ರಾಮದ 30ಕ್ಕೂ ಹೆಚ್ಚು ಜನರಲ್ಲಿ ಡೆಂಘೀ ಜ್ವರ – ಅಥಣಿಯಲ್ಲಿ ಆತಂಕದ ವಾತಾವರಣ

    ಒಂದೇ ಗ್ರಾಮದ 30ಕ್ಕೂ ಹೆಚ್ಚು ಜನರಲ್ಲಿ ಡೆಂಘೀ ಜ್ವರ – ಅಥಣಿಯಲ್ಲಿ ಆತಂಕದ ವಾತಾವರಣ

    ಬೆಳಗಾವಿ: ಒಂದೇ ಗ್ರಾಮದ 30 ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಜ್ವರ ಪತ್ತೆ ಆಗಿದ್ದು ಇಡೀ ಗ್ರಾಮವೇ ಆತಂಕದಲ್ಲಿರುವ ಪರಿಸ್ಥಿತಿ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕವಟಕೊಪ್ಪ ಗ್ರಾಮದಲ್ಲಿ ನಿರ್ಮಾಣವಾಗಿದೆ.

    ಇಡೀ ಗ್ರಾಮವೇ ಡೆಂಗ್ಯೂ ಭೀತಿಗೆ ಒಳಗಾಗಿದ್ದು, ಗ್ರಾಮದ ಬಹುತೇಕ ಜನರು ಅಥಣಿ ತಾಲೂಕಿನ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕವಟಕೊಪ್ಪ ಗ್ರಾಮದ 7 ಜನರಲ್ಲಿ ಈಗಾಗಲೇ ಡೆಂಗ್ಯೂ ಇರುವದನ್ನು ಸರಕಾರಿ ವೈದ್ಯರು ದೃಢಪಡಿಸಿದ್ದು 27 ಜನರು ಶಂಕಿತ ಡೆಂಗ್ಯೂ ರೋಗದಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಪಂಚಾಯತಿಯಿಂದ ಮುಂಜಾಗೃತಾ ಕ್ರಮಗಳನ್ನ ಕೈಗೊಳ್ಳದೇ ಇರುವ ಹಿನ್ನೆಲೆಯಲ್ಲಿ ಡೆಂಗ್ಯೂ ಸೊಳ್ಳೆಗಳ ಮಿತಿ ಹೆಚ್ಚಾದ ಪರಿಣಾಮ ರೋಗಿಗಳ ಸಂಖ್ಯೆ ಹೆಚ್ಚುತ್ತಾ ಸಾಗಿದೆ. ಡೆಂಗ್ಯೂ ಕಾಯಿಲೆಗೆ ಪ್ರಾಣಹಾನಿ ಸಂಭವಿಸುವ ಮುನ್ನ ಬೆಳಗಾವಿ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕಿದೆ.

  • ಬೆಳಗಾವಿ: ಭಾರೀ ಮಳೆಯಿಂದ ಅಥಣಿ ತಾಲೂಕು ಆಸ್ಪತ್ರೆಗೆ ನುಗ್ಗಿದ ನೀರು

    ಬೆಳಗಾವಿ: ಭಾರೀ ಮಳೆಯಿಂದ ಅಥಣಿ ತಾಲೂಕು ಆಸ್ಪತ್ರೆಗೆ ನುಗ್ಗಿದ ನೀರು

    ಬೆಳಗಾವಿ: ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬುಧವಾರದಂದು ಧಾರಾಕಾರವಾಗಿ ಸುರಿದ ಮಳೆ ಆವಾಂತರವನ್ನೇ ಸೃಷ್ಟಿಸಿದೆ. ಸಂಜೆಯಿಂದ ಸುರಿದ ಮಳೆಯಿಂದ ಅಥಣಿ ಪಟ್ಟಣದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಅಥಣಿ ಸರ್ಕಾರಿ ಆಸ್ಪತ್ರೆಗೆ ಮಳೆಯ ನೀರು ನುಗ್ಗಿದೆ.

    ರಸ್ತೆಯ ಪಕ್ಕದ ಚರಂಡಿಗಳು ಬ್ಲಾಕ್ ಆದ ಪರಿಣಾಮ ಆಸ್ಪತ್ರೆಗೆ ನೀರು ನುಗ್ಗಿದ್ದು, ಎರಡು ಅಡಿಗಿಂತ ಹೆಚ್ಚು ನೀರು ಸಂಗ್ರಹವಾಗಿತ್ತು. ಮಳೆಯ ನೀರನ್ನು ಹೊರ ಹಾಕಲು ಆಸ್ಪತ್ರೆ ಸಿಬ್ಬಂದಿ ಮತ್ತು ಪೌರಕಾರ್ಮಿಕರು ಹರಸಾಹಸ ಪಡಬೇಕಾಯಿತು. ಸತತ ಮೂರು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ಸೃಷ್ಟಿಸಿದ ಆವಾಂತರದಿಂದ ಕೆಲಕಾಲ ಜನಜಿವನ ಅಸ್ತವ್ಯಸ್ತವಾಗಿತ್ತು.

    ಆಸ್ಪತ್ರೆ ಮುಂಭಾಗದ ಚರಂಡಿ ಸರಿ ಪಡಿಸಿ ನೀರು ಹೊರಹಾಕಲಾಗಿದೆ. ಕೆಳಮಹಡಿಯಲ್ಲಿ ಹೊರರೋಗಿಗಳ ವಿಭಾಗವಿದ್ದ ಕಾರಣ ರೋಗಿಗಳಿಗೆ ಯಾವುದೇ ತೊಂದರೆ ಆಗಿಲ್ಲ.

  • ವಿಶೇಷಚೇತನ ಮಕ್ಕಳಿಗೆ ಅನ್ನಭಾಗ್ಯದ ಜೊತೆ ಉಚಿತ ಅಕ್ಷರ ದಾಸೋಹ ನೀಡ್ತಿರೋ ಬೆಳಗಾವಿಯ ಶಾಂತಾ ಶಿಂಧೆ

    ವಿಶೇಷಚೇತನ ಮಕ್ಕಳಿಗೆ ಅನ್ನಭಾಗ್ಯದ ಜೊತೆ ಉಚಿತ ಅಕ್ಷರ ದಾಸೋಹ ನೀಡ್ತಿರೋ ಬೆಳಗಾವಿಯ ಶಾಂತಾ ಶಿಂಧೆ

    ಬೆಳಗಾವಿ: ಬುದ್ಧಿಮಾಂದ್ಯ ಮಕ್ಕಳು ಹುಟ್ಟಿದ್ರೆ ತಿರಸ್ಕಾರ ಮಾಡೋ ಜನ ಇನ್ನೂ ನಮ್ಮ ನಡುವೆ ಇದ್ದಾರೆ. ಅವರನ್ನ ಆಶ್ರಮಕ್ಕೋ ಅಥವಾ ವಿಶೇಷ ಶಾಲೆಗೆ ಸೇರಿಸೋ ಜನರಿದ್ದಾರೆ. ಆದರೆ ನಮ್ಮ ಹೀರೋ ಇಂತ ಬುದ್ಧಿಮಾಂದ್ಯ ಮಕ್ಕಳ ಪಾಲಿಗೆ ಆಶಾಕಿರಣವಾಗಿದ್ದಾರೆ. ಹೆತ್ತ ತಾಯಿಯಂತೆ ಸಾಕಿ ಸಲಹುತ್ತಿದ್ದಾರೆ.

    ಹೌದು. ಬುದ್ಧಿಮಾಂದ್ಯ ಮಕ್ಕಳನ್ನು ಹೆತ್ತ ತಾಯಿಯಂತೆ ಪೋಷಣೆ ಮಾಡುತ್ತಿರುವ ಮಹಿಳೆಯ ಹೆಸರು ಶಾಂತಾ ಶಿಂಧೆ. ಇವರು ಬೆಳಗಾವಿ ಜಿಲ್ಲೆಯ ಅಥಣಿಯವರು. ಕಳೆದ 3 ವರ್ಷಗಳಿಂದ ಶಾರದಾದೇವಿ ಅನ್ನೋ ಬುದ್ಧಿಮಾಂದ್ಯ ಮಕ್ಕಳ ವಸತಿ ಮತ್ತು ತರಬೇತಿ ಶಾಲೆ ನಡೆಸುತ್ತಿದ್ದಾರೆ. ಮನೆಯವರಿಗೆ ಭಾರವಾದ ಬುದ್ಧಿಮಾಂದ್ಯ ಮಕ್ಕಳನ್ನು ಹೆತ್ತ ತಾಯಿಯಂತೆ ಸಾಕುತ್ತಿದ್ದಾರೆ. ಸಮಾಜದಲ್ಲಿ ತಿರಸ್ಕಾರಗೊಂಡ 100ಕ್ಕೂ ಹೆಚ್ಚು ಮಕ್ಕಳಿಗೆ ಆಶ್ರಯ ನೀಡಿದ್ದಾರೆ. ಶಾಂತಾ ಅವರ ಈ ಕಾರ್ಯಕ್ಕೆ ಮಕ್ಕಳು ಹಾಗೂ ಗಂಡ ಸಾಥ್ ನೀಡಿದ್ದಾರೆ. ಸರ್ಕಾರದಿಂದ ಬರೋ ಅನುದಾನದ ಜೊತೆ ಕೆಲ ಹೃದಯವಂತರು ಕೈ ಜೋಡಿಸಿದ್ದಾರೆ.

    ಹೆತ್ತ ಮಕ್ಕಳನ್ನೇ ಸರಿಯಾಗಿ ನೋಡಿಕೊಳ್ಳದೇ ಇರೋ ಪೋಷಕರ ನಡುವೆ ಶಾಂತಾ ಶಿಂಧೆ ನಿಜಕ್ಕೂ ಅಮ್ಮನಂತೆ ಕಾಣ್ತಾರೆ. ಇವರ ಸಮಾಜಸೇವೆಗೆ ಇನ್ನೊಂದಿಷ್ಟು ಮಂದಿ ಕೈ ಜೋಡಿಸಲಿ ಅಂತಾ ಹಾರೈಸೋಣ.

    https://www.youtube.com/watch?v=2mZMx6vR6OY