Tag: athlete

  • Diamond League | ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್‌ ಚೋಪ್ರಾ

    Diamond League | ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್‌ ಚೋಪ್ರಾ

    ನವದೆಹಲಿ: ಪ್ಯಾರಿಸ್‌ನಲ್ಲಿ ನಡೆದ ಡೈಮಂಡ್‌ ಲೀಗ್‌ನಲ್ಲಿ ಭಾರತದ ಕ್ರೀಡಾ ತಾರೆ ನೀರಜ್‌ ಚೋಪ್ರಾ (Neeraj Chopra) ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಇದು 2025ನೇ ಸಾಲಿನಲ್ಲಿ ಚೋಪ್ರಾ ಪಾಲಿಗೆ ಒಲಿದ ಮೊದಲ ಪ್ರಶಸ್ತಿಯಾಗಿದೆ. ಈ ಮೂಲಕ 2 ವರ್ಷಗಳ ಬಳಿಕ ಡೈಮಂಡ್‌ ಲೀಗ್‌ನಲ್ಲಿ (Paris Diamond League) ಗೆದ್ದ ಮೊದಲ ಪ್ರಶಸ್ತಿಯೂ ಆಗಿದೆ.

    ಪ್ಯಾರಿಸ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಜರ್ಮನಿಯ ಜೂಲಿಯನ್ ವೆಬರ್ (Julian Weber) ಅವರನ್ನು ಹಿಂದಿಕ್ಕಿ ಚೋಪ್ರಾ ಈ ಸಾಧನೆ ಮಾಡಿದರು. 2023ರ ಜೂನ್‌ನಲ್ಲಿ ಲಾಸೆನ್‌ನಲ್ಲಿ ನಡೆದ ಡೈಮಂಡ್ ಲೀಗ್‌ನಲ್ಲಿ ನೀರಜ್ ಚೋಪ್ರಾ ಕೊನೆಯ ಬಾರಿಗೆ ಗೆದ್ದಿದ್ದರು. ಈಗ ಮತ್ತೆ ಗೆದ್ದು ಮಿಂಚಿದ್ದಾರೆ. ಆದ್ರೆ ನೀರಜ್‌ 90 ಮೀಟರ್‌ ಗುರಿ ತಲುಪಲೇ ಇಲ್ಲ ಅನ್ನೋದು ಅವರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಇದನ್ನೂ ಓದಿ: ಆರ್‌ಸಿಬಿ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡಿದೆ – ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಬಾಂಬ್

    ಶುಕ್ರವಾರ ಪ್ಯಾರಿಸ್‌ನಲ್ಲಿ (Paris) ನಡೆದ ಡೈಮಂಡ್‌ ಲೀಗ್‌ ಅವರು 88.16 ಮೀಟರ್ ದೂರ ಎಸೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಈ ಹಿಂದೆ ದೋಹಾ ಡೈಮಂಡ್ ಲೀಗ್‌ನಲ್ಲಿ 90.23 ಮೀಟರ್ ಎಸೆದಿದ್ದರೂ, ವೆಬರ್ ಅವರನ್ನು ಸೋಲಿಸಲು ಸಾಧ್ಯವಾಗಿರಲಿಲ್ಲ. ಆದ್ರೆ ಈ ಬಾರಿ ನೀರಜ್ 88.16 ಮೀಟರ್‌ ಎಸೆದರೂ ಪ್ರಥಮ ಸ್ಥಾನಕ್ಕೆ ಜಿಗಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ನಾನು ಮಹಿಳಾ ಕ್ರಿಕೆಟ್‌ಗೆ ಅರ್ಹಳು: ಟ್ರಾನ್ಸ್‌ಜೆಂಡರ್‌ ಕ್ರೀಡಾಪಟುಗಳನ್ನು ಸೇರಿಸಿಕೊಳ್ಳುವಂತೆ ICC, BCCIಗೆ ಅನಯಾ ಮನವಿ

    ಸ್ಪರ್ಧೆಯಲ್ಲಿ ಐವರು ಅಥ್ಲೀಟ್‌ಗಳು 90 ಮೀಟರ್‌ಗಿಂತ ಹೆಚ್ಚು ದೂರ ಎಸೆಯುವ ಸಾಮರ್ಥ್ಯ ಹೊಂದಿದ್ದರು. ಚೋಪ್ರಾ ಅವರ ಮೊದಲ ಪ್ರಯತ್ನವೇ ಅವರನ್ನು ಗೆಲ್ಲಿಸಿತು. ನಂತರದ ಪ್ರಯತ್ನಗಳಲ್ಲಿ 85.10 ಮೀಟರ್ ಎಸೆದರು. ಮೂರು ಬಾರಿ ಫೌಲ್ ಮಾಡಿಕೊಂಡರು. ಕೊನೆಯ ಪ್ರಯತ್ನದಲ್ಲಿ 82.89 ಮೀಟರ್ ಎಸೆದರು. ಜೂಲಿಯನ್ ವೆಬರ್ 87.88 ಮೀಟರ್ ಎಸೆದು 2ನೇ ಸ್ಥಾನ ಪಡೆದರು. ಬ್ರೆಜಿಲ್‌ನ ಲೂಯಿಸ್ ಮೌರಿಸಿಯೊ ಡಾ ಸಿಲ್ವಾ 86.62 ಮೀಟರ್ ಎಸೆದು 3ನೇ ಸ್ಥಾನ ಪಡೆದರು. ಇದನ್ನೂ ಓದಿ: England vs India 1st Test – ಭಾರತಕ್ಕೆ 2 ಬಾರಿ 5 ರನ್‌!

    ಕಳೆದ ಮೇ ತಿಂಗಳಲ್ಲಿ ನಡೆದ ದೋಹಾ ಡೈಮಂಡ್‌ ಲೀಗ್‌ನಲ್ಲಿ ಚೊಪ್ರಾ 90.23 ಮೀಟರ್‌ ಎಸೆದಿದ್ದರು, ವೆಬರ್ 91.06 ಮೀಟರ್‌ ಎಸೆದು ಗೆದ್ದಿದ್ದರು. ಇದನ್ನೂ ಓದಿ: England vs India, 1st Test: ಇಂಗ್ಲೆಂಡ್‌ ನೆಲದಲ್ಲಿ ಮೊದಲ ಪಂದ್ಯದಲ್ಲೇ ಜೈಸ್ವಾಲ್‌, ಗಿಲ್‌ ಶತಕದ ಸಾಧನೆ

  • ಕಂಠೀರವದಲ್ಲಿ ಅಥ್ಲಿಟ್ ನಿಂದನೆ – ಕೋಚ್, ಪತ್ನಿ ವಿರುದ್ಧ ಎಫ್‌ಐಆರ್

    ಕಂಠೀರವದಲ್ಲಿ ಅಥ್ಲಿಟ್ ನಿಂದನೆ – ಕೋಚ್, ಪತ್ನಿ ವಿರುದ್ಧ ಎಫ್‌ಐಆರ್

    ಬೆಂಗಳೂರು: ಸಣ್ಣ ವಿಚಾರಕ್ಕೆ ಕೋಚ್ (Coach) ಪತ್ನಿ ಹಾಗೂ ಅಥ್ಲಿಟ್ (Athlete) ನಡುವೆ ಕಂಠೀರವ ಕ್ರೀಡಾಂಗಣದಲ್ಲಿ ಗಲಾಟೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಚ್ ಯತೀಶ್ ಹಾಗೂ ಪತ್ನಿ ಶ್ವೇತಾ ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗಿದೆ.

    ಸಂಪಂಗಿ ರಾಮನಗರ (Sampangi Ramanagara) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ಬೆಂಗಳೂರಿನ (Bengaluru) ಕಂಠೀರವ ಸ್ಟೇಡಿಯಂನಲ್ಲಿ (Kanteerava Stadium) ಬಿಂದುರಾಣಿ ಹಾಗೂ ಶ್ವೇತಾ ಮಧ್ಯೆ ಖೇಲ್‌ರತ್ನ ಪ್ರಶಸ್ತಿ ಕುರಿತ ವಿಡಿಯೋವೊಂದರ ಕುರಿತು ಜಗಳ ನಡೆದಿತ್ತು. ಕಳೆದ ಶುಕ್ರವಾರ ಅಥ್ಲಿಟ್ ಬಿಂದುರಾಣಿ ಟೆಡೆಕ್ಸ್ ಕಾರ್ಯಕ್ರಮದಲ್ಲಿ ತನ್ನ ಸಾಧನೆ ಬಗ್ಗೆ ಮಾತನಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದರು. ಬಿಂದು ಸೋಶಿಯಲ್ ಮೀಡಿಯಾ ಮಾಹಿತಿಯಲ್ಲಿ ಖೇಲ್‌ರತ್ನ ಪ್ರಶಸ್ತಿ ಬಗ್ಗೆ ಪ್ರಸ್ತಾಪ ಮಾಡಿಕೊಂಡಿದ್ದರ ಕುರಿತು ಕೋಚ್ ಯತೀಶ್ ವಾಟ್ಸಪ್‌ನ ಕೋಚ್ ಗ್ರೂಪ್‌ನಲ್ಲಿ ನಿಮಗೆ ಯಾವಾಗ ಖೇಲ್‌ರತ್ನ ಪ್ರಶಸ್ತಿ ಬಂದಿದೆ ಎನ್ನುವ ರೀತಿಯಲ್ಲಿ ಬಿಂದುರಾಣಿಗೆ ಪ್ರಶ್ನೆ ಮಾಡಿದ್ದರು. ಇದನ್ನೂ ಓದಿ: ರಸ್ತೆ ಬದಿ ಸೊಪ್ಪು ಮಾರೋ ವೃದ್ಧೆ ತಲೆಗೆ ಮಚ್ಚಿನಿಂದ ಹಲ್ಲೆ

    ಈ ಕುರಿತು ಬಿಂದುರಾಣಿ ಗ್ರೂಪ್‌ನಲ್ಲಿ ಉತ್ತರಿಸದೇ ಗಂಡನ ಕಡೆಯಿಂದ ಕಾಲ್ ಮಾಡಿಸಿದ್ದಾರೆ. ಯತೀಶ್ ಸರಿಯಾಗಿ ರೆಸ್ಪಾನ್ಸ್ ಮಾಡದೇ ಹೋಗಿದ್ದಕ್ಕೆ ಬಿಂದು ಯತೀಶ್ ಅವರಿಗೆ ಮತ್ತೆ ಕಾಲ್ ಮಾಡಿದಾಗ ಕೋಚ್ ಪತ್ನಿ ಶ್ವೇತಾ ಜಿ.ಕೆ ಉತ್ತರಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಒಂದಷ್ಟು ವಾಗ್ವಾದ ನಡೆದಿದೆ. ಆ ವಿಚಾರವಾಗಿ ಶ್ವೇತಾ ಸ್ಟೇಡಿಯಂಗೆ ಬಂದು ಬಿಂದುರಾಣಿ ಜೊತೆ ಗಲಾಟೆ ಮಾಡಿಕೊಂಡಿದ್ದಲ್ಲದೆ ಬಿಂದು ಅವರನ್ನು ನಿಂದಿಸಿ ಅವರ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದರು. ಇದನ್ನೂ ಓದಿ: ಕೋಚ್ ಪತ್ನಿಯಿಂದ ಅಥ್ಲಿಟ್ ಮೇಲೆ ಹಲ್ಲೆ- ವೀಡಿಯೋ ವೈರಲ್

    ಘಟನೆ ಸಂಬಂಧ ಬಿಂದುರಾಣಿ ಸಂಪಂಗಿ ರಾಮ ನಗರ ಪೊಲೀಸ್ ಠಾಣೆಯಲ್ಲಿ ಶ್ವೇತಾ.ಜಿ.ಕೆ ಹಾಗೂ ಅವರ ಪತಿ ಯತೀಶ್ ವಿರುದ್ಧ ಮಾನಹಾನಿ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ. ಬಿಂದುರಾಣಿ ಕೊಟ್ಟ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲು ಮಾಡಿಕೊಂಡಿರುವ ಸಂಪಂಗಿ ರಾಮನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಲವರ್ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ಳು – ಪತ್ನಿ ಸೇರಿ ಐವರು ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಚ್ ಪತ್ನಿಯಿಂದ ಅಥ್ಲಿಟ್ ಮೇಲೆ ಹಲ್ಲೆ- ವೀಡಿಯೋ ವೈರಲ್

    ಕೋಚ್ ಪತ್ನಿಯಿಂದ ಅಥ್ಲಿಟ್ ಮೇಲೆ ಹಲ್ಲೆ- ವೀಡಿಯೋ ವೈರಲ್

    ಬೆಂಗಳೂರು: ಖಾಸಗಿ ಕಾರ್ಯಕ್ರಮವೊಂದರ ವೀಡಿಯೋ ವಾಟ್ಸಪ್‌ನಲ್ಲಿ ಹಂಚಿಕೊಂಡ ಕುರಿತಾಗಿ ಕೋಚ್ ಪತ್ನಿ ಮತ್ತು ಅಥ್ಲಿಟ್ (Athlete) ಮಧ್ಯೆ ವಾಗ್ವಾದ ಶುರುವಾಗಿದ್ದು, ಕೋಚ್ (Coach) ಪತ್ನಿ ಅಥ್ಲಿಟ್ ಮೇಲೆ ಹಲ್ಲೆ ಮಾಡಿರುವ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.

    ಬೆಂಗಳೂರಿನ (Bengaluru) ಕಂಠೀರವ ಮೈದಾನದಲ್ಲಿ (Kanteerava Stadium) ಘಟನೆ ನಡೆದಿದ್ದು, ಬಿಂದುರಾಣಿ ಎಂಬ ಅಥ್ಲಿಟ್ ಬೆಳಗ್ಗೆ ಪ್ರಾಕ್ಟಿಸ್‌ಗೆಂದು ಹೋದ ವೇಳೆ ಶ್ವೇತಾ ಎಂಬ ಮಹಿಳೆ ಆಕೆಯನ್ನು ನಿಂದನೆ ಮಾಡಿ ಹಲ್ಲೆಗೆ ಯತ್ನಿಸಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅಥ್ಲಿಟ್ ಬಿಂದುರಾಣಿ, ಖಾಸಗಿ ಕಾರ್ಯಕ್ರಮವೊಂದರ ವೀಡಿಯೋವೊಂದನ್ನು ಕೋಚ್‌ಗಳ ವಾಟ್ಸಪ್ ಗ್ರೂಪ್‌ನಲ್ಲಿ ಶೇರ್ ಮಾಡಿದ್ದೆ. ಆ ವಿಡಿಯೋದಲ್ಲಿ ತಪ್ಪು ಮಾಹಿತಿ ನೀಡಿದ್ದೀಯಾ ಎಂದು ಕೋಚ್ ಯತೀಶ್ ಎಂಬವರ ಪತ್ನಿ ಹಲ್ಲೆಗೆ ಯತ್ನಿಸಿದ್ದಾರೆ ಎಂದರು. ಇದನ್ನೂ ಓದಿ: ಶಾಸಕ ಸತೀಶ್ ರೆಡ್ಡಿಗೆ ಮಾತೃವಿಯೋಗ

    ತಪ್ಪು ಮಾಹಿತಿ ನೀಡಿದ್ದೀಯಾ ಎಂದು ಕೋಚ್ ಗ್ರೂಪ್‌ನಲ್ಲಿ ಪ್ರಶ್ನೆ ಮಾಡಿದ್ದರು. ಈ ಕುರಿತು ಗ್ರೂಪ್‌ನಲ್ಲಿ ಸ್ಪಷ್ಟನೆ ಕೊಡದೆ ನೇರವಾಗಿ ಕಾಲ್ ಮಾಡಿದೆ. ಕೆಲವೇ ನಿಮಿಷದಲ್ಲಿ ಕಾಲ್ ಕಟ್ ಆಯಿತು. ನಾನು ಅಲ್ಲಿಗೆ ಸುಮ್ಮನಾದೆ. ಆ ಘಟನೆ ಆದ ಬಳಿಕ ಇಂದು ಬೆಳಗ್ಗೆ ಕೋಚ್ ಯತೀಶ್ ಅವರ ಪತ್ನಿ ಬಂದು ಗಲಾಟೆ ಮಾಡಿದ್ದಾರೆ. ನಾನು ವಿಷಯ ದೊಡ್ಡದು ಮಾಡುವುದು ಬೇಡವೆಂದು ಸುಮ್ಮನಾದೆ. ಘಟನೆಯ ಸಂಬಂಧ ಅಥ್ಲೆಟಿಕ್ ಅಸೋಸಿಯೇಷನ್‌ಗೆ ದೂರು ನೀಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: 20 ಬಾಕ್ಸ್ ಟೊಮೆಟೋ 58 ಸಾವಿರಕ್ಕೆ ಮಾರಾಟ- ರೈತ ಫುಲ್ ಖುಷ್

    ಬಿಂದುರಾಣಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾದ ಶ್ವೇತಾ ಜಿ.ಕೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದು, ಖೇಲ್‌ರತ್ನ ಪ್ರಶಸ್ತಿ ಸಂಬಂಧ ಪೋಸ್ಟ್ ಮಾಡಿಕೊಂಡಿದ್ದಕ್ಕೆ ನನ್ನ ಗಂಡ ಯತೀಶ್ ಬಿಂದುಗೆ ಗ್ರೂಪ್‌ನಲ್ಲಿಯೇ ಪ್ರಶ್ನೆ ಮಾಡಿದ್ದರು. ಕೋಚ್‌ಗ್ರೂಪ್‌ನಲ್ಲಿ ಉತ್ತರ ಕೊಡಬೇಕಿದ್ದ ಬಿಂದುರಾಣಿ, ರಾತ್ರಿ 10 ಗಂಟೆಗೆ ಆಕೆಯ ಗಂಡನ ಕಡೆಯಿಂದ ನನ್ನ ಪತಿ ಯತೀಶ್‌ಗೆ ಕಾಲ್ ಮಾಡಿಸಿ ಬೆದರಿಕೆ ಹಾಕಿಸಿದ್ದಾಳೆ. ನನ್ನ ಪತಿ ಕಾಲ್ ಕಟ್ ಮಾಡಿದ ನಂತರ ಕಾಲು ಗಂಟೆಯಲ್ಲಿ ಮತ್ತೊಮ್ಮೆ ಕರೆ ಮಾಡಿದ್ದಾರೆ. ಈ ವೇಳೆ ನಾನು ಕಾಲ್ ರಿಸೀವ್ ಮಾಡಿ ಮಾತನಾಡುವಾಗ, ನನಗೆ ದೊಡ್ಡವರು ಗೊತ್ತು. ನಿಮ್ಮನ್ನು ಸ್ಟೇಡಿಯಂನಿಂದಲೇ ಹೊರಹಾಕಿಸುತ್ತೇನೆ ಎಂದು ಹೇಳಿದ್ದಾಳೆ. ಆ ಕಾರಣಕ್ಕಾಗಿ ಶನಿವಾರವೇ ಹೋಗಿದ್ದೆ. ಆದರೆ ಸಿಗಲಿಲ್ಲ. ಹಾಗಾಗಿ ಇವತ್ತು ಹೋಗಿ ಮಾತನಾಡಿದೆ ಎಂದರು. ಇದನ್ನೂ ಓದಿ: ಡಿಪೋ ಆವರಣದಲ್ಲಿ ನೇಣಿಗೆ ಶರಣಾದ ಸಾರಿಗೆ ನೌಕರ

    ಬಿಂದು ನಾನು ಮೊದಲಿನಿಂದಲೇ ಒಟ್ಟಿಗೆ ಅಭ್ಯಾಸ ಮಾಡಿದ ಪರಿಚಯ ಇದ್ದ ಕಾರಣ ಏರುಧ್ವನಿಯಲ್ಲಿ ಮಾತನಾಡಿದ್ದು ನಿಜ. ಬಿಂದುರಾಣಿ ಗಂಡನ ಕಡೆಯಿಂದ ಕಾಲ್ ಮಾಡಿಸಿದ್ದಕ್ಕೆ ನಾನು ನನ್ನ ಗಂಡನ ಪರವಾಗಿ ಹೋಗಿ ಮಾತನಾಡಿದ್ದೇನೆ. ಬಿಂದುರಾಣಿ ಈ ಹಿಂದೆ ನಮ್ಮ ಬಾಕ್ಸ್‌ನಿಂದ ಒಂದು ಲಕ್ಷ ಕಳ್ಳತನ ಮಾಡಿದ್ದಳು. ಹಿರಿಯರು ಮಧ್ಯಪ್ರವೇಶ ಮಾಡಿದ್ದರಿಂದ ದೂರು ಕೊಟ್ಟಿರಲಿಲ್ಲ. ಅವಳು ಕಾನೂನಾತ್ಮಕವಾಗಿ ಹೋದರೆ ನಾನೂ ಕಾನೂನಾತ್ಮಕವಾಗಿ ಹೋಗುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಮದುವೆ ನಿರಾಕರಣೆ- ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ದುರ್ಮರಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇವಲ 1 ಗಂಟೆಯಲ್ಲಿ 3,182 ಪುಷ್‌-ಅಪ್‌ ಮಾಡಿ ಗಿನ್ನಿಸ್‌ ವರ್ಲ್ಡ್‌ ರೆಕಾರ್ಡ್‌ ಮಾಡಿದ ಭೂಪ!

    ಕೇವಲ 1 ಗಂಟೆಯಲ್ಲಿ 3,182 ಪುಷ್‌-ಅಪ್‌ ಮಾಡಿ ಗಿನ್ನಿಸ್‌ ವರ್ಲ್ಡ್‌ ರೆಕಾರ್ಡ್‌ ಮಾಡಿದ ಭೂಪ!

    ಕ್ಯಾನ್‌ಬೆರ್ರಾ: ಆಸ್ಟ್ರೇಲಿಯಾದ ಅಥ್ಲೀಟ್ ಒಬ್ಬರು ಕೇವಲ ಒಂದು ಗಂಟೆಯಲ್ಲಿ 3,182 ಪುಷ್‌-ಅಪ್‌ಗಳನ್ನು ಮಾಡಿ ಗಿನ್ನೆಸ್ ವಿಶ್ವ ದಾಖಲೆ ಬರೆದಿದ್ದಾರೆ. ತಮ್ಮ ವಿಶಿಷ್ಟ ಸಾಧನೆ ಮೂಲಕ ಅಚ್ಚರಿ ಮೂಡಿಸಿದ್ದಾರೆ.

    ಕಳೆದ ಏಪ್ರಿಲ್‌ನಲ್ಲಿ ಅಥ್ಲೀಟ್‌ ಸ್ಕಾಲಿ ಕೇವಲ ಒಂದು ಗಂಟೆಯಲ್ಲಿ 3,182 ಪುಷ್-ಅಪ್‌ಗಳನ್ನು ಮಾಡಿ ದಾಖಲೆ ಬರೆದಿದ್ದಾರೆ. 2021 ರಲ್ಲಿ ಆಸ್ಟ್ರೇಲಿಯನ್ ಜರಾಡ್ ಯಂಗ್ ಅವರು ಗಂಟೆಗೆ 3,054 ಪುಷ್‌-ಅಪ್‌ಗಳನ್ನು ಮಾಡಿ ದಾಖಲೆ ಬರೆದಿದ್ದರು. ಈಗ ಸ್ಕಾಲಿ ಆ ದಾಖಲೆಯನ್ನು ಮುರಿದಿದ್ದಾರೆ ಎಂದು ಜಿಡಬ್ಲ್ಯೂಆರ್‌ ತಿಳಿಸಿದೆ. ಇದನ್ನೂ ಓದಿ: ಸೈಕಲ್‌ನಿಂದ ಬಿದ್ದ ವಿಶ್ವದ ದೊಡ್ಡಣ್ಣ

    GWR ಶುಕ್ರವಾರ ತನ್ನ ಅಧಿಕೃತ ಯೂಟ್ಯೂಬ್‌ ಹ್ಯಾಂಡಲ್‌ನಲ್ಲಿ ವೀಡಿಯೋವನ್ನು ಹಂಚಿಕೊಂಡಿದೆ. ಇದರಲ್ಲಿ ಸ್ಕಾಲಿ ಅವರು ತಮ್ಮ ಜೀವನ ಮತ್ತು ಸಾಧನೆ ಕುರಿತು ಹೇಳಿಕೊಂಡಿದ್ದಾರೆ.

    ಸ್ಕಾಲಿ ತನ್ನ 12 ನೇ ವಯಸ್ಸಿನಲ್ಲಿ ಬಿದ್ದು ಕೈ ಮುರಿದುಕೊಂಡಿದ್ದರು. ಆಗಿನಿಂದ ಸಿಆರ್‌ಪಿಎಸ್‌ (ಕಾಂಪ್ಲೆಕ್ಸ್ ರೀಜನಲ್ ಪೇಯ್ನ್‌ ಸಿಂಡ್ರೋಮ್) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಗುಣಪಡಿಸಲಾಗದ ನೋವಿನಿಂದಾಗಿ ಅವರು ಆಗಾಗ್ಗೆ ಮನೆಯಿಂದ ಹೊರಬರಲು ಸಾಧ್ಯವಾಗುತ್ತಿರಲಿಲ್ಲ. ಅದಕ್ಕೆ ಚಿಕಿತ್ಸೆ ಕೂಡ ಪಡೆದುಕೊಳ್ಳುತ್ತಿದ್ದಾರೆ ಎಂದು GWR ತಿಳಿಸಿದೆ.

    Live Tv

  • ಟೋಕಿಯೋ ಒಲಿಂಪಿಕ್ಸ್ ಪದಕಕ್ಕೆ ಮುತ್ತಿಕ್ಕಲು ಸಜ್ಜಾದ ಭಾರತೀಯ ಕ್ರೀಡಾಪಟುಗಳು

    ಟೋಕಿಯೋ ಒಲಿಂಪಿಕ್ಸ್ ಪದಕಕ್ಕೆ ಮುತ್ತಿಕ್ಕಲು ಸಜ್ಜಾದ ಭಾರತೀಯ ಕ್ರೀಡಾಪಟುಗಳು

    ಟೋಕಿಯೋ: 2021ರ ಟೋಕಿಯೋ ಒಲಿಂಪಿಕ್ಸ್‍ಗೆ ಕ್ಷಣಗಣನೆ ಆರಂಭವಾಗಿದೆ. ಇನ್ನೂ ಕೇವಲ ಕೆಲವೇ ಗಂಟೆಗಳು ಮಾತ್ರ ಭಾಗಿ ಉಳಿದುಕೊಂಡಿರುವಂತೆ, ಭಾರತ ಹಲವು ಕ್ರೀಡಾಪಟುಗಳು ಪದಕ ಬೇಟೆಯಾಡುವ ತವಕದಲ್ಲಿದ್ದಾರೆ.

    2020ರಲ್ಲಿ ನಡೆಯಬೇಕಿದ್ದ ಟೋಕಿಯೋ ಒಲಿಂಪಿಕ್ಸ್ ಕೊರೊನಾದಿಂದಾಗಿ ಒಂದು ವರ್ಷ ಮುಂದೂಡಲ್ಪಟ್ಟಿತ್ತು. ಈ ವರ್ಷ ಜುಲೈ 23ರಿಂದ ಆಗಸ್ಟ್ 8 ರವರೆಗೆ ಜಪಾನ್‍ನ ಟೋಕಿಯೋದಲ್ಲಿ ನಡೆಯುತ್ತಿದೆ.

    ಈಗಾಗಲೇ ಭಾರತದ 120 ಕ್ರೀಡಾಪಟುಗಳು ಟೋಕಿಯೋ ತಲುಪಿದ್ದಾರೆ. 120 ಕ್ರೀಡಾಪಟುಗಳ ಪೈಕಿ 5 ಮಂದಿ ಕನ್ನಡಿಗರು ಸೇರಿದ್ದಾರೆ. ಈ ಮೂಲಕ ಭಾರತ ಒಲಿಂಪಿಕ್ಸ್ ಇತಿಹಾಸದಲ್ಲಿ ಈ ಬಾರಿ ಅತೀ ಹೆಚ್ಚಿನ ಕ್ರೀಡಾಪಟುಗಳನ್ನು ಕಳುಹಿಸಿದೆ. ಈ ಬಾರಿ 68 ಪುರುಷ ಸ್ಪರ್ಧಿಗಳು ಮತ್ತು 52 ಮಹಿಳಾ ಸ್ಪರ್ಧಿಗಳು ವಿವಿಧ ಕ್ರೀಡೆಯಲ್ಲಿ ಭಾಗವಹಿಸಲಿದ್ದಾರೆ. ಇದಲ್ಲದೆ ಈ ಬಾರಿ ವಿಶೇಷವೆಂಬಂತೆ ಯುವ ಪಡೆ ಟೋಕಿಯೋಗೆ ತೆರಳಿದೆ. 120 ಕ್ರೀಡಾಪಟುಗಳ ಪೈಕಿ 10ಕ್ಕೂ ಹೆಚ್ಚು ಕ್ರೀಡಾಪಟುಗಳು 20 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, ಭಾರತ ಭವಿಷ್ಯದ ಕ್ರೀಡಾಪಟುಗಳಾಗಿ ಗುರುತಿಸಿಕೊಂಡಿದ್ದಾರೆ. ಕೊರೊನಾದಿಂದಾಗಿ ಬಹಳ ವಿಭಿನ್ನವಾಗಿ ಈ ಬಾರಿಯ ಒಲಿಂಪಿಕ್ಸ್ ಆಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಇಂಗ್ಲೆಂಡ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯದ ಬರೆ

    ಈಗಾಗಲೇ ಭಾರತದ ಸ್ಟಾರ್ ಆಟಗಾರರನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಈ ಕ್ರೀಡಾಪಟುಗಳಿಂದ ಪದಕ ನಿರೀಕ್ಷೆಗಳನ್ನು ಕ್ರೀಡಾ ತಜ್ಞರು ವ್ಯಕ್ತಪಡಿಸಿದ್ದಾರೆ. ಈ ವರ್ಷ ಎಲ್ಲ ಕ್ರೀಡಾಪಟುಗಳಿಗೆ ಅಭ್ಯಾಸಕ್ಕಾಗಿ ಸಾಕಷ್ಟು ಸಮಯವಕಾಶ ಸಿಕ್ಕಿರುವುದರಿಂದಾಗಿ ಪದಕ ಮುಡಿಗೇರಿಸಿಕೊಳ್ಳುವ ಅವಕಾಶವಿದೆ.

    ಭಾರತ ಸ್ಟಾರ್ ಅಥ್ಲೀಟ್‍ಗಳ ಪೈಕಿ ಪಿ.ವಿ ಸಿಂಧು ಬ್ಯಾಡ್ಮಿಂಟನ್, ಮೇರಿ ಕೋಮ್ ಬಾಕ್ಸಿಂಗ್, ಅಮಿತ್ ಫಂಗಲ್ ಬಾಕ್ಸಿಂಗ್, ಸಾಕ್ಷಿ ಮಲಿಕ್ ಕುಸ್ತಿ, ವಿನೇಶ್ ಪೊಗಾಟ್ ಕುಸ್ತಿ, ಭಜರಂಗ್ ಪೊನಿಯಾ ಕುಸ್ತಿ, ಮನು ಭಾಕರ್ ಶೂಟಿಂಗ್, ದೀಪಿಕಾ ಕುಮಾರಿ ಆರ್ಚರಿ, ಮೀರಾಬಾಯಿ ಚಾನು ವೇಟ್‍ಲಿಪ್ಟಿಂಗ್‍ನಲ್ಲಿ ಸ್ಪರ್ಧಿಸುತ್ತಿದ್ದು ಇವರೆಲ್ಲರ ಮೇಲೆ ಪದಕದ ನಿರೀಕ್ಷೆ ಇದೆ. ಇವರೊಂದಿಗೆ ಇನ್ನಿತರ ಯುವ ಕ್ರೀಡಾಪಟುಗಳು ಪದಕವನ್ನು ಮುಡಿಗೇರಿಸಿಕೊಳ್ಳಲಿ ಎಂಬುದು ನಮ್ಮೆಲ್ಲರ ಆಶಯ. ಆಲ್ ದಿ ಬೇಸ್ಟ್ ಇಂಡಿಯಾ.

  • ಟೋಕಿಯೋ ಒಲಿಂಪಿಕ್ಸ್‌ಗೆ ರೈಲ್ವೇ ಕಲೆಕ್ಟರ್ ಆಯ್ಕೆ

    ಟೋಕಿಯೋ ಒಲಿಂಪಿಕ್ಸ್‌ಗೆ ರೈಲ್ವೇ ಕಲೆಕ್ಟರ್ ಆಯ್ಕೆ

    ಚೆನ್ನೈ: ಟೋಕಿಯೋ ಒಲಿಂಪಿಕ್ಸ್‌ಗೆ ದಕ್ಷಿಣ ರೈಲ್ವೇ ಟಿಕೆಟ್ ಕಲೆಕ್ಟರ್ ರೇವತಿ ಆಯ್ಕೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಜುಲೈ 23ರಿಂದ ಆರಂಭವಾಗಲಿರುವ ಟೋಕಿಯೋ ಒಲಿಂಪಿಕ್ಸ್‌ಗೆ ತಮಿಳುನಾಡಿನ ಮಧುರೈ ಮೂಲದ ರೇವತಿ ವೀರಮಣೆ ಆಯ್ಕೆಯಾಗಿದ್ದಾರೆ. ಸದ್ಯ ರೇವತಿ ದಕ್ಷಿಣ ರೈಲ್ವೇ ಟಿಕೆಟ್ ಕಲೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಒಲಿಂಪಿಕ್ಸ್‌ ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಇದನ್ನೂ ಓದಿ:  ಅಂದು ಬೆಸ್ಟ್ ಫ್ರೆಂಡ್ ಹೆಂಡ್ತಿಯಾದ್ರು, ಇಂದು ಪತ್ನಿಯೇ ಬೆಸ್ಟ್ ಫ್ರೆಂಡ್: ರಮೇಶ್

    ಇದಕ್ಕೂ ಮೊದಲು 1988 ರಲ್ಲಿ ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ನಡೆದ ಒಲಿಂಪಿಕ್ಸ್‍ನಲ್ಲಿ ಮಧುರೈ ಅಥ್ಲೀಟ್ ತಿರುಗ್ನಾನದುರೈ 4100 ಮೀಟರ್ ಪುರುಷರ ವಿಭಾಗದಲ್ಲಿ ಭಾಗವಹಿಸಿದ್ದರು. ರೇವತಿ ವೀರಮಣಿ ರಿಲೇಯಲ್ಲಿ ಭಾಗವಹಿಸಿದ್ದಾರೆ ಎಂದು ದಕ್ಷಿಣ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

    ರೇವತಿಗೆ ಸುಮಾರು ಆರು ವರ್ಷ ವಯಸ್ಸಾಗಿದ್ದಾಗ, ಆಕೆಯ ತಂದೆ ಅನಾರೋಗ್ಯದಿಂದ ನಿಧನರಾದರು ಮತ್ತು ಅವರ ತಾಯಿ ಎಂಟು ತಿಂಗಳ ನಂತರ ನಿಧನರಾದರು. ನಂತರ ರೇವತಿ ಮತ್ತು ಆಕೆಯ ತಂದೆ ರೇಖಾ ಅಜ್ಜಿಯ ಜೊತೆಗೆ ಸಕ್ಕಿಮಂಗಲಂನಲ್ಲಿ ವಾಸವಾಗಿದ್ದಾರೆ.

    ರೇವತಿ ಶಾಲಾ ದಿನಗಳಲ್ಲಿ ಅಥ್ಲೆಟಿಕ್ಸ್ ಬಗ್ಗೆ ಆಸಕ್ತಿ ವಹಿಸಿದಳು ಮತ್ತು ತನ್ನ ಹಾಸ್ಟೆಲ್ ವಾರ್ಡನ್‍ಗಳ ಪ್ರೇರಣೆಯಿಂದ ರೇಸ್ ಕೋರ್ಸ್ ಕ್ರೀಡಾಂಗಣದಲ್ಲಿ ಅಭ್ಯಾಸ ಮಾಡಲು ಪ್ರಾರಂಭಿಸಿದಳು. 2015 ರಲ್ಲಿ ಪಿಯುಸಿಯಲ್ಲಿದ್ದಾಗ ರೇವತಿ ಪ್ರತಿಭೆಯನ್ನು ಗುರುತಿಸಿದೆ. ನಾನು ಒಬ್ಬ ಕ್ರೀಡಾಪಟುವನ್ನು ದೇಶವನ್ನು ಪ್ರತಿನಿಧಿಸಲು ಒಲಿಂಪಿಕ್ಸ್‌ಗೆ ಕಳುಹಿಸುವ ಗುರಿಯನ್ನು ಹೊಂದಿದ್ದೇನೆ ಎಂದು ರೇವತಿಯ ಕೋಚ್ ಕೆ ಕಣ್ಣನ್ ಅವರು ಹೇಳಿದ್ದಾರೆ.

    ರೇವತಿ ಅವರನ್ನು ದೂರವಾಣಿ ಮೂಲಕ ಅಭಿನಂದಿಸಿದ ವಾಣಿಜ್ಯ ತೆರಿಗೆ ಮತ್ತು ಮಧುರೈ ಪೂರ್ವ ಶಾಸಕ ಪಿ ಮೂರ್ತಿ ಅವರು ಆಕೆಗೆ ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಹೇಳಿದರು. ಹಣಕಾಸು ಸಚಿವ ಮತ್ತು ಮಧುರೈ ಕೇಂದ್ರ ಶಾಸಕ ಪಿಟಿಆರ್ ಪಳನಿವೇಲ್ ತ್ಯಾಗರಾಜನ್ ಮತ್ತು ಮಧುರೈ ಸಂಸದ ಎಸ್.ವೆಂಕಟೇಶನ್ ಟ್ವೀಟ್ ಮಾಡಿ ಕ್ರೀಡಾಪಟುವಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ:  ಜು.12 ರಂದು ಯಾರೂ ಮನೆಯ ಬಳಿ ಬರಬೇಡಿ: ಶಿವಣ್ಣ ಮನವಿ

    ಈ ನಡುವೆ ಮತ್ತೊಬ್ಬ ಸ್ಟಾರ್ ಆಟಗಾರ್ತಿ ಅಥ್ಲಿಟ್ ಹಿಮಾದಾಸ್ ಒಲಿಂಪಿಕ್ಸ್‌ ನಿಂದ ಹೊರಗುಳಿದಿದ್ದಾರೆ. ಕಳೆದ ತಿಂಗಳು ನಡೆದಿದ್ದ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ 100 ಮೀಟರ್ ಓಟದ ವೇಳೆ ಹಿಮಾ ದಾಸ್ ಮಂಡಿ ನೋವಿನಿಂದ ಬಳಲಿದ್ದರು. ಈಗ ಗಾಯದ ಸಮಸ್ಯೆಯಿಂದಲೇ ಅವರು ಒಲಿಂಪಿಕ್ಸ್ ಕ್ರೀಡಾಕೂಡದಿಂದ ಹೊರಗೆ ಉಳಿದಿದ್ದಾರೆ.

  • ದಸರಾ ಕ್ರೀಡಾಪಟುಗಳ ನಗದು ಬಹುಮಾನ ವಿಳಂಬ- ಒಂದೇ ದಿನದಲ್ಲಿ ಸಚಿವ ಸೋಮಣ್ಣ ಇತ್ಯರ್ಥ

    ದಸರಾ ಕ್ರೀಡಾಪಟುಗಳ ನಗದು ಬಹುಮಾನ ವಿಳಂಬ- ಒಂದೇ ದಿನದಲ್ಲಿ ಸಚಿವ ಸೋಮಣ್ಣ ಇತ್ಯರ್ಥ

    ಮೈಸೂರು: ದಸರಾ ಮುಗಿದು ಮೂರು ತಿಂಗಳು ಕಳೆಯುತ್ತಾ ಬಂದಿದೆ. ಆದರೂ ದಸರಾ ಕ್ರೀಡಾಕೂಟದಲ್ಲಿ ಗೆದ್ದ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲು ವಿಳಂಬ ಮಾಡಿದ್ದ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಬೆವರಳಿಸಿದ ಕೆಲವೇ ಗಂಟೆಗಳಲ್ಲಿ ಪ್ರಶಸ್ತಿಯ ನಗದು ಹಣ ಬಿಡುಗಡೆಯಾಗಿದೆ.

    ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾಗಿದ್ದ ಕ್ರೀಡಾಪಟುಗಳಿಗೆ ಬಹುಮಾನದ ಹಣವನ್ನು ಈವರೆಗೆ ಬಿಡುಗಡೆ ಮಾಡಿರಲಿಲ್ಲ. ಶುಕ್ರವಾರ ಬೆಳಗ್ಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟನೆಗೆ ಆಗಮಿಸಿದ್ದ ಸಚಿವರ ಗಮನಕ್ಕೆ ಈ ವಿಷಯ ಬಂತು. ಬಹುಮಾನ ಹಣ ಪಾವತಿಸಲು ವಿಳಂಬ ಮಾಡಿದ್ದ ಅಧಿಕಾರಿಗಳಿಗೆ ಸ್ಥಳದಲ್ಲೇ ತರಾಟೆ ತೆಗೆದುಕೊಂಡಿದ್ದು, ಸಚಿವರು ತಕ್ಷಣ ಸಮಸ್ಯೆ ಇತ್ಯರ್ಥ ಆಗಬೇಕು ಎಂದು ತಾಕೀತು ಮಾಡಿದರು.

    ಅಷ್ಟೇ ಅಲ್ಲದೇ ಈ ಸಮಸ್ಯೆ ಇತ್ಯರ್ಥಕ್ಕೆ ಬೇಕಾದ 54 ಲಕ್ಷ ರೂ. ಅನುದಾನವನ್ನು ಸಚಿವರು ಸಂಜೆಯೊಳಗೆ ಬಿಡುಗಡೆ ಮಾಡಿಸಿದ್ದಾರೆ. ದಸರಾ ಕ್ರೀಡಾಕೂಟದ 1,451 ವಿಜೇತರಿಗೆ ಬಹುಮಾನ ಹಣವನ್ನು ನೀಡಬೇಕಾಗಿತ್ತು. ಈ ಪೈಕಿ 726 ವೈಯಕ್ತಿಕ ಬಹುಮಾನಗಳು ಹಾಗೂ 725 ಗುಂಪು ಸ್ಪರ್ಧೆ ಬಹುಮಾನಗಳು ಸೇರಿವೆ. ಈ ಎಲ್ಲರ ಬ್ಯಾಂಕ್ ಖಾತೆಗೆ ಈಗ ಹಣ ವರ್ಗಾವಣೆ ಆಗುತ್ತಿದೆ.

    ಎಲ್ಲಾ ಬಹುಮಾನದ ಹಣವನ್ನು ಆರ್.ಟಿ.ಜಿ.ಎಸ್. ಮೂಲಕ ಫಲಾನುಭವಿಗಳ ಖಾತೆಗೆ ಕೂಡಲೇ ವರ್ಗಾಯಿಸಲಾಗುವುದು. ಕ್ರೀಡಾಪಟುಗಳು ಆತಂಕಪಡಬೇಕಿಲ್ಲ ಎಂದು ಸಚಿವರು ಭರವಸೆ ನೀಡಿದ್ದಾರೆ. ಕ್ರೀಡಾಕೂಟಕ್ಕೆ ಊಟೋಪಚಾರ ಸರಬರಾಜು ಮಾಡಿದವರಿಗೂ ಬಿಲ್ ಬಾಕಿ ಇದ್ದು, ಅದನ್ನೂ ಕೂಡ ಕೂಡಲೇ ಪಾವತಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

  • ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಒಲಿಂಪಿಕ್ ಕ್ರೀಡಾಕೂಟ ಆಯೋಜನೆ

    ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಒಲಿಂಪಿಕ್ ಕ್ರೀಡಾಕೂಟ ಆಯೋಜನೆ

    ಶಿವಮೊಗ್ಗ: ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ನವೆಂಬರ್ 23 ರಿಂದ 30 ರವರೆಗೆ ರಾಜ್ಯಮಟ್ಟದ ಒಲಿಂಪಿಕ್ ಕ್ರೀಡಾಕೂಟ ನಡೆಸಲು ನಿರ್ಧರಿಸಲಾಗಿದೆ.

    ಯುವಜನ ಸೇವಾ ಮತ್ತು ಕ್ರೀಡಾ ಸಚಿವರಾಗಿ ಈಶ್ವರಪ್ಪ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಶಿವಮೊಗ್ಗದಲ್ಲಿ ಈ ರೀತಿಯ ರಾಜ್ಯಮಟ್ಟದ ಕ್ರೀಡಾಕೂಟ ನಡೆಸಲು ನಿರ್ಧರಿಸಲಾಗಿದ್ದು ಇದು ಜಿಲ್ಲೆಯ ಅಭಿವೃದ್ಧಿ ಜೊತೆಗೆ ಕ್ರೀಡಾಪಟುಗಳ ಉತ್ತೇಜನಕ್ಕೆ ಸಹಕಾರಿಯಾಗಿದೆ. ಈ ಕ್ರೀಡಾಕೂಟವು ಶಿವಮೊಗ್ಗದ ನೆಹರೂ ಕ್ರೀಡಾಂಗಣ, ಒಳಾಂಗಣ ಕ್ರೀಡಾಂಗಣ ಸೇರಿದಂತೆ, ನಗರದ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆಸಲು ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ.

    ಕ್ರೀಡಾಕೂಟದ ಯಶಸ್ವಿ ಅಯೋಜನೆಗೆ ಸಾರ್ವಜನಿಕ ಸಂಘ-ಸಂಸ್ಥೆಗಳಿಗೆ ಕೈ ಜೋಡಿಸಲು ಮನವಿ ಕೂಡ ಮಾಡಿಕೊಳ್ಳಲಾಗಿದೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳ ವಸತಿ ಊಟ ಉಪಹಾರ ಮತ್ತು ಸಾರಿಗೆ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು ಹಾಗು ಎಲ್ಲಾ ಕ್ರೀಡಾ ಸಂಸ್ಥೆಗಳು ಸಕ್ರಿಯವಾಗಿ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಕ್ರೀಡಾ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಈ ಬಗ್ಗೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಸಚಿವರು ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಕೈ ಜೋಡಿಸಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ.

    ಇದೇ ಪ್ರಥಮ ಬಾರಿಗೆ ಶಿವಮೊಗ್ಗದಲ್ಲಿ ಈ ಒಲಿಂಪಿಕ್ ಕ್ರೀಡಾಕೂಟ ಆಯೋಜಿಸಲಾಗಿದ್ದು ಈ ಕ್ರೀಡಾಕೂಟದಲ್ಲಿ, ಒಟ್ಟು 25 ವಿವಿಧ ಕ್ರೀಡಾಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಸುಮಾರು 4 ಸಾವಿರ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು, ಶಿವಮೊಗ್ಗ ಸೇರಿದಂತೆ ತಾಲೂಕು ಕೇಂದ್ರಗಳಲ್ಲಿ ಕೆಲವು ಸ್ಪರ್ಧೆಗಳನ್ನು ಆಯೋಜಿಸಲು ಕೂಡ ಉದ್ದೇಶಿಸಲಾಗಿದೆ.

    ಈ ಒಲಿಂಪಿಕ್ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಸ್ವಿಮ್ಮಿಂಗ್, ರೆಸ್ಲಿಂಗ್, ಆರ್ಚರಿ, ಫೆನ್ಸಿಂಗ್, ಸೈಕ್ಲಿಂಗ್, ಜೂಡೋ, ಹಾಕಿ, ಬಾಲ್ ಬ್ಯಾಡ್ಮಿಂಟನ್, ನೆಟ್ಬಾಲ್ ಬ್ಯಾಡ್ಮಿಂಟನ್ ಸೇರಿದಂತೆ 25 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ನಗರದ ನೆಹರು ಕ್ರೀಡಾಂಗಣ, ಒಳಾಂಗಣ ಕ್ರೀಡಾಂಗಣ, ಕ್ರೀಡಾ ಸಂಕೀರ್ಣ, ಸೇರಿದಂತೆ ವಿವಿಧ ಕಾಲೇಜುಗಳ ಕ್ರೀಡಾಂಗಣಗಳಲ್ಲಿ ಹಲವು ಸ್ಪರ್ಧೆಗಳನ್ನ ಆಯೋಜಿಸಲು ತೀರ್ಮಾನಿಸಲಾಗಿದೆ.

  • ದೇಶಕ್ಕೆ ಹಲವು ಬಾರಿ ಸ್ವರ್ಣ ಪದಕ ಕೊಟ್ಟ ಯುವತಿ ಮೇಲೆ ಅತ್ಯಾಚಾರ- ವೈದ್ಯನಿಂದ ವಂಚನೆ

    ದೇಶಕ್ಕೆ ಹಲವು ಬಾರಿ ಸ್ವರ್ಣ ಪದಕ ಕೊಟ್ಟ ಯುವತಿ ಮೇಲೆ ಅತ್ಯಾಚಾರ- ವೈದ್ಯನಿಂದ ವಂಚನೆ

    ಶಿವಮೊಗ್ಗ: ಜಲಕ್ರೀಡೆಯಲ್ಲಿ ದೇಶಕ್ಕೆ ಹಲವು ಬಾರಿ ಸ್ವರ್ಣ ಪದಕ ತಂದಿರುವ ಕೊಲ್ಲಾಪುರದ ಯುವತಿಗೆ ಕರ್ನಾಟಕದ ವೈದ್ಯನಿಂದ ವಂಚನೆ ಆಗಿದೆ ಎಂಬ ಆರೋಪವೊಂದು ಕೇಳಿಬರುತ್ತಿದೆ.

    ವೈದ್ಯ ಯುವತಿಗೆ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಹಾಗೂ ಮೋಸ ಮಾಡಿದ್ದಾನೆ ಎಂದು ಕ್ರೀಡಾಪಟು ಕೊಲ್ಲಾಪುರ ಕರವೀರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಬೆಂಗಳೂರಿನ ಸೇಂಟ್ಸ್ ಜಾನ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಡಾ. ಆಕಾಶ್ ಅವಟಿ ಅತ್ಯಾಚಾರ ಹಾಗೂ ವಂಚನೆ ಆರೋಪ ಎದುರಿಸುತ್ತಿರುವ ವೈದ್ಯ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಇರುವ ಯುವತಿ ಮನೆಗೆ ಬ್ರೋಕರ್ ಬಂದು ಮದುವೆ ಮಾತುಕತೆ ನಡೆಸಿ ಪರಿಚಯ ಮಾಡಿಕೊಂಡಿದ್ದನು. ಎರಡು ವರ್ಷಗಳ ಕಾಲ ಆಕೆಯನ್ನು ಬಳಸಿಕೊಂಡು ಇತ್ತೀಚೆಗೆ ನಾಪತ್ತೆ ಆಗಿದ್ದಾನೆ. ನಂತರ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

    ಪೊಲೀಸರು ದೂರು ದಾಖಲಿಸಿಕೊಂಡು ಆತನನ್ನು ಹುಡುಕುತ್ತಿದ್ದರು. ಇದೇ ಸಮಯದಲ್ಲಿ ಶಿವಮೊಗ್ಗದ ಯುವತಿಯೊಂದಿಗೆ ವೈದ್ಯ ಮದುವೆ ನಿಶ್ಚಯ ಮಾಡಿಕೊಂಡಿದ್ದನು. ಗುರುವಾರ ಶಿವಮೊಗ್ಗದಲ್ಲಿ ಮದುವೆ ಕೂಡ ಆಗಬೇಕಿತ್ತು. ಅಷ್ಟರಲ್ಲಿ ಕ್ರೀಡಾಪಟು ಯುವತಿಗೆ ಈ ವಿಷಯ ತಿಳಿದಿದೆ. ಮಾಹಿತಿ ತಿಳಿದ ಯುವತಿ ಮಹಾರಾಷ್ಟ್ರ ಪೊಲೀಸರ ಸಮೇತ ಶಿವಮೊಗ್ಗದ ಮದುವೆ ಮನೆಗೆ ಬಂದಿದ್ದಾರೆ. ಈ ವಿಷಯ ತಿಳಿದ ವರ ಮದುವೆಗೆ ಬರದೆ ಪರಾರಿಯಾಗಿದ್ದಾನೆ. ಈ ಬಗ್ಗೆ ತುಂಗಾ ನಗರ ಠಾಣೆಯಲ್ಲೂ ಈ ಕ್ರೀಡಾಪಟು ದೂರು ದಾಖಲಿಸಿದ್ದಾರೆ.

    ಮೊದಲ ದೂರು ದಾಖಲಿಸಿಕೊಂಡಿದ್ದ ಮಹಾರಾಷ್ಟ್ರ ಪೊಲೀಸರು ವೈದ್ಯನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಆತ ಬೆಂಗಳೂರು, ಕಲ್ಬುರ್ಗಿ, ಬಾಂಬೆ ಅಲ್ಲಿಂದಿಲ್ಲಿಗೆ-ಇಲ್ಲಿಂದ ಅಲ್ಲಿಗೆ ಓಡಿ ನಾಪತ್ತೆ ಆಗುತ್ತಿದ್ದಾನೆ ಎಂದು ಯುವತಿ ದೂರಿದ್ದಾರೆ.