Tag: Athletic Championship

  • ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಬೆಳ್ಳಿ ಗೆದ್ದ ಪ್ರಿಯಾ ಮೋಹನ್‍ಗೆ 5 ಲಕ್ಷ ನಗದು ಪುರಸ್ಕಾರ: ನಾರಾಯಣಗೌಡ

    ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಬೆಳ್ಳಿ ಗೆದ್ದ ಪ್ರಿಯಾ ಮೋಹನ್‍ಗೆ 5 ಲಕ್ಷ ನಗದು ಪುರಸ್ಕಾರ: ನಾರಾಯಣಗೌಡ

    ಬೆಂಗಳೂರು: ಕೊಲಂಬಿಯಾದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ U-20 ಬೆಳ್ಳಿ ಗೆದ್ದ ಕರ್ನಾಟಕದ ಪ್ರಿಯಾ ಮೋಹನ್ ಒಳಗೊಂಡ ಭಾರತ ರಿಲೇ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.

    ಕರ್ನಾಟಕದ ಪ್ರಿಯಾ ಮೋಹನ್, ಭರತ್ ಶ್ರೀಧರ್, ರೂಪಾಲ್ ಚೌಧರಿ ಮತ್ತು ಕಪಿಲ್ ಅವರನ್ನೊಳಗೊಂಡ ಮಿಕ್ಸಡ್ ರಿಲೇ ತಂಡ ಉತ್ತಮ ಪ್ರದರ್ಶನ ತೋರಿಸಿದ್ದು, ಕೂದಲೆಳೆ ಅಂತದರಲ್ಲಿ ಚಿನ್ನದ ಪದಕ ಕೈ ತಪ್ಪಿದೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ವಿಭೂತಿ ಹಚ್ಚಿ ಮುರುಘಾಶ್ರೀಗಳಿಂದ ಲಿಂಗಧಾರಣೆ

    ಕಳೆದ ವರ್ಷ ಕಂಚಿನ ಪದಕದ ಸಾಧನೆ ಮಾಡಿದ್ದ ಭಾರತದ ರಿಲೇ ತಂಡ ಈ ಬಾರಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದೆ. ಸ್ವಲ್ಪದರಲ್ಲೆ ಚಿನ್ನದ ಪದಕ ಕೈ ತಪ್ಪಿದ್ದು, ಮುಂದಿನ ಸಲ ಚಿನ್ನದ ಪದಕ ಗೆಲ್ಲುವ ವಿಶ್ವಾಸವಿದ್ದು, ಅತ್ಯುತ್ತಮ ಸಾಧನೆ ಮಾಡಿರುವ ರಿಲೇ ತಂಡಕ್ಕೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.

    ಭಾರತ ತಂಡವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಪ್ರಿಯಾ ಮೋಹನ್ ಅವರಿಗೆ 5 ಲಕ್ಷ ನಗದು ಪುರಸ್ಕಾರ ನೀಡುವುದಾಗಿ ಸಚಿವ ಡಾ.ನಾರಾಯಣಗೌಡ ಘೋಷಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತುಮಕೂರಿನ ಕೀರ್ತಿ ಹೆಚ್ಚಿಸಿದ ಪ್ರೊ.ಶ್ರೀನಿವಾಸ್

    ತುಮಕೂರಿನ ಕೀರ್ತಿ ಹೆಚ್ಚಿಸಿದ ಪ್ರೊ.ಶ್ರೀನಿವಾಸ್

    ತುಮಕೂರು: ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ನಾಲ್ವರ ತಂಡ ಎರಡು ಸ್ಪರ್ಧೆಗಳಲ್ಲಿ ಬೆಳ್ಳಿ ಪದಕ ಮತ್ತು ವ್ಯಕ್ತಿಗತವಾಗಿ ಕಂಚಿನ ಪದಕ ಪಡೆದು ಅಂತರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ.

    ಕೇರಳದ ಕೋಝಿಕೋಡ್‍ನಲ್ಲಿ ಜನವರಿ 10 ರಿಂದ 12ರವರೆಗೆ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ನಡೆದಿದೆ. ಇದರಲ್ಲಿ ಕರ್ನಾಟಕದ ತುಮಕೂರು ಜಿಲ್ಲೆಯಿಂದ ಬಿ.ಶ್ರೀನಿವಾಸ್ (ತುಮಕೂರು), ಜೋಷಿ, ಪದ್ಮನಾಭ, ರಾಜಮೋನಿ (ದಕ್ಷಿಣ ಕನ್ನಡ) ಅವರು 4×100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾಗವಹಿಸಿ ಬೆಳ್ಳಿ ಪದಕ ಪಡೆದಿದ್ದಾರೆ.

    ವಿಶೇಷವಾಗಿ 400 ಮೀಟರ್ ಅಡೆತಡೆ ಓಟ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ತುಮಕೂರಿನ ಬಿ.ಶ್ರೀನಿವಾಸ್ ಅವರು ಕಂಚಿನ ಪದಕವನ್ನು ಪಡೆದು ರಾಜ್ಯ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಶ್ರೀನಿವಾಸ್ ಅವರು ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆಯವರಾಗಿದ್ದು, ತಿಪಟೂರಿನ ಪಲ್ಲಾಗಟ್ಟಿ ಅಡವಪ್ಪ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

    ಇವರೆಲ್ಲರೂ ಮಾರ್ಚ್ ತಿಂಗಳಲ್ಲಿ ಥೈಲ್ಯಾಂಡ್‍ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ.