Tag: Atishi

  • ದೆಹಲಿ ವಿಧಾನಸಭಾ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ

    ದೆಹಲಿ ವಿಧಾನಸಭಾ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ

    – ಅಧಿವೇಶನದಲ್ಲಿ ಮಹಿಳಾ ಸಿಎಂ vs ಮಹಿಳಾ ವಿಪಕ್ಷ ನಾಯಕಿ

    ನವದೆಹಲಿ: ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯಾಗಿ ದೆಹಲಿ ಮಾಜಿ ಸಿಎಂ ಅತಿಶಿ ಅವರನ್ನು ಆಯ್ಕೆ ಮಾಡಲಾಗಿದೆ.

    ಈ ಹುದ್ದೆಗೆ ಮಹಿಳೆಯೊಬ್ಬರು ಆಯ್ಕೆಯಾಗಿರುವುದು ಇದೇ ಮೊದಲು. ಅಷ್ಟೇ ಅಲ್ಲ, ಮುಂಬರುವ ವಿಧಾನಸಭಾ ಅಧಿವೇಶನದ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ವಿರೋಧ ಪಕ್ಷದ ನಾಯಕಿಯೊಬ್ಬರು ದೆಹಲಿ ಮುಖ್ಯಮಂತ್ರಿಯನ್ನು ಎದುರಿಸಲಿದ್ದಾರೆ.

    ಭಾನುವಾರ ನಡೆದ ಎಎಪಿ ಶಾಸಕಾಂಗ ಸಭೆಯಲ್ಲಿ ಅತಿಶಿ ಅವರನ್ನು ವಿರೋಧ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಯಿತು. ಶಾಸಕ ಸಂಜೀವ್ ಝಾ ಅವರು ಪ್ರಮುಖ ಹುದ್ದೆಗೆ ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದರು.

    ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಶಾಸಕಾಂಗ ಪಕ್ಷಕ್ಕೆ ಧನ್ಯವಾದಗಳು. ಬಲವಾದ ವಿರೋಧ ಪಕ್ಷವು ಜನರ ಪರವಾಗಿ ಧ್ವನಿಯನ್ನು ಎತ್ತುತ್ತದೆ. ಬಿಜೆಪಿ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುವಂತೆ ಆಮ್ ಆದ್ಮಿ ಪಕ್ಷ ನೋಡಿಕೊಳ್ಳುತ್ತದೆ ಎಂದು ಅತಿಶಿ ತಿಳಿಸಿದ್ದಾರೆ.

    ದೆಹಲಿ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ಮೂರು ದಿನಗಳ ಈ ಅಧಿವೇಶನದಲ್ಲಿ ಹಿಂದಿನ ಎಎಪಿ ಸರ್ಕಾರದ ಕಾರ್ಯಕ್ಷಮತೆಯ ವಿರುದ್ಧ ಬಾಕಿ ಇರುವ ಸಿಎಜಿ ವರದಿಗಳನ್ನು ಸದನದಲ್ಲಿ ಮಂಡಿಸಲಾಗುವುದು ಎಂದು ಆಡಳಿತಾರೂಢ ಬಿಜೆಪಿ ಸರ್ಕಾರ ಹೇಳಿದೆ.

  • ಮೋದಿ ಜಿ ಭರವಸೆ ನಂಬಿ ಮಹಿಳೆಯರು ಮೋಸ ಹೋಗಿದ್ದಾರೆ – ದೆಹಲಿ ಸಿಎಂಗೆ ಅತಿಶಿ ಪತ್ರ

    ಮೋದಿ ಜಿ ಭರವಸೆ ನಂಬಿ ಮಹಿಳೆಯರು ಮೋಸ ಹೋಗಿದ್ದಾರೆ – ದೆಹಲಿ ಸಿಎಂಗೆ ಅತಿಶಿ ಪತ್ರ

    – ಮಹಿಳೆಯರಿಗೆ 2,500 ರೂ. ಗ್ಯಾರಂಟಿ ಸ್ಕ್ರೀಂ ಕುರಿತು ಚರ್ಚಿಸಲು ಸಮಯ ಕೇಳಿದ ಮಾಜಿ ಸಿಎಂ

    ನವದೆಹಲಿ: ಮಹಿಳೆಯರಿಗೆ ತಿಂಗಳಿಗೆ 2,500 ರೂ. ಹಣ ನೀಡುವ ಗ್ಯಾರಂಟಿ ಯೋಜನೆ ಕುರಿತು ಚರ್ಚಿಸಲು ಭಾನುವಾರ ಸಮಯ ನೀಡುವಂತೆ ಕೋರಿ ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ಮಾಜಿ ಸಿಎಂ ಅತಿಶಿ ಪತ್ರ ಬರೆದಿದ್ದಾರೆ.

    ಅಲ್ಲದೇ ಬಿಜೆಪಿ ನೇತೃತ್ವದ ಸರ್ಕಾರ ತನ್ನ ಮೊದಲ ಕ್ಯಾಬಿನೆಟ್‌ ಸಭೆಯಲ್ಲಿ ಮಹಿಳೆಯರಿಗೆ ನೀಡಿದ್ದ ಆರ್ಥಿಕ ನೆರವು ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಪತ್ರದಲ್ಲಿ ಏನಿದೆ?
    ಮೊದಲಿಗೆ ದೆಹಲಿಯ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಿಮಗೆ ಹೃತ್ಪೂರ್ವಕ ಅಭಿನಂದನೆಗಳು. ಬಿಜೆಪಿಯ ನಾಯಕ ಹಾಗೂ ದೇಶದ ಪ್ರಧಾನಿಯೂ ಆಗಿರುವ ನರೇಂದ್ರ ಮೋದಿ ಜಿ ಅವರು 2025ರ ಜ.31ರಂದು ದೆಹಲಿಯ ತಾಯಂದಿರು ಹಾಗೂ ಸಹೋದರಿಯರಿಗೆ ಭರವಸೆ ನೀಡಿದ್ದರು. ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಮೊದಲ ಕ್ಯಾಬಿನೆಟ್‌ ಸಭೆಯಲ್ಲಿ ತಿಂಗಳಿಗೆ 2,500 ರೂ. ಆರ್ಥಿಕ ನೆರವು ಯೋಜನೆಯನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದ್ದರು. ಅಲ್ಲದೇ ಇದು ಮೋದಿ ಜಿ ಭರವಸೆ ಎಂದು ಒತ್ತಿ ಹೇಳಿದ್ದರು.

    ದೆಹಲಿ ಸರ್ಕಾರ ಫೆ.20ರಂದು ತನ್ನ ಮೊದಲ ಕ್ಯಾಬಿನೆಟ್‌ ಸಭೆ ನಡೆಸಿತು. ಆದ್ರೆ ಯೋಜನೆ ಬಗ್ಗೆ ಯಾವುದೇ ಪ್ರಸ್ತಾಪ ಇರಲಿಲ್ಲ. ದೆಹಲಿಯ ತಾಯಂದಿರು ಸಹೋದರಿಯರು ಮೋದಿ ಜೀ ಅವರ ಭರವಸೆ ನಂಬಿ ಮೋಸ ಹೋಗಿದ್ದಾರೆ. ಈ ಗ್ಯಾರಂಟಿ ಯೋಜನೆ ಸಂಬಂಧ ಚರ್ಚಿಸಲು ಎಎಪಿ ನಿಯೋಗ ಭಾನುವಾರ ನಿಮ್ಮನ್ನು ಭೇಟಿ ಮಾಡಲು ಇಚ್ಛಿಸುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಇದೇ ಫೆ.20ರಂದು ದೆಹಲಿಯ ನೂತನ ಸಿಎಂ ಆಗಿ ರೇಖಾ ಗುಪ್ತ ಪ್ರಮಾಣ ವಚನ ಸ್ವೀಕರಿಸಿದ್ದರು. ಜೊತೆಗೆ ಆರು ಇತರ ಶಾಸಕರು ಅವರ ಸಂಪುಟಕ್ಕೆ ಸೇರ್ಪಡೆಗೊಂಡರು. ಅದೇ ದಿನ ತನ್ನ ಮೊದಲ ಕ್ಯಾಬಿನೆಟ್ ಸಭೆಯಲ್ಲಿ, ದೆಹಲಿ ಸರ್ಕಾರವು ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯ ಅನುಷ್ಠಾನಕ್ಕೆ ಒಪ್ಪಿಗೆ ಸೂಚಿಸಿತ್ತು. ಅಲ್ಲದೇ ಮಹಿಳಾ ಸಮೃದ್ಧಿ ಯೋಜನೆ ಕುರಿತು ಚರ್ಚಿಸಿತು ಮತ್ತು ಬಾಕಿ ಇರುವ 14 ಸಿಎಜಿ ವರದಿಗಳನ್ನು ಮಂಡಿಸಲು ನಿರ್ಧರಿಸಿತು.

  • ಆಪ್‌ ಸೋಲಿನ ಬೆನ್ನಲ್ಲೇ ದೆಹಲಿ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ

    ಆಪ್‌ ಸೋಲಿನ ಬೆನ್ನಲ್ಲೇ ದೆಹಲಿ ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ

    ನವದೆಹಲಿ: ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿದ್ದ ಆಮ್‌ ಆದ್ಮಿ ಪಕ್ಷ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ (Delhi Election) ಸೋಲು ಕಂಡ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಅತಿಶಿ (Atishi) ರಾಜೀನಾಮೆ ಸಲ್ಲಿಸಿದ್ದಾರೆ.

    ಕೇಂದ್ರ ಚುನಾವಣಾ ಆಯೋಗವು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕೃತ ಜಯ ಘೋಷಿಸಿದ ಒಂದು ದಿನದ ನಂತರ ಅಶಿತಿ, ರಾಜ್ಯಪಾಲ ವಿ.ಕೆ ಸಕ್ಸೇನಾ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮೋದಿ ಅಮೆರಿಕ ಪ್ರವಾಸದ ಬಳಿಕವೇ ದೆಹಲಿಯಲ್ಲಿ ಸರ್ಕಾರ ರಚನೆ?

    ಈ ಬಾರಿ ಚುನಾವಣೆಯಲ್ಲಿ ಮಾಜಿ ಸಿಎಂ ಕೇಜ್ರಿವಾಲ್‌ ಸೇರಿದಂತೆ ಘಟಾನುಘಟಿ ನಾಯಕರೇ ಸೋತು ಸುಣ್ಣವಾದ ಹೊರತಾಗಿಯೂ ಅತಿಶಿ ತನ್ನ ಕಲ್ಕಾಜಿ ಕ್ಷೇತ್ರವನ್ನು ಉಳಿಸಿಕೊಂಡರು. ಆರಂಭದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್‌ ಬಿಧೂರಿ ವಿರುದ್ಧ ತೀವ್ರ ಹಿನ್ನಡೆ ಅನುಭವಿಸಿದ್ದ ಅತಿಶಿ 8-9ನೇ ಸುತ್ತಿನ ಬಳಿಕ‌ ಸತತವಾಗಿ ಮುನ್ನಡೆ ಕಾಯ್ದುಕೊಂಡು ಗೆಲುವು ಸಾಧಿಸಿದ್ರು.

    ಕಲ್ಕಾಜಿ ಕ್ಷೇತ್ರದಲ್ಲಿ ಆಪ್‌ ಅಭ್ಯರ್ಥಿ ಅತಿಶಿ 52,154 ಮತಗಳನ್ನು ಪಡೆದು 3,521 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರೆ, ಬಿಧೂರಿ 48,633 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಇದನ್ನೂ ಓದಿ: ಮರಳು ತುಂಬಿದ್ದ ಲಾರಿ ಪಲ್ಟಿ – ರಸ್ತೆಬದಿ ಕೆಲಸ ಮಾಡ್ತಿದ್ದ ಮೂವರು ಮಹಿಳೆಯರು, ಮಗು ದುರ್ಮರಣ

    ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ (Delhi Election Results) ಶನಿವಾರ ಪ್ರಕಟವಾಗಿದ್ದು, 27 ವರ್ಷಗಳ ಬಳಿಕ ಬಿಜೆಪಿ (BJP) ಅಧಿಕಾರಕ್ಕೇರಿದೆ. ಆದ್ರೆ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿದ್ದ ಆಪ್‌ ಸೋಲು ಕಂಡಿದ್ದರೆ, ʻಕೈʼ ಪಾಳಯ ಸತತ 3ನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ. ಇದೇ ಫೆ.12, 13ರಂದು ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಬಳಿಕ ಸರ್ಕಾರ ರಚನೆ ಮಾಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

  • ದೆಹಲಿ ಸಿಎಂ ಅತಿಶಿಗೆ ಗೆಲುವು – ಕಲ್ಕಾಜಿ ಕ್ಷೇತ್ರ ಉಳಿಸಿಕೊಂಡ ಆಪ್ ನಾಯಕಿ

    ದೆಹಲಿ ಸಿಎಂ ಅತಿಶಿಗೆ ಗೆಲುವು – ಕಲ್ಕಾಜಿ ಕ್ಷೇತ್ರ ಉಳಿಸಿಕೊಂಡ ಆಪ್ ನಾಯಕಿ

    ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಲ್ಕಾಜಿ ಕ್ಷೇತ್ರದಿಂದ ಸಿಎಂ ಅತಿಶಿ ಗೆಲುವಿನ ನಗೆ ಬೀರಿದ್ದಾರೆ.

    ಕಲ್ಕಾಜಿ ಕ್ಷೇತ್ರವು ಯಾರ ಪಾಲಾಗಲಿದೆ ಎಂಬುದು ಕೊನೆ ವರೆಗಿನ ಕುತೂಹಲವಾಗಿತ್ತು. ಮತ ಎಣಿಕೆಯಲ್ಲಿ ಬಿಜೆಪಿ ಮತ್ತು ಎಎಪಿ ನಡುವೆ ತೀವ್ರ ಪೈಪೋಟಿ ಇತ್ತು. ಆರಂಭದಲ್ಲಿ ದೆಹಲಿ ಸಿಎಂ ಅತಿಶಿ ಹಿನ್ನಡೆ ಅನುಭವಿಸಿದ್ದರು.

    2020ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಅತಿಶಿ ಗೆದ್ದಿದ್ದರು. ಈ ಬಾರಿ ಬಿಜೆಪಿಯ ರಮೇಶ್‌ ಬಿಧುರಿ ಹಾಗೂ ಕಾಂಗ್ರೆಸ್‌ನ ಅಲ್ಕಾ ಲಂಬಾ ವಿರುದ್ಧ ಕಣಕ್ಕಿಳಿದಿದ್ದರು. ಬಿಜೆಪಿ ಅಭ್ಯರ್ಥಿ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಿದ್ದರು.

    ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಯ ಭರ್ಜರಿ ಗೆಲುವು ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಉನ್ನತ ನಾಯಕರ ಆಘಾತಕಾರಿ ಸೋಲುಗಳ ಹೊರತಾಗಿಯೂ ಮುಖ್ಯಮಂತ್ರಿ ಅತಿಶಿ ದಕ್ಷಿಣ ದೆಹಲಿಯ ಕಲ್ಕಾಜಿ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

    ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಎಎಪಿ ನಾಯಕರಾದ ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ ಜೈಲು ಸೇರಿದಾಗ, ಸರ್ಕಾರವನ್ನು ಅತಿಶಿ ಮುನ್ನಡೆಸಿದ್ದರು. ಕೇಜ್ರಿವಾಲ್‌ ಜೈಲಿಂದ ಹೊರಬಂದಾಗ, ನಾಯಕಿ ಅತಿಶಿ ಅವರು ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

  • ದೆಹಲಿ ಸಿಎಂ ಅತಿಶಿಗೆ ರಿಲೀಫ್ – ಬಿಜೆಪಿಯ ಮಾನನಷ್ಟ ಕೇಸ್ ವಜಾಗೊಳಿಸಿದ ಕೋರ್ಟ್

    ದೆಹಲಿ ಸಿಎಂ ಅತಿಶಿಗೆ ರಿಲೀಫ್ – ಬಿಜೆಪಿಯ ಮಾನನಷ್ಟ ಕೇಸ್ ವಜಾಗೊಳಿಸಿದ ಕೋರ್ಟ್

    ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಮುಖ್ಯಮಂತ್ರಿ ಅತಿಶಿ ಮರ್ಲೇನಾ (Atishi) ಅವರಿಗೆ ಜಾರಿ ಮಾಡಲಾದ ಸಮನ್ಸ್ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ರೌಸ್ ಅವೆನ್ಯೂ ನ್ಯಾಯಾಲಯ ಮಂಗಳವಾರ ಪುರಸ್ಕರಿಸಿದೆ.

    ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಹೊರಡಿಸಿದ ಸಮನ್ಸ್ ಆದೇಶವನ್ನು ರದ್ದುಗೊಳಿಸಲಾಗಿದೆ ಎಂದು ನ್ಯಾಯಾಧೀಶ ವಿಶಾಲ್ ಗೋಗ್ನೆ ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಖರ್ಗೆ ಕೂಡ ಗಂಗಾ ಸ್ನಾನ ಮಾಡಬೇಕಾಗುತ್ತೆ – ಯೋಗಿ ಆದಿತ್ಯನಾಥ್‌

    ಎಎಪಿ ನಾಯಕರ ಹೇಳಿಕೆಯು ಸಂಘಟನೆಯ ಯಾವುದೇ ಒಬ್ಬ ಸದಸ್ಯರ ವಿರುದ್ಧ ಇಲ್ಲ. ಒಟ್ಟಾರೆಯಾಗಿ ವಿರೋಧ ಪಕ್ಷದ ವಿರುದ್ಧವಾಗಿದೆ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

    ರಾಜಕೀಯ ಮಾನನಷ್ಟ ಮೊಕದ್ದಮೆಯಲ್ಲಿ ಸಾಕ್ಷ್ಯಾಧಾರದ ಮಿತಿ ಯಾವಾಗಲೂ ಹೆಚ್ಚಾಗಿರುತ್ತದೆ. ಏಕೆಂದರೆ ಅದು ವಾಕ್ ಸ್ವಾತಂತ್ರ್ಯವನ್ನು ಒಳಗೊಂಡಿರುತ್ತದೆ. ಆದ್ದರಿಂದ, ಸಮನ್ಸ್‌ನಲ್ಲಿ ಗಣನೀಯ ದೋಷ ಮತ್ತು ದೌರ್ಬಲ್ಯ ಇರುವುದರಿಂದ ಅದನ್ನು ರದ್ದುಗೊಳಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ. ಇದನ್ನೂ ಓದಿ: Maha Kumbhamela | ಜ.29 ರಂದು 10 ಕೋಟಿ ಜನರಿಂದ ಅಮೃತ ಸ್ನಾನ – ಭಕ್ತರ ಅನುಕೂಲಕ್ಕಾಗಿ 60 ವಿಶೇಷ ರೈಲುಗಳ ಓಡಾಟ

    ಕಳೆದ ವರ್ಷ ಏಪ್ರಿಲ್‌ನಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂಪುಟದಲ್ಲಿ ಸಚಿವರಾಗಿದ್ದಾಗ ಅತಿಶಿ, ‘ಬಿಜೆಪಿಗೆ ಸಂಬಂಧಿಸಿದ ನಾಯಕರು ನನ್ನ ಮತ್ತು ಇತರ ಎಎಪಿ ನಾಯಕರನ್ನು ಸಂಪರ್ಕಿಸಿ, ಪಕ್ಷಕ್ಕೆ ಸೇರಬೇಕೆಂದು ಒತ್ತಾಯಿಸಿದ್ದರು. ಇಲ್ಲದಿದ್ದರೆ ಒಂದು ತಿಂಗಳೊಳಗೆ ಜಾರಿ ನಿರ್ದೇಶನಾಲಯದಿಂದ ಬಂಧನ ಎದುರಿಸಬೇಕಾಗುತ್ತದೆ ಎಂದಿದ್ದರೆಂದು ಆರೋಪಿಸಿದ್ದರು.

  • ಚುನಾವಣಾ ಹೊತ್ತಲ್ಲಿ ತನಿಖಾ ಸಂಸ್ಥೆಗಳು ಸಿಎಂ ಅತಿಶಿಯನ್ನು ಬಂಧಿಸಬಹುದು: ಕೇಜ್ರಿವಾಲ್ ಆರೋಪ

    ಚುನಾವಣಾ ಹೊತ್ತಲ್ಲಿ ತನಿಖಾ ಸಂಸ್ಥೆಗಳು ಸಿಎಂ ಅತಿಶಿಯನ್ನು ಬಂಧಿಸಬಹುದು: ಕೇಜ್ರಿವಾಲ್ ಆರೋಪ

    ನವದೆಹಲಿ: ಸಂಜೀವಿನಿ, ಮಹಿಳಾ ಸಮ್ಮಾನ್‌ನಂತಹ ಜನಪರ ಯೋಜನೆಗಳನ್ನು ನಮ್ಮ ಸರ್ಕಾರ ಜಾರಿ ಮಾಡುತ್ತಿದ್ದು, ಇದನ್ನು ಸಹಿಸಲಾಗದ ಜನರು ಮುಖ್ಯಮಂತ್ರಿ ಅತಿಶಿ (Atishi) ಅವರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಲು ಸಂಚು ರೂಪಿಸುತ್ತಿದ್ದಾರೆ ಎಂದು ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಆರೋಪಿಸಿದ್ದಾರೆ.

    ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲವು ದಿನಗಳ ಹಿಂದೆ ಇಡಿ, ಐಟಿ ಮತ್ತು ಸಿಬಿಐ ಅಧಿಕಾರಿಗಳ ಸಭೆ ನಡೆದಿದೆ. ಮೇಲಿನಿಂದ ಸಿಎಂ ಅತಿಶಿ ಬಂಧಿಸಲು ಅವರಿಗೆ ಆದೇಶ ಬಂದಿದೆ ಎಂದು ನನ್ನ ಮೂಲಗಳಿಂದ ತಿಳಿದುಬಂದಿದೆ. ನಾನು ಸಂಪೂರ್ಣ ಜವಾಬ್ದಾರಿಯಿಂದ ಈ ಗಂಭೀರ ಆರೋಪ ಮಾಡುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಗೂಂಡಗಳಿಂದ ಗಲಾಟೆ ಮಾಡಿಸಿ ನನ್ನ ಮೇಲೆ ಆರೋಪ: ಮುನಿರತ್ನಗೆ ಡಿಕೆಸು ತಿರುಗೇಟು

    ಕಳೆದ ಹತ್ತು ವರ್ಷಗಳಲ್ಲಿ ದೆಹಲಿಯಲ್ಲಿ ಬಿಜೆಪಿಗೆ ಯಾವುದೇ ಕೆಲಸವಿಲ್ಲ. ಅವರು ಕೇಜ್ರಿವಾಲ್ ಅವರನ್ನು ಟೀಕಿಸುವ ಮತ್ತು ನಿಂದಿಸುವ ಮೂಲಕ ಮತ ಕೇಳುತ್ತಿದ್ದಾರೆ. ಆದರೆ ಆಮ್ ಆದ್ಮಿ ಪಕ್ಷವು ತಾನು ಮಾಡಿದ ಕೆಲಸದ ಆಧಾರದ ಮೇಲೆ ಮತ ಕೇಳುತ್ತಿದೆ. ನಾವು ಮಹಿಳಾ ಸಮ್ಮಾನ್ ಯೋಜನೆಯನ್ನು ಘೋಷಿಸಿದ್ದೇವೆ ಮತ್ತು ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ಚಿಕಿತ್ಸೆಯ ಯೋಜನೆಯನ್ನು ಘೋಷಿಸಿದ್ದೇವೆ. ಈ ಯೋಜನೆಗಳ ನೋಂದಣಿಯಿಂದ ಬಿಜೆಪಿಗೆ ತೊಂದರೆಯಾಗಿದೆ ಎಂದರು. ಇದನ್ನೂ ಓದಿ: ವಾಜಪೇಯಿ ಜನ್ಮದಿನಕ್ಕೆ ಮೋದಿ ಗಿಫ್ಟ್ – ದೇಶದ ಮೊದಲ ನದಿ ಜೋಡಣೆ ಯೋಜನೆಗೆ ಶಿಲಾನ್ಯಾಸ

    ದೆಹಲಿ ಮುಖ್ಯಮಂತ್ರಿ ಅತಿಶಿ ಮಾತನಾಡಿ, ದೆಹಲಿಯಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣವನ್ನು ತಡೆಯಲು ನನ್ನ ವಿರುದ್ಧ ನಕಲಿ ಪ್ರಕರಣ ದಾಖಲಿಸುವ ಪ್ರಯತ್ನ ಮಾಡಲಾಗುತ್ತಿದೆ. ನಾವು ಇಲ್ಲಿಯವರೆಗೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ ಹಾಗಾಗಿ ಅವರ ಏಜೆನ್ಸಿಗಳು ನನ್ನನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದರೆ, ಅಂತಿಮವಾಗಿ ಸತ್ಯಕ್ಕೆ ಜಯ ಸಿಗುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕಝಾಕಿಸ್ತಾನದಲ್ಲಿ ದುರಂತ – ಪ್ರಯಾಣಿಕ ವಿಮಾನ ಪತನ

    ಸುಳ್ಳು ಪ್ರಕರಣದ ನಂತರವೂ ನಮಗೆ ಜಾಮೀನು ಸಿಗುತ್ತದೆ ಎಂಬ ನ್ಯಾಯ ವ್ಯವಸ್ಥೆ ಮತ್ತು ಸಂವಿಧಾನದ ಮೇಲೆ ನನಗೆ ನಂಬಿಕೆ ಇದೆ. ದೆಹಲಿಯ ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಬಿಜೆಪಿಗೆ ದೆಹಲಿಯ ಜನ ಉತ್ತರ ನೀಡಲಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕುಸುಮಾರನ್ನು ಶಾಸಕಿಯನ್ನಾಗಿ ಮಾಡಲು ನನ್ನ ಕೊಲೆಗೆ ಸಂಚು, ಆಸೀಡ್‌ ದಾಳಿ : ಮುನಿರತ್ನ

  • ದೆಹಲಿಯಲ್ಲಿ ವಿಷವಾಗುತ್ತಿದೆ ಉಸಿರಾಡುವ ಗಾಳಿ – 1,500ರ ಗಡಿ ದಾಟಿದ AQI

    ದೆಹಲಿಯಲ್ಲಿ ವಿಷವಾಗುತ್ತಿದೆ ಉಸಿರಾಡುವ ಗಾಳಿ – 1,500ರ ಗಡಿ ದಾಟಿದ AQI

    – ವಿಮಾನಗಳು, ರೈಲು ಪ್ರಯಾಣದಲ್ಲಿ ಅಸ್ತವ್ಯಸ್ತ

    ನವದೆಹಲಿ: ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಹುಲ್ಲು ಸುಡುವಿಕೆಯಿಂದೆ ದೆಹಲಿಯಲ್ಲಿ ಉಂಟಾದ ವಾಯು ಮಾಲಿನ್ಯ (Delhi Air Pollution) ಅಪಾಯದ ಮಟ್ಟ ಮೀರಿದೆ. ಸತತ 6ನೇ ದಿನವೂ ವಾಯುಮಾಲಿನ್ಯ ಮುಂದುವರಿದಿದ್ದು ಉಸಿರಾಡುವ ಗಾಳಿ ವಿಷವಾಗುತ್ತಿದೆ. ಸೋಮವಾರ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ (AQI) 1,500ರ ಗಡಿ ದಾಟಿದೆ.

    ಸೋಮವಾರ ಬೆಳಗ್ಗೆ ದೆಹಲಿಯ ಮುಂಡ್ಕಾದಲ್ಲಿ ಎಕ್ಯೂಐ 1591 ಎಕ್ಯೂಐ, ದ್ವಾರಕ-8ನೇ ಸೆಕ್ಟಾರ್‌ನಲ್ಲಿ ಎಕ್ಯೂಐ 1,497 ಹಾಗೂ ರೋಹಿಣಿ ಸೆಕ್ಟಾರ್‌ನಲ್ಲಿ 1,427 ಎಕ್ಯೂಐ ದಾಖಲಾಗಿದೆ. ಗೋಚರತೆ ಪ್ರಮಾಣ ಇನ್ನಿಲ್ಲದಂತೆ ಕುಸಿದಿದೆ. ರಸ್ತೆ, ರೈಲು, ವೈಮಾನಿಕ ಸೇವೆಗಳಲ್ಲಿ ತೀವ್ರ ವ್ಯತ್ಯಯವಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮತ್ತೊಂದೆಡೆ ಹೆಚ್ಚಿದ ವಾಯು ಮಾಲಿನ್ಯದಿಂದ ದೆಹಲಿ ಜನರಲ್ಲಿ ಉಸಿರಾಟ ಸಮಸ್ಯೆ ತೀವ್ರವಾಗಿದೆ. ಇದನ್ನೂ ಓದಿ: ದೆಹಲಿ ಮಾಲಿನ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ – ರಾಜಕೀಯ ಬಿಟ್ಟು ಕ್ರಮ ತೆಗೆದುಕೊಳ್ಳಲಿ: ಅತಿಶಿ

    ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಿದೆ. ಅಪಾಯದ ಮಟ್ಟ ಮೀರಿದ ಮಾಲಿನ್ಯ ನಿಯಂತ್ರಣಕ್ಕೆ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್‌ನ 4ನೇ ಹಂತವನ್ನು ದೆಹಲಿ ಸರ್ಕಾರ ಜಾರಿ ಮಾಡಿದೆ. ಮಾಲಿನ್ಯ ವಿಚಾರವಾಗಿ ಆಳುವ ಸರ್ಕಾರವನ್ನು ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: `ಏಕ್ ಹೈ ತೊ ಸೇಫ್ ಹೈ’ ಪ್ರಧಾನಿ ಘೋಷಣೆಗೆ ಟೀಕೆ – ಮೋದಿ, ಅದಾನಿ ಫೋಟೋ ತೋರಿಸಿ ರಾಗಾ ವ್ಯಂಗ್ಯ

    ನಾವು ಹೇಳೋವರೆಗೂ ಜಿಆರ್‌ಎಪಿ-4 ನಿಯಮ ಸಡಿಲಿಸಬಾರದು. ಎಕ್ಯೂಐ 400ಕ್ಕಿಂತ ಕಡಿಮೆಯಾದ್ರೂ ಈ ನಿಯಮ ಸಡಿಲಿಸಬಾರದು ಎಂದು ಸೂಚಿಸಿದೆ. ಆದರೆ, ವಾಯುಮಾಲಿನ್ಯ ವಿಚಾರವಾಗಿ ರಾಜಕೀಯ ನಡೆದಿದೆ. ವಾಯು ಮಾಲಿನ್ಯ ತೀವ್ರ ಸ್ವರೂಪ ಪಡೆಯೋವರೆಗೂ ಕೇಂದ್ರ ಅಚೇತನವಾಗಿತ್ತು.

    ಯಾವುದೇ ಮುಂಜಾಗ್ರತೆ ವಹಿಸಲಿಲ್ಲ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಹುಲ್ಲು ಸುಡುತ್ತಿರುವುದೇ ದೆಹಲಿ ಮಾಲಿನ್ಯಕ್ಕೆ ಕಾರಣ ಎಂದು ಸಿಎಂ ಅತಿಶಿ ದೂರಿದ್ದಾರೆ. ಇದನ್ನೂ ಓದಿ: ಮಣಿಪುರ ಗಲಭೆ: ಅಮಿತ್ ಶಾ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ – 50 ಕೇಂದ್ರೀಯ ಭದ್ರತಾ ಪಡೆ ನಿಯೋಜನೆ

  • ದೆಹಲಿ ಮಾಲಿನ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ – ರಾಜಕೀಯ ಬಿಟ್ಟು ಕ್ರಮ ತೆಗೆದುಕೊಳ್ಳಲಿ: ಅತಿಶಿ

    ದೆಹಲಿ ಮಾಲಿನ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ – ರಾಜಕೀಯ ಬಿಟ್ಟು ಕ್ರಮ ತೆಗೆದುಕೊಳ್ಳಲಿ: ಅತಿಶಿ

    ನವದೆಹಲಿ: ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಹುಲ್ಲು ಸುಡುವಿಕೆ ವ್ಯಾಪಕವಾಗಿದೆ ಇದರ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಹೀಗಾಗಿ ದೆಹಲಿಯಲ್ಲಿ ವಾಯು ಮಾಲಿನ್ಯದ (Delhi Air Pollution) ಪ್ರಮಾಣ ತೀವ್ರವಾಗಿ ಏರುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅತಿಶಿ (Atishi) ಆರೋಪಿಸಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಲ್ಲು ಸುಡುವ ಬಿಕ್ಕಟ್ಟಿಗೆ ರಾಷ್ಟ್ರವ್ಯಾಪಿ ಪರಿಹಾರ ಕಂಡುಕೊಳ್ಳುವುದು ಕೇಂದ್ರ ಸರ್ಕಾರದ (Central Government) ಜವಾಬ್ದಾರಿಯಾಗಿದೆ. ಆದರೆ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಿಷ್ಕ್ರಿಯವಾಗಿದೆ. ಪಂಜಾಬ್‌ನಲ್ಲಿ ಹುಲ್ಲು ಸುಡುವುದು ನಿಯಂತ್ರಿಸಬಹುದಾದರೆ ಉಳಿದ ರಾಜ್ಯಗಳಲ್ಲಿ ಯಾಕೆ ಸಾಧ್ಯವಿಲ್ಲ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ವೇದಘೋಷಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ

    ಜನರು ಉಸಿರಾಡಲು ಕಷ್ಟಪಡುತ್ತಿದ್ದಾರೆ. ಕಳೆದ ರಾತ್ರಿ, ನನಗೆ ಹಲವಾರು ಕರೆಗಳು ಬಂದವು. ಕೆಲವರು ವಯಸ್ಸಾದ ಕುಟುಂಬ ಸದಸ್ಯರನ್ನು ಆಸ್ಪತ್ರೆಗಳಿಗೆ ಧಾವಿಸುತ್ತಿದ್ದಾರೆ, ಇತರರು ತಮ್ಮ ಮಕ್ಕಳಿಗೆ ಸ್ಟೀರಾಯ್ಡ್‌ಗಳನ್ನು ಹುಡುಕುತ್ತಿದ್ದಾರೆ. ಉತ್ತರ ಭಾರತವು ಇಂದು ಆರೋಗ್ಯ ತುರ್ತು ಪರಿಸ್ಥಿತಿ (Health Emergency) ಎದುರಿಸುತ್ತಿದೆ, ಪ್ರದೇಶದಾದ್ಯಂತ ನಗರಗಳು ‘ತೀವ್ರ’ ಮತ್ತು ‘ಅತ್ಯಂತ ಕಳಪೆ’ AQI ಮಟ್ಟವನ್ನು ದಾಖಲಿಸುತ್ತಿವೆ ಎಂದರು. ಇದನ್ನೂ ಓದಿ: ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಅಂದ್ರೆ ಅದು ಬಿಜೆಪಿಯವರು: ಈಶ್ವರ್ ಖಂಡ್ರೆ

    ಹುಲ್ಲು ಸುಡುವಿಕೆ ಉತ್ತರ ಪ್ರದೇಶದಲ್ಲಿ 60% ನಷ್ಟು ಹೆಚ್ಚಳವಾಗಿದೆ, ಆದರೆ ಮಧ್ಯಪ್ರದೇಶವು ಪ್ರಸ್ತುತ ಅತಿ ಹೆಚ್ಚು ಹುಲ್ಲು ಸುಡುತ್ತಿದೆ ಅಲ್ಲಿ ಪ್ರತಿದಿನ 700ಕ್ಕೂ ಹೆಚ್ಚು ಘಟನೆಗಳು ವರದಿಯಾಗುತ್ತವೆ. ಕಳೆದ 6-7 ವರ್ಷಗಳಿಂದ, ದೇಶಾದ್ಯಂತ ಹುಲ್ಲು ಸುಡುವ ಘಟನೆಗಳು ಹೆಚ್ಚಾಗುತ್ತಿವೆ, ಪಂಜಾಬ್ ಹುಲ್ಲು ಸುಡುವಿಕೆ 80% ಕಡಿತವನ್ನು ಸಾಧಿಸಬಹುದಾದರೆ, ಇತರ ರಾಜ್ಯಗಳು ಏಕೆ ಸಾಧ್ಯವಿಲ್ಲ? ಉತ್ತರ ಭಾರತದಾದ್ಯಂತ ನಗರಗಳಲ್ಲಿನ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಕೇಂದ್ರ ಸರ್ಕಾರ ರಾಜಕೀಯ ಮಾಡುವುದನ್ನು ಬಿಟ್ಟು ನಿರ್ಣಾಯಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಮಾಲಿನ್ಯವು ರಾಜ್ಯದ ಗಡಿಗಳನ್ನು ಅಥವಾ ರಾಜಕೀಯ ಸಂಬಂಧಗಳನ್ನು ಗುರುತಿಸುವುದಿಲ್ಲ ಎಂಬುದನ್ನು ಬಿಜೆಪಿ ಮತ್ತು ಕೇಂದ್ರ ಸರ್ಕಾರ ಅರ್ಥಮಾಡಿಕೊಳ್ಳಬೇಕು, ಮಾಸ್ಕ್ ಹಂಚುವ ರಾಜಕೀಯ ಮಾಡುವುದು ಬಿಟ್ಟು ಮಾಲಿನ್ಯ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ದೇವೇಗೌಡ, ಕುಮಾರಸ್ವಾಮಿ ಯಾವತ್ತು ಕರ್ನಾಟಕಕ್ಕೆ ಅನ್ಯಾಯ ಆಗಿದೆ ಅಂತ ಮಾತಾಡಿಲ್ಲ- ಸಿಎಂ

  • ಉಸಿರುಗಟ್ಟಿಸುತ್ತಿದೆ ದೆಹಲಿ – ಮಾಲಿನ್ಯ ನಿಯಂತ್ರಣಕ್ಕೆ ಶುಕ್ರವಾರದಿಂದ GRAP-III ನಿರ್ಬಂಧ ಜಾರಿ

    ಉಸಿರುಗಟ್ಟಿಸುತ್ತಿದೆ ದೆಹಲಿ – ಮಾಲಿನ್ಯ ನಿಯಂತ್ರಣಕ್ಕೆ ಶುಕ್ರವಾರದಿಂದ GRAP-III ನಿರ್ಬಂಧ ಜಾರಿ

    ನವದೆಹಲಿ: ಇಡೀ ವಿಶ್ವದಲ್ಲೇ ಮಾಲಿನ್ಯಯುತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ದೆಹಲಿ (Delhi Air Pollution), ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಜನ ಉಸಿರಾಡುವುದಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ.

    ಈ ಹಿನ್ನೆಲೆಯಲ್ಲಿ ವಾಯು ಗುಣಮಟ್ಟ ನಿರ್ವಹಣೆಯ ಆಯೋಗವು (CAQM) ಮಾಲಿನ್ಯ ನಿಯಂತ್ರಣಕ್ಕೆ 3ನೇ ಹಂತದ ಕ್ರಮ (ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP-III) ಜಾರಿಗೆ ಮುಂದಾಗಿದೆ. ನವೆಂಬರ್‌ 15ರ ಶುಕ್ರವಾರದಿಂದಲೇ ಈ ಕಟ್ಟುನಿಟ್ಟಿನ ಕ್ರಮ ಜಾರಿಗೆ ಬರಲಿವೆ.

    ಏನೇನು ಕ್ರಮ ?
    ಜಿಆರ್‌ಎಪಿ-3 (GRAP-III) ಜಾರಿಯಲ್ಲಿರುವವರೆಗೆ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲೆಯಿಂದ ವಿನಾಯಿತಿ ನೀಡಲಾಗುತ್ತಿದ್ದು, ಆನ್‌ಲೈನ್ ಮೂಲಕ ತರಗತಿ ನಡೆಸಲು ಸೂಚನೆ ನೀಡಲಾಗಿದೆ. BS-3 ಪೆಟ್ರೋಲ್ ಡಿಸೇಲ್ ವಾಹನಗಳ ಸಂಚಾರಕ್ಕೆ ತಡೆ ನೀಡಲಾಗುತ್ತದೆ. ಸಿಎನ್‌ಜಿ, ಇವಿ ಸೇರಿದಂತೆ ಅಂತರರಾಜ್ಯಗಳ BS4 ಡಿಸೇಲ್ ಬಸ್‌ಗಳಿಗೆ ಮಾತ್ರ ದೆಹಲಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ತುರ್ತು ಅಲ್ಲದ ನಿರ್ಮಾಣ ಮತ್ತು ಕಟ್ಟಡ ತೆರವು ಕಾರ್ಯಕ್ಕೆ ತಡೆ ನೀಡಲಾಗಿದ್ದು, ಸರ್ಕಾರಿ ಕಾಮಗಾರಿ, ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಕಟ್ಟಡಗಳ ಕಾಮಗಾರಿಗೆ ಮಾತ್ರ ಅನುಮತಿ ನೀಡಲಾಗಿದೆ. ಜೊತೆಗೆ ರಸ್ತೆಗಳಲ್ಲಿ ನೀರು ಚಿಮುಕಿಸುವುದನ್ನು ಹೆಚ್ಚಿಸುವಂತೆ ಸೂಚನೆ ನೀಡಲಾಗಿದೆ. ದೆಹಲಿ ಎನ್‌ಸಿಎಆರ್‌ನಲ್ಲಿ 5ನೇ ತರಗತಿವರೆಗಿನ ಶಾಲೆಗಳನ್ನು ಮುಚ್ಚಲು ಆದೇಶ ನೀಡಲಾಗಿದೆ. ಮುಖ್ಯವಾಗಿ ದೆಹಲಿ ನಿವಾಸಿಗಳು ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ ಬಳಕೆಗೆ ಆದ್ಯತೆ ನೀಡಬೇಕು ಎಂದು ಸರ್ಕಾರ ಕಟ್ಟುನಿಟ್ಟಾಗಿ ಹೇಳಿದೆ.

    ಅಪಾಯ ಮಟ್ಟ ಮೀರಿದ ಮಾಲಿನ್ಯ:
    ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ, ರಾಜಧಾನಿ ಭಾಗದ ಹಲವು ಪ್ರದೇಶಗಳಲ್ಲಿ ಎಕ್ಯೂಐ ಪ್ರಮಾಣ 450 ದಾಟಿದೆ. ಆನಂದ ವಿಹಾರ್, ಅಶೋಕ್ ವಿಹಾರ್, ಬವಾನಾ, ದ್ವಾರಕಾ, ಜಹಾಂಗೀರ್‌ಪುರಿ, ಮುಂಡ್ಕ, ನಜಾಫ್‌ಗಡ, ಲಾಜ್‌ಪತ್ ನಗರ್, ಪತ್ಪರ್‌ಗಂಜ್, ಪಂಜಾಬಿ ಬಾಗ್, ಆರ್‌ಕೆ ಪುರಂ, ರೋಹಿಣಿ, ವಿವೇಕ್ ವಿಹಾರ್ ಮತ್ತು ವಾಜಿರ್‌ಪುರ ಪ್ರದೇಶಗಳನ್ನು ಎಕ್ಯೂಐ ಸರಾಸರಿ ‘ತೀವ್ರ’ ಸ್ವರೂಪದ ವರ್ಗದಲ್ಲಿ ಗುರುತಿಸಲಾಗಿದ್ದು, ಬೆಳಿಗ್ಗೆ 6 ಗಂಟೆ ಸುಮಾರಿಗೆ 450ಕ್ಕಿಂತ ಅಧಿಕವಿತ್ತು.

    ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪ್ರಕಾರ, ಎಕ್ಯೂಐ ಮಟ್ಟವು ಶೂನ್ಯದಿಂದ 50 ರಷ್ಟಿದ್ದರೆ ಉಸಿರಾಟಕ್ಕೆ ಯೋಗ್ಯ ಗಾಳಿ, 51 ರಿಂದ 100 ರಷ್ಟಿದ್ದರೆ ಸಮಾಧಾನಕರ, 101 ರಿಂದ 200 ರಷ್ಟಿದ್ದರೆ ಸಾಧಾರಣ, 201 ರಿಂದ 300 ರಷ್ಟಿದ್ದರೆ ಕಳಪೆ ಹಾಗೂ 301 ರಿಂದ 400 ರಷ್ಟಿದ್ದರೆ ಅತ್ಯಂತ ಕಳಪೆ, 401 ರಿಂದ 450ರಷ್ಟು ಕಂಡು ಬಂದರೆ ತೀವ್ರ ಕಳಪೆ ಹಾಗೂ 450ಕ್ಕಿಂತ ಹೆಚ್ಚಾದರೆ ಅತ್ಯಂತ ಅಪಾಯಕಾರಿ ಎಂದು ವರ್ಗೀಕರಿಸಲಾಗಿದೆ.

    300ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ:
    ಗುರುವಾರ (ನ.14) ಬೆಳಿಗ್ಗೆ ದಟ್ಟನೆಯ ಮಂಜು ಆವರಿಸಿದ್ದನ್ನು ಕಂಡು ದೆಹಲಿಯ ಜನ ಕಂಗಾಲಾಗಿದ್ದಾರೆ. ವಾಯು ಗುಣಮಟ್ಟ ಸೂಚ್ಯಂಕದಲ್ಲಿ (AIQ) ಮಟ್ಟ ಅಪಾಯಕಾರಿ ಹಂತದತ್ತ ತಲುಪುತ್ತಿದೆ. ಮುಂಜಾನೆ AQI 452ರ ಗಡಿ ದಾಟಿದೆ. ಇದರಿಂದ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Delhi Airport) ಗೋಚರತೆ ಕಡಿಮೆಯಾಗಿದ್ದು, 300 ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಫ್ಲೈಟ್‌ರಾಡಾರ್ ತಿಳಿಸಿದೆ.

  • ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ – ಪ್ರಾಥಮಿಕ ಶಾಲೆಗಳಲ್ಲಿ ಆನ್‌ಲೈನ್ ಕ್ಲಾಸ್

    ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ – ಪ್ರಾಥಮಿಕ ಶಾಲೆಗಳಲ್ಲಿ ಆನ್‌ಲೈನ್ ಕ್ಲಾಸ್

    ನವದೆಹಲಿ: ಚಳಿಗಾಲ ಆರಂಭವಾಗುತ್ತಿದ್ದಂತೆಯೇ ರಾಷ್ಟ್ರ ರಾಜಧಾನಿ ದೆಹಲಿ (Delhi) ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಮಂಜಿನ ಹೊದಿಕೆ, ಗ್ಯಾಸ್‌ ಚೇಂಬರ್‌ ಆಗಿ ಬದಲಾಗಿವೆ. ಉಸಿರಾಡಲು ಶುದ್ಧ ಗಾಳಿ, ಉತ್ತಮ ವಾತಾವರಣ ಇಲ್ಲದೇ ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಮತ್ತೆ ಮರುಕಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲೆಯಿಂದ ವಿನಾಯಿತಿ ನೀಡಲಾಗಿದೆ.

    ಈ ಕುರಿತು ದೆಹಲಿ ಸಿಎಂ ಅತಿಶಿ (Atishi) ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ವಾಯು ಮಾಲಿನ್ಯ ಮಿತಿಮೀರಿದ ಹಿನ್ನೆಲೆಯುಲ್ಲಿ ದೆಹಲಿಯ ಎಲ್ಲಾ ಪ್ರಾಥಮಿಕ ಶಾಲೆಗಳು ಮುಂದಿನ ಆದೇಶದ ವರೆಗೆ ಆನ್‌ಲೈನ್‌ ತರಗತಿಗಳಿಗೆ ಬಲಾಗುವಂತೆ ಆದೇಶಿಸಿದ್ದಾರೆ.

    ಗುರುವಾರ (ನ.14) ಬೆಳಿಗ್ಗೆ ದಟ್ಟನೆಯ ಮಂಜು ಆವರಿಸಿದ್ದನ್ನು ಕಂಡು ದಿಲ್ಲಿಗರು ಕಂಗಾಲಾಗಿದ್ದಾರೆ. ವಾಯು ಗುಣಮಟ್ಟ ಸೂಚ್ಯಂಕದಲ್ಲಿ (AIQ) ಮಟ್ಟ ಅಪಾಯಕಾರಿ ಹಂತದತ್ತ ತಲುಪುತ್ತಿದೆ. ಮುಂಜಾನೆ AQI 452ರ ಗಡಿ ದಾಟಿದೆ. ಇದರಿಂದ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Delhi Airport) ಗೋಚರತೆ ಕಡಿಮೆಯಾಗಿದ್ದು, 300 ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಫ್ಲೈಟ್‌ರಾಡಾರ್ ತಿಳಿಸಿದೆ.

    ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪ್ರಕಾರ, ರಾಜಧಾನಿ ಭಾಗದ ಹಲವು ಪ್ರದೇಶಗಳಲ್ಲಿ ಎಕ್ಯೂಐ ಪ್ರಮಾಣ 450 ದಾಟಿದೆ. ಆನಂದ ವಿಹಾರ್, ಅಶೋಕ್ ವಿಹಾರ್, ಬವಾನಾ, ದ್ವಾರಕಾ, ಜಹಾಂಗೀರ್‌ಪುರಿ, ಮುಂಡ್ಕ, ನಜಾಫ್‌ಗಡ, ಲಾಜ್‌ಪತ್ ನಗರ್, ಪತ್ಪರ್‌ಗಂಜ್, ಪಂಜಾಬಿ ಬಾಗ್, ಆರ್‌ಕೆ ಪುರಂ, ರೋಹಿಣಿ, ವಿವೇಕ್ ವಿಹಾರ್ ಮತ್ತು ವಾಜಿರ್‌ಪುರ ಪ್ರದೇಶಗಳನ್ನು ಎಕ್ಯೂಐ ಸರಾಸರಿ ‘ತೀವ್ರ’ ಸ್ವರೂಪದ ವರ್ಗದಲ್ಲಿ ಗುರುತಿಸಲಾಗಿದ್ದು, ಬೆಳಿಗ್ಗೆ 6 ಗಂಟೆ ಸುಮಾರಿಗೆ 450ಕ್ಕಿಂತ ಅಧಿಕವಿತ್ತು.

    ಹದಗೆಡುತ್ತಿರುವ ಗಾಳಿಯ ಗುಣಮಟ್ಟದ ಕುರಿತು ಮಾತನಾಡಿದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಅತಿಶಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು, ನಾವು ಕರ್ತವ್ಯ ಪಥದಲ್ಲಿ ನಿಂತಿದ್ದೇವೆ ಇಲ್ಲಿ AQI 474 ತಲುಪಿದೆ. ನಮಗೆ ಇಂಡಿಯಾ ಗೇಟ್ ಅನ್ನು ಸಹ ನೋಡಲಾಗುತ್ತಿಲ್ಲ, ಎಎಪಿ ಸರ್ಕಾರದ ಅಸಮರ್ಥತೆ ಇದಕ್ಕೆ ಕಾರಣ ಎಂದು ವಾಗ್ದಾಳಿ ನಡೆಸಿದರು.