Tag: Atishi

  • ಚುನಾವಣಾ ಬಾಂಡ್ ಮೂಲಕ ಬಿಜೆಪಿಗೆ ಹಣ ನೀಡಿದ ವ್ಯಕ್ತಿಯ ಹೇಳಿಕೆ ಆಧರಿಸಿ ಕೇಜ್ರಿವಾಲ್ ಬಂಧನ – ಇಡಿ ವಿರುದ್ಧ ಆಪ್ ಆರೋಪ

    ಚುನಾವಣಾ ಬಾಂಡ್ ಮೂಲಕ ಬಿಜೆಪಿಗೆ ಹಣ ನೀಡಿದ ವ್ಯಕ್ತಿಯ ಹೇಳಿಕೆ ಆಧರಿಸಿ ಕೇಜ್ರಿವಾಲ್ ಬಂಧನ – ಇಡಿ ವಿರುದ್ಧ ಆಪ್ ಆರೋಪ

    ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಚಾರದ ಕಿಂಗ್ ಪಿನ್ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಎಂದು ಜಾರಿ ನಿರ್ದೇಶನಾಲಯ (ED) ಆರೋಪಿಸಿದ ಬೆನ್ನಲ್ಲೇ ಜಾರಿ ನಿರ್ದೇಶನಾಲಯಕ್ಕೆ ಆಪ್‌ ನಾಯಕರು ತಿರುಗೇಟು ನೀಡಿದ್ದಾರೆ. ಚುನಾವಣಾ ಬಾಂಡ್ (Electoral Bonds) ಮೂಲಕ ಬಿಜೆಪಿಗೆ ಹಣ ನೀಡಿದ ವ್ಯಕ್ತಿಯಿಂದ ಪಡೆದ ಮಾಹಿತಿ ಮೇರೆಗೆ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.

    ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವೆ ಅತಿಶಿ (Atishi), ಅಬಕಾರಿ ನೀತಿ ಹಗರಣದಲ್ಲಿ, ಕೇಂದ್ರೀಯ ತನಿಖಾ ದಳ (CBI) ಮತ್ತು ಜಾರಿ ನಿರ್ದೇಶನಾಲಯ ತನಿಖೆಗಳು ಕಳೆದ ಎರಡು ವರ್ಷಗಳಿಂದ ನಡೆಯುತ್ತಿದೆ. ಈ 2 ವರ್ಷಗಳ ತನಿಖೆಯಲ್ಲಿ ಒಂದು ಪ್ರಶ್ನೆ ಮತ್ತೆ-ಮತ್ತೆ ಉದ್ಭವಿಸುತ್ತಿದೆ. ಹಣದ ಜಾಡು ಎಲ್ಲಿದೆ? ಹಣ ಎಲ್ಲಿಗೆ ಹೋಯಿತು? ಆಪ್‌ ಪಕ್ಷದ ಯಾವುದೇ ನಾಯಕ, ಮಂತ್ರಿ ಅಥವಾ ಕಾರ್ಯಕರ್ತರಿಂದ ಅಪರಾಧದ ಆದಾಯವನ್ನು ವಸೂಲಿ ಮಾಡಲಾಗಿಲ್ಲ, ಹಾಗಿದ್ದಾಗ ಹಣ ಎಲ್ಲಿ ಹೋಯಿತು? ಎಂದು ಪ್ರಶ್ನೆ ಮಾಡಿದ್ದಾರೆ.

    ಶರತ್ ಚಂದ್ರ ರೆಡ್ಡಿ ಎಂಬ ವ್ಯಕ್ತಿಯ ಹೇಳಿಕೆ ಆಧರಿಸಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಶರತ್ ಚಂದ್ರ ರೆಡ್ಡಿ ಅರಬಿಂದೋ ಫಾರ್ಮಾದ ಮಾಲೀಕರು ಮತ್ತು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ಹಣ ಪಾವತಿಸಿದವರು ಎಂದು ಅತಿಶಿ ಆರೋಪಿಸಿದ್ದಾರೆ. ಇದನ್ನೂ ಓದಿ: ಪ್ರಶ್ನೆಗಾಗಿ ಹಣ ಪಡೆದ ಆರೋಪ – ಮಹುವಾ ಮೊಯಿತ್ರಾ ಮನೆಯಲ್ಲಿ ಸಿಬಿಐ ಶೋಧ

    ನವೆಂಬರ್ 9, 2022 ರಂದು ರೆಡ್ಡಿ ಅವರನ್ನು ವಿಚಾರಣೆಗಾಗಿ ಕರೆಸಲಾಗಿತ್ತು. ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲಿಲ್ಲ ಅಥವಾ ಮಾತನಾಡಲಿಲ್ಲ ಮತ್ತು ಆಪ್‌ನೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದರು. ಹೇಳಿಕೆ ಬೆನ್ನಲೆ ಅವರನ್ನು ಇಡಿ ಬಂಧಿಸಿ ಹಲವು ತಿಂಗಳು ಜೈಲಿನಲ್ಲಿದ್ದ ನಂತರ ಹೇಳಿಕೆ ಬದಲಿಸಿದ ಅವರು, ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ ಅಬಕಾರಿ ನೀತಿ ವಿಚಾರವಾಗಿ ಮಾತನಾಡಿದ್ದೇನೆ ಎಂದು ಹೇಳಿದರು. ಅವರು ಹೇಳಿದ ತಕ್ಷಣ ಜಾಮೀನು ಸಿಕ್ಕಿದೆ ಎಂದು ದೂರಿದ್ದಾರೆ.

    ಸಚಿವ ಸೌರಭ್ ಭಾರದ್ವಾಜ್ ಮಾತನಾಡಿ, ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಚರ್ಚೆ ಪ್ರಾರಂಭವಾದಾಗಿನಿಂದ, ಬಿಜೆಪಿ, ಎಸ್‌ಬಿಐ, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವು ವಿವರಗಳನ್ನು ಬಹಿರಂಗಪಡಿಸದಿರಲು ಪ್ರಯತ್ನಿಸುತ್ತಿದೆ. ಆದರೀಗ ಈಗ ಅದನ್ನ ಬಹಿರಂಗಪಡಿಸಲಾಗಿದೆ, ಇದು ವಿವಿಧ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 2047ಕ್ಕೆ ಎಕ್ಸ್‌ಪ್ರೆಸ್‌ವೇಗಳ ಅಭಿವೃದ್ಧಿಗೆ ಸರ್ಕಾರ ಮಾಸ್ಟರ್‌ಪ್ಲಾನ್‌

  • 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. – ಆಪ್‌ ಸರ್ಕಾರದಿಂದ ಬಂಪರ್‌ ಕೊಡುಗೆ

    18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. – ಆಪ್‌ ಸರ್ಕಾರದಿಂದ ಬಂಪರ್‌ ಕೊಡುಗೆ

    ನವದೆಹಲಿ: ರಾಷ್ಟ್ರ ರಾಜಧಾನಿಯ ಮಹಿಳೆಯರಿಗಾಗಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ (Arvind Kejriwal Government) ನೇತೃತ್ವದ ಸರ್ಕಾರ ಬಂಪರ್ ಯೋಜನೆ ಪ್ರಕಟಿಸಿದೆ.

    ಸೋಮವಾರ ದೆಹಲಿ ವಿಧಾನಸಭೆಯಲ್ಲಿ ರಾಜ್ಯ ಹಣಕಾಸು ಸಚಿವೆ ಅತಿಶಿ 2024-25ನೇ ಸಾಲಿನ‌ ವರ್ಷದ ಬಜೆಟ್‌ ಮಂಡಿಸಿದ್ದಾರೆ. 76,000 ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಿದ್ದು, ತಮ್ಮ ಚೊಚ್ಚಲ ಬಜೆಟ್‌ನಲ್ಲಿ ʻಮುಖ್ಯಮಂತ್ರಿ ಮಹಿಳಾ ಸಮ್ಮಾನ್ʼಯೋಜನೆ (Mukyamnatri Mahila Samman Yojana) ಘೋಷಿಸಿದರು.

    ಈ ಯೋಜನೆ ಅಡಿಯಲ್ಲಿ 18 ವರ್ಷ ಮೇಲ್ಪಟ್ಟ ಮಹಿಳೆಯರು (Delhi Women) ಪ್ರಸಕ್ತ ಆರ್ಥಿಕ ವರ್ಷದಿಂದ ಪ್ರತಿ ತಿಂಗಳು 1,000 ರೂ. ಆದಾಯ ಪಡೆಯಲಿದ್ದಾರೆ. ಮಹಿಳೆಯರನ್ನು ಸಬಲೀಕರಣಗೊಳಿಸುವ ಉದ್ದೇಶವೂ ಇದಾಗಿದೆ ಎಂದು ತಮ್ಮ ಬಜೆಟ್‌ ಭಾಷಣದಲ್ಲಿ ತಿಳಿಸಿದರು. ಇದನ್ನೂ ಓದಿ: ಮಮತಾ ಸವಾಲು ಸ್ವೀಕಾರ – ಸಕ್ರೀಯ ರಾಜಕಾರಣಕ್ಕೆ ಇಳಿದ ಕೋಲ್ಕತ್ತಾ ಹೈಕೋರ್ಟ್‌ ಜಡ್ಜ್‌ ಗಂಗೋಪಾಧ್ಯಾಯ

    ಇಲ್ಲಿಯವರೆಗೆ ದೆಹಲಿಯಲ್ಲಿ ಶ್ರೀಮಂತರ ಕುಟುಂಬದ ಮಕ್ಕಳು ಶ್ರೀಮಂತರಾಗಿ, ಬಡ ಕುಟುಂಬದ ಮಕ್ಕಳು ಬಡವರಾಗಿಯೇ ಉಳಿಯುತ್ತಿದ್ದರು. ಇದು ರಾಮರಾಜ್ಯದ ಪರಿಕಲ್ಪನೆಗೆ ವಿರುದ್ಧವಾಗಿತ್ತು. ಆದ್ರೆ ನಮ್ಮ ಸರ್ಕಾರ ರಾಮರಾಜ್ಯದ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಬಜೆಟ್‌ ಮಂಡಿಸಿದೆ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ನೌಕಾಪಡೆಗೆ ಎಂಹೆಚ್ 60ಆರ್ ಸೀಹಾಕ್ ಹೆಲಿಕಾಪ್ಟರ್ ನಿಯೋಜನೆಗೆ ಸಿದ್ಧತೆ – ಭಾರತಕ್ಕೆ ಭೀಮ ಬಲ

    ಕೇಜ್ರಿವಾಲ್ ಸರ್ಕಾರವು 2015 ರಿಂದ 22,711 ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಿದೆ. ಶಿಕ್ಷಣವು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಈ ವರ್ಷ ಶಿಕ್ಷಣಕ್ಕಾಗಿ 16,396 ಕೋಟಿ ರೂ., ದೆಹಲಿಯ ಆರೋಗ್ಯ ಕ್ಷೇತ್ರಕ್ಕೆ 8,685 ರೂ.ಗಳನ್ನು ಮೀಸಲಿಡಲಾಗಿದೆ. ಈ ಅನುದಾನದ ಅಡಿಯಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ 6,215 ರೂ.ಗಳಷ್ಟು ಮೂಲ ಸೌಕರ್ಯಗಳ ಸೌಲಭ್ಯ ಸಿಗಲಿದೆ. ಅಲ್ಲದೇ ಹೊಸ ಆಸ್ಪತ್ರೆಗಳ ನಿರ್ಮಾಣಕ್ಕೆ 400 ಕೋಟಿ ರೂ. ಗಳನ್ನು ಮೀಸಲಿಡಲಾಗಿದೆ ಎಂದು ವಿವರಿಸಿದರು.

  • ಕೇಜ್ರಿವಾಲ್ ಜೈಲಿಗೆ ಹೋದರೂ ಅವರೇ ಸಿಎಂ ಆಗಿ ಮುಂದುವರಿಯಬೇಕು: ದೆಹಲಿ ಸಚಿವೆ

    ಕೇಜ್ರಿವಾಲ್ ಜೈಲಿಗೆ ಹೋದರೂ ಅವರೇ ಸಿಎಂ ಆಗಿ ಮುಂದುವರಿಯಬೇಕು: ದೆಹಲಿ ಸಚಿವೆ

    ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದರೆ ಜೈಲಿನಿಂದಲೇ ಕೆಲಸ ಮಾಡಲು ನ್ಯಾಯಾಲಯದ ಅನುಮತಿ ಪಡೆಯುವುದಾಗಿ ಆಮ್ ಆದ್ಮಿ ಪಕ್ಷ (AAP) ಹೇಳಿದೆ.

    ಪಕ್ಷದ ಶಾಸಕರು ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿದರೂ ಜೈಲಿನಿಂದಲೇ ಅವರು ಸರ್ಕಾರವನ್ನು ನಡೆಸಬೇಕು ಎಂದು ಹೇಳಿದ್ದಾರೆ. ನಾವು ಜನರ ಪರವಾಗಿ ಹೋಗುತ್ತಿದ್ದೇವೆ. ಆಮ್ ಆದ್ಮಿ ಪಕ್ಷ ಮತ್ತು ಅರವಿಂದ್ ಕೇಜ್ರಿವಾಲ್ ವಿರುದ್ಧ ದೌರ್ಜನ್ಯ ನಡೆಯುತ್ತಿದೆ ಎಂದು ಜನರು ಹೇಳುತ್ತಿದ್ದಾರೆ. ಇದಕ್ಕಾಗಿಯೇ ಕೇಜ್ರಿವಾಲ್ ಜೈಲಿಗೆ ಹೋದರೂ ಅವರು ಸಿಎಂ ಆಗಿಯೇ ಉಳಿಯಬೇಕು ಎಂದು ದೆಹಲಿ ಸಚಿವೆ ಅತಿಶಿ (Atishi) ಹೇಳಿದ್ದಾರೆ.

    ದೆಹಲಿಯ ಜನರು ಕೇಜ್ರಿವಾಲ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದಾರೆ. ಹೀಗಾಗಿ ಅವರು ಸಿಎಂ ಆಗಿಯೇ ಉಳಿಯಬೇಕು. ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಮತ್ತು ಕ್ಯಾಬಿನೆಟ್ ಸಭೆಯನ್ನು ಜೈಲಿನಲ್ಲಿಯೇ ನಡೆಸಲು ಅನುಮತಿ ಕೇಳುತ್ತೇವೆ ಎಂದು ಅವರು ಹೇಳಿದರು. ಇದನ್ನೂ ಓದಿ: ಮೊದಲ ಬಾರಿಗೆ ವಿವಿ ಚುನಾವಣೆಯಲ್ಲಿ ಎಬಿವಿಪಿಯಿಂದ ಮುಸ್ಲಿಂ ವಿದ್ಯಾರ್ಥಿನಿ ಕಣಕ್ಕೆ

    ದೆಹಲಿಯ ಮದ್ಯ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಅರವಿಂದ್ ಕೇಜ್ರಿವಾಲ್ ಅವರನ್ನು ನವೆಂಬರ್ 2 ರಂದು ಜಾರಿ ನಿರ್ದೇಶನಾಲಯ ವಿಚಾರಣೆಗೆ ಕರೆದಿತ್ತು. ಆದರೆ ಸಿಎಂ ಇಡಿ ಕಚೇರಿಗೆ ಹಾಜರಾಗದೇ ಸಮನ್ಸ್ ಅನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿದ್ದರು. ಇದಾದ ಬಳಿಕ ಅವರನ್ನು ಶೀಘ್ರದಲ್ಲಿಯೇ ಬಂಧಿಸುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಈ ಹಿಂದೆ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ವಿಚಾರಣೆ ನಡೆಸಿತ್ತು.

    ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಇದೇ ಪ್ರಕರಣದಲ್ಲಿ ಫೆಬ್ರವರಿಯಲ್ಲಿ ಬಂಧಿಸಲಾಗಿತ್ತು. ಬಂಧನದ ಬಳಿಕ ಅವರು ಕ್ಯಾಬಿನೆಟ್ ಹುದ್ದೆಯಿಂದ ಕೆಳಗಿಳಿದಿದ್ದರು. ಪ್ರಸ್ತುತ ಅವರು ಜೈಲಿನಲ್ಲಿದ್ದಾರೆ. ಕಳೆದ ವಾರ ಸುಪ್ರೀಂ ಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು. ಇದನ್ನೂ ಓದಿ: ಕೈಕೊಟ್ಟ EVM; ವೋಟ್ ಮಾಡಲಾಗದೇ ಮಿಜೋರಾಂ ಸಿಎಂ ವಾಪಸ್

  • 4 ತಿಂಗಳಲ್ಲಿ ಮೂರನೇ ಬಾರಿಗೆ ಸಂಪುಟಕ್ಕೆ ಸರ್ಜರಿ- ಕೇಜ್ರಿವಾಲ್ ಬಳಿಕ ಅತಿಶಿ ಪ್ರಭಾವಿ ಸಚಿವೆ

    4 ತಿಂಗಳಲ್ಲಿ ಮೂರನೇ ಬಾರಿಗೆ ಸಂಪುಟಕ್ಕೆ ಸರ್ಜರಿ- ಕೇಜ್ರಿವಾಲ್ ಬಳಿಕ ಅತಿಶಿ ಪ್ರಭಾವಿ ಸಚಿವೆ

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ನಾಲ್ಕು ತಿಂಗಳಲ್ಲಿ ಮೂರನೇ ಬಾರಿಗೆ ಸಚಿವ ಸಂಪುಟ (Cabinet) ಪುನರ್ ರಚನೆ ಮಾಡಿದ್ದಾರೆ. ಇತ್ತಿಚೆಗೆ ಸಂಪುಟ ಸೇರಿದ್ದ ಸಚಿವೆ ಅತಿಶಿಗೆ ಹೆಚ್ಚುವರಿ ಮೂರು ಖಾತೆಗಳನ್ನು ನೀಡಿದ್ದು, ಅವರೀಗ ಸರ್ಕಾರದ ಎರಡನೇ ಪ್ರಭಾವಿ ಸಚಿವೆಯಾಗಿದ್ದಾರೆ.

    ಅತಿಶಿಗೆ (Atishi Marlena) ಹಣಕಾಸು, ಯೋಜನೆ ಮತ್ತು ಆದಾಯದಂತಹ ಮಹತ್ವದ ಖಾತೆಗಳನ್ನು ಸಿಎಂ ಅರವಿಂದ್ ಕೇಜ್ರಿವಾಲ್ ನೀಡಿದ್ದರು. ಅವರ ಶಿಫಾರಸ್ಸನ್ನು ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೆನಾ (Vinai Kumar Saxena) ಅನುಮೋದಿಸಿದ್ದಾರೆ. ಈ ಬೆಳವಣಿಗೆ ಬಳಿಕ ಅತಿಶಿ ನಾಲ್ಕು ತಿಂಗಳಲ್ಲಿ ಸಚಿವ ಸಂಪುಟದಲ್ಲಿ ಎರಡನೇ ಪ್ರಮುಖ ಸ್ಥಾನಕ್ಕೆ ಏರಿದ್ದಾರೆ.

    ಶಿಕ್ಷಣ ಸುಧಾರಣೆಗಳಲ್ಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ (DCM Manish Sisodia) ಜೊತೆಗೆ ನಿಕಟವಾಗಿ ಕೆಲಸ ಮಾಡಿದ ಅತಿಶಿ ಅವರು ಸದ್ಯ ಮುಖ್ಯಮಂತ್ರಿ ಸೇರಿದಂತೆ 7 ಸಚಿವರ ದೆಹಲಿ ಸಂಪುಟದಲ್ಲಿ ಏಕೈಕ ಮಹಿಳೆಯಾಗಿದ್ದಾರೆ. ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ, ಪ್ರವಾಸೋದ್ಯಮ, ಕಲೆ, ಭಾಷೆ ಮತ್ತು ಸಂಸ್ಕೃತಿ, ಪಿಡಬ್ಲ್ಯುಡಿ ಮತ್ತು ಪವರ್ ಸೇರಿ ಆರು ಸಚಿವಾಲಯಗಳ ಉಸ್ತುವಾರಿ ನೀಡಲಾಗಿತ್ತು.

    ಕೆಲ ದಿನಗಳ ಹಿಂದಷ್ಟೆ ಸಾರ್ವಜನಿಕ ಸಂಪರ್ಕ ಉಸ್ತುವಾರಿಯನ್ನು ನೀಡಲಾಯಿತು. ಈಗ ಹಣಕಾಸು ಮತ್ತು ಆದಾಯದ ಹೆಚ್ಚುವರಿ ಶುಲ್ಕಗಳ ಜವಬ್ದಾರಿ ನೀಡಿದೆ. ಈ ಮೂಲಕ ಅತಿಶಿ ನಿರ್ವಹಿಸುತ್ತಿರುವ ಇಲಾಖೆಗಳ ಸಂಖ್ಯೆ 6 ರಿಂದ 10ಕ್ಕೆ ಏರಿದೆ. ಇದನ್ನೂ ಓದಿ: 500 ರೂ. ಕಂತೆ ಕಂತೆ ನೋಟುಗಳ ಜೊತೆ ಪತ್ನಿ, ಮಕ್ಕಳ ಸೆಲ್ಫಿ- ಪೊಲೀಸಪ್ಪನಿಗೆ ಸಂಕಷ್ಟ

    ಅತಿಶಿಗೆ ನೀಡಿರುವ 3 ಹೆಚ್ಚುವರಿ ಖಾತೆಗಳನ್ನು ಈ ಮೊದಲು ಕೈಲಾಶ್ ಗಹ್ಲೋಟ್ ನಿಭಾಯಿಸುತ್ತಿದ್ದರು. ಮೂರು ಖಾತೆಗಳು ಕೈ ತಪ್ಪಿದ ಬಳಿಕ ಸದ್ಯ ಅವರು ಗೃಹ, ಕಾನೂನು, ನ್ಯಾಯ ಮತ್ತು ಶಾಸಕಾಂಗ ವ್ಯವಹಾರಗಳು, ಸಾರಿಗೆ, ಆಡಳಿತ ಸುಧಾರಣೆಗಳು ಮತ್ತು ಮಾಹಿತಿ ತಂತ್ರಜ್ಞಾನವನ್ನು ಇಲಾಖೆಗಳ ಜವಬ್ದಾರಿ ಹೊಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ ರಾಜೀನಾಮೆ – ಸೌರಭ್ ಭಾರದ್ವಾಜ್ ಮತ್ತು ಅತಿಶಿಗೆ ಮಂತ್ರಿ ಸ್ಥಾನ?

    ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ ರಾಜೀನಾಮೆ – ಸೌರಭ್ ಭಾರದ್ವಾಜ್ ಮತ್ತು ಅತಿಶಿಗೆ ಮಂತ್ರಿ ಸ್ಥಾನ?

    ನವದೆಹಲಿ: ಆರೋಗ್ಯ ಸಚಿವ ಸತ್ಯೇಂದ್ರ ಜೈನ್ (Satyendar Jain) ಮತ್ತು ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia) ರಾಜೀನಾಮೆಯಿಂದ ತೆರವಾದ 2 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ನಿರ್ಧರಿಸಿದ್ದು, ಶಾಸಕರಾದ ಸೌರಭ್ ಭಾರದ್ವಾಜ್ (Saurabh Bhardwaj) ಮತ್ತು ಅತಿಶಿ (Atishi) ಹೆಸರನ್ನು ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೆನಾ ಅನುಮತಿಗಾಗಿ ಕಳುಹಿಸಿದೆ.

    ಹೊಸ ಮದ್ಯ ನೀತಿಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಆರೋಪದಲ್ಲಿ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ ಸತ್ಯೇಂದ್ರ ಜೈನ್ ಮತ್ತು ಮನೀಶ್ ಸಿಸೋಡಿಯಾ ರಾಜೀನಾಮೆ ನೀಡಿದ್ದರು. ರಾಜೀನಾಮೆ ಅಂಗೀಕರಿಸಿ ಲೆಫ್ಟಿನೆಂಟ್ ಗವರ್ನರ್ ಮಾಹಿತಿ ನೀಡಿದ್ದ ಕೇಜ್ರಿವಾಲ್ ಹೊಸ ಹೆಸರುಗಳನ್ನು ಕಳುಹಿಸಿಕೊಟ್ಟಿದ್ದಾರೆ.

    ಮನೀಶ್ ಸಿಸೋಡಿಯಾ ಡಿಸಿಎಂ ಮಾತ್ರವಲ್ಲದೇ ಶಿಕ್ಷಣ, ಹಣಕಾಸು, ಯೋಜನೆ, ಭೂಮಿ ಮತ್ತು ಕಟ್ಟಡ, ಸೇವೆಗಳು, ಪ್ರವಾಸೋದ್ಯಮ, ಕಲೆ-ಸಂಸ್ಕೃತಿ ಮತ್ತು ಭಾಷೆ, ಕಾರ್ಮಿಕ ಮತ್ತು ಉದ್ಯೋಗ, ಆರೋಗ್ಯ, ಕೈಗಾರಿಕೆ, ವಿದ್ಯುತ್, ಗೃಹ, ನಗರಾಭಿವೃದ್ಧಿ, ನೀರಾವರಿ, ಲೋಕೋಪಯೋಗಿ ಸೇರಿ 18 ಇಲಾಖೆಗಳನ್ನು ನಿಭಾಯಿಸುತ್ತಿದ್ದರು. ಸತ್ಯೇಂದ್ರ ಜೈನ್ ಆರೋಗ್ಯ, ಗೃಹ, ಕೈಗಾರಿಕೆ ಸೇರಿದಂತೆ 7 ಖಾತೆಗಳನ್ನು ನಿರ್ವಹಿಸುತ್ತಿದ್ದರು. ಇಬ್ಬರ ರಾಜೀನಾಮೆ ಬಳಿಕ ಖಾತೆಗಳನ್ನು ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಮತ್ತು ಸಮಾಜ ಕಲ್ಯಾಣ ಸಚಿವ ರಾಜ್ ಕುಮಾರ್ ಆನಂದ್ ನಡುವೆ ಹಂಚಿಕೆ ಮಾಡಿದೆ. ಇದನ್ನೂ ಓದಿ: ಬಿಜೆಪಿ ಮಾಡದಿದ್ರೆ, ನಾವು ಅಧಿಕಾರಕ್ಕೆ ಬಂದ್ಮೇಲೆ 7ನೇ ವೇತನ ಆಯೋಗ ಜಾರಿ ಮಾಡ್ತೀವಿ: ಸಿದ್ದರಾಮಯ್ಯ

    3 ಬಾರಿ ಶಾಸಕರಾಗಿರುವ ಮತ್ತು ಪ್ರಸ್ತುತ ದೆಹಲಿ ಜಲ ಮಂಡಳಿಯ ಉಪಾಧ್ಯಕ್ಷ ಹುದ್ದೆಯನ್ನು ಹೊಂದಿರುವ ಎಎಪಿ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ ಮತ್ತು ಮನೀಶ್ ಸಿಸೋಡಿಯಾ ಜೊತೆಗೆ ಕಾರ್ಯ ನಿರ್ವಹಿಸಿದ ಕಾಲ್ಕಾಜಿ ಶಾಸಕಿ ಅತಿಶಿ ಅವರಿಗೆ ರಾಜ್ಯ ಖಾತೆ ನೀಡಲು ನಿರ್ಧರಿಸಿದ್ದು, ಲೆಫ್ಟಿನೆಂಟ್ ಗವರ್ನರ್ ಅನುಮತಿ ಮಾತ್ರ ಬಾಕಿ ಉಳಿದಿದೆ. ಇದನ್ನೂ ಓದಿ: ಏಪ್ರಿಲ್ 1 ರಿಂದಲೇ ವೇತನ ಹೆಚ್ಚಳ ಜಾರಿಗೆ- ಸರ್ಕಾರದಿಂದ ಅಧಿಕೃತ ಆದೇಶ