Tag: Atli

  • ‘ಜವಾನ್’ ಕಲೆಕ್ಷನ್ 1103.27 ಕೋಟಿ ರೂಪಾಯಿ: ಅಧಿಕೃತ ಘೋಷಣೆ

    ‘ಜವಾನ್’ ಕಲೆಕ್ಷನ್ 1103.27 ಕೋಟಿ ರೂಪಾಯಿ: ಅಧಿಕೃತ ಘೋಷಣೆ

    ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾದ ಈವರೆಗಿನ ಕಲೆಕ್ಷನ್ 1103.27 ಕೋಟಿ ರೂಪಾಯಿ ಎಂದು ಸ್ವತಃ ನಿರ್ಮಾಣ ಸಂಸ್ಥೆಯೇ ಘೋಷಣೆ ಮಾಡಿದೆ. ಶಾರುಖ್ ಖಾನ್ ಅವರ ರೆಡ್ ಚಿಲ್ಲಿ ಎಂಟರ್ ಟೇನ್ಮೆಂಟ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೊಂದನ್ನು ಹಂಚಿಕೊಳ್ಳುವ ಮೂಲಕ ಅಧಿಕೃತ ಮಾಹಿತಿಯನ್ನು ಹೊರ ಹಾಕಿದೆ. ಇದು ವಿಶ್ವದಾದ್ಯಂತ ಬಂದ ಒಟ್ಟು ಕಲೆಕ್ಷನ್ ಆಗಿದೆ.

    ವಿಶ್ವದಾದ್ಯಂತ ‘ಜವಾನ್’ ಸಿನಿಮಾ ದಾಖಲೆ ರೀತಿಯಲ್ಲಿ ಕಲೆಕ್ಷನ್ (Collection) ಮಾಡಿದರೆ, ಭಾರತದಲ್ಲೇ ಅದು ಗಳಿಸಿದ ಒಟ್ಟು ಮೊತ್ತ ಅಂದಾಜು 600 ಕೋಟಿ ರೂಪಾಯಿಗೂ ಹೆಚ್ಚು ಆಗಿದೆ. ಈ ಪ್ರಮಾಣದಲ್ಲಿ ಹಣ ಗಳಿಕೆ ಮಾಡಿದ ಮೊದಲ ಹಿಂದಿ ಸಿನಿಮಾ ಎನ್ನುವ ದಾಖಲೆ ಕೂಡ ಬರೆದಿದೆ. ಇದೆಲ್ಲವೂ ಅಧಿಕೃತ ಘೋಷಣೆ ಎನ್ನುವುದು ವಿಶೇಷ.

    ಸಿನಿಮಾ ಭರ್ಜರಿ ಗೆಲುವು ಕಾಣುತ್ತಿದ್ದಂತೆಯೇ ಸಿನಿಮಾ ನಿರ್ದೇಶಕ ಅಟ್ಲಿ (Atli) ತಮ್ಮ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯೊಂದನ್ನು ನೀಡಿದ್ದಾರೆ. ‘ಜವಾನ್’ ಯಶಸ್ಸಿನ ಬೆನ್ನಲ್ಲೇ ಅವರು ‘ಜವಾನ್ 2’ (Jawan 2) ಸಿನಿಮಾ ಮಾಡಲು ಮುಂದಾಗಿದ್ದು, ಇದರ ಜೊತೆಗೆ ಶಾರುಖ್ ಖಾನ್ (Shahrukh Khan) ಅಭಿಮಾನಿಗಳಿಗೆ ಮತ್ತೊಂದು ಸರ್ ಪ್ರೈಸ್ ನೀಡಿದ್ದಾರೆ.

    ಜವಾನ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಾವಿರಾರು ಕೋಟಿ ಬ್ಯುಸಿನೆಸ್ ಮಾಡಿದೆ. ಈ ಖುಷಿಯಲ್ಲೇ ಅಟ್ಲಿ ಜವಾನ್ 2 ಸಿನಿಮಾ ಘೋಷಣೆ ಮಾಡಿದ್ದಾರೆ. ಜೊತೆಗೆ ಶಾರುಖ್ ಖಾನ್ ಮತ್ತು ವಿಜಯ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಮಾಡುವ ಆಲೋಚನೆಯನ್ನೂ ಅವರು ಹೇಳಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾವಿರ ಕೋಟಿ ಕ್ಲಬ್ ಸೇರಿದ ಶಾರುಖ್ ನಟನೆಯ ‘ಜವಾನ್’ ಸಿನಿಮಾ

    ಸಾವಿರ ಕೋಟಿ ಕ್ಲಬ್ ಸೇರಿದ ಶಾರುಖ್ ನಟನೆಯ ‘ಜವಾನ್’ ಸಿನಿಮಾ

    ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ದಾಖಲೆ ರೀತಿಯಲ್ಲಿ ಕಲೆಕ್ಷನ್ (Collection) ಮಾಡಿದೆ. ಸ್ವತಃ ನಿರ್ಮಾಣ ಸಂಸ್ಥೆಯೇ ಘೋಷಿಸಿದಂತೆ 1004.92 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಅತೀ ವೇಗದಲ್ಲಿ ಸಾವಿರ ಕೋಟಿ ಕ್ಲಬ್ ಸೇರಿದ ಚಿತ್ರ ಎನ್ನುವ ದಾಖಲೆಗೂ ಕಾರಣವಾಗಿದೆ. ಕರ್ನಾಟಕದಲ್ಲೇ 563 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದರೆ, ವಿಶ್ವದಾದ್ಯಂತ 1004.92 ಕೋಟಿ ರೂಪಾಯಿ ಸಂಪಾದನೆ ಮಾಡಿದೆ.

    ಸಿನಿಮಾ ಭರ್ಜರಿ ಗೆಲುವು ಕಾಣುತ್ತಿದ್ದಂತೆಯೇ ಸಿನಿಮಾ ನಿರ್ದೇಶಕ ಅಟ್ಲಿ (Atli) ತಮ್ಮ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯೊಂದನ್ನು ನೀಡಿದ್ದಾರೆ. ‘ಜವಾನ್’ ಯಶಸ್ಸಿನ ಬೆನ್ನಲ್ಲೇ ಅವರು ‘ಜವಾನ್ 2’ (Jawan 2) ಸಿನಿಮಾ ಮಾಡಲು ಮುಂದಾಗಿದ್ದು, ಇದರ ಜೊತೆಗೆ ಶಾರುಖ್ ಖಾನ್ (Shahrukh Khan) ಅಭಿಮಾನಿಗಳಿಗೆ ಮತ್ತೊಂದು ಸರ್ ಪ್ರೈಸ್ ನೀಡಿದ್ದಾರೆ. ಇದನ್ನೂ ಓದಿ:ಬಾಲಿವುಡ್‌ನಲ್ಲಿ 7 ಸಿನಿಮಾಗಳು ಫ್ಲಾಪ್, ಮತ್ತೆ ಸೌತ್‌ನತ್ತ ‘ಗಿಲ್ಲಿ’ ನಟಿ

    ಜವಾನ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಾವಿರಾರು ಕೋಟಿ ಬ್ಯುಸಿನೆಸ್ ಮಾಡಿದೆ. ಈ ಖುಷಿಯಲ್ಲೇ ಅಟ್ಲಿ ಜವಾನ್ 2 ಸಿನಿಮಾ ಘೋಷಣೆ ಮಾಡಿದ್ದಾರೆ. ಜೊತೆಗೆ ಶಾರುಖ್ ಖಾನ್ ಮತ್ತು ವಿಜಯ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಮಾಡುವ ಆಲೋಚನೆಯನ್ನೂ ಅವರು ಹೇಳಿಕೊಂಡಿದ್ದಾರೆ.

    ಜವಾನ್ 2 ಸಿನಿಮಾದಲ್ಲಿ ವಿಕ್ರಮ್ ರಾಥೋಡ್ ಪಾತ್ರದ ಮೇಲೆ ಹೆಚ್ಚು ಫೋಕಸ್ ಮಾಡಲಾಗುವುದು ಮತ್ತು ಈ ಸಿನಿಮಾ ಇನ್ನೂ ವಿಶೇಷವಾಗಿ ಇರುತ್ತದೆ ಎಂದು ಹೇಳಿಕೊಂಡಿದ್ದಾರೆ ಅಟ್ಲಿ. ಜವಾನ್ ಸಿನಿಮಾ ಭಾರೀ ಗೆಲುವು ಸಾಧಿಸುತ್ತಿದ್ದಂತೆಯೇ ಬಾಲಿವುಡ್ ನಲ್ಲೂ ಅಟ್ಲಿ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಜವಾನ್’ ಅಧಿಕೃತ ಬಾಕ್ಸ್ ಆಫೀಸ್ ಕಲೆಕ್ಷನ್ ಹಂಚಿಕೊಂಡ ಶಾರುಖ್ ಸಂಸ್ಥೆ

    ‘ಜವಾನ್’ ಅಧಿಕೃತ ಬಾಕ್ಸ್ ಆಫೀಸ್ ಕಲೆಕ್ಷನ್ ಹಂಚಿಕೊಂಡ ಶಾರುಖ್ ಸಂಸ್ಥೆ

    ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾದ ಕಲೆಕ್ಷನ್ (Collection) ಕುರಿತಾಗಿ ಸಾಕಷ್ಟು ಕುತೂಹಲವಿತ್ತು. ಒಂದೊಂದು ದಿನ ಒಂದೊಂದು ಕಲೆಕ್ಷನ್ ವರದಿ ಹೊರ ಬೀಳುತ್ತಿದ್ದವು. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳಲ್ಲಿ ಇದು ಗೊಂದಲಕ್ಕೆ ಕಾರಣವಾಗಿತ್ತು. ಇದೀಗ ಅಧಿಕೃತವಾಗಿಯೇ ನಿರ್ಮಾಣ ಸಂಸ್ಥೆಯೇ ಕಲೆಕ್ಷನ್ ವಿವರವನ್ನು ಹಂಚಿಕೊಂಡಿದ್ದು, 15 ದಿನಕ್ಕೆ ವಿಶ್ವದಾದ್ಯಂತ ಬರೋಬ್ಬರಿ 937.61 ಕೋಟಿ ರೂಪಾಯಿ ಬಾಚಿಕೊಂಡಿದೆ. ಶೀಘ್ರದಲ್ಲೇ ಸಾವಿರ ಕೋಟಿ ರೂಪಾಯಿ ಕೂಡ ತಲುಪಲಿದೆ.

    ಒಂದು ಕಡೆ ‘ಜವಾನ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಜವಾನ್ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳು ಕೂಡ ಕೇಳಿ ಬರುತ್ತಿವೆ. ಸಮಾರಂಭವೊಂದರಲ್ಲಿ ಸಿನಿಮಾದ ಕುರಿತು ಮಾತನಾಡಿರುವ ನಿರ್ದೇಶಕ ಅಟ್ಲಿ ತಮ್ಮ ಚಿತ್ರಕ್ಕೆ ಆಸ್ಕರ್ (Oscar) ಪ್ರಶಸ್ತಿ ಬರಬೇಕು. ಆ ಪ್ರಶಸ್ತಿ ಪಡೆಯಲು ಚಿತ್ರಕ್ಕೆ ಎಲ್ಲ ಅರ್ಹತೆಯೂ ಇದೆ ಎಂದು ಹೇಳಿಕೊಂಡಿದ್ದಾರೆ.

    ಈ ನಡುವೆ ನಿರ್ದೇಶಕ ಅಟ್ಲಿ (Atlee) ತಮ್ಮ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯೊಂದನ್ನು ನೀಡಿದ್ದಾರೆ. ‘ಜವಾನ್’ ಯಶಸ್ಸಿನ ಬೆನ್ನಲ್ಲೇ ಅವರು ‘ಜವಾನ್ 2’ (Jawan 2) ಸಿನಿಮಾ ಮಾಡಲು ಮುಂದಾಗಿದ್ದು, ಇದರ ಜೊತೆಗೆ ಶಾರುಖ್ ಖಾನ್ (Shahrukh Khan) ಅಭಿಮಾನಿಗಳಿಗೆ ಮತ್ತೊಂದು ಸರ್ ಪ್ರೈಸ್ ನೀಡಿದ್ದಾರೆ.

    ಜವಾನ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ನೂರಾರು ಕೋಟಿ ಬ್ಯುಸಿನೆಸ್ ಮಾಡಿದೆ. ಭಾರತದಲ್ಲೇ 400 ಕೋಟಿಗೂ ಅಧಿಕ ಹಣ ಬಾಚಿದೆ. ವಿಶ್ವದಾದ್ಯಂತ 800 ಕೋಟಿಗೂ ಅಧಿಕ ಹಣ ನಿರ್ಮಾಪಕರಿಗೆ ಹರಿದು ಬಂದಿದೆ. ಈ ಖುಷಿಯಲ್ಲೇ ಅಟ್ಲಿ ಜವಾನ್ 2 ಸಿನಿಮಾ ಘೋಷಣೆ ಮಾಡಿದ್ದಾರೆ. ಜೊತೆಗೆ ಶಾರುಖ್ ಖಾನ್ ಮತ್ತು ವಿಜಯ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಮಾಡುವ ಆಲೋಚನೆಯನ್ನೂ ಅವರು ಹೇಳಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಜವಾನ್ 2’ ಜೊತೆ ಮತ್ತೊಂದು ಸರ್ ಪ್ರೈಸ್ ನೀಡಿದ ನಿರ್ದೇಶಕ ಅಟ್ಲಿ

    ‘ಜವಾನ್ 2’ ಜೊತೆ ಮತ್ತೊಂದು ಸರ್ ಪ್ರೈಸ್ ನೀಡಿದ ನಿರ್ದೇಶಕ ಅಟ್ಲಿ

    ಕ್ಷಿಣದ ಖ್ಯಾತ ನಿರ್ದೇಶಕ ಅಟ್ಲಿ (Atli) ತಮ್ಮ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯೊಂದನ್ನು ನೀಡಿದ್ದಾರೆ. ‘ಜವಾನ್’ ಯಶಸ್ಸಿನ ಬೆನ್ನಲ್ಲೇ ಅವರು ‘ಜವಾನ್ 2’ (Jawan 2) ಸಿನಿಮಾ ಮಾಡಲು ಮುಂದಾಗಿದ್ದು, ಇದರ ಜೊತೆಗೆ ಶಾರುಖ್ ಖಾನ್ (Shahrukh Khan) ಅಭಿಮಾನಿಗಳಿಗೆ ಮತ್ತೊಂದು ಸರ್ ಪ್ರೈಸ್ ನೀಡಿದ್ದಾರೆ.

    ಜವಾನ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ನೂರಾರು ಕೋಟಿ ಬ್ಯುಸಿನೆಸ್ ಮಾಡಿದೆ. ಭಾರತದಲ್ಲೇ 400 ಕೋಟಿಗೂ ಅಧಿಕ ಹಣ ಬಾಚಿದೆ. ವಿಶ್ವದಾದ್ಯಂತ 800 ಕೋಟಿಗೂ ಅಧಿಕ ಹಣ ನಿರ್ಮಾಪಕರಿಗೆ ಹರಿದು ಬಂದಿದೆ. ಈ ಖುಷಿಯಲ್ಲೇ ಅಟ್ಲಿ ಜವಾನ್ 2 ಸಿನಿಮಾ ಘೋಷಣೆ ಮಾಡಿದ್ದಾರೆ. ಜೊತೆಗೆ ಶಾರುಖ್ ಖಾನ್ ಮತ್ತು ವಿಜಯ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಮಾಡುವ ಆಲೋಚನೆಯನ್ನೂ ಅವರು ಹೇಳಿಕೊಂಡಿದ್ದಾರೆ.

    ಜವಾನ್ 2 ಸಿನಿಮಾದಲ್ಲಿ ವಿಕ್ರಮ್ ರಾಥೋಡ್ ಪಾತ್ರದ ಮೇಲೆ ಹೆಚ್ಚು ಫೋಕಸ್ ಮಾಡಲಾಗುವುದು ಮತ್ತು ಈ ಸಿನಿಮಾ ಇನ್ನೂ ವಿಶೇಷವಾಗಿ ಇರುತ್ತದೆ ಎಂದು ಹೇಳಿಕೊಂಡಿದ್ದಾರೆ ಅಟ್ಲಿ. ಜವಾನ್ ಸಿನಿಮಾ ಭಾರೀ ಗೆಲುವು ಸಾಧಿಸುತ್ತಿದ್ದಂತೆಯೇ ಬಾಲಿವುಡ್ ನಲ್ಲೂ ಅಟ್ಲಿ ಅವರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದು ಶಾರುಖ್ ನಟನೆಯ ‘ಜವಾನ್’ ಚಿತ್ರದ ಪ್ರಿವ್ಯೂ

    ಇಂದು ಶಾರುಖ್ ನಟನೆಯ ‘ಜವಾನ್’ ಚಿತ್ರದ ಪ್ರಿವ್ಯೂ

    ಶಾರುಖ್ ಖಾನ್ (Shah Rukh Khan) ಅವರ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ಶಾರುಖ್ ಅಭಿನಯದ ‘ಜವಾನ್’ (Jawaan)  ಚಿತ್ರದ ಪ್ರಿವ್ಯೂ (Preview) ಬಿಡುಗಡೆ ದಿನಾಂಕ ಹೊರಬಿದ್ದಿದ್ದು, ಪ್ರಿವ್ಯೂ ಇಂದು ಬೆಳಿಗ್ಗೆ 10.30ಕ್ಕೆ ಬಿಡುಗಡೆಯಾಗಲಿದೆ .

    ಯಾವಾಗ  ‘ಕಿಂಗ್’ ಖಾನ್, ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ (Atli) ಜೊತೆಗೆ ಒಂದು  ಚಿತ್ರ ಮಾಡುತ್ತಾರೆ ಎಂಬ ಎರಡು ವರ್ಷಗಳ ಹಿಂದೆ ಸುದ್ದಿಯಾಯಿತೋ, ಆಗಿನಿಂದಲೇ ‘ಜವಾನ್’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಗರಿಗೆದರಿದ್ದವು. ಒಬ್ಬರು ದೇಶದ ಸೂಪರ್ ಸ್ಟಾರ್ ನಟ. ಇನ್ನೊಬ್ಬರು ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಲ್ಲೊಬ್ಬರು. ಇವರಿಬ್ಬರೂ ಒಂದು ಸಿನಿಮಾಗೆ ಕೈಜೋಡಿಸಿದಾಗ, ಸಹಜವಾಗಿಯೇ ಬೆಟ್ಟದಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಅಭಿಮಾನಿಗಳ ವಲಯದಲ್ಲಿತ್ತು.

    ಆದರೆ, ಚಿತ್ರತಂಡದವರು ಒಂದೆರೆಡು ಪೋಸ್ಟರ್ಗಳನ್ನು ಬಿಡುಗಡೆ ಮಾಡಿದ್ದು ಬಿಟ್ಟರೆ, ಮಿಕ್ಕಂತೆ ಚಿತ್ರದ ಬಗ್ಗೆ ರಹಸ್ಯ ಕಾಪಾಡಿಕೊಂಡಿದ್ದರು. ಈಗ ಚಿತ್ರದ ಬಿಡುಗಡೆ ಹತ್ತಿರ ಬರುತ್ತಿದ್ದಂತೆಯೇ, ಚಿತ್ರದ ಪ್ರಿವ್ಯೂ ಬಿಡುಗಡೆಯಾಗುವುದಕ್ಕೆ ವೇದಿಕೆ ಸಜ್ಜಾಗಿದೆ. ಈ ಪ್ರಿವ್ಯೂನಲ್ಲಿ ಚಿತ್ರದಲ್ಲಿನ ಶಾರುಖ್ ಅವರ ಫಸ್ಟ್ ಲುಕ್ (First Look)  ಹೊರಬೀಳಲಿದೆ. ಇದನ್ನೂ ಓದಿ:ಪ್ರೇಕ್ಷಕರ ಗಮನ ಸೆಳೆಯುತ್ತಿದೆ ‘ಆಡೇ ನಮ್ Godʼ ಟೀಸರ್

    ಬರೀ ಅಭಿಮಾನಿಗಳ ವಲಯದಲ್ಲಷ್ಟೇ ಅಲ್ಲ, ಇಡೀ ಭಾರತೀಯ ಚಿತ್ರರಂಗದಲ್ಲೇ ಈ ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆಗಳು ಹೆಚ್ಚಾಗಿದೆ. ‘ಜವಾನ್’ ಚಿತ್ರವು ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ

    ‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಸಂಸ್ಥೆಯಡಿ ಗೌರಿ ಖಾನ್ ನಿರ್ಮಿಸುತ್ತಿದ್ದು, ಅಟ್ಲಿಯವರ  ನಿರ್ದೇಶನದಲ್ಲಿ ಮೂಡಿಬಂದಿದೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಗುವಿನ ನಿರೀಕ್ಷೆಯಲ್ಲಿ ದಕ್ಷಿಣದ ಖ್ಯಾತ ನಿರ್ದೇಶಕ ಅಟ್ಲಿ

    ಮಗುವಿನ ನಿರೀಕ್ಷೆಯಲ್ಲಿ ದಕ್ಷಿಣದ ಖ್ಯಾತ ನಿರ್ದೇಶಕ ಅಟ್ಲಿ

    ಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಲ್ಲೊಬ್ಬರು ಅಟ್ಲಿ. ಕಮರ್ಷಿಯಲ್​ ಸಿನಿಮಾದ ಮುಖ ಬದಲಿಸುವುದರ ಜತೆಗೆ ಅತ್ಯಂತ ಯಶಸ್ವಿ ನಿರ್ದೇಶಕ ಎಂಬ ಖ್ಯಾತಿ ಇರುವ ಅಟ್ಲಿ, ತಮಿಳಿನಲ್ಲಿ ಖ್ಯಾತ ನಟ ‘ಇಳಯ ದಳಪತಿ’ ವಿಜಯ್​ ಅಭಿನಯದಲ್ಲಿ ‘ಥೇರಿ’, ‘ಮರ್ಸಲ್​’, ‘ಬಿಜಿಲ್​’ ಮುಂತಾದ ಯಶಸ್ವಿ ಮತ್ತು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿದವರು. ಇದೀಗ ಶಾರೂಖ್​ ಅಭಿನಯದ ‘ಜವಾನ್’ ಚಿತ್ರವನ್ನು ಅವರು ನಿರ್ದೇಶಿಸುತ್ತಿದ್ದು, ಈ ಚಿತ್ರ ಮುಂದಿನ ವರ್ಷ ಬಿಡುಗಡೆಯಾಗುತ್ತಿದೆ.

    ತಮ್ಮ ಬಹುವರ್ಷಗಳ ಗೆಳತಿ ಕೃಷ್ಣ ಪ್ರಿಯಾ ಅವರನ್ನು 2014ರಲ್ಲಿ ಮದುವೆಯಾದ ಅಟ್ಲಿ, ಅವರೊಂದಿಗೆ ನೆಮ್ಮದಿಯ ವೈವಾಹಿಕ ಜೀವನ ನಡೆಸುತ್ತಿದ್ದಾರೆ. ಈ ದಂಪತಿಯು ಎ ಫಾರ್ ಆಪಲ್ ಪ್ರೊಡಕ್ಷನ್ ಎಂಬ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿ, ಅದರಡಿ ಎರಡು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದೆ. ಮದುವೆಯಾಗಿ ಎಂಟು ವರ್ಷಗಳ ನಂತರ, ಇದೀಗ ಅಟ್ಲಿ ಮತ್ತು ಪ್ರಿಯಾ ಹೊಸ ಅನುಭವಕ್ಕೆ ತಯಾರಾಗುತ್ತಿದ್ದಾರೆ. ಪುಟ್ಟ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದನ್ನೂ ಓದಿ: IMDB 2022ರ ಜನಪ್ರಿಯ ಭಾರತೀಯ ಸಿನಿಮಾ ಪಟ್ಟಿಯಲ್ಲಿ ಕನ್ನಡದ ಟಾಪ್‌ 3 ಚಿತ್ರಗಳು

    ಈ ವಿಷಯವನ್ನು ಅಧಿಕೃತವಾಗಿ ಘೋಷಿಸಿರುವ ಅವರು, ‘ಇಷ್ಟು ವರ್ಷಗಳ ಕಾಲ ನಮ್ಮ ಮೇಲೆ ಜನ ತೋರಿದ ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾವು ಕೃತಜ್ಞರಾಗಿರುತ್ತೇವೆ, ನಿಮ್ಮ ಹಾರೈಕೆ ಮತ್ತು ಪ್ರೀತಿ ನಮ್ಮ ಪುಟ್ಟ ಮಗುವಿನ ಮೇಲೆಯೂ ಇರಬೇಕು ಎಂದು ನಾವು ಬಯಸುತ್ತೇವೆ. ನಿಮ್ಮೆಲ್ಲರ ಆಶೀರ್ವಾದದಿಂದ ನಮ್ಮ ಪುಟ್ಟ ಮಗುವಿನ ಆಗಮನಕ್ಕಾಗಿ ಕಾತುರದಿಂದ ಕಾಯುತ್ತಿದ್ದೇವೆ’ ಎಂದು ಅಟ್ಲಿ ಮತ್ತು ಪ್ರಿಯಾ ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]